Monday, 22 August 2016
ಗೌರಿ ಗಣೇಶ ಪ್ರತಿಷ್ಠಾಪನೆ : ಅನುಮತಿ ಕಡ್ಡಾಯ16-08-2016 ರಿಂದ 23-08-2016 ರವೆಗಿನ ಚಾಮರಾಜನಗರ ಪ್ರಮುಖ ಸುದ್ದಿಗಳು
ಗೌರಿ ಗಣೇಶ ಪ್ರತಿಷ್ಠಾಪನೆ : ಅನುಮತಿ ಕಡ್ಡಾಯ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಜಿಲ್ಲೆಯಲ್ಲಿ ಗೌರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಸಂಘಸಂಸ್ಥೆಗಳು ನಿಗದಿಮಾಡಿರುವ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸುವುದರ ಜತೆಗೆ ಕಡ್ಡಾಯವಾಗಿ ಅನುಮತಿ ಪಡೆದು ಆಗಸ್ಟ್ 25ರೊಳಗೆ ಸಂಬಂಧಪಟ್ಟ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಲಿಖಿತವಾಗಿ ಸಲ್ಲಿಸುವಂತೆ ಪೊಲೀಸ್ ಇಲಾಖೆ ತಿಳಿಸಿದೆ.
ಗೌರಿ ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಗಳ ಉಸ್ತುವಾರಿ ಮುಖ್ಯಸ್ಥರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ ಹಾಗೂ ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಎಲ್ಲ ಆಗುಹೋಗುಗಳಿಗೆ ಜವಾಬ್ದಾರರೆಂಬ ಬಗ್ಗೆ, ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಸ್ಥಳೀಯ ನ್ಯಾಯಾಲಯ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ನೀಡುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಬಗ್ಗೆ ಅನ್ಯಧರ್ಮ, ಮತ, ಸಂಘಟನೆ, ಜನಾಂಗ, ಸಾರ್ವಜನಿಕ ವ್ಯಕ್ತಿಗಳಿಗೆ ನೋವಾಗದಂತೆ ನಡೆದುಕೊಳ್ಳುವ ಬಗ್ಗೆ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.
ಪ್ರತಿಷ್ಠಾಪನೆ ದಿನ ವಿಶೇಷ ಕಾರ್ಯಕ್ರಮಗಳ ಆಯೋಜನೆ, ಭಾಗವಹಿಸಲಿರುವ ವಿಶೇಷ ಅತಿಥಿಗಳ ವಿವರ, ಸಾಂಸ್ಕøತಿಕ ಕಾರ್ಯಕ್ರಮಗಳು, ಮೆರವಣಿಗೆ, ವಿಸರ್ಜನಾ ದಿನ, ಮೆರವಣಿಗೆಯ ಮಾರ್ಗ ವಿವರಗಳನ್ನು ಸಲ್ಲಿಸಬೇಕು. (ಠಾಣಾಧಿಕಾರಿಗಳೊಂದಿಗೆ ಖುದ್ದು ಚರ್ಚಿಸಿ ಕಡ್ಡಾಯವಾಗಿ ಅನುಮೋದನೆ ಪಡೆಯಬೇಕು)
ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಸ್ಥಳ, ವಿಳಾಸ ಹಾಗೂ ಸ್ಥಳದ ಮಾಲೀಕರಿಂದ ಪಡೆದ ಅನುಮತಿ ಪತ್ರ (ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ನಗರಸಭೆ, ಖಾಸಗಿ ವ್ಯಕ್ತಿಗಳು), ಸ್ಥಳೀಯ ವಿದ್ಯುತ್ ಪ್ರಾಧಿಕಾರದಿಂದ ಪಡೆದ ನಿರಾಪೇಕ್ಷಣ ಪತ್ರ, ಅಗ್ನಿಶಾಮಕ ದಳದವರಿಂದ ಪಡೆದ ನಿರಾಪೇಕ್ಷಣ ಪತ್ರ ಸಲ್ಲಿಸಬೇಕು. ಸ್ಥಳೀಯ ಠಾಣೆಯಿಂದ ಧ್ವನಿವರ್ಧಕ ಬಳಕೆಗೆ ಪಡೆದ ಅನುಮತಿ ಪತ್ರವನ್ನು ನೀಡಬೇಕು.
ಕಾರ್ಯಕ್ರಮ ಸಂಬಂಧ ಹಾಕಲಾಗುವ ಎಲ್ಲಾ ಫ್ಲೆಕ್ಸ್, ಪೋಸ್ಟರ್, ಫೋಟೋ ಇನ್ನಿತರ ಸಾಮಗ್ರಿಗಳಿಗೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆದಿರಬೇಕು. ಅನ್ಯಧರ್ಮ, ಮತ, ಸಂಘಟನೆ, ಜನಾಂಗ, ಸಾರ್ವಜನಿಕ ವ್ಯಕ್ತಿಗಳಿಗೆ ನೋವುಂಟು ಮಾಡದಂತಿರಬೇಕು. ವಿಸರ್ಜನಾ ಸ್ಥಳದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮ, ಜೀವರಕ್ಷಕ ಸಾಧನಗಳ ವಿವರ ಒದಗಿಸಬೇಕು.
ಪ್ರತಿಷ್ಠಾಪಿತ ಮೂರ್ತಿಯ ರಕ್ಷಣೆಗೆ ಸ್ವಯಂಸೇವಕರನ್ನು ನಿಯೋಜಿಸಿಕೊಳ್ಳಬೇಕು. ನಿಯೋಜಿತರಾದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆವುಳ್ಳ ಭಾವಚಿತ್ರ ಹೊಂದಿದ ಐಡಿ ಕಾರ್ಡ್, ಹಗಲುರಾತ್ರಿ ನಿಯೋಜಿಸಿರುವ ವೇಳಾಪಟ್ಟಿ ನೀಡಬೇಕು. ಪ್ರತಿಷ್ಠಾಪಿತ ಸ್ಥಳದಲ್ಲಿ ಒಂದು ರಿಜಿಸ್ಟರ್ ಇಟ್ಟು ಕಾವಲು ವಿವರವನ್ನು ನಮೂದಿಸಬೇಕು.
ಸಾರ್ವಜನಿಕರಿಂದ ಗಣಪತಿ ಪ್ರತಿಷ್ಠಾಪನೆಗೆ ಬಲವಂತವಾಗಿ ಚಂದಾ ವಸೂಲಿ ಮಾಡುವುದು ಕಾನೂನುಬಾಹಿರಬಾಗಿದೆ. ಲಾಟರಿ ಇನ್ನಿತರ ಯೋಜನೆಗಳ ಮುಖಾಂತರವೂ ಹಣ ಸಂಗ್ರಹಣೆ ಮಾಡುವಂತಿಲ್ಲ. ಇಂತಹ ಪ್ರಕ್ರಿಯೆ ಕಂಡುಬಂದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿರುವಂತೆ ಮಣ್ಣಿನಿಂದ ಮಾಡಿದ ಬಣ್ಣರಹಿತ ಪರಿಸರಸ್ನೇಹಿ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಅಲಂಕಾರಕ್ಕೆ ನೈಸರ್ಗಿಕ ಸಾಮಗ್ರಿಗಳನ್ನು ಬಳಸಬೇಕು. ಸಾಧ್ಯವಾದಷ್ಟು ಮನೆಯಲ್ಲಿ ಬಕೆಟ್‍ಗಳಲ್ಲಿ ನೀರು ತುಂಬಿಸಿ ಮೂರ್ತಿಯನ್ನು ವಿಸರ್ಜಿಸಬೇಕು. ಇಲ್ಲವೇ ಲಭ್ಯವಿರುವ ಕೆರೆಗಳಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಸಂಚಾರಿ ವಿಸರ್ಜನಾ ವಾಹನ ಬಳಸಿ ವಿಸರ್ಜನೆ ಮಾಡಬೇಕು. ವಿಸರ್ಜನೆಗೆ ಮುನ್ನ ಅಲಂಕಾರಿಕ ವಸ್ತುಗಳನ್ನು ತೆಗೆಯಬೇಕು. ವಿಸರ್ಜನಾ ಮೆರವಣಿಗೆಯಲ್ಲಿ ಸಾರ್ವಜನಿಕರಿಗೆ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ನೋಡಿಕೊಳ್ಳಬೇಕು.
ಗಣಪತಿ ಮೂರ್ತಿ ಷ್ರತಿಷ್ಠಾಪನೆ ಸಂಬಂಧ ನೀಡಲಾಗಿರುವ ಎಲ್ಲಾ ಕ್ರಮಗಳನ್ನು ಪಾಲನೆ ಮಾಡಬೇಕು. ನಿಬಂಧನೆಗಳನ್ನು ಉಲ್ಲಂಘಿಸುವುದು, ಶಾಂತಿಭಂಗ ಉಂಟುಮಾಡುವುದು ಕಂಡುಬಂದಲ್ಲಿ ಪೊಲೀಸ್ ಅಧೀಕ್ಷಕರು, ದೂರವಾಣಿ ಸಂಖ್ಯೆ 08226-222243, ಮೊಬೈಲ್ 9480804601, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ದೂರವಾಣಿ ಸಂಖ್ಯೆ 08226-225979, ಮೊಬೈಲ್ 9480804604, ಡಿಎಸ್‍ಪಿ, ಚಾಮರಾಜನಗರ ದೂರವಾಣಿ ಸಂಖ್ಯೆ 08226-222090, ಮೊಬೈಲ್ 9480804620, ಡಿಎಸ್ ಪಿ ಕೊಳ್ಳೇಗಾಲ, ದೂರವಾಣಿ ಸಂಖ್ಯೆ 08224-252840, ಮೊಬೈಲ್ 9480804621, ಜಿಲ್ಲಾ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08226-222383, ಮೊಬೈಲ್ 9480804600ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.
ಗ್ರಾ ಪಂ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಅಧಿಸೂಚನೆ
ಚಾಮರಾಜನಗರ, ಆ. 16 (ಕರ್ನಾಟಕ ವಾರ್ತೆ):- ಅವಧಿ ಮುಕ್ತಾಯವಾಗಲಿರುವ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳ ಚುನಾವಣೆ ಹಾಗೂ ಉಪಚುನಾವಣೆಗೆ ಜಿಲ್ಲಾಧಿಕಾರಿ ಬಿ. ರಾಮು ಇಂದು ಅಧಿಸೂಚನೆ ಹೊರಡಿಸಿದರು.
ಅವಧಿ ಮುಕ್ತಾಯವಾಗಲಿರುವ ಕೊಳ್ಳೇಗಾಲ ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಯ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಶಾಗ್ಯ, ಸಿದ್ದಯ್ಯನಪುರ ಗ್ರಾಮ ಪಂಚಾಯಿತಿಯ ತಲಾ ಒಂದು ಸ್ಥಾನಕ್ಕೆ ಉಪ ಚುನಾವಣೆ ನಿಗದಿಯಾಗಿದೆ. ಚಾಮರಾಜನಗರ ತಾಲೂಕಿನ ಮಸಣಾಪುರ ಹಾಗೂ ಮಂಗಲ ಗ್ರಾಮ ಪಂಚಾಯಿತಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ.
ನಾಮಪತ್ರ ಸಲ್ಲಿಕೆಗೆ ಆಗಸ್ಟ್ 19 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯು ಆಗಸ್ಟ್ 20ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಆಗಸ್ಟ್ 22 ಕಡೆಯ ದಿನವಾಗಿದೆ. ಆಗಸ್ಟ್ 28ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ (ಅವಶ್ಯವಿದ್ದರೆ) ನಡೆಸಲಾಗುತ್ತದೆ. ಮರು ಮತದಾನ ಅವಶ್ಯವಿದ್ದರೆ ಆಗಸ್ಟ್ 30ರಂದು ನಡೆಸಲಾಗುತ್ತದೆ. ಆಗಸ್ಟ್ 31ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ. ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಕುರಟ್ಟಿ ಹೊಸೂರು ಕ್ಷೇತ್ರ ಸಂಖ್ಯೆ 1 ರ 2 ಸ್ಥಾನಕ್ಕೆ (ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ‘ಬ’ ವರ್ಗ) ಕ್ಷೇತ್ರ 2ರ 3 ಸ್ಥಾನಕ್ಕೆ (ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ ಮತ್ತು ಸಾಮಾನ್ಯ(ಮಹಿಳೆ)) ಎಲ್.ಪಿ.ಎಸ್ ಪ್ರಾಜೆಕ್ಟ್ ಕ್ಷೇತ್ರದ 3 ಸದಸ್ಯ ಸ್ಥಾನಕ್ಕೆ (ಹಿಂದುಳಿದ ‘ಅ’ ವರ್ಗ (ಮಹಿಳೆ), ಸಾಮಾನ್ಯ ಮತ್ತು ಸಾಮಾನ್ಯ (ಮಹಿಳೆ)), ದಂಟಳ್ಳಿ 1ನೇ ಕ್ಷೇತ್ರದ 2 ಸ್ಥಾನಕ್ಕೆ (ಸಾಮಾನ್ಯ, ಸಾಮಾನ್ಯ (ಮಹಿಳೆ)), ದಂಟಳ್ಳಿ 2ನೇ ಕ್ಷೇತ್ರದ 3 ಸ್ಥಾನಕ್ಕೆ (ಪರಿಶಿಷ್ಟ ಪಂಗಡ (ಮಹಿಳೆ), ಹಿಂದುಳಿದ ’ಅ’ ವರ್ಗ ಮತ್ತು ಸಾಮಾನ್ಯ), ಚೆಂಗಡಿ ಕ್ಷೇತ್ರದ 1 ಸ್ಥಾನಕ್ಕೆ (ಪರಿಶಿಷ್ಟ ಜಾತಿ (ಮಹಿಳೆ)) ಚುನಾವಣೆ ನಿಗದಿಯಾಗಿದೆ.
ಶಾಗ್ಯ ಗ್ರಾಮ ಪಂಚಾಯಿತಿಯ 2ನೇ ಕ್ಷೇತ್ರದ 1 ಸ್ಥಾನಕ್ಕೆ (ಪರಿಶಿಷ್ಟ ಪಂಗಡ) ಮತ್ತು ಸಿದ್ದಯ್ಯನಪುರ ಗ್ರಾಮ ಪಂಚಾಯಿತಿಯ 2ನೇ ಕ್ಷೇತ್ರದ 1 ಸ್ಥಾನಕ್ಕೆ (ಸಾಮಾನ್ಯ) ಚುನಾವಣೆ ನಿಗದಿಯಾಗಿದೆ.
ಚಾಮರಾಜನಗರ ತಾಲ್ಲೂಕಿನ ಮಸಣಾಪುರ ಗ್ರಾಮ ಪಂಚಾಯಿತಿಯ 1ನೇ ಕ್ಷೇತ್ರದ ಒಂದು ಸ್ಥಾನಕ್ಕೆ (ಪರಿಶಿಷ್ಟ ಜಾತಿ (ಮಹಿಳೆ)), ಮಂಗಲ ಗ್ರಾಮ ಪಂಚಾಯಿತಿಯ 2ನೇ ಕ್ಷೇತ್ರದ ಒಂದು ಸ್ಥಾನಕ್ಕೆ (ಸಾಮಾನ್ಯ (ಮಹಿಳೆ)) ಚುನಾವಣೆ ನಿಗದಿಯಾಗಿದೆ.
ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ 3 ಗ್ರಾಮ ಪಂಚಾಯಿತಿಯ 16 ಸ್ಥಾನಗಳಿಗೆ ಹಾಗೂ ಚಾಮರಾಜನಗರ ತಾಲ್ಲೂಕಿನ 2 ಗ್ರಾಮ ಪಂಚಾಯಿತಿಯ 2 ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಒಟ್ಟಾರೆ 5 ಗ್ರಾಮ ಪಂಚಾಯಿತಿಯ 18 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಶಲಕರ್ಮಿ ವಸತಿ ಕಾರ್ಯಾಗಾರ ನಿರ್ಮಾಣ ನೆರವಿಗೆ ಪ.ಜಾ, ಪ.ಪಂ. ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 16 (ಕರ್ನಾಟಕ ವಾರ್ತೆ):- ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಕೈಗಾರಿಕಾ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣ ಮಾಡಿಕೊಳ್ಳಲು ನೀಡುವ ನೆರವಿಗಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿದಿರು, ಬೆತ್ತ, ಬಡಗಿ, ಕಮ್ಮಾರಿಕೆ, ಕುಂಬಾರಿಕೆ, ಚರ್ಮ ವಸ್ತುಗಳ ತಯಾರಿಕೆ, ಟೈಲರಿಂಗ್ ಹೊರತುಪಡಿಸಿದ ಕರಕುಶಲ ವಸ್ತು ತಯಾರಿಕೆ, ಜನರಲ್ ಎಂಜಿನಿಯರಿಂಗ್, ಚಾಪೆ, ಬುಟ್ಟಿ ಹೆಣೆಯುವುದು, ತೆಂಗಿನ ನಾರಿನ ಉತ್ಪನ್ನ ತಯಾರಿಕೆ ವೃತ್ತಿಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಸತಿ ಕಾರ್ಯಾಗಾರ ನಿರ್ಮಾಣ ಮಾಡಿಕೊಳ್ಳಲು ನೆರವು ನೀಡಲಾಗುತ್ತದೆ.
ಅರ್ಜಿದಾರರು ಚಟುವಟಿಕೆಯಲ್ಲಿ ತೊಡಗಿದ್ದು ಗ್ರಾಮ ಪಂಚಾಯಿತಿಯಿಂದ ದೃಢೀಕರಣ ಪತ್ರ ಪಡೆದು ಲಗತ್ತಿಸಬೇಕು. ವಸತಿ ಕಾರ್ಯಾಗಾರ ನಿರ್ಮಿಸಿಕೊಳ್ಳಲು ನಿವೇಶನ ಹೊಂದಿರಬೇಕು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿಯಲ್ಲಿ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 25ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ವಿವಿಧ ತರಬೇತಿಗೆ ಪ.ಜಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 16 (ಕರ್ನಾಟಕ ವಾರ್ತೆ):- ಜಿಲ್ಲಾ ಕೈಗಾರಿಕಾ ಕೇಂದ್ರವು ವಿಶೇಷ ಘಟಕ ಯೋಜನೆಯಡಿ ವಿವಿಧ ಆಧುನೀಕರಣ ಮತ್ತು ತಾಂತ್ರಿಕ ತರಬೇತಿ ನೀಡಲಿದ್ದು ಪರಿಶಿಷ್ಟ ಜಾತಿಯ ಯುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರುವವರಿಗೆ ಕಂಪ್ಯೂಟರ್ ಆಫೀಸ್ ಮೇನೇಜ್‍ಮೆಂಟ್, ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಹೊಂದಿರುವವರಿಗೆ ಬ್ಯುಟಿಷಿಯನ್, 8ನೇ ತರಗತಿ ತೇರ್ಗಡೆಯಾದವರಿಗೆ ಫ್ಯಾಷನ್ ಡಿಸೈನಿಂಗ್ ತರಬೇತಿ ನೀಡಲಾಗುತ್ತದೆ.
ಚಾಮರಾಜನಗರದ ಮರಿಯಾಲ ಜೆಎಸ್‍ಎಸ್ ಕೌಶಲ್ಯ ತರಬೇತಿ ಸಂಸ್ಥೆ, ಚಾಮರಾಜನಗರ ಹಾಗೂ ಯಳಂದೂರಿನ ಕಿಯೋನಿಕ್ಸ್, ಕಾವ್ಯಶ್ರೀ ಗಾರ್ಮೆಂಟ್ಸ್, ಕೊಳ್ಳೇಗಾಲದಲ್ಲಿರುವ ಕಾವ್ಯಶ್ರೀ ಗಾರ್ಮೆಂಟ್ಸ್‍ನಲ್ಲಿ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.
ತರಬೇತಿ ಅವಧಿಯಲ್ಲಿ ಮಾಹೆಯಾನ 2500 ರೂ. ಶಿಷ್ಯ ವೇÀತನ ನೀಡಲಾಗುತ್ತದೆ. ಅಭ್ಯರ್ಥಿಗಳೂ 18 ರಿಂದ 35ರ ವಯೋಮಿತಿಯೊಳಗಿರಬೇಕು. ನಿಗದಿತ ನಮೂನೆಯ ಅರ್ಜಿಯೊಂದಿಗೆ ಅಗತ್ಯ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಆಗಸ್ಟ್ 25ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು. ವಿವರಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಆಗಸ್ಟ್ 17ರಂದು ಲೊಕ್ಕನಹಳ್ಳಿಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಆ. 16 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆಗಳನ್ನು ಆಲಿಸುವ ಸಲುವಾಗಿ ಕೊಳ್ಳೆಗಾಲ ತಾಲೂಕಿನ ಲೊಕ್ಕನಹಳ್ಳಿ ಹೊಬಳಿ ಕೇಂದ್ರದ ಸಮಾಜ ಕಲ್ಯಾಣ ಇಲಾಖೆ ಹಾಸ್ಟಲ್ ಅವರಣದಲ್ಲಿ ಆಗಸ್ಟ್ 17ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಮ್ಮುಖದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಗೆ ನಾಗರಿಕರು ಪಾಲ್ಗೊಂಡು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಆ. 19ರಂದು ನಗರದಲ್ಲಿ ಅರಸು ಕುರಿತು ವಿಚಾರ ಸಂಕಿರಣ
ಚಾಮರಾಜನಗರ, ಆ. 17 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಆಚರಣೆ ಅಂಗವಾಗಿ ಆಗಸ್ಟ್ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಅರಸು ಅವರ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಂಗಳೂರು ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ಎಂ. ಚಂದ್ರಪೂಜಾರಿ ಅವರು ಡಿ. ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ ಸುಧಾರಣೆ ಮತ್ತು ರಾಜಕೀಯ ತುಲನಾತ್ಮಕ ಆಡಳಿತ ಕುರಿತು, ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಹೆಚ್. ಕೆ. ಲೋಲಾಕ್ಷಿ ಅವರು ಡಿ. ದೇವರಾಜ ಅರಸು ಅವರು ಕೈಗೊಂಡ ಕಾರ್ಯಕ್ರಮಗಳು ಮತ್ತು ಅವುಗಳ ಪ್ರಸ್ತುತತೆ ಕುರಿತು ಪ್ರಗತಿಪರ ಸಾಹಿತಿ ಮತ್ತು ಪತ್ರಕರ್ತರಾದ ಡಾ. ಕೃಷ್ಣಮೂರ್ತಿ ಚಮರಂ ಅವರು ಡಿ. ದೇವರಾಜ ಅರಸು ಪರಿವರ್ತನೆಯ ಹರಿಕಾರ ಎಂಬ ವಿಷಯ ಕುರಿತು ವಿಚಾರ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.
ಲೊಕ್ಕನಹಳ್ಳಿ ಜನ ಸಂಪರ್ಕ ಸಭೆಯಲ್ಲಿ ಮನವಿಗಳ ಮಹಾಪೂರ
ಚಾಮರಾಜನಗರ. ಆಗಸ್ಟ್ 17 (ಕರ್ನಾಟಕ ವಾರ್ತೆ) ಜನರ ಸಮಸ್ಯೆ ಆಲಿಸುವ ಸಲುವಾಗಿ ಕೊಳ್ಳೇಗಾಲ ತಾಲ್ಲೂಕಿನ ಲೊಕ್ಕನಹಳ್ಳಿಯಲ್ಲಿ ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‍ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜನ ಸಂಪರ್ಕ ಸಭೆಯಲ್ಲಿ ಮನವಿಗಳ ಮಹಾಪೂರವೇ ಹರಿದು ಬಂದಿತು.
ಹೋಬಳಿ ಕೇಂದ್ರದ ಸಮಾಜ ಕಲ್ಯಾಣ ಇಲಾಖೆ ವಸತಿನಿಲಯ ಆವರಣದಲ್ಲಿ ಜಿಲ್ಲಾಧಿಕಾರಿ ಬಿ.ರಾಮು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲ ಪಾಟಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ನಾಗರಿಕರು ಸರತಿ ಸಾಲಿನಲ್ಲಿ ನಿಂತು ಅಧಿಕಾರಿಗಳಿಗೆ ತಮ್ಮ ಕುಂದು ಕೊರತೆ ನಿವೇದಿಸುವ ಮನವಿ ಪತ್ರಗಳನ್ನು ಸಲ್ಲಿಸಿದರು.
ಪ್ರತಿಯೊಬ್ಬರಿಂದ ಖುದ್ದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ ಮನವಿ ಪತ್ರ ಸ್ವೀಕರಿಸಿ ಸಮಸ್ಯಗಳನ್ನು ವಿವರವಾಗಿ ಆಲಿಸಿದರು.
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ರಾಮು ಅವರು ನಾಗರಿಕರ ಸಮಸ್ಯಗಳನ್ನು ಅವರ ಮನೆ ಬಾಗಿಲಿನಲ್ಲಿಯೇ ಕೇಳಿ ಪರಿಹರಿಸಬೇಕೆಂಬ ಮುಖ್ಯ ಮಂತ್ರಿಯವರ ನಿರ್ದೇಶನದಂತೆ ಪ್ರತಿ ತಿಂಗಳು 1 ರಿಂದ 2 ಜನ ಸಂಪರ್ಕ ಸಭೆಯನ್ನು ಹೋಬಳಿ ಮಟ್ಟದಲ್ಲಿ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳು ಜನ ಸಂಪರ್ಕ ಸಭೆ ನಡೆಸಲಿದ್ದಾರೆ. ಕಳೆದ ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಹೋಬಳಿ ಕೇಂದ್ರದಲ್ಲಿ ತಾವು ಜನ ಸಂಪರ್ಕ ಸಭೆ ಆಯೋಜಿಸಿ ಮನವಿ ಸ್ವೀಕರಿಸಿದ್ದೇವೆ ಎಂದರು.
ರಾಜ್ಯ ಸರ್ಕಾರ ಗ್ರಾಮೀಣ ಜನರ ಬದುಕು ಹಸನಾಗಲು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿ ಇಲಾಖೆಗೆ ಅರ್ಜಿ ಸಲ್ಲಿಸಿ ಸವಲತ್ತುಗಳನ್ನು ಪಡೆಯಬೇಕು, ಕೃಷಿ ಜೊತೆಗೆ ಆದಾಯ ಹೆಚ್ಚು ತರುವ ಹಸು, ಕುರಿ, ಕೋಳಿ ಸಾಕಾಣೆಯನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದರು.
ಗ್ರಾಮೀಣ ಭಾಗದ ಜನರು ಆರ್.ಟಿ.ಸಿ, ವೃದ್ದಾಪ್ಯ ವೇತನ, ಅಂಗವಿಕಲರ ವೇತನ, ಮೈತ್ರಿ, ಮನಸ್ವಿನಿ ಯೋಜನೆಯ ಪ್ರಯೋಜನಕ್ಕೆ ಅರ್ಜಿ ಸಲ್ಲಿಸಲು ಹೋಬಳಿ ಕೇಂದ್ರಗಳಿಗೆ ಅಲೆದಾಡುವ ಅವಶ್ಯಕತೆ ಇಲ್ಲ. ಆಯಾ ಗ್ರಾಮ ಪಂಚಾಯತಿ ಕಚೇರಿಯಲ್ಲೆ ಬಾಪುಜಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದ್ದು ಎಲ್ಲಾ ಯೋಜನೆ ಹಾಗೂ ಸೇವೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಪ್ರಯೋಜನವನ್ನು ಪಡೆಯಬೇಕೆಂದು ರಾಮು ಅವರು ತಿಳಿಸಿದರು.
ಇಂದಿನ ಜನ ಸಂಪರ್ಕ ಸಭೆಯಲ್ಲಿ ಜನರಿಂದ 333 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ 228 ಅರ್ಜಿಗಳು ಅರಣ್ಯ ಹಾಗೂ ಪಂಚಾಯತ್‍ರಾಜ್ ಇಲಾಖೆಗೆ ಸಂಬಂದಿಸಿದ್ದಾಗಿದೆ. ಕಂದಾಯ ಇಲಾಖೆಗೆ ಸಂಬಂಧ ಪಟ್ಟಂತೆ 78 ಅರ್ಜಿಗಳು ಬಂದಿವೆ. ಇನ್ನಿತರ ಇಲಾಖೆಗಳ ಕುರಿತ ಮನವಿಗಳು ಸಹ ಸ್ವೀಕೃತವಾಗಿದೆ. ಈ ಎಲ್ಲಾ ಅರ್ಜಿಗಳಿಗೆ ಇನ್ನು 15 ದಿನಗಳ ಒಳಗೆ ಪರಿಶೀಲಿಸಿ ಸಮಸ್ಯ ಪರಿಹರಿಸುವಂತೆ ಸೂಚಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲ ಪಾಟಿ ಮಾತನಾಡಿ ಇಂದು ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಶೇ20 ರಷ್ಟು ಅರ್ಜಿಗಳಲ್ಲಿ ಶೌಚಾಲಯ ಹಾಗೂ ವಸತಿ ನಿರ್ಮಾಣ ಮಾಡಿಕೊಡುವಂತೆ ಕೋರಲಾಗಿದೆ. ಅರ್ಹ ಹಾಗೂ ಜಾಗ ಹೊಂದಿರುವವರಿಗೆ ಆದ್ಯತೆ ಮೇರೆಗೆ ಸೌಲಭ್ಯ ಕಲ್ಪಿಸಲಾಗುವುದು. ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೂ ಬೇಡಿಕೆಗೆ ಅನುಸಾರವಾಗಿ ಉನ್ನತ ಮಟ್ಟದಲ್ಲಿ ಗಮನಕ್ಕೆ ತಂದು ಅನುಕೂಲ ಮಾಡಿಕೊಡಲು ಮುಂದಾಗುವುದಾಗಿ ತಿಳಿಸಿದರು.
ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಜಿಲ್ಲಾ ಪಂಚಾಯತ್ ಸದಸ್ಯರಾದ ಮರುಗದ ಮಣಿ, ತಾಲ್ಲೂಕು ಪಂಚಾಯತ್ ಸದಸ್ಯರಾದ ರುಕ್ಮಿಣಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಿಂಗಶೆಟ್ಟಿ , ಉಪಾಧ್ಯಕ್ಷರಾದ ಸುಮತಿ, ತಹಸಿಲ್ದಾರ್ ಚಂದ್ರಮೌಳಿ ಇತರೆ ಜನ ಪ್ರತಿ ನಿಧಿಗಳು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ತರಬೇತಿ ಶುಲ್ಕ, ಶಿಷ್ಯ ವೇತನ ಪಡೆಯಲು ಹಿಂದುಳಿದ ವರ್ಗಗಳ ನರ್ಸಿಂಗ್ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಜಿಎನ್‍ಎಂ, ಬಿಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ (ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ) ಕೋರ್ಸುಗಳಿಗೆ ತರಬೇತಿ ಶುಲ್ಕ, ಶಿಷ್ಯ ವೇತನ ಹಾಗೂ ಇತರೆ ಶುಲ್ಕ ಮಂಜೂರಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ.
2016-17ನೇ ಸಾಲಿನಿಂದ ತರಬೇತಿ ಶುಲ್ಕ, ಶಿಷ್ಯ ವೇತನ ಇತರೆ ಶುಲ್ಕಗಳನ್ನು ಇ - ಪಾಸ್ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮಂಜೂರು ಮಾಡುತ್ತಿದೆ. ಈ ಹಿಂದೆ ಬಿಎಸ್ಸಿ ನರ್ಸಿಂಗ್, ಜಿಎನ್‍ಎಂ ಹಾಗೂ ಪ್ಯಾರಾ ಮೆಡಿಕಲ್ (ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ) ಕೋರ್ಸ್‍ಗಳಲ್ಲಿ ತರಬೇತಿ ಶುಲ್ಕ ಮತ್ತು ಶಿಷ್ಯ ವೇತನಕ್ಕೆ ಆಯ್ಕೆಯಾಗಿದ್ದು ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮುಂದುವರೆಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಅಲ್ಲದೆ 2016-17ನೇ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ದಾಖಲಾಗಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬೇಕಿದೆ.
ವಿವರಕ್ಕೆ ಞಚಿಡಿeಠಿಚಿss.egg.gov.iಟಿ ಹಾಗೂ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡಬಹುದು. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 15 ಕಡೆಯ ದಿನವಾಗಿದೆ ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 20ರಂದು ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ದೀನದಲಿತರ ಧೀಮಂತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಸಮಾರೋಪ ಹಾಗೂ 101ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಡಿ. ದೇವರಾಜ ಅರಸು ಅವರು ಕೈಗೊಂಡ ಸುಧಾರಣೆಗಳ ಕುರಿತು ಸ್ತಬ್ಧಚಿತ್ರ ಹಾಗೂ ಕಲಾತಂಡಗಳೊಂದಿಗಿನ ಮೆರವಣಿಗೆಗೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಡಿ. ದೇವರಾಜ ಅರಸು ಅವರ ಭಾವಚಿತ್ರ ಅನಾವರಣ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಸವಲತ್ತು ವಿತರಣೆ ಮಾಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಬಹುಮಾನ ವಿತರಿಸುವರು. ಸಾಹಿತಿ ಮತ್ತು ಸಂಸೃತಿ ಚಿಂತಕರಾದ ಪ್ರೊ. ಕಾಳೇಗೌಡ ನಾಗವಾರ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು ಎಂದು ಪ್ರಕಟಣೆ ತಿಳಿಸಿದೆ.
ಆ. 20ರಂದು ಆದರ್ಶ ವಿದ್ಯಾಲಯ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವತಿಯಿಂದ ತಾಲೂಕಿನ ಎಂ. ಮಲ್ಲಯ್ಯನಪುರದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಆದರ್ಶ ವಿದ್ಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 20ರಂದು ಮಧ್ಯಾಹ್ನ 2.30 ಗಂಟೆಗೆ ನೆರವೇರಲಿದೆ.
ಸಹಕಾರ, ಸಕ್ಕರೆÀ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ವಕ್ಫ್ ಸಚಿವರಾದ ತನ್ವೀರ್ ಸೇಠ್ ನಾಮಫಲಕ ಅನಾವರಣ ಮಾಡುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಚಂದ್ರಕಲಾ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಸದಸ್ಯರಾದ ಎಸ್. ನಾಗರಾಜಮ್ಮ, ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್. ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು ಎಂದು ಪ್ರಕಟಣೆ ತಿಳಿಸಿದೆ.
ಆರೋಗ್ಯ ಸಹಾಯಕಿಯರ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಿಎನ್‍ಎಂ ಶಾಲೆಗಳಿಗೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಆಗಸ್ಟ್ 24ರ ಸಂಜೆ 5.30 ಗಂಟೆಯೊಳಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಸಂಪೂರ್ಣ ಮಾಹಿತಿಗೆ ವೆಬ್ ಸೈಟ್ ತಿತಿತಿ.ಞಚಿಡಿhಜಿತಿ.gov.iಟಿ ನೋಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾ.ಪಂ. ಚುನಾವಣೆ : ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ವಿವಿಧ ಕಾರಣಗಳಿಂದ ತೆರವಾಗಿರುವ ಹಾಗೂ ಅವಧಿ ಮುಕ್ತಾಯವಾಗುವ ಜಿಲ್ಲೆಯ ಕೆಲ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಚುನಾವಣೆ ಹಾಗೂ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಆಯಾ ವ್ಯಾಪ್ತಿ ಪ್ರದೇಶದಲ್ಲಿ ನೀತಿ ಸಂಹಿತೆ ಮುಕ್ತಾಯವಾಗುವವರೆಗೂ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಮತದಾನವು ಶಾಂತ ಹಾಗೂ ಮುಕ್ತವಾಗಿ ನಡೆಯುವಂತಾಗಲು ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಒಂದು ಮದ್ಯದಂಗಡಿಯನ್ನು ನೀತಿ ಸಂಹಿತೆ ಜಾರಿಯಲ್ಲಿರುವ ಅವಧಿಯಲ್ಲಿ ಅಂದರೆ ಆಗಸ್ಟ್ 16 ರಿಂದ 31ರವರೆಗೆ ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಚುನಾವಣೆ ನಡೆಯಲಿರುವ ಕೊಳ್ಳೇಗಾಲ ತಾಲೂಕಿನ ಕುರಟ್ಟಿ ಹೊಸೂರು, ಶಾಗ್ಯ, ಸಿದ್ದಯ್ಯನಪುರ ಗ್ರಾಮ ಪಂಚಾಯಿತಿ ಹಾಗೂ ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಮದ್ಯದಂಗಡಿ ಇಲ್ಲ. ಹೀಗಾಗಿ ಮಸಣಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಒಂದು ಮದ್ಯದಂಗಡಿಯನ್ನು ನೀತಿ ಸಂಹಿತೆ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ. ನೀತಿಸಂಹಿತೆ ಅವಧಿಯಲ್ಲಿ ಮದ್ಯ ಮಾರಾಟ, ಹಂಚಿಕೆ, ಶೇಖರಣೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ, ಮುದ್ರಣ, ದಾಸ್ತಾನು ನಿಷೇಧ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಜಿಲ್ಲೆಯಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರಧ್ವಜ ಮಾರಾಟ ಮಾಡುವುದು, ಮುದ್ರಿಸುವುದು ಹಾಗೂ ದಾಸ್ತಾನು ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಸಾಂಸ್ಕøತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಲ್ಲಿ ಕಾಗದದಿಂದ ತಯಾರಿಸಿದ ರಾಷ್ಟ್ರಧ್ವಜಗಳನ್ನು ಮಾತ್ರ ಬಳಸಬೇಕು. ಕಾರ್ಯಕ್ರಮ ಮುಗಿದ ಬಳಿಕ ಇವುಗಳನ್ನು ನೆಲದ ಮೇಲೆ ಎಲ್ಲೆಂದರಲ್ಲಿ ಬಿಸಾಡದೆ ನಿಯಮಾನುಸಾರ ಗೌರವಪೂರ್ವಕವಾಗಿ ಅವುಗಳ ವಿಲೇ ಮಾಡಬೇಕು. ಪ್ಲಾಸ್ಟಿಕ್‍ನಿಂದ ರಾಷ್ಟ್ರಧ್ವಜ ತಯಾರಿಸುವುದು, ಪ್ಲಾಸ್ಟಿಕ್ ಬ್ಯಾಗ್ ಹಾಳೆಯ ಮೇಲೆ ರಾಷ್ಟ್ರಧ್ವಜ ಮುದ್ರಿಸುವುದನ್ನು ನಿಷೇಧಿಸಲಾಗಿದೆ. ಎಲ್ಲ ಅಂಗಡಿ, ಸ್ಟೇಷನರಿ ಅಂಗಡಿ ಹಾಗೂ ಬೀದಿಬದಿಗಳಲ್ಲಿ ಪ್ಲಾಸ್ಟಿಕ್‍ನಿಂದ ತಯಾರಿಸಿದ ರಾಷ್ಟ್ರಧ್ವಜ ಮಾರಾಟ, ಮುದ್ರಣ ಹಾಗೂ ದಾಸ್ತಾನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಆದೇಶದಲ್ಲಿ ತಿಳಿಸಿದ್ದಾರೆ.
ಆ. 24ರಂದು ನರ್ಸಿಂಗ್ ಅಭ್ಯರ್ಥಿಗಳಿಗೆ ನೇರ ಸಂದರ್ಶನ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ಬೆಂಗಳೂರಿನ ಅಪೊಲೋ ಹೋಂ ಹೆಲ್ತ್ ಕೇರ್ ಕಂಪನಿಯು ಬಿಎಸ್ಸಿ ನರ್ಸಿಂಗ್, ಎಎನ್‍ಎಂ, ಜಿಎನ್‍ಎಂ ಹಾಗೂ ಎಂಎಸ್ಸಿ ನರ್ಸಿಂಗ್ ವಿದ್ಯಾರ್ಹತೆಯುಳ್ಳ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ಆಗಸ್ಟ್ 24ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ನಡೆಸಲಿದೆ.
ಆಸಕ್ತರು ಸ್ವವಿವರದೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ ಅವರ ದೂರವಾಣಿ ಸಂಖ್ಯೆ 08226-224430 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಬಹಿರಂಗ ಹರಾಜು
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):– ನಗರದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಯ ಟಾಟಾ ಸುಮೋ ವಿಕ್ಟಾ ಹಾಗೂ ಟಾಟಾ ಸುಮೋ ವಾಹನಗಳ 24 ಹಳೆಯ ಟೈರುಗಳು ಮತ್ತು ಒಂದು ಹಳೆಯ ಬ್ಯಾಟರಿ, ಇತರೆ ಕಬ್ಬಿಣದ ಬಿಡಿಭಾಗಗಳನ್ನು ಆಗಸ್ಟ್ 25ರಂದು ಮಧ್ಯಾಹ್ನ 12 ಗಂಟೆಗೆ ನಗರದ ಲೋಕಾಯುಕ್ತ ಕಚೇರಿಯ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುತ್ತದೆ.
ಆಸಕ್ತರು ಭಾಗವಹಿಸಬಹುದು. ವಿವರಗಳಿಗೆ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-223333 ಅಥವಾ 226177 ಸಂಪರ್ಕಿಸುವಂತೆ ನಗರದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 19ರಂದು ನಗರದಲ್ಲಿ ಅರಸು ಕುರಿತು ವಿಚಾರ ಸಂಕಿರಣ
ಚಾಮರಾಜನಗರ, ಆ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಆಚರಣೆ ಅಂಗವಾಗಿ ಆಗಸ್ಟ್ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಅರಸು ಅವರ ಕುರಿತು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿಗಳಾದ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಂಗಳೂರು ಕನ್ನಡ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ. ಎಂ. ಚಂದ್ರಪೂಜಾರಿ ಅವರು ಡಿ. ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ ಸುಧಾರಣೆ ಮತ್ತು ರಾಜಕೀಯ ತುಲನಾತ್ಮಕ ಆಡಳಿತ ಕುರಿತು, ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಹೆಚ್. ಕೆ. ಲೋಲಾಕ್ಷಿ ಅವರು ಡಿ. ದೇವರಾಜ ಅರಸು ಅವರು ಕೈಗೊಂಡ ಕಾರ್ಯಕ್ರಮಗಳು ಮತ್ತು ಅವುಗಳ ಪ್ರಸ್ತುತತೆ ಕುರಿತು ಪ್ರಗತಿಪರ ಸಾಹಿತಿ ಮತ್ತು ಪತ್ರಕರ್ತರಾದ ಡಾ. ಕೃಷ್ಣಮೂರ್ತಿ ಚಮರಂ ಅವರು ಡಿ. ದೇವರಾಜ ಅರಸು ಪರಿವರ್ತನೆಯ ಹರಿಕಾರ ಎಂಬ ವಿಷಯ ಕುರಿತು ವಿಚಾರ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅರಸು ಅವಧಿಯಲ್ಲಿ ಭೂಸುಧಾರಣೆ ಕಾಯಿದೆ ಪರಿಣಾಮಕಾರಿ ಜಾರಿ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):- ಭೂಸುಧಾರಣಾ ಕಾಯಿದೆಯನ್ನು ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದ ಹೆಗ್ಗಳಿಕೆ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಸಾಮಾಜಿಕ ಕ್ರಾಂತಿಯ ಹರಿಕಾರ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಆಚರಣೆ ಅಂಗವಾಗಿ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅರಸು ಕುರಿತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಡಿ. ದೇವರಾಜ ಅರಸು ಅವರು ಜಾರಿಗೆ ತಂದ ಉಳುವವನೇ ಭೂಮಿಯ ಒಡೆಯ ಕಾರ್ಯಕ್ರಮದಿಂದ ಸಾವಿರಾರು ರೈತರು, ಬಡಜನತೆಗೆ ಅನುಕೂಲವಾಯಿತು. ಭೂಸುಧಾರಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದ ಕೀರ್ತಿಗೆ ಅರಸು ಅವರು ಪಾತ್ರರಾದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದರು.
ಅರಸು ಅವರು ಚಿಕ್ಕಂದಿನಿಂದಲೇ ಶೋಷಿತರು, ಹಿಂದುಳಿದವರ ನೋವನ್ನು ಬಲ್ಲವರಾಗಿದ್ದರು. ಈ ಅನುಭವದ ಆಧಾರದ ಮೇಲೆ ಅರಸು ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಬಡವರ ಪರ ಅನೇಕ ಸುಧಾರಣೆ ಕಾರ್ಯಕ್ರಮಗಳನ್ನು ಕೈಗೊಂಡರು. ಋಣಮುಕ್ತ, ಜೀತಪದ್ಧತಿ ನಿರ್ಮೂಲನೆ, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಜನರ ಭೂ ಪರಭಾರೆ ನಿಷೇಧ ಕಾಯಿದೆ (ಪಿಟಿಸಿಎಲ್ ಆಕ್ಟ್) ಯಂತಹ ಕ್ರಾಂತಿಕಾರಕ ಕಾರ್ಯಕ್ರಮಗಳು ಅನುಷ್ಠಾನವಾದವು ಎಂದು ಭಾರತಿ ತಿಳಿಸಿದರು.
ದೇವರಾಜ ಅರಸು ಅವರ ಸಾಮಾಜಿಕ ನ್ಯಾಯ ಸುಧಾರಣೆ ಮತ್ತು ರಾಜಕೀಯ ತುಲನಾತ್ಮಕ ಆಡಳಿತ ಕುರಿತು ಮಾತನಾಡಿದ ಮಂಗಳೂರು ಕನ್ನಡ ವಿವಿ ಪ್ರಾಧ್ಯಾಪಕರಾದ ಡಾ. ಎಂ. ಚಂದ್ರಪೂಜಾರಿ ಅವರು ಅರಸು ಅವರು ತಳಸಮುದಾಯದ ಜನತೆಗೆ ಶಿಕ್ಷಣ, ಆರೋಗ್ಯ ಇನ್ನಿತರ ಸೌಲಭ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ಅರಸು ಅವರ ಅಭಿವೃದ್ಧಿ ರಾಜಕಾರಣದಲ್ಲಿ ಹೆಸರಿಲ್ಲದ ಅನೇಕ ಸಮುದಾಯದಿಂದ ನಾಯಕರನ್ನು ತಂದು ಅವಕಾಶ ನೀಡಿದರು ಎಂದರು.
ಮೈಸೂರು ವಿವಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ಎಚ್. ಕೆ. ಲೋಲಾಕ್ಷಿ ಅವರು ಡಿ. ದೇವರಾಜ ಅರಸು ಅವರು ಕೈಗೊಂಡ ಕಾರ್ಯಕ್ರಮಗಳು ಮತ್ತು ಅವುಗಳ ಪ್ರಸ್ತುತತೆ ಕುರಿತು ಮಾತನಾಡಿ ಅರಸು ಅವರು ಜಾರಿಗೆ ತಂದ ಜೀತವಿಮುಕ್ತ ಕಾರ್ಯಕ್ರಮದಿಂದ 65 ಸಾವಿರ ಜೀತದಾರರು ಮುಕ್ತಿ ಪಡೆದುಕೊಂಡರು. ಹಾವನೂರು ವರದಿ ಫಲವಾಗಿ ನಾನಾ ಸಂಘಸಂಸ್ಥೆಗಳು ಅಸ್ತಿತ್ವಕ್ಕೆ ಬಂದು ಶೋಷಿತರ ಜನಪರವಾಗಿ ದನಿ ಎತ್ತಲು ಕಾರಣವಾಯಿತು ಎಂದರು.
ದೇವರಾಜ ಅರಸು ಪರಿವರ್ತನೆಯ ಹರಿಕಾರ ಎಂಬ ವಿಷಯ ಕುರಿತು ವಿಚಾರ ಮಂಡನೆ ಮಾಡಿದ ಪ್ರಗತಿಪರ ಸಾಹಿತಿ ಮತ್ತು ಪತ್ರಕರ್ತರಾದ ಡಾ. ಕೃಷ್ಣಮೂರ್ತಿ ಚಮರಂ ಅವರು ದೇವರಾಜ ಅರಸು ಆಳ್ವಿಕೆ ಅವಧಿಯಲ್ಲಿ ಪರಮಾಧಿಕಾರವನ್ನು ದಕ್ಷತೆಯಿಂದ ಚಲಾಯಿಸಿದರು. ಹಿಂದುಳಿದ ವರ್ಗ ಜನಸಾಮಾನ್ಯರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಜಾರಿಗೆ ತಂದರು. ಸಂವಿಧಾನದ ಅಡಿಯಲ್ಲಿ ತರಬಹುದಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಂದಾದರು ಎಂದರು.
ರಂಗವಾಹಿನಿ ಸಂಸ್ಥೆಯ ಅಧ್ಯಕ್ಷರಾದ ಸಿ.ಎಂ. ನರಸಿಂಹಮೂರ್ತಿ ನಿರೂಪಿಸಿದರು. ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಸಿ. ಶಿವಕುಮಾರ್ ಸ್ವಾಗತಿಸಿ ವಂದಿಸಿದರು. ನೂತನವಾಗಿ ಜಿಲ್ಲೆಗೆ ವರ್ಗಾವಣೆಯಾಗಿರುವ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಾಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಯಪ್ರಕಾಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಟಾಕಿ ಮಾರಾಟ ಪರವಾನಗಿ : ಹಬ್ಬದ 60 ದಿನಗಳ ಮೊದಲೇ ಅರ್ಜಿ ಸಲ್ಲಿಕೆ ಕಡ್ಡಾಯ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– 2016ರ ದೀಪಾವಳಿ ಹಬ್ಬದ ಸಮಯದಲ್ಲಿ ಪಟಾಕಿ ಮಾರಾಟ ಮಾಡಲು ಪರವಾನಗಿಯನ್ನು ಹಬ್ಬಕ್ಕೂ ಮೊದಲ 30 ದಿವಸಗಳ ಮುಂಚಿತವಾಗಿ ಪಡೆಯಬೇಕು. ಪರವಾನಗಿಗಾಗಿ ಅರ್ಜಿಯನ್ನು ಹಬ್ಬದ ಮೊದಲ 60 ದಿವಸ ಮುಂಚಿತವಾಗಿಯೇ ಸಲ್ಲಿಸಿ ಪಡೆಯಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ.
ಕೇಂದ್ರ ಪೆಟ್ರೋಲಿಯಂ ಮತ್ತು ಎಕ್ಸ್‍ಫ್ಲೋಸಿವ್ ಸೇಫ್ಟಿ ಆರ್ಗನೈಸೆÉೀಷನ್‍ನ ಚೀಫ್ ಕಂಟ್ರೋಲರ್ ಆಫ್ ಎಕ್ಸ್‍ಫ್ಲೋಸಿವ್ಸ್ ಅವರ ನಿರ್ದೇಶನದಂತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಮಾರಾಟ ಮಾಡುವವರಿಗೆ ಪರವಾನಗಿಯನ್ನು ಹಬ್ಬದ 30 ದಿನಗಳ ಮುಂಚೆಯೇ ನೀಡಬೇಕಿದೆ. ಪರವಾನಗಿ ಪಡೆಯುವ ಅರ್ಜಿಯನ್ನು ಹಬ್ಬದ 60 ದಿನಗಳ ಮುಂಚಿತವಾಗಿಯೇ ಸ್ವೀಕರಿಸಬೇಕೆಂದು ನಿರ್ದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಪರವಾನಗಿ ಪಡೆಯಲು ಬಯಸುವವರು ಹಬ್ಬದ ಮುಂದಿನ 60 ದಿನಗಳ ಮುಂಚಿತವಾಗಿಯೇ ಅರ್ಜಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
,
ಜಿಲ್ಲೆಯಲ್ಲಿ ಪ.ಜಾ, ಪ.ಪಂ. ಉದ್ದಿಮೆದಾರ ಜಾಗೃತಿ ಸಮಾವೇಶ ಆಯೋಜನೆಗೆ ನಿರ್ಧಾರ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಉದ್ದಿಮೆದಾರರ ಕುಂದುಕೊರತೆ ಹಾಗೂ ಜಾಗೃತಿ ಸಮಾವೇಶವನ್ನು ಆಯೋಜಿಸುವ ಸಂಬಂಧ ನಗರದಲ್ಲಿಂದು ಕೈಗಾರಿಕೆ ಉದ್ಯಮಿಗಳು ಹಾಗೂ ಭಾವಿ ಕೈಗಾರಿಕೆ ಉದ್ಯಮಿಗಳ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿ ಆವರಣದಲ್ಲಿ ಸಮಾವೇಶ ಆಯೋಜನೆ ಕುರಿತು ವಿವರವಾಗಿ ಸಮಾಲೋಚನೆ ನಡೆಸಲಾಯಿತು.
ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಉದ್ದಿಮೆದಾರರು ಕೈಗಾರಿಕೆ ಉದ್ಯಮಗಳ ಸಂಘದ ಅಧ್ಯಕ್ಷರಾದ ಸಿ.ಜಿ. ಶ್ರೀನಿವಾಸ್ ಮಾತನಾಡಿ ಸಂಘದಲ್ಲಿ ಉದ್ದಿಮೆದಾರರು ಮತ್ತು ಭಾವಿ ಉದ್ದಿಮೆದಾರರು ಮಾತ್ರ ಸದಸ್ಯತ್ವ ಪಡೆಯಲು ಅರ್ಹರಾಗಿದ್ದಾರೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಉದ್ದಿಮೆದಾರರು ಸರ್ಕಾರದ ಉತ್ತೇಜನ ಯೋಜನೆಗಳನ್ನು ಪಡೆಯಲು ಹಾಗೂ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳುವ ಉದ್ದೇಶದಿಂದ ಹೊಸದಾಗಿ ಸಂಘ ಸ್ಥಾಪಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಇರುವ ಕೈಗಾರಿಕೆ ಉದ್ಯಮಿಗಳು ಸಭೆ ಸೇರಿ ಸಂಘ ಪ್ರಾರಂಭಕ್ಕೆ ನಿರ್ಣಯ ತೆಗೆದುಕೊಳ್ಳಬೇಕು. ಸಂಘ ಸ್ಥಾಪನೆಗೆ ಅಗತ್ಯವಿರುವ ಮಾಹಿತಿ ಸಹಕಾರವನ್ನು ಪೂರ್ಣ ಪ್ರಮಾಣದಲ್ಲಿ ಒದಗಿಸಲು ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಸಂಘ ಮುಂದೆ ಬರಲಿದೆ. ಸರ್ಕಾರದ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಉದ್ದಿಮೆದಾರರು ಕೈಗಾರಿಕೆ ಸ್ಥಾಪಿಸಲು ನೀಡುವ ರಿಯಾಯಿತಿ ಆದೇಶಗಳ ಬಗ್ಗೆ ತಿಳಿದುಕೊಳ್ಳಬೇಕಿದೆ ಎಂದು ಶ್ರೀನಿವಾಸನ್ ಸಲಹೆ ಮಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಎ.ಎಸ್. ರಮೇಶ್ ಅವರು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಸರ್ಕಾರದಿಂದ ಕೈಗಾರಿಕೋದ್ಯಮಿಗಳಿಗೆ ಒದಗಿಸುವ ಸವಲತ್ತುಗಳನ್ನು ಪಡೆಯಲು ಮುಂದೆ ಬಂದಿಲ್ಲ. ಸರ್ಕಾರ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳಿಗೆ ನೀಡುವ ಕೈಗಾರಿಕಾ ಸೌಲಭ್ಯಗಳನ್ನು ಪಡೆಯಲು ಜಾಗೃತರಾಗಬೇಕು ಎಂದರು.
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಕೆಲ್ಲಂಬಳ್ಳಿ 1500 ಎಕರೆ ಪ್ರದೇಶದಲ್ಲಿ ನೂತನ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗುತ್ತಿದೆ. ನೂತನ ಕೈಗಾರಿಕಾ ನೀತಿಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕಲ್ಪಿಸಲಾಗಿದೆ. ಜಿಲ್ಲೆಯ ಕೈಗಾರಿಕಾ ಉದ್ಯಮಿಗಳು ಈ ಪ್ರಯೋಜನ ಪಡೆದುಕೊಳ್ಳಬೇಕೆಂದು ರಮೇಶ್ ತಿಳಿಸಿದರು.
ಕೆಎಸ್‍ಎಫ್‍ಸಿ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ್ ಸೇರಿದಂತೆ ಕೈಗಾರಿಕಾ ಇಲಾಖೆ ಅಧಿಕಾರಿಗಳು ಕೈಗಾರಿಕೆ ಅಭಿವೃದ್ಧಿಗಾಗಿ ಸರ್ಕಾರ ಕೊಡಮಾಡುತ್ತಿರುವ ಉತ್ತೇಜನ ಸೌಕರ್ಯಗಳ ಕುರಿತು ವಿವರ ನೀಡಿದರು.
ಸಭೆಯಲ್ಲಿ ಹಾಜರಿದ್ದ ಉದ್ದಿಮೆದಾರರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಪೂರ್ಣ ಪ್ರಮಾಣದಲ್ಲಿ ಅನುಕೂಲವಾಗುವ ಹಾಗೆ ಸಮಾವೇಶ ಆಯೋಜಿಸುವಂತೆ ಸಲಹೆ ನೀಡಿದರು.
ಮುಖಂಡರಾದ ಸಿ.ಎಂ. ಕೃಷ್ಣಮೂರ್ತಿ, ಅರಕಲವಾಡಿ ನಾಗೇಂದ್ರ, ಮಹೇಶ್ ಕುದರ್, ಬಿ.ಸಿ. ರಾಜು, ಬಸವನಪುರ ರಾಜಶೇಖರ್, ಕಾಗಲವಾಡಿ ಚಂದ್ರು, ಶ್ರೀಕಂಠಮೂರ್ತಿ ಇತರರು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ರಾಗಿ ಬೆಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ಕೃಷಿ ಇಲಾಖೆಯು ಚಾಮರಾಜನಗರ ತಾಲೂಕಿಗೆ ಕೃಷಿ ಪ್ರಶಸ್ತಿಗೆ ಮಳೆಯಾಶ್ರಿತ ರಾಗಿ ಬೆಳೆಯನ್ನು ಪರಿಗಣಿಸಲಿದ್ದು ಆಸಕ್ತ ಕೃಷಿಕರಿಂದ ಅರ್ಜಿ ಆಹ್ವಾನಿಸಿದೆ.
ಕೃಷಿ ಪ್ರಶಸ್ತಿಗೆ ನೊಂದಾಯಿಸುವ ಸಾಮಾನ್ಯ ವರ್ಗದ ರೈತರು 100 ರೂ. ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ರೈತರು 25 ರೂ.ಗಳನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕಿದೆ.
ಮಳೆಯಾಶ್ರಿತದಲ್ಲಿ ರಾಗಿ ಬೆಳೆಯುವ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದುಕೊಳ್ಳಬಹುದು. ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕಡೆಯ ದಿನವಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ನಿರ್ಮಾಣ ಮನೆ ಸಕ್ರಮ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ಪಟ್ಟಣ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ 20*30ರ ಅಡಿ ವಿಸ್ತೀರ್ಣದ ಮನೆಯನ್ನು ಸಕ್ರಮಗೊಳಿಸಿಕೊಳ್ಳುವ ಸಂಬಂಧ ಅರ್ಜಿ ಸ್ವೀಕರಿಸುವ ಅವಧಿಯನ್ನು ಆಗಸ್ಟ್ 27ರವರೆಗೆ ವಿಸ್ತರಿಸಲಾಗಿದೆ.
ನಗರ ಪ್ರದೇಶದಲ್ಲಿ ಅಂದರೆ ಸಿಎಂಸಿ, ಟಿಎಂಸಿ, ಪಟ್ಟಣ ಪಂಚಾಯಿತಿ, ನಗರ ಕಾರ್ಪೋರೇಷನ್ ವ್ಯಾಪ್ತಿಯಿಂದ ನಿರ್ಧಿಷ್ಟ ಪಡಿಸಿದ ಅಂತರದೊಳಗಿನ ಸರ್ಕಾರಿ ಜಮೀನುಗಳಲ್ಲಿ ದಿನಾಂಕ 1.1.2012ರ ಪೂರ್ವದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ 20*30ರ ಅಡಿ ವಿಸ್ತೀರ್ಣದ ವಾಸದ ಮನೆಗಳನ್ನು ಸಕ್ರಮಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಈ ಸಂಬಂಧ ಅರ್ಜಿ ಸ್ವೀಕರಿಸುವ ಅವಧಿಯನ್ನು ಆಗಸ್ಟ್ 27ರವರೆಗೂ ವಿಸ್ತರಿಸಲಾಗಿದೆ.
ಈ ಯೋಜನೆಯಡಿ ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವವರು ಅಗತ್ಯ ದಾಖಲೆಗಳೊಂದಿಗೆ ಗುಂಡ್ಲುಪೇಟೆ ತಾಲೂಕು ಕಚೇರಿಯ ಏಕಗವಾಕ್ಷಿ ಕೇಂದ್ರಕ್ಕೆ ಅರ್ಜಿ ಸಲ್ಲಿಸುವಂತೆ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 23ರಂದು ಸಾಲಸೌಲಭ್ಯ ಅರ್ಜಿದಾರರಿಗೆ ಸಂದರ್ಶನ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– 2016-17ನೇ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಕೈಗಾರಿಕೆ ಹಾಗೂ ಸೇವಾ ಘಟಕಗಳನ್ನು ಪ್ರಾರಂಭಿಸುವ ಸಲುವಾಗಿ ಸಾಲಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆಗಸ್ಟ್ 23ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲೂಕಿನ ಮರಿಯಾಲದ ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ಸಂದರ್ಶನ ನಡೆಸಲಾಗುತ್ತದೆ.
ಈಗಾಗಲೇ ಅಭ್ಯರ್ಥಿಗಳಿಗೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಕಚೇರಿಯಿಂದ ಸಂದರ್ಶನದ ಕರೆಪತ್ರಗಳನ್ನು ಅಂಚೆ ಮೂಲಕ ರವಾನಿಸಲಾಗಿದೆ. ಕರೆಪತ್ರಗಳು ತಲುಪದೇ ಇದ್ದವರು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದ ವೇಳೆ ಆನ್ ಲೈನ್‍ನಲ್ಲಿ ಸಲ್ಲಿಸಿದ್ದ ಅರ್ಜಿಯೊಂದಿಗೆ ಭಾವಚಿತ್ರ, ವಿದ್ಯಾರ್ಹತೆ, ಜನ್ಮ ದಿನಾಂಕ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಅಥವಾ ಚುನಾವಣಾ ಆಯೋಗದ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಅಂಗವಿಕಲ ಅಭ್ಯರ್ಥಿಗಳಾಗಿದ್ದಲ್ಲಿ ದೃಢೀಕರಣ ಪತ್ರ, ಜನಸಂಖ್ಯೆ ದೃಢೀಕರಣ ಪತ್ರ, ಯೋಜನಾ ವರದಿ, ಯೋಜನೆ ಬಗ್ಗೆ ಅನುಭವವಿದ್ದಲ್ಲಿ ಅದರ ಪತ್ರ, ಸಾಧ್ಯವಾದಲ್ಲಿ ಬÁ್ಯಂಕಿನ ಅಧಿಕಾರಿಗಳನ್ನು ಭೇಟಿ ಮಾಡಿ ಸಾಲ ನೀಡುವ ಒಪ್ಪಿಗೆ ಪತ್ರವನ್ನು ಪಡೆದು ಹಾಜರುಪಡಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ. 20ರಂದು ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ಶಂಕುಸ್ಥಾಪನೆ ಸಮಾರಂಭ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳ ವಸತಿನಿಲಯ ನಿರ್ಮಾಣದ ಶಂಕುಸ್ಥಾಪನಾ ಸಮಾರಂಭವು ಆಗಸ್ಟ್ 20ರಂದು ಮಧ್ಯಾಹ್ನ 3 ಗಂಟೆಗೆ ನೆರವೇರಲಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಶಂಕುಸ್ಥಾಪನೆ ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿದಿ, ಸದಸ್ಯರಾದ ಜಿ. ಬಸವಣ್ಣ, ಬದನಗುಪ್ಪೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬಿ.ಪಿ. ನಾಗೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು ಎಂದು ಪ್ರಕಟಣೆ ತಿಳಿಸಿದೆ.
ಆ. 20ರಂದು ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ದೀನದಲಿತರ ಧೀಮಂತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಸಮಾರೋಪ ಹಾಗೂ 101ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಡಿ. ದೇವರಾಜ ಅರಸು ಅವರು ಕೈಗೊಂಡ ಸುಧಾರಣೆಗಳ ಕುರಿತು ಸ್ತಬ್ಧಚಿತ್ರ ಹಾಗೂ ಕಲಾತಂಡಗಳೊಂದಿಗಿನ ಮೆರವಣಿಗೆಗೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಡಿ. ದೇವರಾಜ ಅರಸು ಅವರ ಭಾವಚಿತ್ರ ಅನಾವರಣ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮದ ಸವಲತ್ತು ವಿತರಣೆ ಮಾಡುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಬಹುಮಾನ ವಿತರಿಸುವರು. ಸಾಹಿತಿ ಮತ್ತು ಸಂಸೃತಿ ಚಿಂತಕರಾದ ಪ್ರೊ. ಕಾಳೇಗೌಡ ನಾಗವಾರ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು ಎಂದು ಪ್ರಕಟಣೆ ತಿಳಿಸಿದೆ.
ಆ. 20ರಂದು ಆದರ್ಶ ವಿದ್ಯಾಲಯ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವತಿಯಿಂದ ತಾಲೂಕಿನ ಎಂ. ಮಲ್ಲಯ್ಯನಪುರದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಆದರ್ಶ ವಿದ್ಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭವು ಆಗಸ್ಟ್ 20ರಂದು ಮಧ್ಯಾಹ್ನ 2.30 ಗಂಟೆಗೆ ನೆರವೇರಲಿದೆ.
ಸಹಕಾರ, ಸಕ್ಕರೆÀ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ವಕ್ಫ್ ಸಚಿವರಾದ ತನ್ವೀರ್ ಸೇಠ್ ನಾಮಫಲಕ ಅನಾವರಣ ಮಾಡುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಚಂದ್ರಕಲಾ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಸದಸ್ಯರಾದ ಎಸ್. ನಾಗರಾಜಮ್ಮ, ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್. ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು ಎಂದು ಪ್ರಕಟಣೆ ತಿಳಿಸಿದೆ.
ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವ ಸಮಾರಂಭಕ್ಕೆ ಆಗಮಿಸಲು ಮನವಿ
ಚಾಮರಾಜನಗರ, ಆ. 19 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಸಾಮಾಜಿಕ ಕ್ರಾಂತಿಯ ಹರಿಕಾರ, ಹಿಂದುಳಿದ ವರ್ಗಗಳ ದೀನದಲಿತರ ಧೀಮಂತ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಸಮಾರೋಪ ಹಾಗೂ 101ನೇ ಜನ್ಮ ದಿನಾಚರಣೆ ಸಮಾರಂಭವನ್ನು ಆಗಸ್ಟ್ 20ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಡಿ. ದೇವರಾಜ ಅರಸು ಅವರು ಕೈಗೊಂಡ ಸುಧಾರಣೆಗಳ ಕುರಿತು ಸ್ತಬ್ಧಚಿತ್ರ ಹಾಗೂ ಕಲಾತಂಡಗಳೊಂದಿಗಿನ ಮೆರವಣಿಗೆಗೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಮಾರಂಭ ನಡೆಯಲಿದೆ. ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಕ್ಕೆ ನಾಗರಿಕರು, ಚುನಾಯಿತ ಪ್ರತಿನಿಧಿಗಳು, ವಿದ್ಯಾರ್ಥಿಗಳು ಆಗಮಿಸುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ. ಶಿವಕುಮಾರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿ : ಸಚಿವ ಎಚ್.ಎಸ್.ಮಹದೇವಪ್ರಸಾದ್
ಚಾಮರಾಜನಗರ, ಆ. 20 (ಕರ್ನಾಟಕ ವಾರ್ತೆ):- ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಂತವು ವಿದ್ಯಾರ್ಥಗಳಿಗೆ ಪ್ರಮುಖ ಘಟ್ಟವಾಗಿದ್ದು ಈ ಅವಧಿಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ಸಲಹೆ ಮಾಡಿದರು.
ತಾಲ್ಲೂಕಿನ ಎಂ.ಮಲ್ಲಯ್ಯನ ಪುರದಲ್ಲಿ ಇಂದು ನೂತನ ಸರ್ಕಾರಿ ಆದರ್ಶ ವಿದ್ಯಾಲಯ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತಾನಾಡಿದರು.
ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಶಿಕ್ಷಕರು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಅನಾವರಣಕ್ಕೆ ಅವಕಾಶ ಮಾಡಿಕೊಡಬೇಕು. ಕಾಲೇಜು ಶಿಕ್ಷಣಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಶಾಲಾ ಶೈಕ್ಷಣಿಕ ಅವಧಿಯಲ್ಲಿಯೇ ವಿಶ್ವಾಸ ತುಂಬಬೇಕು. ವಿದ್ಯಾರ್ಥಿಗಳ ಮನೋವಿಕಾಸಕ್ಕೆ ಮಾರ್ಗದರ್ಶನ ಮಾಡಬೇಕು ಎಂದು ಸಚಿವರು ತಿಳಿಸಿದರು.
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮಹತ್ತರ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಣ ಕ್ಷೇತ್ರದ ಉತ್ತೇಜನಕ್ಕೆ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಎಲ್ಲ ವಿದ್ಯಾರ್ಥಿಗಳಿಗೆ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಸಮವಸ್ತ್ರ, ಬಿಸಿಯೂಟ, ಇನ್ನಿತರ ಶಾಲಾ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ವಿತರಿಸಲಾಗುತ್ತಿದೆ ಎಂದರು.
ಪ್ರಸ್ತುತ ಆದರ್ಶ ವಿದ್ಯಾಲಯ ಪಟ್ಟಣದ ಹೊರಭಾಗದಲ್ಲಿರುವುದರಿಂದ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಇತರೆ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಅನುಷ್ಠಾನಕ್ಕೆ ತರಲು ಮುಂದಾಗುತ್ತೇನೆ. ಶಾಲಾ ಸುತ್ತುಗೋಡೆ ಇತರೆ ಅಗತ್ಯ ವ್ಯವಸ್ಥೆಗೂ ಅನುಕೂಲ ಕಲ್ಪಿಸಲಾಗುವುದು ಎಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಮಾತಾನಾಡಿ ಶಿಕ್ಷಣಕ್ಕೆ ಹೆಚ್ಚು ಉತ್ತೇಜನ ನೀಡಲಾಗುತ್ತಿದ್ದು, ಪ್ರತಿಯೊಬ್ಬರಿಗೂ ಅವಕಾಶ ವಿದೆ. ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದೆ. ವೈದ್ಯಕೀಯ ಕಾಲೇಜು ಕೂಡ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಆರಂಭವಾಗಲಿದೆ. ಸ್ನಾತಕೋತ್ತರ ಕೇಂದ್ರ, ನವೊದಯ, ಆದರ್ಶ ವಿದ್ಯಾಲಯಗಳು ಸಹ ಇದೆ. ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯವನ್ನು ಕಲ್ಪಿಸಿ ಕೊಡಲಿದ್ದೆವೆ. ಈ ಎಲ್ಲ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆಯಬೇಕೇಂದು ತಿಳಿಸಿದರು.
ಅಧ್ಯಕ್ಷತೆವಹಿಸಿ ಮಾತಾನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ವಿದ್ಯಾರ್ಥಿಗಳಿಗೆ ಇಂದು ವಿದ್ಯಾರ್ಥಿ ನಿಲಯಗಳ ಅವಶ್ಯಕತೆ ಕಂಡುಬಂದಿದೆ. ಈ ಭಾಗದ ಶೈಕ್ಷಣೀಕ ಅನುಕೂಲಕ್ಕಾಗಿ ಅಗತ್ಯ ಸೌಲಭ್ಯವನ್ನು ಒದಗಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ ಮಾತಾನಾಡಿ ವಿದ್ಯಾರ್ಥಿಗಳ ವ್ಯಾಸಂಗದ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕಿದೆ. ಮಕ್ಕಳ ಭವಿಷ್ಯದ ಉದ್ದೇಶದಿಂದ ವಿಶೇಷ ಗಮನ ಹರಿಸಿ ಅವರನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸುವ ಜವಬ್ಧಾರಿಯು ಸಹ ಇದೆ ಎಂದರು.
ಜಿ.ಪಂ.ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಉಪಾಧ್ಯಕ್ಷರಾದ ದಯನೀಧಿ, ಜಿಪಂ ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಪಂ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಗ್ರಾಪಂ ಅಧ್ಯಕ್ಷರಾದ ಎನ್.ಕುಮಾರ್. ತಾ.ಪಂ.ಸದಸ್ಯರಾದ ಎಸ್.ನಾಗರಾಜಮ್ಮ, ಮಾವು ಅಭಿವೃದ್ದಿ ನಿಗಮದ ನಿರ್ದೇಶಕರಾದ ಬಿ.ಕೆ.ರವಿಕುಮಾರ್, ಜಿ.ಪಂ.ಸಿ.ಇ.ಓ. ಹೆಪ್ಸಿಬಾ ರಾಣಿ ಕೊರ್ಲಾಪಾಟಿ, ಡಿಡಿಪಿಐ ಮಂಜುಳ, ಇತರರು ಉಪಸ್ಥಿತರಿದ್ದರು.
ಪತ್ರಿಕಾ ಪ್ರಕಟಣೆ
ಚಾಮರಾಜನಗರ ಜಿಲ್ಲೆಯ ಜನತೆಗೆ ಜಿಲ್ಲಾ ಪೊಲೀಸ್ ವತಿಯಿಂದ ದಿನಾಂಕ: 04-09-2016 ಮತ್ತು 05-09-2016 ರಂದು ನಡೆಯಲಿರುವ ಗೌರಿ ಗಣೇಶ ಹಬ್ಬದ ಶುಭಾಷಯಗಳು. ಗೌರಿ-ಗಣೇಶ ಹಬ್ಬದ ಸಂಬಂಧ ಜಿಲ್ಲೆಯ ಹಲವು ಕಡೆಗಳಲ್ಲಿ ಗೌರಿ – ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ, ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಿ, ನಂತರ ಮೆರವಣಿಗೆ ಮುಖಾಂತರ ವಿಸರ್ಜನೆ ಮಾಡುವ ವಾಡಿಕೆ ಇರುತ್ತದೆ. ಈ ಸಂಬಂಧ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಸಂಘಗಳು ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಅನುಮತಿಗಳನ್ನು ಕಡ್ಡಾಯವಾಗಿ ಪಡೆದು, ದಿನಾಂಕ: 25-08-2016 ರೊಳಗೆ ತಮ್ಮ ಸರಹದ್ದಿನ ಪೊಲೀಸ್ ಠಾಣಾಧಿಕಾರಿಗಳಲ್ಲಿ ಲಿಖಿತವಾಗಿ ಸಲ್ಲಿಸುವುದು.
1. ಉಸ್ತುವಾರಿ ಮುಖ್ಯಸ್ಥರ ಹೆಸರು, ವಿಳಾಸ, ಮೊಬೈಲ್ ನಂಬರ್ ಹಾಗೂ ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಆಗುವ ಎಲ್ಲಾ ಆಗುಹೋಗುಗಳಿಗೆ ತಾವೇ ಜವಾಬ್ದಾರರೆಂಬ ಬಗ್ಗೆ, ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಸ್ಥಳೀಯ ನ್ಯಾಯಾಲಯ, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ನೀಡುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಬಗ್ಗೆ ಹಾಗೂ ಕಾರ್ಯಕ್ರಮದ ಎಲ್ಲಾ ಸಂದರ್ಭಗಳಲ್ಲಿ ಅನ್ಯಧರ್ಮ, ಅನ್ಯಮತ, ಅನ್ಯ ಸಂಘಟನೆ, ಅನ್ಯ ಸಂಘ, ಅನ್ಯ ಜನಾಂಗ ಅಥವಾ ಇನ್ನಾವುದೆ ಸಾರ್ವಜನಿಕ ವ್ಯಕ್ತಿಗಾಗಲಿ ನೋವಾಗದಂತೆ ನಡೆದುಕೊಳ್ಳುವ ಬಗ್ಗೆ ಮುಚ್ಚಳಿಕೆ ಪತ್ರ ಹಾಗೂ ಪ್ರತಿಷ್ಠಾಪನೆ ದಿನ, ವಿಶೇಷ ಕಾರ್ಯಕ್ರಮಗಳ ಆಯೋಜನೆ ದಿನ, ಭಾಗವಹಿಸಲಿರುವ ವಿಶೇಷ ಅತಿಥಿಗಳ ವಿವರ, ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ದಿನ, ಮೆರವಣಿಗೆ, ವಿಸರ್ಜನಾ ದಿನ ಹಾಗೂ ವಿಸರ್ಜನಾ ಮೆರವಣಿಗೆ ನಡೆಸುವ ಮಾರ್ಗದ ಎಲ್ಲಾ ವಿವರಗಳನ್ನು ಸಲ್ಲಿಸುವುದು. (ಖುದ್ದು ಸರಹದ್ದಿನ ಠಾಣಾಧಿಕಾರಿಗಳೊಂದಿಗೆ ಚರ್ಚಿಸಿ ಕಡ್ಡಾಯವಾಗಿ ಅನುಮೋಧಿಸಿಕೊಳ್ಳುವುದು)
2. ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವ ಸ್ಥಳ ಮತ್ತು ವಿಳಾಸ ಹಾಗೂ ಸ್ಥಳದ ಮಾಲೀಕರಿಂದ ಪಡೆದ ಅನುಮತಿ ಪತ್ರ ನೀಡುವುದು (ಗ್ರಾಮಪಂಚಾಯತ್/ ಪಟ್ಟಣಪಂಚಾಯತ್/ನಗರಸಭೆ /ಖಾಸಗಿ ವ್ಯಕ್ತಿಗಳು)
3. ಸ್ಥಳೀಯ ವಿದ್ಯುತ್ ಪ್ರಾಧಿಕಾರದಿಂದ ಪಡೆದ ನಿರಾಕ್ಷೇಪಣಾ ಪತ್ರ
4. ಸ್ಥಳೀಯ ಠಾಣೆಯಿಂದ ಧ್ವನಿವರ್ಧಕ ಬಳಕೆಗೆ ಪಡೆದ ಅನುಮತಿ ಪತ್ರ(ಧ್ವನಿವರ್ಧಕ ಬಳಕೆಯ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸುವುದು.)
5. ಕರ್ನಾಟಕ ಅಗ್ನಿಶಾಮಕ ದಳದವರಿಂದ ನಿರಪೇಕ್ಷಣಾ ಪತ್ರ
6. ಈ ಸಂಬಂಧ ಹಾಕಲಾಗುವ ಎಲ್ಲಾ ಫ್ಲೆಕ್ಸ್/ಪೋಸ್ಟರ್/ಪೋಟೊ ಇತ್ಯಾದಿಗಳಿಗೆ ಸ್ಥಳೀಯ ಆಡಳಿತದಿಂದ ಕಡ್ಡಾಯವಾಗಿ ಅನುಮತಿ ಪಡೆಯುವುದು ಹಾಗೂ ಅವುಗಳಲ್ಲಿ ಅನ್ಯಧರ್ಮ, ಅನ್ಯಮತ, ಅನ್ಯ ಸಂಘಟನೆ, ಅನ್ಯ ಸಂಘ, ಅನ್ಯ ಜನಾಂಗ ಅಥವಾ ಇನ್ನಾವುದೆ ಸಾರ್ವಜನಿಕ ವ್ಯಕ್ತಿಗಾಗಲಿ ನೋವುಂಟು ಮಾಡದಂತಿರಬೇಕು.
7. ವಿಸರ್ಜನಾ ಸ್ಥಳದಲ್ಲಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಜೀವರಕ್ಷಕ ಸಾಧನಗಳ ವಿವರ ಒದಗಿಸುವುದು.
8. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರವರು ತಿಳಿಸಿರುವಂತೆ ಪರಿಸರ ಸ್ನೇಹಿಯಾದ, ಮಣ್ಣಿನಿಂದ ಮಾಡಿದ, ಬಣ್ಣ ರಹಿತ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಗಣಪತಿಯ ಅಲಂಕಾರಕ್ಕೆ ನೈಸರ್ಗಿಕ ಸಾಮಗ್ರಿಗಳನ್ನೇ ಬಳಸಬೇಕು. ವಿಸರ್ಜಿಸುವಾಗ ಸಾಧ್ಯವಾದಷ್ಠು ಮನೆಯಲ್ಲಿ ಬಕೆಟ್‍ಗಳಲ್ಲಿ ನೀರು ತುಂಬಿಸಿ ವಿಸರ್ಜಿಸಿ, ಇಲ್ಲವೆ ಲಭ್ಯವಿರುವ ಕಡೆಗಳಲ್ಲಿ ಸಂಚಾರಿ ವಿಸರ್ಜನಾ ವಾಹನ ಬಳಸಿ ಅಥವಾ ಕೆರೆಗಳಲ್ಲಿ ನಿಗಧಿಪಡಿಸಿದ ಸ್ಥಳದಲ್ಲಿ ಮಾತ್ರ ವಿಸರ್ಜಿಸುವುದು ಹಾಗೂ ವಿಸರ್ಜನೆಗೂ ಮುನ್ನಾ ಅಲಂಕಾರಿಕ ವಸ್ತುಗಳನ್ನು ತೆಗೆದುಹಾಕುವುದು. ವಿಸರ್ಜನಾ ಮೆರವಣಿಗೆಯಲ್ಲಿ ಸಾರ್ವಜನಿಕರಿಗೆ, ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡಚಣೆಯಾಗದಂತೆ ನಡೆದುಕೊಳ್ಳುವುದು.
9. ಪ್ರತಿಷ್ಠಾಪಿತ ಮೂರ್ತಿಯ ರಕ್ಷಣೆಗೆ ಸ್ವಯಂ ಸೇವಕರನ್ನು ನಿಯೋಜಿಸುವುದು. ನಿಯೋಜಿಸಲಾದ ಸ್ವಯಂಸೇವಕರ ಭಾವಚಿತ್ರ, ಹೆಸರು, ವಿಳಾಸ ಹಾಗೂ ಮೊಬೈಲ್ ಸಂಖ್ಯೆಯೊಂದಿಗೆ ಐ.ಡಿ ಕಾರ್ಡ್
10. ಸ್ವಯಂ ಸೇವಕರ ಹಗಲು ಮತ್ತು ರಾತ್ರಿ ಪಾಳಿಯ ಕಾವಲಿಗೆ ನಿಯೋಜಿಸಿರುವ ವೇಳಾಪಟ್ಟಿ (ಹೆಸರು ಮೊಬೈಲ್ ನಂಬರಿನೊಂದಿಗೆ) ಒದಗಿಸುವುದು ಹಾಗೂ ಪ್ರತಿಷ್ಠಾಪಿತ ಸ್ಥಳದಲ್ಲಿ ಒಂದು ರಿಜಿಸ್ಟರ್ ಇಟ್ಟು ಕಾವಲಿನ ವಿವರವನ್ನು ನಮೂದಿಸುವುದು.
11. ವ್ಯವಸ್ಥಾಪಕರು ಅಥವಾ ಕಾರ್ಯಕರ್ತರು, ಇತರರು ಬಲವಂತವಾಗಿ ಸಾರ್ವಜನಿಕರಿಂದ ಚಂದಾ ವಸೂಲಿ ಮಾಡುವುದು ಕಾನೂನುಬಾಹಿರವಾಗಿರುತ್ತದೆ ಅಥವಾ ಲಾಟರಿ ಇತ್ಯಾದಿ ಯೋಜನೆಯ ಮುಖಾಂತರ ಹಣ ಸಂಗ್ರಹಣೆ ಮಾಡ ಕೂಡದು. ಅಂತಹವರು ಕಂಡು ಬಂದರೆ ಪೊಲೀಸ್ ಇಲಾಖೆಗೆ ಸಾರ್ವಜನಿಕರು ಮಾಹಿತಿ ನೀಡುವುದು.
ಆದ್ದರಿಂದ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಟಿಯಿಂದ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಹಿನ್ನಲೆಯಲ್ಲಿ, ಮೇಲ್ಕಂಡ ಅಂಶಗಳಿಗೆ ಅನುಗುಣವಾಗಿ ಹಾಗೂ ನಿಬಂಧನೆಗಳಿಗೆ ಒಳಪಟ್ಟು ಮೂರ್ತಿ ಪ್ರತಿಷ್ಠಾಪನೆ, ಪೂಜಾ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ, ವಿಸರ್ಜನಾ ಮೆರವಣಿಗೆ ಹಾಗೂ ವಿಸರ್ಜನಾ ಕಾರ್ಯಕ್ರಮಗಳನ್ನು ಆಯೋಜಿಸುವುದು. ಮೇಲ್ಕಂಡ ನಿಬಂಧನೆಗಳನ್ನು ಉಲ್ಲಂಘನೆ ಕಂಡುಬಂದಲ್ಲಿ ಅಥವಾ ಶಾಂತಿ ಭಂಗ ಉಂಟುಮಾಡುವುದು ಕಂಡು ಬಂದಲ್ಲಿ ಕೂಡಲೇ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡಲು ಕೋರಲಾಗಿದೆ.
ಕ್ರ.ಸಂ ಪೊಲೀಸ್ ಅಧಿಕಾರಿಗಳು ಸ್ಥಿರ ದೂರವಾಣಿ
ಸಂಖ್ಯೆ ಮೊಬೈಲ್
ದೂರವಾಣಿ
1 ಪೊಲೀಸ್ ಅಧೀಕ್ಷಕರು 08226-222243 9480804601
2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು 08226-225979 9480804602
3 ಡಿ.ಎಸ್.ಪಿ ಚಾ-ನಗರ 08226-222090 9480804620
4 ಡಿ.ಎಸ್.ಪಿ ಕೊಳ್ಳೇಗಾಲ 08224-252840 9480804621
5 ಜಿಲ್ಲಾ ನಿಯಂತ್ರಣ ಕೊಠಡಿ 08226-222383 9480804600
ಆಗಸ್ಟ್ 23ರಂದು ಜಿಲ್ಲೆಗೆ ಕಂದಾಯ ಸಚಿವರ ಭೇಟಿ
ಚಾಮರಾಜನಗರ, ಆ. 20 (ಕರ್ನಾಟಕ ವಾರ್ತೆ):- ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರು ಆಗಸ್ಟ್ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 3.30ಗಂಟೆಗೆ ನಗರಕ್ಕೆ ಆಗಮಿಸಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಅರಸು ಅವರ ಕಾರ್ಯಕ್ರಮಗಳು ಇಂದಿಗೂ ಮಾದರಿ : ಸಚಿವ ಎಚ್.ಎಸ್.ಮಹದೇವಪ್ರಸಾದ್
ಚಾಮರಾಜನಗರ, ಆ. 20 (ಕರ್ನಾಟಕ ವಾರ್ತೆ):- ಸಮಾಜಿಕ ಕ್ರಾಂತಿ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರು ಜಾರಿಗೊಳಿಸಿದ ಮಹತ್ವದ ಯೋಜನೆ, ಕಾರ್ಯಕ್ರಮಗಳು ಇಂದಿಗೂ ದೇಶ ಹಾಗೂ ರಾಜ್ಯಗಳಿಗೆ ಮಾದರಿಯಾಗಿವೆ ಎಂದು ಸಹಕಾರ ಸಕ್ಕರೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ಅಭಿಪ್ರಾಯಪಟ್ಟರು.
ನಗರದ ಜೆಎಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಢಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆವತಿಯಿಂದ ಹಮ್ಮಿಕೊಳ್ಳಲಾಗಿದ್ದ ಡಿ.ದೇವರಾಜ ಅರಸು ಜನ್ಮ ಶತಮಾನೋತ್ಸವ ಸಮಾರೋಪ ಹಾಗೂ 101ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತಾನಾಡಿದರು.
ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನೇಕ ಕ್ರಾಂತಿಕಾರಕ ಯೋಜನೆಗಳನ್ನು ಅನುಷ್ಠಾನಕ್ಕೆ ತಂದರು. ಅವರು ಎಂಟು ವರ್ಷಗಳ ಅವಧಿಯಲ್ಲಿ ಕೈಗೊಂಡ ಜನಪರ ತೀರ್ಮಾನಗಳು ಮಾದರಿಯಾಗಿವೆ. ವಿಶೇಷವಾಗಿ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಇದರ ಸಮರ್ಪಕ ಅನುಷ್ಠಾನಕ್ಕೆ ನ್ಯಾಯ ಮಂಡಳಿ ರಚಿಸಿ ದುಡಿಯುವ ಜನರಿಗೆ ಭೂಮಿಯ ಹಕ್ಕು ಪಡೆಯಲು ಅನುಕೂಲ ಕಲ್ಪಿಸಿದರು ಎಂದರು.
ಹಿಂದುಳಿದ ವರ್ಗಗಳಿಗೆ ಉದ್ಯೋಗ ಸೇರಿದಂತೆ ಇತರೆ ಸ್ಥಾನಮಾನಗಳನ್ನು ಕಲ್ಪಿಸಿಕೊಡುವ ಉದ್ದೇಶದಿಂದ ಹಾವನೂರು ಆಯೋUದÀ ವರದಿಯನ್ನು ಅನುಷ್ಠಾನಕ್ಕೆ ತಂದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದರೂ ಲೆಕ್ಕಿಸದೇ ದಿಟ್ಟತನದಿಂದ ವರದಿ ಜಾರಿಗೆ ತಂದು ಹಿಂದುಳಿದಜನತೆ ಅನುಕೂಲ ಪಡೆಯಲು ಕಾರಣರಾದರು ಎಂದು ಸಚಿವರು ತಿಳಿಸಿದರು.
ಅರಸು ಅವರು ವಿವಿಧ ಖಾತೆಗಳನ್ನು ನಿರ್ವಹಿಸಿ ಯಶ್ವಸಿಯಾದರು ಸ್ವಾಂತ್ರತ್ಯಕೂ ಮೊದಲೇ ಪ್ರಜಾಪ್ರತಿನಿಧಿ ಸಭೆಯಿಂದ ಆಯ್ಕೆಯಾಗಿದ್ದರು. ಮೈಸೂರು ರಾಜ್ಯವನ್ನು ಕರ್ನಾಟಕವೆಂದು ನಾಮಕರಣ ಮಾಡಿದರು. ಆಡಳಿತದಲ್ಲಿ ಕನ್ನಡ ಭಾಷೆಯನ್ನು ಜಾರಿಗೆ ತಂದ ಕೀರ್ತಿ ಅರಸು ಅವರಿಗೆ ಸಲ್ಲುತ್ತದೆ ಎಂದರು.
ಇದೇ ವೇಳೆ ಅರಸು ಅವರೋಂದಿಗಿನ ಒಡನಾಟವನ್ನು ಸಚಿವರು ವಿವರವಾಗಿ ಕಾರ್ಯಕ್ರಮದಲ್ಲಿ ತೆರೆದಿಟ್ಟರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಮಾತಾನಾಡಿ ಅರಸು ಅವರು ರಾಜ್ಯದ ಚಿತ್ರಣವನ್ನೇ ಬದಲಾವಣೆ ಮಾಡಿ ಅಭಿವೃದ್ದಿಗೆ ಬುನಾದಿ ಹಾಕಿಕೊಟ್ಟರು. ಅಲ್ಪಸಂಖ್ಯಾತರು, ಹಿಂದುಳಿದವರು, ದೀನದಲಿತರು ಸೇರಿದಂತೆ ಎಲ್ಲ ವರ್ಗಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಧೀಮಂತ ನಾಯಕ ಅರಸು ಎಂದರು.
ಅಧ್ಯಕ್ಷತೆವಹಿಸಿ ಮಾತಾನಾಡಿದ ಗ್ರಾಮೀಣಾಭೀವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶೀ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅರಸು ಅವರು ಅನೇಕ ಕೊಡುಗೆಗಳನ್ನು ನೀಡಿದ ಅಭಿವೃದ್ದಿ ಹರಿಕಾರರು. ಅವರ ಅವಧಿಯಲ್ಲಿಯೇ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಸ್ಥಾಪನೆಯಾಯಿತು. ರೈತರ ಕಷ್ಟಗಳ ಬಗ್ಗೆ ಅರಸು ಅವರಿಗೆ ಅರಿವಿತ್ತು. ಹೀಗಾಗಿ ಅನೇಕ ಸುಧಾರಣೆಗಳನ್ನು ತಂದರು ಎಂದರು.
ದೇವರಾಜ ಅರಸು ಜನ್ಮ ಶತಮಾನೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಫರ್ಧೆಯಲ್ಲಿ ವಿಜೇತರಾದ ವಿಧ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ನಿಗಮದಿಂದ ಸಾಲಸೌಲಭ್ಯದ ಚೆಕ್‍ಗಳನ್ನು ಫಲಾನುಭವಿಗಳಿಗೆ ವಿತರಿಸಿದರು.
ಸಾಹಿತಿ ಹಾಗೂ ಸಂಸ್ಕøತಿ ಚಿಂತಕರಾದ ಪ್ರೋ.ಕಾಳೇಗೌಡ ನಾಗವಾರ ಅವರು ಅರಸು ಅವರ ಕುರಿತು ಮುಖ್ಯ ಭಾಷಣ ಮಾಡಿದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಮಾತಾನಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಸದಸ್ಯರಾದ ಕೆ.ಪಿ.ಸದಾಶಿವಮೂರ್ತಿ, ಕೆರೆಹಳ್ಳಿನವೀನ್. ಅಶ್ವಿನಿ, ಸಿ.ಎನ್.ಬಾಲರಾಜು, ಕೆ.ಎಸ್.ಮಹೇಶ್, ಬಿ.ಕೆ.ಬೊಮ್ಮಯ್ಯ, ಶಶಿಕಲಾ ಸೋಮಲಿಂಗಪ್ಪ, ನಗರಾಭೀವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫೀ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಉಪಾಧ್ಯಕ್ಷರಾದ ದಯನಿಧಿ, ನಗರಸಭೆ ಅಧ್ಯಕ್ಷರಾದ ರೇಣುಕಾ, ಉಪಾಧ್ಯಕಾರಾದ ಆರ್.ಎಂ.ರಾಜಪ್ಪ, ಜಿಪಂ.ಸಿ.ಇ.ಓ.ಹೆಪ್ಸಿಬಾ ರಾಣಿ ಕೊರ್ಲಾಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲ ದೀಪ್ ಕುಮಾರ್ ಆರ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ. ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಾಲಯ ಬಳಿ ಅರಸು ಅವರ ಭಾವಚಿತ್ರ ಹಾಗೂ ಸ್ತಬ್ಧಚಿತ್ರ ಮೆರವಣಿಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು.
ಎಂಜಿನಿಯರಿಂಗ್ ಕಾಲೇಜಿಗೆ ಅಗತ್ಯ ಸೌಲಭ್ಯ : ಸಚಿವ ಮಹದೇವಪ್ರಸಾದ್
ಚಾಮರಾಜನಗರ, ಆ. 20 (ಕರ್ನಾಟಕ ವಾರ್ತೆ):- ನಗರದ ಹೊರವಲಯದಲ್ಲಿರುವ ಬೇಡರಪುರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿಗೆ ಹಂತ ಹಂತವಾಗಿ ಮತ್ತಷ್ಟು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಸಹಕಾರ ಸಕ್ಕರೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ತಿಳಿಸಿದರು.
ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿಂದು ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೆರಿಸಿ ಅವರು ಮಾತಾನಾಡಿದರು.
ಕಳೆದ ಹತ್ತು ವರ್ಷಗಳ ಹಿಂದೆ ಆರಂಭವಾದ ಎಂಜಿನಿಯರಿಂಗ್ ಕಾಲೇಜು ಸ್ವಂತ ಕಟ್ಟಡ ಹೊಂದಿದೆ. ಕಾಲೇಜಿಗೆ ಸಾಗುವ ರಸ್ತೆ ನಿರ್ಮಾಣಕ್ಕೆ ಈಗಾಗಲೇ ಚಾಲನೇ ನೀಡಲಾಗಿದೆ. ವಿದ್ಯಾರ್ಥಿನಿಯರ ಹಾಸ್ಟೇಲ್ ಕಟ್ಟಡಕ್ಕೂ ಶಂಕುಸ್ಥಾಪನೆ ನೆರವೆರಿಸಿದ್ದು ಕಾಮಗಾರಿ ಆರಂಭವಾಗಿದೆ ಎಂದರು.
ಕಾಲೇಜಿಗೆ ಗ್ರಂಥಾಲಯ, ಪ್ರಯೋಗಾಲಯ, ಕಾರ್ಯಾಗಾರ ಕಟ್ಟಡಗಳನ್ನು ನಿರ್ಮಿಸಿಕೊಡಬೇಕೆಂಬ ಬೇಡಿಕೆ ಬಂದಿದೆ. ಅನುದಾನ ಲಭ್ಯತೆಯನ್ನು ಅನುಸರಿಸಿ ಹಂತ ಹಂತವಾಗಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.
ಕಾಲೇಜಿಗೆ ನೀಡಬೇಕಿರುವ ಸೌಲಭ್ಯಗಳ ಸಂಬಂಧ ಉನ್ನತ ಶಿಕ್ಷಣ ಸಚಿವರ ಗಮನಕ್ಕೂ ತಂದಿದ್ದೇನೆ. ಕಾಲೇಜು ಕ್ಯಾಂಪಸ್ ಪ್ರದೇಶವು ವಿಸ್ತಾರವಾಗಿದೆ. ಆದರೇ ಆವರಣವನ್ನು ಸಮತಟ್ಟು ಗೊಳಿಸಬೇಕಿದೆ. ಇಲ್ಲಿಯ ಪ್ರದೇಶದಲ್ಲಿ ತೋಟಗಾರಿಕೆ ಇಲಾಖೆಯಿಂದ ಹೂ, ಗಿಡಗಳನ್ನು ಬೆಳಸಿ ಅಭಿವೃದ್ದಿಗೊಳಿಸಬೇಕಿದೆ ಎಂದರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಮಾತಾನಾಡಿ ವಿದ್ಯಾರ್ಥಿಗಳಿಗೆ 1.5 ಕೋಟಿ ರೂ ವೆಚ್ಚದಲ್ಲಿ ಹಾಸ್ಟೇಲ್ ನಿರ್ಮಾಣ ವಾಗಲಿದೆ ಇದರಿಂದ ದೂರದ ಜಿಲ್ಲೆಗಳಿಂದ ಅಧ್ಯಯನಕ್ಕೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಮೈಸೂರಿನಿಂದ ನಗರ ಸಂರ್ಪಕಿಸುವ ರಾಷ್ಟ್ರೀಯ ಹೆದ್ದಾರಿ ಕೆಲಸವು ಭರದಿಂದ ಸಾಗಿದೆ ಎಂದರು.
ಶಾಸಕರಾದ ಸಿ.ಪುಟ್ಟಂಗಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಸದಸ್ಯರಾದ ಸಿ.ಎನ್.ಬಾಲರಾಜು, ನಗರಸಭೆ ಅಧ್ಯಕ್ಷರಾದ ರೇಣುಕಾ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಆ. 24ರಂದು ನಗರದಲ್ಲಿ ದಲಿತ ವಚನಕಾರರ ಜಯಂತಿ ಆಚರಣೆ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಗತಿಪರ ಮಠಾಧೀಶರ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಪೀಠಾಧ್ಯಕ್ಷರಾದ ಡಾ. ಜ್ಞಾನಪ್ರಕಾಶ ಸ್ವಾಮಿ ಅವರು ದಿವ್ಯ ಸಾನಿಧ್ಯ ವಹಿಸುವರು. ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು ಎಂದು ಪ್ರಕಟಣೆ ತಿಳಿಸಿದೆ.
ಮಂಡ್ಯದ ಸರ್ ಎಂ ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರದ ಕನ್ನಡ ಪ್ರಾಧ್ಯಾಪಕರಾದ ಡಾ. ಹೊಂಬಯ್ಯ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಬೆಳಿಗ್ಗೆ 9.30 ಗಂಟೆಗೆ ರಾಯಚೂರಿನ ಖ್ಯಾತ ಅಂತರ ರಾಷ್ಟ್ರೀಯ ವಚನ ಸಂಗೀತ ಗಾಯಕರಾದ ಅಂಬಯ್ಯನುಲಿ ಮತ್ತು ತಂಡದವರಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆ. 23ರಂದು ಜಿಲ್ಲೆಗೆ ಕಂದಾಯ ಸಚಿವರ ಭೇಟಿ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):- ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪ ಅವರು ಆಗಸ್ಟ್ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಮಧ್ಯಾಹ್ನ 3.30 ಗಂಟೆಗೆ ನಗರಕ್ಕೆ ಆಗಮಿಸಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಆ. 24ರಂದು ರಾಜ್ಯ ಕಸಾಪ ಅಧ್ಯಕ್ಷರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):- ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷರಾದ ಡಾ. ಮನು ಬಳಿಗಾರ್ ಅವರು ಆಗಸ್ಟ್ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ಅಂದು ಮಧ್ಯಾಹ್ನ 12 ಗಂಟೆಗೆ ನಗರಕ್ಕೆ ಆಗಮಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಜಿಲ್ಲಾ ಗ್ರಂಥಾಲಯ ಇಲಾಖೆಯ ಸಹಕಾರದೊಂದಿಗೆ ಗ್ರಂಥಾಲಯ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 12.15 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರು ಆಯೋಜಿಸಿರುವ ಚುನಾವಣೆ ಸುಧಾರಣೆ ಹಾಗೂ ನಿಬಂಧನೆ ತಿದ್ದುಪಡಿ ಕುರಿತು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಸಮಿತಿಯ ಸಂಚಾಲಕರಾದ ಎನ್.ಕೆ. ನಾರಾಯಣ ಅವರೊಂದಿಗೆ ಭಾಗವಹಿಸುವರು. ಮಧ್ಯಾಹ್ನ 2.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ ಮಲೆಯೂರು ಗುರುಸ್ವಾಮಿಯವರ ಸಾಹಿತ್ಯ ಸುವರ್ಣಾವತಿಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 4.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಹಿರಿಯ ಸಾಹಿತಿಗಳು, ಕಲಾವಿದರೊಂದಿಗೆ ಸಮಾಲೋಚನೆ ನಡೆಸುವರು. ಬಳಿಕ ಬೆಂಗಳೂರಿಗೆ ತೆರಳುವರೆಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಹಾಗೂ ಸಂಯೋಜನಾಧಿಕಾರಿ ಬಿ.ಎನ್. ಪರಡ್ಡಿ ತಿಳಿಸಿದ್ದಾರೆ.
ಆ. 25ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ತಾಲೂಕಿನ ಹೊನ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಆಗಸ್ಟ್ 25ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಕಲವಾಡಿ, ಯರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಡೊಳ್ಳಿಪುರ, ಪುಣಜನೂರು, ಬಿಸಲವಾಡಿ, ಅಮಚವಾಡಿ, ಎನ್ ಜೆ ವೈ ಮಾದಲವಾಡಿ, ಎನ್ ಜೆ ವೈ ಚನ್ನಪ್ಪನಪುರ ಮಾರ್ಗಗಳಿಗೆ ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯರವರೆಗೆ ವಿದ್ಯುತ್ ಸರಬರಾಜಿಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರೀಯ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.
ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿ ಯೋಜನೆ ಅನ್ವಯವಾಗಲಿದೆ. ಏಷ್ಯನ್ ಗೇಮ್ಸ್, ಕಾಮನ್ ವೆಲ್ತ್ ಗೇಮ್ಸ್, ಕಾಮನ್ ವೆಲ್ತ್ ಚಾಂಪಿಯನ್‍ಶಿಪ್, ಒಲಂಪಿಕ್ ಗೇಮ್ಸ್, ವಲ್ರ್ಡ್ ಚಾಂಪಿಯನ್‍ಶಿಪ್, ಏಷಿಯನ್ ಚಾಂಪಿಯನ್‍ಶಿಪ್, ಪ್ಯಾರಾ ಒಲಂಪಿಕ್, ನ್ಯಾಷನಲ್ ಗೇಮ್ಸ್ ಇನ್ನಿತರ ಕ್ರೀಡೆಗಳಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಸಲಾಗುತ್ತದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 27ರ ಒಳಗೆ ಸಲ್ಲಿಸಬೇಕಿದೆ. ಮಾಹಿತಿಗೆ ಸದರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-224932 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2016-17ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನೀಡಲಾಗುವ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 31ರವರೆಗೆ ವಿಸ್ತರಿಸಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕಡೆಯ ದಿನಾಂಕಕ್ಕೆ ಕಾನೂನು ಪದವಿಯಲ್ಲಿ ತೇರ್ಗಡೆಯಾಗಿ 2 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನಲ್ಲಿ ಈಗಾಗಲೇ ಹೆಸರು ನೊಂದಾಯಿಸಿರಬೇಕು. ಅಭ್ಯರ್ಥಿಗಳು 40ರ ವಯೋಮಿತಿಯೊಳಗಿರಬೇಕು. ವಾರ್ಷಿಕ ಆದಾಯದ ಮಿತಿ 2 ಲಕ್ಷ ರೂ. ಇರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು 2 ಸಾವಿರ ರೂ. ಶಿಷ್ಯ ವೇತನ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ಯಳಂದೂರು ತಾಲೂಕಿನ ಅಂಬಳೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕಡೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಗ್ರಾಮ ಪಂಚಾಯಿತಿ ಕಚೇರಿ ಸಂಪರ್ಕಿಸುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ವಾಣಿಜ್ಯಶಾಸ್ತ್ರ, ರಸಾಯನಶಾಸ್ತ್ರ, ಭೂಗೋಳಶಾಸ್ತ್ರ, ಭೌತಶಾಸ್ತ್ರ ವಿಷಯಗಳ ಹುದ್ದೆಗಳು ಖಾಲಿ ಇವೆ. ಈ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ. 55ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿದ್ದು ಬಿಎಡ್ ಪದವಿಯನ್ನು (ವಾಣಿಜ್ಯಶಾಸ್ತ್ರ ವಿಷಯ ಹೊರತುಪಡಿಸಿ) ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಆಗಸ್ಟ್ 25ರೊಳಗೆ ನೇರವಾಗಿ ಅರ್ಜಿ ಸಲ್ಲಿಸಬೇಕಿದೆ ಎಂದು ಪ್ರಕಟಣೆ ತಿಳಿಸಿದೆ.
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):– ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ದಸರಾ ಕ್ರೀಡಾಕೂಟವನ್ನು ಆಯೋಜಿಸಿದೆ.
ಆಗಸ್ಟ್ 27ರಂದು ಯಳಂದೂರಿನ ಸರ್ಕಾರಿ ಪದವಿಪೂರ್ವ ಕಾಲೇಜು, ಆಗಸ್ಟ್ 29ರಂದು ಗುಂಡ್ಲುಪೇಟೆಯ ಡಿ.ದೇವರಾಜ ಅರಸು ತಾಲೂಕು ಕ್ರೀಡಾಂಗಣ, ಆ. 31ರಂದು ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಹಾಗೂ ಸೆಪ್ಟೆಂಬರ್ 2ರಂದು ಕೊಳ್ಳೇಗಾಲದ ತಾಲೂಕು ಕ್ರಿಡಾಂಗಣ ಹಾಗೂ ಮಹದೇಶವರ ಪ್ರಥಮದರ್ಜೆ ಸರ್ಕಾರಿ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಆಯಾ ದಿನದಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.
ಪುರುಷರಿಗೆ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4*100 ಮೀ. ರಿಲೇ, 100 ಮೀ. ಹರ್ಡಲ್ಸ್ ಸ್ಪರ್ಧೆಗಳಿವೆ.
ಮಹಿಳೆಯರಿಗೆ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4*100 ಮೀ. ರಿಲೇ, 100 ಮೀ. ಹರ್ಡಲ್ಸ್ ಸ್ಪರ್ಧೆಗಳಿವೆ.
ಗುಂಪು ವಿಭಾಗದಲ್ಲಿ ವಾಲಿಬಾಲ್, ಕಬಡ್ಡಿ, ಖೊಖೋ, ಫುಟ್ ಬಾಲ್ (ಪುರುಷರಿಗೆ), ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್ ಸ್ಪರ್ಧೆಗಳಿವೆ.
ತಾಲೂಕು ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು, ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಲಿದ್ದಾರೆ.
ಭಾಗವಹಿಸುವವರು ಆಧಾರ್ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಾಹನ ಪರವಾನಗಿ ಈ ಪೈಕಿ ಗುರುತಿನ ಚೀಟಿ, 2 ಭಾವಚಿತ್ರ ತರಬೇಕು. ವಿವರಗಳಿಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಥವಾ ದೂ. ಸಂಖ್ಯೆ 08226-224932, ಮೊಬೈಲ್ 9611172984, 9482718278, 9880211027, 9945615695 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
_______________________-
ಆಗಸ್ಟ್ 23ರಂದು ಹೊಂಡರಬಾಳುವಿನಲ್ಲಿ ಪ್ರಾದೇಶಿಕ ಮಟ್ಟದ ಖೊಖೊ ಕ್ರೀಡಾಕೂಟ
ಚಾಮರಾಜನಗರ, ಆ. 22 (ಕರ್ನಾಟಕ ವಾರ್ತೆ):- ಪ್ರಾದೇಶಿಕ ಮಟ್ಟದ ಖೊಖೊ ಕ್ರೀಡಾಕೂಟವು ಆಗಸ್ಟ್ 23 ಹಾಗೂ 24ರಂದು ಚಾಮರಾಜನಗರ ತಾಲೂಕಿನ ಹೊಂಡರಬಾಳುವಿನಲ್ಲಿರುವ ಜವಾಹರ್ ನವೋದಯ ವಿದ್ಯಾಲಯದ ಅವರಣದಲ್ಲಿ ನಡೆಯಲಿದೆ.
ಜವಾಹರ್ ನವೋದಯ ವಿದ್ಯಾಲಯವು ಖೊಖೊ ಕ್ರೀಡಾಕೂಟದ ಆತಿಥ್ಯ ವಹಿಸಿಕೊಂಡಿದೆ. ಆಂದ್ರಪ್ರದೇಶ, ತೆಲಂಗಾಣ, ಪಾಂಡಿಚೇರಿ, ಕರ್ನಾಟಕ ಸೇರಿದಂತೆ ವಿವಿಧ 8 ಕ್ಲಸ್ಟರ್‍ಗಳಿಂದ ಅಂದಾಜು 500 ಸ್ಪರ್ಧಿಗಳು ಭಾಗವಹಿಸಲಿದ್ದಾರೆ.
ಆಗಸ್ಟ್ 23ರಂದು ಬೆಳಿಗ್ಗೆ 9 ಗಂಟೆಗೆ ಖೊಖೊ ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್, ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಣಾಧಿಕಾರಿ ಆರ್. ಆಶೋಕ್ ಕುಮಾರ್, ನಗರಸಭೆ ಮಾಜಿ ಅಧ್ಯಕ್ಷರಾದ ಎಸ್. ನಂಜುಂಡಸ್ವಾಮಿ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗಶ್ರೀ ಪ್ರತಾಪ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 24ರಂದು ಮಧ್ಯಾಹ್ನ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಜಯಪ್ರಕಾಶ್, ದೀನಬಂಧು ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಜಿ.ಎಸ್. ಜಯದೇವ್, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಚಾಮರಾಜನಗರ ಶಾಖೆಯ ಹಿರಿಯ ವ್ಯವಸ್ಥಾಪಕರಾದ ಎಂ. ಲತಾ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
______________
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment