Saturday, 17 October 2026

ಚಾಮರಾಜನಗರ ದಸರಾ ಉತ್ಸವಕ್ಕೆ ಸಾಂಪ್ರಾದಾಯಿಕ ಚಾಲನೆ

ಚಾಮರಾಜನಗರ ದಸರಾ ಉತ್ಸವಕ್ಕೆ  ಸಾಂಪ್ರಾದಾಯಿಕ ಚಾಲನೆ*    
 *

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ


ಚಾಮರಾಜನಗರ, ಅಕ್ಟೋಬರ್ 17 - ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿಂದು ದಸರಾ ಉತ್ಸವಕ್ಕೆ ಸಾಂಪ್ರಾದಾಯಿಕ ಚಾಲನೆ ನೀಡಿದರು. 

ಚಾಮರಾಜೇಶ್ವರ ದೇವಸ್ಥಾನದಲ್ಲಿಂದು ನಗರದ ಅದಿದೇವತೆಗಳಾದ ಚಾಮರಾಜೇಶ್ವರಸ್ವಾಮಿ, ಚಾಮುಂಡೇಶ್ವರಿ ದೇವಿ ಹಾಗೂ ಕೆಂಪನಂಜಾಂಬ ದೇವಿಗೆ ಸಾಂಪ್ರಾದಾಯಿಕ ವಿಧಿವಿಧಾನಗಳ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರು ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಮುಖ್ಯ ವೇದಿಕೆಯಲ್ಲಿ ನಗಾರಿ ಬಾರಿಸುವ ಮೂಲಕ ಮೂರು ದಿನಗಳ ಕಾಲ ನಡೆಯಲಿರುವ ಚಾಮರಾಜನಗರ ದಸರಾ ಮಹೋತ್ಸವವನ್ನು ಉದ್ಘಾಟಿಸಿದರು. 


ಬಳಿಕ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಮರಾಜೇಶ್ವರ ದೇವಸ್ಥಾನದ ಉದ್ಯಾನದಲ್ಲಿರುವ ಕನ್ನಡದ ಅಧಿದೇವತೆ ಭುವನೇಶ್ವರಿ ತಾಯಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು. ನಂತರ ಮುಖ್ಯವೇದಿಕೆಯ ಪಕ್ಕದಲ್ಲಿ ದಸರಾ ಅಂಗವಾಗಿ ಆಯೋಜಿಸಲಾಗಿರುವ ಚಿತ್ರಸಂತೆಯಲ್ಲಿ ಉಸ್ತುವಾರಿ ಸಚಿವರು ಚಿತ್ರಬಿಡಿಸಿ ಬಣ್ಣಹಚ್ಚಿ ಕಾರ್ಯಕ್ರಮಕ್ಕೆ ಶುಭ ಕೋರಿದರು. 


       ಬಳಿಕ ಮಹಿಳಾ ದಸರಾ ಅಂಗವಾಗಿ ಜಿಲ್ಲಾಡಳಿತ ಭವನದ ಪ್ರವೇಶದ್ವಾರದ ಬಳಿ ಒಳಾವರಣದಲ್ಲಿ ಮಹಿಳೆಯರಿಗೆ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟನೆ ಮಾಡಿದರು. ಮಹಿಳೆಯರು ಬಿಡಿಸಿದ್ದ ವಿವಿಧ ಬಣ್ಣಬಣ್ಣದ ಚಿತ್ತಾರಗಳಿಂದ ಕೂಡಿದ ರಂಗೋಲಿಗಳನ್ನು ಸಚಿವರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು. 


       ನಂತರ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿರುವ ದಸರಾ ಕವಿಗೋಷ್ಠಿ, ರಂಗಗೀತೆಗಳು, ಸಾಮಾಜಿಕ ಹಾಗೂ ಪೌರಾಣಿಕ ನಾಟಕ ಸೇರಿದಂತೆ ಇತರೆ ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಬಳಿಕ ಜಿಲ್ಲಾ ರಂಗಮಂದಿರದ ಹೊರ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯೂಸಿಕಲ್ ಚೇರ್ ಸ್ಪರ್ಧೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಉದ್ಘಾಟಿಸಿದರು.  


       ಬಳಿಕ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಯುವದಸರಾ ಮಾದರಿಯಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿರುವ ಯುವಸಂಭ್ರಮ ಕಾರ್ಯಕ್ರಮಕ್ಕೆ ಸಚಿವರು ಚಾಲನೆ ನೀಡಿದರು.


      ತದನಂತರ ನಗರದ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿರುವ ಮೀಸಲು ಪೊಲೀಸ್ ಪಡೆಯ ಮೈದಾನದಲ್ಲಿ ಜಿಲ್ಲಾ ಗ್ರಾಮೀಣ ದಸರಾ ಕ್ರೀಡಾಕೂಟದ ಅಂಗವಾಗಿ ಆಯೋಜಿಸಲಾಗಿರುವ ಕ್ರಿಕೆಟ್, ಕಬಡ್ಡಿ, ಖೋ-ಖೋ, ಹಗ್ಗಜಗ್ಗಾಟ, ಸೈಕಲ್ ಪೋಲೋ, ಲೆಮನ್ ಆಂಡ್ ಸ್ಪೂನ್ ಕ್ರೀಡೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು. ಸ್ವತಹ ಸಚಿವರು ಸೈಕಲ್ ಮೇಲೆ ಕುಳಿತು ಪೋಲೋವನ್ನು ಯಶಸ್ವಿಯಾಗಿ ಹೊಡೆದರು. ಕ್ರೀಡಾಪಟುಗಳ ತಂಡಗಳನ್ನು ಪರಿಚಯ ಮಾಡಿಕೊಂಡರು. ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.    


       ಇದೇ ವೇಳೆ ಮಾತನಾಡಿದ  ಸಚಿವ ಪುಟ್ಟರಂಗಶೆಟ್ಟಿ ಅವರು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುಂದುವರಿದ ಭಾಗವಾಗಿ ಚಾಮರಾಜನಗರ ಜಿಲ್ಲಾ ದಸರಾ ಉತ್ಸವವನ್ನು ನಗರದಲ್ಲಿ ಆಯೋಜಿಸಲಾಗಿದೆ. ತೀವ್ರ ಬರಪೀಡಿತ ಜಿಲ್ಲೆಯಾಗಿ ಚಾಮರಾಜನಗರ ಘೋಷಣೆಯಾಗಿದ್ದರಿಂದ ದಸರಾ ನಡೆಯುವುದೇ ಕಾಕತಾಳೀಯವಾಗಿತ್ತು. ಈಗ ತರಾತುರಿಯಲ್ಲಿ ಜಿಲ್ಲಾ ದಸರಾ ಆಯೋಜಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಇದು ಸಮೃದ್ಧಿಯ ಸಂಕೇತವಾಗಿದ್ದು, ನಾಡಿನೆಲ್ಲೆಡೆ ಮಳೆ-ಬೆಳೆಯಾಗಿ ಜನರಲ್ಲಿ ಸುಖ-ಶಾಂತಿ ನೆಲೆಸಲಿ ಎಂದು ಹಾರೈಸಿದರು. 


       ಇದೇ ಸಂದರ್ಭದಲ್ಲಿ ಸಚಿವರೊಂದಿಗೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್‍ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚುಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೇಂಕಟೇಶ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ತಹಶೀಲ್ದಾರ್ ಗಿರಿಜಾ, ಇತರರು ಪಾಲ್ಗೊಂಡಿದ್ದರು.



ಚಾಮರಾಜನಗರ ದಸರಾ ಮಹೋತ್ಸವ-2026* :

*ಜನಮನ ಸೂರೆಗೊಂಡ ಅದ್ದೂರಿ ಕಲಾತಂಡಗಳು, ಸ್ತಬ್ದ ಚಿತ್ರಗಳ ಮೆರವಣಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ* 


ಚಾಮರಾಜನಗರ, ಅಕ್ಟೋಬರ್ 17 - ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದ ಜಿಲ್ಲಾಡಳಿತ ಭವನದಿಂದ ಚಾಮರಾಜೇಶ್ವರ ದೇವಸ್ಥಾನದವರೆಗೆ ಆಯೋಜಿಸಿದ್ದ ಕಲಾವೈಭವಕ್ಕೆ ಮೆರುಗು ತುಂಬಿದ ಮೆರವಣಿಗೆಯು ವಿವಿಧ ಆಕರ್ಷಕ ಸಾಂಸ್ಕøತಿಕ ಕಲಾಪ್ರಕಾರದ ತಂಡಗಳೊಂದಿಗೆ ಜನಮನ ಸೂರೆಗೊಂಡಿತು. 


      ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಚಾಮರಾಜನಗರ ದಸರಾ ಮಹೋತ್ಸವ ಪ್ರಯುಕ್ತ ಮೊದಲು ನಂದಿಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿ ಬಳಿಕ ಬೆಳ್ಳಿರಥದಲ್ಲಿ ಅಲಂಕೃತಗೊಂಡ ನಾಡದೇವಿ ಶ್ರೀ ಚಾಮುಂಡೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅದ್ದೂರಿ ಮೆರವಣಿಗೆಗೆ ಚಾಲನೆ ನೀಡಿದರು.


      ನಾದಸ್ವರ, ಡೊಳ್ಳುಕುಣಿತ, ವೀರಗಾಸೆ, ಚಂಡೆವಾದ್ಯ, ಮರಗಾಲು ಕುಣಿತ, ಸತ್ತಿಗೆ, ಸೂರಪಾನಿ, ಮಂಟೇಸ್ವಾಮಿಯವರ ಕಂಡಾಯ, ಗೊಂಬೆ ಕುಣಿತ, ದೊಣ್ಣೆ ವರಸೆ, ಕರಡಿ ಕುಣಿತ, ಗೊರವರr ಕುಣಿತ, ಚಾಮುಂಡೇಶ್ವರಿ ದೇವಿ, ಗಣೇಶ, ಆಂಜನೇಯ, ಈಶ್ವರ, ಪಾರ್ವತಿ ವೇಷಧಾರಿಗಳು, ಯಕ್ಷಗಾನ, ಕೊಡವರ ನೃತ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಸಾಂಪ್ರಾದಾಯಿಕ ನೃತ್ಯದೊಂದಿಗೆ ಸಾಗಿದ ಮೆರವಣಿಗೆಯು ಕಲಾವೈಭಕ್ಕೆ ಮೆರುಗು ತುಂಬಿ ಜನಾಕರ್ಷಣೆಗೆ ಸಾಕ್ಷಿಯಾಯಿತು. ದಾರಿಯುದ್ದಕ್ಕೂ ಮೆರವಣಿಗೆ ನೋಡಲು ಕಿಕ್ಕಿರಿದು ಸೇರಿದ್ದ ಜನರ ಸಂಭ್ರಮ ಇಮ್ಮಡಿಸಿತ್ತು. 


      ಮೆರವಣಿಗೆಯಲ್ಲಿ ಕಲಾತಂಡಗಳೊಂದಿಗೆ ಕೃಷಿ, ರೇಷ್ಮೆ, ಮೀನುಗಾರಿಕೆ, ಅರಣ್ಯ, ಆರೋಗ್ಯ, ಯುವ ಸಬಲೀಕರಣ ಮತ್ತು ಕ್ರೀಡೆ, ಶಕ್ತಿ ಯೋಜನೆ, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ವಿವಿಧ ಸರ್ಕಾರಿ ಅಭಿವೃದ್ಧಿ ಯೋಜನೆ, ಕಾರ್ಯಕ್ರಮ ಅನುಷ್ಟಾನಗೊಳಿಸುವ ಕುರಿತು ಜನಜಾಗೃತಿ ಮೂಡಿಸುವ ಆಕರ್ಷಕ ಸ್ತಬ್ದಚಿತ್ರಗಳು ಜನರ ಮನಸ್ಸನ್ನು ಸೂರೆಗೊಂಡು ಮೆರವಣಿಗೆ ಸಂಪನ್ನಗೊಂಡಿತು.        


       ಇದೇ ಸಂದರ್ಭದಲ್ಲಿ ಸಚಿವರೊಂದಿಗೆ ಚುಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶೃತಿ. ಡಿ.ಸಿ, ತಹಶೀಲ್ದಾರ್ ಗಿರಿಜಾ, ಇತರರು ಇದ್ದರು.

Wednesday, 14 October 2026

ಚಾಮರಾಜನಗರ ದಸರಾ ಮಹೋತ್ಸವ-2026* *ಜಿಲ್ಲಾ ದಸರಾ ಲಾಂಛನ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು* -



 ಚಾಮರಾಜನಗರ ದಸರಾ ಮಹೋತ್ಸವ-2026*

*ಜಿಲ್ಲಾ ದಸರಾ ಲಾಂಛನ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವರು* -


*ಅ. 17ರಂದು ಖ್ಯಾತ ಚಲನಚಿತ್ರ ನಟ ವಿ. ರವಿಚಂದ್ರನ್ ಅವರಿಂದ ದಸರಾ ಉದ್ಘಾಟನೆ-ಸಚಿವರಾದ ಸಿ. ಪುಟ್ಟರಂಗಶೆಟ್ಟಿ*    


ಚಾಮರಾಜನಗರ, ಅಕ್ಟೋಬರ್ 14 - ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿಂದು ಚಾಮರಾಜನಗರ ದಸರಾ ಮಹೋತ್ಸವ-2026ರ ಲಾಂಛನ (ಲೋಗೋ) ಬಿಡುಗಡೆಗೊಳಿಸಿದರು. 


      ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ-2026ರ ಕಾರ್ಯಕ್ರಮದ ಸುಗಮ ನಿರ್ವಹಣೆಗಾಗಿ ರಚಿಸಲಾಗಿರುವ ವಿವಿಧ ಸಮಿತಿಗಳ ಅಧಿಕಾರಿಗಳನ್ನೊಳಗೊಂಡ ಸಿದ್ದತಾ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ದಸರಾ ಲಾಂಛನ ಬಿಡುಗಡೆ ಮಾಡಿದರು. 


      ಬಳಿಕ ದಸರಾ ಕಾರ್ಯಕ್ರಮ ಸಿದ್ದತೆಗಾಗಿ ರಚಿಸಲಾಗಿರುವ ಸಮಿತಿ ಅಧಿಕಾರಿಗಳಿಂದ ಮಾಹಿತಿ ಪಡೆದು ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾಕೇಂದ್ರದಲ್ಲಿ ಮೂರು ದಿನಗಳ ಕಾಲ ನಡೆಯುವ ದಸರಾ ಕಾರ್ಯಕ್ರಮ ನಿರ್ವಹಣೆಗಾಗಿ ರಚಿಸಲಾಗಿರುವ ಸ್ವಾಗತ ಸಮಿತಿ, ವೇದಿಕೆ, ಸಮಿತಿ, ಸ್ವಚ್ಚತಾ ಸಮಿತಿ ಸಾಂಸ್ಕøತಿಕ ಸಮಿತಿ ಸೇರಿದಂತೆ ವಿವಿಧ ಸಮಿತಿಗಳಲ್ಲಿರುವ ಜಿಲ್ಲಾಮಟ್ಟದ ಅಧಿಕಾರಿಗಳು ಅತ್ಯಂತ ಶಿಸ್ತು ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವಂತೆ ಸೂಚಿಸಿದರು.  


      ಅಕ್ಟೋಬರ್ 17ರಂದು ಬೆಳಿಗ್ಗೆ 10.40ರಿಂದ 11.30 ಗಂಟೆಯೊಳಗಿನ ಶುಭ ಸಮಯದಲ್ಲಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳನ್ನು ನೇರವೇರಿಸುವ ಮೂಲಕ ಮೂರು ದಿನಗಳ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಎಲ್ಲಾ ಕಾರ್ಯಕ್ರಮಗಳ ಆಯೋಜನೆ ಅಚ್ಚುಕಟ್ಟಾಗಿ ಇರಬೇಕು. ಯಾವುದೇ ಲೋಪಗಳಾಗದಂತೆ ಎಲ್ಲಾ ಸಿದ್ದತಾ ಕಾರ್ಯಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ರೈತ ದಸರಾ, ಮಹಿಳಾ ದಸರಾ ಕಾರ್ಯಕ್ರಮಗಳಲ್ಲಿನ ವಿವಿಧ ಸ್ಪರ್ಧೆಗಳು ಹಾಗೂ ಪಾರಂಪರಿಕ ನಡಿಗೆ, ಮ್ಯಾರಥಾನ್ ಎಲ್ಲವೂ ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಲು ಮುಂದಾಗುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.


      ದಸರಾ ಅಂಗವಾಗಿ ಪಟ್ಟಣದಲ್ಲಿ ಪ್ರಮುಖ ರಸ್ತೆಗಳು ಹಾಗೂ ಎಲ್ಲಾ ಸರ್ಕಾರಿ ಕಚೇರಿಗಳು, ಖಾಸಗಿ ಕಟ್ಟಡಗಳಲ್ಲಿ ದೀಪಾಲಂಕಾರ ಮಾಡಬೇಕು. ಶಿಷ್ಟಾಚಾರ ಪ್ರಕಾರವೇ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಕಲಾಪ್ರಕಾರಗಳಿಗೂ ಆದ್ಯತೆ ನೀಡಬೇಕು ಉಸ್ತುವಾರಿ ಸಚಿವರು ತಿಳಿಸಿದರು.


      ರೈತ ದಸರಾ ಅಂಗವಾಗಿ ರೈತರಿಗೆ ನಡೆಸಲಾಗುವ ಹಾಲು ಕರೆಯುವ ಸ್ಪರ್ಧೆ ಹಾಗೂ ಶ್ವಾನ ಪ್ರದರ್ಶನಕ್ಕಾಗಿ ನಿಗದಿತ ದಿನಕ್ಕಿಂತ ಹಿಂದಿನ ದಿನವೇ ಎಲ್ಲಾ ಸಿದ್ದತೆಗಳನ್ನು ಪೂರ್ಣಗೊಳಿಸಬೇಕು. ದಸರಾ ಕಾರ್ಯಕ್ರಮಗಳಿಗೆ ಆಗಮಿಸಿ ತಂಗುವ ಕಲಾವಿದರಿಗೆ ಊಟ, ಉಪಹಾರ, ವಸತಿ ವ್ಯವಸ್ಥೆಯು ಸುವ್ಯವಸ್ಥಿತವಾಗಿರಬೇಕು. ಆಹಾರ ಮೇಳಕ್ಕೆ ಆಹಾರ ಸುರಕ್ಷತಾ ಅಧಿಕಾರಿಗಳನ್ನು ಆಹಾರ ತಪಾಸಣೆಗೆ ನೇಮಿಸಬೇಕು. ಮಹಿಳಾ ದಸರಾ ಅಂಗವಾಗಿ ನಡೆಯುವ ವಿವಿಧ ಸ್ಪರ್ಧೆಗಳಿಗೆ ಸಿದ್ದತೆ ಪೂರ್ಣಗೊಳಿಸಬೇಕು ಎಂದು ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

      ಯುವ ಸಂಭ್ರಮ ಕಾರ್ಯಕ್ರಮದಡಿ ಜಿಲ್ಲೆಯ ಎಲ್ಲಾ ಪೌಢಶಾಲೆ ಹಾಗೂ ಪದವಿಪೂರ್ವ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಕಲಾ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು. ಮ್ಯಾರಥಾನ್ ಹಾಗೂ ಪಾರಂಪರಿಕ ನಡಿಗೆ ವ್ಯವಸ್ಥಿತವಾಗಿ ಆಯೋಜಿಸಬೇಕು. ಮೆರವಣಿಗೆಯನ್ನು ಆಕರ್ಷಣೀಯವನ್ನಾಗಿಸಲು ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುವ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನೊಳಗೊಂಡ ಸ್ತಬ್ದಚಿತ್ರಗಳನ್ನು ತಯಾರಿಸಬೇಕು. ಮೆರವಣಿಗೆಯಲ್ಲಿ ಜಿಲ್ಲೆಯ ಕಲಾತಂಡಗಳಲ್ಲದೆ ಇತರೆ ಜಿಲ್ಲೆಯ ಕಲಾತಂಡಗಳನ್ನು ನಿಯೋಜನೆ ಮಾಡಬೇಕೆಂದು ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.


      ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ದಸರಾ ಕಾರ್ಯಕ್ರಮಗಳ ನಿರ್ವಹಣೆಗಾಗಿ ವಿವಿಧ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಈಗಾಗಲೇ ವಿವಿಧ ಸಮಿತಿಗಳ ಸಭೆ ನಡೆಸಿ ದಸರಾ ಕಾರ್ಯಕ್ರಮ ಆಯೋಜನೆಗೆ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲಾಗಿದೆ. ಅಚ್ಚುಕಟ್ಟು ನಿರ್ವಹಣೆಗೆ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ದಸರಾ ಮಹೋತ್ಸವ ಕಾರ್ಯಕ್ರಮದ ವ್ಯವಸ್ಥಿತ ಸಿದ್ದತೆಗಾಗಿ ಎಲ್ಲಾ ತಾಲೂಕುಗಳ ತಹಶೀಲ್ದಾರರನ್ನು ನಿಯೋಜಿಸಿಕೊಳ್ಳಲಾಗಿದೆ. ಎಲ್ಲಾ ಕಾರ್ಯಕ್ರಮಗಳನ್ನು ಜನಾಕರ್ಷಕಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದರು.


      ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ಶ್ರೀಪತಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ನಂದೀಶ್, ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಗನ್ನಾಥ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ಹೆಚ್ಚುವರಿ ಜಿಲ್ಲಾಧಿಕಾರಿ ವಿ. ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಎನ್. ಶಶಿಧರ್, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. 


       ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಕ್ಟೋಬರ್ 17ರಂದು ಸಂಜೆ ಖ್ಯಾತ ಚಲನಚಿತ್ರ ನಟರಾದ ವಿ. ರವಿಚಂದ್ರನ್ ಅವರು ದಸರಾ ಉದ್ಘಾಟನೆ ನೆರವೇರಿಸುವರು. ರಾಜ್ಯಮಟ್ಟದ ಹೆಸರಾಂತ ಕಲಾವಿದರು ಹಾಗೂ ಜಿಲ್ಲೆಯ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗಿದೆ. ಇದೇ ಮೊದಲ ಬಾರಿಗೆ ದಸರಾ ಅಂಗವಾಗಿ ಹೆಲಿ ರೈಡ್ ಆಯೋಜಿಸಲಾಗುತ್ತಿದೆ. ಹೀಗೆ ಹಲವು ವಿಭಿನ್ನ ಕಾರ್ಯಕ್ರಮಗಳ ಮೂಲಕ ದಸರಾ ಮಹೋತ್ಸವ ನಡೆಯಲಿದೆ ಎಂದರು.


ಚಾಮರಾಜನಗರ ದಸರಾ ಮಹೋತ್ಸವ : ಅಕ್ಟೋಬರ್ 18ರಂದು ನಗರದಲ್ಲಿ ಮ್ಯಾರಥಾನ್*


ಚಾಮರಾಜನಗರ, ಅಕ್ಟೋಬರ್ 14 :- ಚಾಮರಾಜನಗರ ದಸರಾ ಅಂಗವಾಗಿ ಅಕ್ಟೋಬರ್ 18ರಂದು ನಗರದಲ್ಲಿ ದಸರಾ ಮ್ಯಾರಥಾನ್ ಓಟ ಮತ್ತು ಸ್ಕೇಟಿಂಗ್ ಕಾರ್ಯಕ್ರಮ ಆಯೋಜಿಸಲಾಗಿದೆ. 


  ಅಂದು ಬೆಳಿಗ್ಗೆ 6.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಮ್ಯಾರಥಾನ್ ಆರಂಭಗೊಂಡು ಪಚ್ಚಪ್ಪ ವೃತ್ತ, ಜಿಲ್ಲಾ ಆಸ್ಪತ್ರೆ, ಜಿಲ್ಲಾಡಳಿತ ಭವನದ ರಸ್ತೆ, ಡಿವೈಎಸ್‍ಪಿ ಕಚೇರಿಯಿಂದ ರೋಮನ್ ಕ್ಯಾಥೋಲಿಕ್ ಚರ್ಚ್, ರಾಮಸಮುದ್ರ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ಹಿಂತಿರುಗಿ ವರ್ತಕರ ಭವನದ ರಸ್ತೆ, ನ್ಯಾಯಾಲಯ ರಸ್ತೆ, ಡಾ.ಬಿ.ಆರ್ ಅಂಬೇಡ್ಕರ್ ಭವನ ಮಾರ್ಗವಾಗಿ ಪ್ರವಾಸಿಮಂದಿರದಲ್ಲಿ (ಪರಿವೀಕ್ಷಣ ಮಂದಿರ) ಮುಕ್ತಾಯಗೊಳ್ಳಲಿದೆ. 


  ಮ್ಯಾರಥಾನ್ ನಲ್ಲಿ ಜಿಲ್ಲೆಯ ಎಲ್ಲಾ ಯುವಕ, ಯುವತಿಯರು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರು, ಸಂಘ ಸಂಸ್ಥೆಗಳ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ 9448999332, 9880664347 ಸಂಪರ್ಕಿಸುವಂತೆ ದಸರಾ ಸಮಿತಿಯ ಮ್ಯಾರಥಾನ್ ಕಾರ್ಯಕ್ರಮಗಳ ಕಾರ್ಯಧ್ಯಕ್ಷರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



: *ಚಾಮರಾಜನಗರ ದಸರಾ : ಅಕ್ಟೋಬರ್ 19ರಂದು ನಗರದಲ್ಲಿ ದಸರಾ ಪಾರಂಪರಿಕ ನಡಿಗೆ* 


ಚಾಮರಾಜನಗರ, ಅಕ್ಟೋಬರ್ 14 :- ಚಾಮರಾಜನಗರ ದಸರಾ ಪ್ರಯುಕ್ತ ಅಕ್ಟೋಬರ್ 19 ರಂದು ನಗರದಲ್ಲಿ ಪಾರಂಪರಿಕೆ ನಡಿಗೆ ಆಯೋಜಿಸಲಾಗಿದೆ.


  ಅಂದು ಬೆಳಿಗ್ಗೆ 6.30 ಗಂಟೆಗೆ ದಸರಾ ಪಾರಂಪರಿಕ ನಡಿಗೆಯು ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಪ್ರಾರಂಭಗೊಂಡು ಚಾಮರಾಜ ಒಡೆಯರ್ ರವರ ಜನನ ಮಂಟಪ, ಜೈನರ ಬಸದಿ, ವೀರಭದ್ರಸ್ವಾಮಿ ದೇವಸ್ಥಾನ ಹತ್ತಿರದ ಮಾರ್ಗವಾಗಿ ಕನ್ನಿಕಾ ಪರಮೇಶ್ವರಿ ದೇವಸ್ಥಾನ ಮಾರ್ಗದಿಂದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಮುಕ್ತಾಯಗೊಳ್ಳಲಿದೆ. 


  ಈ ಕಾರ್ಯಕ್ರಮಕ್ಕೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ಪುರುಷರು ಮತ್ತು ಮಹಿಳೆಯರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಸದಸ್ಯರು, ಅಧಿಕಾರಿಗಳು ಭಾಗವಹಿಸಬಹುದು. ಪಾರಂಪರಿಕೆ ನಡಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಭಾಗವಹಿಸುವಂತೆ ದಸರಾ ಸಮಿತಿಯ ಪಾರಂಪರಿಕೆ ನಡಿಗೆ ಕಾರ್ಯಕ್ರಮಗಳ ಕಾರ್ಯಧ್ಯಕ್ಷರು ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


*ಚಾಮರಾಜನಗರ ದಸರಾ ಮಹೋತ್ಸವ : ಮಹಿಳಾ ದಸರಾ ಅಂಗವಾಗಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆ*


 ಚಾಮರಾಜನಗರ, ಅಕ್ಟೋಬರ್ 14 :- ಜಿಲ್ಲಾಡಳಿತ ಹಾಗೂ ಚಾಮರಾಜನಗರ ದಸರಾ ಮಹೋತ್ಸವ ಸಮಿತಿ ವತಿಯಿಂದ ಚಾಮರಾಜನಗರ ದಸರಾ ಮಹೋತ್ಸವ 2026ರ ಅಂಗವಾಗಿ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಅಕ್ಟೋಬರ್ 17 ರಂದು ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ. 

                  

      ಅಂದು ಬೆಳಿಗ್ಗೆ 10 ಗಂಟೆಗೆ ರಂಗೋಲಿ ಸ್ಪರ್ಧೆ ನಡೆಯಲಿದ್ದು, ಸ್ಪರ್ಧೆಗೆ ಒಂದು ಗಂಟೆ ಕಾಲಾವಕಾಶ ವಿರುತ್ತದೆ. ಸ್ಪರ್ಧೆಗೆ ರಂಗೋಲಿ ಹಾಗೂ ಬಣ್ಣವನ್ನು ಮಾತ್ರ ಉಪಯೋಗಿಸಬೇಕು. ಇತರೆ ಪರಿಕರಗಳು ಅಂದರೆ ಉಪ್ಪು, ಹೂವು, ಧಾನ್ಯಗಳು ಇತ್ಯಾದಿ ಬಳಸುವಂತಿಲ್ಲ. ಬಣ್ಣ, ರಂಗೋಲಿ ಹಾಗೂ ಬೇಕಾಗುವ ಇತರೆ ಪದಾರ್ಥಗಳನ್ನು ಭಾಗವಹಿಸುವವರೇ ತರಬೇಕು. ಸ್ಪರ್ಧೆಗೆ ಭಾಗವಹಿಸುವವರು 30 ನಿಮಿಷ ಮೊದಲೆ ಸ್ಥಳಕ್ಕೆ ಆಗಮಿಸಿರಬೇಕು. ಸ್ಪರ್ಧೆಗೆ ಮುಂಚಿತವಾಗಿ ನೋಂದಣಿ ಮಾಡಿಕೊಂಡಿರಬೇಕು. 


      ಬೆಳಿಗ್ಗೆ 9 ರಿಂದ 10 ಗಂಟೆಯವರೆಗೆ ಲೆಮನ್ ಇನ್ ದಿ ಸ್ಪೂನ್, ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ಮ್ಯೂಸಿಕಲ್ ಚೇರ್ ಹಾಗೂ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಮಡಕೆ ಒಡೆಯುವ ಸ್ಪರ್ಧೆ ನಡೆಯಲಿದೆ. 


      ಎಲ್ಲಾ ಸ್ಪರ್ಧೆಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟಿರಬೇಕು. ಭಾಗವಹಿಸುವವರಿಗೆ ಯಾವುದೇ ಭತ್ಯೆ ಇರುವುದಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.

      

      ಆಸಕ್ತಿಯುಳ್ಳ ಮಹಿಳೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಮೊ.ಸಂ 8618242166, 7019069546 ಗೆ ಕರೆ ಮಾಡುವ ಮೂಲಕ ಅಕ್ಟೋಬರ್ 16ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸ್ಪರ್ಧೆಗಳಿಗೆ ನೋಂದಣಿ ಮಾಡಿಕೊಳ್ಳಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



*ಅಕ್ಟೋಬರ್ 17, 18ರಂದು ಚಾಮರಾಜನಗರ ದಸರಾ ಗ್ರಾಮೀಣ ಕ್ರೀಡಾಕೂಟ*


 ಚಾಮರಾಜನಗರ, ಅಕ್ಟೋಬರ್ 14 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2026-27ನೇ ಸಾಲಿನ ಚಾಮರಾಜನಗರ ಜಿಲ್ಲೆಯ ದಸರಾ ಗ್ರಾಮೀಣ ಕ್ರೀಡಾಕೂಟವನ್ನು ಅಕ್ಟೋಬರ್ 17 ಮತ್ತು 18ರಂದು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. 

  

      ಕ್ರೀಡಾಕೂಟದಲ್ಲಿ ಪುರುಷರಿಗೆ ಕಬ್ಬಡಿ, ಖೋ-ಖೋ, ಕ್ರಿಕೆಟ್, ಹಗ್ಗ-ಜಗ್ಗಾಟ, ಮ್ಯೂಸಿಕಲ್ ಚೇರ್, ಸೈಕಲ್ ಪೋಲೋ ಹಾಗೂ ಮಹಿಳೆಯರಿಗೆ ಕಬ್ಬಡಿ, ಖೋ-ಖೋ, ಲೆಮನ್ ಅಂಡ್ ಸ್ಪೂನ್, ಹಗ್ಗ-ಜಗ್ಗಾಟ, ಮ್ಯೂಸಿಕಲ್ ಚೇರ್ ಸ್ಪರ್ಧೆಗಳು ನಡೆಯಲಿವೆ.

 

      ಅಕ್ಟೋಬರ್ 17ರಂದು ಕಬ್ಬಡಿ, ಖೋ-ಖೋ, ಕ್ರಿಕೆಟ್, ಹಗ್ಗ-ಜಗ್ಗಾಟ, ಸೈಕಲ್ ಪೋಲೋ ಹಾಗೂ 18ರಂದು ಲೆಮನ್ ಅಂಡ್ ಸ್ಪೂನ್ ಮತ್ತು ಮ್ಯೂಸಿಕಲ್ ಚೇರ್ ಸ್ಪರ್ಧೆಗಳು ಇರಲಿವೆ. 


       ಕ್ರೀಡಾಕೂಟದಲ್ಲಿ ನೋಂದಣಿಯಾಗಿ ಭಾಗವಹಿಸುವ ಸ್ಪರ್ಧಿಗಳು ತಮ್ಮ ವಿಳಾಸಕ್ಕೆ ಸಂಬಂಧಿಸಿದ ಆಧಾರ್ ಕಾರ್ಡ್‍ನ್ನು ಕಡ್ಡಾಯವಾಗಿ ತರಬೇಕು. ಸ್ಪರ್ಧೆ ನಡೆಯುವ ದಿನಾಂಕದಂದು ಡಾ. ಬಿ.ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳ್ಳಿಗೆ 9 ಗಂಟೆಗೆ ಸಂಘಟಕರಲ್ಲಿ ವರದಿಕೊಳ್ಳಬೇಕು. ಕ್ರೀಡೆಗಳಿಗೆ ಸಂಬಂಧಿಸಿದಂತೆ ನಿಬಂಧನೆಗಳ ಹಾಗೂ ಷರತ್ತುಗಳಿಗೆ ಒಳಪಟ್ಟು ಭಾಗವಹಿಸಬೇಕು. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ಟ್ರೋಫಿಗಳನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಇಲಾಖೆ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.


      ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ 9916466659, 9945615695, 9880211027, 9844242672 ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಅಕ್ಟೋಬರ್ 16ರಂದು ನಗರದಲ್ಲಿ ರೈತ ದಸರಾ : ಮೆರವಣಿಗೆ, ವಸ್ತುಪ್ರದರ್ಶನಗಳ ಆಯೋಜನೆ*  


ಚಾಮರಾಜನಗರ, ಅಕ್ಟೋಬರ್ 14 - ಚಾಮರಾಜನಗರ ದಸರಾ ಅಂಗವಾಗಿ ಕೃಷಿ ಇಲಾಖೆ ವತಿಯಿಂದ ರೈತ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 16 ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದೆ. 


       ಅಂದು ಬೆಳಿಗ್ಗೆ 10.30 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಿಂದ ಪಚ್ಚಪ್ಪ ವೃತ್ತ ಮಾರ್ಗವಾಗಿ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಇಲಾಖಾ ಸ್ತಬ್ಧಚಿತ್ರಗಳು, ಎತ್ತಿನ ಗಾಡಿಗಳು ಹಾಗೂ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮವಿದ್ದು, ಕೃಷಿ ವಸ್ತುಪ್ರದರ್ಶನದಲ್ಲಿ ಆಧುನಿಕ ಕೃಷಿ ಯಂತ್ರೋಪಕರಣಗಳ ಪ್ರದರ್ಶನ, ಪಾರಂಪರಿಕ ಕೃಷಿ ವಸ್ತುಗಳ ಪ್ರದರ್ಶನ, ಸಾವಯವ ಉತ್ಪನ್ನಗಳು, ಮಣ್ಣು ಆರೋಗ್ಯ ಪ್ರಯೋಗಾಲಯ, ರೇμÉ್ಮ ಕೃಷಿ, ಅಲಂಕಾರಿಕ ಮೀನುಗಳ ಪ್ರದರ್ಶನ ಹಾಗೂ ಇತರೆ ವಸ್ತು ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ರೈತರು ರೈತ ದಸರಾ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


*ಅಕ್ಟೋಬರ್ 16ರಂದು ನಗರದಲ್ಲಿ ರೈತ ದಸರಾ, ಫಲಪುಷ್ಪ ಪ್ರದರ್ಶನ, ಶ್ವಾನಗಳ ಪ್ರದರ್ಶನ, ಹಾಲು ಕರೆಯುವ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ*  


 ಚಾಮರಾಜನಗರ, ಅಕ್ಟೋಬರ್ 14 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆ ವತಿಯಿಂದ ಚಾಮರಾಜನಗರ ದಸರಾ ಮಹೋತ್ಸವ ಅಂಗವಾಗಿ ಅಕ್ಟೋಬರ್ 16ರಂದು ರೈತ ದಸರಾ, ಫಲಪುಷ್ಪ ಪ್ರದರ್ಶನ, ಶ್ವಾನದಳ ಪ್ರದರ್ಶನ, ಹಾಲು ಕರೆಯುವ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 


       ಬೆಳಿಗ್ಗೆ 10 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶ್ವಾನಗಳ ಪ್ರದರ್ಶನವನ್ನು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸುವರು. 11.45 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ರೈತ ದಸರಾದ ವೇದಿಕೆ ಕಾರ್ಯಕ್ರಮ ಹಾಗೂ ರಾಶಿ ಪೂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ರೈತ ದಸರಾ ಕಾರ್ಯಕ್ರಮ ಉದ್ಘಾಟಿಸುವರು.


       ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಬೆಳಿಗ್ಗೆ 11.30 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸುವರು. ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಒಳ ಆವರಣದಲ್ಲಿ ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು. 


       ಬೆಳಿಗ್ಗೆ 11 ಗಂಟೆಗೆ ಚಾಮರಾಜೇಶ್ವರ ದೇವಸ್ಥಾನದ ಬಳಿ ರೈತ ದಸರಾ ಮೆರವಣಿಗೆಗೆ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಚಾಲನೆ ನೀಡುವರು. ಸಂಜೆ 5 ಗಂಟೆಗೆ ಡಾ. ಬಿ.ಆರ್. ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಹುಮಾನ ವಿತರಿಸುವರು.


      ಕಾರ್ಯಕ್ರಮದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ (ಮುನ್ನ) ಅವರು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

Monday, 12 October 2026

ಚಾಮರಾಜನಗರ ದಸರಾ ಮಹೋತ್ಸವ : ವೇದಿಕೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಆತ್ಮೀಯ ಬಿಳ್ಕೋಡುಗೆ*

 



ಚಾಮರಾಜನಗರ ದಸರಾ ಮಹೋತ್ಸವ : ವೇದಿಕೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ   ಚಾಮರಾಜನಗರ, ಅಕ್ಟೋಬರ್ 12 - ನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ನಡೆಯಲಿರುವ ದಸರಾ ಮಹೋತ್ಸವದ ಅಂಗವಾಗಿ ವೇದಿಕೆ ನಿರ್ಮಾಣ ಕಾರ್ಯಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.  ನಗರದ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿರುವ ಬೃಹತ್ ವೇದಿಕೆ ಹಾಗೂ ವಿಶಾಲವಾದ ಶಾಮಿಯಾನ, ಇನ್ನಿತರ ಕಾರ್ಯಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಚಾಮರಾಜನಗರ ದಸರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ. ಮೂರು ದಿನಗಳ ಕಾಲ ನಡೆಯಲಿರುವ ಉತ್ಸವದ ಅಂಗವಾಗಿ ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.  ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ನಗರಸಭೆ ಮಾಜಿ ಅಧ್ಯಕ್ಷರಾದ ಸುರೇಶ್ ನಾಯಕ, , ಅರ್ಚಕರಾದ ರಾಮಕೃಷ್ಣ ಭಾರದ್ವಾಜ್, ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್ ಸೇರಿದಂತೆ ಇತರರು ಸಂದರ್ಭದಲ್ಲಿ ಉಪಸ್ಥಿತರಿದ್ದರು.


*


         ಚಾಮರಾಜನಗರ, ಅಕ್ಟೋಬರ್ 12 :- ನಗರದ ಯಡಬೆಟ್ಟದ ಸಮೀಪ ಬುಡಕಟ್ಟು ಆದಿವಾಸಿ ಸಮುದಾಯದ ಅನುಕೂಲಕ್ಕಾಗಿ 3.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಿರುವ ಸಮುದಾಯ ಭವನದ ಕಾಮಗಾರಿಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.

       ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಬುಡಕಟ್ಟು ಆದಿವಾಸಿ ಸಮುದಾಯದ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ. ಈ ಭವನವು ಸಮುದಾಯದ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆ-ಸಮಾರಂಭಗಳನ್ನು ಆಯೋಜಿಸಲು ಸಹಕಾರಿಯಾಗಲಿದೆ. ಸಮುದಾಯ ಭವನವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

      ಸಮುದಾಯ ಭವನದ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟವನ್ನು ಕಾಯ್ದುಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
  
       ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಕೇತಮ್ಮ, ಮುಖಂಡರಾದ ಜಡೆಯಪ್ಪ, ಡಾ. ಸಿ. ಮಾದೇಗೌಡ, ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸುಬ್ಬರಾಯ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಕಚೇರಿ ಅಧೀಕ್ಷಕರಾದ ಶ್ರೀನಿವಾಸಮೂರ್ತಿ, ತಾಲೂಕು ಕಚೇರಿಯ ವ್ಯವಸ್ಥಾಪಕರಾದ ಸುರೇಶ್, ಮನೋಹರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಆತ್ಮೀಯ ಬಿಳ್ಕೋಡುಗೆ*  

ಚಾಮರಾಜನಗರ, ಅಕ್ಟೋಬರ್ 12 - ಚಾಮರಾಜನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ವರ್ಗಾವಣೆಗೊಂಡು ನಿರ್ಗಮಿಸಿದ ಮೋನಾ ರೋತ್ ಅವರಿಗೆ ಆತ್ಮೀಯ ಹಾಗೂ ಹೃದಯಸ್ಪರ್ಶಿ ಬಿಳ್ಕೋಡುಗೆ ನೀಡಲಾಯಿತು.

      ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ದಾರಿಯುದ್ದಕ್ಕೂ ಹೂಮಳೆ ಸುರಿಸುವ ಮೂಲಕ ನಿರ್ಗಮಿತರನ್ನು ಸಮಾರಂಭಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

      ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು ಅವರು ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಜಿಲ್ಲೆಯ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ. ಕುಡಿಯುವ ನೀರಿನ ಯೋಜನೆ ಹಾಗೂ ಕಾಮಗಾರಿಗಳ ಪ್ರಗತಿಗೆ ಮೋನಾ ರೋತ್ ಅವರ ಕೊಡುಗೆ ಅನನ್ಯವಾಗಿದೆ. ಅವರ ಸೇವೆ ಚಾಮರಾಜನಗರ ಜಿಲ್ಲೆಗೆ ಇನ್ನೂ ಅಗತ್ಯವಾಗಿತ್ತು ಎಂದರು.

      ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆ ಮುಂಚೂಣಿ ಸ್ಥಾನ ಕಾಯ್ದುಕೊಳ್ಳಲು ಮೋನಾ ರೋತ್ ಅವರ ಪರಿಶ್ರಮವಿದೆ. ಯೋಜನೆಗಳ ಪ್ರಗತಿಗಾಗಿ ಜಿಲ್ಲಾ ಗ್ಯಾರಂಟಿ ಸಮಿತಿಗೆ ಉತ್ತಮ ಸಹಕಾರ ನೀಡಿದ್ದರು. ಗ್ಯಾರಂಟಿ ಯೋಜನೆಗಳ ರಾಜ್ಯಮಟ್ಟದ ಸಭೆಗಳಲ್ಲಿಯೂ ಅವರು ಜಿಲ್ಲೆಯ ಪರವಾಗಿ ಉತ್ತಮ ಕೆಲಸ ಮಾಡಿದ್ದಾರೆ. ಮುಂದಿನ ವೃತ್ತಿಜೀವನದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ದೊರೆಯಲಿ ಎಂದು ಎಚ್.ವಿ. ಚಂದ್ರು ಅವರು ಹಾರೈಸಿದರು.

      ಸನ್ಮಾನ ಸ್ವೀಕರಿಸಿದ ನಿರ್ಗಮಿತ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಜಿಲ್ಲಾ ಪಂಚಾಯತ್ ವತಿಯಿಂದ ಸಾಕಷ್ಟು ಯೋಜನೆ ಅನುಷ್ಟಾನ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಯಲ್ಲಿ ನಾನು ಭಾಗಿಯಾಗಿರುವುದು ಹೆಮ್ಮೆಯ ವಿಚಾರ. ಕಾರ್ಯಕ್ರಮಗಳ ಪ್ರಗತಿಯನ್ನು ಮುಂಚೂಣಿಗೆ ತರಲು ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದರು.

      ಜಿಲ್ಲೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಅಭಿವೃದ್ಧಿಗಾಗಿ ಸ್ವಯಂ ಪ್ರೇರಣೆಯಿಂದ ಕರ್ತವ್ಯದಲ್ಲಿ ತೊಡಗಿಸಿಕೊಳ್ಳಲು ಅಧಿಕಾರಿಗಳಿಗೆ ಸಲಹೆ ನೀಡಿದ್ದೇನೆ. ಯಾವುದೇ ವಿಭಾಗಗಳ ಪ್ರಗತಿಯಲ್ಲಿ ಜಿಲ್ಲೆ ಅಗ್ರ 10 ರೊಳಗಿರಬೇಕು ಎಂಬುದು ನನ್ನ ಅಭಿಲಾಷೆಯಾಗಿತ್ತು. ಒಟ್ಟಾರೆ ಜಿಲ್ಲೆಯಲ್ಲಿ ಕೆಲಸ ಮಾಡಿದ ತೃಪ್ತಿ ನನಗಿದೆ ಎಂದ ಮೋನಾ ರೋತ್ ಅವರು ಎಲ್ಲರ ಸಹಕಾರಕ್ಕೆ ಧನ್ಯವಾದಗಳನ್ನು ತಿಳಿಸಿದರು.    
  
      ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಅಧಿಕಾರಿಗಳು, ವಿವಿಧ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎನ್.ಆರ್.ಎಲ್.ಎಂ ಸದಸ್ಯರು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Thursday, 8 October 2026

ಲೋಕಾ ತನಿಖೆ: ಕಿರಿಯ ಅಬಿಯಂತರ ಅಮಾನತು.!


ಲೋಕಾ ತನಿಖೆ: ಕಿರಿಯ ಅಬಿಯಂತರ ಅಮಾನತು.!
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ: ಅ 07:ಲೋಕಾಯುಕ್ತದಲ್ಲಿ ದಾಖಲಾದ ದೂರೊಂದರ ವಿಚಾರಣೆ ತನಿಖೆಯಿಂದಾಗಿ ಚಾಮರಾಜನಗರ
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಅಭಿಯಂತರೊಬ್ಬರು ಅಮಾನತ್ತಾಗಿರುವ ಘಟನೆ ನಡದಿದೆ. 
ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾ ಯುಕ್ತ ಸಂಸ್ಥೆಯು ಈ ಕುರಿತು ಸಮಗ್ರ ತನಿಖೆ ನಡೆಸಿತ್ತು. ಅಂದಿನ ಕಿರಿಯ ಅಭಿಯಂತರಾಗಿದ್ದ ಎಸ್.ಆರ್. ಪುರುಷೋತ್ತಮ್ ಅವರು ಸ್ಥಳ ತಪಾಸಣೆ ನಡೆಸದೆಯೇ,  ಸಂಸ್ಥೆಯ ಆಕ್ಷೇಪಣೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ತನಿಖೆಯಲ್ಲಿ ಸಾಬೀತಾಗಿದೆ. ಗುತ್ತಿಗೆದಾರ ಸಂಸ್ಥೆಯೊಂದಿಗೆ ಶಾಮೀಲಾಗಿ, ನಡೆಯದ ಕಾಮಗಾರಿಗೆ ನಕಲಿ ದಾಖಲೆಗಳನ್ನುಸೃಷ್ಟಿಸಿ ಕೋಟಿಗಟ್ಟಲೆ ಅಕ್ರಮವಾಗಿ ಪಾವತಿಯಾ ಗುವಂತೆ ಮಾಡಿ ಸರ್ಕಾರಕ್ಕೆ ಭಾರಿ ಆರ್ಥಿಕ ನಷ್ಟ ಉಂಟುಮಾಡಿರುವುದು ಮೇಲ್ನೋಟಕ್ಕೆ ದೃಢಪಟ್ಟಿದೆ.

ತಾಲೂಕಿನ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಮಾಡದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿಸಿ, ಗುತ್ತಿಗೆ 'ದಾರ ಸಂಸ್ಥೆಗೆ ಅಕ್ರಮವಾಗಿ ಕೋಟ್ಯಂತರ ರೂಪಾಯಿ ಪಾವತಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಸಹಾಯಕ ಅಭಿಯಂತರ ಎಸ್.ಆರ್. ಪುರುಷೋತ್ತಮ್ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.


ಲೋಕಾಯುಕ್ತ ಕಾಯ್ದೆ 1984ರ ಕಲಂ 12(3)ರ ಅಡಿಯಲ್ಲಿ ಲೋಕಾಯುಕ್ತರು ನೀಡಿದ ತನಿಖಾ ವರದಿ ಮತ್ತು ಶಿಸ್ತುಕ್ರಮದ ಶಿಫಾರಸಿನ ಆಧಾರದ ಮೇಲೆ, ಗ್ರಾಮೀ ಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಅಧಿಕಾರಿಯನ್ನು ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಅಮಾನತು ಗೊಳಿಸಿದೆ. ಅಮಾನತ್ತಿನ ಅವಧಿಯಲ್ಲಿ ಅಧಿಕಾರಿಯು ಸರ್ಕಾರದ ಪೂರ್ವ ಅನುಮತಿಯಿಲ್ಲದೆ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

 
ಪ್ರಕರಣದ ಹಿನ್ನೆಲೆ:

ಚಾಮರಾಜನಗರ ತಾಲೂಕಿನ 166 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ 292.80 ಕೋಟಿ ವೆಚ್ಚದ ಬೃಹತ್‌ ಯೋಜನೆಗೆ ಸಂಬಂಧಿಸಿದಂತೆ ಈ ಹಗರಣ ಬೆಳಕಿಗೆ ಬಂದಿದೆ. ಹೈದರಾಬಾದ್ ಮೂಲದ ಮೆ॥ ಮೇಘಾ ಇಂಜಿನಿಯರಿಂಗ್ ಮತ್ತು ಇನ್ಸಾಸ್ಟಕ್ಟರ್ ಲಿಮಿಟೆಡ್ (MEIL) ಸಂಸ್ಥೆಯು ಈ ಯೋಜನೆಯ ಅನುಷ್ಠಾನದ ಜವಾಬ್ದಾರಿ ಹೊತ್ತಿತ್ತು. ಯೋಜನೆಯ ಒಪ್ಪಂದದ ಪ್ರಕಾರ, ವಿದ್ಯುತ್ ಸಂಪರ್ಕಕ್ಕಾಗಿ 11.50 ಕೋಟಿ ವೆಚ್ಚದಲ್ಲಿ 'ಪವರ್‌ ಸಬ್‌ಸ್ಟೇಷನ್' ನಿರ್ಮಿಸಬೇಕಾಗಿತ್ತು.ಆದರೆ, ಪ್ರಾಜೆಕ್ಟ್ ಮ್ಯಾನೇಜ್‌ಮೆಂಟ್ ಕನ್ಸಲೆಂಟ್ಸ್ ಸಂಸ್ಥೆಯು ಸ್ಥಳ ಪರಿಶೀಲನೆ ನಡೆಸಿ, ಗುತ್ತಿಗೆದಾರರು ಪವರ್ ಸಬ್‌ಸ್ಟೇಷನ್ ಕಾಮಗಾರಿಯನ್ನೇ ಮಾಡಿಲ್ಲ ಮತ್ತು ಅದರ ಅಗತ್ಯವೂ ಇಲ್ಲ ಎಂದು ವರದಿ ನೀಡಿತ್ತು.ಅಲ್ಲದೆ ಈ ಕಾಮಗಾರಿಗೆ ಹಣ ಪಾವತಿಸದಂತೆ ತೀವ್ರ ಆಕ್ಷೇಪ ವ್ಯಕ್ತಪಡಿ ಸಿತ್ತು.










 

ಅ. ೨೬ರಂದು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ : ಅದ್ದೂರಿ, ಅರ್ಥಪೂರ್ಣ ಆಚರಣೆಗೆ ನಿರ್ಧಾರ



 ಅ. ೨೬ರಂದು ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ : ಅದ್ದೂರಿ, ಅರ್ಥಪೂರ್ಣ ಆಚರಣೆಗೆ ನಿರ್ಧಾರ 


        ಚಾಮರಾಜನಗರ, ಅಕ್ಟೋಬರ್ ೦೮ - ಇದೇ ತಿಂಗಳ ೨೬ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.


       ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿAದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬAಧ ಜಿಲ್ಲಾಧಿಕಾರಿ ಶ್ರೀರೂಪ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. 


       ಆರಂಭದಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಬಗ್ಗೆ ಸಭೆಯಲ್ಲಿ ಹಾಜರಿದ್ದ ಪರಿಶಿಷ್ಟ ವರ್ಗದ, ಇತರೆ ಜನಾಂಗದ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರ ಸಲಹೆ, ಅಭಿಪ್ರಾಯ ಅನಿಸಿಕೆಗಳನ್ನು ಆಲಿಸಿದರು.


 ಮಹರ್ಷಿ ವಾಲ್ಮೀಕಿಯವರು ರಾಮಾಯಣ ದರ್ಶನಂ ಮಹಾಗ್ರಂಥ ರಚನೆ ಮೂಲಕ ಸಮಾಜದ ಎಲ್ಲಾ ವರ್ಗಗಳಿಗೂ ಉತ್ತಮ ಸಂದೇಶ ನೀಡಿದ್ದು, ಜಯಂತಿಯನ್ನು ಜಿಲ್ಲೆಯಾದ್ಯಂತ ಹಬ್ಬದ ಮಾದರಿಯಲ್ಲಿ ಆಚರಿಸಬೇಕು. ಎಲ್ಲಾ ತಾಲೂಕುಗಳಲ್ಲಿ ಹಾಗೂ ಶಾಲಾ-ಕಾಲೇಜುಗಳಲ್ಲಿಯೂ ಜಯಂತಿ ಆಚರಣೆಯಾಗಬೇಕು. ಮೆರವಣಿಗೆಯನ್ನು ಹೆಚ್ಚಿನ ಸಾಂಸ್ಕೃತಿಕ ಕಲಾತಂಡಗಳೊಡನೆ ವ್ಯವಸ್ಥಿತವಾಗಿ ಆಯೋಜಿಸಬೇಕು. ಸಮಾಜದ ಸಾಧಕರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು. ಮುಖ್ಯ ಭಾಷಣಕಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂಬುದು ಸೇರಿದಂತೆ ಇನ್ನಿತರೆ ಸಲಹೆಗಳನ್ನು ಮುಖಂಡರು ಸಲಹೆ ಮಾಡಿದರು.


 ಅಲ್ಲದೆ ಜಿಲ್ಲಾಡಳಿತ ಭವನದ ಅವರಣದಲ್ಲಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆ ನಿರ್ಮಾಣಕ್ಕೆ ಸಂಬAಧಿಸಿದAತೆ ವಾಲ್ಮೀಕಿಯವರ ಪ್ರತಿಮೆಯನ್ನು ನಿರ್ಮಾಣ ಮಾಡಿ ಮುಂದಿನ ವರ್ಷದ ಜಯಂತಿ ಕಾರ್ಯಕ್ರಮದ ಸಂದರ್ಭದಲ್ಲಿ ಉದ್ಘಾಟಿಸಲಾಗುವುದೆಂದು ಭರವಸೆ ನೀಡಿದ್ದರೂ ಪ್ರತಿಮೆ ಇನ್ನೂ ನಿರ್ಮಾಣದ ಹಂತದಲ್ಲಿಯೇ ಇದೆ. ಇದು ವಿಳಂಬ ಧೋರಣೆಯಾಗಿದೆ ಎಂದು ಮುಖಂಡರು ಸಭೆಯಲ್ಲಿ ಬೇಸರ ವ್ಯಕ್ತಪಡಿಸಿದರು. ಈ ಸಂಬAಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಪ್ರತಿಮೆ ನಿರ್ಮಾಣದಲ್ಲಿನ ತಾಂತ್ರಿಕ ಸಮಸ್ಯೆ ಪರಿಹರಿಸಿ ಶೀಘ್ರವಾಗಿ ಕ್ರಮ ವಹಿಸಲಾಗುವುದೆಂದು ತಿಳಿಸಿದರು.


ಬಳಿಕ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಕ್ಟೋಬರ್ ೨೬ರಂದು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಶಿಷ್ಟಾಚಾರ ಪ್ರಕಾರವೇ ಆಚರಿಸಲಾಗುವುದು. ಅಂದು ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿAದ ಬೆಳ್ಳಿರಥದಲ್ಲಿ ಅಲಂಕೃತ ವಾಲ್ಮೀಕಿಯವರ ಭಾವಚಿತ್ರ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾತಂಡಗಳೊAದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಮಾರಿಗುಡಿ ಮುಂಭಾಗ ತಲುಪಲಿದೆ. ಅಲ್ಲಿಯೇ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು.

 

ಜಯಂತಿ ಕಾರ್ಯಕ್ರಮದ ವ್ಯವಸ್ಥಿತ ನಿರ್ವಹಣೆಗಾಗಿ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿರುವ ಅಧಿಕಾರಿಗಳು ಕಾರ್ಯಕ್ರಮ ಆಯೋಜನೆಯಲ್ಲಿ ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು. ಮೆರವಣಿಗೆ ಹೊರಡುವ ನಗರದ ರಸ್ತೆಗಳನ್ನು ತಳಿರು-ತೋರಣಗಳಿಂದ ಅಲಂಕರಿಸಬೇಕು. ಸ್ವಚ್ಚತೆ ಸೇರಿದಂತೆ ಅಗತ್ಯ ಸಿದ್ದತಾ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ವೇದಿಕೆ ಕಾರ್ಯಕ್ರಮ ಸ್ಥಳದಲ್ಲಿಯೂ ಕುಡಿಯುವ ನೀರು, ಸ್ವಚ್ಚತೆ ಸೇರಿದಂತೆ ಅವಶ್ಯ ಸಿದ್ದತೆಗಳನ್ನು ಸಂಬAಧಪಟ್ಟ ಅಧಿಕಾರಿಗಳು ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.


ವಾಲ್ಮೀಕಿಯವರ ಜೀವನ-ಸಾಧನೆ ಕುರಿತು ಬೆಳಕು ಚೆಲ್ಲುವ ಉತ್ತಮ ಭಾಷಣಕಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಜಯಂತಿ ದಿನದಂದು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಎಲ್ಲಾ ತಾಲೂಕುಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಾರೆ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಅದ್ದೂರಿ, ಅರ್ಥಪೂರ್ಣ ಹಾಗೂ ಸುಸೂತ್ರವಾಗಿ ಆಚರಿಸಲು ಎಲ್ಲಾ ಮುಖಂಡರು, ಸಂಘಸAಸ್ಥೆಗಳು, ಕನ್ನಡಪರ ಸಂಘಟನೆಗಳು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸಭೆಯಲ್ಲಿ ಕೋರಿದರು.    


       ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಡಿ.ವೈ.ಎಸ್.ಪಿ ಸ್ನೇಹರಾಜ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಜಿಲ್ಲಾಮಟ್ಟದ ಅಧಿಕಾರಿಗಳು, ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.

                                                           

ಅ. ೯ರಂದು ನಗರದಲ್ಲಿ ತಾಲೂಕು ಮಟ್ಟದ ಯುವ ಸಂಸತ್ ಸಭೆ


         ಚಾಮರಾಜನಗರ, ಅಕ್ಟೋಬರ್ ೦೮ :- ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಚಾಮರಾಜನಗರ ತಾಲೂಕು ಮಟ್ಟದ ಯುವ ಸಂಸತ್ ಸಭೆಯನ್ನು ಅಕ್ಟೋಬರ್ ೯ರಂದು ಬೆಳಿಗ್ಗೆ ೯.೩೦ ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. 


ಸೈಬರ್ ವಂಚನೆ ವಿರುದ್ದ ಅರಿವು ಕಾರ್ಯಕ್ರಮ 


        ಚಾಮರಾಜನಗರ, ಅಕ್ಟೋಬರ್ ೦೮ - ಸೈಬರ್ ವಂಚನೆ ವಿರುದ್ದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಜಾಗೃತಿಗೊಳಿಸುವ ದಿಸೆಯಲ್ಲಿ ಜಿಲ್ಲಾ ಪೊಲೀಸ್ ಸೈಬರ್ ಕ್ರೆöÊಂ ಪೊಲೀಸ್ ಠಾಣೆ ವತಿಯಿಂದ ಅರಿವು ಕಾರ್ಯಕ್ರಮ ನಡೆಯಿತು. 


       ಗುಂಡ್ಲುಪೇಟೆ ತಾಲೂಕಿನ ಹೊರೆಯಾಲದ ಜೆಎಸ್‌ಎಸ್ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಹಾಗೂ ಬೇಗೂರು ಗ್ರಾಮದ ಸಾರ್ವಜನಿಕರಿಗೆ ಸೈಬರ್ ಅಪರಾಧಗಳ ವಿರುದ್ದ ಅರಿವು ಮೂಡಿಸುವ ದಿಸೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 


       ಆನ್ ಲೈನ್ ಮೂಲಕ ಪದವಿ ವಿದ್ಯಾರ್ಥಿಗಳಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ದಾಖಲಾತಿಗಳನ್ನು ಪಡೆದುಕೊಂಡು ವಿವಿಧ ಶುಲ್ಕಗಳೆಂದು ಹಣ ಪಡೆಯುವ ವಂಚಕರು ಇದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ನೀಡುವ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಯೂ ಇದ್ದು, ಈ ಬಗ್ಗೆ ಎಚ್ಚರ ವಹಿಸಬೇಕೆಂದು ಸೈಬರ್ ಕ್ರೆöÊಂ ಠಾಣೆ ಸಿಬ್ಬಂದಿ ನವೀನ್ ಮತ್ತು ಗುರುಕಿರಣ್ ತಿಳಿಸಿದರು. 


       ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ರೀಲ್ಸ್ ಗಳನ್ನು ಅಪ್ ಲೋಡ್ ಮಾಡಬಾರದು. ಇಂತಹ ರೀಲ್ಸ್ ಗಳು ಅಪ್ ಲೋಡ್ ಮಾಡಿದರೆ ದುರ್ಬಳಕೆಯಾಗುವ ಸಂಭವವಿರುತ್ತದೆ. ಯಾವುದೇ ಸೈಬರ್ ಸೆಂಟರ್‌ಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಐಡಿ ಮೂಲಕ ಲಾಗಿನ್ ಆಗಿದ್ದರೆ ತಪ್ಪದೆ ಲಾಗ್ ಔಟ್ ಮಾಡಬೇಕು ಎಂದರು.


       ಪ್ರವಾಸ ಹೋದ ಬಗ್ಗೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಬಾರದು. ಸೈಬರ್ ವಂಚಕರು ಟೆಲಿಕಾಂ ಮೂಲಕ ನಿಮ್ಮ ಲೊಕೇಶನ್ ಕೊಟ್ಟು ಮನೆಯನ್ನು ಕಳ್ಳತನ ಮಾಡುವ ಸಾಧ್ಯತೆ ಇರುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಮ್ಯಾಟ್ರಿ ಮೊನಿಯಲ್ ಜಾಹೀರಾತುಗಳನ್ನು ಬಳಸಿದರೆ ವೈಯಕ್ತಿಕ ಮಾಹಿತಿಗಳು ದುರ್ಬಳಕೆಯಾಗಲಿದೆ ಎಂದು ತಿಳಿವಳಿಕೆ ನೀಡಿದರು.


ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ ಪ್ರೋತ್ಸಾಹಧನ : ಅರ್ಜಿ ಆಹ್ವಾನ 


       ಚಾಮರಾಜನಗರ, ಅಕ್ಟೋಬರ್ ೦೮ - ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೬-೨೭ನೇ ಸಾಲಿಗೆ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಯಡಿ (ಮಂಗಳ ಮುಖಿ) ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ೪೫ ಸಾವಿರ ರೂ.ಗಳ ಪ್ರೋತ್ಸಾಹಧನ ನೀಡುತ್ತಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 


       ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿದ್ದು, ೨೦ ರಿಂದ ೫೫ ವರ್ಷದೊಳಗಿರಬೇಕು. ರಾಷ್ಟಿçÃಕೃತ ಬ್ಯಾಂಕ್‌ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿದ್ದು, ಬ್ಯಾಂಕ್ ಖಾತೆಯ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು ಹಾಗೂ ಕಡ್ಡಾಯವಾಗಿ ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಸೀಡಿಂಗ್ ಆಗಿರಬೇಕು. ಯಾವುದೇ ಆರ್ಥಿಕ ಸಂಸ್ಥೆ/ಬ್ಯಾAಕುಗಳಲ್ಲಿ ಸುಸ್ತಿದಾರರಾಗಿರಬಾರದು ಎಂಬ ದೃಢೀಕರಣ ಪತ್ರ ಸಲ್ಲಿಸಬೇಕು. ಸಮತಾ ಸೊಸೈಟಿ ಸಂಸ್ಥೆಯಲ್ಲಿ ನೋಂದಣಿಯಾಗಿರಬೇಕು. 


      ಅರ್ಜಿಗಳನ್ನು ಆನ್ ಲೈನ್ ಮೂಲಕ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಆಫ್‌ಲೈನ್‌ನಲ್ಲಿ ಅಕ್ಟೋಬರ್ ೩೧ರೊಳಗೆ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಡಿ. ೧೨ರಂದು ಜಿಲ್ಲೆಯಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್


       ಚಾಮರಾಜನಗರ, ಅಕ್ಟೋಬರ್ ೦೮ - ರಾಷ್ಟ್ರೀಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಚಾಮರಾಜನಗರ ಜಿಲ್ಲಾದ್ಯಂತ ರಾಷ್ಟಿçÃಯ ಲೋಕ್ ಅದಾಲತ್ ಪ್ರಕ್ರಿಯೆಯನ್ನು ಡಿಸೆಂಬರ್ ೧೨ರಂದು ಹಮ್ಮಿಕೊಳ್ಳಲಾಗಿದೆ.


      ಈ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ, ಮುಂಚಿತವಾಗಿ ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಆಯಾಯ ತಾಲ್ಲೂಕು ಕಾನೂನು ಸೇವಾ ಸ ಮಿತಿಗಳನ್ನು ಆನ್‌ಲೈನ್, ವೀಡಿಯೊ  ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸ್ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಕೋರಿದೆ.


     ಲೋಕ್ ಅದಾಲತ್ ನಿಮಿತ್ತ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀ ಯೋಗ್ಯ ದಾವೆ, ಪ್ರಕರಣಗಳನ್ನು ಶೀಘ್ರ ಪರಿಣಾಮಕಾರಿ ತೀರ್ಮಾನಕ್ಕೆ ಎ.ಡಿ.ಆರ್. ಕಟ್ಟಡದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. 


      ಲೋಕ್ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ, ಮೋಟಾರ್ ಅಪಘಾತ ಪರಿಹಾರ, ಕಾರ್ಮಿಕ ವಿವಾದಗಳು, ವಿದ್ಯುತ್ ಮತ್ತು ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ, ಸಾರ್ವಜನಿಕ ಉಪಯುಕ್ತತೆ ಸೇವೆ, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣ (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ) ಗಳನ್ನು ಇತ್ಯರ್ಥಪಡಿಸಲಾಗುವುದು.


       ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವೂ ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಪ ಅವಕಾಶವಾಗಿದೆ.


       ಪ್ರತಿದಿನ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಲೋಕ್ ಅದಾಲತ್ ಗೆ ಸಂಬAಧಿಸಿದAತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವಿಡಿಯೋ ಕಾನ್ಸರೆನ್ಸ್ ಮೂಲಕ ಕರ್ನಾಟಕ ಉಚ್ಚ ನ್ಯಾಯಾಲಯದ ಎಸ್‌ಒಪಿ ನಿಯಮಗಳಂತೆ ನಡೆಯುತ್ತವೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ, ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದಾಗಿರುತ್ತದೆ.

   

       ಹೆಚ್ಚಿನ ಮಾಹಿತಿಗಾಗಿ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ೧೫೧೦೦, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ೧೮೦೦-೪೨೫-೯೦೯೦೦, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಾಮರಾಜನಗರ ೦೮೨೨೬-೨೨೬೦೨೨, ತಾಲೂಕು ಕಾನೂನು ಸೇವಾ ಸಮಿತಿಗಳಾದ ಕೊಳ್ಳೇಗಾಲ ೦೮೨೨೪-೨೫೬೭೮೮, ಗುಂಡ್ಲುಪೇಟೆ ೦೮೨೨೯-೨೨೩೨೭೯, ಯಳಂದೂರು ೦೮೨೨೬-೨೪೦೨೨೯ ಇ-ಮೇಲ್ ಜಟsಚಿಛಿhಟಿಚಿgಚಿಡಿ೨೦೨೧@gmಚಿiಟ.ಛಿom. ಸಂಪರ್ಕಿಸುವAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ  ಈಶ್ವರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tuesday, 6 October 2026

ಜಿಲ್ಲೆಯಲ್ಲಿ ಎರಡನೇ ದಿನವು ಕೇಂದ್ರ ಅಧಿಕಾರಿಗಳ ತಂಡದಿAದ ಬರ ಅಧ್ಯಯನ : ಒಳಗಿದ ಬೆಳೆ, ವಿಬಿ ಜಿ ರಾಮ್ ಜಿ ಕಾಮಗಾರಿ ವೀಕ್ಷಣೆ











ಜಿಲ್ಲೆಯಲ್ಲಿ ಎರಡನೇ ದಿನವು ಕೇಂದ್ರ ಅಧಿಕಾರಿಗಳ ತಂಡದಿAದ ಬರ ಅಧ್ಯಯನ : ಒಳಗಿದ ಬೆಳೆ, ವಿಬಿ ಜಿ ರಾಮ್ ಜಿ ಕಾಮಗಾರಿ ವೀಕ್ಷಣೆ 


        ಚಾಮರಾಜನಗರ, ಅಕ್ಟೋಬರ್ ೦೬ - ಬರ ಅಧ್ಯಯನಕ್ಕಾಗಿ ಆಗಮಿಸಿದ್ದ ಕೇಂದ್ರ ಅಧಿಕಾರಿಗಳ ತಂಡವು ಎರಡನೇ ದಿನವಾದ ಇಂದು ಸಹ ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರದ ತೀವ್ರತೆಯನ್ನು ಪರಿಶೀಲಿಸಿತು. 


      ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಉಪ ಆಯುಕ್ತರಾದ ಡಾ. ಸುಧಾಮ್ ಬೇಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಸಲಹೆಗಾರರಾದ ಆಶೀಶ್ ಪಾಂಡೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಮಹಾಲನೋಬಿಸ್ ರಾಷ್ಟಿçÃಯ ಬೆಳೆ ಮುನ್ಸೂಚನೆ ಕೇಂದ್ರ (ಎಂಎನ್‌ಸಿಎಫ್‌ಸಿ)ದ ಉಪನಿರ್ದೇಶಕರಾದ ಕರಣ್ ಚೌಧರಿ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಮಂಗಳವಾರವು ಸಹ ಹಲವು ಬರ ಪೀಡಿತ ಪ್ರದೇಶಗಳಲ್ಲಿ ಬರ ಅಧ್ಯಯನವನ್ನು  ಮುಂದುವರೆಸಿತು.  

 

      ಗುಂಡ್ಲುಪೇಟೆ ತಾಲೂಕಿನ ಪರ್ವತನಪುರದ ದೇವಿರಮ್ಮ ಮಲ್ಲಿಯಯ್ಯ ರವರ ಜಮೀನಿಗೆ ಭೇಟಿ ನೀಡಿ ಒಣಗಿದ ಬಾಳೆ ಬೆಳೆಯನ್ನು ವೀಕ್ಷಿಸಿದರು. ಇದೇ ವೇಳೆ ತಂಡದ ಅಧಿಕಾರಿಗಳಿಗೆ ಅಹವಾಲು ಸಲ್ಲಿಸಿದ ಜಮೀನಿನ ಮಾಲಿಕರು ಬೆಳೆಗಾಗಿ ಸಾಕಷ್ಟು ಹಣವನ್ನು ಖರ್ಚು ಮಾಡಿದ್ದೇವೆ. ಮಳೆಯಿಲ್ಲದೆ ಫಸಲು ಬಂದಿಲ್ಲ. ಸರಿಯಾದ ವೇಳೆಗೆ ಮಳೆ ಬಂದಿದ್ದರೆ ನಮಗೆ ೨ ಲಕ್ಷ ರೂ. ಆದಾಯ ಬರುತ್ತಿತ್ತು. ಮಳೆ ಕೈಕೊಟ್ಟಿದ್ದರಿಂದ ತೊಂದರೆ ಅನುಭವಿಸುವಂತಾಗಿದೆ. ನಮ್ಮ ನೆರವಿಗೆ ಬರಬೇಕೆಂದು ಕೋರಿದರು. 


      ಹನೂರು ತಾಲೂಕಿಗೆ ಭೇಟಿ ನೀಡಿದ ತಂಡವು ಮೊದಲಿಗೆ ತಾಲೂಕಿನ ಹುಲ್ಲೇಪುರ ಗ್ರಾಮದ ರಾಜಮ್ಮಣ್ಣಿ ಅವರ ಜಮೀನನ್ನು ವೀಕ್ಷಿಸಿತು. ೨.೪ ಎಕರೆ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಿ ಮಳೆಬಾರದ ಪರಿಣಾಮ ಬೆಳೆ ಮೊಳಕೆಯೊಡೆದ ಕೆಲವೇ ದಿನಗಳಲ್ಲಿ ಸಂಪೂರ್ಣ ಒಣಗಿ ಹೋಗಿದೆ. ಬಿತ್ತನೆಗಾಗಿ ಮಾಡಿದ ಸಾಲ ತೀರಿಸಲು ಇನ್ನೂ ಆಗಿಲ್ಲ. ಸೂಕ್ತ ಪರಿಹಾರ ಒದಗಿಸಬೇಕೆಂದು ತಂಡದ ಮುಂದೆ ರಾಜಮ್ಮಣ್ಣಿ ಅವರು ಅಳಲು ತೋಡಿಕೊಂಡರು.


       ತದನಂತರ ತಂಡವು ಹುಬ್ಬೆಹುಣಸೆ ಗ್ರಾಮದಲ್ಲಿ ರೈತರಾದ ಪ್ರಕಾಶ್ ಅವರ ಡೇರಿಗೆ ಭೇಟಿ ನೀಡಿ ವೀಕ್ಷಿಸಿತು. ತಂಡದ ಅಧಿಕಾರಿಗಳಿಗೆ ಮಾಹಿತಿ ನೀಡಿದ ಪ್ರಕಾಶ್ ಅವರು ಕಳೆದ ಮೂರು ತಿಂಗಳಿAದ ಮೇವಿನ ಬೆಲೆ ಹೆಚ್ಚಾಗುತ್ತಿದೆ. ಮೇವು ಪೂರೈಕೆಗೆ ಕಷ್ಟವಾಗುತ್ತಿದೆ. ಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು, ಟ್ಯಾಂಕರ್ ಮೂಲಕ ನೀರು ತರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವಿವರಿಸಿದರು. 


      ಇದೇ ವೇಳೆ ಶಾಸಕರಾದ ಎಂ.ಆರ್. ಮಂಜುನಾಥ್ ಸಹ ಹಾಜರಿದ್ದು ಹನೂರು ತಾಲೂಕಿನಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ಕೊಳವೆಬಾವಿ ಕೊರೆಸಿದರೂ ಅಂತರ್ಜಲ ಮಟ್ಟ ಕುಸಿದಿರುವುದರಿಂದ ನೀರು ಲಭ್ಯವಾಗುತ್ತಿಲ್ಲ. ಟ್ಯಾಂಕರ್ ಗಳ ಮೂಲಕ ನೀರು ಸರಬರಾಜು ಮಾಡಲಗುತ್ತಿದೆ. ಅತೀ ಹೆಚ್ಚು ಸಮಸ್ಯೆ ಎದುರಿಸುತ್ತಿರುವುದು ಹನೂರು ತಾಲೂಕು ಆಗಿದೆ ಎಂದು ಬರ ಅಧ್ಯಯನ ತಂಡಕ್ಕೆ ಮಾಹಿತಿ ಒದಗಿಸಿದರು. 


      ನಂತರ ಅಜ್ಜಿಪುರದಲ್ಲಿ ರೈತರಾದ ಮಲ್ಲೇಗೌಡ ಅವರ ಅರಿಶಿನ ಜಮೀನಿಗೆ ತಂಡ ಭೇಟಿ ಕೊಟ್ಟು ಪರಿಶೀಲಿಸಿತು. ರೈತರಾದ ಮಲ್ಲೇಗೌಡ ಅವರು ಮಾತನಾಡಿ ಬಿತ್ತನೆ ಬೀಜ, ಗೊಬ್ಬರ, ಕೂಲಿ ಸೇರಿದಂತೆ ಸುಮಾರು ೨ ಲಕ್ಷ ರೂ. ಖರ್ಚು ಮಾಡಿದ್ದೇನೆ. ಆದರೆ ಮಳೆಯಿಲ್ಲದೆ ಗೆಡ್ಡೆಗಳು ಕೊಳೆತು ಬೆಳೆ ಸಂಪೂರ್ಣ ಹಾನಿಯಾಗಿದೆ. ಅಂತರ್ಜಲ ಮಟ್ಟ ಕಡಿಮೆಯಾಗಿರುವುದರಿಂದ ಕೊಳವೆ ಬಾವಿಗಳಲ್ಲಿಯೂ ನೀರು ಸಿಗುತ್ತಿಲ್ಲ ಎಂದು ಹೇಳಿದರು. 


       ಇದೇ ವೇಳೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಗಿರೀಶ್ ಅವರು ಮಾಹಿತಿ ನೀಡಿ ಹನೂರು ತಾಲೂಕಿನಲ್ಲೇ ೧,೮೦೦ ಎಕರೆ ಪ್ರದೇಶಷ್ಟು ತೋಟಗಾರಿಕೆ ಬೆಳೆ ಮಳೆ ಕೊರತೆಯಿಂದ ಹಾನಿಯಾಗಿದೆ. ಒಟ್ಟಾರೆ ಜಿಲ್ಲೆಯಲ್ಲಿ ೧೩,೫೦೦ ಎಕರೆಯಷ್ಟು ತೋಟಗಾರಿಕೆ ಬೆಳೆ ನಷ್ಟವಾಗಿದೆ ಎಂದು ವಿವರಿಸಿದರು. 


      ಕೇಂದ್ರ ಅಧಿಕಾರಿಗಳ ತಂಡವು ಪುದುರಾಮಪುರ ಗ್ರಾಮಕ್ಕೆ ಭೇಟಿ ನೀಡಿ ವಿಬಿ ಜಿ ರಾಮ್ ಜಿ ಯೋಜನೆಯಡಿ ನಿರ್ವಹಿಸಲಾಗುತ್ತಿದ್ದ ಕಾಲುವೆ ಹೂಳೆತ್ತುವ ಕೆಲಸವನ್ನು ವೀಕ್ಷಿಸಿದರು. 


      ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ತಹಶೀಲ್ದಾರ್ ಚೈತ್ರ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಭಾನುಪ್ರಕಾಶ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಮಾನ್ಯುವೆಲ್ ಸಂತೋಷ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. 


ಅ. ೭, ೮, ೯ರಂದು ಚಾಮರಾಜನಗರ, ಗುಂಡ್ಲುಪೇಟೆ ಚೆಸ್ಕ್ ಉಪವಿಭಾಗ ಕಚೇರಿಯಲ್ಲಿ ಪಿಎಂಎಸ್‌ಜಿವೈ ಸೇವಾ ಸೇತು ಶಿಬಿರ : ಸದುಪಯೋಗಕ್ಕೆ ಮನವಿ


        ಚಾಮರಾಜನಗರ, ಅಕ್ಟೋಬರ್ ೦೬ :- ಭಾರತ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಚಾಮರಾಜನಗರ ಉಪವಿಭಾಗ ಮತ್ತು ಗುಂಡ್ಲುಪೇಟೆ ಉಪವಿಭಾಗ ಕಚೇರಿಯಲ್ಲಿ ಅಕ್ಟೋಬರ್ ೭, ೮ ಮತ್ತು ೯ರಂದು ಬೆಳಗ್ಗೆ ೧೦.೩೦ ರಿಂದ ಸಂಜೆ ೫.೩೦ ಗಂಟೆಯವರೆಗೆ ಸೇವಾ ಸೇತು ಶಿಬಿರವನ್ನು ಆಯೋಜಿಸಲಾಗಿದೆ. 


       ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸೇವಾ ಸೇತು ಶಿಬಿರಗಳನ್ನು ಆಯೋಜಿಸುವಂತೆ ಭಾರತ ಸರ್ಕಾರದ ನವೀಕರಿಸಬಹುದಾದ ಇಂಧನ ಸಚಿವಾಲಯದಿಂದ (ಎಂಎನ್‌ಆರ್‌ಇ) ನಿರ್ದೇಶಿಸಿದೆ. 


       ಯೋಜನೆಯ ಸೌಲಭ್ಯಗಳನ್ನು ಅರ್ಹ ಗ್ರಾಹಕರಿಗೆ ಯೋಜನೆಯ ಸೌಲಭ್ಯಗಳನ್ನು ತಲುಪಿಸುವ ಹಾಗೂ ವ್ಯಾಪಕವಾಗಿ ಜಾಗೃತಿ ಮೂಡಿಸುವ ಸಲುವಾಗಿ ಸೇವಾ ಸೇತು ಶಿಬಿರಗಳನ್ನು ಏರ್ಪಡಿಸಲಾಗಿದೆ.

   

       ರೈತರು, ಸಾರ್ವಜನಿಕರು ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗಪಡಿಸಿಕೊಳ್ಳುವಂತೆ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ. 



ಚೇತನ ಯೋಜನೆಯಡಿ ಪ್ರೋತ್ಸಾಹಧನಕ್ಕಾಗಿ ಮಹಿಳೆಯರಿಂದ ಅರ್ಜಿ ಆಹ್ವಾನ


        ಚಾಮರಾಜನಗರ, ಅಕ್ಟೋಬರ್ ೦೬ :- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ೨೦೨೬-೨೭ನೇ ಸಾಲಿಗೆ ಚೇತನ ಯೋಜನೆಯಡಿ (ದಮನಿತ ಮಹಿಳೆಯರು) ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ದಿ ಹೊಂದಲು ೪೫ ಸಾವಿರ ರೂ. ಗಳ ಪ್ರೋತ್ಸಾಹಧನ ನೀಡಲಾಗುತ್ತಿದ್ದು, ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. 


       ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ೨೦ ರಿಂದ ೫೫ ವರ್ಷದೊಳಗಿರಬೇಕು. ರಾಷ್ಟಿçÃಕೃತ ಬ್ಯಾಂಕ್‌ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿದ್ದು, ಬ್ಯಾಂಕ್ ಖಾತೆಯ ಪ್ರತಿಯನ್ನು ಲಗತ್ತಿಸಬೇಕು ಹಾಗೂ ಕಡ್ಡಾಯವಾಗಿ ಬ್ಯಾಂಕ್ ಖಾತೆಯೊಂದಿಗೆ ಅರ್ಜಿದಾರರ ಆಧಾರ್ ಸೀಡಿಂಗ್ ಆಗಿರಬೇಕು. ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕುಗಳಲ್ಲಿ ಸುಸ್ತಿದಾರರಾಗಿರಬಾರದು ಎಂಬ ಬಗ್ಗೆ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಬಿ.ಪಿ.ಎಲ್ ಪಡಿತರ ಚೀಟಿ, ಆಧಾರ್ ಕಾರ್ಡ್, ಮತದಾನ ಗುರುತಿನ ಚೀಟಿ, ಸ್ನೇಹ ಜ್ಯೋತಿ ಸಂಸ್ಥೆಯಲ್ಲಿ ನೊಂದಾಯಿಸಿದ ಗುರುತಿನ ಚೀಟಿ ಹೊಂದಿರಬೇಕು.


      ಅರ್ಜಿಗಳನ್ನು ಆನ್ ಲೈನ್ ಮೂಲಕ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಆಫ್‌ಲೈನ್‌ನಲ್ಲಿ ಅಕ್ಟೋಬರ್ ೩೧ರೊಳಗೆ ಸಲ್ಲಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ವಿದ್ಯಾರ್ಥಿವೇತನ, ಶುಲ್ಕಮರುಪಾವತಿ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ


        ಚಾಮರಾಜನಗರ, ಅಕ್ಟೋಬರ್ ೦೬ :- ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ೨೦೨೬-೨೭ನೇ ಸಾಲಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕಮರುಪಾವತಿ, ವಿದ್ಯಾಸಿರಿ-ಊಟ, ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ ೩೧ರವರೆಗೆ ವಿಸ್ತರಿಸಲಾಗಿದೆ.

     

       ಆನ್‌ಲೈನ್ ಮೂಲಕ ವೆಬ್‌ಸೈಟ್ hಣಣಠಿs://ssಠಿ.ಠಿosಣmಚಿಣಡಿiಛಿs.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್ hಣಣಠಿs://bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ಗೆ ಭೇಟಿ ನೀಡಬಹುದು. 


           ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: ೮೦೫೦೭೭೦೦೦೪, ಇ-ಮೇಲ್ bಛಿತಿಜheಟಠಿಟiಟಿe@gmಚಿiಟ.ಛಿom ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್ ಠಿosಣmಚಿಣಡಿiಛಿheಟಠಿ@ಞಚಿಡಿಟಿಚಿಣಚಿಞಚಿ.gov.iಟಿ, ದೂರವಾಣಿ ಸಂಖ್ಯೆ ೧೯೦೨ ಅನ್ನು ಸಂಪರ್ಕಿಸುವAತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೊಳ್ಳೇಗಾಲ ತಾಲೂಕು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅವ್ಯವಹಾರ ಪ್ರಕರಣ : ದಾಖಲಾತಿ ನೀಡಲು ಗ್ರಾಹಕರಿಗೆ ಮನವಿ 


        ಚಾಮರಾಜನಗರ, ಅಕ್ಟೋಬರ್ ೦೬:- ಕೊಳ್ಳೇಗಾಲ ತಾಲ್ಲೂಕು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಸಂಬAಧ ವರದಿ ತಯಾರಿಸಲು ಈಗಾಗಲೇ ಸಂಘದಲ್ಲಿ ವ್ಯವಹರಿಸಿರುವ ಗ್ರಾಹಕರು ತಮ್ಮ ಮೂಲ ಠೇವಣಾತಿ ಬಾಂಡ್/ಚಲನ್, ಪಿಗ್ಮಿ ಕಾರ್ಡ್, ಚಿನ್ನದ ಚೀಟಿ ಕಾರ್ಡ್/ ಚಲನ್ ದಾಖಲಾತಿಗಳನ್ನು ಪರಿಶೀಲಿಸಲು ಹಾಗೂ ನಿಖರವಾಗಿ ಬಾಕಿ ಪಟ್ಟಿ ತಯಾರಿಸಲು ೧೫ ದಿನಗಳೊಳಗೆ ಕೊಳ್ಳೇಗಾಲ ತಾಲೂಕಿನ ಸಹಕಾರ ಅಭಿವೃದ್ದಿ ಕಚೇರಿ ಸಂಪರ್ಕಿಸಿ ದಾಖಲಾತಿ ನೀಡುವಂತೆ ಕೋರಲಾಗಿದೆ. 


       ಕೊಳ್ಳೇಗಾಲ ತಾಲ್ಲೂಕು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿAದ ನಡೆದಿದೆ ಎನ್ನಲಾದ ಅವ್ಯವಹಾರದ ಬಗ್ಗೆ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ ೧೯೫೯ರ ಪ್ರಕರಣ ೬೪ ರೀತ್ಯಾ ವಿಚಾರಣೆಯನ್ನು ನಡೆಸಲು ಕೊಳ್ಳೇಗಾಲ ತಾಲ್ಲೂಕಿನ ಸಹಕಾರ ಅಭಿವೃದ್ಧಿ ಅಧಿಕಾರಿಯನ್ನು ವಿಚಾರಣಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ದಿನಾಂಕ ೩-೦೯-೨೦೨೫ಕ್ಕೆ ಇದ್ದಂತೆ ಸಂಘದ ಠೇವಣಾತಿ ಬಾಕಿ ಪಟ್ಟಿಯಿಂದ ಉದ್ದೇಶಪೂರ್ವಕವಾಗಿ ಕೈಬಿಟ್ಟಿರುವ ಠೇವಣಿದಾರರ ಠೇವಣಿ ಮೊತ್ತ ೨೦೨೦-೨೧ ರಿಂದ ೨೦೨೪-೨೫ ಹಾಗೂ ಇಲ್ಲಿಯವರೆಗಿನ ಅವಧಿಯಲ್ಲಿ ಚಿನ್ನದ ಸಾಲಗಳ ವ್ಯವಹಾರ, ಪಿಗ್ಮಿ ಸಾಲದ ವ್ಯವಹಾರ ಪಿಗ್ಮಿ ಠೇವಣಿ, ಸಂಬAಧ ನಿಖರವಾಗಿ ವಿಚಾರಣೆ ವರದಿಯನ್ನು ತಯಾರಿಸಿ ತಪ್ಪಿತಸ್ಥರ ವಿರುದ್ಧ ಹಣದುರುಪಯೋಗದ ಮೊತ್ತವನ್ನು ವಸೂಲಾತಿಗೆ ಜವಾಬ್ದಾರಿ ನಿಗಧಿಪಡಿಸುವ ಉದ್ದೇಶದಿಂದ ಈಗಾಗಲೇ ಸಂಘದಲ್ಲಿ ವ್ಯವಹರಿಸಿರುವ ಗ್ರಾಹಕರು ತಮ್ಮ ಮೂಲ ಠೇವಣಾತಿ ಬಾಂಡ್/ಚಲನ್ (ಮುಖ್ಯ ಕಾರ್ಯನಿರ್ವಾಹಕರ/ನಗದು ಗುಮಾಸ್ಥರ ಸಹಿಯುಳ್ಳ), ಪಿಗ್ಮಿ ಕಾರ್ಡ್ (ಪಿಗ್ಮಿ ವಸೂಲಿದಾರರ ಸಹಿಯುಳ್ಳ), ಚಿನ್ನದ ಚೀಟಿ ಕಾರ್ಡ್/ಚಲನ್ (ಮುಖ್ಯಕಾರ್ಯನಿರ್ವಾಹಕರ/ನಗದು ಗುಮಾಸ್ಥರ ಸಹಿಯುಳ್ಳ) ದಾಖಲಾತಿಗಳನ್ನು ಪರಿಶೀಲಿಸಲು ಹಾಗೂ ನಿಖರವಾಗಿ ಬಾಕಿ ಪಟ್ಟಿ ತಯಾರಿಸಲು ೧೫ ದಿನಳೊಳಗಾಗಿ ಕೊಳ್ಳೇಗಾಲ ತಾಲೂಕಿನ ಸಹಕಾರ ಅಭಿವೃದ್ದಿ ಕಚೇರಿ ಅಥವಾ ಮೊಬೈಲ್ ಸಂ:೯೧೦೮೬೬೬೨೬೭ ಸಂಪರ್ಕಿಸಿ ದಾಖಲಾತಿ ನೀಡುವಂತೆ ವಿಚಾರಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. 


ಅ. ೭ರಂದು ವೀರನಪುರ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ


        ಚಾಮರಾಜನಗರ, ಅಕ್ಟೋಬರ್ ೦೬ ):- ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮದಿಂದ ಹರದನಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ವೀರನಪುರ ಉಪಕೇಂದ್ರದ ನಿರ್ವಹಣೆ ಕಾಮಗಾರಿಯನ್ನು ಅಕ್ಟೋಬರ್ ೭ ರಂದು ಹಮ್ಮಿಕೊಂಡಿರುವುದರಿAದ ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 


       ಉಡಿಗಾಲ, ನಂಜೇದೇವನಪುರ, ವೀರನಪುರ, ಉಗನೇದಹುಂಡಿ, ದೇವಲಾಪುರ ಲಕ್ಷ್ಮೀಪುರ, ಮಹದೇಶ್ವರ ಕಾಲೋನಿ, ಬಡಗಲಪುರ, ಸಾಣೇಗಾಲ, ಬೊಕ್ಕೆಪುರ, ಶಿವಪುರ, ಕಡುವಿನಕಟ್ಟೆಹುಂಡಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 


       ಸಾರ್ವಜನಿಕರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬAಧಿತ ದೂರು ಮತ್ತು ಸಹಾಯಕ್ಕಾಗಿ ಉಚಿತ ದೂರವಾಣಿ ಸಂಖ್ಯೆ ೧೯೧೨ ಗೆ ಕರೆ ಮಾಡಬಹುದು ಎಂದು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಎಚ್‌ಐವಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್


        ಚಾಮರಾಜನಗರ, ಅಕ್ಟೋಬರ್ ೦೬ :- ಎಚ್‌ಐವಿ ಸೋಂಕಿನ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ಹಾಗೂ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಅವರು ಹೇಳಿದರು.


       ನಗರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಚಾಮರಾಜನಗರ ವಿಶ್ವವಿದ್ಯಾಲಯ, ಪದವಿ ಪೂರ್ವ ಶಿಕ್ಷಣ ಇಲಾಖೆ, ಯುವ ರೆಡ್‌ಕ್ರಾಸ್, ಸಮುದಾಯ ಆಧಾರಿತ ಸ್ವಯಂಸೇವಾ ಸಂಸ್ಥೆಗಳು, ರೋಟರಿ ಸಿಲ್ಕ್ ಸಿಟಿ, ನಾಗ ಕೈವಲ್ಯ ಎಂಟರ್‌ಪ್ರೈಸಸ್ ಹಾಗೂ ಈಶ್ವರಿ ಟ್ರ‍್ಯಾಕ್ಟರ್ಸ್ ಡೀಲರ್‌ಶಿಪ್ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ರೆಡ್ ರಿಬ್ಬನ್ ಓಟ ಮ್ಯಾರಥಾನ್-೨೦೨೬ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.


       ಎಚ್‌ಐವಿ ದೇಹದ ರೋಗನಿರೋಧಕ ಶಕ್ತಿಯನ್ನು ಕುಗ್ಗಿಸುತ್ತದೆ. ಇದರಿಂದ ವಿವಿಧ ಕಾಯಿಲೆಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಕಡಿಮೆಯಾಗುತ್ತದೆ. ಹೀಗಾಗಿ ಎಚ್‌ಐವಿ ಸೋಂಕಿನ ಕುರಿತು ಸರಿಯಾದ ಮಾಹಿತಿ ಹೊಂದಿರುವುದು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಅತ್ಯಂತ ಮುಖ್ಯವಾಗಿದೆ ಎಂದರು.


      ಎಚ್‌ಐವಿ ಸೋಂಕು ಸಾಮಾನ್ಯವಾಗಿ ಮುಟ್ಟುವುದರಿಂದ, ಜೊತೆಯಲ್ಲಿ ಕುಳಿತುಕೊಳ್ಳುವುದರಿಂದ ಅಥವಾ ಸಾಮಾನ್ಯ ಸಾಮಾಜಿಕ ಸಂಪರ್ಕದಿAದ ಹರಡುವುದಿಲ್ಲ. ಈ ಕುರಿತು ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ದೂರ ಮಾಡಿ, ಸೋಂಕಿತರ ಬಗ್ಗೆ ತಾರತಮ್ಯ ಮಾಡದಂತೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.


      ಮ್ಯಾರಥಾನ್‌ನಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿ ಎಚ್‌ಐವಿ ಜಾಗೃತಿ ಸಂದೇಶವನ್ನು ಸಾರಿದರು. 


      ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ರವಿಕುಮಾರ್, ಚಾಮರಾಜನಗರ ವಿವಿ ದೈಹಿಕ ಶಿಕ್ಷಣ ವಿಭಾಗದ ಶಾಂತರಾಜು, ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಶ್ವೇತಾ ಶಶಿಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಜಾಸೇವಾ ಅಂದೋಲನ : ಸಾರ್ವಜನಿಕರ ಅರ್ಜಿಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ* 

 

ಚಾಮರಾಜನಗರ, ಅಕ್ಟೋಬರ್ 06 - ಜಿಲ್ಲೆಯಾದ್ಯಂತ ತಾಲೂಕು ಹಾಗೂ ಹೋಬಳಿಮಟ್ಟದ ಪ್ರಜಾಸೇವಾ ಆಂದೋಲನಾ ಸಭೆಗಳಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.


       ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಪ್ರಜಾಸೇವಾ ಆಂದೋಲನ ಅಹವಾಲು ಅರ್ಜಿಗಳ ವಿಲೇವಾರಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


       ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ತಾಲೂಕು ಹಾಗೂ ಹೋಬಳಿಮಟ್ಟದ ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಅಗತ್ಯವಿದೆ. ಸ್ವೀಕೃತವಾಗಿರುವ ಅರ್ಜಿಗಳನ್ನು ಈಗಾಗಲೇ ಪ್ರಜಾಸೇವಾ ಆಂದೋಲನ ಪೋರ್ಟಲ್‍ನಲ್ಲಿ ನೊಂದಣಿ ಮಾಡಲಾಗಿದ್ದು, ಸಾಕಷ್ಟು ಇಲಾಖೆಗಳಿಗೆ ಸಂಬಂಧಪಟ್ಟ ಅರ್ಜಿಗಳು ಬಾಕಿ ಇವೆ. ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. 


       ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳಿಗೆ ಸಂಬಂಧಪಟ್ಟ ಇಲಾಖೆಗಳು ಎಷ್ಟು ಸಾಧ್ಯವೋ ಅಷ್ಟೂ ಅರ್ಜಿಗಳನ್ನು ತಮ್ಮ ಹಂತದಲ್ಲಿಯೇ ವಿಲೇವಾರಿ ಮಾಡಲು ಮುಂದಾಗಬೇಕು. ಅಗತ್ಯವಿದ್ದರೆ ಸೂಕ್ತ ಕಾರಣಗಳನ್ನು ನೀಡಿ  ಮುಂದಿನ ಹಂತಕ್ಕೆ ಕಳುಹಿಸಬೇಕು. ಸಕಾರಣವಿಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿಯಾಮಾನುಸಾರ ಪರಿಶೀಲಿಸಲಾಗುವುದೆಂದು ಹಿಂಬರಹ ನೀಡಿ ಅರ್ಜಿಗಳನ್ನು ಇತ್ಯರ್ಥಪಡಿಸಬೇಕು. ಪ್ರಜಾಸೇವಾ ಆಂದೋಲನ ಕುರಿತು ಸಾರ್ವಜನಿಕರಲ್ಲಿ ನಿರಾಸಕ್ತಿ ಮೂಡದಂತೆ ತಡೆಯಲು ಅರ್ಜಿಗಳ ಇತ್ಯರ್ಥದ ವಿಳಂಬವನ್ನು ತಡೆಯಬೇಕು ಎಂದರು. 


       ಒಂದು ಅಥವಾ ಎರಡು ಅರ್ಜಿಗಳು ಬಾಕಿ ಇರುವ ಕೆಲ ಇಲಾಖೆಗಳು ಇಂದು ಸಂಜೆಯೊಳಗೆ ವಿಲೇವಾರಿ ಮಾಡಬೇಕು. ಹೆಚ್ಚಿನ ಅರ್ಜಿಗಳು ಬಾಕಿ ಇರುವ ಇಲಾಖೆಗಳು ಮುಂದಿನ 2-3 ದಿನಗಳಲ್ಲಿ ಕಡ್ಡಾಯವಾಗಿ ಪೂರ್ಣಗೊಳಿಸಬೇಕು. ಅರ್ಜಿಗಳನ್ನು ಶೀಘ್ರವಾಗಿ ಪರಿಹರಿಸಿ ಅರ್ಜಿಗಳಲ್ಲಿರುವ ಸಾರ್ವಜನಿಕರ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಅರ್ಜಿ ವಿಲೇವಾರಿಯಾಗಿರುವ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿಗಳ ತ್ವರಿತ ಪರಿಹಾರಕ್ಕಾಗಿ ನೀಡುವ ಹಿಂಬರಹ ಕ್ರಮಬದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.


      ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸಾರ್ವಜನಿಕರಿಂದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಗಮನಿಸುತ್ತಿದ್ದು, ತಾಲೂಕು, ಹೋಬಳಿಮಟ್ಟದ ಸಭೆಗಳಲ್ಲಿ ಸ್ವೀಕೃತವಾಗಿರುವ ಅರ್ಜಿಗಳನ್ನು ಅದಷ್ಟು ಬೇಗನೆ ಪರಿಹರಿಸಲು ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಎಲ್ಲಾ ತಾಲೂಕು ತಹಶೀಲ್ದಾರರು, ನಗರ ಹಾಗೂ ಸ್ಥಳೀಯ ಸಂಸ್ಥೆಗಳು ಅರ್ಜಿಗಳ ವಿಲೇವಾರಿಗೆ ನಿಗಾ ವಹಿಸಬೇಕು. ಪ್ರಜಾಸೇವಾ ಆಂದೋಲನ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯಲ್ಲಿ ಜಿಲ್ಲೆ ಮುಂಚೂಣಿಯಲ್ಲಿರುವಂತೆ ಎಲ್ಲಾ ಅಧಿಕಾರಿಗಳು ಕಾರ್ಯೋನ್ಮುಖರಾಗಲು ಮುಂದಾಗುವಂತೆ ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರು ಸೂಚಿಸಿದರು.


      ಡಿ.ವೈ.ಎಸ್.ಪಿ ಸ್ನೇಹರಾಜ್, ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಮಣ್ಯ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಜಿಲ್ಲಾ ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಕೊಳ್ಳೇಗಾಲ ನಗರಸಭೆ ಪೌರಾಯುಕ್ತರಾದ ನಟರಾಜು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್‍ಕುಮಾರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪಾಟೀಲ್ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು, ಆಹಾರ ಇಲಾಖೆ ಉಪನಿರ್ದೇಶಕರಾದ ವಸುಂಧರಾ ಹೆಗಡೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


-----


*ಜಿಲ್ಲೆಯಲ್ಲಿ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟದ ಅಗತ್ಯ ಸಿದ್ದತೆ ಕೈಗೊಳ್ಳಿ - ಜಿಲ್ಲಾಧಿಕಾರಿ ಶ್ರೀರೂಪ*  


 ಚಾಮರಾಜನಗರ, ಅಕ್ಟೋಬರ್ 06 :- ಇದೇ ತಿಂಗಳ ಅಂತ್ಯದಲ್ಲಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಫೆನ್ಸಿಂಗ್ (ಕತ್ತಿ ವರಸೆ) ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು.


       ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


       ಫೆನ್ಸಿಂಗ್ (ಕತ್ತಿ ವರಸೆ) ಒಳಾಂಗಣ ಕ್ರೀಡೆಯಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟಕ್ಕೆ ಎಲ್ಲಾ ಸಿದ್ದತಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಈಗಾಗಲೇ ಫೆನ್ಸಿಂಗ್ ಕ್ರೀಡಾಕೂಟ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆದಿದ್ದು, ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದ ನಿರ್ವಹಣೆಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಮುಂದಾಗುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.


       ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾಶಾಲೆಯ ಒಳಾಂಗಣದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕಾಗಿ ಸ್ಥಳ ನಿಗದಿಪಡಿಸಲಾಗಿದೆ. ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ ಇಲಾಖೆಗಳನ್ನೊಳಗೊಂಡ ಜಿಲ್ಲಾಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿರುವ ಅಧಿಕಾರಿಗಳು ಕ್ರೀಡಾಕೂಟ ಆಯೋಜನೆಯಲ್ಲಿ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಕ್ರೀಡಾಪಟುಗಳಿಗೆ ಸಾರಿಗೆ, ವಸತಿ ಸೇರಿದಂತೆ ಅವಶ್ಯ ಮೂಲಸೌಲಭ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ನಿರ್ದೇಶನ ನೀಡಿದರು.


      ಇತರೆ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಸಂತೇಮರಹಳ್ಳಿಯ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ ತಂಗುವ ವ್ಯವಸ್ಥೆ ಹಾಗೂ ಊಟ, ಉಪಹಾರದ ವ್ಯವಸ್ಥೆಯನ್ನು ಮಾಡಬೇಕು. ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಕೆ.ಎಸ್.ಆರ್.ಟಿ.ಸಿ ವತಿಯಿಂದ ಕಲ್ಪಿಸಬೇಕು. ಕ್ರೀಡಾಕೂಟಕ್ಕೆ ಸೂಕ್ತ ಪೊಲೀಸ್ (ಭದ್ರತಾ ವ್ಯವಸ್ಥೆ) ಬಂದೋಬಸ್ತ್ ಒದಗಿಸಬೇಕು. ಕ್ರೀಡಾಕೂಟದ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್ ಸನ್ನದ್ಧವಾಗಿರಬೇಕು. ಜೊತೆಗೆ ಚಿಕಿತ್ಸೆಗಾಗಿ ಸ್ಟಾಫ್ ನರ್ಸ್‍ಗಳನ್ನು ನಿಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕ್ರೀಡಾಕೂಟದ ದಿನಾಂಕವನ್ನು ನಿಗದಿಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಸಭೆಯಲ್ಲಿ ತಿಳಿಸಿದರು.


      ಇದೇ ವೇಳೆ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪಾಟೀಲ್ ಅವರು ಫೆನ್ಸಿಂಗ್ ಜಿಲ್ಲೆಯಲ್ಲಿ ಕಳೆದ ಬಾರಿ ರಾಜ್ಯಮಟ್ಟದ ನೆಟ್‍ಬಾಲ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟ ಚಾಮರಾಜನಗರ ಜಿಲ್ಲೆಗೆ ನಿಗದಿಯಾಗಿದೆ. 14 ವರ್ಷ ಹಾಗೂ 17 ವರ್ಷದೊಳಗಿನ ಮಕ್ಕಳಿಗಾಗಿ 2 ವಿಭಾಗದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಬಾಲಕ ಹಾಗೂ ಬಾಲಕಿಯರಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕ್ರೀಡಾಕೂಟದಲ್ಲಿ ಸುಮಾರು 250ರಿಂದ 300 ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಕ್ರೀಡಾಕೂಟದ ಯಶಸ್ಸಿಗಾಗಿ ಸಂಬಂಧಪಟ್ಟ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದರು.


      ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್‍ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಿ.ಎಸ್. ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಸಂತೇಮರಹಳ್ಳಿಯ ಕ್ರೀಡಾ ಅರ್ಚರಿ ಮತ್ತು ಫೆನ್ಸಿಂಗ್ ಶಾಲೆಯ ತರಬೇತುದಾರರು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.


 

Monday, 5 October 2026

ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೇಂದ್ರ ಉನ್ನತ ಮಟ್ಟದ ಅಧಿಕಾರಿಗಳ ತಂಡದಿAದ ಬರ ಅಧ್ಯಯನ : ವಾಸ್ತವ ಪರಿಸ್ಥಿತಿ ಅವಲೋಕನ




 ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೇಂದ್ರ ಉನ್ನತ ಮಟ್ಟದ ಅಧಿಕಾರಿಗಳ ತಂಡದಿAದ ಬರ ಅಧ್ಯಯನ : ವಾಸ್ತವ ಪರಿಸ್ಥಿತಿ ಅವಲೋಕನ 


        ಚಾಮರಾಜನಗರ, ಅಕ್ಟೋಬರ್ ೦೫ ):- ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರದ ವಿವಿಧ ಸಚಿವಾಲಯಗಳ ಉನ್ನತ ಮಟ್ಟದ ಅಧಿಕಾರಿಗಳ ತಂಡವು (ಐಎಂಸಿಟಿ) ಇಂದು ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬರದ ವಾಸ್ತವ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿತು. 


      ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಉಪ ಆಯುಕ್ತರಾದ ಡಾ. ಸುಧಾಮ್ ಬೇಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಸಲಹೆಗಾರರಾದ ಆಶೀಶ್ ಪಾಂಡೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಮಹಾಲನೋಬಿಸ್ ರಾಷ್ಟಿçÃಯ ಬೆಳೆ ಮುನ್ಸೂಚನೆ ಕೇಂದ್ರ (ಎಂಎನ್‌ಸಿಎಫ್‌ಸಿ)ದ ಉಪನಿರ್ದೇಶಕರಾದ ಕರಣ್ ಚೌಧರಿ ಅವರನ್ನೊಳಗೊಂಡ ಅಧಿಕಾರಿಗಳ ತಂಡ ಬರ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟು ಪರಿಸ್ಥಿತಿಯನ್ನು ಅವಲೋಕಿಸಿತು. 

 

       ಚಾಮರಾಜನಗರ ತಾಲೂಕಿನ ಕೆರೆಹಳ್ಳಿ ಗ್ರಾಮದ ರೈತರಾದ ಮಾದಪ್ಪ ಎಂಬುವರಿಗೆ ಸೇರಿದ ಜಮೀನಿಗೆ ಭೇಟಿ ನೀಡಿ ಒಣಗಿದ ಜೋಳದ ಬೆಳೆಯನ್ನು ಅಧಿಕಾರಿಗಳ ತಂಡ ವೀಕ್ಷಿಸಿದರು. ಇದೇ ವೇಳೆ ಹಾಜರಿದ್ದ ರೈತರೊಂದಿಗೆ ಅಧಿಕಾರಿಗಳು ಮಾತನಾಡಿ ಬೆಳೆ ನಷ್ಟ, ಬಿತ್ತನೆ ಸಂಬAಧ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಭಾನುಪ್ರಕಾಶ್ ಅವರು ಸ್ಥಳೀಯ ಬೆಳೆ ಹಾನಿ ಕುರಿತು ವಿವರ ಒದಗಿಸಿದರು. 


       ಸ್ಥಳೀಯ ರೈತರು ಮಾತನಾಡಿ ಈ ಭಾಗದಲ್ಲಿ ತೊಗರಿ, ಜೋಳ, ಕಬ್ಬು, ಹುರಳಿ, ಅರಿಶಿನ ಬೆಳೆಗಳನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ಈ ಬಾರಿ ಮಳೆ ಕೊರತೆಯಿಂದ ಎಲ್ಲಾ ಬೆಳೆಗಳು ಒಣಗಿ ಹೋಗಿವೆ. ಬಿತ್ತನೆಗಾಗಿ ಎಕರೆಗೆ ೩೦ ರಿಂದ ೪೦ ಸಾವಿರ ಖರ್ಚು ಮಾಡಿದ್ದೇವೆ. ಬೆಳೆ ಹಾನಿಯಿಂದ ನಾವು ಸಂಕಷ್ಟದಲ್ಲಿದ್ದೇವೆ. ನಮಗೆ ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು. 


      ಬಳಿಕ ಅಧಿಕಾರಿಗಳ ತಂಡ ಮಲೆಯೂರಿನ ಕನಕಗಿರಿ ಜೈನ ಗೋ ಶಾಲೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು. ಅಲ್ಲಿನ ಗೋಶಾಲೆ ನಿರ್ವಹಣೆ ಸಂಬAಧ ವಿವರ ಪಡೆದರು. ಸಮೀಪದಲ್ಲಿಯೇ ದಾಸ್ತಾನು ಮಾಡಲಾಗಿದ್ದ ಮೇವು ಸಂಗ್ರಹವನ್ನು ವೀಕ್ಷಿಸಿದರು. 


      ಕುಲಗಾಣ ಗ್ರಾಮಕ್ಕೆ ಭೇಟಿ ನೀಡಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಅಲ್ಲಿನ ಸರ್ಕಾರಿ ಕೆರೆಯಲ್ಲಿ ನಿರ್ವಹಿಸಲಾಗುತ್ತಿದ್ದ ಕೆರೆ ಹೂಳೆತ್ತುವ ಕೆಲಸವನ್ನು ಪರಿಶೀಲಿಸಿದರು. ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರೊಂದಿಗೆ ಸಮಾಲೋಚಿಸಿದರು. ಕೆರೆ ಎಷ್ಟು ವರ್ಷದಿಂದ ನೀರಿಲ್ಲದೆ ಒಣಗಿದೆ ಎಂದು ಪ್ರಶ್ನಿಸಿದರು. ಗ್ರಾಮಸ್ಥರು ಕಳೆದ ಎರಡು ವರ್ಷದಿಂದ ಕೆರೆಗೆ ನೀರಿಲ್ಲ ಎಂದರು.


       ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮಕ್ಕೆ ತೆರಳಿ ಲೋಕೇಶ್ವರಿ, ನಾಗರಾಜು ಎಂಬುವರಿಗೆ ಸೇರಿದ ಜಮೀನಿನಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದ ಸೂರ್ಯಕಾಂತಿ ಬೆಳೆಯನ್ನು ವೀಕ್ಷಿಸಿದರು. ಸ್ಥಳೀಯ ರೈತರು ಅಧಿಕಾರಿಗಳ ತಂಡದ ಮುಂದೆ ತಮ್ಮ ಕುಂದು ಕೊರತೆಗಳನ್ನು ನಿವೇದಿಸಿಕೊಂಡರು. ನೀರಿಲ್ಲದೆ ನಾವು ಹಾಕಿದ್ದ ಬೆಳೆ ಕೈಸೇರಿಲ್ಲ. ಈ ಭಾಗದಲ್ಲಿ ಮಳೆಯನ್ನೇ ಆಶ್ರಯಿಸಿ ಬಿತ್ತನೆ ಮಾಡಿದ್ದು ಫಸಲು ಬಂದಿಲ್ಲ. ಕುಡಿಯುವ ನೀರು, ಜಾನುವಾರುಗಳ ಮೇವಿಗೂ ಸಹ ತೊಂದರೆಯಾಗಿದೆ. ಹೀಗಾಗಿ ನಾವು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ನಮಗೆ ಹೆಚ್ಚಿನ ಪರಿಹಾರ ದೊರಕಬೇಕು ಎಂದು ಮನವಿ ಮಾಡಿದರು. 


      ಇದೇ ವೇಳೆ ಅಧಿಕಾರಿಗಳ ತಂಡಕ್ಕೆ ಮಾಹಿತಿ ನೀಡಿದ ಕೃಷಿ ವಿಜ್ಞಾನ ಕೇಂದ್ರದ ಡಾ. ಶೃತಿ ಅವರು ಈ ಹಿಂದಿನ ಸಾಲಿನಲ್ಲಿ ಸಮರ್ಪಕವಾಗಿ ಮಳೆಯಾಗಿತ್ತು. ಈ ಬಾರಿ ಮಳೆಯ ಅಭಾವದಿಂದ ಹೆಚ್ಚಿನ ಬೆಳೆ ನಷ್ಟವಾಗಿದೆ ಎಂದು ವಿವರಿಸಿದರು. 


      ಬಳಿಕ ಗುಂಡ್ಲುಪೇಟೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಶ್ರೀರೂಪ ಅವರು ಮಳೆ, ಬೆಳೆ, ಕುಡಿಯುವ ನೀರು, ಜಾನುವಾರುಗಳ ಮೇವು ಸೇರಿದಂತೆ ಜಿಲ್ಲೆಯು ಎದುರಿಸುತ್ತಿರುವ ಬರ ಪರಿಸ್ಥಿತಿಯ ಸಂಪೂರ್ಣ ವಿವರವನ್ನು ನೀಡಿದರು. 


      ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ವಿಬಿ ಜಿ ರಾಮ್ ಜಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳ ವಿವರ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ತಂಡಕ್ಕೆ ಮಾಹಿತಿ ಒದಗಿಸಿದರು. 


      ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಗಿರೀಶ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಮಾನ್ಯುವೆಲ್ ಸಂತೋಷ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸುರೇಖಾ, ನಬಾರ್ಡ್ ಅಧಿಕಾರಿ ಹಿತಾ ಸುವರ್ಣ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. 


ಅ. ೬ರಂದು ನಗರದಲ್ಲಿ ಹೆಚ್.ಐವಿ, ಏಡ್ಸ್ ಜನ ಜಾಗೃತಿಗಾಗಿ ಮ್ಯಾರಾಥನ್/ರೆಡ್ ರಿಬ್ಬನ್ ಸ್ಪರ್ಧೆ 


        ಚಾಮರಾಜನಗರ, ಅಕ್ಟೋಬರ್ ೦೫ :- ಹೆಚ್‌ಐವಿ, ಏಡ್ಸ್ ಕಾರ್ಯಕ್ರಮದಡಿ ಇಂಟೆನ್ಸಿಫೈಡ್ ಐಇಸಿ ಕ್ಯಾಂಪೇನ್ (Iಟಿಣeಟಿsiಜಿieಜ Iಇಅ ಅಚಿmಠಿಚಿigಟಿ-೨೦೨೬) ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳ ಉಪಸ್ಥಿತಿಯಲ್ಲಿ ಪದವಿ ಕಾಲೇಜಿನ ೧೭ ವರ್ಷ ಮೇಲ್ಪಟ್ಟು ೨೫ ವರ್ಷದೊಳಗಿನ ವಿದ್ಯಾರ್ಥಿಗಳ ಮೂಲಕ ಹೆಚ್.ಐವಿ, ಏಡ್ಸ್ ಜನಜಾಗೃತಿಗಾಗಿ ಅಕ್ಟೋಬರ್ ೬ ರಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಿAದ ‘ಮ್ಯಾರಾಥನ್/ರೆಡ್ ರಿಬ್ಬನ್ ಸ್ಪರ್ಧೆ’ (ಒಟ್ಟು ೫ ಕಿ.ಮೀ.) ಯನ್ನು ಏರ್ಪಡಿಸಲಾಗಿದೆ. 


      ಮ್ಯಾರಥಾನ್ ಜಿಲ್ಲಾಡಳಿತ ಭವನದ ಮುಂಭಾಗದಿAದ ಸಾಗಿ ಡಿವೈಎಸ್‌ಪಿ ವೃತ್ತದ ಮೂಲಕ ನ್ಯಾಯಾಲಯ ರಸ್ತೆ, ಕರಿನಂಜನಪುರ, ಚರ್ಚ್ ಕ್ರಾಸ್ ಮೂಲಕ ನಿಜಗುಣ ರೆಸಿಡೆನ್ಸಿ ರಸ್ತೆ, ಸಿಎಸ್‌ಐ, ಟೌನ್ ಪೊಲೀಸ್ ಠಾಣೆ, ಅರಣ್ಯ ಇಲಾಖೆ ವೃತ್ತದ ಮೂಲಕ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಪಚ್ಚಪ್ಪ ವೃತ್ತದಿಂದ ಮತ್ತೆ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಗಲಿದೆ. 


       ಹೆಚ್‌ಐವಿ, ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್‌ಐವಿ ಮತ್ತು ಏಡ್ಸ್ (ತಡೆ) ಕಾಯ್ದೆ ೨೦೧೭, ನ್ಯಾಕೋ ಏಡ್ಸ್ ಆ್ಯಪ್, ಮೊಬಿಲೈಸೇಷನ್ ಆಫ್ ಏಡ್ಸ್ ಸುರಕ್ಷಾ-ಸ್ಕಾö್ಯನರ್ (ಒobiಟisಚಿಣioಟಿ oಜಿ ಂIಆS Suಡಿಚಿಞshಚಿ – Sಛಿಚಿಟಿಟಿeಡಿ), ಉಚಿತ ರಾಷ್ಟಿçÃಯ ಸಹಾಯವಾಣಿ ೧೦೯೭, ಎಸ್‌ಟಿಐ ಇತ್ಯಾದಿಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದು ಈ ಸ್ಪರ್ಧೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


ಅ. ೮ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ 


        ಚಾಮರಾಜನಗರ, ಅಕ್ಟೋಬರ್ ೦೫ :- ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸಂಬAಧ ಪೂರ್ವಭಾವಿ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೮ರಂದು ಸಂಜೆ ೪ ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. 


       ಪರಿಶಿಷ್ಟ ವರ್ಗದ ಹಾಗೂ ಇತರೆ ಜನಾಂಗದ ಎಲ್ಲಾ ಸಂಘ ಸಂಸ್ಥೆ ಮತ್ತು ಕನ್ನಡಪರ ಸಂಘ ಸಂಸ್ಥೆಯ ಪದಾಧಿಕಾರಿಗಳು, ಮುಖ್ಯಸ್ಥರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು  ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

ಚಾಮರಾಜನಗರ ದಸರಾ ಉತ್ಸವಕ್ಕೆ ಸಾಂಪ್ರಾದಾಯಿಕ ಚಾಲನೆ

ಚಾಮರಾಜನಗರ ದಸರಾ ಉತ್ಸವಕ್ಕೆ  ಸಾಂಪ್ರಾದಾಯಿಕ ಚಾಲನೆ*      * ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ, ಅಕ್ಟೋಬರ್ 17 - ಚಾಮರಾಜನಗರ ದಸರಾ ಮಹೋತ್ಸವದ ಅಂಗವ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು