Friday, 13 May 2016

11-05-2016 to 13-05-2016 ಚಾಮರಾಜನಗರ

ಮೇ. 12ರಂದು ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ. 10:- ಡಾ. ಡಿ.ಎಂ. ನಂಜುಂಡಪ್ಪ ಅನುಷ್ಠಾನ ಉನ್ನತಾಧಿಕಾರ ಸಮಿತಿ ಅಧ್ಯಕ್ಷರಾದ ವೆಂಕಟರಾವ್ ಘೋರ್ಪಡೆ ಅವರು ಮೇ 12 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ನಗರಕ್ಕೆ ಆಗಮಿಸಿ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಮಾಡುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸರ್ಕಾರದ ಉಪಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಮೇ. 12ರಂದು ಡಾ. ಡಿ.ಎಂ. ನಂಜುಂಡಪ್ಪ ವರದಿ ಶಿಫಾರಸು ಯೋಜನೆ ಪ್ರಗತಿ ಪರಿಶೀಲನೆ ಸಭೆ
ಚಾಮರಾಜನಗರ, ಮೇ. 10 - ಡಾ. ಡಿ.ಎಂ. ನಂಜುಂಡಪ್ಪ ವರದಿ ಶಿಫಾರಸುಗಳ ಅನುಷ್ಠಾನ ಉನ್ನತಾಧಿಕಾರಿ ಸಮಿತಿ ಅಧ್ಯಕ್ಷರಾದ ವೆಂಕಟರಾವ್ ಘೋರ್ಪಡೆ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಮೇ 12ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಮೇ. 13ರಂದು ಜಿಲ್ಲಾಡಳಿತದ ವತಿಯಿಂದ ಭಗೀರಥ ಜಯಂತಿ ಆಚರಣೆ
ಚಾಮರಾಜನಗರ, ಮೇ. 10 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿಯನ್ನು ಮೇ 13ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಭಗೀರಥರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು. ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಫಾಟಿಸುವರು. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಗೋ. ಮಧುಸೂದನ್. ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಜಾನಪದ ವಿದ್ವಾಂಸರಾದ ಡಾ. ಪಿ.ಕೆ. ರಾಜಶೇಖರ ಅವರು ಮುಖ್ಯ ಭಾಷಣ ಮಾಡುವರು.
ನಗರದ ಬಿ. ಬಸವರಾಜು ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 10 - ಚಾಮರಾಜನಗರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿ ಇದ್ದು ಗೌರವÀಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಜಲಿಂಗನಪುರ, ಕುಟ್ಟೇಗೌಡನ ಹುಂಡಿ ಹಾಗೂ ಚೆನ್ನಿಪುರದಮೋಳೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳು ಖಾಲಿ ಇದ್ದು ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.
ನಾಯಕರ ಬೀದಿ - 1 ಟೌನ್ (ವಾರ್ಡ್ ನಂ. 16 - ಪ.ಪಂ), ರೈಲ್ವೆ ಬಡಾವಣೆ (ವಾರ್ಡ್ ನಂ. 16 - ಸಾಮಾನ್ಯ), ಉಪ್ಪಾರಬೀದಿ - 1 (ವಾರ್ಡ್ ನಂ. 18 - ಸಾಮಾನ್ಯ), ಉಪ್ಪಾರಬೀದಿ - 4 (ವಾರ್ಡ್ ನಂ. 18 - ಸಾಮಾನ್ಯ), ಗಾಳಿಪುರ - 7 (ವಾರ್ಡ್ ನಂ. 2 ಮತ್ತು 3 - ಸಾಮಾನ್ಯ), ಕರಿನಂಜನಪುರ - 2 (ವಾರ್ಡ್ ನಂ. 10 - ಸಾಮಾನ್ಯ), ಬೀಡಿ ಕಾಲೋನಿ - 4 (ವಾರ್ಡ್ ನಂ. 2, 4 ಮತ್ತು 5 - ಸಾಮಾನ್ಯ), ಹರಿಜನಬೀದಿ - 2 (ವಾರ್ಡ್ ನಂ. 13, 14 - ಪ.ಜಾ), ರಾಮಸಮುದ್ರ - 11 (ವಾರ್ಡ್ ನಂ. 31 - ಸಾಮಾನ್ಯ), ರಾಮಸಮುದ್ರ - 4 (ವಾರ್ಡ್ ನಂ. 27, 28 - ಪ.ಪಂ), ಬಡಗಲಪುರ - ಸಾಮಾನ್ಯ), ಉತ್ತುವಳ್ಳಿ - 3 (ಪ.ಜಾ), ತಮ್ಮಡಹಳ್ಳಿ – 2 (ಪ.ಪಂ), ತಮ್ಮಡಹಳ್ಳಿ - 3 (ಪ.ಜಾ), ಸಾಗಡೆ - 1 (ಸಾಮಾನ್ಯ), ಸಾಗಡೆ - 3 (ಸಾಮಾನ್ಯ), ಬೆಟ್ಟದಪುರ – 2 (ಸಾಮಾನ್ಯ), ಹರದನಹಳ್ಳಿ – 2 (ಸಾಮಾನ್ಯ), ಹರದನಹಳ್ಳಿ – 4 (ಪ.ಪಂ), ಹರದನಹಳ್ಳಿ – 6 (ಪ.ಜಾ), ಬಂಡಿಗೆರೆ - 1 (ಸಾಮಾನ್ಯ), ಬ್ಯಾಡಮೂಡ್ಲು - 1 (ಸಾಮಾನ್ಯ), ಹಿರೇಬೇಗೂರು - ಸಾಮಾನ್ಯ, ವೀರಯ್ಯನಪುರ - ಪ.ಜಾ, ಕೋಳಿಪಾಳ್ಯ - ಪ.ಜಾ, ಹರವೆ - 4 (ಸಾಮಾನ್ಯ), ಮಲಿಯೂರು - 2 (ಸಾಮಾನ್ಯ), ಮುಕ್ಕಡಹಳ್ಳಿ - 2 (ಪ.ಜಾ), ಕಿಲಗೆರೆ - 1 (ಸಾಮಾನ್ಯ), ಚಿಕ್ಕಬ್ಯಾಡಮೂಡ್ಲು (ಮರುಪ್ರಕಟಣೆ 2ನೇ ಬಾರಿ - ಸಾಮಾನ್ಯ), ಅಮಚವಾಡಿ - 4 (ಮರುಪ್ರಕಟಣೆ 1ನೇ ಬಾರಿ - ಸಾಮಾನ್ಯ) ಹಾಗೂ ಯಣಗುಂಬ - 2(ಮರುಪ್ರಕಟಣೆ 1ನೇ ಬಾರಿ - ಸಾಮಾನ್ಯ) ಅಂಗನವಾಡಿಗಳಲ್ಲಿ ಸಹಾಯಕಿಯರ ಹುದ್ದೆ ಖಾಲಿ ಇರುತ್ತದೆ.                              
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವಂತ ಕೈಬರಹದಲ್ಲಿ ಭರ್ತಿ ಮÁಡಿ ದೃಢೀಕರಿಸಿದ ದಾಖಲೆ ಹಾಗೂ ಇತ್ತೀಚಿನ ಭಾವಚಿತ್ರದೊಡನೆ ಜೂನ್ 6ರಂದು ಸಂಜೆ 5.30 ಗಂಟೆಯೊಳಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಇಟ್ಟಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು.
ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆಗಳನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು (ದೂ.ಸಂ. 08226-222603) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮುಂಗಾರು ಹಂಗಾಮಿಗೆ ಫಸಲ್ ವಿಮಾ ಯೋಜನೆ ಅನುಷ್ಠಾನ
ಚಾಮರಾಜನಗರ, ಮೇ. 10 :- ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು 2016ರ ಮುಂಗಾರು ಹಂಗಾಮಿಗೆ ಅನುಷ್ಠಾನಗೊಳಿಸಲಾಗುತ್ತಿದೆ.
ನೀರಾವರಿ ಆಶ್ರಯದಲ್ಲಿ ಬೆಳೆಯಲಾಗುವ ಭತ್ತ, ಮುಸುಕಿನ ಜೋಳ, ರಾಗಿ, ಸಜ್ಜೆ, ಸೂರ್ಯಕಾಂತಿ ಹಾಗೂ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಜೋಳ, ಮುಸುಕಿನ ಜೋಳ, ರಾಗಿ, ಸಜ್ಜೆ, ಉದ್ದು, ತೊಗರಿ, ಹೆಸರು, ಹುರಳಿ, ಅವರೆ, ಅಲಸಂದೆ, ಸೂರ್ಯಕಾಂತಿ, ಎಳ್ಳು, ಹರಳು, ನೆಲಗಡಲೆ (ಶೇಂಗಾ) ಮತ್ತು ಹತ್ತಿ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಬೆಳೆ ವಿಮೆಗೆ ಒಳಪಡಿಸಲಾಗಿದೆ.
ಚಾಮರಾಜನಗರ ತಾಲೂಕಿಗೆ ಮುಸುಕಿನ ಜೋಳ (ಮಳೆ ಆಶ್ರಿತ), ಗುಂಡ್ಲುಪೇಟೆ ತಾಲೂಕಿಗೆ ಜೋಳ ಹಾಗೂ ಸೂರ್ಯಕಾಂತಿ (ಮಳೆ ಆಶ್ರಿತ), ಕೊಳ್ಳೇಗಾಲ ತಾಲೂಕಿಗೆ ಮುಸುಕಿನ ಜೋಳ ಹಾಗೂ ರಾಗಿ (ಮಳೆ ಆಶ್ರಿತ), ಯಳಂದೂರು ತಾಲೂಕಿಗೆ ಭತ್ತ (ನೀರಾವರಿ) ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಧಿಸೂಚಿಸಲಾಗಿದೆ.
ಯೋಜನೆಗೆ ಒಳಪಡುವ ವಿವಿಧ ಬೆಳೆಗಳಿಗೆ ಬೆಳೆ ಸಾಲ ಪಡೆಯುವ ಮತ್ತು ಪಡೆಯದ ರೈತರು ಬ್ಯಾಂಕುಗಳಿಗೆ ಘೋಷಣೆ ಸಲ್ಲಿಸಲು ಜುಲೈ 30 ಅಂತಿಮ ದಿನವಾಗಿದೆ. ಬೆಳೆ ಸಾಲ ಪಡೆಯದ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ಪಹಣೆ, ಖಾತೆ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಕಂದಾಯ ರಸೀದಿಯನ್ನು ನೀಡಬೇಕು.
ಅಧಿಸೂಚಿತ ಹೋಬಳಿ, ಗ್ರಾಮ ಪಂಚಾಯಿತಿ ಮತ್ತು ಬೆಳೆಗಳ ಪಟ್ಟಿ, ವಿವಿಧ ಬೆಳೆಗಳಿಗೆ ನಿಗದಿಪಡಿಸಲಾಗಿರುವ ಇಂಡೆಮ್ನಿಟಿ ಮಟ್ಟ, ವಿಮಾ ಮೊತ್ತ ಮತ್ತು ವಿಮಾ ಕಂತಿನ ವಿವರಗಳಿಗೆ ಹತ್ತಿರ ಬ್ಯಾಂಕ್, ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ತಿಳಿಸಿದ್ದಾರೆ.

ನಂಜುಂಡಪ್ಪ ವರದಿ ಶಿಫಾರಸು ಯೋಜನೆ ಪ್ರಗತಿ ಪರಿಶೀಲನೆ ಸಭೆ ಮುಂದೂಡಿಕೆ
ಚಾಮರಾಜನಗರ, ಮೇ. 11- ಡಾ. ಡಿ.ಎಂ. ನಂಜುಂಡಪ್ಪ ವರದಿ ಶಿಫಾರಸುಗಳ ಅನುಷ್ಠಾನ ಉನ್ನತಾಧಿಕಾರಿ ಸಮಿತಿ ಅಧ್ಯಕ್ಷರಾದ ವೆಂಕಟರಾವ್ ಘೋರ್ಪಡೆ ಅವರ ಅಧ್ಯಕ್ಷತೆಯಲ್ಲಿ ಮೇ12 ರಂದು ನಿಗದಿಯಾಗಿದ್ದ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಮೇ. 12ರಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಪ್ರವಾಸ
ಚಾಮರಾಜನಗರ, ಮೇ. 11 - ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಮೇ12 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ
ಮಧ್ಯಾಹ್ನ 4.30 ಗಂಟೆಗೆ ಅಧ್ಯಕ್ಷರು ಹಾಗೂ ಸದಸ್ಯರು ಆಗಮಿಸುವರು. ಬಳಿಕ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಶಾಲೆ ಕಡೆ ನನ್ನ ನಡೆ, ಶಿಕ್ಷಣ ನನ್ನ ಮೂಲಭೂತ ಹಕ್ಕು ಆಂದೋಲನ ಕುರಿತ ಸಭೆಯಲ್ಲಿ ಪಾಲ್ಗೋಳ್ಳುವರೆಂದು ಪ್ರಕಟಣೆ ತಿಳಿಸಿದೆ.


ವಿಧಾನಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ವೇಳಾಪಟ್ಟಿ ಪ್ರಕಟ
ಚಾಮರಾಜನಗರ, ಮೇ. 11 - ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದಿಂದ ಆಯ್ಕೆ ಮಾಡುವ ಬಗ್ಗೆ ಚುನಾವಣಾ ಆಯೋಗವು ಕಾರ್ಯ ಸೂಚಿಯನ್ನು ಪ್ರಕಟಿಸಿದೆ.
ಅಧಿಸೂಚನೆಯನ್ನು ಮೇ 16ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಮೇ23 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯು ಮೇ 24ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ26 ಕಡೆಯ ದಿನವಾಗಿದೆ. ಜೂನ್9ರಂದು ಬೆಳಿಗ್ಗೆ 8ರಿಂದ ಸಂಜೆ 4ಗಂಟೆಯವರೆಗೆ ಮತದಾನ (ಅವಶ್ಯವಿದ್ದಲ್ಲಿ) ನಡೆಯಲಿದೆ. ಜೂನ್ 13ರಂದು ಬೆಳಿಗ್ಗೆ 8ಗಂಟೆಯಿಂದ ಮತಗಳ ಏಣಿಕೆ ಕಾರ್ಯ ನಡೆಯಲಿದೆ. ಜೂನ್ 15ರಂದು ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.

ಸದರಿ ಚುನಾವಣೆಗೆ ಸ್ಪರ್ದಿಸುವ ವ್ಯಕ್ತಿಗಳ ವಯಸ್ಸು ಮೂವತ್ತಕ್ಕೂ ಕಡಿಮೆ ಇರಕೂಡದು. ಅವರು ಕರ್ನಾಟಕದ ಯಾವುದಾದರೂ ಒಂದು ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರರಾಗಿರಬೇಕು. ಅವರು ಯಾವುದೇ ಕಾನೂನಿನ ಅಡಿಯಲ್ಲಿ ಅನರ್ಹರಾಗಿರಬಾರದು. ನಾಮಪತ್ರದೊಂದಿಗೆ ಮತದಾರರಾಗಿದ್ದ ಬಗ್ಗೆ ಸಂಬಂಧಿಸಿದ ಮತದಾರ ನೋಂದಣಾಧಿಕಾರಿ, ಸಹಾಯಕ ನೊಂದಣಾಧಿಕಾರಿಗಳಿಂದ ಮತದಾರ ಪಟ್ಟಿಯ ದೃಡೀಕೃತ ನಕಲನ್ನು ಲಗತ್ತಿಸಬೇಕು.
ಸದರಿ ದ್ವೈವಾರ್ಷಿಕ ಚುನಾವಣೆಗಳಿಗೆ ಸಂಬಂಧಪಟ್ಟ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ನೋಂದಾಯಿತರಾಗಿರುವವರು ಮಾತ್ರ ಮತದಾರರಾಗಿರುತ್ತಾರೆ.
ಸದರಿ ಚುನಾವಣೆಗೆ ಸಂಬಂಧಿಸಿದಂತೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು  ಚುನಾವಣಾಧಿಕಾರಿ ಆಗಿದ್ದು ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳು ಕ್ಷೇತ್ರ ವ್ಯಾಪ್ತಿಗೆ ಬರಲಿವೆ.
ಚುನಾವಣೆಗೆ ಸ್ಪರ್ಧಿಸಲು ಬಯಸುವ ಅಭ್ಯರ್ಥಿಗಳು ಮೇ 16ರಿಂದ 23ರವರಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು.
ಮೇ 22ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಅಂದು ನಾಮಪತ್ರ ಸ್ವೀಕರಿಸಲಾಗುವುದಿಲ್ಲ. ನಾಮಪತ್ರ ಸಲ್ಲಿಕೆಗೆ ಬೇಕಾದ ನಮೂನೆಗಳನ್ನು ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಪಡೆಯಬಹುದು.
ಅಭ್ಯರ್ಥಿಯ ನಾಮನಿರ್ದೇಶನ ಪತ್ರದಲ್ಲಿ  ಕನಿಷ್ಠ 10ಮತದಾರರು ಪ್ರಸ್ತಾಪಕರಾಗಿ ಸಹಿ ಮಾಡಿರಬೇಕು. ಅಭ್ಯರ್ಥಿಯು 10ಸಾವಿರ ರೂ ಠೇವಣಿ ಇಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಂಡಕ್ಕೆ ಸೇರಿದಲ್ಲಿ 5ಸಾವಿರ ರೂ ಠೇವಣಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಂಡಕ್ಕೆ ಸೇರಿದವರು ಜಾತಿ ದೃಢೀಕರಣ ಪತ್ರ ಲಗತ್ತಿಸಬೇಕು.
ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ. ಅಭ್ಯರ್ಥಿಗಳು ನಿಗದಿತ ನಮೂನೆ (ಫಾರಂ 26 ಮತ್ತು ಅನುಬಂಧ 1ರಲ್ಲಿ) ಗಳಲ್ಲಿ ಪ್ರಮಾಣ ಪತ್ರವನ್ನು ನೋಟರಿ ಅವರಿಂದ ಪ್ರಮಾಣೀಕರಿಸಿದ ನಾಮಪತ್ರದೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿಗಳನ್ನು ಸಂರ್ಪಕಿಸಬಹುದೆಂದು ಚುನಾವಣಾಧಿಕಾರಿ ಎ.ಎಂ.ಕುಂಜಪ್ಪ ತಿಳಿಸಿದ್ದಾರೆ.


ಮೇ. 13ರಂದು  ಭಗೀರಥ ಜಯಂತಿ ಆಚರಣೆ: ಕಾರ್ಯಕ್ರಮ ಸ್ಥಳ ಬದಲಾವಣೆ
ಚಾಮರಾಜನಗರ, ಮೇ. 11 - ವಿಧಾನ ಪರಿಷತ್ತಿನ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿಯನ್ನು ಮೇ 13 ರಂದು ನಗರದ  ಜಿಲ್ಲಾಡಳಿತ  ಭವನದ ಆವರಣದಲ್ಲಿರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಶ್ರೀ ಭಗೀರಥರರ ಭಾವಚಿತ್ರದ ಮೆರವಣಿಗೆಯು ಇರುವುದಿಲ್ಲವೆದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು