ಕೋಟಿ ವೃಕ್ಷ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೋಟಿವೃಕ್ಷ ಆಂದೋಲನ ಕಾರ್ಯಕ್ರಮಕ್ಕೆ ಇಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಸಿ ನೆಡುವ ಮೂಲಕ ವಿದ್ಯುಕ್ತವಾಗಿ ವನ ಮಹೋತ್ಸವ ಹಾಗೂ ಕೋಟಿ ವೃಕ್ಷ ಆಂದೋಲನವನ್ನು ಉದ್ಘಾಟಿಸಿದರು.
ಬಳಿಕ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಉಸ್ತುವಾರಿ ಸಚಿವರು ಜನಸಾಂದ್ರತೆ ಒತ್ತಡದಿಂದ ಅರಣ್ಯ ಪ್ರದೇಶ ವಿಸ್ತಾರ ಕಡಿಮೆಯಾಗುತ್ತಿದೆ. ಪರಿಸರ ಸಂರಕ್ಷಣೆ ಹಾಗೂ ಅರಣ್ಯೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪರ್ಯಾಯವಾಗಿ ಗಿಡಮರಗಳನ್ನು ಬೆಳೆಸಿ ಪೋಷಿಸಲು ಎಲ್ಲ ಜಿಲ್ಲೆಗಳಲ್ಲಿ ಕೋಟಿ ವೃಕ್ಷ ಆಂದೋಲನ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಇಂದಿನಿಂದ ಅಕ್ಟೋಬರ್ 10ರವರೆಗೆ ಕೋಟಿವೃಕ್ಷ ಆಂದೋಲನ ನಡೆಯಲಿದ್ದು ಈ ಅವಧಿಯಲ್ಲಿ ಒಟ್ಟು 2 ಲಕ್ಷ ಸಸಿಗಳನ್ನು ಅರಣ್ಯ ಇಲಾಖೆ ಸಹಯೋಗದೊಂದಿಗೆ ವಿವಿಧ ಇಲಾಖೆಗಳು, ಇತರರು ಸೇರಿ ನೆಡಲಿದ್ದಾರೆ. ಅರಣ್ಯ ಇಲಾಖೆ ಬಳಿ 6 ಲಕ್ಷ ಹಾಗೂ ಜಲಾನಯನ ಇಲಾಖೆಯಲ್ಲಿ 2 ಲಕ್ಷ ಸಸಿಗಳು ಲಭ್ಯವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡಿರುವ ರೈತರಿಗೂ ಸಸಿಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ವೃಕ್ಷ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿದೆ ಎಂದರು.
ಪರಿಸರ ಸಮತೋಲನಕ್ಕೆ ಅರಣ್ಯ ಪ್ರದೇಶ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಒಟ್ಟು ಭೂ ಭಾಗದಲ್ಲಿ ಶೇಕಡ 33ರಷ್ಟು ಅರಣ್ಯ ಇರಬೇಕಿದೆ. ಆದರೆ ಶೇ. 19ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ. ಹೀಗಾಗಿ ಪರಿಸರ, ಹವಾಮಾನದಲ್ಲಿ ಏರಿಳಿತಗಳನ್ನು ಕಾಣುತ್ತಿದ್ದೇವೆ. ಅರಣ್ಯ ವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ಹೊಣೆಗಾರಿಕೆ ವಹಿಸಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.
ಜಿಲ್ಲೆಯು ಶೇ. 54ರಷ್ಟು ಅರಣ್ಯ ಪ್ರದೇಶ ಹೊಂದಿದೆ. ನಾಲ್ಕು ತಾಲೂಕುಗಳಲ್ಲಿಯೂ ಪೂರ್ವಪಶ್ಚಿಮ ಘಟ್ಟಗಳ ಸುತ್ತುವರೆದಿದೆ. ಆದಾಗ್ಯೂ ಉಳಿದ ಭಾಗಗಳಲ್ಲಿ ಪರಿಸರ ಸಮತೋಲನ ಕೊರತೆ ನೀಗಿಸಲು ನೆಡುತೋಪು ಅರಣ್ಯ ಬೆಳೆಸುವಿಕೆ ಪ್ರಯತ್ನ ಮುಂದುವರೆಯಬೇಕು. ಪ್ರಸ್ತುತ ವೃಕ್ಷ ಆಂದೋಲನ ಕಾರ್ಯಕ್ರಮದಲ್ಲಿ ನೆಡಲಾಗುವ ಸಸಿಗಳನ್ನು ಪೋಷಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಪರಿಸರ ಅಸಮತೋಲನದಿಂದ ಸಾಕಷ್ಟು ಭೀಕರ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಬಹುಭಾಗ ಅರಣ್ಯ ಪ್ರದೇಶವಿದೆ. 2 ಹುಲಿ ಯೋಜನೆ ಅಭಯಾರಣ್ಯ ಹೊಂದಿದ ಹೆಗ್ಗಳಿಕೆ ಇದೆ. ಆದರೂ ಇತರೆಡೆ ಸಸಿಗಳನ್ನು ನೆಡುವ ಮುಖಾಂತರ ಅರಣ್ಯೀಕರಣ ಕೆಲಸಕ್ಕೆ ಒತ್ತು ನೀಡಬೇಕಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಹ ಅರಣ್ಯ ಪೋಷಣೆಗೆ ಸಾಕಷ್ಟು ಅವಕಾಶಗಳಿದ್ದು ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಯಾವುದೇ ಸರ್ಕಾರಿ ಯೋಜನೆ ಅನುಷ್ಠಾನಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ವಾಹನಗಳಿಂದ ಆಗುತ್ತಿರುವ ವಾಯುಮಾಲಿನ್ಯ ತಪ್ಪಿಸುವುದೂ ಸಹ ನಾಗರಿಕರ ಹೊಣೆಗಾರಿಕೆಯಾಗಿದೆ. ಒಟ್ಟಾರೆ ಪರಿಸರ ಕಾಪಾಡುವ ಕರ್ತವ್ಯ ಪ್ರತಿಯೊಬ್ಬರಿಗೂ ಇರಲೇಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪೂರ್ವಜರಿಗೆ ಪರಿಸರದ ಮೇಲೆ ಇದ್ದ ಕಾಳಜಿಯಿಂದ ಇಂದೂ ಸಹ ಹುಣಸೆ, ಬೇವು, ಅರಳಿ, ಆಲದಂತಹ ಅನೇಕ ಮರಗಳನ್ನು ಕಾಣಬಹುದಾಗಿದೆ. ಪ್ರಾಣಿಸಂಕುಲಗಳಿಂದಲೂ ಹರಡಿದ ಬೀಜ ಪರಿಣಾಮವಾಗಿ ಸ್ವಾಭಾವಿಕವಾಗಿ ಅನೇಕ ಸಸಿಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಪ್ರಸ್ತುತ ಕಾರ್ಯಕ್ರಮದಡಿ ನೆಡಲಾಗುವ ಸಸಿಗಳ ಪೈಕಿ ಶೇ. 80ರಷ್ಟಾದರೂ ಉಳಿಸಿ ಬೆಳೆಸಿದರೆ ಉದ್ದೇಶಿತ ಯೋಜನೆ ಸಾರ್ಥಕವಾಗುತ್ತದೆ ಎಂದರು.
ಶಾಸಕರಾದ ಎಸ್. ಜಯಣ್ಣ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಶಿಕ್ಷಣ ಮತ್ತು ಆರೋಗÀ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗೇಶ, ಜಿಲ್ಲಾಧಿಕಾರಿ ಬಿ. ರಾಮು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಸ್ತುವಾರಿ ಸಚಿವರಿಂದ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆ ಬಿಡುಗಡೆ
ಚಾಮರಾಜನಗರ, ಜು. 02 :- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ರಾಜ್ಯ ಸರ್ಕಾರದ 3 ವರ್ಷಗಳ ಸಾಧನೆಯನ್ನು ಕುರಿತ ಮಾಹಿತಿಯನ್ನು ಒಳಗೊಂಡ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಬಿಡುಗಡೆ ಮಾಡಿದರು.
ನಗರದ ಹೊರವಲಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕೋಟಿವೃಕ್ಷ ಆಂದೋಲನ ಸಮಾರಂಭದಲ್ಲಿ ಸಚಿವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ರಾಜ್ಯಸರ್ಕಾರ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳು, ಸಾಧನೆಗಳ ವಿವರಗಳು ಕಿರುಹೊತ್ತಿಗೆಯಲ್ಲಿ ಇವೆ. ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಯೋಜನೆಗಳ ಬಗ್ಗೆಯೂ ಮಾಹಿತಿ ಕೊಡಲಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 100ಕ್ಕೂ ಹೆಚ್ಚು ಈಡೇರಿಸಿದೆ. ನುಡಿದಂತೆ ನಡೆಯುತ್ತಿದ್ದೇವೆ. ಪ್ರಗತಿಪರ ಕಾರ್ಯಕ್ರಮಗಳು ಮುಂದುವರೆದಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ : ಸಚಿವ ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ಜು. 02- ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಚಾಮರಾಜನಗರ ಜಿಲ್ಲೆಯೂ ಸೇರಿದಂತೆ ಒಟ್ಟು 6 ಜಿಲ್ಲೆಗಳಲ್ಲಿ ಆರಂಭವಾಗಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರ ಉದ್ಘಾಟಿಸಿದ ಬಳಿಕ ಕೆ. ಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸುಲಿದ ತೆಂಗಿನ ಕಾಯಿಯನ್ನು ಚಾಮರಾಜನಗರ, ತುಮಕೂರು, ಉಡುಪಿ, ಹಾಸನ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಖರೀದಿಸಲಾಗುತ್ತಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ತೆಂಗಿನಕಾಯಿ ಬೆಲೆ ಕುಸಿದಿರುವುದನ್ನು ಮನಗಂಡು ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ತದನಂತರ ಇತರ ಜಿಲ್ಲೆಗಳಲ್ಲೂ ಬೆಲೆ ಕುಸಿದಿದ್ದು ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಖರೀದಿಸಬೇಕೆಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಇತರೆ 5 ಜಿಲ್ಲೆಗಳನ್ನು ಸೇರ್ಪಡೆ ಮಾಡಿಕೊಂಡು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಮಹದೇವ ಪ್ರಸಾದ್ ತಿಳಿಸಿದರು.
ಆಯಾ ಜಿಲ್ಲೆಯ ಎ.ಪಿ.ಎಂ.ಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕ್ವಿಂಟಾಲ್‍ಗೆ 1600 ರೂ. ರಂತೆ ರೈತರು, ಬೆಳೆಗಾರರಿಂದ ತೆಂಗಿನ ಕಾಯಿಯನ್ನು ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುತ್ತದೆ. ರೈತರು, ಬೆಳೆಗಾರರು ಆರ್‍ಟಿಸಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ದೃಢೀಕರಿಸಿದ ಅರ್ಜಿ, ಇತರೆ ದಾಖಲೆಗಳನ್ನು ನೀಡಬೇಕು. ಮಾರಾಟ ಮಾಡಿದ ಹಣವನ್ನು ಆರ್‍ಟಿಜಿಎಸ್ ಮೂಲಕ ರೈತರು ಬೆಳೆಗಾರರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು ಈಗಾಗಲೇ ಪ್ರತಿ ಜಿಲ್ಲೆಗೆ ತಲಾ ಒಂದು ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ ಪ್ರಕ್ರಿಯೆ ಆರಂಭ : ಸದುಪಯೋಗಕ್ಕೆ ಮನವಿ
ಚಾಮರಾಜನಗರ, ಜು. 02 - ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಜಿಲ್ಲೆಯಲ್ಲಿ ಆರಂಭವಾಗಿದೆ.
ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ 1600 ರೂ. ನಂತೆ ಸುಲಿದ ತೆಂಗಿನ ಕಾಯಿಯನ್ನು ರೈತರು, ಬೆಳೆಗಾರರಿಂದ ಖರೀದಿಸಲಾಗುತ್ತದೆ.
ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಬಯಸುವವರು ಜುಲೈ 2ರಿಂದ 6ರವರೆಗೆ ಎ.ಪಿ.ಎಂ.ಸಿ ಖರೀದಿ ಕೇಂದ್ರದಲ್ಲಿ ಮೊದಲು ನಿಗದಿತ ನಮೂನೆ ಅರ್ಜಿ ಪಡೆದು ನೊಂದಾಯಿಸಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕೆ ಇಲಾಖೆಯ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ನಿಗದಿತ ನಮೂನೆ ಅರ್ಜಿಯಲ್ಲಿ ದೃಢೀಕರಿಸಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಆಧಾರ್ ಕಾರ್ಡ್ ಇಲ್ಲದವರು ತಕ್ಷಣವೇ ನಾಡ ಕಚೇರಿಯಲ್ಲಿ ಆಧಾರ್ ನೊಂದಣಿ ಮಾಡಿಸಿ ಅಲ್ಲಿ ನೀಡಲಾಗುವ ಸಂಖ್ಯೆಯನ್ನು ಲಗತ್ತಿಸಬಹುದು. ಆಯಾ ತಾಲೂಕು ವ್ಯಾಪ್ತಿಯ ಎ.ಪಿ.ಎಂ.ಸಿಯಲ್ಲಿ ತೆಂಗಿನಕಾಯಿ ಮಾರಾಟ ಮಾಡಲು ನೊಂದಣಿ ಮಾಡಿಸಿದ ರೈತರು, ಬೆಳೆಗಾರರಿಂದ ಸುಲಿದ ತೆಂಗಿನ ಕಾಯಿಯನ್ನು ಜುಲೈ 4 ರಿಂದ ಖರೀದಿಸಲಾಗುತ್ತದೆ. ಯಳಂದೂರು ತಾಲೂಕಿನ ರೈತರು ಕೊಳ್ಳೇಗಾಲ ಎ.ಪಿ.ಎಂ.ಸಿ ಖರೀದಿ ಕೇಂಧ್ರದಲ್ಲಿ ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ತೆಂಗಿನ ಕಾಯಿ ಮಾರಾಟ ಮಾಡಿದ ಹಣವನ್ನು ರೈತರು, ಬೆಳೆಗಾರರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿ, ಉದ್ಘಾಟನೆ, ಚಾಲನೆ
ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಇಂದು ವಿವಿದೆಡೆ ಅಭಿವೃದ್ಧಿ ಕಾಮಗಾರಿ ಕಟ್ಟಡ, ರಸ್ತೆ, ಇತರೆ ಕೆಲಸಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಚಾಲನೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಿಲ್ಲಾ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಚಂದಕವಾಡಿಯಲ್ಲಿ 1314.80 ಲಕ್ಷ ರೂ. ವೆಚ್ಚದಲ್ಲಿ ರಾಮಸಮುದ್ರದಿಂದ ಅಮೃತಭೂಮಿವರೆಗೆ ಸುಮಾರು 13.90 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರವನ್ನು ಮೊದಲಿಗೆ ಹೊಂಡರಬಾಳುವಿನಲ್ಲಿ ಉದ್ಘಾಟಿಸಿದರು. ತದನಂತರ ಗುಂಬಳ್ಳಿ ಬಳಿ ಕೂಡ ಪ್ರವೇಶದ್ವಾರವನ್ನು ಉದ್ಘಾಟಿಸಿದರು. ನಂತರ ಸಂತೆಮರಹಳ್ಳಿಯಲ್ಲಿ ಆರ್ಚರಿ ಕ್ರೀಡಾ ಶಾಲೆ ಹಾಗೂ ವಸತಿ ನಿಲಯ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಇತರೆ ಸ್ಥಳೀಯ ಸದಸ್ಯರು, ಮುಖಂಡರು, ಜನಪ್ರತಿನಿಧಿಗಳು ಹಾಜರಿದ್ದರು.
ಶಿಕ್ಷಣ ಸುಧಾರಣೆ ಕುರಿತ ಸ್ಮಾರ್ಟ್ ಯೋಜನೆಗೆ ಚಾಲನೆ
ಚಾಮರಾಜನಗರ, ಜು. 02 (- ಜಿಲ್ಲೆಯ ಶಿಕ್ಷಣದ ಸಮಗ್ರ ಸುಧಾರಣೆಗಾಗಿ ಸ್ಮಾರ್ಟ್ ಯೋಜನೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಯುನಿಸೆಫ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಮಾರ್ಟ್ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಶಿಕ್ಷಣ ಕ್ಷೇತ್ರದ ವಿನೂತನ ಕಾರ್ಯಕ್ರಮ ಇದಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ನಮ್ಮ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದರು.
ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ 11 ರಿಂದ 27 ಸ್ಥಾನಕ್ಕೆ ಕುಸಿರುವುದು ಅತಂಕಕಾರಿ ಸಂಗತಿ. ಇದನ್ನು ಗಮನದಲ್ಲಿಟ್ಟು ಮುಂಬರುವ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಹೊಸ ಯೋಜನೆಗಳ ಚಿಂತನೆ ಅಗತ್ಯವಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ, ಮಾರ್ಗದರ್ಶನ ಹಾಗೂ ಸ್ಪಂದನಾತ್ಮಕ ಬೋಧನೆಯ ಧ್ಯೇಯದೊಂದಿಗೆ ಆರಂಭಗೊಂಡಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಮಕ್ಕಳ ವಿದ್ಯಾಭ್ಯಾಸ ಗುಣಮಟ್ಟದಿಂದ ಕೂಡಿರಬೇಕು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪ್ರಜ್ಞೆ ಮೂಡಬೇಕು. ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ತರಬೆಕೆಂಬುದೇ ಈ ಯೋಜನೆಯ ಉದ್ದೇಶ. ಪ್ರಮುಖವಾಗಿ ಮಕ್ಕಳಿಗೆ ಶಿಕ್ಷಕರು ಶಿಸ್ತನ್ನು ಕಲಿಸಬೇಕು. ಶೈಕ್ಷಣಿಕ ಚಟುವಟಿಕೆಗಳ ಅರಿವು ಮೂಡಿಸುವುದು ಶಿಕ್ಷಕರ ಕರ್ತವ್ಯ. ಶಿಕ್ಷಕರಿಗೆ ಶಿಕ್ಷಣದ ಮೌಲ್ಯಾಧಾರಿತ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ, ಪ್ರವೃತ್ತಿಯನ್ನು ಪ್ರತಿ ತಿಂಗಳು ಪರಿಶೀಲಿಸಿದರೆ ಶೈಕ್ಷಣಿಕ ಚಟುವಟಿಕೆಗಳ ಗುಣಮಟ್ಟ ಹೆಚ್ಚಲು ಅನುವಾಗುತ್ತದೆ ಎಂದು ಸಚಿವರು ಕಿವಿಮಾತು ಹೇಳಿದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಸಾಕಷ್ಟು ಅನುದಾನ ಒದಗಿಸಿದೆ. ಜಿಲ್ಲೆಗೆ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಆದರ್ಶ ವಸತಿ ಶಾಲೆಗಳನ್ನು ಮಂಜೂರು ಮಾಡುವ ಮೂಲಕ ಅಭಿವೃದ್ದಿಗೆ ಮುಂದಾಗಿದೆ. ಎಲ್ಲಾ ಶಾಲೆ, ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ನೀಡಿದೆ. ಇದನ್ನು ಜಿಲ್ಲೆಯ ವಿದ್ಯಾರ್ಥಿಗಳು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಸ್ಮಾರ್ಟ್ ಯೋಜನೆ ಶಿಕ್ಷಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ಸಂಬಂಧಪಟ್ಟ ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿ ಯೋಜನೆಯ ಸಮರ್ಪಕ ಕಾರ್ಯನಿರ್ವಹಣೆಗೆ ಸಹಕಾರಿಯಾಗಬೇಕು. ಮುಖ್ಯವಾಗಿ ಸ್ಮಾರ್ಟ್ ಯೋಜನೆ ನಿರ್ವಹಣೆಗಾಗಿ ಯುನಿಸೆಫ್‍ನಿಂದ 25 ಲಕ್ಷ, ಐ.ಎಲ್.ಎಫ್.ಎಸ್ ಕಂಪನಿಯಿಂದ 25 ಲಕ್ಷ ಸೇರಿದಂತೆ ಒಟ್ಟು 1.50 ಕೋಟಿ ಅನುದಾನ ದೊರೆತಿದೆ. ಜಿಲ್ಲೆಯಲ್ಲಿ ಮೊದಲಬಾರಿ ಅನುಷ್ಟಾನಗೊಂಡ ಜಿ.ಪಿ. ಒನ್ ಸೇವೆ ಇಂದು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಸ್ಮಾರ್ಟ್ ಯೋಜನೆಗೂ ಅಂತಹ ಯಶಸ್ಸು ಸಿಗಬೇಕು ಎಂದು ಸಚಿವರು ತಿಳಿಸಿದರು.
ಸಂಸದ ಆರ್. ಧ್ರುವನಾರಾಯಣ ಅವರು ಮಾತನಾಡಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಈ ಸ್ಮಾರ್ಟ್ ಯೋಜನೆ ನೆರವಾಗಲಿದೆ. ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರಾಗಿದ್ದು, ಶಿಕ್ಷಣದಲ್ಲಿ ಸುಧಾರಣೆ ತರಲು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ತರಬೇತಿ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ಶಿಕ್ಷಣ ಕ್ಷೇತ್ರದ ಪ್ರಮುಖ ಯೋಜನೆಯಾ ಸ್ಮಾರ್ಟ್ ಯೋಜನೆಯು ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿಯೆ ಚಾಲನೆಗೊಂಡಿರುವುದು ವಿಶೇಷವಾದದ್ದು. ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ. ಯೋಜನೆ ಜಾರಿಗೊಳ್ಳುವಲ್ಲಿ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು ಹೆಚ್ಚು ಶ್ರಮಿಸಬೇಕಾಗಿದೆ ಎಂದರು
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಸ್ಮಾರ್ಟ್ ಯೋಜನೆಯ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿದರು.
ಸ್ಮಾರ್ಟ್ ಯೋಜನೆಯ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರಸಭಾ ಅದ್ಯಕ್ಷರಾದ ರೇಣುಕಾಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ ವೇದಿಕೆಯಲ್ಲಿದ್ದರು.
ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿ ಅವಧಿ ಜುಲೈ 10ರವರೆಗೆ ವಿಸ್ತರಣೆ
ಚಾಮರಾಜನಗರ, ಜು. :- ತೋಟಗಾರಿಕೆ ಬೆಳೆಯಾದ ಅಂಗಾಂಶ ಕೃಷಿ ಬಾಳೆ, ಕಂದುಬಾಳೆ ಹಾಗೂ ತೆಂಗುಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಲಭ್ಯವಿದ್ದು, ಈ ಯೋಜನೆಗೆ ನೊಂದಾಯಿಸುವ ಅವಧಿಯನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಈ ವಿಮೆ ಯೋಜನೆಗೆ ರೈತರು ನೊಂದಾಯಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜುಲೈ 10ರ ವರೆಗೂ ಕಾಲಾವಕಾಶ ವಿಸ್ತರಿಸಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಸಹ ಇದ್ದು, ಜಿಲ್ಲೆಯ ಯಳಂದೂರು ತಾಲೂಕು ಹೊರತು ಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಹೋಬಳಿವಾರು ಟೊಮೆಟೋ(ನೀರಾವರಿ), ಅರಿಶಿಣ, ಬದನೆ, ಆಲೂಗಡ್ಡೆ(ನೀರಾವರಿ), ಬೀನ್ಸ್, ಈರುಳ್ಳಿ(ನೀರಾವರಿ), ವಿಮೆ ವ್ಯಾಪ್ತಿಗೆ ಬರಲಿವೆ. ಈ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವಾಗಿದೆ.
ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಹತ್ತಿರದ ಬ್ಯಾಂಕ್ ಶಾಖೆ ಸಂಪರ್ಕಿಸಬೇಕು. ವಿವರಗಳಿಗೆ ಹೋಬಳಿ, ತಾಲೂಕು ಮಟ್ಟದ ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕತಿಳಿಸಿದ್ದಾರೆ.
*********************
ಮಾಹಿತಿ ಹಕ್ಕು ಕಾಯಿದೆ ಬಗ್ಗೆ ಸಂಪೂರ್ಣ ತಿಳಿವಳಿಕೆ ಹೊಂದಲು ಆಯುಕ್ತರ ಸಲಹೆ
ಚಾಮರಾಜನಗರ, ಜೂ. 28 - ಕಚೇರಿಗಳಲ್ಲಿ ವ್ಯವಸ್ಥಿತವಾಗಿ ಕಡತ ನಿರ್ವಹಣೆ ಕೆಲಸವನ್ನು ಮಾಡುವುದರಿಂದ ಮಾಹಿತಿ ಹಕ್ಕುಗಳ ಸಂಬಂಧ ಸ್ವೀಕೃತವಾದ ಅರ್ಜಿಗಳನ್ನು ನಿಗದಿತ ವೇಳೆಗೆ ವಿಲೇವಾರಿ ಮಾಡಬಹುದೆಂದು ಕರ್ನಾಟಕ ಮಾಹಿತಿ ಆಯೋಗದ ಆಯುಕ್ತರಾದ ಕೆ.ಎಂ. ಚಂದ್ರೇಗೌಡ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿಂದು ತಾಲೂಕು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಮಾಹಿತಿ ಹಕ್ಕು ಅಧಿನಿಯಮ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಯಾವುದೇ ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಮಾಹಿತಿ ಒದಗಿಸಬೇಕಾದರೆ ಮುಖ್ಯವಾಗಿ ಕಡತಗಳನ್ನು ಸಮರ್ಪಕವಾಗಿ ಇಟ್ಟುಕೊಳ್ಳಬೇಕಾಗುತ್ತದೆ. ಇಲ್ಲವಾದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಹೀಗಾಗಿ ಕಚೇರಿಗಳಲ್ಲಿ ಕಡತ ವರ್ಗೀಕರಣ ಕೆಲಸವನ್ನು ಮಾಡಿಕೊಳ್ಳಬೇಕು. ಇದರಿಂದ ಕಾಲಮಿತಿಯೊಳಗೆ ಮಾಹಿತಿ ಹಕ್ಕು ಅರ್ಜಿಗೆ ಪೂರಕವಾಗಿ ಮಾಹಿತಿ ನೀಡಲು ಅನುಕೂಲವಾಗಲಿದೆ ಎಂದು ಆಯುಕ್ತರು ತಿಳಿಸಿದರು.
ಮಾಹಿತಿ ಹಕ್ಕುಗಳಿಗೆ ಸಂಬಂಧಿಸಿದ ಕಾಯಿದೆ, ನಿಯಮ, ಅಧಿಸೂಚನೆ, ಸುತ್ತೋಲೆ ಹಾಗೂ ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಬೇಕು. ಇದರಿಂದ ಅರ್ಜಿ ವಿಲೇವಾರಿಯಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ಸಹಾಯವಾಗಲಿದೆ. ನಿಯಮಾವಳಿ ಅನ್ವಯ ಅರ್ಜಿದಾರರಿಗೆ ಯಾವ ಮಾಹಿತಿ ಕೊಡಬೇಕು ಅಥವಾ ಕೊಡಬಾರದು ಎಂಬ ವಿಷಯವು ಮನದಟ್ಟವಾಗಲಿದೆ. ಮಾಹಿತಿ ಹಕ್ಕು ಬಗ್ಗೆ ಸಂಪೂರ್ಣ ತಿಳಿವಳಿಕೆ ಹೊಂದುವುದರಿಂದ ಅರ್ಜಿ ವಿಲೇವಾರಿ ಕೆಲಸವು ಸರಳವಾಗುತ್ತದೆ ಎಂದು ಆಯುಕ್ತರು ತಿಳಿಸಿದರು.
ಮಾಹಿತಿ ಕೋರಿ ಬಂದ ಅರ್ಜಿಗಳಿಗೆ ಆ ಕಚೇರಿಯಲ್ಲಿ ಮಾಹಿತಿ ಲಭ್ಯವಿದ್ದರೆ 30 ದಿನಗಳೊಳಗೆ ನೀಡಬೇಕು. ಆದಷ್ಟು ಆ ಮಾಹಿತಿಯನ್ನು ನೋಂದಾಯಿತ ಅಂಚೆ ಮೂಲಕವೇ ರವಾನೆ ಮಾಡಬೇಕು. ಇದರಿಂದ ಮಾಹಿತಿ ರವಾನಿಸಿದ ಬಗ್ಗೆ ನಿರ್ದಿಷ್ಟ ದಾಖಲೆ ಅಥವಾ ಖಾತರಿಯನ್ನು ಹೊಂದಬಹುದಾಗಿದೆ. ಅರ್ಜಿದಾರರು ಕೇಳಿದ ಮಾಹಿತಿ ನಿಮ್ಮ ವ್ಯಾಪ್ತಿಯಲ್ಲಿ ಲಭ್ಯವಿಲ್ಲದಿದ್ದಲ್ಲಿ ಸಂಬಂಧಪಟ್ಟ ಇಲಾಖೆಗೆ 5 ದಿನಗಳೊಳಗೆ ವರ್ಗಾಯಿಸಬೇಕು ಎಂದರು.
ಅರ್ಜಿದಾರರು ಯಾವ ಮಾಹಿತಿಯನ್ನು ಕೇಳಿದ್ದಾರೆ ಎಂಬ ಬಗ್ಗೆ ಸಂಪೂರ್ಣವಾಗಿ ಅರ್ಥವಾಡಿಕೊಳ್ಳಬೇಕು. ಕೆಲ ನಿರ್ಧಿಷ್ಟ ನಿಯಮಾವಳಿ ಪ್ರಕಾರ ಕೆಲವೊಂದು ವಿಷಯಗಳಿಗೆ ಸಂಬಂಧಪಟ್ಟಂತೆ ಮಾಹಿತಿಯನ್ನು ನೀಡಲು ಅವಕಾಶವಿರುವುದಿಲ್ಲ. ಮೂರನೇ ವ್ಯಕ್ತಿಗೆ ಸಂಬಂಧಪಟ್ಟಂತೆ ಮಾಹಿತಿ ಕೇಳಿದ ಸಂದರ್ಭದಲ್ಲಿ ಆ ಮೂರನೇ ವ್ಯಕ್ತಿಗೆ ನೋಟೀಸ್ ನೀಡಿ ಅವರ ಅನುಮತಿಯನ್ನು ಪಡೆಯಬೇಕು. ಮೂರನೇ ವ್ಯಕ್ತಿ ಒಪ್ಪಿದಲ್ಲಿ ಮಾತ್ರ ಅವರ ಮಾಹಿತಿಯನ್ನು ಅರ್ಜಿದಾರರಿಗೆ ಕೊಡಬೇಕಾಗುತ್ತದೆ ಎಂದು ಮಾಹಿತಿ ಆಯುಕ್ತರು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ ಜಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜೂ. 30ರಂದು ದೇವರಾಜ ಅರಸು ಅವರ ವ್ಯಕ್ತಿತ್ವ, ಸಾಧನೆಗಳ ಕುರಿತು ನಾಟಕ ಪ್ರದರ್ಶನಕ್ಕೆ ಚಾಲನೆ
ಚಾಮರಾಜನಗರ, ಜೂ. 28 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ನೇತಾರ, ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಜೂನ್ 30ರಂದು ಸಂಜೆ 6 ಗಂಟೆಗೆ ಮಂಡ್ಯ ರಮೇಶ್ ನಿರ್ದೇಶಿಸಲಿರುವ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು ನಾಟಕ ಪ್ರದರ್ಶನವನ್ನು ನಗರದ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಗೋ. ಮಧುಸೂದನ್, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅರಸು ಅವರ ವ್ಯಕ್ತಿತ್ವ ಸಾಧನೆ ಕುರಿತು ನಾಟಕ ಪ್ರದರ್ಶನ ವೀಕ್ಷಣೆಗೆ ಮನವಿ
ಚಾಮರಾಜನಗರ, ಜೂ. 28 - ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದೇ ಪ್ರಸಿದ್ಧರಾಗಿದ್ದ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಹಾಗೂ ಮಹತ್ವದ ಸಾಧನೆಗಳನ್ನು ಪ್ರಸ್ತುತ ಪಡಿಸುವ ನಾಟಕ ಪ್ರದರ್ಶನವು ಜೂನ್ 30ರಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾಡಳತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಾಡಾಗಿದೆ.
ಮಂಡ್ಯ ರಮೇಶ್ ನಾಟಕ ತಂಡವು ಅರಸು ಅವರ ವ್ಯಕ್ತಿತ್ವ ಹಾಗೂ ಸಾಧನೆಗಳ ಕುರಿತ ನಾಟಕ ಪ್ರದರ್ಶನ ನೀಡಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿತವಾಗಿದೆ.
ಈ ನಾಟಕ ಪ್ರದರ್ಶನವನ್ನು ದೇವರಾಜ ಅರಸು ಅವರ ಅಭಿಮಾನಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ನಾಗರಿಕರು ವೀಕ್ಷಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-222180 ಅಥವಾ ಮೊಬೈಲ್ 9480817623 ಸಂಪರ್ಕಿಸಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಸಾಲಸೌಲಭ್ಯಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 28 (ಕರ್ನಾಟಕ ವಾರ್ತೆ):- ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಧಾರ ಯೋಜನೆಯಡಿ ವಿಕಲಚೇತನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡುವ ಸಾಲಸೌಲಭ್ಯಕ್ಕೆ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಯೋಜನೆಯಡಿ ಬಂಡವಾಳಕ್ಕೆ 20 ಸಾವಿರ ರೂ. ಸಾಲ ಹಾಗೂ ಒಂದು ಗೂಡಂಗಡಿ (ಕಿಯೊಸ್ಕಾ) ನೀಡಲಾಗುತ್ತದೆ. ಆಸಕ್ತರು ಗ್ರಾಮ ಪಂಚಾಯಿತಿ ಕಚೇರಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಅಥವಾ ತಾಲೂಕು ಪಂಚಾಯಿತಿ ಕಚೇರಿಯ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಿಂದ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜುಲೈ 30 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-223688 ಅಥವಾ 224688 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ
ಚಾಮರಾಜನಗರ, ಜೂ. 28 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಿದ್ದು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಸೇರಿದವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ ಮೊಬೈಲ್ ಸಂಖ್ಯೆ 9480818013, 9480818010, ಸ್ಥಿರÀ ದೂರವಾಣಿ ಸಂಖ್ಯೆ 080-44554444 ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಪರಿಶಿಷ್ಟರ, ಮೋಳೆ ಕಾಲೋನಿಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ತಯಾರಿಸಿ : ಧ್ರುವನಾರಾಯಣ
ಚಾಮರಾಜನಗರ ಜೂನ್-29 ಪಟ್ಟಣದ ಮೋಳೆಗಳು ಹಾಗೂ ಪರಿಶಿಷ್ಟರ ಕಾಲೋನಿಗಳಿಗೆ ಮೂಲ ಸೌಕರ್ಯ ಒದಗಿಸಲು ಸರ್ಕಾರದ ವಿವಿಧ ಯೋಜನೆಗಳಡಿ ನೆರವು ಲಭಿಸಲಿದ್ದು, ಇದಕ್ಕಾಗಿ ಅಗತ್ಯ ಕ್ರಿಯಾ ಯೋಜನೆ ತಯಾರಿಸುವಂತೆ ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಮೋಳೆಯಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಒಂದು ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೊಳ್ಳೇಗಾಲ ಪಟ್ಟಣದಲ್ಲಿ ಇರುವ ಮೋಳೆಗಳು ಹಾಗೂ ಪರಿಶಿಷ್ಟರು ವಾಸಿಸುವ ಪ್ರದೇಶಗಳಿಗೆ ಮೂಲ ಸೌಲಭ್ಯ ಅಭಿವೃದ್ಧಿ ಪಡಿಸುವ ಸಲುವಾಗಿಯೇ ಕೊಳಚೆ ನಿರ್ಮೂಲನಾ ಮಂಡಳಿ ಹಾಗೂ ಪರಿಶಿಷ್ಟ ಜಾತಿ, ವರ್ಗ ವಿಶೇಷ ಘಟಕ ಉಪಯೋಜನೆಯಡಿ ಅನುದಾನ ಸಿಗಲಿದೆ. ಈ ಹಣವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡು ಸೌಕರ್ಯ ಒದಗಿಸಬಹುದಾಗಿದೆ. ಹೀಗಾಗಿ ಕ್ರಿಯಾ ಯೋಜನೆಯನ್ನು ನಗರಸಭೆ ಎಲ್ಲರ ಸಹಕಾರ ಪಡೆದು ಸಿದ್ಧಪಡಿಸಬೇಕು ಎಂದು ತಿಳಿಸಿದರು.
ಹಿಂದುಳಿದ ಜನರೇ ಹೆಚ್ಚು ವಾಸಿಸುವ ಮೋಳೆಗಳಲ್ಲಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಿ ಅವರಿಗೆ ಸೌಲಭ್ಯ ಒದಗಿಸುವುದು ಆದ್ಯ ಕರ್ತವ್ಯವಾಗಿದೆ. ವಿಶೇಷವಾಗಿ ಕೊಳ್ಳೇಗಾಲ ಪಟ್ಟಣದ 13ನೇ ವಾರ್ಡಿಗೆ ಸೇರಿದ ಮೋಳೆಯಲ್ಲಿ ಮೂಲಸೌಕರ್ಯ ಒದಗಿಸಬೇಕೆಂಬ ಬೇಡಿಕೆ ಈ ಹಿಂದಿನಿಂದಲೂ ಇದೆ. ಹೀಗಾಗಿ ಕೊಳಚೆ ನಿರ್ಮೂಲನಾ ಮಂಡಳಿ ಒಂದು ಕೋಟಿ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆ, ಚರಂಡಿ ಕಾಮಗಾರಿಗಳನ್ನು ನಿರ್ವಹಿಸಿ ಜನರಿಗೆ ಅನುಕೂಲ ಮಾಡಿಕೊಡಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಸ್ಥಳೀಯ ಮೋಳೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಇನ್ನೂ ನಾಲ್ಕು ಕೋಟಿ ರೂ.ಗಳ ಅಗತ್ಯವಿದೆ ಎಂದು ಕೊಳಚೆ ನಿರ್ಮೂಲನಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ನಗರಸಭೆ ವತಿಯಿಂದಲೂ ಸಾಧ್ಯವಿರುವ ಗರಿಷ್ಠ ಪ್ರಮಾಣದ ಅನುದಾನ ನಿಗಧಿ ಮಾಡಬೇಕು. ಇನ್ನಿತರ ಕಡೆ ಲಭಿಸಬಹುದಾದ ಅವಶ್ಯ ಹಣಕಾಸು ಪಡೆದುಕೊಂಡು ಎಲ್ಲಾ ಅಗತ್ಯಗಳನ್ನು ಪೂರೈಸಲು ತಾವೂ ಸಹ ಶಿಫಾರಸ್ಸು ಮಾಡುವುದಾಗಿ ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಎಸ್.ಜಯಣ್ಣ ರವರು ಮೋಳೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಲು ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರದಿಂದ ಮಂಜೂರು ಮಾಡಿಸಲು ಮುಂದಾಗುತ್ತೇನೆ. ಸ್ಥಳೀಯ ಜನರ ಅಪೇಕ್ಷೆಯಂತೆ ಅವರಿಗೆ ನೀಡಬೇಕಿರುವ ಸೌಕರ್ಯಗಳನ್ನು ಒಳಗೊಂಡ ಮಾಸ್ಟರ್ ಪ್ಲಾನ್ ತಯಾರಿಸಬೇಕೆಂದು ತಿಳಿಸಿದರು.
ಕೊಳಚೆ ನಿರ್ಮೂಲನಾ ಮಂಡಳಿಯ ಕಾರ್ಯಪಾಲಕ ಎಂಜಿನಿಯರ್ ಮಂಜು ಮಾತನಾಡಿ, ಮಂಡಳಿ ವತಿಯಿಂದ ಕೊಳಚೆ ಪ್ರದೇಶದಲ್ಲಿ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವ ಸಲುವಾಗಿಯೇ 200 ಕೋಟಿ ರೂ.ಹಣ ನಿಗಧಿಯಾಗಿದೆ. ಇದಕ್ಕಾಗಿ ಜಿಲ್ಲೆಯಲ್ಲಿಯೂ 20 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಯೋಜನೆಯನ್ನು ಕೈಗೊಳ್ಳಲು ಅವಕಾಶವಿದೆ. ಇದಕ್ಕಾಗಿ ಶೀಘ್ರದಲ್ಲಿಯೇ ವಿಸ್ತøತ ಯೋಜನಾ ವರದಿ ತಯಾರಿಸಲಿದ್ದೇವೆ ಎಂದರು.
ನಗರಸಭೆ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ, ಉಪಾಧ್ಯಕ್ಷರಾದ ಶಾಂತರಾಜು, ಸದಸ್ಯರಾದ ಶಾರದಾ ವರದರಾಜು, ಸುರೇಶ್, ರಾಘವೇಂದ್ರ, ಮಹದೇವಪ್ರಸಾದ್, ಮುಡಿಗುಂಡ ಮಹದೇವು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಿವಕುಮಾರ್, ಕೊಪ್ಪಾಳಿ ಮಹದೇವನಾಯಕ, ನಗರಸಭಾ ಆಯುಕ್ತರಾದ ಲಿಂಗರಾಜು, ಕೊಳಚೆ ನಿರ್ಮೂಲನಾ ಮಂಡಳಿಯ ಸಹಾಯಕ ಕಾರ್ಯಪಾಲಕರು ಉಪಸ್ಥಿತರಿದ್ದರು.
ಜೂ. 30ರಂದು ದೇವರಾಜ ಅರಸು ಅವರ ವ್ಯಕ್ತಿತ್ವ, ಸಾಧನೆಗಳ ಕುರಿತು ನಾಟಕ ಪ್ರದರ್ಶನಕ್ಕೆ ಚಾಲನೆ
ಚಾಮರಾಜನಗರ, ಜೂ. 29 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ನೇತಾರ, ಪರಿವರ್ತನೆಯ ಹರಿಕಾರ, ಮಾಜಿ ಮುಖ್ಯಮಂತ್ರಿಗಳಾದ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಜೂನ್ 30ರಂದು ಸಂಜೆ 6 ಗಂಟೆಗೆ ಮಂಡ್ಯ ರಮೇಶ್ ನಿರ್ದೇಶಿಸಲಿರುವ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತು ನಾಟಕ ಪ್ರದರ್ಶನವನ್ನು ನಗರದ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಗೋ. ಮಧುಸೂದನ್, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅರಸು ಅವರ ವ್ಯಕ್ತಿತ್ವ ಸಾಧನೆ ಕುರಿತು ನಾಟಕ ಪ್ರದರ್ಶನ ವೀಕ್ಷಣೆಗೆ ಮನವಿ
ಚಾಮರಾಜನಗರ, ಜೂ. 29 ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರೆಂದೇ ಪ್ರಸಿದ್ಧರಾಗಿದ್ದ ಡಿ. ದೇವರಾಜ ಅರಸು ಅವರ ವ್ಯಕ್ತಿತ್ವ ಹಾಗೂ ಮಹತ್ವದ ಸಾಧನೆಗಳನ್ನು ಪ್ರಸ್ತುತ ಪಡಿಸುವ ನಾಟಕ ಪ್ರದರ್ಶನವು ಜೂನ್ 30ರಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾಡಳತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಾಡಾಗಿದೆ.
ಮಂಡ್ಯ ರಮೇಶ್ ನಾಟಕ ತಂಡವು ಅರಸು ಅವರ ವ್ಯಕ್ತಿತ್ವ ಹಾಗೂ ಸಾಧನೆಗಳ ಕುರಿತ ನಾಟಕ ಪ್ರದರ್ಶನ ನೀಡಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿತವಾಗಿದೆ.
ಈ ನಾಟಕ ಪ್ರದರ್ಶನವನ್ನು ದೇವರಾಜ ಅರಸು ಅವರ ಅಭಿಮಾನಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ನಾಗರಿಕರು ವೀಕ್ಷಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ದೂ.ಸಂ. 08226-222180 ಅಥವಾ ಮೊಬೈಲ್ 9480817623 ಸಂಪರ್ಕಿಸಿ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ದೇಶದ ಆರ್ಥಿಕ ಅಭಿವೃದ್ಧಿ ಯೋಜನೆಗೆ ಮಹಾಲೊನೋಬಿಸ್ ಕೊಡುಗೆ ಅಪಾರ
ಚಾಮರಾಜನಗರ, ಜೂ,2-ದೇಶದ ಆರ್ಥಿಕ ಅಭಿವೃದ್ದಿಗಾಗಿ ರೂಪಿಸಿದ ಯೋಜನೆಗಳಿಗೆ ಸಾಂಖ್ಯಿಕ ತಜ್ಞರಾದ ಪ್ರೋ|. ಮಹಾಲೊನೋಬಿಸ್ ಅವರ ಕೊಡುಗೆ ಅಪಾರವಾಗಿದೆ ಎಂದು ಜಿಲ್ಲಾ ಉಪಕಾರ್ಯದರ್ಶಿ ಮುನಿರಾಜಪ್ಪ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಇಂದು ಸಾಂಖ್ಯಿಕ ಇಲಾಖೆ ವತಿಯಿಂದ ಮಹಾಲೊನೊಬಿಸ್ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಾಂಖ್ಯಿಕ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರಗತಿಗೆ ಪೂರಕವಾಗಿರುವ ಯೋಜನೆಗಳ ತಯಾರಿಕೆ, ಸಮೀಕ್ಷಾ ವಿಧಾನ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಗೆ ಮಹಾಲೊನೋಬಿಸ್ ಅಪಾರ ಕೊಡುಗೆ ನೀಡಿದ್ದಾರೆ. ಮುಂದಿನ ಪೀಳಿಗೆಗೂ ಅನುಕೂಲವಾಗುವ ಭದ್ರ ಬುನಾದಿಯನ್ನು ಹಾಕಿಕೊಟ್ಟಿದ್ದಾರೆ ಎಂದು ಮುನಿರಾಜಪ್ಪ ತಿಳಿಸಿದರು.
ಮಹಾಲೋನೋಬಿಸ್ ಅವರ ಚಿಂತನೆ, ಸಮೀಕ್ಷೆ ಮಾರ್ಗದರ್ಶನವು ಇಂದಿಗೂ ಪ್ರಸ್ತುತವಾಗಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಯೋಜನೆಗಳನ್ನು ಮುಂದುವರೆಸಲಾಗುತ್ತಿದೆ. ಅವರ ಹೆಸರಿನಲ್ಲಿ ಸಾಂಖ್ಯಿಕ ದಿನವನ್ನು ಆಚರಿಸುವ ಮೂಲಕ ಸ್ಮರಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದು ಮುನಿರಾಜಪ್ಪ ಪ್ರಶಂಸಿದರು.
ಕೃಷಿ ಮತ್ತು ರೈತರ ಕಲ್ಯಾಣ ವಿಷಯ ಕುರಿತು ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ರವರು ಮಾತನಾಡಿ ವಿದ್ಯಾರ್ಥಿಗಳು ಕೃಷಿ ಸಂಬಂಧಿತ ಮೂಲ ಅಂಕಿಅಂಶಗಳನ್ನು ಸಹಾ ವಿದ್ಯಾಭ್ಯಾಸದ ಜೊತೆ ತಿಳಿಯಬೇಕಿದೆ. ದೇಶದ ಆದಾಯ ತಲಾದಾಯ, ಕೃಷಿ ಬೆಳವಣಿಗೆಯಲ್ಲಿನ ಪಾತ್ರ ಕುರಿತು ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಸಲಹೆ ಮಾಡಿದರು.
ಸಿದ್ದಾರ್ಥ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ರಂಗಸ್ವಾಮಿ ಮಾತನಾಡಿ ಮಹಾಲೊನೋಬಿಸ್ ಅವರ ರಾಷ್ಟ್ರೀಯ ಮಾದರಿ ಸಮೀಕ್ಷೆ ಆರ್ಥಿಕ ಸಾಮಾಜಿಕ ಸಮೀಕ್ಷೆ, ಬೆಳೆ ವಿಮೆ, ಬೆಳೆ ಅಂದಾಜು ಸೇರಿದಂತೆ ಅನೇಕ ನೀತಿ ವಿಧಾನಗಳನ್ನು ಅನುಸರಿಸಲಾಗಿದೆ ಎಂದರು.
ಜಿಲ್ಲಾ ಸಂಖ್ಯಾ ಸಂಗ್ರಹಣ ಅಧಿಕಾರಿ ಪ್ರಮೀಳ ಮಾತನಾಡಿ ಮಹಾಲೊನೋಬಿಸ್ ಅವರು ಯೋಜನಾ ಆಯೋಗದಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದ್ದಾರೆ ಎರಡನೇ ಪಂಚವಾರ್ಷಿಕ ಯೋಜನೆಯಲ್ಲಿ ಕೃಷಿ ಕೈಗಾರಿಕೆ ಆದ್ಯತೆ ನೀಡುವಲ್ಲಿ ಇವರ ಕೊಡುಗೆ ಬಹಳಷ್ಟಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಾದೇಶು ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ನಾಗರಾಜು, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಡಾ|| ಬಾಲಸುಂದರ್, ಸಹಾಯಕ ಸಂಖ್ಯಾಧಿಕಾರಿ ಮಹದೇವು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪದ್ಮಶ್ರೇಣಿ ಪ್ರಶಸ್ತಿಗೆ ಪ್ರಸ್ತಾವನೆ ಆಹ್ವಾನ
ಚಾಮರಾಜನಗರ, ಜೂ. 30:- ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಕೊಡಮಾಡುವ 2017ನೇ ಸಾಲಿನ ಪದ್ಮಶ್ರೇಣಿ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ,
ಕಲೆ (ಜನಪ್ರಿಯ ಕಲೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪ, ಶಿಲ್ಪಕಲೆ, ಚಲನಚಿತ್ರ, ಛಾಯಾಗ್ರಹಣ ಇತರೆ), ಸಮಾಜಕಾರ್ಯ(ಸಮಾಜಸೇವೆ, ಧರ್ಮಾರ್ಥ ಸೇವೆ, ಸಮುದಾಯ ಯೋಜನೆ ಕೊಡುಗೆ), ಸಾರ್ವಜನಿಕ ವ್ಯವಹಾರ (ಕಾನೂನು, ಸಾರ್ವಜನಿಕ ಜೀವನ, ರಾಜಕೀಯ ಇತ್ಯಾದಿ), ವಿಜ್ಞಾನ, ತಾಂತ್ರಿಕ ತಂತ್ರಜ್ಞಾನ ಇತರೆ ಗೌರವಾನ್ವಿತ ವೃತ್ತಿ, ವ್ಯಾಪಾರ, ಕೈಗಾರಿಕೆ (ಬ್ಯಾಂಕಿಂಗ್ ಆರ್ಥಿಕ ಚಟುವಟಿಕೆ, ಮ್ಯಾನೇಜ್‍ಮೆಂಟ್, ಪ್ರವಾಸೋದ್ಯಮ, ವಾಣಿಜ್ಯ), ವೈದ್ಯಕೀಯ, ಸಾಹಿತ್ಯ ಮತ್ತು ಶಿಕ್ಷಣ (ಪತ್ರಿಕೋದ್ಯಮ, ಬೋಧನೆ, ಪುಸ್ತಕ ಬರೆಯುವಿಕೆ, ವೈದ್ಯ, ಶಿಕ್ಷಣ ಅಭಿವೃದ್ಧಿ ಸುಧಾರಣೆ ಇತ್ಯಾದಿ), ನಾಗರಿಕ ಸೇವೆ (ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ), ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ ಮತ್ತು ಯೋಗ, ಇತರೆ ಕ್ಷೇತ್ರಗಳು, ಮಾನವ ಹಕ್ಕುಗಳ ಸಂರಕ್ಷಣೆ, ಭಾರತ ಸಂಸ್ಕøತಿಕ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸರಕ್ಷಣೆ ಒಳಗೊಂಡಂತೆ ಕ್ಷೇತ್ರಗಳನ್ನು ಪರಿಗಣಿಸಲಾಗುತ್ತದೆ.
ಪ್ರಶಸ್ತಿಗೆ ಶಿಫಾರಸು ಮಾಡುವ ವ್ಯಕ್ತಿಯು ಅತ್ಯುತ್ತಮ ಗುಣಮಟ್ಟ ಹೊಂದಿರುವುದನ್ನು ದೃಢಪಡಿಸಿಕೊಳ್ಳಬೇಕು. ಆ ವ್ಯಕ್ತಿಯು ಜೀವನ ಪರ್ಯಂತ ಸಾಧಿಸಿರುವ ಪ್ರಗತಿಯನ್ನು ಹಾಗೂ ಅವರು ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಗಮನಿಸಬೇಕಾಗುತ್ತದೆ.
ಅಂಗವಿಕಲರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಮಾಜದ ದುರ್ಬಲ ವರ್ಗದವರು, ಮಹಿಳೆಯರನ್ನು ಗಮನಕ್ಕೆ ತೆಗೆದುಕೊಳ್ಳಬೇಕು. ಯಾವುದೇ ವಿಶೇಷ ಸಂಸ್ಥೆ, ಸಾರ್ವಜನಿಕ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಹೆಸರುಗಳನ್ನು ಶಿಫಾರಸು ಮಾಡುವ ಮುಂಚೆ ಆ ಸಂಸ್ಥೆಗಳನ್ನು ಸಂಪರ್ಕಿಸಬೇಕು. ಈ ಪ್ರಶಸ್ತಿಯನ್ನು ಸಾಮಾನ್ಯವಾಗಿ ಮೃತಪಟ್ಟ ವ್ಯಕ್ತಿಗಳಿಗೆ ನೀಡಲಾಗುವುದಿಲ್ಲ. ಆದರೂ ವಿಶೇಷ ಸಂದರ್ಭಗಳಲ್ಲಿ ಶಿಫಾರಸು ಮಾಡಲ್ಪಟ್ಟ ವ್ಯಕ್ತಿಯು ಇತ್ತೀಚೆಗೆ ಮೃತನಾಗಿದ್ದರೆ ಅಂದರೆ ಯಾವ ಗಣರಾಜ್ಯೋತ್ಸವ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆಯೋ ಆ ವರ್ಷದಲ್ಲಿ ಮೃತಪಟ್ಟಿದ್ದರೆ ಅಂತಹವರಿಗೆ ಮರಣೋತ್ತರ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರವು ಪರಿಗಣಿಸಬಹುದಾಗಿದೆ.
ಶಿಫಾರಸು ಪ್ರಸ್ತಾವನೆಗಳನ್ನು ಜುಲೈ 5ರೊಳಗೆ ಆನ್ ಲೈನ್ ಮೋಡಿನಲ್ಲಿ ಕಳುಹಿಸಬೇಕಿದೆ. ಪದ್ಮಶ್ರೇಣಿಯ ಈ ಪ್ರಶಸ್ತಿಗೆ ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳು ಇದ್ದಲ್ಲಿ ಅಂತಹ ವ್ಯಕ್ತಿಗಳ ಹೆಸರನ್ನು ತಹಸೀಲ್ದಾರರ ಮೂಲಕ ಪ್ರಸ್ತಾವನೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಪಿಯು ಪೂರಕ ಪರೀಕ್ಷೆ : ನಿಷೇದಾಜ್ಞೆ ಜಾರಿ
ಚಾಮರಾಜನಗರ, ಜೂ. 30 - ಜಿಲ್ಲೆಯ ನಾಲ್ಕೂ ತಾಲೂಕು ಕೇಂದ್ರಗಳಲ್ಲಿ ಜುಲೈ 1 ರಿಂದ 13ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ, ಯಳಂದೂರು ತಾಲೂಕು ಕೇಂದ್ರಗಳಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಿಗ್ಗೆ 8 ರಿಂದ ಸಂಜೆ 5.30 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪರೀಕ್ಷಾ ಕಾರ್ಯವು ನ್ಯಾಯೋಚಿತ, ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಯಲೆಂಬ ಸದುದ್ದೇಶದಿಂದ ನಿಷೇದಾಜ್ಞೆ ವಿಧಿಸಲಾಗಿದೆ. ಈ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.
ಗಣಕಯಂತ್ರ ಪರೀಕ್ಷೆ : ನಿಷೇದಾಜ್ಞೆ ಜಾರಿ
ಚಾಮರಾಜನಗರ, ಜೂ. 30 - ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಜುಲೈ 1ರಂದು ಹಾಗೂ ತಾಲೂಕು ಕಚೇರಿ ಬಳಿಯ ವಿಷುಯಲ್ ಸಾಫ್ಟ್‍ಟೆಕ್ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್‍ನಲ್ಲಿ ಜುಲೈ 2 ರಿಂದ 8ರವರೆಗೆ ಗಣಕಯಂತ್ರ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಈ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಲಿಖಿತ ಪರೀಕ್ಷೆ, ತಾಲೂಕು ಕಚೇರಿ ಬಳಿಯ ವಿಷುಯಲ್ ಸಾಫ್ಟ್‍ಟೆಕ್ ಕಂಪ್ಯೂಟರ್ ಟ್ರೈನಿಂಗ್ ಸೆಂಟರ್‍ನಲ್ಲಿ ಪ್ರಾಯೋಜಿಕ ಪರೀಕ್ಷೆಗಳು ನಡೆಯಲಿವೆ.
ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ದಿನಗಳಂದು ಬೆಳಿಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಪರೀಕ್ಷಾ ಕಾರ್ಯವು ನ್ಯಾಯೋಚಿತ, ಶಾಂತಿ ಹಾಗೂ ಸುವ್ಯವಸ್ಥೆಯಿಂದ ನಡೆಯಲೆಂಬ ಸದುದ್ದೇಶದಿಂದ ನಿಷೇದಾಜ್ಞೆ ವಿಧಿಸಲಾಗಿದೆ. ಈ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು, ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.
ಅಂಕನಶೆಟ್ಟಿಪುರ : ಆರ್ ಟಿ ಚಿಲ್ಡ್ರನ್ ಶಾಲೆಗೆ ದಾಖಲು ಮಾಡದಿರÀಲು ಸೂಚನೆ
ಚಾಮರಾಜನಗರ, ಜೂ. 30 (ಕರ್ನಾಟಕ ವಾರ್ತೆ):- ತಾಲೂಕಿನ ಅಂಕನಶೆಟ್ಟಿಪುರದಲ್ಲಿ ಆರ್ ಟಿ ಚಿಲ್ಡ್ರನ್ ಶಾಲೆಯು ಅನುಮತಿ ಪಡೆಯದೆ 6 ರಿಂದ 8ನೇ ತರಗತಿ ಪ್ರಾರಂಭಿಸಿದ್ದು ಇಲಾಖೆ ಗಮನಕ್ಕೆ ಬಂದಿದ್ದು ಪೋಷಕರು ಮಕ್ಕಳನ್ನು ಸೇರ್ಪಡೆ ಮಾಡಬಾರದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಮನವಿ ಮಾಡಿದೆ.
ಸದರಿ ಶಾಲೆಯಲ್ಲಿ 6 ರಿಂದ 8ನೇ ತರಗತಿಗಳನ್ನು ಅನಧಿಕೃತವಾಗಿ ಪ್ರಾರಂಭಿಸಿದ್ದು ಕಾನೂನುಬಾಹಿರವಾಗಿರುತ್ತದೆ, ಈ ಹಿನ್ನೆಲೆಯಲ್ಲಿ ಪೋಷಕರು ಯಾವುದೇ ಕಾರಣಕ್ಕೂ 6 ರಿಂದ 8ನೇ ತರಗತಿಗೆ ತಮ್ಮ ಮಕ್ಕಳಿಗೆ ಪ್ರವೇಶ ಪಡೆಯಬಾರದೆಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 30 :- ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಮೆಟ್ರಿಕ್ ನಂತರದ ಬಾಲಕರ ಬಾಲಕಿಯರ ಸಾಮಾನ್ಯ ಹಾಗೂ ಮಾದರಿ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ 1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗ ಇತರೆ ಜನಾಂಗದವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಪ್ರವರ್ಗ 1, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ 2.5 ಲಕ್ಷ ರೂ. ಒಳಗಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇನ್ನಿತರ ಜನಾಂಗದ ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ ಒಂದು ಲಕ್ಷ ರೂ. ಒಳಗಿರಬೇಕು. ಅರ್ಜಿ ಸಲ್ಲಿಕೆಗೆ ಜುಲೈ 23 ಕಡೆಯ ದಿನವಾಗಿದೆ. ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ, ಅರ್ಜಿ ಸಲ್ಲಿಕೆ, ಇನ್ನಿತರ ಸಂಪೂರ್ಣ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ hಣಣಠಿ://ಞಚಿಡಿeಠಿಚಿss.ಛಿgg.gov.iಟಿ ಸಂಪರ್ಕಿಸಬೇಕು. ಅಲ್ಲದೆ ಮೊಬೈಲ್ ಸಂಖ್ಯೆ 9480818013 ಸ್ಥಿರÀ ದೂರವಾಣಿ ಸಂಖ್ಯೆ 080-44554444 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದು.
ತಾಂತ್ರಿಕ ತೊಂದರೆಗಳಾದಲ್ಲಿ ಇ ಮೇಲ್ bಛಿತಿhosಣeಟಚಿಜmissioಟಿ@gmಚಿiಟ.ಛಿom ಮೂಲಕ ದಾಖಲೆಗಳೊಂದಿಗೆ ಕೋರಿಕೆ ಸಲ್ಲಿಸಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲೆ ಅಭಿವೃದ್ಧಿಗೆ ಶ್ರಮಿಸುವ ಯುವ ಸಂಘಗಳಿಗೆ ನಗದು ಪ್ರೋತ್ಸಾಹಧನ : ಅರ್ಜಿ ಆಹ್ವಾನ
ಚಾಮರಾಜನಗರ, ಜೂ. 30 ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುವ ಯುವಸಂಘಗಳಿಗೆ ನೀಡಲಾಗುವ ನಗದು ಪ್ರೋತ್ಸಾಹಧನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅರ್ಜಿ ಆಹ್ವಾನಿಸಿದೆ.
ನೋಂದಣಿಯಾಗಿರುವ ಸಂಘಸಂಸ್ಥೆಗಳು ತಮ್ಮ ಕಾರ್ಯ ವ್ಯಾಪ್ತಿಯ ಒಂದು ಸರ್ಕಾರಿ ಶಾಲೆಯನ್ನು ಆಯ್ಕೆ ಮಾಡಿಕೊಂಡು ಶಾಲೆಯ ಆಟದ ಮೈದಾನ ಅಭಿವೃದ್ಧಿ, ಶಾಲಾ ಆವರಣದಲ್ಲಿ ಹಸಿರೀಕರಣ, ಕೈತೋಟ ನಿರ್ಮಾಣ, ಪರಿಸರ ಸಂರಕ್ಷಣೆ, ಶಾಲೆಗೆ ಅಗತ್ಯವಾದ ಶೈಕ್ಷಣಿಕ ಸಾಮಗ್ರಿಗಳ ಪೂರೈಕೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ವೈಜ್ಞಾನಿಕ ವಿಷಯದಲ್ಲಿ ಅರಿವು ಮೂಡಿಸುವಿಕೆ, ಸರಳ ಬೋಧನೆ, ವಿಶೇಷ ಮಕ್ಕಳ ಆರೈಕೆ (ಬುದ್ಧಿಮಾಂದ್ಯ ಶಾಲೆ, ಇನ್ನಿತರ ಕಡೆ), ಅಲೆಮಾರಿ ಮಕ್ಕಳಿಗೆ ಶೈಕ್ಷಣಿಕ ಸಹಕಾರ, ಮಳೆ ನೀರು ಕೊಯ್ಲು ನಿರ್ಮಾಣ, ಪಠ್ಯ ಜ್ಞಾನದ ಸಾಮಥ್ರ್ಯ ಅಭಿವೃದ್ಧಿ ಹೀಗೆ ವಿವಿಧ ಅಭಿವೃದ್ಧಿಗಳಲ್ಲಿ ಶ್ರಮಿಸುವ ಯುವ ಸಂಘಗಳನ್ನು ಪ್ರೋತ್ಸಾಹಿಸಲು 1 ಲಕ್ಷ ರೂ ನಗದು ನೀಡಲಾಗುತ್ತದೆ.
ಅರ್ಜಿಯನ್ನು ಈಗಾಗಲೇ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ವಿತರಿಸಲಾಗÀುತ್ತಿದೆ. ಭರ್ತಿ ಮಾಡಿದ ಅರ್ಜಿ ಸಲ್ಲಿಕೆಗೆ ಜುಲೈ 13 ಕಡೆಯ ದಿನವಾಗಿದೆ. ವಿವರಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9482718278 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜು. 1ರಂದು ತಂಬಾಕು ನಿಯಂತ್ರಣ ಕಾಯಿದೆ ಕಾರ್ಯಾಗಾರ
ಚಾಮರಾಜನಗರ, ಜೂ. 30 - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಮತ್ತು ಬ್ಲೂಮ್ ಬರ್ಗ್ ಇನಿಷಿಯೇಟಿವ್ ಪ್ರಾಜೆಕ್ಟ್ ವತಿಯಿಂದ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವವನದ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಜುಲೈ 2 ರಿಂದ ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ ಪ್ರಕ್ರಿಯೆ ಆರಂಭ
ಚಾಮರಾಜನಗರ, ಜು. 01 - ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಜುಲೈ 2ರಿಂದ ಜಿಲ್ಲೆಯಲ್ಲಿ ಆರಂಭವಾಗಲಿದೆ.
ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ 1600 ರೂ. ನಂತೆ ಸುಲಿದ ತೆಂಗಿನ ಕಾಯಿಯನ್ನು ರೈತರು, ಬೆಳೆಗಾರರಿಂದ ಖರೀದಿಸಲಾಗುತ್ತದೆ.
ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಬಯಸುವವರು ಜುಲೈ 2ರಿಂದ 6ರವರೆಗೆ ಎ.ಪಿ.ಎಂ.ಸಿ ಖರೀದಿ ಕೇಂದ್ರದಲ್ಲಿ ಮೊದಲು ನಿಗದಿತ ನಮೂನೆ ಅರ್ಜಿ ಪಡೆದು ನೊಂದಾಯಿಸಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕೆ ಇಲಾಖೆಯ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ನಿಗದಿತ ನಮೂನೆ ಅರ್ಜಿಯಲ್ಲಿ ದೃಢೀಕರಿಸಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಆಧಾರ್ ಕಾರ್ಡ್ ಇಲ್ಲದವರು ತಕ್ಷಣವೇ ನಾಡ ಕಚೇರಿಯಲ್ಲಿ ಆಧಾರ್ ನೊಂದಣಿ ಮಾಡಿಸಿ ಅಲ್ಲಿ ನೀಡಲಾಗುವ ಸಂಖ್ಯೆಯನ್ನು ಲಗತ್ತಿಸಬಹುದು. ಆಯಾ ತಾಲೂಕು ವ್ಯಾಪ್ತಿಯ ಎ.ಪಿ.ಎಂ.ಸಿಯಲ್ಲಿ ತೆಂಗಿನಕಾಯಿ ಮಾರಾಟ ಮಾಡಲು ನೊಂದಣಿ ಮಾಡಿಸಿದ ರೈತರು, ಬೆಳೆಗಾರರಿಂದ ಸುಲಿದ ತೆಂಗಿನ ಕಾಯಿಯನ್ನು ಜುಲೈ 4 ರಿಂದ ಖರೀದಿಸಲಾಗುತ್ತದೆ. ಯಳಂದೂರು ತಾಲೂಕಿನ ರೈತರು ಕೊಳ್ಳೇಗಾಲ ಎ.ಪಿ.ಎಂ.ಸಿ ಖರೀದಿ ಕೇಂಧ್ರದಲ್ಲಿ ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ತೆಂಗಿನ ಕಾಯಿ ಮಾರಾಟ ಮಾಡಿದ ಹಣವನ್ನು ರೈತರು, ಬೆಳೆಗಾರರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಬಿ. ರಾಮು ತಿಳಿಸಿದ್ದಾರೆ.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಜೂ. 30- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜುಲೈ 1, 2 ಹಾಗೂ 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಜುಲೈ 1ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಜುಲೈ 2ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರದ ಹೊರ ವಲಯದಲ್ಲಿರುವ ಎಂಜಿನಿಯರಿಂಗ್ ಕಾಲೇಜು ಅವರಣದಲ್ಲಿ ಕೋಟಿ ವೃಕ್ಷ ಕಾರ್ಯಕ್ರಮದಡಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.30 ಗಂಟೆಗೆ ಬಿಳಿಗಿರಿರಂಗನ ಬೆಟ್ಟದಲ್ಲಿ ಹುಲಿ ಯೋಜನೆ ಪ್ರವೇಶದ್ವಾರ ಉದ್ಘಾಟಿಸುವರು. ಮಧ್ಯಾಹ್ನ 3 ಗಂಟೆಗೆ ಹೊಂಡರಬಾಳುವಿನಲ್ಲಿ ಹುಲಿ ಯೋಜನೆ ಪ್ರವೇಶದ್ವಾರ ಉದ್ಘಾಟಿಸುವರು.
ಜುಲೈ 3ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಕ್ಷೇತ್ರದಲ್ಲಿ ನಡೆಯುವ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಕೋಟಿ ವೃಕ್ಷ ಆಂದೋಲನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೋಟಿವೃಕ್ಷ ಆಂದೋಲನ ಕಾರ್ಯಕ್ರಮಕ್ಕೆ ಇಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಹೊರವಲಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಸಿ ನೆಡುವ ಮೂಲಕ ವಿದ್ಯುಕ್ತವಾಗಿ ವನ ಮಹೋತ್ಸವ ಹಾಗೂ ಕೋಟಿ ವೃಕ್ಷ ಆಂದೋಲನವನ್ನು ಉದ್ಘಾಟಿಸಿದರು.
ಬಳಿಕ ನಡೆದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಉಸ್ತುವಾರಿ ಸಚಿವರು ಜನಸಾಂದ್ರತೆ ಒತ್ತಡದಿಂದ ಅರಣ್ಯ ಪ್ರದೇಶ ವಿಸ್ತಾರ ಕಡಿಮೆಯಾಗುತ್ತಿದೆ. ಪರಿಸರ ಸಂರಕ್ಷಣೆ ಹಾಗೂ ಅರಣ್ಯೀಕರಣಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪರ್ಯಾಯವಾಗಿ ಗಿಡಮರಗಳನ್ನು ಬೆಳೆಸಿ ಪೋಷಿಸಲು ಎಲ್ಲ ಜಿಲ್ಲೆಗಳಲ್ಲಿ ಕೋಟಿ ವೃಕ್ಷ ಆಂದೋಲನ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಇಂದಿನಿಂದ ಅಕ್ಟೋಬರ್ 10ರವರೆಗೆ ಕೋಟಿವೃಕ್ಷ ಆಂದೋಲನ ನಡೆಯಲಿದ್ದು ಈ ಅವಧಿಯಲ್ಲಿ ಒಟ್ಟು 2 ಲಕ್ಷ ಸಸಿಗಳನ್ನು ಅರಣ್ಯ ಇಲಾಖೆ ಸಹಯೋಗದೊಂದಿಗೆ ವಿವಿಧ ಇಲಾಖೆಗಳು, ಇತರರು ಸೇರಿ ನೆಡಲಿದ್ದಾರೆ. ಅರಣ್ಯ ಇಲಾಖೆ ಬಳಿ 6 ಲಕ್ಷ ಹಾಗೂ ಜಲಾನಯನ ಇಲಾಖೆಯಲ್ಲಿ 2 ಲಕ್ಷ ಸಸಿಗಳು ಲಭ್ಯವಿದೆ. ಕೃಷಿ ಹೊಂಡ ನಿರ್ಮಾಣ ಮಾಡಿಕೊಂಡಿರುವ ರೈತರಿಗೂ ಸಸಿಗಳನ್ನು ವಿತರಿಸಲಾಗುತ್ತಿದೆ. ಜಿಲ್ಲೆಯಲ್ಲಿ ವೃಕ್ಷ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲಿದೆ ಎಂದರು.
ಪರಿಸರ ಸಮತೋಲನಕ್ಕೆ ಅರಣ್ಯ ಪ್ರದೇಶ ಸಾಕಷ್ಟು ಪ್ರಮಾಣದಲ್ಲಿ ಇರಬೇಕು. ಒಟ್ಟು ಭೂ ಭಾಗದಲ್ಲಿ ಶೇಕಡ 33ರಷ್ಟು ಅರಣ್ಯ ಇರಬೇಕಿದೆ. ಆದರೆ ಶೇ. 19ರಷ್ಟು ಮಾತ್ರ ಅರಣ್ಯ ಪ್ರದೇಶವಿದೆ. ಹೀಗಾಗಿ ಪರಿಸರ, ಹವಾಮಾನದಲ್ಲಿ ಏರಿಳಿತಗಳನ್ನು ಕಾಣುತ್ತಿದ್ದೇವೆ. ಅರಣ್ಯ ವೃದ್ಧಿಗೆ ಪ್ರತಿಯೊಬ್ಬ ನಾಗರಿಕರೂ ಹೊಣೆಗಾರಿಕೆ ವಹಿಸಬೇಕಿದೆ ಎಂದು ಸಚಿವರು ಸಲಹೆ ಮಾಡಿದರು.
ಜಿಲ್ಲೆಯು ಶೇ. 54ರಷ್ಟು ಅರಣ್ಯ ಪ್ರದೇಶ ಹೊಂದಿದೆ. ನಾಲ್ಕು ತಾಲೂಕುಗಳಲ್ಲಿಯೂ ಪೂರ್ವಪಶ್ಚಿಮ ಘಟ್ಟಗಳ ಸುತ್ತುವರೆದಿದೆ. ಆದಾಗ್ಯೂ ಉಳಿದ ಭಾಗಗಳಲ್ಲಿ ಪರಿಸರ ಸಮತೋಲನ ಕೊರತೆ ನೀಗಿಸಲು ನೆಡುತೋಪು ಅರಣ್ಯ ಬೆಳೆಸುವಿಕೆ ಪ್ರಯತ್ನ ಮುಂದುವರೆಯಬೇಕು. ಪ್ರಸ್ತುತ ವೃಕ್ಷ ಆಂದೋಲನ ಕಾರ್ಯಕ್ರಮದಲ್ಲಿ ನೆಡಲಾಗುವ ಸಸಿಗಳನ್ನು ಪೋಷಿಸುವ ಕೆಲಸ ನಿರಂತರವಾಗಿ ನಡೆಯಬೇಕು ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಪರಿಸರ ಅಸಮತೋಲನದಿಂದ ಸಾಕಷ್ಟು ಭೀಕರ ಸಮಸ್ಯೆಗಳನ್ನು ಎದುರಿಸುವ ಅನಿವಾರ್ಯತೆ ಇದೆ. ಚಾಮರಾಜನಗರ ಜಿಲ್ಲೆಯಲ್ಲಿ ಬಹುಭಾಗ ಅರಣ್ಯ ಪ್ರದೇಶವಿದೆ. 2 ಹುಲಿ ಯೋಜನೆ ಅಭಯಾರಣ್ಯ ಹೊಂದಿದ ಹೆಗ್ಗಳಿಕೆ ಇದೆ. ಆದರೂ ಇತರೆಡೆ ಸಸಿಗಳನ್ನು ನೆಡುವ ಮುಖಾಂತರ ಅರಣ್ಯೀಕರಣ ಕೆಲಸಕ್ಕೆ ಒತ್ತು ನೀಡಬೇಕಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಹ ಅರಣ್ಯ ಪೋಷಣೆಗೆ ಸಾಕಷ್ಟು ಅವಕಾಶಗಳಿದ್ದು ಸದ್ಭಳಕೆ ಮಾಡಿಕೊಳ್ಳಬೇಕೆಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಯಾವುದೇ ಸರ್ಕಾರಿ ಯೋಜನೆ ಅನುಷ್ಠಾನಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ವಾಹನಗಳಿಂದ ಆಗುತ್ತಿರುವ ವಾಯುಮಾಲಿನ್ಯ ತಪ್ಪಿಸುವುದೂ ಸಹ ನಾಗರಿಕರ ಹೊಣೆಗಾರಿಕೆಯಾಗಿದೆ. ಒಟ್ಟಾರೆ ಪರಿಸರ ಕಾಪಾಡುವ ಕರ್ತವ್ಯ ಪ್ರತಿಯೊಬ್ಬರಿಗೂ ಇರಲೇಬೇಕು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪೂರ್ವಜರಿಗೆ ಪರಿಸರದ ಮೇಲೆ ಇದ್ದ ಕಾಳಜಿಯಿಂದ ಇಂದೂ ಸಹ ಹುಣಸೆ, ಬೇವು, ಅರಳಿ, ಆಲದಂತಹ ಅನೇಕ ಮರಗಳನ್ನು ಕಾಣಬಹುದಾಗಿದೆ. ಪ್ರಾಣಿಸಂಕುಲಗಳಿಂದಲೂ ಹರಡಿದ ಬೀಜ ಪರಿಣಾಮವಾಗಿ ಸ್ವಾಭಾವಿಕವಾಗಿ ಅನೇಕ ಸಸಿಗಳು ಹೆಮ್ಮರವಾಗಿ ಬೆಳೆದು ನಿಂತಿವೆ. ಪ್ರಸ್ತುತ ಕಾರ್ಯಕ್ರಮದಡಿ ನೆಡಲಾಗುವ ಸಸಿಗಳ ಪೈಕಿ ಶೇ. 80ರಷ್ಟಾದರೂ ಉಳಿಸಿ ಬೆಳೆಸಿದರೆ ಉದ್ದೇಶಿತ ಯೋಜನೆ ಸಾರ್ಥಕವಾಗುತ್ತದೆ ಎಂದರು.
ಶಾಸಕರಾದ ಎಸ್. ಜಯಣ್ಣ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಶಿಕ್ಷಣ ಮತ್ತು ಆರೋಗÀ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗೇಶ, ಜಿಲ್ಲಾಧಿಕಾರಿ ಬಿ. ರಾಮು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಪಿ. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್. ಲಿಂಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಸ್ತುವಾರಿ ಸಚಿವರಿಂದ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆ ಬಿಡುಗಡೆ
ಚಾಮರಾಜನಗರ, ಜು. 02 :- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದಿರುವ ರಾಜ್ಯ ಸರ್ಕಾರದ 3 ವರ್ಷಗಳ ಸಾಧನೆಯನ್ನು ಕುರಿತ ಮಾಹಿತಿಯನ್ನು ಒಳಗೊಂಡ ‘ನಾಲ್ಕನೇ ವರ್ಷದೆಡೆಗೆ ಭರವಸೆಯ ನಡಿಗೆ’ ಕಿರುಹೊತ್ತಿಗೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಬಿಡುಗಡೆ ಮಾಡಿದರು.
ನಗರದ ಹೊರವಲಯದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಕೋಟಿವೃಕ್ಷ ಆಂದೋಲನ ಸಮಾರಂಭದಲ್ಲಿ ಸಚಿವರು ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ರಾಜ್ಯಸರ್ಕಾರ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳು, ಸಾಧನೆಗಳ ವಿವರಗಳು ಕಿರುಹೊತ್ತಿಗೆಯಲ್ಲಿ ಇವೆ. ವಿವಿಧ ಇಲಾಖೆಗಳು ಸಾಧಿಸಿರುವ ಪ್ರಗತಿ ಯೋಜನೆಗಳ ಬಗ್ಗೆಯೂ ಮಾಹಿತಿ ಕೊಡಲಾಗಿದೆ ಎಂದರು.
ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 100ಕ್ಕೂ ಹೆಚ್ಚು ಈಡೇರಿಸಿದೆ. ನುಡಿದಂತೆ ನಡೆಯುತ್ತಿದ್ದೇವೆ. ಪ್ರಗತಿಪರ ಕಾರ್ಯಕ್ರಮಗಳು ಮುಂದುವರೆದಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ : ಸಚಿವ ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ಜು. 02- ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಚಾಮರಾಜನಗರ ಜಿಲ್ಲೆಯೂ ಸೇರಿದಂತೆ ಒಟ್ಟು 6 ಜಿಲ್ಲೆಗಳಲ್ಲಿ ಆರಂಭವಾಗಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರ ಉದ್ಘಾಟಿಸಿದ ಬಳಿಕ ಕೆ. ಗುಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸುಲಿದ ತೆಂಗಿನ ಕಾಯಿಯನ್ನು ಚಾಮರಾಜನಗರ, ತುಮಕೂರು, ಉಡುಪಿ, ಹಾಸನ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ ಖರೀದಿಸಲಾಗುತ್ತಿದೆ ಎಂದರು.
ಚಾಮರಾಜನಗರ ಜಿಲ್ಲೆಯಲ್ಲಿ ತೆಂಗಿನಕಾಯಿ ಬೆಲೆ ಕುಸಿದಿರುವುದನ್ನು ಮನಗಂಡು ಸಚಿವ ಸಂಪುಟ ಉಪಸಮಿತಿಯಲ್ಲಿ ಚರ್ಚಿಸಿ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ತದನಂತರ ಇತರ ಜಿಲ್ಲೆಗಳಲ್ಲೂ ಬೆಲೆ ಕುಸಿದಿದ್ದು ಬೆಂಬಲ ಬೆಲೆ ಯೋಜನೆಯಡಿ ತೆಂಗಿನ ಕಾಯಿ ಖರೀದಿಸಬೇಕೆಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಇತರೆ 5 ಜಿಲ್ಲೆಗಳನ್ನು ಸೇರ್ಪಡೆ ಮಾಡಿಕೊಂಡು ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಸಚಿವ ಮಹದೇವ ಪ್ರಸಾದ್ ತಿಳಿಸಿದರು.
ಆಯಾ ಜಿಲ್ಲೆಯ ಎ.ಪಿ.ಎಂ.ಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ಪ್ರತಿ ಕ್ವಿಂಟಾಲ್‍ಗೆ 1600 ರೂ. ರಂತೆ ರೈತರು, ಬೆಳೆಗಾರರಿಂದ ತೆಂಗಿನ ಕಾಯಿಯನ್ನು ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುತ್ತದೆ. ರೈತರು, ಬೆಳೆಗಾರರು ಆರ್‍ಟಿಸಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ದೃಢೀಕರಿಸಿದ ಅರ್ಜಿ, ಇತರೆ ದಾಖಲೆಗಳನ್ನು ನೀಡಬೇಕು. ಮಾರಾಟ ಮಾಡಿದ ಹಣವನ್ನು ಆರ್‍ಟಿಜಿಎಸ್ ಮೂಲಕ ರೈತರು ಬೆಳೆಗಾರರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ ಎಂದರು.
ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದ್ದು ಈಗಾಗಲೇ ಪ್ರತಿ ಜಿಲ್ಲೆಗೆ ತಲಾ ಒಂದು ಕೋಟಿ ರೂ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ತೆಂಗಿನ ಕಾಯಿ ಖರೀದಿ ಪ್ರಕ್ರಿಯೆ ಆರಂಭ : ಸದುಪಯೋಗಕ್ಕೆ ಮನವಿ
ಚಾಮರಾಜನಗರ, ಜು. 02 - ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯಡಿ ಸುಲಿದ ತೆಂಗಿನ ಕಾಯಿಯನ್ನು ಖರೀದಿಸುವ ಪ್ರಕ್ರಿಯೆಯು ಇಂದಿನಿಂದ ಜಿಲ್ಲೆಯಲ್ಲಿ ಆರಂಭವಾಗಿದೆ.
ಚಾಮರಾಜನಗರ, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ಪಟ್ಟಣದ ಎ.ಪಿ.ಎಂ.ಸಿ ಅವರಣದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಪ್ರತಿ ಕ್ವಿಂಟಾಲ್ 1600 ರೂ. ನಂತೆ ಸುಲಿದ ತೆಂಗಿನ ಕಾಯಿಯನ್ನು ರೈತರು, ಬೆಳೆಗಾರರಿಂದ ಖರೀದಿಸಲಾಗುತ್ತದೆ.
ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಬಯಸುವವರು ಜುಲೈ 2ರಿಂದ 6ರವರೆಗೆ ಎ.ಪಿ.ಎಂ.ಸಿ ಖರೀದಿ ಕೇಂದ್ರದಲ್ಲಿ ಮೊದಲು ನಿಗದಿತ ನಮೂನೆ ಅರ್ಜಿ ಪಡೆದು ನೊಂದಾಯಿಸಿಕೊಳ್ಳಬೇಕು. ಗ್ರಾಮ ಲೆಕ್ಕಾಧಿಕಾರಿ, ತೋಟಗಾರಿಕೆ ಇಲಾಖೆಯ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಂದ ನಿಗದಿತ ನಮೂನೆ ಅರ್ಜಿಯಲ್ಲಿ ದೃಢೀಕರಿಸಿಕೊಳ್ಳಬೇಕು.
ಭರ್ತಿ ಮಾಡಿದ ಅರ್ಜಿ ಜೊತೆಗೆ ಆಧಾರ್ ಕಾರ್ಡ್, ಪಹಣಿ ಹಾಗೂ ಬ್ಯಾಂಕ್ ಖಾತೆಯ ಪಾಸ್ ಪುಸ್ತಕದ ಪ್ರತಿ ಲಗತ್ತಿಸಬೇಕು. ಆಧಾರ್ ಕಾರ್ಡ್ ಇಲ್ಲದವರು ತಕ್ಷಣವೇ ನಾಡ ಕಚೇರಿಯಲ್ಲಿ ಆಧಾರ್ ನೊಂದಣಿ ಮಾಡಿಸಿ ಅಲ್ಲಿ ನೀಡಲಾಗುವ ಸಂಖ್ಯೆಯನ್ನು ಲಗತ್ತಿಸಬಹುದು. ಆಯಾ ತಾಲೂಕು ವ್ಯಾಪ್ತಿಯ ಎ.ಪಿ.ಎಂ.ಸಿಯಲ್ಲಿ ತೆಂಗಿನಕಾಯಿ ಮಾರಾಟ ಮಾಡಲು ನೊಂದಣಿ ಮಾಡಿಸಿದ ರೈತರು, ಬೆಳೆಗಾರರಿಂದ ಸುಲಿದ ತೆಂಗಿನ ಕಾಯಿಯನ್ನು ಜುಲೈ 4 ರಿಂದ ಖರೀದಿಸಲಾಗುತ್ತದೆ. ಯಳಂದೂರು ತಾಲೂಕಿನ ರೈತರು ಕೊಳ್ಳೇಗಾಲ ಎ.ಪಿ.ಎಂ.ಸಿ ಖರೀದಿ ಕೇಂಧ್ರದಲ್ಲಿ ತೆಂಗಿನ ಕಾಯಿಯನ್ನು ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.
ತೆಂಗಿನ ಕಾಯಿ ಮಾರಾಟ ಮಾಡಿದ ಹಣವನ್ನು ರೈತರು, ಬೆಳೆಗಾರರ ಬ್ಯಾಂಕ್ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ಜಮೆ ಮಾಡಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಅಭಿವೃದ್ಧಿ ಕಾಮಗಾರಿ, ಉದ್ಘಾಟನೆ, ಚಾಲನೆ
ಚಾಮರಾಜನಗರ, ಜು. 02 :- ಜಿಲ್ಲೆಯಲ್ಲಿ ಇಂದು ವಿವಿದೆಡೆ ಅಭಿವೃದ್ಧಿ ಕಾಮಗಾರಿ ಕಟ್ಟಡ, ರಸ್ತೆ, ಇತರೆ ಕೆಲಸಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಚಾಲನೆ ನೀಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಜಿಲ್ಲಾ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಚಂದಕವಾಡಿಯಲ್ಲಿ 1314.80 ಲಕ್ಷ ರೂ. ವೆಚ್ಚದಲ್ಲಿ ರಾಮಸಮುದ್ರದಿಂದ ಅಮೃತಭೂಮಿವರೆಗೆ ಸುಮಾರು 13.90 ಕಿ.ಮೀ. ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದರು. ನಂತರ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತ ಪ್ರದೇಶದ ಪ್ರವೇಶ ದ್ವಾರವನ್ನು ಮೊದಲಿಗೆ ಹೊಂಡರಬಾಳುವಿನಲ್ಲಿ ಉದ್ಘಾಟಿಸಿದರು. ತದನಂತರ ಗುಂಬಳ್ಳಿ ಬಳಿ ಕೂಡ ಪ್ರವೇಶದ್ವಾರವನ್ನು ಉದ್ಘಾಟಿಸಿದರು. ನಂತರ ಸಂತೆಮರಹಳ್ಳಿಯಲ್ಲಿ ಆರ್ಚರಿ ಕ್ರೀಡಾ ಶಾಲೆ ಹಾಗೂ ವಸತಿ ನಿಲಯ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಇತರೆ ಸ್ಥಳೀಯ ಸದಸ್ಯರು, ಮುಖಂಡರು, ಜನಪ್ರತಿನಿಧಿಗಳು ಹಾಜರಿದ್ದರು.
ಶಿಕ್ಷಣ ಸುಧಾರಣೆ ಕುರಿತ ಸ್ಮಾರ್ಟ್ ಯೋಜನೆಗೆ ಚಾಲನೆ
ಚಾಮರಾಜನಗರ, ಜು. 02 (- ಜಿಲ್ಲೆಯ ಶಿಕ್ಷಣದ ಸಮಗ್ರ ಸುಧಾರಣೆಗಾಗಿ ಸ್ಮಾರ್ಟ್ ಯೋಜನೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಚಾಲನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ, ಯುನಿಸೆಫ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಮಾರ್ಟ್ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಶಿಕ್ಷಣ ಕ್ಷೇತ್ರದ ವಿನೂತನ ಕಾರ್ಯಕ್ರಮ ಇದಾಗಿದೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ನಮ್ಮ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅನುಷ್ಠಾನಗೊಳ್ಳುತ್ತಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದರು.
ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ 11 ರಿಂದ 27 ಸ್ಥಾನಕ್ಕೆ ಕುಸಿರುವುದು ಅತಂಕಕಾರಿ ಸಂಗತಿ. ಇದನ್ನು ಗಮನದಲ್ಲಿಟ್ಟು ಮುಂಬರುವ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಫಲಿತಾಂಶ ಪಡೆಯುವ ಸಲುವಾಗಿ ಹೊಸ ಯೋಜನೆಗಳ ಚಿಂತನೆ ಅಗತ್ಯವಿತ್ತು. ಇಂತಹ ಸಂದರ್ಭದಲ್ಲಿ ಬೆಂಬಲ, ಮಾರ್ಗದರ್ಶನ ಹಾಗೂ ಸ್ಪಂದನಾತ್ಮಕ ಬೋಧನೆಯ ಧ್ಯೇಯದೊಂದಿಗೆ ಆರಂಭಗೊಂಡಿರುವ ಈ ಸ್ಮಾರ್ಟ್ ಯೋಜನೆ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಸುಧಾರಣೆಗೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.
ಮಕ್ಕಳ ವಿದ್ಯಾಭ್ಯಾಸ ಗುಣಮಟ್ಟದಿಂದ ಕೂಡಿರಬೇಕು. ವಿದ್ಯಾರ್ಥಿಗಳಲ್ಲಿ ಶೈಕ್ಷಣಿಕ ಪ್ರಜ್ಞೆ ಮೂಡಬೇಕು. ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ತರಬೆಕೆಂಬುದೇ ಈ ಯೋಜನೆಯ ಉದ್ದೇಶ. ಪ್ರಮುಖವಾಗಿ ಮಕ್ಕಳಿಗೆ ಶಿಕ್ಷಕರು ಶಿಸ್ತನ್ನು ಕಲಿಸಬೇಕು. ಶೈಕ್ಷಣಿಕ ಚಟುವಟಿಕೆಗಳ ಅರಿವು ಮೂಡಿಸುವುದು ಶಿಕ್ಷಕರ ಕರ್ತವ್ಯ. ಶಿಕ್ಷಕರಿಗೆ ಶಿಕ್ಷಣದ ಮೌಲ್ಯಾಧಾರಿತ ತರಬೇತಿ ನೀಡಬೇಕು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ, ಪ್ರವೃತ್ತಿಯನ್ನು ಪ್ರತಿ ತಿಂಗಳು ಪರಿಶೀಲಿಸಿದರೆ ಶೈಕ್ಷಣಿಕ ಚಟುವಟಿಕೆಗಳ ಗುಣಮಟ್ಟ ಹೆಚ್ಚಲು ಅನುವಾಗುತ್ತದೆ ಎಂದು ಸಚಿವರು ಕಿವಿಮಾತು ಹೇಳಿದರು.
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿ ಸಾಕಷ್ಟು ಅನುದಾನ ಒದಗಿಸಿದೆ. ಜಿಲ್ಲೆಗೆ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಆದರ್ಶ ವಸತಿ ಶಾಲೆಗಳನ್ನು ಮಂಜೂರು ಮಾಡುವ ಮೂಲಕ ಅಭಿವೃದ್ದಿಗೆ ಮುಂದಾಗಿದೆ. ಎಲ್ಲಾ ಶಾಲೆ, ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ನೀಡಿದೆ. ಇದನ್ನು ಜಿಲ್ಲೆಯ ವಿದ್ಯಾರ್ಥಿಗಳು ಸದ್ವಿನಿಯೋಗ ಮಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಸ್ಮಾರ್ಟ್ ಯೋಜನೆ ಶಿಕ್ಷಣ ಇಲಾಖೆಗೆ ಮಾತ್ರ ಸೀಮಿತವಾಗಿಲ್ಲ. ಸಂಬಂಧಪಟ್ಟ ಇಲಾಖೆಗಳು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸಿ ಯೋಜನೆಯ ಸಮರ್ಪಕ ಕಾರ್ಯನಿರ್ವಹಣೆಗೆ ಸಹಕಾರಿಯಾಗಬೇಕು. ಮುಖ್ಯವಾಗಿ ಸ್ಮಾರ್ಟ್ ಯೋಜನೆ ನಿರ್ವಹಣೆಗಾಗಿ ಯುನಿಸೆಫ್‍ನಿಂದ 25 ಲಕ್ಷ, ಐ.ಎಲ್.ಎಫ್.ಎಸ್ ಕಂಪನಿಯಿಂದ 25 ಲಕ್ಷ ಸೇರಿದಂತೆ ಒಟ್ಟು 1.50 ಕೋಟಿ ಅನುದಾನ ದೊರೆತಿದೆ. ಜಿಲ್ಲೆಯಲ್ಲಿ ಮೊದಲಬಾರಿ ಅನುಷ್ಟಾನಗೊಂಡ ಜಿ.ಪಿ. ಒನ್ ಸೇವೆ ಇಂದು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಸ್ಮಾರ್ಟ್ ಯೋಜನೆಗೂ ಅಂತಹ ಯಶಸ್ಸು ಸಿಗಬೇಕು ಎಂದು ಸಚಿವರು ತಿಳಿಸಿದರು.
ಸಂಸದ ಆರ್. ಧ್ರುವನಾರಾಯಣ ಅವರು ಮಾತನಾಡಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಈ ಸ್ಮಾರ್ಟ್ ಯೋಜನೆ ನೆರವಾಗಲಿದೆ. ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಮಂಜೂರಾಗಿದ್ದು, ಶಿಕ್ಷಣದಲ್ಲಿ ಸುಧಾರಣೆ ತರಲು ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಮುಖ್ಯವಾಗಿ ಶಿಕ್ಷಕರು ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ತರಬೇತಿ ನೀಡಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ ಶಿಕ್ಷಣ ಕ್ಷೇತ್ರದ ಪ್ರಮುಖ ಯೋಜನೆಯಾ ಸ್ಮಾರ್ಟ್ ಯೋಜನೆಯು ಈ ಬಾರಿಯ ಶೈಕ್ಷಣಿಕ ವರ್ಷದ ಆರಂಭದಲ್ಲಿಯೆ ಚಾಲನೆಗೊಂಡಿರುವುದು ವಿಶೇಷವಾದದ್ದು. ಮುಂದಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ನಿರೀಕ್ಷಿಸಬಹುದಾಗಿದೆ. ಯೋಜನೆ ಜಾರಿಗೊಳ್ಳುವಲ್ಲಿ ಎಲ್ಲ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರು ಹೆಚ್ಚು ಶ್ರಮಿಸಬೇಕಾಗಿದೆ ಎಂದರು
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಸ್ಮಾರ್ಟ್ ಯೋಜನೆಯ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಳ್ಳೇಗಾಲ ಶಾಸಕರಾದ ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿದರು.
ಸ್ಮಾರ್ಟ್ ಯೋಜನೆಯ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ನಗರಸಭಾ ಅದ್ಯಕ್ಷರಾದ ರೇಣುಕಾಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ ವೇದಿಕೆಯಲ್ಲಿದ್ದರು.
ಹವಾಮಾನ ಆಧಾರಿತ ಬೆಳೆ ವಿಮೆ ನೊಂದಣಿ ಅವಧಿ ಜುಲೈ 10ರವರೆಗೆ ವಿಸ್ತರಣೆ
ಚಾಮರಾಜನಗರ, ಜು. :- ತೋಟಗಾರಿಕೆ ಬೆಳೆಯಾದ ಅಂಗಾಂಶ ಕೃಷಿ ಬಾಳೆ, ಕಂದುಬಾಳೆ ಹಾಗೂ ತೆಂಗುಬೆಳೆಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ಲಭ್ಯವಿದ್ದು, ಈ ಯೋಜನೆಗೆ ನೊಂದಾಯಿಸುವ ಅವಧಿಯನ್ನು ಜುಲೈ 10ರ ವರೆಗೆ ವಿಸ್ತರಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಈ ವಿಮೆ ಯೋಜನೆಗೆ ರೈತರು ನೊಂದಾಯಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಜುಲೈ 10ರ ವರೆಗೂ ಕಾಲಾವಕಾಶ ವಿಸ್ತರಿಸಿದೆ.
ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಸಹ ಇದ್ದು, ಜಿಲ್ಲೆಯ ಯಳಂದೂರು ತಾಲೂಕು ಹೊರತು ಪಡಿಸಿ ಉಳಿದ ಎಲ್ಲ ತಾಲೂಕುಗಳಲ್ಲಿ ಹೋಬಳಿವಾರು ಟೊಮೆಟೋ(ನೀರಾವರಿ), ಅರಿಶಿಣ, ಬದನೆ, ಆಲೂಗಡ್ಡೆ(ನೀರಾವರಿ), ಬೀನ್ಸ್, ಈರುಳ್ಳಿ(ನೀರಾವರಿ), ವಿಮೆ ವ್ಯಾಪ್ತಿಗೆ ಬರಲಿವೆ. ಈ ಯೋಜನೆಗೆ ನೊಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವಾಗಿದೆ.
ಬೆಳೆ ವಿಮೆ ಯೋಜನೆಗೆ ನೊಂದಾಯಿಸಿಕೊಳ್ಳಲು ಹತ್ತಿರದ ಬ್ಯಾಂಕ್ ಶಾಖೆ ಸಂಪರ್ಕಿಸಬೇಕು. ವಿವರಗಳಿಗೆ ಹೋಬಳಿ, ತಾಲೂಕು ಮಟ್ಟದ ತೋಟಗಾರಿಕೆ, ಕೃಷಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕತಿಳಿಸಿದ್ದಾರೆ.
No comments:
Post a Comment