Thursday, 16 June 2016

14-06-2016 ರಿಂದ 16-06-2016 ಚಾಮರಾಜನಗರ [ಪ್ರಮುಖ ಸುದ್ದಿಗಳು (ವಾರ್ತಾಖೆ ಇಲಾಖೆ)








ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ವೈದ್ಯಕೀಯ ಕಾಲೇಜು ತರಗತಿ ಆರಂಭಕ್ಕೆ ಅನುಮತಿ
ಚಾಮರಾಜನಗರ, ಜೂ ನಗರದದ ವೈದ್ಯಕೀಯ ಕಾಲೇಜನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ 150 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಮೂಲಕ ಆರಂಭಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನುಮತಿ ನೀಡಿದೆ. ಹೀಗಾಗಿ ಬಹುನಿರೀಕ್ಷಿತ ವೈದ್ಯಕೀಯ ಕಾಲೇಜು ಆರಂಭದ ಕನಸು ನನಸಾಗಿದೆ.
ಹೊರವಲಯ ಯಡಪುರದಲ್ಲಿ 42 ಎಕರೆ ಪ್ರದೇಶದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಕಾಲೇಜು ಕಟ್ಟಡ, ವಿದ್ಯಾರ್ಥಿ, ವಿದ್ಯಾರ್ಥಿನಿಯರ ನಿಲಯ, ಭೋದಕ ವೈದ್ಯರು, ಶೂಶ್ರುಷಕರು, ಡಿ ಗ್ರೂಪ್ ನೌಕರರ ವಸತಿ ಗೃಹಗಳು ನಿರ್ಮಾಣಗೊಂಡಿದೆ. 2014ರ ಸೆಪ್ಟೆಂಬರ್‍ನಲ್ಲಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದುವರೆಗೆ ಭಾರತೀಯ ವೈದ್ಯಕೀಯ ಮಂಡಳಿ(ಎಂ.ಸಿ.ಎ) ಕಾಲಕಾಲಕ್ಕೆ ಪರಿಶೀಲನೆ ನಡೆಸಿ ಅಂತಿಮವಾಗಿ ಕಾಲೇಜಿಗೆ ಕಲ್ಪಿಸಿರುವ ಸೌಲಭ್ಯಗಳನ್ನು ಮನಗಂಡು 2016-17ನೇ ಸಾಲಿನಲ್ಲಿ ಕಾಲೇಜು ಪ್ರವೇಶ ಆರಂಭಕ್ಕೆ ಶಿಫಾರಸು ಮಾಡಿತು. ಈ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವೈದ್ಯಕೀಯ ಕಾಲೇಜು ಆರಂಭಿಸಲು ಅಧಿಕೃತವಾಗಿ ಅನುಮತಿ ನೀಡಿದೆ. ಅನುಮತಿ ಪತ್ರವನ್ನು ಜೂನ್ 13ರಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ)ಗೆ ಕಳುಹಿಸಿದೆ.
ಒಟ್ಟು 150 ವಿದ್ಯಾರ್ಥಿಗಳಿಗೆ 2016-17ನೇ ಸಾಲಿಗೆ ಪ್ರವೇಶ ನೀಡಲು ಅನುಮತಿಸಿರುವ ಇಲಾಖೆಯು ಶೇ. 15ರಷ್ಟು ವೈದ್ಯಕೀಯ ಸೀಟುಗಳನ್ನು ಆಲ್ ಇಂಡಿಯಾ ಕೋಟಾಗೆ ಮೀಸಲಿಡುವಂತೆ ಸೂಚಿಸಿದೆ.
ಭಾರತೀಯ ವೈದ್ಯಕೀಯ ಮಂಡಳಿ(ಎಂ.ಸಿ.ಎ) ನಿಯಮಾವಳಿ ಪ್ರಕಾರ ವೈದ್ಯಕೀಯ ಕಾಲೇಜು ಅಧ್ಯಯನಕ್ಕೆ ಕನಿಷ್ಟ 300 ಹಾಸಿಗೆ ಹಾಗೂ ಅದಕ್ಕೆ ಪೂರಕವಾಗಿರುವ ಚಿಕಿತ್ಸೆ ಸೌಲಭ್ಯಗಳನ್ನೊಳಗೊಂಡ ಆಸ್ಪತ್ರೆ ಅಗತ್ಯವಿತ್ತು. ಆದರೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಆರಂಭದಲ್ಲಿ 150 ಹಾಸಿಗೆ ಹಾಗೂ ಅದಕ್ಕೆ ಅಗತ್ಯವಿರುವ ಸೌಲಭ್ಯಗಳು ಮಾತ್ರ ಲಭ್ಯವಿದ್ದವು. ಇದರಿಂದ ವೈದ್ಯಕೀಯ ಕಾಲೇಜು ಆರಂಭsವಾಗಲು ಸಾಧ್ಯವಾಗುವುದಿಲ್ಲವೆಂಬ ಸಂಗತಿಯನ್ನು ಮನಗಂಡು ಜಿಲ್ಲಾ ಆಸ್ಪತ್ರೆಯನ್ನು ಪ್ರಸ್ತುತ 330 ಹಾಸಿಗೆ ಸಾಮಥ್ರ್ಯವುಳ್ಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ. ಹೆಚ್ಚಳಕ್ಕೆ ಅನುಗುಣವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ 5 ಆಪರೇಷನ್ ಥಿಯೇಟರ್, ಮೂರು ಎಕ್ಷರೇ ಮಿಷನ್, 2 ಅಲ್ಟ್ರಾ ಸ್ಕ್ಯಾನಿಂಗ್ ಮಿಷನ್, ಸೆಂಟರ್ ಅಪರೇಟಡ್ ಆಕ್ಷಿಜನ್ ಸಿಸ್ಟಮ್, ಎಲೆಕ್ಟ್ರಾನಿಕ್ ಲಾಂಡ್ರಿ ಸೇರಿದಂತೆ ಅವಶ್ಯಕ ಸೌಕರ್ಯಗಳನ್ನು ಕಲ್ಪಿಸಲಾಯಿತು.
ವೈದ್ಯಕೀಯ ಕಾಲೇಜಿನಲ್ಲಿ ಒಟ್ಟು 8 ವಿಭಾಗಗಳು ಅಂದರೆ ಅನಾಟಮಿ, ಫಿಸಿಯೋಲಜಿ, ಬಯೋಕೆಮಿಸ್ಟ್ರಿ, ಕಮ್ಯೂನಿಟಿ ಮೆಡಿಸನ್, ಫಾರ್ಮೋಕಾಲಜಿ, ಫೆಥಾಲಜಿ, ಮೈಕ್ರೋಬಯಾಲಜಿ, ಪೊರೆನ್ಸಿಕ್ ಮೆಡಿಸನ್ ಅಧ್ಯಯನಕ್ಕೆ ಸಿದ್ಧವಾಗಿವೆ. ಒಟ್ಟು 24 ಪ್ರಯೋಗಾಲಯಗಳಿಗೂ ವ್ಯವಸ್ಥೆ ಮಾಡಲಾಗಿದೆ.
ಕಾಲೇಜು ಆರಂಭಕ್ಕೆ ಅಗತ್ಯವಿರುವ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಈಗಾಗಲೇ ನೇಮಕವಾಗಿದ್ದಾರೆ. ಒಟ್ಟು 105 ಭೋದಕ ವೈದ್ಯರು, 175 ಶುಶ್ರೂಷಕ ಸಿಬ್ಬಂದಿ, 100 ಪ್ಯಾರ ಮೆಡಿಕಲ್, ಇತರೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಸುಮಾರು 5 ಕೋಟಿ ರೂ. ವೆಚ್ಚದ ಪೀಠೋಪಕರಣ ಹಾಗೂ ಪಾಠೋಪಕರಣ ಸಾಮಗ್ರಿ ಖರೀದಿ ಪ್ರಕ್ರಿಯೆ ಪ್ರಗತಿಯಲ್ಲಿದೆ.
ತಲಾ 165 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಹಾಸ್ಟಲ್ ಸೌಲಭ್ಯ ಕಲ್ಪಿಸಲು ಕಟ್ಟಡ ಸಿದ್ಧವಿದೆ. ಮುಂಬರುವ ದಿನಗಳಿಗೆ ಅನುಗುಣವಾಗಿ 650 ವಿದ್ಯಾರ್ಥಿಗಳು ಉಳಿದು ವ್ಯಾಸಂಗ ಮಾಡಲು ಅನುಕೂಲವಿರುವ ಸೌಕರ್ಯಗಳನ್ನು ಒದಗಿಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಟ್ಟಾರೆ ಈ ಶೈಕ್ಷಣಿಕ ಸಾಲಿನಲ್ಲಿಯೆ ಕಾಲೇಜು ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಯನ್ನು ಪೂರಕವಾಗಿ ಕೈಗೊಳ್ಳಲಾಗಿದೆ.
ಎಂ.ಸಿ.ಎ ಮಾರ್ಗಸೂಚಿಯನ್ವಯ ಮುಂಬರುವ ವರ್ಷಗಳಲ್ಲಿ ಕಾಲೇಜು ವಿದ್ಯಾರ್ಥಿಗಳ ಅಧ್ಯಯನಕ್ಕೆ 750 ಹಾಸಿಗೆ ಹಾಗೂ ಅವಶ್ಯಕ ಸೌಕರ್ಯಗಳನ್ನೊಳಗೊಂಡ ಆಸ್ಪತ್ರೆಯನ್ನು ನಿರ್ಮಾಣ ಮಾಡಬೇಕಿದೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ ಕಾಲೇಜು ಕಟ್ಟಡ ಕೆಲಸ ಪೂರ್ಣಗೊಂಡಿದ್ದು ಸುಣ್ಣ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ. ಒಟ್ಟಾರೆ ಈ ಶೈಕ್ಷಣಿಕ ಸಾಲಿನಲ್ಲಿಯೆ ಕಾಲೇಜು ಆರಂಭಕ್ಕೆ ಬೇಕಿರುವ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ ಎಂದು ವೈದ್ಯಕೀಯ ಕಾಲೇಜು ಡೀನ್ ಡಾ. ಚಂದ್ರಶೇಖರ್ ಹೇಳಿದ್ದಾರೆ.
ನಗರದಲ್ಲಿ ವೈದ್ಯಕೀಯ ಕಾಲೇಜು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಆರಂಭಿಸಲು ಅನುಮತಿ ಸಿಕ್ಕಿರುವುದು ಸಂತಸದ ವಿಷಯವಾಗಿದೆ. 150 ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಕೂಲ ಕಲ್ಪಿಸಿದ್ದು, ಕಾಲೇಜು ಕಾರ್ಯಾರಂಭವಾಗುತ್ತಿರುವುದು ಜಿಲ್ಲೆಯ ಅಭಿವೃದ್ಧಿಯಲ್ಲಿ ಮೈಲುಗಲ್ಲಾಗಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಹರ್ಷ ವ್ಯಕ್ತಪಡಿಸಿದ್ದಾರೆ.


ಅತ್ಯಾಚಾರ ಎಸಗಿದ ಅಪರಾಧಿಗೆ ಕಠಿಣ ಶಿಕ್ಷೆ
ಚಾಮರಾಜನಗರ, ಜೂ. 14 - ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಪ್ರದಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಹಾಗೂ 3000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ತಾಲೂಕಿನ ಚಾಟೀಪುರ ಗ್ರಾಮದ ಅಬ್ದುಲ್ ರಿಯಾಜ್ ಅಲಿಯಾಸ್ ರಿಯಾಜ್ ಪಾಶಾ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ನೊಂದ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿದ್ದಲ್ಲದೆ ಮದುವೆಯಾಗುತ್ತೇನೆಂದು ನಂಬಿಸಿ ಅತ್ಯಾಚಾರ ಮಾಡಿದ್ದು ಆಕೆ ಗರ್ಭಿಣಿಯಾಗಲು ಕಾರಣವಾಗಿದ್ದನು. ಈ ವಿಚಾರ ಯಾರಿಗೂ ಹೇಳಬಾರದು. ಈ ವಿಷಯ ಬಾಯಿಬಿಟ್ಟಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದು ಸದರಿ ಪ್ರಕರಣವು ದೃಢಪಟ್ಟ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಪ್ರಕರಣದ ಅಪರಾಧಿಗೆ ಪೋಕ್ಸೋ ಕಾಯಿದೆಯಡಿ 10 ವರ್ಷ ಕಠಿಣ ಶಿಕ್ಷೆ ಹಾಗೂ 3000 ರೂ. ದಂಡವನ್ನು ವಿಧಿಸಿ ಕಳೆದ ಜೂನ್ 10ರಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಸ್. ನಾಗರಾಜು ಕಾಮಗೆರೆ ವಾದ ಮಂಡಿಸಿದ್ದರೆಂದು ಪ್ರಕಟಣೆ ತಿಳಿಸಿದೆ.
ಕಟ್ಟಡ ಕಲ್ಲು ಸಾಗಣೆ ಲಾರಿ ವಶ : ಗಣಿ ಭೂವಿಜ್ಞಾನ ಇಲಾಖೆ ಸ್ಪಷ್ಟನೆ
ಚಾಮರಾಜನಗರ, ಜೂ. 14:- ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ, ಕೂತನೂರು, ಬೆಳಚಲವಾಡಿ ಇನ್ನಿತರ ಗ್ರಾಮಗಳಲ್ಲಿ ಕಟ್ಟಡ ಕಲ್ಲಿನ ಗಣಿಗಾರಿಕಾ ಪ್ರದೇಶಗಳಲ್ಲಿ ಜೂನ್ 13ರಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಕೃಷ್ಣವೇಣಿ ಅವರು ತಪಾಸಣೆ ಮಾಡುವ ಸಂದರ್ಭದಲ್ಲಿ ರವಿಕುಮಾರ್ ಎಂಬುವವರಿಗೆ ಸೇರಿದ 2 ಲಾರಿಗಳಲ್ಲಿ (ಕೆಎಲ್ 41 ಎ 2509 ಮತ್ತು ಕೆಎ 3 ಸಿ 5359) ಪರವಾನಗಿ ಇಲ್ಲದೆ ಕಟ್ಟಡ ಕಲ್ಲು ಸಾಗಿಸುತ್ತಿದ್ದರಿಂದ ಅವುಗಳನ್ನು ವಶಕ್ಕೆ ಪಡೆದು ಪ್ರತಿ ಲಾರಿಗೆ 10 ಸಾವಿರ ರೂ. ದಂಡ ವಿಧಿಸಲಾಗಿದೆ.
ವಾರಸುದಾರರಾದ ರವಿಕುಮಾರ್ ಅವರು ದಂಡ ಪಾವತಿಸಿದ್ದು ಲಾರಿಗಳನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಪತ್ರಿಕೆಗಳಲ್ಲಿ ವರದಿಯಾಗಿರುವಂತೆ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಹದೇವಪ್ರಸಾದ್ ಅಥವಾ ಗಣೇಶ್ ಪ್ರಸಾದ್ ಅವರಿಗಾಗಲೀ ಸಂಬಂಧ ಇರುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ್ಲ ಸ್ಪಷ್ಟಪಡಿಸಿದ್ದಾರೆ.

ಜುಲೈ15ರಿಂದ ಮಕ್ಕಳ ಚಲನಚಿತ್ರೋತ್ಸವ: ಪೂರ್ವಭಾವಿ ಸಭೆಯಲ್ಲಿ ತೀರ್ಮಾನ

ಚಾಮರಾಜನಗರ, ಜೂ. 14 :- ಜಿಲ್ಲೆಯಲ್ಲಿ ಮಕ್ಕಳ ಚಲನಚಿತ್ರೋತ್ಸವವನ್ನು ಜುಲೈ15ರಿಂದ 21ರವರೆಗೆ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣ ಕೊರ್ಲಾಪಾಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಚಿತ್ರೋತ್ಸವ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾಡಳಿತ,ಸಾರ್ವಜನಿಕ ಶಿಕ್ಷಣ ಇಲಾಖೆ,ಚಿಕ್ಕಬಳ್ಳಾಪುರದ ಕರ್ನಾಟಕ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಮಕ್ಕಳ ಚಿತ್ರಸಂಸ್ಥೆ ಆಶ್ರಯದಲ್ಲಿ ನಾಲ್ಕು ತಾಲ್ಲೂಕಿನ ವಿವಿಧ ಚಿತ್ರಮಂದಿರಗಳಲ್ಲಿ ಮಕ್ಕಳ ಚಲನಚಿತ್ರ ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲು ನಿರ್ಣಯ ಕೈಗೊಳ್ಳಲಾಯಿತು.
 ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಅವರು ವಿದ್ಯಾರ್ಥಿಗಳಿಗೆ ಪ್ರವೇಶ  ಟಿಕೇಟ್ ದರವನ್ನು 10ರೂ.ಗೆ ನಿಗದಿ ಮಾಡಬೇಕು.ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಚಲನಚಿತ್ರ ವೀಕ್ಷಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳನ್ನು ಮಾಡಬೇಕೆಂದು ಸೂಚಿಸಿದರು.
  ಉತ್ತಮ ಸಾಮಾಜಿಕ ಸಂದೇಶ ಸಾರುವ ಸದಭಿರುಚಿಯ ಚಲನಚಿತ್ರಗಳನ್ನು ಪ್ರದರ್ಶಿಸಬೇಕು.ಚಲನಚಿತ್ರಗಳ ಪಟ್ಟಿಯನ್ನು ಪರಿಶೀಲಿಸಿ ಉತ್ತಮ ಚಿತ್ರವನ್ನು ಆಯ್ಕೆ ಮಾಡಿಕೊಳ್ಳಬೇಕು.ಮಕ್ಕಳ ಮನಸ್ಸಿನಲ್ಲಿ ನೆನಪು ಉಳಿಯುವ ಚಿತ್ರಗಳ ಪ್ರದರ್ಶನಕ್ಕೆ ಏರ್ಪಾಡು  ಮಾಡುವಂತೆ ತಿಳಿಸಿದರು.
   ಸಾರ್ವತ್ರಿಕ ರಜೆ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಂದು ಚಿತ್ರ ಪ್ರದರ್ಶನ ವೀಕ್ಷಣೆಗೆ ವೇಳಾಪಟ್ಟಿ ನಿಗದಿಮಾಡಿಕೊಳ್ಳಬೇಕು. ಚಿತ್ರಮಂದಿರದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ.ಆಯಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರೆ ಅಧಿಕಾರಿಗಳು ಶಾಲಾ ಮಕ್ಕಳಿಗೆ ಚಿತ್ರೋತ್ಸವದ ಬಗ್ಗೆ ಪೂರ್ವಭಾವಿಯಾಗಿ ಮಾಹಿತಿ ನೀಡಬೇಕು ಎಂದು ಹೆಪ್ಸಿಬಾ ರಾಣಿ ತಿಳಿಸಿದರು.
  ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪಿ.ಮಮತಾ,ತಹಶೀಲ್ದಾರರಾದ ಎಂ.ಮಹದೇವು,ಮಹದೇವಯ್ಯ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಭಾಸ್ಕರ್, ಕರ್ನಾಟಕ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಮಕ್ಕಳ ಚಿತ್ರಸಂಸ್ಥೆ  ವ್ಯವಸ್ಥಾಪಕರಾದ ಎಸ್.ರಮೇಶ್,ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿಗಳು, ಚಲನಚಿತ್ರ ಮಂದಿರದ ಮಾಲೀಕರು,ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.



ಗಮನ ಸೆಳೆದ ಮಲೇರಿಯಾ  ವಿರೋಧಿ ಜಾಗೃತಿ ಜಾಥಾ

ಚಾಮರಾಜನಗರ, ಜೂ. 14 - ರಾಷ್ಟ್ರೀಯ ಮಲೇರಿಯಾ  ವಿರೋಧಿ ಮಾಸಾಚರಣೆ ಅಂಗವಾಗಿ ನಗರದಲ್ಲಿಂದು ಮಲೇರಿಯಾ  ರೋಗ ತಡೆ  ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
 ನಗರದ ಚಾಮರಾಜೇಶ್ವರ ದೇವಾಲಯದ ಬಳಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣ ಕೊರ್ಲಾಪಾಟಿ ಅವರು ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
 ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರೋಗ ನಿಯಂತ್ರಣಕ್ಕೆ ಜನರಿಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು.ಮಳೆಗಾಲ ಸಂದರ್ಭದಲ್ಲಿ ವಿಶೇಷವಾಗಿ ಈ ರೋಗ ತಡೆಗೆ ಮುನ್ನೆಚ್ಚರಿಕೆ ವಹಿಸಬೇಕಿದೆ.ಸೊಳ್ಳೆಗಳ ನಿಯಂತ್ರಿಸುವ ಮೂಲಕ ರೋಗ ಹರಡದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ ಎಂದರು.
 ರೋಗ ಹತೋಟಿಗೆ ಆರೋಗ್ಯ ಇಲಾಖೆ ಮುಂಜಾಗರೂಕತೆ  ವಹಿಸಬೇಕು. ಆರೋಗ್ಯ ಇಲಾಖೆಯ ಸೌಲಭ್ಯಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಜಿ.ಪಂ ಸಿಇಓ ತಿಳಿಸಿದರು.
 ಬಳಿಕ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ  ನಡೆಸಿದರು. ದೊಡ್ಡಂಗಡಿ ಬೀದಿ,ಚಿಕ್ಕಂಗಡಿ ಬೀದಿ,ಸಂತೇಮರಹಳ್ಳಿ ವೃತ್ತ,ಪಚ್ಚಪ್ಪ ವೃತ್ತ,ಜೋಡಿರಸ್ತೆ ಮೂಲಕ ಸಾಗಿ ಬಂದ ಜಾಥಾ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದ ಬಳಿ ಸಮಾವೇಶಗೊಂಡಿತು.
 ಇದೇ ವೇಳೆ ಮಾತನಾಡಿದ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅನಿಲ್ ಕುಮಾರ್ ರೋಗ ಹರಡದಂತೆ ವಹಿಸಬೇಕಿರುವ ಮುನ್ನಚ್ಚರಿಕೆ ಬಗ್ಗೆ ಹೆಚ್ಚು ನಿಗಾ ವಹಿಸಬೇಕಿದೆ.ಸೊಳ್ಳೆಗಳಿಂದ ಹರಡುವ ಕಾಯಿಲೆ ತಡೆಯಲು ಮನೆಗಳಲ್ಲಿ ಸೊಳ್ಳೆ ಪರದೆ,ಇತರೆ ರಕ್ಷಣಾ ಕ್ರಮಗಳನ್ನು ಸ್ವಯಂಪ್ರೇರಿತವಾಗಿ ಜನರು ತೆಗೆದುಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಪಾಂಡುವಿಜಯನ್,ಜಿಲ್ಲಾ ಸರ್ವೆಲೆನ್ಸ್ ಅಧಿಕಾರಿ ಡಾ.ನಾಗರಾಜು,ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಮಹದೇವು,ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿಗಳು ದೊರೆಸ್ವಾಮಿ ನಾಯಕ,ಇತರರು ಹಾಜರಿದ್ದರು.



ಜೂ. 17ರಂದು ನಗರದಲ್ಲಿ ದೇವರಾಜ ಅರಸು ನಮನ ಗೀತ ನೃತ್ಯ ರೂಪಕ
ಚಾಮರಾಜನಗರ, ಜೂ. 15 - ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದೇ ಪ್ರಸಿದ್ಧರಾಗಿದ್ದ ಡಿ. ದೇವರಾಜ ಅರಸು ಅವರ ಜೀವನದ ಸಂಪೂರ್ಣ ಚಿತ್ರಣವನ್ನು ಪ್ರಸ್ತುತ ಪಡಿಸುವ ನೃತ್ಯ ರೂಪಕ ಕಾರ್ಯಕ್ರಮವನ್ನು ಜೂನ್ 17ರಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾಡಳತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರಿನ ನೃತ್ಯರೂಪಕ ತಂಡದ ನಿರ್ದೇಶಕಿ ರೂಪಾರಾಜೇಶ್ ಅವರ ನಿರ್ದೇಶನದಲ್ಲಿ ಡಿ. ದೇವರಾಜ ಅರಸು ನಮನ ನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶಿತವಾಗಲಿದೆ. ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅರಸು ಅವರ ಬದುಕು ಚಿತ್ರಣವನ್ನು ಸಮಗ್ರವಾಗಿ ನೃತ್ಯ ರೂಪಕದ ಮುಖೇನ ಜನರಿಗೆ ತಲುಪಿಸುವ ಮಹದಾಸೆಯೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿತವಾಗಿದೆ.
ನೃತ್ಯರೂಪಕ ಪ್ರದರ್ಶನವನ್ನು ದೇವರಾಜ ಅರಸು ಅವರ ಅಭಿಮಾನಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ನಾಗರಿಕರು ವೀಕ್ಷಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-222180 ಅಥವಾ ಮೊಬೈಲ್ 9480817623 ಸಂಪರ್ಕಿಸಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಜೂ. 18ರಂದು ನಂಜುಂಡಪ್ಪ ವರದಿ ಶಿಫಾರಸು ಅನುಷ್ಠಾನ ಉನ್ನತ ಅಧಿಕಾರಿ ಸಮಿತಿ ಸಭೆ
ಚಾಮರಾಜನಗರ, ಜೂ. 15 - ಡಾ. ಡಿ.ಎಂ. ನಂಜುಂಡಪ್ಪ ವರದಿ ಶಿಫಾರಸುಗಳ ಅನುಷ್ಠಾನ ಉನ್ನತ ಅಧಿಕಾರಿ ಸಮಿತಿಯ ಅಧ್ಯಕ್ಷರಾದ ವೆಂಕಟರಾವ್ ಘÉೂೀರ್ಪಡೆ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಜೂನ್ 18ರಂದು ಬೆಳಿಗ್ಗೆ 10.30 ಗಂಟೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 16ರಂದು ಕೊತ್ತಲವಾಡಿ ಗ್ರಾಮದಲ್ಲಿ ಅಂಚೆ ಸಂತೆ
ಚಾಮರಾಜನಗರ, ಜೂ. 15:- ಅಂಚೆ ಇಲಾಖೆಯು ಗುಂಡ್ಲುಪೇಟೆ ತಾಲ್ಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಜೂನ್ 16ರಂದು ಅಂಚೆ ಸಂÀತೆ ಕಾರ್ಯಕ್ರಮವನ್ನು  ಹಮ್ಮಿಕೊಂಡಿದೆ.
ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ದಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ,  ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ  ಜೀವವಿಮೆ ಮತ್ತು  ಅಂಚೆ ಜೀವವಿಮೆ ಇನ್ನಿತರ ಅಂಚೆ ಇಲಾಖೆಯ ಸಂಬಂಧ ಯೋಜನೆಗಳನ್ನು ಸ್ಥಳದಲ್ಲೇ  ಸ್ವಿಕರಿಸಲಾಗುತ್ತದೆ.
ಸುತ್ತಮುತ್ತಲ ಗ್ರಾಮಸ್ಥರು ಅಂಚೆ ಸಂತೆ ಕಾರ್ಯಕ್ರಮದ  ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ವಿಭಾಗದ ಅಧೀಕ್ಷರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಯುವ ಬರಹಗಾರರ ಚೊಚ್ಚಲ ಕೃತಿ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 15 :- ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2015ನೆ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ನೀಡುವ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಕನಿಷ್ಟ 18 ರಿಂದ 35ರ ವಯೋಮಿತಿಯವರಾಗಿರಬೇಕು. ಸ್ವವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್ ಎಸ್ ಎಲ್ ಸಿ ಪ್ರಮಾಣ ಪತ್ರದ ನಕಲು ಪ್ರತಿ ಅಥವಾ ಅಧಿಕೃತವಾದ ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ಚೊಚ್ಚಲ ಕೃತಿಯಾಗಿದ್ದು ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.
ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ಧಕ್ಕೆ ತರುವಂತಹ ವಿಷಯ ಸಂಗತಿಗಳು ಪ್ರಸ್ತಾಪವಾಗಿರಬಾರದು.
ಅರ್ಜಿಗಳನ್ನು ಜೂನ್ 30ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು - 560002 ಇಲ್ಲಿಗೆ ಕಳುಹಿಸಿಕೊಡಬೇಕು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-22484516 ಮತ್ತು 22017704 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮರು ಮೌಲ್ಯಮಾಪನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಜೂ. 15  - ಕಳೆದ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಯ ಮರುಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 16ರವರೆಗೆ ವಿಸ್ತರಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ಪೋಷಕರ ಕೋರಿಕೆಯ ಮೇರೆಗೆ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಚಲನ್ ಡೌನ್‍ಲೋಡ್ ಮಾಡಿಕೊಂಡು ಬ್ಯಾಂಕ್ ವ್ಯವಹಾರದ ಸಮಯದಲ್ಲಿ ಶುಲ್ಕ ಪಾವತಿಸಬಹುದೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಯಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಜೂ. 17ರಂದು ಗುಂಡ್ಲುಪೇಟೆ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 15 :- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಜೂನ್ 17ರಂದು ಗುಂಡ್ಲುಪೇಟೆ ವಿದ್ಯುತ್ ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಗುಂಡ್ಲುಪೇಟೆ, ಹಂಗಳ, ತೆರಕಣಾಂಬಿ, ಬೊಮ್ಮಲಾಪುರ, ಬೇಗೂರು, ಕಬ್ಬಳ್ಳಿ, ಹರವೆ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂ. 17ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜೂ. 15 - ತಾಲೂಕಿನ ಅಟ್ಟುಗೂಳಿಪುರ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಜೂನ್ 17ರಂದು ಕೈಗೊಳ್ಳಲಾಗಿದೆ. ಹೀಗಾಗಿ ಸಿದ್ದಯ್ಯನಪುರ, ಹೊಂಗಲವಾಡಿ, ಕೋಳೀಪಾಳ್ಯ, ಬಂದೀಗೌಡನಹಳ್ಳಿ, ಅಟ್ಟುಗೂಳಿಪುರ, ಎನ್‍ಜೆವೈ, ದೊಡ್ಡಮೋಳೆ ಪ್ರದೇಶಗಳಿಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರಾಟೆ ತರಬೇತಿ ನೀಡಲು ತರಬೇತುದಾರರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 17ಇಂದು ಶ್ರೀ ಮಹದೇವ ಆರ್ಟ್ ಗ್ಯಾಲರಿ ಉದ್ಘಾಟನೆ(ಜೂನ್-16-2016), ಚಾಮರಾಜನಗರ ಜಿಲ್ಲೆ ಕಲೆ, ಸಾಹಿತ್ಯ, ಸಂಸ್ಕøತಿ ಜನಪದದಲ್ಲಿ ಇಡೀ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ರಾಜಾವಳಿ ಕಥೆಯ ದೇವಚಂದ್ರ ಮೊಟ್ಟಮೊದಲ ಕವಯತ್ರಿ ಸಂಚಿ ಹೊನ್ನಮ್ಮ, ಮುಪ್ಪಿನ ಷಡಕ್ಷರಿ, ನಿಂಗನ ಶಿವಯೋಗಿಗಳು, ನಾಟಕಕಾರ ಸಂಸ, ಕರ್ನಾಟಕ ರತ್ನ ಡಾ|| ರಾಜ್ ಕುಮಾರ್ ಅಲ್ಲದೇ ಮಹದೇಶ್ವರ, ಮಂಟೆಸ್ವಾಮಿ ಇವರೆಲ್ಲರೂ ನಮ್ಮ ಜಿಲ್ಲೆಯವರನ್ನುವುದು ಹೆಮ್ಮೆಯ ವಿಷಯವಾಗಿದೆ. ಶೇಕಡ 65% ರಷ್ಟು ಕಾಡಿನ ಸಂಪತ್ತು ಹೊಂದಿರುವ ಈ ಜಿಲ್ಲೆಯಲ್ಲಿ ಚಿತ್ರ ಕಲಾವಿದರಿಗಾಗಿಯೇ ಮೊಟ್ಟಮೊದಲ ಬಾರಿಗೆ ಒಂದು ಆರ್ಟ್ ಗ್ಯಾಲರಿಯನ್ನು  ಶ್ರೀ ಮಹದೇವ ಆರ್ಟ್ ಗ್ಯಾಲರಿ ಎಂಬ ಹೆಸರಿನಲ್ಲಿ ಇದೇ ಜೂನ್ 16,2016ರಂದು ಪ್ರಾರಂಭ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ ಪ್ರತಿಭಾನ್ವಿತ ಚಿತ್ರಕಲಾವಿದರಿಗೆ ಚಿತ್ರಕಲಾ ಪ್ರದರ್ಶನಕ್ಕೆ ಸ್ಥಳಾವಕಾಶ ಕಲ್ಪಿಸುವುದು, ಮಕ್ಕಳಿಗೆ ಚಿತ್ರಕಲಾ ಪ್ರಾತ್ಯಸ್ಥಿಕೆ, ಪ್ರದರ್ಶನ, ಸ್ಪರ್ಧೆಗಳು ಹೀಗೆ ಪ್ರತಿಭಾ ಪುರಸ್ಕಾರಕ್ಕೆ ಹಾಗೂ ಕಲೆ ಕಲಾವಿದರ ಅಭಿವೃದ್ದಿಗಾಗಿ ಈ ಆರ್ಟ್ ಗ್ಯಾಲರಿ ವೇದಿಕೆ ಮಾಡಿಕೊಡಲಾಗಿದೆ.
ಇದರ ಉದ್ಘಾಟನೆಯನ್ನು ಕರ್ನಾಟಕ ಲಲಿತಾಕಲಾ ಅಕಾಡೆಮಿ ಅಧ್ಯಕ್ಷರಾದ ಡಾ.ಎಂ.ಎಸ್.ಮೂರ್ತಿರವರ ನೆರವೇರಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ.ರಾಮಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ರಂಗವಾಹಿನಿ ಸಂಸ್ಥೆ ಅಧ್ಯಕ್ಷರಾದ ಸಿ.ಎಂ. ನರಸಿಂಹಮೂರ್ತಿ, ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಸಿ.ರಾಜಶೇಖರ, ಸಂಗಮ ಸೌಹಾರ್ದ ಸಹಕಾರ ನಿಯಮತ ಅಧ್ಯಕ್ಷ ಡಿ.ನಾಗಸುಂದರ್ ಭಾಗವಹಿಸಲಿದ್ದಾರೆ. ಅಂದು ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಚಿತ್ರಕಲಾವಿದರ ಸಮೂಹ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ. ದಯಮಾಡಿ ಕಲಾಪ್ರೇಮಿಗಳು ತಪ್ಪದೇ ಆಗಮಿಸಬೇಕೆಂದು ಶ್ರೀ ಮಹದೇವ ಆರ್ಟ್ ಗ್ಯಾಲರಿಯ ಸಂಸ್ಥಾಪಕರಾದ ಸಿ.ಎಂ. ಮಹೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.
:- ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ವತಿಯಿಂದ ಜಿಲ್ಲೆಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲು ಉದ್ದೇಶಿಸಿದ್ದು ಅರ್ಹ ಬ್ಲಾಕ್ ಬೆಲ್ಟ್ ತರಬೇತುದಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತುದಾರರು ಶಾಲೆಗಳಿಗೆ ಭೇಟಿನೀಡಿ ತರಬೇತಿ ನೀಡಬೇಕಿದೆ. 3 ತಿಂಗಳ ಅವಧಿಗೆ ಪ್ರತಿ ಶಾಲೆಗೆ 4500 ರೂ. ಗೌರವಧನ ನೀಡಲಾಗುತ್ತದೆ. ಪ್ರಾಢಶಾಲಾ ಮುಖ್ಯ ಶಿಕ್ಷಕರು ಶಾಲಾ ಹಂತದಲ್ಲಿಯೇ ಅರ್ಹ ತರಬೇತುದಾರರನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಆಸಕ್ತ ತರಬೇತುದಾರರು ಗುರುತಿನ ಚೀಟಿ, ಆಧಾರ್ ಕಾರ್ಡ್, ಇಬ್ಬರು ಸ್ಥಳೀಯ ಗಣ್ಯ ವ್ಯಕ್ತಿಗಳ ಪರಿಚಯ ಪತ್ರ, ಇತರೆ ವಿವರಗಳೊಂದಿಗೆ ಜೂನ್ 23ರೊಳಗೆ ತಾವು ಇಚ್ಚಿಸುವ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರಿಗೆ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದ ಉಪಯೋಜನಾ ಸಮನ್ವಯ ಅಧಿಕಾರಿ ಶಿವಕುಮಾರ್ (ಮೊಬೈಲ್ 7411615546) ಅವರನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಪುನರ್ವಸತಿ ಕೇಂದ್ರ ಪ್ರಾರಂಭಿಸಲು ಪ್ರಸ್ತಾವನೆ ಆಹ್ವಾನ
ಚಾಮರಾಜನಗರ, ಜೂ. 15 - ಜಿಲ್ಲಾ ಕೇಂದ್ರದಲ್ಲಿ ಎಲ್ಲಾ ಸ್ವರೂಪದ ವಿಕಲಚೇತನರಿಗೆ ವೈದ್ಯಕೀಯ, ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಪುರ್ನವಸತಿ ಕೇಂದ್ರವನ್ನು ನಡೆಸಲು ಬಯಸುವ ಸ್ವಯಂ ಸೇವಾಸಂಸ್ಥೆ, ವೈದ್ಯಕೀಯ ಮಹಾವಿದ್ಯಾಲಯಗಳಿಂದ ಪ್ರಸ್ತಾವನೆ ಆಹ್ವಾನಿಸಲಾಗಿದೆ.
ಚಾಮರಾಜನಗರ ಪಟ್ಟಣದಲ್ಲಿ ಪುನರ್ವಸತಿ ಕೇಂದ್ರ ನಡೆಸಬೇಕಿದೆ. ವಿಕಲಚೇತನರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ, ಉತ್ತಮ ಸೇವೆ ಸಲ್ಲಿಸುತ್ತಿರುವ ವೈದ್ಯಕೀಯ ಸೌಲಭ್ಯ, ಆಸ್ಪತ್ರೆ ಸೌಕರ್ಯ ಹೊಂದಿರುವ ಸ್ವಯಂ ಸೇವಾ ಸಂಸ್ಥೆ ಅಥವಾ ವೈದ್ಯಕೀಯ ಮಹಾವಿದ್ಯಾಲಯ ಪ್ರಸ್ತಾವನೆ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು  ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನೊಳಗೊಂಡ ಪ್ರಸ್ತಾವನೆ ಸಲ್ಲಿಸಲು ಜೂನ್ 30 ಕಡೆಯ ದಿನವಾಗಿದೆ. ವಿವರಗಳಿಗೆ ಸದರಿ ಕಚೇರಿ ಅಥವಾ ದೂ.ಸಂ.08226-223688 ಸಂಪರ್ಕಿಸುವಂತೆ ಪ್ರಭಾರ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಪೃಥ್ವಿದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಚಾಮರಾಜನಗರ, ಜೂ. 17ಇಂದು ಶ್ರೀ ಮಹದೇವ ಆರ್ಟ್ ಗ್ಯಾಲರಿ ಉದ್ಘಾಟನೆ(ಜೂನ್-16-2016), ಚಾಮರಾಜನಗರ ಜಿಲ್ಲೆ ಕಲೆ, ಸಾಹಿತ್ಯ, ಸಂಸ್ಕøತಿ ಜನಪದದಲ್ಲಿ ಇಡೀ ವಿಶ್ವದಲ್ಲೇ ಹೆಸರುವಾಸಿಯಾಗಿದೆ. ರಾಜಾವಳಿ ಕಥೆಯ ದೇವಚಂದ್ರ ಮೊಟ್ಟಮೊದಲ ಕವಯತ್ರಿ ಸಂಚಿ ಹೊನ್ನಮ್ಮ, ಮುಪ್ಪಿನ ಷಡಕ್ಷರಿ, ನಿಂಗನ ಶಿವಯೋಗಿಗಳು, ನಾಟಕಕಾರ ಸಂಸ, ಕರ್ನಾಟಕ ರತ್ನ ಡಾ|| ರಾಜ್ ಕುಮಾರ್ ಅಲ್ಲದೇ ಮಹದೇಶ್ವರ, ಮಂಟೆಸ್ವಾಮಿ ಇವರೆಲ್ಲರೂ ನಮ್ಮ ಜಿಲ್ಲೆಯವರನ್ನುವುದು ಹೆಮ್ಮೆಯ ವಿಷಯವಾಗಿದೆ. ಶೇಕಡ 65% ರಷ್ಟು ಕಾಡಿನ ಸಂಪತ್ತು ಹೊಂದಿರುವ ಈ ಜಿಲ್ಲೆಯಲ್ಲಿ ಚಿತ್ರ ಕಲಾವಿದರಿಗಾಗಿಯೇ ಮೊಟ್ಟಮೊದಲ ಬಾರಿಗೆ ಒಂದು ಆರ್ಟ್ ಗ್ಯಾಲರಿಯನ್ನು  ಶ್ರೀ ಮಹದೇವ ಆರ್ಟ್ ಗ್ಯಾಲರಿ ಎಂಬ ಹೆಸರಿನಲ್ಲಿ ಇದೇ ಜೂನ್ 16,2016ರಂದು ಪ್ರಾರಂಭ ಮಾಡುತ್ತಿದ್ದೇವೆ. ಜಿಲ್ಲೆಯಲ್ಲಿ ಪ್ರತಿಭಾನ್ವಿತ ಚಿತ್ರಕಲಾವಿದರಿಗೆ ಚಿತ್ರಕಲಾ ಪ್ರದರ್ಶನಕ್ಕೆ ಸ್ಥಳಾವಕಾಶ ಕಲ್ಪಿಸುವುದು, ಮಕ್ಕಳಿಗೆ ಚಿತ್ರಕಲಾ ಪ್ರಾತ್ಯಸ್ಥಿಕೆ, ಪ್ರದರ್ಶನ, ಸ್ಪರ್ಧೆಗಳು ಹೀಗೆ ಪ್ರತಿಭಾ ಪುರಸ್ಕಾರಕ್ಕೆ ಹಾಗೂ ಕಲೆ ಕಲಾವಿದರ ಅಭಿವೃದ್ದಿಗಾಗಿ ಈ ಆರ್ಟ್ ಗ್ಯಾಲರಿ ವೇದಿಕೆ ಮಾಡಿಕೊಡಲಾಗಿದೆ.
ಇದರ ಉದ್ಘಾಟನೆಯನ್ನು ಕರ್ನಾಟಕ ಲಲಿತಾಕಲಾ ಅಕಾಡೆಮಿ ಅಧ್ಯಕ್ಷರಾದ ಡಾ.ಎಂ.ಎಸ್.ಮೂರ್ತಿರವರ ನೆರವೇರಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ.ರಾಮಚಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ರಂಗವಾಹಿನಿ ಸಂಸ್ಥೆ ಅಧ್ಯಕ್ಷರಾದ ಸಿ.ಎಂ. ನರಸಿಂಹಮೂರ್ತಿ, ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಸಿ.ರಾಜಶೇಖರ, ಸಂಗಮ ಸೌಹಾರ್ದ ಸಹಕಾರ ನಿಯಮತ ಅಧ್ಯಕ್ಷ ಡಿ.ನಾಗಸುಂದರ್ ಭಾಗವಹಿಸಲಿದ್ದಾರೆ. ಅಂದು ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಚಿತ್ರಕಲಾವಿದರ ಸಮೂಹ ಚಿತ್ರಕಲಾ ಪ್ರದರ್ಶನ ಏರ್ಪಡಿಸಲಾಗಿದೆ. ದಯಮಾಡಿ ಕಲಾಪ್ರೇಮಿಗಳು ತಪ್ಪದೇ ಆಗಮಿಸಬೇಕೆಂದು ಶ್ರೀ ಮಹದೇವ ಆರ್ಟ್ ಗ್ಯಾಲರಿಯ ಸಂಸ್ಥಾಪಕರಾದ ಸಿ.ಎಂ. ಮಹೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.


ಜೂ. 17ರಂದು ವಸತಿಶಾಲೆ ಪ್ರವೇಶಕ್ಕೆ 2ನೇ ಹಂತದ ಕೌನ್ಸೆಲಿಂಗ್
ಚಾಮರಾಜನಗರ, ಜೂ.15 (- 2016-17ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ವಸತಿ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಉಳಿದಿರುವ ಸೀಟುಗಳನ್ನು ಹಂಚಿಕೆ ಮಾಡಲು 2ನೇ ಹಂತದ ಕೌನ್ಸೆಲಿಂಗ್ ಅನ್ನು ಜೂನ್ 17ರಂದು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ ಎಚ್ ಪಟೇಲ್ ಸಭಾಂಗಣದಲ್ಲಿ ನಡೆಸಲಾಗುತ್ತದೆ.
ವಿದ್ಯಾರ್ಥಿಗಳು ಅಗತ್ಯ ಮೂಲ ದಾಖಲೆಗಳೊಂದಿಗೆ ಕೌನ್ಸೆಲಿಂಗ್‍ಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ ಜಿ ಗೌಡ  ತಿಳಿಸಿದ್ದಾರÉ.



ಜೂ. 17ರಂದು ನಗರದಲ್ಲಿ ದೇವರಾಜ ಅರಸು ನಮನ ಗೀತ ನೃತ್ಯ ರೂಪಕ
ಚಾಮರಾಜನಗರ, ಜೂ. :- ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದೇ ಪ್ರಸಿದ್ಧರಾಗಿದ್ದ ಡಿ. ದೇವರಾಜ ಅರಸು ಅವರ ಜೀವನದ ಸಂಪೂರ್ಣ ಚಿತ್ರಣವನ್ನು ಪ್ರಸ್ತುತ ಪಡಿಸುವ ನೃತ್ಯ ರೂಪಕ ಕಾರ್ಯಕ್ರಮವನ್ನು ಜೂನ್ 17ರಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾಡಳತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರಿನ ನೃತ್ಯರೂಪಕ ತಂಡದ ನಿರ್ದೇಶಕಿ ರೂಪಾರಾಜೇಶ್ ಅವರ ನಿರ್ದೇಶನದಲ್ಲಿ ಡಿ. ದೇವರಾಜ ಅರಸು ನಮನ ನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶಿತವಾಗಲಿದೆ. ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅರಸು ಅವರ ಬದುಕು ಚಿತ್ರಣವನ್ನು ಸಮಗ್ರವಾಗಿ ನೃತ್ಯ ರೂಪಕದ ಮುಖೇನ ಜನರಿಗೆ ತಲುಪಿಸುವ ಮಹದಾಸೆಯೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿತವಾಗಿದೆ.
ನೃತ್ಯರೂಪಕ ಪ್ರದರ್ಶನವನ್ನು ದೇವರಾಜ ಅರಸು ಅವರ ಅಭಿಮಾನಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ನಾಗರಿಕರು ವೀಕ್ಷಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-222180 ಅಥವಾ ಮೊಬೈಲ್ 9480817623 ಸಂಪರ್ಕಿಸಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಪ್ರತಿಷ್ಠಿತ ಶಾಲೆಗಳಿಗೆ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಸೇರ್ಪಡೆ ಸೌಲಭ್ಯ : ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 16 - ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಿಗೆ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳನ್ನು 6ನೇ ತರಗತಿ ಪ್ರವೇಶಕ್ಕೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಸೇರ್ಪಡೆ ಮಾಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಕೊಳ್ಳೇಗಾಲ ಪಟ್ಟಣದ ಎಸ್‍ಡಿಎ ಇಂಗ್ಲೀಷ್ ಹೈಸ್ಕೂಲ್ (ಸವೆಂತ್ ಡೇ ಇಂಗ್ಲೀಷ್ ಹೈಸ್ಕೂಲ್), ಹನೂರಿನ ವಿವೇಕಾನಂದ ಹೆಚ್‍ಪಿಎಸ್ ಶಾಲೆಗೆ ಪ್ರವೇಶ ಕಲ್ಪಿಸಲಾಗುತ್ತದೆ.
ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಗೊಲ್ಲ, ಹೆಳವ, ಬುಡಬುಡಿಕೆ, ಬುಂಡಬೆಸ್ತ, ದರ್ವೇಸ್, ಬಾಜಿಗರ್, ದೊಂಬಿದಾಸ, ಜೋಗಿ, ಬೈರಾಗಿ, ಗೋಂದಳಿ ಇನ್ನಿತರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಪ್ರವೇಶ ಪಡೆದ ವಿದ್ಯಾರ್ಥಿಗಳ ಶಾಲಾ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ, ಇತರ ವೆಚ್ಚವನ್ನು ಇಲಾಖೆಯೇ ಭರಿಸಲಿದೆ. ವಸತಿ ಶಾಲೆಯಾಗಿದ್ದಲ್ಲಿ, ವಸತಿ ಹಾಗೂ ಭೋಜನಾ ವೆಚ್ಚವನ್ನು ಭರಿಸಲಾಗುತ್ತದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 30ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಅಥವಾ ದೂ.ಸಂಖ್ಯೆ 08226-222180 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಕಲಚೇತನರಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ, ಶುಲ್ಕ ಮರುಪಾವತಿ : ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 16 - ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಕಲಚೇತನರಿಗೆ ನೀಡುವ ವಿದ್ಯಾರ್ಥಿ ವೇತನ, ಪ್ರೋತ್ಸಾಹಧನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ.
1ನೇ ತರಗತಿಯಿಂದ ವಿಶ್ವವಿದ್ಯಾಲಯ ಮಟ್ಟದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಎಸ್‍ಎಸ್‍ಎಲ್‍ಸಿ ಹಾಗೂ ನಂತರದ ಪರೀಕ್ಷೆಗಳಲ್ಲಿ ಶೇ. 60ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಕೊಡಲಾಗುತ್ತದೆ. ಅಲ್ಲದೆ ಎಸ್‍ಎಸ್‍ಎಲ್‍ಸಿ ನಂತರದ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಅವರು ಪಾವತಿಸಿರುವ ಶುಲ್ಕವನ್ನು ಮರುಪಾವತಿಸಲಾಗುತ್ತದೆ.
ಅರ್ಜಿ ನಮೂನೆಗಳನ್ನು ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಅಥವಾ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಬಳಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 25ರೊಳಗೆ ಸಲ್ಲಿಸಬೇಕು. ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿಗಳ ಕಚೇರಿಗೆ (ದೂ.ಸಂ. 08226-223688 ಮತ್ತು 224688) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನಿರುದ್ಯೋಗಿ ಅಭ್ಯರ್ಥಿಗಳಿಗೆ ಉಚಿತ ಸಾಫ್ಟ್ ಸ್ಕಿಲ್ ತರಬೇತಿ
ಚಾಮರಾಜನಗರ, ಜೂ. 16- ನಗರದಲ್ಲಿರುವ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಪದವೀಧರ ನಿರುದ್ಯೋಗಿ ಅಭ್ಯರ್ಥಿಗಳಿಗಾಗಿ ಸಾಫ್ಟ್ ಸ್ಕಿಲ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತರು ಜೂನ್ 30ರ ಒಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಾನವ ಸಂಪನ್ನೂಲ ಅಭಿವೃದ್ಧಿ ಕೇಂದ್ರದಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ವಿವರಗಳಿಗೆ ಜಿಲ್ಲಾ ಉದ್ಯೋಗ ಅಧಿಕಾರಿ (ದೂ.ಸಂ. 08226-224430) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 1- ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಿಲ್ಲಾ ಕೈಗಾರಿಕಾ ಕೇಂದ್ರವು 2016-17ನೇ ಸಾಲಿಗೆ ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆಯಡಿ ನೀಡುವ ಸಾಲಸೌಲಭ್ಯಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಥಮ ಪೀಳಿಗೆ ಉದ್ಯಮಶೀಲರಿಗೆ ಪ್ರತಿ ಘಟಕಕ್ಕೆ ಗರಿಷ್ಟ 10 ಲಕ್ಷ ರೂಗಳನ್ನು ಕಿರು ಉತ್ಪಾದನಾ ಘಟಕ ಹಾಗೂ ಸೇವಾ ಉದ್ಯಮ ಪ್ರಾರಂಭಿಸಲು ಹಣಕಾಸು ಸಂಸ್ಥೆಗಳ ಮೂಲಕ ಸಾಲ ನೀಡಲಾಗುತ್ತದೆ.
ಸಾಮಾನ್ಯ ವರ್ಗದ ಉದ್ಯಮಶೀಲರಿಗೆ ಯೋಜನಾ ವೆಚ್ಚದ ಶೇ. 25ರಷ್ಟು (ಗರಿಷ್ಟ 2 ಲಕ್ಷ 50 ಸಾವಿರ ರೂ) ವಿಶೇಷ ವರ್ಗದ ಉದ್ಯಮಶೀಲರಿಗೆ ಶೇ. 35ರಷ್ಟು (ಗರಿಷ್ಟ 3 ಲಕ್ಷ 50 ಸಾವಿರ ರೂ) ಸಹಾಯಧನವನ್ನು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ನೀಡಲಾಗುತ್ತದೆ.
ಅಭ್ಯರ್ಥಿಗಳು 21 ರಿಂದ 35ರ ವಯೋಮಿತಿಯವರಾಗಿರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ. ಹಿಂದುಳಿದ ವರ್ಗ, ಅಲ್ಪಸಂಖ್ಯಾತರು, ಮಾಜಿ ಯೋಧರು, ಅಂಗವಿಕಲರು ಹಾಗೂ ಮಹಿಳೆಯರಾಗಿದ್ದಲ್ಲಿ ಗರಿಷ್ಟ ವಯೋಮಿತಿ 45 ವರ್ಷಗಳೆಂದು ನಿಗದಿ ಮಾಡಲಾಗಿದೆ. 8ನೇ ತರಗತಿ ತೇರ್ಗಡೆಯಾಗಿರಬೇಕು. ಯಾವುದೇ ಆದಾಯ ಮಿತಿ ಇರುವುದಿಲ್ಲ. ಯಾವುದೇ ಗ್ರಾಮೀಣ ಪ್ರದೇಶ ಮತ್ತು 2001ರ ಜನಗಣತಿ 20 ಸಾವಿರ ಜನರಿಗಿಂತ ಕಡಿಮೆ ಇರುವ ಪಟ್ಟಣವೆಂದು ವರ್ಗೀಕರಿಸಿರುವ ಪ್ರದೇಶದಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿಯನ್ನು ವೆಬ್ ಸೈಟ್ ತಿತಿತಿ.emegಠಿ.ಞಚಿಡಿ.ಟಿiಛಿ.iಟಿ ಮೂಲಕ ಆನ್‍ಲೈನ್‍ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 16 ಕಡೆಯ ದಿನವಾಗಿದೆ. ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ಖಾದಿ ಗ್ರಾಮದ್ಯೋಗ ಮಂಡಳಿ ಅಧಿಕಾರಿ ಅವರಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಜೂ. 22ರಂದು ರಫ್ತು ಜಾಗೃತಿ ಶಿಬಿರ : ನೋಂದಣಿಗೆ ಮನವಿ
ಚಾಮರಾಜನಗರ, ಜೂ. 1- ಕೈಗಾರಿಕೋದ್ಯಮಿಗಳು ಹಾಗೂ ವಾಣಿಜ್ಯೋದ್ಯಮಿಗಳಿಗಾಗಿ ರಫ್ತು ಉತ್ತೇಜನಾ ಕ್ರಮಗಳ ಕುರಿತ ಜಾಗೃತಿ ಶಿಬಿರವನ್ನು ಜೂನ್ 22ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘ, ಜಿಲ್ಲಾ ಗ್ರಾನೈಟ್ ಉದ್ಯಮಗಳ ಸಂಘÀ ಮತ್ತು ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ರಫ್ತು ಜಾಗೃತಿ ಶಿಬಿರ ಏರ್ಪಾಡಾಗಿದೆ.
ಶಿಬಿರಕ್ಕೆ ಉಚಿತ ಪ್ರವೇಶವಿದೆ. ರಫ್ತು ಚಟುವಟಿಕೆಗಳನ್ನು ಕೈಗೊಳ್ಳುವವರಿಗೆ ಶಿಬಿರವು ಪ್ರಯೋಜನಕಾರಿಯಾಗಲಿದೆ. ರಫ್ತು ಕಾರ್ಯಕ್ರಮಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ. ಜಿಲ್ಲೆಯ ಉದ್ಯಮಿಗಳು, ವಾಣಿಜ್ಯದಾರರು ಶಿಬಿರದ ಸದುಪಯೋಗ ಮಾಡಿಕೊಳ್ಳಬೇಕು. ಆಸಕ್ತಿ ಉಳ್ಳವರು ಮೈಸೂರಿನಲ್ಲಿರುವ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದಲ್ಲಿ ಜೂನ್ 18ರೊಳಗೆ ನೋಂದಣಿ ಮಾಡಿಕೊಳ್ಳಬೇಕು. ವಿವರಗಳಿಗೆ ದೂ. ಸಂಖ್ಯೆ 0821-4253409, ಮೊಬೈಲ್ 9731938421 ಅಐವಾ ಇ ಮೇಲ್ vಣಠಿಛಿmಥಿsoಡಿe@gmಚಿiಟ.ಛಿom ಸಂಪರ್ಕಿಸುವಂತೆ ವಿಟಿಟಿಸಿ ಶಾಖಾ ವ್ಯವಸ್ಥಾಪಕರಾದ ಎಚ್. ವರದರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜೂ. 18ರಂದು ನಂಜುಂಡಪ್ಪ ವರದಿ ಶಿಫಾರಸು ಅನುಷ್ಠಾನ ಉನ್ನತ ಅಧಿಕಾರಿ ಸಮಿತಿ ಸಭೆ
ಚಾಮರಾಜನಗರ, ಜೂ. 1- ಡಾ. ಡಿ.ಎಂ. ನಂಜುಂಡಪ್ಪ ವರದಿ ಶಿಫಾರಸುಗಳ ಅನುಷ್ಠಾನ ಉನ್ನತ ಅಧಿಕಾರಿ ಸಮಿತಿಯ ಅಧ್ಯಕ್ಷರಾದ ವೆಂಕಟರಾವ್ ಘÉೂೀರ್ಪಡೆ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯು ಜೂನ್ 18ರಂದು ಬೆಳಿಗ್ಗೆ 10.30 ಗಂಟೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 23ರಂದು ಕೊಳ್ಳೇಗಾಲ ತಾಲೂಕಿನ ಮಂಗಲದಲ್ಲಿ ಅಂಚೆ ಸಂತೆ
ಚಾಮರಾಜನಗರ, ಜೂ. 16 - ಅಂಚೆ ಇಲಾಖೆ ವತಿಯಿಂದ ಅಂಚೆ ಸಂತೆ ಕಾರ್ಯಕ್ರಮವನ್ನು ಜೂನ್ 23ರಂದು ಕೊಳ್ಳೇಗಾಲ ತಾಲೂಕು ಕಾಮಗೆರೆ ಹೋಬಳಿಯ ಮಂಗಲ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂಚೆ ಸಂತೆಯಲ್ಲಿ ಅಂಚೆ ಕಚೇರಿಯ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ ಮತ್ತು ಇತರೆ ಅಂಚೆ ಜೀವವಿಮೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ಸುತ್ತಮುತ್ತಲ ಗ್ರಾಮಸ್ಥರು ಅಂಚೆ ಸಂತೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ವಿಭಾಗದ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೂ. 17, 18 ರಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 16-  ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಡಾ|| ಎಲ್ ಹನುಮಂತಯ್ಯ ಅವರು ಜೂನ್ 17 ಹಾಗೂ 18 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜೂನ್ 17 ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೆಗಾಲಕ್ಕೆ ಆಗಮಿಸುವರು. 11.30 ಗಂಟೆಗೆ ಸಾಹಿತಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರನ್ನು ಭೇಟಿ ಮಾಡುವರು ಮತ್ತು ಗಡಿಸಮಸ್ಯಗಳ ಬಗ್ಗೆ ಚರ್ಚೆ ನಡೆಸುವರು. ಅಂದು ಕೊಳ್ಳೆಗಾಲದ ಸರ್ಕಾರಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು. ಜೂನ್ 18 ರಂದು ಬೆಳಿಗ್ಗೆ 8 ಗಂಟೆಗೆ  ಬೆಂಗಳೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು