ಸಹಕಾರ ಸಚಿವ ಮಹದೇವಪ್ರಸಾದ್ ಪುತ್ರನ ಬಿಳಿಕಲ್ಲು ಗಣಿ ಮೇಲೆ ದಾಳಿ ಲಾರಿ ಟಿಪ್ಪರ್ ಜಪ್ತಿ
ಚಾಮರಾಜನಗರ.ಜೂ.13: ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಮತ್ತು ಸಕ್ಕರೆ ಖಾತೆ ಸಚಿವ ಹೆಚ್.ಎಸ್. ಮಹದೇವಪ್ರಸಾದ್ ಪುತ್ರ ಹೆಚ್.ಎಂ. ಗಣೇಶ್‍ಪ್ರಸಾದ್ ಮಾಲಿಕತ್ವದಲ್ಲಿ ನಡೆಯುತ್ತಿದ್ದ ಬಿಳಿಕಲ್ಲು ಗಣಿಗಾರಿಕೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಧಾಳಿ ನಡೆಸಿ, ಟಿಪ್ಪರ್ ಮತ್ತು ಲಾರಿಯನ್ನು ಜಪ್ತಿ ಪಡಿಸಿಕೊಂಡಿದ್ದಾರೆ.
ಗುಂಡ್ಲುಪೇಟೆ ತಾಲ್ಲೂಕಿನ ಬೆಳಚವಾಡಿ ಗ್ರಾಮದ ಸರ್ವೆ ನಂ: 243 ರಲ್ಲಿ ಸಹಕಾರ ಮತ್ತು ಸಕ್ಕರೆ ಖಾತೆ ಸಚಿವ ಹೆಚ್.ಎಸ್. ಮಹದೇವಪ್ರಸಾದ್ ಪುತ್ರ ಹೆಚ್.ಎಂ. ಗಣೇಶ್ ಪ್ರಸಾದ್ ಮಾಲಿಕತ್ವದಲ್ಲಿ ಬಿಳಿಕಲ್ಲು ಗಣಿಗಾರಿಕೆ ನಡೆಯುತ್ತಿತ್ತು ಎಂದು ತಿಳಿದುಬಂದಿದ್ದು ಇದು ಅಕ್ರಮವಾಗಿ ಮಾಡಲಾಗುತ್ತಿದೆ ಎನ್ನುವ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಗುಂಡ್ಲುಪೇಟೆ ಬಿ.ಜೆ.ಪಿ ಮುಖಂಡರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ದಾಳಿ ನಡೆಸಿದರು.
ಸಚಿವ ಮಹದೇವಪ್ರಸಾದ್ ಪುತ್ರ ಗಣೇಶ್ ಪ್ರಸಾದ್ ಮಾಲಿಕತ್ವದಲ್ಲಿರುವ ಜಮೀನು ಸರ್ವೆ ನಂ 243 ರಲ್ಲಿ ಖುಷ್ಕಿ ಜಮೀನು ಹಾಗೂ ಜೋಳ ಬೆಳಸಲಾಗುತ್ತಿದೆ ಎಂದು ಆರ್.ಟಿ.ಸಿಯಲ್ಲಿ ನಮೂದಾಗಿದೆ. ಆದೆ ಇಲ್ಲಿ ಬಿಳಿಕಲ್ಲು ಗಣಿಗಾರಿಕೆ ಮಾಡಲಾಗುತ್ತಿರುವುದು ಬೆಳಕಿಗೆ ಬಂದಿದ್ದು, ಈ ಸ್ಥಳದಲ್ಲಿ 400 ಅಡಿ ವಿಸ್ತೀರ್ಣದಲ್ಲಿ 80 ಅಡಿ ಆಳದಲ್ಲಿ ಗಣಿಗಾರಿಕೆ ನಡೆಸಲಾಗುತ್ತಿದೆ.
ಸ್ಥಳಕ್ಕೆ ದಾಳಿ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕೃಷ್ಣವೇಣಿ ಮತ್ತಿತ್ತರ ಅಧಿಕಾರಿಗಳು ಗಣಿಗಾರಿಯಲ್ಲಿ ತೊಡಗಿದ್ದ ಯಂತ್ರೋಪಕರಣಗಳನ್ನು ಸ್ಥಗಿತಗೊಳಿಸಿ, ಲಾರಿ ಮತ್ತು ಟಿಪ್ಪರ್‍ನ್ನು ಜಪ್ತಿ ಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ
ಜೂ. 14ರಂದು ಮಲೇರಿಯಾ ವಿರೋಧಿ ಮಾಸಾಚರಣೆ ಜಾಥಾ
ಚಾಮರಾಜನಗರ, ಜೂ. - ಆರೋಗ್ಯ ಇಲಾಖೆ ವತಿಯಿಂದ ಮಲೇರಿಯಾ ವಿರೋಧಿ ಮಾಸಾಚರಣೆ ಅಂಗವಾಗಿ ಜೂನ್ 14ರಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಜಾಥಾ ಹೊರಡಲಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಜೂ. 15ರಂದು ಮಹದೇಶ್ವರ ಬೆಟ್ಟದಲ್ಲಿ ಸಿಸಿ ಕ್ಯಾಮರಾ ಸರ್ವರ್ ಲೈನ್, ಅಂಗಡಿ ಮಳಿಗೆಗಳ ಉದ್ಘಾಟನೆ
ಚಾಮರಾಜನಗರ, ಜೂ. -ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಿಸಿ ಕ್ಯಾಮರಾ ಸರ್ವರ್ ಲೈನ್ ಮತ್ತು ಅಂಗಡಿ ಮಳಿಗೆಗಳ ಉದ್ಘಾಟನಾ ಸಮಾರಂಭವು ಜೂನ್ 15ರಂದು ಬೆಳಿಗ್ಗೆ 10.30 ಗಂಟೆಗೆ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಬಯಲು ರಂಗಮಂದಿರ ಆವರಣದಲ್ಲಿ ನಡೆಯಲಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಮುಜರಾಯಿ ಹಾಗೂ ಅಬಕಾರಿ ಸಚಿವರಾದ ಮನೋಹರ ತಹಸೀಲ್ದಾರ್ ದೀಪ ಬೆಳಗಿಸುವರು. ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು. ಸಾಲೂರು ಬೃಹನ್ಮಠ ಅಧ್ಯಕ್ಷರಾದ ಪಟ್ಟದ ಗುರುಸ್ವಾಮಿ ದಿವ್ಯ ಸಾನಿಧ್ಯ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಜಯಣ್ಣ, ಗೋ. ಮಧುಸೂದನ್, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಜಿಲ್ಲಾ ಪಂಚಾಯತ್ ಸದಸ್ಯರಾದ ಇರ್ಷಾದ್ ಭಾನು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾ ರಾಜಣ್ಣ, ಸದಸ್ಯರಾದ ಹಲಗ ತಂಬಡಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರುಕ್ಮಿಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ವಿದ್ಯಾರ್ಥಿನಿಲಯ, ಆಶ್ರಮಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸೂಚನೆ
ಚಾಮರಾಜನಗರ, ಜೂ. 13- ಜಿಲ್ಲೆಯಲ್ಲಿರುವ ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಕ್ರಮವಹಿಸುವಂತೆ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಸೂಚನೆ ನೀಡಿದ್ದಾರೆ.
ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಇಂದು ಭೇಟಿ ನೀಡಿದ ಅವರು ಅಧಿಕಾರಿಗಳಿಗೆ ವಿದ್ಯಾರ್ಥಿನಿಲಯ, ಆಶ್ರಮಶಾಲೆಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.
ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಲ್ಲಿ ಇರುವ ಮಂಜೂರಾತಿ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕಿದೆ. ಕಳೆದ 5 ವರ್ಷಗಳಲ್ಲಿ ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಲ್ಲಿ ಬಂದಿರುವ ಫಲಿತಾಂಶವನ್ನು ಅಧ್ಯಯನ ಮಾಡಿ ಗುಣಮಟ್ಟದ ಶಿಕ್ಷಣ ನೀಡುವ ಸಂಬಂಧ ಯೋಜನೆ ರೂಪಿಸಬೇಕೆಂದು ಉಮಾ ಮಹದೇವನ್ ಅವರು ತಿಳಿಸಿದರು.
ಆಶ್ರಮ ಶಾಲೆ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣಬೇಕು. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಸಮಿತಿಗಳನ್ನು ರಚಿಸಿ ಈ ಕುರಿತ ಮಾಹಿತಿಯನ್ನು ಪ್ರಕಟಣಾ ಫಲಕದಲ್ಲಿ ಪ್ರದರ್ಶಿಸಬೇಕು. ಯಾವುದೇ ವಿದ್ಯಾರ್ಥಿಗೆ ನೋವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗಕ್ಕೆ ಮಹತ್ವ ನೀಡುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿನಿಲಯ, ಆಶ್ರಮಶಾಲೆ ವಿದ್ಯಾರ್ಥಿಗಳಿಗಾಗಿಯೇ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ದಿನಾಚರಣೆ ಹಮ್ಮಿಕೊಳ್ಳಬೇಕು. ಈ ಸಂದರ್ಭದಲ್ಲಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಯುವಜನ ಸೇವಾ ಇಲಾಖೆಯಿಂದ ಸಂಗೀತ ಉಪಕರಣಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಪ್ರಧಾನ ಕಾರ್ಯದರ್ಶಿಯವರು ತಿಳಿಸಿದರು.
ವಿದ್ಯಾರ್ಥಿನಿಲಯಗಳಲ್ಲಿ ನೀಡಲಾಗುತ್ತಿರುವ ಊಟ ಉಪಹಾರಗಳ ಕುರಿತು ಮಾಹಿತಿ ಪಡೆದ ಪ್ರಧಾನ ಕಾರ್ಯದರ್ಶಿಯವರು ಸಂಜೆಯ ವೇಳೆ ಲಘು ಉಪಾಹಾರವನ್ನು ಕಡ್ಡಾಯವಾಗಿ ನೀಡುವಂತೆ ನಿರ್ದೇಶ ನ ನೀಡಿದರು, ಅಲ್ಲದೆ ವಿದ್ಯಾರ್ಥಿನಿಲಯಗಳಲ್ಲಿ ಗ್ರಂಥಾಲಯ ತೆರೆಯುವಂತೆಯೂ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಸಮಾಲೋಚನೆ ನಡೆಸಿದರು. ಪರಿಸರ ಸಂರಕ್ಷಣೆ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಅವರು ವಸತಿ ಶಾಲೆ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯ ಯೋಜನಾಧಿಕಾರಿ ಮಾದೇಶು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ ಜಿ. ಗೌಡ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ, ಇತರೆ ಅಧಿಕಾರಿಗಳು ಹಾಜರಿದ್ದರು.
ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ
ಚಾಮರಾಜನಗರ, ಜೂ. 13 - ನಗರದ ಆದರ್ಶ ಶಾಲೆಯ ವಿದ್ಯಾರ್ಥಿಗಳು 2015-16ನೇ ಸಾಲಿನಲ್ಲಿ ನಡೆದ ಎನ್‍ಎಂಎಂಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಒಟ್ಟು 21 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಪೈಕಿ ಎ. ಇಕ್ರಾ ಐಮನ್, ಬಿ. ಜ್ಯೋತಿ, ಆರ್.ಕೆ. ಕೀರ್ತಿ, ಎಂ. ಮಾಯಾದೇವಿ, ಎಚ್.ಆರ್. ಪ್ರಿಯ, ತಂಜೀಮ್ ಜಗ್ರಾ, ತೇಜಸ್, ವಿರಾಸ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳನ್ನು ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದಿಸಿದ್ದಾರೆಂದು ಶಾಲಾ ಮುಖ್ಯೋಪಾಧ್ಯಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಆಹಾರ ಉತ್ಪನ್ನಗಳ ಕೈಗಾರಿಕಾ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆÀ
ಚಾಮರಾಜನಗರ, ಜೂ. 13- ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಆಶ್ರಯದಲ್ಲಿ ಜುಲೈ ತಿಂಗಳಲ್ಲಿ ಹಮ್ಮಿಕೊಳ್ಳಲಿರುವ ಕೃಷಿ ಮತ್ತು ಆಹಾರ ಉತ್ಪನ್ನಗಳ ಕೈಗಾರಿಕೆ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. 18 ರಿಂದ 40ರ ವಯೋಮಿತಿಯೊಳಗಿರಬೇಕು. ತರಬೇತಿ ಅವಧಿಯಲ್ಲಿ ಸ್ವಂತ ಉದ್ಯೋಗ ಸ್ಥಾಪನೆ, ಬ್ಯಾಂಕು, ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆಯಿಂದ ದೊರೆಯುವ ಹಣಕಾಸು ಸೌಲಭ್ಯ, ಕೃಷಿ ಆಹಾರ ಉತ್ಪನ್ನಗಳ ತಯಾರಿಕೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಗುತ್ತದೆ.
ಆಸಕ್ತರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 331) ಅರ್ಜಿ ಪಡೆದು ಜೂನ್ 20ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರ, ಉಪನಿರ್ದೇಶಕರು ಅಥವಾ ದೂ.ಸಂ. 08226-226346, ಮೊಬೈಲ್ 7760145784 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಗುಂಡ್ಲುಪೇಟೆ : ಪ್ಲಾಸ್ಟಿಕ್ ನಿಷೇಧ ಆದೇಶ ಪಾಲನೆಗೆ ಸೂಚನೆ
ಚಾಮರಾಜನಗರ, ಜೂ. 13 - ಗುಂಡ್ಲುಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಿದ್ದು, ಅಂಗಡಿ ಮಾಲೀಕರು ತಮ್ಮ ಬಳಿಯಿರುವ ಪ್ಲಾಸ್ಟಿಕ್ ವಸ್ತುಗಳನ್ನು 7 ದಿನಗಳ ಒಳಗೆ ವಿಲೇಗೊಳಿಸುವಂತೆ ಸೂಚಿಸಲಾಗಿದೆ.
ಪ್ಲಾಸ್ಟಿಕ್‍ನಿಂದ ತಯಾರಿಸಿದ ಕ್ಯಾರಿ ಬ್ಯಾಗ್, ಭಿತ್ತಿ ಪತ್ರ, ತೋರಣ, ಫ್ಲೆಕ್ಸ್, ಬಾವುಟ, ತಟ್ಟೆ, ಲೋಟ, ಚಮಚ, ಕ್ಲಿಂಗ್ ಫಿಲ್ಕ್ಸ್, ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ, ಥರ್ಮಾಕೋಲ್‍ನಿಂದ ತಯಾರಿಸಿದ ವಸ್ತುಗಳನ್ನು ನಿಷೇಧಿಸಲಾಗಿದೆ. ಪ್ಲಾಸ್ಟಿಕ್ ಬಳಕೆ, ಮಾರಾಟ ಮಾಡುವುದು ಕಂಡುಬಂದಲ್ಲಿ ಕರ್ನಾಟಕ ಮುನಿಸಿಪಲ್ ಕಾಯಿದೆ ಹಾಗೂ ಪರಿಸರ ಸಂರಕ್ಷಣಾ ಕಾಯಿದೆ ಅನ್ವಯ ಮೊಕದ್ದಮೆ ಹೂಡಲು ಕ್ರಮ ವಹಿಸಲಾಗುತ್ತದೆ.
ಅಂಗಡಿ ಮಾಲೀಕರು ಪ್ಲಾಸ್ಟಿಕ್ ನಿಷೇಧಿಸಿದೆ ಎಂಬ ನಾಮಫಲಕಗಳನ್ನು ಅಂಗಡಿಯಲ್ಲಿ ಅಳವಡಿಸಬೇಕು. ಪರಿಸರಕ್ಕೆ ಉಂಟಾಗುವ ಹಾನಿಯನ್ನು ತಡೆಯಲು ಜಾರಿಗೊಳಿಸಿರುವ ಪ್ಲಾಸ್ಟಿಕ್ ನಿಷೇಧ ಕ್ರಮವನ್ನು ಕಟ್ಟುನಿಟ್ಟಾಗಿ ಪಟ್ಟಣ ವ್ಯಾಪ್ತಿ ಪಾಲಿಸುವಂತೆ ಪುರಸಭೆ ಅಧ್ಯಕ್ಷರಾದ ರಮೇಶ್, ಉಪಾಧ್ಯಕ್ಷರಾದ ಎಸ್. ಸುರೇಶ್ ಕುಮಾರ್ ಮತ್ತು ಮುಖ್ಯಾಧಿಕಾರಿ ಎಚ್.ಕೆ. ನಾಗಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಕೊಳ್ಳೇಗಾಲ : ವಿವಿಧ ಕೌಶಲ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 13 :- ಕೊಳ್ಳೇಗಾಲ ನಗರಸಭೆಯು 2016-17ನೇ ಸಾಲಿನಲ್ಲಿ ದೀನ ದಯಾಳ್ ಅಂತ್ಯೋದಯ ಯೋಜನೆ - ನಲ್ಮ್ ಅಭಿಯಾನ ಯೋಜನೆಯಡಿ ವಿವಿಧ ಕೌಶಲ ತರಬೇತಿ ನೀಡಲಿದ್ದು ಪಟ್ಟಣ ವ್ಯಾಪ್ತಿಯ ಯುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
8ನೇ ತರಗತಿ ವಿದ್ಯಾರ್ಹತೆ ಉಳ್ಳವರಿಗೆ ಎಲೆಕ್ಟ್ರಾನಿಕ್ಸ್ ಮತ್ತು ಮೇಂಟೆನೆನ್ಸ್ ಆಫ್ ಮೊಬೈಲ್ ಫೋನ್, ಗಾರ್ಮೆಂಟ್ ಕನ್ಸ್ಟ್ರಕ್ಷನ್ ಟೆಕ್ನಿಕ್ಸ್, ಹ್ಯಾಂಡ್ ಎಂಬ್ರಾಯಿಡರಿ ಜರದೋಸಿ ವರ್ಕ್, ಬ್ಯುಟಿಷಿಯನ್, ದ್ವಿಚಕ್ರ ವಾಹನ ಬೇಸಿಕ್ ಆಟೋಮೊಟಿವ್ ಮತ್ತು ಓವರ್ ಹೌಲಿಂಗ್ ತರಬೇತಿ ನೀಡಲಾಗುತ್ತದೆ.
ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಉಳ್ಳವರಿಗೆ ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್ ವರ್ಕಿಂಗ್, ಡಿಪ್ಲೊಮಾ ಇನ್ ಕಂಪ್ಯೂಟರ್ ಟೀಚರ್ ಟ್ರೈನಿಂಗ್ ಕೋರ್ಸ್, ಕಂಪ್ಯೂಟರ್ ಫಂಡಮೆಂಟಲ್ಸ್ ಮತ್ತು ಎಂಎಸ್ ಆಫೀಸ್, ಇಂಟರ್ ನೆಟ್, ಡಿಟಿಪಿ, ಲಘು ವಾಹನ ಹಾಗೂ ಭಾರಿ ವಾಹನ ಚಾಲನೆ ತರಬೇತಿ ನೀಡಲಾಗುತ್ತದೆ.
ಪಿಯುಸಿ ವಿದ್ಯಾರ್ಹತೆ ಹೊಂದಿರುವವರು ಅಕೌಂಟಿಂಗ್ ಮತ್ತು ಟ್ಯಾಲಿ ವಿಷಯದಲ್ಲಿ ತರಬೇತಿ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಪಡಿತರ ಚೀಟಿ, ಆಧಾರ್ ಕಾರ್ಡ್, ವಿದ್ಯಾರ್ಹತೆ, ಜಾತಿ, ಆದಾಯ ಪ್ರಮಾಣ ಪತ್ರ, ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜೂನ್ 25ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ನಗರಸಭಾ ಕಚೇರಿಯಲ್ಲಿ ಪಡೆಯುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಲ್ಮ್ ಅಭಿಯಾನ ಯೋಜನೆಯಡಿ ಸಾಲ, ಸಹಾಯಧನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 13:- ಕೊಳ್ಳೇಗಾಲ ನಗರಸಭೆಯು ನಲ್ಮ್ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ವೈಯಕ್ತಿಕ ಹಾಗೂ ಗುಂಪು ಉದ್ಯಮ ಶೀಲತೆ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಅರ್ಜಿಗಳನ್ನು ಕಾರ್ಯಪಡೆ ಸಮಿತಿಯಲ್ಲಿಟ್ಟು ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಸದರಿ ಯೋಜನೆಯಲ್ಲಿ ರಚಿಸಿರುವ ಮಹಿಳಾ ಸ್ವಸಹಾಯ ಸಂಘಗಳು ಗುಂಪು ಸಾಲಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಜೂನ್ 25 ಕಡೆಯ ದಿನವಾಗಿದೆ. ವಿವರಗಳಿಗೆ ನಗರಸಭಾ ಕಚೇರಿ ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ರಾಷ್ಟ್ರೀಯ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರ ಸಂಘ ನೋಂದಣಿ ರದ್ದು ಮಾಡಲು ತೀರ್ಮಾನ : ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಜೂ. 13 - ನಗರದ ರಾಷ್ಟ್ರೀಯ ಅಲ್ಪಸಂಖ್ಯಾತರ ವಿವಿದೋದ್ದೇಶ ಸಹಕಾರ ಸಂಘವು ಬೈಲಾ ಪ್ರಕಾರ ಕಾರ್ಯನಿರ್ವಹಿಸದೇ ಇರುವ ಹಿನ್ನೆಲೆಯಲ್ಲಿ ಈ ಸಹಕಾರ ಸಂಘದ ನೋಂದಣಿ ರದ್ದುಗೊಳಿಸುವ ಸಂಬಂಧ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.
ಸಹಕಾರ ಸಂಘ ಕಾರ್ಯಚಟುವಟಿಕೆ ಮುನ್ನಡೆಸಿಕೊಂಡು ಹೋಗಲು ಆಸಕ್ತಿ ಇದ್ದಲ್ಲಿ ಹಾಗೂ ನೋಂದಣಿ ರದ್ದು ಮಾಡುವ ಕುರಿತು ಆಕ್ಷೇಪಣೆ ಇದ್ದಲ್ಲಿ 20 ದಿನಗಳೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಚಾಮರಾಜನಗರದ ಉಪವಿಭಾಗದ ಸಹಕಾರ ಸಂಘಗಳ ನಿಬಂಧಕರ ಕಚೇರಿಗೆ ಮಾಹಿತಿ ಸಲ್ಲಿಸಬಹುದು. ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆ, ಅಹವಾಲು ಸಲ್ಲಿಕೆಯಾಗದಿದ್ದಲ್ಲಿ ಸಂಘದ ನೋಂದಣಿ ರದ್ದು ಮಾಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿನಿಲಯ, ಆಶ್ರಮಶಾಲೆಗಳ ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಸೂಚನೆ
ಚಾಮರಾಜನಗರ, ಜೂ. 13 - ಜಿಲ್ಲೆಯಲ್ಲಿರುವ ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಲ್ಲಿ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಲು ಕ್ರಮವಹಿಸುವಂತೆ ಯೋಜನೆ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಸೂಚನೆ ನೀಡಿದ್ದಾರೆ.
ಗುಂಡ್ಲುಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಇಂದು ಭೇಟಿ ನೀಡಿದ ಅವರು ಅಧಿಕಾರಿಗಳಿಗೆ ವಿದ್ಯಾರ್ಥಿನಿಲಯ, ಆಶ್ರಮಶಾಲೆಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.
ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಲ್ಲಿ ಇರುವ ಮಂಜೂರಾತಿ ಸಂಖ್ಯೆಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ಭರ್ತಿ ಮಾಡಬೇಕಿದೆ. ಕಳೆದ 5 ವರ್ಷಗಳಲ್ಲಿ ವಿದ್ಯಾರ್ಥಿನಿಲಯ, ಆಶ್ರಮ ಶಾಲೆಗಳಲ್ಲಿ ಬಂದಿರುವ ಫಲಿತಾಂಶವನ್ನು ಅಧ್ಯಯನ ಮಾಡಿ ಗುಣಮಟ್ಟದ ಶಿಕ್ಷಣ ನೀಡುವ ಸಂಬಂಧ ಯೋಜನೆ ರೂಪಿಸಬೇಕೆಂದು ಉಮಾ ಮಹದೇವನ್ ಅವರು ತಿಳಿಸಿದರು.
ಆಶ್ರಮ ಶಾಲೆ ವಿದ್ಯಾರ್ಥಿನಿಲಯಗಳಲ್ಲಿ ವಿದ್ಯಾರ್ಥಿಗಳನ್ನು ಸಮಾನವಾಗಿ ಕಾಣಬೇಕು. ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಸಮಿತಿಗಳನ್ನು ರಚಿಸಿ ಈ ಕುರಿತ ಮಾಹಿತಿಯನ್ನು ಪ್ರಕಟಣಾ ಫಲಕದಲ್ಲಿ ಪ್ರದರ್ಶಿಸಬೇಕು. ಯಾವುದೇ ವಿದ್ಯಾರ್ಥಿಗೆ ನೋವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗಕ್ಕೆ ಮಹತ್ವ ನೀಡುವುದರ ಜತೆಗೆ ಪಠ್ಯೇತರ ಚಟುವಟಿಕೆಗಳಿಗೂ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿನಿಲಯ, ಆಶ್ರಮಶಾಲೆ ವಿದ್ಯಾರ್ಥಿಗಳಿಗಾಗಿಯೇ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯಿಂದ ಕ್ರೀಡಾ ದಿನಾಚರಣೆ ಹಮ್ಮಿಕೊಳ್ಳಬೇಕು. ಈ ಸಂದರ್ಭದಲ್ಲಿ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಬೇಕು. ಯುವಜನ ಸೇವಾ ಇಲಾಖೆಯಿಂದ ಸಂಗೀತ ಉಪಕರಣಗಳನ್ನು ಪಡೆದುಕೊಂಡು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು ಎಂದು ಪ್ರಧಾನ ಕಾರ್ಯದರ್ಶಿಯವರು ತಿಳಿಸಿದರು.
ವಿದ್ಯಾರ್ಥಿನಿಲಯಗಳಲ್ಲಿ ನೀಡಲಾಗುತ್ತಿರುವ ಊಟ ಉಪಹಾರಗಳ ಕುರಿತು ಮಾಹಿತಿ ಪಡೆದ ಪ್ರಧಾನ ಕಾರ್ಯದರ್ಶಿಯವರು ಸಂಜೆಯ ವೇಳೆ ಲಘು ಉಪಾಹಾರವನ್ನು ಕಡ್ಡಾಯವಾಗಿ ನೀಡುವಂತೆ ನಿರ್ದೇಶನ ನೀಡಿದರು, ಅಲ್ಲದೆ ವಿದ್ಯಾರ್ಥಿನಿಲಯಗಳಲ್ಲಿ ಗ್ರಂಥಾಲಯ ತೆರೆಯುವಂತೆಯೂ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಅವರು ಸಮಾಲೋಚನೆ ನಡೆಸಿದರು. ಪರಿಸರ ಸಂರಕ್ಷಣೆ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಅವರು ವಸತಿ ಶಾಲೆ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಮುಖ್ಯ ಯೋಜನಾಧಿಕಾರಿ ಮಾದೇಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜೇಶ್ ಜಿ. ಗೌಡ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ, ಇತರೆ ಅಧಿಕಾರಿಗಳು ಹಾಜರಿದ್ದರು.
ವಾಣಿಜ್ಯ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಜೂ. 13 - ನಗರದ ಆದರ್ಶ ವಿದ್ಯಾಲಯದಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ವಾಣಿಜ್ಯ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆಗಳು ಜೂನ್ 13ರಿಂದ ಆರಂಭವಾಗಿದ್ದು, ಜೂನ್ 24ರವರೆಗೆ ನಡೆಯಲಿವೆ. ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಯುವಂತೆ ನೊಡಿಕೊಳ್ಳುವ ಉದ್ದೇಶದಿಂದ ಜೂನ್ 13ರಿಂದ 24ರವರೆಗೆ ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.
ಅಲ್ಲದೆ, ಪರೀಕ್ಷಾಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಸದರಿ ದಿನಗಳಂದು ಬೆಳಿಗ್ಗೆ 9ರಿಂದ ಸಂಜೆ 5.30ರವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿಸಿರುವ ಸಿಬ್ಬಂದಿ ವರ್ಗದವರಿಗೆ ನಿಷೇಧಾಜ್ಞೆ ಆದೇಶವು ಅನ್ವಯವಾಗುವುದಿಲ್ಲವೆಂದು ತಿಳಿಸಲಾಗಿದೆ.
No comments:
Post a Comment