ಏಪ್ರಿಲ್ ವೇಳೆಗೆ ಕೇಂದ್ರೀಯ ವಿದ್ಯಾಲಯ ಕಟ್ಟಡ ಕಾಮಗಾರಿ ಪೂರ್ಣ : ಧ್ರುವನಾರಾಯಣ
ಚಾಮರಾಜನಗರ, ಜು. 09 :- ನಗರದ ಹೊರವಲಯ ಮಾದಾಪುರ ಬಳಿ ನಿರ್ಮಾಣವಾಗುತ್ತಿರುವ ಕೇಂದ್ರೀಯ ವಿದ್ಯಾಲಯದ ಕಟ್ಟಡ ಕಾಮಗಾರಿಯು ಮುಂಬರುವ ಏಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ಮಾದಾಪುರ ಬಳಿ ಇಂದು ನಿರ್ಮಾಣ ಹಂತದಲ್ಲಿರುವ ಕೇಂದ್ರೀಯ ವಿದ್ಯಾಲಯ ಕಟ್ಟಡ ಕಾಮಗಾರಿ ಪರಿಶೀಲಿಸಿದ ಬಳಿಕ ಅದೇ ಆವರಣದಲ್ಲಿ ಆಯೋಜಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರಕ್ಕೆ 2013ರಲ್ಲಿ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದ್ದು ಪ್ರಸ್ತುತ ನಗರದ ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿವೆ. ವಿದ್ಯಾಲಯದ ಸ್ವಂತ ಕಟ್ಟಡಕ್ಕಾಗಿ 18 ಕೋಟಿ ರೂ. ಮಂಜೂರಾಗಿದ್ದು ಜನವರಿಯಿಂದಲೇ ಕಾಮಗಾರಿ ಆರಂಭವಾಗಿದೆ. ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳ ಅವಧಿಯನ್ನು ನಿಗದಿ ಮಾಡಲಾಗಿದ್ದು ಈಗಾಗಲೇ 6 ತಿಂಗಳು ಮುಗಿದಿದೆ. ಕಾಮಗಾರಿ ಭರದಿಂದ ಸಾಗಿದ್ದು ಏಪ್ರಿಲ್ ವೇಳೆಗೆ ಕಟ್ಟಡ ಪೂರ್ಣವಾಗಲಿದೆ. ಮುಂಬರುವ ಶೈಕ್ಷಣಿಕ ಸಾಲಿನಲ್ಲಿ ನೂತನ ಸ್ವಂತ ಕಟ್ಟಡದಲ್ಲೇ ಕೇಂದ್ರೀಯ ವಿದ್ಯಾಲಯ ಮುಂದುವರಿಯಲಿದೆ ಎಂದರು.
ನೂತನ ವಿದ್ಯಾಲಯ ಕಟ್ಟಡದಲ್ಲಿ 24 ತರಗತಿ ಕೊಠಡಿಗಳು, 13 ಪ್ರಯೋಗಾಲಯಗಳು, ಪ್ರಾಂಶುಪಾಲರು, ಶಿಕ್ಷಕರು, ಬೋಧಕೇತರ ವರ್ಗಕ್ಕೂ ವಸತಿಗೃಹ ನಿರ್ಮಾಣವಾಗುತ್ತಿದೆ. ಈಗ ಇರುವ ಕಟ್ಟಡದಲ್ಲಿ ಪ್ರತಿ ತರಗತಿಗೂ ಒಂದೊಂದು ವಿಭಾಗ ಮಾತ್ರ ಇದೆ. ಇದರಿಂದ ಪ್ರತೀ ತರಗತಿಗೆ 40 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಸ್ವಂತ ಕಟ್ಟಡ ಪೂರ್ಣಗೊಂಡರೆ ಕೊಠಡಿಗಳ ಸಂಖ್ಯೆಯೂ ದ್ವಿಗುಣವಾಗುವುದರಿಂದ ಮುಂಬರುವ ಸಾಲಿನಿಂದಲೇ ಪ್ರತಿ ತರಗತಿಗೆ ಹೆಚ್ಚುವರಿಯಾಗಿ 40 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲು ಅವಕಾಶವಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ವಿದ್ಯಾಲಯ ಆವರಣದಲ್ಲಿ ವಿಸ್ತಾರವಾದ ಆಟದ ಮೈದಾನ ಸಹ ಇರಲಿದೆ. ಜಿಲ್ಲೆಗೆ ಕೇಂದ್ರೀಯ ವಿದ್ಯಾಲಯವು ಅನುಕೂಲವಾಗಿದ್ದು ಶಿಕ್ಷಣ ಸೌಲಭ್ಯಕ್ಕೆ ಅವಶ್ಯಕತೆಯುಳ್ಳ ಅಗತ್ಯಗಳನ್ನು ಪೂರೈಸಲಾಗುತ್ತಿದೆ. ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶವಾದಂತಾಗಿದೆ ಎಂದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಕೋಟಿವೃಕ್ಷ ಆಂದೋಲನಕ್ಕೆ ಈಗಾಗಲೇ ಜಿಲ್ಲೆಯಲ್ಲೂ ಚಾಲನೆ ನೀಡಲಾಗಿದೆ. ವಿದ್ಯಾಲಯದಲ್ಲಿ ಸಾಕಷ್ಟು ಗಿಡಮರಗಳನ್ನು ಬೆಳೆಸಲು ಅವಕಾಶವಿದೆ. ಹೀಗಾಗಿ ವಿದ್ಯಾಲಯ ಕಟ್ಟಡ ಕಾಮಗಾರಿ ನಿರ್ಮಾಣ ಹೊಣೆ ಹೊತ್ತಿರುವ ಗುತ್ತಿಗೆ ಸಂಸ್ಥೆ ಹಾಗೂ ವಿದ್ಯಾಲಯದ ಬೋಧಕ ವಿದ್ಯಾರ್ಥಿಗಳ ತೀವ್ರ ಆಸಕ್ತಿಯಿಂದ ವಿದ್ಯಾಲಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆರಂಭಿಸಲಾಗಿದೆ. ಪರಿಶ್ರಮದಿಂದ ಸಸಿಗಳನ್ನು ಪೋಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಜಿಲ್ಲಾ ಕೇಂದ್ರಕ್ಕೆ ಕೇಂದ್ರೀಯ ವಿದ್ಯಾಲಯ ತರಲು ಕಾರಣರಾದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಭಿನಂದನೆಗೆ ಅರ್ಹರು. ವಿದ್ಯಾಲಯ ಆವರಣದಲ್ಲಿ ಸರ್ಕಾರದ ಆಶಯದಂತೆ ಸಸಿ ನೆಟ್ಟು ಬೆಳೆಸುವ ಕಾರ್ಯಕ್ರಮ ಹಾಕಿಕೊಂಡಿರುವುದು ಉತ್ತಮ ಕೆಲಸವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಆರ್. ರಾಮಚಂದ್ರ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಜಿ.ಪಂ. ಸದಸ್ಯರಾದ ಸಿ.ಎನ್. ಬಾಲರಾಜು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಿದ್ಧರಾಜು, ಮಾವು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ನಗರಸಭಾ ಸದಸ್ಯರಾದ ಸಿ.ಕೆ. ಮಂಜುನಾಥ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ.ಪಿ. ಪುಟ್ಟಬುದ್ದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಿಸೆಂಬರ್ ವೇಳೆಗೆ ಸಿಂಥೆಟಿಕ್ ಟ್ರಾಕ್ ಸಿದ್ಧ : ಧ್ರುವನಾರಾಯಣ
ಚಾಮರಾಜನಗರ, ಜು. 08 - ಜಿಲ್ಲಾ ಕೇಂದ್ರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪ್ರಗತಿಯಲ್ಲಿರುವ 4.5 ಕೋಟಿ ರೂ. ವೆಚ್ಚದ ಸಿಂಥೆಟಿಕ್ ಟ್ರಾಕ್ ನಿರ್ಮಾಣ ಕಾಮಗಾರಿಯು ಇನ್ನು 6 ತಿಂಗಳಲ್ಲಿ ಪೂರ್ಣಗೊಂಡು ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ನಗರದ ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಇಂದು ಸಿಂಥೆಟಿಕ್ ಟ್ರಾಕ್ ನಿರ್ಮಾಣ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ವ್ಯಾಪಕವಾಗಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದ 2013-14ನೇ ಸಾಲಿನಲ್ಲಿ ರಾಜೀವ್ ಗಾಂಧಿ ಖೇಲ್ ಅಭಿಯಾನ್ ಯೋಜನೆಯಡಿ ಸಿಂಥೆಟಿಕ್ ಟ್ರಾಕ್ ನಿರ್ಮಾಣಕ್ಕಾಗಿ ಹಣ ಮಂಜೂರಾಗಿದ್ದು ಕಾಮಗಾರಿ ನಡೆಯುತ್ತಿದೆ. ಇಡೀ ರಾಜ್ಯದಲ್ಲೇ ಯೋಜನೆಯಡಿ ಬೆಳಗಾವಿ ಹೊರತುಪಡಿಸಿದರೆ ಸಿಂಥೆಟಿಕ್ ಟ್ರಾಕ್ ಕಾಮಗಾರಿ ನಿರ್ಮಾಣವಾಗುತ್ತಿರುವುದು ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರ. ಹೀಗಾಗಿ ಕಾಮಗಾರಿ ಪೂರ್ಣಗೊಂಡರೆ ರಾಜ್ಯಮಟ್ಟದ ಕ್ರೀಡಾ ಕೂಟಗಳನ್ನು ನಡೆಸಲು ಜಿಲ್ಲೆಗೆ ಅವಕಾಶ ಲಭಿಸಲಿದೆ ಎಂದರು.
ಸಿಂಥೆಟಿಕ್ ಟ್ರಾಕ್ ಪೂರಕ ಕಾಮಗಾರಿ ಕೆಲಸವು ಶೇ. 40ರಷ್ಟು ಪೂರ್ಣವಾಗಿದೆ. ಉಳಿದಂತೆ ಸಿಂಥೆಟಿಕ್ ಅಳವಡಿಕೆ ಕೆಲಸ ನಡೆಯಬೇಕಿದೆ. ಈಗಾಗಲೇ ಜರ್ಮನಿಯಿಂದ ಸಿಂಥೆಟಿಕ್ ಟ್ರಾಕ್‍ಗೆ ಬೇಕಾದ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳಲಾಗಿದೆ. ಮಳೆಗಾಲ ಮುಗಿದ ಕೂಡಲೇ ಅಳವಡಿಕೆ ಕೆಲಸ ಆರಂಭಿಸಲಾಗುತ್ತದೆ. ಈ ವರ್ಷದ ಅಂತ್ಯದ ವೇಳೆಗೆ ಸಿಂಥೆಟಿಕ್ ಟ್ರಾಕ್ ಸಿದ್ಧವಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಸಿಂಥೆಟಿಕ್ ಟ್ರಾಕ್‍ನಲ್ಲಿ 400 ಮೀಟರ್ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಡಿಸ್ಕಸ್ ಥ್ರೋ, ಹ್ಯಾಮರ್ ಥ್ರೋ ಸೇರಿದಂತೆ 8 ಬಗೆಯ ಕ್ರೀಡೆಗಳನ್ನು ಆಡಲು ಅವಕಾಶವಾಗುತ್ತದೆ. ಟ್ರಾಕ್ ಸಿದ್ಧವಾದ ಬಳಿಕ ಒಂದು ವರ್ಷದ ಅವಧಿವರೆಗೂ ಕಾಮಗಾರಿ ನಿರ್ಮಾಣ ಹೊಣೆ ಹೊತ್ತಿರುವ ಸಂಸ್ಥೆಯೇ ನಿರ್ವಹಣೆ ಮಾಡಲಿದೆ ಎಂದರು.
ಒಟ್ಟಾರೆ ಕ್ರೀಡಾಂಗಣ ಅಭಿವೃದ್ಧಿಗೆ ಇನ್ನು ಹೆಚ್ಚಿನ ಅನುದಾನ ಅಗತ್ಯವಿದೆ. ಹೀಗಾಗಿ 2.5 ಕೋಟಿ ರೂ.ಗಳನ್ನು ಮಂಜೂರು ಮಾಡುವಂತೆ ಬೇಡಿಕೆ ಸಲ್ಲಿಸಲಾಗಿದೆ ಎಂದರು. ಜಿಲ್ಲಾ ಕ್ರೀಡಾಂಗಣದಲ್ಲಿ ಈ ಹಿಂದೆಯೇ ಆರಂಭವಾದ ಪ್ರಗತಿ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗಿದ್ದು ನಿರೀಕ್ಷಿತ ಅವಧಿಯಲ್ಲಿ ಪೂರ್ಣವಾಗಿಲ್ಲ. ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ತಾವು ಸೇರಿದಂತೆ ಚರ್ಚೆ ನಡೆಸಿದ್ದೇವೆ. ಕ್ರೀಡಾಂಗಣ ಕೆಲಸಕ್ಕೆ ಪರಿಶಿಷ್ಟ ಜಾತಿ ವಿಶೇಷ ಘಟಕ ಉಪಯೋಜನೆಯಡಿ ಸಹ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ. ಒಂದು ವರ್ಷದ ಅವಧಿಯಲ್ಲಿ ಕ್ರೀಡಾಂಗಣವನ್ನು ಮಾದರಿ ಕ್ರೀಡಾಂಗಣವಾಗಿ ಅಭಿವೃದ್ಧಿಪಡಿಸಲು ಗುರಿ ಹೊಂದಲಾಗಿದೆ ಎಂದು ಧ್ರುವನಾರಾಯಣ ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ತಾಲೂಕು ಪಂಚಾಯತ ಅಧ್ಯಕ್ಷರಾದ ಎಚ್.ವಿ. ಚಂದ್ರು, ಮಾವು ಅಭಿವೃದ್ಧಿ ಮಂಡಳಿಯ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ.ಪಿ. ಪುಟ್ಟಬುದ್ಧಿ, ಕಾಮಗಾರಿ ನಿರ್ಮಾಣ ಗುತ್ತಿಗೆ ಸಂಸ್ಥೆಯ ಅಧಿಕಾರಿ ಬಿ.ಕೆ. ತ್ಯಾಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಲುವಯ್ಯ, ಇತರರು ಹಾಜರಿದ್ದರು.
ಕಳಪೆ ರಸಗೊಬ್ಬರ, ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ಕ್ರಮ
ಚಾಮರಾಜನಗರ, ಜು. 08 - ಜಿಲ್ಲೆಯಲ್ಲಿ ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಪರವಾನಗಿ ಪಡೆದ ಅಧಿಕೃತ ರಸಗೊಬ್ಬರ ಮಾರಾಟಗಾರರಿಂದ ಮಾತ್ರವೇ ರಸಗೊಬ್ಬರಗಳನ್ನು ಖರೀದಿ ಮಾಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ತಮಿಳುನಾಡು ಹಾಗೂ ಕೇರಳ ರಾಜ್ಯದಿಂದ ಕೆಲವು ಅನಧಿಕೃತ ಕಂಪನಿಗಳು ಕಳಪೆ ರಸಗೊಬ್ಬರವನ್ನು ಅನಾಮಧೇಯವಾಗಿ ಸರಬರಾಜು ಮಾಡಿ ನೇರವಾಗಿ ರೈತರಿಗೆ ಹಾಗೂ ಕೆಲ ವ್ಯಾಪಾರಸ್ಥರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯಿಂದ ಪರವಾನಗಿ ಪಡೆದಿರುವ ಅಧಿಕೃತ ರಸಗೊಬ್ಬರ ಮಾರಾಟಗಾರರಿಂದಲೇ ರಸಗೊಬ್ಬರಗಳನ್ನು ರೈತರು ಖರೀದಿ ಮಾಡಿ ರಸೀತಿ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದ್ದಾರೆ.
ಜು. 9ರಂದು ಹನೂರಿನಲ್ಲಿ ಮೊರಾರ್ಜಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜು ಕಟ್ಟಡ ಉದ್ಘಾಟನೆ
ಚಾಮರಾಜನಗರ, ಜು. 08 - ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೊಳ್ಳೇಗಾಲ ತಾಲೂಕಿನ ಹನೂರಿನಲ್ಲಿ ನಿರ್ಮಾಣ ಮಾಡಿರುವ ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜು ಕಟ್ಟಡದ ಉದ್ಘಾಟನಾ ಸಮಾರಂಭವು ಜುಲೈ 9ರಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
ಸಹಕಾರ ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸುವರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಕಟ್ಟಡ ಉದ್ಘಾಟಿಸುವರು. ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್‍ನ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಉಪಸ್ಥಿತರಿರುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮೊರಾರ್ಜಿ ದೇಸಾಯಿ ಅವರ ಭಾವಚಿತ್ರ ಅನಾವರಣ ಮಾಡುವರು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್. ಜಯಣ್ಣ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ರಾಜು, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ, ತಾ.ಪಂ. ಉಪಾಧ್ಯಕ್ಷರಾದ ಲತಾರಾಜಣ್ಣ, ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಾಜೂಗೌಡ, ಉಪಾಧ್ಯಕ್ಷರಾದ ಮಮತಾ ಮಹದೇವ, ತಾ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಜವಾದ್ ಅಹಮದ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಜು. 11ರಂದು ನಗರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ
ಚಾಮರಾಜನಗರ, ಜು. 08 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ 11ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಸರ್ಕಾರಿ ಪ್ರವಾಸಿ ಮಂದಿರದ ಆವರಣದಲ್ಲಿ ಬೃಹತ್ ಜಾಗೃತಿ ಜಾಥಾಗೆ ಚಾಲನೆ ನೀಡಲಾಗುತ್ತದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಸಹಕಾರ ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು.
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್ ಧ್ರುವನಾರಾಯಣ, ಶಾಸಕರಾದ ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ರೋಟರಿ ಸಂಸ್ಥೆ ಅಧ್ಯಕ್ಷರಾದ ಜಿ. ಗುರುಸ್ವಾಮಿ, ರೋಟರಿ ಇನ್ನರ್ ವೀಲ್ ಸಂಸ್ಥೆಯ ಟಿ.ಎಸ್. ಗಿರೀಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನಗರದ ಜೆ.ಎಸ್.ಎಸ್. ಮಹಿಳಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರೊ. ಕೆ.ವೀರಣ್ಣ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಪಟ್ಟಣ ಪ್ರದೇಶದಲ್ಲೂ ಪಡಿತರ ಕೂಪನ್ ವಿತರಣೆಗೆ ಖಾಸಗಿ ಫೋಟೋ ಬಯೋ ಕೇಂದ್ರ ತೆರೆಯಲು ಆಹ್ವಾನ
ಚಾಮರಾಜನಗರ, ಜೂ. 0:- ಜಿಲ್ಲೆಯ ಎಲ್ಲ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪ್ರದೇಶದಲ್ಲಿ ಖಾಸಗಿ ಫೋಟೋ ಬಯೋಕೇಂದ್ರಗಳ ಮೂಲಕ ಪಡಿತರ ಆಧಾರ್ ಆಧಾರಿತ ಕೂಪನ್‍ಗಳನ್ನು ವಿತರಿಸಲು ಅವಕಾಶ ನೀಡಲಾಗಿದ್ದು ಆಸಕ್ತಿಯುಳ್ಳವರು ಅಗತ್ಯ ದಾಖಲಾತಿಗಳೊಂದಿಗೆ ಆಹಾರ ನಾಗರಿಕ ಇಲಾಖೆಗೆ ಮನವಿ ಸಲ್ಲಿಸಬಹುದಾಗಿದೆ.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಚೀಟಿದಾರರು ಆಧಾರ್ ಆಧಾರಿತ ಕೂಪನ್‍ಗಳನ್ನು ಪಡೆಯಲು ಅವಕಾಶವಾಗುವಂತೆ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಅಟಲ್ ಜೀ ಜನಸ್ನೇಹಿ ಕೇಂದ್ರ, ತಾಲೂಕು ಕೇಂದ್ರಗಳಲ್ಲಿರುವ ಖಾಸಗಿ ಸೇವಾ ಕೇಂದ್ರಗಳೊಂದಿಗೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಸರ್ಕಾರ ಆದೇಶಿಸಿದೆ.
ಖಾಸಗಿ ಕೇಂದ್ರದವರು ಕೂಪನ್ ವಿತರಣೆಗೆ ಅವಶ್ಯಕವಿರುವ ಕಂಪ್ಯೂಟರ್, ಯುಪಿಎಸ್, ಲೇಸರ್ ಪ್ರಿಂಟರ್, ಇಂಟರ್ ನೆಟ್, ಬೆರಳಚ್ಚು ಬಯೋಮೆಟ್ರಿಕ್, ಐರೀಸ್ ಸ್ಕ್ಯಾನರ್ ಮತ್ತು ಬಾರ್ ಕೋಡೆಡ್ ಕೂಪನ್ ರೀಡರ್‍ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಕೂಪನ್ ಪಡೆಯಲು ಬರುವ ಪಡಿತರ ಚೀಟಿದಾರರು ಕೂರಲು ಸ್ಥಳಾವಕಾಶ ಹಾಗೂ ನೆರಳಿನ ಸೌಲಭ್ಯ ಇರಬೇಕು. ಕೇಂದ್ರಗಳಲ್ಲಿ ಕಂಪ್ಯೂಟರ್ ಮಾನಿಟರ್‍ಗಳನ್ನು ಹೆಚ್ಚುವರಿಯಾಗಿ ಹೊಂದಿದ್ದು ಅದನ್ನು ಕೂಪನ್ ಪಡೆಯಲು ಬರುವ ಕಾರ್ಡುದಾರರಿಗೂ ಪ್ರದರ್ಶಿಸಬೇಕಾಗುವುದು. ಏಕೆಂದರೆ ಖಾಸಗಿ ಕೂಪನ್ ವಿತರಣಾ ಕೇಂದ್ರದವರು ಏನನ್ನು ದಾಖಲಿಸುತ್ತಿದ್ದಾರೆ ಎಂಬುದನ್ನು ಪಡಿತರ ಚೀಟಿದಾರರು ಖಾತರಿ ಪಡಿಸಿಕೊಳ್ಳುವುದು ಕಡ್ಡಾಯವಾಗಿದೆ.
ಖಾಸಗಿ ಕೂಪನ್ ವಿತರಣಾ ಕೇಂದ್ರಗಳನ್ನು ನೋಂದಾಯಿಸುವವರು ಅವರಿಗೆ ನಿಬಂಧನೆಗಳನ್ನು ಲಿಖಿತ ಮೂಲಕ ನೀಡಿ ಅವರೊಂದಿಗೆ ಛಾಪಾ ಕಾಗದದಲ್ಲಿ ಒಪ್ಪಂದ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಪ್ಪಂದದಲ್ಲಿ ಇಲಾಖೆಯ ನಿರ್ದೇಶನಗಳನ್ನು ಉಲ್ಲಂಘಿಸುವ ವಿತರಣಾ ಕೇಂದ್ರಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂಬ ಅಂಶವನ್ನು ಕಡ್ಡಾಯವಾಗಿ ನಮೂದಿಸಲಾಗುತ್ತದೆ.
ಬೆರಳಚ್ಚು ಬಯೋಮೆಟ್ರಿಕ್‍ಗೆ ನಿಗದಿ ಮಾಡಲಾದ ಸ್ಕ್ಯಾನರ್, ಲೇಸರ್ ಸ್ಕ್ಯಾನರ್ ಯಂತ್ರಗಳನ್ನು ಖರೀದಿಸಿಕೊಂಡು ಕೂಪನ್ ವಿತರಣಾ ಕಾರ್ಯ ನಿರ್ವಹಿಸಬೇಕು. ಪಡಿತರ ಚೀಟಿದಾರರಿಗೆ ಕೂಪನ್ ಸೃಜಿಸಲು ಖಾಸಗಿ ಕೂಪನ್ ವಿತರಣಾ ಕೇಂದ್ರಗಳಿಗೆ ಪ್ರತಿ ಕೂಪನ್‍ಗೆ 3 ರೂ. ದರ ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಸಂಗ್ರಹಿಸಲಾದ ಕೂಪನ್‍ಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು ಪ್ರತಿ ಕೂಪನ್‍ಗೆ 0.20 ರೂ.ಗಳನ್ನು ನಿಗದಿ ಮಾಡಲಾಗಿದೆ. ಈ ಮೊತ್ತವನ್ನು ಖಾಸಗಿ ಕೂಪನ್ ವಿತರಣಾ ಕೇಂದ್ರಗಳ ಬ್ಯಾಂಕ್ ಖಾತೆಗೆ ತಿಂಗಳ ಕೊನೆಯಲ್ಲಿ ಇಲಾಖೆಯಿಂದ ಜಮೆ ಮಾಡಲಾಗುವುದರಿಂದ ಪಡಿತರ ಚೀಟಿ ಸೃಜಿಸಲು ಅಥವಾ ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡಲು ಯಾವುದೇ ಶುಲ್ಕವನ್ನು ಖಾಸಗಿ ಕೇಂದ್ರದವರು ಅರ್ಜಿದಾರರಿಂದ ಪಡೆಯುವಂತಿಲ್ಲ.
ಈ ಎಲ್ಲಾ ನಿಬಂಧನೆಗಳಿಗೆ ಒಳಪಟ್ಟು ಖಾಸಗಿ ಬಯೋ ಕೂಪನ್ ವಿತರಣಾ ಕೇಂದ್ರವನ್ನು ತೆರೆಯಲು ಆಸಕ್ತಿಯುಳ್ಳವರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಜುಲೈ 12ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಮನವಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:
Post a Comment