ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ : ಅಧಿಸೂಚನೆ ಪ್ರಕಟ
ಚಾಮರಾಜನಗರ, ಮೇ. 16 - ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ-2016ರ ಸಂಬಂಧ ಇಂದು ಚುನಾವಣಾಧಿಕಾರಿಗಳು ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಎ.ಎಂ. ಕುಂಜಪ್ಪ ಅವರು ಅಧಿಸೂಚನೆ ಹೊರಡಿಸಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆಯಲ್ಲಿ ಒಬ್ಬ ಸದಸ್ಯನÀನ್ನು ಚುನಾಯಿಸಬೇಕಾಗಿದೆ. ನಾಮಪತ್ರದ ನಮೂನೆಗಳನ್ನು ಚುನಾವಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಅಥವಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು, ಮೈಸೂರು ಜಿಲ್ಲೆ, ಮೈಸೂರು ಇಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯೊಳಗೆ ಪಡೆಯಬಹುದು.
ನಾಮಪತ್ರಗಳನ್ನು ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಯಾವುದೇ ದಿನದಂದು (ಸಾರ್ವತ್ರಿಕ ರಜಾದಿನ ಹೊರತುಪಡಿಸಿ) ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯೊಳಗೆ ಮೇ. 23ರ ದಿನಾಂಕಕ್ಕೆ ಮೀರದಂತೆ ಸಲ್ಲಿಸಬಹುದು.
ನಾಮಪತ್ರಗಳನ್ನು ಚುನಾವಣಾಧಿಕಾರಿಗಳ (ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು) ಕಾರ್ಯಾಲಯದಲ್ಲಿ ಮೇ. 24ರಂದು ಬೆಳಿಗ್ಗೆ 11 ಗಂಟೆಗೆ ಪರಿಶೀಲಿಸಲಾಗುವುದು.
ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರನು ಅಥವಾ ಅವನ ಯಾರೆ ಸೂಚಕರು ಅಥವಾ ಅದನ್ನು ಸಲ್ಲಿಸುವ ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತನಾದ ಆತನ ಚುನಾವಣಾ ಏಜೆಂಟನು ಚುನಾವಣಾಧಿಕಾರಿಗಳು ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಅವರ ಕಚೇರಿಯಲ್ಲಿ ಮೇ. 26ರಂದು ಮಧ್ಯಾಹ್ನ 3 ಗಂಟೆಗೆ ಮುಂಚೆ ಸಲ್ಲಿಸಬಹುದು.
ಚುನಾವಣೆಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ ಜೂನ್ 9ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯುವುದೆಂದು ಚುನಾವಣಾಧಿಕಾರಿ, ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಎ.ಎಂ. ಕುಂಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ. 20ರಂದು ನಗರದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ
ಚಾಮರಾಜನಗರ, ಮೇ. 16- ಚಾಮರಾಜನಗರ ತಾಲೂಕು ವಿಕಲಚೇತನರ ಕುಂದುಕೊರತೆ ಸಭೆಯನ್ನು ಮೇ 20ರಂದು ಮಧ್ಯಾಹ್ನ 3 ಗಂಟೆಗೆ ನಗರದ ತಹಸೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ತಾಲೂಕಿನ ವಿಕಲಚೇತನರು ತಮ್ಮ ಕುಂದುಕೊರತೆಗಳಿದ್ದಲ್ಲಿ ನೇರವಾಗಿ ಅರ್ಜಿಯನ್ನು ತಹಸೀಲ್ದಾರ್ ಅವರ ಸಮ್ಮುಖದಲ್ಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ರಾಜೇಶ ಮೊಬೈಲ್ ನಂ. 8105720709, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ. 08226-222603 ಹಾಗೂ 08226-223688ನ್ನು ಸಂಪರ್ಕಿಸುವಂತೆ ಹಾಗೂ ತಾಲೂಕಿನ ವಿಕಲಚೇತನರು ಸಭೆಯಲ್ಲಿ ಭಾಗವಹಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಕಂದಾಯ ಇಲಾಖೆ ಪ್ರಮಾಣ ಪತ್ರಗಳನ್ನು ಆನ್‍ಲೈನ್‍ನÀಲ್ಲಿ ಪಡೆಯಲು ಸೂಚನೆ
ಚಾಮರಾಜನಗರ, ಮೇ. 16 - ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡಲಾಗುವ ಜಾತಿ, ಆದಾಯ ಹಾಗೂ ಇತರೆ ಪ್ರಮಾಣ ಪತ್ರಗಳಿಗೆ ಆನ್‍ಲೈನ್ ಮೂಲಕ ಸೈಬರ್ ಕೆಫೆಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮಾಣ ಪತ್ರಗಳನ್ನು ಅಂತರ್ಜಾಲ ಸಂಪರ್ಕವಿರುವ ಸ್ಥಳ, ಮನೆ ಹಾಗೂ ಸೈಬರ್ ಕೆಫೆಗಳಲ್ಲಿ ಮುದ್ರಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆ, ಅರ್ಜಿ ಸ್ಥಿತಿಗತಿ ಹಾಗೂ ಮೂಲ ಪ್ರಮಾಣ ಪತ್ರಗಳ ಮುದ್ರಣವನ್ನು ನಾಡಕಚೇರಿ ವೆಬ್‍ಸೈಟ್ ತಿತಿತಿ.ಟಿಚಿಜಚಿಞಚಿಛಿheಡಿi.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದಾಗಿದ್ದು ಸಾರ್ವಜನಿಕರು ಈ ಸದಾವಕಾಶವನ್ನು ಉಪಯೋಗಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲ್ಲಿ ತಿಳಿಸಿದ್ದಾರೆ.
ಮೇ. 20ರಂದು ಹರದನಹಳ್ಳಿ ಉಪವಿಭಾಗದಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಮೇ. 16:- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಹರದನಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಮೇ 20ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.
ಸಾರ್ವಜನಿಕರು ಸಭೆಗೆ ಹಾಜರಾಗಿ ವಿದ್ಯುತ್ ಸಮಸ್ಯೆಗಳ ಕುರಿತು ಕುಂದುಕೊರತೆಗಳನ್ನು ತಿಳಿಸುವಂತೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಳ್ಳೇಗಾಲ : ಸಂಘದ ನೋಂದಣಿ ರದ್ದಿಗೆ ಪ್ರಸ್ತಾವನೆ ಸಲ್ಲಿಕೆ
ಚಾಮರಾಜನಗರ, ಮೇ. 16- ಕೊಳ್ಳೇಗಾಲ ತಾಲೂಕಿನ ರೇಷ್ಮೆ ನೂಲು ಬಿಚ್ಚಿಸುವವರ ಕೈಗಾರಿಕಾ ಸಹಕಾರ ಸಂಘವು ತನ್ನ ಬೈಲಾ ರೀತ್ಯ ಉದ್ದೇಶಗಳನ್ನು ಈಡೇರಿಸದೆ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಮಾಪನಾಧಿಕಾರಿಗಳು ಸಂಘದ ನೋಂದಣಿಯನ್ನು ರದ್ದುಗೊಳಿಸಿ ಆದೇಶಿಸುತ್ತಾರೆ.
ಸಂಘದ ಸಮಾಪನಾಧಿಕಾರಿ ಎನ್.ವಿ. ಸುಲೋಚನ ಅವರು ರೇಷ್ಮೆ ನೂಲು ಬಿಚ್ಚಿಸುವವರ ಕೈಗಾರಿಕಾ ಸಹಕಾರ ಸಂಘವನ್ನು ಸಮಾಪನೆಗೊಳಿಸಿದ್ದು ಸಂಘವನ್ನು ಮುನ್ನಡೆಸಿಕೊಂಡು ಹೋಗಲು ಆಸಕ್ತಿ ತೋರಿಸಿ ಇದುವರೆವಿಗೂ ಸಂಘದ ಯಾವ ಸದಸ್ಯರೂ ಮುಂದೆ ಬಂದಿರುವುದಿಲ್ಲವಾದ್ದರಿಂದ ಸಂಘದ ನೋಂದಣಿ ರದ್ದತಿಗೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.
ಸಂಘದ ನೋಂದಣಿ ರದ್ದುಗೊಳಿಸುವ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ 15 ದಿವಸಗಳೊಳಗೆ ಸಮಾಪನಾಧಿಕಾರಿಯವರಿಗೆ ಖುದ್ದಾಗಿ ಲಿಖಿತವಾಗಿ ಆಕ್ಷೇಪಣೆ ಸಲ್ಲಿಸಲು ತಿಳಿಸಿದೆ. ಸಂಘವನ್ನು ಮುನ್ನಡೆಸಿಕೊಂಡು ಹೋಗಲು ಆಸಕ್ತಿ ಇರುವವರು ಸಹ ಲಿಖಿತ ಮನವಿಯನ್ನು ಸಲ್ಲಿಸಬಹುದಾಗಿದೆ.
ನಿಗಧಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ, ಅಹವಾಲುಗಳು ಸ್ವೀಕೃತವಾಗದಿದಲ್ಲಿ ಸಂಘದ ನೋಂದಣಿ ಸಂಖ್ಯೆ ರದ್ದತಿಗೆ ಆಸಕ್ತಿ ಇಲ್ಲವೆಂದು ಪರಿಗಣಿಸಿ ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೊಳ್ಳೇಗಾಲ ತಾಲೂಕು ರೇಷ್ಮೆ ನೂರು ಬಿಚ್ಚಿಸುವವರ ಕೈಗಾರಿಕಾ ಸಹಕಾರ ಸಂಘದ ಸಮಾಪನಾಧಿಕಾರಿ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಪ್ರಕಟಣೆ ತಿಳಿಸಿದೆ.
ಪ್ರೊಬೇಷನರಿ ಆಫೀಸರ್ ಹುದ್ದೆ : ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 16 - ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2200 ಪ್ರೊಬೇಷನರಿ ಆಫೀಸರ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿರುತ್ತದೆ.
ಅಭ್ಯರ್ಥಿಗಳು ದಿನಾಂಕ 31.08.2016ಕ್ಕೆ ಯಾವುದಾದರೂ ಪದವಿಯಲ್ಲಿ ತೇರ್ಗಡೆ ಹೊಂದಿರಬೇಕು. ಅಂತಿಮ ವರ್ಷ, ಸೆಮಿಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರೂ ಅರ್ಜಿ ಸಲ್ಲಿಸಬಹುದು. ದಿನಾಂಕ 01.04.2016ಕ್ಕೆ 21 ರಿಂದ 30 ವರ್ಷ ಮೀರಿರಬಾರದು. (ಎಸ್.ಸಿ., ಎಸ್.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಓ.ಬಿ.ಸಿ. ಅಭ್ಯರ್ಥಿಗಳಿಗೆ 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳು ನಿಯಮಾನುಸಾರ ಸಡಿಲಿಕೆಯಿದೆ)
ಅರ್ಜಿ ಸಲ್ಲಿಸಲು ಹಾಗೂ ಬ್ಯಾಂಕಿನಲ್ಲಿ ಶುಲ್ಕ ಪಾವತಿಸಲು ಮೇ 24 ಕೊನೆಯ ದಿನವಾಗಿರುತ್ತದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಈ ತಿತಿತಿ.sಣಚಿಣebಚಿಟಿಞoಜಿiಟಿಜiಚಿ.ಛಿom & ತಿತಿತಿ.sbi.ಛಿo.iಟಿ ವೆಬ್‍ಸೈಟ್ ವಿಳಾಸ ನೋಡಿ ಅಥವಾ ಮೇ 2016ರ 14-20ರ ಎಂಪ್ಲಾಯ್ಮೇಂಟ್ ನ್ಯೂಸ್‍ನ್ನು ನೋಡÀಬಹುದು. ವೆಬ್‍ಸೈಟ್ ವಿಳಾಸ ತಿತಿತಿ.emಠಿಟoಥಿmeಟಿಣಟಿeತಿs.gov.iಟಿ, ತಿತಿತಿ.ಡಿoರಿgಚಿಡಿsಚಿmಚಿಛಿhಚಿಡಿ.gov.iಟಿ ಅಥವಾ ಉಪಮುಖ್ಯಸ್ಥರು, ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಮಾನಸ ಗಂಗೋತ್ರಿ, ಮೈಸೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಮೇ 20ರಂದು ನಗರದಲ್ಲಿ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳ
ಚಾಮರಾಜನಗರ, ಮೇ. 16 - ಮೈಸÀೂರಿನ ಕೆಫೆ ಕಾಫಿ ಡೇ ಮತ್ತು ಮೈಸೂರು ಹಾಗೂ ಬೆಂಗಳೂರಿನ ಯುರೇಖಾ ಫೋರ್ಬೆಸ್ ಕಂಪನಿಯು ಕಸ್ಟಮರ್ ಸೇಲ್ಸ್ ಸ್ಪೆಷಲಿಸ್ಟ್, ಕಸ್ಟಮರ್ ರಿಲೇಷನ್ ಮೇನÉೀಜ್‍ಮೆಂಟ್, ಟೆರಿಟರಿ ಎಕ್ಸಿಕ್ಯುಟಿವ್ ಹಾಗೂ ಅಕೌಂಟೆಂಟ್ ಹುದ್ದೆಗಳಿಗೆ ಮೇ 20ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಏರ್ಪಡಿಸಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಪದವಿ, ಎಂಬಿಎ, ಬಿಇ ತೇರ್ಗಡೆಯಾಗಿದ್ದು 18 ರಿಂದ 30ರ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಅಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಆಸಕ್ತ ಅಭ್ಯರ್ಥಿಗಳು ಸ್ವವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ವಿವರಗಳಿಗೆ 08226-224430, ಮೊಬೈಲ್ 9538111463, 7760234049 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಮೇ 18ರಂದು ಜಿಲ್ಲೆಗೆ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟು ಆಯೋಗ ಭೇಟಿ
ಚಾಮರಾಜನಗರ, ಮೇ. - ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಕಾರ್ಯದರ್ಶಿಗಳು ಮೇ 18ರಂದು ನಗರಕ್ಕೆ ಆಗಮಿಸುವರು.
ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸುವರು. ಮಧ್ಯಾಹ್ನ 12.30 ಗಂಟೆಗೆ ಹೊಂಗನೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವರು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮೊರಾರ್ಜಿ ವಸತಿಶಾಲೆ ಪ್ರವೇಶಕ್ಕೆ ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ 17:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಗುಂಡ್ಲುಪೇಟೆ ಪಟ್ಟಣದಲ್ಲಿ (ವೀರನಪುರ ಕ್ರಾಸ್) ನಿರ್ವಹಣೆಯಾಗುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ 2016-17ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ನೇರವಾಗಿ ಪ್ರವೇಶ ಪಡೆಯಬಹುದಾಗಿದೆ.
ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಕ್ಕೆ ಅವಕಾಶವಿದೆ.
ವಸತಿಶಾಲೆಯಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು 10ನೇ ತರಗತಿವರೆಗೂ ವ್ಯಾಸಂಗ ಮಾಡಲು ಅವಕಾಶವಿದೆ. ವಿದ್ಯಾರ್ಥಿಗೆ ಉಚಿತವಾಗಿ ಊಟತಿಂಡಿ, ಸಮವಸ್ತ್ರ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ವೈದ್ಯಕೀಯ ವೆಚ್ಚ ಇತರೆ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ (ದೂ.ಸಂಖ್ಯೆ 08226-222180), ಗುಂಡ್ಲುಪೇಟೆ ಪಟ್ಟಣದ ವೀರನಪುರ ಕ್ರಾಸ್‍ನಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಪ್ರಾಂಶುಪಾಲರು (ಮೊ.9164373076) ಅಥವಾ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ, ಚಾಮರಾಜನಗರ (ದೂ.ಸಂಖ್ಯೆ 08226-222069), ಗುಂಡ್ಲುಪೇಟೆ (08229-222097), ಕೊಳ್ಳೇಗಾಲ (08224-253141), ಯಳಂದೂರು (08226-240221) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಹೊಂಗನೂರಿಗೆ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟು ಆಯೋಗ ಭೇಟಿ
ಚಾಮರಾಜನಗರ,ಮೇ.18- ತಾಲೂಕಿನ ಹೊಂಗನೂರಿಗೆ ಅನೂಸೂಚಿತ ಜಾತಿ. ಅನೂಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷರಾದ ಬಸವರಾಜಛಲವಾದಿ ಹಾಗೂ ಸದಸ್ಯರಾದ ಎಂ.ಕುಂಬಯ್ಯ, ಎನ್.ದಿವಾಕರ್ ಅವgನ್ನೊಳಗೊಂಡ ಆಯೋಗ ಭೇಟಿ ನೀಡಿ ಸಂತ್ರಸ್ತರ ಜನರ ಅಹವಾಲನ್ನು ಆಲಿಸಿದರು.
ಮೊದಲು ನಗರದ ಜಿಲ್ಲಾಧಿಕಾರಿ ಕಚೇರಿಗೆ ಬೇಟಿ ನೀಡಿದ ಆಯೋಗ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರೊಂದಿಗೆ ಸಮಾಲೋಚಿಸಿತು. ಇದೇ ವೇಳೆ ಹಲವು ಮನವಿಗಳನ್ನು ಸಭೆಯಲ್ಲಿ ಹಾಜರಿದ್ದ ಮುಖಂಡರು ಸಲ್ಲಿಸಿದರು.
ಬಳಿಕ ಹೊಂಗನೂರಿಗೆ ಭೇಟಿ ನೀಡಿದ ಸಮಿತಿಯು ಆಲ್ಲಿನ ಎರಡು ಸಮುದಾಯಗಳ ಬೀದಿಗಳಿಗೆ ಭೇಟಿ ನೀಡಿ ಜನರರೊಂದಿಗೆ ಘಟನೆ ಕುರಿತು ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಹಿಳೆಯರು ಮತ್ತು ಸಮುದಾಯದ ಮುಖಂಡರು ತಪ್ಪಿಸ್ಥರನ್ನು ಬಂಧಿಸಬೇಕೆ ವಿನಃ ಅಮಾಯಕರಿಗೆ ತೊಂದರೆ ನೀಡಬಾರದು. ಬಹುತೇಕ ಮನೆಯ ಪುರುಷರು ಬಂಧನದ ಬೀತಿಯಿಂದ ಗ್ರಾಮ ತೊರೆದಿದ್ದಾರೆ. ಇದರಿಂದ ನಮಗೆ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು. ಇದೇ ವೇಳೆ ಗ್ರಾಮದ ಕೆಲ ಮುಖಂಡರು ಘಟನೆ ಬಗ್ಗೆ ಆಯೋಗದ ಮುಂದೆ ವಿವರಿಸಿದರು.
ಆಯೋಗದ ಅಧ್ಯಕ್ಷರಾದ ಬಸವರಾಜ ಛಲವಾದಿ ಅವರು ಮಾತನಾಡಿ, ಗ್ರಾಮದ ಎರಡು ಸಮುದಾಯದವರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಕಹಿ ಘಟನೆಯನ್ನು ಮರೆತು ಸಹಬಾಳ್ವೆಯಿಂದ ನಡೆಯಬೇಕು. ಭಿನ್ನಾಭಿಪ್ರಾಯಗಳನ್ನು ಮನಸ್ಸಿಗೆ ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದರು.
ಭೀತಿಯಿಂದ ಗ್ರಾಮ ತೊರೆದಿರುವ ಪುರುಷರು ಮತ್ತೇ ಮರಳಿ ಬರಬೇಕು. ಅಮಾಯಕರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಎಲ್ಲರೂ ಕುಳಿತು ಸಮಸ್ಯೆಯನ್ನು ಪರಿಹರಿಸಿಕೊಳ್ಳೋಣ. ಪೋಲಿಸರು, ಜಿಲ್ಲಾಡಳಿv ನಿಮೊಂದಿಗೆ ಇದ್ದು, ಎಲ್ಲಾ ರಕ್ಷಣೆ ನೀಡಲಿದೆ. ಮುಖಂಡರು ಸಹ ಈ ವಿಷಯದಲ್ಲಿ ಎಲ್ಲಾ ಸಂಶಯಗಳನ್ನು ನಿವಾರಿಸಿ ಗ್ರಾಮದ ಪರಿಸ್ಥಿತಿ ಹಿಂದಿನಂತೆ ಸೌಹಾರ್ಯದಯುತವಾಗಿ ಮರುಕಳಿಸಲು ಸಹಕರಿಸಬೇಕೆಂದು ಆಯೋಗದ ಅಧ್ಯಕ್ಷರಾದÀ ಬಸವರಾಜ ಛಲವಾದಿ ಕೋರಿದರು.
ಊರಿನಲ್ಲಿ ಎರಡು ಸಮುದಾಯದ ಮುಖಂಡರು ಶಾಂತಿ ಸಭೆ ನಡೆಸಲು ದಿನಾಂಕ ನಿಗದಿಮಾಡಲು ತೀರ್ಮಾನಿಸಬೇಕು ಎಂದ ಅವರು, ಘಟನೆಯಲ್ಲಿ ನಷ್ಟಕ್ಕೆ ಒಳಗಾದ 76 ಸಂತ್ರಸ್ತರಿಗೆ ಪರಿಹಾರ ನೀಡಲು ಜಿಲ್ಲಾಡಳಿತ ವರದಿ ಸಲ್ಲಿಸಿದೆ. ಆಯೋಗವು ಪರಿಸ್ಥಿಯನ್ನು ಪರಾಮರ್ಶಿಸಿದ್ದು. ಪರಿಶಿಷ್ಟ ಜನರ ಕಲ್ಯಾಣದ ಬಗ್ಗೆ ಕಾಳಜಿ ವಹಿಸಲಾಗುವುದು ಎಂದು ಬಸವರಾಜ ಛಲವಾದಿ ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು ಮಾತನಾಡಿ, ಜನರು ಯಾವುದೇ ಗಾಳಿ ಸುದ್ದಿ ವದಂತಿಗೆ ಕಿವಿಗೊಡಬಾರದು. ಯಾವುದೇ ತೊಂದರೆ ಉಂಟಾದರೆ ನೇರವಾಗಿ ತಮ್ಮನ್ನೇ ಬೇಟಿ ಮಾಡಬಹುದು. ನಡೆದಿರುವ ಕಹಿಘಟನೆಯನ್ನು ಮರೆತು ಎಲ್ಲರು ಸಹೋದರಂತೆ ಬದುಕಬೇಕು ಎಂದರು.
ಈಸಂದರ್ಭದಲ್ಲಿ ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್.ಜೈನ್, ಆಯೋಗದ ಕಾರ್ಯದರ್ಶಿ ಶ್ರೀನಿವಾಸ್ ಉಪವಿಭಾಗಾಧಿಕಾರಿ ಕವಿತಾರಾಜಾರಾಂ ಸಮಾಜ ಕಲ್ಯಾಣಾಧಿಕಾರಿ ರಾಜೇಶ್ ಜಿ ಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ, ತಹಶೀಲ್ದಾರ್ ಮಹದೇವು, ಮುಖಂಡರಾದ ವೆಂಕಟರಮಣಸ್ವಾಮಿ( ಪಾಪು.) ಸಿ.ಎಂ.ಕೃಷ್ಣಮೂರ್ತಿ. ರಾಮು, ಸಿ,ಕೆ.ಮಂಜುನಾಥ್, ಕೇಶÀವಮೂರ್ತಿ, ಆಲೂರು ನಾಗೇಂದ್ರ, ದೇವಾನಂದ್, ಪರ್ವತರಾಜು, ಬ್ಯಾಡಮೂಡ್ಲು ಬಸವಣ್ಣ ಇತರರು ಹಾಜರಿದ್ದರು.
ವಿವಿಧ ಸಾಲಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 18 :- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಆರ್ಥಿಕ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ನೀಡುವ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ.
ಚೈತನ್ಯ ಸಬ್ಸಿಡಿ ಕಂ ಸಾಫ್ಟ್‍ಲೋನ್ ಯೋಜನೆಯಡಿ ಬ್ಯಾಂಕುಗಳ ಸಹಯೋಗದೊಂದಿಗೆ ಕೃಷಿ, ವ್ಯಾಪಾರ, ಸಾರಿಗೆ, ಕೈಗಾರಿಕೆ, ಸೇವಾ ವಲಯದಲ್ಲಿ ಬರುವ ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಟ 5 ಲಕ್ಷ ರೂ.ಗಳವರೆಗೆ ಸಾಲ ನೀಡಲಾಗುತ್ತದೆ. ನಿಗಮದಿಂದ ಶೇ. 20ರಷ್ಟು ಗರಿಷ್ಟ 1 ಲಕ್ಷ ರೂ.ಗಳವರೆಗೆ ಶೇ. 4ರ ಬಡ್ಡಿ ದರದಲ್ಲಿ ಮಾರ್ಜಿನ್ ಹಣ ನೀಡಲಾಗುತ್ತದೆ. 1 ಲಕ್ಷಕ್ಕಿಂತ ಕಡಿಮೆ ಇರುವ ಸಾಲಕ್ಕೆ ಶೇ.30ರಷ್ಟು ಅಥವ ಗರಿಷ್ಟ 10 ಸಾವಿರ ರೂ. ಸಹಾಯಧನ ಕೊಡಲಾಗುತ್ತದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಬಿಇ (ಸಿಇಟಿ), ಎಂಬಿಬಿಎಸ್, ಬಿಯುಎಂಎಸ್, ಬಿಡಿಎಸ್, ಬಿಎಎಂಎಸ್, ಬಿಎಚ್‍ಎಂಎಸ್, ಎಂಬಿಎ, ಎಂಟೆಕ್, ಎಂಇ, ಎಂಡಿ, ಪಿಎಚ್‍ಡಿ, ಬಿಸಿಎ, ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿ.ಫಾರಂ, ಎಂಫಾರಂ, ಬಿಎಸ್ಸಿ ಪ್ಯಾರಾ ಮೆಡಿಕಲ್, ಬಿಎಸ್ಸಿ ಬಯೋ ಟೆಕ್ನಾಲಜಿ, ಬಿ.ಟೆಕ್, ಬಿಪಿಟಿ, ಬಿವಿಎಸ್ಸಿ, ಎಂವಿಎಸ್ಸಿ, ಬಿಎನ್‍ಎಂ, ಬಿಹೆಚ್‍ಎಂ, ಎಂಡಿಎಸ್, ಎಂಎಸ್‍ಡಬ್ಲೂ, ಎಲ್‍ಎಲ್‍ಎಂ, ಎಂಎಫ್‍ಎ, ಎಂಎಸ್ಸಿ ಬಯೋಟೆಕ್ನಾಲಜಿ ಮತ್ತು ಎಂಎಸ್ಸಿ (ಎಜಿ) ಕೋರ್ಸ್‍ಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ (ಸಿಇಟಿ) ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ಶೇಕಡ 2ರ ಬಡ್ಡಿ ದರದಲ್ಲಿ ಗರಿಷ್ಠ ವಾರ್ಷಿಕ 1 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಈ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ.ಗೆ ಸೇರಿದವರ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮಿತಿಯೊಳಗಿರಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ ಲಭ್ಯವಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್ ಡಾಕ್ರ್ಟಲ್, ಪಿ.ಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ 3.50 ಲಕ್ಷ ರೂ.ಗಳಂತೆ 3 ವರ್ಷಗಳ ಕೋರ್ಸ್ ಅವಧಿಗೆ ಗರಿಷ್ಠ 10 ಲಕ್ಷ ರೂ. ಬಡ್ಡಿರಹಿತ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು. ವಾರ್ಷಿಕ ವರಮಾನ 3.50 ಲಕ್ಷ ರೂ. ಮೀರಿರಬಾರದು ಹಾಗೂ ಶೇ.60ಕ್ಕಿಂತ ಹೆಚ್ಚಿನ ಅಂಕಗಳಿಸಿರಬೇಕು.
ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಚಟುವಟಿಕೆಯನುಸಾರ ಗರಿಷ್ಟ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ಪಡೆಯಬಹುದಾಗಿದೆ. ಇದರಲ್ಲಿ ಗರಿಷ್ಟ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ಸಾಲವಾಗಿದೆ.
ಕಿರುಸಾಲ ಯೋಜನೆಯಡಿ ಸ್ವ ಸಹಾಯ ಗುಂಪಿನ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರ ಚಟುವಟಿಕೆಗಳಾದ ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಇನ್ನಿತರ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಗರಿಷ್ಠ 10 ಸಾವಿರ ರೂ.ವರೆಗೆ ಸಾಲ ಹಾಗೂ 5 ಸಾವಿರ ರೂ. ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರು ಬಿ.ಪಿ.ಎಲ್ ಕುಟುಂಬಕ್ಕೆ ಸೇರಿದವರಾಗಿರಬೇಕು.
ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೂ ಸಾಲಸೌಲಭ್ಯ ಲಭಿಸಲಿದೆ. ಸಾಂಪ್ರದಾಯಿಕ ವೃತ್ತಿದಾರರು ಅಥವಾ ಕಸುಬುದಾರರು ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆ ಮೇಲ್ದರ್ಜೆಗೇರಿಸಲು ವಾರ್ಷಿಕ ಶೇ.2 ಬಡ್ಡಿದರದಲ್ಲಿ ಗರಿಷ್ಠ 2 ಲಕ್ಷ ರೂ.ಗಳ ಸಾಲದಲ್ಲಿ ಶೇ. 15ರಷ್ಟು ಸಹಾಯಧನ ಹಾಗೂ ಉಳಿಕೆ ಹಣ ಸಾಲವಾಗಿ ಮಂಜೂರು ಮಾಡಲಾಗುವುದು. (ವಿಶ್ವಕರ್ಮ ಮತ್ತು ಅದರ ಉಪಪಂಗಡಗಳÀು ಕೈಗೊಳ್ಳುವ ಪಂಚವೃತ್ತಿಗಳಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರತ್ಯೇಕವಾಗಿ ಸಾಲ ಒದಗಿಸುವುದರಿಂದ ಈ ವೃತ್ತಿದಾರರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ)
ಗಂಗಾ ಕಲ್ಯಾಣ ಯೋಜನೆಯಡಿ ಪ್ರವರ್ಗ-1, 2ಎ, 3ಎ ಮತ್ತು 3ಬಿ.ಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವೈಯುಕ್ತಿಕ ಕೊಳವೆ ಬಾವಿ ಯೋಜನೆಯಡಿ ಕೊಳವೆ ಬಾವಿ ಕೊರೆಯಿಸಿ ಪಂಪ್ ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ಅನುಕೂಲ ಕಲ್ಪಿಸಲಾಗುತ್ತದೆ. ಒಟ್ಟು 2 ಲಕ್ಷ ರೂ. ವೆಚ್ಚದಲ್ಲಿ 1.5 ಲಕ್ಷ ರೂ. ಸಹಾಯಧನವಾಗಿರುತ್ತದೆ. ಉಳಿದ 50,000 ರೂ. ಸಾಲ ಶೇ.4ರ ಬಡ್ಡಿದರದಲ್ಲಿ ನೀಡಲಾಗುತ್ತದೆ. ಸಾಮೂಹಿಕ ನೀರಾವರಿ ಯೋಜನೆಯಡಿ ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ 2 ಕೊಳವೆ ಬಾವಿ ಹಾಗೂ 15 ಎಕರೆಗಿಂತ ಹೆಚ್ಚಿನ ಜಮೀನಿಗೆ 3 ಕೊಳವೆಬಾವಿ ಕೊರೆಯಿಸಿ ಪಂಪ್‍ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಮಡಿವಾಳ, ಸವಿತ, ಕುಂಬಾರ, ತಿಗಳ, ಉಪ್ಪಾರ ಸಮುದಾಯದವರು ಕೈಗೊಳ್ಳುವ ಸಾಂಪ್ರದಾಯಿಕ ವೃತ್ತಿಗಳಿಗೆ ಗರಿಷ್ಟ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಶೇ. 15ರಷ್ಟು ಗರಿಷ್ಟ 30 ಸಾವಿರ ರೂ,ಗಳ ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ದೋಬಿ, ಕ್ಷೌರಿಕ, ಬ್ಯಾಂಡ್ ಸೆಟ್, ನಾದಸ್ವರ, ಡೋಲು ಕೊಳ್ಳಲು, ಕುಂಬಾರಿಕೆ ಸಂಬಂಧಿಸಿದ ವಸತಿ ಕಾರ್ಯಾಗಾರ, ಕ್ಲಸ್ಟರ್, ತರಕಾರಿ, ಹೂ ಮಾರಾಟ ಮತ್ತು ಬೆಳೆ ಬೆಳೆಯಲು ನೆರವು ಲಭಿಸಲಿದೆ. ಸಾಂಪ್ರದಾಯಿಕ ವೃತ್ತಿಗಳಲ್ಲದ ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಟ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಶೇ. 15ರಷ್ಟು ಗರಿಷ್ಟ 30 ಸಾವಿರ ರೂ.ಗಳ ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಸಣ್ಣ ಮತ್ತು ಅತಿಸಣ್ಣ ರೈತರಿಗೆ ವೈಯುಕ್ತಿಕ, ಸಾಮೂಹಿಕ ನೀರಾವರಿ ಯೋಜನೆಯನ್ನು ಗಂಗಾ ಕಲ್ಯಾಣ ಯೋಜನೆಯಡಿ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ವ್ರತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಟ 1 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು ನೀಡಲಿದೆ.
ಪ್ರವರ್ಗ 1ರಲ್ಲಿ ಬರುವ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಚಟುವಟಿಕೆ ಅನುಸಾರ ಗರಿಷ್ಟ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ನೀಡಲಿದ್ದು ಶೇ. 15ರಷ್ಟು ಸಹಾಯಧನ ಉಳಿದ ಮೊತ್ತ ಸಾಲದ ರೂಪದಲ್ಲಿರುತ್ತದೆ. ಸಣ್ಣ ಮತ್ತು ಅತಿಸಣ್ಣ ರೈತರಿಗೆ ವೈಯುಕ್ತಿಕ ಹಾಗೂ ಸಾಮೂಹಿಕ ನೀರಾವರಿ ಸೌಲಭ್ಯವನ್ನು ಗಂಗಾ ಕಲ್ಯಾಣ ಯೋಜನೆಯಡಿ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ವ್ರತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಟ 1 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು ನೀಡಲಿದೆ. ವಿದ್ಯಾರ್ಥಿಗಳ ಪೋಷಕರ ಕುಟುಂಬದ ವಾರ್ಷಿಕ ಆದಾಯ ರೂ. 6 ಲಕ್ಷದೊಳಗಿರಬೇಕು.
ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ದಿ ನಿಗಮದÀ ಸಾಲ ಯೋಜನೆಯಡಿ ಇತರೆ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲಸೌಲಭ್ಯ ನೀಡಲಾಗುತ್ತದೆ.
ಅವಧಿ ಸಾಲ ಯೋಜನೆಯಡಿ ಕೃಷಿ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯದಲ್ಲಿ ಆಟೋರಿಕ್ಷಾ, ಗೂಡ್ಸ್ ಆಟೋರಿಕ್ಷಾ, ನ್ಯೂ ಸ್ವರ್ಣಿಮಾ, ಮೈಕ್ರೋ ಫೈನಾನ್ಸ್ ವಲಯಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಆಯಾ ವಲಯದ ಅನುಮೋದಿತ ಘಟಕ ವೆಚ್ಚದ ಮಿತಿಗೊಳಪಟ್ಟು ಗರಿಷ್ಠ 10 ಲಕ್ಷ ರೂ.ಗಳವರೆಗೆ ವಾರ್ಷಿಕ ಶೇಕಡ 4 ರಿಂದ 6ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ. ಎಂಜಿನಿಯರಿಂಗ್, ಮೆಡಿಕಲ್, ವೆಟರ್ನರಿ, ಕಾನೂನು, ಐ.ಸಿ.ಡಬೂ.್ಯಎ, ಸಿ.ಎ, ಹೋಟೆಲ್ ಮ್ಯಾನೇಜ್‍ಮೆಂಟ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ 2.50 ಲಕ್ಷ ರೂ. ಅಥವಾ ಕೋರ್ಸ್‍ನ ಅವಧಿಗೆ ಒಟ್ಟು 10 ಲಕ್ಷ ರೂ. ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತದೆ.
ವಿದೇಶಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ಶೇ. 4ರ ಬಡ್ಡಿದರದಲ್ಲಿ 20 ಲಕ್ಷ ರೂ. ಸಾಲ ನೀಡಲಾಗುತ್ತದೆ.
ಸ್ವಯಂ ಸಕ್ಷಮ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ಲಿನಿಕ್ ಸ್ಥಾಪಿಸಲು, ವಕೀಲ ವೃತ್ತಿ, ಮೆಡಿಕಲ್ ಸ್ಟೋರ್ ಪ್ರಾರಂಭ, ಇತ್ಯಾದಿ ಸ್ವಯಂ ಉದ್ಯೋಗ ಕೈಗೊಳ್ಳಲು 10 ಲಕ್ಷ ರೂ.ಗಳವರೆಗೆ ಸಾಲವನ್ನು ಗರಿಷ್ಠ ಬಡ್ಡಿ ಶೇ.6 ರಿಂದ 8ರ ದರದಲ್ಲಿ ನೀಡಲಾಗುತ್ತದೆ.
ಮಹಿಳಾ ಸ್ವ ಸಹಾಯ ಗುಂಪುಗಳು, ಸ್ತ್ರೀ ಶಕ್ತಿ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂತಹ ಆರ್ಥಿಕ ಉದ್ದೇಶಗಳಿಗೆ, ಘಟಕ ವೆಚ್ಚ ಆಧರಿಸಿ ಗರಿಷ್ಠ ಪ್ರತಿ ಫಲಾನುಭವಿಗೆ 35 ಸಾವಿರ ರೂ. ಸಾಲವನ್ನು ಶೇ. 5ರ ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಮೈಕ್ರೋ ಫೈನಾನ್ಸ್ ಸಾಲ ಯೋಜನೆಯಡಿ ಸ್ವಸಹಾಯ ಗುಂಪುಗಳು, ಸ್ತ್ರೀ ಶಕ್ತಿ, ಪುರುಷ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂಥಹ ಆರ್ಥಿಕ ಉದ್ದೇಶಗಳಿಗೆ ಘಟಕ ವೆಚ್ಚ ಆಧರಿಸಿ ಪ್ರತಿ ಫಲಾನುಭವಿಗೆ ಶೇ. 5ರ ಬಡ್ಡಿ ದರದಲ್ಲಿ 35 ಸಾವಿರ ರೂ. ಸಾಲ ನೀಡಲಾಗುವುದು.
ಮೇಲ್ಕಂಡ ಎಲ್ಲ ಯೋಜನೆಗಳ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವ ಕರ್ಮ ಮತ್ತು ಅದರ ಉಪ ಸಮುದಾಯ, ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಮಿತಿ ಗ್ರಾಮಾಂತರ ಪ್ರದೇಶದವರಿಗೆ 40 ಸಾವಿರ ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 55 ಸಾವಿರ ರೂ. ಒಳಗಿರಬೇಕು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಗಳು 18 ರಿಂದ 55ರ ಮಿತಿಯೊಳಗಿರಬೇಕು.
ಸೌಲಭ್ಯಗಳನ್ನು ಪಡೆಯಲು ಆಸಕ್ತಿಯುಳ್ಳವರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳನ್ನು ಮೇ 25ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 16ರೊಳಗೆ ಸಲ್ಲಿಸಬೇಕÀು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ. ಚಿನ್ನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
12 ಸಹಕಾರ ಸಂಘಗಳ ನೋಂದಣಿ ರದ್ದು ಮಾಡಲು ತೀರ್ಮಾನ : ಅಹವಾಲು, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಮೇ. 19 - ಜಿಲ್ಲೆಯಲ್ಲಿರುವ ವಿವಿಧ 12 ಸಹಕಾರ ಸಂಘಗಳು ಬೈಲಾ ಪ್ರಕಾರ ಕಾರ್ಯನಿರ್ವಹಿಸದೇ ಇರುವ ಹಿನ್ನೆಲೆಯಲ್ಲಿ ಅವುಗಳ ನೋಂದಣಿ ರದ್ದುಗೊಳಿಸಲು ತೀರ್ಮಾನಿಸಿದ್ದು ಈ ಸಂಬಂಧ ಅಹವಾಲು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಚಾಮರಾಜನಗರ ತಾಲೂಕಿನ ಮೂಕನಪಾಳ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ಬೆಂಡರವಾಡಿ ಹಾಲು ಉತ್ಪಾದಕರ ಸಹಕಾರ ಸಂಘ, ಮಸಣಾಪುರ ಹಾಲು ಉತ್ಪಾದಕರ ಸಹಕಾರ ಸಂಘ, ಚೌಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಹಂಚಿತಾಳಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ತೆಳ್ಳನೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ವಿವಿದೋದ್ದೇಶ ಸಹಕಾರ ಸಂಘ, ಕೊಳ್ಳೇಗಾಲದ ಭಗವಾನ್ ವಿವಿದೋದ್ದೇಶ ಸಹಕಾರ ಸಂಘ, ದಲಿತ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ, ಬಸ್ತೀಪುರದ ಶ್ರೀ ಕನಕ ವಿವಿದೋದ್ದೇಶ ಸಹಕಾರ ಸಂಘ, ಕೊಂಗರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಗುಂಡ್ಲುಪೇಟೆ ತಾಲೂಕು ಗ್ರಾಮೋದ್ಯೋಗ ಕಸುಬುದಾರರ ಕೈಗಾರಿಕೆ ವಿವಿದೋದ್ದೇಶ ಸಹಕಾರ ಸಂಘ ಯಾವುದೇ ಚಟುವಟಿಕೆ ನಡೆಸದೇ ನಿಷ್ಕ್ರಿಯವಾಗಿವೆ.
ಈ ಸಹಕಾರ ಸಂಘಗಳ ಕಾರ್ಯಚಟುವಟಿಕೆ ಕುರಿತು ಮಾಹಿತಿ ಲಭ್ಯವಿದ್ದಲ್ಲಿ ಅಥವಾ ಸಹಕಾರ ಸಂಘಗಳನ್ನು ಮುನ್ನಡೆಸಿಕೊಂಡು ಹೋಗಲು ಆಸಕ್ತಿ ಇದ್ದಲ್ಲಿ 20 ದಿನಗಳೊಳಗೆ ನಗರದ ಸಹಕಾರ ಸಂಘಗಳ ಸಹಾಯಕ ನಿಬಂದಕರ ಕಚೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಖುದ್ದಾಗಿ ಮಾಹಿತಿ ಒದಗಿಸಬೇಕು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ ಅಹವಾಲು ಸಲ್ಲಿಕೆಯಾಗದಿದ್ದಲ್ಲಿ ಸಂಘದ ನೋಂದಣಿ ರದ್ದು ಮಾಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪÀ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 - ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2016-17ನೇ ಶೈಕ್ಷಣಿಕ ಸಾಲಿನಲ್ಲಿ 6 ರಿಂದ 12ನೇ ತರಗತಿ ಮತ್ತು ಡಿಪ್ಲಮೋ ವ್ಯಾಸಂಗ ಮಾಡಲಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತದೆ.
ಅರ್ಜಿಯನ್ನು ಮೈಸೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಮೇ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2425240 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವೃತ್ತಿಪರ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 :- ಜಿಲ್ಲಾ ಕೈಗಾರಿಕಾ ಕೇಂದ್ರವು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಸಹಯೋಗದೊಂದಿಗೆ ಜಿಲ್ಲೆಯ ಕೈಗಾರಿಕಾ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣಕ್ಕೆ ನೆರವು ನೀಡಲು ಅರ್ಜಿ ಆಹ್ವಾನಿಸಿದೆ.
ಬಿದಿರು, ಬೆತ್ತ, ಬಡಗಿ, ಕಮ್ಮಾರಿಕೆ, ಚರ್ಮಗಾರಿಕೆ, ಕರಕುಶಲ ವಸ್ತು ತಯಾರಿಕೆ, ಕುಂಬಾರಿಕೆ, ತೆಂಗಿನ ನಾರಿನ ಉತ್ಪನ್ನ, ಜೀನ್ಸ್ ಹೊಲಿಗೆ, ಬೆಳ್ಳಿ ಬಂಗಾರ ಆಭರಣಗಳ ತಯಾರಿಕೆ, ಖಾದಿ ಕೈಮಗ್ಗ ನೇಯ್ಗೆಗಾರರು (ಹತ್ತಿ,ರೇಷ್ಮೆ,ಪಾಲಿಸ್ಟರ್) ನೂಲುಗಾರರು, ಕೌದಿ ಹೊಲಿಯುವಿಕೆ, ಜನರಲ್ ಇಂಜಿನಿಯರಿಂಗ್, ಚಾಪೆ, ಬುಟ್ಟಿ ಹೆಣೆಯುವುದು, ತೆಂಗಿನ ನಾರಿನ ಹಗ್ಗ ಮಾಡುವುದು, ಅಗರಬತ್ತಿ, ಎತ್ತಿನಗಾಡಿ ತಯಾರಿಕೆ, ಕಸೂತಿ, ಎಂಬ್ರಾಯಿಡರಿ, ಕಲ್ಲಿನ ಕೆತ್ತನೆ, ಇತರೆ ಕುಶಲಕರ್ಮಿಗಳಿಗೆ ವಾಸದ ಹಾಗೂ ವೃತ್ತಿಗೆ ಅನುಗುಣವಾಗಿ ವಸತಿ ಕಾರ್ಯಾಗಾರ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತದೆ.
ಕನಿಷ್ಟ 300 ಚದರ ಅಡಿ ಹಾಗೂ ಗರಿಷ್ಟ 700 ಚದರ ಅಡಿ ವಿಸ್ತೀರ್ಣದಲ್ಲಿ ವಸತಿ ಕಾರ್ಯಾಗಾರ ನಿರ್ಮಿಸಿಕೊಳ್ಳಲು ನಿವೇಶನ ಹೊಂದಿರಬೇಕು. 2.5 ಲಕ್ಷ ರೂ ವೆಚ್ಚದ ಕಾರ್ಯಾಗಾರ ನಿರ್ಮಾಣಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 1 ಲಕ್ಷ ರೂ., ರಾಜೀವ್ ಗಾಂಧಿ ವಸತಿ ನಿಗಮದಿಂದ 1.2 ಲಕ್ಷ ರೂ. ಸಹಾಯಧನ ಲಭಿಸಲಿದೆ. ಉಳಿದ 30 ಸಾವಿರ ರೂ.ಗಳನ್ನು ಕುಶಲಕರ್ಮಿಗಳು ಭರಿಸಬೇಕು.
ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಕೊಠಡಿ ಸಂಖ್ಯೆ 323 ಮತ್ತು 324)ಕ್ಕೆ ಅಗತ್ಯ ದಾಖಲೆಗಳೊಂದಿಗೆ ಮೇ 31ರೊಳಗೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕು. ಸಂಪೂರ್ಣ ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅರ್ಜಿ ಆನ್‍ಲೈನ್ ಫೀಡ್ ಕರ್ತವ್ಯ ನಿರ್ವಹಣೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 ):- ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸಾಲಸೌಲಭ್ಯ ಅರ್ಜಿಯನ್ನು ವೆಬ್ ಸೈಟ್‍ನಲ್ಲಿ ಆನ್ ಲೈನ್ ಫೀಡ್ ಮಾಡುವ ಕಾರ್ಯ ನಿರ್ವಹಿಸಲು ಬಿಸಿಎ ವ್ಯಾಸಂಗ ಮಾಡಿದ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಯೋಜನೆಗಳಡಿ ಸಾಲಸೌಲಭ್ಯ ಕಲ್ಪಿಸುವ ಅರ್ಜಿಯನ್ನು ನಿಗಮದ ವೆಬ್ ಸೈಟ್‍ನಲ್ಲಿ ಆನ್ ಲೈನ್‍ನಲ್ಲಿ ಫೀಡ್ ಮಾಡುವ ಕೆಲಸವನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಬೇಕಿದೆ. ಈ ಕೆಲಸವನ್ನು ಮಾಡಲು ಆಸಕ್ತ ಅರ್ಹ ಬಿಸಿಎ ವ್ಯಾಸಂಗ ಮಾಡಿದ ಅಭ್ಯರ್ಥಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು. ವಿವರಗಳಿಗೆ ದೂ.ಸಂ. 08226-224133 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ
ಚಾಮರಾಜನಗರ, ಮೇ. 19:- ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮಕ್ಕಳ ಸುರಕ್ಷತೆ ಉದ್ದೇಶದಿಂದ ಜಿಲ್ಲೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸಿಸಿ ಕ್ಯಾಮರಾವನ್ನು ಪ್ರಸಕ್ತ ಸಾಲಿಗೆ ಶಾಲಾ ಪ್ರಾರಂಭಕ್ಕೂ ಮುಂಚೆಯೇ ಅಳವಡಿಸಿರಬೇಕು. ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ದೈಹಿಕ ಶಿಕ್ಷಣ ಶಿಕ್ಷಕರು, ಇತರೆ ಶಿಕ್ಷಕರು, ಕಾವಲುಗಾರರು ಪೊಲೀಸ್ ಇಲಾಖೆಯಿಂದ ಎನ್‍ಓಸಿ ಪಡೆದು ಸಲ್ಲಿಸಬೇಕು.
ಇಲಾಖೆ ಸೂಚನೆಯನ್ನು ಪಾಲಿಸದ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುತ್ತದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಶಾಲೆಗೆ ಅಂಧ ಮಕ್ಕಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 - ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಮೈಸೂರು ನಗರದಲ್ಲಿ ನಿರ್ವಹಣೆಯಾಗುತ್ತಿರುವ ಅಂಧ ಮಕ್ಕಳ ವಿಶೇಷ ವಸತಿಯುತ ಸರ್ಕಾರಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 10ರ ವಯೋಮಿತಿಯಲ್ಲಿರುವ ಅಂಧ ಗಂಡುಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಪ್ರವೇಶ ನೀಡಲಾಗುತ್ತದೆ. 8 ರಿಂದ 10ನೇ ತರಗತಿಗೆ ವ್ಯಾಸಂಗ ಮಾಡಲು ಪ್ರೌಢಶಾಲೆಗೆ ಪ್ರವೇಶ ಅವಕಾಶವನ್ನು ಅಂಧ ಗಂಡುಮಕ್ಕಳಿಗೆ ನೀಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಪುಸ್ತಕ, ಕಲಿಕಾ ಸಾಮಗ್ರಿ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಪೋಷಕರು ಮೈಸೂರಿನ ತಿಲಕ್ ನಗರದಲ್ಲಿರುವ ಅಂಧಮಕ್ಕಳ ಸರ್ಕಾರಿ ಪಾಠಶಾಲೆ ಕಚೇರಿಯಲ್ಲಿ ಅರ್ಜಿ ಪಡೆದು ಮೇ 31ರೊಳಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಶಾಲಾ ಕಚೇರಿ ಅಧೀಕ್ಷಕರು ದೂ.ಸಂ. 0821-2497496, ಮೊಬೈಲ್ 9481441453 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವಿವಿಧ ಸಾಲಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 18 ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಆರ್ಥಿಕ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ನೀಡುವ ಸಾಲ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ಜನರಿಂದ ಅರ್ಜಿ ಆಹ್ವಾನಿಸಿದೆ.
ಚೈತನ್ಯ ಸಬ್ಸಿಡಿ ಕಂ ಸಾಫ್ಟ್‍ಲೋನ್ ಯೋಜನೆಯಡಿ ಬ್ಯಾಂಕುಗಳ ಸಹಯೋಗದೊಂದಿಗೆ ಕೃಷಿ, ವ್ಯಾಪಾರ, ಸಾರಿಗೆ, ಕೈಗಾರಿಕೆ, ಸೇವಾ ವಲಯದಲ್ಲಿ ಬರುವ ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಟ 5 ಲಕ್ಷ ರೂ.ಗಳವರೆಗೆ ಸಾಲ ನೀಡಲಾಗುತ್ತದೆ. ನಿಗಮದಿಂದ ಶೇ. 20ರಷ್ಟು ಗರಿಷ್ಟ 1 ಲಕ್ಷ ರೂ.ಗಳವರೆಗೆ ಶೇ. 4ರ ಬಡ್ಡಿ ದರದಲ್ಲಿ ಮಾರ್ಜಿನ್ ಹಣ ನೀಡಲಾಗುತ್ತದೆ. 1 ಲಕ್ಷಕ್ಕಿಂತ ಕಡಿಮೆ ಇರುವ ಸಾಲಕ್ಕೆ ಶೇ.30ರಷ್ಟು ಅಥವ ಗರಿಷ್ಟ 10 ಸಾವಿರ ರೂ. ಸಹಾಯಧನ ಕೊಡಲಾಗುತ್ತದೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಬಿಇ (ಸಿಇಟಿ), ಎಂಬಿಬಿಎಸ್, ಬಿಯುಎಂಎಸ್, ಬಿಡಿಎಸ್, ಬಿಎಎಂಎಸ್, ಬಿಎಚ್‍ಎಂಎಸ್, ಎಂಬಿಎ, ಎಂಟೆಕ್, ಎಂಇ, ಎಂಡಿ, ಪಿಎಚ್‍ಡಿ, ಬಿಸಿಎ, ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿ.ಫಾರಂ, ಎಂಫಾರಂ, ಬಿಎಸ್ಸಿ ಪ್ಯಾರಾ ಮೆಡಿಕಲ್, ಬಿಎಸ್ಸಿ ಬಯೋ ಟೆಕ್ನಾಲಜಿ, ಬಿ.ಟೆಕ್, ಬಿಪಿಟಿ, ಬಿವಿಎಸ್ಸಿ, ಎಂವಿಎಸ್ಸಿ, ಬಿಎನ್‍ಎಂ, ಬಿಹೆಚ್‍ಎಂ, ಎಂಡಿಎಸ್, ಎಂಎಸ್‍ಡಬ್ಲೂ, ಎಲ್‍ಎಲ್‍ಎಂ, ಎಂಎಫ್‍ಎ, ಎಂಎಸ್ಸಿ ಬಯೋಟೆಕ್ನಾಲಜಿ ಮತ್ತು ಎಂಎಸ್ಸಿ (ಎಜಿ) ಕೋರ್ಸ್‍ಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ (ಸಿಇಟಿ) ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ಶೇಕಡ 2ರ ಬಡ್ಡಿ ದರದಲ್ಲಿ ಗರಿಷ್ಠ ವಾರ್ಷಿಕ 1 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಈ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3ಬಿ.ಗೆ ಸೇರಿದವರ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷ ರೂ. ಮಿತಿಯೊಳಗಿರಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ ಲಭ್ಯವಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣಗಳಾದ ಪೋಸ್ಟ್ ಡಾಕ್ರ್ಟಲ್, ಪಿ.ಹೆಚ್.ಡಿ., ಮಾಸ್ಟರ್ ಡಿಗ್ರಿ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಾರ್ಷಿಕ 3.50 ಲಕ್ಷ ರೂ.ಗಳಂತೆ 3 ವರ್ಷಗಳ ಕೋರ್ಸ್ ಅವಧಿಗೆ ಗರಿಷ್ಠ 10 ಲಕ್ಷ ರೂ. ಬಡ್ಡಿರಹಿತ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯಲ್ಲಿರಬೇಕು. ವಾರ್ಷಿಕ ವರಮಾನ 3.50 ಲಕ್ಷ ರೂ. ಮೀರಿರಬಾರದು ಹಾಗೂ ಶೇ.60ಕ್ಕಿಂತ ಹೆಚ್ಚಿನ ಅಂಕಗಳಿಸಿರಬೇಕು.
ಡಿ. ದೇವರಾಜ ಅರಸು ಸ್ವಯಂ ಉದ್ಯೋಗ ವೈಯುಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಜನರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಚಟುವಟಿಕೆಯನುಸಾರ ಗರಿಷ್ಟ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ಪಡೆಯಬಹುದಾಗಿದೆ. ಇದರಲ್ಲಿ ಗರಿಷ್ಟ ಶೇ.15ರಷ್ಟು ಸಹಾಯಧನ, ಉಳಿಕೆ ಮೊತ್ತ ಸಾಲವಾಗಿದೆ.
ಕಿರುಸಾಲ ಯೋಜನೆಯಡಿ ಸ್ವ ಸಹಾಯ ಗುಂಪಿನ ಸದಸ್ಯರು ಕೈಗೊಳ್ಳುವ ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರ ಚಟುವಟಿಕೆಗಳಾದ ಹಣ್ಣು, ತರಕಾರಿ, ಹಾಲು, ಹೂ ಮಾರುವವರು, ತಳ್ಳುವ ಗಾಡಿ ವ್ಯಾಪಾರಿಗಳು ಇನ್ನಿತರ ಸಣ್ಣ ಪ್ರಮಾಣದ ವ್ಯಾಪಾರ ಚಟುವಟಿಕೆಗಳಿಗೆ ವಾರ್ಷಿಕ ಶೇಕಡ 4ರ ಬಡ್ಡಿ ದರದಲ್ಲಿ ಗರಿಷ್ಠ 10 ಸಾವಿರ ರೂ.ವರೆಗೆ ಸಾಲ ಹಾಗೂ 5 ಸಾವಿರ ರೂ. ಸಹಾಯಧನವನ್ನು ನೀಡಲಾಗುವುದು. ಅರ್ಜಿದಾರರು ಬಿ.ಪಿ.ಎಲ್ ಕುಟುಂಬಕ್ಕೆ ಸೇರಿದವರಾಗಿರಬೇಕು.
ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೂ ಸಾಲಸೌಲಭ್ಯ ಲಭಿಸಲಿದೆ. ಸಾಂಪ್ರದಾಯಿಕ ವೃತ್ತಿದಾರರು ಅಥವಾ ಕಸುಬುದಾರರು ಆಧುನಿಕ ಉಪಕರಣಗಳನ್ನು ಖರೀದಿಸಲು, ತಾಂತ್ರಿಕತೆ ಮೇಲ್ದರ್ಜೆಗೇರಿಸಲು ವಾರ್ಷಿಕ ಶೇ.2 ಬಡ್ಡಿದರದಲ್ಲಿ ಗರಿಷ್ಠ 2 ಲಕ್ಷ ರೂ.ಗಳ ಸಾಲದಲ್ಲಿ ಶೇ. 15ರಷ್ಟು ಸಹಾಯಧನ ಹಾಗೂ ಉಳಿಕೆ ಹಣ ಸಾಲವಾಗಿ ಮಂಜೂರು ಮಾಡಲಾಗುವುದು. (ವಿಶ್ವಕರ್ಮ ಮತ್ತು ಅದರ ಉಪಪಂಗಡಗಳÀು ಕೈಗೊಳ್ಳುವ ಪಂಚವೃತ್ತಿಗಳಿಗೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಪ್ರತ್ಯೇಕವಾಗಿ ಸಾಲ ಒದಗಿಸುವುದರಿಂದ ಈ ವೃತ್ತಿದಾರರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ)
ಗಂಗಾ ಕಲ್ಯಾಣ ಯೋಜನೆಯಡಿ ಪ್ರವರ್ಗ-1, 2ಎ, 3ಎ ಮತ್ತು 3ಬಿ.ಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವೈಯುಕ್ತಿಕ ಕೊಳವೆ ಬಾವಿ ಯೋಜನೆಯಡಿ ಕೊಳವೆ ಬಾವಿ ಕೊರೆಯಿಸಿ ಪಂಪ್ ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ಅನುಕೂಲ ಕಲ್ಪಿಸಲಾಗುತ್ತದೆ. ಒಟ್ಟು 2 ಲಕ್ಷ ರೂ. ವೆಚ್ಚದಲ್ಲಿ 1.5 ಲಕ್ಷ ರೂ. ಸಹಾಯಧನವಾಗಿರುತ್ತದೆ. ಉಳಿದ 50,000 ರೂ. ಸಾಲ ಶೇ.4ರ ಬಡ್ಡಿದರದಲ್ಲಿ ನೀಡಲಾಗುತ್ತದೆ. ಸಾಮೂಹಿಕ ನೀರಾವರಿ ಯೋಜನೆಯಡಿ ಕನಿಷ್ಠ 3 ಜನರು ಹೊಂದಿರುವ 8 ರಿಂದ 15 ಎಕರೆ ಜಮೀನಿಗೆ 2 ಕೊಳವೆ ಬಾವಿ ಹಾಗೂ 15 ಎಕರೆಗಿಂತ ಹೆಚ್ಚಿನ ಜಮೀನಿಗೆ 3 ಕೊಳವೆಬಾವಿ ಕೊರೆಯಿಸಿ ಪಂಪ್‍ಸೆಟ್ ಮತ್ತು ಉಪಕರಣಗಳನ್ನು ಸರಬರಾಜು ಮಾಡಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.
ಮಡಿವಾಳ, ಸವಿತ, ಕುಂಬಾರ, ತಿಗಳ, ಉಪ್ಪಾರ ಸಮುದಾಯದವರು ಕೈಗೊಳ್ಳುವ ಸಾಂಪ್ರದಾಯಿಕ ವೃತ್ತಿಗಳಿಗೆ ಗರಿಷ್ಟ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಶೇ. 15ರಷ್ಟು ಗರಿಷ್ಟ 30 ಸಾವಿರ ರೂ,ಗಳ ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ದೋಬಿ, ಕ್ಷೌರಿಕ, ಬ್ಯಾಂಡ್ ಸೆಟ್, ನಾದಸ್ವರ, ಡೋಲು ಕೊಳ್ಳಲು, ಕುಂಬಾರಿಕೆ ಸಂಬಂಧಿಸಿದ ವಸತಿ ಕಾರ್ಯಾಗಾರ, ಕ್ಲಸ್ಟರ್, ತರಕಾರಿ, ಹೂ ಮಾರಾಟ ಮತ್ತು ಬೆಳೆ ಬೆಳೆಯಲು ನೆರವು ಲಭಿಸಲಿದೆ. ಸಾಂಪ್ರದಾಯಿಕ ವೃತ್ತಿಗಳಲ್ಲದ ಆರ್ಥಿಕ ಚಟುವಟಿಕೆಗಳಿಗೆ ಗರಿಷ್ಟ 2 ಲಕ್ಷ ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಶೇ. 15ರಷ್ಟು ಗರಿಷ್ಟ 30 ಸಾವಿರ ರೂ.ಗಳ ಸಹಾಯಧನ, ಉಳಿಕೆ ಮೊತ್ತ ವಾರ್ಷಿಕ ಶೇ. 4ರ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಸಣ್ಣ ಮತ್ತು ಅತಿಸಣ್ಣ ರೈತರಿಗೆ ವೈಯುಕ್ತಿಕ, ಸಾಮೂಹಿಕ ನೀರಾವರಿ ಯೋಜನೆಯನ್ನು ಗಂಗಾ ಕಲ್ಯಾಣ ಯೋಜನೆಯಡಿ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ವ್ರತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಟ 1 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು ನೀಡಲಿದೆ.
ಪ್ರವರ್ಗ 1ರಲ್ಲಿ ಬರುವ ಅಲೆಮಾರಿ, ಅರೆ ಅಲೆಮಾರಿ ಸಮುದಾಯಗಳಿಗೆ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಚಟುವಟಿಕೆ ಅನುಸಾರ ಗರಿಷ್ಟ 2 ಲಕ್ಷ ರೂ.ವರೆಗೆ ಆರ್ಥಿಕ ನೆರವು ನೀಡಲಿದ್ದು ಶೇ. 15ರಷ್ಟು ಸಹಾಯಧನ ಉಳಿದ ಮೊತ್ತ ಸಾಲದ ರೂಪದಲ್ಲಿರುತ್ತದೆ. ಸಣ್ಣ ಮತ್ತು ಅತಿಸಣ್ಣ ರೈತರಿಗೆ ವೈಯುಕ್ತಿಕ ಹಾಗೂ ಸಾಮೂಹಿಕ ನೀರಾವರಿ ಸೌಲಭ್ಯವನ್ನು ಗಂಗಾ ಕಲ್ಯಾಣ ಯೋಜನೆಯಡಿ ಒದಗಿಸಲಾಗುವುದು. ವಿದ್ಯಾರ್ಥಿಗಳಿಗೆ ವ್ರತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡಲು ವಾರ್ಷಿಕ ಶೇ. 2ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಟ 1 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು ನೀಡಲಿದೆ. ವಿದ್ಯಾರ್ಥಿಗಳ ಪೋಷಕರ ಕುಟುಂಬದ ವಾರ್ಷಿಕ ಆದಾಯ ರೂ. 6 ಲಕ್ಷದೊಳಗಿರಬೇಕು.
ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ದಿ ನಿಗಮದÀ ಸಾಲ ಯೋಜನೆಯಡಿ ಇತರೆ ಚಟುವಟಿಕೆಗಳನ್ನು ಕೈಗೊಳ್ಳಲು ಸಾಲಸೌಲಭ್ಯ ನೀಡಲಾಗುತ್ತದೆ.
ಅವಧಿ ಸಾಲ ಯೋಜನೆಯಡಿ ಕೃಷಿ, ಸಣ್ಣ ವ್ಯಾಪಾರ, ಸೇವಾ ವಲಯ, ಸಾರಿಗೆ ವಲಯದಲ್ಲಿ ಆಟೋರಿಕ್ಷಾ, ಗೂಡ್ಸ್ ಆಟೋರಿಕ್ಷಾ, ನ್ಯೂ ಸ್ವರ್ಣಿಮಾ, ಮೈಕ್ರೋ ಫೈನಾನ್ಸ್ ವಲಯಗಳಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ಆಯಾ ವಲಯದ ಅನುಮೋದಿತ ಘಟಕ ವೆಚ್ಚದ ಮಿತಿಗೊಳಪಟ್ಟು ಗರಿಷ್ಠ 10 ಲಕ್ಷ ರೂ.ಗಳವರೆಗೆ ವಾರ್ಷಿಕ ಶೇಕಡ 4 ರಿಂದ 6ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುತ್ತದೆ. ಎಂಜಿನಿಯರಿಂಗ್, ಮೆಡಿಕಲ್, ವೆಟರ್ನರಿ, ಕಾನೂನು, ಐ.ಸಿ.ಡಬೂ.್ಯಎ, ಸಿ.ಎ, ಹೋಟೆಲ್ ಮ್ಯಾನೇಜ್‍ಮೆಂಟ್ ಇತ್ಯಾದಿ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ 2.50 ಲಕ್ಷ ರೂ. ಅಥವಾ ಕೋರ್ಸ್‍ನ ಅವಧಿಗೆ ಒಟ್ಟು 10 ಲಕ್ಷ ರೂ. ಸಾಲವನ್ನು ಶೇ. 4ರ ಬಡ್ಡಿ ದರದಲ್ಲಿ ಮಂಜೂರು ಮಾಡಲಾಗುತ್ತದೆ.
ವಿದೇಶಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಕೋರ್ಸ್‍ನ ಅವಧಿಗೆ ಶೇ. 4ರ ಬಡ್ಡಿದರದಲ್ಲಿ 20 ಲಕ್ಷ ರೂ. ಸಾಲ ನೀಡಲಾಗುತ್ತದೆ.
ಸ್ವಯಂ ಸಕ್ಷಮ ಯೋಜನೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಕ್ಲಿನಿಕ್ ಸ್ಥಾಪಿಸಲು, ವಕೀಲ ವೃತ್ತಿ, ಮೆಡಿಕಲ್ ಸ್ಟೋರ್ ಪ್ರಾರಂಭ, ಇತ್ಯಾದಿ ಸ್ವಯಂ ಉದ್ಯೋಗ ಕೈಗೊಳ್ಳಲು 10 ಲಕ್ಷ ರೂ.ಗಳವರೆಗೆ ಸಾಲವನ್ನು ಗರಿಷ್ಠ ಬಡ್ಡಿ ಶೇ.6 ರಿಂದ 8ರ ದರದಲ್ಲಿ ನೀಡಲಾಗುತ್ತದೆ.
ಮಹಿಳಾ ಸ್ವ ಸಹಾಯ ಗುಂಪುಗಳು, ಸ್ತ್ರೀ ಶಕ್ತಿ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂತಹ ಆರ್ಥಿಕ ಉದ್ದೇಶಗಳಿಗೆ, ಘಟಕ ವೆಚ್ಚ ಆಧರಿಸಿ ಗರಿಷ್ಠ ಪ್ರತಿ ಫಲಾನುಭವಿಗೆ 35 ಸಾವಿರ ರೂ. ಸಾಲವನ್ನು ಶೇ. 5ರ ಬಡ್ಡಿ ದರದಲ್ಲಿ ನೀಡಲಾಗುತ್ತದೆ.
ಮೈಕ್ರೋ ಫೈನಾನ್ಸ್ ಸಾಲ ಯೋಜನೆಯಡಿ ಸ್ವಸಹಾಯ ಗುಂಪುಗಳು, ಸ್ತ್ರೀ ಶಕ್ತಿ, ಪುರುಷ ಗುಂಪುಗಳು, ಸ್ವ ಶಕ್ತಿ ಗುಂಪುಗಳ ಮೂಲಕ ಆದಾಯ ತರುವಂಥಹ ಆರ್ಥಿಕ ಉದ್ದೇಶಗಳಿಗೆ ಘಟಕ ವೆಚ್ಚ ಆಧರಿಸಿ ಪ್ರತಿ ಫಲಾನುಭವಿಗೆ ಶೇ. 5ರ ಬಡ್ಡಿ ದರದಲ್ಲಿ 35 ಸಾವಿರ ರೂ. ಸಾಲ ನೀಡಲಾಗುವುದು.
ಮೇಲ್ಕಂಡ ಎಲ್ಲ ಯೋಜನೆಗಳ ಸೌಲಭ್ಯಕ್ಕೆ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವ ಕರ್ಮ ಮತ್ತು ಅದರ ಉಪ ಸಮುದಾಯ, ಮತೀಯ ಅಲ್ಪಸಂಖ್ಯಾತರನ್ನು ಹೊರತು ಪಡಿಸಿ) ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಮಿತಿ ಗ್ರಾಮಾಂತರ ಪ್ರದೇಶದವರಿಗೆ 40 ಸಾವಿರ ರೂ. ಹಾಗೂ ಪಟ್ಟಣ ಪ್ರದೇಶದವರಿಗೆ 55 ಸಾವಿರ ರೂ. ಒಳಗಿರಬೇಕು. ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂ.ಗಳು ಹಾಗೂ ಪಟ್ಟಣ ಪ್ರದೇಶದವರಿಗೆ 1,20,000 ರೂ.ಗಳ ಮಿತಿಯಲ್ಲಿರಬೇಕು. ಅಭ್ಯರ್ಥಿಗಳು 18 ರಿಂದ 55ರ ಮಿತಿಯೊಳಗಿರಬೇಕು.
ಸೌಲಭ್ಯಗಳನ್ನು ಪಡೆಯಲು ಆಸಕ್ತಿಯುಳ್ಳವರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಆಯಾ ತಾಲ್ಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿಗಳನ್ನು ಮೇ 25ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜೂನ್ 16ರೊಳಗೆ ಸಲ್ಲಿಸಬೇಕÀು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ. ಚಿನ್ನಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
12 ಸಹಕಾರ ಸಂಘಗಳ ನೋಂದಣಿ ರದ್ದು ಮಾಡಲು ತೀರ್ಮಾನ : ಅಹವಾಲು, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಮೇ. 19 ಜಿಲ್ಲೆಯಲ್ಲಿರುವ ವಿವಿಧ 12 ಸಹಕಾರ ಸಂಘಗಳು ಬೈಲಾ ಪ್ರಕಾರ ಕಾರ್ಯನಿರ್ವಹಿಸದೇ ಇರುವ ಹಿನ್ನೆಲೆಯಲ್ಲಿ ಅವುಗಳ ನೋಂದಣಿ ರದ್ದುಗೊಳಿಸಲು ತೀರ್ಮಾನಿಸಿದ್ದು ಈ ಸಂಬಂಧ ಅಹವಾಲು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.
ಚಾಮರಾಜನಗರ ತಾಲೂಕಿನ ಮೂಕನಪಾಳ್ಯ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ಬೆಂಡರವಾಡಿ ಹಾಲು ಉತ್ಪಾದಕರ ಸಹಕಾರ ಸಂಘ, ಮಸಣಾಪುರ ಹಾಲು ಉತ್ಪಾದಕರ ಸಹಕಾರ ಸಂಘ, ಚೌಡಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಹಂಚಿತಾಳಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ತೆಳ್ಳನೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ಶ್ರೀ ಬಿಳಿಗಿರಿ ರಂಗನಾಥಸ್ವಾಮಿ ವಿವಿದೋದ್ದೇಶ ಸಹಕಾರ ಸಂಘ, ಕೊಳ್ಳೇಗಾಲದ ಭಗವಾನ್ ವಿವಿದೋದ್ದೇಶ ಸಹಕಾರ ಸಂಘ, ದಲಿತ ಮಹಿಳಾ ವಿವಿದೋದ್ದೇಶ ಸಹಕಾರ ಸಂಘ, ಬಸ್ತೀಪುರದ ಶ್ರೀ ಕನಕ ವಿವಿದೋದ್ದೇಶ ಸಹಕಾರ ಸಂಘ, ಕೊಂಗರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ, ಗುಂಡ್ಲುಪೇಟೆ ತಾಲೂಕು ಗ್ರಾಮೋದ್ಯೋಗ ಕಸುಬುದಾರರ ಕೈಗಾರಿಕೆ ವಿವಿದೋದ್ದೇಶ ಸಹಕಾರ ಸಂಘ ಯಾವುದೇ ಚಟುವಟಿಕೆ ನಡೆಸದೇ ನಿಷ್ಕ್ರಿಯವಾಗಿವೆ.
ಈ ಸಹಕಾರ ಸಂಘಗಳ ಕಾರ್ಯಚಟುವಟಿಕೆ ಕುರಿತು ಮಾಹಿತಿ ಲಭ್ಯವಿದ್ದಲ್ಲಿ ಅಥವಾ ಸಹಕಾರ ಸಂಘಗಳನ್ನು ಮುನ್ನಡೆಸಿಕೊಂಡು ಹೋಗಲು ಆಸಕ್ತಿ ಇದ್ದಲ್ಲಿ 20 ದಿನಗಳೊಳಗೆ ನಗರದ ಸಹಕಾರ ಸಂಘಗಳ ಸಹಾಯಕ ನಿಬಂದಕರ ಕಚೇರಿಗೆ ಸೂಕ್ತ ದಾಖಲಾತಿಗಳೊಂದಿಗೆ ಖುದ್ದಾಗಿ ಮಾಹಿತಿ ಒದಗಿಸಬೇಕು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ ಅಹವಾಲು ಸಲ್ಲಿಕೆಯಾಗದಿದ್ದಲ್ಲಿ ಸಂಘದ ನೋಂದಣಿ ರದ್ದು ಮಾಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪÀ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮೈಸೂರು ನಗರಲ್ಲಿರುವ ಮಿಲಿಟರಿ ಬಾಲಕರ ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
2016-17ನೇ ಶೈಕ್ಷಣಿಕ ಸಾಲಿನಲ್ಲಿ 6 ರಿಂದ 12ನೇ ತರಗತಿ ಮತ್ತು ಡಿಪ್ಲಮೋ ವ್ಯಾಸಂಗ ಮಾಡಲಿರುವ ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಮಕ್ಕಳಿಗೆ ಉಚಿತ ಪ್ರವೇಶ ನೀಡಲಾಗುತ್ತದೆ.
ಅರ್ಜಿಯನ್ನು ಮೈಸೂರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಮೇ 30ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 0821-2425240 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವೃತ್ತಿಪರ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 ಜಿಲ್ಲಾ ಕೈಗಾರಿಕಾ ಕೇಂದ್ರವು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಸಹಯೋಗದೊಂದಿಗೆ ಜಿಲ್ಲೆಯ ಕೈಗಾರಿಕಾ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣಕ್ಕೆ ನೆರವು ನೀಡಲು ಅರ್ಜಿ ಆಹ್ವಾನಿಸಿದೆ.
ಬಿದಿರು, ಬೆತ್ತ, ಬಡಗಿ, ಕಮ್ಮಾರಿಕೆ, ಚರ್ಮಗಾರಿಕೆ, ಕರಕುಶಲ ವಸ್ತು ತಯಾರಿಕೆ, ಕುಂಬಾರಿಕೆ, ತೆಂಗಿನ ನಾರಿನ ಉತ್ಪನ್ನ, ಜೀನ್ಸ್ ಹೊಲಿಗೆ, ಬೆಳ್ಳಿ ಬಂಗಾರ ಆಭರಣಗಳ ತಯಾರಿಕೆ, ಖಾದಿ ಕೈಮಗ್ಗ ನೇಯ್ಗೆಗಾರರು (ಹತ್ತಿ,ರೇಷ್ಮೆ,ಪಾಲಿಸ್ಟರ್) ನೂಲುಗಾರರು, ಕೌದಿ ಹೊಲಿಯುವಿಕೆ, ಜನರಲ್ ಇಂಜಿನಿಯರಿಂಗ್, ಚಾಪೆ, ಬುಟ್ಟಿ ಹೆಣೆಯುವುದು, ತೆಂಗಿನ ನಾರಿನ ಹಗ್ಗ ಮಾಡುವುದು, ಅಗರಬತ್ತಿ, ಎತ್ತಿನಗಾಡಿ ತಯಾರಿಕೆ, ಕಸೂತಿ, ಎಂಬ್ರಾಯಿಡರಿ, ಕಲ್ಲಿನ ಕೆತ್ತನೆ, ಇತರೆ ಕುಶಲಕರ್ಮಿಗಳಿಗೆ ವಾಸದ ಹಾಗೂ ವೃತ್ತಿಗೆ ಅನುಗುಣವಾಗಿ ವಸತಿ ಕಾರ್ಯಾಗಾರ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತದೆ.
ಕನಿಷ್ಟ 300 ಚದರ ಅಡಿ ಹಾಗೂ ಗರಿಷ್ಟ 700 ಚದರ ಅಡಿ ವಿಸ್ತೀರ್ಣದಲ್ಲಿ ವಸತಿ ಕಾರ್ಯಾಗಾರ ನಿರ್ಮಿಸಿಕೊಳ್ಳಲು ನಿವೇಶನ ಹೊಂದಿರಬೇಕು. 2.5 ಲಕ್ಷ ರೂ ವೆಚ್ಚದ ಕಾರ್ಯಾಗಾರ ನಿರ್ಮಾಣಕ್ಕೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ 1 ಲಕ್ಷ ರೂ., ರಾಜೀವ್ ಗಾಂಧಿ ವಸತಿ ನಿಗಮದಿಂದ 1.2 ಲಕ್ಷ ರೂ. ಸಹಾಯಧನ ಲಭಿಸಲಿದೆ. ಉಳಿದ 30 ಸಾವಿರ ರೂ.ಗಳನ್ನು ಕುಶಲಕರ್ಮಿಗಳು ಭರಿಸಬೇಕು.
ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಕೊಠಡಿ ಸಂಖ್ಯೆ 323 ಮತ್ತು 324)ಕ್ಕೆ ಅಗತ್ಯ ದಾಖಲೆಗಳೊಂದಿಗೆ ಮೇ 31ರೊಳಗೆ ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕು. ಸಂಪೂರ್ಣ ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅರ್ಜಿ ಆನ್‍ಲೈನ್ ಫೀಡ್ ಕರ್ತವ್ಯ ನಿರ್ವಹಣೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 ಜಿಲ್ಲೆಯ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಸಾಲಸೌಲಭ್ಯ ಅರ್ಜಿಯನ್ನು ವೆಬ್ ಸೈಟ್‍ನಲ್ಲಿ ಆನ್ ಲೈನ್ ಫೀಡ್ ಮಾಡುವ ಕಾರ್ಯ ನಿರ್ವಹಿಸಲು ಬಿಸಿಎ ವ್ಯಾಸಂಗ ಮಾಡಿದ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಯೋಜನೆಗಳಡಿ ಸಾಲಸೌಲಭ್ಯ ಕಲ್ಪಿಸುವ ಅರ್ಜಿಯನ್ನು ನಿಗಮದ ವೆಬ್ ಸೈಟ್‍ನಲ್ಲಿ ಆನ್ ಲೈನ್‍ನಲ್ಲಿ ಫೀಡ್ ಮಾಡುವ ಕೆಲಸವನ್ನು ಒಂದು ತಿಂಗಳ ಒಳಗೆ ಪೂರ್ಣಗೊಳಿಸಬೇಕಿದೆ. ಈ ಕೆಲಸವನ್ನು ಮಾಡಲು ಆಸಕ್ತ ಅರ್ಹ ಬಿಸಿಎ ವ್ಯಾಸಂಗ ಮಾಡಿದ ಅಭ್ಯರ್ಥಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಸಂಪರ್ಕಿಸಬಹುದು. ವಿವರಗಳಿಗೆ ದೂ.ಸಂ. 08226-224133 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಸೂಚನೆ
ಚಾಮರಾಜನಗರ, ಮೇ. 19ವಿದ್ಯಾರ್ಥಿಗಳ ಸುರಕ್ಷತೆ ದೃಷ್ಠಿಯಿಂದ ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಮಕ್ಕಳ ಸುರಕ್ಷತೆ ಉದ್ದೇಶದಿಂದ ಜಿಲ್ಲೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಸಿಸಿ ಕ್ಯಾಮರಾವನ್ನು ಪ್ರಸಕ್ತ ಸಾಲಿಗೆ ಶಾಲಾ ಪ್ರಾರಂಭಕ್ಕೂ ಮುಂಚೆಯೇ ಅಳವಡಿಸಿರಬೇಕು. ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು, ದೈಹಿಕ ಶಿಕ್ಷಣ ಶಿಕ್ಷಕರು, ಇತರೆ ಶಿಕ್ಷಕರು, ಕಾವಲುಗಾರರು ಪೊಲೀಸ್ ಇಲಾಖೆಯಿಂದ ಎನ್‍ಓಸಿ ಪಡೆದು ಸಲ್ಲಿಸಬೇಕು.
ಇಲಾಖೆ ಸೂಚನೆಯನ್ನು ಪಾಲಿಸದ ಶಾಲೆಗಳ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುತ್ತದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಸತಿ ಶಾಲೆಗೆ ಅಂಧ ಮಕ್ಕಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 19 ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಮೈಸೂರು ನಗರದಲ್ಲಿ ನಿರ್ವಹಣೆಯಾಗುತ್ತಿರುವ ಅಂಧ ಮಕ್ಕಳ ವಿಶೇಷ ವಸತಿಯುತ ಸರ್ಕಾರಿ ಶಾಲೆಗೆ ಅರ್ಜಿ ಆಹ್ವಾನಿಸಲಾಗಿದೆ.
6 ರಿಂದ 10ರ ವಯೋಮಿತಿಯಲ್ಲಿರುವ ಅಂಧ ಗಂಡುಮಕ್ಕಳಿಗೆ ಸರ್ಕಾರಿ ಶಾಲೆಯಲ್ಲಿ ಪ್ರವೇಶ ನೀಡಲಾಗುತ್ತದೆ. 8 ರಿಂದ 10ನೇ ತರಗತಿಗೆ ವ್ಯಾಸಂಗ ಮಾಡಲು ಪ್ರೌಢಶಾಲೆಗೆ ಪ್ರವೇಶ ಅವಕಾಶವನ್ನು ಅಂಧ ಗಂಡುಮಕ್ಕಳಿಗೆ ನೀಡಲಾಗುತ್ತದೆ.
ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಪುಸ್ತಕ, ಕಲಿಕಾ ಸಾಮಗ್ರಿ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಪೋಷಕರು ಮೈಸೂರಿನ ತಿಲಕ್ ನಗರದಲ್ಲಿರುವ ಅಂಧಮಕ್ಕಳ ಸರ್ಕಾರಿ ಪಾಠಶಾಲೆ ಕಚೇರಿಯಲ್ಲಿ ಅರ್ಜಿ ಪಡೆದು ಮೇ 31ರೊಳಗೆ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಶಾಲಾ ಕಚೇರಿ ಅಧೀಕ್ಷಕರು ದೂ.ಸಂ. 0821-2497496, ಮೊಬೈಲ್ 9481441453 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮೇ31ರವರೆಗೆ ಆಧಾರ್ ವಿವರ ಸಲ್ಲಿಸಲು ಪಡಿತರ ಚೀಟಿದಾರರಿಗೆ ಅವಕಾಶ
ಚಾಮರಾಜನಗರ, ಮೇ. 19 ಪಡಿತರ ಚೀಟಿಯಲ್ಲಿನ ಪ್ರತಿ ಕುಟುಂಬದ ಸದಸ್ಯರ ಆಧಾರ್ ಸಂಖ್ಯೆ ನೀಡುವ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ಆಧಾರ್ ಸಂಖ್ಯೆ ನೊಂದಣಿಯಾಗದ ಪಡಿತರ ಚೀಟಿಗಳಿಗೆ ಜೂನ್ ತಿಂಗಳಿನಿಂದ ಪಡಿತರ ಹಂಚಿಕೆಯನ್ನು ನಿಲ್ಲಿಸಲಾಗುತ್ತದೆ.
ಪಡಿತರ ಚೀಟಿಯಲ್ಲಿರುವ ಕುಟುಂಬದ ಸದಸ್ಯರ ಆಧಾರ್ ಸಂಖ್ಯೆಯನ್ನು ಸಲ್ಲಿಸದೇ ಇದ್ದಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುತ್ತದೆ. ಈ ಹಿನ್ನಲೆಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸದೇ ಇರುವವರು ಸಂಬಂಧಪಟ್ಟ ಗ್ರಾಮಪಂಚಾಯಿತಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಆಧಾರ್ ವಿವರವನ್ನು ನೀಡಿ ನೊಂದಣಿ ಮಾಡಿಸಬೇಕು. ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳಿಗೆ ಆಧಾರ್ ವಿವರ ಪಡೆದು ನೊಂದಣಿ ಮಾಡಲು ನಿರ್ದೇಶನ ನೀಡಲಾಗಿದೆ.
ಯಾವುದೇ ಕಾರಣಕ್ಕೂ ಗ್ರಾಮಪಂಚಾಯಿತಿ ಅಥವಾ ತಾಲ್ಲೂಕು ಕಚೇರಿಗಳಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ನೊಂದಣಿ ಮಾಡುವ ಕೆಲಸವನ್ನು ನಿರಾಕರಿಸುವವುದು ಅಥವಾ ಈ ಪ್ರಕ್ರಿಯೆ ಬಗೆಗಿನ ದೂರುಗಳು ಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರ ಆಧಾರ್ ಸಂಖ್ಯೆ ನೊಂದಣಿ ಕೆಲಸದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.
ಮಕ್ಕಳ ಕಲ್ಯಾಣ ಕ್ಷೇತ್ರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 20 -ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಕೊಡಮಾಡುವ 2016ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಮತ್ತು ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಉತ್ತಮ ಸೇವೆ ಸಲ್ಲಿಸಿ ನಿರತರಾಗಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗುತ್ತದೆ. 3 ಸಂಸ್ಥೆಗೆ ತಲಾ 3 ಲಕ್ಷ ರೂ ನಗದು ಹಾಗೂ ಮೂವರು ವ್ಯಕ್ತಿಗೆ 1 ಲಕ್ಷ ರೂ ನಗದು ಮತ್ತು ಪ್ರಶಸ್ತಿಪತ್ರ ನೀಡಿ ಗೌರವಿಸಲಾಗುತ್ತದೆ.
ಮಕ್ಕಳ ಅಭಿವೃದ್ಧಿ ರಕ್ಷಣೆ ಮತ್ತು ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ರಾಜೀವ್ ಗಾಂಧಿ ಮಾನವ ಸೇವಾ ಪ್ರಶಸ್ತಿ ನೀಡಲಾಗುತ್ತದೆ. ಪ್ರಶಸ್ತಿಯು 1 ಲಕ್ಷ ರೂ ನಗದು, ಬೆಳ್ಳಿ ಪದಕ ಹಾಗೂ ಪ್ರಶಂಸಾ ಪತ್ರ ಒಳಗೊಂಡಿದೆ.
ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಮೇ 25ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮೇ 21ರಂದು ನಗರದಲ್ಲಿ ಗಣಿತಶಾಸ್ತ್ರ ಕುರಿತು ಕಾರ್ಯಾಗಾರ
ಚಾಮರಾಜನಗರ, ಮೇ. 20 -ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಗಾಗಿ ಗಣಿತಶಾಸ್ತ್ರ ಕುರಿತು ಕಾರ್ಯಾಗಾರವನ್ನು ಮೇ 21ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಏರ್ಪಡಿಸಲಾಗಿದೆ.
ಮೈಸೂರು ವಿವಿ ಗಣಿತಶಾಸ್ತ್ರ ವಿಭಾಗದ ಅಧ್ಯಕ್ಷರಾದ ಪ್ರೊ. ಆರ್. ರಂಗರಾಜನ್, ಪ್ರಾಧ್ಯಾಪಕರಾದ ಪ್ರೊ. ಡಿ. ಸೋನರ್ ನಂದಪ್ಪ, ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಬಿ.ಎಸ್. ಕಿರಣಗಿ, ಬೆಂಗಳೂರು ವಿವಿ ಪ್ರಾಧ್ಯಾಪಕರಾದ ಪ್ರೊ. ಎಂ.ಎಸ್. ಮಹದೇವನಾಯ್ಕ, ಮೈಸೂರು ಮಹಾಜನ ಸ್ನಾತಕೋತ್ತರ ಕೇಂದ್ರದ ಗುರುಪ್ರಸಾದ್ ಕಾರ್ಯಾಗಾರದಲ್ಲಿ ಭಾಗವಹಿಸುವರು ಎಂದು ಡಾ. ಬಿ.ಆರ್. ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ತಂಬಾಕು ನಿಯಂತ್ರಣ ಕಾಯಿದೆ ಪರಿಣಾಮಕಾರಿ ಅನುಷ್ಠಾನಕ್ಕೆ ಡೀಸಿ ಸೂಚನೆ
ಚಾಮರಾಜನಗರ, ಮೇ. 20 ಆರೋಗ್ಯಕ್ಕೆ ಹಾನಿ ಉಂಟು ಮಾಡುವ ತಂಬಾಕು ಉತ್ಪನ್ನಗಳನ್ನು ನಿಯಂತ್ರಿಸುವ ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ದಿಸೆಯಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಉತ್ಪನ್ನಗಳ ಪ್ಯಾಕೆಟ್ ಮೇಲಿನ ಎರಡೂ ಬದಿಯಲ್ಲಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಎಚ್ಚರಿಕೆ ಚಿಹ್ನೆ ಹಾಗೂ ಮಾಹಿತಿಯನ್ನು ಶೇ. 85ರಷ್ಟು ಪ್ರಮಾಣದಲ್ಲಿ ಕಡ್ಡಾಯವಾಗಿ ಮುದ್ರಿಸಿರಬೇಕು. ಶೇ. 45ರಷ್ಟು ಎಚ್ಚರಿಕೆ ಮಾಹಿತಿಯುಳ್ಳ ಹಳೆಯ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ತಂಬಾಕು ಉತ್ಪನ್ನ ಮಾರಾಟದಡಿ ನಿಯಮ ಉಲ್ಲಂಘನೆ ಆಗುತ್ತಿದೆಯೇ ಎಂಬ ಬಗ್ಗೆ ಅಧಿಕಾರಿಗಳು ವ್ಯಾಪಕ ಪರಿಶೀಲನೆ ಮಾಡಬೇಕು. ವಿಶೇಷ ಕಾರ್ಯಾಚರಣೆ ನಡೆಸಿ ನಿಗದಿತ ಪ್ರಮಾಣದಲ್ಲಿ ಎಚ್ಚರಿಕೆ ಮಾಹಿತಿ ಮುದ್ರಿಸದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಮಾರಾಟಗಾರರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಏಪ್ರಿಲ್ 2014ರಿಂದ ಕೋಟ್ಪಾ ಕಾಯಿದೆ ಜಾರಿಗೆ ಬಂದಿದೆ. ಇದರ ಅನುಸಾರ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಬಗ್ಗೆ ಅಧಿಕಾರಿಗಳು ನಿಗಾವಹಿಸಬೇಕು. ಅದರಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.
ಇದೇ ಮೇ 31ರಂದು ವಿಶ್ವ ತಂಬಾಕುರಹಿತ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿದೆ. ಅಂದು ವರ್ತಕರು, ತಂಬಾಕು ಮಾರಾಟಗಾರರು ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡದಂತೆ ಸೂಚಿಸಬೇಕು. ಈ ಮೂಲಕ ಆ ದಿನದಂದು ತಂಬಾಕು ಉತ್ಪನ್ನಗಳ ಸೇವನೆಯಿಂದ ಆರೋಗ್ಯದ ಮೇಲೆ ಆಗಬಹುದಾದ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಉತ್ತಮ ಆರೋಗ್ಯ ವೃದ್ಧಿಸಿಕೊಳ್ಳಲು ಸಲಹೆ ನೀಡಬೇಕೆಂದು ರಾಮು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಪಾಂಡುವಿಜಯನ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜು, ಡಿವೈಎಸ್‍ಪಿ ಮಹಂತೇಶ ಮುಪ್ಪಿನಮಠ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್. ಮಮತ, ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜನಾಧಿಕಾರಿ ಪಿ. ಮಹಮದ್, ಇತರೆ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ತಂಬಾಕು ನಿಯಂತ್ರಣ ಕಾಯಿದೆ ಜಾಗೃತಿಗೆ ಮುಂದಾದ ಅಧಿಕಾರಿಗಳ ತಂಡ
ಚಾಮರಾಜನಗರ, ಮೇ. 20 -ವಿಶ್ವ ತಂಬಾಕು ರಹಿತ ದಿನವನ್ನು ಜಿಲ್ಲೆಯಲ್ಲಿ ಆಚರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಹಿನ್ನೆಲೆಯಲ್ಲಿ ನಗರದಲ್ಲಿಂದು ಆರೋಗ್ಯ, ಪೊಲೀಸ್, ಶಿಕ್ಷಣ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳ ತಂಡ ಇಂದು ಅಂಗಡಿಗಳಿಗೆ ಭೇಟಿ ನೀಡಿ ತಂಬಾಕು ಉತ್ಪನ್ನಗಳ ಸಂಬಂಧ ಇರುವ ಕಾಯಿದೆ ಅಂಶಗಳ ಬಗ್ಗೆ ಜಾಗೃತಿ ಮೂಡಿಸಿತು.
ಪಟ್ಟಣದ ಅಂಗಡಿ ಬೀದಿಗಳಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಅಲ್ಲಿ ಮಾರಾಟ ಮಾಡಲಾಗುತ್ತಿರುವ ಬೀಡಿ, ಸಿಗರೇಟ್ ಇತರೆ ತಂಬಾಕು ಉತ್ಪನ್ನಗಳನ್ನು ಪರಿಶೀಲಿಸಿ ನಿಯಮ ಅನ್ವಯ ಉತ್ಪನ್ನಗಳ ಪೊಟ್ಟಣಗಳ ಮೇಲೆ ಎಚ್ಚರಿಕೆ ಮಾಹಿತಿ ಪ್ರಕಟಿಸಲಾಗಿದೆಯೇ ಎಂದು ಪರಿಶೀಲಿಸಿತು.
ಏಪ್ರಿಲ್ 1ರಿಂದ ಜಾರಿಗೆ ಬಂದಿರುವ ಆದೇಶದ ಪ್ರಕಾರ ತಂಬಾಕು ಉತ್ಪನ್ನಗಳ ಪ್ಯಾಕೆಟ್ ಮೇಲೆ ಶೇ. 85ರಷ್ಟು ಎಚ್ಚರಿಕೆ ಚಿಹ್ನೆಯನ್ನು ಗ್ರಾಹಕರಿಗೆ ತಿಳಿಯುವಂತೆ ಮುದ್ರಿಸಿರಬೇಕು. ಇಂತಹ ಉತ್ಪನ್ನಗಳನ್ನು ಮಾತ್ರ ಮಾರಾಟ ಮಾಡಬೇಕು. ಕಡಿಮೆ ಪ್ರಮಾಣದಲ್ಲಿ ಎಚ್ಚರಿಕೆ ಮಾಹಿತಿಯನ್ನು ಮುದ್ರಿಸಿರುವ ತಂಬಾಕು ಉತ್ಪನ್ನಗಳನ್ನು ನಾಶಪಡಿಸಬೇಕೆಂದು ಅಂಗಡಿ ಮಾಲೀಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.
ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿರುವ ಕೆಲ ಅಂಗಡಿಗಳಲ್ಲಿ ಧೂಮಪಾನ ನಿಷೇಧಿಸಿದೆ ಎಂಬ ನಾಮಫಲಕ ಅಳವಡಿಸಿಕೊಳ್ಳದೇ ಇರುವುದನ್ನು ಗಮನಿಸಿದ ಅಧಿಕಾರಿಗಳ ತಂಡ ಕೂಡಲೇ ಎಚ್ಚರಿಕೆ ನಾಮಫಲಕಗಳನ್ನು ಪ್ರದರ್ಶಿಸುವಂತೆ ಕಟ್ಟುನಿಟ್ಟಿನ ನಿರ್ದೇಶನವನ್ನು ಮಾರಾಟಗಾರರಿಗೆ ನೀಡಿದರು.
ಮೇ 31ರಂದು ವಿಶ್ವ ತಂಬಾಕುರಹಿತ ದಿನವಾದ್ದರಿಂದ ಅಂದು ಯಾವುದೇ ಬಗೆಯ ತಂಬಾಕು ಉತ್ಪನ್ನಗಳನ್ನು ಗ್ರಾಹಕರಿಗೆ ಮಾರಾಟ ಮಾಡಬಾರದು. ಅಂದು ಧೂಮಪಾನರಹಿತ ದಿನವಾಗಿ ಆಚರಿಸಬೇಕೆಂದು ಜಾಗೃತಿ ಮೂಡಿಸಲಾಯಿತು.
ನಗರಸಭೆ ಆಯುಕ್ತರಾದ ಎಂ.ಜಿ. ರಮೇಶ್, ಆರೋಗ್ಯ ನಿರೀಕ್ಷಕರಾದ ಶರವಣ, ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್, ಆಹಾರ ಸ್ವಚ್ಚತಾ ಅಧಿಕಾರಿ ಶ್ರೀನಿವಾಸ್, ಪಟ್ಟಣ ಪೊಲೀಸ್ ಠಾಣೆಯ ಸಹಾಯಕ ಆರಕ್ಷಕರ ನಿರೀಕ್ಷಕರು, ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.