Saturday, 13 August 2016
10-08-2016 to 13-08-2016
ಆಗಸ್ಟ್ 11ರಂದು ಜಿ.ಪಂ. ಕೆ.ಡಿ.ಪಿ ಸಭೆ
ಚಾಮರಾಜನಗರ, ಆ. 10 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್‍ನ ಮಾಸಿಕ ಕೆ.ಡಿ.ಪಿ. ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 15ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ
ಚಾಮರಾಜನಗರ, ಆ. 10– ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 70ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಧ್ವಜಾರೋಹಣ ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು.
ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಜೆ 5.30 ರಿಂದ 6.30ರವರೆಗೆ ಜ್ಯೋತಿಗೌಡನಪುರದ ಜೆ.ಬಿ. ಮಹೇಶ್ ಮತ್ತು ತಂಡದವರಿಂದ ದೇಶಭಕ್ತಿ ಗೀತೆ ಗಾಯನ, ಸಂಜೆ 6.30 ರಿಂದ 7.30ರವರೆಗೆ ಶಾಲಾಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. 7.30 ರಿಂದ 8.30ರವರೆಗೆÉ ಮೈಸೂರಿನ ನಿಮಿಶಾಂಭ ನೃತ್ಯಾಲಯದ ಆಪ್ತಮಿತ್ರ ಖ್ಯಾತಿಯ ವಿದ್ವಾನ್ ಶ್ರೀಧರ್ ಜೈನ್ ಮತ್ತು ತಂಡದವರು ಭಾರತೀಯ ನೃತ್ಯ ವೈಭವ ಕುರಿತ ನೃತ್ಯ ರೂಪಕ ಪ್ರಸ್ತುತ ಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
*
ಆಗಸ್ಟ್ 11ರಂದು ಡಿ.ದೇವರಾಜ ಅರಸು ಶತಮಾನೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆ
ಚಾಮರಾಜನಗರ, ಆ. 10 (ಕರ್ನಾಟಕ ವಾರ್ತೆ):- ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡಿ.ದೇವರಾಜ ಅರಸುರವರ ಜನ್ಮ ಶತಮಾನೋತ್ಸವ ಸಂಬಂಧ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಗಸ್ಟ್ 11ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ದೇವರಾಜ ಅರಸು ಅವರ ಅಭಿಮಾನಿಗಳು, ಚುನಾಯಿತ ಪ್ರತಿನಿಧಿಗಳು, ಸಂಘಸಂಸ್ಥೆಗಳ ಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಸಲಹೆ ನೀಡುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಶಿಕ್ಷಣಕ್ಕೆ ಹೆಚ್ಚು ಆಸಕ್ತಿ ತೋರಲು ಸಿ. ಪುಟ್ಟರಂಗಶೆಟ್ಟಿ ಸಲಹೆ
ಚಾಮರಾಜನಗರ, ಆ. 10 (ಕರ್ನಾಟಕ ವಾರ್ತೆ):– ಉಪ್ಪಾರ ಸಮುದಾಯ ಮೂಡನಂಭಿಕೆಗಳನ್ನು ತೊಡೆದುಹಾಕಿ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚು ಮುಂದೆ ಬರಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.
ನಗರದ ಮಾರಿಗುಡಿ ದೇವಾಲಯದ ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಗೀರಥ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಪ್ಪಾರ ಸಮುದಾಯ ಜನರು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಆಚರಣೆಯಲ್ಲಿರುವ ಮೂಡನಂಬಿಕೆಗಳನ್ನು ಬಿಡಬೇಕು. ಬಾಲ್ಯವಿವಾಹ ಪದ್ದತಿಗೆ ಉತ್ತೇಜನ ನೀಡಬಾರದು. ಬಾಲ್ಯವಿವಾಹದಿಂದ ಆಗುವ ತೊಂದರೆಗಳನ್ನು ಮನಗಂಡು ಈ ಪದ್ದತಿಯನ್ನು ಕೈಬಿಡಬೇಕು ಎಂದರು.
ಮೊದಲಿನ ಸ್ಥಿತಿಗೆ ಹೋಲಿಸಿದರೆ ಇತ್ತೀಚೆಗೆ ಉಪ್ಪಾರ ಸಮುದಾಯದಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಅವರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳುವ ಸಂದರ್ಭದಲ್ಲಿ ಹೆಚ್ಚಿನ ಅರ್ಜಿಗಳು ಬಂದಿವೆ. ಈ ಉತ್ಸಾಹ ಮುಂದುವರೆಯಬೇಕು ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಉಪ್ಪಾರ ಸಮುದಾಯದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‍ನಲ್ಲಿ 10 ಕೋಟಿ ರೂ. ನೀಡಿದ್ದಾರೆ. ದೇವರಾಜ ಅರಸು ಅವರ ಕಾಲದಲ್ಲಿ ಉಪ್ಪಾರ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ದೊರೆಯಿತು. ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಉಪ್ಪಾರ ಜನಾಂಗದ ಅಭಿವೃದ್ಧಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದೆ. ಸರ್ಕಾರದ ವತಿಯಿಂದ ಭಗೀರಥ ಮಹರ್ಷಿ ಜಯಂತಿ ಆಚರಣೆಯು ಸಹ ಮಾಡಲಾಗುತ್ತಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಭಗೀರಥರ ಭಾವಚಿತ್ರ ಮೆರವಣಿಗೆ ಹಾಗೂ ಸಮಾರಂಭ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ರವರು ಹಿಂದುಳಿದ ಸಮಾಜ ಮೇಲೆ ಬರಲು ಸರ್ಕಾರ ಸಾಕಷ್ಟು ಉತ್ತೇಜನ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಶಿಕ್ಷಣ ರಂಗದಲ್ಲಿ ಮುಂದುವರೆಯಲು ಅನೇಕ ಸೌಲಭ್ಯಗಳನ್ನು ನೀಡುತ್ತಿದೆ. ಈ ಸವಲತ್ತುಗಳನ್ನು ಬಳಸಿಕೊಂಡು ಮಕ್ಕಳಿಗೆ ಶಿಕ್ಷಣವನ್ನು ಕಡ್ಡಾಯವಾಗಿ ಕೊಡಿಸಲೇಬೇಕು. ಯಾವುದೇ ಕಾರಣಕ್ಕೂ ಮಕ್ಕಳನ್ನು ವ್ಯಾಸಂಗದಿಂದ ವಂಚಿತರನ್ನಾಗಿ ಮಾಡಬಾರದೆಂದು ಕಳಕಳಿ ವ್ಯಕ್ತಪಡಿಸಿದರು.
ಮುಖ್ಯ ಭಾಷಣ ಮಾಡಿದ ಮೈಸೂರು ವಿ.ವಿ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ನೀಲಗಿರಿ ತಳವಾರ್ ರವರು ಭಗೀರಥ ಮಹರ್ಷಿ ಅವರು ತಮ್ಮ ಅಸಾಧಾರಣ ಸಾಧನೆ ಮೂಲಕ ಅಧ್ಬುತವಾದ ಇಚ್ಛಾಶಕ್ತಿ ಹಾಗೂ ಕ್ರಿಯಾಶಕ್ತಿಯ ಪ್ರತೀಕವಾಗಿದ್ದಾರೆ. ಜೀವಜಲ ಹರಿಸಿ ಸಾಂಸ್ಕøತಿಕ ನಾಯಕರಾಗಿ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಇಡೀ ಮನುಕುಲಕ್ಕೆ ಅವರು ಆದರ್ಶವಾಗಿದ್ದಾರೆ ಎಂದರು.
ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಅವರು ಭಗೀರಥರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫೀ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ಬಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ತಾಲ್ಲೂಕು ಪಂಚಾಯತ್ ಸದಸ್ಯರಾದ ಪುಟ್ಟಸ್ವಾಮಿ, ಬಾಲಚಂದ್ರಮೂರ್ತಿ, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ ರವಿಕುಮಾರ್, ನಗರಸಭಾ ಸದಸ್ಯರಾದ ಬಂಗಾರು, ಮುಖಂಡರಾದ ನೂರೊಂದು ಶೆಟ್ಟಿ, ಚಿಕ್ಕಮಹದೇವು, ಶಿವಕುಮಾರ್, ಹನುಮಂತಶೆಟ್ಟಿ, ಸಿ.ಎ. ಮಹದೇವಶೆಟ್ಟಿ, ಲಿಂಗರಾಜು, ಚಾ.ಹ. ಶಿವರಾಜು, ಕೃಷ್ಣಸ್ವಾಮಿ, ಕಿನಕನಹಳ್ಳಿ ಸಿದ್ದರಾಜು, ನಿಟ್ರೆ ನಾಗರಾಜು, ಜಯಕುಮಾರ್ ಗಡಿಕಟ್ಟೆ ಯಜಮಾನರು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ಭಗೀರಥರ ಭಾವಚಿತ್ರ ಮೆರವಣಿಗೆ ಆಕರ್ಷಕ ಕಲಾ ತಂಡಗಳೊಡನೆ ಅದ್ದೂರಿಯಾಗಿ ನಡೆಯಿತು.
ಕುಡಿಯುವ ನೀರಿನ ಯೋಜನೆಗೆ ವಿದ್ಯುತ್ ಸಂಪರ್ಕ ಕಡಿತ ಬೇಡ : ಜಿ.ಪಂ. ಅಧ್ಯಕ್ಷರಾದ ರಾಮಚಂದ್ರ ಸೂಚನೆ
ಚಾಮರಾಜನಗರ, ಆ. 11 (ಕರ್ನಾಟಕ ವಾರ್ತೆ):- ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಯೋಜನೆಗಳಿಗೆ ಕಲ್ಪಿಸಿರುವ ವಿದ್ಯುತ್ ಸಂಪರ್ಕ ಕಡಿತ ಮಾಡದೆ ಅನುಕೂಲ ಕಲ್ಪಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರಿಗೆ ನೀರು ಪೂರೈಸಲು ಕಾಮಗಾರಿ ಪೂರ್ಣಗೊಂಡಿರುವ ನೀರಿನ ಯೋಜನೆಗಳಿಗೆ ಕೆಲವೆಡೆ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಆದರೆ ಕೆಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕವನ್ನು ಏಕಾಏಕಿ ಕಡಿತಗೊಳಿಸುತ್ತಿರುವುದರಿಂದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದು ಜನಪ್ರತಿನಿಧಿಗಳ ಗಮನಕ್ಕೆ ಸಮಸ್ಯೆ ತರುತ್ತಿದ್ದಾರೆ ಎಂಬ ವಿಷಯವು ಸಭೆಯಲ್ಲಿ ಪ್ರಸ್ತಾಪವಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು ಅವರು ಸಭೆ ಆರಂಭದಲ್ಲೇ ಕುಡಿಯುವ ನೀರಿನ ಯೋಜನೆಗೆ ಕಲ್ಪಿಸಲಾಗಿದ್ದ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿರುವ ಬಗ್ಗೆ ತಮ್ಮ ಭಾಗದ ಜನರು ತಿಳಿಸಿದ್ದಾರೆ. ಹೀಗಾಗಿ ಜನರು ತೊಂದರೆಗೆ ಸಿಲುಕಿದ್ದಾರೆ ಎಂದರು.
ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್ ಅವರು ಸಹ ಈ ಪ್ರಸ್ತಾಪಕ್ಕೆ ದನಿಗೂಡಿಸಿ ಜನರ ಸಂಕಷ್ಟವನ್ನು ತೆರೆದಿಟ್ಟರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಮಾತನಾಡಿ ಜನತೆಯ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಅಡಚಣೆಯಾಗಬಾರದು. ಕುಡಿಯುವ ನೀರಿನ ಯೋಜನೆಯ ವಿದ್ಯುತ್ ಸಂಪರ್ಕಕ್ಕೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ನಿಮ್ಮ ಹಂತದಲ್ಲಿಯೇ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಕೆ ಸಂಬಂಧ ಚರ್ಚಿಸಿದ ಸಂದರ್ಭದಲ್ಲಿ ಕಾಲಮಿತಿಯೊಳಗೆ ಘಟಕಗಳನ್ನು ಅಳವಡಿಸುವ ಕೆಲಸ ಪೂರ್ಣಗೊಳಿಸಬೇಕು. ಅಳವಡಿಕೆ ಸಂದರ್ಭದಲ್ಲೂ ವಿದ್ಯುತ್ ಸಂಪರ್ಕ ಸೇರಿದಂತೆ ಯಾವುದೇ ಸಬೂಬು ಹೇಳದೆ ಅಧಿಕಾರಿಗಳು ಪೂರ್ಣ ಪ್ರಮಾಣದಲ್ಲಿ ಕೆಲಸ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಸೂಚಿಸಿದರು.
ಬರಪರಿಹಾರÀ ಯೋಜನೆಯಡಿ ಕೈಗೊಳ್ಳಲಾಗಿರುವ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಬೇಕೆಂಬ ನಿರ್ದೇಶನವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರು ನೀಡಿದರು.
ವಿವಿಧ ಇಲಾಖೆಗಳು ಸರ್ಕಾರದ ಯೋಜನೆ, ಕಾರ್ಯಕ್ರಮಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ವೇಳೆ ಮದ್ಯವರ್ತಿಗಳ ಪ್ರವೇಶವಾಗುತ್ತದೆ. ಅರ್ಜಿ ಆಹ್ವಾನ ಸಲ್ಲಿಕೆ ಪ್ರಕ್ರಿಯೆಯಲ್ಲೂ ಕೆಲವರು ಮದ್ಯ ಪ್ರವೇಶಿಸುವ ವರದಿಗಳು ಕೇಳಿಬರುತ್ತಿವೆ ಎಂಬ ವಿಷಯ ಪ್ರಸ್ತಾಪವಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ ಮಾತನಾಡಿ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕು. ಬಡವರಿಗೆ ಅನುಕೂಲ ಮಾಡಿಕೊಡುವ ಕೆಲಸವನ್ನು ಅಧಿಕಾರಿಗಳು ವಿಳಂಬ ಮಾಡಬಾರದು. ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಯೋಜನೆ ಅನುಷ್ಠಾನ ಮಾಡಬೇಕೆಂದು ತಾಕೀತು ಮಾಡಿದರು.
ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರೂ ಸಹ ಇಲಾಖೆಯ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಆಯ್ಕೆ ಪ್ರಕ್ರಿಯೆ ಮಾಡುವಂತಿಲ್ಲ. ತಪ್ಪಿದ್ದರೆ ಸರಿಪಡಿಸಿಕೊಂಡು ಕರ್ತವ್ಯ ನಿರ್ವಹಿಸಬೇಕೆಂದು ಎಚ್ಚರಿಕೆ ನೀಡಿದರು.
ಸರ್ಕಾರದ ಸಾಲ ಮನ್ನಾ ಯೋಜನೆಯಡಿ ಪ್ರಯೋಜನ ಪಡೆದಿರುವ ಫಲಾನುಭವಿಗಳಿಗೆ ಸಂಬಂಧಪಟ್ಟ ಇಲಾಖೆಗಳು ಸೂಕ್ತ ದೃಢೀಕರಣವನ್ನು ತಲುಪಿಸಬೇಕು. ಇಲ್ಲವಾದಲ್ಲಿ ಆರ್‍ಟಿಸಿಗಳಲ್ಲಿ ಸಾಲ ಪಡೆದಿರುವ ಬಗ್ಗೆ ನಮೂದು ಹಾಗೆಯೇ ಉಳಿಯಲಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಅವಶ್ಯವಾದ ಕ್ರಮ ತೆಗೆದುಕೊಳ್ಳಬೇಕೆಂದು ಕೆರೆಹಳ್ಳಿ ನವೀನ್ ತಿಳಿಸಿದರು.
ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಾದೇಶು, ಉಪಕಾರ್ಯದರ್ಶಿ ಮುನಿರಾಜಪ್ಪ ಸಭೆಯಲ್ಲಿ ಹಾಜರಿದ್ದರು.
ಡಿ.ದೇವರಾಜ ಅರಸು ಶತಮಾನೋತ್ಸವ ಅದ್ದೂರಿ ಆಚರಣೆಗೆ ನಿರ್ಧಾರ
ಚಾಮರಾಜನಗರ, ಆ. 11 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವವನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆ, ಸಮುದಾಯಗಳ ಸಹಕಾರದೊಂದಿಗೆ ಆಗಸ್ಟ್ 20ರಂದು ಜಿಲ್ಲಾ ಕೇಂದ್ರದಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಹಾಗೂ ಇತರ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘಸಂಸ್ಥೆಗಳ ಮುಖಂಡರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಸಲು ಒಕ್ಕೊರಲಿನಿಂದ ತೀರ್ಮಾನ ಕೈಗೊಳ್ಳಲಾಯಿತು.
ಮೊದಲಿಗೆ ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ದೇವರಾಜ ಅರಸು ಅವರು ತಮ್ಮ ಅಧಿಕಾರ ಅವಧಿಯಲ್ಲಿ ಹಿಂದುಳಿದ ವರ್ಗ, ದಲಿತರ ಅಭ್ಯುದಯಕ್ಕಾಗಿ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ತಂದರು. ಬಹುತೇಕ ಎಲ್ಲ ಜನರ ಆರ್ಥಿಕ, ಸಾಮಾಜಿಕ ಶ್ರೇಯೋಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದ ಅರಸು ಅವರ ಜನ್ಮಶತಮಾನೋತ್ಸವವನ್ನು ಜಿಲ್ಲೆಯಲ್ಲಿ ಅದ್ದೂರಿಯಾಗಿ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ನೀಡುವ ಸಲಹೆಗಳನ್ನು ಪರಿಗಣಿಸಲಾಗುವುದು ಎಂದರು.
ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ಮಾತನಾಡಿ ಅರಸು ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಬೇಕು. ಅರಸು ಅವರ ಯೋಜನೆ ಹಾಗೂ ವಿಚಾರಧಾರೆಗಳ ಕುರಿತು ಪೂರ್ವಭಾವಿಯಾಗಿ ವಿಚಾರಸಂಕಿರಣ ಹಮ್ಮಿಕೊಳ್ಳಬೇಕು. ಸ್ತಬ್ಧಚಿತ್ರ ಮೆರವಣಿಗೆ ಸಹ ಏರ್ಪಾಡು ಮಾಡಬೇಕು ಎಂಬ ಸಲಹೆಗಳನ್ನು ನೀಡಿದರು.
ಇದೇವೇಳೆ ಮಾತನಾಡಿದ ಜಿಲ್ಲಾಧಿಕಾರಿಯವರು ಡಿ. ದೇವರಾಜ ಅರಸು ಅವರ ಶತಮಾನೋತ್ಸವದ ಅಂಗವಾಗಿ ಆಗಸ್ಟ್ 14ರಂದು ಸ್ತಬ್ದಚಿತ್ರ ಜಿಲ್ಲೆಗೆ ಆಗಮಿಸಲಿದೆ. ಸಂಚರಿಸುವ ಮಾರ್ಗಗಳನ್ನು ಅಂತಿಮಗೊಳಿಸಿ ಈ ಕುರಿತು ಮಾಹಿತಿ ನೀಡಲಾಗುತ್ತದೆ ಎಂದರು.
ಅರಸು ಅವರ ಜನ್ಮದಿನ ಆಚರಿಸುವ ಆಗಸ್ಟ್ 20ರಂದೂ ಸಹ ಚಾಮರಾಜೇಶ್ವರ ದೇವಾಲಯದಿಂದ ವೇದಿಕೆ ಕಾರ್ಯಕ್ರಮ ನಡೆಯುವ ಜೆ.ಎಚ್. ಪಟೇಲ್ ಸಭಾಂಗಣದವರೆಗೂ ಪ್ರತ್ಯೇಕವಾಗಿ ಸ್ತಬ್ಧಚಿತ್ರ ಮೆರವಣಿಗೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಮಾತನಾಡಿ ಡಿ. ದೇವರಾಜ ಅರಸು ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಬೇಕು. ಜಿಲ್ಲೆಯ ಎಲ್ಲ ಗ್ರಾಮೀಣ ಭಾಗದ ಪ್ರತಿನಿಧಿಗಳನ್ನು ಆಹ್ವಾನಿಸಿ ಸ್ಮರಣೀಯ ಸಮಾರಂಭವನ್ನಾಗಿ ಆಯೋಜನೆ ಮಾಡಲು ಅಧಿಕಾರಿಗಳು ರೂಪುರೇಷೆ ತಯಾರಿಸಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು ಅವರು ಮಾತನಾಡಿ ಅರಸು ಅವರ ಬಗ್ಗೆ ಎಲ್ಲರಿಗೂ ಅಪಾರ ಗೌರವ ಅಭಿಮಾನವಿದೆ. ಅರಸು ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ಸ್ವಯಂಪ್ರೇರಣೆಯಿಂದ ಎಲ್ಲರೂ ಭಾಗವಹಿಸಬೇಕು. ಜಿಲ್ಲಾಡಳಿತದೊಂದಿಗೆ ಜತೆಗೂಡಿ ಅರ್ಥಪೂರ್ಣ ಕಾರ್ಯಕ್ರಮ ನಡೆಯುವಂತಾಗಲು ಸಹಕರಿಸಬೇಕೆಂದು ಮತ್ತೊಮ್ಮೆ ಮನವಿ ಮಾಡಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ಸಂಘಟನೆಗಳ ಮುಖಂಡರಾದ ಸಿ.ಎಂ. ಕೃಷ್ಣಮೂರ್ತಿ, ಶಾ. ಮುರಳಿ, ಅರಕಲವಾಡಿ ನಾಗೇಂದ್ರ, ನಿಜಧ್ವನಿ ಗೋವಿಂದರಾಜು, ಬ್ಯಾಡಮೂಡ್ಲು ಬಸವಣ್ಣ, ಗು. ಪುರುಷೋತ್ತಮ್, ನಾಗೇಶ್, ಕೊಡಸೋಗೆ ಶಿವಬಸವಪ್ಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸಿ. ಶಿವಕುಮಾರ್, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ ಜಿ. ಗೌಡ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರೂ ಆದ ಸರಸ್ವತಿ, ಇತರೆ ಅಧಿಕಾರಿಗಳು, ಮುಖಂಡರು ಸಭೆಯಲ್ಲಿ ಹಾಜರಿದ್ದರು.
ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಗೆ 2 ವರ್ಷ ಸಜೆ
ಚಾಮರಾಜನಗರ, ಆ. 11 (ಕರ್ನಾಟಕ ವಾರ್ತೆ):- ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದು ಅಪರಾಧ ಎಸಗಿದ ವ್ಯಕ್ತಿಯೊಬ್ಬರಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 2 ವರ್ಷಗಳ ಕಠಿಣ ಸಜೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮದ ಕೆಂಪರಾಜು ಅಲಿಯಾಸ್ ಕೆಂಪ ತನ್ನ ಜಮೀನಿನಲ್ಲಿ ಜೋಳದ ಫಸಲಿನ ಜತೆಗೆ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆಸಿದ್ದರು. 2013ರ ನವೆಂಬರ್ 13ರಂದು ರಾಮಾಪುರ ಪೊಲೀಸ್ ನಿರೀಕ್ಷಕರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಜಮೀನಿನಲ್ಲಿ ಬೆಳೆಸಿದ್ದ 25 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದರು.
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದು ರುಜುವಾತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಅವರು ಆಗಸ್ಟ್ 9ರಂದು ಅಪರಾಧಿಗೆ 2 ವರ್ಷಗಳ ಕಠಿಣ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ಎಸ್ ಎಸ್ ಎಲ್ ಸಿ ಪರೀಕ್ಷೆ : ಆ. 22ರೊಳಗೆ ಖಾಸಗಿ ಅಭ್ಯರ್ಥಿಗಳ ನೋಂದಣಿಗೆ ಅವಕಾಶ
ಚಾಮರಾಜನಗರ, ಆ. 11 (ಕರ್ನಾಟಕ ವಾರ್ತೆ):- 2016-17ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆÉಯನ್ನು ಖಾಸಗಿಯಾಗಿ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 22 ಕಡೆಯ ದಿನವಾಗಿದೆ.
ಅಭ್ಯರ್ಥಿಗಳು 185 ರೂ. ಶುಲ್ಕವನ್ನು ನೆಫ್ಟ್ ಚಲನ್ ಮೂಲಕ ಜಮೆ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಶಾಲೆ ಮುಖ್ಯಸ್ಥರಿಗೆ ದೃಢೀಕರಿಸಿ ಸಲ್ಲಿಸಬೇಕು. ಶಾಲಾ ಮುಖ್ಯಸ್ಥರು ಅಥವಾ ಸದರಿ ಸಂಸ್ಥೆಯ ಸಿಬ್ಬಂದಿ ವರ್ಗ ಖಾಸಗಿ ಅಭ್ಯರ್ಥಿಗಳ ನೋಂದಣಿ ಸಂಬಂಧ ಮಾಹಿತಿ ಕ್ರೋಢೀಕರಿಸಿ ಮುದ್ದಾಂ ಮೂಲಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಸಲ್ಲಿಸಬೇಕಿದೆ.
ಶಾಲಾ ಕೋಡ್ ಪಡೆಯದೆ ಇರುವ ಖಾಸಗಿ ಪ್ರೌಢಶಾಲೆಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ಶಾಲಾ ಕೋಡ್ ಪಡೆಯಬೇಕು. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಶಾಲಾ ಕೋಡ್ ಪಡೆಯಲೇಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಸುರಕ್ಷಿತ ಆಹಾರ ಪದಾರ್ಥ ಮಾರಾಟ ಮಾಡಲು ಮುಂದಾದ ಉತ್ಪಾದಕ, ವಿತರಕರಿಗೆ ದಂಡ
ಚಾಮರಾಜನಗರ, ಆ. 11 (ಕರ್ನಾಟಕ ವಾರ್ತೆ):- ಅರಸೀಕೆರೆಯ ಬಿಲ್ವಾ ಎಂಟರ್ ಪ್ರೈಸಸ್ ಅವರು ಗುಂಡ್ಲುಪೇಟೆ ಪಟ್ಟಣದ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಇಡಲಾಗಿದ್ದ ಕಡಲೆಹಿಟ್ಟು ಮಿಸ್ ಬ್ರಾಂಡ್ ಎಂದು ವಿಶ್ಲೇಷಣಾ ವರದಿ ದೃಢಪಟ್ಟ ಹಿನ್ನೆಲೆಯಲ್ಲಿ ಸದರಿ ಉತ್ಪಾದಕ ಘಟಕದ ಮಾಲೀಕರು ಹಾಗೂ ಉತ್ಪನ್ನವನ್ನು ಮಾರಾಟ ಮಾಡಲು ಮುಂದಾಗಿದ್ದ ಏಜೆನ್ಸಿ ಮಾಲೀಕರಿಗೆ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ನ್ಯಾಯ ನಿರ್ಣಯಾಧಿಕಾರಿ ತೀರ್ಪು ನೀಡಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಗುಂಡ್ಲುಪೇಟೆ ತಾಲೂಕಿನ ಆಹಾರ ಸುರಕ್ಷತಾಧಿಕಾರಿ ಶ್ರೀನಿವಾಸ್ ಅವರು ಗುಂಡ್ಲುಪೇಟೆ ಪಟ್ಟಣದಲ್ಲಿ ಮಾರಾಟ ಮಳಿಗೆ ಅಂಗಡಿಗಳಿಗೆ ಭೇಟಿ ನೀಡಿ ಮಾರಾಟ ಮಾಡಲು ಇಡಲಾಗಿದ್ದ ಆಹಾರ ಪದಾರ್ಥಗಳನ್ನು ಪರಿಶೀಲಿಸಿದ್ದರು. ಕೆಲವೊಂದು ಸಂಶಯಾಸ್ಪದ ಆಹಾರ ಮಾದರಿಗಳನ್ನು ಸಂಗ್ರಹಿಸಿ ಮೈಸೂರಿನ ವಿಭಾಗೀಯ ಆಹಾರ ವಿಶ್ಲೇಷಣಾ ಪ್ರಯೋಗಶಾಲೆಗೆ ಕಳುಹಿಸಿದ್ದರು. ಈ ಪೈಕಿ ಹಾಸನ ಜಿಲ್ಲೆಯ ಅರಸೀಕೆರೆಯ ಬಿಲ್ವಾ ಎಂಟರ್ ಪ್ರೈಸಸ್ ಅವರ ಆಹಾರ ಮಾದರಿ ಕಡಲೆಹಿಟ್ಟು ಮಿಸ್ ಬ್ರಾಂಡ್ ಎಂದು ವಿಶ್ಲೇಷಣಾ ವರದಿಯಿಂದ ದೃಢಪಟ್ಟಿತು.
ಆಹಾರ ಸುರಕ್ಷತಾಧಿಕಾರಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯಿದೆ ಪ್ರಕಾರ ಉತ್ಪಾದಕ ಘಟಕದ ಮಾಲೀಕರು, ವಿತರಕರು ಹಾಗೂ ಮಾರಾಟಗಾರರ ವಿರುದ್ಧ ಜಿಲ್ಲೆಯ ಅಪರ ಜಿಲ್ಲಾ ದಂಡಾಧಿಕಾರಿ ಹಾಗೂ ನ್ಯಾಯ ನಿರ್ಣಯಾಧಿಕಾರಿ ಅವರಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು.
ವಿಚಾರಣೆ ನಡೆಸಿದ ಅಪರ ಜಿಲ್ಲಾ ದಂಡಾಧಿಕಾರಿಯವರು ಉತ್ಪಾದಕ ಘಟಕದ ಮಾಲೀಕರಾದ ಮಹೇಂದ್ರ ಶಂಕರ ನಾರಾಯಣಸ್ವಾಮಿ ಅವರಿಗೆ 10 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದರು. ಅಲ್ಲದೆ ಗುಂಡ್ಲುಪೇಟೆಯ ಏಜೆನ್ಸಿ ಮಾಲೀಕರಾದ ಟಿ.ಎಸ್. ಗೋಪಿನಾಥ್ ಹಾಗೂ ಜಿತೇಂದ್ರಕುಮಾರ್ ಅವರಿಗೆ ತಲಾ 5 ಸಾವಿರ ರೂ. ದಂಡವನ್ನು ವಿಧಿಸಿ ತೀರ್ಪು ನೀಡಿದ್ದಾರೆ.
ಯಶಸ್ವಿನಿ: ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆÉ
ಚಾಮರಾಜನಗರ, ಆ. 11 (ಕರ್ನಾಟಕ ವಾರ್ತೆ):- ಗ್ರಾಮೀಣ ಹಾಗೂ ನಗರ ಯಶಸ್ವಿನಿ ಸಹಕಾರ ರೈತರ ಆರೋಗ್ಯ ರಕ್ಷಣಾ ಯೋಜನೆಯಡಿಯಲ್ಲಿ ಸದಸ್ಯರ ಹಿತದೃಷ್ಠಿಯಿಂದ ಸಹಕಾರ ಸಂಘಗಳ ಸದಸ್ಯರು ಸದಸ್ಯತ್ವ ನೋಂದಾಯಿಸಿಕೊಳ್ಳುವ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಸದಸ್ಯರು ಆಯಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿಗಳ ಕಚೇರಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ, ಚಾಮರಾಜನಗರ ಉಪವಿಭಾಗ ಮತ್ತು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಯನ್ನು ಸಂಪರ್ಕಿಸುವಂತೆ ಸಹಕಾರ ಸಂಘಗಳ ಉಪನಿಬಂಧಕರಾದ ಪಿ. ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿ.ಕೆ.ಚಾರಿಟಬಲ್ ಟ್ರಸ್ಟ್‍ವತಿಯಿಂದ ಶಾಲಾ ಮಕ್ಕಳಿಗೆ ಶಾಲಾ ಶುಲ್ಕ ವಿತರಣೆ
ಚಾಮರಾಜನಗರ ಆ.11. ಮಕ್ಕಳ ವಿದ್ಯಾಭ್ಯಾಸಕ್ಕೆ ವಿ.ಕೆ.ಚಾರಿಟಬಲ್ ಟ್ರಸ್ಟ್‍ವತಿಯಿಂದ 15ವರ್ಷಗಳಿಂದ ಪ್ರೋತ್ಸಾಹ ಧನವನ್ನು ದಾನಿಗಳಾದ ಶ್ರೀಮತಿ ವಿಜಯಮಳವಳ್ಳಿ ಮತ್ತು ಶ್ರೀಕುಮಾರ್‍ಮಳವಳ್ಳಿ ನೀಡುತ್ತಾ ಬಂದಿದಾರೆ ಎಂದು ವಿ.ಕೆ.ಚಾರಿಟಬಲ್ ಟ್ರಸ್ಟ್‍ನ ಮ್ಯಾನೆಜಿಂಗ್ ಟ್ರಸ್ಟಿ ಡಾ. ಸಿ.ಎಸ್. ಕೃಷ್ಣಮೂರ್ತಿ ತಿಳಿಸಿದರು.
ನಗರದ ಸೇವಾ ಭಾರತಿ ಶಾಲೆಯಲ್ಲಿ ಮಕ್ಕಳಿಗೆ ಬೆಂಗಳೂರಿನ ವಿ.ಕೆ.ಚಾರಿಟಬಲ್ ಟ್ರಸ್ಟ್‍ವತಿಯಿಂದ ಶಾಲಾ ಶುಲ್ಕ ವಿತರಿಸಿ ಮಾತನಾಡುತ್ತಾ ಪ್ರತಿ ವರ್ಷ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ 15ವರ್ಷಗಳಿದ ಶಾಲೆಗಳಿಗೆ ತೆರಳಿ ಮಕ್ಕಳ ಶಾಲಾ ಶುಲ್ಕವನ್ನು ಪಾವತಿಸುತ್ತಾ ಬಂದ್ದಿದೆವೆ ಚಾಮರಾಜನಗರದಲ್ಲಿ ಸೇವಾ ಭಾರತಿ ಶಾಲೆ, ಜೆ.ಎಸ್.ಎಸ್, ಸಂತ ಪೌಲರ ಶಾಲೆ, ಜ್ಞಾನ ಭಾರತಿ, ಸೆಂಟ್ ಜೋಸೆಪ್ ಶಾಲೆಯ ಬಡಮಕ್ಕಳಿಗೆ ಸುಮಾರು 150ಕ್ಕು ಹೆಚ್ಚು ಮಕ್ಕಳಿಗೆ ವಿ.ಕೆ.ಚಾರಿಟಬಲ್ ಟ್ರಸ್ಟ್‍ನವತಿಯಿಂದ ಮಕ್ಕಳ ವಿದ್ಯಾಭಾಸಕ್ಕೆ ಅನುಕೂಲವಾಗಲು ಧನ ಸಹಾಯವನ್ನು ಶ್ರೀಮತಿ ವಿಜಯಮಳವಳ್ಳಿ ಮತ್ತು ಶ್ರೀಕುಮಾರ್‍ಮಳವಳ್ಳಿ ನೀಡುತ್ತಾ ಬಂದ್ದಿದಾರೆ. ಧನ ಸಹಾಯ ಪಡೆದ ಎಷ್ಟೊಮಕ್ಕಳು ಹೆಚ್ಚಿಮಟ್ಟದಲ್ಲಿ ವಿದ್ಯಾಭಾಸ ಮಾಡುತ್ತಿದ್ದಾರೆ.
ಈ ಸೇವಾ ಕಾರ್ಯವನ್ನು ಇನ್ನು ಹೆಚ್ಚಿನಮಟ್ಟದಲ್ಲಿ ಮಾಡಿ ಬಡವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ನಮ್ಮ ಟ್ರಸ್ಟ್‍ನ ಮೂಲ ಉದ್ದೇಶವಾಗಿದೆ ವಿದ್ಯಾಭಾಸಕ್ಕಾಗಿ ಹಣ ವಿಲ್ಲದೆ ಶಾಲೆಗಳನ್ನು ಬಿಟ್ಟಿರುವ ಕಾರಣಗಳು ಇವೆ ಇದ್ದನು ತಡೆಯಲು ನಮ್ಮ ಟ್ರಸ್ಟ್ ಅಲ್ಪ ಸಹಾಯ ಮಾಡುತ್ತ ಬಂದಿದೆ ಎಂದು ತಿಳಿಸಿದರು.
150ಕ್ಕು ಹೆಚ್ಚು ಬಡವಿದ್ಯಾರ್ಥಿಗಳಿಗೆ ಶಾಲಾ ಶುಲ್ಕವನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ನಗರಸಭ ಅಧ್ಯಕ್ಷ ಶಿವನಂಜಯ್ಯ, ಬೆಂಗಳೂರಿನ ಎಂ.ಮಂಜುನಾಥ್, ಸೇವಾಭಾರತಿ ಸಂಸ್ಥೆಯ ವಾಸುದೇವರಾವ್, ವಿ.ಹೆಚ್.ಪಿ ಮುಖ್ಯ ಶಿಕ್ಷಕ ಶ್ರೀನಿವಾಸ್ ಗುರುಜಿ, ಭುಜಂಗೇಶ್ವರ ಬಡಾವಣೆಯ ಶ್ರೀನಿವಾಸ್ ಹಾಜರಿದ್ದರು.
ಆಗಸ್ಟ್ 14ರಂದು ಜಿಲ್ಲೆಗೆ ಅರಸು ಅವರ ಸಾಧನೆ ಬಿಂಬಿಸುವ ರಥಯಾತ್ರೆ ಆಗಮನ
ಚಾಮರಾಜನಗರ, ಆ. 12 (ಕರ್ನಾಟಕ ವಾರ್ತೆ):- ಸಾಮಾಜಿಕ ಸಮಾನತೆಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅರಸು ಅವರ ಪ್ರಮುಖ ಸಾಧನೆಗಳನ್ನು ಬಿಂಬಿಸುವ ಮಾಹಿತಿಯನ್ನು ಒಳಗೊಂಡ ಅತ್ಯಾಕರ್ಷಕ ರಥಯಾತ್ರೆಯು ಜಿಲ್ಲೆಯಲ್ಲಿ ಆಗಸ್ಟ್ 14 ಹಾಗೂ 15ರಂದು ಸಂಚರಿಸಲಿದೆ.
ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ. ರಾಮು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಡಿ.ದೇವರಾಜ ಅರಸುರವರ ಜನ್ಮ ಶತಮಾನೋತ್ಸವವನ್ನು ವರ್ಷವಿಡೀ ಸರ್ಕಾರದ ವತಿಯಿಂದ ನಾನಾ ಕಾರ್ಯಕ್ರಮಗಳ ಮೂಲಕ ಆಚರಿಸಿಕೊಂಡು ಬರಲಾಗುತ್ತಿದೆ. ಈ ಅಂಗವಾಗಿ ಅರಸು ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಾರಿಗೊಳಿಸಿದ್ದ ಹಲವಾರು ಕ್ರಾಂತಿಕಾರಕ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಯಪಡಿಸುವ ಸದಾಶಯದೊಂದಿಗೆ ಅತ್ಯಾಕರ್ಷಕ ರಥಯಾತ್ರೆ (ಸ್ತಬ್ಧಚಿತ್ರ)ಯು ಆಗಸ್ಟ್ 14ರಂದು ಜಿಲ್ಲೆಗೆ ಆಗಮಿಸಲಿದೆ.
ಮೈಸೂರಿನಿಂದ ಹೊರಟು ಟಿ.ನರಸೀಪುರ ಮಾರ್ಗವಾಗಿ ಜಿಲ್ಲೆಗೆ ಆಗಮಿಸಲಿರುವ ರಥಯಾತ್ರೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಇತರೆ ಗಣ್ಯರು ಬರಮಾಡಿಕೊಳ್ಳಲಿದ್ದಾರೆ. ಟಗರಪುರ, ಟಗರಪುರಮೋಳೆ, ಚಿಲಕವಾಡಿ, ಕುಂತೂರು ಜಂಕ್ಷನ್, ಉತ್ತಂಬಳ್ಳಿ, ಮದ್ದೂರು, ಅಗರ-ಮಾಂಬಳ್ಳಿ, ಯರಿಯೂರು ಮೂಲಕ ಯಳಂದೂರು ಪಟ್ಟಣಕ್ಕೆ ಬಂದು ಸೇರಲಿದೆ. ಯಳಂದೂರು ಪಟ್ಟಣದಲ್ಲಿ ಶಾಸಕರಾದ ಎಸ್.ಜಯಣ್ಣ ಅವರು ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಯಳಂದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥಯಾತ್ರೆ ಸಂಚರಿಸಿ ಸಂತೇಮರಹಳ್ಳಿ ಮೂಲಕ ಜಿಲ್ಲಾ ಕೇಂದ್ರಕ್ಕೆ ಬರಲಿದೆ.
ಆಗಸ್ಟ್ 14ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಲಿರುವ ಅರಸು ರಥಯಾತ್ರೆಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ರವರು ಸ್ವಾಗತಿಸಿ ಚಾಲನೆ ನೀಡುವರು. ನಂತರ ಚಾಮರಾಜನಗರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಥಯಾತ್ರೆ ಸಂಚಾರ ಮುಂದುವರೆಯಲಿದೆ. ಬಳಿಕ ನಗರದಲ್ಲೇ ರಥ ಉಳಿದುಕೊಳ್ಳಲಿದೆ. ಆಗಸ್ಟ್ 15ರ ಬೆಳಗ್ಗೆ ಸಂತೇಮರಹಳ್ಳಿ, ಮೂಗೂರು, ಟಿ.ನರಸೀಪುರ ಮಾರ್ಗವಾಗಿ ಮಂಡ್ಯ ನಗರಕ್ಕೆ ತೆರಳಲಿದೆ.
ಆಗಸ್ಟ್ 14ರಂದು ಸಂಜೆ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಡಿ.ದೇವರಾಜ ಅರಸು ರವರ ಸಾಧನೆ ಕುರಿತ ರಂಗನಿರ್ದೇಶಕರಾದ ಪ್ರಮೋದ್ ಶಿಗ್ಗಾಂವ್ ರವರ ನಿರ್ದೇಶನದಲ್ಲಿ ಅರಸು-ಕನಸು ಎಂಬ ನಾಟಕ ಪ್ರದರ್ಶನವನ್ನು ಏರ್ಪಾಡು ಮಾಡಲಾಗಿದೆ.
ಅರಸು ಅವರ ಸಾಧನೆಗಳ ಮಾಹಿತಿಯನ್ನು ಹೊತ್ತ ಸ್ತಬ್ಧಚಿತ್ರ ರಥಯಾತ್ರೆಯನ್ನು ಸರ್ವರೂ ಅಭಿಮಾನದಿಂದ ಸ್ವಾಗತಿಸಬೇಕು. ಅರಸು-ಕನಸು ನಾಟಕವನ್ನು ವೀಕ್ಷಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ರಾಮು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಮನವಿ ಮಾಡಿದರು.
ಡಿ.ದೇವರಾಜ ಅರಸು ಅವರ ಶತಮಾನೋತ್ಸವ ಸಮಾರೋಪ ಸಮಾರಂಭವನ್ನು ಅದ್ಧೂರಿಯಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಈಗಾಗಲೇ ಪೂರ್ವಭಾವಿ ಸಭೆಯನ್ನು ಸಹ ನಡೆಸಲಾಗಿದೆ. ಆಗಸ್ಟ್ 19ರಂದು ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಡಿ.ದೇವರಾಜ ಅರಸು ಅವರ ಸಾಧನೆ, ಕಾರ್ಯಕ್ರಮ, ವ್ಯಕ್ತಿತ್ವ ಅವರ ಆದರ್ಶ ವಿಚಾರಧಾರೆಗಳ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಆಗಸ್ಟ್ 20ರಂದು ಬೆಳಗ್ಗೆ 10 ಗಂಟೆಗೆ ಡಿ.ದೇವರಾಜ ಅರಸುರವರ ಭಾವಚಿತ್ರ ಮೆರವಣಿಗೆ ಹಾಗೂ ಸ್ತಬ್ಧಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಎಸ್. ಮಹದೇವಪ್ರಸಾದ್ ರವರು ಚಾಲನೆ ನೀಡುವರು. ಬಳಿಕ 11 ಗಂಟಗೆ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಅರಸುರವರ ಜನ್ಮದಿನಾಚರಣೆ ಹಾಗೂ ಜನ್ಮ ಶತಮಾನೋತ್ಸ ಸಮಾರೋಪ ಸಮಾರಂಭ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮವೂ ಸಹ ನಡೆಯಲಿದೆ.
ಈ ಎಲ್ಲಾ ಕಾರ್ಯಕ್ರಮಗಳಿಗೆ ಜಿಲ್ಲಾ ಜನತೆ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ರಾಮು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಕೋರಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ, ಸಿ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಕಾರ್ಯನಿರ್ವಹಣೆ ಸಂಬಂಧ ಸುತ್ತೋಲೆ
ವಸತಿ ಶಾಲೆಗಳ ಸಮರ್ಪಕ ನಿರ್ವಹಣೆಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೂಚನೆ
ಚಾಮರಾಜನಗರ, ಆ. 12 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿರುವ ಎಲ್ಲಾ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ನಿರ್ವಹಣೆಯನ್ನು ಸಮರ್ಪಕವಾಗಿ ಕೈಗೊಂಡು ಮಕ್ಕಳ ಶೈಕ್ಷಣಿಕ ಗುಣಮಟ್ಟವನ್ನು ಉನ್ನತೀಕರಿಸಲು ಸೂಕ್ತಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಾಪಾಟಿ ಅವರು ಸೂಚನೆ ನೀಡಿದ್ದಾರೆ.
ಕಳೆದ ಆಗಸ್ಟ್ 4ರಂದು ಹನೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿಗೆ ಭೇಟಿ ನೀಡಿದ ವೇಳೆ ಭೋಜನಾ ಶಾಲೆ ಶುಚಿತ್ವ ಇಲ್ಲದಿರುವುದು ಕಂಡುಬಂದಿದೆ. ಶೈಕ್ಷಣಿಕ ಕಾರ್ಯಸೂಚಿ, ಕ್ರಿಯಾಯೋಜನೆ ರೂಪಿಸದೇ ಇರುವುದು, ಕ್ರೀಡಾ ಸಾಮಾಗ್ರಿ ವಿತರಿಸದೇ ಇರುವುದು, ಕೈತೋಟ ನಿರ್ಮಾಣ ಮಾಡದಿರುವುದು ಬೆಳಕಿಗೆ ಬಂದಿದೆ. ಹಾಜರಾತಿ ಪುಸ್ತಕ ನಿರ್ವಹಣೆ, ಅಸೆಂಬ್ಲಿ ಸಹ ಮಾಡಿಸಿಲ್ಲ, ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ಮಾಡದಿರುವುದು ಮನವರಿಕೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಲ್ಲಾ ವಸತಿ ಶಾಲೆಗಳ ಸಮರ್ಪಕ ನಿರ್ವಹಣೆಗೆ ಸುತ್ತೋಲೆ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸ್ಮಾರ್ಟ್ (ಬೆಂಬಲಿತ, ಮಾರ್ಗದರ್ಶಿತ ಸ್ಪಂದನಾತ್ಮಕ ಬೋಧನೆ) ಕಾರ್ಯಕ್ರಮವನ್ನು ಆರಂಭಿಸಲಾಗಿದೆ. ಇಲಾಖೆಯ ಮುಖ್ಯಸ್ಥರು ವಿದ್ಯಾರ್ಥಿನಿಲಯಗಳ ಮೇಲ್ವಿಚಾರಕರಿಗೆ ಈ ಬಗ್ಗೆ ಸೂಕ್ತ ತಿಳಿವಳಿಕೆ ನೀಡಲಾಗಿದೆ. ಸ್ಮಾರ್ಟ್ ಕಾರ್ಯಕ್ರಮವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಸಾಧನೆಗೆ ಬೆಂಬಲವಾಗಿದೆ. ಜೊತೆಗೆ ವಸತಿ ನಿಲಯಗಳ ಸಮಗ್ರ ಸುಧಾರಣೆಯೂ ಮುಖ್ಯ ಗುರಿಯಾಗಿದೆ. ಹೀಗಾಗಿ ಸ್ವಚ್ಛ ಪರಿಸರ ಮತ್ತು ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಿ ವಸತಿ ನಿಲಯಗಳು ಇರಬೇಕಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವಸತಿ ಶಾಲೆಗಳನ್ನು ಶುಚಿತ್ವವಾಗಿ ಇಡಬೇಕು. ಅಡುಗೆ ತಯಾರಿಸುವ ಸಿಬ್ಬಂದಿ ಸಹ ಶುಚಿತ್ವದಿಂದ ಇರಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಹಾಜರಾತಿ ಇನ್ನಿತರ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಕಾರ್ಯಸೂಚಿಯ ಕ್ರಿಯಾಯೋಜನೆಯನ್ನು ರೂಪಿಸಬೇಕು. ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಅಸೆಂಬ್ಲಿ ಮಾಡಿಸಬೇಕು. ಪ್ರತಿದಿನ ಕನಿಷ್ಠ 30 ನಿಮಿಷಗಳ ಕಾಲ ಯೋಗಾಭ್ಯಾಸ ಮಾಡಿಸಬೇಕು. ಗ್ರಂಥಾಲಯ ವ್ಯವಸ್ಥೆ ಕಲ್ಪಿಸಬೇಕು. ವ್ಯಾಸಂಗದ ಜೊತೆ ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಸೂಕ್ತ ಮಾರ್ಗದರ್ಶನ ಮಾಡಬೇಕು. ಸ್ವಾತಂತ್ರ ಸಂಗ್ರಾಮದ ಮಹತ್ವವನ್ನು ತಿಳಿಸಬೇಕು. ಆಗಸ್ಟ್ 15ರಂದು ದ್ವಜಾರೋಹಣ ನೆರವೇರಿಸಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲೆಯ ಪರಿಸರ ಉತ್ತಮವಾಗಿರಲು ಕೈತೋಟ ನಿರ್ಮಾಣ ಮಾಡಬೇಕೆಂದು ಹೆಪ್ಸಿಬಾರಾಣಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಮುಂಬರುವ ತಪಾಸಣಾ ಸಂದರ್ಭದಲ್ಲಿ ತಾವು ಸೂಚಿಸಿರುವ ಅಂಶಗಳು ಪಾಲನೆಯಾಗದೇ ಲೋಪದೋಷಗಳು ಕಂಡುಬಂದಲ್ಲಿ ವಸತಿ ಶಾಲೆಯ ಮುಖ್ಯಸ್ಥರ ವಿರುದ್ಧ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಯವರು ಎಚ್ಚರಿಕೆ ನೀಡಿದ್ದಾರೆ.
ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಗೆ ಸಜೆ
ಚಾಮರಾಜನಗರ, ಆ. 12 (ಕರ್ನಾಟಕ ವಾರ್ತೆ):- ಅಕ್ರಮವಾಗಿ ಗಾಂಜಾ ಗಿಡವನ್ನು ಬೆಳೆದ ವ್ಯಕ್ತಿಯೊಬ್ಬರಿಗೆ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 2 ವರ್ಷಗಳ ಕಠಿಣ ಸಜೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಯ್ಯನಹಳ್ಳಿ ಗ್ರಾಮದÀ ರಂಗಸ್ವಾಮಿ ಅವರು ತಮ್ಮ ಜಮೀನಿನಲ್ಲಿ ಜೋಳದ ಫಸಲಿನ ಜತೆಗೆ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆಸಿದ್ದರು. 2013ರ ಡಿಸೆಂಬರ್ 13ರಂದು ರಾಮಾಪುರ ಪೊಲೀಸ್ ನಿರೀಕ್ಷಕರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ಜಮೀನಿನಲ್ಲಿ ಬೆಳೆಸಿದ್ದ 18 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದರು.
ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದು ರುಜುವಾತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಅವರು ಆಗಸ್ಟ್ 3ರಂದು ಅಪರಾಧಿಗೆ 2 ವರ್ಷಗಳ ಕಠಿಣ ಸಜೆ ಮತ್ತು ಒಂದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ಗ್ರಾ ಪಂ ಚುನಾವಣೆ: ವೇಳಾಪಟ್ಟಿ ಪ್ರಕಟ
ಚಾಮರಾಜನಗರ, ಆ. 12 (ಕರ್ನಾಟಕ ವಾರ್ತೆ):- ಇದೇ ಸೆಪ್ಟೆಂಬರ್À, ಅಕ್ಟೋಬರ್, ಮತ್ತು ನವೆಂಬರ್ ಮಾಹೆಯವರೆಗೆ ಅವಧಿ ಮುಕ್ತಾಯವಾಗುವ ಹಾಗೂ ಸದಸ್ಯರ ರಾಜೀನಾಮೆ, ನಿಧನ, ಇನ್ನಿತರ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಗ್ರಾಮ ಪಂಚಾಯಿತಿಯ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಆಗಸ್ಟ್ 16 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸುವರು. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 19 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯು ಆಗಸ್ಟ್ 20 ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಆಗಸ್ಟ್ 22 ಕಡೆಯ ದಿನವಾಗಿದೆ. ಆಗಸ್ಟ್ 28 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ( ಅವಶ್ಯವಿದ್ದರೆ) ನಡೆಸಲಾಗುತ್ತದೆ. ಮರು ಮತದಾನ ಅವಶ್ಯವಿದ್ದರೆ ಆಗಸ್ಟ್ 30 ರಂದು ನಡೆಸಲಾಗುತ್ತದೆ. ಆಗಸ್ಟ್ 31 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ 3 ಗ್ರಾಮ ಪಂಚಾಯಿತಿಯ 16 ಹಾಗೂ ಚಾಮರಾಜನಗರ ತಾಲ್ಲೂಕಿನ 2 ಗ್ರಾಮ ಪಂಚಾಯಿತಿಯ 2 ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಒಟ್ಟಾರೆ 5 ಗ್ರಾಮ ಪಂಚಾಯಿತಿಯ 18 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ.
ಕುರಟ್ಟಿಹೊಸೂರು ಗ್ರಾಮ ಪಂಚಾಯಿತಿಯ ಕುgಟ್ಟಿ ಹೊಸೂರು ಕ್ಷೇತ್ರ ಸಂಖ್ಯೆ 1 ರ 2 ಸ್ಥಾನಕ್ಕೆ ( ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ‘ಬ’ ವರ್ಗ ) ಕ್ಷೇತ್ರ 2 ರ 3 ಸ್ಥಾನಕ್ಕೆ ( ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ ಮತ್ತು ಸಾಮಾನ್ಯ( ಮಹಿಳೆ)) ಎಲ್.ಪಿ.ಎಸ್ ಪ್ರಾಜೆಕ್ಟ್ ಕ್ಷೇತ್ರದ 3 ಸದಸ್ಯ ಸ್ಥಾನಕ್ಕೆ ( ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ ಮತ್ತು ಸಾಮಾನ್ಯ ( ಮಹಿಳೆ) ), ದಂಟಳ್ಳಿ 1ನೇ ಕ್ಷೇತ್ರದ 2 ಸ್ಥಾನಕ್ಕೆ ( ಸಾಮಾನ್ಯ, ಸಾಮಾನ್ಯ (ಮಹಿಳೆ)), ದಂಟಳ್ಳಿ 2ನೇ ಕ್ಷೇತ್ರದ 3 ಸ್ಥಾನಕ್ಕೆ ( ಪರಿಶಿಷ್ಟ ಪಂಗಡ (ಮಹಿಳೆ), ಹಿಂದುಳಿದ ’ಅ’ ವರ್ಗ ಮತ್ತು ಸಾಮಾನ್ಯ ), ಚೆಂಗಡಿ ಕ್ಷೇತ್ರದ 1 ಸ್ಥಾನಕ್ಕೆ (ಪರಿಶಿಷ್ಟ ಜಾತಿ (ಮಹಿಳೆ) ) ಚುನಾವಣೆ ನಿಗದಿಯಾಗಿದೆ.
ಶಾಗ್ಯ ಗ್ರಾಮ ಪಂಚಾಯಿತಿಯ 2ನೇ ಕ್ಷೇತ್ರದ 1 ಸ್ಥಾನಕ್ಕೆ (ಪರಿಶಿಷ್ಟ ಪಂಗಡ) ಮತ್ತು ಸಿದ್ದಯ್ಯನಪುರ ಗ್ರಾಮ ಪಂಚಾಯಿತಿಯ 2ನೇ ಕ್ಷೇತ್ರದ 1 ಸ್ಥಾನಕ್ಕೆ (ಸಾಮಾನ್ಯ) ಚುನಾವಣೆ ನಿಗದಿಯಾಗಿದೆ.
ಚಾಮರಾಜನಗರ ತಾಲ್ಲೂಕಿನ ಮಸಣಾಪುರ ಗ್ರಾಮ ಪಂಚಾಯಿತಿಯ 1ನೇ ಕ್ಷೇತ್ರದ ಒಂದು ಸ್ಥಾನಕ್ಕೆ (ಪರಿಶಿಷ್ಟ ಜಾತಿ (ಮಹಿಳೆ)), ಮಂಗಲ ಗ್ರಾಮ ಪಂಚಾಯಿತಿಯ 2ನೇ ಕ್ಷೇತ್ರದ ಒಂದು ಸ್ಥಾನಕ್ಕೆ (ಸಾಮಾನ್ಯ (ಮಹಿಳೆ)) ಚುನಾವಣೆ ನಿಗದಿಯಾಗಿದೆ.
ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಗಸ್ಟ್ 16 ರಿಂದ 31 ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿÀ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶೇಷ ತರಬೇತಿ ಕೇಂದ್ರ ನಿರ್ವಹಣೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 12 (ಕರ್ನಾಟಕ ವಾರ್ತೆ):- ಶಾಲೆಯಿಂದ ಹೊರಗುಳಿದ ಮಕ್ಕಳ ಪೈಕಿ 20 ಮಕ್ಕಳಿಗೆ ಬಿಳಿಗಿರಿ ರಂಗನ ಬೆಟ್ಟದ ಕೆರೆದಿಂಬ ಗಿರಿಜನ ಹಾಡಿಯಲ್ಲಿ ವಸತಿ ಸಹಿತ ವಿಶೇಷ ತರಬೇತಿ ಕೇಂದ್ರವನ್ನು ತೆರೆಯಲು ಉದ್ದೇಶಿಸಿದ್ದು, ಇದರ ನಿರ್ವಹಣೆಗೆ ಆಸಕ್ತ ಸರ್ಕಾರೇತರ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಆಸಕ್ತ ಸರ್ಕಾರೇತರ ಸಂಘ ಸಂಸ್ಥೆಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸರ್ವ ಶಿಕ್ಷಣ ಅಭಿಯಾನ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಭರ್ತಿಮಾಡಿ ಆಗಸ್ಟ್ 19 ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ತೋಟಗಾರಿಕೆ ಇಲಾಖೆ ಯೋಜನೆಯ ಸೌಲಭ್ಯ ಸಹಾಯಧನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 12 (ಕರ್ನಾಟಕ ವಾರ್ತೆ):- ತೋಟಗಾರಿಕೆ ಇಲಾಖೆಯು 2016-17ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಇನ್ನಿತರ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿದೆ.
ಸೌಲಭ್ಯ ಸಹಾಯಧನ ಪಡೆಯಲು ಸಣ್ಣ ಅತೀ ಸಣ್ಣ ರೈತರನ್ನು ಆಯ್ಕೆಗೆ ಪರಿಗಣಿಸಿದ ಬಳಿಕ ದೊಡ್ಡ ರೈತರನ್ನು ಪರಿಗಣಿಸಲಾಗುತ್ತದೆ. ಇಲಾಖೆಯಿಂದ ಈ ಹಿಂದೆ ಸಹಾಯಧನ ಪಡೆದ ಫಲಾನುಭವಿಗಳನ್ನು ಮತ್ತೆ ಆಯ್ಕೆ ಮಾಡಲಾಗುವುದಿಲ್ಲ. ಹಿಂದಿನ 3 ವರ್ಷಗಳ ಅವಧಿಯಲ್ಲಿ ಸೌಲಭ್ಯ ಪಡೆದಿರುವವರನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದಿಲ್ಲ. ಪೂರಕ ಘಟಕಗಳನ್ನು ಒಂದೇ ವರ್ಷದಲ್ಲಿ ಒದಗಿಸಲು ಸಾಧ್ಯವಾಗದೇ ಇದ್ದಲ್ಲಿ ಅಂತಹ ಘಟಕಗಳನ್ನು ಮುಂದಿನ ವರ್ಷಗಳಲ್ಲಿ ಒದಗಿಸಲು ಪರಿಗಣಿಸಲಾಗುವುದು.
ಇಲಾಖೆಯ ಯಾವುದೇ ಯೋಜನೆ ಅಥವಾ ಉಪಯೋಜನೆಯಡಿ ವಿನಿಯೋಗಿಸಲಾಗುವ ಅನುದಾನದಲ್ಲಿ ಶೇ. 20 ರಷ್ಟನ್ನು ರೈತ ಉತ್ಪಾದಕ ಸಂಘಗಳ ರೈತರಿಗೆ ಕಾಯ್ದಿರಿಸಲಾಗಿದೆ. ಯಾವುದೇ ಸೌಲಭ್ಯಕ್ಕೆ ನಿಗದಿತ ಗುರಿಗಿಂತ ಹೆಚ್ಚು ಸಂಖ್ಯೆಯ ಅರ್ಜಿಗಳು ಬಂದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಫಲಾನುಭವಿಗಳಿಗೆ ಕಾರ್ಯಾದೇಶವನ್ನು ಕ್ರಮಾಂಕ ಅನುಸಾರವಾಗಿ ನೀಡಿ ಪ್ರಾರಂಭಿಸಲು 1 ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ ಕಾರ್ಯ ಪ್ರಾರಂಭಿಸದೇ ಇದ್ದಲ್ಲಿ ಮುಂದಿನ ಕ್ರಮಾಂಕದ ಫಲಾನುಭವಿಗೆ ಆದ್ಯತೆ ಕೊಡಲಾಗುತ್ತದೆ.
ಓರ್ವ ಅರ್ಜಿದಾರರು ಹೆಚ್ಚಿನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು, ಅವರು ಸಲ್ಲಿಸಿದ ಸೌಲಭ್ಯಗಳಿಗೆ ಸಾಕಷ್ಟು ಸಂಖ್ಯೆಯ ಇತರೆ ಅರ್ಜಿದಾರರು ಇಲ್ಲದೇ ಇದ್ದಲ್ಲಿ ಅಂತಹ ಅರ್ಜಿದಾರರಿಗೆ 2ಕ್ಕಿಂತ ಹೆಚ್ಚಿನ ಯೋಜನೆಗಳಿಗೆ ಸಹಾಯಧನ ಲಭಿಸಲಿದೆ.
ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳ ಸಹಾಯಧನ ಮತ್ತು ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 20 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಪೂರಕ ದಾಖಲಾತಿಗಳನ್ನು ಆಯಾ ತಾಲ್ಲೂಕಿನ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ಜಿ.ಪಂ) ಚಾಮರಾಜನಗರ 08226-223049, ಗುಂಡ್ಲುಪೇಟೆ 08229-222851, ಕೊಳ್ಳೇಗಾಲ 08224-253449, ಸಹಾಯಕ ತೋಟಗಾರಿಕಾ ನಿರ್ದೇಶಕರು ಯಳಂದೂರು 08226-240600, ತೋಟಗಾರಿಕೆ ಉಪನಿರ್ದೇಶಕರು ಜಿ.ಪಂ ಚಾಮರಾಜನಗರ 08226-225022 ಮತ್ತು ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 14ರಂದು ಜಿಲ್ಲೆಗೆ ಅರಸು ರಥಯಾತ್ರೆ ಆಗಮನ
ಚಾಮರಾಜನಗರ, ಆ. 13 (ಕರ್ನಾಟಕ ವಾರ್ತೆ):- ಸಾಮಾಜಿಕ ಸಮಾನತೆಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಅರಸು ಅವರ ಪ್ರಮುಖ ಸಾಧನೆಗಳನ್ನು ಬಿಂಬಿಸುವ ಮಾಹಿತಿಯನ್ನು ಒಳಗೊಂಡ ಅತ್ಯಾಕರ್ಷಕ ರಥಯಾತ್ರೆಯು ಜಿಲ್ಲೆಗೆ ಆಗಸ್ಟ್ 14ರಂದು ಮಧ್ಯಹ್ನ 12 ಗಂಟೆಗೆ ಆಗಮಿಸಲಿದೆ.
ಮೈಸೂರಿನಿಂದ ಹೊರಟು ಟಿ.ನರಸೀಪುರ ಮಾರ್ಗವಾಗಿ ಜಿಲ್ಲೆಗೆ ಆಗಮಿಸಲಿರುವ ರಥಯಾತ್ರೆಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಇತರೆ ಗಣ್ಯರು ಬರಮಾಡಿಕೊಳ್ಳಲಿದ್ದಾರೆ. ಟಗರಪುರ, ಟಗರಪುರಮೋಳೆ, ಚಿಲಕವಾಡಿ, ಕುಂತೂರು ಜಂಕ್ಷನ್, ಉತ್ತಂಬಳ್ಳಿ, ಮದ್ದೂರು, ಅಗರ-ಮಾಂಬಳ್ಳಿ, ಯರಿಯೂರು ಮೂಲಕ ಯಳಂದೂರು ಪಟ್ಟಣಕ್ಕೆ ಬಂದು ಸೇರಲಿದೆ. ಯಳಂದೂರು ಪಟ್ಟಣದಲ್ಲಿ ಶಾಸಕರಾದ ಎಸ್.ಜಯಣ್ಣ ಅವರು ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಯಳಂದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥಯಾತ್ರೆ ಸಂಚರಿಸಿ ಸಂತೇಮರಹಳ್ಳಿ ಮೂಲಕ ಜಿಲ್ಲಾ ಕೇಂದ್ರಕ್ಕೆ ಬರಲಿದೆ.
ಆಗಸ್ಟ್ 14ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಕೇಂದ್ರಕ್ಕೆ ಆಗಮಿಸಲಿರುವ ಅರಸು ರಥಯಾತ್ರೆಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ರವರು ಸ್ವಾಗತಿಸಿ ಚಾಲನೆ ನೀಡುವರು. ನಂತರ ಚಾಮರಾಜನಗರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ರಥಯಾತ್ರೆ ಸಂಚಾರ ಮುಂದುವರೆಯಲಿದೆ. ಬಳಿಕ ನಗರದಲ್ಲೇ ರಥ ಉಳಿದುಕೊಳ್ಳಲಿದೆ. ಆಗಸ್ಟ್ 15ರ ಬೆಳಗ್ಗೆ ಸಂತೇಮರಹಳ್ಳಿ, ಮೂಗೂರು, ಟಿ.ನರಸೀಪುರ ಮಾರ್ಗವಾಗಿ ಮಂಡ್ಯ ನಗರಕ್ಕೆ ತೆರಳಲಿದೆ.
ಆಗಸ್ಟ್ 14ರಂದು ನಗರದಲ್ಲಿ ಅರಸು-ಕನಸು ನಾಟಕ ಪ್ರದರ್ಶನ
ಚಾಮರಾಜನಗರ, ಆ. 13 (ಕರ್ನಾಟಕ ವಾರ್ತೆ):- ಡಿ.ದೇವರಾಜ ಅರಸು ಅವರ ಶತಮಾನೋತ್ಸವ ಆಚರಣೆ ಅಂಗವಾಗಿ ಆಗಸ್ಟ್ 14ರಂದು ಸಂಜೆ 6.30 ಗಂಟೆಗೆ ನಗರದ ಜಿಲ್ಲಾಢಳಿತ ಭವನದಲ್ಲಿರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಡಿ.ದೇವರಾಜ ಅರಸು ರವರ ಸಾಧನೆ ಕುರಿತ ರಂಗನಿರ್ದೇಶಕರಾದ ಪ್ರಮೋದ್ ಶಿಗ್ಗಾಂವ್ ರವರ ನಿರ್ದೇಶನದಲ್ಲಿ ಅರಸು-ಕನಸು ಎಂಬ ನಾಟಕ ಪ್ರದರ್ಶನವನ್ನು ಏರ್ಪಾಡು ಮಾಡಲಾಗಿದೆ.
ನಾಟಕ ಪ್ರದರ್ಶನವನ್ನು ಜಿಲ್ಲೆಯ ಎಲ್ಲಾ ನಾಗರೀಕರು ವೀಕ್ಷಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ.
ಆ. 15ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ
ಚಾಮರಾಜನಗರ, ಆ. 13 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 70ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಧ್ವಜಾರೋಹಣ ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು.
ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಜೆ 5.30 ರಿಂದ 6.30ರವರೆಗೆ ಜ್ಯೋತಿಗೌಡನಪುರದ ಜೆ.ಬಿ. ಮಹೇಶ್ ಮತ್ತು ತಂಡದವರಿಂದ ದೇಶಭಕ್ತಿ ಗೀತೆ ಗಾಯನ, ಸಂಜೆ 6.30 ರಿಂದ 7.30ರವರೆಗೆ ಶಾಲಾಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. 7.30 ರಿಂದ 8.30ರವರೆಗೆÉ ಮೈಸೂರಿನ ನಿಮಿಶಾಂಭ ನೃತ್ಯಾಲಯದ ಆಪ್ತಮಿತ್ರ ಖ್ಯಾತಿಯ ವಿದ್ವಾನ್ ಶ್ರೀಧರ್ ಜೈನ್ ಮತ್ತು ತಂಡದವರು ಭಾರತೀಯ ನೃತ್ಯ ವೈಭವ ಕುರಿತ ನೃತ್ಯ ರೂಪಕ ಪ್ರಸ್ತುತ ಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment