ಸ್ತ್ರೀಶಕ್ತಿ ಭವನ ಮಾರುಕಟ್ಟೆ ಮಳಿಗೆ ಹಂಚಿಕೆ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಮೇ. 26 ):- ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಗರದಲ್ಲಿ ನಿರ್ಮಾಣಮಾಡಿರುವ ಸ್ತ್ರೀಶಕ್ತಿ ಭವನದ ಮಾರುಕಟ್ಟೆ ಮಳಿಗೆಗಳನ್ನು ಬಾಡಿಗೆ ಆಧಾರದಲ್ಲಿ ಹಂಚಿಕೆ ಮಾಡುವ ಸಂಬಂಧ ಕರೆಯಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 6ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಈಹಿಂದೆ ಮೇ 20ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಅವಧಿಯೊಳಗೆ ಸಾಕಷ್ಟು ಅರ್ಜಿಗಳು ಬರದ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 6ರವರೆಗೂ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮೇ 28ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಮೇ. 26:- ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ 28ರಂದು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಬೆಂಡರವಾಡಿ, ಪಣ್ಯದಹುಂಡಿ, ಬದನಗುಪ್ಪೆ, ಇಂಡಸ್ಟ್ರಿಯಲ್ ಎನ್‍ಜೆವೈ, ಕೆಲ್ಲಂಬಳ್ಳಿ ಪ್ರದೇಶಗಳಿಗೆ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಹರದನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೋಂದಣಿ ರದ್ದುಗೊಳಿಸಲು ಪ್ರಸ್ತಾವನೆ
ಚಾಮರಾಜನಗರ, ಮೇ. 26 :- ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಬೈಲಾ ಪ್ರಕಾರ ಕಾರ್ಯನಿರ್ವಹಿಸದೇ ನಿಷ್ಕ್ರಿಯವಾಗಿರುವ ಹಿನ್ನೆಲೆಯಲ್ಲಿ ನೋಂದಣಿ ರದ್ದುಗೊಳಿಸುವ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ.
ಸಹಕಾರ ಸಂಘದ ಮೂಲ ಉದ್ದೇಶ ಈಡೇರಿಸುವಲ್ಲಿ ವಿಫಲವಾಗಿದ್ದು ಯಾವುದೇ ಚಟುವಟಿಕೆಗಳನ್ನು ನಡೆಸದೇ ಇರುವುದು ಗಮನಕ್ಕೆ ಬಂದಿದೆ. ಹೀಗಾಗಿ ಕರ್ನಾಟಕ ರಾಜ್ಯ ಸಹಕಾರ ಸಂಘಗಳ ಕಾಯಿದೆ 1959 ಮತ್ತು ನಿಯಮ 1960ರಡಿ ಸದರಿ ಸಂಘದ ನೋಂದಣಿ ರದ್ದುಗೊಳಿಸುವ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ಈ ಸಂಘದ ಕಾರ್ಯಚಟುವಟಿಕೆಗಳನ್ನು ಮುನ್ನಡೆಸಿಕೊಂಡು ಹೋಗಲು ಆಸಕ್ತಿ ಇದ್ದಲ್ಲಿ ಹಾಗೂ ರದ್ದುಗೊಳಿಸುವ ಕ್ರಮದ ಬಗ್ಗೆ ಆಕ್ಷೇಪಣೆ ಇದ್ದಲ್ಲಿ 20 ದಿನಗಳ ಒಳಗೆ ಅಗತ್ಯ ದಾಖಲಾತಿಗಳೊಂದಿಗೆ ನಗರದ ಉಪವಿಭಾಗದ ಸಹಕಾರ ಸಂಘಗಳ ನಿಬಂಧಕರ ಕಚೇರಿಗೆ ಮಾಹಿತಿ ಒದಗಿಸಬೇಕು. ಇಲ್ಲವಾದಲ್ಲಿ ಸಂಘದ ನೋಂದಣಿ ರದ್ದು ಮಾಡಲು ಸಕ್ಷಮ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದೆಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 26 - ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಲಭ್ಯವಿರುವ ವಿವಿಧ ವೃತ್ತಿ ತರಬೇತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಗುಂಡ್ಲುಪೇಟೆ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಮತ್ತು ಕೋಪಾ ವಿಷಯಗಳಲ್ಲಿ ಸೀಟುಗಳು ಲಭ್ಯವಿದೆ. ಕೊಳ್ಳೇಗಾಲ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕಟಿಂಗ್ ಅಂಡ್ ಸೀವಿಂಗ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಮತ್ತು ಫಿಟ್ಟರ್ ವಿಷಯಗಳಲ್ಲಿ ಸೀಟುಗಳು ಲಭ್ಯವಿದೆ.
ಕಟಿಂಗ್ ಅಂಡ್ ಸೀವಿಂಗ್ ವಿಷಯಕ್ಕೆ ಎಸ್ ಎಸ್ ಎಲ್ ಸಿ ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು. ಉಳಿದ ವಿಷಯಗಳಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಕೆಗೆ ಜೂನ್ 6 ಕಡೆಯ ದಿನವಾಗಿದೆ. ವಿವರಗಳಿಗೆ ವೆಬ್ ಸೈಟ್ ತಿತಿತಿ.emಠಿಣಡಿg.ಞಚಿಡಿ.ಟಿiಛಿ.iಟಿ ಮತ್ತು ವೆಬ್ ಸೈಟ್ ತಿತಿತಿ.ಜeಣಞಚಿಡಿಟಿಚಿಣಚಿಞಚಿ.oಡಿg.iಟಿ ನೋಡಬಹುದು. ಅಲ್ಲದೆ ಗುಂಡ್ಲುಪೇಟೆ ಮತ್ತು ಕೊಳ್ಳೇಗಾಲದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರನ್ನು (ದೂ.ಸಂ.08229-222853, ಮೊಬೈಲ್ 9900251218 ಮತ್ತು 8453875110) ಸಂಪರ್ಕಿಸಿ ಮಾಹಿತಿ ಪಡೆಯಬಹುದೆಂದು ಪ್ರಕಟಣೆ ತಿಳಿಸಿದೆ.
ಆಹಾರಧಾನ್ಯ ವಿತರಣೆ ಸಾಗಾಣಿಕೆಗೆ ಪರವಾನಗಿ ಕಡ್ಡಾಯ
ಚಾಮರಾಜನಗರ, ಮೇ. 26 - ಜಿಲ್ಲೆಯಲ್ಲಿರುವ ಎಲ್ಲಾ ಸಗಟು ಆಹಾರಧಾನ್ಯ ಮಾರಾಟಗಾರರು, ಸಾಗಾಣಿಕೆ ಗುತ್ತಿಗೆದಾರರು ಹಾಗೂ ಚಿಲ್ಲರೆ, ನ್ಯಾಯಬೆಲೆ ಅಂಗಡಿಯವರು ಕಡ್ಡಾಯವಾಗಿ ಪರವಾನಗಿ ಪಡೆದುಕೊಂಡು ಉದ್ದಿಮೆ ನಡೆಸುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸೂಚಿಸಿದೆ.
ಪರವಾನಗಿ ಪಡೆಯದೆ ಆಹಾರಧಾನ್ಯ ವಿತರಣೆ ಅಥವಾ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ ಅನುಸಾರ ಅಗತ್ಯ ಕ್ರಮ ಜರುಗಿಸಲಾಗುತ್ತದೆಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಆರ್. ರಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೃಷಿ ಆಹಾರ ಉತ್ಪನ್ನಗಳ ಕೈಗಾರಿಕೆ ಕೌಶಲ್ಯ ಉದ್ಯಮಶೀಲತಾ ತರಬೇತಿ
ಚಾಮರಾಜನಗರ, ಮೇ. 26:- ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಸಿಡಾಕ್ ಆಶ್ರಯದಲ್ಲಿ ಕೃಷಿ ಮತ್ತು ಆಹಾರ ಉತ್ಪನ್ನಗಳ ಕೈಗಾರಿಕೆ ಕುರಿತ ಕೌಶಲ್ಯ ಆಧಾರಿತ ಉದ್ಯಶೀಲತಾ ತರಬೇತಿಯನ್ನು ನಗರದಲ್ಲಿ ಆಯೋಜಿಸಲಾಗಿದೆ.
ತರಬೇತಿ ಪಡೆಯಲು ಇಚ್ಚಿಸುವವರು ಅರ್ಜಿ ಸಲ್ಲಿಸಬೇಕಿದೆ.ಕನಿಷ್ಟ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿದ್ದು 18 ರಿಂದ 40ರ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ತರಬೇತಿ ಪಡೆಯಬಹುದು.
ತರಬೇತಿ ಅವಧಿಯಲ್ಲಿ ಕೃಷಿ ಮತ್ತು ಆಹಾರ ಉತ್ಪನ್ನಗಳ ತಯಾರಿಕೆಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ ನೀಡಲಾಗುತ್ತದೆ. ಜತೆಗೆ ಬ್ಯಾಂಕು ಮತ್ತು ಕೈಗಾರಿಕೆ ವಾಣಿಜ್ಯ ಇಲಾಖೆಯಿಂದ ದೊರೆಯುವ ಹಣಕಾಸು ನೆರವು ಕುರಿತು ಮಾಹಿತಿ ನೀಡಲಾಗುತ್ತದೆ.
ಆಸಕ್ತರು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರಮ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 10ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಅಥವಾ ದೂ.ಸಂ. 08226-226346, ಮೊಬೈಲ್ 7760145784 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮೇ 28ರಂದು ಕೊಳ್ಳೇಗಾಲಕ್ಕೆ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಭೇಟಿ
ಚಾಮರಾಜನಗರ, ಮೇ. 26- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ನಾರಾಯಣ ಅವರು ಮೇ 28ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. 10.30 ಗಂಟೆಗೆ ಪೌರಕಾರ್ಮಿಕರ ಕಾಲೋನಿಗಳಿಗೆ ಭೇಟಿ ನೀಡುವರು. ಮಧ್ಯಾಹ್ನ 12 ಗಂಟೆಗೆ ನಗರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರೆಂದು ಪ್ರಕಟಣೆ ತಿಳಿಸಿದೆ.
ವಿಧಾನಪರಿಷತ್ ಚುನಾವಣೆ : 17 ಅಭ್ಯರ್ಥಿಗಳು ಅಂತಿಮ ಕಣದಲ್ಲಿ
ಚಾಮರಾಜನಗರ, ಮೇ. 26 - ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಲು 17 ಅಭ್ಯರ್ಥಿಗಳು ಅಂತಿಮ ಕಣದಲ್ಲಿ ಉಳಿದಿದ್ದಾರೆ.
ಮೈ.ವಿ. ರವಿಶಂಕರ್(ಭಾರತೀಯ ಜನತಾ ಪಕ್ಷ), ಡಾ. ಹೆಚ್.ಎನ್. ರವೀಂದ್ರ(ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷ), ಕೆ.ಟಿ. ಶ್ರೀಕಂಠೇಗೌಡ(ಜಾತ್ಯಾತೀತ ಜನತಾದಳ), ಹೆಚ್.ಕೆ. ಕೃಷ್ಣ(ಕರುನಾಡು ಪಾರ್ಟಿ), ಕೆ.ಪಿ. ಚಿದಾನಂದ(ಸಮಾಜವಾದಿ ಪಾರ್ಟಿ), ನಾಗಭೂಷಣ ಆರಾಧ್ಯ(ಸಮಾಜವಾದಿ ಜನತಾ(ಕರ್ನಾಟಕ)ಪಾರ್ಟಿ), ವಾಟಾಳ್ ನಾಗರಾಜ್(ಕನ್ನಡ ಚಳವಳಿ ವಾಟಾಳ್ ಪಕ್ಷ), ಡಾ. ಕೃಷ್ಣಮೂರ್ತಿ ಚಮರಂ(ಪಕ್ಷೇತರ), ಆರ್.ಕೆ. ಗೋವಿಲ್(ಪಕ್ಷೇತರ), ಪ್ರೊ. ಕೆ.ಎಸ್. ಭಗವಾನ್(ಪಕ್ಷೇತರ), ಹೆಚ್.ಎನ್. ಮಂಚೇಗೌಡ(ಪಕ್ಷೇತರ), ಮಂಜು ಜಿ.ಎನ್(ಪಕ್ಷೇತರ), ಪಿ.ಎಸ್. ಯಡೂರಪ್ಪ(ಪಕ್ಷೇತರ), ಎಂ.ಎನ್. ರವಿಶಂಕರ(ಪಕ್ಷೇತರ), ರಾಜೀವ್ ಶ್ರೀರಂಗರಾಜು(ಪಕ್ಷೇತರ), ಜಿ.ಎಸ್. ವಿಶ್ವನಾಥ (ಪಕ್ಷೇತರ), ವೀರಭದ್ರಸ್ವಾಮಿ ಎನ್(ಪಕ್ಷೇತರ), ಅವರುಗಳು ಅಂತಿಮ ಕಣದಲ್ಲಿದ್ದಾರೆ ಎಂದು ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಎ.ಎಂ. ಕುಂಜಪ್ಪ ತಿಳಿಸಿದ್ದಾರೆ.
ಮೇ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಮೇ. 27 - ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಮೇ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ದೂ.ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ. 30ರಂದು ಹೊಂಗನೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಸಮ್ಮುಖದಲ್ಲಿ ಶಾಂತಿಸಭೆ
ಚಾಮರಾಜನಗರ, ಮೇ. 27 :- ಹೊಂಗನೂರಿನ ಪ್ರಕರಣ ಹಿನ್ನಲೆಯಲ್ಲಿ ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಹಾಗೂ ಶಾಸಕರಾದ ಎಸ್. ಜಯಣ್ಣ ಅವರ ಸಮ್ಮುಖದಲ್ಲಿ ಶಾಂತಿ ಸಭೆಯು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಹೊಂಗನೂರು ಗ್ರಾಮದ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಕೊಳ್ಳೇಗಾಲ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 2- ಸಮಾಜ ಕಲ್ಯಾಣ ಇಲಾಖೆಯಿಂದ ಕೊಳ್ಳೆಗಾಲ ತಾಲೂಕಿನ ವಿವಿಧೆಡೆ ನಿರ್ವಹಣೆಯಾಗುತ್ತರುವ ಪರಿಶಿಷ್ಠ ಜಾತಿಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯ ಅಥವಾ ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜೂನ್ 8 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ಸಮಾಜ ಕಲ್ಯಾಣ ಇಲಾಖೆ ಕಚೇರಿ (ದೂ ಸಂ: 08224-253196) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಚಾ ನಗರ ತಾಲೂಕು: ಪರಿಶಿಷ್ಠ ವರ್ಗದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.
ಚಾಮರಾಜನಗರ, ಮೇ. 27:-ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯ, ಮೆಟ್ರಿಕ್ ನಂತರದ ಬಾಲಕ ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ತಾಲೂಕಿನ ಪುಣಜನೂರು ಬೇಡಗುಳಿ, ರಂಗಸಂದ್ರ, ಕೆ.ಗುಡಿ, ಮುರಟಿಪಾಳ್ಯ, ಕೋಳಿಪಾಳ್ಯದಲ್ಲಿರುವ ಆಶ್ರಮ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಲ್ಲಿ 5 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪಿಯುಸಿ ಯಿಂದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು ಆಶ್ರಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಪ್ರವೇಶ ಲಭಿಸಲಿದೆ.
ಆಸಕ್ತ ಪರಿಶಿಷ್ಠ ವರ್ಗದ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳು ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಅಥವಾ ನಗರದ ಖಾಸಗಿ ಬಸ್ ನಿಲ್ದಾಣ ರಸ್ತಯಲ್ಲಿರುವ ತಾಲೂಕು ಪರಿಶಿಷ್ಠ ವರ್ಗಗಳ ಕಲ್ಯಾಣ ಅಧಿಕಾರಿ ಕಚೇರಿಯಲ್ಲಿ ಜೂನ್ 1 ರಿಂದ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜೂನ್ 15 ರ ಒಳಗೆ ಸಲ್ಲಿಸಬೇಕು.
ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಪರಿಶಿಷ್ಠ ಜಾತಿ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು. ವಿವರಗಳಿಗೆ 08226-223823 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಆರೋಗ್ಯ ಶಿಕ್ಷಣದ ಅರಿವು ಅಗತ್ಯ: ತಹಶೀಲ್ದಾರ್ ಮಹದೇವು
ಚಾಮರಾಜನಗರ, ಮೇ. 27- ಡೆಂಗ್ಯೂ ರೊಗ ನಿಯಂತ್ರಣಕ್ಕೆ ನಾಗರಿಕರಲ್ಲಿ ಆರೋಗ್ಯ ಶಿಕ್ಷಣದ ಅರಿವು ಮೂಡಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ. ಮಹದೇವು ತಿಳಿಸಿದರು.
ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮದ ಅನುಷ್ಠಾನ ಸಂಬಂಧ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿಂದು ನಡೆದ ಡೆಂಗ್ಯೂ ರೋಗ ನಿಯಂತ್ರಣೆ ಕುರಿತ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿವರ್ಷ ಮೇ. 16ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ರೋಗ ನಿಯಂತ್ರಣಕ್ಕೆ ತಾಲೂಕಿನ ಗ್ರಾಮ ಪಂಚಾಯಿತಿ, ಶಿಕ್ಷಣ, ಕಂದಾಯ, ನೀರಾವರಿ, ಸಮಾಜ ಕಲ್ಯಾಣ, ಮೀನುಗಾರಿಕೆ, ನಗರಾಭಿವೃದ್ಧಿ, ಕೈಗಾರಿಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳು ಆರೋಗ್ಯ ಇಲಾಖೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.
ವ್ಯಕ್ತಿಯನ್ನು ತೀವ್ರವಾಗಿ ಬಾದಿಸುವ ಡೆಂಗ್ಯೂ ರೋಗ ತಡೆಗಟ್ಟಲು ಮುಖ್ಯವಾಗಿ ಸಾರ್ವಜನಿಕರಿಗೆ ಅರೋಗ್ಯ ಶಿಕ್ಷಣ ನೀಡಬೇಕು. ಗ್ರಾಮೀಣ ಭಾಗದ ಜನರು ರೋಗ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬೇಕು. ಡೆಂಗ್ಯೂ ನಿವಾರಣೆಗಾಗಿ ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಕ್ರಿಯಾಶೀಲರಾಗಬೇಕು ಎಂದು ಮಹದೇವು ತಿಳಿಸಿದರು.
ಅರಂಭದಲ್ಲಿ ಡೆಂಗ್ಯೂ ರೋಗ ನಿಯಂತ್ರಣೆ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ರೋಗ ಲಕ್ಷಣಗಳು, ಹರಡುವ ಬಗೆ, ಚಿಕಿತ್ಸೆ ಪಡೆಯುವ ಬಗ್ಗೆ ವಿವರಿಸಿ ಎಲ್ಲ ಇಲಾಖೆಗಳು ತಮ್ಮ ಕಚೇರಿಯ ಒಳಾಂಗಣ, ಹೊರಾಂಗಣದಲ್ಲಿ ಅನಾವಶ್ಯಕ ನೀರು ನಿಲ್ಲದಂತೆ ಕ್ರಮ ವಹಿಸುವುದು ಹಾಗೂ ಒಣ ದಿನ ಆಚರಿಸುವುದು ಅಗತ್ಯ. ಡೆಂಗ್ಯೂ ಕುರಿತ ಹೆಚ್ಚಿನ ಮಾಹಿತಿಯನ್ನು WWW.ಟಿhಠಿ.gov.iಟಿ/mobiಟe.ಚಿಠಿಠಿ ವೆಬ್‍ಸೈಟ್‍ನಲ್ಲಿ ಪಡೆಯಬಹುದು ಎಂದರು.
ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಶಾಂತ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜಿಯಾಲಜಿಸ್ಟ್ ಚಂದ್ರಶೇಖರ್, ಶಿಕ್ಷಣ ಇಲಾಖೆಯ ಸಂಯೋಜಕರಾದ ಚಿನ್ನಸ್ವಾಮಿ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.
ಜ್ಯೋತಿಗೌಡನಪುರ : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ
ಚಾಮರಾಜನಗರ, ಮೇ. 27 - ತಾಲೂಕಿನ ಜ್ಯೋತಿಗೌಡನಪುರ ಸರ್ಕಾರಿ ಪ್ರೌಢಶಾಲೆಯು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 85ರಷ್ಟು ಫಲಿತಾಂಶ ಪಡೆದಿದೆ.
ಶಾಲೆಯ ವಿ. ಅನಿತಾ 551 ಅಂಕ(ಶೇ.88.16), ಜೆ.ಬಿ. ಪೂಜಾಶ್ರೀ 537 ಅಂಕ(85.92) ಮತ್ತು ಜೆ.ಎಸ್. ಪೂರ್ಣಿಮಾ 533 ಅಂಕ(85.28) ಪಡೆದು ಅತ್ಯುನ್ನತಾ ಶ್ರೇಣಿ(ಡಿಸ್ಟಿಂಕ್ಷನ್) ಹೊಂದಿದ್ದು, ಬಿ. ಬಸವರಾಜು 514 ಅಂಕ(82.24), ಜಿ. ತೇಜಾವತಿ 506 ಅಂಕ(80.96), ಚಂದ್ರಶೇಖರ 501 ಅಂಕ(80.16)ಗಳನ್ನು ಗಳಿಸಿದ್ದಾರೆ. ಇವರೊಂದಿಗೆ ಇನ್ನೂ ಹಲವಾರು ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕರಾದ ಡಾ. ಎಚ್.ಬಿ. ಬಸವರಾಜು ತಿಳಿಸಿದ್ದಾರೆ.
ಮೇ. 30ರಂದು ಮಹಿಳಾ ಚಿಂತನೆ, ಶರಣರ ವಚನಗಳ ಕುರಿತ ಕಾರ್ಯಾಗಾರ
ಚಾಮರಾಜನಗರ, ಮೇ. 27 - ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಕನ್ನಡ ವಿಭಾಗದ ವಿದ್ಯಾರ್ಥಿಗಳಿಗಾಗಿ ಮೇ. 30 ರಂದು ಬೆಳಿಗ್ಗೆ 10.30 ಗಂಟೆಗೆ “ಪ್ರಸ್ತುತ ಕನ್ನಡ ಸಾಹಿತ್ಯದಲ್ಲಿ ಮಹಿಳಾ ಚಿಂತನೆಗಳು ಮತ್ತು ಶರಣರ ವಚನಗಳು ಹಾಗೂ ಸಮಕಾಲೀನ ಸಂದರ್ಭ” ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿದೆ.
ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪದ್ಮಾಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಬಂಜಗೆರೆ ಜಯಪ್ರಕಾಶ್ ಮತ್ತು ಪತ್ರಿಕೋದ್ಯಮಿ ಜಿ.ಪಿ. ಬಸವರಾಜು ಅವರುಗಳು ಕಾರ್ಯಗಾರದಲ್ಲಿ ಭಾಗವಹಿಸುವರು ಎಂದು ಸ್ನಾತಕೋತ್ತರ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
***************
ಗಣಿ ಇಲಾಖೆ ಸಂಬಂಧ ಪರಿಸರ ವಿಮೋಚನಾ ಪತ್ರಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ
ಚಾಮರಾಜನಗರ, ಮೇ 28 - ಉಪಖನಿಜಗಳ ಗಣಿಗಾರಿಕೆಗೆ ಪರಿಸರ ವಿಮೋಚನಾ ಪತ್ರ ನೀಡುವ ಪ್ರಕ್ರಿಯೆಯನ್ನು ವಿಕೇಂದ್ರೀಕರಿಸಲಾಗಿದ್ದು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಪರಿಸರ ಆಘಾತ ಅಂದಾಜೀಕರಣ ಪ್ರಾಧಿಕಾರ (ಡಿಇಐಎಎ) ಮತ್ತು ನೀರಾವರಿ ಇಲಾಖೆಯ ಹಿರಿಯ ಕಾರ್ಯನಿರ್ವಾಹಕ ಅಭಿಯಂತರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ತಜ್ಞ ನಿಷ್ಕರ್ಷ (ಡಿಇಎಸಿ) ಸಮಿತಿಗಳನ್ನು ರಚಿಸಲಾಗಿದೆ.
ಗಣಿ ಇಲಾಖೆಗೆ ಸಂಬಂಧಿಸಿದಂತೆ ಪರಿಸರ ವಿಮೋಚನಾ ಪತ್ರ ನೀಡುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯನ್ನು ಅಧಿಕೃತಗೊಳಿಸಿ ಈ ಕೂಡಲೇ ಜಾರಿಗೆ ಬರುವಂತೆ ಕಾರ್ಯೋನ್ಮುಖಗೊಳಿಸಲಾಗಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಪರಿಸರ ವಿಮೋಚನಾ ಪತ್ರ ಅವಶ್ಯವಿರುವ ಅರ್ಜಿದಾರರು ಅರ್ಜಿಗಳನ್ನು ನೇರವಾಗಿ ಅಗತ್ಯ ದಾಖಲೆಗಳೊಂದಿಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 29ರಂದು ನಗರಕ್ಕೆ ನೀರು ಸರಬರಾಜು ವ್ಯತ್ಯಯ
ಚಾಮರಾಜನಗರ, ಮೇ 28:- ನಗರಕ್ಕೆ ನೀರು ಪೂರೈಕೆಯಾಗುವ ಮಾರ್ಗದಲ್ಲಿ ಏರುಕೊಳವೆ ದುರಸ್ತಿ ಕಾರ್ಯ ನಡೆಸಬೇಕಿರುವ ಹಿನ್ನೆಲೆಯಲ್ಲಿ ಮೇ 29ರಂದು ಚಾಮರಾಜನಗರಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ನಾಗರಿಕರು ಲಭ್ಯವಿರುವ ತೊಂಬೆ ಹಾಗೂ ಕೈಪಂಪ್, ಕೊಳವೆ ಬಾವಿಗಳಿಂದ ನೀರು ಉಪಯೋಗಿಸಿಕೊಂಡು ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಫೋನ್ ಇನ್ ಕಾರ್ಯಕ್ರಮ : ಸಮಸ್ಯೆ ಬಿಚ್ಚಿಟ್ಟ ವಿಕಲಚೇತನರು
ಚಾಮರಾಜನಗರ, ಮೇ 28 - ಜಿಲ್ಲೆಯ ಜನತೆಯ ಕುಂದುಕೊರತೆ ಸಮಸ್ಯೆಗಳನ್ನು ಆಲಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರಫೋನ್ ಇನ್ ಕಾರ್ಯಕ್ರಮದಲ್ಲಿ ವಿಕಲಚೇತನರು ತಾವು ಅನುಭವಿಸುತ್ತಿರುವ ತೊಂದರೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟದ್ದು ಗಮನ ಸೆಳೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ರಾಮು ಅವರ ನೇತೃತ್ವದಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ 26 ದೂರುಗಳು ದಾಖಲಾದವು.
ಮೂಲಸೌಕರ್ಯ ಸಮಸ್ಯೆಗಳೇ ಹೆಚ್ಚು ಕೇಳಿಬರುತ್ತಿದ್ದ ಪೋನ್ ಇನ್ ಕಾರ್ಯಕ್ರಮದಲ್ಲಿ ಇಂದು ವಿಕಲಚೇತನರಿಗೆ ನೆರವು ನೀಡಬೇಕೆಂಬ ಮನವಿಗಳು ಸಾಕಷ್ಟು ಕೇಳಿಬಂದವು.
ಕೌದಳ್ಳಿಯಿಂದ ಮಹಿಳೆಯೊಬ್ಬರು ಕರೆ ಮಾಡಿ ತಮ್ಮ ಮನೆಯಲ್ಲಿ ಮೂವರು ಅಂಗವಿಕಲರಿದ್ದಾರೆ. ಇವರಿಗೆ ಪಿಂಚಣಿ ಸೌಲಭ್ಯ ಲಭ್ಯವಿಲ್ಲ. ನೆರವು ಲಭಿಸಿದರೆ ತಮ್ಮ ಸಂಕಷ್ಟ ಪರಿಹಾರವಾಗಲಿದೆ ಎಂದು ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಅಗತ್ಯ ನೆರವು ಕಲ್ಪಿಸಲಾಗುವುದು ಎಂದರು.
ಧನಗೆರೆಯಿಂದ ಯುವತಿಯೊಬ್ಬರು ಕರೆ ಮಾಡಿ ತಾವು ಅಂಗವೈಕಲ್ಯರಾಗಿದ್ದು ಪಿಯುಸಿವರೆಗೆ ವ್ಯಾಸಂಗ ಮಾಡಿದ್ದೇನೆ. ಕಡುಬಡತನವಿದ್ದು ಅಗತ್ಯ ಸಹಾಯವನ್ನು ಒದಗಿಸಬೇಕೆಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಕಂಪ್ಯೂಟರ್ ತರಬೇತಿಯಂತಹ ಪ್ರಯೋಜನವನ್ನು ಒದಗಿಸಲು ಕ್ರಮ ವಹಿಸುವುದಾಗಿ ತಿಳಿಸಿದರು.
ಹುತ್ತೂರು ಗ್ರಾಮದಿಂದ ಮಹಿಳೆಯೊಬ್ಬರು ತಾವು ವಿಕಲಚೇತನರಾಗಿದ್ದು ವಸತಿ ಯೋಜನೆಯಡಿ ಮನೆ ಮಂಜೂರು ಮಾಡಿಕೊಡುವಂತೆ ಮನವಿ ಮಾಡಿದರು. ಈ ಸಂಬಂಧ ಉತ್ತರಿಸಿದ ಜಿಲ್ಲಾಧಿಕಾರಿಯವರು ವಿಕಲಚೇತನರ ಕೋಟದಡಿ ಮನೆ ಸೌಲಭ್ಯ ನೀಡಲು ಅವಕಾಶವಿದೆ. ಈ ಬಗ್ಗೆ ಅಗತ್ಯ ಪ್ರಕ್ರಿಯೆ ಕೈಗೊಳ್ಳಲು ಮುಂದಾಗುವುದಾಗಿ ತಿಳಿಸಿದರು.
ಮುಡಿಗುಂಡದಿಂದ ಮತ್ತೋರ್ವ ಮಹಿಳೆಯೋರ್ವರು ದೂರವಾಣಿ ಕರೆ ಮಾಡಿ ತಮ್ಮ ಮಗುವಿಗೆ ವಾಕ್ ಥೆರಪಿ ಅಗತ್ಯವಿದೆ. ಈ ಚಿಕಿತ್ಸೆ ಒದಗಿಸಲು ನೆರವು ಕಲ್ಪಿಸಬೇಕೆಂದು ಕೋರಿದರು. ಜಿಲ್ಲಾಧಿಕಾರಿ ರಾಮು ಅವರು ಸಭೆಯಲ್ಲಿದ್ದ ವಿಕಲಚೇತನ ಅಧಿಕಾರಿಗೆ ಕೂಡಲೇ ಮಗುವಿಗೆ ಚಿಕಿತ್ಸೆ ನೀಡÀಲು ಅವಶ್ಯ ಏರ್ಪಾಡು ಮಾಡುವಂತೆ ಸೂಚಿಸಿದರು.
ಯಳಂದೂರಿನಿಂದ ಸ್ಥಳೀಯ ನಿವಾಸಿಯೊಬ್ಬರು ಪಟ್ಟಣದ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಇದಕ್ಕೆ ಕಡಿವಾಣ ಹಾಕಬೇಕೆಂದು ತಿಳಿಸಿದರು. ನಿಯಮಾನುಸಾರ ಡೊನೇಷನ್ ಪಡೆಯುವಂತಿಲ್ಲ. ನಿರ್ದಿಷ್ಟ ದೂರುಗಳಿದ್ದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಖುದ್ದು ದೂರು ನೀಡಿದರೆ ಕ್ರಮ ವಹಿಸಲಾಗುವುದು. ನಿಯಮಾನುಸಾರ ಪಡೆಯಬೇಕಾದ ಶುಲ್ಕ ವಿವರವನ್ನು ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ರಾಮು ಉತ್ತರಿಸಿದರು.
ಚರಂಡಿ ಸ್ಪಚ್ಚತೆ, ತ್ಯಾಜ್ಯ ವಿಲೇವಾರಿಯಲ್ಲಿ ನಿರ್ಲಕ್ಷ್ಯ, ಮರಳು ಅಭಾವದಿಂದ ಉಂಟಾಗಿರುವ ಸಮಸ್ಯೆ ಸೇರಿದಂದೆ ಇತರೆ ಹಲವು ತೊಂದರೆಗಳನ್ನು ಫೋನ್ ಇನ್ ಕಾರ್ಯಕ್ರಮದಲ್ಲಿ ನಾಗರಿಕರು ಜಿಲ್ಲಾಧಿಕಾರಿಗಳಿಗೆ ಮನವರಿಕೆ ಮಾಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಉದ್ಯೋಗ ಖಾತರಿ ಯೋಜನೆ ಪ್ರಗತಿ ಹೆಚ್ಚಳಕ್ಕೆ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಾಮರಾಜನಗರ, ಮೇ 28- ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಜನರಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವಂತೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶಂಭುದಯಾಳ್ ಮೀನಾ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ವಿವಿಧ ಇಲಾಖೆಗಳ ಯೋಜನೆ ಹಾಗೂ ಬರಪರಿಹಾರ ಕಾಮಗಾರಿಯಡಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯಕ್ಕೆ ನೆರವಾಗುವ ಕಾಮಗಾರಿ ಕೈಗೊಳ್ಳಲು ಅವಕಾಶವಿದೆ. ಜಿಲ್ಲೆಯಲ್ಲಿ ಜಾಬ್ ಕಾರ್ಡ್ ನೋಂದಣಿ ಮಾಡಿಸಿರುವವರ ಸಂಖ್ಯೆಯೂ ಹೆಚ್ಚಿದೆ. ಆದರೆ ಉದ್ಯೋಗಕ್ಕೆ ಮುಂದಾಗಿರುವವರ ಸಂಖ್ಯೆ ಕಡಿಮೆ ಇದೆ. ಉದ್ಯೋಗ ಖಾತರಿ ಯೋಜನೆಯ ಪ್ರಯೋಜನವನ್ನು ಮನವರಿಕೆ ಮಾಡಿಕೊಡುವ ಮೂಲಕ ಹೆಚ್ಚು ಉದ್ಯೋಗವನ್ನು ಸ್ಥಳೀಯವಾಗಿ ಒದಗಿಸುವ ಕೆಲಸ ಅಧಿಕಾರಿಗಳು ಮಾಡಬೇಕೆಂದು ತಿಳಿಸಿದರು.
ಉದ್ಯೋಗ ಖಾತರಿ ಯೋಜನೆಯಲ್ಲಿ ಪ್ರಗತಿ ಹೆಚ್ಚಳ ಮಾಡಬೇಕಿದೆ. ಇದಕ್ಕಾಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಕಾಲಕಾಲಕ್ಕೆ ಪ್ರಗತಿ ಪರಾಮರ್ಶೆ ಮಾಡಬೇಕಿದೆ. ಪ್ರಸಕ್ತ ಸಾಲಿಗೆ ಎಲ್ಲ ಅಗತ್ಯ ರೂಪುರೇಷೆಗಳನ್ನು ತಯಾರಿಸಿ ಹೆಚ್ಚಿನ ಗುರಿ ಸಾಧನೆಗೆ ಕಾರ್ಯೋನ್ಮುಖರಾಗುವಂತೆ ಶಂಭುದಯಾಳ್ ಮೀನಾ ತಿಳಿಸಿದರು.
ಕುಡಿಯುವ ನೀರಿನ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಜನರ ಸಮಸ್ಯೆ ಆಲಿಕೆಗೆ ಸಹಾಯವಾಣಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಕಚೇರಿಗಳಲ್ಲಿ ಜನರ ಅಹವಾಲು ಆಲಿಕೆಗೆ ಸರಿಯಾದ ವ್ಯವಸ್ಥೆ ಮಾಡಬೇಕು, ಕುಂದುಕೊರತೆಗಳ ದಾಖಲು ಕಾರ್ಯವು ಸುಸೂತ್ರವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದು ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ ನೀಡಿದರು.
ಜಿಲ್ಲೆಯ ಮಳೆ, ಬೆಳೆ, ಕೃಷಿ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು ಉತ್ತಮ ಮಳೆಯಾದಲ್ಲಿ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರವನ್ನು ದಾಸ್ತಾನು ಮಾಡಿಕೊಂಡಿರಬೇಕು. ಕೃಷಿ ಇಲಾಖೆ ಕಾರ್ಯಕ್ರಮ ಯೋಜನೆಗಳು ಸಮರ್ಪಕವಾಗಿ ರೈತರನ್ನು ತಲುಪಲು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಇದೇವೇಳೆ ಮಾತನಾಡಿ ಜಿಲ್ಲಾಧಿಕಾರಿ ಬಿ. ರಾಮು ಅವರು ಜಿಲ್ಲೆಯ ಬರಪೀಡಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಿರುವ ಕಾಮಗಾರಿ ಹಾಗೂ ಪರಿಸ್ಥಿತಿ ಅಧ್ಯಯನಕ್ಕೆ ಪ್ರತಿ ವಾರ ಸಭೆ ಕರೆಯಲಾಗುತ್ತಿದೆ. ಈ ಸಭೆಯಲ್ಲಿ ಹÉೂೀಬಳಿ, ತಾಲೂಕು ಮಟ್ಟದ ನೋಡಲ್ ಅಧಿಕಾರಿಗಳಿಂದ ಆಯಾ ಭಾಗದ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುತ್ತಿದೆ. ವಿಶೇಷವಾಗಿ ಕುಡಿಯುವ ನೀರು, ಮೇವು ಅಭಾವ ತಲೆದೋರದಂತೆ ವಹಿಸಬೇಕಿರುವ ಕ್ರಮಗಳ ಬಗ್ಗೆ ಸೂಚಿಸಲಾಗುತ್ತಿದೆ ಎಂದರು.
ಕ್ಷೀರಭಾಗ್ಯ, ಗಿರಿಜನರಿಗೆ ಒದಗಿಸಲಾಗುತ್ತಿರುವ ಪೌಷ್ಠಿಕ ಆಹಾರ ಕಾರ್ಯಕ್ರಮಗಳ ಬಗ್ಗೆ ವಿವರ ಪಡೆದ ಉಸ್ತುವಾರಿ ಕಾರ್ಯದರ್ಶಿಗಳು ಮಕ್ಕಳ ಪೌಷ್ಠಿಕತೆ ಆರೋಗ್ಯ ಬಗ್ಗೆ ತಪಾಸಣೆ ನಡೆಸಬೇಕು. ಸೌಲಭ್ಯಗಳನ್ನು ಒದಗಿಸಿದ ಬಳಿಕ ಯಾವ ಪ್ರಮಾಣದಲ್ಲಿ ಮಕ್ಕಳು ಸುಧಾರಿಸಿ ಕೊಂಡಿದ್ದಾರೆ ಎಂಬ ಬಗ್ಗೆ ಮೌಲ್ಯಮಾಪನವಾಗಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಅವರು ಇತ್ತೀಚೆಗೆ ಪರಿಶಿಷ್ಟ ವರ್ಗಗಳೂ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಪೌಷ್ಠಿಕ ಆಹಾರ ವಿತರಣೆ ಕುರಿತು ಚರ್ಚಿಸಲಾಗಿದೆ. ಮಕ್ಕಳ ಆರೋಗ್ಯ ಸುಧಾರಣೆ ಯಾವ ಮಟ್ಟದಲ್ಲಿ ಉತ್ತಮವಾಗಿದೆ ಎಂಬ ಬಗ್ಗೆ ತಿಳಿದುಕೊಳ್ಳಲು ಆರೋಗ್ಯ ಇಲಾಖೆಯೊಂದಿಗೆ ಕಾರ್ಯಕ್ರಮ ರೂಪಿಸುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಅನುಷ್ಠಾನವಾಗುತ್ತಿರುವ ವಿವಿಧ ವಸತಿ ಯೋಜನೆಗಳನ್ನು ಸಕಾಲಕ್ಕೆ ಪೂರ್ಣಗೊಳಿಸಬೇಕು. ಇನ್ನು ಮನೆ ನಿರ್ಮಾಣ ಕಾರ್ಯ ಆರಂಭಿಸದಿರುವ ಫಲಾನುಭವಿಗಳನ್ನು ಸಂಪರ್ಕಿಸಿ ಅಗತ್ಯ ಮಾರ್ಗದರ್ಶನ ಮಾಡಬೇಕು. ವಸತಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಗಂಭೀರವಾಗಿ ಪ್ರಗತಿ ಪರಿಶೀಲಿಸಬೇಕು ಎಂದು ಶಂಭುದಯಾಳ್ ಮೀನಾ ಸೂಚಿಸಿದರು.
ಮೇವು ಲಭ್ಯತೆ, ಕ್ಷೀರಭಾಗ್ಯ, ಅನ್ನಭಾಗ್ಯ, ಬೆಳೆ ಪರಿಹಾರ, ಸ್ವಚ್ಚ ಭಾರತ್ ಮಿಷನ್, ಪೋಡಿ ಮುಕ್ತ ಅಭಿಯಾನ, ಕೃಷಿ ಅಭಿಯಾನ, ವಿಮೆ ಯೋಜನೆ, ಸೇರಿದಂತೆ ಇತರೆ ಇಲಾಖೆ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಮೇ 30ರಂದು ಶಾಲಾ ಪ್ರಾರಂಭೋತ್ಸವ
ಚಾಮರಾಜನಗರ, ಮೇ 28:- ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಮೇ 30ರಂದು ಶಾಲಾ ಪ್ರಾರಂಭೋತ್ಸವವನ್ನು ವಿಶಿಷ್ಟವಾಗಿ ಹಮ್ಮಿಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ತಿಳಿಸಿದ್ದಾರೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾಗುತ್ತಿದ್ದು ಮೇ 30ರಂದು ಶಾಲೆಗಳ ಎಸ್‍ಡಿಎಂಸಿ ಸದಸ್ಯರು ಗ್ರಾಮಸ್ಥರ ಸಹಕಾರದೊಂದಿಗೆ ಮಕ್ಕಳಿಗೆ ಸ್ವಾಗತ ಕೋರಬೇಕಿದೆ. ಅಂದು ಸಿಹಿ ಊಟದ ವ್ಯವಸ್ಥೆ ಮಾಡುವಂತೆ ಶಿಕ್ಷಕರಿಗೆ ಸೂಚಿಸಲಾಗಿದೆ. ಹೊಸದಾಗಿ ಶಾಲೆಗೆ ದಾಖಲಾಗುವ ಮಕ್ಕಳನ್ನು ಆಂದೋಲನ ಮೂಲಕ ಪ್ರೇರೇಪಿಸಬೇಕಿದೆ. ಶಾಲಾ ಆರಂಭದಂದು ಎಲ್ಲ ಮಕ್ಕಳನ್ನು ಪ್ರೀತಿಯಿಂದ ಶಾಲೆಗೆ ಬರಮಾಡಿಕೊಳ್ಳಬೇಕೆಂದು ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ : ನೀತಿಸಂಹಿತೆ ಕಟ್ಟುನಿಟ್ಟಿನ ಪಾಲನೆಗೆ ಡೀಸಿ ಸೂಚನೆ
ಚಾಮರಾಜನಗರ, ಮೇ 28 - ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಸಂಬಂಧ ಜಾರಿಯಲ್ಲಿರುವ ನೀತಿಸಂಹಿತೆ ಪಾಲನೆ ಮಾಡುವ ಕಾರ್ಯವನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚುನಾವಣಾ ನೀತಿಸಂಹಿತೆ ಸಂಬಂಧ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ನೀತಿಸಂಹಿತೆಯು ಜೂನ್ 15ರವರೆಗೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಮುಖಂಡರು ಚುನಾವಣಾ ಸಂಬಂಧ ಮಾಡುವ ಎಲ್ಲ ಸಭೆಗಳ ಬಗ್ಗೆ ನಿಗಾ ವಹಿಸಬೇಕು. ಮಾದರಿ ನೀತಿಸಂಹಿತೆ ಉಲ್ಲಂಘನೆಯಾಗುತ್ತಿದೆಯೇ ಎಂಬ ಬಗ್ಗೆ ಗಮನ ನೀಡಬೇಕು. ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣವೇ ವರದಿ ಮಾಡಬೇಕು ಎಂದರು.
ಅಭ್ಯರ್ಥಿಗಳು ರಾಜಕೀಯ ಪಕ್ಷದವರು ನಡೆಸುವ ಪ್ರಚಾರ ಇನ್ನಿತರ ಎಲ್ಲಾ ಸಭೆಯನ್ನು ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು. ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು. ಮತದಾರರನ್ನು ಪ್ರೇರೇಪಿಸುವ ಯಾವುದೇ ಚಟುವಟಿಕೆಗಳು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲು ಮಾಡಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ನೀತಿಸಂಹಿತೆ ಪಾಲನೆ ಕುರಿತು ನಿಗಾ ವಹಿಸಲು ನೇಮಕವಾಗಿರುವ ಅಧಿಕಾರಿಗಳು ಚುನಾವಣೆ ಪ್ರಕ್ರಿಯೆ ಮುಗಿಯುವ ತನಕ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ವಹಿಸಬೇಕಿರುವ ಜವಾಬ್ದಾರಿಯನ್ನು ಅತ್ಯಂತ ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಯಾವುದೇ ಸ್ಥಳದಲ್ಲಿ ನೀತಿಸಂಹಿತೆ ಉಲ್ಲಂಘನೆಯಾದರೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಅಂತರರಾಜ್ಯ ಸಂಪರ್ಕಿಸುವ ಪುಣಜನೂರು, ಪಾಲಾರ್, ಮೂಲೆಹೊಳೆಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಇಲ್ಲಿ 24 ಗಂಟೆಗಳ ಅವಧಿಯಲ್ಲೂ ನಿರಂತರವಾಗಿ ಕಣ್ಗಾವಲು ಇಡಬೇಕು. ಅಕ್ರಮವಾಗಿ ಮದ್ಯ, ಹಣ ಸಾಗಾಣಿಕೆ, ಇನ್ನಿತರ ವಸ್ತುಗಳು ರವಾನೆಯಾಗುತ್ತಿದಲ್ಲಿ ಕೂಡಲೇ ವಶಪಡಿಸಿಕೊಳ್ಳಬೇಕು. ಅಬಕಾರಿ ಸಿಬ್ಬಂದಿಯೊಂದಿಗೆ ಇತರೆ ಇಲಾಖೆ ಅಧಿಕಾರಿಗಳು ಚೆಕ್ ಪೋಸ್ಟ್ ತಂಡಕ್ಕೆ ನೇಮಕವಾಗಿದ್ದಾರೆ. ತಪಾಸಣಾ ಕಾರ್ಯ ಹೇಗೆ ಸಾಗುತ್ತಿದೆ ಎಂಬ ಬಗ್ಗೆ ನೇಮಕವಾಗಿರುವ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು ಎಂದು ರಾಮು ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಜಿಲ್ಲಾಮಟ್ಟದ ಅಧಿಕಾರಿಗಳು, ಪೊಲೀಸ್, ಅಬಕಾರಿ ಇಲಾಖೆ ಅಧಿಕಾರಿ, ಸಿಬ್ಬಂದಿ ಸಭೆಯಲ್ಲಿ ಹಾಜರಿದ್ದರು.
ಮೇ 30ರಂದು ಕಂದಾಯ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಮೇ 28 :- ಕಂದಾಯ ಸಚಿವರಾದ ವಿ. ಶ್ರೀನಿವಾಸ ಪ್ರಸಾದ್ ಅವರು ಮೇ 30ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಸಚಿವರು ಆಗಮಿಸುವರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರೆಂದು ಸಚಿವರ ಆಪ್ರ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
ಮೇ. 30ರಂದು ಹೊಂಗನೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಸಮ್ಮುಖದಲ್ಲಿ ಶಾಂತಿಸಭೆ
ಚಾಮರಾಜನಗರ, ಮೇ 28 :- ಹೊಂಗನೂರಿನ ಪ್ರಕರಣ ಹಿನ್ನಲೆಯಲ್ಲಿ ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಹಾಗೂ ಶಾಸಕರಾದ ಎಸ್. ಜಯಣ್ಣ ಅವರ ಸಮ್ಮುಖದಲ್ಲಿ ಶಾಂತಿ ಸಭೆಯು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಹೊಂಗನೂರು ಗ್ರಾಮದ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಮೇ. 31ರಂದು ಕಾನೂನು ಅರಿವು ಕಾರ್ಯಕ್ರಮ
ಚಾಮರಾಜನಗರ, ಮೇ 30 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಮೇ 31ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ವಿಶ್ವ ತÀಂಬಾಕು ಸೇವನೆ ವಿರೋಧಿ ದಿನಾಚರಣೆ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಭೃಂಗೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಪಿ. ನಂದೀಶ್, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಡಿ. ರಾಘವೇಂದ್ರ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಮೇ. 31ರಂದು ರಿಸೆಂಟ್ ಟ್ರೆಂಡ್ಸ್ ಇನ್ ಮ್ಯಾನೇಜ್‍ಮೆಂಟ್ ಕುರಿತ ಕಾರ್ಯಾಗಾರ
ಚಾಮರಾಜನಗರ, ಮೇ 30- ಎಂಬಿಎ ವಿಭಾಗದ ವಿದ್ಯಾರ್ಥಿಗಳಿಗಾಗಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಮೇ 31ರಂದು ಬೆಳಿಗ್ಗೆ 10.30 ಗಂಟೆಗೆ ರಿಸೆಂಟ್ ಟ್ರೆಂಡ್ಸ್ ಇನ್ ಮ್ಯಾನೇಜ್‍ಮೆಂಟ್ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ಎಂಬಿಎ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್.ಜೆ. ಮಂಜುನಾಥ್, ಪ್ರೊ. ಡಿ. ಆನಂದ್, ಸಹಾಯಕ ಪ್ರಾಧ್ಯಾಪಕರಾದ ಡಾ. ಆರ್. ಮಹೇಶ್, ಡಾ. ಎಂ. ಅಮೂಲ್ಯ ಮತ್ತು ಭಾರತೀಯ ಜೀವ ವಿಮಾ ನಿಗಮದ ಹೈಯರ್ ಗ್ರೇಡ್ ಅಸಿಸ್ಟೆಂಟ್ ಜೆ. ಸುರೇಶ್ ಕಾರ್ಯಗಾರದಲ್ಲಿ ಭಾಗವಹಿಸುವರು ಎಂದು ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂ. 8ರಿಂದ ಚಾಮರಾಜೇಶ್ವರಸ್ವಾಮಿ ಗಿರಿಜಾಕಲ್ಯಾಣ ಮಹೋತ್ಸವ
ಚಾಮರಾಜನಗರ, ಮೇ 30 - ಇತಿಹಾಸ ಪ್ರಸಿದ್ಧ ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿ ಅವರ ಗಿರಿಜಾಕಲ್ಯಾಣ ಮಹೋತ್ಸವವು ಜೂನ್ 8 ರಿಂದ 13ರವರೆಗೆ ಶ್ರದ್ಧಾಭಕ್ತಿಯಿಂದ ಜರುಗಲಿದೆ.
ಜೂನ್ 8ರಂದು ಸಂಜೆ 6 ಗಂಟೆಗೆ ಎಣ್ಣೆ ಅರಿಶಿನ ನಂತರ 8 ಗಂಟೆಗೆ ವರಪೂಜಾ ಮಹೋತ್ಸವ, ಜೂನ್ 9ರಂದು ಬೆಳಿಗ್ಗೆ 10ಗಂಟೆಗೆ ಅಂಕುರಾರ್ಪಣಪೂರ್ವಕ ಕನ್ನಡಿ ಕಳಸ ತರಲಾಗುತ್ತದೆ. 4 ಗಂಟೆಗೆ ನಾಂದಿ ನಡೆದು, ಗ್ರಹಯಜ್ಞ ಪ್ರಾರಂಭವಾಗಿ, 5 ಗಂಟೆಗೆ ಕಾಶೀಯಾತ್ರೆ ಮಹೋತ್ಸವ, ರಾತ್ರಿ 7.45 ರಿಂದ 9 ಗಂಟೆಯವರೆಗೆ ಸಲ್ಲುವ ಧನುರ್ ಲಗ್ನದಲ್ಲಿ ಅಕ್ಷತಾರೋಹಣ, ಧಾರಾಮಹೋತ್ಸವ, ಪ್ರಧಾನ ಹೋಮ, ಮಂಗಳಾರತಿ ನೆರವೇರಲಿದೆ.
ಜೂನ್ 10ರಂದು ಬೆಳಿಗ್ಗೆ 10 ಗಂಟೆಗೆ ಔಪಾಸನೆ ಉರುಟಣೆ ಉಯ್ಯಾಲೋತ್ಸವ, ರಾತ್ರಿ 8 ಗಂಟೆಗೆ ಔಪಾಸನ ಉಯ್ಯಾಲೋತ್ಸವ, ಜೂನ್ 11ರಂದು ಬೆಳಿಗ್ಗೆ 10 ಗಂಟೆಗೆ ಔಪಾಸನೆ ಉರುಟಣೆ ಉಯ್ಯಾಲೋತ್ಸವ, ರಾತ್ರಿ 8 ಗಂಟೆಗೆ ಔಪಾಸನಾ ಪಾಕಿನಿ ಮಹೋತ್ಸವ ನಡೆಯಲಿದೆ.
ಜೂನ್ 12ರಂದು ಬೆಳಿಗ್ಗೆ 10 ಗಂಟೆಗೆ ಔಪಾಸನೆ ಉರುಟಣೆ ಉಯ್ಯಾಲೋತ್ಸವ, ರಾತ್ರಿ 8 ಗಂಟೆಗೆ ಔಪಾಸನೆ ಶೇಷ ಹೋಮ ನಾಕಬಲಿ, ಹೊಳಲು ಸುತ್ತುವುದು, ಗಜಾರೋಹಣ ಪೂರ್ವಕ ಗೃಹಪ್ರವೇಶ ಮಹೋತ್ಸವ ಜರುಗಲಿದೆ.
ಜೂನ್ 13ರಂದು ಬೆಳ್ಳಿಗ್ಗೆ 10 ಗಂಟೆಗೆ ದೇವತಾ ಉದ್ವಾಸನೆ, ವಿವಾಹದೀಕ್ಷಾ ವಿಸರ್ಜನೆ, ಸ್ಥಂಭ ಪೂಜಾ, ರಾತ್ರಿ 7 ಗಂಟೆಗೆ ಪುಷ್ಪಾಂದೋಳಿಕೋತ್ಸವ ಶಯನೋತ್ಸವವು ನಡೆಯಲಿದೆ.
ಗಿರಿಜಾ ಕಲ್ಯಾಣ ಮಹೋತ್ಸವ ಅಂಗವಾಗಿ ಪ್ರತಿದಿನ ಸಂಜೆ ಸಂಗೀತ, ಹರಿಕಥೆ ಇನ್ನಿತರ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ತಹಸಿಲ್ದಾರ್ ಎಸ್.ಎಂ. ಮಹದೇವು ಹಾಗೂ ಚಾಮರಾಜೇಶ್ವರ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್. ಮಂಜೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಂಗನೂರು: ಶಾಂತಿ ನೆಲೆಸಲು ಸಹಕರಿಸಿ-ಸಚಿವರಾದ ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ಮೇ. 30 - ಹೊಂಗನೂರಿನಲ್ಲಿ ನಡೆದಿರುವ ಕಹಿ ಘಟನೆಯನ್ನು ಮರೆತು ಗ್ರಾಮವನ್ನು ಸಹಜ ಸ್ಥಿತಿಗೆ ತರುವ ಪ್ರಕ್ರಿಯೆಗೆ ಸರ್ವರು ಸಹಕರಿಸಿ ಶಾಂತಿ ನೆಲೆಸಲು ಕೈಜೋಡಿಸಬೇಕೆಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಮನವಿ ಮಾಡಿದರು.
ತಾಲೂಕಿನ ಹೊಂಗನೂರಿನಲ್ಲಿ ಕಳೆದ ತಿಂಗಳು ನಡೆದ ಪ್ರಕರಣದ ಹಿನ್ನಲೆಯಲ್ಲಿ ಗ್ರಾಮದ ಅಸ್ಪತ್ರೆ ಅವರಣದಲ್ಲಿ ನಡೆದ ಶಾಂತಿ ಸಭೆಯನ್ನುದ್ದೇಶಿಸಿ ಸಚಿವರು ಮಾತನಾಡಿದರು.
ವಿಶ್ವ ಗೌರವಕ್ಕೆ ಪಾತ್ರರಾಗಿರುವ ಅಂಬೇಡ್ಕರ್ ಅವರ ಹಾದಿಯಲ್ಲಿ ಎಲ್ಲ ಸಮುದಾಯ, ಜನಪ್ರತಿನಿಧಿಗಳು, ಸಂಸ್ಥೆಗಳು ಮುನ್ನಡೆಯಬೇಕಿದೆ. ಮಹಾ ಮಾನವತಾವಾದಿಯಾದ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡುವಂತಹ ಘಟನೆಗಳು ಮರುಕಳಿಸಬಾರದು. ಗ್ರಾಮದಲ್ಲಿ ನಡೆದ ಅಪಮಾನ ಘಟನೆ ಮತ್ತು ಬಳಿಕ ನಡೆದಿರುವ ಗಲಭೆ, ಇತರೆ ಪ್ರಕರಣ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ತನಿಖೆ ಮುಕ್ತವಾಗಿ ನಡೆಯುತ್ತಿದೆ. ಯಾವುದೇ ಒತ್ತಡ ಹೇರಲಾಗಿಲ್ಲ ಎಂದರು.
ಗ್ರಾಮದಲ್ಲಿ ಪ್ರಕರಣ ನಡೆದ ನಂತರ ಸಹಜ ಸ್ಥಿತಿಗೆ ತರುವ ಕೆಲಸ ಮುಖ್ಯವಾಗಿದೆ. ಕುಟುಂಬದ ಅರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಳ್ಳಬೇಕಿದೆ. ತಾಳ್ಮೆ, ಸಹನೆ, ಪರಸ್ಪರ ಸೌಹಾರ್ದತೆ ಇದ್ದಾಗ ಶಾಂತಿ ನೆಲೆಗೊಳ್ಳುತ್ತದೆ. ಹೀಗಾಗಿ ಎಲ್ಲರೂ ಗ್ರಾಮದ ಶಾಂತಿಗೆ ಪೂರಕವಾಗಿ ಕೆಲಸ ಮಾಡೋಣವೆಂದರು.
ಇದೇ ಸಂದರ್ಭದಲ್ಲಿ ಪ್ರಕರಣವನ್ನು ಬೇರೊಂದು ತನಿಖಾ ಸಂಸ್ಥೆಗೆ ವಹಿಸಬೇಕೆಂಬ ವಿವಿಧ ಮುಖಂಡರ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಸಭೆಯಲ್ಲಿ ವ್ಯಕ್ತವಾದ ಎಲ್ಲರ ಅಭಿಪ್ರಾಯಗಳನ್ನು ಕ್ರೋಢೀಕರಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಯವರು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಗಲಭೆ ಪ್ರಕರಣದಲ್ಲಿ ಆಸ್ತಿ-ಪಾಸ್ತಿ ಹಾನಿಯಾದ 97 ಜನರಿಗೆ ಪರಿಹಾರ ಹಣ ಮಂಜೂರಾಗಿದೆ. ಈ ಪರಿಹಾರ ಹಣವನ್ನು ಶೀಘ್ರದಲ್ಲೇ ಅಧಿಕಾರಿಗಳು ವಿತರಿಸಲಿದ್ದಾರೆ. ಸಂತ್ರಸ್ತ ಜನರಿಗೆ ಆತ್ಮಸ್ಥೈರ್ಯ ತುಂಬುವ ದಿಸೆಯಲ್ಲಿ ಎಲ್ಲರೂ ಮುಂದಾಗಬೇಕಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಅಂಬೇಡ್ಕರ್ ಅವರ ಭಾವಚಿತಕ್ಕೆ ಅಪಮಾನ ಮಾಡಿದಂತಹ ಪ್ರಕರಣಗಳು ಮರುಕಳಿಸಬಾರದು. ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಮುಂದುವರೆದಿರುವ ತನಿಖೆಯಲ್ಲಿ ಯಾರು ಸಹ ಹಸ್ತಕ್ಷೇಪ ಮಾಡಿಲ್ಲ. ಇಲ್ಲಿ ಆತ್ಮಸಾಕ್ಷಿ ಮುಖ್ಯವಾಗಲಿದೆ. ಯಾವುದೇ ತನಿಖೆ ನಡೆದರೂ ತಮ್ಮ ಅಭ್ಯಂತರವಿಲ್ಲ. ತಪ್ಪಿತಸ್ಥರಿಗೆ ಪ್ರೋತ್ಸಾಹ ನೀಡುವುದಿಲ್ಲ ಎಂದರು.
ಶಾಸಕರಾದ ಎಸ್. ಜಯಣ್ಣ ಮಾತನಾಡಿ ಗ್ರಾಮದ ಜನತೆಯಲ್ಲಿ ಮನೆ ಮಾಡಿರುವ ಅಪನಂಬಿಕೆ ಹೋಗಲಾಡಿಸಬೇಕಿದೆ. ನ್ಯಾಯ ಒದಗಿಸುವ ದಿಸೆಯಲ್ಲಿ ಮುಕ್ತವಾಗಿದ್ದೇವೆ. ಶಾಂತಿ ನೆಲೆಸುವುದು ಮೊದಲ ಆದ್ಯತೆಯಾಗಿದೆ. ಊರಿನ ಶಾಂತಿಗೆ ಭಂಗ ಬಾರದಿರಲು ಎಲ್ಲರೂ ಸಹಕರಿಸಬೇಕು ಎಂದರು.
ಮಾಜಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಮಾಜಿ ಜಿ.ಪಂ. ಸದಸ್ಯರಾದ ಲಕ್ಷ್ಮೀಪುಟ್ಟಸ್ವಾಮಿ, ಮುಖಂಡರಾದ ಎನ್. ಮಹೇಶ್, ಸಿ.ಎಂ. ಕೃಷ್ಣಮೂರ್ತಿ, ಚಂದ್ರು, ರಾಮು, ಪುಟ್ಟಸ್ವಾಮಿ, ಆರ್.ಪಿ. ನಂಜುಂಡಸ್ವಾಮಿ, ಚಿತ್ರದುರ್ಗದ ಛಲವಾದಿ ಗುರುಪೀಠದ ಸ್ವಾಮಿಜೀ, ಇತರರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಮಚಂದ್ರ, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಯೋಗೇಶ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪಕುಮಾರ್ ಆರ್. ಜೈನ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಕುಮಾರ್, ಪುಟ್ಟಬುದ್ಧಿ, ಮಾಜಿ ನಗರಸಭೆ ಅಧ್ಯಕ್ಷರಾದ ನಂಜುಂಡಸ್ವಾಮಿ ಇತರರು ಸಭೆಯಲ್ಲಿ ಹಾಜರಿದ್ದರು.
ಜೂನ್ 1 ರಿಂದ 7ರವರೆಗೆ ಡಿಇಡಿ, ಪಿಪಿಟಿ ಪರೀಕ್ಷಾ ಸಂಬಂಧ ನಿಷೇದಾಜ್ಞೆ
ಚಾಮರಾಜನಗರ, ಮೇ 31 :- ನಗರದ ಕೋರ್ಟ್ ರಸ್ತೆಯಲ್ಲಿರುವ ಶ್ರೀ ರಾಮಚಂದ್ರ ಡಿ.ಇಡಿ ಕಾಲೇಜಿನಲ್ಲಿ ಜೂನ್ 1 ರಿಂದ 7ರವರೆಗೆ ಪ್ರಥಮ, ದ್ವಿತೀಯ ಡಿ.ಇಡಿ ಮತ್ತು ಪಿಪಿಟಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕಾರ್ಯ ನ್ಯಾಯೋಚಿತವಾಗಿ ಹಾಗೂ ಅಕ್ರಮಗಳು ನಡೆಯದಂತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ನಿಷೇಧಿತ ಸ್ಥಳವೆಂದು ಘೋಷಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ದಿನಗಳಂದು 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5.30ರವರೆಗೆ ಮುಚ್ಚಲು ಆದೇಶಿಸಿದೆ.
ಈ ನಿಷೇದಾಜ್ಞೆಯು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಮತ್ತು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ವಿಶ್ವ ತಂಬಾಕು ರಹಿತ ದಿನ : ಜಿಲ್ಲಾಮಟ್ಟದ ಜಾಗೃತಿ ಜಾಥಾಗೆ ಚಾಲನೆ
ಚಾಮರಾಜನಗರ, ಮೇ 31 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕಗಳ ಸಹಯೋಗದೊಂದಿಗೆ ತಾಲೂಕಿನ ಸಂತೇಮರಹಳ್ಳಿಯಲ್ಲಿಂದು ಜಿಲ್ಲಾಮಟ್ಟದ ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಾ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಡಾ. ಹೇಮಾ ಅವರು ಪ್ರತಿವರ್ಷದಂತೆ ಈ ಬಾರಿಯು ಸಹ ಮೇ. 31ನ್ನು ವಿಶ್ವ ತಂಬಾಕು ರಹಿತ ದಿನವನ್ನಾಗಿ ಆಚರಿಸಲಾಗುತ್ತಿದೆ. 2003ರ ಕೋಟ್ಪಾ ಕಾಯ್ದೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವ ನಿಟ್ಟಿನಲ್ಲಿ ವಿಶೇಷ ತನಿಖಾ ತಂಡಗಳ ಮೂಲಕ ಮೇ. 20 ರಿಂದ 25ರವರೆಗೆ ನಾಗರಿಕರಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗಿದೆ ಎಂದರು.
ಬೀಡಿ, ಸಿಗರೇಟ್, ಸಿಗ್ಯಾರ್‍ಗಳಲ್ಲಿ 7000 ರಾಸಾಯನಿಕಗಳಿದ್ದು, 69ರಷ್ಟು ಕ್ಯಾನ್ಸರ್‍ಕಾರಕ ವಸ್ತುಗಳಿವೆ. ಧೂಮಪಾನರಹಿತ ಜಗಿಯುವ ತಂಬಾಕಿನಲ್ಲಿ 3095 ರಸಾಯನಿಕಗಳಿದ್ದು, 28ರಷ್ಟು ಕ್ಯಾನ್ಸರ್‍ಕಾರಕಗಳಿವೆ. ತಂಬಾಕಿನಲ್ಲಿ ತಂಬಾಕು ಸೇವನೆಯಿಂದ ವಿಶ್ವದಲ್ಲಿ ಪ್ರತಿವರ್ಷ 60 ಲಕ್ಷ ಜನರು ಹಾಗೂ ಭಾರತದಲ್ಲಿ 10 ಲಕ್ಷ ಜನ ಮರಣ ಹೊಂದುತ್ತಿದ್ದಾರೆ. ದೇಶದಲ್ಲಿ ಪ್ರತಿದಿನ 2200 ಕ್ಕಿಂತ ಹೆಚ್ಚು ಮಂದಿ ತಂಬಾಕು ಸಂಬಂಧಿತ ಕಾಯಿಲೆಯಿಂದ ಸಾವನ್ನಪ್ಪುತ್ತಿದ್ದಾರೆ. ತಂಬಾಕು ಸೇವನೆಯನ್ನು ಜನರು ತ್ಯಜಿಸಿ ಪ್ರಜ್ಞಾವಂತ ನಾಗರಿಕರಾಗುವ ಮೂಲಕ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಮಾ ತಿಳಿಸಿದರು.
ಜಿಲ್ಲಾ ಸರ್ವೇಲೆನ್ಸ್ ಹಾಗೂ ಜಿಲ್ಲಾ ತಂಬಾಕು ನೋಡೆಲ್ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ್‍ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ವೈ. ನಂದ, ತಾಲೂಕು ಆರೊಗ್ಯಾಧಿಕಾರಿ ಡಾ. ಶ್ರೀನಿವಾಸ್, ಪ್ರಭಾರ ಉಪ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿನಾಯಕ್, ಕಿರಿಯ ಪುರುಷ ಆರೋಗ್ಯ ಸಹಾಯಕ ಸಂಪಿಗಯ್ಯ ಹಾಗೂ ಇನ್ನಿತರರು ಹಾಜರಿದ್ದರು.
ವಿಶ್ವ ತಂಬಾಕು ರಹಿತ ದಿನದ ಆಂಗವಾಗಿ ಆಯೋಜಿಸಲಾಗಿದ್ದ ಜಾಥಾ ಸಮುದಾಯ ಆರೋಗ್ಯ ಕೇಂದ್ರದಿಂದ ಹೊರಟು ಸಂತೇಮರಹಳ್ಳಿಯ ವೃತ್ತದ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆಯ ಸಂತೆ ಮೈದಾನದಲ್ಲಿ ಸಂಚರಿಸಿತು.
ಕಾರ್ಯಕ್ರಮದ ಪ್ರಯುಕ್ತ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅವರಣದಲ್ಲಿ ತಂಬಾಕು ಉತ್ಪನ್ನಗಳ ವಸ್ತುಪ್ರದರ್ಶನ ಏರ್ಪಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಡಿಪ್ಲೊಮಾ ಇನ್ ಟೂಲ್ ಡೈಮೇಕಿಂಗ್ ಕೋರ್ಸಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 01 - ಗುಂಡ್ಲುಪೇಟೆಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್ ಕೋರ್ಸು ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಕೇಂದ್ರದಲ್ಲಿ ಅರ್ಜಿಗಳನ್ನು ಈಗಾಗಲೇ ವಿತರಿಸಲಾಗುತ್ತಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್ 7 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಗುಂಡ್ಲುಪೇಟೆ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ದುಂದಾಸನಪುರದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರನ್ನು (08229-222344, ಮೊಬೈಲ್ 9880800692) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÉ.
ಜೂನ್4ರಂದು ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಸ್ಫಧರ್É
ಚಾಮರಾಜನಗರ, ಜೂ. 01:- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲೆಯ ಕಿರಿಯ, ಹಿರಿಯ ಪ್ರಾಥಮಿಕ ಮತ್ತು ಫ್ರೌಡಶಾಲಾ ಮಕ್ಕಳಿಗಾಗಿ ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆಯನ್ನು ಜೂನ್4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ (ಡಾ|| ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ) ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಶೀಟ್ ನೀಡಲಾಗುತ್ತದೆ. ಉಳಿದ ಸಾಮಾಗ್ರಿಗಳನ್ನು ವಿದ್ಯಾರ್ಥಿಗಳೆ ತರಬೇಕು. ಭಾಗವಹಿಸಲು ಆಸಕ್ತಿ ಉಳ್ಳವರು ಸ್ಥಳದಲ್ಲಿಯೇ ತಮ್ಮ ಹೆಸರು ನೊಂದಾಯಿಸಿ ಕೊಳ್ಳಬಹುದು ಹೆಚ್ಚನ ವಿವರಗಳಿಗೆ ಜಿಲ್ಲಾ ಉಪ ಪರಿಸರ ಅಧಿಕಾರಿ ಪಿ.ಕೆ ಉಮಾಶಂಕರ್ (ಮೊ:9448160267 ಕಚೇರಿ ದೂ. ಸಂ 08226-223846) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಲೋಕ ಸಭಾ ಸದಸ್ಯರಾದ ಆರ್. ದ್ರುವನಾರಾಯಣ ಪ್ರವಾಸ.
ಚಾಮರಾಜನಗರ, ಜೂ. 01 - ಲೋಕಸಭಾ ಸದಸ್ಯರಾದ ಆರ್. ದ್ರುವನಾರಾಯಣ ಅವರು ಕೇಂದ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಂಸದೀಯ ಸಮಿತಿ ತಂಡದೊಂದಿಗೆ ಜೂನ್4ರಿಂದ 9ರವರೆಗೆ ಲೆಹ್, ಜಮ್ಮು ಮತ್ತು ದÀರ್ಮಶಾಲಾ ಸ್ಥಳಗಳಿಗೆ ಪರಿವೀಕ್ಷಣೆಗಾಗಿ ಪ್ರವಾಸ ಕೈಗೊಂಡಿದ್ದಾರೆ.
ಈ ಸಂದರ್ಭದಲ್ಲಿ ವಿವಿಧ ಬ್ಯಾಂಕುಗಳು, ವಿಮಾ ಕಂಪನಿಗಳಿಗೆ ಬೇಟಿ ನೀಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರ ಕಲ್ಯಾಣ ಸಂಘದ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ವಿಜ್ಞಾನಿಗಳನ್ನೊಳಗೊಂಡಂತೆ ಡಿ.ಆರ್.ಡಿ.ಒ ನಿದೇರ್ಶಕರು ಹಾಗೂ ಅಧಿಕಾರಗಳೊಂದಿಗೆ ಚರ್ಚೆ ನಡೆಸುವರು. ಭಾರತ ಆಹಾರ ನಿಗಮದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ನೌಕರರ ಕುಂದುಕೊರತೆಗಳ ಬಗ್ಗೆ ಸಮಲೋಚಿಸುವವರು ಎಂದು ಪ್ರಕಟಣೆ ತಿಳಿಸಿದೆ.
ಅಲ್ಪ ಸಂಖ್ಯಾತರ ಅಬಿವೃದ್ದಿ ನಿಗಮದಿಂದ ಸಾಲ ಸೌಲಭ್ಯ : ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 01- ಜಿಲ್ಲೆಯ ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ದಿ ನಿಗಮವು ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾ¯ ಸೌಲಭ್ಯ ಒದಗಿಸಲಿದ್ದು, ಅಲ್ಪ ಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ
ಸ್ವಾವಲಂಬನಾ, ಅರಿವು (ವಿದ್ಯಾಬ್ಯಾಸ ಸಾಲ) ಯೋಜನೆ, ಶ್ರಮಶಕ್ತಿ, ಕಿರು(ಮೈಕ್ರೋ) ಸಾಲ ಮತ್ತು ಸಹಾಯಧ£,À ಗಂಗಾ ಕಲ್ಯಾಣ, ಭೂಖರೀದಿ ಯೋಜನೆ, ಕ್ರಿಶ್ಚಿಯನ್ ಅಭಿವೃದ್ದಿ (ಅರಿವು, ಶ್ರಮ ಶಕ್ತಿ, ಮೈಕ್ರೋ ಸಾಲ ಸಹಾಯಧನ, ಗೃಹ ಸಾಲದ ಮೇಲಿನ ಬಡ್ಡಿ ಸಹಾಯಧನ) ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅಲ್ಪ ಸಂಖ್ಯಾತ ಜನಾಗಂಕ್ಕೆ ಸೇರಿದ ಮುಸ್ಲಿಂ, ಕ್ರೈಸ್ತ, ಜೈನ, ಭೌದ್ದ, ಸಿಖ್ಖ್, ಪಾರ್ಸಿ ಸಮುದಾಯದ ಅಭ್ಯರ್ಥಿಗಳು ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು
ಅಭ್ಯರ್ಥಿಗಳು 18 ರಿಂದ 55ರ ವಯೋಮಿತಿಯೊಳಗಿರÀಬೇಕು, ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದÉೀ±ದವರಾಗಿದ್ದಲ್ಲಿ 81000ರೂ, ನಗರ ಪ್ರಧೇಶದವರಾಗಿದ್ದಲ್ಲಿ 103000ರೂ ಮೀರಿರಬಾರದು. ಅರಿವು ಯೋಜನೆಗೆ 600000ರೂ ಮೀರಿರಬಾರದು.
ಅರ್ಜಿಯನ್ನು ನಿಗಮದ ವೆಬ್‍ಸೈಟ್ ತಿತಿತಿ.ಞmಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್, ಬ್ಯಾಂಕ್ ಖಾತೆ ಪುಸ್ತಕ, ಪಡಿತರ ಚೀಟಿ ಪ್ರತಿಯೊಂದಿಗೆ ಜೂನ್ 30ರೊಳಗೆ ನಗರದ ಜಿಲ್ಲಾ ಆಢಳಿತ ಭವನದಲ್ಲಿ ಇರುವ ಕರ್ನಾಟಕ ಅಲ್ಪ ಸಂಖ್ಯಾಂತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಸಂಪೂರ್ಣ ವಿವರಗಳಿಗೆ ಕರ್ನಾಟಕ ಅಲ್ಪ ಸಂಖ್ಯಾಂತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ( ದೂ ಸಂ.08226-222332) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
No comments:
Post a Comment