Monday, 8 August 2016

26-07-2016 ರಿಂದ 09-08-2016 ಚಾಮರಾಜನಗರ ಪ್ರಮುಖ ಸುದ್ದಿಗಳು



ZÁªÀÄgÁd£ÀUÀgÀ : PÀ£ÁðlPÀ ¥ËæqÀ ²PÀët ¥ÀjÃPÁë ªÀÄAqÀ½ (S.S.L.C Board) ¬ÄAzÀ dįÉÊ 2016 gÀAzÀÄ £ÀqÉzÀ 2016-17 £Éà ¸Á°£À Office Automation and Graphic Designer PÀA¥ÀÆålgï ¥ÀjÃPÉëAiÀÄ°è ZÁªÀÄgÁd£ÀUÀgÀ f¯ÉèAiÀÄ°èAiÉÄà «±ÀĪÀ¯ï ¸Á¥sÉÖPï vÀgÀ¨ÉÃw PÉÃAzÀæzÀ «zÁåyðUÀ¼ÀÄ GvÀÛªÀÄ ¸ÁzÀ£ÉUÉÊ¢zÁÝgÉ.
«±ÀĪÀ¯ï ¸Á¥sÉÖPï vÀgÀ¨ÉÃw  PÉÃAzÀæPÉÌ ±ÉÃ.99 ¥À°vÁA±À ªÀÄvÀÄÛ PÉ.Dgï.ZÉÊvÀæ, J.JªÀiï.ªÉÄÃWÀ²æÃ, ¹AzsÀÄ ªÀÄvÀÄÛ ¦.¹ävÁ JA§ «zÁåyðUÀ¼ÀÄ CvÀÄå£ÀßvÀ ±ÉæÃtÂAiÀÄ°è GwÛÃtðgÁUÀĪÀ ªÀÄÆ®PÀ ¸ÀA¸ÉÜUÉ QÃwð vÀA¢zÁÝgÉ.
GvÀÛªÀÄ ¥À°vÁA±ÀPÉÌ PÁgÀtgÁzÀ J¯Áè «zÁåyðUÀ½UÉ ¸ÀA¸ÉÜAiÀÄ ¥ÁæA±ÀÄ¥Á®gÁzÀ PÉ.©½VjgÀAUÀ gÀªÀgÀÄ, ²PÀëPÀgÁzÀ ¸ÀÄzsÁgÁtÂ, £ÀAdÄAqÀ¸Áé«Ä, ¨sÀªÁ¤, ¥ÀæPÁ±ï, fêÀ£ï ºÁUÀÆ PÁwðPï gÀªÀgÀÄ C©ü£ÀA¢¹zÁÝgÉ.
G£ÀßvÀ ±ÉæÃt ¥ÀqÉzÀ «zÁåyðUÀ¼À ¨sÁªÀavÀæ
                             
¦.¹ävÁ              ¹AzsÀÄ           J.JªÀiï.ªÉÄÃWÀ²æÃ,           PÉ.Dgï.ZÉÊvÀæ,














ರಸ್ತೆ ವಿಸ್ತರಣೆಗೆ ಸಹಕರಿಸಲು ಜಿಲ್ಲಾಧಿಕಾರಿ ಮನವಿ

ಚಾಮರಾಜನಗರ, ಜು. 26 (ಕರ್ನಾಟಕ ವಾರ್ತೆ) :  ನಗರದ ಪ್ರಮುಖ ರಸ್ತೆಗಳನ್ನು ಈಗಾಗಲೇ ನಿರ್ಧರಿಸಿರುವಂತೆ 80 ಅಡಿಗೆ ವಿಸ್ತರಿಸಲಾಗುತ್ತಿದ್ದು, ಇದಕ್ಕೆ ರಸ್ತೆ ಬದಿಯ ಅಂಗಡಿ ಉದ್ಯಮ ಮಾಲೀಕರು, ವಸತಿ ನಿವೇಶನ ಮಾಲೀಕರು ಪೂರಕವಾಗಿ ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ಮನವಿ ಮಾಡಿದರು.

ನಗರದ ಜೆ.ಎಚ್. ಪಟೇಲ್ ¸ಭಾಂಗಣದಲ್ಲಿಂದು ರಸ್ತೆ ವಿಸ್ತರಣೆ ಸಂಬಂಧ ನಡೆದ ನಾಗರಿಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರಸಭೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 209 ರ ರಸ್ತೆಯ ಸಂತೇಮರಹಳ್ಳಿ ರಸ್ತೆ, ಕೇಂದ್ರಿಯ ವಿದ್ಯಾಲಯ ರಸ್ತೆ, ಡೀವಿಯೇಷನ್ ರಸ್ತೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮಾರ್ಗವಾಗಿ ಸಾಗುವ ಸುಲ್ತಾನ್ ಷರೀಪ್ ವೃತ್ತದವರೆಗಿನ ಫಾರೆಸ್ಟ್ ಆಫೀಸ್ ರಸ್ತೆಯನ್ನು 25 ಮೀಟರ್‍ಗೆ ವಿಸ್ತರಿಸಲಾಗುತ್ತಿದೆ.  ಈ ಮಾರ್ಗಗಳಲ್ಲಿ ಬರುವ ಅಂಗಡಿ, ವಾಣಿಜ್ಯ, ಉದ್ದಿಮ, ವಸತಿ ನಿವೇಶನದ ಮಾಲೀಕರು ರಸ್ತೆ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ತಿಳಿಸಿದರು.

ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ ರಸ್ತೆ, ಕೆರೆಗಳು, ಸಾರ್ವಜನಿಕರ ಆಸ್ತಿಯಾಗಿದೆ. ಪಟ್ಟಣದ ಅಭಿವೃದ್ದಿಗೆ ರಸ್ತೆಗಳು ಸಹ ಪೂರಕವಾಗಿ ಪ್ರಗತಿಯಾಗಬೇಕಿದೆ.  ಈ ಹಿನ್ನೆಲೆಯಲ್ಲಿ 25 ಮೀಟರ್‍ಗಳಷ್ಟು ರಸ್ತೆಯನ್ನು ವಿಸ್ತರಣೆ ಮಾಡಲಾಗುತ್ತಿದೆ. ಹೀಗಾಗಿ ರಸ್ತೆ ಅಭಿವೃದ್ಧಿಗೆ ಯಾವುದೇ ವಿರೋಧ ತೋರದೆ ಪಟ್ಟಣದ ಪ್ರಗತಿಗೆ ಸ್ಪಂದಿಸಬೇಕೆಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ರಸ್ತೆ ವಿಸ್ತರಣೆಯಿಂದ ಮನೆ ಕಳೆದುಕೊಳ್ಳುವ ಕಡುಬಡಜನರಿಗೆ ಯಡಬೆಟ್ಟದ ಬಳಿ ನಿವೇಶನ ನೀಡಲು ಚಿಂತನೆ ನಡೆಸಲಾಗುವುದು. ಅಲ್ಲದೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅವಕಾಶ ಮಾಡಿಕೊಡಲಾಗುವುದು.  ಮನೆ ನಿವೇಶನ ಮಾಲೀಕರು ಮೂಲ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. 

ಇದೇ ವೇಳೆ ರಸ್ತೆ ಹಾದು ಹೋಗುವ ಮಾರ್ಗದಲ್ಲಿ ಅಂಗಡಿ ಮುಂಗಟ್ಟು ಹೊಂದಿರುವ ಮಾಲೀಕರು ಇತರೆ ಮುಖಂಡರು ತಮ್ಮ ಮನವಿಗಳನ್ನು ಸಲ್ಲಿಸಿದರು.

ಈ ಎಲ್ಲಾ ಅಹವಾಲುಗಳನ್ನು ಪೂರ್ಣವಾಗಿ ಆಲಿಸಿದ ಬಳಿಕ ಸಭೆಯಲ್ಲಿ ಮತ್ತೊಮ್ಮೆ ಅಂತಿಮವಾಗಿ ಮಾತನಾಡಿದ ಜಿಲ್ಲಾಧಿಕಾರಿ ರಾಮು ಅವರು ಎಲ್ಲರ ಅಭಿಪ್ರಾಯಗಳನ್ನು ಆಲಿಸಿದ್ದೇನೆ. ರಸ್ತೆ ಅಭಿವೃದ್ಧಿ ನೆಪದಲ್ಲಿ ಯಾರಿಗೂ ತೊಂದರೆಕೊಡುವ ಉದ್ದೇಶ ಇಲ್ಲ.  ಪಟ್ಟಣದ ರಾಜಮಾರ್ಗಗಳು ಇಡೀ ನಗರಕ್ಕೆ ಮುಕುಟವಿದ್ದಂತೆ, ಇಲ್ಲಿಯ ರಸ್ತೆಗಳು ಅಭಿವೃದ್ದಿಯಾದರೆ ನಗರಕ್ಕೂ ಶೋಭೆ ತರುತ್ತ್ತದೆ. ಇನ್ನು ಮುಂದಿನ 50 ವರ್ಷಗಳನ್ನು ಗಮನದಲ್ಲಿಟ್ಟುಕೊಂಡು ಪಟ್ಟಣವು ಯಾವ ರೀತಿ ಅಭಿವೃದ್ಧಿಯಾಗಬೇಕಿದೆ ಅದಕ್ಕೆ ಪೂರಕವಾಗಿ ರಸ್ತೆಯನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದರು.

ಪ್ರಸ್ತುತ ಕೆಲವರು 60 ಅಡಿಗೆ ರಸ್ತೆಯನ್ನು ವಿಸ್ತರಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಇದರಿಂದ ಯಾವುದೇ ಪ್ರಯೋಜನವಿಲ್ಲ. ರಸ್ತೆ 80 ಅಡಿಗೆ ವಿಸ್ತಾರವಾಗುವುದರಿಂದ ವಾಣಿಜ್ಯ ಅಂಗಡಿ ಉದ್ದಿಮೆಗಳ ಮುಂದೆ ವಾಹನ ನಿಲುಗಡೆಗೂ ಅವಕಾಶವಾಗಲಿದೆ. 60 ಅಡಿಗೆ ಮಾತ್ರ ರಸ್ತೆ ನಿರ್ಮಾಣವಾದರೆ ವಾಹನಗಳ ಸಂಚಾರಕ್ಕೆ ಮಾತ್ರ ಅನುಕೂಲವಾಗಲಿದೆ ಹೊರತು ಯಾವುದೇ ವಾಹನಗಳ ನಿಲುಗಡೆಗೂ ಸಾಧ್ಯವಾಗುವುದಿಲ್ಲ. ಇದರಿಂದ ಉದ್ದಿಮೆ ವಹಿವಾಟಿಗೂ ಅನುಕೂಲವಾಗುವುದಿಲ್ಲ ಎಂಬುದನ್ನು ಸಹ ಮನಗಾಣಬೇಕೆಂದು ಜಿಲ್ಲಾಧಿಕಾರಿಯವರು ಸ್ಪಷ್ಟಪಡಿಸಿದರು.
ರಸ್ತೆ ವಿಸ್ತರಣೆಯಿಂದ ಮನೆ, ಕಟ್ಟಡ ಕಳೆದುಕೊಳ್ಳುವ ಮಾಲೀಕರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ.  ಅಭಿವೃದ್ಧಿ ವಿಷಯದಲ್ಲಿ ಸಂಕುಚಿತ ಮನೋಭಾವನೆ ಹೊಂದುವುದು ಬೇಡ, ಪಟ್ಟಣದ ಅಭಿವೃದ್ಧಿಗೆ ಕೈಜೋಡಿಸಿ, ರಸ್ತೆ ವಿಸ್ತರಣೆ ಸಂಬಂಧ ಚರ್ಚಿಸಲು ಗರಿಷ್ಠ 10 ಮಂದಿ ಸಮಿತಿಯನ್ನು ನಿಮಲ್ಲಿಯೇ ನೇಮಕ ಮಾಡಿಕೊಂಡು, ನಮ್ಮೊಂದಿಗೆ ಸಮಾಲೋಚಿಸಿ ಒಟ್ಟಾರೆ ನಗರದ ಪ್ರಗತಿಗೆ ನಿಮ್ಮಲ್ಲರ ಸಹಕಾರ ನೀಡಿ ಎಂದು ಜಿಲ್ಲಾಧಿಕಾರಿ ರಾಮು ಅವರು ಕೋರಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇನಾಯತ್‍ವುಲ್ಲಾ ಷರೀಪ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಾಂತರಾಜು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಎಚ್.ಎಸ್. ನಿರಂಜನಮೂರ್ತಿ, ಇತರರು ಸಭೆಯಲ್ಲಿ ಹಾಜರಿದ್ದರು.

ಜು. 27ರಂದು ಡೆಂಗೆ, ಚಿಕುನ್ ಗುನ್ಯಾ ರೋಗ ತಡೆ ಜಾಗೃತಿ ಜಾಥಾ
ಚಾಮರಾಜನಗರ, ಜು. 26 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗೆ ವಿರೋಧಿ ಮಾಸಾಚರಣೆ ಅಂಗವಾಗಿ ಡೆಂಗೆ ಮತ್ತು ಚಿಕುನ್ ಗುನ್ಯಾ ರೋಗ ಹರಡದಂತೆ ವಹಿಸಬೇಕಿರುವ ಮುನ್ನೆಚ್ಚರಿಕೆ ಮತ್ತು ನಿಯಂತ್ರಣಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದ ಆವರಣದ ಬಳಿ ಜಾಥಾ ಹೊರಡಲಿದೆ.
ಶಾಲಾ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಜನಜಾಗೃತಿ ಜಾಥಾದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜು. 27ರಂದು ಹರದನಹಳ್ಳಿಯಲ್ಲಿ ಡೀಸಿ, ಸಿಇಓ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 26 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿ ಕೇಂದ್ರದ ನಾಡ ಕಚೇರಿ ಆವರಣದಲ್ಲಿ ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಸಮ್ಮುಖದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಜು. 30ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 26 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.

ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ. 


ಫಸಲ್ ವಿಮೆ ಯೋಜನೆ ಪ್ರಯೋಜನಕ್ಕೆ ಜಿಲ್ಲಾಧಿಕಾರಿ ಕರೆ
ಚಾಮರಾಜನಗರ, ಜು. 25 (ಕರ್ನಾಟಕ ವಾರ್ತೆ):- ಮುಂಗಾರು ಹಂಗಾಮಿನಲ್ಲಿ ಬೆಳೆಯುವ ವಿವಿಧ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮೆ) ಯೋಜನೆಯನ್ನು ಅನುಷ್ಠಾನಗೊಳಿಸಿದ್ದು ಇದರ ನೋಂದಣಿಗೆ ಇನ್ನು 7 ದಿನಗಳು ಮಾತ್ರ ಬಾಕಿ ಉಳಿದಿವೆ. ಜಿಲ್ಲೆಯ ರೈತರು, ಬೆಳೆಗಾರರು ಯೋಜನೆ ಪ್ರಯೋಜನ ಪಡೆಯಬೇಕು. ಬ್ಯಾಂಕ್ ಅಧಿಕಾರಿಗಳು ಸಹ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ನೋಂದಣಿಗೆ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಇತ್ತೀಚೆಗೆ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮೆ) ಯೋಜನೆಯ ಅನುಷ್ಠಾನ ಕುರಿತು ಬ್ಯಾಂಕಿನ ಅಧಿಕಾರಿಗಳು, ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೀರಾವರಿ ಆಶ್ರಯದಲ್ಲಿ ಬೆಳೆಯಲಾಗುವ ಭತ್ತ, ಮುಸುಕಿನ ಜೋಳ, ರಾಗಿ, ಸಜ್ಜೆ, ಜೋಳ, ಸೂರ್ಯಕಾಂತಿ, ಮಳೆ ಆಶ್ರಯದಲ್ಲಿ ಬೆಳೆಯುವ ಮುಸುಕಿನ ಜೋಳ, ರಾಗಿ, ಜೋಳ, ಸಜ್ಜೆ, ಉದ್ದು, ತೊಗರಿ, ಹೆಸರು, ಹುರುಳಿ, ಹಲಸಂದೆ, ಸೂರ್ಯಕಾಂತಿ, ಎಳ್ಳು, ಹರಳು, ನೆಲಗಡಲೆ (ಶೇಂಗಾ), ಹತ್ತಿ ಬೆಳೆಗಳನ್ನು ಬೆಳೆ ವಿಮೆಗೆ ಅಳವಡಿಸಿ ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಚಾಮರಾಜನಗರ ತಾಲೂಕಿನಲ್ಲಿ ಮಳೆ ಆಶ್ರಿತ ಮುಸುಕಿನ ಜೋಳ, ಗುಂಡ್ಲುಪೇಟೆ ತಾಲೂಕಿನಲ್ಲಿ ಮಳೆ ಆಶ್ರಿತ ಸೂರ್ಯಕಾಂತಿ, ಜೋಳ, ಕೊಳ್ಳೇಗಾಲ ತಾಲೂಕಿನಲ್ಲಿ ಮಳೆ ಆಶ್ರಿತ ರಾಗಿ, ಮುಸುಕಿನ ಜೋಳ, ಯಳಂದೂರು ತಾಲೂಕಿನಲ್ಲಿ ನೀರಾವರಿ ಆಶ್ರಿತ ಭತ್ತ ಬೆಳೆ ವಿಮೆ ವ್ಯಾಪ್ತಿಗೆ ಸೇರಲಿವೆ ಎಂದರು.
ಬೆಳೆ ಸಾಲ ಪಡೆಯುವ ಮತ್ತು ಸಾಲ ಪಡೆಯದ ರೈತರು ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ನೋಂದಾಯಿಸಿಕೊಳ್ಳಲು ಜುಲೈ 30 ಕಡೆಯ ದಿನವಾಗಿದೆ. ಯೋಜನೆಯು ರೈತರಿಗೆ ಹೆಚ್ಚಿನ ಉಪಯುಕ್ತವಾಗಿದ್ದು ಕಳೆದ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದ ಯೋಜನೆಗಿಂತ ವಿಮಾ ಕಂತಿನ ಮೊತ್ತವು ಕಡಿಮೆ ಇದೆ. ವಿಮಾ ಕಂತಿನ ದರದಲ್ಲಿ ಶೇಕಡಾ 50ರಷ್ಟನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಹೀಗಾಗಿ ಗರಿಷ್ಟ ಸಂಖ್ಯೆ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಇದೇವೇಳೆ ಸಭೆಯಲ್ಲಿ ಹಾಜರಿದ್ದ ರೈತ ಮುಖಂಡರು, ಪ್ರಗತಿಪರ ರೈತರು ಬೆಳೆ ವಿಮೆಗೆ ನೊಂದಾಯಿಸುವ ಸಲುವಾಗಿ ಪ್ರೀಮಿಯಂ ಕಟ್ಟಲು ಬ್ಯಾಂಕುಗಳಿಗೆ ತೆರಳುವ ರೈತರಿಗೆ ಹಿಂದಿನ ವರ್ಷಗಳಲ್ಲಿ ಮಾಡಿರುವ ಸಾಲಗಳನ್ನು ಮರುಪಾವತಿಸದೇ ಇರುವುದರಿಂದ ಬೆಳೆ ವಿಮೆ ನೋಂದಾಯಿಸಲು ಸಾಧ್ಯವಿಲ್ಲವೆಂದು ಬ್ಯಾಂಕ್ ಅಧಿಕಾರಿಗಳು ಹೇಳುತ್ತಿದ್ದಾರೆ. ರೈತರು ಪಡೆದಿರುವ ಸಾಲದ ಖಾತೆ ಮತ್ತು ಎಸ್‍ಬಿ ಖಾತೆಗಳನ್ನು ಲಿಂಕ್ ಮಾಡಿರುವುದರಿಂದ ರೈತರಿಗೆ ಲಭ್ಯವಾಗುವ ಪರಿಹಾರ ಧನ, ಇತರೆ ಸಬ್ಸಿಡಿ ಸೌಲಭ್ಯಗಳ ಹಣ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ. ಸಾಲ ಪಡೆದಿರುವ ಬ್ಯಾಂಕಿನಲ್ಲಿಯೇ ಬೆಳೆ ವಿಮೆ ನೊಂದಾಯಿಸಿಕೊಳ್ಳುವಂತೆ ಬ್ಯಾಂಕಿನ ಅಧಿಕಾರಿಗಳು ಹೇಳಿ ರೈತರನ್ನು ವಾಪಸ್ ಕಳುಹಿಸುತ್ತಿದ್ದಾರೆ ಎಂದು ಗಮನ ಸೆಳೆದರು.
ಈ ಎಲ್ಲ ಅಹವಾಲುಗಳನ್ನು ಆಲಿಸಿದ ಜಿಲ್ಲಾಧಿಕಾರಿ ರಾಮು ಅವರು ಮಾತನಾಡಿ ಜಿಲ್ಲೆಯ ಎಲ್ಲ ಬ್ಯಾಂಕಿನ ಅಧಿಕಾರಿಗಳು ರೈತ ಫಸಲ್ ಬಿಮಾ ಯೋಜನೆಯಡಿ ವಿಮಾ ಕಂತು ಪಾವತಿಸಲು ಬರುವ ರೈತರಿಂದ ಹಣ ಪಡೆದು ಅವರನ್ನು ನಾನ್ ಲೋನಿ ರೈತರು ಎಂದೇ ಪರಿಗಣಿಸಬೇಕು. ರೈತರಿಂದ ಪಡೆದ ವಿಮಾ ಕಂತನ್ನು ವಿಮಾ ಕಂಪನಿಗೆ ವರ್ಗಾಯಿಸಬೇಕು. ಈ ಬಗ್ಗೆ ಯಾವುದೇ ಲೋಪ ಎಸಗುವುದು, ಯೋಜನೆ ಸೇರ್ಪಡೆಗೆ ನಿರಾಕರಿಸುವುದು ಕಂಡುಬಂದಲ್ಲಿ ಬ್ಯಾಂಕಿನ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರೈತರು ವಿಮಾ ಕಂತು ಪಾವತಿಸಿ ಯೋಜನೆಗೆ ನೊಂದಾಯಿಸಲು ಇನ್ನು 7 ದಿನ ಅವಕಾಶವಿದೆ. ಹೀಗಾಗಿ ಬೆಳೆ ವಿಮೆಗೆ ನೊಂದಾಯಿಸಲು ಬರುವ ಎಲ್ಲ ಅರ್ಜಿಗಳನ್ನು ಕಡ್ಡಾಯವಾಗಿ ಪಡೆಯಬೇಕು. ಯಾವುದೇ ಸಬೂಬು ಹೇಳಬಾರದು. ರೈತರಿಗೆ, ಬೆಳೆಗಾರರಿಗೆ ವಿಮೆ ಯೋಜನೆಯ ಪ್ರಯೋಜನ ಪಡೆಯಲು ಎಲ್ಲ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ರಾಮು ಕಟ್ಟುನಿಟ್ಟಿನ ಸೂಚನೆ ನೀಡಿದರು.



ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್ ಮಾತನಾಡಿ ರೈತರ ಅನುಕೂಲಕ್ಕಾಗಿ ತರಲಾಗಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮೆ ಯೋಜನೆಗೆ ಗರಿಷ್ಟ ಪ್ರಮಾಣದಲ್ಲಿ ರೈತರು ನೊಂದಾಯಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ರೈತ ಮುಖಂಡರಾದ ಮಹೇಶ್ ಪ್ರಭು, ಗುರುಪ್ರಸಾದ್, ಹೊನ್ನೂರು ಪ್ರಕಾಶ್, ಚನ್ನಬಸಪ್ಪ, ಮಹದೇವಸ್ವಾಮಿ, ಅಂಬಳೆ ಶಿವಕುಮಾರ್, ಕಬ್ಬು ಬೆಳÉಗಾರರ ಸಂಘದ ಮುಖಂಡರಾದ ಭಾಗ್ಯರಾಜ್, ಕೃಷಿಕ ಸಮಾಜದ ಪ್ರತಿನಿಧಿಗಳಾದ ನಾಗರಾಜಪ್ಪ, ಮಧು, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಸಿದ್ದರಾಜು, ಜಂಟಿ ಕೃಷಿ ನಿರ್ದೇಶಕರಾದ ಎಂ. ತಿರುಮಲೇಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಜು. 29, 30ರಂದು ವಿಕಲಚೇತನರ ತಪಾಸಣಾ ಶಿಬಿರ
ಚಾಮರಾಜನಗರ, ಜು. 25 (ಕರ್ನಾಟಕ ವಾರ್ತೆ):- ವಿಕಲಚೇತನರ ತಪಾಸಣಾ ಶಿಬಿರವನ್ನು ಜುಲೈ 29ರಂದು ಗುಂಡ್ಲುಪೇಟೆ ಪಟ್ಟಣದ ಡಿಬಿಜಿಜೆ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಜುಲೈ 30ರಂದು ಚಾಮರಾಜನಗರದ ಸತ್ತಿ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರ ಸರ್ಕಾರಿ ಸ್ವಾಮ್ಯದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಇನ್ಸಿಟ್ಯೂಟ್ ಫಾರ್ ದಿ ಫಿಸಿಕಲಿ ಹ್ಯಾಂಡಿಕ್ಯಾಪಡ್ ಸಂಸ್ಥೆಯು ತಪಾಸಣಾ ಶಿಬಿರದ ಜವಾಬ್ದಾರಿ ನಿರ್ವಹಿಸಲಿದೆ. ದೆಹಲಿ, ಹÉೈದರಾಬಾದ್ ಮತ್ತು ಚೆನ್ನೈ ಮಹಾನಗರಗಳಿಂದ ತಜ್ಞರು ಬರಲಿದ್ದಾರೆ.
ದೈಹಿಕ ವಿಕಲತೆ, ದೃಷ್ಠಿದೋಶ, ಬುದ್ಧಿಮಾಂದ್ಯತೆ ಇನ್ನಿತರ ವಿಕಲತೆ ಇರುವವರು ಶಿಬಿರಕ್ಕೆ ಹಾಜರಾಗಿ ಆರೋಗ್ಯ ಸಂಬಂಧಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಅಂಗನವಾಡಿ ಕೇಂದ್ರ ಮತ್ತು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿ (ದೂ.ಸಂ. 08226-223688 ಮತ್ತು 224688) ಸಂಪರ್ಕಿಸಬಹುದಾಗಿದೆ.
ಅಂಗವಿಕಲರ ತಪಾಸಣಾ ಶಿಬಿರವನ್ನು ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು. ಶಾಸಕರು ಹಾಗೂ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಗಳು ಆದ ಸಿ. ಪುಟ್ಟರಂಗಶೆಟ್ಟಿ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.

ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜು. 25 (ಕರ್ನಾಟಕ ವಾರ್ತೆ):- ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಪ್ರೋಗ್ರಾಮರ್ (ಮಾಹಿತಿ ತಂತ್ರಜ್ಞಾನ ಸಿಬ್ಬಂದಿ) ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲಿದ್ದು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್, ಇಲ್ಲವೇ ಬಿಎಸ್ಸಿ (ಸಿಎಸ್), ಬಿಸಿಎ, ಎಂಎಸ್ಸಿ (ಸಿಎಸ್) ವಿದ್ಯಾರ್ಹತೆ ಹೊಂದಿರಬೇಕು. ಕನಿಷ್ಠ ವಯೋಮಿತಿ 18 ವರ್ಷಗಳು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದವರಾಗಿದ್ದಲ್ಲಿ 35 ವರ್ಷಗಳು, ಹಿಂದುಳಿದ ವರ್ಗ 2ಎ, 2ಬಿ, 3ಎ, 3ಬಿ ವರ್ಗಕ್ಕೆ ಸೇರಿದವರಾಗಿದ್ದಲ್ಲಿ 38 ವರ್ಷಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ಪ್ರವರ್ಗ 1ಕ್ಕೆ ಸೇರಿದವರಾಗಿದ್ದಲ್ಲಿ 40 ವರ್ಷಗಳೆಂದು ನಿಗದಿ ಮಾಡಲಾಗಿದೆ.
ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಉತ್ತಮ ಜ್ಞಾನವುಳ್ಳವರಾಗಿರಬೇಕು. ಅಂಕಪಟ್ಟಿ, ಇತರೆ ಪ್ರಮಾಣ ಪತ್ರಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿ ಅರ್ಜಿಯೊಂದಿಗೆ ಲಗತ್ತಿಸಬೇಕು.
ಈ ಹಿಂದೆ (ದಿನಾಂಕ 6.4.2016 ಪ್ರಕಟಣೆ) ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಅರ್ಜಿಗಳನ್ನು ಜಿಲ್ಲಾ ನಗರಾಭಿವೃದ್ಧಿ ಕೋಶ, ಕೊಠಡಿ ಸಂಖ್ಯೆ 118, ಮೊದಲನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ, ಚಾಮರಾಜನಗರ ಇಲ್ಲಿಗೆ ಮುದ್ದಾಂ ಅಥವಾ ನೊಂದಾಯಿತ ಅಂಚೆ ಮೂಲಕ ಆಗಸ್ಟ್ 12ರೊಳಗೆ ಸಲ್ಲಿಸಬೇಕು ಎಂದು  ಜಿಲ್ಲಾಧಿಕಾರಿ ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ. 







ಜು. 27ರಂದು ಡೆಂಗೆ, ಚಿಕುನ್ ಗುನ್ಯಾ ರೋಗ ತಡೆ ಜಾಗೃತಿ ಜಾಥಾ
ಚಾಮರಾಜನಗರ, ಜು. 25 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಡೆಂಗೆ ವಿರೋಧಿ ಮಾಸಾಚರಣೆ ಅಂಗವಾಗಿ ಡೆಂಗೆ ಮತ್ತು ಚಿಕುನ್ ಗುನ್ಯಾ ರೋಗ ಹರಡದಂತೆ ವಹಿಸಬೇಕಿರುವ ಮುನ್ನೆಚ್ಚರಿಕೆ ಮತ್ತು ನಿಯಂತ್ರಣಾ ಕ್ರಮಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಜುಲೈ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದ ಆವರಣದ ಬಳಿ ಜಾಥಾ ಹೊರಡಲಿದೆ.
ಶಾಲಾ ವಿದ್ಯಾರ್ಥಿಗಳು, ನರ್ಸಿಂಗ್ ವಿದ್ಯಾರ್ಥಿಗಳು ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಜನಜಾಗೃತಿ ಜಾಥಾದಲ್ಲಿ ಪಾಲ್ಗೊಳ್ಳುವರೆಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಅನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜು. 27ರಂದು ಹರದನಹಳ್ಳಿಯಲ್ಲಿ ಡೀಸಿ, ಸಿಇಓ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 25 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಹರದನಹಳ್ಳಿ ಹೋಬಳಿ ಕೇಂದ್ರದ ನಾಡ ಕಚೇರಿ ಆವರಣದಲ್ಲಿ ಜುಲೈ 27ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರ ಸಮ್ಮುಖದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜು. 30ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 25 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ. 

ಜುಲೈ 28ರಂದು ಪರವಾನಗಿ ಭೂಮಾಪಕರಾಗಿ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆ   
     ಚಾಮರಾಜನಗರ, ಜು. 26 (ಕರ್ನಾಟಕ ವಾರ್ತೆ):- ಪರವಾನಗಿ ಭೂಮಾಪಕರಾಗಿ ಪರವಾನಗಿ ಪಡೆಯಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಂಡ ಜಿಲ್ಲಾವಾರು ವಿವರ ಹಾಗೂ ಪರಿಶೀಲನೆಗೆ ಹಾಜರಾಗಬೇಕಾದ ವಿವರವನ್ನು hಣಣಠಿ://202.138.101.171/ಟsಡಿeಛಿಡಿuiಣmeಟಿಣ  ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.
    ಅರ್ಹ ಅಭ್ಯರ್ಥಿಗಳು ದಾಖಲೆ ಪರಿಶೀಲನೆಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 28ರಂದು ಅವರು ಅರ್ಜಿ ಸಲ್ಲಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರು ಜಿಲ್ಲಾಧಿಕಾರಿಗಳ ಕಚೇರಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.


ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ
   ದಿನಾಂಕ: 20-01-2011 ರಂದು ಬಸವರಾಜು ಬಿನ್ ಬಸವನಾಯಕ ಧನಗೆರೆ ಗ್ರಾಮರವರು ಬೆಳಿಗ್ಗೆ 09-30 ಗಂಟೆಯ ಸಮಯದಲ್ಲಿ ಕೃತ್ಯ ನಡೆದ ಸ್ಧಳದಲ್ಲಿ ನೀಡಿದ ದೂರಿನ ಸಾರಾಂಶವೇನೆಂದರೆ, ನನ್ನ ಅಣ್ಣ ಲಿಂಗರಾಜು ಕೊಳ್ಳೇಗಾಲದ ವೇಣುಗೋಪಾಲ್‍ರವರ ಗೋಲ್ಡ್ ಪ್ಯಾಲೇಸ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಈತನು ಪ್ರತೀ ದಿನ ಊರಿನಿಂದ ಅಂಗಡಿಗೆ ಬಂದು ಸಾಯಂಕಾಲ ಮನೆಗೆ ವಾಪಸ್ಸು ಬರುತ್ತಿದ್ದನು, ನೆನ್ನೆ ದಿನ ದಿನಾಂಕ 19-01-11 ರಂದು ರಾತ್ರಿ 09-00 ಗಂಟೆಯಾದರೂ ಮನೆಗೆ ಬರಲಿಲ್ಲ. ಆತನ ಮೊಬೈಲ್‍ಗೆ ಫೋನ್ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಆವಾಗ ನಾವುಗಳು ಎಲ್ಲೋ ಆತನ ಸ್ನೇಹಿತನ ಜೊತೆ ಇರಬೇಕೆಂದು ತಿಳಿದುಕೊಂಡಿದ್ದೆವು. ಈ ದಿವಸ ಬೆಳಿಗ್ಗೆ ನಮ್ಮ ಅಣ್ಣ ಮನೆಗೆ ಬರಲಿಲ್ಲವಾದ್ದರಿಂದ ಬೆಳಿಗ್ಗೆ 08-00 ಗಂಟೆ ಸಮಯದಲ್ಲಿ ಗೋಲ್ಡ್ ಪ್ಯಾಲೇಸ್ ಮಾಲೀಕರಾದ ದಿವಾಕರ್ ಬಾಬುರವರನ್ನು ಕೇಳಲು ಹೋಗಿದ್ದಾಗ ಅಂಗಡಿ ಮಾಲೀಕರು ಯಾರೋ ನನಗೆ ಫೋನ್ ಮಾಡಿ ದೊಡ್ಡಿಂದುವಾಡಿ ಗ್ರಾಮದ ಕನಕಗಿರಿ ಮಾರಮ್ಮನ ದೇವಸ್ಧಾನದ ಸ್ವಲ್ಪ ಮುಂದೆ ಯಾರೋ ದುಷ್ಕರ್ಮಿಗಳು ನಿಮ್ಮ ಅಣ್ಣ ಲಿಂಗರಾಜುವನ್ನು ಹೊಡೆದು ಸಾಯಿಸಿ ಬಿಟ್ಟಿರುವುದಾಗಿ ತಿಳಿಸಿರುತ್ತಾರೆ. ನೀವು ಅಲ್ಲಿ ಹೋಗಿ ಎಂದು ತಿಳಿಸಿದರು. ತಕ್ಷಣ ನಾನು ನಮ್ಮ ಕಡೆಯವರ ಜೊತೆ ಸ್ಧಳಕ್ಕೆ ಬಂದು ನೋಡಿದಾಗ ರಸ್ತೆಯ ಪಶ್ಚಿಮ ದಿಕ್ಕಿಗೆ ಒಂದು ಚಿಕ್ಕ ಕಾಲುವೆಯಲ್ಲಿ ನಮ್ಮ ಅಣ್ಣ ಲಿಂಗರಾಜುವನ್ನು ಯಾವುದೋ ಆಯುಧದಿಂದ ಕತ್ತು ಕೊಯ್ದು ಹಾಗೂ ಇತರೆ ಕಡೆ ಹೊಡೆದು ಸಾಯಿಸಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ನಮ್ಮ ಅಣ್ಣನನ್ನು ಯಾರೋ ದುಷ್ಕರ್ಮಿಗಳು ಯಾವುದೋ ವಿಚಾರದಲ್ಲಿ ಗಲಾಟೆ ಮಾಡಿ ಹೊಡೆದು ಸಾಯಿಸಿರುವುದರಿಂದ ಸದರಿ ಆಸಾಮಿಗಳನ್ನು ಪತ್ತೆ ಹಚ್ಚಿ ಈ ಬಗ್ಗೆ ಕಾನೂನು ರೀತ್ಯ ಕ್ರಮ ಜರುಗಿಸಬೇಕೆಂದು ಕೊಟ್ಟ ಲಿಖಿತ ದೂರಿನ ಮೇರೆಗೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೊ.ನಂ 21/2011 ಕಲಂ 302, 201 ಐಪಿಸಿ ರೀತ್ಯ ಪ್ರಕರಣ ದಾಖಲಾಗಿತ್ತು.

   ನಂತರ ಪ್ರಕರಣದ ತನಿಖೆಯನ್ನು ಕೊಳ್ಳೇಗಾಲ ವೃತ್ತದ ಸಿಪಿಐ ರವರಾದ ಶ್ರೀ ರೇಣುಕಾರಾಧ್ಯರವರು ಹೆಚ್ ಎಸ್ ರವರು ಕೈಗೊಂಡಿದ್ದು, ನಂತರ ಶ್ರೀ ಎಂ. ಮಂಜುನಾಥ್ ಪ್ರಭಾರ ಸಿಪಿಐ ರವರು ತನಿಖೆಯನ್ನು ಮುಂದುವರೆಸಿದ್ದು, ತನಿಖೆಯಿಂದ ದಿನಾಂಕ 19-01-2011 ರಂದು ರಾತ್ರಿ 10-00 ಗಂಟೆ ಸಮಯದಲ್ಲಿ ಕೊಳ್ಳೇಗಾಲ ಗ್ರಾಮಾಂತರ ಠಾಣಾ ಸರಹದ್ದು ದೊಡ್ಡಿಂದುವಾಡಿ ಗ್ರಾಮದ ರಸ್ತೆಯಲ್ಲಿ ಮಲ್ಲಯ್ಯ ಎಂಬುವರ ಜಮೀನಿನ ಬಳಿ ಈ ಕೇಸಿನ ಮೃತ ಲಿಂಗರಾಜು ಎಂಬುವವರ ಜೊತೆ ಆರೋಪಿಗಳು ಹಳೇ ದ್ವೇಷದ ಹಿನ್ನಲೆಯಲ್ಲಿ ಜಗಳ ತೆಗೆದು ಕೊಲೆ ಮಾಡುವ ಉದ್ದೇಶದಿಂದ ಆರೋಪಿ-1 ಮಧು ಜಿ ರವರು ಜಿಂಕ್ ವೈರ್‍ನಿಂದ ಲಿಂಗರಾಜುವಿನ ಕುತ್ತಿಗೆಗೆ ಬಿಗಿದು ಕೆಳಕ್ಕೆ ಕೆಡವಿಕೊಂಡಿದ್ದು, ಆರೋಪಿ-2 ಹೇಮಶಂಕರ @ ಕೋಬ್ರಾ ರವರು ಒಂದು ಚಾಕುವಿನಿಂದ ಲಿಂಗರಾಜುವಿನ ಹೊಟ್ಟೆ ಎದೆ ಹಾಗೂ ಮುಖಕ್ಕೆ ತಿವಿದು ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಕೊಲೆ ಮಾಡಿ ಚಾಕುವನ್ನು ಹಲ್ಲೆ ಮುಳ್ಳಿನ ಪೊದೆಗೆ ಬಿಸಾಕಿ ಆರೋಪಿಗಳು ಲಿಂಗರಾಜುವಿನ ಶವವನ್ನು ಕೆಎ-09-ಎಂ-4442 ಮಾರುತಿ ಓಮಿನಿ ಕಾರಿನಲ್ಲಿ ಹಾಕಿಕೊಂಡು ಸ್ವಲ್ಪ ಮುಂದೆ ಹೋಗಿ ರಸ್ತೆ ಬದಿಯ ಸಣ್ಣ ಕಾಲುವೆಗೆ ಹಾಕಿದ್ದು, ಆರೋಪಿತರನ್ನು ದಸ್ತಗಿರಿ ಮಾಡಿ ಕ್ರಮ ಕೈಗೊಂಡಿದ್ದು, ತನಿಖಾ ಕಾಲದಲ್ಲಿ ಆರೋಪಿತರ ವಿರುದ್ದ ಆರೋಪ ದೃಢಪಟ್ಟ ಮೇರೆಗೆ ದಿನಾಂಕ 08-04-2011 ರಂದು ಕಲಂ 302, 201, ರೆ:ವಿ 34 ಐ.ಪಿ.ಸಿ ರೀತ್ಯಾ ಆರೋಪಿಗಳ ವಿರುದ್ದ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿಕೊಂಡಿದ್ದರು.

  ಕೊಳ್ಳೇಗಾಲದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಸ್.ಸಿ ನಂ 46/2011 ರಲ್ಲಿ ವಿಚಾರಣೆ ನಡೆಸಿ ಆರೋಪಿಗಳ ವಿರುದ್ದ ಆರೋಪ ಸಾಭೀತಾದ ಕಾರಣ ಘನ ನ್ಯಾಯಾಲಯವು ದಿನಾಂಕ 23-07-2016 ರಂದು ಆರೋಪಿಗಳಾದ
1) ಮಧು ಜಿ ಬಿನ್ ಲೇ ಗೋವಿಂದರಾಜು, 28 ವರ್ಷ, ನಾಯಕ ಜನಾಂಗ, # 386, ದೊಡ್ಡನಾಯಕರ ಬೀದಿ ತರಕಾರಿ
   ವ್ಯಾಪಾರ, ಕೊಳ್ಳೇಗಾಲ ಪಟ್ಟಣ.
2) ಹೇಮಶಂಕರ @ ಕೋಬ್ರಾ @ ಶಂಕರ @ ಸರ್ಕಸ್ ಬಿನ್ ರಾಮಚಂದ್ರ, 28 ವರ್ಷ, ಆಚಾರಿ ಜನಾಂಗ, ಆಚಾರಿ ಬೀದಿ,
    ಡ್ರೈವರ್ ಕೆಲಸ, ಬಾಪುನಗರ ಕೊಳ್ಳೇಗಾಲ ಪಟ್ಟಣ.

    ಕಲಂ 302 ಐ.ಪಿ.ಸಿ ಗೆ ಜೀವಾವಧಿ ಸಜೆ, ಹಾಗೂ ತಲಾ 5,000/- ರೂ ದಂಡ ವಿಧಿಸಿದ್ದು, ದಂಡದ ಮೊತ್ತ
       ಕಟ್ಟದಿದ್ದಲ್ಲಿ 06 ತಿಂಗಳ ಸಜೆಯನ್ನು ಹಾಗೂ
    ಕಲಂ 201 ಐ.ಪಿ.ಸಿ ಗೆ ಎರಡು ವರ್ಷ ಸಜೆ ಹಾಗೂ ತಲಾ 2,000/- ರೂಗಳನ್ನು ದಂಢ ವಿಧಿಸಿದ್ದು, ದಂಡದ ಮೊತ್ತ 
    ಕಟ್ಟದಿದ್ದಲ್ಲಿ 03 ತಿಂಗಳ ಸಜೆಯನ್ನು ವಿಧಿಸಿ ತೀರ್ಪು ನೀಡಿರುತ್ತದೆ.

   ಸದರಿ ಪ್ರಕರಣದ ತೀರ್ಪನ್ನು ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕೊಳ್ಳೇಗಾಲದ ನ್ಯಾಯಾಧೀಶರಾದ ಎಂ ಬೃಂಗೇಶ್‍ರವರು ನೀಡಿರುತ್ತಾರೆ. ಶ್ರೀಮತಿ ಎಂ.ಎಸ್ ಉಷಾ ರವರು ಸರ್ಕಾರದ ಅಭಿಯೋಕರಾಗಿ ವಾದವನ್ನು ಮಂಡಿಸಿರುತ್ತಾರೆ. ಶ್ರೀ ಅಮರ್‍ನಾರಾಯಣ್ ಸಿಪಿಐ ಕೊಳ್ಳೇಗಾಲ ರವರು ಸಾಕ್ಷಿದಾರರನ್ನು ನ್ಯಾಯಲಯದಲ್ಲಿ ಹಾಜರ್ಪಡಿಸಿ, ಸಾಕ್ಷಿನುಡಿಯಲು ಸಹಕರಿಸಿರುತ್ತಾರೆ.

            ಸಾರ್ವಜನಿಕ ಸಂಪರ್ಕ ಅಧಿಕಾರಿಗಳು,                    ಪೊಲೀಸ್ ಅಧೀಕ್ಷಕರವರ ಕಛೇರಿ,
                                                       ಚಾಮರಾಜನಗರ ಜಿಲ್ಲೆ.

ಜನಪರ ಯೋಜನೆಗಳ ಸದುಪಯೋಗಕ್ಕೆ ಜಿಲ್ಲಾಧಿಕಾರಿ ಕರೆ
ಚಾಮರಾಜನಗರ, ಜು. 27 (ಕರ್ನಾಟಕ ವಾರ್ತೆ):- ರಾಜ್ಯ ಸರ್ಕಾರ ಜನರ ಶ್ರೇಯೋಭಿವೃದ್ಧಿಗಾಗಿ ಸಾಕಷ್ಟು ಯೋಜನೆಗಳನ್ನು ವಿವಿಧ ಇಲಾಖೆಗಳ ಮುಖಾಂತರ ಅನುಷ್ಠಾನಗೊಳಿಸುತ್ತಿದೆ. ಈ ಕಾರ್ಯಕ್ರಮಗಳ ಪ್ರಯೋಜನವನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಗ್ರಾಮೀಣ ಜನತೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ತಾಲೂಕಿನ ಹರದನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವಿವಾಹಿತ ಮಹಿಳೆಯರಿಗೆ ಮನಸ್ವಿನಿ ಯೋಜನೆಯಡಿ ಪಿಂಚಣಿ ನೀಡಲಾಗುತ್ತದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೈತ್ರಿ ಯೋಜನೆಯಡಿ ಮಾಸಾಶನ ಲಭಿಸಲಿದೆ. ವಿಧವಾ ವೇತನ, ವೃದ್ದಾಪ್ಯ ವೇತನ, ಅಂಗವಿಕಲರ ವೇತನ ಸೇರಿದಂತೆ ಹಲವು ಆರ್ಥಿಕ ನೆರವು ನೀಡುವ ಯೋಜನೆಗಳು ಇವೆ. ಅರ್ಹರು ಅರ್ಜಿ ನೀಡಿ ಸೌಲಭ್ಯ ಪಡೆಯಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು.
ರೈತರಿಗೆ, ಬೆಳೆಗಾರರಿಗೆ ಕರ್ನಾಟಕ ರೈತ ಸುರಕ್ಷ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಮುಂಗಾರು ಹಂಗಾಮಿಗೆ ಅನುಷ್ಠಾನ ಮಾಡಲಾಗುತ್ತಿದೆ. ಬಿತ್ತನೆ ವಿಳಂಬ, ಮಳೆ ಕೊರತೆ, ಕಟಾವಿನ ನಂತರ ಆಗುವ ನಷ್ಟಕ್ಕೆ ಬೆಳೆ ವಿಮೆ ಪಡೆಯಬಹುದು. ರೈತರಿಗೆ ಸಂಕಷ್ಟದಲ್ಲಿ ನೆರವಾಗುವ ವಿಮೆ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಜುಲೈ 30ರವರೆಗೂ ಕಾಲಾವಕಾಶವಿದೆ. ರೈತರು ಈ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದರು.
ಇದೇ ವೇಳೆ ಹಾಜರಿದ್ದ ಹಲವರು ಬ್ಯಾಂಕುಗಳು ನೋಂದಣಿಗೆ ಸಹಕರಿಸುತ್ತಿಲ್ಲವೆಂಬ ದೂರು ನೀಡಿದರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಅರ್ಜಿಗಳನ್ನು ಸ್ವೀಕರಿಸಿ ಸ್ಪಂದಿಸುವಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ. ಯಾವುದೇ ಅಧಿಕಾರಿಗಳು ವಿಮೆ ನೋಂದಣಿಗೆ ನಿರ್ಲಕ್ಷ್ಯ ತೋರಿದಲ್ಲಿ ದೂರು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
 ಮನೆ ನಿರ್ಮಾಣ ಮಾಡಿಕೊಳ್ಳಲು ಬಡಜನರಿಗೂ ಮರಳು ಅಭಾವ ಕಾಡುತ್ತಿದೆ ಎಂಬ ಅಸಮಾಧಾನ ವ್ಯಕ್ತಪಡಿಸಿದ ನಾಗರಿಕರಿಗೆ ಉತ್ತರಿಸಿದ ಜಿಲ್ಲಾಧಿಕಾರಿ ರಾಮು ಅವರು ಜಿಲ್ಲೆಯ ಮುಳ್ಳೂರುನಲ್ಲಿ ಎರಡು ಹಾಗೂ ಹಂಪಾಪುರದಲ್ಲಿ ಎರಡು ಬ್ಲಾಕುಗಳನ್ನು ಮರಳು ತೆಗೆಯುವ ಸಲುವಾಗಿ ಗುರುತಿಸಲಾಗಿದೆ. ಇಲ್ಲಿ ತೆಗೆಯುವ ಮರಳನ್ನು ಜಿಲ್ಲೆಯ ಜನರಿಗೆ ಪೂರೈಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
 ಹರದನಹಳ್ಳಿ, ಅಮಚವಾಡಿಯಲ್ಲಿ ಸ್ಮಶಾನಕ್ಕಾಗಿ ಮತ್ತಷ್ಟು ಭೂಮಿಯನ್ನು ಮಂಜೂರು ಮಾಡಬೇಕೆಂಬ ಬೇಡಿಕೆಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಎರಡೂ ಗ್ರಾಮಗಳಿಗೆ ಸ್ಮಶಾನಕ್ಕಾಗಿ ಭೂಮಿ ಗುರುತಿಸಲಾಗಿದೆ. ಉದ್ದೇಶಿತ ಭೂಮಿ ಸುತ್ತಲೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಭಿವೃದ್ಧಿಪಡಿಸುವ ಕಾರ್ಯ ಕೈಗೊಳ್ಳಲಾಗುವುದು. ನೀರು ಮತ್ತು ನೆರಳಿನ ವ್ಯವಸ್ಥೆ ಕಾಮಗಾರಿ ಸಹ ನಡೆಸಲಾಗುವುದು ಎಂದರು.
ಶೌಚಾಲಯಕ್ಕಾಗಿ ಬಯಲನ್ನು ಆಶ್ರಯಿಸುವುದನ್ನು ತಪ್ಪಿಸುವ ಸಲುವಾಗಿ ಗ್ರಾಮದಲ್ಲಿ ಸಾಮೂಹಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಡಬೇಕೆಂಬ ಮನವಿಗೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಸಾಮೂಹಿಕ ಶೌಚಾಲಯವನ್ನು ನಿರ್ವಹಣೆ ಮಾಡುವ ಜವಾಬ್ದಾರಿ ವಹಿಸಿಕೊಳ್ಳಲು ಯಾರೂ ಮುಂದೆ ಬರುವುದಿಲ್ಲ. ಹೀಗಾಗಿ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಾಣ ಮಾಡಿಕೊಂಡರೆ ಫಲಾನುಭವಿಗಳೇ ಅದರ ನಿರ್ವಹಣೆ ಮಾಡಿಕೊಳ್ಳಬಹುದು. ಶೌಚಾಲಯ ನಿರ್ಮಾಣಕ್ಕಾಗಿ 12 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನತೆಗೆ 15 ಸಾವಿರ ರೂ ಪ್ರೋತ್ಸಾಹಧನ ಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿದವರಿಗೆ ಸ್ಥಳೀಯವಾಗಿ ಕೆಲಸ ನೀಡಲಾಗುತ್ತದೆ. ಕೂಲಿ ಹಣವನ್ನು 15 ದಿನಗಳೊಳಗೆ ಪಾವತಿ ಮಾಡಬೇಕೆಂಬ ನಿಯಮ ಸಹ ಇದೆ. ತಾವು ಪ್ರತಿನಿತ್ಯ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ನರೇಗಾ ಪ್ರಗತಿಯನ್ನು ಪರಿಶೀಲಿಸುತ್ತಿದ್ದೇನೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳಿಗೆ ಯಾವುದೇ ಲೋಪವಾಗದಂತೆ ಯೋಜನೆ ಅನುಷ್ಠಾನ ಮಾಡಲು ಸೂಚನೆ ನೀಡಿದ್ದೇನೆ ಎಂದರು.
ವಸತಿ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಕಾಲಮಿತಿಯೊಳಗೆ ಗುರಿ ತಲುಪಲು ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರು ಸೇರಿದಂತೆ ಗ್ರಾಮೀಣ ಭಾಗದ ಮೂಲ ಸೌಕರ್ಯ ಅಗತ್ಯತೆಗಳನ್ನು ಪೂರೈಸುವ ಕೆಲಸದಲ್ಲಿ ವಿಳಂಬ ತೋರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ. ನಾಗರಿಕರು ಯಾವುದೇ ದೂರುಗಳಿದ್ದರೂ ನೀಡಬಹುದೆಂದು ಹೆಪ್ಸಿಬಾರಾಣಿ ಅವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ ಅವರು ಸಹ ಕೆಲವು ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತಂದರು.
ಕೆರೆಗೆ ನೀರು ತುಂಬಿಸುವಿಕೆ, ದುರಸ್ತಿ, ಕುಡಿಯುವ ನೀರು, ಖಾತೆ ಪ್ರಕ್ರಿಯೆ, ಮೇವು ಪೂರೈಕೆ, ನಿರಂತರ ಜ್ಯೋತಿ, ಕಾಡು ಪ್ರಾಣಿಗಳಿಂದ ಆಗುತ್ತಿರುವ ಬೆಳೆ ನಷ್ಟ, ಜೀತ ವಿಮುಕ್ತರಿಗೆ ನೆರವು ಸೇರಿದಂತೆ ಇನ್ನಿತರ ಹಲವಾರು ಸಮಸ್ಯೆಗಳನ್ನು ಗ್ರಾಮಸ್ಥರು ಸಭೆಯಲ್ಲಿ ಮುಂದಿಟ್ಟರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಯ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ತಾಲೂಕು ಪಂಚಾಯತ್ ಸದಸ್ಯರಾದ ದೊಡ್ಡ ತಾಯಮ್ಮ, ಕಾಂತಾಮಣಿ ಮಹೇಶ್, ಇತರ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಜು. 29ರಂದು ದಲಿತ ವಚನಕಾರರು, ಭಗೀರಥ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ
ಚಾಮರಾಜನಗರ, ಜು. 27 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ದಲಿತ ವಚನಕಾರರ ಜಯಂತಿ ಹಾಗೂ ಶ್ರೀ ಭಗೀರಥ ಜಯಂತಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜುಲೈ 29ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ನಾಗರಿಕರು ಹಾಜರಾಗಿ ಸಲಹೆ ನೀಡುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರÀÉ. 


ಪಶುಭಾಗ್ಯ ಯೋಜನೆಯಡಿ ಜಿಲ್ಲೆಗೆ 418 ಘಟಕಗಳ ಗುರಿ : ಅರ್ಜಿ ಸಲ್ಲಿಕೆಗೆ ಅವಕಾಶ.
ಚಾಮರಾಜನಗರ, ಜು. 27 (ಕರ್ನಾಟಕ ವಾರ್ತೆ):- ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಘೋಷಣೆ ಮಾಡಿರುವ ಮಹತ್ವಕಾಂಕ್ಷೆಯ ಪಶುಭಾಗ್ಯ ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು 418 ಘಟಕಗಳ ಗುರಿ ನಿಗದಿ ಮಾಡಲಾಗಿದೆ.
ಭೂರಹಿತ, ಸಣ್ಣ, ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕ ಸ್ಥಾಪನೆಗಾಗಿ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಬ್ಯಾಂಕ್ ಮೂಲಕ ಸಾಲ ಲಭಿಸಲಿದೆ. ಮಿಶ್ರ ತಳಿ ಘಟಕಗಳಿಗೆ 1.20ಲಕ್ಷ ರೂ, ಕುರಿ ಅಥವಾ ಮೇಕೆ ಘಟಕಗಳಿಗೆ 67,400ರೂ ಹಂದಿ ಘಟಕಕ್ಕೆ 94000ರೂ ಕೋಳಿ ಘಟಕಕ್ಕೆ 85000ರೂಳಷ್ಟು ಬ್ಯಾಂಕುಗಳು ನೀಡುವ ಸಾಲಕ್ಕೆ ಪಶುಪಾಲನಾ ಇಲಾಖೆಯಿಂದ ಸಹಾಯಧನ ಸಹ ಲಭಿಸಲಿದೆ.
ಪಶುಭಾಗ್ಯ ಯೋಜನೆಯಡಿ ಇತರೆ ವರ್ಗದ ಜನಾಂಗದವರಿಗೆ ಶೇ.25ರಷ್ಟು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ಶೇ.50ರಷ್ಟು ಸಹಾಯಧನ ಸಿಗಲಿದೆ. ಯೋಜನೆಯಡಿ ಕಾಲಕಾಲಕ್ಕೆ ಘಟಕ ವೆಚ್ಚವನ್ನು ಅನುಮೋದಿಸುವ ಅಧಿಕಾರವನ್ನು ಪಶುಸಂಗೋಪನಾ ಇಲಾಖೆಯ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ರಚಿಸಲಾಗಿರುವ ರಾಜ್ಯಮಟ್ಟದ ಮಂಜೂರು ಮತ್ತು ಪರಿವೀಕ್ಷಣಾ ಸಮಿತಿಗೆ (ಎಸ್‍ಎಲ್‍ಎಸ್‍ಎಂಸಿ) ನೀಡಲಾಗಿದೆ.
ಜಿಲ್ಲೆಯಲ್ಲಿ 340 ಹೈನುಗಾರಿಕೆ ಘಟಕಗಳು, 29 ಕುರಿ ಅಥವಾ ಮೇಕೆ ಘಟಕಗಳು, 40 ಕೋಳಿ ಘಟಕಗಳು ಹಾಗೂ 9 ಹಂದಿ ಘಟಕಗಳ ಸ್ಥಾಪನೆಗೆ ಪಶುಭಾಗ್ಯ ಯೋಜನೆಯಡಿ ಆರ್ಥಿಕ ನೆರವು ನೀಡಲಾಗುತ್ತಿದೆ.
ಚಾಮರಾಜನಗರ ತಾಲ್ಲೂಕಿಗೆ 102 ಹಸುಘಟಕ, 8 ಕುರಿಘಟಕ, 2 ಹಂದಿಘಟಕ  11 ಕೋಳಿಘಟಕ ಸೇರಿದಂತೆ ಒಟ್ಟು 123 ಘಟಕಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ.
ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 81 ಹಸುಘಟಕ, 7 ಕುರಿಘಟಕ, 2 ಹಂದಿಘಟಕ  9 ಕೋಳಿಘಟಕ ಸೇರಿದಂತೆ ಒಟ್ಟು 99 ಘಟಕಗಳನ್ನು ಆರಂಭಿಸಲು ಗುರಿ ನಿಗದಿ ಮಾಡಲಾಗಿದೆ.
ಕೊಳ್ಳೇಗಾಲ ತಾಲ್ಲೂಕಿನಲ್ಲಿ 110 ಹಸುಘಟಕ, 9 ಕುರಿಘಟಕ, 3 ಹಂದಿಘಟಕ  14 ಕೋಳಿಘಟಕ ಸೇರಿದಂತೆ ಒಟ್ಟು 136 ಘಟಕಗಳ ಸ್ಥಾಪಿಸಲು ಅವಕಾಶವಿದೆ.
ಯಳಂದೂರು ತಾಲ್ಲೂಕಿಗೆ 47 ಹಸುಘಟಕ, 5 ಕುರಿಘಟಕ, 2 ಹಂದಿಘಟಕ  6 ಕೋಳಿಘಟಕ ಸೇರಿದಂತೆ ಒಟ್ಟು 60 ಘಟಕಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ
ಯೋಜನೆಯಡಿ ಹೈನುಗಾರಿಕೆಗೆ ಸಂಬಂಧಪಟ್ಟಂತೆ ಮಂಜೂರು ಪಡೆಯುವ ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ಕರ್ನಾಟಕ ಹಾಲು ಮಹಾ ಮಂಡಳಿಯಲ್ಲಿ ರಚಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ಮಿಲ್ಕ್‍ರೂಟ್ಸ್ ವ್ಯಾಪ್ತಿಯಲ್ಲಿ ಬರಬೇಕಿರುವುದು ಕಡ್ಡಾಯವಾಗಿದೆ.
ಪಶುಭಾಗ್ಯ ಯೋಜನೆಯು ಬೇಡಿಕೆ ಆಧರಿತ ಯೋಜನೆಯಾಗಿದ್ದು ಅರ್ಹ ಫಲಾನುಭವಿಗಳಿಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ನೆರವು ನೀಡುವಂತೆ ಸೂಚಿಸಲಾಗಿದೆ. ಅಮೃತ ಯೋಜನೆಯನ್ನು ಪಶುಭಾಗ್ಯ ಯೋಜನೆಯಡಿ ವಿಲೀನಗೊಳಿಸಲಾಗಿದೆ. ಅಮೃತಯೋಜನೆಯ ಮೂಲ ಉದ್ದೇಶದಂತೆ ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ವಿಧವೆಯರು, ದೇವದಾಸಿಯರು, ಸಂಕಷ್ಟಕ್ಕೆ ಒಳಗಾದ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ.
ಪಶುಭಾಗ್ಯ ಯೋಜನೆಗೆ ಅರ್ಹ ಫಲಾನುಭವಿಗಳನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮುಖಾಂತರ ಆಯ್ಕೆ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
ಜಿಲ್ಲೆಯ ಆಸಕ್ತ ಮತ್ತು ಅರ್ಹ ರೈತರು ಸದರಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಲು ಸಂಬಂಧ ನಿಗದಿತ ಅರ್ಜಿ ನಮೂನೆಯನ್ನು ಪಶುಪಾಲನಾ ಇಲಾಖೆಯ ಸಂಬಂಧಿಸಿದ ತಾಲ್ಲೂಕಿನ ಪಶುಆಸ್ಪತ್ರೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿಮಾಡಿ ಎಲ್ಲ ದಾಖಲೆಗಳನ್ನು ಲಗತ್ತಿಸಿ ಆಗಸ್ಟ್ 20ರೊಳಗೆ ಸಲ್ಲಿಸಬೇಕಿದೆ.
ಜಿಲ್ಲೆಯಲ್ಲಿ ಅನುಷ್ಟಾನ ಮಾಡುತ್ತಿರುವ ಪಶುಭಾಗ್ಯ ಯೋಜನೆಯ ಪ್ರಯೋಜನವನ್ನು ಪಡೆಯಲು ಜನತೆ ಮುಂದಾಗಬೇಕು. ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಪಶುಆಸ್ಪತ್ರೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಬೇಕು. ಅಲ್ಲದೆ ದೂರವಾಣಿ ಸಂಖ್ಯೆ 08226-222757( ಚಾಮರಾಜನಗರ), 08229-222346 (ಗುಂಡ್ಲುಪೇಟೆ), 08224-252215(ಕೊಳ್ಳೇಗಾಲ),  08226-240128 (ಯಳಂದೂರು)ಗೆ ಕರೆ ಮಾಡಿ ಸಹ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಪಶುಪಾಲನಾ ಇಲಾಖೆ ಉಪನಿರ್ದೇಶಕರಾದ ಡಾ.ಬಿ.ಬಾಲಸುಂದರ್ ಹೇಳಿದ್ದಾರೆ.

ಡೆಂಗ್ಯೂ ವಿರೋಧಿ ಅರಿವು ಮಾಸಚರಣೆ ಜಾಥಾಕ್ಕೆ ಚಾಲನೆ    
     ಚಾಮರಾಜನಗರ, ಜು. 27 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ನಗರದಲ್ಲಿ ಜಿಲ್ಲಾಮಟ್ಟದ ಡೆಂಗ್ಯೂ ವಿರೋಧಿ ಅರಿವು ಮಾಸಾಚರಣೆ ಅಂಗವಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಅವರಣದಲ್ಲಿಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಚಾಮರಾಜೇಶ್ವರ ದೇವಸ್ಥಾನದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು. ನಗರದ ಮನೋನಿಧಿ ನರ್ಸಿಂಗ್ ಶಾಲೆ ಮತ್ತು ಸಂತ ಫಿಲೋಮೀನಾ ಶಾಲೆಯ ವಿದ್ಯಾರ್ಥಿಗಳು ಬ್ಯಾಂಡ್‍ಸೆಟ್‍ನೊಂದಿಗೆ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡೆಂಗ್ಯೂ ರೋಗದ ಕುರಿತು ಅರಿವು ಮೂಡಿಸುವ ಬ್ಯಾನರ್ ಹಾಗೂ ಭಿತ್ತಿಪತ್ರಗಳನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು ಜಾಗೃತಿ ಘೋಷಣೆಗಳನ್ನು ಮೊಳಗಿಸುತ್ತಾ ಸಾರ್ವಜನಿಕರ ಗಮನ ಸೆಳೆದರು.
ನಗರಸಭೆ ಅಧ್ಯಕ್ಷರಾದ ರೇಣುಕಾ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಿಲ್ಲಾ ಮಲೇರಿಯಾಧಿಕಾರಿ ಡಾ. ಎಂ. ಅನಿಲ್‍ಕುಮಾರ್, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ. ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಆರೋಗ್ಯ ಮೇಲ್ವಿಚಾರಕರಾದ ನಾಗರಾಜು, ಕಿರಿಯ ಆರೋಗ್ಯ ಸಹಾಯಕರಾದ ಮಂಜುನಾಥ್, ಪ್ರಕಾಶ್ ಇದೇ ಸಂದರ್ಭದಲ್ಲಿ ಹಾಜರಿದ್ದರು.

ಜಿಲ್ಲೆಯ ಗ್ರಾ.ಪಂ.ಗಳಲ್ಲಿ ಹಲವು ಇಲಾಖೆಗಳ ಸೇವೆ ಒದಗಿಸುವ ಬಾಪೂಜಿ ಸೇವಾ ಕೇಂದ್ರಕ್ಕೆ ಚಾಲನೆ : ಡೀಸಿ
ಚಾಮರಾಜನಗರ, ಜು. 28 (ಕರ್ನಾಟಕ ವಾರ್ತೆ):- ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ತ್ವರಿತವಾಗಿ ನೀಡುವ ಪಂಚಾಯತ್-100 ಬಾಪೂಜಿ ಸೇವಾ ಕೇಂದ್ರಗಳನ್ನು ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲೂ ಪ್ರಾರಂಭಿಸಲಾಗುತ್ತಿದೆ.
ಗ್ರಾಮೀಣ ಜನರು ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಿಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳನ್ನು ಪಡೆಯುವ ಅಗತ್ಯವಿದೆ. ಈ ದಾಖಲೆಗಳನ್ನು ಶೀಘ್ರವಾಗಿ ಸಮೀಪದಲ್ಲೇ ಸುಲಭವಾಗಿ ಪಡೆದುಕೊಳ್ಳಲು ರಾಜ್ಯ ಸರ್ಕಾರ ಒಂದೇ ಸೂರಿನಡಿ ಆಯಾ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರದ ಮೂಲಕ ಅನುಕೂಲ ಕಲ್ಪಿಸುತ್ತಿದೆ. ಈ ಸೇವಾ ಕೇಂದ್ರಗಳ ಸೇವೆಗೆ ಜುಲೈ 30ರಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಮಂಗಲ ಗ್ರಾಮ ಪಂಚಾಯಿತಿಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡುವರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಶಾಸಕರು, ಇತರೆ ಎಲ್ಲ ಜನಪ್ರತಿನಿಧಿಗಳು ಭಾಗವಹಿಸುವರು.
ನಗರದ  ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಬಿ. ರಾಮು ಈ ವಿಷಯ ತಿಳಿಸಿದರು.
ಪ್ರಾಥಮಿಕ ಹಂತದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 43 ಸೇವೆಗಳು, ಕಂದಾಯ ಇಲಾಖೆಯ 40 ಹಾಗೂ ಇನ್ನಿತರ 17 ಸೇವೆಗಳನ್ನು ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡಲಾಗುತ್ತದೆ. ಆನ್ ಲೈನ್ ಮೂಲಕ ತ್ವರಿತವಾಗಿ ನಾಗರಿಕರಿಗೆ ಸೇವೆಗಳನ್ನು ಒದಗಿಸಲಾಗುತ್ತದೆ. ಜತೆಗೆ ಕಂದಾಯ ಇಲಾಖೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ವಿವಿಧ ಪ್ರಮಾಣ ಪತ್ರಗಳನ್ನು ಸಹ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ವಿತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗ್ರಾಮ ಪಂಚಾಯಿತಿಯ ಪಂಚತಂತ್ರ ತಂತ್ರಾಂಶದೊಂದಿಗೆ ನಾಡಕಚೇರಿ, ಭೂಮಿ ತಂತ್ರಾಂಶಗಳನ್ನು ಸಮಗ್ರೀಕರಣಗೊಳಿಸಲಾಗಿದೆ. ಇದರಿಂದಾಗಿ ಅಟಲ್ ಜೀ ಜನಸ್ನೇಹಿ ಕೇಂದ್ರದಡಿ ನಾಡಕಚೇರಿ ಮೂಲಕ ನಿರ್ವಹಿಸಲಾಗುತ್ತಿರುವ ಕಂದಾಯ ಇಲಾಖೆಯ 39 ಸೇವೆಗಳು ಹಾಗೂ ಪಹಣಿಗಳನ್ನು ಗ್ರಾಮ ಪಂಚಾಯಿತಿಗಳ ಪಂಚತಂತ್ರ ತಂತ್ರಾಂಶದಲ್ಲಿ ಲಭ್ಯವಾಗುವಂತೆ ವ್ಯವಸ್ಥೆಗೊಳಿಸಲಾಗಿದೆ ಎಂದರು.
ಭೂಮಾಪನ, ಕಂದಾಯ ಮತ್ತು ಆರ್‍ಟಿಸಿ ದಾಖಲೆಗಳನ್ನು ಪಡೆದುಕೊಳ್ಳಲು ನಾಗರಿಕರು ಸಮೀಪದ ಗ್ರಾಮ ಪಂಚಾಯಿತಿಯ ಪಂಚತಂತ್ರದ ತಂತ್ರಾಂಶದ ಮೂಲಕ ನಿಗದಿತ ಸೇವಾ ಶುಲ್ಕ ಪಾವತಿಸಲು ಹಾಗೂ ಬೇಡಿಕೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕಂದಾಯ ಇಲಾಖೆಯ 39 ಸೇವೆ ಮತ್ತು ಪಹಣಿಗಳನ್ನು ಪಡೆಯಲು ಬಾಪೂಜಿ ಸೇವಾ ಕೇಂದ್ರಗಳಿಗೆ ಕೋರಿಕೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ರಾಮು ವಿವರಿಸಿದರು.
ಸೇವಾ ಕೇಂದ್ರಗಳಿಗೆ ಅಗತ್ಯವಿರುವ ಸೌಕರ್ಯಗಳನ್ನು ಒದಗಿಸಲಾಗುತ್ತದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವಿವಿಧ ಸೇವೆಗಳನ್ನು ಪಡೆಯಲು ಆರಂಭಿಸಲಾಗುತ್ತಿರುವ ಬಾಪೂಜಿ ಸೇವಾ ಕೇಂದ್ರಗಳ ಸದುಪಯೋಗವನ್ನು ಗ್ರಾಮೀಣ ಜನತೆ ಪಡೆದುಕೊಳ್ಳಬೇಕು ಎಂದು ರಾಮು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಗ್ರಾಮೀಣ ಕ್ಷೇತ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಾಮರಾಜನಗರ, ಜು. 28 (ಕರ್ನಾಟಕ ವಾರ್ತೆ):- ಗ್ರಾಮೀಣ ಭಾಗದಲ್ಲಿ ಪ್ರಮುಖ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗುವಂತೆ  ಗ್ರಾಮ ಪಂಚಾಯಿತಿ ಅಧಿಕಾರಿಗಳು, ಕಾರ್ಯದರ್ಶಿಗಳು ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಲು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶಂಭುದಯಾಳ್ ಮೀನಾ ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಬರ ನಿರ್ವಹಣೆ ಹಾಗೂ ಇತರೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ಮುಖ್ಯ ಕಾರ್ಯಕ್ರಮಗಳಾದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ವಸತಿ ಯೋಜನೆ ಸೇರಿದಂತೆ ಇತರೆ ಸೌಲಭ್ಯಗಳು ನಿಗದಿತ ಕಾಲಮಿತಿಯೊಳಗೆ ತಲುಪಿಸಲು ಕ್ಷೇತ್ರವಾರು ಭೇಟಿ ಕೊಡಬೇಕಿದೆ. ಗ್ರಾಮ ಮಟ್ಟದಲ್ಲಿ ಜಾರಿಯಾಗುವ ಕಾರ್ಯಕ್ರಮಗಳ ನಿರ್ವಹಣೆ ಜವಾಬ್ದಾರಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳ ಮೇಲಿದೆ. ಕ್ಷೇತ್ರಕ್ಕೆ ಭೇಟಿ ನೀಡಿದರೆ ಮಾತ್ರ ವಾಸ್ತವ ಪರಿಸ್ಥಿತಿ ಅರ್ಥವಾಗುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮ ಮಟ್ಟದ ಅಧಿಕಾರಿಗಳು ವ್ಯಾಪಕವಾಗಿ ಭೇಟಿ ಕೊಟ್ಟು ಯೋಜನೆ ಪರಿಶೀಲಿಸುತ್ತಿದ್ದಾರೆಯೇ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಗಮನಿಸಬೇಕು ಎಂದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಭೇಟಿ, ಪ್ರವಾಸ ಕುರಿತ ಪಟ್ಟಿಯನ್ನು ಮೊದಲೇ ಪಡೆಯಬೇಕು. ಆ ಪ್ರಕಾರವೇ ಕಾರ್ಯನಿರ್ವಹಿಸತ್ತಿದ್ದಾರೆಯೇ ಎಂದು ಪರಿಶೀಲಿಸಬೇಕು. ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆ ಸರಿಯಾಗಿದೆಯೇ ಎಂದು ನೋಡಬೇಕು. ಇಲ್ಲವಾದಲ್ಲಿ ಕೆಲಸಗಳು ನಿಗದಿತ ಅವಧಿಯೊಳಗೆ ಪೂರ್ಣವಾಗುವುದಿಲ್ಲ ಎಂದು ಶಂಭುದಯಾಳ್ ಮೀನಾ ತಿಳಿಸಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಹ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಸುಧಾರಣೆ ಕಂಡುಕೊಳ್ಳಬೇಕು. ಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲಿಸುವ ಕೆಲಸ ಮಾಡಬೇಕು. ತಮ್ಮ ಇಲಾಖೆ ವ್ಯಾಪ್ತಿಯ ಅಧಿಕಾರಿಗಳ ಸಭೆ ಕರೆದು ಆಡಳಿತ ಚುರುಕುಗೊಳ್ಳಲು ಮಾರ್ಗದರ್ಶನ ಮಾಡಬೇಕು ಎಂದರು.
ವಸತಿ ಯೋಜನೆಯಡಿ ಬಡ ಫಲಾನುಭವಿಗಳು ಮನೆ ನಿರ್ಮಿಸಿಕೊಳ್ಳಲು ಮರಳು ಅಭಾವ ಉಂಟಾಗುತ್ತಿದೆ ಎಂಬ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿವೆ. ವಸತಿ ಯೋಜನೆ ಹಿನ್ನೆಡೆಗೆ ಮರಳು ಕೊರತೆಯೇ ಕಾರಣವಾಗಬಾರದು. ಬಡಜನತೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಮರಳು ಪೂರೈಕೆಗೆ ಅವಕಾಶ ಮಾಡಿಕೊಡಬೇಕು. ಫಲಾನುಭವಿಗಳು ಯಾವ ಉದ್ದೇಶಕ್ಕೆ ಮರಳು ಬಳಕೆ ಮಾಡಿಕೊಳ್ಳಲಿದ್ದಾರೆ ಎಂಬ ಬಗ್ಗೆ ಅಧಿಕಾರಿಗಳು ಖಾತರಿ ಮಾಡಿಕೊಡಬೇಕು. ಇದರಿಂದ ಅನವಶ್ಯಕವಾಗಿ ತೊಂದರೆಗೆ ಒಳಗಾಗುವುದು ತಪ್ಪಲಿದೆ ಎಂದು ಶಂಭುದಯಾಳ್ ಮೀನಾ ತಿಳಿಸಿದರು.
ಜಿಲ್ಲೆಯಲ್ಲಿ ಆರಂಭಿಸಿರುವ ಕೊಟಿವೃಕ್ಷ ಆಂದೋಲನ ಕುರಿತು ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈಗಾಗಲೇ ನೆಡಲಾಗಿರುವ ಸಸಿಗಳನ್ನು ಪೋಷಣೆ ಮಾಡಬೇಕು. ಶಾಲೆಗಳಲ್ಲಿಯೂ ಹೆಚ್ಚಿನ ಸಸಿ ನೆಡುವ ಕಾರ್ಯಕ್ರಮ ಮುಂದುವರಿಸಬೇಕು. ಬೇಡಿಕೆಗೆ ಅನುಗುಣವಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಸಸಿ ಪೂರೈಸಿ ಸಮನ್ವಯ ಮಾಡಬೇಕು ಎಂದರು.
ಸ್ವಚ್ಚ ಭಾರತ್ ಮಿಷನ್‍ನಡಿ ಶೌಚಾಲಯಗಳ ನಿರ್ಮಾಣಕ್ಕೆ ಜನರನ್ನು ಪ್ರೇರೇಪಿಸಬೇಕು. ಶೌಚಾಲಯಗಳ ನಿರ್ಮಾಣದಿಂದ ಆಗುವ ಪ್ರಯೋಜನಗಳ ಕುರಿತು ಜಾಗೃತಿ ಮೂಡಿಸುವ ಆಂದೋಲನ ನಿರಂತರವಾಗಿ ನಡೆಯಬೇಕು. ಮಹಿಳೆಯರಿಗೆ ತಿಳಿವಳಿಕೆ ನೀಡಲು ಮಹಿಳಾ ಅಧಿಕಾರಿ, ಶಿಕ್ಷಕಿಯರು, ಇತರೆ ಸಿಬ್ಬಂದಿ ಸಹಕಾರ ಪಡೆಯುವ ಮೂಲಕ ಪರಿಣಾಮಕಾರಿಯಾಗಿ ಅರಿವು ಮೂಡಿಸಬಹುದೆಂದು ಉಸ್ತುವಾರಿ ಕಾರ್ಯದರ್ಶಿ ತಿಳಿಸಿದರು.
ಕೃಷಿ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ಅಂಗನವಾಡಿ ನಿರ್ವಹಣೆ, ಪೋಡಿ ಪ್ರಕರಣ, ಸಮಾಜ ಕಲ್ಯಾಣ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಅನುದಾನ, ಉದ್ಯೋಗ ಖಾತರಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ಜಿ.ಪಂ. ಉಪಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೋಜನಾಧಿಕಾರಿ ಮಾದೇಶು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಜು. 29ರಂದು ದಲಿತ ವಚನಕಾರರು, ಭಗೀರಥ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ
ಚಾಮರಾಜನಗರ, ಜು. 28 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ದಲಿತ ವಚನಕಾರರ ಜಯಂತಿ ಹಾಗೂ ಶ್ರೀ ಭಗೀರಥ ಜಯಂತಿ ಆಚರಿಸುವ ಸಂಬಂಧ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜುಲೈ 29ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯದ ಮುಖಂಡರು, ಜನಪ್ರತಿನಿಧಿಗಳು, ನಾಗರಿಕರು ಹಾಜರಾಗಿ ಸಲಹೆ ನೀಡುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಕೋರಿದ್ದಾರÀÉ. 



ಜು. 29, 30ರಂದು ವಿಕಲಚೇತನರ ತಪಾಸಣಾ ಶಿಬಿರ
ಚಾಮರಾಜನಗರ, ಜು. 28 (ಕರ್ನಾಟಕ ವಾರ್ತೆ):- ವಿಕಲಚೇತನರ ತಪಾಸಣಾ ಶಿಬಿರವನ್ನು ಜುಲೈ 29ರಂದು ಗುಂಡ್ಲುಪೇಟೆ ಪಟ್ಟಣದ ಡಿಬಿಜಿಜೆ ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಜುಲೈ 30ರಂದು ಚಾಮರಾಜನಗರದ ಸತ್ತಿ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ.
ಕೇಂದ್ರ ಸರ್ಕಾರಿ ಸ್ವಾಮ್ಯದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಇನ್ಸಿಟ್ಯೂಟ್ ಫಾರ್ ದಿ ಫಿಸಿಕಲಿ ಹ್ಯಾಂಡಿಕ್ಯಾಪಡ್ ಸಂಸ್ಥೆಯು ತಪಾಸಣಾ ಶಿಬಿರದ ಜವಾಬ್ದಾರಿ ನಿರ್ವಹಿಸಲಿದೆ. ದೆಹಲಿ, ಹÉೈದರಾಬಾದ್ ಮತ್ತು ಚೆನ್ನೈ ಮಹಾನಗರಗಳಿಂದ ತಜ್ಞರು ಬರಲಿದ್ದಾರೆ.
ದೈಹಿಕ ವಿಕಲತೆ, ದೃಷ್ಠಿದೋಶ, ಬುದ್ಧಿಮಾಂದ್ಯತೆ ಇನ್ನಿತರ ವಿಕಲತೆ ಇರುವವರು ಶಿಬಿರಕ್ಕೆ ಹಾಜರಾಗಿ ಆರೋಗ್ಯ ಸಂಬಂಧಿ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಯನ್ನು ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಅಂಗನವಾಡಿ ಕೇಂದ್ರ ಮತ್ತು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿ (ದೂ.ಸಂ. 08226-223688 ಮತ್ತು 224688) ಸಂಪರ್ಕಿಸಬಹುದಾಗಿದೆ.
ಅಂಗವಿಕಲರ ತಪಾಸಣಾ ಶಿಬಿರವನ್ನು ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟಿಸುವರು. ಶಾಸಕರು ಹಾಗೂ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಗಳು ಆದ ಸಿ. ಪುಟ್ಟರಂಗಶೆಟ್ಟಿ ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.

ಜು. 30ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜು. 28 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜುಲೈ 30ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ. 

ಆ. 9ರಂದು ನಗರದಲ್ಲಿ ವಿಕಲಚೇತನರ ಕುಂದುಕೊರತೆ ಸಭೆ
ಚಾಮರಾಜನಗರ, ಜು. 28 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ವಿಕಲಚೇತನರ ಕುಂದುಕೊರತೆ ಆಲಿಸಲು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 9ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಹಸೀಲ್ದಾರ್ ಕಚೇರಿಯಲ್ಲಿ  ಸಭೆ ನಿಗದಿ ಮಾಡಲಾಗಿದೆ.
ವಿಕಲಚೇತನರು ತಮ್ಮ ಸಮಸ್ಯೆ, ಕುಂದುಕೊರತೆ ಸಂಬಂಧ ಅರ್ಜಿಗಳನ್ನು ಸಭೆಯಲ್ಲಿಯೇ ತಹಸೀಲ್ದಾರ್ ಅವರಿಗೆ ಸಲ್ಲಿಸಬಹುದು. ಮಾಹಿತಿಗೆ ಹಾಗೂ ರಾಜೇಶ್ (ಮೊಬೈಲ್ 8105720709), ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 08226-222603, 08226-223688 ಸಂಪರ್ಕಿಸುವಂತೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
&*********************

ಕರ್ನಾಟಕ ಸರ್ಕಾರ
(ಪೊಲೀಸ್ ಇಲಾಖೆ)
ಸಂಖ್ಯೆ:ಚಾನ/ಡಿಸಿಆರ್‍ಬಿ/ಪ.ಪ್ರ./11/2016                              ಪೊಲೀಸ್ ಅಧೀಕ್ಷಕರವರ ಕಛೇರಿ
      ಚಾಮರಾಜನಗರ ಜಿಲ್ಲೆ,
     ಚಾಮರಾಜನಗರ. ದಿನಾಂಕ: 26-07-2016.

:: ಪತ್ರಿಕಾ ಪ್ರಕಟಣೆ ::

ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದ ವಿಜೇತರು
   ದಿನಾಂಕ 21-07-2016 ಹಾಗು 22.07.2016 ರಂದು ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರಿನಲ್ಲಿ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ಮೈಸೂರು, ಹಾಸನ, ಮಂಡ್ಯ, ಕೊಡಗು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು. ಸದರಿ ಸ್ಪರ್ಧೆಯಲ್ಲಿ ವಿಧಿವಿಜ್ಞಾನ ಲಿಖಿತ ಪರೀಕ್ಷೆ, ಕ್ರಿಮಿನಲ್ ಕಾನೂನಿನ ಬಗ್ಗೆ ಲಿಖಿತ ಪರೀಕ್ಷೆ, ಬೆರಳಚ್ಚು ಪರೀಕ್ಷೆ, ವೈದ್ಯಕೀಯ ನ್ಯಾಯಿಕ  ಮೌಖಿಕ ಪರೀಕ್ಷೆ,  ವಿಧಿ ವಿಜ್ಞಾನ ಅಪರಾಧಿಕ ದೃಶ್ಯದ ಪೋಟೋಗ್ರಫಿ, ಕಂಪ್ಯೂಟರ್ ಅರಿವು ಪರೀಕ್ಷೆ ಮತ್ತು ಹ್ಯಾಡ್ಲಿಂಗ್ & ಲಿಪ್ಟಿಂಗ್  & ಪ್ಯಾಕಿಂಗ್, ಶ್ವಾನದಳದಿಂದ ಸ್ಪೋಟಕ ಪತ್ತೆ, ಆಂಟಿ ಸಬೋಟೆಜ್ ಚೆಕ್, ಪೋಟೋ ಗ್ರಫಿ ಹಾಗೂ ವಿಡಿಯೋ ಗ್ರಫಿ ಸ್ಪರ್ಧೆಗಳು ಇದ್ದವು. ಚಾಮರಾಜನಗರ ಜಿಲ್ಲೆಯ ಈ ಕೆಳಕಂಡ ಅಧಿಕಾರಿ ಮತ್ತು ಸಿಬ್ಬಂದಿಯವರು ಭಾಗವಹಿಸಿ ಚಿನ್ನ-6, ಬೆಳ್ಳಿ-9 ಹಾಗು ಕಂಚಿ-5 ಪದಕಗಳನ್ನು ಗೆದ್ದು ವಿಜೇತರಾಗಿದ್ದಾರೆ. ವಲಯ ಮಟ್ಟದ ವಿವಿಧ ಸ್ಪರ್ದೆಗಳಲ್ಲಿ ಒಟ್ಟು 55 ಪದಕಗಳಿದ್ದು, ಅದರಲ್ಲಿ ಎಲ್ಲಾ ಜಿಲ್ಲೆಗಳಿಗಿಂತ ಚಾಮರಾಜನಗರ ಜಿಲ್ಲೆಯು 21 ಪದಕಗಳನ್ನು ಗೆದ್ದು, ಚಾಂಪಿಯನ್ ಪಾರಿತೋಷಕವನ್ನು ಪಡೆದಿರುತ್ತದೆ.
ಕ್ರ.ಸಂ    ಪದನಾಮ & ಸಂಖ್ಯೆ    ಅಧಿಕಾರಿ & ಸಿಬ್ಬಂದಿಯ ಹೆಸರು    ಪೊಲೀಸ್ ಠಾಣೆ    ಚಿನ್ನದ ಪದಕ    ಬೆಳ್ಳಿ ಪದಕ    ಕಂಚಿನ ಪದಕ    ಒಟ್ಟು
1    ಪಿಎಸ್‍ಐ    ಎನ್. ಆನಂದ    ಕೊಳ್ಳೇಗಾಲ ಪಟ್ಟಣ    02    03    01    06
2    ಪಿಐ    ಷಣ್ಮುಗ ವರ್ಮ    ಡಿಸಿಐಬಿ    03    01    01    05
3    ಪಿಎಸ್‍ಐ    ಶ್ರೀಧರ್    ರಾಮಾಪುರ     -    01    -    01
4    ಸಿಪಿಸಿ-19    ಮಹೇಶ    ಚಾ.ನಗರ ಪಟ್ಟಣ    01    -    -    01
5    ಸಿಪಿಸಿ-300    ಮಹದೇವಸ್ವಾಮಿ    ರಾಮಾಪುರ    01    -    -    01
6    ಸಿಪಿಸಿ-101    ರಾಜು    ಬೇಗೂರು    -    01    -    01
7    ಎಹೆಚ್‍ಸಿ-61    ಮೋಹನ್    ಡಿಎಆರ್    -    01    -    01
8    ಎಪಿಸಿ-231    ಸಂತೋಷ್    ಶ್ವಾನದಳ    -    01    -    01
9    ಎಪಿಸಿ-175    ಕೆಂಪರಾಜು    ಶ್ವಾನದಳ    -    01    -    01
10    ಎಪಿಸಿ-252    ಗಜೇಂದ್ರ    ಡಿಎಆರ್    -    -    01    01
11    ಸಿಪಿಸಿ-386    ಮಂಜುನಾಥ್    ಚಾ.ನಗರ ಪೂರ್ವ    -    -    01    01
12    ಎಹೆಚ್‍ಸಿ-09    ಮಹದೇವಸ್ವಾಮಿ    ಡಿಎಆರ್    -    -    01    01
ಒಟ್ಟು    07    09    05    21

            ಮೇಲ್ಕಂಡ ವಿಜೇತರಾದಂತ ಅಧಿಕಾರಿ ಹಾಗು ಸಿಬ್ಬಂದಿಯವರುಗಳಿಗೆ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಹುಮಾನ ಮತ್ತು  ಪ್ರಶಂಸನಾ ಪತ್ರವನ್ನು ವಿತರಿಸಿದರು. 

           




ಜಿಲ್ಲಾಡಳಿತದಿಂದ ಭಗೀರಥ, ದಲಿತ ವಚನಕಾರರ ಜಯಂತಿ ಆಚರಣೆಗೆ ನಿರ್ಧಾರ    
     ಚಾಮರಾಜನಗರ, ಜು. 29 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಆಗಸ್ಟ್ 10ರಂದು ಹಾಗೂ ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 24ರಂದು ಎಲ್ಲ ಸಮುದಾಯ ಮತ್ತು ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಗಳು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮತ್ತು ಜಿಲ್ಲಾದಿಕಾರಿ ಬಿ. ರಾಮು ಅವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಈ ಎರಡು ಜಯಂತಿ ಅಚರಣೆಗೆ ನಿರ್ಧಾರ ಕೈಗೊಳ್ಳಲಾಯಿತು.
    ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ನಗರದ ಪೇಟೆ ಪ್ರೈಮರಿ ಶಾಲೆ ಅವರಣದಲ್ಲಿ ಹಮ್ಮಿಕೊಳ್ಳುವ ಬಗ್ಗೆ ಪ್ರಸ್ತಾಪವಾಯಿತು. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಭಾಗವಹಿಸಲಿದ್ದಾರೆ. ಸ್ಥಳಾವಕಾಶದ ಕೊರತೆ ಪೇಟೆ ಪ್ರೈಮರಿ ಶಾಲೆ ಅವರಣದಲ್ಲಿ ಕಂಡುಬರಬಹುದು. ಹೀಗಾಗಿ ನಗರದ ಮಾರಿಗುಡಿ ಹತ್ತಿರ ಕಾರ್ಯಕ್ರಮ ಆಯೋಜಿಸಬೇಕೆಂಬ ಸಲಹೆ ಮುಖಂಡರಿಂದ ಕೇಳಿಬಂದಿತು.
ಹೀಗಾಗಿ ಮಾರಿಗುಡಿ ಸಮೀಪವೇ ಭಗೀರಥ ಜಯಂತಿ ಕಾರ್ಯಕ್ರಮ ಏರ್ಪಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಕಾರ್ಯಕ್ರಮದಂದು ಪ್ರವಾಸಿ ಮಂದಿರದಿಂದ ಭಗೀರಥರ ಭಾವಚಿತ್ರ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲು ಸಹ ಒಪ್ಪಲಾಯಿತು.
ಜಿಲ್ಲ್ಲಾಧಿಕಾರಿ ಬಿ. ರಾಮು ಮಾತನಾಡಿ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಶುಚಿತ್ವ ಕೆಲಸವನ್ನು ವಿಶೇಷವಾಗಿ ನಿರ್ವಹಿಸಬೇಕು. ಒಳಚರಂಡಿ ಕಾಮಗಾರಿಯಿಂದ ಆಗಿರುವ ಅಪೂರ್ಣ ರಸ್ತೆ ಕೆಲಸವನ್ನು ತಾತ್ಕಾಲಿಕವಾಗಿ ಸರಿಪಡಿಸಲು ನಗರಸಭೆ ಅಧಿಕಾರಿಗಳು ಕ್ರಮ ವಹಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಂದು ಭಗೀರಥರ ವಿಚಾರ, ಮೌಲ್ಯಗಳ ಕುರಿತು ತಿಳಿಸಿಕೊಡುವ ಮುಖ್ಯ ಭಾಷಣಕಾರರನ್ನು ಆಹ್ವಾನಿಸಬೇಕು. ಈ ಆಹ್ವಾನಿತರ ಆಯ್ಕೆಯನ್ನು ಚರ್ಚಿಸಿ ಅಂತಿಮವಾಗಿ ನಿರ್ಧಾರ ಕೈಗೊಳ್ಳಬಹುದೆಂದು ಸಭೆಯಲ್ಲಿದ್ದ ಮುಖಂಡರಿಗೆ ಜಿಲ್ಲಾಧಿಕಾರಿ ತಿಳಿಸಿದರು.
ದಲಿತ ವಚನಕಾರರ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 24ರಂದು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಚರಿಸಲು ತೀರ್ಮಾನ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ವಚನಕಾರರು ಸಮಾಜ ತಿದ್ದುವ ಸಂದೇಶಗಳನ್ನು ಒಳಗೊಂಡ ವಚನಗಳನ್ನು ರಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳೋಣ ಎಂದು ತಿಳಿಸಿದರು.
ವಿವಿಧ ಭಾಗಗಳಲ್ಲಿರುವ ವಚನ ಸಾಹಿತ್ಯದಲ್ಲಿ ನಿರತರಾಗಿರುವ ಹಾಗೂ ಗುರುತಿಸಿಕೊಂಡಿರುವವರನ್ನು ಆಹ್ವಾನಿಸಿ ಸನ್ಮಾನಿಸುವುದು ಸಹ ಉತ್ತಮ ಕೆಲಸವಾಗಲಿದೆ. ಈ ಬಗ್ಗೆಯು ಆಸಕ್ತಿವಹಿಸಿ ನಿರತರಾಗೋಣ ಎಂದು ಜಿಲ್ಲಾಧಿಕಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಂದು ದಲಿತ ವಚನಕಾರರ ವಚನಗಳ ಗಾಯನವನ್ನು ಏರ್ಪಾಡು ಮಾಡಲು ಸಹ ಮುಖಂಡರ ಸಲಹೆಯಂತೆ ತೀರ್ಮಾನಿಸಲಾಯಿತು. ದಲಿತ ವಚನಕಾರ ವಿಚಾರಧಾರೆಗಳ ಕುರಿತು ಉಪನ್ಯಾಸ ನೀಡುವ ಮಾದರಿಯಲ್ಲಿ ಕಾರ್ಯಕ್ರಮ ಮೂಡಿಬರಬೇಕು. ಇದಕ್ಕಾಗಿ ದಲಿತ ವಚನಕಾರರದ ಬಗ್ಗೆ ಹೆಚ್ಚು ಅಧ್ಯನ ಮಾಡಿರುವ ವಿಚಾರವಂತರನ್ನು ಆಹ್ವಾನಿಸಬೇಕೆಂಬ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಲದೀಪ್‍ಕುಮಾರ್ ಆರ್, ಜೈನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೆಶಕರಾದ ಸರಸ್ವತಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವಿನಯ್, ಮಾಜಿ ಕ.ಸಾ.ಪ. ಅಧ್ಯಕ್ಷರಾದ ಸೋಮಶೇಖರ ಬಿಸಲ್ವಾಡಿ, ಮುಖಂಡರಾದ ವೆಂಕಟರಮಣ(ಪಾಪು), ಕೆ.ಎಂ. ನಾಗರಾಜು, ಚಿಕ್ಕಮಹದೇವು, ಮಹದೇವಶೆಟ್ಟಿ, ಮಹೇಶ್‍ಉಪ್ಪಾರ, ಬಿ. ನಾಗರಾಜು, ಅರಕಲವಾಡಿ ನಾಗೆಂದ್ರ, ನಿಜದ್ವನಿ ಗೋವಿಂದರಾಜು, ಆಲೂರು ನಾಗೇಂದ್ರ, ಚಾ.ರಂ. ಶ್ರಿನಿವಾಸಗೌಡ, ಚಾ.ಗು. ನಾಗರಾಜು, ಬಸವನಪುರ ರಾಜಶೇಖರ್, ಬ್ಯಾಡಮೂಡ್ಲು ಬಸವಣ್ಣ, ಗೋವಿಂದಶೆಟ್ಟರು, ಜೈಕುಮಾರ್, ಸಂಘಸೇನಾ, ತಾಲೂಕಿನ ಗಡಿಮನೆ, ಕಟ್ಟೆಮನೆ ಯಜಮಾನರು, ಇತರೆ ಮುಖಂಡರು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.      



ಪಂಚಾಯತ್-100 ಬಾಪೂಜಿ ಸೇವಾ ಕೇಂದ್ರಗಳ ಸೇವೆಗೆ ಉಸ್ತುವಾರಿ ಸಚಿವರ ಚಾಲನೆ
ಚಾಮರಾಜನಗರ, ಜು. 30 (ಕರ್ನಾಟಕ ವಾರ್ತೆ):- ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ತ್ವರಿತವಾಗಿ ನೀಡುವ ಪಂಚಾಯತ್-100 ಬಾಪೂಜಿ ಸೇವಾ ಕೇಂದ್ರಗಳ ಆರಂಭಕ್ಕೆ ಸಹಕಾರ, ಸಕ್ಕರೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ತಾಲ್ಲೂಕಿನ ಮಂಗಲ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಿದರು.
ಮಂಗಲ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆರಂಭಿಸಲಾಗಿರುವ ನೂತನ ಬಾಪೂಜಿ ಸೇವಾ ಕೇಂದ್ರದಲ್ಲಿ ಉಸ್ತುವಾರಿ ಸಚಿವರು ಪಂಚತಂತ್ರ ತಂತ್ರಾಂಶದಲ್ಲಿ ಪಹಣಿ ಪತ್ರವನ್ನು ಗ್ರಾಮಸ್ಥರೊಬ್ಬರಿಗೆ ತೆಗೆದುಕೊಡುವ ಮೂಲಕ ಪಂಚಾಯತ್-100  ಸೇವೆಗೆ ಚಾಲನೆ ನೀಡಿದರು.
ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಉಸ್ತುವಾರಿ ಸಚಿವರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ವಿವಿಧ ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ನೀಡುವ ಯೋಜನೆ ಪ್ರಥಮವಾಗಿ ಆರಂಭವಾಗಿದ್ದು ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮ ಪಂಚಾಯಿತಿಯಲ್ಲಿ. ಜಿಪಿ-1 ಹೆಸರಿನಿಂದ ಆರಂಭಗೊಂಡು 17ಕ್ಕೂ ಹೆಚ್ಚು ಸೇವೆಗಳನ್ನು ನೀಡಲಾಗುತ್ತಿತ್ತು. ಈ ಪರಿಕಲ್ಪನೆಯನ್ನು ಇಟ್ಟು ಕೊಂಡು ರಾಜ್ಯ ಸರ್ಕಾರ 100 ಸೇವೆಗಳನ್ನು ಒಂದೇ ಸೂರಿನಡಿ ಗ್ರಾಮ ಪಂಚಾಯಿತಿಯಲ್ಲಿ ಬಾಪೂಜಿ ಸೇವಾ ಕೇಂದ್ರಗಳ ಸ್ಥಾಪನೆ ಮೂಲಕ ಅನುಷ್ಠಾನವನ್ನು ರಾಜ್ಯದೆಲ್ಲೆಡೆ ವಿಸ್ತಾರ ಮಾಡಿದೆ. ಚಾಮರಾಜನಗರ ಜಿಲ್ಲೆ ಯೋಜನೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದೆ ಎಂದರು.
ಗ್ರಾಮೀಣ ಹಾಗೂ ಪಟ್ಟಣವಾಸಿಗಳಿಗೂ ವಿವಿಧ ಇಲಾಖೆಗಳ ಪ್ರಮಾಣ ಪತ್ರ, ಇತರೇ ಸೇವೆಗಳನ್ನು ಒದಗಿಸುವ ಪಂಚಾಯತ್-100 ಬಾಪೂಜಿ ಸೇವಾ ಕೇಂದ್ರಗಳನ್ನು ರಾಜ್ಯದ 2000 ಗ್ರಾಮ ಪಂಚಾಯಿತಿಗಳಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಲಿದೆ. ಇದರಲ್ಲಿ ಜಿಲ್ಲೆಯ 130 ಗ್ರಾಮ ಪಂಚಾಯಿತಿಗಳಲ್ಲೂ ಬಾಪೂಜಿ ಸೇವಾ ಕೇಂದ್ರ ಆರಂಭಿಸಲಾಗುತ್ತಿರುವುದು ಹಿರಿಮೆ ತಂದಿದೆ ಎಂದರು.
ನಾಗರಿಕರು ಅದರಲ್ಲೂ ಗ್ರಾಮೀಣ ಭಾಗದ ಜನರು ಪಹಣಿ, ಸಣ್ಣ ಅತೀ ಸಣ್ಣ ಹಿಡುವಳಿದಾರರ ದೃಡೀಕರಣ ಪತ್ರ ಬೆಳೆ ದೃಢೀಕರಣ ಪತ್ರ ಇನ್ನಿತರ ಅವಶ್ಯ ಪ್ರಮಾಣ ಪತ್ರಗಳಿಗೆ ಹೋಬಳಿ ಹಾಗೂ ತಾಲ್ಲೂಕು ಕೇಂದ್ರಗಳಿಗೆ ಅಲೆದಾಡಬೇಕಿತ್ತು. ನೂತನ ಬಾಪೂಜಿ ಸೇವಾ ಕೇಂದ್ರಗಳಲ್ಲೇ ಇನ್ನೂ ಮುಂದೆ ಕಂದಾಯ ಇಲಾಖೆಯ 39 ಪ್ರಮಾಣ ಪತ್ರಗಳು, ಇತರೆ ಇಲಾಖೆಯ 43 ಪ್ರಮಾಣ ಪತ್ರಗಳನ್ನು ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು.
ಸೇವಾ ಕೇಂದ್ರಗಳಲ್ಲಿ ವಿದ್ಯುತ್, ದೂರವಾಣಿ ಬಿಲ್, ಜೀವ ವಿಮೆ, ವಾಹನಾ ವಿಮೆ, ಪಾವತಿಸಬಹುದು. ಅಲ್ಲದೇ ದೂರದ ಪಟ್ಟಣಗಳಲ್ಲಿ ಇರುವ ತಮ್ಮ ಸಂಬಂಧಿಕರಿಗೆ ಹಣ ವರ್ಗಾವಣೆ ಮಾಡಬಹುದಾಗಿದೆ. ಮೊಬೈಲ್ ರಿಚಾರ್ಜ್, ಆಧಾರ್, ಮತದಾರರ ಗುರುತಿನ ಚೀಟಿ ಇತರೇ ಮಾರ್ಪಾಡುಗಳನ್ನು ಮಾಡಿ ಕೊಳ್ಳಬಹುದು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 43 ಸೇವೆಗಳು, ಕಂದಾಯ ಇಲಾಖೆಯ 40 ಹಾಗೂ ಇನ್ನಿತರ 17 ಸೇವೆಗಳನ್ನು ಗ್ರಾಮ ಪಂಚಾಯಿತಿಯ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ನೀಡಲಾಗುತ್ತದೆ ಎಂದರು.

ಆನ್ ಲೈನ್ ಮೂಲಕ ತ್ವರಿತವಾಗಿ ನಾಗರಿಕರಿಗೆ ಸೇವೆಗಳನ್ನು ಒದಗಿಸಲಾಗುತ್ತದೆ. ಜನತೆ 10ರೂ ಪಾವತಿಸಿ ಸೇವೆಯನ್ನು ಪಡೆಯಬಹುದು. ಹಣ, ಸಮಯ ಉಳಿತಾಯವಾಗಲಿದ್ದು, ಸೇವಾ ಕೇಂದ್ರಗಳನ್ನು ಹೆಚ್ಚು ಸದಪಯೋಗ ಮಾಡಿಕೊಳ್ಳಬೇಕು. ಸೇವಾ ಕೇಂದ್ರದ ಬಳಕೆಯ ಪ್ರಮಾಣ ಹೆಚ್ಚಾದರೇ ಪರಿಣಾಮಕಾರಿಯಾಗಿ ಮತ್ತಷ್ಟು ಸೌಲಭ್ಯಗಳೊಂದಿಗೆ ಸೇವಾ ಕೇಂದ್ರಗಳು ಗ್ರಾಮೀಣಾ ಜನರ ನಿರ್ವಹಣೆಗೆ ಸಜ್ಜಾಗಲಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಸೇವಾ ಕೇಂದ್ರದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಂತ್ರಜ್ಞಾನ ಅಭಿವೃದ್ಧಿ ಹೊಂದಿದಂತೆ ಅದರ ಉಪಯುಕ್ತತೆಯು ಗ್ರಾಮೀಣ ಜನತೆಗೆ ಲಭ್ಯವಾಗುತ್ತಿದೆ. ರೈತರು, ಬೆಳೆಗಾರರು ಬೆಳೆವಿಮೆ, ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಪರಿಕರ, ಇತರೇ ಸವಲತ್ತುಗಳನ್ನು ಇಲಾಖೆಯಿಂದ ಪಡೆಯಲು ಅಗತ್ಯವಿರುವ ದೃಢೀಕರಣ ಪತ್ರಗಳನ್ನು ಇನ್ನು ಮುಂದೆ ಶೀಘ್ರವಾಗಿ ವಿತರಿಸುವ ಪ್ರಕ್ರಿಯೆ ಬಾಪೂಜಿ ಸೇವಾ ಕೇಂದ್ರಗಳಲ್ಲಿ ನಡೆಯಲಿದೆ ಎಂದರು.
ಪ್ರಾಸ್ತವಿಕ ನುಡಿಗಳನ್ನಾಡಿದ ಜಿಲ್ಲಾಧಿಕಾರಿ ಬಿ.ರಾಮು ಅವರು ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳು ರೈತರ ಮನೆ ಬಾಗಿಲಿಗೆ ಸೇವೆ ಒದಗಿಸುವ ಉದ್ದೇಶದಿಂದ ಕಂಪ್ಯೂಟರಿಕರಣಗೊಳ್ಳುತ್ತಿದೆ. ಇದರ ಪರಿಣಾಮವಾಗಿಯೇ ಸ್ಥಳಿಯವಾಗಿ ಹೋಬಳಿ ಕೇಂದ್ರಗಳಲ್ಲಿ ಪ್ರಮಾಣ ಪತ್ರ, ದೃಢೀಕರಣ ಪತ್ರಗಳನ್ನು ವಿತರಿಸುವ ಉದ್ದೇಶದಿಂದ ಅಟಲ್‍ಜೀ ಜನಸ್ನೇಹಿ ಕೇಂದ್ರ ಆರಂಭಿಸಲಾಯಿತು. ಇದೀಗ ಇನ್ನಷ್ಟು ತ್ವರಿತವಾಗಿ ಸೇವೆ ನೀಡುವ ಉದ್ದೇಶದೊಂದಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಾಕಮ್ಮ ಅಧ್ಯಕ್ಷತೆವಹಿಸಿದ್ದರು, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವ ಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು, ತಾಲ್ಲೂಕು ಪಂಚಾಯತ್ ಸದಸ್ಯರಾದ ಪುಷ್ಪಲತಾ ಶ್ರೀನಿವಾಸ್, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಚೂಡಾ ಅಧ್ಯಕ್ಷರಾದ ಸೈಯದ್ ರಫಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಸುಮಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿಕಲಚೇತನರಿಗೆ ನೆರವಿಗೆ ವಿವಿಧ ಸೌಲಭ್ಯ: ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ಜು. 30 (ಕರ್ನಾಟಕ ವಾರ್ತೆ):- ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ರಾಜ್ಯ ಸರ್ಕಾರ ವಿವಿಧ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದು ಸಹಕಾರ ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಆವರಣದಲ್ಲಿ ಇಂದು ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಹಾಗೂ ಕೇಂದ್ರ ಸರ್ಕಾರಿ ಸ್ವಾಮ್ಯದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಇನ್ಸಿಟ್ಯೂಟ್ ಫಾರ್ ದಿ ಫಿಸಿಕಲಿ ಹ್ಯಾಂಡಿಕ್ಯಾಪಡ್ ಸಂಸ್ಥೆಯ ಸಹಯೋಗದೊಂದಿಗೆ ವಿಕಲಚೇತನರಿಗೆ ಸಾಧನ ಸಲಕರಣೆ ಒದಗಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ವಿಕಲಚೇತನರಿಗೆ ನೇರವಾಗುವ ಉದ್ದೇಶದಿಂದ ಅವರಿಗೆ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಅನುಸರಿಸ ಲಾಗುತ್ತಿದೆ. ಇಲಾಖೆಗಳು ನೀಡುವ ಸಾಲ ಸೌಲಭ್ಯ ಇತರೆ ಸವಲತ್ತುಗಳ ವಿತರಣೆಯಲ್ಲೂ ವಿಕಲಚೇತನರಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದರು.
ವಿಕಲಚೇತನರಲ್ಲಿ ಬಹುತೇಕರಿಗೆ ಉತ್ತಮ ಪ್ರತಿಭೆಯಿದೆ. ಅನೇಕರು ಸಂಗೀತಗಾರರು ಆಗಿದ್ದಾರೆ. ಅವರ ಸಾಮಥ್ರ್ಯ ಪ್ರತಿಭೆಗೆ ನೆರವು ನೀಡಬೇಕಿದೆ. ಅವರನ್ನು ಉತ್ತೇಜಿಸಿ ಆತ್ಮಬಲ ತುಂಬಬೇಕಿದೆ. ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲೆಯ ವಿಕಲಚೇತರಿಗೆ ಸಾಧನ ಸಲಕರಣೆಗಳನ್ನು ನೀಡಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಗುಂಡ್ಲುಪೇಟೆ ಹಾಗೂ ನಗರದಲ್ಲಿ ತಪಾಸಣಾ ಶಿಬಿರ ಏರ್ಪಡು ಮಾಡಲಾಯಿತು. ಗುಂಡ್ಲುಪೇಟೆ ಪಟ್ಟಣದಲ್ಲಿ 730 ವಿಕಲಚೇತನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇಂದು ಸಹ ಸಾಕಷ್ಟು ಸಂಖ್ಯೆಯಲ್ಲಿ ವಿಕಲ ಚೇತನರು ತಪಾಸಣೆಗೆ ಬಂದಿದ್ದಾರೆ. ಜಿಲ್ಲೆಯ ಬಂದ್ ಹಿನ್ನಲೆಯಲ್ಲಿ ಕೆಲವರಿಗೆ ತಪಾಸಣೆಗೆ ಬರಲು ಸಾಧ್ಯವಾಗದೇ ಇರಬಹುದು. ಈ ಹಿನ್ನಲೆಯಲ್ಲಿ ಕೊಳ್ಳೇಗಾಲ ತಾಲ್ಲೂಕಿನಲ್ಲಿ ಮತ್ತೊಂದು ತಪಾಸಣಾ ಶಿಬಿರಾ ಏರ್ಪಾಡು ಮಾಡಲು ಪ್ರಯತ್ನಿಸಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ವಿಕಲಚೇತನರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಅನುಕೂಲ ಮಾಡಿಕೊಡಬೇಕಿದೆ. ವಿಕಲಚೇತನರಿಗೆ ತಪಾಸಣೆ ನಡೆಸಿ ಅವರಿಗೆ ಸಾಧನ ಸಲಕರಣೆ ವಿತರಿಸುವ ಕೆಲಸ ತುಂಬಾ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಂಗವಿಕಲರಿಗೆ ತಮ್ಮ ಶಾಸಕ ನಿಧಿಯ ಅನುದಾನದಲ್ಲಿ ತ್ರಿಚಕ್ರವಾಹನ, ಶ್ರವ್ಯ ಸಾಧನ ಖರೀದಿಸಿ ವಿತರಿಸಿದ್ದೇನೆ. ಸವಲತ್ತುಗಳನ್ನು ಕೋರಿ ಮತ್ತಷ್ಟು ಅರ್ಜಿಗಳು ಬಂದಿವೆ. ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದಲೂ ನೆರವು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಪ್ರಾಸ್ತವಿಕ ನುಡಿಗಳನ್ನಾಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ನಗರಸಭೆ ಅಧ್ಯಕ್ಷರಾದ ರೇಣುಕ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ದಯಾನಿಧಿ, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವ ಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಚೂಡಾ ಅಧ್ಯಕ್ಷರಾದ ಸೈಯದ್ ರಫಿ, ಪಂಡಿತ್ ದೀನ ದಯಾಳ್ ಉಪಾಧ್ಯಾಯ ಇನ್ಸಿಟ್ಯೂಟ್ ಫಾರ್ ದಿ ಫಿಸಿಕಲಿ ಹ್ಯಾಂಡಿಕ್ಯಾಪಡ್ ಸಂಸ್ಥೆಯ ಡಾ. ಪಾಂಡಿಯನ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

    ಆಗಸ್ಟ್ 2ರವರೆಗೂ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ನೊಂದಣಿಗೆ ಅವಕಾಶ ವಿಸ್ತರಣೆ
ಚಾಮರಾಜನಗರ, ಜು. 30 (ಕರ್ನಾಟಕ ವಾರ್ತೆ):- ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆಗೆ ನೊಂದಾಯಿಸಲು ಆಗಸ್ಟ್ 2ರವರೆಗೂ ಕಾಲಾವಧಿ ವಿಸ್ತರಿಸಲಾಗಿದೆ.
ಮುಂಗಾರು ಹಂಗಾಮಿನಲ್ಲಿ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ನೊಂದಾಯಿಸಿಕೊಳ್ಳಲು ಜುಲೈ30 ಕಡೆಯದಿನವೆಂದು ನಿಗದಿಮಾಡಲಾಗಿತ್ತು. ಕೇಂದ್ರದ ಸೂಚನೆಯಂತೆ ಈ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿ ಕೊಳ್ಳಲು ಆಗಸ್ಟ್ 2ರವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಜಿಲ್ಲಾ ಉಸ್ತುವಾರಿ ಸಚಿವರಿಂದ ವೈದ್ಯಕೀಯ ಕಾಲೇಜು ಕಟ್ಟಡ ಪರಿಶೀಲನೆ
ಚಾಮರಾಜನಗರ, ಜು. 30 (ಕರ್ನಾಟಕ ವಾರ್ತೆ):- ನಗರದ ಯಡಪುರ ಬಳಿ ನಿರ್ಮಾಣವಾಗಿರುವ ವೈದ್ಯಕೀಯ ಕಾಲೇಜು ಕಟ್ಟಡ ಸ್ಥಳಕ್ಕೆ ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಲೇಜು ಕಟ್ಟಡದ ಮುಂಭಾಗದ ಅವರಣದಲ್ಲಿ ಅಂತಿಮ ಹಂತದ ಸಿದ್ಧತೆ ಕೆಲಸಗಳನ್ನು ಸಚಿವರು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಕಾಲೇಜು ಕಟ್ಟಡದ ಹೊರನೋಟಕ್ಕೆ ಅಳವಡಿಸಬೇಕಿರುವ ಪರಿಕರ, ಇನ್ನಿತರ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದು ಕೆಲ ಸೂಚನೆಗಳನ್ನು ನೀಡಿದರು.
ಬಳಿಕ ಕಾಲೇಜು ಕಟ್ಟಡದ ಒಳಭಾಗದಲ್ಲಿ ನಿರ್ಮಿಸಲಾಗಿರುವ ವಿವಿಧ ಕೊಠಡಿಗಳನ್ನು ಪರಿಶೀಲಿಸಿದರು. ಉಪನ್ಯಾಸಕರ ಕೊಠಡಿ, ಅನಾಟಮಿ, ಪ್ರಯೋಗಾಲಯ, ಅನಾಟಮಿ ಮ್ಯೂಸಿಯಂ, ಡೆಮಾನ್‍ಸ್ಟ್ರೇಷನ್ ವಿಭಾಗಗಳನ್ನು ಸಚಿವರು ವೀಕ್ಷಿಸಿದರು.
ಕಾಲೇಜಿನಲ್ಲಿ ಬೃಹತ್ ವಿಸ್ತಾರದಲ್ಲಿ ಗ್ರಂಥಾಲಯ ವ್ಯವಸ್ಥೆ ಮಾಡಿರುವ ಬಗ್ಗೆ ಪರಿಶೀಲಿಸಿದರು. ಪುಸ್ತಕಗಳ ಭಂಡಾರವನ್ನು ವೀಕ್ಷಿಸಿದರು. ಪೀಠೋಪಕರಣ ಅಳವಡಿಕೆಗಾಗಿ ಸಾಮಗ್ರಿಗಳ ದಾಸ್ತಾನು ಸೇರಿದಂತೆ ಇತರೆ ಸೌಲಭ್ಯಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು.
ಕಾಲೇಜು ಕಟ್ಟಡಕ್ಕೆ ಅಳವಡಿಸಿರುವ ಲಿಫ್ಟ್ ವ್ಯವಸ್ಥೆ, ಆಡಳಿತ ವಿಭಾಗ, ಇನ್ನಿತರ ಕೊಠಡಿ ಕಟ್ಟಡಗಳನ್ನು ಸಚಿವರು ವ್ಯಾಪಕವಾಗಿ ಪರಿಶೀಲಿಸಿದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ನಗರಸಭೆ ಅಧ್ಯಕ್ಷರಾದ ರೇಣುಕಾ ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವ ಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ನವೀನ್, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಚೂಡಾ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಚಂದ್ರಶೇಖರ್, ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್ ಮಹದೇವಸ್ವಾಮಿ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು. 
 
ಅಧಿಕಾರಿಗಳ ಕಾರ್ಯನಿರ್ವಹಣೆಯ ದಿನಚರಿ ಸಲ್ಲಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
   ಚಾಮರಾಜನಗರ, ಜು. 30 (ಕರ್ನಾಟಕ ವಾರ್ತೆ):- ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಕಾರ್ಯನಿರ್ವಹಣೆಯ ಪ್ರತಿದಿನದ ದಿನಚರಿಯನ್ನು ಜಿಲ್ಲಾಡಳಿತಕ್ಕೆ 15 ದಿನಗಳಿಗೊಮ್ಮೆ ಕಡ್ಡಾಯವಾಗಿ ಸಲ್ಲಿಸಬೇಕೆಂದು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿವಿಧ ಯೋಜನೆ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಸರ್ಕಾರದ ಯೋಜನೆಗಳ ಅನುಷ್ಠಾನವನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು. ಕಾರ್ಯಕ್ರಮ ಜಾರಿಗೊಳಿಸುವ ದಿಸೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಕಡ್ಡಾಯವಾಗಿ ವರದಿ ಮಾಡಬೇಕು. ಯೋಜನೆ ಪ್ರಗತಿಯನ್ನು ನಿಗದಿತ ಅವಧಿಯೊಳಗೆ ಸಾಧಿಸಬೇಕು. ಹೀಗಾಗಿ ದಿನನಿತ್ಯದ ಕರ್ತವ್ಯ ನಿರ್ವಹಣೆಯ ದಿನಚರಿಯನ್ನು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬೇಕೆಂದು ಸಚಿವರು ತಿಳಿಸಿದರು.
ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಫಲಾನುಭವಿಗಳ ನಿವೇಶನ ಗುರುತಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತ್ ಅಧಿಕಾರಿಗಳು ಸಮರ್ಪಕವಾಗಿ ಮಾಡುತ್ತಿಲ್ಲ. ಹೀಗಾಗಿ ವಸತಿ ಯೋಜನೆ ನಿರೀಕ್ಷಿತ ಅವಧಿಯಲ್ಲಿ ಪೂರ್ಣವಾಗುತ್ತಿಲ್ಲ. ಅಧಿಕಾರಿಗಳು ಸಭೆ ನಡೆಸಿ ಸಮನ್ವಯದಿಂದ ಯೋಜನೆ ಜಾರಿಗೊಳಿಸಬೇಕು. ಫಲಾನುಭವಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಗಳು ಅರ್ಹರಿಗೆ ತಲುಪಿಸುವ ಗುರುತರ ಜವಾಬ್ದಾರಿ ಗ್ರಾಮಮಟ್ಟದ ಅಧಿಕಾರಿಗಳ ಮೇಲಿದೆ. ಈ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕರ್ತವ್ಯ ನಿರ್ವಹಿಸಬೇಕು. ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲಿಸಬೇಕು. ವ್ಯಾಪಕ ಪ್ರವಾಸ ಕೈಗೊಂಡು ಇತರೆ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸಚಿವರು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸ್ವಚ್ಚ ಭಾರತ್ ಮಿಷನ್, ಪೋಡಿ ಪ್ರಕರಣಗಳು, ಅರಣ್ಯ ಹಕ್ಕು ಕಾಯ್ದೆ, ಗಂಗಾ ಕಲ್ಯಾಣ ಯೋಜನೆ, ಸಮಾಜ ಕಲ್ಯಾಣ, ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಸೇರಿದಂತೆ ಇತರೆ ಕಾರ್ಯಕ್ರಮಗಳ ಕುರಿತು ಸಮಾಲೋಚನೆ ನಡೆಸಿ ಸೂಕ್ತ ನಿರ್ದೇಶನ ನೀಡಿದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 01 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಕಳೆದ 2016ರ ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ನೀಡಲಾಗುವ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಹಾಗೂ ವಿವರಗಳಿಗೆ ಇಲಾಖೆ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅನ್ನು ನೋಡಬಹುದು. ಅಲ್ಲದೇ ಸಹಾಯವಾಣಿ ಸಂಖ್ಯೆ 080-44554444 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಿ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಪ್ರೋತ್ಸಾಹಧನಕ್ಕೆ ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 01 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2016-17 ಸಾಲಿಗೆ ಕ್ರೈಸ್ತ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಕೆಗೆ ಉತ್ತೇಜನ ನೀಡುವ ಸಲುವಾಗಿ ಕೊಡಮಾಡುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ.
ಪಿ.ಯು.ಸಿ, ಪದವಿ, ಸ್ನಾತಕೋತ್ತರ, ಇನ್ನಿತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರಬಾರದು.
ನಿಗದಿತ ನಮೂನೆಯ ಅರ್ಜಿಗಳನ್ನು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾ ಅಧಿಕಾರಿಗಳ ಕಚೇರಿ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ (ಕೊಠಡಿ ಸಂ: 132) ಇಲ್ಲವೇ ಜಿಲ್ಲಾಡಳಿತ ಭವನದಲ್ಲಿ ತೆರೆಯಲಾಗಿರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಲಗತ್ತಿಸಿ ಜುಲೈ 31ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. 

ಆಗಸ್ಟ್ 2ರಂದು ಕೊಳ್ಳೇಗಾಲದಲ್ಲಿ ಆರೋಗ್ಯ ಯೋಜನೆ ಕುರಿತ ಜಾಗೃತಿ ಅಭಿಯಾನಕ್ಕೆ ಜಾಲನೆ.
ಚಾಮರಾಜನಗರ, ಆ. 01 (ಕರ್ನಾಟಕ ವಾರ್ತೆ):- ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಆರೋಗ್ಯ ಯೋಜನೆಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 6 ದಿನಗಳ ಕಾಲ ಹಮ್ಮಿಕೊಂಡಿರುವ ವಿಶೇಷ ಆರೋಗ್ಯ ಜಾಗೃತಿ ಅಭಿಯಾನಕ್ಕೆ ಆಗಸ್ಟ್ 2ರಂದು ಚಾಲನೆ ದೊರೆಯಲಿದೆ.
ಕೊಳ್ಳೇಗಾಲ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಗಸ್ಟ್ 2ರಂದು ಬೆಳಗ್ಗೆ 10.30 ಗಂಟೆಗೆ ಗಣ್ಯರು ಆರೋಗ್ಯ ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ರಾಜ್ಯ ಸರ್ಕಾರ ವಾಜಪೇಯಿ ಆರೋಗ್ಯಶ್ರೀ, ರಾಜೀವ್ ಆರೋಗ್ಯ ಭಾಗ್ಯ, ಜ್ಯೋತಿ ಸಂಜೀವಿನಿ, ಮುಖ್ಯಮಂತ್ರಿ ಸಾಂತ್ವನ-ಹರೀಶ್ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆ, ಇಂದಿರಾ ಸುರಕ್ಷಾ ಯೋಜನೆ ಸೇರಿದಂತೆ ಇನ್ನೂ ಹಲವು ಸೌಲಭ್ಯಗಳನ್ನು ಅನುಷ್ಟಾನ ಮಾಡುತ್ತಿದೆ.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರಿಗೆ ಈ ಎಲ್ಲಾ ಆರೋಗ್ಯ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿ ಹಾಗೂ ಕಾಯಿಲೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ನೆರವಾಗುವ ಉದ್ದೇಶದಿಂದ ವಿಶೇಷ ಆರೋಗ್ಯ ಜಾಗೃತಿ ಅಭಿಯಾನವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಆಗಸ್ಟ್ 2ರಿಂದ 7ರವರೆಗೆ ಹಮ್ಮಿಕೊಂಡಿದೆ.
ಕೊಳ್ಳೇಗಾಲ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 40ಕ್ಕಿಂತ ಹೆಚ್ಚು ಇರುವ 47 ಗ್ರಾಮಗಳಲ್ಲಿ ಆರೋಗ್ಯ ಯೋಜನೆಗಳ ಬಗ್ಗೆ ಬೀದಿ ನಾಟಕ, ಹಾಡು, ಕಿರುಚಿತ್ರ ಪ್ರದರ್ಶನ ಹಾಗೂ ಸಮುದಾಯ ಸಭೆ ಇನ್ನಿತರ ಜನಜಾಗೃತಿ ಮೂಲಕ ಅರಿವು ಮೂಡಿಸಲಾಗುತ್ತದೆ.
ಸಿದ್ದಯ್ಯನಪುರ, ಲಿಂಗಣಾಪುರ, ತಿಮ್ಮರಾಜಿಪುರ, ದಾಸನಪುರ, ಅರಳೆ, ಧನಗೆರೆ, ಜಿನಕನಹಳ್ಳಿ, ಗುಂಡೇಗಾಲ, ಪಾಳ್ಯ, ಸರಗೂರು, ಬೂದಬಾಳು, ಅಗ್ರಹಾರ, ಸತ್ತೇಗಾಲ, ಅರಬಗೆರೆ, ಸಿ.ಎಂ.ಸಮುದ್ರ, ಹೊಂಡರಬಾಳು, ಚಿಕ್ಕಿಂದುವಾಡಿ, ಇಕ್ಕಡಹಳ್ಳಿ, ದೊಡ್ಡಿಂದುವಾಡಿ, ಚಿಕ್ಕಲ್ಲೂರು, ತೆಳ್ಳನೂರು, ತೇರಂಬಳ್ಳಿ, ಚಿಲಕವಾಡಿ, ಹೊಸಮಾಲಂಗಿ, ಹಂಪಾಪುರ, ಮುಳ್ಳೂರು, ಕಣ್ಣೂರು, ಚೆನ್ನಾಲಿಂಗನಹಳ್ಳಿ, ಕೊಂಗರಹಳ್ಳಿ, ಚಿಕ್ಕಮಾಲಾಪುರ, ಸಿಂಗಾನಲ್ಲೂರು, ಮಂಗಲ, ಉದ್ದನೂರು, ಮಣಗಳ್ಳಿ, ಹುಲ್ಲೇಪುರ, ಬೈಲೂರು, ಆಂದಿಪಾಳ್ಯ, ಪಿ.ಜಿ.ಪಾಳ್ಯ, ಬಂಡಳ್ಳಿ, ಶಾಗ್ಯ, ಗೊರೆಯೂರು, ರಾಮಾಪುರ, ದೊಡ್ಡಾಲತ್ತೂರು, ದಿನ್ನಹಳ್ಳಿ, ಗಂಗನದೊಡ್ಡಿ, ಪೊನ್ನಾಚಿ, ಹುತ್ತೂರಿನಲ್ಲಿ ವಿಶೇಷ ಆರೋಗ್ಯ ಜಾಗೃತಿ ಜಾಥಾ ನಡೆಯಲಿದೆ.
ಜಾಗೃತಿ ಅಭಿಯಾನ ಕೊನೆಗೊಂಡ ಬಳಿಕ ಅಂದರೆ ಆಗಸ್ಟ್ 8ರಂದು ಕೊಳ್ಳೇಗಾಲ ಪಟ್ಟಣದ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರಕ್ಕೆ ಹೆಚ್ಚಿನ ಜನರು ಆಗಮಿಸಿ ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಆರೋಗ್ಯ ಇಲಾಖೆ ಮನವಿ ಮಾಡಿದೆ. 

ಆರೋಗ್ಯ ಯೋಜನೆ ಸದುಪಯೋಗಕ್ಕೆ ಶಾಸಕರ ಸಲಹೆ
ಚಾಮರಾಜನಗರ, ಆ. 02 (ಕರ್ನಾಟಕ ವಾರ್ತೆ):- ಜನರ ಆರೋಗ್ಯ ರಕ್ಷಣೆಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಆರೋಗ್ಯ ಯೋಜನೆಗಳನ್ನು  ಜನತೆ ಸದುಪಯೋಗ ಮಾಡಿಕೊಳ್ಳಬೇಕೆಂದು ಶಾಸಕರಾದ ಎಸ್.ಜಯಣ್ಣ ಸಲಹೆ ಮಾಡಿದರು.
ಕೊಳ್ಳೇಗಾಲ ಪಟ್ಟಣದ ಉಪವಿಭಾಗ ಸರ್ಕಾರಿ ಆಸ್ಟತ್ರೆ ಆವರಣದಲ್ಲಿ ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರಿಗೆ ಆರೋಗ್ಯ ಯೋಜನೆಗಳ ಸಂಬಂಧ ಅರಿವು ಮೂಡಿಸುವ ಸಲುವಾಗಿ ಆರೋಗ್ಯ ಇಲಾಖೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಕೊಳ್ಳೇಗಾಲ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ 6 ದಿನಗಳ ಕಾಲ ಹಮ್ಮಿಕೊಂಡಿರುವ ವಿಶೇಷ ಆರೋಗ್ಯ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಜನರಿಗೆ  ಆರೋಗ್ಯ ಯೋಜನೆಗಳ ಸಂಪೂರ್ಣ ಮಾಹಿತಿ ನೀಡಿ ಹಾಗೂ ಕಾಯಿಲೆಗಳಿಂದ ಬಳಲುತ್ತಿರುವವರು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ನೆರವಾಗುವ ಉದ್ದೇಶದಿಂದ ವಿಶೇಷ ಆರೋಗ್ಯ ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದರು.
ತಾಲ್ಲೂಕಿನಲ್ಲಿ   ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 40ಕ್ಕಿಂತ ಹೆಚ್ಚು ಇರುವ 47 ಗ್ರಾಮಗಳಲ್ಲಿ ರಾಜ್ಯ ಸರ್ಕಾರ ಅನುಷ್ಟಾನ ಮಾಡುತ್ತಿರುವ ಆರೋಗ್ಯ ಸಂಬಂಧಿ ಯೋಜನೆಗಳ ಬಗ್ಗೆ ಬೀದಿ ನಾಟಕ, ಹಾಡು ಹಾಗೂ ಇತರೆ ವಿಧಾನಗಳ ಮೂಲಕ ಕಲಾತಂಡದವರು ಮಾಹಿತಿ ನೀಡಲಿದ್ದಾರೆ ಎಂದು ಜಯಣ್ಣ ತಿಳಿಸಿದರು.
ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಸಹ ಜನತೆಯ ನೆರವಿಗೆ ಕೈಗೊಳ್ಳಲಾಗುತ್ತಿದೆ. ತಾಲ್ಲೂಕಿನ ಜನರು ಆರೋಗ್ಯ ಯೋಜನೆಗಳ ಕುರಿತು ಮಾಹಿತಿ ಪಡೆಯಬೇಕು.ಆರೋಗ್ಯ ತಪಾಸಣೆಯ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಜಯಣ್ಣ ತಿಳಿಸಿದರು.
ಉಪವಿಭಾಗಾಧಿಕಾರಿ ಕವಿತಾ ಜಯರಾಂ ಮಾತನಾಡಿ ಆರೋಗ್ಯ ಕಾಪಾಡಿಕೊಳ್ಳುವ ಸಲುವಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ.ಇವುಗಳ ಬಗ್ಗೆ ಜನರಿಗೆ ಮಾಹಿತಿ ನೀಡುವ ಸಲುವಾಗಿಯೆ ವಿಶೇಷ ಆರೋಗ್ಯ ಜಾಗೃತಿ ಅಭಿಯಾನವನ್ನು ಆರಂಭಿಸಲಾಗಿದೆ.ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ಜನತೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷರಾದ ಹರ್ಷ,ವಾರ್ತಾ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಎ.ರಮೇಶ್, ಪ್ರಭಾರ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಧುಸೂದನ್, ವೈದ್ಯಾಧಿಕಾರಿ  ಡಾ.ರವೀಂದ್ರ,ಪಟ್ಟಣ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಆನಂದ್, ಸುವರ್ಣ ಆರೋಗ್ಯ ಟ್ರಸ್ಟ್ ನ ಜಿಲ್ಲಾ ಸಮನ್ವಯಕಾರರಾದ ಪುಟ್ಟೇಗೌಡ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಇದೆ ವೇಳೆ ರಂಗದೇಗುಲ ಕಲಾತಂಡದ  ಮುಖ್ಯಸ್ಥರಾದ ಶಾಂತರಾಜು ಹಾಗೂ ಮೈಸೂರಿನ ಅರಿವು ಸಾಂಸ್ಕøತಿಕ ತಂಡದ ಮುಖ್ಯಸ್ಥರಾದ ಆರ್.ಚಕ್ರಪಾಣಿ ಅವರ ನೇತೃತ್ವದಲ್ಲಿ ಕಲಾವಿದರು ಜಾಗೃತಿ ಗೀತೆಗಳ ಗಾಯನ ಪ್ರಸ್ತುತ ಪಡಿಸಿದರು. 
ಬ್ಯಾಂಕ್ ಪ್ರೋಬೇಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಆ. 02 (ಕರ್ನಾಟಕ ವಾರ್ತೆ):- ಇನ್‍ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪಸೆರ್Àನಲ್ ಸೆಲೆಕ್ಷನ್ ನಿಂದ ರಾಷ್ಟ್ರೀಯ ಬ್ಯಾಂಕುಗಳ ಪ್ರೊಬೇಷನರಿ ಅಧಿಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿಗೆ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ನೇಮಕಾತಿ ಸಂಬಂಧ ಅಕ್ಟೋಬರ್‍ನಲ್ಲಿ ಲಿಖಿತ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಅಭ್ಯರ್ಥಿಗಳು    ಪದವೀಧರರಾಗಿರಬೇಕು.     ಕಂಪ್ಯೂಟರ್ ಜ್ಞಾನ    ಹೊಂದಿರಬೇಕು.20ರಿಂದ30ರ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಹಾಗೂ ಒ ಬಿ ಸಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆ ಇದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 13 ಕಡೆಯ ದಿನವಾಗಿದೆ.ವಿವರಗಳಿಗೆ ವೆಬ್‍ಸೈಟ್:ತಿತಿತಿ.ibಠಿs.iಟಿ ನೋಡಬಹುದು.
ಸ್ಪರ್ಧಾತ್ಮಕ ಲಿಖಿತ ಪೂರ್ವಭಾವಿ ಪರೀಕ್ಷೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉಚಿತವಾಗಿ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತದೆ.ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಉದ್ಯೋಗ ವಿನಿಮಯ ಕಚೇರಿಯಲ್ಲಿ ಹೆಸರು ನೋಂದಾಯಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ.ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 6 ರಂದು ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
ಚಾಮರಾಜನಗರ, ಆ. 02 (ಕರ್ನಾಟಕ ವಾರ್ತೆ):- ಬೆಂಗಳೂರಿನ ಹೆಚ್ ಬಿ ಎಲ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ ಮತ್ತು ಟ್ಯಾಲೆಂಟ್ ಪರ್ಫೆಕ್ಟ್ ಕಂಪನಿಯು ಗೆಸ್ಟ್ ರಿಲೇಷನ್ ಎಕ್ಸಿಕ್ಯೂಟಿವ್,ಟೀಮ್ ಮೆಂಬರ್,ಆಪರೇಷನ್ ಟ್ರೈನಿ,ಟೆಲಿ ಸೇಲ್ಸ್, ಸೇಲ್ಸ್ ಎಕ್ಸಿಕ್ಯೂಟಿವ್,ಫೋನ್ ಬ್ಯಾಂಕರ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಆಗಸ್ಟ್ 6 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿ ನೇರ ಸಂದರ್ಶನ ನಡೆಸಲಿದೆ.
ಎಸ್‍ಎಸ್‍ಎಲ್‍ಸಿ,ಪಿಯುಸಿ,ಪದವಿ,ಐಟಿಐ,ಡಿಪ್ಲೋಮೊ ವಿದ್ಯಾರ್ಹತೆ ಹೊಂದಿದ್ದು 18 ರಿಂದ 30 ರ ವಯೋಮಿತಿಯೊಳಗಿರುವ ಪುರುಷ ಅಭ್ಯರ್ಥಿಗಳು ಸ್ವವಿವರದೊಂದಿಗೆ  ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದಲ್ಲಿರುವ ಜಿಲ್ಲಾ ಉದ್ಯೋಗಾಧಿಕಾರಿ (ದೂ.ಸಂ:08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

ವಿವಿಧ ಕ್ಷೇತ್ರ ಹಾಗೂ ಹಿರಿಯ ನಾಗರಿಕರ ಕ್ಷೇತ್ರ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನÀ
ಚಾಮರಾಜನಗರ, ಆ. 02 (ಕರ್ನಾಟಕ ವಾರ್ತೆ):- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಣ,ಸಾಹಿತ್ಯ,ಕಲೆ,ಕಾನೂನು,ಕ್ರೀಡೆ,ಸಮಾಜ ಸೇವೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿರುವ ಸಂಸ್ಥೆಗೆ ಕೊಡಮಾಡುವ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಆಗಸ್ಟ್ 5 ರೊಳಗೆ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗೆ ದೂ.ಸಂ:08226-223688 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
 
ತಾಲ್ಲೂಕು ಕೇಂದ್ರಗಳಲ್ಲಿ ಭ್ರಷ್ಟಾಚಾರ ನಿಗ್ರಹದಳ ಕಾರ್ಯವಿಧಾನ ಕುರಿತು ಅರಿವು ಕಾರ್ಯಕ್ರಮ
ಚಾಮರಾಜನಗರ, ಆ. 02 (ಕರ್ನಾಟಕ ವಾರ್ತೆ):- ಭ್ರಷ್ಟಾಚಾರ ನಿಗ್ರಹದಳ ಸಂಸ್ಥೆಯ ರಚನೆ, ಕಾರ್ಯನಿರ್ವಹಣೆ ವಿಧಾನ ಹಾಗೂ ಇತರೆ ಮಾಹಿತಿಗಳನ್ನು ನಾಗರಿಕರಿಗೆ ನೀಡುವ ಸಲುವಾಗಿ ಜಿಲ್ಲಾ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲೆಯ 4 ತಾಲ್ಲೂಕು ಕೇಂದ್ರಗಳ ಸರ್ಕಾರಿ ಅತಿಥಿ ಗೃಹದಲ್ಲಿ ಅರಿವು ಮೂಡಿಸಲಿದ್ದಾರೆ.
ಆಗಸ್ಟ್ 4 ರಂದು ಗುಂಡ್ಲುಪೇಟೆ, 8 ರಂದು ಚಾಮರಾಜನಗರ, 16 ರಂದು ಯಳಂದೂರು ಹಾಗೂ 24 ರಂದು ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಅತಿಥಿ ಗೃಹದಲ್ಲಿ ಬೆಳಿಗ್ಗೆ 11.30 ಗಂಟೆಗೆ  ನಾಗರಿಕರಿಗೆ ಭ್ರಷ್ಟಾಚಾರ ನಿಗ್ರಹದಳ ಕುರಿತು ಅರಿವು ಮೂಡಿಸಲಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂ.ಸಂ:08226-226666 ಹಾಗೂ ಮೊಬೈಲ್ ಸಂಖ್ಯೆ:9480806226 ಸಂಪರ್ಕಿಸುವಂತೆ ನಗರದ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 


ನ್ಯಾಯಾಧೀಕರಣ ತರಬೇತಿಗೆ ಹಿಂದುಳಿದ ವರ್ಗಗಳ ಕಾನೂನು ಪದವೀದರರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಿ ಭತ್ಯೆ ಮಂಜೂರು ಮಾಡಲಿದ್ದು, ಆಸಕ್ತ ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ಹೆಸರು ನೊಂದಾಯಿಸಿರಬೇಕು. ಒಂದು ವೇಳೆ ನೊಂದಾಯಿಸದೇ ಇದ್ದಲ್ಲಿ ತರಬೇತಿಗೆ ಆಯ್ಕೆಯಾದ ಕೂಡಲೇ ನೊಂದಾಯಿಸಬೇಕು. ಕಾನೂನು ತರಬೇತಿಗೆ ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕಿಂತ ಮುಂಚಿನ 2 ವರ್ಷ ಅವಧಿಯೊಳಗೆ ಕಾನೂನು ಪದವಿ ಪಡೆದವರಾಗಿರಬೇಕು.
ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಟ ವಯೋಮಿತಿ 40 ವರ್ಷಗಳಾಗಿರಬೇಕು. ಪ್ರವರ್ಗ-2ಎ, 3ಎ, 3ಬಿ ಸೇರಿದವರಾಗಿದ್ದಲ್ಲಿ ಗರಿಷ್ಟ ವಯೋಮಿತಿ 38 ವರ್ಷಗಳು. ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮೀರಿರಬಾರದು. ಇತರೆ ಅಭ್ಯರ್ಥಿಗಳಾಗಿದ್ದಲ್ಲಿ 44,500ರೂ. ಮೀರಿರಬಾರದು.
ನಿಗದಿತ ನಮೂನೆಯ ಅರ್ಜಿಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ (ಕೊಠಡಿ ಸಂ: 132) ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಲಗತ್ತಿಸಿ ಆಗಸ್ಟ್ 29ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. 

ಪ್ರೋತ್ಸಾಹಧನಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2016-17 ಸಾಲಿಗೆ ಅಲ್ಪಸಂಖ್ಯಾತರ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರಿಕೆಗೆ ಉತ್ತೇಜನ ನೀಡುವ ಸಲುವಾಗಿ ಕೊಡಮಾಡುವ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ, ಸ್ನಾತಕೋತ್ತರ, ಇನ್ನಿತರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರಬಾರದು.
ನಿಗದಿತ ನಮೂನೆಯ ಅರ್ಜಿಗಳನ್ನು ಆಯಾ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾ ಅಧಿಕಾರಿಗಳ ಕಚೇರಿ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿ (ಕೊಠಡಿ ಸಂ: 132) ಇಲ್ಲವೇ ಜಿಲ್ಲಾಡಳಿತ ಭವನದಲ್ಲಿ ತೆರೆಯಲಾಗಿರುವ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಲಗತ್ತಿಸಿ ಆಗಸ್ಟ್ 31ರೊಳಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. 


ಚಾ.ನಗರ ಪಟ್ಟಣ ಪರಿಮಿತಿಯಲ್ಲಿ ರಸ್ತೆ ಅಭಿವೃದ್ಧಿ: ಗುರುತು ಮಾಡಲಾದ ಜಾಗ ತೆರವುಗೊಳಿಸಲು ನಗರಸಭೆ ಮನವಿ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣ ಪರಿಮಿತಿಯಲ್ಲಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬರುವ ಆಸ್ತಿಯ ಮಾಲೀಕರು ಕೆಲ ದಾಖಲೆಗಳನ್ನು 7 ದಿನಗಳೊಳಗೆ ಕಡ್ಡಾಯವಾಗಿ ನಗರಸಭೆಗೆ ಸಲ್ಲಿಸಬೇಕು ಹಾಗೂ ಪ್ರಾಧಿಕಾರದಿಂದ ಗುರುತು ಮಾಡಲಾದ ಜಾಗವನ್ನು 15 ದಿನಗಳೊಳಗೆ ತೆರವುಗೊಳಿಸಿ ರಸ್ತೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಜಿಲ್ಲಾಡಳಿತ ಹಾಗೂ ನಗರಸಭೆ ಮನವಿ ಮಾಡಿದೆ.
ಪಟ್ಟಣ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 209 ಹಾದುಹೋಗುತ್ತಿದೆ. ಈಗಿನ ರಸ್ತೆಯನ್ನು 4 ಪಥದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಸೋಮವಾರಪೇಟೆಯ ಸ್ವಾಗತ ಕಮಾನಿನಿಂದ ಪ್ರಾರಂಭಗೊಂಡು ಸುಲ್ತಾನ್ ಷರೀಷ್ ವೃತ್ತ, ಪಚ್ಚಪ್ಪ ವೃತ್ತ, ಸಂತೇಮರಹಳ್ಳಿ ವೃತ್ತ ಮಾರ್ಗವಾಗಿ ಮೈನರ್ ಬ್ರಿಡ್ಜ್ ಹತ್ತಿರ ಕೊನೆಗೊಳ್ಳಲಿದೆ. ಸುಮಾರು 4.43 ಕಿ.ಮೀ. ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಲು ಕ್ರಮ ತೆಗೆದುಕೊಂಡಿದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ಬರುವ ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದ ಮೂಲ ದಾಖಲಾತಿಗಳು, ಕಟ್ಟಡ ನಿರ್ಮಾಣ ಮಾಡಲು ನಗರಸಭೆಯಿಂದ ಪಡೆದಿರುವ ಕಟ್ಟಡ ಪರವಾನಗಿ ಪ್ರತಿ, ಅನುಮೋದನೆ ನೀಡಿರುವ ನೀಲಿನಕ್ಷೆಯ ಪ್ರತಿ, ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ನಗರಸಭೆಯಿಂದ ಪಡೆದಿರುವ ದೃಢೀಕರಣ ಪತ್ರ, ಕುಟುಂಬಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ರವರಿಂದ ಪಡೆದಿರುವ ವಂಶವೃಕ್ಷ, ಆಸ್ತಿ ಸಂಬಂಧ 30 ವರ್ಷಗಳ ಋಣಭಾರ ರಾಹಿತ್ಯ ಪ್ರಮಾಣ ಪತ್ರ (ಇ.ಸಿ), ಆಸ್ತಿಗೆ ಪಾವತಿಸಿರುವ ಅಭಿವೃದ್ಧಿ ಶುಲ್ಕದ ರಶೀದಿ ಪ್ರತಿ, ನಮೂನೆ-3, ಕಂದಾಯ ಪಾವತಿ ಮಾಡಿರುವ ರಶೀದಿ ಪ್ರತಿ, ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿ ಮಾರ್ಜಿನ್ ಜಾಗವನ್ನು ಮಂಜೂರು ಮಾಡಿದ್ದಲ್ಲಿ ಅದರ ಪತ್ರ, ಸದರಿ ಜಾಗವನ್ನು ಪ್ರಾಧಿಕಾರವು ಮಂಜೂರು ಮಾಡಿದ್ದಲ್ಲಿ ನೀಡಿರುವ ಕ್ರಯಪತ್ರ, ಮಂಜೂರಾತಿ ಪ್ರಾಧಿಕಾರವು ನೀಡಿರುವ ಸ್ವಾಧೀನ ಪತ್ರ ದಾಖಲೆಗಳನ್ನು 7 ದಿನಗಳೊಳಗೆ ನಗರಸಭಾ ಕಚೇರಿಗೆ ಸಲ್ಲಿಸಬೇಕು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುರುತು ಮಾಡಲಾಗಿರುವ ಜಾಗವನ್ನು ಆಸ್ತಿಯ ಮಾಲೀಕರು ಖುದ್ದಾಗಿ 15 ದಿನಗಳೊಳಗೆ ತೆರವು ಮಾಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಬೇಕೆಂದು ನಗರಸಭೆ ಪೌರಾಯುಕ್ತರಾದ ಎಂ. ರಾಜಣ್ಣ ಪ್ರಕಟಣೆಯಲ್ಲಿ ಕೋರಿದ್ದಾರೆ.


ಆಗಸ್ಟ್ 6ರಂದು ಕೇಂದ್ರ ಪುರಸ್ಕøತ ಯೋಜನೆಗಳ ಪರಿಶೀಲನಾ ಸಭೆ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 11ರಂದು ಜಿ.ಪಂ. ಕೆ.ಡಿ.ಪಿ ಸಭೆ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್‍ನ ಮಾಸಿಕ ಕೆ.ಡಿ.ಪಿ. ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುವಕ ನಾಪತ್ತೆ: ಸುಳಿವು ನೀಡಲು ಮನವಿ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣದಿಂದ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತೌಸಿಫ್ ಎಂಬ 16 ವರ್ಷದ ಯುವಕ ಕಾಣೆಯಾಗಿರುವ ಬಗ್ಗೆ ಈತನ ತಂದೆ ಅಬ್ದುಲ್ ಜಬ್ಬಾರ್ ದೂರು ನೀಡಿದ್ದಾರೆ. 4.5 ಅಡಿ ಎತ್ತರ, ಕೋಲುಮುಖ, ಗೋಧಿ ಮೈಬಣ್ಣ ಹೊಂದಿದ್ದು, ನೀಲಿ ಬಣ್ಣದ ಚೆಕ್ಸ್ ತುಂಬುತೋಳಿನ ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ. ಕನ್ನಡ ಹಾಗೂ ಉರ್ದು ಭಾಷೆ ಮಾತನಾಡಬಲ್ಲವನಾಗಿದ್ದು ಇವರ ಸುಳಿವು ದೊರೆತಲ್ಲಿ ಪಟ್ಟಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08226-222047 ಅಥವಾ ಜಿಲ್ಲಾ ನಿಸ್ತಂತು ಘಟಕ ಸಂಖ್ಯೆ:      08226-222383 ಗೆ ಕರೆ ಮಾಡುವಂತೆ ಪಟ್ಟಣ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ಕೋರಿದ್ದಾರೆ.


ಆದರ್ಶ ವಿದ್ಯಾಲಯ ಪ್ರವೇಶಕ್ಕೆ ಆಯ್ಕೆ ಪಟ್ಟಿ
ಚಾಮರಾಜನಗರ, ಆ. 03 (ಕರ್ನಾಟಕ ವಾರ್ತೆ):- ನಗರದ ಆದರ್ಶ ವಿದ್ಯಾಲಯ (ಆರ್.ಎಂ.ಎಸ್.ಎ)ದಲ್ಲಿ ಪ್ರಸಕ್ತ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳ 3ನೇ ಪಟ್ಟಿ ಪ್ರಕಟವಾಗಿದೆ.
ವಿದ್ಯಾರ್ಥಿಗಳ ಪೋಷಕರು ವಿದ್ಯಾಲಯದ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಿ 6ನೇ ತರಗತಿಗೆ ದಾಖಲು ಮಾಡಲು ಪ್ರಕಟಣೆ ತಿಳಿಸಿದೆ. 

ಆಗಸ್ಟ್ 10ರ ವರೆಗೂ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ನೊಂದಣಿಗೆ ಅವಧಿ  ವಿಸ್ತರಣೆ
ಚಾಮರಾಜನಗರ, ಆಗಸ್ಟ್ 3 (ಕರ್ನಾಟಕ ವಾರ್ತೆ):- ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆಗೆ ನೊಂದಾಯಿಸಲು ಆಗಸ್ಟ್ 10 ರ ವರೆಗೂ ಕಾಲಾವಧಿ ವಿಸ್ತರಿಸಲಾಗಿದೆ.

ಮುಂಗಾರು ಹಂಗಾಮಿನಲ್ಲಿ ಬೆಳೆ ಸಾಲ ಪಡೆದ ಮತ್ತು ಪಡೆಯದ ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಡಿ ನೊಂದಾಯಿಸಿಕೊಳ್ಳಲು ಆಗಸ್À್ಟ 2 ಕಡೆಯದಿನವೆಂದು ನಿಗದಿಮಾಡಲಾಗಿತ್ತು. ಕೇಂದ್ರದ ಸೂಚನೆಯಂತೆ ಈ ಬೆಳೆ ವಿಮೆ ಯೋಜನೆಗೆ ನೊಂದಾಯಿಸಿ ಕೊಳ್ಳಲು ಆಗಸ್ಟ್ 10ರ ವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 6ರಂದು ಕೇಂದ್ರ ಪುರಸ್ಕøತ ಯೋಜನೆಗಳ ಪರಿಶೀಲನಾ ಸಭೆ
ಚಾಮರಾಜನಗರ, ಆ. 05 (ಕರ್ನಾಟಕ ವಾರ್ತೆ):- ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 6ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೂರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್ 7ರಂದು ಕೃಷಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 05 (ಕರ್ನಾಟಕ ವಾರ್ತೆ):- ಕೃಷಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಆಗಸ್ಟ್ 7 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10.45 ಗಂಟೆಗೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯಲ್ಲಿ ಬೀಜ ಮತ್ತು ರಸಗೊಬ್ಬರ ಸಂಯುಕ್ತ ಕೂರಿಗೆ ಯಂತ್ರ ಬಳಸಿ ಮುಸುಕಿನ ಜೋಳ ಬಿತ್ತನೆ ಮಾಡುವ ಪ್ರಾತ್ಯೆಕ್ಷಿಕೆ ಹಾಗೂ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 2.15ಗಂಟೆಗೆ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಕೃಷಿಭಾಗ್ಯ ಯೋಜನೆಯಡಿ ನಿರ್ಮಿಸಿರುವ ಪಾಲಿಹೌಸ್‍ನಲ್ಲಿ ಬೆಳೆದಿರುವ ಜರ್ಬರ ಹೂತೋಟದ ಘಟಕ ವೀಕ್ಷಣೆ ಮಾಡುವರು.
ಮಧ್ಯಾಹ್ನ 3.15 ಗಂಟೆಗೆ ಮದ್ದೂರಿನಲ್ಲಿ ಹಸಿರೆಲೆ ಗೊಬ್ಬರದ ಡಯಾಂಚ ಮತ್ತು ಸೆಣಬು ಬೆಳೆಯನ್ನು ರೋಟೋವೇಟರ್ ಬಳಸಿ ಹಸಿರೆಲೆ ಗೊಬ್ಬರದ ಬೆಳೆಯನ್ನು ಮಣ್ಣಿಗೆ ಸೇರಿಸುವ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4.30 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.  
ಆಗಸ್ಟ್ 8ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಆ. 05 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಆಗಸ್ಟ್ 8ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 8ರಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಆ. 04 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಆಗಸ್ಟ್ 8ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
ಆಗಸ್ಟ್ 10ರಂದು ಅರಳೀಕಟ್ಟೆಯಲ್ಲಿ ಅಂಚೆ ಸಂತೆ
ಚಾಮರಾಜನಗರ, ಆ. 04 (ಕರ್ನಾಟಕ ವಾರ್ತೆ):- ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಅಂಚೆ ಇಲಾಖೆಯು ಆಗಸ್ಟ್ 10ರಂದು ಅಂಚೆ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಅವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನ ಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಸುರಕ್ಷಾ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವ ವಿಮೆ ಕುರಿತ ಅಂಚೆ ಯೋಜನೆಗಳನ್ನು ಸ್ಥಳದಲ್ಲೇ ಸ್ವೀಕರಿಸಲಾಗುತ್ತದೆ.
ಅರಳೀಕಟ್ಟೆ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆ ಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿವಿಧ ಕ್ಷೇತ್ರ ಪ್ರಶಸ್ತಿಗೆ ಹಿರಿಯ ನಾಗರಿಕರು, ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಆ. 04 (ಕರ್ನಾಟಕ ವಾರ್ತೆ):- ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಕ್ರೀಡೆ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ನೀಡಲಾಗುವ ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ ನೀಡಲಾಗುವ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಆಗಸ್ಟ್ 10ರೊಳಗೆ ಸಲ್ಲಿಸಬೇಕು.
ವಿವರಗಳಿಗೆ ದೂರವಾಣಿ ಸಂಖ್ಯೆ: 08226-223686 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕರ್ತವ್ಯ ನಿರ್ಲಕ್ಷ್ಯತೆ : ಗ್ರಾ.ಪಂ. ಕಾರ್ಯದರ್ಶಿ ಅಮಾನತು    
     ಚಾಮರಾಜನಗರ, ಆ. 04 (ಕರ್ನಾಟಕ ವಾರ್ತೆ):- ಹಿರಿಯ ಅಧಿಕಾರಿಗಳ ಆದೇಶ ಪಾಲಿಸದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಕೊಳ್ಳೇಗಾಲ ತಾಲೂಕು ಚಿಕ್ಕಲ್ಲೂರು ಗ್ರಾಮ ಪಂಚಾಯಿತಿ(ಮೂಲ ಪಂಚಾಯಿತಿ ಕುಂತೂರು)ಯಲ್ಲಿ ನಿಯೋಜನೆ ಮೇರೆಗೆ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಲಿಂಗಶೆಟ್ಟಿ ಅವರನ್ನು ಸೇವೆಯಿಂದ ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ ಅವರು ಆದೇಶ ಹೊರಡಿಸಿದ್ದಾರೆ.
    ಶಿವಲಿಂಗಶೆಟ್ಟಿ ಅವರು ಮಧುವಿನಹಳ್ಳಿ ಗ್ರಾಮ ಪಂಚಾಯಿತಿಗೆ ನಿಯೋಜನೆಗೊಂಡು ನಂತರ ಚಿಕ್ಕಲ್ಲೂರು ಗ್ರಾಮ ಪಂಚಾಯಿತಿಯ ಪೂರ್ಣ ಪ್ರಭಾರವನ್ನು ಕಾರ್ಯದರ್ಶಿ ಉಷಾ ಎಂಬುವವರಿಗೆ ವಹಿಸಬೇಕಿತ್ತು. ಆದರೆ ಶಿವಲಿಂಗಶೆಟ್ಟಿ ಅವರು ಪೂರ್ಣ ಪ್ರಭಾರವನ್ನು ಉಷಾ ಅವರಿಗೆ ವಹಿಸಿರಲಿಲ್ಲ. ಹಿರಿಯ ಅಧಿಕಾರಿಗಳು ಮೂರು ಬಾರಿ ಸೂಚನೆ ನೀಡಿದ್ದರೂ ಪೂರ್ಣ ಪ್ರಭಾರವನ್ನು ವಹಿಸದೆ ನಿರ್ಲಕ್ಷ್ಯ ವಹಿಸಿದ್ದರು.
ಈ ಹಿನ್ನಲೆಯಲ್ಲಿ ಶಿವಲಿಂಗಶೆಟ್ಟಿ ಅವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ ಆದೇಶ ಹೊರಡಿಸಿದ್ದಾರೆ.

ಅಸಾಧಾರಣ ಸಾಧನೆಗೈದ ಮಕ್ಕಳಿಗೆ ಪ್ರಶಸ್ತಿ: ಅರ್ಜಿ ಆಹ್ವಾನ
ಚಾಮರಾಜನಗರ, ಆ. 04 (ಕರ್ನಾಟಕ ವಾರ್ತೆ):- ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 9ರಿಂದ 16ರ ವಯೋಮಿತಿ ಒಳಗಿನ ಮಕ್ಕಳಿಗೆ ನೀಡಲಾಗುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅರ್ಜಿ ಆಹ್ವಾನಿಸಿದೆ.
ಕಲೆ, ಶಿಕ್ಷಣ, ಕ್ರೀಡೆ, ಸಾಂಸ್ಕøತಿಕ, ಸಮಾಜಸೇವೆ, ಸಂಗೀತ ಕ್ಷೇತ್ರಗಳಲ್ಲಿ ಪ್ರತಿಭೆಯುಳ್ಳ ಮಕ್ಕಳಿಗೆ ಹತ್ತು ಸಾವಿರ ರೂ. ನಗದು ಬಹುಮಾನ ಹಾಗೂ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಪ್ರತಿ ಕ್ಷೇತ್ರದಲ್ಲಿ ಇಬ್ಬರಂತೆ ಒಟ್ಟು 14 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ಉಪನಿದೇಶಕರ ಕಚೇರಿಯಲ್ಲಿ ಪಡೆದು ಭರ್ತಿಮಾಡಿ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 20ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಇಲಾಖೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕೊಳ್ಳೇಗಾಲ ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ: ಜಾಗ ತೆರವಿಗೆ ನಗರಸಭೆ ಮನವಿ
ಚಾಮರಾಜನಗರ, ಆ. 04 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ಪಟ್ಟಣ ಪರಿಮಿತಿಯಲ್ಲಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬರುವ ಆಸ್ತಿಯ ಮಾಲೀಕರು ಕೆಲ ದಾಖಲೆಗಳನ್ನು 7 ದಿನಗಳೊಳಗೆ ಕಡ್ಡಾಯವಾಗಿ ನಗರಸಭೆಗೆ ಸಲ್ಲಿಸಬೇಕು ಹಾಗೂ ಪ್ರಾಧಿಕಾರದಿಂದ ಗುರುತು ಮಾಡಲಾದ ಜಾಗವನ್ನು 15 ದಿನಗಳೊಳಗೆ ತೆರವುಗೊಳಿಸಿ ರಸ್ತೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಜಿಲ್ಲಾಡಳಿತ ಹಾಗೂ ನಗರಸಭೆ ಮನವಿ ಮಾಡಿದೆ.
ಪಟ್ಟಣ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 209 ಹಾದುಹೋಗುತ್ತಿದೆ. ಈಗಿನ ರಸ್ತೆಯನ್ನು 4 ಪಥದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಮುಡಿಗುಂಡದ ಸ್ವಾಗತ ಕಮಾನಿನಿಂದ ಪ್ರಾರಂಭಗೊಂಡು ಅಚ್ಗಾಳ್ ವೃತ್ತ, ಐ.ಬಿ. ಮತ್ತು ಆಸ್ಪತ್ರೆ ವೃತ್ತ ಮಾರ್ಗವಾಗಿ ಹೊಸ ಅಣಗಳ್ಳಿ ಹತ್ತಿರ ಕೊನೆಗೊಳ್ಳಲಿದೆ. ಸುಮಾರು 6.34 ಕಿ.ಮೀ. ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಲು ಕ್ರಮ ತೆಗೆದುಕೊಂಡಿದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ಬರುವ ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದಂತೆ ಪರಿಹಾರ ಪಡೆಯಲು ಇಚ್ಚಿಸಿದ್ದಲ್ಲಿ ಕೆಲ ಪ್ರಾಥಮಿಕ ದಾಖಲಾತಿಗಳನ್ನು ಲಿಖಿತ ಅರ್ಜಿಯೊಂದಿಗೆ ಕಡ್ಡಾಯವಾಗಿ 7 ದಿನದೊಳಗೆ ನಗರಸಭೆಗೆ ಸಲ್ಲಿಸಬೇಕು.
ಆಸ್ತಿಗೆ ಸಂಬಂಧಿಸಿದ ಮೂಲ ದಾಖಲಾತಿಗಳು, ಕಟ್ಟಡ ನಿರ್ಮಾಣ ಮಾಡಲು ನಗರಸಭೆಯಿಂದ ಪಡೆದಿರುವ ಕಟ್ಟಡ ಪರವಾನಗಿ ಪ್ರತಿ, ಅನುಮೋದನೆ ನೀಡಿರುವ ನೀಲಿನಕ್ಷೆಯ ಪ್ರತಿ, ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ನಗರಸಭೆಯಿಂದ ಪಡೆದಿರುವ ದೃಢೀಕರಣ ಪತ್ರ, ಕುಟುಂಬಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ರವರಿಂದ ಪಡೆದಿರುವ ವಂಶವೃಕ್ಷ, ಆಸ್ತಿ ಸಂಬಂಧ 30 ವರ್ಷಗಳ ಋಣಭಾರ ರಾಹಿತ್ಯ ಪ್ರಮಾಣ ಪತ್ರ (ಇ.ಸಿ), ಆಸ್ತಿಗೆ ಪಾವತಿಸಿರುವ ಅಭಿವೃದ್ಧಿ ಶುಲ್ಕದ ರಶೀದಿ ಪ್ರತಿ, ನಮೂನೆ-3, ಕಂದಾಯ ಪಾವತಿ ಮಾಡಿರುವ ರಶೀದಿ ಪ್ರತಿ, ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿ ಮಾರ್ಜಿನ್ ಜಾಗವನ್ನು ಮಂಜೂರು ಮಾಡಿದ್ದಲ್ಲಿ ಅದರ ಪತ್ರ, ಸದರಿ ಜಾಗವನ್ನು ಪ್ರಾಧಿಕಾರವು ಮಂಜೂರು ಮಾಡಿದ್ದಲ್ಲಿ ನೀಡಿರುವ ಕ್ರಯಪತ್ರ, ಮಂಜೂರಾತಿ ಪ್ರಾಧಿಕಾರವು ನೀಡಿರುವ ಸ್ವಾಧೀನ ಪತ್ರ ದಾಖಲೆಗಳನ್ನು 7 ದಿನಗಳೊಳಗೆ ನಗರಸಭಾ ಕಚೇರಿಗೆ ಸಲ್ಲಿಸಬೇಕು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುರುತು ಮಾಡಲಾಗಿರುವ ಜಾಗವನ್ನು ಆಸ್ತಿಯ ಮಾಲೀಕರು ಖುದ್ದಾಗಿ 15 ದಿನಗಳೊಳಗೆ ತೆರವು ಮಾಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಬೇಕೆಂದು ನಗರಸಭೆ ಪೌರಾಯುಕ್ತರಾದ ಡಿ.ಕೆ. ಲಿಂಗರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ.

 **************************
ಆಗಸ್ಟ್ 8ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 06 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಆಗಸ್ಟ್ 8ರಂದು ಜಿಲ್ಲಾ ಪ್ರವಾಸ ಕ್ಯಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಯಳಂದೂರು ಪಟ್ಟಣ ರಸ್ತೆ ಅಭಿವೃದ್ಧಿ: ಜಾಗ ತೆರವಿಗೆ ಪಟ್ಟಣಪಂಚಾಯಿತಿ ಮನವಿ
ಚಾಮರಾಜನಗರ, ಆ. 06 (ಕರ್ನಾಟಕ ವಾರ್ತೆ):- ಯಳಂದೂರು ಪಟ್ಟಣ ಪರಿಮಿತಿಯಲ್ಲಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಲು ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆಯ ಎರಡು ಬದಿಗಳಲ್ಲಿ ಬರುವ ಆಸ್ತಿಯ ಮಾಲೀಕರು ಪರಿಹಾರ ಪಡೆಯಲು ಇಚ್ಚಿಸಿದ್ದಲ್ಲಿ ಕೆಲ ದಾಖಲೆಗಳನ್ನು 7 ದಿನಗಳೊಳಗೆ ಕಡ್ಡಾಯವಾಗಿ ಪಟ್ಟಣ ಪಂಚಾಯಿತಿಗೆ ಸಲ್ಲಿಸಬೇಕು ಹಾಗೂ ಪ್ರಾಧಿಕಾರದಿಂದ ಗುರುತು ಮಾಡಲಾದ ಜಾಗವನ್ನು 15 ದಿನಗಳೊಳಗೆ ತೆರವುಗೊಳಿಸಿ ರಸ್ತೆಯ ಅಭಿವೃದ್ಧಿಗೆ ಸಹಕರಿಸಬೇಕೆಂದು ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯಿತಿ ಮನವಿ ಮಾಡಿದೆ.
ಪಟ್ಟಣ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ 209 ಹಾದುಹೋಗುತ್ತಿದೆ. ಈಗಿನ ರಸ್ತೆಯನ್ನು 4 ಪಥದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಫಾರೆಸ್ಟ್ ಆಫೀಸ್‍ನಿಂದ ಪ್ರಾರಂಭಗೊಂಡು ಬಸ್ ನಿಲ್ದಾಣ, ಆಸ್ಪತ್ರೆ ಮಾರ್ಗವಾಗಿ ಪೆಟ್ರೋಲ್ ಬಂಕ್ ಹತ್ತಿರ ಕೊನೆಗೊಳ್ಳಲಿದೆ. ಸುಮಾರು 2.60 ಕಿ.ಮೀ. ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಲು ಕ್ರಮ ತೆಗೆದುಕೊಂಡಿದೆ. ಈ ರಸ್ತೆಯ ಎರಡೂ ಬದಿಗಳಲ್ಲಿ ಬರುವ ಆಸ್ತಿಯ ಮಾಲೀಕರು ಆಸ್ತಿಗೆ ಸಂಬಂಧಿಸಿದಂತೆ ಪರಿಹಾರ ಪಡೆಯಲು ಇಚ್ಚಿಸಿದ್ದಲ್ಲಿ ಕೆಲ ಪ್ರಾಥಮಿಕ ದಾಖಲಾತಿಗಳನ್ನು ಲಿಖಿತ ಅರ್ಜಿಯೊಂದಿಗೆ ಕಡ್ಡಾಯವಾಗಿ 7 ದಿನದೊಳಗೆ ಪಟ್ಟಣ ಪಂಚಾಯಿತಿಗೆ ಸಲ್ಲಿಸಬೇಕು.
ಆಸ್ತಿಗೆ ಸಂಬಂಧಿಸಿದ ಮೂಲ ದಾಖಲಾತಿಗಳು, ಕಟ್ಟಡ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿಯಿಂದ ಪಡೆದಿರುವ ಕಟ್ಟಡ ಪರವಾನಗಿ ಪ್ರತಿ, ಅನುಮೋದನೆ ನೀಡಿರುವ ನೀಲಿನಕ್ಷೆಯ ಪ್ರತಿ, ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ಪಟ್ಟಣ ಪಂಚಾಯಿತಿಯಿಂದ ಪಡೆದಿರುವ ದೃಢೀಕರಣ ಪತ್ರ, ಕುಟುಂಬಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ರವರಿಂದ ಪಡೆದಿರುವ ವಂಶವೃಕ್ಷ, ಆಸ್ತಿ ಸಂಬಂಧ 30 ವರ್ಷಗಳ ಋಣಭಾರ ರಾಹಿತ್ಯ ಪ್ರಮಾಣ ಪತ್ರ (ಇ.ಸಿ), ಆಸ್ತಿಗೆ ಪಾವತಿಸಿರುವ ಅಭಿವೃದ್ಧಿ ಶುಲ್ಕದ ರಶೀದಿ ಪ್ರತಿ, ನಮೂನೆ-3, ಕಂದಾಯ ಪಾವತಿ ಮಾಡಿರುವ ರಶೀದಿ ಪ್ರತಿ, ರಾಜ್ಯ ಹೆದ್ದಾರಿ, ಜಿಲ್ಲಾ ಹೆದ್ದಾರಿ ಮಾರ್ಜಿನ್ ಜಾಗವನ್ನು ಮಂಜೂರು ಮಾಡಿದ್ದಲ್ಲಿ ಅದರ ಪತ್ರ, ಸದರಿ ಜಾಗವನ್ನು ಪ್ರಾಧಿಕಾರವು ಮಂಜೂರು ಮಾಡಿದ್ದಲ್ಲಿ ನೀಡಿರುವ ಕ್ರಯಪತ್ರ, ಮಂಜೂರಾತಿ ಪ್ರಾಧಿಕಾರವು ನೀಡಿರುವ ಸ್ವಾಧೀನ ಪತ್ರ ದಾಖಲೆಗಳನ್ನು 7 ದಿನಗಳೊಳಗೆ ಪಟ್ಟಣ ಪಂಚಾಯಿತಿ ಕಚೇರಿಗೆ ಸಲ್ಲಿಸಬೇಕು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುರುತು ಮಾಡಲಾಗಿರುವ ಜಾಗವನ್ನು ಆಸ್ತಿಯ ಮಾಲೀಕರು ಖುದ್ದಾಗಿ 15 ದಿನಗಳೊಳಗೆ ತೆರವು ಮಾಡಿ ರಸ್ತೆ ಅಭಿವೃದ್ಧಿಗೆ ಸಹಕರಿಸಬೇಕೆಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್. ಉಮಾಶಂಕರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಆಗಸ್ಟ್ 8ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಆ. 06 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಆಗಸ್ಟ್ 8ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಧಾನ್ಯ, ಸೀಮೆಎಣ್ಣೆಗಾಗಿ ಕೂಪನ್ ಪಡೆಯಲು ಸೂಚನೆ
 ಚಾಮರಾಜನಗರ, ಆ. 06 (ಕರ್ನಾಟಕ ವಾರ್ತೆ):- ಪಡಿತರ ಚೀಟಿಗಳಿಗೆ ಆಹಾರಧಾನ್ಯ, ಸೀಮೆಎಣ್ಣೆ  ಪಡೆಯಲು ಆಧಾರ್ ಆಧಾರಿತ ಕೂಪನ್‍ಗಳನ್ನು ಪಡೆದುಕೊಳ್ಳುವಂತೆ ಆಹಾರ, ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.
ಜಿಲ್ಲಾ ಕೇಂದ್ರ ಮತ್ತು ತಾಲೂಕಿನ ಪಟ್ಟಣ ಪ್ರದೇಶ ವ್ಯಾಪ್ತಿಗೆ ಬರುವ ಸೀಮೆಎಣ್ಣೆ ಪಡೆಯಲು ಆರ್ಹರಿರುವ ಕಾರ್ಡುಗಳಿಗೆ ಆಧಾರ್ ಆಧಾರಿತ ಕೂಪನ್ ವ್ಯವಸ್ಥೆ ಮೂಲಕ ಜುಲೈ ತಿಂಗಳಿನಿಂದಲೇ ಸೀಮೆಎಣ್ಣೆ ವಿತರಿಸಲಾಗುತ್ತಿದೆ. ಪ್ರಸಕ್ತ ಮಾಹೆಯಲ್ಲಿ ಸೀಮೆಎಣ್ಣೆ ಪಡೆಯಲು ಪಡಿತರ ಚೀಟಿದಾರರು ಹತ್ತಿರದ ಖಾಸಗಿ ಸೇವಾಕೇಂದ್ರಗಳಲ್ಲಿ ಕೂಪನ್ ಪಡೆದು ಸೀಮೆಎಣ್ಣೆ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾ, ತಾಲೂಕು ಕೇಂದ್ರ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ನ್ಯಾಯಬೆಲೆ ಅಂಗಡಿಗೆ ಹೊಂದಿಕೊಂಡಿರುವ ಕಾರ್ಡುದಾರರು ಖಾಸಗಿ ಬಯೋಕೇಂದ್ರಗಳಲ್ಲಿ ಹೊಂದಿಕೊಂಡಿರುವ ಕಾರ್ಡುದಾರರು ಆಹಾರಧಾನ್ಯ ಮತ್ತು ಸೀಮೆಎಣ್ಣೆ ಕೂಪನ್‍ನ್ನು ಖಾಸಗಿ ಬಯೋಕೇಂದ್ರಗಳಲ್ಲಿ ಪಡೆದುಕೊಳ್ಳಬೇಕು. ಹೋಬಳಿ ಕೇಂದ್ರದ ನ್ಯಾಯಬೆಲೆ ಅಂಗಡಿ ವ್ಯಾಪ್ತಿಯ ಕಾರ್ಡುದಾರರು ಗ್ರಾಮ ಪಂಚಾಯಿತಿ, ಜನಸ್ನೇಹಿ ಕೇಂದ್ರ, ಖಾಸಗಿ ಕೇಂದ್ರಗಳ ಮುಖಾಂತರ ಸೀಮೆಎಣ್ಣೆ ಕೂಪನ್‍ಗಳನ್ನು ಪಡೆದುಕೊಳ್ಳಬೇಕು.
ಕಾರ್ಡುದಾರರು ಐ.ವಿ.ಆರ್.ಎಸ್. ಮುಖಾಂತರ ಆಧಾರ್ ಸಂಖ್ಯೆಗೆ ನೊಂದಣಿಯಾಗಿರುವ ಮೊಬೈಲ್ ಮೂಲಕ 161ಕ್ಕೆ ಡಯಲ್ ಮಾಡಿ ಸಂಖ್ಯೆ 4ನ್ನು ಒತ್ತಿದಾಗ ನಂತರ ಆಧಾರ್ ಕಾರ್ಡಿನಲ್ಲಿರುವ 12 ಸಂಖ್ಯೆಯನ್ನು ದಾಖಲು ಮಾಡಿದರೆ ಕಾರ್ಡುದಾರರಿಗೆ ಡಯಲ್ ಮಾಡಿದ ಮೊಬೈಲ್‍ನಲ್ಲಿ ಕೂಪನ್ ವ್ಯವಸ್ಥೆ ಲಭ್ಯವಾಗುತ್ತದೆ.
ತಾಲೂಕಿನ ಆಹಾರ ಇಲಾಖೆಯ ಕಾರ್ಯನಿರ್ವಾಹಕ ಸಿಬ್ಬಂದಿ ಪರಿಶೀಲಿಸಿ ದೊಡ್ಡ ಗ್ರಾಮಗಳಲ್ಲಿಯೂ ಸಹ ಸೀಮೆಎಣ್ಣೆ ಕೂಪನ್ ವಿತರಣೆ ಮಾಡುವ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗಿದೆ. ಇದುವರೆಗೆ ಆಧಾರ್ ಕಾರ್ಡ್ ಸಲ್ಲಿಸದೆ ಇರುವ ಪಡಿತರ ಚೀಟಿದಾರರು ಹಾಗೂ ಪಡಿತರ ಚೀಟಿಯಲ್ಲಿ ಕುಟುಂಬದ ಒಬ್ಬ ಸದಸ್ಯರು ದಾಖಲಾಗಿದ್ದು, ಉಳಿದ ಸದಸ್ಯರು ದಾಖಲು ಮಾಡದೆ ಇದ್ದಲ್ಲಿ ಆಗಸ್ಟ್ 15ರೊಳಗೆ ನೊಂದಣಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಪಡಿತರ ಹಂಚಿಕೆ ಸ್ಥಗಿತಗೊಳಿಸಲಾಗುತ್ತದೆ.
ಆಗಸ್ಟ್ ಮಾಹೆಯಲ್ಲಿ ಆಹಾರಧಾನ್ಯ ಮತ್ತು ಸೀಮೆಎಣ್ಣೆ ಪಡೆಯಲು ಕೂಪನ್ ಪಡೆದುಕೊಳ್ಳಬೇಕು. ಕೂಪನ್ ಪಡೆಯದೆ ಇರುವ ಕಾರ್ಡುದಾರರಿಗೆ ಪಡಿತರ ಹಾಗೂ ಸೀಮೆಎಣ್ಣೆ ಹಂಚಿಕೆಯಲ್ಲಿ ಸ್ಥಗಿತಗೊಳಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮರಳು ಸಮರ್ಪಕ ಪೂರೈಕೆಗೆ ಕ್ರಮವಹಿಸಿ: ಆರ್. ಧ್ರುವನಾರಾಯಣ
ಚಾಮರಾಜನಗರ, ಆ. 06 (ಕರ್ನಾಟಕ ವಾರ್ತೆ):- ಸರ್ಕಾರಿ ಯೋಜನೆಯ ಕಾಮಗಾರಿಗಳ ಪ್ರಗತಿ ಹಿನ್ನಡೆಯಾಗಲು ಮರಳು ಆಭಾವವೇ ಕಾರಣವೆಂಬ ದೂರುಗಳು ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಮರಳು ಪೂರೈಕೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರದ ವಸತಿ ಯೋಜನೆ, ಸ್ವಚ್ಚ ಭಾರತ್ ಮಿಷನ್ ಅಡಿ ನಿರ್ಮಾಣ ಮಾಡಿಕೊಳ್ಳಬೇಕಿರುವ ಶೌಚಾಲಯ ಹಾಗೂ ಜಿಲ್ಲೆಯ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ತಾಲೂಕಿನ ಎಲ್ಲ ಹಳ್ಳಿಗಳಿಗೆ ನದಿಮೂಲದಿಂದ ಶಾಶ್ವತ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆ ಪ್ರಗತಿ ಕುಂಠಿತವಾಗಲು ಮರಳು ಅಭಾವವೇ ಕಾರಣವೆಂಬ ಮಾಹಿತಿ ಸಭೆಯಲ್ಲಿ ವ್ಯಕ್ತವಾದ ಹಿನ್ನಲೆಯಲ್ಲಿ ಧ್ರುವನಾರಾಯಣ ಸಮರ್ಪಕವಾಗಿ ಮರಳು ಪೂರೈಸುವಂತೆ ಸೂಚಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಫಲಾನುಭವಿಗಳಿಗೆ ಮರಳು ಲಭ್ಯವಾಗುತ್ತಿಲ್ಲ. ಕೆಲವೆಡೆ ಸ್ಥಳೀಯವಾಗಿ ಸಿಗುವ ಮರಳು ಪಡೆದುಕೊಳ್ಳಲು ತೊಂದರೆಯಾಗುತ್ತಿದೆ. ಎಂದು ಶಾಸಕರಾದ ಆರ್. ನರೇಂದ್ರ ಹಾಗೂ ಸಭೆಯಲ್ಲಿ ಹಾಜರಿದ್ದ ತಾಲೂಕು ಮಟ್ಟದ ಜನಪ್ರತಿನಿಧಿಗಳು  ಗಮನಕ್ಕೆ ತಂದರು. ಅಲ್ಲದೆ ಅಧಿಕಾರಿಗಳು ಸಹ ಕಾಮಗಾರಿ ಹಿನ್ನಡೆಗೆ ಮರಳು ಸರಿಯಾಗಿ ಪೂರೈಸಲು ಸಾಧ್ಯವಾಗುತ್ತಿರುವುದೇ ಕಾರಣವೆಂದು ಮನವರಿಕೆ ಮಾಡಿದರು.
ಈ ಹಂತದಲ್ಲಿ ಮಾತನಾಡಿದ ಧ್ರುವನಾರಾಯಣ ಜಿಲ್ಲಾಧಿಕಾರಿಯವರಿಗೆ ಮರಳು ಪೂರೈಕೆಯನ್ನು ಸರ್ಕಾರಿ ಕಾಮಗಾರಿಗಳಿಗೆ ತೊಂದರೆಯಾಗದಂತೆ ಒದಗಿಸುವಲ್ಲಿ ಆದ್ಯತೆ ನೀಡುವಂತೆ ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಹಂಪಾಪುರ, ಮುಳ್ಳೂರು ಬಳಿ ಮರಳು ತೆಗೆಯಲು ಬ್ಲಾಕ್ ಗುರುತಿಸಲಾಗಿದೆ. ಈ ಪ್ರಕ್ರಿಯೆ ನಡೆಸಿ ಮರಳನ್ನು ಜಿಲ್ಲೆಯ ಬೇಡಿಕೆಗೆ ತಕ್ಕಂತೆ ಪೂರೈಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಶೌಚಾಲಯ, ವಸತಿ ಯೋಜನೆ ಫಲಾನುಭವಿಗಳು ಗ್ರಾಮ ಪಂಚಾಯತ್‍ನಿಂದ ಪಡೆದುಕೊಂಡ ಮಂಜೂರಾತಿ ಪತ್ರ ತೋರಿಸಿ ಸ್ಥಳೀಯವಾಗಿ ಲಭ್ಯವಾಗುವ ಮರಳು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಕೊಳ್ಳೇಗಾಲ ವಿಭಾಗ ವ್ಯಾಪ್ತಿಯಲ್ಲಿ ದೀನ್ ದಯಾಳ್ ಗ್ರಾಮ ಜ್ಯೋತಿ ಯೋಜನೆಯಡಿ ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸದ ಗಿರಿಜನ ಹಾಡಿಗಳಿಗೆ ಒಂದು ವಾರದೊಳಗೆ ಅರಣ್ಯ ಅಧಿಕಾರಿಗಳು ಹಾಗೂ ಸೆಸ್ಕ್ ಅಧಿಕಾರಿಗಳು ಜತೆಗೂಡಿ ಸ್ಥಳ ಪರಿಶೀಲಿಸಿ ಯೋಜನೆ ತ್ವರಿತಗತಿಯಲ್ಲಿ ಸಾಗಲು ಕ್ರಮ ವಹಿಸಬೇಕೆಂದು ಧ್ರುವನಾರಾಯಣ ತಿಳಿಸಿದರು.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕಿದೆ. ವಿಶೇಷವಾಗಿ ಮುಖ್ಯಮಂತ್ರಿಗಳ ಕಾರ್ಯಕ್ರಮದಡಿ ಅನೇಕ ಉಪಯೋಗಿ ಕೆಲಸಗಳು ಸಾಮೂಹಿಕ ಬಳಕೆಗೆ ಅನುಕೂಲವಾಗಿವೆ. ಇಂತಹ ಕಾಮಗಾರಿಯನ್ನು ಹೆಚ್ಚು ಕ್ಯಗೆತ್ತಿಕೊಳ್ಳಬೇಕೆಂದು ಸೂಚಿಸಿದರು.
ಕುಡಿಯುವ ನೀರು ಪೂರೈಕೆ ಕುರಿತು ಪ್ರಗತಿ ಪರಿಶೀಲಿಸಿದ ಧ್ರುವನಾರಾಯಣ ಅವರು ಅಭಾವವಿರುವ ಸ್ಥಳಗಳಲ್ಲಿ ಆದ್ಯತೆ ಮೇರೆಗೆ ಯೋಜನೆ ಪೂರ್ಣಗೊಳಿಸಬೇಕು. ಗ್ರಾಮಂತರ ಪ್ರದೇಶ, ಗಿರಿಜನರ ಹಾಡಿ ಭಾಗಗಳಲ್ಲಿ ಕುಡಿಯುವ ನೀರು ಪೂರೈಸಬೇಕು ಎಂದರು.
ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಪ್ರವಾಸೋದ್ಯಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ನಗರ ಜೀವನೋಪಾಯ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮ ಹಾಗೂ ಇತರೆ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ನಗರಸಭೆ ಅಧ್ಯಕ್ಷರಾದ ರೇಣುಕಾಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್, ಜೈನ್, ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ನಾಮನಿದೇಶಿತ ಸದಸ್ಯರು, ತಾಲೂಕು ಪಂಚಾಯತ್‍ನ ಪ್ರತಿನಿಧಿಗಳು ಸಭೆಯಲ್ಲಿ ಹಾಜರಿದ್ದರು.    
 
ಆಗಸ್ಟ್ 7ರಂದು ಕೃಷಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 06 (ಕರ್ನಾಟಕ ವಾರ್ತೆ):- ಕೃಷಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಆಗಸ್ಟ್ 7 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 10.45 ಗಂಟೆಗೆ ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿಯಲ್ಲಿ ಬೀಜ ಮತ್ತು ರಸಗೊಬ್ಬರ ಸಂಯುಕ್ತ ಕೂರಿಗೆ ಯಂತ್ರ ಬಳಸಿ ಮುಸುಕಿನ ಜೋಳ ಬಿತ್ತನೆ ಮಾಡುವ ಪ್ರಾತ್ಯೆಕ್ಷಿಕೆ ಹಾಗೂ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 2.15ಗಂಟೆಗೆ ಯಳಂದೂರು ತಾಲೂಕಿನ ಮಾಂಬಳ್ಳಿಯಲ್ಲಿ ಕೃಷಿಭಾಗ್ಯ ಯೋಜನೆಯಡಿ ನಿರ್ಮಿಸಿರುವ ಪಾಲಿಹೌಸ್‍ನಲ್ಲಿ ಬೆಳೆದಿರುವ ಜರ್ಬರ ಹೂತೋಟದ ಘಟಕ ವೀಕ್ಷಣೆ ಮಾಡುವರು.
ಮಧ್ಯಾಹ್ನ 3.15 ಗಂಟೆಗೆ ಮದ್ದೂರಿನಲ್ಲಿ ಹಸಿರೆಲೆ ಗೊಬ್ಬರದ ಡಯಾಂಚ ಮತ್ತು ಸೆಣಬು ಬೆಳೆಯನ್ನು ರೋಟೋವೇಟರ್ ಬಳಸಿ ಹಸಿರೆಲೆ ಗೊಬ್ಬರದ ಬೆಳೆಯನ್ನು ಮಣ್ಣಿಗೆ ಸೇರಿಸುವ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4.30 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


ಆ. 10ರಂದು ನಗರದಲ್ಲಿ ಭಗೀರಥ ಜಯಂತಿ ಆಚರಣೆ
ಚಾಮರಾಜನಗರ, ಆ. 08 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಆಗಸ್ಟ್ 10ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಪ್ರವಾಸಿ ಮಂದಿರದ ಬಳಿ ಶ್ರೀ ಭಗೀರಥರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ
ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಮಾರಿಗುಡಿ ದೇವಾಲಯದ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ,
ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ನೀಲಗಿರಿ ತಳವಾರ್ ಮುಖ್ಯ ಭಾಷಣ ಮಾಡುವರು. ನಗರದ ಮಂಜುನಾಥ ಶೆಟ್ಟಿ ಮತ್ತು ತಂಡದಿಂದ ಸುಗಮ ಸಂಗೀತ ಕಾರ್ಯಕ್ರಮ ಸಹ ಏರ್ಪಾಡಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಆಗಸ್ಟ್ 8ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಆ. 07 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಆಗಸ್ಟ್ 8ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇನ್ನೂ ಎಂಟು ಕೃಷಿಧಾರೆ ಕೇಂದ್ರ ಸ್ಥಾಪನೆ: ಕೃಷಿ ಸಚಿವ ಕೃಷ್ಣಭೈರೆಗೌಡ
ಚಾಮರಾಜನಗರ ಆ.07(ಕರ್ನಾಟಕ ವಾರ್ತೆ) : ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಯಂತ್ರೋಪಕರಗಳನ್ನು ಬಾಡಿಗೆ ಆಧಾರದ ಮೇಲೆ ನೀಡುವ ಕೃಷಿಧಾರೆ ಕೇಂದ್ರಗಳನ್ನು ಜಿಲ್ಲೆಯಲ್ಲಿ ಇನ್ನೂ  ಎಂಟು ಕಡೆ ತೆರೆಯಲು ತೀರ್ಮಾನ ತೆಗೆದುಕೊಳ್ಳಲಾಗುತ್ತಿದೆ ಎಂದು ಕೃಷಿ ಸಚಿವರಾದ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.
    ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೃಷಿ ಯಂತ್ರೋಪಕರಣಗಳ ಮೇಳ ಮತ್ತು ಬೀಜ ರಸಗೊಬ್ಬರ ಬಿತ್ತನೆ ಕೂರಿಗೆ ಮೂಲಕ ಮುಸುಕಿನ ಜೋಳೆ ಬಿತ್ತನೆ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮತನಾಡಿದರು.
    ರಾಜ್ಯಸರ್ಕಾರ ಬಾಡಿಗೆ ಆಧಾರದ ಮೇಲೆ ಕೃಷಿ ಯಂತ್ರೋಪಕರಣಗಳನ್ನು ಒದಗಿಸುವ 175 ಕೃಷಿಧಾರೆ ಕೇಂದ್ರಗಳನ್ನು ಕಳೆದ ವರ್ಷ ಆರಂಭಿಸಿದೆ. ಚಾಮರಾಜನಗರ ಜಿಲ್ಲೆಯಲ್ಲೂ 4 ಕೇಂದ್ರಗಳನ್ನು ಸ್ಥಾಪನೆ ಮಾಡಿದೆ. ಸಚಿವರು, ಶಾಸಕರು, ಲೋಕಸಭಾ ಸದಸ್ಯರು ಸಹ ಕೃಷಿಧಾರೆ ಕೇಂದ್ರಗಳನ್ನು ಇನ್ನೂ ಹೆಚ್ಚು ಸ್ಥಾಪಿಸುವಂತೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿಯಾಗಿ ಇನ್ನೂ 8 ಕೃಷಿಧಾರೆ ಕೇಂದ್ರಗಳನ್ನು ಜಿಲ್ಲೆಯಲ್ಲಿ ಆರಂಭಿಸಲಾಗುವುದೆಂದು ತಿಳಿಸಿದರು.
    ಕೃಷಿ ಚಟುವಟಿಕೆಗಳಿಗೆ ಪ್ರಸ್ತುತ ಕೂಲಿ ಕಾರ್ಮಿಕರು ನಿರೀಕ್ಷಿತ ಸಂಖ್ಯೆ ಲಭ್ಯವಾಗುತ್ತಿಲ್ಲ.  ಇದರಿಂದ ಕೃಷಿ ಉತ್ಪಾದನೆ ವೆಚ್ಚ ಹೆಚ್ಚಾಗುತ್ತಿದೆ. ಮುಂಬರುವ ದಿನಗಳಲ್ಲಿ ಇನ್ನೂ ಸಮಸ್ಯೆ ಬಿಗಾಡಯಿಸಲಿದೆ. ಈಗಾಗಿ ಭವಿಷ್ಯದ ದೃಷ್ಟಿಯನ್ನು ಮನಗಂಡು ರಾಜ್ಯ ಸರ್ಕಾರ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿರುವ ಯಂತ್ರೋಪಕರಣಗಳನ್ನು ಒದಗಿಸುವ ಕೃಷಿಧಾರೆ ಕೇಂದ್ರವನ್ನು ಸ್ಥಾಪಿಸುವ ನಿರ್ಧಾರ ಕೈಗೊಂಡಿತು ಎಂದರು.
    ಕೃಷಿ ಯಂತ್ರೋಪಕರಣ ಹಾಗೂ ನೂತನ ತಂತ್ರಜ್ಞಾನ ಬಳಕೆಯನ್ನು ಕೃಷಿ ಕ್ಷೇತ್ರದಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಸಿಕೊಂಡರೆ ಹೆಚ್ಚಿನ ಇಳುವರಿ ಪಡೆಯಬಹುದು. ಅಲ್ಲದೆ ಸಮಯ ಹಾಗೂ ಹಣ ಉಳಿತಾಯವಾಗಲಿದೆ. ಕೃಷಿ ಯಂತ್ರೋಪಕರಣಗಳ ಬಾಡಿಗೆ ದರ ಕಡಿಮೆ ಇರುವುದರಿಂದ ಕೃಷಿ ಕಾರ್ಮಿಕರನ್ನು ಬಳಸಿ ಕೆಲಸಮಾಡುವ ವೆಚ್ಚಕ್ಕಿಂತ ಕಡಿಮೆ ಹಣವನ್ನು ತೊಡಗಿಸಬಹುದು ಎಂದರು.
    ಕೃಷಿ ಲಾಭದಾಯಕವಾಗಬೇಕಾದರೆ ರೈತರು  ಬೆಳೆಗಾರರು ಹಳೆಯ ಪದ್ಧತಿಯನ್ನು ಕೈಬಿಟ್ಟು ಸುಧಾರಿತ ವಿಧಾನಗಳಿಗೆ ಒಲವು ತೋರಬೇಕಿದೆ. ಕಬ್ಬು ಬೆಳೆಯ ಬಿತ್ತನೆಗೆ ಉತ್ತರ ಕರ್ನಾಟಕದಲ್ಲಿ ಅನುಸರಿಸಲಾಗುತ್ತಿರುವ ಸಾಲು ಅಂತರವನ್ನು ಹೆಚ್ಚು ಮಾಡಬೇಕಿದೆ. ಕನಿಷ್ಠ 5 ಅಡಿಗೆ ಒಂದು ಸಾಲು ಇರಬೇಕಿದೆ. ಇತ್ತೀಚೆಗೆ ಪರಿಚಯಿಸಲಾಗುತ್ತಿರುವ ಭೂಮಿಯೊಳಗೆ ಹನಿ ನೀರಾವರಿ ಅಳವಡಿಕೆಗೂ ಮುಂದಾಗಬೇಕಿದೆ. ಇದರಿಂದ ಹೆಚ್ಚಿನ ಇಳುವರಿ ಪಡೆಯಬಹುದೆಂದು ಕೃಷಿ ಸಚಿವರು ಸಲಹೆ ಮಾಡಿದರು.
    ಜಿಲ್ಲೆಯಲ್ಲಿ ಭತ್ತ ಬೆಳೆಯುವವರು ಸಹ ಸಾಕಷ್ಟು ಮಂದಿ ಇದ್ದಾರೆ. ಕಡಿಮೆ ನೀರು ಬಳಸಿ ಹೆಚ್ಚು ಭತ್ತ ಬೆಳೆಯುವ ಡಿ.ಎಸ್.ಆರ್. ಪದ್ಧತಿ ಸಹ ಲಭ್ಯವಿದೆ. ಇದರ ಕುರಿತು ತಿಳಿವಳಿಕೆ ನೀಡುವ ಸಲುವಾಗಿ ಪ್ರಾತ್ಯಕ್ಷಿಕೆ  ಹಮ್ಮಿಕೊಳ್ಳಲಾಗುವುದು ಈ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಲು ಕಾರ್ಯಕ್ರಮ ರೂಪಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದೆಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
    ಕೃಷಿಧಾರೆಗಳಲ್ಲಿ ದೊರೆಯುವ ಯಂತ್ರಗಳ ವಿವರಗಳನ್ನು ಒಳಗೊಂಡ ಮಾಹಿತಿ ಮಡಿಕೆ ಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಅವರು ನೀರಾವರಿ ಪ್ರದೇಶಕ್ಕೆ ಅನುಕೂಲವಾಗುವ ಹಾಗೆ ಈ ಹಿಂದೆ ಯೋಜನೆಗಳು ಸೀಮಿತವಾಗುತ್ತಿದ್ದವು. ಖುಷ್ಕಿ ಭಾಗದ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ.  ಮೊದಲು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಇದೀಗ ಎಲ್ಲರಿಗೂ ಸೌಲಭ್ಯ ನೀಡಲು ಸರ್ಕಾರ ಮುಂದಾಗಿದೆ ಎಂದರು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಆರ್.ನರೇಂದ್ರ ಕೃಷಿ ಬಿತ್ತನೆ ಕೊಯ್ಲು ಚಟುವಟಿಕೆಗಳಿಗೆ ಹೆಚ್ಚಿನ ಹಣ ವೆಚ್ಚಮಾಡಬೇಕಾದ ಅನಿವಾರ್ಯತೆ ಬಂದೊಗಿದೆ. ಹೀಗಾಗಿ ಕೃಷಿ ಅವಲಂಬನೆ ಲಾಭದಾಯಕವಲ್ಲ ಎಂಬ ಭಾವನೆ ರೈತರಲ್ಲಿದೆ. ಕೃಷಿ ಯಂತ್ರೋಪಕರಣಗಳನ್ನು ಬಳಸಿಕೊಂಡರೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭ ಪಡೆಯಬಹುದಾಗಿದೆ. ಇದನ್ನು ಮನವರಿಕೆ ಮಾಡಿಕೊಡುವ ಸಲುವಾಗಿಯೇ ಪ್ರಾತ್ಯಕ್ಷಿಕೆ ಹಾಗೂ ಯಂತ್ರೋಪಕರಣಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು. 
    ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ತಾ.ಪ. ಅಧ್ಯಕ್ಷರಾದ ರಾಜು, ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರಾಜುಗೌಡ, ಕೃಷಿಕ ಸಮಾಜದ ಅಧ್ಯಕ್ಷರಾದ ರಾಘವೇಂದ್ರ ನಾಯ್ಡು, ಜಂಟಿ ಕೃಷಿ ನಿರ್ದೇಶಕರಾದ  ತಿರುಮಲೇಶ್, ಉಪನಿರ್ದೇಶಕರಾದ ಯೋಗೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
    ಕಾರ್ಯಕ್ರಮದ ಮೊದಲು ಬೀಜ ಮತ್ತು ರಸಗೊಬ್ಬರ ಬಿತ್ತನೆ ಕೂರಿಗೆ ಮೂಲಕ ಮುಸುಕಿನ ಜೋಳ ಬಿತ್ತನೆ ಪ್ರಾತ್ಯಕ್ಷಿಕೆಯನ್ನು ಸಚಿವರಾದ ಕೃಷ್ಣ ಭೈರೇಗೌಡ ಸ್ವತಃ ಟ್ರಾಕ್ಟರ್ ಚಾಲನೆ ಮಾಡುವ ಮೂಲಕ ಆರಂಭಿಸಿದ್ದು ಗಮನ ಸೆಳೆಯಿತು.
    ಬಳಿಕ ಸಚಿವ ಕೃಷ್ಣೇಭೈರೇಗೌಡ ಅವರು ಯಳಂದೂರು ತಾಲ್ಲೂಕಿನ ಮಾಂಬಳ್ಳಿಯಲ್ಲಿ ಕೃಷಿ ಭಾಗ್ಯ ಯೋಜನಯಡಿಯಲ್ಲಿ ನಿರ್ಮಿಸಲಾಗಿರುವ ಪಾಲಿ ಹೌಸ್‍ನಲ್ಲಿ ಬೆಳೆದಿರುವ ಹೂ ತೋಟ ಇನ್ನಿತರ ಬೆಳೆಯನ್ನು ವೀಕ್ಷಿಸಿದರು. ತದನಂತರ ಮದ್ದೂರಿನಲ್ಲಿ ಹಸಿರೆಲೆ ಗೊಬ್ಬರದ ಡಯಾಂಚ ಮತ್ತು ಸೆಣಬು ಬೆಳೆಯನ್ನು ರೋಟೋವೇಟರ್ ಬಳಸಿ ಹಸಿರೆಲೆ ಗೊಬ್ಬರದ ಬೆಳೆಯನ್ನು ಮಣ್ಣಿಗೆ ಸೇರಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಜಯಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ, ಜಿ.ಪಂ. ಸದಸ್ಯರಾದ ಉಮಾವತಿ ಸೇರಿದಂತೆ ಇತರೆ ಗಣ್ಯರು, ಜನಪ್ರತಿನಿಧಿಗಳು ಹಾಜರಿದ್ದರು.
   
    ಆಗಸ್ಟ್ 8ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಆ. 07 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಆಗಸ್ಟ್ 8ರಂದು ಜಿಲ್ಲಾ ಪ್ರವಾಸ ಕ್ಯಗೊಂಡಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಜನಸಂಪರ್ಕ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ವಿಶೇಷ ಅನುದಾನ ಬಳಕೆ ಸಂಬಂಧ ಕಾಮಗಾರಿ

ನಗರದ ವಿವಿಧ ಸ್ಥಳಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ಪರಿಶೀಲನೆ 
ಚಾಮರಾಜನಗರ, ಆ. 08 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯ ಮಂತ್ರಿಗಳ ವಿಶೇಷ ಅನುದಾನದಡಿ 50 ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಬಹುದಾದ ವಿವಿಧ ಅಭಿವೃದ್ಧಿ ಕಾಮಗಾರಿ ಸಂಬಂಧ ಸ್ಥಳ ಪರಿಶೀಲನೆಯನ್ನು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಎಸ್.ಮಹದೇವಪ್ರಸಾದ್ ಅವರು  ಇಂದು ನಡೆಸಿದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಎಂ.ರಾಮಚಂದ್ರ, ಚೂಡಾ ಅಧ್ಯಕ್ಷ ಸೈಯದ್ ರಫಿ, ನಗರಸಭೆ ಅಧ್ಯಕ್ಷರಾದ ರೇಣುಕಾ ಹಾಗೂ ಜಿಲ್ಲಾ ಮಟ್ಟದ  ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಮಾಡಿದ ಸಚಿವರು ಅಭಿವೃದ್ಧಿ ಕಾಮಗಾರಿಗಾಗಿ ಸ್ಥಳ ವೀಕ್ಷಿಸಿದರು.
ಮೊದಲಿಗೆ ಸಂತೇಮರಳ್ಳಿ ವೃತ್ತದ ಬಳಿ ಇರುವ ನಗರಸಭೆ ನಿವೇಶನದಲ್ಲಿ ಆಧುನಿಕ ಮಾರುಕಟ್ಟೆ ನಿರ್ಮಾಣ ಸಂಬಂಧ ಸ್ಥಳ ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಯನ್ನು ಸಚಿವರು ನೀಡಿದರು. ಬಳಿಕ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದರು. ಬಸ್ ನಿಲ್ದಾಣ ಅಭಿವೃದ್ಧಿ ಕೈಗೊಂಡು ಸುತ್ತಲು ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಿ ಅನುಕೂಲ ಮಾಡಿಕೊಡಲು ರೂಪುರೇಷೆ ತಯಾರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಕೇಂದ್ರದ ಪ್ರಮುಖ ಡಾ|| ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಪ್ರಸ್ತುತ ಕೈಗೊಂಡಿರುವ ಸಿಂಥೇಟಿಕ್ ಕಾಮಗಾರಿ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಮತ್ತಷ್ಟೂ ಕ್ರೀಡಾ ಚಟುವಟಿಕೆಗಳಿಗೆ ಪೂರಕವಾದ ಕಾಮಗಾರಿ ಕೈಗೊಳ್ಳಲು ಚರ್ಚಿಸಿದರು. ಸ್ಕೇಟಿಂಗ್, ಈಜುಕೊಳ ನಿರ್ಮಾಣ ಮಾಡಲು ಅಗತ್ಯ ಪ್ರಸ್ತಾವನೆಯನ್ನು ಸಿದ್ದಪಡಿಸುವಂತೆ ಸೂಚಿಸಿದರು. ಹೆಲಿಪ್ಯಾಡ್ ನಿರ್ಮಾಣಕ್ಕೂ ಸ್ಥಳ ನಿಗದಿ ಮಾಡುವಂತೆ ತಿಳಿಸಿದರು.
ತದನಂತರ ದೊಡ್ಡ ಅರಸನ ಕೊಳಕ್ಕೆ ಭೇಟಿ ಕೊಡ ಸಚಿವರು ಅಲ್ಲಿನ ಅಭಿವೃದ್ಧಿ ಸಂಬಂಧ ಸಮಾಲೋಚಿಸಿದರು. ಈಗ ಇರುವ ಸಾಂಪ್ರದಾಯಕ ಸ್ಥಳ ಮತ್ತು ಮರಗಳನ್ನು ಉಳಿಸಿಕೊಳ್ಳಬೇಕು. ಇದರೊಂದಿಗೆ ಕೊಳವನ್ನು ಅಭಿವೃದ್ಧಿಗೊಳಿಸಿ ಸುಂದರ ತಾಣವನ್ನಾಗಿ ಮಾರ್ಪಾಡು ಮಾಡಬಹುದು. ನಗರದ ಜನತೆ ವೀಕ್ಷಿಸುವ ಪ್ರಮುಖ ತಾಣವನ್ನಾಗಿ ರೂಪಗೊಳಿಸುವ ದಿಸೆಯಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳೋಣವೆಂದು ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಸಂಪಿಗೆ ರಸ್ತೆ ಹಾಗೂ ತರಕಾರಿ ಮಾರುಕಟ್ಟೆಯನ್ನು ವೀಕ್ಷಿಸಿ ಅಭಿವೃದ್ಧಿಗೊಳಿಸುವ ಸಂಬಂಧ ಅಧಿಕಾರಿಗಳಿಗೆ ಸಲಹೆ ನೀಡಿದರು. ರೈಲ್ವೆ ನಿಲ್ದಾಣದ ಬಳಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಬಿಜಿನೆಸ್ ಪಾರ್ಕ್ ಸ್ಥಳಕ್ಕೂ ಭೇಟಿ ನೀಡಿ ಚೂಡಾ ಅಧ್ಯಕ್ಷರಾದ ಸೈಯದ್ ರಫಿ ಅವರಿಂದ ವಿವರವಾದ ಮಾಹಿತಿಯನ್ನು ಉಸ್ತುವಾರಿ ಸಚಿವರು ಪಡೆದುಕೊಂಡರು. ಬಿಜಿನೆಸ್ ಪಾರ್ಕ್ ನಿರ್ಮಾಣದಿಂದ ಪಟ್ಟಣದ ಒಳಗೆ ವ್ಯಾಪಾರ ವಹಿವಾಟು ದಟ್ಟಣೆ ಕಡಿಮೆಯಾಗಲಿದೆ. ಪ್ರತ್ಯೇಕ ಬಿಜಿನೆಸ್ ಪಾರ್ಕ್‍ನಿಂದ ಜಿಲ್ಲೆಯ ಅಭಿವೃದ್ಧಿಗೂ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಿ.ದೇವರಾಜು ಅರಸು ಟ್ರಕ್ ಟರ್ಮಿನಲ್ ನಿರ್ಮಾಣಕ್ಕೂ ಸಂಬಂಧಪಟ್ಟವರಿಗೆ ಶೀಘ್ರ ಪತ್ರ ಬರೆದು ಅಗತ್ಯ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚಿಸಿದರು. ಬಳಿಕ ನಗರಸಭೆ ಬಳಿ ಇರುವ ಹಳೆಯ ಮಾರುಕಟ್ಟೆ ಸ್ಥಳವನ್ನು ಪರಿಶೀಲಿಸಿದರು. ಈ ಜಾಗವನ್ನು ಉತ್ತಮ ಉದ್ದೇಶಕ್ಕೆ ಬಳಸಿಕೊಳ್ಳಲು ಯೋಗ್ಯವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಿದರು.
ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ನಗರಸಭೆ ಸದಸ್ಯರಾದ ಸಿ.ಕೆ.ಮಂಜುನಾಥ್, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲ ಪಾಟಿ, ನಗರ ಯೋಜನಾ ಕೋಶದ ನಿರ್ದೇಶಕರಾದ ನಿರಂಜನಮೂರ್ತಿ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಇನಾಯಿತ್ ಉಲ್ಲಾ ಷರೀಪ್, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆಲುವಯ್ಯ, ನಗರಸಭೆ ಆಯುಕ್ತರಾದ ರಾಜಣ್ಣ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ ಇತರರು ಹಾಜರಿದ್ದರು. 




ಜನರ ಸಮಸ್ಯೆಗಳಿಗೆ ಸೂಕ್ತ ಪರಿಹಾರ: ಹೆಚ್.ಎಸ್.ಮಹದೇವ ಪ್ರಸಾದ್ 
ಚಾಮರಾಜನಗರ, ಆ. 08 (ಕರ್ನಾಟಕ ವಾರ್ತೆ):- ಜನಸಂಪರ್ಕ ಸಭೆಯಲ್ಲಿ ನಾಗರಿಕರಿಂದ ಸ್ವೀಕರಿಸಲಾಗುವ  ಅಹವಾಲು ಸಮಸ್ಯೆ ಸಂಬಂಧ ಅರ್ಜಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸಲಾಗುವುದೆಂದು ಸಹಕಾರ ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಎಸ್.ಮಹದೇವಪ್ರಸಾದ್ ತಿಳಿಸಿದರು.
ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರ ಅಹವಾಲುಗಳನ್ನು ಆಲಿಸುವ ಸಲುವಾಗಿಯೇ ಜನಸಂಪರ್ಕ ಸಭೆಯನ್ನು ನಡೆಸುವಂತೆ ಮುಖ್ಯಮಂತ್ರಿಯವರು ಸೂಚನೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿ ತಿಂಗಳು ಜನರ ಸಮಸ್ಯೆಗಳನ್ನು ಕೇಳಿ ಪರಿಹರಿಸುವ ಸಲುವಾಗಿ ಸಭೆ ನಡೆಸಲಾಗುವುದು. ಸಭೆಯಲ್ಲಿ ವ್ಯಕ್ತವಾಗುವ ಸಮಸ್ಯೆ ಹಾಗೂ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಸಮಸ್ಯೆ ಇತ್ಯರ್ಥಕ್ಕೆ ಕ್ರಮವಹಿಸುವಂತೆ ಸೂಚಿಸಲಾಗುವುದು ಎಂದರು.
ಜನಸಂಪರ್ಕ ಸಭೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುತ್ತದೆ. ಜನರಿಂದ ಬರುವ ಮನವಿ ಸಮಸ್ಯೆಗಳು ಸಣ್ಣದಿರಲಿ ಅಥವಾ ದೊಡ್ಡದಿರಲಿ ಉದಾಸೀನ ಮಾಡುವಂತೆಯೇ ಇಲ್ಲ. ಯಾವುದೇ ಮನವಿ ಸಲ್ಲಿಸಿದರು ಅದಕ್ಕೆ ಸೂಕ್ತ ಸ್ಪಂದನೆ ಮಾಡುವಂತೆ ಸೂಚಿಸಲಾಗುತ್ತದೆ. ಜನರಿಂದ ಪಡೆದ ಅರ್ಜಿಗಳಿಗೆ ಕೈಗೊಂಡ ಕ್ರಮದ ಕುರಿತು ಲಿಖಿತ ಉತ್ತರ ನೀಡಲಾಗುತ್ತದೆ. ಎಂದು ಸಚಿವರು ತಿಳಿಸಿದರು.
ಇಂದಿನ ಜನಸಂಪರ್ಕ ಸಭೆಯಲ್ಲಿ 141 ಅರ್ಜಿಗಳು ಬಂದಿವೆ. 30 ರಿಂದ 35 ಮಂದಿ ತಮ್ಮ ಅಹವಾಲುಗಳನ್ನು ಮೌಖಿಕವಾಗಿ ಗಮನಕ್ಕೆ ತಂದಿದ್ದಾರೆ. ಬಹುತೇಕ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಪಟ್ಟದಾಗಿದೆ. ಇನ್ನಿತರ ಸವiಸ್ಯೆಗಳ ಕುರಿತ ಅರ್ಜಿಗಳು ಸಲ್ಲಿಕೆಯಾಗಿವೆ ಎಂದರು.
 ವೃದ್ದಾಪ್ಯ ವೇತನ ಅಂಗವಿಕಲರ ವೇತನ ಕೋರಿ ಅರ್ಜಿಗಳು ಬಂದಿವೆ. ಗುರುತಿನ ಚೀಟಿ ಹೊಂದಾಣಿಕೆ ಇನ್ನಿತರ ಪರಿಶೀಲನೆ ಪ್ರಕ್ರಿಯೆಯಲ್ಲಿ ಕೆಲ ವ್ಯತ್ಯಾಸಗಳು ಕಂಡು ಬಂದಿರಬಹುದು. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಲಭಿಸದೇ ಇರಬಹುದು. ಈ ಬಗ್ಗೆ ಕೂಲಂಕಶವಾಗಿ ಪರಿಶೀಲಿಸಿ ಸವಲತ್ತುಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ಕೊಡಲಾಗುವುದೆಂದು ಉಸ್ತುವಾರಿ ಸಚಿವರು ತಿಳಿಸಿದರು.
 ಸಭೆಯಲ್ಲಿ ಸುಮಾರು 2 ಗಂಟೆಗೂ ಹೆಚ್ಚು ಕಾಲ ಸಚಿವರು ನಾಗರೀಕರಿಂದ ಲಿಖಿತ ಅರ್ಜಿಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಜಯಣ್ಣ, ಹನೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್. ನರೇಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ನಗರಸಭೆ ಅಧ್ಯಕ್ಷರಾದ ರೇಣುಕಾ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲ ಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್.ಆರ್ ಜೈನ್, ಸಭೆಯಲ್ಲಿ ಉಪಸ್ಥಿತರಿದ್ದರು.

































































No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು