Sunday, 24 July 2016

18-07-2016 ರಿಂದ 25-07-2016 ಚಾಮರಾಜನಗರ ವಾರ್ತಾ ಇಲಾಖಾ ಸುದ್ದಿಗಳು( ವಿಶೇಷ ವರದಿ ಹೊರತು ಪಡಿಸಿ)








ಸೋಲಿಗರ ಪೋಡಿನಲ್ಲಿ ಬಾಯಿ ಮೂಗಿಗೆ ಒಂದೇ ಮಾರ್ಗವಿರುವ ವಿಚಿತ್ರ ಮಗು ಜನನ, ಕಂದನನ್ನು ಕಂಡು ತಾಯಿ ನಿಧನ
                             ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ.ಜು.:  ದುರ್ಗಮ ಕಾಡಿನ ನಡುವೆ ಇರುವ ಬೂತಾಣಿ ಪೋಡಿನ ಸೋಲಿಗ ಮಹಿಳೆಯೊಬ್ಬಳಿಗೆ ಬಾಯಿ ಮೂಗಿಗೆ ಒಂದೇ ಮಾರ್ಗ ಇರುವ ವಿಚಿತ್ರ ಮಗು ಜನಿಸಿದ್ದು, ಇದು ವೈದ್ಯಕೀಯ ಲೋಕಕ್ಕೆ ಸವಾಲಾಗಿದೆ. ಆದರೆ ಮಗು ಕಂಡ ತಕ್ಷಣ ತಾಯಿ ಮರಣ ಹೊಂದಿದ್ದು ಮಗು ಇದೀಗ ತಾಯಿಯ ಆರೈಕೆ ಇಲ್ಲದೆ ಅನಾಥವಾಗಿದೆ.
ಕಲಿಯುಗ ಭಗವಂತ ಬಿಳಿಗಿರಂಗನಾಥ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಒಡಲಿನಲ್ಲಿ ಸೋಲಿಗರು ಹೆಚ್ಚಾಗಿ ವಾಸ ಮಾಡುತ್ತಿದ್ದಾರೆ. ಕೆ.ಗುಡಿ ಸಮೀಪ ಇರುವ ಕನ್ನೇರಿ ಕಾಲೂನಿಗೆ ಹೊಂದಿಕೊಂಡಂತ್ತಿರುವ ಬೂತಾಣಿ ಪೋಡಿನಲ್ಲಿ ಜನಿಸಿದ ವಿಚಿತ್ರ ಮಗು.
ಬೂತಾಣಿ ಪೋಡಿನಲ್ಲಿರುವ ರಂಗೇಗೌಡ ಆಲಿಯಾಸ್ ರಾಜಕುಮಾರ ಪತ್ನಿ ಮಾದಮ್ಮಳಿಗೆ ಜನಿಸಿದೆ ಈ ವಿಚಿತ್ರವಾದ ಗಂಡು ಮಗು. ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಮಾದಮ್ಮಳ ಪ್ರಾಣ ಪಕ್ಷಿ ಹಾರಿಹೋಗಿದೆ. ಆದ್ರೆ ಪ್ರಪಂಚವನ್ನು ಕಣ್ಣು ಬಿಟ್ಟು ನೋಡದ ಈ ಕಂದಮ್ಮ ಗಮನಿಸಿದರೆ ವಿಚಿತ್ರವಾಗಿಯೇ ಇದೆ.
ರಂಗೇಗೌಡನ ಪತ್ನಿ ಮಾದಮ್ಮ ತನ್ನ ಐದನೇ ಮಗುವನ್ನು ತನ್ನ ಮನೆಯಲ್ಲೇ ಯಾರೂ ಇಲ್ಲದ ವೇಳೆ ಹೆಡೆದಿದ್ದಾಳೆ. ಈ ಸಮಯದಲ್ಲಿ ರಂಗಮ್ಮ ಎಂಬಾಕೆಯನ್ನು ಹೊರತು ಪಡಿಸಿದರೆ ಯಾರೂ ಇರಲಿಲ್ಲ. ಮಗುವನ್ನು ಕಂಡು ನೊಂದುಕೊಂಡ ಮಾದಮ್ಮ ಮಗು ನೋಡುತ್ತಲೇ ಕುಸಿದು ಪ್ರಾಣ ಬಿಟ್ಟಳು ಎನ್ನುತ್ತಾರೆ ರಂಗಮ್ಮ.
ಚಾಮರಾಜನಗರದಿಂದ ಬಿಳಗಿರಿರಂಗನ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಸಿಗುವ ಕೆ.ಗುಡಿ ಸಮೀಪವಿರುವ ಕನ್ನೇರಿ ಕಾಲೂನಿಬಳಿ ಇರುವ ಬೂತಾಣಿ ಪೋಡಿಗೆ ಹೋಗಿ ಬರುವುದೇ ಸಾಹಸ. ರಸ್ತೆ ಇಲ್ಲದ ಇಲ್ಲಿಗೆ ಕಾಲ್ನಡಿಗೆಯಲ್ಲೇ ಸಾಗಬೇಕು, ಅದು ಕಾಫಿ ತೋಟದ ನಡುವೆ. ಇಲ್ಲಿಗೆ ವೈದ್ಯರು ಯಾರೂ ಹೋಗಿ ಬರುವ ಸಾಹಸ ಮಾಡುವುದಿಲ್ಲ.
ಇಂತಹ ದಯಾನೀಯ ಸ್ಥಿತಿಯಲ್ಲಿರುವ ಬುತಾಣಿ ಪೋಡುವಿನಲ್ಲಿ ಮಾದಮ್ಮ ತುಂಬು ಗರ್ಭಿಣಿಯಾಗಿದ್ದರು ಸಹ ಸರಿಯಾಗಿ ವೈದ್ಯರಿಂದ ಚಿಕಿತ್ಸೆ ಪಡೆಯಲಾಗದೆ ಇದ್ದರು. ಆಶಾ ಕಾರ್ಯಕರ್ತೆಯರು ಮಾತ್ರ ಬಂದು ನೋಡಿಕೊಂಡು ಹೊಗಿದ್ದು ಬಿಟ್ಟರೆ ಬೇರ್ಯಾವ ವೈದ್ಯರು ಇಲ್ಲಿಗೆ ಬರುವ ಸಾಹಸ ಮಾಡಲಿಲ್ಲ.
ಮಾದಮ್ಮಳಿಗೆ ರಂಗೇಗೌಡ ಆಲಿಯಾಸ್ ರಾಜಕುಮಾರ್ ಜೊತೆ ಕಳೆದ 28 ವರ್ಷಗಳ ಹಿಂದೆ ವಿವಾಹವಾಗಿತ್ತು, ಅದು ಹತ್ತಿರದ ಸಂಬಂಧಲ್ಲಿ, ಇವರಿಗೆ ಈಗಾಗಲೇ ಇಬ್ಬರು ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಅವರಲ್ಲಿ ದೊಡ್ಡ ಮಗು ಹಾಸಿಗೆ ಹಿಡಿದು ಅದೆಷ್ಟೋ ವರ್ಷಗಳಾಗಿದೆ. ಈತನ ಬಲಗಾಲು ಸರಿಯಾಗಿ ನಡೆಯಲಾಗದೆ ಹಾಸಿಗೆ ಹಿಡಿದು ಪೋಡಿನ ಗೂಡಿನಲ್ಲೇ ಕಾಲ ಕಳೆಯುತ್ತಿದ್ದಾನೆ. ಇಂತಹ ಸ್ಥಿತಿಯಲ್ಲೂ ಸಹ ರಂಗೇಗೌಡನಿಗೆ ಮೊನ್ನೆ ಜನಿಸಿದ ಗಂಡು ಮಗು ವಿಚಿತ್ರವಾಗಿರುವುದು ಗಮನಿಸಿ ಮನನೊಂದು ಕೊಂಡಿದ್ದಾನೆ. ಆದರೆ ತಾನು ಜನ್ಮ ನೀಡಿದ ಗಂಡು ಮಗು ವಿಕಾರವಾಗಿದೆಯಲ್ಲ ಎಂದು ನೊಂದುಕೊಂಡ ಮಾದಮ್ಮ ಹೃದಯಘಾತವಾಗಿ ಪ್ರಾಣ ಬಿಟ್ಟಿರುವುದು ಮಾತ್ರ ದುರಂತವಾಗಿದೆ.
ಮೊದಲೇ ಬಿಳಿರಿರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶವಾಗಿದ್ದರಿಂದ ಇಲ್ಲಿ ವಾಸ ಮಾಡುವ ಜನರು ನಿರ್ಭಯವಾಗಿ ಸಂಚಾರ ಮಾಡುವುದು ಕಷ್ಟವಾಗಿದೆ ಅದೇ ರೀತಿಯಾಗಿ ಇಲ್ಲಿಗೆ ಆರೋಗ್ಯ ವಿಚಾರಿಸಲು ವೈದ್ಯರು ಬರುವುದು ಇಲ್ಲ. ಇಂತಹ ದಯನೀಯ ಸ್ಥಿತಿಯಲ್ಲಿ ಇಲ್ಲಿನ ಜನರ ಬದುಕು ಮಾತ್ರ ಅತಂತ್ರವಾಗಿದೆ.
ತಾಯಿಯನ್ನು ಕಳೆದುಕೊಂಡ ಈ ವಿಚಿತ್ರ ಮಗು ಆರೈಕೆಯ ಕೊರತೆಯಿಂದಾಗಿ ಬೂತಾಣಿ ಪೋಡಿನಲ್ಲಿ ಏಕಾಂಗಿಯಾಗಿದೆ. ಸದ್ಯಕ್ಕೆ ಮೃತ ಮಾದಮ್ಮಳ ಅಕ್ಕ ಬಸಮ್ಮ ಮಗುವನ್ನು ಆರೈಕೆ ಮಾಡುತ್ತಿರುವುದು ಮಾತ್ರ ಕರುಳು ಹಿಂಡುವಂತ್ತಿದೆ. ಮೂಗು ಮತ್ತು ಬಾಯಿ ಒಂದೇ ಆಗಿದ್ದು, ಮಗುವಿಗೆ ಹೇಗೆ ಹಾಲು ಕುಡಿಸುವುದು ಎನ್ನುವ ಚಂತನೆಯಲ್ಲಿದ್ದಾರೆ.
ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಈ ವಿಚಿತ್ರ ಮಗುವಿನ ಬಗ್ಗೆ ಸಂಶೋಧನೆ ಮಾಡಿದಾಗ ಮಾತ್ರ ಇಂತಹ ಮಗು ಜನನಕ್ಕೆ ಕಾರಣ ಏನೆಂಬುದು ಗೊತ್ತಾಗಲಿದೆ.  ಬುತಾಣಿ ಪೋಡುವಿನಲ್ಲಿರುವ ವಿಚಿತ್ರ ಮಗು ಆರೈಕೆ ಬಗ್ಗೆ ಗಿರಿಜನ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ದೌಡಾಯಿಸಬೇಕಾಗಿದೆ.

ಚಾಮರಾಜೇಶ್ವರ ರಥೋತ್ಸವ : ಉಸ್ತುವಾರಿ ನಿರ್ವಹಣೆಗೆ ಎಸಿ ನಿಯೋಜನೆ
ಚಾಮರಾಜನಗರ, ಜು. 18 - ಚಾಮರಾಜನಗರ ಪಟ್ಟಣದಲ್ಲಿ ಜುಲೈ 19ರಂದು ನಡೆಯಲಿರುವ ಚಾಮರಾಜೇಶ್ವರ ಸ್ವಾಮಿ ರಥೋತ್ಸವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕೊಳ್ಳೇಗಾಲ ಉಪವಿಭಾಗಾಧಿಕಾರಿ ಅವರನ್ನು ರಥೋತ್ಸವ ಕಾರ್ಯಕ್ರಮದ ಉಸ್ತುವಾರಿ ನಿರ್ವಹಣೆಗೆ ನಿಯೋಜಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.

ಜು. 20ರಂದು ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಯೋಜನೆ ಕುರಿತು ಪರಿಸರ ಸಾರ್ವಜನಿಕ ಆಲಿಕೆ ಸಭೆ
ಚಾಮರಾಜನಗರ, ಜು. 18 - ತಾಲೂಕಿನ ಬದನಗುಪ್ಪೆ ಮತ್ತು ಕೆಲ್ಲಂಬಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಕೈಗೊಂಡಿರುವ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಸರ ಸಾರ್ವಜನಿಕ ಆಲಿಕೆ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಯೋಜನಾ ಪ್ರದೇಶದಲ್ಲಿ ನಿಗದಿ ಮಾಡಲಾಗಿದೆ.
ಯೋಜನೆ ನಡೆಯುತ್ತಿರುವ ಸುತ್ತಮುತ್ತಲ ಗ್ರಾಮದ ಆಸಕ್ತ ನಿವಾಸಿಗಳು, ಪರಿಸರ ಆಸಕ್ತರು, ಗುಂಪುಗಳು ಯೋಜನೆಯಿಂದ ತೊಂದರೆಗೆ ಒಳಪಡಬಹುದಾದ ವಿಷಯಗಳ ಕುರಿತು ಅನಿಸಿಕೆ, ಟೀಕೆ, ಅಹವಾಲು, ಸಲಹೆಗಳನ್ನು ಸಭೆಯಲ್ಲಿ ಪಾಲ್ಗೊಂಡು ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ಸಲ್ಲಿಸಬಹುದೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು. 20ರಂದು ಜಿ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ಜು. 18 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರು ತಯಾರಿಸಿದ ಉತ್ಪನ್ನಗಳ ವಸ್ತುಪ್ರದರ್ಶನ ಮಾರಾಟ ಮೇಳಕ್ಕೆ ನಗರದಲ್ಲಿ ಚಾಲನೆ
ಚಾಮರಾಜನಗರ, ಜು. 18 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಶ್ರೀ ಲಕ್ಷ್ಮೀ ರಂಗನಾಥ ಕಲ್ಯಾಣ ಮಂಟಪದಲ್ಲಿ ಇಂದಿನಿಂದ 3 ದಿನಗಳ ಕಾಲ ನಡೆಯಲಿರುವ ಮಹಿಳೆಯರು, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.
ವಿವಿಧ ಜಿಲ್ಲೆಗಳಿಂದ ಬಂದಿರುವ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳು ಹತ್ತಿ, ರೇಷ್ಮೆ ಸೇರಿದಂತೆ ಇನ್ನಿತರ ವಸ್ತುಗಳಿಂದ ತಯಾರಿಸಿದ ವಿವಿಧ ನೇಯ್ಗೆ ಸೀರೆಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿವೆ. ಇನ್ನೂ ಕೆಲವು ಮಹಿಳೆಯರು ಕಸೂತಿ ಮಾಡಿದ ಬ್ಯಾಗುಗಳು, ಬಟ್ಟೆಯಿಂದ ತಯಾರಿಸಿದ ಆಕರ್ಷಕ ಕೈಚೀಲಗಳನ್ನು ವಿಭಿನ್ನವಾಗಿ ಜೋಡಿಸಿ ಗಮನ ಸೆಳೆಯುತ್ತಿದ್ದಾರೆ. ಮಹಿಳೆಯರ ಅಲಂಕಾರಿಕ ವಸ್ತುಗಳು ಮಾರಾಟ ಮಾಡುವ ಮಳಿಗೆಗಳು ಸಹ ಸಾಕಷ್ಟು ಇವೆ. ತರಕಾರಿಯನ್ನು ವೈವಿಧ್ಯಮಯ ಆಕಾರದಲ್ಲಿ ಕತ್ತರಿಸಬಹುದಾದ ಆಯುಧಗಳು, ಗೃಹೋಪಯೋಗಿ ವಸ್ತುಗಳು ಸಹ ಮಾರಾಟಕ್ಕೆ ಇಡಲಾಗಿದೆ.
ಇನ್ನೂ ಕೆಲ ಜಿಲ್ಲೆಯ ಸಂಘಗಳು ರಾಸಾಯನಿಕ ಮುಕ್ತ ಸೋಪು, ನೋವು ನಿವಾರಕ ಮುಲಾಮುಗಳನ್ನು ಸಹ ವ್ಯಾಪಾರ ಮಾಡಲು ಉತ್ಸುಕರಾಗಿ ಬಂದಿದ್ದಾರೆ. ಇದರ ಜತೆಗೆ ಪುಸ್ತಕ, ಹೂಗಿಡ, ಬಿತ್ತನೆ ಬೀಜಗಳನ್ನು ಮಾರಾಟ ಸಹ ಮಾಡಲಾಗುತ್ತಿದೆ.
ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ರಾಮಚಂದ್ರ ಅವರು ಕಲೆ, ಕರಕುಶಲ ಕೈಗಾರಿಕೆಗಳಿಗೆ ಜಿಲ್ಲೆ ಮೊದಲಿನಿಂದಲೂ ಉತ್ತೇಜನ ನೀಡುತ್ತಿದೆ. ಅದರಲ್ಲೂ ಮಹಿಳೆಯರು ತಯಾರಿಸಲ್ಪಟ್ಟ ವಸ್ತುಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ನಗರದಲ್ಲಿ ಇಂತಹ ಮಾರಾಟ ಮೇಳ ಆಯೋಜಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಹಿಳೆಯರು ಇಂದು ಕೇವಲ ಮನೆ ಕೆಲಸಕ್ಕೆ ಮಾತ್ರ ಸೀಮಿತವಾಗಿಲ್ಲ. ಎಲ್ಲಾ ರಂಗಗಳಲ್ಲಿಯೂ ಮುಂದಿದ್ದಾರೆ. ಸರ್ಕಾರ ಕೂಡ ಸ್ಥಳೀಯ ಸಂಸ್ಥೆ ಇತರೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಮೀಸಲಾತಿ ನೀಡುವ ಮೂಲಕ ಹೆಚ್ಚಿನ ಅವಕಾಶ ನೀಡಿದೆ. ಮಹಿಳೆಯರ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡಿದೆ. ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಪ್ರೋತ್ಸಾಹ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ರಾಮಚಂದ್ರ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ರೇಣುಕಾ ಅವರು ಮಹಿಳೆಯರು ಸ್ವಸಹಾಯ ಸಂಘಗಳ ಚಟುವಟಿಕೆಗಳನ್ನು ಉತ್ತಮವಾಗಿ ನಿರ್ವಹಿಸುವ ಮೂಲಕ ಸ್ವಾವಲಂಬಿಗಳಾಗುವತ್ತ ಮುಂದಾಗಿದ್ದಾರೆ. ಆಷಾಢಮಾಸದಲ್ಲಿ ನಡೆಯುವ ಚಾಮರಾಜೇಶ್ವರ ರಥೋತ್ಸವ ಸಂದರ್ಭದಲ್ಲಿ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಜಿಸಲಾಗಿರುವ ಮಾರಾಟ ಮೇಳದಲ್ಲಿ ಹೆಚ್ಚಿನ ಲಾಭ ಮಹಿಳೆಯರಿಗೆ ಆಗಲಿ ಎಂದು ಆಶಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು ಮಾತನಾಡಿ ಸ್ತ್ರೀಶಕ್ತಿ ಸಂಘಗಳಲ್ಲಿ ಒಗ್ಗಟ್ಟು ಶಿಸ್ತು ಇದೆ. ಹೀಗಾಗಿ ಬ್ಯಾಂಕುಗಳು ಸ್ತ್ರೀಶಕ್ತಿ ಸಂಘಗಳಿಗೆ ಸಾಲ ನೀಡಲು ವಿಶೇಷ ಆದ್ಯತೆ ನೀಡುತ್ತಿವೆ. ಮಹಿಳೆಯರು ವ್ಯವಹಾರ ಜ್ಞಾನವನ್ನೂ ಹೆಚ್ಚಿಸಿಕೊಂಡು ಸ್ವಂತ ಶಕ್ತಿಯ ಮೇಲೆ ಅವಲಂಬಿತರಾಗಿದ್ದಾರೆ. ಇನ್ನೂ ಹೆಚ್ಚಿನ ಸಾಧನೆ ಮಾಡುವ ಮೂಲಕ ಮತ್ತಷ್ಟು ಸಬಲೀಕರಣರಾಗಲಿ ಎಂದರು.
ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್ ಮಾತನಾಡಿ ಮಹಿಳೆಯರು ಆರೋಗ್ಯ, ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇವೆಯಲ್ಲಿ ನಿರತರಾಗಿದ್ದಾರೆ. ಸ್ವಸಹಾಯ ಗುಂಪುಗಳು ಸಾಲ ಪಡೆಯವುದರ ಜತೆಗೆ ಸಕಾಲಕ್ಕೆ ಮರುಪಾವತಿಯನ್ನು ಸಹ ಮಾಡುತ್ತಿದ್ದಾರೆ. ಸರ್ಕಾರ ಕೂಡ ಅವರ ಶ್ರೇಯೋಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಮುಂಬರುವ ವರ್ಷದಲ್ಲಿ ಮಹಿಳೆಯರು ತಯಾರಿಸಿದ ವಸ್ತುಗಳಿಗೆ ಬೃಹತ್ ಪ್ರಮಾಣದಲ್ಲಿ ಮಾರುಕಟ್ಟೆ ಒದಗಿಸುವ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಇದೇವೇಳೆ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ವಿತರಿಸಲಾಯಿತು. ಅಲ್ಲದೆ ಇಲಾಖೆಯ ವತಿಯಿಂದ ವಿವಿಧ ಸಹಾಯಧನ ಚೆಕ್ಕುಗಳನ್ನು ಫಲಾನುಭವಿಗಳಿಗೆ ನೀಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಭಾಸ್ಕರ್, ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮಕೃಷ್ಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
           ಹಸಿರು ಗ್ರಂಥಾಲಯ ಸ್ಥಾಪನೆಗೆ ಚಿಂತನೆ

ಚಾಮರಾಜನಗರ, ಜು. 18 - ಜಿಲ್ಲೆಯ ವಿಧಾನಸಭಾ ಕ್ಷೇತ್ರಕ್ಕೊಂದು ಮಾದರಿ ಹಸಿರು ಗ್ರಂಥಾಲಯ ಸ್ಥಾಪನೆಗೆ ಜಿಲ್ಲಾ ಪಂಚಾಯಿತಿ ಚಿಂತನೆ ನಡೆಸಿದೆ.
          ನಗರದ ಜಿಲ್ಲಾಡಳಿತ ಭವನದಲ್ಲಿ ಇರುವ ಜಿಲ್ಲಾ ಪಂಚಾಯಿತಿ ನೂತನ ಕೆಡಿಪಿ ಭವನದಲ್ಲಿ ಸೋಮವಾರ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಈ ವಿಷಯ ತಿಳಿಸಿದರು.
        ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುವ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ ಗ್ರಂಥಾಲಯಗಳನ್ನು ಸ್ಥಾಪನೆ ಮಾಡಬಹುದು. ಚಾಮರಾಜನಗರ ಜಿಲ್ಲೆಯ ವಿಸ್ತೀರ್ಣದಲ್ಲಿ ಅರ್ಧಕ್ಕಿಂತ ಹೆಚ್ಚು ಅರಣ್ಯ ಪ್ರದೇಶ ಆವರಿಸಿಕೊಂಡಿದೆ. ಆದ್ದರಿಂದ ವನ್ಯಧಾಮಗಳಿಗೆ ಹೋಗುವ ಹಾದಿಯಲ್ಲಿ ಬರುವ ಗ್ರಾಮಪಂಚಾಯತಿಗಳಲ್ಲಿ ಮಾದರಿ ಹಸಿರು ಗ್ರಂಥಾಲಯವನ್ನು ಸ್ಥಾಪನೆ ಮಾಡಬಹುದು. ಅಲ್ಲಿ ಪರಿಸರ ಹಾಗೂ ಅರಣ್ಯಕ್ಕೆ ಸಂಬಂಧಿಸಿದ ಪುಸ್ತಕಗಳು, ಸ್ಮರಣಿಕೆಗಳನ್ನು ಇಟ್ಟು ಪ್ರವಾಸಿಗರಿಗೆ ಪರಿಸರ ಕುರಿತ ಜ್ಞಾನಮಾಹಿತಿಯನ್ನು ನೀಡಬಹುದು ಎಂದು ಅವರು ತಿಳಿಸಿದರು.
        ಮಾದರಿ ಗ್ರಂಥಾಲಯವನ್ನು ಮಾಮೂಲಿ ಕಲ್ಲು ಕಟ್ಟಡದ ರೀತಿ ಕಟ್ಟದೆ ಹಸಿರ ಪರಿಕಲ್ಪನೆಯಲ್ಲಿ ಪರಿಸರಕ್ಕೆ ಪೂರಕವಾಗಿ ನಿರ್ಮಾಣ ಮಾಡಬೇಕು. ಹೊರಗಿನಿಂದ ಬಂದಂತಹ ಪ್ರವಾಸಿಗರಿಗೆ ಹಸಿರ ಆಹ್ಲಾದಕರ ಅನುಭವ ಉಂಟಾಗಬೇಕು. ಆ ರೀತಿ ವಿನ್ಯಾಸ ಮಾಡಬೇಕು ಎಂದು ತಿಳಿಸಿದರು.
        ಪ್ರಥಮವಾಗಿ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮ ಪಂಚಾಯಿಯಲ್ಲಿ ಮಾದರಿ ಹಸಿರು ಗ್ರಂಥಾಲಯ ಸ್ಥಾಪಿಸಲು ಸಭೆಯಲ್ಲಿ ತಿಳಿಸಲಾಯಿತು. ಇನ್ನೆರಡು ತಿಂಗಳಲ್ಲಿ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡು ಮಾದರಿ ಗ್ರಂಥಾಲಯ ಸಾರ್ವಜನಿಕ ಸೇವೆಗೆ ಲಭ್ಯವಾಗಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು.
        ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಲೆಕ್ಕಾಧಿಕಾರಿ ಮುದ್ದರಾಜು, ಮುಖ್ಯ ಯೋಜನಾಧಿಕಾರಿ ಮಾದೇಶು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪುಷ್ಪಾಕಮ್ಮಾರ್, ರೇವಣ್ಣ, ಪ್ರೇಮ್‍ಕುಮಾರ್, ಮಂಜುನಾಥಸ್ವಾಮಿ ಸೇರಿದಂತೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


ಜುಲೈ 19ರಂದು ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆ  
  ಚಾಮರಾಜನಗರ, ಜು. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ವತಿಯಿಂದ ಜಿಲ್ಲಾಕೇಂದ್ರದಲ್ಲಿ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜುಲೈ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸರ್ಕಾರಿ ಯೋಜನೆಗಳ ಕುರಿತ ಜಾಗೃತಿ ಕಲಾಜಾಥಾಗೆ ಚಾಲನೆ
ಚಾಮರಾಜನಗರ, ಜು. 19 (ಕರ್ನಾಟಕ ವಾರ್ತೆ):- ರಾಜ್ಯ ಸರ್ಕಾರ ಜನರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರುವ ಕಲಾ ಜಾಥಾ ವಿಶೇಷ ಪ್ರಚಾರಾಂದೋಲನಕ್ಕೆ ನÀಗರದಲ್ಲಿ ಇಂದು ಚಾಲನೆ ದೊರೆಯಿತು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಹಸಿರು ನಿಶಾನೆ ತೋರುವ ಮೂಲಕ 20 ದಿನಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಲಿರುವ ವಿಶೇಷ ಕಲಾ ಜಾಥಾಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಎ. ರಮೇಶ್ ಈ ಸಂದರ್ಭದಲ್ಲಿ ಇದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ರಾಜ್ಯಸರ್ಕಾರದ ಮಹತ್ವಾಕಾಂಕ್ಷೆಯ ಜನಪರ ಯೋಜನೆಗಳಾದ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಭಾಗ್ಯ, ವಿದ್ಯಾಸಿರಿ, ಆರೋಗ್ಯ ಭಾಗ್ಯ, ಋಣಮುಕ್ತ, ಇನ್ನಿತರ ಹತ್ತು ಹಲವು ಕಾರ್ಯಕ್ರಮಗಳ ಅರಿವು ಮೂಡಿಸಲು ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನವು ಗ್ರಾಮಗಳಿಗೆ ಭೇಟಿ ನೀಡಲಿದೆ.
ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಿಳಿಸಿಕೊಡುವ ಉದ್ದೇಶದಿಂದ ಬೀದಿ ನಾಟಕ ಪ್ರದರ್ಶನವು ನಿಗದಿತ ಗ್ರಾಮಗಳಲ್ಲಿ ನಡೆಯಲಿದೆ. ರಂಗಜಂಗಮ ತಂಡದ ಮಹೇಶ್ ನೇತೃತ್ವದಲ್ಲಿ ಕಲಾವಿದರು ಅಭಿನಯದ ಮೂಲಕ ಸರ್ಕಾರಿ ಯೋಜನೆಗಳ ಕುರಿತು ಮನಮುಟ್ಟಿಸಲಿದ್ದಾರೆ.
ಸಂಜೆಯ ವೇಳೆ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆ, ಸ್ವಚ್ಚತೆ ಕುರಿತ ಜಾಗೃತಿ ಇನ್ನಿತರ ಮಹತ್ವದ ಕಾರ್ಯಕ್ರಮಗಳ ಕುರಿತು ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಜಿಲ್ಲೆಯ ನಾಲ್ಕೂ ತಾಲೂಕು ವ್ಯಾಪ್ತಿಯ ಒಟ್ಟು 40 ಗ್ರಾಮ ಪಂಚಾಯಿತಿ, ಹೋಬಳಿ ಕೇಂದ್ರ ಹಾಗೂ ಇತರೆ ಗ್ರಾಮಗಳಲ್ಲಿ ಕಲಾಜಾಥಾ ಸಂಚರಿಸಲಿದೆ.
ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿ, ಕುದೇರು, ಚಂದಕವಾಡಿ, ಜ್ಯೋತಿಗೌಡನಪುರ, ಹರದನಹಳ್ಳಿ, ಅಮಚವಾಡಿ, ಹರವೆ, ಮಲೆಯೂರು, ಭೋಗಾಪುರ, ಕೆಂಪನಪುರ, ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ, ಪಡಗೂರು, ಹಂಗಳ, ಕಣ್ಣೇಗಾಲ, ಬೇಗೂರು, ಸೋಮಹಳ್ಳಿ, ಬೊಮ್ಮಲಾಪುರ, ಬಾಚಹಳ್ಳಿ, ಕೆಲಸೂರು, ಬಲಚವಾಡಿ, ಯಳಂದೂರು ತಾಲೂಕಿನ ಅಗರ, ಕೆಸ್ತೂರು, ಅಂಬಳೆ, ಗುಂಬಳ್ಳಿ, ಮದ್ದೂರು, ಗೌಡಳ್ಳಿ, ಕೊಳ್ಳೇಗಾಲ ತಾಲೂಕಿನ ಪಾಳ್ಯ, ತೆಳ್ಳನೂರು, ಹನೂರು, ಬಂಡಳ್ಳಿ, ಲೊಕ್ಕನಹಳ್ಳಿ, ಪಿ.ಜಿ.ಪಾಳ್ಯ, ರಾಮಾಪುರ, ಕೌದಳ್ಳಿ, ಕುಣಗಳ್ಳಿ, ಟಗರಪುರ, ಸತ್ತೇಗಾಲ, ಸಿಂಗಾನಲ್ಲೂರು, ಮಂಗಲ, ಕಣ್ಣೂರು ಗ್ರಾಮಗಳಿಗೆ ಕಲಾಜಾಥಾ ಸಂಚರಿಸಲಿದೆ.

ಸ್ವಾತಂತ್ರ್ಯ ದಿನ ಆಚರಣೆ ಪೂರ್ವಸಿದ್ಧತೆಗೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ
ಚಾಮರಾಜನಗರ, ಜು. 19 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ವಿವಿಧ ಸಂಘಸಂಸ್ಥೆಗಳ ಸಹಕಾರದೊಂದಿಗೆ ಆಗಸ್ಟ್ 15ರಂದು ಜಿಲ್ಲಾ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು.
    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸ್ವಾಗತ ಸಮಿತಿ, ವೇದಿಕೆ, ಧ್ವಜಾ ಸಿದ್ಧತಾ ಸಮಿತಿ, ಬಹುಮಾನ ವಿತರಣೆ ಸಮಿತಿ, ಸಾಂಸ್ಕøತಿಕ ಕಾರ್ಯಕ್ರಮ ಸಮಿತಿ, ಪೆರೇಡ್ ಇತರೆ ಸಮಿತಿಗಳು ಅಗತ್ಯವಾಗಿ ನಿರ್ವಹಿಸಬೇಕಿರುವ ಕೆಲಸಗಳನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಕರ್ಷಕ ಪಥಸಂಚಲನ ನಡೆಸಿಕೊಡುವ ಉದ್ದೇಶದಿಂದ ಈಗಿನಿಂದಲೇ ತಾಲೀಮು ಪ್ರಕ್ರಿಯೆ ನಡೆಸಬೇಕು. ಸರ್ಕಾರಿ ಶಾಲಾಮಕ್ಕಳಿಗೂ ಹೆಚ್ಚಿನ ಆದ್ಯತೆ ನೀಡಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು. ಧ್ವಜಾರೋಹಣದ ನಂತರ ರಾಷ್ಟ್ರಪ್ರೇಮ, ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ತಿಳಿಸಿಕೊಡುವ ಕಾರ್ಯಕ್ರಮಗಳನ್ನು ಶಾಲಾ ಮಕ್ಕಳಿಂದ ಆಯೋಜನೆ ಮಾಡಬೇಕು. ವಿಭಿನ್ನ ಬಗೆಯ 7 ರಿಂದ 8 ಕಾರ್ಯಕ್ರಮಗಳು ಉತ್ತಮವಾಗಿ ಮೂಡಿಬರಲು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮದಂದು ಹಿರಿಯ ಸ್ವಾತಂತ್ರ್ಯ ಯೋಧರನ್ನು ಗೌರವಿಸಬೇಕು. ಈ ಹಿನ್ನೆಲೆಯಲ್ಲಿ ಹಿರಿಯ ಸ್ವಾತಂತ್ರ್ಯ ಯೋಧರನ್ನು ಆಹ್ವಾನಿಸಿ ಕರೆತಂದು ಸನ್ಮಾನಿಸಿದ ಬಳಿಕ ಅವರನ್ನು ಪುನಃ ಕಳುಹಿಸಿಕೊಡಲು ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.
ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ವೇದಿಕೆ, ಆಹ್ವಾನಿತರು, ವಿದ್ಯಾರ್ಥಿಗಳು, ಗಣ್ಯರು ಕುಳಿತುಕೊಳ್ಳಲು ಶಾಮಿಯಾನ ಹಾಗೂ ಆಸನಗಳ ವ್ಯವಸ್ಥೆ ಮಾಡಬೇಕು. ಶಿಷ್ಠಾಚಾರ ಅನುಸಾರ ಗಣ್ಯರ ಆಹ್ವಾನ, ಆಹ್ವಾನ ಪತ್ರಿಕೆ ವಿತರಣೆ, ಇನ್ನಿತರ ಕೆಲಸಗಳನ್ನು ಲೋಪವಿಲ್ಲದಂತೆ ಅಧಿಕಾರಿಗಳು ಮಾಡಬೇಕು ಎಂದರು.
ಕ್ರೀಡಾಂಗಣವನ್ನು ಸ್ವಚ್ಚಗೊಳಿಸಿ ಕಾರ್ಯಕ್ರಮಕ್ಕೆ ಅಣಿಗೊಳಿಸಬೇಕು. ಕುಡಿಯುವ ನೀರು ಸರಬರಾಜಿಗೂ ಕ್ರಮ ತೆಗೆದುಕೊಳ್ಳಬೇಕು. ಅಂದು ಸಂಜೆ ಚಾಮರಾಜೇಶ್ವರ ದೇವಾಲಯ ಬಳಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಕಾರ್ಯಕ್ರಮಗಳು ಗುಣಮಟ್ಟದಿಂದ ಇದ್ದು ವಿಭಿನ್ನತೆ ಇರಬೇಕು. ಇದಕ್ಕಾಗಿ ಪೂರ್ವ ಸಿದ್ಧತೆ, ಆಯ್ಕೆಯಂತಹ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸರಿಯಾದ ಸಮಯಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ದೇಶಭಕ್ತಿ ಕುರಿತ ಗಾಯನ, ರೂಪಕದಂತಹ ಚಟುವಟಿಕೆಗಳು ಆರಂಭವಾಗಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಎಲ್ಲ ಶಾಲೆಗಳಲ್ಲಿಯೂ ಧ್ವಜಾರೋಹಣ ನೆರವೇರಬೇಕು. ಸ್ವಾತಂತ್ರೋತ್ಸವದ ಮಹತ್ವವನ್ನು ತಿಳಿಸುವ ಕೆಲಸವಾಗಬೇಕು. ಗ್ರಾಮೀಣ ಭಾಗವೂ ಸೇರಿದಂತೆ ಎಲ್ಲೆಡೆ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಒಟ್ಟಾಗಿ ಆಯೋಜನೆ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ಸ್ವಾತಂತ್ರ್ಯೋತ್ಸವ ದಿನದಂದು ಎಲ್ಲ ಅಧಿಕಾರಿಗಳು ತಮ್ಮ ಇಲಾಖೆಯ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು. ಅಧಿಕಾರಿ ಸಿಬ್ಬಂದಿಯವರ ಹಾಜರಾತಿಯನ್ನು ಗಮನಿಸಲಾಗುವುದು. ಜಿಲ್ಲೆಯ ಸಂಘಸಂಸ್ಥೆಗಳು, ಪ್ರತಿನಿಧಿಗಳು ಸೇರಿದಂತೆ ನಾಗರಿಕರು ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ್ಯ ದಿನ ಯಶಸ್ವಿ ಆಚರಣೆಗೆ ಪಾಲ್ಗೊಳ್ಳುವ ಮೂಲಕ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ಸ್ವಾತಂತ್ರ್ಯ ದಿನ ಆಚರಣೆ ಸಂಬಂಧ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಮುಖಂಡರು ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲಾಧಿಕಾರಿ ಡಿ. ಭಾರತಿ, ಜಿ.ಪಂ. ಉಪಕಾರ್ಯದರ್ಶಿ ಮುನಿರಾಜಪ್ಪ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿನಿಯ್, ಮುಖಂಡರಾದ ನಿಜಧ್ವನಿ ಗೋವಿಂದರಾಜು, ಆಲೂರು ನಾಗೇಂದ್ರ, ಪರ್ವತರಾಜು, ನಾಗೇಶ್, ರಂಗಕರ್ಮಿ ವೆಂಕಟರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಮಮತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸರಸ್ವತಿ, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು ಸಭೆಯಲ್ಲಿ ಹಾಜರಿದ್ದರು.

ಜು. 20ರಂದು ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಾಭಿವೃದ್ಧಿ ಕುರಿತ ಪರಿಸರ ಸಾರ್ವಜನಿಕ ಅಲಿಕೆ ಸಭೆ
ಚಾಮರಾಜನಗರ, ಜು. 19 (ಕರ್ನಾಟಕ ವಾರ್ತೆ):- ತಾಲೂಕಿನ ಬದನಗುಪ್ಪೆ ಮತ್ತು ಕೆಲ್ಲಂಬಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಕೈಗೊಂಡಿರುವ ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸಂಬಂಧಿಸಿದಂತೆ ಪರಿಸರ ಸಾರ್ವಜನಿಕ ಆಲಿಕೆ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಯೋಜನಾ ಪ್ರದೇಶದಲ್ಲಿ ನಿಗದಿ ಮಾಡಲಾಗಿದೆ.
ಯೋಜನೆ ನಡೆಯುತ್ತಿರುವ ಸುತ್ತಮುತ್ತಲ ಗ್ರಾಮದ ಆಸಕ್ತ ನಿವಾಸಿಗಳು, ಪರಿಸರ ಆಸಕ್ತರು, ಗುಂಪುಗಳು ಯೋಜನೆಯಿಂದ ತೊಂದರೆಗೆ ಒಳಪಡಬಹುದಾದ ವಿಷಯಗಳ ಕುರಿತು ಅನಿಸಿಕೆ, ಟೀಕೆ, ಅಹವಾಲು, ಸಲಹೆಗಳನ್ನು ಸಭೆಯಲ್ಲಿ ಪಾಲ್ಗೊಂಡು ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ಸಲ್ಲಿಸಬಹುದೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು. 20ರಂದು ಜಿ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ಜು. 19 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜುಲೈ 20ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ನೂತನ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ. ಕೆ.ಎಚ್. ಪ್ರಸಾದ್ ಅಧಿಕಾರ ಸ್ವೀಕಾರ
ಚಾಮರಾಜನಗರ, ಜು. 19 (ಕರ್ನಾಟಕ ವಾರ್ತೆ):- ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಡಾ. ಕೆ.ಎಚ್. ಪ್ರಸಾದ್ ಅಧಿಕಾರ ವಹಿಸಿಕೊಂಡರು.
ಮೈಸೂರು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ. ಕೆ.ಎಚ್. ಪ್ರಸಾದ್ ಅವರು ಸೋಮವಾರ (ಜುಲೈ 18ರಂದು) ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.
ಈವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಬಿ. ಪಾಂಡುವಿಜಯನ್ ವರ್ಗಾವಣೆಗೊಂಡಿದ್ದಾರೆ. ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಇದೇ ವೇಳೆ ಮಾತನಾಡಿದ ಡಾ. ಪ್ರಸಾದ್ ಅವರು ಜಿಲ್ಲೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ವಹಿಸಿಕೊಂಡಿರುವ ಜವಾಬ್ದಾರಿಯನ್ನು ನಿರ್ವಹಿಸಲು ಎಲ್ಲ ಆರೋಗ್ಯ ಅಧಿಕಾರಿ ಹಾಗೂ ಸಿಬ್ಬಂದಿಯ ಸಹಕಾರ ಬಯಸುತ್ತೇನೆ. ಸರ್ಕಾರ ಜಾರಿಗೆ ತಂದಿರುವ ಆರೋಗ್ಯ ಸಂಬಂಧ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸೋಣ ಎಂದರು.
ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.

ಜುಲೈ 23ರೊಳಗೆ ಸೀಮೆಎಣ್ಣೆ ಕೂಪನ್ ಪಡೆಯಲು ಸೂಚನೆ  
  ಚಾಮರಾಜನಗರ, ಜು. 19 (ಕರ್ನಾಟಕ ವಾರ್ತೆ):- ಜಿಲ್ಲಾಕೇಂದ್ರ ಹಾಗೂ ತಾಲೂಕಿನ ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಸೀಮೆಎಣ್ಣೆ ಪಡಿತರ ಕಾರ್ಡುಗಳಿಗೆ ಆಧಾರ್ ಆಧಾರಿತ ಕೂಪನ್ ವ್ಯವಸ್ಥೆ ಮೂಲಕ ಪ್ರಸಕ್ತ ಜುಲೈ ತಿಂಗಳಿನಿಂದಲೇ ಸೀಮೆಎಣ್ಣೆ ವಿತರಿಸಲಾಗುತ್ತಿದ್ದು, ಕೂಪನ್ ಪಡೆಯಲು ಜುಲೈ 23 ಕಡೆಯ ದಿನವಾಗಿದೆ.
ಸೀಮೆಎಣ್ಣೆ ಪಡೆಯಲು ಅರ್ಹರಿರುವ ಪಡಿತರ ಚೀಟಿದಾರರು ಹತ್ತಿರದ ಖಾಸಗಿ ಸೇವಾಕೇಂದ್ರ, ಪ್ರಾಂಚೈಸಿಗಳಲ್ಲಿ ಜುಲೈ 23ರೊಳಗೆ ಕೂಪನ್‍ಗಳನ್ನು ಪಡೆದುಕೊಳ್ಳಬೇಕು.
ಆಹಾರ ಇಲಾಖೆಯಲ್ಲಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಈಗಾಗಲೇ ಪಡಿತರ ಚೀಟಿಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿರುವ ಕುಟುಂಬದ ಎಲ್ಲ ಸದಸ್ಯರ ಆಧಾರ್ ಸಂಖ್ಯೆಯನ್ನು ಜುಲೈ 30ರೊಳಗೆ ಕಡ್ಡಾಯವಾಗಿ ಜೋಡಣೆ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಪಡಿತರ ಹಂಚಿಕೆಯನ್ನು ತಡೆಹಿಡಿಯಲಾಗುವುದು. ಸರ್ಕಾರದ ಆದೇಶದನ್ವಯ ಆಧಾರ್ ಸಂಖ್ಯೆ ಜೋಡಣೆ ಮಾಡುತ್ತಿರುವ ಹಿನ್ನಲೆಯಲ್ಲಿ ಹೊಸದಾಗಿ ಪಡಿತರ ಚೀಟಿ ವಿತರಿಸುವ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಆಹಾರ ಇಲಾಖೆಯ ಉಪನಿರ್ದೇಶಕರಾದ ಆರ್. ರಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 23ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಜುಲೈ 23ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ದೂ.ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 25ರಂದು ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರ
ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ವ ಶಿಕ್ಷಣ ಅಭಿಯಾನ ವತಿಯಿಂದ 1 ರಿಂದ 10ನೇ ತರಗತಿವರೆಗಿನ ವಿಕಲಚೇತನ ಮಕ್ಕಳಿಗೆ ವೈದ್ಯಕೀಯ ತಪಾಸಣಾ ಶಿಬಿರವನ್ನು ಜುಲೈ 25ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಪೇಟೆ ಪ್ರೈಮರಿ ಶಾಲೆ)ಯಲ್ಲಿ ಏರ್ಪಡಿಸಲಾಗಿದೆ.
ಶಾಲಾ ಮುಖ್ಯ ಶಿಕ್ಷಕರು, ಸಹಶಿಕ್ಷಕರು ವಿಕಲಚೇತನ ಮಕ್ಕಳ ಪೋಷಕರಿಗೆ ಮಾಹಿತಿ ತಿಳಿಸಿ ವಿದ್ಯಾರ್ಥಿಗಳನ್ನು ಕರೆತಂದು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 26ರಂದು ಕೊಳ್ಳೇಗಾಲ ತಾಲೂಕಿನ ಬೈಲೂರಿನಲ್ಲಿ ಅಂಚೆ ಸಂತೆ
ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ಅಂಚೆ ಇಲಾಖೆ ವತಿಯಿಂದ ಕೊಳ್ಳೇಗಾಲ ತಾಲೂಕಿನ ಬೈಲೂರು ಗ್ರಾಮದಲ್ಲಿ ಜುಲೈ 26ರಂದು ಅಂಚೆ ಸಂತೆ ಹಮ್ಮಿಕೊಳ್ಳಲಾಗಿದೆ.
ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ ಮತ್ತು ಅಂಚೆ ಜೀವ ವಿಮೆ ಸೇರಿದಂತೆ ಇತರೆ ಅಂಚೆ ಯೋಜನೆಗಳನ್ನು ಸ್ಥಳದಲ್ಲೇ ಸ್ವೀಕರಿಸಲಾಗುತ್ತದೆ.
ಬೈಲೂರು ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಹೆಚ್ಚಿನ ದರದಲ್ಲಿ ರಸಗೊಬ್ಬರ ಮಾರಾಟ ಮಾಡುವವರ ವಿರುದ್ಧ ಕ್ರಮ : ಕೃಷಿ ಇಲಾಖೆ ಎಚ್ಚರಿಕೆ
ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ರಸಗೊಬ್ಬರದ ಸರಬರಾಜಿನಲ್ಲಿ ಯಾವುದೇ ಕೊರತೆ ಉಂಟಾಗಿಲ್ಲ. ರಸಗೊಬ್ಬರ ಮಾರಾಟಗಾರರು ನಿಗದಿತ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡುಬಂದಲ್ಲಿ ದೂರು ನೀಡುವಂತೆ ಕೃಷಿ ಇಲಾಖೆ ತಿಳಿಸಿದೆ.
ರಸಗೊಬ್ಬರ ತಯಾರಿಕಾ ಕಂಪನಿಗಳಾದ ಇಪ್ಕೋ, ಐಪಿಎಲ್, ಕ್ರಿಬ್ಕೋ, ಎಂಸಿಎಫ್, ಆರ್‍ಸಿಎಫ್, ಕೋರಮಂಡಲ್, ಜುವಾರಿ ಸಂಸ್ಥೆಯು ರಸಗೊಬ್ಬರಗಳ ದರವನ್ನು ಪರಿಷ್ಕರಿಸಿದೆ. ಪರಿಷ್ಕøತ ಗರಿಷ್ಟ ಮಾರಾಟ ಬೆಲೆಯ ಮಿತಿಯಲ್ಲಿಯೇ ಮಾರಾಟ ಮಾಡುವುದು ಕಡ್ಡಾಯವಾಗಿದೆ. ಇದಕ್ಕಿಂತ ಹೆಚ್ಚಿನ ದರ ಪಡೆಯುವ ಮಾರಾಟಗಾರರ ವಿರುದ್ಧ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಥವಾ ಸಹಾಯಕ ಕೃಷಿ ನಿರ್ದೇಶಕರಿಗೆ ದೂರು ನೀಡಬಹುದು. ಹೆಚ್ಚು ದರ ಪಡೆಯುವ ಮಾರಾಟಗಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುತ್ತದೆ.
ಹೊಸ ದರಗಳು ಚಾಲ್ತಿಯಾದ ದಿನದಂದು ರಸಗೊಬ್ಬರಗಳು ಸರಬರಾಜಾಗಿದ್ದಲ್ಲಿ ಚೀಲದ ಮೇಲೆ ಗರಿಷ್ಟ ಮಾರಾಟ ಬೆಲೆಯು ಮೊದಲೇ ಮುದ್ರಿತವಾಗಿರುವುದರಿಂದ ಆ ದಿನದಿಂದ ಸರಬರಾಜಾಗಿರುವ ರಸಗೊಬ್ಬರಗಳಿಗೆ ಉತ್ಪಾದಕ ಸಂಸ್ಥೆಗಳು ಇನ್‍ವಾಯ್ಸ್‍ನಲ್ಲಿ ಪರಿಷ್ಕರಿಸಿದ ಬೆಲೆಯನ್ನು ನಮೂದಿಸಿ ಬಿಲ್ಲನ್ನು ಮಾರಾಟಗಾರರಿಗೆ ನೀಡಿರುತ್ತಾರೆ. ಇದನ್ನು ಪರಿಶೀಲಿಸಿ ಮಾರಾಟಗಾರರು ಸಂಸ್ಥೆವಾರು ಇನ್‍ವಾಯ್ಸ್‍ಗೆ ಸಂಬಂಧಿಸಿದ ಸರಬರಾಜಾದ ರಸಗೊಬ್ಬರದ ಪ್ರಮಾಣವನ್ನು ಮತ್ತು ದರವನ್ನು ಮಾರಾಟ ಮಳಿಗೆಯ ಮುಂದೆ ಸುಲಭವಾಗಿ ಕಾಣಿಸುವಂತೆ ಪ್ರದರ್ಶಿಸಬೇಕು. ರಸಗೊಬ್ಬರಗಳು ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭ್ರಷ್ಠಾಚಾರ ನಿಗ್ರಹದಳ ಪೊಲೀಸ್ ಠಾಣೆ ಆರಂಭ : ಸರ್ಕಾರಿ ಅಧಿಕಾರಿ ಸಿಬ್ಬಂದಿ ವಿರುದ್ಧ ದೂರು ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ಜಿಲ್ಲಾ ಕೇಂದ್ರವಾದ ಚಾಮರಾಜನಗರ ಪಟ್ಟಣದಲ್ಲಿ ಭ್ರಷ್ಠಾಚಾರ ನಿಗ್ರಹದಳ ಪೊಲೀಸ್ ಠಾಣೆ ಆರಂಭಿಸಲಾಗಿದ್ದು ನಾಗರಿಕರು ಸರ್ಕಾರಿ ಕಚೇರಿ ಸಂಸ್ಥೆಗಳಲ್ಲಿ ಕೆಲಸ ವಿಳಂಬ ಅಥವಾ ಅಧಿಕಾರಿ ಸಿಬ್ಬಂದಿ ಹಣದ ಬೇಡಿಕೆ ಇಟ್ಟಲ್ಲಿ ಇಲ್ಲವೇ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಕಂಡುಬಂದಲ್ಲಿ ದೂರು ನೀಡಬಹುದಾಗಿದೆ.
ರಾಜ್ಯ ಸರ್ಕಾರದ ಆದೇಶದ ಮೇರೆಗೆ ಚಾಮರಾಜನಗರ ಪಟ್ಟಣದ ನ್ಯಾಯಾಲಯ ರಸ್ತೆಯಲ್ಲಿ ಭ್ರಷ್ಠಾಚಾರ ನಿಗ್ರಹದಳ ಪೊಲೀಸ್ ಠಾಣೆಯನ್ನು ಏಪ್ರಿಲ್ 6ರಿಂದಲೇ ಆರಂಭಿಸಲಾಗಿದೆ. ನಾಗರಿಕರು ಯಾವುದೇ ಸರ್ಕಾರಿ ಕಚೇರಿ ಸಂಸ್ಥೆಗಳಲ್ಲಿ ಕೆಲಸ ವಿಳಂಬವಾಗುತ್ತಿದ್ದಲ್ಲಿ, ಸರ್ಕಾರಿ ಅಧಿಕಾರಿ ಸಿಬ್ಬಂದಿ ಕೆಲಸ ಮಾಡಲು ಹಣದ ಬೇಡಿಕೆ ಇಟ್ಟಲ್ಲಿ ಅಥವಾ ಸರ್ಕಾರಿ ಅಧಿಕಾರಿ ಸಿಬ್ಬಂದಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿರುವುದು ಕಂಡುಬಂದಲ್ಲಿ ಭ್ರಷ್ಠಾಚಾರ ನಿಗ್ರಹದಳದ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ದೂರು ಸಲ್ಲಿಸಬಹುದಾಗಿದೆ. ಅಲ್ಲದೆ ದೂರವಾಣಿ ಸಂಖ್ಯೆ 08226-226666 ಅಥವಾ ಮೊಬೈಲ್ 9480806226 ಮತ್ತು 9480806275ಗೆ ಕರೆ ಮಾಡಬಹುದಾಗಿದೆ ಎಂದು ಭ್ರಷ್ಠಾಚಾರ ನಿಗ್ರಹದಳದ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಸರ ಧಕ್ಕೆಗೆ ಅವಕಾಶವಿಲ್ಲ : ಜಿಲ್ಲಾಧಿಕಾರಿ ಬಿ. ರಾಮು
ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ತಾಲೂಕಿನ ಬದನಗುಪ್ಪೆ ಮತ್ತು ಕೆಲ್ಲಂಬಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಅಭಿವೃದ್ಧಿಪಡಿಸಲಾಗುತ್ತಿರುವ ಕೈಗಾರಿಕಾ ಪ್ರದೇಶದಲ್ಲಿ  ಪರಿಸರ ಮಾಲಿನ್ಯಕ್ಕೆ ಅವಕಾಶವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲು ಸೂಚಿಸಲಾಗಿದೆ ಎಂದು  ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ಬದನಗುಪ್ಪೆ ಕೆಲ್ಲಂಬಳ್ಳಿ ಕೈಗಾರಿಕಾ ಯೋಜನಾ ಪ್ರದೇಶದಲ್ಲಿ ಇಂದು ಯೋಜನೆ ಕುರಿತಂತೆ ನಾಗರಿಕರಿಂದ ಅಹವಾಲು, ಸಲಹೆ ಸ್ವೀಕರಿಸುವ ಸಲುವಾಗಿ ಆಯೋಜಿಸಲಾಗಿದ್ದ ಪರಿಸರ ಸಾರ್ವಜನಿಕ ಆಲಿಕೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,
ಕೈಗಾರಿಕಾ ಯೋಜನಾ ಪ್ರದೇಶದಲ್ಲಿ ಪರಿಸರಕ್ಕೆ ಧಕ್ಕೆಯಾಗದ ಹಾಗೆ ವಹಿಸಬೇಕಿರುವ ಪೂರಕ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ನಿರ್ವಹಣೆಗಾಗಿಯೇ ಒಟ್ಟು 9.78 ಎಕರೆ ಭೂಮಿಯನ್ನು ಕಾಯ್ದಿರಿಸಲಾಗಿದೆ. ಒಳಚರಂಡಿಗಾಗಿ 295 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಕುಡಿಯುವ ನೀರಿಗಾಗಿಯೇ ಕಬಿನಿ ನದಿ ಮೂಲದಿಂದ ಪಡೆಯಲು ಟೆಂಡರ್ ಕರೆಯಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಯೋಜನಾ ಪ್ರದೇಶದಲ್ಲಿ ಬಹುಪಾಲು ಆಗ್ರೋ, ಗ್ರಾನೈಟ್ ಆಧಾರಿತ ಕೈಗಾರಿಕೆಗಳು ಉದ್ಯಮಗಳು ಸ್ಥಾಪನೆಯಾಗಲಿವೆ. ಹೀಗಾಗಿ ಪರಿಸರಕ್ಕೆ ಹಾನಿಯಗುವ ಸಾಧ್ಯತೆ ಇಲ್ಲ. ಪರಿಸರ ಮಾಲಿನ್ಯಕ್ಕೆ ತೊಂದರೆಯಾಗದ ಹಾಗೆ ಇರುವ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗುತ್ತದೆ. ಸುಧಾರಿತ ಯಂತ್ರ ಇನ್ನಿತರ ಉಪಕರಣಗಳನ್ನು ಅಳವಡಿಸುವುದರಿಂದ ಹೊಗೆ ಇನ್ನಿತರ ವಾಯುಮಾಲಿನ್ಯ ಅಂಶಗಳು ಆರೋಗ್ಯಕ್ಕೆ ಧಕ್ಕೆ ಮಾಡದ ರೀತಿಯಲ್ಲಿ ರಕ್ಷಿಸಲಿದೆ ಎಂದರು.
ಕೈಗಾರಿಕೆಗಳಿಂದ ಬಿಡಲಾಗುವ ತ್ಯಾಜ್ಯ, ರಾಸಾಯನಿಕ ನೀರನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲಾಗುತ್ತದೆ. ಇಂತಹ ನೀರನ್ನು ಇಂಗಿಸಲು ಅವಕಾಶ ಕೊಡುವುದಿಲ್ಲ. ಮಳೆ ನೀರು ಕೊಯ್ಲು ಸಂಗ್ರಹಣೆಗೆ ಅವಕಾಶ ಮಾಡಲಾಗುತ್ತದೆ. ತ್ಯಾಜ್ಯ ನೀರನ್ನು ಶುದ್ಧೀಕರಿಸುವ ಅತ್ಯಾಧುನಿಕ ವಿಧಾನಗಳನ್ನು ಅಳವಡಿಸಿಕೊಂಡು ಆರೋಗ್ಯಕರ ರೀತಿಯಲ್ಲಿ ಗಿಡಮರ, ಇತರೆ ಉಪಯೋಗಕ್ಕೆ ಪೋಷಣೆ ಮಾಡಲು ಬಳಸಿಕೊಳ್ಳಬಹುದಾಗಿದೆ. ಪರಿಸರಕ್ಕೆ ಧಕ್ಕೆಯಾಗದ ಹಾಗೆ ಇರುವ ಎಲ್ಲ ಸುಧಾರಿತ ತಂತ್ರಜ್ಞಾನಗಳನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೈಗಾರಿಕಾ ಪ್ರದೇಶದ ಸುತ್ತಮುತ್ತಲ ಗ್ರಾಮ ಪ್ರದೇಶಗಳ ಜನತೆಗೆ ಯಾವುದೇ ತೊಂದರೆಯಾಗದಂತೆ ಉದ್ಯಮಗಳು ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕೈಗಾರಿಕೆಗಳು ಎಲ್ಲ ಅಗತ್ಯ ಕ್ರಮಗಳನ್ನು ಪಾಲಿಸಲು ಕಟ್ಟುನಿಟ್ಟಿನ ನಿಗಾ ವಹಿಸಲಾಗುತ್ತದೆ. ಹೀಗಾಗಿ ಜನರು ಯಾವುದೇ ಆತಂಕ ಪಡಬೇಕಿಲ್ಲ. ಹಸಿರೀಕರಣಕ್ಕೂ ಕೈಗಾರಿಕಾ ಪ್ರದೇಶದಲ್ಲಿ ಆದ್ಯತೆ ಮೇರೆಗೆ ಅವಶ್ಯಕ ಕೆಲಸಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
ಪೂರ್ಣ ಪ್ರಮಾಣದಲ್ಲಿ ಕೈಗಾರಿಕೆ ಪ್ರದೇಶ ಅಭಿವೃದ್ಧಿಯಾದರೆ 16 ಸಾವಿರ ಜನರಿಗೆ ಉದ್ಯೋಗ ಲಭಿಸಲಿದೆ. ಸ್ಥಳೀಯರಿಗೆ ಹಾಗೂ ಯೋಜನೆಗಾಗಿ ಭೂಮಿ ನೀಡಿದ ಕುಟುಂಬಗಳಿಗೆ ಉದ್ಯೋಗ ನೀಡಲಾಗುತ್ತದೆ. ಉದ್ಯಮಗಳಲ್ಲಿ ಉದ್ಯೋಗ ನಿರ್ವಹಿಸಲು ಅಗತ್ಯವಿರುವ ಕೌಶಲ ತರಬೇತಿ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ. ಕೈಗಾರಿಕಾ ಘಟಕಗಳೇ ತರಬೇತಿ ನೀಡಿ ಉದ್ಯೋಗಕ್ಕೆ ನೇಮಕ ಮಾಡಿಕೊಳ್ಳಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಜೈಕೃಷ್ಣ ಮಾತನಾಡಿ ಸ್ಥಳೀಯರಿಗೆ ಉದ್ಯೋಗ ಅವಕಾಶಗಳನ್ನು ನೀಡಲು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಹುದ್ದೆಗಳ ವರ್ಗೀಕರಣ ಪ್ರಕ್ರಿಯೆ ನಿರ್ವಹಿಸಿ ಭೂರಹಿತರಿಗೆ ಸುತ್ತಮುತ್ತಲ ಗ್ರಾಮದ ಜನತೆಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದರು.
ಸಭೆಯ ಆರಂಭದಲ್ಲೇ ಗ್ರಾಮಸ್ಥರು, ಪರಿಸರ ಆಸಕ್ತರು ಮಾತನಾಡಿ ಭೂಪಾಲ್‍ನಲ್ಲಿ ಸಂಭವಿಸಿದ ವಿಷ ಅನಿಲ ದುರಂತ ಘಟನೆಗೆ ಕಾರಣವಾಗುವ ಉದ್ಯಮಗಳು ಸ್ಥಾಪನೆಯಾಗಲು ಅವಕಾಶ ಕೊಡಬಾರದು. ತ್ಯಾಜ್ಯ ಕಲುಷಿತ ನೀರು ಗ್ರಾಮಗಳಿಗೆ ಸೇರಕೂಡದು. ಅಂತರ್ಜಲಕ್ಕೆ ಮಾರಕವಾಗುವ ಘಟಕಗಳಿಗೆ ಆಸ್ಪದ ನೀಡಬಾರದು ಎಂಬ ಆಗ್ರಹ ಮಾಡಿದರು.
ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಬೇಕು. ಭೂಪರಿಹಾರ ಸಂಬಂಧ ತೊಡಕಾಗಿರುವ ಜಮೀನುಗಳಿಗೆ ಶೀಘ್ರವಾಗಿ ನೆರವು ಕಲ್ಪಿಸಬೇಕು ಎಂದು ಕೆಲ ಗ್ರಾಮಸ್ಥರು ಸಭೆಯಲ್ಲಿ ಬೇಡಿಕೆ ಇಟ್ಟರು.
ತಹಸೀಲ್ದಾರ್ ಮಹದೇವು, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುತ್ತುರಾಜ್, ಕೆಐಡಿಬಿಯ ವಿಶೇಷ ಭೂಸ್ವಾಧೀನಾಧಿಕಾರಿ ಎಂ. ರಾಜೇಶ್, ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಮೈಸೂರು ವಲಯದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಲಿಂಗರಾಜು, ಪ್ರಾದೇಶಿಕ ಅಧಿಕಾರಿ ಪ್ರಕಾಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.


ಜುಲೈ 21ರಂದು ಜಿಲ್ಲೆಗೆ ನಗರಾಭಿವೃದ್ಧಿ, ಹಜ್ ಸಚಿವರ ಭೇಟಿ  
  ಚಾಮರಾಜನಗರ, ಜು. 20 (ಕರ್ನಾಟಕ ವಾರ್ತೆ):- ನಗರಾಭಿವೃದ್ಧಿ ಹಾಗೂ ಹಜ್ ಸಚಿವರಾದ ಅರ್. ರೋಷನ್ ಬೇಗ್ ಅವರು ಜುಲೈ 21ರಂದು ಜಿಲ್ಲೆಗೆ ಭೇಟಿ ನೀಡುವರು.
ಸಂಜೆ 5.30 ಗಂಟೆಗೆ ಶಿವನಸಮುದ್ರದ ಹಜರತ್ ಮರ್ದಾನೆ ಗೈಬ್ ದರ್ಗಾಕ್ಕೆ ಭೇಟಿ ನೀಡುವರು. 6.30ಗಂಟೆಗೆ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.


ಜು. 23ರಂದು ಜಿಲ್ಲೆಯ ವಿವಿಧೆಡೆ ಲೋಕಸಭಾ ಸದಸ್ಯರ ಪ್ರವಾಸ : ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಜುಲೈ 23ರಂದು ಜಿಲ್ಲೆಯ ವಿವಿಧೆಡೆ ಪ್ರವಾಸ ಕೈಗೊಂಡಿದ್ದು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವರು.
ಚಾಮರಾಜನಗರ ತಾಲೂಕಿನ ಹೊಸಮೋಳೆ ಗ್ರಾಮದ ಉಪ್ಪಾರ ಬೀದಿಯಲ್ಲಿ ಸಮುದಾಯ ಭವನ, ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವರು. ಮರಳ್ಳಿಮೋಳೆ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವರು. ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದ ನಾಯಕರ ಬೀದಿಯಲ್ಲಿ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸುವರು. ಅಲ್ಲದೆ ಆದರ್ಶ ಶಾಲೆ ಪರಿವೀಕ್ಷಣೆ ಮಾಡುವರು. ಹೊನ್ನೂರು ಗ್ರಾಮದ ನಾಯಕರ ಬೀದಿಯಲ್ಲಿ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸುವರು. ಕೊಳ್ಳೇಗಾಲದ ಶಂಕನಪುರದ ಹತ್ತಿರ ಆದರ್ಶ ಶಾಲೆ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸುವರು. ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡುವರು ಎಂದು ಲೋಕಸಭಾ ಸದಸ್ಯರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಹೊಂಡ ನೀರು ಬಳಕೆಗೆ ಸಲಹೆ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಕ್ಷೀಣಿಸಿರುವ ಹಿನ್ನೆಲೆಯಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡಿರುವವರು ಮಳೆಯಿಂದ ಶೇಖರಣೆಯಾಗಿರುವ ನೀರನ್ನು ಸಂದಿಗ್ಧ ಹಂತಗಳಲ್ಲಿ ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯುವಂತೆ ಕೃಷಿ ಇಲಾಖೆ ಸಲಹೆ ಮಾಡಿದೆ.
ಮಳೆಯ ಅನಿಶ್ಚಿತತೆ ಮತ್ತು ಇತರೆ ಕಾರಣಗಳಿಂದ ಬೆಳೆ ಉತ್ಪಾದಕತೆ ಮತ್ತು ಕೃಷಿ ಆದಾಯದ ಮೇಲೆÉ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಹೀಗಾಗಿ ಮಳೆಯಾಶ್ರಿತ ರೈತ ಸಮುದಾಯದ ಜೀವನೋಪಾಯಕ್ಕಾಗಿ ಕೃಷಿ ಭಾಗ್ಯ ಯೋಜನೆ ಜಾರಿಗೆ ತರಲಾಗಿದೆ.
ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ. ಮಳೆ ನೀರಿನ ಸಂಗ್ರಹಣೆ ಮತ್ತು ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮಪಡಿಸುವುದು ಸಹ ಯೋಜನೆಯ ಮೂಲ ಗುರಿಯಾಗಿದೆ.
ಕೃಷಿ ಭಾಗ್ಯ ಯೋಜನೆಯಡಿ ಈಗಾಗಲೇ ಕೃಷಿ ಹೊಂಡಗಳನ್ನು ನಿರ್ಮಿಸಿಕೊಂಡು ತುಂತುರು ನೀರಾವರಿ ಮತ್ತು ಡೀಸಲ್ ಪಂಪ್‍ಸೆಟ್ ಘಟಕ ಪಡೆದುಕೊಂಡಿರುವ ರೈತರು ಮಳೆಯಿಂದ ಕೃಷಿ ಹೊಂಡದಲ್ಲಿ ಸಂಗ್ರಹವಾಗಿರುವ ನೀರನ್ನು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯಬೇಕೆಂದು ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಕ್ಕಳ ಕಲ್ಯಾಣ ಕ್ಷೇತ್ರ ಸೇವೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿ ಹಾಗೂ ನಗದು ಬಹುಮಾನಕ್ಕೆ ಅರ್ಜಿ ಆಹ್ವಾನಿಸಿದೆ.
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 25 ಸಾವಿರ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ ಮತ್ತು ಸಂಸ್ಥೆಗಳಿಗೆ 1 ಲಕ್ಷ ರೂ. ನಗದು ಬಹುಮಾನ, ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುತ್ತದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭನವದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಆಗಸ್ಟ್ 12ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.




ಪರಿಶಿಷ್ಟ ವರ್ಗ ಪಂಗಡದವರಿಗೆ ಸ್ಮಶಾನ ಭೂಮಿ ಖರೀದಿ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಇಲ್ಲದೇ ಇರುವ ಪರಿಶಿಷ್ಟ ವರ್ಗ ಪಂಗಡದ ಜನತೆಗೆ ಭೂಮಿ ಖರೀದಿಸಿ ಕೊಡಲಾಗುತ್ತದೆ.
ಪರಿಶಿಷ್ಟ ಪಂಗಡದ ಉಪಯೋಜನೆಯಡಿ ನಿಗದಿಪಡಿಸಿರುವ ಅನುದಾನದಡಿ ಗ್ರಾಮಾಂತರ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಇಲ್ಲದ ಕಡೆ ಪರಿಶಿಷ್ಟ ವರ್ಗ ಪಂಗಡದವರಿಗೆ ಭೂಮಿ ಖರೀದಿಸಲು ಆದೇಶಿಸಲಾಗಿದೆ. ಅರ್ಜಿ ಸಲ್ಲಿಸಲು ಮತ್ತು ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ (ದೂ.ಸಂ. 08226-226070), ಚಾಮರಾಜನಗರ ತಾಲೂಕು ಪರಿಶಿಷ್ಟ ಕಲ್ಯಾಣಾಧಿಕಾರಿ (08226-223823), ಕೊಳ್ಳೇಗಾಲ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ (08224-255060), ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು (08226-240309), ಗುಂಡ್ಲುಪೇಟೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರನ್ನು (08229-222984) ಸಂಪರ್ಕಿಸುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಸರಸ್ವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ.
2 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಈವರೆಗೆ ವಿದ್ಯಾರ್ಥಿ ವೇತನಕ್ಕಾಗಿ ನೋಂದಣಿ ಮಾಡಿಸದಿದ್ದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆ ಪಡೆದು ಭರ್ತಿ ಮಾಡಿ ಶಾಲಾ ಮುಖ್ಯೋಪಾಧ್ಯಾಯರು ಸಲ್ಲಿಸಬೇಕು.
ನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವವರ ಹಾಗೂ ಪೌರ ಕಾರ್ಮಿಕರ ಮಕ್ಕಳು ಸಂಬಂದಪಟ್ಟ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ವೃತ್ತಿಯಲ್ಲಿ ತೊಡಗಿರುವ ಕುರಿತು ದೃಢೀಕರಿಸಿಕೊಂಡು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ಆಗಸ್ಟ್ 15 ಕಡೆಯ ದಿನವಾಗಿದೆ. ವಿವರಗಳಿಗೆ ನಗರದ ಕರಿನಂಜನಪುರ ರಸ್ತೆಯ ಡಾ. ಬಿ.ಆರ್.  ಅಂಬೇಡ್ಕರ್ ಭವನದಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÉ.
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ವ್ಯಾಪ್ತಿಯ ವಿವಿದೆಡೆ ಅಂಗನವಾಡಿಗಳಲ್ಲಿ ಖಾಲಿ ಇರುವ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಲಕ್ಷ್ಮೀಪುರ (ಪ.ಜಾ), ಉತ್ತುವಳ್ಳಿ (ಪ.ಜಾ), ವೆಂಕಟಯ್ಯನ ಛತ್ರ ಹೊಸೂರು (ಸಾಮಾನ್ಯ), ಕುಲಗಾಣ (ಸಾಮಾನ್ಯ), ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರ ಹುದ್ದೆಗಳಿವೆ.
ಕುಟ್ಟೇಗೌಡನಹುಂಡಿ (ಸಾಮಾನ್ಯ), ಯಾನಗಹಳ್ಳಿ (ಸಾಮಾನ್ಯ), ರಾಮಸಮುದ್ರ ಟೌನ್ ವಾರ್ಡ್ (ಪ.ಪಂ), ಬೆಟ್ಟದಪುರ (ಸಾಮಾನ್ಯ), ಹರದನಹಳ್ಳಿ (ಬಂಡಿಗೆರೆ) (ಪ.ಜಾ), ಮಲಿಯೂರು (ಸಾಮಾನ್ಯ) ಅಂಗನವಾಡಿಗಳಲ್ಲಿ ಸಹಾಯಕಿಯರ ಹುದ್ದೆಗಳು ಖಾಲಿ ಇವೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರ ಭರ್ತಿ ಮಾಡಿ ದೃಢೀಕರಿಸಿದ ದಾಖಲೆ ಹಾಗೂ ಭಾವಚಿತ್ರ ಲಗತ್ತಿಸಿ ಆಗಸ್ಟ್ 16ರೊಳಗೆ ಚಾಮರಾಜನಗರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಇಟ್ಟಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು. ಹೆಚ್ಚಿನ ಮಾಹಿತಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರಿಂದ (ದೂ.ಸಂ. 08226-222603) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಕೊಳ್ಳೇಗಾಲ : ಪ್ರೋತ್ಸಾಹಧನ ಅರ್ಜಿ ಸಲ್ಲಿಕೆಗೆ ಕಾಲಾವಕಾಶ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲೂಕಿನಲ್ಲಿ ದ್ವಿತೀಯಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಅಂಕಪಟ್ಟಿ ಬಂದ ಬಳಿಕ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಥಮ ಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಮೂಲ ಅಂಕಪಟ್ಟಿ ಬಂದ ನಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 31ರವರೆಗೂ ಕಾಲಾವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿವರಕ್ಕೆ ವೆಬ್ ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಅಥವಾ ಕೊಳ್ಳೇಗಾಲ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜು. 23ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಜು. 21 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಜುಲೈ 23ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ದೂ.ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಜು. 23ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ನೇರ ಫೋನ್ ಇನ್ ಕಾರ್ಯಕ್ರಮವನ್ನು ಜುಲೈ 23ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ತಮ್ಮ ಕುಂದುಕೊರತೆಗಳಿದ್ದಲ್ಲಿ ದೂ.ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 27ರಂದು ಹರದನಹಳ್ಳಿಯಲ್ಲಿ ಡೀಸಿ, ಸಿಇಓ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿ ಕೇಂದ್ರದ ನಾಡ ಕಚೇರಿ ಆವರಣದಲ್ಲಿ ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಸಮ್ಮುಖದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 30ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 26ರಂದು ಮಹದೇಶ್ವರ ದೇವಾಲಯದ ಗೋಲಕ ಹಣ ಎಣಿಕೆ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರ ಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ಜುಲೈ 26ರಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯವನ್ನು ನಡೆಸಲಾಗುವುದೆಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಇಡಿ, ಡಿಪಿಇಡಿ ಪ್ರವೇಶಕ್ಕೆ ಅಂತಿಮ ಪಟ್ಟಿ ಪ್ರಕಟ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ಪ್ರಸಕ್ತ ಸಾಲಿನ ಡಿಇಡಿ, ಡಿಪಿಇಡಿ ಕೋರ್ಸ್ ಪ್ರವೇಶಕ್ಕೆ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗಿದೆ.
ವೆಬ್ ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ ಪಟ್ಟಿ ಪ್ರಕಟಗೊಂಡಿದೆ. ನಗರದ ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಗೆ (ಡಯಟ್) ಪ್ರವೇಶ ಪಡೆಯುವ ಸಂಬಂಧ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಆಗಸ್ಟ್ 22ರೊಳಗೆ ನಿಗದಿತ ಶುಲ್ಕ ಪಾವತಿಸುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಯಳಂದೂರು : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ಯಳಂದೂರು ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಈವರೆಗೆ ವಿದ್ಯಾರ್ಥಿ ವೇತನಕ್ಕಾಗಿ ನೋಂದಣಿ ಮಾಡಿಸದಿದ್ದಲ್ಲಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ನಿಗದಿತ ನಮೂನೆ ಪಡೆದು ಭರ್ತಿ ಮಾಡಿ ಶಾಲಾ ಮುಖ್ಯೋಪಾಧ್ಯಾಯರು ಸಲ್ಲಿಸಬೇಕು.
ನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವವರ ಹಾಗೂ ಪೌರ ಕಾರ್ಮಿಕರ ಮಕ್ಕಳು ಸಂಬಂದಪಟ್ಟ ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ವೃತ್ತಿಯಲ್ಲಿ ತೊಡಗಿರುವ ಕುರಿತು ದೃಢೀಕರಿಸಿಕೊಂಡು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆಗೆ ಆಗಸ್ಟ್ 15 ಕಡೆಯ ದಿನವಾಗಿದೆ. ವಿವರಗಳಿಗೆ ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÉ.

ಮಹಿಳಾ ಕ್ಷೇತ್ರದ ಸೇವಾ ಸಾಧನೆ ನೀಡುವ ವಿವಿಧ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 22 (ಕರ್ನಾಟಕ ವಾರ್ತೆ):- ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ವ್ಯಕ್ತಿ, ಜಿಲ್ಲಾ, ಗ್ರಾಮ ಪಂಚಾಯಿತಿ, ಗ್ರಾಮೀಣ ಸಮುದಾಯ, ಮುನಿಸಿಪಲ್ ಸಂಸ್ಥೆ, ಕಾರ್ಪೋರೇಷನ್, ಇತರೆ ಖಾಸಗಿ ಕ್ಷೇತ್ರ ಸಂಸ್ಥೆಗಳಿಗೆ ನೀಡುವ ವಿವಿಧ ಪ್ರಶಸ್ತಿಗಳಿಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅರ್ಜಿ ಆಹ್ವಾನಿಸಿದೆ.
ಮಹಿಳಾ ಕಲ್ಯಾಣ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಅದರಲ್ಲೂ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ಗ್ರಾಮೀಣ ಸಮುದಾಯಕ್ಕೆ ರಾಣಿ ರುದ್ರಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಮಹಿಳಾ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ನಗರ, ಸ್ಥಳೀಯ ಸಂಸ್ಥೆಗೆ (ಮುನಿಸಿಪಲ್ ಸಂಸ್ಥೆ, ಕಾರ್ಪೋರೇಷನ್ ಇತ್ಯಾದಿ) ಮಾತಾ ಜೀಜಾಬಾಯಿ ಪ್ರಶಸ್ತಿ ನೀಡಲಾಗುತ್ತದೆ.
ಖಾಸಗಿ ಕ್ಷೇತ್ರ, ಸಾರ್ವಜನಿಕ ಕ್ಷೇತ್ರದಲ್ಲಿ ಮಹಿಳಾ ಸಶಕ್ಷತೆಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ದೇವಿ ಅಹಲ್ಯಾಬಾಯಿ ಹೋಳ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭನವದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಜುಲೈ 30ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




ನೇರ ಫೋನ್ ಇನ್ ಕಾರ್ಯಕ್ರಮ : 34 ದೂರು ದಾಖಲು
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 34 ದೂರುಗಳು ದಾಖಲಾದವು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್ ಮತ್ತು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ ಅವರ ಸಮ್ಮುಖದಲ್ಲಿ ನಡೆದ ಒಂದು ತಾಸಿನ ಅವಧಿಯ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾನಾ ಭಾಗದಿಂದ ಸಮಸ್ಯೆಗಳನ್ನು ಗಮನಕ್ಕೆ ತರಲಾಯಿತು.
ಯಳಂದೂರು ಪಟ್ಟಣದ 2ನೇ ವಾರ್ಡ್‍ನಿಂದ ಕರೆ ಮಾಡಿದ ಸ್ಥಳೀಯರೊಬ್ಬರು ತಮ್ಮ ವಾರ್ಡ್‍ನಲ್ಲಿ ಬೀದಿ ದೀಪ ಕೆಟ್ಟು ಒಂದು ವಾರವಾಗಿದೆ. ಸ್ವಚ್ಚತೆ ಕೆಲಸವೂ ನಡೆಯುತ್ತಿಲ್ಲ. ಸಮಸ್ಯೆಗಳು ಹೆಚ್ಚಾಗಿವೆ. ಯಾವುದೇ ಪರಿಹಾರವಾಗುತ್ತಿಲ್ಲವೆಂದು ತಿಳಿಸಿದರು. ಕೂಡಲೇ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಪ್ರಸ್ತುತ ಫೋನ್ ಇನ್ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಹಾಜರಾಗಿದ್ದಾರೆ. ಈ ಬಗ್ಗೆ ಸೂಚನೆ ನೀಡಲಾಗುವುದು ಎಂದರು. ಬಳಿಕ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗೆ ಕೂಡಲೇ ಸಮಸ್ಯೆ ಪರಿಹರಿಸಲು ಕ್ರಮ ವಹಿಸುವಂತೆ ತಿಳಿಸಿದರು.
ಬಂಡಿಗೆರೆಯಿಂದ ವಿದ್ಯಾರ್ಥಿಯೋರ್ವ ಕರೆ ಮಾಡಿ ಇಲ್ಲಿನ ಶಾಲೆ ಅಕ್ಕಪಕ್ಕದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ಗಮನ ಸೆಳೆದರು. ಹನೂರು ಭಾಗದ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಮದ್ಯವನ್ನು ಅವ್ಯಾಹತವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಮತ್ತೊಬ್ಬರು ಆ ಭಾಗದಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಗಮನಕ್ಕೆ ತಂದರು. ಅಬಕಾರಿ ಅಧಿಕಾರಿಗಳನ್ನು ಕಳುಹಿಸಿ ಅಕ್ರಮ ಮದ್ಯ ಮಾರಾಟ ತಡೆಯಲು ಕ್ರಮ ತೆಗೆದುಕೊಳ್ಳುವುದಾಗಿ ಭಾರತಿ ಅವರು ತಿಳಿಸಿದರು.
ಮದ್ದೂರು, ಗುಂಡ್ಲುಪೇಟೆಯಿಂದ ಕರೆ ಮಾಡಿದ ಸ್ಥಳೀಯ ನಾಗರಿಕರಿಬ್ಬರು ಜಿಲ್ಲೆಯಲ್ಲಿ ಜೀತ ವಿಮುಕ್ತರನ್ನು ಗುರುತಿಸಿ ದೃಢೀಕರಣ ನೀಡುವ ಪ್ರಕ್ರಿಯೆ ಸಂಬಂಧ ಜರೂರು ಕ್ರಮ ತೆಗೆದುಕೊಳ್ಳಬೇಕಿದೆ. ಉಪವಿಭಾಗಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ತೀರ್ಮಾನ ಕೈಗೊಂಡು ಜೀತ ವಿಮುಕ್ತರಿಗೆ ನೆರವು ಕಲ್ಪಿಸಬೇಕೆಂದು ಕೋರಿದರು. ಈ ಕುರಿತು ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಅಗತ್ಯ ಕ್ರಮ ವಹಿಸಲು ನಿರ್ದೇಶನ ನೀಡಲಾಗುವುದೆಂದರು.
ಬಿಳಿಗಿರಿರಂಗನಬೆಟ್ಟದಲ್ಲಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಆರಂಭದ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಬಿಳಿಗಿರಿರಂಗನಬೆಟ್ಟದ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು ಎಂಬ ಒತ್ತಾಯವು ಕೇಳಿಬಂತು. ಇದೇವೇಳೆ ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಎಸ್‍ಆರ್‍ಟಿಸಿ  ವಿಭಾಗೀಯ ನಿಯಂತ್ರಣಾಧಿಕಾರಿ ಅವರು ಬಸ್ ನಿಲ್ದಾಣ ಕಾಮಗಾರಿ ಸಂಬಂಧ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಉತ್ತರಿಸಿದರು.
ಎಚ್. ಮೂಕಳ್ಳಿಯಿಂದ ಕರೆ ಮಾಡಿದ ಗ್ರಾಮಸ್ಥರೊಬ್ಬರು ಸ್ಥಳೀಯ ಕೆರೆಯನ್ನು ಮತ್ತೆ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಡಿ. ಭಾರತಿ ಅವರು ಕೆರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದರು.
ನಾಗವಳ್ಳಿಯಿಂದ ಕರೆ ಮಾಡಿದ ಸ್ಥಳೀಯರೊಬ್ಬರು ಗ್ರಾಮದಿಂದ ನಗರದ ರೈಲುನಿಲ್ದಾಣಕ್ಕೆ ಸಂಚರಿಸುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಸೇವೆಯನ್ನು ಕಳೆದ ಕೆಲ ದಿನಗಳಿಂದ ಸ್ಥಗಿತಗೊಳಿಸಲಾಗುದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೀವ್ರ ಅನಾನುಕೂಲವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಹಾಜರಿದ್ದ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಸೋಮವಾರದಿಂದ ಸೇವೆಯನ್ನು ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಕನ್ನಡ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ದೂರವಾಣಿ ಮೂಲಕ ಮಾತನಾಡಿ ನಗರದ ಚಾಮರಾಜೇಶ್ವರ ದೇವಾಲಯ ಹಿಂಭಾಗದಲ್ಲಿರುವ ಪಾರಂಪಾರಿಕ ಜನನ ಮಂಟಪ ಸ್ಥಳಕ್ಕೆ ಧಕ್ಕೆಯಾಗದ ರೀತಿಯಲ್ಲಿ ಕಟ್ಟಡಗಳು ನಿರ್ಮಾಣವಾಗಬಾರದು. ಜನನ ಮಂಟಪ ಸಂರಕ್ಷಣೆಗೆ ಅಗತ್ಯ ಕ್ರಮ ವಹಿಸಬೇಕೆಂದು ಒತ್ತಾಯಿಸಿದರು. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ತೆಗೆದುಕೊಳ್ಳಲಾಗುವುದೆಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.


ಹನೂರು ಪಟ್ಟಣದಿಂದ ಕರೆ ಮಾಡಿದ ನಿವಾಸಿಯೊಬ್ಬರು ಶಾಲಾವಾಹನಗಳಲ್ಲಿ ಮಿತಿಮೀರಿ ವಿದ್ಯಾರ್ಥಿಗಳನ್ನು ಕರೆದೊಯ್ಯಲಾಗುತ್ತಿದೆ. ಪೊಲೀಸ್ ಇಲಾಖೆ ನಿಯಂತ್ರಣ ಕ್ರಮಗಳನ್ನು ವಹಿಸುತ್ತಿಲ್ಲವೆಂದು ದೂರಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್ ಅವರು ವಾಹನಗಳನ್ನು ತೀವ್ರ ಪರಿಶೀಲಿಸಿ ನಿಯಂತ್ರಣಕ್ಕೆ ಇಲಾಖೆ ಮುಂದಾಗಲಿದೆ. ಪೋಷಕರು ಸಹ ಹೆಚ್ಚು ಸಂಖ್ಯೆಯಲ್ಲಿ ಕರೆತರುವ ವಾಹನಗಳಿಗೆ ತಮ್ಮ  ಮಕ್ಕಳನ್ನು ಕಳುಹಿಸಬಾರದು ಎಂದರು.
ಪೈಪ್‍ಲೈನ್ ದುರಸ್ತಿ, ಶೌಚಾಲಯ ನಿರ್ಮಾಣ ಬೇಡಿಕೆ, ಕುಡಿಯುವ ನೀರು ಸೇರಿದಂತೆ ಇತರೆ ಸಮಸ್ಯೆಗಳು ಫೋನ್ ಇನ್ ಕಾರ್ಯಕ್ರಮದಲ್ಲಿ ಕೇಳಿಬಂದವು.
 ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕನ್ನಡ ಪ್ರವೇಶ ಕಾವಾ, ಜಾಣ, ರತ್ನ ಪರೀಕ್ಷೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಕನ್ನಡ ಸಾಹಿತ್ಯ ಪರಿಷತ್ತು 2016-17ನೇ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಿದೆ.
ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕಡೆಯ ದಿನವಾಗಿದೆ. ದಂಡ ಶುಲ್ಕ 50 ರೂ.ವನ್ನು ಹೆಚ್ಚುವರಿಯಾಗಿ ನೀಡಿ ಸೆಪ್ಟೆಂಬರ್ 15ರವರೆಗೆ ಅರ್ಜಿ ಸಲ್ಲಿಸಬಹುದು.
ಪರೀಕ್ಷಾ ನಿಯಮಾವಳಿ ಮತ್ತು ಅರ್ಜಿಯನ್ನು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ 25 ರೂ. ಶುಲ್ಕ ಪಾವತಿಸಿ ಪಡೆಯಬಹುದು. ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ 30 ರೂ. ಮನಿಯಾರ್ಡರ್ ಮಾಡಿ ಅಂಚೆ ಮೂಲಕವೂ ಅರ್ಜಿ ಪಡೆದುಕೊಳ್ಳಬಹುದು.
ಪರೀಕ್ಷಾ ಅರ್ಜಿಗಳನ್ನು ಅಂತರ್ಜಾಲ ತಾಣ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆಯಬಹುದು. ಇದರೊಂದಿಗೆ ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕವಾಗಿ 25 ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕು. ವಿವರಗಳಿಗೆ ಕಸಾಪ ಗೌರವ ಕಾರ್ಯದರ್ಶಿ ಅಥವಾ ದೂರವಾಣಿ ಸಂಖ್ಯೆ 080-26623584 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÉ.

ಶಿಷ್ಯ ವೇತನ, ಪುಸ್ತಕ ಅನುದಾನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯ ವೇತನ ಹಾಗೂ ಪುಸ್ತಕ ಅನುದಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.
1ನೇ ತರಗತಿಯಿಂದ ಅಂತಿಮ ವರ್ಷದ ಪದವಿವರೆಗೆ ವ್ಯಾಸಂಗ ಮಾಡುತ್ತಿರುವ ರಾಜ್ಯದ ಮೂಲ ನಿವಾಸಿ, ಮಿಲಿಟರಿ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯ ವೇತನ ನೀಡಲಾಗುತ್ತದೆ. ಪಿಂಚಣಿ ಇಲ್ಲದ ರಾಜ್ಯದ ಮಾಜಿ ಸೈನಿಕರು ಹಾಗೂ ರಾಜ್ಯದಲ್ಲಿ ನೆಲೆಸಿರುವ ಹೊರ ರಾಜ್ಯದ ಪಿಂಚಣಿದಾರರ ಮಾಜಿ ಸೈನಿಕರ ಮಕ್ಕಳಿಗೆ ಪುಸ್ತಕ ಅನುದಾನ ಕೊಡಲಾಗುತ್ತದೆ.
ಅರ್ಜಿಗಳನ್ನು ಮೈಸೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೆಶಕರ ಕಚೇರಿಯಲ್ಲಿ ಮಧ್ಯಾಹ್ನ 3 ರಿಂದ 5 ಗಂಟೆಯವರೆಗೆ ವಿತರಿಸಲಾಗುತ್ತದೆ. ಅಂಚೆ ಮೂಲಕ ಅರ್ಜಿ ಪಡೆಯಲು ಇಚ್ಚಿಸುವವರು ಸಾಕಷ್ಟು ಅಂಚೆ ಚೀಟಿ ಲಗತ್ತಿಸಿದ ಸ್ವ ವಿಳಾಸ ಬರೆದಿರುವ ಅಂಚೆ ಲಕೋಟೆಯನ್ನು ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಜೆಎಲ್‍ಬಿ ರಸ್ತೆ, ಮೈಸೂರು – 570005 ಇಲ್ಲಿಗೆ ಕಳುಹಿಸಬೇಕು.
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಲು ಸೆಪ್ಟೆಂಬರ್ 30 ಕಡೆಯ ದಿನವಾಗಿದೆ ಎಂದು  ಪ್ರಕಟಣೆ ತಿಳಿಸಿದÉ.
ಆಸ್ತಿ ತೆರಿಗೆ ಪಾವತಿಸಲು ರೆವಿನ್ಯೂ ನಿವೇಶನ, ಬಡಾವಣೆ ಮಾಲೀಕರಿಗೆ ಸೂಚನೆ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭಾ ವ್ಯಾಪ್ತಿಯಲ್ಲಿ ಬರುವ ರೆವಿನ್ಯೂ ನಿವೇಶನ ಹಾಗೂ ಬಡಾವಣೆ ಮಾಲೀಕರು ಆಸ್ತಿ ತೆರಿಗೆಯನ್ನು ನಗರಸಭೆಗೆ ಪಾವತಿಸುವಂತೆ ಸೂಚಿಸಲಾಗಿದೆ.
ನಗರಸಭಾ ವ್ಯಾಪ್ತಿಗೆ ಒಳಪಡುವ ರೆವಿನ್ಮೂ ನಿವೇಶನ, ಬಡಾವಣೆ ಮಾಲೀಕರು ಕರ್ನಾಟಕ ಪುರಸಭೆ ಕಾಯಿದೆ ಪ್ರಕಾರ ನಗರಸಭೆಗೆ ಆಸ್ತಿ ತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ. ರೆವಿನ್ಯೂ ನಿವೇಶನಗಳಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿಕೊಂಡಿರುವವರು ಕೂಡಲೇ ಆಸ್ತಿ ತೆರಿಗೆ ಪಾವತಿ ಮಾಡಬೇಕು. ತೆರಿಗೆ ಪಾವತಿಸಿರುವ ಮಾಲೀಕರು ಮಾತ್ರ ಆಸ್ತಿಗಳಿಗೆ ಸಂಬಂಧಿಸಿದಂತೆ ಸರ್ಕಾರ ನೀಡುವ ಆದೇಶಗಳಿಗೆ ಅರ್ಹರಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ತಿ ವಿವರವನ್ನು ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬೇಕೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಯಳಂದೂರು : ಹೌಸಿಂಗ್ ಫಾರ್ ಆಲ್ ಅಭಿಯಾನ ಸಮೀಕ್ಷೆಗೆ ಸಹಕರಿಸಲು ಮನವಿ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಯಳಂದೂರು ಪಟ್ಟಣ ಪಂಚಾಯಿತಿಯು ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಮಂತ್ರಾಲಯದ ವತಿಯಿಂದ ಪ್ರತಿ ನಾಗರಿಕರಿಗೂ ಸೂರು ಒದಗಿಸುವ ಉದ್ದೇಶದಿಂದ ಹೌಸಿಂಗ್ ಫಾರ್ ಆಲ್ ಎಂಬ ಅಭಿಯಾನ ಜಾರಿಗೊಳಿಸುವ ಸಲುವಾಗಿ ಪಟ್ಟಣ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಲಿದ್ದು ಜನತೆ ಇದಕ್ಕೆ ಸಹಕರಿಸುವಂತೆ ಕೋರಿದೆ.
ಒಂದು ಕುಟುಂಬಕ್ಕೆ ಭೂಮಿಯನ್ನು ಸಂಪನ್ಮೂಲವಾಗಿಸಿಕೊಂಡು ಇನ್ ಸಿಟು ಮಾದರಿಯಲ್ಲಿ ಕೊಳಚೆ ಪ್ರದೇಶಗಳ ಪುನರ್ ಅಭಿವೃದ್ಧಿಯಡಿ ಪಟ್ಟಣದಲ್ಲಿರುವ 11 ಕೊಳಚೆ ಪ್ರದೇಶಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿ ಬೇಡಿಕೆ ಸಮೀಕ್ಷೆ ಕೈಗೊಂಡು ಅರ್ಹರನ್ನು ಗುರುತಿಸಿ ಪಟ್ಟಿ ಮಾಡಲಿದ್ದಾರೆ. ಕ್ರೆಡಿಟ್ ಲಿಂಕ್ ಸಬ್ಸಿಡಿ ಯೋಜನೆ ಹಾಗೂ ಅಪೊರ್ಟಬಲ್ ಹೌಸಿಂಗ್ ಪಾರ್ಟನರ್‍ಶಿಪ್ ಯೋಜನೆಗೆ ಗುರಿ ಅನುಸಾರ ಅರ್ಜಿ ನೀಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಫಲಾನುಭವಿಯ ನೇತೃತ್ವದಲ್ಲಿ ಸ್ವಯಂ ಮನೆ ನಿರ್ಮಾಣ ಘಟಕದಡಿ ಪಟ್ಟಣದಲ್ಲಿರುವ ಕೊಳಚೆ ಪ್ರದೇಶಗಳನ್ನು ಹೊರತುಪಡಿಸಿ ಉಳಿಕೆ ಪ್ರದೇಶದಲ್ಲಿ ವಾಸಿಸುತ್ತಿರುವ ಅರ್ಹ ಕುಟುಂಬಗಳನ್ನು ಗುರುತಿಸುವ ಸಲುವಾಗಿ ಬೇಡಿಕೆ ಸಮೀಕ್ಷೆ ಮಾಡಲು ಅಧಿಕಾರಿ, ಸಿಬ್ಬಂದಿ ವರ್ಗ, ಸ್ವಸಹಾಯ ಸಂಘದ ಸದಸ್ಯರು, ಎನ್‍ಜಿಓ, ಎಂಎಸ್‍ಡಬ್ಲ್ಯೂ, ಇತರೆ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗುತ್ತದೆ.
2011ರ ಜಾತಿ ಗಣತಿ ಕಾರ್ಯದಲ್ಲಿ ರಚಿಸಿರುವ ನೀಲಿ ನಕ್ಷೆ ಮತ್ತು ಬ್ಲಾಕ್‍ಗಳ ಮೂಲಕ ಗಣತಿ ಕಾರ್ಯ ಮಾಡಲು ಇನ್ನೂ 15 ದಿನಗಳೊಳಗೆ ಕ್ರಮ ವಹಿಸಲಿದೆ. ಅರ್ಹರಿರುವ ಯಾವುದೇ ಕುಟುಂಬಗಳು ಕೈಬಿಟ್ಟು ಹೋಗದಂತೆ (ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ವಾಸಿಸುತ್ತಿರುವವರು, ಗುಡಿಸಲು ವಾಸಿಗಳು, ತಾತ್ಕಾಲಿಕ ಶೆಡ್, ಶಿಥಿಲಗೊಂಡ ಮನೆ ಅಥವಾ ಮಣ್ಣಿನ ಗೋಡೆಯಲ್ಲಿ ನಿರ್ಮಿಸಿರುವ ಸಣ್ಣ ಹೆಂಚು ಮನೆಯವರು, ಬಾಡಿಗೆಗೆ ವಾಸಿಸುತ್ತಿರುವವರು, ಒಂದು ಕೋಣÉಯಿಲ್ಲದ 4ಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬಗಳು ಮಾತ್ರ) ಸಮೀಕ್ಷೆ ನಡೆಸಲಾಗುವುದು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ದೇಶದಲ್ಲಿ ಯಾವುದೇ ಭಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇದ್ದು ನಿವೇಶನ ಹೊಂದಿರಬೇಕು. ಯಾವುದೇ ವಸತಿ ಸೌಲಭ್ಯ ಪಡೆದಿರಬಾರದು.
ಸೂರು ಒದಗಿಸುವ ಸಂಬಂಧ ಗಣತಿಗೆ ಬರುವ ಗಣತಿದಾರರಿಗೆ ಮಾಹಿತಿ ನೀಡಿ ಸಹಕರಿಸÀಬೇಕು. ಹೆಚ್ಚಿನ ಮಾಹಿತಿಗೆ ಯಳಂದೂರು ಪಟ್ಟಣ ಪಂಚಾಯಿತಿಯ ವಸತಿ ಶಾಖೆಯ ವಿಷಯ ನಿರ್ವಾಹಕರನ್ನು ಸಂಪರ್ಕಿಸುವಂತೆ ಪಟ್ಟಣ ಪಂಚಾಯಿತಿಯ ಅಧÀ್ಯಕ್ಷರಾದ ಬಿ. ರವಿ ಹಾಗೂ ಮುಖ್ಯಾಧಿಕಾರಿ ಎಸ್. ಉಮಾಶಂಕರ್ ಪ್ರಕಟಣೆಯಲ್ಲಿ ಕೋರಿದ್ದಾರೆÉ.

ವಿದ್ಯಾಸಿರಿ, ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ಶಿಷ್ಯ ವೇತನಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿದ್ಯಾಸಿರಿ, ಶುಲ್ಕ ವಿನಾಯಿತಿ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗೆ ನೀಡಲಿರುವ ಶಿಷ್ಯ ವೇತನಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 15 ಕಡೆಯ ದಿನವಾಗಿದೆ. ವಿವರಗಳಿಗೆ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಮತ್ತು ಞಚಿಡಿeಠಿಚಿss.ಛಿgg.goviಟಿ ನೋಡಬಹುದು. ಮೊಬೈಲ್ ನಂ. 9480818016, ಸಹಾಯವಾಣಿ ಸಂಖ್ಯೆ 080-44554444 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜು. 27ರಂದು ಹರದನಹಳ್ಳಿಯಲ್ಲಿ ಡೀಸಿ, ಸಿಇಓ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿ ಕೇಂದ್ರದ ನಾಡ ಕಚೇರಿ ಆವರಣದಲ್ಲಿ ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಸಮ್ಮುಖದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 30ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 23 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ : ಬದಲಿ ಖಾಸಗಿ ಬಸ್‍ಗಳ ವ್ಯವಸ್ಥೆ

ಚಾಮರಾಜನಗರ, ಜು. 24 (ಕರ್ನಾಟಕ ವಾರ್ತೆ):- ರಾಜ್ಯ ಸಾರಿಗೆ ನಿಗಮಗಳ ನೌಕರರು ಜುಲೈ 24 (ಭಾನುವಾರ) ರ  ಮಧ್ಯರಾತ್ರಿಯಿಂದಲೇ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಾಗರಿಕರಿಗೆ ತೊಂದರೆಯಾಗದಂತೆ ಜಿಲ್ಲಾಡಳಿತವು ಬದಲಿಯಾಗಿ 35 ಖಾಸಗಿ ಬಸ್‍ಗಳ ಸೇವೆಯನ್ನು ಹೆಚ್ಚುವರಿಯಾಗಿ ವ್ಯವಸ್ಥೆ ಮಾಡಿದೆ.
ನಗರದಿಂದ ಮೈಸೂರು, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲ್ಲೂಕುಗಳಿಗೆ ಹೋಗಿಬರಲು ಖಾಸಗಿ ಬಸ್‍ಗಳನ್ನು ಸಾರ್ವಜನಿಕರ ಸೇವೆಗೆ ನಿಯೋಜಿಸಲಾಗಿದೆ. ಎಂದಿನಂತೆ ಈಗಾಗಲೇ ಸಂಚರಿಸುತ್ತಿರುವ ಖಾಸಗಿ ಬಸ್‍ಗಳು ಸಹಾ ತಮ್ಮ ಸೇವೆಯನ್ನು ಮುಂದುವರೆಸಲಿದೆ. ಕೆಎಸ್‍ಆರ್‍ಟಿಸಿ ಬಸ್‍ಗಳ ಸೇವೆ ವ್ಯತ್ಯಯದಿಂದ ಜಿಲ್ಲೆಯ ಜನತೆಗೆ ಅನಾನುಕೂಲವಾಗದಂತೆ ಜಿಲ್ಲಾಡಳಿತ ಬದಲಿಯಾಗಿ ಖಾಸಗಿ ಬಸ್‍ಗಳಿಗೆ ಹೆಚ್ಚುವರಿ ಮಾರ್ಗದಲ್ಲಿ ಸಂಚರಿಸಲು ಅನುಮತಿ ನೀಡಿದೆ.
ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳಲು ಎಂದಿನಂತೆ ಖಾಸಗಿ ಬಸ್‍ಗಳು ಸಹಾ ಇದೆ. ಹೀಗಾಗಿ ನಗರದಿಂದ ಹೆಚ್ಚುವರಿಯಾಗಿ ನಿಯೋಜಿಸಿರುವ ಖಾಸಗಿ ಬಸ್‍ಗಳಲ್ಲಿ ಕೊಳ್ಳೇಗಾಲಕ್ಕೆ ತಲುಪಿ, ಬೆಂಗಳೂರಿಗೆ ಪ್ರಯಾಣಿಸಬಹುದಾಗಿದೆ.
ಮೈಸೂರು ನಗರಕ್ಕೆ ರೈಲು ಸೇವೆಯು ಲಭ್ಯವಿರುವುದರಿಂದ ಮೈಸೂರು ಹಾಗೂ ಬೆಂಗಳೂರಿಗೆ ಪ್ರಯಾಣಿಸುವ ಜಿಲ್ಲೆಯ ನಾಗರಿಕರು ರೈಲು ಸೇವೆಯನ್ನು ಸಹಾ ಬಳಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ             ಚಾಮರಾಜನಗರ: ನಗರದ ದನಲಕ್ಷ್ಮಿ ಹಾರ್ಡ್ ವೇರ್ ಅಂಗಡಿ ಗೋದಾಮಿಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ಬೆಲೆ ಬಾಳುವ ಪದಾರ್ಥಗಳು ಸುಟ್ಟು ಕರಕಲಾಗಿದೆ. ಚಾಮರಾಜನಗರ ಅಂಗಡಿಬೀದಿಯಲ್ಲಿರುವ ದಾಸಪ್ಪನ ಛತ್ರದ ಹಿಂಬಾಗವಿರುವ ದನಲಕ್ಷ್ಮಿ ಹಾರ್ಡ್ ವೇರ್ ಅಂಗಡಿಗೆ ಸೇರಿದ ಗೋಡೌನ್ ಗೆ ಬೆಂಕಿ ಬಿದ್ದಿದೆ. ಗೋಡೌನ್ ಅಲ್ಲಿದ್ದ ಬೆಲೆಬಾಳುವ ಪೈಪುಗಳು,ವೈರ್,ಹಗ್ಗಗಳು ಸುಟ್ಡಿದ್ದು   ಅವಘಡಕ್ಕೆ ಶಾರ್ಟ್ ಷರ್ಕೂಟ್ ಕಾರಣ ಎನ್ನಲಾಗಿದೆ.  ಸೂಕ್ತ ಸಮಯಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು  ಯಶಸ್ವಿಯಾಗಿದ್ದಾರೆ. ಪಟ್ಟಣ ಸಂಚಾರಿ ಠಾಣಾ ಸಿಬ್ಬಂದಿಗಳು ಸಂಚಾರ ವ್ಯವಸ್ಥೆ ನಿಯಂತ್ರಿಸಿ ಸಂಚಾರ ವ್ಯವಸ್ಥೆ ಸುಗಮವಾಗುವಂತೆ ನೋಡಿಕೊಂಡಿದ್ದಾರೆ.

Sunday, 17 July 2016

ಚಾಮರಾಜನಗರ, ಜು. 17 ರಾಜಧನ ವಂಚನೆ ಪ್ರಕರಣ: ಎಂಟು ಜನರ ಮೇಲೆ ಕ್ರಿಮಿನಲ್ ಮೊಕದ್ದಮೆ

ರಾಜಧನ ವಂಚನೆ ಪ್ರಕರಣ: ಎಂಟು ಜನರ ಮೇಲೆ ಕ್ರಿಮಿನಲ್ ಮೊಕದ್ದಮೆ

 ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ, ಜು. 17 -   ಕರಿಕಲ್ಲು ಶಿಲಾದಿಮ್ಮಿಗಳನ್ನು ಸಾಗಾಣಿಕೆ ಮಾಡಲು ಹೆಚ್ಚಿಗೆ ಅವದಿ ನಮೂದಿಸಿಕೊಂಡು ರಾಜಧನ ಪಾವತಿ ಮಾಡದೇ ನಕಲಿ ದಾಖಲೆ ಸೃಷ್ಟಿಸಿಕೊಂಡಿದ್ದ ಎಂಟು ಜನ ಕರಿಕಲ್ಲು ಗುತ್ತಿಗೆದಾರರ ಮೇಲೆ ಗ್ರಾಮಾಂತರ ಠಾಣೆ ಪೋಲೀಸರು ದಾಖಲಿಸಿದ್ದಾರೆ.
ಸಾರ್ವಜನಿಕರು ಹಾಗೂ ಗಣಿ ಭೂ ವಿಜ್ಞಾನಿ ಅದಿಕಾರಿಗಳ ದೂರಿನನ್ವಯ  ಗ್ರಾಮಾಂತರ ಠಾಣೆ ಪೋಲೀಸರು ತಪಾಷಣೆ ಮಾಡಿ ಪರಿಶೀಲಿಸಿಲಾಗಿ ಶಿಲಾದಿಮ್ಮಿಗಳನ್ನು ಸಾಗಾಣಿಕೆ ಮಾಡಲು ಹೆಚ್ಚಿಗೆ ಅವದಿ ನಮೂದಿಸಿಕೊಂಡು ರಾಜಧನ ಪಾವತಿ ಮಾಡದೇ ಇರುವ ಎಂಟು ಜನ ಗುತ್ತಿಗೆದಾರರ ಮೇಲೆ ಕೆ.ಎಮ್.ಎಮ್.ಸಿ.ಆರ್ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ 420 ರಡಿಯಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಸಿದ್ದಾರೆ.

ಚಾಮರಾಜನಗರ ಭೂ ವಿಜ್ಞಾನಿ ಅದಿಕಾರಿ ಚಂದ್ರಶೇಖರ್ ಅವರ ದೂರಿನನ್ವಯ ಚಂದಕವಾಡಿ ವ್ಯಾಪ್ತಿಯಲ್ಲಿನ ಮಹದೇವಪ್ಪ ,ಸಾರ್ವಜನಿಕ ಸುಬ್ರಮಣ್ಯ ಅವರ ದೂರಿನನ್ವಯ ಕೊತ್ತಲವಾಡಿಯ ಮಹದೇವಸ್ವಾಮಿ ಕೆ.ಎಮ್. ಮಹದೇವಪ್ಪ, ಮತ್ತು ಸೋಮಪ್ಪ ನಂಜದೇವನಪುರದ ಪಿ.ಮರಿಸ್ವಾಮಿ (ಅಪರಾಧ ಸಂಖ್ಯೆ 164/16), ಕೊತ್ತಲವಾಡಿಯ ಕೆ.ಪಿ ಸಿದ್ದಮಲ್ಲಪ್ಪ, ಚಾಮರಾಜನಗರ ಭೂ ವಿಜ್ಞಾನಿ ಅದಿಕಾರಿ ಕೃಷ್ಣವೇಣಿ ಅವರ ದೂರಿನನ್ವಯ ಕೊತ್ತಲವಾಡಿಯ ಲಿಂಗಣ್ಣಾಚಾರ್ ,ಚಾಮರಾಜನಗರ ವ್ಯಾಪ್ತಿಯ ಮೆರಾಜ್ ಉಲ್ಲಾ ಹಕ್ ಇವರುಗಳ ವಿರುದ್ದ ಪ್ರಕರಣವನ್ನು ದಾಖಲಸಿದ್ದಾರೆ.
ಪ್ರಕರಣ ಸಂಬಂದದ ಆರು ಪ್ರಕರಣದಲ್ಲಿ ಭಾಗಿಯಾಗಿರುವವರ ಎಂಟು ಜನರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಕಲಿಸುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಸರಿಯಾಗಿ ರಾಜದನ ಪಾವತಿ ಮಾಢದ ಹಿನ್ನಲೆಯಲ್ಲಿ ಗಣಿ ಭೂವಿಜ್ಞಾನ ಇಲಾಖಾ ಆಯುಕ್ತರು ಚಾಮರಾಜನಗರ ಗಣಿ ಭೂ ವಿಜ್ಞಾನ ಇಲಾಕೆಗೆ ಇವರುಗಳಿಗೆ ನೀಡಲಾಗಿರುವ ಅನುಮತಿಯನ್ನು ರದ್ದು ಮಾಢುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಗ್ರಾಮಾಂತರ ಠಾಣೆಯ ವೃತ್ತ ಆರಕ್ಷಕರಾದ ಶಿವಸ್ವಾಮಿ, ಸಬ್ ಇನ್ಸ್‍ಪೆಕ್ಟರ್ ಎಮ್.ನಾಯಕ್ ಹಾಗೂ ಸಿಬ್ಬಂದಿವರ್ಗ ಪತ್ತೆ ಮಾಡುವಲ್ಲಿ ಯಶಶ್ವಿಯಾಗಿದ್ದಾರೆ.


ನಾಗರಿಕ ಸೌಲಭ್ಯ ನಿವೇಶನ ಹಂಚಿಕೆಗೆ ನಗರಾಭಿವೃದ್ಧಿ ಪ್ರಾಧಿಕಾರ ಸಮ್ಮತಿ 

ಚಾಮರಾಜನಗರ, ಜು. 17- ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ ನಿವೇಶನಗಳನ್ನು ಕೋರಿ ಸಲ್ಲಿಸಿರುವ ಅರ್ಜಿದಾರ ಸಂಸ್ಥೆ ಹಾಗೂ ಸರ್ಕಾರಿ ಇಲಾಖೆಗಳಿಗೆ ನಿವೇಶನ ಹಂಚಿಕೆ ಮಾಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಸಭಾಂಗಣದಲ್ಲಿ ಇಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ ಅವರ ಅಧ್ಯಕ್ಷತೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಮತ್ತು ಶಾಸಕರು ಹಾಗೂ ನಾಗರಿಕ ಸೌಲಭ್ಯ ನಿವೇಶನ ಹಂಚಿಕೆ ಸಮಿತಿಯ ಸದಸ್ಯರು ಆದ ಸಿ.ಪುಟ್ಟರಂಗಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ನಾಗರೀಕ ಸೌಲಭ್ಯ ನಿವೇಶನ ಹಂಚಿಕೆ ಸಮಿತಿ ಸಭೆಯಲ್ಲಿ ನಿವೇಶನ ಕೋರಿರುವ ಅರ್ಜಿದಾರ ಸಂಸ್ಥೆ ಹಾಗೂ ಸರ್ಕಾರಿ ಇಲಾಖೆಗಳಿಗೆ ನಿವೇಶನ ಹಂಚಿಕೆ ಮಾಡಲು ತೀರ್ಮಾನ ಕೈಗೊಳ್ಳಲಾಯಿತು.
ಸಭೆ ಆರಂಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ ಅವರು ಮಾತನಾಡಿ ಪ್ರಾಧಿಕಾರದ ವ್ಯಾಪ್ತಿಗೆ ಬರುವ ಕೆಲ ಬಡಾವಣೆಗಳಲ್ಲಿ ಲಭ್ಯವಿದ್ದ 12 ನಾಗರಿಕ ಸೌಲಭ್ಯ ನಿವೇಶನಗಳನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ನಿಯಮಗಳ ಅನುಗುಣವಾಗಿ ಹಂಚಿಕೆ ಮಾಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕೆ ಸ್ಪಂದಿಸಿ 5 ಅರ್ಜಿಗಳು ಬಂದಿವೆ. ಈ ಪೈಕಿ ಸರ್ಕಾರಿ ಕಚೇರಿಗೆ 2 ನಿವೇಶನ ಮತ್ತು ಶೈಕ್ಷಣಿಕ ಕೇಂದ್ರ ಸಮುದಾಯ ಅಭಿವೃದ್ದಿ, ಆರೋಗ್ಯ ಮತ್ತು ಮಹಿಳಾ ಅಭಿವೃದ್ಧಿಗೆ ಸಂಬಂಧಿಸಿದಂತೆ ನಿವೇಶನ ಕೋರಿ 3 ಅರ್ಜಿಗಳನ್ನು ಸಂಘ ಸಂಸ್ಥೆಗಳಿಂದ ಸ್ವೀಕರಿಸಲಾಗಿದೆ ಎಂದರು.
ತದನಂತರ ಸಮಿತಿಯು ವಿವರವಾಗಿ ಪರಿಶೀಲಿಸಿ 5 ಅರ್ಜಿದಾರ ಇಲಾಖೆ ಹಾಗೂ ಸಂಘ ಸಂಸ್ಥೆಗಳಿಗೆ ನಿವೇಶನ ಹಂಚಿಕೆ ಮಾಡಲು ತೀರ್ಮಾನಿಸಲಾಯಿತು.
ಇದೆ ಸಂದರ್ಭದಲ್ಲಿ ಜಿಲ್ಲಾ ಕೇಂದ್ರದ ರೈಲು ನಿಲ್ದಾಣ ಬಳಿಯ ಜಮೀನಿನಲ್ಲಿ ಬಿಜಿನೆಸ್ ಪಾರ್ಕ್‍ಗೆ ಸ್ಥಳ ಗುರುತಿಸಲಾಗಿದೆ. ವರ್ತಕರಿಗೆ ವ್ಯಾಪಾರ ವಹಿವಾಟು ನಡೆಸಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಬಿಜಿನೆಸ್ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಸೈಯದ್ ರಫಿ ಸಭೆಯಲ್ಲಿ ವಿವರಿಸಿದರು.
ಕರಿನಂಜನಪುರ ಗ್ರಾಮದ ಬಳಿ ಇರುವ ಪ್ರದೇಶದಲ್ಲಿ ಬೆಂಗಳೂರಿನ ಡಿ.ದೇವರಾಜು ಟ್ರಕ್ ಟರ್ಮಿನಲ್ ನಿಯಮಿತ ಸಹಯೋಗದೊಂದಿಗೆ ಟ್ರಕ್ ಟರ್ಮಿನಲ್ ಅನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ರಫಿ ಅವರು ವಿವರ ನೀಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಟಿ.ನಿಸಾರ್ ಅಹಮದ್, ನಗರ ಯೋಜನಾ ಸದಸ್ಯರು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಸಹಾಯಕ ನಿರ್ದೇಶಕರಾದ ಎಚ್.ಎಸ್.ಚೆಲುವರಾಜು, ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಿನ್ನಸ್ವಾಮಿ ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಜುಲೈ 18ರಂದು ಉಡಿಗಾಲದಲ್ಲಿ ಅಂಚೆಸಂತೆ    

  ಚಾಮರಾಜನಗರ, ಜು. :- ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಜುಲೈ 18ರಂದು ಅಂಚೆ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಅವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷಾ ಭಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವಾ ವಿಮೆ ಮತ್ತು ಅಂಚೆ ಜೀವಾ ವಿಮೆ ಮುಂತಾದ ಅಂಚೆ ಯೋಜನೆಗಳನ್ನು ಸ್ಥಳದಲ್ಲೇ ಪರಿಶಿಲಿಸಿ ಸ್ವೀಕರಿಸಲಾಗುವುದು.
ಉಡಿಗಾಲ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.




Saturday, 16 July 2016

16-07-2016 ಚಾಮರಾಜನಗರ, ಜು. 16 ಅಕ್ರಮ ವಿದ್ಯುತ್ ಸಂಪರ್ಕದಿಂದ ಕಾಡಾನೆ ಮರಿ ಸಾವಿಗೆ ಕಾರಣರಾದ ವ್ಯಕ್ತಿಗೆ ಶಿಕ್ಷೆ









ಅಕ್ರಮ ವಿದ್ಯುತ್ ಸಂಪರ್ಕದಿಂದ ಕಾಡಾನೆ ಮರಿ ಸಾವಿಗೆ ಕಾರಣರಾದ ವ್ಯಕ್ತಿಗೆ ಶಿಕ್ಷೆ
ಚಾಮರಾಜನಗರ, ಜು. 16 - ಜಮೀನಿನ ಸುತ್ತ ಅಳವಡಿಸಿದ್ದ ತಂತಿಗೆ ಅಕ್ರಮವಾಗಿ ವಿದ್ಯುತ್ ಹಾಯಿಸಿ ಕಾಡಾನೆ ಮರಿಯೊಂದರ ಸಾವಿಗೆ ಕಾರಣರಾದ ವ್ಯಕ್ತಿಗೆ ಪ್ರದಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 3 ವರ್ಷಗಳ ಸಜೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಗುಂಡ್ಲುಪೇಟೆ ತಾಲೂಕು ಕುಂದಕೆರೆ ಗ್ರಾಮದ ಮಲ್ಲಪ್ಪ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಇವರು ತಮ್ಮ ಜಮೀನಿನ ಸುತ್ತ ಮರದ ಗೂಟಗಳನ್ನು ನೆಟ್ಟು ತಂತಿ ಅಳವಡಿಸಿದ್ದರು. ಈ ತಂತಿಗೆ ಅಕ್ರಮವಾಗಿ ವಿದ್ಯುತ್ ಹಾಯಿಸಿದ ಪರಿಣಾಮವಾಗಿ 2014ರ ಏಪ್ರಿಲ್ 7ರಂದು ಕಾಡಾನೆ ಮರಿಗೆ ವಿದ್ಯುತ್ ಪ್ರವಹಿಸಿದ್ದರಿಂದ ಸಾವನ್ನಪ್ಪಿತ್ತು. ವನ್ಯಜೀವಿಯ ಸಾವಿಗೆ ಕಾರಣರಾದ ಹಿನ್ನೆಲೆಯಲ್ಲಿ ಪ್ರದಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ತಪ್ಪಿತಸ್ಥ ವ್ಯಕ್ತಿಗೆ ಶಿಕ್ಷೆ 3 ವರ್ಷಗಳ ಸಜೆ ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.

ಆಧುನಿಕ ಮಾವು ಕೃಷಿ ಬೇಸಾಯ ಮಾಹಿತಿ ಹೊಂದಲು ಉಸ್ತುವಾರಿ ಸಚಿವರ ಸಲಹೆ
ಚಾಮರಾಜನಗರ, ಜು. 16 - ಮಾವು ಬೆಳೆಯಲ್ಲಿ ಆಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ಹೆಚ್ಚಿನ ಲಾಭ ಪಡೆಯಲು ಉತ್ತೇಜಿಸುವ ಸಲುವಾಗಿ ಬೆಳೆಗಾರರಿಗೆ ಬೇಸಾಯ ಕ್ರಮಗಳ ಕುರಿತು ಕಾರ್ಯಾಗಾರವನ್ನು ಮಾಡಲಾಗುತ್ತಿದೆ ಎಂದು ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್. ಎಸ್. ಮಹದೇವ ಪ್ರಸಾದ್ ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾವು ಬೆಳೆಯಲ್ಲಿ ಆಧುನಿಕ ಬೇಸಾಯ ಕ್ರಮ, ಸಂಸ್ಕರಣೆ ಹಾಗೂ ಮೌಲ್ಯವರ್ಧನೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ತೋಟಗಾರಿಕಾ ಬೆಳೆಗಳಲ್ಲಿ ಪ್ರಮುಖವಾದ ತೆಂಗು, ಅಡಕೆ, ಸಪೋಟ, ಮಾವನ್ನು ಎಲ್ಲೆಡೆ ಬೆಳೆಯಲಾಗುತ್ತಿದೆ. ಇತ್ತೀಚೆಗೆ ಮಾವು ಬೆಳೆಯನ್ನು ಬೆಳೆಯುವ ರೈತರ ಸಂಖ್ಯೆಯು ಹೆಚ್ಚಾಗಿದೆ. ಮಾವು ಬೆಳೆಗೆ ಸಂಬಂಧಿಸಿದಂತೆ ಕೈಗೊಳ್ಳಲಾಗುತ್ತಿರುವ ಆಧುನಿಕ ಬೇಸಾಯ ಪದ್ಧತಿ, ಇತರೆ ದೇಶ ರಾಜ್ಯಗಳಲ್ಲಿ ಅನುಸರಿಸಲಾಗುತ್ತಿರುವ ಕ್ರವiಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ರಾಜ್ಯದಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಾವು ಬೆಳೆಯಲಾಗುತ್ತಿದೆ. ಮಾವಿನಲ್ಲಿ ವಿವಿಧ ಮಾದರಿಯ ತಳಿಗಳಿದ್ದು ಈ ಹಣ್ಣುಗಳಿಗೆ ವಿದೇಶದಲ್ಲಿ ಹೆಚ್ಚಿನ ಬೇಡಿಕೆ ಇದೆ. ಮಾವು ರಫ್ತು ಮಾಡಲು ಇರುವ ಅವಕಾಶವನ್ನು ಬಳಸಿಕೊಳ್ಳಬೇಕಿದೆ. ಆಧುನಿಕ ತಂತ್ರಜ್ಞಾನ ಪ್ರಯೋಜನ ಪಡೆದು ಯಾವ ಮಾದರಿ ಬೆಳೆ ಬೆಳೆದರೆ ಹೆಚ್ಚು ಇಳುವರಿ ಪಡೆಯಬಹುದು ಹಾಗೂ ಆರ್ಥಿಕವಾಗಿ ಮುಂದೆ ಬರಬಹುದು ಎಂಬ ಬಗ್ಗೆ ಬೆಳೆಗಾರರು ತಿಳಿದುಕೊಳ್ಳಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.
ಮಾವು ಬೆಳೆಗಾರರಿಗೆ ಸರ್ಕಾರ ಸಹ ಹಲವಾರು ಸೌಲಭ್ಯಗಳ ಮೂಲಕ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಹನಿ ನೀರಾವರಿ ಸೌಕರ್ಯ ಅಳವಡಿಕೆ, ಕ್ರಿಮಿನಾಶಕಗಳ ಖರೀದಿ ಸೇರಿದಂತೆ ಇತರೆ ಚಟುವಟಿಕೆಗಳಿಗೆ ಸಹಾಯಧನವನ್ನು ತೋಟಗಾರಿಕೆ ಇಲಾಖೆ ಮೂಲಕ ಒದಗಿಸುತ್ತಿದೆ. ಈ ಪ್ರಯೋಜನ ಪಡೆದು ಜಿಲ್ಲೆಯಲ್ಲೂ ಮಾವು ಬೆಳೆ ಪ್ರದೇಶವನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಆಧುನಿಕ ಮಾವು ಕೃಷಿ ಬೇಸಾಯ ಕುರಿತ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು  ಮಾವು ಅವಲಂಬಿತ ಬೆಳೆಗಾರರು ಮರಗಳನ್ನು ಗುತ್ತಿಗೆ ನೀಡುವ ಪದ್ಧತಿಯನ್ನು ಕೈಬಿಟ್ಟು ಸ್ವತಃ ನಿರ್ವಹಣೆ ಮಾಡಬೇಕು. ಹಾನಿಕಾರವಲ್ಲದ ಉಪಚಾರ ಕ್ರಮಗಳ ಮೂಲಕ ಹಣ್ಣು ಮಾಗಿಸುವ ಪ್ರಕ್ರಿಯೆ ಅನುಸರಿಸಬೇಕು. ವೈವಿಧ್ಯಮಯ ತಳಿಗಳನ್ನು ಬೆಳೆಯುವ ಮೂಲಕ ಹೆಚ್ಚು ಲಾಭ ಪಡೆಯಬೇಕು ಎಂದರು.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮವು ಅಧ್ಯಕ್ಷರಾದ ಕಮಲಾಕ್ಷಿ ರಾಜಣ್ಣ ಮಾತನಾಡಿ ರಾಜ್ಯದಲ್ಲಿ 14 ಲಕ್ಷ ಟನ್ ಮಾವು ಇಳುವರಿ ಇದೆ. ರಾಜ್ಯದ ಮಾವಿಗೆ ಅಮೇರಿಕಾ, ಆಸ್ಟ್ರೇಲಿಯಾ, ಸ್ಪೇನ್, ಇರಾಕ್ ದೇಶಗಳಿಂದಲೂ ಹೆಚ್ಚಿನ ಬೇಡಿಕೆ ಬಂದಿದೆ. ವಿದೇಶಗಳಿಗೆ 20 ರಿಂದ 25 ಸಾವಿರ ಟನ್ ಮಾವಿನ ಹಣ್ಣನ್ನು ಸುರಕ್ಷಿತ ಉಪಚಾರ ಅನುಸರಿಸಿ ರಫ್ತು ಮಾಡಲಿದ್ದೇವೆ ಎಂದರು.
ಮಾವು ಬೇಸಾಯ ಮತ್ತು ಮಾರುಕಟ್ಟೆ ವಿಸ್ತರಣೆಗೆ ಚಾಮರಾಜನಗರದಲ್ಲಿಯೂ ನಿಗಮ ವತಿಯಿಂದ ಯೋಜನೆ ಹಮ್ಮಿಕೊಳ್ಳಲಾಗುತ್ತದೆ. ಮಾವು ಬೆಳೆಯಲು ಇಚ್ಚಿಸುವ ರೈತರಿಗೆ ಗಿಡಗಳನ್ನು ನೀಡಲಾಗುತ್ತದೆ. ಕೊಯ್ಲುಪೂರ್ವ ಹಾಗೂ ಕೊಯ್ಲೋತ್ತರ ಚಟುವಟಿಕೆಗಳ ಪರಿಕರ, ಅಂತರ ರಾಷ್ಟ್ರೀಯ ಮಾರುಕಟ್ಟೆಗೆ ಮಾವು ರಫ್ತು ಮಾಡಲು ಅನುಸರಿಸಬೇಕಿರುವ ಆಧುನಿಕ ಅವಶ್ಯಕ ಪ್ರಕ್ರಿಯೆಗೆ ಸಹಾಯಧನವನ್ನು ನಿಗಮವೇ ಒದಗಿಸಲಿದೆ ಎಂದು ಕಮಲಾಕ್ಷಿ ರಾಜಣ್ಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ಸಣ್ಣ ಪ್ರಮಾಣದ ಭೂಮಿ ಹೊಂದಿರುವ ರೈತರು ಮಾವು ಬೆಳೆಯಲು ಮಾವು ಅಭಿವೃದ್ಧಿ ನಿಗಮವು ಉತ್ತೇಜನ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ. ಪ್ರಕೃತಿ ವಿಕೋಪ, ಪ್ರಾಣಿಪಕ್ಷಿಗಳಿಂದ ಉಂಟಾಗಬಹುದಾದ ಬೆಳೆ ಹಾನಿಗೆ ಪರಿಹಾರ ನೀಡುವುದಾದರೆ ಹೆಚ್ಚಿನ ಬೆಳೆಗಾರರು ಮಾವು ಬೆಳೆಯಲು ಒಲವು ತೋರಬಹುದೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್ ಅವರು ಜಿಲ್ಲೆಯಲ್ಲಿ ಮಾವು ಬೆಳೆಯಲು ಹೆಚ್ಚಿನ ಆಸಕ್ತಿ ವ್ಯಕ್ತವಾಗುತ್ತಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಸುಧಾರಿತ ಮಾವು ಬೇಸಾಯ ಪದ್ಧತಿ ಬಗ್ಗೆ ವೈಜ್ಞಾನಿಕವಾಗಿ ಅರಿವು ಮೂಡಿಸಿ ಬೆಳೆ ಪ್ರದೇಶವನ್ನು ವಿಸ್ತಾರಗೊಳಿಸುವ ಉದ್ದೇಶ ಹೊಂದಲಾಗಿದೆ. ಮಾವು ನಿಗಮದ ಸೌಲಭ್ಯ ಮಾಹಿತಿಯನ್ನು ತಲುಪಿಸುವ ಆಶಯದೊಂದಿಗೆ ವಿಚಾರ ಸಂಕಿರಣವನ್ನು ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಏರ್ಪಡಿಸಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಜಯಣ್ಣ, ವಿಧಾನ ಪರಿಷತ್ ಸದಸ್ಯರಾದ ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಬಸಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿ.ಪಂ. ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಚಿಕ್ಕಸ್ವಾಮಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ನಿರ್ದೇಶಕರಾದ ಜಿ.ಎಸ್. ಗೌಡರ್, ಎಚ್.ಸಿ. ಮೊರಬ್,  ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಲೇಖಾ, ಕಮಲ್, ಸಂಪನ್ಮೂಲ ವ್ಯಕ್ತಿಗಳಾದ ಡಾ.ಎಸ್.ಪಿ. ಹಿತ್ತಲಮನಿ, ಡಾ. ನಾರಾಯಣಸ್ವಾಮಿ, ಡಾ.ಎಂ.ಆರ್. ದಿನೇಶ್, ಡಾ. ಟಿ. ದೊರೆಸ್ವಾಮಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ನಾಗರಾಜು, ಹಿರಿಯ ಸಹಾಯಕ ನಿರ್ದೇಶಕರಾದ ಆನಂದ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜು. 17ರಂದು ನಗರದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜು. 16 :- ನಗರ ಪಟ್ಟಣ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿಯನ್ನು ಜುಲೈ 17ರಂದು ಹಮ್ಮಿಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಚಿಕ್ಕ ಅಂಗಡಿ ಬೀದಿ, ದೊಡ್ಡ ಅಂಗಡಿ ಬೀದಿ, ಸಂಪಿಗೆ ರಸ್ತೆ, ಚಾಮರಾಜೇಶ್ವರ ದೇವಸ್ಥಾನದ ಅಕ್ಕಪಕ್ಕ, ವೀರಭದ್ರೇಶ್ವರ ದೇವಸ್ಥಾನದ ಭಾಗಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಜು. 19ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜು. 16 - ಗುಂಡ್ಲುಪೇಟೆ ತಾಲೂಕಿನ ಬೇಗೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಜುಲೈ 19ರಂದು ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಬೇಗೂರು, ನಿಟ್ರೆ, ಹೊರೆಯಾಲ, ಕೋಟೆಕೆರೆ, ಅರೆಪುರ, ಚನ್ನವಡೆಯನಪುರ, ಭೋಗಯ್ಯನಹುಂಡಿ, ಹಸಗೂಲಿ, ಆಲತ್ತೂರು, ಮಂಚಳ್ಳಿ, ಶೆಟ್ಟಳ್ಳಿ, ಗರಗನಹಳ್ಳಿ, ಅಗತಗೌಡನಹಳ್ಳಿ, ಹೆಗ್ಗಡಹಳ್ಳಿ, ಹಳ್ಳದಮಾದಳ್ಳಿ, ರಾಘವಾಪುರ, ಕಮರಳ್ಳಿ, ತೊಂಡವಾಡಿ, ಹಿರಿಕಾಟಿ, ಚಿಕ್ಕಾಟಿ, ಚಿಕ್ಕುಂಡಿ, ದೊಡ್ಡುಂಡಿ, ಹಾಲಳ್ಳಿ, ಬೆಳಚಲವಾಡಿ, ರಂಗನಾಥಪುರ, ತೊರವಳ್ಳಿ, ಮರಳಾಪುರ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
 ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಚೆಸ್ಕಾಂ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ನಗರಸಭೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
ಚಾಮರಾಜನಗರ, ಜು. 16 - ನಗರದ ಪ್ರಮುಖ ವೃತ್ತ, ಇತರೆ ಸ್ಥಳ, ಕಂಬಗಳಿಗೆ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಚಾಮರಾಜನಗರಸಭೆ ಸೂಚಿಸಿದೆ.
ನಗರಸಭಾ ವ್ಯಾಪ್ತಿಯಲ್ಲಿ ಜಾತ್ರೆ, ಸಮಾರಂಭ, ಹಬ್ಬ, ಇನ್ನಿತರ ಸಂಘಸಂಸ್ಥೆಗಳ ಕಾರ್ಯಕ್ರಮ, ಹುಟ್ಟುಹಬ್ಬ ಸಂದರ್ಭದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸುತ್ತಿದ್ದು ಇದರಿಂದ ನಾಗರಿಕರಿಗೆ ತೊಂದರೆಗೆ ಒಳಗಾದ ಹಿನ್ನೆಲೆಯಲ್ಲಿ ಕಳೆದ 2015ರ ಮೇ 7ರಂದು ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗಿದೆ. ಹೀಗಾಗಿ ನಗರಸಭೆ ವ್ಯಾಪ್ತಿಯ ರಸ್ತೆ, ಫುಟ್ ಪಾತ್, ಸಂತೆಮರಹಳ್ಳಿ ವೃತ್ತ, ಗುಂಡ್ಲುಪೇಟೆ ವೃತ್ತ, ಜೋಡಿರಸ್ತೆ ಸೇರಿದಂತೆ ಎಲ್ಲ ವೃತ್ತದ ದೀಪದ ಕಂಬಗಳಿಗೆ ಫ್ಲೆಕ್ಸ್ ಬ್ಯಾನರ್ ಅಳವಡಿಸುವ ಮುನ್ನ ಸಂಬಂಧಪಟ್ಟ ಆಸ್ತಿದಾರರು ಹಾಗೂ ಪೊಲೀಸರ ಅನುಮತಿ ಪಡೆದು ಖಾಸಗಿ ಆಸ್ತಿಗೆ ಮಾತ್ರ ಅನುಮತಿ ನೀಡಲು ತೀರ್ಮಾನಿಸಲಾಗಿರುತ್ತದೆ.
ನಗರಸಭೆ ವ್ಯಾಪ್ತಿಯ ವೃತ್ತ, ರಸ್ತೆ, ಫುಟ್ ಪಾತ್, ಬೀದಿ ದೀಪದ ಕಂಬಗಳ ಮೇಲೆ ಫ್ಲೆಕ್ಸ್, ಬ್ಯಾನರ್, ಬಾವುಟ, ಇನ್ನಿತರ ಫೋಟೋ ಹಾಕುವುದನ್ನು ನಿಷೇಧಪಡಿಸಬಹುದೆಂದು ತೀರ್ಮಾನಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ 19ರಂದು ನಡೆಯುವ ಚಾಮರಾಜೇಶ್ವರ ರಥೋತ್ಸವದ ಅಂಗವಾಗಿ ನಗರಸಭೆ ವ್ಯಾಪ್ತಿಯ ನಾಗರಿಕರು, ಸಂಘಸಂಸ್ಥೆಗಳು, ಮುಖಂಡರು, ಅಂಗಡಿ ಮಾಲೀಕರು ರಥೋತ್ಸವ ಪ್ರಯುಕ್ತ ಯಾವುದೇ ಫ್ಲೆಕ್ಸ್, ಬ್ಯಾನರ್‍ಗಳನ್ನು ಸರ್ಕಾರಿ ಜಾಗದಲ್ಲಿ ಅಳವಡಿಸಬಾರದು ಎಂದು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ. ಫ್ಲೆಕ್ಸ್ ಬ್ಯಾನರ್‍ಗಳನ್ನು ಖಾಸಗಿ ಕಟ್ಟಡದಲ್ಲಿ ಅಳವಡಿಸಬೇಕಾಗಿದ್ದಲ್ಲಿ ಸಂಬಂಧಪಟ್ಟ ಖಾಸಗಿ ಕಟ್ಟಡದ ಮಾಲೀಕರಿಂದ ಅನುಮತಿ ಪಡೆಯಬೇಕು. ಪೋಲೀಸ್ ಇಲಾಖೆÀಯಿಂದ  ನಿರಾಪೇಕ್ಷಣ ಪತ್ರ ಪಡೆದು ನಗರಸಭೆಗೆ ಸಲ್ಲಿಸಿದ ನಂತರ ನಿಯಮಾನುಸಾರವಾಗಿ ಅನುಮತಿ ನೀಡಲು ಕ್ರಮ ವಹಿಸಲಾಗುವುದು. ಒಂದುವೇಳೆ ನಗರಸಭೆಯ ಅನುಮತಿ ಪಡೆಯದೆ ಅನಧಿಕೃತವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದರೆ ನಗರಸಭೆಯಿಂದ ತೆರವುಗೊಳಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕ್ರಮ ವಹಿಸಿ ದಂಡ ವಿಧಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಾಮರಾಜೇಶ್ವರ ರಥೋತ್ಸವ : ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಜು. 16 - ಚಾಮರಾಜನಗರ ಪಟ್ಟಣದಲ್ಲಿ ಜುಲೈ 19ರಂದು ನಡೆಯಲಿರುವ ಚಾಮರಾಜೇಶ್ವರ ಸ್ವಾಮಿ ರಥೋತ್ಸವ ಹಿನ್ನೆಲೆಯಲ್ಲಿ ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ಜುಲೈ 18ರ ಮಧ್ಯರಾತ್ರಿಯಿಂದ ಜುಲೈ 19ರ ಮಧ್ಯರಾತ್ರಿಯವರೆಗೆ ಎಲ್ಲ ಬಗೆಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ದಾಸ್ತಾನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.


ಚೇತನ ಯೋಜನೆಯಡಿ ಪ್ರೋತ್ಸಾಹಧನಕ್ಕೆ ಲೈಂಗಿಕ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜು. 14- ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಚೇತನ ಯೋಜನೆಯಡಿ ಸ್ವಾವಲಂಬಿಗಳಾಗಿ ಜೀವನ ನಡೆಸಲು ಅನುಕೂಲವಾಗುವಂತೆ ನೀಡಲಾಗುವ ಪ್ರೋತ್ಸಾಹ ಧನಕ್ಕಾಗಿ ಲೈಂಗಿಕ ಕಾರ್ಯಕರ್ತೆಯರಿಂದ ಅರ್ಜಿ ಆಹ್ವಾನಿಸಿದೆ.
ಚೇತನ ಯೋಜನೆಯಡಿ (ಲೈಂಗಿಕ ಕಾರ್ಯಕರ್ತೆಯರ ಪುನರ್ವಸತಿ ಯೋಜನೆ) ಪುನರ್ವಸತಿಗೆ ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಲು ಪ್ರತಿ ಫಲಾನುಭವಿಗೆ ತಲಾ 20 ಸಾವಿರ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ.
ಅಭ್ಯರ್ಥಿಗಳು 18 ವರ್ಷ ಮೇಲ್ಪಟ್ಟಿರಬೇಕು. ಜಿಲ್ಲೆಯಲ್ಲಿ ಲೈಂಗಿಕ ಕಾರ್ಯಕರ್ತೆಯರ ಪುನರ್ವಸತಿಗಾಗಿ ಹಾಗೂ ಸರ್ಕಾರದಿಂದ ಅಧಿಕೃತವಾಗಿ ಗುರುತಿಸಲಾಗಿರುವ ಸಂಸ್ಥೆಯಿಂದ ಪಡೆದ ದೃಢೀಕರಣ ಪತ್ರವನ್ನು ಲಗತ್ತಿಸಬೇಕು. ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಡಿತರ ಚೀಟಿ ಪೈಕಿ ಯಾವುದಾದರೊಂದು ದಾಖಲೆಯನ್ನು ವಿಳಾಸ ಗುರುತಿಗಾಗಿ ಪ್ರತಿಯನ್ನು ಲಗತ್ತಿಸಬೇಕು. ಬ್ಯಾಂಕ್‍ನಲ್ಲಿ ಖಾತೆ ಹೊಂದಿರಬೇಕು. ಆದಾಯೋತ್ಪನ್ನ ಚಟುವಟಿಕೆ ಆಯ್ಕೆ ಮಾಡಿಕೊಂಡ ಯೋಜನಾ ವರದಿಯನ್ನು ಸಲ್ಲಿಸಬೇಕು.
ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 25ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಹೌಸಿಂಗ್ ಫಾರ್ ಆಲ್ 2015-2022 : ನೂತನ ಅಭಿಯಾನಕ್ಕೆ ಸಮೀಕ್ಷೆ
ಚಾಮರಾಜನಗರ, ಜು. 14 - ಗುಂಡ್ಲುಪೇಟೆ ಪುರಸಭೆಯು ಕೇಂದ್ರ ವಸತಿ ಮತ್ತು ನಗರ ಬಡತನ ನಿರ್ಮೂಲನಾ ಮಂತ್ರಾಲಯವು ಪ್ರತಿ ನಾಗರಿಕರಿಗೂ ಸೂರು ಒದಗಿಸುವ ಉದ್ದೇಶದೊಂದಿಗೆ ಇತ್ತೀಚೆಗೆ ಹೌಸಿಂಗ್ ಫಾರ್ ಆಲ್ 2015-2022 ಎಂಬ ನೂತನ ಅಭಿಯಾನವನ್ನು ಜಾರಿಗೊಳಿಸಲು ಸಮೀಕ್ಷೆ ನಡೆಸಲಿದೆ.
ಒಂದು ಕುಟುಂಬಕ್ಕೆ ಭೂಮಿಯನ್ನು ಸಂಪನ್ಮೂಲವನ್ನಾಗಿಸಿಕೊಂಡು ಇನ್ ಸಿಟೂ ಮಾದರಿಯಲ್ಲಿ ಕೊಳಚೆ ಪ್ರದೇಶಗಳ ಪುನರ್ ಅಭಿವೃದ್ಧಿಯಡಿ ಪಟ್ಟಣದಲ್ಲಿರುವ 13 ಘೋಷಿತ ಕೊಳಚೆ ಪ್ರದೇಶಗಳಲ್ಲಿ ಕೊಳಚೆ ನಿರ್ಮೂಲನೆ ಮಂಡಳಿಯವರು ಬೇಡಿಕೆ ಸಮೀಕ್ಷೆ ಮಾಡಿ ಅರ್ಹರನ್ನು ಗುರುತಿಸಿ ಪಟ್ಟಿ ಮಾಡಿ ಅನುಷ್ಠಾನಗೊಳಿಸುತ್ತಾರೆ.
ಕ್ರೆಡಿಟ್ ಲಿಂಕ್ಸ್ ಸಬ್ಸಿಡಿ ಯೋಜನೆ ಹಾಗೂ ಅಪೂರ್ಟಬಲ್ ಹೌಸಿಂಗ್ ಪಾರ್ಟನರ್ ಶಿಪ್ ಯೋಜನೆಗೆ ಕಚೇರಿಯ ಗುರಿ ಅನುಸಾರ ಅರ್ಜಿ ನೀಡಿ ಮುಂದಿನ ಕ್ರಮ ಜರುಗಿಸಲಾಗುವುದು.
ಫಲಾನುಭವಿ ನೇತೃತ್ವದಲ್ಲಿ ಸ್ವಯಂ ಮನೆ ನಿರ್ಮಾಣ ಘಟಕದಡಿ ಪಟ್ಟಣದಲ್ಲಿರುವ ಕೊಳಚೆ ಪ್ರದೇಶಗಳನ್ನು ಹೊರತುಪಡಿಸಿ ಉಳಿಕೆ ಪ್ರದೇಶದಲ್ಲಿ ವಾಸಿಸುತ್ತಿರುವ ಅರ್ಹ ಕುಟುಂಬಗಳನ್ನು ಗುರುತಿಸಲು ಬೇಡಿಕೆ ಸಮೀಕ್ಷೆ ನಡೆಸಲು ನಿಗಧಿತ ನಮೂನೆ ತಯಾರಿಸಿದೆ. ಬೇಡಿಕೆ ಸಮೀಕ್ಷೆ ಮಾಡಲು ಅಧಿಕಾರಿ, ಸಿಬ್ಬಂದಿ ವರ್ಗ, ಸ್ವಸಹಾಯ ಸಂಘದ ಸದಸ್ಯರು, ಎನ್‍ಜಿಓ, ಎಂಎಸ್‍ಡಬ್ಲ್ಯೂ, ಇತರೆ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಿದೆ. 2011ರ ಜಾತಿ ಗಣತಿ ಕಾರ್ಯದಲ್ಲಿ ರಚಿಸಿರುವ ನೀಲಿ ನಕ್ಷೆ ಮತ್ತು ಬ್ಲಾಕ್‍ಗಳ ಮೂಲಕ ಗಣತಿ ಕಾರ್ಯ ಮಾಡಲು ಇನ್ನು 15 ದಿನಗಳೊಳಗೆ ಕ್ರಮ ವಹಿಸಲಿದೆ.
ಅರ್ಹರಿರುವ ಯಾವುದೇ ಕುಟುಂಬಗಳು ಕೈಬಿಟ್ಟು ಹೋಗದಂತೆ (ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ವಾಸಿಸುತ್ತಿರುವವರು, ಗುಡಿಸಲು ವಾಸಿಗಳು, ತಾತ್ಕಾಲಿಕ ಶೆಡ್, ಶಿಥಿಲಗೊಂಡ ಮನೆ ಅಥವಾ ಮಣ್ಣಿನ ಗೋಡೆಯಲ್ಲಿ ನಿರ್ಮಿಸಿರುವ ಸಣ್ಣ ಹೆಂಚು ಮನೆಯಲ್ಲಿರುವವರು, ಬಾಡಿಗೆಗೆ ವಾಸಿಸುತ್ತಿರುವವರು, ಒಂದು ಕೋಣÉಯಿಲ್ಲದ 4ಕ್ಕಿಂತ ಹೆಚ್ಚು ಸದಸ್ಯರಿರುವ ಕುಟುಂಬಗಳು ಮಾತ್ರ) ಸಮೀಕ್ಷೆ ನಡೆಸಲಾಗುವುದು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ಕರ್ನಾಟಕದ ಯಾವುದೇ ಭಾಗದಲ್ಲಿ ಸ್ವಂತ ಮನೆ ಹೊಂದಿರಬಾರದು. ವಾರ್ಷಿಕ ಆದಾಯ 3 ಲಕ್ಷಕ್ಕಿಂತ ಕಡಿಮೆ ಇದ್ದು ನಿವೇಶನ ಹೊಂದಿರಬೇಕು. ಯಾವುದೇ ಯೋಜನೆಯಿಂದ ವಸತಿ ಸೌಲಭ್ಯ ಪಡೆದಿರಬಾರದು. ಗಣತಿಗೆ ಬರುವ ಗಣತಿದಾರರಿಗೆ ಮಾಹಿತಿ ನೀಡಿ ಗಣತಿ ಕಾರ್ಯಕ್ಕೆ ಸಹಕರಿಸÀುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ಗುಂಡ್ಲುಪೇಟೆ ಪುರಸಭೆಯ ವಸತಿ ಶಾಖೆಯನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆÉ.



ವಾಟರ್‍ಮನ್ ನೇಮಕಕ್ಕೆÉ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 14 ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತ್ತಿಗೆ ಸೇರಿದ ಬಂಡಿಗೆರೆ ಗ್ರಾಮಕ್ಕೆ ಹೊಸದಾಗಿ ವಾಟರ್‍ಮನ್ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ಅರ್ಜಿಯೊಂದಿಗೆ ಭಾವಚಿತ್ರ, ಜಾತಿ ಮತ್ತು ವರಮಾನ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಗುರುತಿನ ಚೀಟಿ, ದೃಢೀಕೃತ ಪಿಯುಸಿ ಅಂಕಪಟ್ಟಿಯನ್ನು ಜುಲೈ 22ರೊಳಗೆ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹರದನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಂದ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 14 - ನಗರದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಲೆ, ಸಾಂಸ್ಕøತಿಕ, ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಗೆ ನೀಡುವ ಅಸಾಧಾರಣ ಸಾಧನೆ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
     5 ರಿಂದ 18 ವರ್ಷದೊಳಗಿರುವ ಅಂದರೆ 1.8.1998 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2016ನೇ ವರ್ಷದ ಪ್ರಶಸ್ತಿಗೆ  ಆಯ್ಕೆ ಮಾಡಲಾಗುವುದು. ರಾಷ್ಟ್ರ ಪ್ರಶಸ್ತಿಗೆ ಚಿನ್ನದ ಪದಕ, 2 ಸಾವಿರ ರೂ. ನಗದು, 10 ಸಾವಿರ ರೂ. ಮೌಲ್ಯದ ಪುಸ್ತಕ ವೋಚರ್. ಪ್ರಶಸ್ತಿ ಪತ್ರ ನೀಡಲಾಗುವುದು. ರಾಜ್ಯ, ಕೇಂದ್ರಾಡಳಿತ ಪ್ರದೇಶಕ್ಕೆ ನೀಡಲಾಗುವ ಪ್ರಶಸ್ತಿಯು ಒಂದು ಬೆಳ್ಳಿ ಪದಕ, 10 ಸಾವಿರ ರೂ. ನಗದು, 3 ಸಾವಿರ ರೂ. ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿ ಪತ್ರ  ಒಳಗೊಂಡಿರುತ್ತದೆ.
ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಪೂರಕ ದಾಖಲಾತಿಗಳನ್ನು ಒದಗಿಸಬೇಕು.
ಆಸಕ್ತ ಮಕ್ಕಳು ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಮಹಿಳೆಯ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ತ್ರಿಪ್ರತಿಯಲ್ಲಿ ಪತ್ರಾಂಕಿತ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 20ರೊಳಗೆ ಸಲ್ಲಿಸಬೇಕು.
    ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಿ ಪಡೆಯುವಂತೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 18ರಂದು ಜಿಲ್ಲಾ ಮಟ್ಟದ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಸಮಾರಂಭ
ಚಾಮರಾಜನಗರ, ಜು. 14- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಾರುಕಟ್ಟೆ ನೆರವು ಯೋಜನೆಯಡಿ ಮಹಿಳಾ ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದ ಉದ್ಘಾಟನಾ ಕಾರ್ಯಕ್ರಮವು ನಗರದ ಶ್ರೀ ಲಕ್ಷ್ಮೀ ರಂಗನಾಥ ಕಲ್ಯಾಣ ಮಂಟಪದಲ್ಲಿ ಜುಲೈ 18ರಂದು ಮಧ್ಯಾಹ್ನ 3 ಗಂಟೆಗೆ ಏರ್ಪಾಡಾಗಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸುವರು. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕಾ, ಜಿ.ಪಂ. ಉಪಾಧ್ಯಕ್ಷರಾದ ಬಸವರಾಜು, ನಗರಾಭಿವೃದ್ಧಿ ಅಧ್ಯಕ್ಷರಾದ ಸೈಯದ್ ರಫಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಮಾನ್ಯತೆ ಪಡೆದಿರುವ ವಾಣಿಜ್ಯ ಮತ್ತು ಕಂಪ್ಯೂಟರ್ ಶಾಲೆಗಳ ಪಟ್ಟಿ ಪ್ರಕಟ
ಚಾಮರಾಜನಗರ, ಜು. 13 - ಸಾರ್ವಜನಿಕ ಶಿಕ್ಷಣ ಇಲಾಖೆಯ ಮೈಸೂರು ವಿಭಾಗದ ವತಿಯಿಂದ  ಸರ್ಕಾರದ ಮಾನ್ಯತೆ ಪಡೆದು ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಾಣಿಜ್ಯ ಮತ್ತು ಕಂಪ್ಯೂಟರ್ ಶಾಲೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 
ಶ್ರೀ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆ, ನಗರಸಭೆಯ ಅಸೆಸ್‍ಮೆಂಟ್ ನಂ 689-3, 648-3, ಹಳೆ ಕಾವೇರಿ ಗ್ರಾಮೀಣ ಬ್ಯಾಂಕ್ ಕಟ್ಟಡ, ಚಾಮರಾಜನಗರ. ಪದ್ಮ ವಾಣಿಜ್ಯ ಮತ್ತು ಕಂಪ್ಯೂಟರ್ ವಿದ್ಯಾಸಂಸ್ಥೆ, 11/294, 2ನೇ ಕ್ರಾಸ್, ದೇವಾಂಗ ಬೀದಿ, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಎದುರು, ಚಾಮರಾಜನಗರ. ವಿಷ್ಯೂಯಲ್ ಸಾಫ್ಟೆಕ್, 1ನೇ ಮಹಡಿ, ಹಳೆ ಅಂಚೆ ಕಚೇರಿ ರಸ್ತೆ, ಯಳಂದೂರು. ವಿಷ್ಯೂಯಲ್ ಸಾಫ್ಟೆಕ್, 6/308, ಎ.ಬಿ. ವೈಶ್ಯ ಬ್ಯಾಂಕ್ ಕಟ್ಟಡ, ನೆಲ ಮಹಡಿ, ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ಟೌನ್ ಪೋಲಿಸ್ ಠಾಣೆ ಹತ್ತಿರ, ಕೊಳ್ಳೇಗಾಲ ಟೌನ್. ಶ್ರೀ ಸಾಯಿ ಎಜುಕೇಷನ್ ಟ್ರಸ್ಟ್, 303/20, ಚೌಡೇಶ್ವರಿ ನಿಲಯ, 1ನೇ ಕ್ರಾಸ್, ಭುಜಂಗೇಶ್ವರ ಎಕ್ಸ್‍ಟೆನ್ಷನ್, ಹಳೇ ಬಸ್ ಸ್ಟ್ಯಾಂಡ್ ಹತ್ತಿರ, ಚಾಮರಾಜನಗರ. ವಿಷ್ಯೂಯಲ್ ಸಾಫ್ಟೆಕ್, 1, 1ನೇ ಹಂತ, ಕಾನ್ವೆಂಟ್ ಹಾಸ್ಪಿಟಲ್ ರಸ್ತೆ, ತಾಲೂಕು ಕಚೇರಿ ಮುಂಭಾಗ, ಸಿದ್ಧಾರ್ಥನಗರ, ಚಾಮರಾಜನಗರ. ಶ್ರೀ ಜಯ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆ, 7/254, ದಕ್ಷಿಣ ಬಡಾವಣೆ, ಕೊಳ್ಳೇಗಾಲ. ಶ್ರೀನಿಧಿ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆ, 88, 7ನೇ ವಾರ್ಡ್, ಅರಣ್ಯ ಕಚೇರಿ ಮುಂಭಾಗ, ಗುಂಡ್ಲುಪೇಟೆ. ಮಾತೃಭೂಮಿ ಇನ್ಸ್‍ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ, 1ನೇ ಕ್ರಾಸ್, ಬಂಡಳ್ಳಿ ರಸ್ತೆ, ವಿನಾಯಕನಗರ, ಹನೂರು. ಪವಿತ್ರ ವಾಣಿಜ್ಯ ವಿದ್ಯಾಸಂಸ್ಥೆ, 42, ಎಂಐಜಿ-2. ಹೌಸಿಂಗ್ ಬೋರ್ಡ್ ಕಾಲೋನಿ, ಚಾಮರಾಜನಗರ. ಶ್ರೀ ಬಸವೇಶ್ವರ ವಾಣಿಜ್ಯ ವಿದ್ಯಾಸಂಸ್ಥೆ, 235, ಕುದೇರು ಮತ್ತು ಚಂದ್ರಮೌಳಿ ವಾಣಿಜ್ಯ ವಿದ್ಯಾಶಾಲೆ, 63, ಕೆ ಕೆ ರಸ್ತೆ, ಯಳಂದೂರು ಮಾನ್ಯತೆ ಪಡೆದ ವಾನಿಜ್ಯ ಮತ್ತು ಕಂಪ್ಯೂಟರ್ ಶಾಲೆಗಳಾಗಿವೆ.
ಆಸಕ್ತ ವಿದ್ಯಾರ್ಥಿಗಳು ಮತ್ತು ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಮೈಸೂರು ವಿಭಾಗದ ವಿಭಾಗೀಯ ಕಾರ್ಯದರ್ಶಿ ಹಾಗೂ ಪದನಿಮಿತ್ತ ಜಂಟಿನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಗಿರಿರಾಜ ಕೋಳಿಮರಿ ಮಾರಾಟ
ಚಾಮರಾಜನಗರ, ಜೂ. 13- ಗುಂಡ್ಲುಪೇಟೆಯ ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರದಲ್ಲಿ ಗಿರಿರಾಜ ತಳಿಯ ಕೋಳಿ ಮರಿಗಳನ್ನು ಉತ್ಪಾದನೆ ಮಾಡಿ 6 ರಿಂದ 8 ವಾರದವರೆಗೆ ಸಾಕಾಣಿಕೆ ಮಾಡಿ ರೈತರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಅಲ್ಲದೆ, ಒಂದು ದಿನದ ಕೋಳಿ ಮರಿಗಳು ಪ್ರತಿ ಗುರುವಾರ ಮಾರಾಟಕ್ಕೆ ಲಭ್ಯವಿದೆ.
4ನೇ ವಾರದ ಮರಿಗೆ 50 ರೂ,  5ನೇ ವಾರದ ಮರಿಗೆ 60 ರೂ,  6ನೇ ವಾರದ ಮರಿಗೆ 70 ರೂ,  7ನೇ ವಾರದ ಮರಿಗೆ 80 ರೂ. ಹಾಗೂ 8ನೇ ವಾರದ ಮರಿಗೆ 90 ರೂ.ಗಳ ದರ ಪಾವತಿಸಿ ಪಡೆಯಬಹುದಾಗಿದೆ.   
ಆಸಕ್ತ ಕೋಳಿ ಸಾಕಾಣಿಕೆದಾರರು ಗುಂಡ್ಲುಪೇಟೆಯ ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರದ ದೂ. ಸಂಖ್ಯೆ 08229-222022, ಮೊಬೈಲ್ 9916899828 ಸಂಪರ್ಕಿಸುವಂತೆ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಸಫಾಯಿ ಕರ್ಮಚಾರಿಗಳಿಂದ ಮ್ಯಾನ್‍ಹೋಲ್, ಚರಂಡಿ ಶುಚಿಗೊಳಿಸುವಿಕೆ ಶಿಕ್ಷಾರ್ಹ
ಚಾಮರಾಜನಗರ, ಜು. 13 - 1993ರ ಸಫಾಯಿ ಕರ್ಮಚಾರಿ ಕಾಯಿದೆಯನ್ವಯ ಸಫಾಯಿ ಕರ್ಮಚಾರಿಗಳು ಮ್ಯಾನ್‍ಹೋಲ್ ಒಳಗಡೆ ಇಳಿದು ಶುಚಿಗೊಳಿಸುವ ಕಾರ್ಯ ಶಿಕ್ಷಾರ್ಹ ಅಪರಾಧವಾಗಿರುವುದರಿಂದ ಇದನ್ನು ನಿಷೇಧಿಸಿದೆ.
ಆದಾಗ್ಯೂ ಸಹ ಸಫಾಯಿ ಕರ್ಮಚಾರಿಗಳಿಂದ ಮ್ಯಾನ್‍ಹೋಲ್ ಹಾಗೂ ಚರಂಡಿಗಳನ್ನು ಸ್ವಚ್ಚಗೊಳಿಸುವ ಕಾರ್ಯ ಮುಂದುವರೆದಿರುವುದರಿಂದ ಅನೇಕರು ಪ್ರಾಣ ಕಳೆದುಕೊಂಡಿರುವ ಪ್ರಕರಣಗಳು ಕಂಡುಬಂದಿದೆ ಈ ಹಿನ್ನಲೆಯಲ್ಲಿ ಮ್ಯಾನ್‍ಹೋಲ್ ಹಾಗೂ ಚರಂಡಿಗಳನ್ನು ಸಕ್ಕಿಂಗ್ ಯಂತ್ರಗಳ ಮೂಲಕವೇ ಶುಚಿಗೊಳಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.
ಯಾವುದೇ ವ್ಯಕ್ತಿಯನ್ನು ಮ್ಯಾನ್‍ಹೋಲ್‍ಗೆ ಇಳಿಸಿ ಶುಚಿಗೊಳಿಸುವ ಕಾರ್ಯ ನಡೆಸುವÀವರು ಸಫಾಯಿ ಕರ್ಮಚಾರಿ ಕಾಯಿದೆ 1993ರ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ನಡೆದರೆವ ಅಂತಹವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಜರುಗಿಸಲಾಗುವುದು ಎಂದು ಪೋಲಿಸ್ ಸೂಪರಿಂಟೆಂಡೆಂಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಹರದನಹಳ್ಳಿ ಗ್ರಾ.ಪಂ: ವಾಟರ್‍ಮನ್ ನೇಮಕಕ್ಕೆÉ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 13 - ತಾಲೂಕಿನ ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತ್ತಿಗೆ ಸೇರಿದ ಬಂಡಿಗೆರೆ ಗ್ರಾಮಕ್ಕೆ ಹೊಸದಾಗಿ ವಾಟರ್‍ಮನ್ ನೇಮಕ ಮಾಡಿಕೊಳ್ಳಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅಭ್ಯರ್ಥಿಗಳು ಅರ್ಜಿಯೊಂದಿಗೆ ಭಾವಚಿತ್ರ, ಜಾತಿ ಮತ್ತು ವರಮಾನ ಪ್ರಮಾಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಗುರುತಿನ ಚೀಟಿ, ದೃಢೀಕೃತ ಪಿಯುಸಿ ಅಂಕಪಟ್ಟಿಯನ್ನು ಜುಲೈ 22ರೊಳಗೆ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು. ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಹರದನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.



ನವೋದಯ ಶಾಲೆ : 6ನೇ ತರಗತಿ ಪ್ರವೇಶÀಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 13:- ಜಿಲ್ಲೆಯ ಹೊಂಡರಬಾಳು ಗ್ರಾಮದಲ್ಲಿರುವ ನವೋದಯ ವಿದ್ಯಾಲಯದಲ್ಲಿ 2017-18ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರವೇಶ ಪರೀಕ್ಷೆಯು ದಿನಾಂಕ 08.01.2017ರಂದು ನಡೆಯಲಿದೆ. ಅಭ್ಯರ್ಥಿಗಳು ದಿನಾಂಕ 1.5.2004 ಮತ್ತು 30.4.2008ರ ನಡುವೆ ಜನಿಸಿದವರಾಗಿದ್ದು ಜಿಲ್ಲೆಯ ಪರಿಮಿತಿಯಲ್ಲಿ ಬರುವ  ಶಾಲೆಯಲ್ಲಿ 2016-17ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವಾಸಪತ್ರ ಕೊಡುವ ಸಂಸ್ಥೆ, ಸರ್ವ ಶಿಕ್ಷಣ ಅಭಿಯಾನ ಕೇಂದ್ರದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿಗಳನ್ನು 5ನೇ ತರಗತಿ ಹೊಂದಿರುವ ಮಾನ್ಯತೆ ಪಡೆದ ಜಿಲ್ಲೆಯ ಎಲ್ಲ ಶಾಲೆಗಳಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಪನಿರ್ದೇಶಕರ ಕಚೇರಿ ಮತ್ತು ಹೊಂಡರಬಾಳು ಜವಾಹರ್ ನವೋದಯ ವಿದ್ಯಾಲಯದಿಂದ ಉಚಿತವಾಗಿ ಹಾಗೂ ಇಲಾಖಾ ವೆಬ್ ಸೈಟ್ ತಿತಿತಿ.ಟಿvshq.oಡಿg ಅಥವಾ ತಿತಿತಿ.ರಿಟಿvಛಿhಚಿmಚಿಡಿಚಿರಿಚಿಟಿಚಿgಚಿಡಿ.oಡಿg ನಲ್ಲಿ ಪಡೆದು  ಸೆಪ್ಟೆಂಬರ್ 16ರ ಹೊಂಡರಬಾಳು ಜವಾಹರ್ ನವೋದಯ ವಿದ್ಯಾಲಯಕ್ಕೆ ಸಲ್ಲಿಸುವಂತೆ ಪ್ರಾಚಾರ್ಯರು, ಜವಾಹರ್ ನವೋದಯ ವಿದ್ಯಾಲಯ, ಹೊಂಡರಬಾಳು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜುಲೈ 14ರಂದು ದಿತೀಯ ಪಿ.ಯು.ಸಿ ಪೂರಕ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಜು. 13 - ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಯು ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರಗಳಲ್ಲಿ ಜುಲೈ 14ರಂದು ನಡೆಯಲಿದ್ದು, ಪರೀಕ್ಷೆಯನ್ನು ನ್ಯಾಯೋಚಿತವಾಗಿ ಹಾಗೂ ಪರೀಕ್ಷಾ ಅಕ್ರಮಗಳು ನಡೆಯದಂತೆ ತಡೆಯಲು ಜಿಲ್ಲಾಧಿಕಾರಿ ಬಿ. ರಾಮು ಅವರು ನಿಷೇಧಾಜ್ಞೆ ಹೊರಡಿಸಿದ್ದಾರೆ.
ಜುಲೈ 7ರಂದು ಈ ಮೊದಲೆ ನಿಗದಿಯಾಗಿದ್ದ ದ್ವಿತೀಯ ಪಿ.ಯು.ಸಿ ಪೂರಕ ಪರೀಕ್ಷೆಯನ್ನು ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಜುಲೈ 14ಕ್ಕೆ ಮುಂದೂಡಲಾಗಿತ್ತು. ಜುಲೈ 14ರಂದು ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 5.30ರ ವರೆಗೆ ಮುಚ್ಚುವಂತೆ ಆದೇಶದಲ್ಲಿ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಈ ನಿಷೇಧಾಜ್ಞೆಯು ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿಗೆ ಹಾಗೂ ಪರೀಕ್ಷೆಗೆ ಹಾಜರಾಗುವ ವಿದ್ಯಾಥಿರ್Uಗಳಿಗೆ ಅನ್ವಯವಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

Tuesday, 12 July 2016

12-06-2016 ಚಾಮರಾಜನಗರ ಸುದ್ದಿಗಳು

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮರುನಿಯೋಜನಾ ಪ್ರಕ್ರಿಯೆ
ಚಾಮರಾಜನಗರ, ಜು. 12 - ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಶಾಲೆಗೆ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಆರ್‍ಟಿಇ ಕಾಯ್ದೆಗೆ ಅನುಸಾರವಾಗಿ ಶಿಕ್ಷಕರ ಸೇವೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಶಿಕ್ಷಕರ ಮರುನಿಯೋಜನಾ ಪ್ರಕ್ರಿಯೆಯನ್ನು ನಡೆಸುತ್ತಿದೆ.
ಜಿಲ್ಲೆಯ ಶಾಲೆಗಳಲ್ಲಿ ಶಿಕ್ಷಕರ ಅವಶ್ಯಕತೆ, ಖಾಲಿ ಹುದ್ದೆಗಳು ಮತ್ತು ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಮರುನಿಯೋಜನೆ ಕಾರ್ಯ ನಡೆಸಲಾಗುತ್ತಿದ್ದು ಬ್ಲಾಕ್ ಹಂತದಲ್ಲಿ ನಿಯೋಜನೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ.
ಜಿಲ್ಲಾ ಹಂತದಲ್ಲಿ ಜುಲೈ 16ರಂದು, ತಾಲೂಕು ಹಂತದಲ್ಲಿ ಕೌನ್ಸಿಲಿಂಗ್‍ನಲ್ಲಿ ಭರ್ತಿ ಆಗದೇ ಉಳಿದಿರುವ ಖಾಲಿ ಹುದ್ದೆಗಳನ್ನು, ಜಿಲ್ಲಾ ಮಟ್ಟದಲ್ಲಿ ಜೇಷ್ಠತಾ ಪಟ್ಟಿಯನ್ನು ಸೇವೆಗೆ ಸೇರಿದ ದಿನಾಂಕದ ಆಧಾರದ ಮೇಲೆ ಕೌನ್ಸಿಲಿಂಗ್ ಮೂಲಕ ಮರುನಿಯೋಜನೆ ಮಾಡಲಾಗುವುದು.
ಯಾವುದೇ ಶಾಲೆಯಲ್ಲಿ 60ಕ್ಕಿಂತ ಕಡಿಮೆ ದಾಖಲಾತಿ ಇದ್ದಲ್ಲಿ ಶಾಲೆಯಲ್ಲಿರುವ ಮುಖ್ಯ ಶಿಕ್ಷಕರನ್ನು ಅಗತ್ಯವಿರುವ ಶಾಲೆಗೆ ಸ್ಥಳಾಂತರಿಸಲಾಗುವುದು. ಶಿಕ್ಷಕರನ್ನು ಮುಖ್ಯ ಶಿಕ್ಷಕರ ಪ್ರಭಾರದಲ್ಲಿ ಇಡಲಾಗುವುದು. 120ಕ್ಕಿಂತ ಹೆಚ್ಚು ಮಕ್ಕಳು ಇರುವ  ಶಾಲೆಯ ನಲಿ-ಕಲಿ ತರಗತಿಗೆ ಒಬ್ಬರು ಹೆಚ್ಚುವರಿ ಶಿಕ್ಷಕರನ್ನು ನೀಡಲಾಗುವುದು. ಅತಿಥಿ ಶಿಕ್ಷಕರ ನೇಮಕವನ್ನು ಜಿಲ್ಲಾ ಹಂತದಲ್ಲಿ ಮರುನಿಯೋಜನೆ ಪ್ರಕ್ರಿಯೆ ಮುಗಿದ ನಂತರ ಅಗತ್ಯವಿರುವ ಶಾಲೆಗಳಿಗೆ ನೇಮಕ ಮಾಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು. 16ರಂದು ನಗರಸಭೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆ
ಚಾಮರಾಜನಗರ, ಜು. 12 - ನಗರಸಭೆ ವ್ಯಾಪ್ತಿಯ ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ ನಲ್ಮ್) ಯೋಜನೆಗೆ ಸಂಬಂಧಿಸಿದ ಸ್ವಯಂ ಉದ್ಯೋಗ ಮತ್ತು ಗುಂಪು ಉದ್ಯೋಗಕ್ಕೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಆಯ್ಕೆ ಮಾಡಲು ಜುಲೈ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜೋಡಿ ರಸ್ತೆಯಲ್ಲಿರುವ ವರ್ತಕರ ಭವನದ ಎದುರಿನ ಸಿಡಿಎಸ್ ಸಮುದಾಯ ಭವನದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಸಭೆಯನ್ನು ಪೌರಾಯುಕ್ತರ ಅಧ್ಯಕ್ಷತೆಯಲ್ಲಿ ಏರ್ಪಡಿಸಿದೆ.
ಅರ್ಜಿ ಸಲ್ಲಿಸಿರುವ ಎಲ್ಲಾ ಫಲಾನುಭವಿಗಳು ಮೂಲ ದಾಖಲಾತಿಗಳೊಂದಿಗೆ ಸಭೆಗೆ ಹಾಜರಾಗುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದಲ್ಲಿ ನೂತನ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಪ್ರಾರಂಭ
ಚಾಮರಾಜನಗರ, ಜೂ. 12 - ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ 2016-17ನೇ ಸಾಲಿಗೆ  ನಗರದಲ್ಲಿ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ಹೆಣ್ಣು ಮಕ್ಕಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯವನ್ನು ನೂತನವಾಗಿ ಪ್ರಾರಂಭಿಸಲಾಗುತ್ತಿದೆ.
ಶೇ. 75ರಷ್ಟು ಸ್ಥಾನಗಳನ್ನು ಅಲ್ಪಸಂಖ್ಯಾತರ ಜನಾಂಗದ ವಿದ್ಯಾರ್ಥಿಗಳಿಗೆ ಹಾಗೂ ಶೇ. 25ರಷ್ಟು ಸ್ಥಾನಗಳನ್ನು ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ನೀಡಲಾಗುವುದು.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನ 44,500 ರೂ.ಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ಕ್ಕೆ ಒಂದು ಲಕ್ಷ ರೂ. ಮೀರಿರಬಾರದು.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08226-222180, ಮೊಬೈಲ್ 9980685550, 9480817623 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ  ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ.ಜಾ. ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 12 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿಗೆ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ನಿಬಂಧನೆಗಳಿಗೆ ಅನುಗುಣವಾಗಿ ತರಬೇತಿ ನೀಡಲು ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು ಕಾನೂನು ಪದವೀಧರರಾಗಿರಬೇಕು. ಅರ್ಜಿ ಸಲ್ಲಿಸುವ ಕಡೆಯ ದಿನಾಂಕಕ್ಕೆ ಕಾನೂನು ಪದವಿಯಲ್ಲಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು. ಅಭ್ಯರ್ಥಿಗಳು ಜಿಲ್ಲೆಯವರಾಗಿದ್ದು ಬಾರ್ ಕೌನ್ಸಿಲ್‍ನಲ್ಲಿ ಈಗಾಗಲೇ ನೊಂದಾಯಿಸಿರಬೇಕು. 40 ವರ್ಷ ವಯೋಮಿತಿಯೊಳಗಿದ್ದು 2 ಲಕ್ಷ ರೂ. ವಾರ್ಷಿಕ ಆದಾಯದ ಮಿತಿಯೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು 4 ವರ್ಷಗಳವರೆಗೆ ತರಬೇತಿ ಪಡೆದುಕೊಳ್ಳಬೇಕು. ತರಬೇತಿ ಅವಧಿಯಲ್ಲಿ 2 ಸಾವಿರ ರೂ.ಗಳ ಶಿಷ್ಯ ವೇತನ ಮಂಜೂರು ಮಾಡಲಾಗುವುದು. ತರಬೇತಿ ಅವಧಿಯಲ್ಲಿ ಬಿಟ್ಟು ಹೋದಲ್ಲಿ ವiಂಜೂರಾದ ಶಿಷ್ಯ ವೇತನವನ್ನು ವಸೂಲು ಮÁಡಲಾಗುವುದು.  
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಸೀಲ್ದಾರ್ ಅವರಿಂದ ಪಡೆದ ಜಾತಿ ಪ್ರಮಾಣ ಪತ್ರ, ವರಮಾನ ಪತ್ರ, ಕಾನೂನು ಪದವಿ ಅಂಕಪಟ್ಟಿಗಳು, ಪದವಿ ಪತ್ರ, ಬಾರ್ ಕೌನ್ಸಿಲ್ ನೋಂದಣಿ ಪತ್ರದ ದೃಢೀಕೃತ ಪ್ರತಿಗಳೊಂದಿಗೆ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಜುಲೈ 30ರ ಸಂಜೆ 4 ಗಂಟೆಂiÀÉೂಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಥಮ ಎಂಎಫ್‍ಎ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 12- ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲೆ ಕಾಲೇಜಿನಲ್ಲಿ ಪ್ರಥಮ ಎಂಎಫ್‍ಎ ತರಗತಿ ಪ್ರವೇಶಕ್ಕಾಗಿ 2016-17ನೇ ಸಾಲಿನ ಶಿಕ್ಷಣಿಕ ವರ್ಷಕ್ಕೆ ಚಿತ್ರಕಲೆ, ಶಿಲ್ಪಕಲೆ ಹಾಗೂ ಗ್ರಾಫಿಕ್ಸ್ ವಿಭಾಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಬಿಎಫ್‍ಎ ಪದವಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಹಾಗೂ ವಿವರಣಾ ಪತ್ರಿಕೆಯನ್ನು 250 ರೂ. ಪಾವತಿ ಖುದ್ದಾಗಿ ಹಾಗೂ ಡೀನ್, ಕಾವಾ, ಮೈಸೂರು ಇವರ ಹೆಸರಿನಲ್ಲಿ ರೂ. 275ಗಳ ಡಿಡಿಯನ್ನು ಕಳುಹಿಸಿಯೂ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯನ್ನು ದೃಢೀಕರಿಸಿದ ಎಸ್‍ಎಸ್‍ಎಲ್‍ಸಿ, ಪ್ರಥಮ ಹಾಗೂ ದ್ವಿತೀಯ ಮೂಲ ತರಗತಿ, ಬಿಎಫ್‍ಎ ಅಥವಾ ತತ್ಸಮಾನ ಪದವಿ ಅಂಕಪಟ್ಟಿಗಳು, ಪ್ರಮಾಣ ಪತ್ರ, ವರ್ಗಾವಣೆ ಪತ್ರ, ಆದಾಯ, ಜಾತಿ, ವಲಸೆ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳೊಂದಿಗೆ ಡೀನ್, ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲೆ ಕಾಲೇಜು (ಕಾವಾ), ಭಾರತ ಸರ್ಕಾರ ಪಠ್ಯ ಪುಸ್ರಕ ಮುದ್ರಣಾಲಯದ ಆವರಣ, ಟಿ.ಎನ್. ಪುರ ರಸ್ತೆ, ಮೈಸೂರು-570011 ಇಲ್ಲಿಗೆ ಜುಲೈ 20ರೊಳಗೆ ಸಲ್ಲಿಸಬೇಕು. ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ನಡೆಸಲಾಗುವುದು.
ಶುಲ್ಕ ಪಾವತಿಸಲು ಜುಲೈ 28 ಕಡೆಯ ದಿನವಾಗಿದೆ. ತರಗತಿಗಳು ಆಗಸ್ಟ್ 1ರಿಂದ ಪ್ರಾರಂಭವಾಗಲಿದೆ. ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಅರ್ಜಿಯೊಡನೆ ಲಗತ್ತಿಸಿದ ಮೂಲ ದಾಖಲಾತಿಗಳನ್ನು ಹಾಜರು ಪಡಿಸುವಂತೆ ಕಾವಾ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಪ.ಜಾ., ಪ.ಪಂ. ಅಭ್ಯರ್ಥಿಗಳಿಂದ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
 ಚಾಮರಾಜನಗರ, ಜು. 12  ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ಸಂಗೀತ, ನೃತ್ಯ ಕಲೆಗಳಲ್ಲಿ ಹೆಚ್ಚಿನ ಸಂಶೋಧನೆ, ಅಧ್ಯಯನ ಮಾಡಲು 2016-17ನೇ ಸಾಲಿಗೆ ವಿಶೇಷ ಘಟಕ ಯೋಜನೆಯಡಿ  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪರಿಣಿತ ಕಲಾವಿದರು, ತಜ್ಞರಿಂದ ಸಂಶೋಧನೆಗಾಗಿ ಫೆಲೋಷಿಪ್‍ಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಸಂಶೋಧನೆ, ಅಧ್ಯಯನ ನಡೆಸುವ ವಿಷಯದ ಬಗ್ಗೆ ಸುಮಾರು 5-6 ಪುಟಗಳ ಸಾರಲೇಖನವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ಅಧ್ಯಯನ ಅವಧಿ 6 ತಿಂಗಳು ಹಾಗೂ ಒಟ್ಟು 20 ಫೆಲೋಷಿಪ್‍ಗಳು. ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ 1 ಲಕ್ಷ ರೂ. ಸಂಶೋಧನಾ ನೆರವನ್ನು ನೀಡಲಾಗುವುದು. ಆಯ್ಕೆಯಲ್ಲಿ ಆಕಾಡಮಿ ತೀಮಾನವೇ ಅಂತಿಮವಾಗಿರುತ್ತದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಉಚಿತವಾಗಿ, 10 ರೂ.ಗಳ ಅಂಚೆಚೀಟಿ ಅಂಟಿಸಿದ ಸ್ವವಿಳಾಸವುಳ್ಳ ಲಕೋಟೆಯನ್ನು ಕಳುಹಿಸುವುದರ ಮೂಲಕ ಅಥವಾ ಅಕಾಡೆಮಿಯ ಇ-ಮೇಲ್ ಞಚಿಡಿಟಿಚಿಣಚಿಞಚಿsಚಿಟಿgeeಣಚಿ@gmಚಿiಟ.ಛಿomನಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 25ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಕಾಡೆಮಿ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 12 - ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು 2016-17ನೇ ಸಾಲಿಗೆ ಶಿಷ್ಯ ವೇತನಕ್ಕೆ ಅರ್ಜಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಶಾಸ್ತ್ರೀಯ ಕರ್ನಾಟಕ ಸಂಗೀತ, ಹಿಂದೂಸ್ಥಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾ ಕೀರ್ತನೆ ಮತ್ತು ಗಮಕ ಕಲಾ ಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24ರ ವಯೋಮಾನದ ಅಭ್ಯರ್ಥಿಗಳು ಅರ್ಹರು.
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಆಯ್ಕೆಯಾದವರಿಗೆ 10 ಸಾವಿರ ರೂ. ಶಿಷ್ಯ ವೇತನ ನೀಡಲಾಗುವುದು.
ಅರ್ಜಿಯನ್ನು ಉಚಿತವಾಗಿ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ, 10 ರೂ.ಗಳ ಅಂಚೆಚೀಟಿ ಅಂಟಿಸಿದ ಸ್ವವಿಳಾಸವುಳ್ಳ ಲಕೋಟೆಯನ್ನು ಕಳುಹಿಸುವುದರ ಮೂಲಕ ಅಥವಾ ಅಕಾಡೆಮಿಯ ಇ-ಮೇಲ್ ಞಚಿಡಿಟಿಚಿಣಚಿಞಚಿsಚಿಟಿgeeಣಚಿ@gmಚಿiಟ.ಛಿomನಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 30ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆಸಿ ರಸ್ತೆ, ಬೆಂಗಳೂರು-560002 ಇಲ್ಲಿಗೆ ಕಳುಹಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಕಾಡೆಮಿ ರಿಜಿಸ್ಟ್ರಾರ್ ಬನಶಂಕರಿ ವಿ. ಅಂಗಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಬಿಎಸ್‍ಎನ್‍ಎಲ್‍ನಲ್ಲಿ  ಜೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 12 - ಭಾರತ್ ಸಂಚಾರ್ ನಿಗಮ ಲಿಮಿಟೆಡ್‍ನಲ್ಲಿ ಖಾಲಿ ಇರುವ 2700 ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
      ಅಭ್ಯರ್ಥಿಗಳು ಬಿ.ಇ, ಬಿ.ಟೆಕ್, ಡಿಪ್ಲೊಮೊನಲ್ಲಿ ಟೆಲಿಕಮ್ಯೂನಿಕೇಷನ್, ಎಲೆಕ್ಟ್ರಾನಿಕ್, ಎಲೆಕ್ಟ್ರಿಕಲ್, ರೇಡಿಯೋ, ಕಂಪ್ಯೂಟರ್ ಸೈನ್ಸ್, ಇನ್ಸ್‍ಟ್ರುಮೇಟೆಷನ್ ಮತ್ತು ಇನ್ಫರ್ಮೇಷನ್ ಟೆಕ್ನಾಲಜಿ ಅಥವಾ ಬಿ.ಎಸ್ಸಿ. (ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್), ಎಂ.ಎಸ್ಸಿ (ಎಲೆಕ್ಟ್ರಾನಿಕ್ಸ್)ಯಲ್ಲಿ ಪದವಿ ಪಡೆದಿರಬೇಕು.
      ವಯೋಮಿತಿ 18 ರಿಂದ 30 ವರ್ಷಗಳು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿಗೆ 3 ವರ್ಷ ಹಾಗೂ ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇದೆ.
      ಅರ್ಜಿಯನ್ನು ವೆಬ್‍ಸೈಟ್ ತಿತಿತಿ.exಣeಡಿಟಿಚಿಟexಚಿm.bsಟಿಟ.ಛಿo.iಟಿ ನಲ್ಲಿ ಸಲ್ಲಿಸಲು ಕೊನೆಯ ಆಗಸ್ಟ್ 10 ಕಡೆಯ ದಿನ.
      ಹೆಚ್ಚಿನ ಮಾಹಿತಿಯನ್ನು ಉಪಮುಖ್ಯಸ್ಥರು, ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಗ್ರಂಥಾಲಯ ಕಟ್ಟಡ, ಮಾನಸಗಂಗೋತ್ರಿ, ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಇವರಿಂದ ಅಥವಾ  ವೆಬ್‍ಸೈಟ್ ತಿತಿತಿ.bsಟಿಟ.ಛಿo.iಟಿನ್ನು ಸಂಪರ್ಕಿಸಿ ಪಡೆಯಬಹುದು ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

ಜು. 15ರಂದು ವಿಶ್ವ ಕೌಶಲ್ಯ ದಿನಾಚರಣೆ ಅಂಗವಾಗಿ ಉದ್ಯೋಗಮೇಳ
ಚಾಮರಾಜನಗರ, ಜೂ. - ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜುಲೈ 15ರಂದು ಕೌಶಲ್ಯ ಆಧಾರಿತ ಉದ್ಯೋಗಕ್ಕೆ ಸೇರಬಯಸುವ ಅಭ್ಯರ್ಥಿಗಳಿಗೆ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಯಾವುದೇ ಪದವಿ, ಐಟಿಐ, ಡಿಪ್ಲೊಮಾ, ಎಎನ್‍ಎಂ, ಜಿಎನ್‍ಎಂ, ಜೆಓಸಿ ವಿದ್ಯಾರ್ಹತೆ ಹೊಂದಿದ್ದು 18 ರಿಂದ 35ರ ವಯೋಮಿತಿಯೊಳಗಿರುವ ಅಭ್ಯರ್ಥಿಗಳು ಜುಲೈ 15ರಂದು ಬÉಳಿಗ್ಗೆ 10.30 ಗಂಟೆಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕೆಂದು ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಉದ್ದಿಮೆದಾರರು, ಸದಸ್ಯರ ಉತ್ಪನ್ನಗಳ ಮಾರಾಟ ಮೇಳ : ಉಚಿತ ಮಳಿಗೆ ಸೌಲಭ್ಯ
ಚಾಮರಾಜನಗರ, ಜು.- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಮಹಿಳಾ ಉದ್ದಿಮೆದಾರರು ಹಾಗೂ ಸ್ವಸಹಾಯ ಗುಂಪಿನ ಸದಸ್ಯರು ಉತ್ಪಾದಿಸುವ ವಸ್ತುಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಜುಲೈ 18 ರಿಂದ 20ರವರೆಗೆ ನಗರದ ಲಕ್ಷ್ಮೀರಂಗನಾಥ ಕಲ್ಯಾಣ ಮಂಟಪದಲ್ಲಿ ಜಿಲ್ಲಾಮಟ್ಟದ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದೆ.
ಈ ವಸ್ತುಪ್ರದರ್ಶನದಲ್ಲಿ ಭಾಗವಹಿಸುವ ಮಹಿಳಾ ಉದ್ದಿಮೆದಾರರು, ಸ್ವಸಹಾಯ ಗುಂಪಿನ ಸದಸ್ಯರು, ಸಂಘಸಂಸ್ಥೆಗಳಿಗೆ ಉಚಿತ ಮಳಿಗೆಗಳನ್ನು ಒದಗಿಸಲಾಗುತ್ತದೆ. ಆಸಕ್ತರು ಜುಲೈ 15ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನೊಂದಾಯಿಸಿಕೊಳ್ಳಬಹುದು, ವಿವರಗಳಿಗೆ ಮೊಬೈಲ್ ಸಂಖ್ಯೆ 7204705236 ಹಾಗೂ ಸ್ಥಿರ ದೂರವಾಣಿ ಸಂಖ್ಯೆ 08226-222445 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜು. 16ರಂದು ನಗರದಲ್ಲಿ ಮಾವು ಬೆಳೆ ಕುರಿತು ವಿಚಾರ ಸಂಕಿರಣ
ಚಾಮರಾಜನಗರ, ಜು. 11 - ತೋಟಗಾರಿಕೆ ಇಲಾಖೆ ವತಿಯಿಂದ ಮಾವು ಬೆಳೆಯ ಬೇಸಾಯ ಕ್ರಮ, ಸಸ್ಯ ಸಂರಕ್ಷಣೆ ಮತ್ತು ಕೊಯ್ಲೋತ್ತರ ನಿರ್ವಹಣೆ ಕುರಿತು ವಿಚಾರ ಸಂಕಿರಣವನ್ನು ಜುಲೈ 16ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಬೆಂಗಳೂರಿನ ಭಾರತೀಯ ಸಂಶೋಧನಾ ಕೇಂದ್ರದ ವಿಜ್ಞಾನಿಗಳು, ತೋಟಗಾರಿಕೆ ಇಲಾಖೆಯ ನುರಿತ ತಜ್ಞರು ವಿಚಾರಸಂಕಿರಣದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ರೈತರು, ಬೆಳೆಗಾರರು ಈ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಆಯಾ ತಾಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರು ಹಾಗೂ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08226-222142, ಮೊಬೈಲ್ 9480292129 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ತೋಟಗಾರಿಕೆ ಉಪನಿರ್ದೇಶಕರಾದ ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಜು. 12ರಿಂದ ಶಾಲಾ ವಿದ್ಯಾರ್ಥಿಗಳ ವಿಶೇಷ ಕ್ರೀಡಾಕೂಟ
 ಚಾಮರಾಜನಗರ, ಜು.  ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 14 ರಿಂದ 17ರ ವಯೋಮಿತಿಯೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ನೇರ ಜಿಲ್ಲಾ ವಿಶೇಷ ಕ್ರೀಡೆಗಳನ್ನು ಜುಲೈ 12 ರಿಂದ 29ರವರೆಗೆ ವಿವಿದೆಡೆ ಆಯೋಜಿಸಲಾಗಿದೆ.
ಜುಲೈ 12ರಂದು ಗುಂಡ್ಲುಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣದಲ್ಲಿ ಫುಟ್‍ಬಾಲ್, 13ರಂದು ಷಟಲ್ ಬ್ಯಾಡ್ಮಿಂಟನ್, 14ರಂದು ಕೊಳ್ಳೇಗಾಲದ ಲಯನ್ಸ್ ಶಾಲೆಯಲ್ಲಿ ಯೋಗ, 15ರಂದು ಕೊಳ್ಳೇಗಾಲದ ವಾಸವಿ ವಿದ್ಯಾಕೇಂದ್ರದಲ್ಲಿ ಚೆಸ್, 19ರಂದು ಕೊಳ್ಳೇಗಾಲದ ಆದರ್ಶ ಶಾಲೆಯಲ್ಲಿ ಹ್ಯಾಂಡ್ ಬಾಲ್, 20ರಂದು ಕೊಳ್ಳೇಗಾಲದ ಎಂಜಿಎಸ್‍ವಿ ಶಾಲೆಯಲ್ಲಿ ಬ್ಯಾಸ್ಕೆಟ್ ಬಾಲ್, 21ರಂದು ಕ್ರಿಕೆಟ್ (ಬಾಲಕರಿಗೆ), 22ರಂದು ಕೊಳ್ಳೇಗಾಲದ ಎಸ್‍ವಿಕೆ ಬಾಲಿಕಾ ಪದವಿಪೂರ್ವ ಕಾಲೇಜಿನಲ್ಲಿ ಟಿಟಿ, 26ರಂದು ಹಾಕಿ, 27ರಂದು ಕೊಳ್ಳೇಗಾಲದ ಕೆಯುಸಿಯಲ್ಲಿ ಲಾನ್ ಟೆನಿಸ್, 29ರಂದು ಲಯನ್ಸ್ ಶಾಲೆಯಲ್ಲಿ ಕರಾಟೆ ಸ್ಪರ್ಧೆಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ಕಾನೂನು ಬಾಹಿರವಾಗಿ ಪುಸ್ತಕ ಮಾರಾಟ ಮಾಡುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ
 ಚಾಮರಾಜನಗರ, ಜು. - ಜಿಲ್ಲೆಯಲ್ಲಿ ಯಾವುದೇ ಪ್ರಾಥಮಿಕ ಹಾಗೂ ಪ್ರೌಢಶಾಲಾ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಬಿಲ್ಲನ್ನು ನೀಡದೆ ಸರ್ಕಾರಕ್ಕೆ ತೆರಿಗೆಯನ್ನು ವಂಚಿಸಿ ಪುಸ್ತಕಗಳನ್ನು ಮಾರಾಟ ಮಾಡಬಾರದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ನೋಟ್ ಪುಸ್ತಕ, ಲೇಖನ ಸಾಮಗ್ರಿ, ಇತರೆ ಪುಸ್ತಕಗಳನ್ನು ಬಿಲ್ಲನ್ನು ನೀಡದೆ ನೇರವಾಗಿ ಮಾರಾಟ ಮಾಡುತ್ತಿದ್ದಾರೆಂಬ ದೂರು ಬಂದಿದೆ. ಹೀಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಬಿಲ್ಲನ್ನು ನೀಡದೆ ಸರ್ಕಾರಕ್ಕೆ ತೆರಿಗೆಯನ್ನು ವಂಚಿಸಿ ಪುಸ್ತಕ ಮಾರಾಟ ಮಾಡುವಂತಿಲ್ಲ. ಒಂದು ವೇಳೆ ಕಾನೂನು ಬಾಹಿರವಾಗಿ ಪುಸ್ತಕ ಮಾರಾಟ ಮಾಡಿದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಮತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನಸಂಖ್ಯಾ ನಿಯಂತ್ರಣಕ್ಕೆ ಜಾಗೃತಿ ಮೂಡಿಸಿ : ಎಂ. ರಾಮಚಂದ್ರ
ಚಾಮರಾಜನಗರ, ಜು. :- ಜನಸಂಖ್ಯಾ ಸ್ಪೋಟದಿಂದ ಅನೇಕ ಸಮಸ್ಯೆಗಳು ಎದುರಾಗಿದ್ದು ಈ ಬಗ್ಗೆ ಎಲ್ಲೆಡೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದÀ ಜನಸಂಖ್ಯೆ ಇಂದು 138 ಕೋಟಿಗೆ ತಲುಪಿದೆ. ಜನಸಂಖ್ಯೆ ಪ್ರಮಾಣ ಹೆಚ್ಚಿದಂತೆ ಅದಕ್ಕೆ ಅನುಗುಣವಾಗಿ ಜನರಿಗೆ ಸಮರ್ಪಕವಾಗಿ ಮೂಲಸೌಕರ್ಯವಾದ ನೀರು, ವಸತಿ, ಉದ್ಯೋಗ ಇನ್ನಿತರ ಅಗತ್ಯಗಳನ್ನು ಪೂರೈಸುವ ಸವಾಲನ್ನು ಸಹ ಎದುರಿಸಬೇಕಾಗುತ್ತದೆ. ಜನಸಂಖ್ಯೆ ಸಮತೋಲನದಿಂದ ಎಲ್ಲಾ ಸೌಲಭ್ಯಗಳು ತಲುಪಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಜನಸಂಖ್ಯೆ ಹೆಚ್ಚಳದಿಂದ ಆಗಬಹುದಾದ ತೊಂದರೆ ಅಪಾಯಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕಿದೆ. ಜಿಲ್ಲೆ, ತಾಲೂಕು ಹಾಗೂ ಗ್ರಾಮ ಪಂಚಾಯಿತಿಗಳ ಸಹಕಾರ ಪಡೆದು ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಬೇಕು. ಈ ನಿಟ್ಟಿನಲ್ಲಿ ತಾವು ಪೂರಕವಾಗಿ ಸ್ಪಂದಿಸುವುದಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು ಮಾತನಾಡಿ ಜನಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿರುವುದರಿಂದ ಕೃಷಿ ಜಮೀನುಗಳು ನಿವೇಶನವಾಗಿ ಪರಿವರ್ತನೆಯಾಗುತ್ತಿವೆ. ಜನಸಂಖ್ಯೆ ನಿಯಂತ್ರಣಕ್ಕೆ ಚೀನಾ ಮಾದರಿಯ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕಿದೆ. ಕುಟುಂಬದ ಸಂಖ್ಯೆ ಇತಿಮಿತಿಯಲ್ಲಿದ್ದರೆ ಪೋಷಕರಿಗೂ ಉತ್ತಮ ವಿದ್ಯಾಭ್ಯಾಸ, ಇತರೆ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ಸಾಧ್ಯವಾಗಲಿದೆ. ಮುಂದಿನ ತಲೆಮಾರಿಗೆ ಉತ್ತಮ ಸುಧಾರಣೆಗಳನ್ನು ತರುವ ಸಲುವಾಗಿಯಾದರೂ ಜನಸಂಖ್ಯೆ ಹತೋಟಿಗೆ ಬರಬೇಕಿದೆ ಎಂದರು.
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿ ಜನಸಂಖ್ಯೆ ಹೆಚ್ಚಳಕ್ಕೆ ಮೌಢ್ಯತೆ, ಅನಕ್ಷರತೆ ಸಹ ಕಾರಣವಾಗಲಿದೆ. ಮಿತಿಮೀರಿದ ಜನಸಂಖ್ಯೆಯಿಂದ ಸಾಮಾಜಿಕ ಆರ್ಥಿಕ ಶಿಕ್ಷಣ ಕ್ಷೇತ್ರದ ಪ್ರಗತಿ ಕುಂಠಿತವಾಗುತ್ತದೆ. ಹಳ್ಳಿಹಳ್ಳಿಗಳಲ್ಲೂ ಜನಸಂಖ್ಯೆ ಹೆಚ್ಚಳದಿಂದ ಆಗಬಹುದಾದ ಅನಾಹುತಗಳ ಬಗ್ಗೆ ಮನದಟ್ಟು ಮಾಡಬೇಕಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಬಿ.ರಾಮು ಮಾತನಾಡಿ ಭಾರತದಲ್ಲಿ ಕಳೆದ 7 ದಶಕಗಳಲ್ಲಿ ಜನಸಂಖ್ಯೆ ಪ್ರಮಾಣ ತೀವ್ರಗತಿಯಲ್ಲಿ ಏರಿಕೆಯಾಗಿದೆ. ಆದರೆ ಸ್ವಾಭಾವಿಕ ಸಂಪನ್ಮೂಲಗಳು ಹೆಚ್ಚಳವಾಗಿಲ್ಲ ಎಂಬುದನ್ನು ತಿಳಿಯಬೇಕಿದೆ. ಹೀಗಾಗಿ ನಾನಾ ಸಮಸ್ಯೆಗಳು ಎದುರಿಸಬೇಕಿದೆ. 1970ರಿಂದಲೂ ವ್ಯಾಸೆಕ್ಟಮಿ, ಟ್ಯುಬೆಕ್ಟಮಿ, ಇನ್ನಿತರ ವಿಧಾನಗಳ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜನಸಂಖ್ಯೆ ನಿಯಂತ್ರಣಕ್ಕೆ ನಿರತವಾಗಿದೆ ಎಂದರು.
ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರೊ. ಕೆ.ವೀರಣ್ಣ ಜನಸಂಖ್ಯೆ ದಿನಾಚರಣೆ ಮಹತ್ವ, ಜನಸಂಖ್ಯೆ ನಿಯಂತ್ರಣಕ್ಕೆ ಯೂನಿಸೆಫ್ ಮಾಡಿರುವ ಸಲಹೆ ಇನ್ನಿತರ ಕ್ರಮಗಳ ಕುರಿತು ಉಪನ್ಯಾಸ ನೀಡಿದರು.
ಇದೇವೇಳೆ ಕುಟುಂಬ ಕಲ್ಯಾಣ ಯೋಜನೆಗೆ ಶ್ರಮಿಸಿದ ವೈದ್ಯರು, ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರನ್ನು ಗಣ್ಯರು ಸನ್ಮಾನಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ರೋಟರಿ ಇನ್ನರ್ ವೀಲ್ ಸಂಸ್ಥೆಯ ಡಿ.ಎಸ್. ಗಿರೀಶ್, ಜಿ.ಪಂ. ಉಪಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ. ಪಾಂಡುವಿಜಯನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಬಿ.ವೈ. ನಂದ, ಪ್ರಬಾರ ಜಿಲ್ಲಾ ಶಿಕ್ಷಣ ಆರೋಗ್ಯಾಧಿಕಾರಿ ದೊರೆಸ್ವಾಮಿ ನಾಯಕ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಪ್ರವಾಸಿ ಮಂದಿರದ ಬಳಿ ಜಾಗೃತಿ ಜಾಥಾಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚÀಂದ್ರ ಚಾಲನೆ ನೀಡಿದರು.

ಗುಂಡ್ಲುಪೇಟೆ : ಮನೆ ನಿರ್ಮಾಣ, ಖರೀದಿ, ವಿಸ್ತರಣೆಗೆ ಆರ್ಥಿಕ ನೆರವು : ಅರ್ಜಿ ಆಹ್ವಾನ
ಚಾಮರಾಜನಗರ, ಜು. - ಗುಂಡ್ಲುಪೇಟೆ ಪುರಸಭೆಯು ಕೇಂದ್ರ ಪುರಸ್ಕøತ ಹೌಸಿಂಗ್ ಫಾರ್ ಹಾಲ್ ಅಭಿಯಾನದ ಕ್ರೆಡಿಟ್ ಲಿಂಕ್ಡ್ ಸಬ್ಸಿಡಿ ಯೋಜನೆಯಡಿ ಮನೆ ಖರೀದಿ, ನಿರ್ಮಾಣ, ವಿಸ್ತರಣೆಗೆ ಸಾಲ ಹಾಗೂ ಬಡ್ಡಿ ಸಹಾಯಧನ ಒದಗಿಸುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಬಿಪಿಎಲ್ ಕುಟುಂಬ (ವಾರ್ಷಿಕ ಆದಾಯ 87 ಸಾವಿರ), ಇಡಬ್ಲ್ಯೂಎಸ್ (87 ಸಾವಿರದಿಂದ 3 ಲಕ್ಷ ವಾರ್ಷಿಕ ಆದಾಯ) ಹಾಗೂ ಎಲ್‍ಐಜಿ (3 ಲಕ್ಷದಿಂದ 6 ಲಕ್ಷ ರೂ.ವರೆಗೆ ವಾರ್ಷಿಕ ಆದಾಯ) ವರ್ಗಕ್ಕೆ ಸೌಲಭ್ಯ ಲಭಿಸಲಿದೆ. ಆಸಕ್ತರು ಪುರಸಭೆ ಕಚೇರಿಯಲ್ಲಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜುಲೈ 25ರೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬೇಕು.
ಸಂಪೂರ್ಣ ವಿವರಗಳಿಗೆ ಪುರಸಭೆ ಕಚೇರಿ ಸಂಪರ್ಕಿಸುವಂತೆ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮೊರಾರ್ಜಿ ವಸತಿ ಶಾಲೆಗಳಲ್ಲಿ ಪಿಯುಸಿ ವಿಸ್ತರಣೆ: ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ಜು,9 ರಾಜ್ಯದ ಎಲ್ಲಾ ಮೊರಾರ್ಜಿ ವಸತಿ ಶಾಲೆಗಳಲ್ಲಿ ಪಿಯುಸಿ ವರೆಗಿನ ತರಗತಿಗಳನ್ನು ಹಂತ ಹಂತವಾಗಿ ವಿಸ್ತರಣೆ ಮಾಡುವ ಚಿಂತನೆ ಸರ್ಕಾರದ ಮುಂದಿದೆ ಎಂದು ಸಹಕಾರ ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ಹನೂರಿನಲ್ಲಿಂದು ಸಮಾಜ ಕಲ್ಯಾಣ ವತಿಯಿಂದ ನಿರ್ಮಾಣವಾಗಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮೊರಾರ್ಜಿ ಶಾಲೆಗಳಿಗೆ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗಿದೆ. ಬಹು ವಿಸ್ತಾರವಾದ ಪ್ರದೇಶದಲ್ಲಿ ಬೃಹತ್ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಪ್ರಸ್ತುತ 6 ರಿಂದ 10ನೇ ತರಗತಿ ವರೆಗೆ ಮಾತ್ರ ವ್ಯಾಸಂಗಕ್ಕೆ ವಸತಿ ಶಾಲೆಗಳಲ್ಲಿ ಅವಕಾಶವಿದೆ. ಪಿಯುಸಿ ವರೆಗೆ ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಸೌಲಭ್ಯ ಒದಗಿಸುವುದರಿಂದ ಅನುಕೂಲವಾಗಲಿದೆ ಹೀಗಾಗಿ ಎಲ್ಲಾ ಮೊರಾರ್ಜಿ ವಸತಿ ಶಾಲೆಗಳಲ್ಲೂ ಹಂತ ಹಂತವಾಗಿ ಪಿಯುಸಿ ವ್ಯಾಸಂಗಕ್ಕೆ ವಿಸ್ತರಣೆ ಮಾಡಲು ಯೋಜಿಸಲಾಗಿದೆ ಎಂದರು.
ವಸತಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಪಡೆಯಲು ಪೂರಕ ಸೌಲಭ್ಯಗಳನ್ನು ನೀಡಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಒಟ್ಟು 16 ವಸತಿ ಶಾಲೆಗಳಿವೆ. ಈ ಶಾಲೆಗಳಲ್ಲಿ ಶೇ. 94 ರಷ್ಟು ಫಲಿತಾಂಶ ಬಂದಿದೆ. ಇದು ಹೆಮ್ಮೆಯ ಸಂಗತಿ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಚಾಮರಾಜನಗರ ತಾಲ್ಲೂಕಿನ ಕೋಡಿ ಉಗನೆಯಲ್ಲಿ ಮೊರಾರ್ಜಿ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜು ಖಾಸಗಿ ಕಟ್ಟಡದಲ್ಲಿ ನಡೆಯುತ್ತಿತ್ತು. ವಿದ್ಯಾರ್ಥಿಗಳಿಗೆ ಆಗುತ್ತಿದ್ದ ತೊಂದರೆ ಮನಗಂಡು ಆದಷ್ಟು ಶೀಘ್ರವೇ ಅನುಕೂಲ ಕಲ್ಪಿಸಬೇಕೆಂಬ ಉದ್ದೇಶದಿಂದ ಪ್ರಸ್ತುತ ಉದ್ಘಾಟನೆಯಾಗಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರ ವಸತಿ ನಿಲಯಗಳ ಸ್ಥಾಪನೆ ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ವಿಶೇಷ ಆದ್ಯತೆ ನೀಡಿದೆ. ಎಲ್ಲಾ ಸುಧಾರಣೆಗೂ ಶಿಕ್ಷಣವೇ ಮದ್ದು. ಶಿಕ್ಷಣ ಅಧ್ಯಯನದಿಂದ ಮಾನ್ಯತೆ ಸಿಗಲಿದೆ. ಹೀಗಾಗಿ ಎಲ್ಲಾ ವರ್ಗಗಳಿಗೂ ಪರಿಪೂರ್ಣವಾಗಿ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಿದೆ. ಶಿಕ್ಷಣ ರಂಗದ ಸವಲತ್ತುಗಳನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಅನಾವರಣ ಮಾಡಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ವಸತಿ ಶಾಲೆಗಳು ಬಡವಿದ್ಯಾರ್ಥಿಗಳಿಗೆ ವರದಾನವಾಗಿದೆ. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಟ ಒಂದು ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜನ್ನು ಶೀಘ್ರವೇ ಪ್ರಾರಂಭಿಸಬೇಕು. ಇದರಿಂದ ಬಹುತೇಕ ವಿದ್ಯಾರ್ಥಿಗಳಿಗೆ ದೂರದ ಪಟ್ಟಣಗಳಿಗೆ ತೆರಳಿ ಅಧ್ಯಯನ ಮಾಡುವ ತೊಂದರೆ ತಪ್ಪಲಿದೆ. ಈ ಹಿನ್ನಲೆಯಲ್ಲಿ ಮುಂದಿನ ರಾಜ್ಯ ಪರಿಷತ್ ಸಭೆಯಲ್ಲಿ ಮುಖ್ಯ ಮಂತ್ರಿಗಳಿಗೂ ಸಹ ಈ ಬಗ್ಗೆ ಮನವಿ ಮಾಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಆರ್. ನರೇಂದ್ರ ಅವರು ಹನೂರು ಭಾಗವು ಆರ್ಥಿಕವಾಗಿ ಹಿಂದುಳಿದಿದ್ದರೂ ಸಹಾ ಶಿಕ್ಷಣ ಸಾಧನೆಯಲ್ಲಿ ಮುಂದಿದೆ. ಈ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಪೂರಕವಾದ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ. ರಾಮಾಪುರ, ಪಾಳ್ಯ ಹೋಬಳಿಗಳಲ್ಲೂ ಮೊರಾರ್ಜಿ ಶಾಲೆ ಮಂಜೂರಾಗಿದೆ. ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಲಾಗಿದೆ. ಜಿಲ್ಲಾ ಕೇಂದ್ರದಲ್ಲಿ ಇರುವಂತಹ ನವೋದಯ ಶಾಲೆಯನ್ನು ಹನೂರಿನಲ್ಲಿಯೂ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮೊರಾರ್ಜಿ ದೇಸಾಯಿ ಅವರ ಭಾವಚಿತ್ರ ಅನಾವರಣ ಮಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ, ಶಿಕ್ಷಣ ಹಾಗೂ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್, ಜಿ.ಪಂ. ಸದಸ್ಯರಾದ ಜಯಂತಿ, ಶಿವಮ್ಮ, ಮರುಗದಮಣಿ, ತಾ.ಪಂ. ಅಧ್ಯಕ್ಷರಾದ ರಾಜು, ಉಪಾಧ್ಯಕ್ಷರಾದ ಲತಾರಾಜಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಾಜು ಗೌಡ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜವಾದ್ ಅಹಮದ್, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಮಮತಾ ಮಹದೇವ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್. ಜಿ ಗೌಡ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ನಂತರ ಹನೂರು ಪಟ್ಟಣದ ವಿಶೇಷ ತಹಶೀಲ್ದಾರ್ ಕಚೇರಿ ಬಳಿ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಉಸ್ತುವಾರಿ ಸಚಿವರು ಗುದ್ದಲಿ ಪೂಜೆ ನೆರವೇರಿಸಿದರು.








     


01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು