Tuesday, 16 August 2016

ಅರಸು ರಥಯಾತ್ರೆಗೆ ಅದ್ದೂರಿ ಸ್ವಾಗತ

ಅರಸು ರಥಯಾತ್ರೆಗೆ ಅದ್ದೂರಿ ಸ್ವಾಗತ ಚಾಮರಾಜನಗರ, ಆ. 14 (ಕರ್ನಾಟಕ ವಾರ್ತೆ):- ಸಾಮಾಜಿಕ ಸಮಾನತೆಯ ಹರಿಕಾರ, ಹಿಂದುಳಿದ ವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಇಂದು ಜಿಲ್ಲೆಗೆ ಆಗಮಿಸಿದ ಅರಸು ಅವರ ಪ್ರಮುಖ ಸಾಧನೆಗಳನ್ನು ಬಿಂಬಿಸುವ ಮಾಹಿತಿಯನ್ನು ಒಳಗೊಂಡ ಅತ್ಯಾಕರ್ಷಕ ರಥಯಾತ್ರೆಗೆ ಅದ್ದೂರಿ ಸ್ವಾಗತ ನೀಡಲಾಯಿತು. ಮೊದಲಿಗೆ ಜಿಲ್ಲೆಯ ಟಗರುಪುರಮೋಳೆ ಬಳಿ ಅರಸು ರಥಯಾತ್ರೆಗೆ ಕೊಳ್ಳೇಗಾಲ ತಾಲ್ಲೋಕು ಪಂಚಾಯತ್ ಅಧ್ಯಕ್ಷರಾದ ರಾಜು, ಜಿಲ್ಲಾ ಪರಿಶಿಷ್ಟವರ್ಗಗಳ ಕಲ್ಯಾಣ ಅಧಿಕಾರಿ ಸಿ.ಶಿವಕುಮಾರ್ ತಾಲ್ಲೋಕು ಪಂಚಾಯತ್ ಕಾರ್ಯನಿರ್ವಹಕ ಅಧಿಕಾರಿ ರೇವಣ್ಣ, ಸಮಾಜ ಕಲ್ಯಾಣ ಆಧಿಕಾರಿ ಇತರರು ಅರಸು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬರಮಾಡಿಕೊಂಡರು. ಇದೆ ವೇಳೆ ದೇವರಾಜ ಅರಸು ಜನ್ಮ ಶತಮಾನೊತ್ಸವ ಸಮಿತಿಯ ಸಂಚಾಲಕರಾದ ಎಚ್.ಎ.ವೆಂಕಟೇಶ್ ಮಾತನಾಡಿ. ಅರಸು ಅವರು ರಾಜ್ಯದ ಶೋಷಿತರು,ದೀನದಲಿತರು ಸೇರಿದಂತೆ ಬಹುತೇಕ ಜನರ ಅಭಿವೃದಿಗಾಗಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದರು.ಅವರ ಸಾಧನೆಯನ್ನು ತಿಳಿಸುವ ಉದ್ದೇಶದೊಂದಿಗೆ ರಥಯಾತ್ರೆ ರಾಜ್ಯದ ಎಲ್ಲೆಡೆ ಸಂಚರಿಸುತ್ತಿದೆ.ಆಗಸ್ಟ್ 20ರಂದು ಅರಸುಅವರ ಜನ್ಮ ಶತಮಾನೊತ್ಸವ ಸಮಾರಂಭವನ್ನು ವಿಭಿನ್ನವಾಗಿ ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಬಳಿಕ ರಥಯಾತ್ರೆಯು ಚಿಲಕವಾಡಿ, ಕುಂತೂರು ಜಂಕ್ಷನ್, ಉತ್ತಂಬಳ್ಳಿ, ಮದ್ದೂರು, ಅಗರ-ಮಾಂಬಳ್ಳಿ, ಯರಿಯೂರು ಮೂಲಕ ಯಳಂದೂರು ಪಟ್ಟಣಕ್ಕೆ ಬಂದು ಸೇರಿತು. ಜಿಲ್ಲಾ ಪಂಚಾಯಿತ್ ಸದಸ್ಯರಾದ ಯೋಗೇಶ್ ಇತರೆ ಗಣ್ಯರು ಅರಸು ಅಭಿಮಾನಿಗಳು ಭವ್ಯ ಸ್ವಾಗತ ನೀಡಿದರು. ಯಳಂದೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ರಥಯಾತ್ರೆ ಸಂಚರಿಸಿ ಸಂತೇಮರಹಳ್ಳಿ ಮೂಲಕ ಜಿಲ್ಲಾ ಕೇಂದ್ರಕ್ಕೆ ಆಗಮಿಸಿತು. ನಗರದ ಕೇಂದ್ರಿಯ ವಿದ್ಯಾಲಯದ ಬಳಿ ಅರಸು ರಥಯಾತ್ರೆಯನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅÀವರು ಸ್ವಾಗತಿಸಿ ರಥ ಸಂಚಾರಕ್ಕೆ ಚಾಲನೆ ನೀಡಿದರು. ಪಟಾಕಿ ಸಿಡಿಸಿ ಅದ್ದೂರಿಯಾಗಿ ಬರಮಾಡಿಕೊಂಡ ರಥಯಾತ್ರೆ ಚಾಮರಾಜನಗರ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಮುಂದುವರೆಸಿತು. ನಗರಸಭೆ ಅಧ್ಯಕ್ಷರಾದ ರೇಣುಕಾ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್,ಜಿ.ಪಂ ಸದಸ್ಯರಾದ ಸಿ.ಎನ್.ಬಾಲರಾಜು, ತಾ.ಪಂ.ಅಧ್ಯಕ್ಷರಾದ ಎಚ್.ವಿ.ಚಂದ್ರು, ನಗರಸಭೆ ಸದಸ್ಯರಾದ ಸಿ.ಕೆ.ಮಂಜುನಾಥ್, ಮುಖಂಡರಾದ ಚಿಕ್ಕಮಹದೇವು,ಶಿವಕುಮಾರ್,ಶಾ.ಮುರಳಿ,ಗು.ಪುರುಷೋತ್ತಮ್, ಚಾ.ಹ.ಶಿವರಾಜು, ಜಯಕುಮಾರ್, ಇತರರು,ಜಿ.ಪಂ ಸಿ.ಇ.ಓ ಹೆಪ್ಸಿಭಾರಾಣಿ ಕೊರ್ಲಪಾಟಿ ಇತರೆ ಆಧಿಕಾರಿಗಳು ಹಾಜರಿದ್ದು ರಥಯಾತ್ರೆಯಲ್ಲಿ ಸಾಗಿದರು. ಜಿಲ್ಲಾಡಳಿತ ಭವನ ಆವರಣ ಬಳಿ ರಥಯಾತ್ರೆ ಮುಕ್ತಾಯವಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅರಸು ಅವರು ದೀರ್ಘಕಾಲ ಮುಖ್ಯಮಂತ್ರಿಯಾಗಿ ಅಳ್ವಿಕೆ ನಡೆಸಿದರು.ಅವರ ಅವದಿಯಲ್ಲಿ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೆ ಬಂದವು. ವೃದ್ದಾಪ್ಯ ವೇತನ ಬಡವರಿಗೆ ಸೂರು, ನಿರುದ್ಯೋಗಿ ಅಭ್ಯರ್ಥಿಗಳಿಗೆ ಸ್ಟ್ಯಪಂಡರಿ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಅರಸುಅವರು ಅನುಷ್ಟಾನಕ್ಕೆ ತಂದರು ಎಂದರು. ಜಿ.ಪಂ. ಸ್ಯಾಯಿಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ ಮಾತನಾಡಿ ಅರಸುಅವರು ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿದರು ಅವರ ಸಾಧನೆಯ ಹೆಜ್ಜೆಗಳನ್ನು ಸ್ಮರಿಸಬೇಕಿದೆ ಎಂದರು. ಆ. 15ರಂದು ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ದಿನಾಚರಣೆ ಚಾಮರಾಜನಗರ, ಆ. 14 (ಕರ್ನಾಟಕ ವಾರ್ತೆ):– ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 70ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಧ್ವಜಾರೋಹಣ ನೆರವೇರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವÀಹಿಸುವರು. ವಿಧಾನ ಪರಿಷತ್‍ನ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜ್), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕಾ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳುವರು. ಸಂಜೆ 5.30 ಗಂಟೆಗೆ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ. ಸಂಜೆ 5.30 ರಿಂದ 6.30ರವರೆಗೆ ಜ್ಯೋತಿಗೌಡನಪುರದ ಜೆ.ಬಿ. ಮಹೇಶ್ ಮತ್ತು ತಂಡದವರಿಂದ ದೇಶಭಕ್ತಿ ಗೀತೆ ಗಾಯನ, ಸಂಜೆ 6.30 ರಿಂದ 7.30ರವರೆಗೆ ಶಾಲಾಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. 7.30 ರಿಂದ 8.30ರವರೆಗೆÉ ಮೈಸೂರಿನ ನಿಮಿಶಾಂಭ ನೃತ್ಯಾಲಯದ ಆಪ್ತಮಿತ್ರ ಖ್ಯಾತಿಯ ವಿದ್ವಾನ್ ಶ್ರೀಧರ್ ಜೈನ್ ಮತ್ತು ತಂಡದವರು ಭಾರತೀಯ ನೃತ್ಯ ವೈಭವ ಕುರಿತ ನೃತ್ಯ ರೂಪಕ ಪ್ರಸ್ತುತ ಪಡಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಮುಖ್ಯಮಂತ್ರಿಯವರ 50 ಕೋಟಿ ರೂ. ವಿಶೇಷ ಅನುದಾನ: ಕಾಮಗಾರಿ ಅನುಷ್ಟಾನ ಪ್ರಕ್ರಿಯೆಗೆ ಉಸ್ತುವಾರಿ ಸಚಿವರ ಗಡುವು ಚಾಮರಾಜನಗರ, ಆ. 15 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣ ಅಭಿವೃದ್ಧಿಗೆ ಮುಖ್ಯಮಂತ್ರಿಯವರು ಪ್ರಸಕ್ತ ಆಯವ್ಯಯದಲ್ಲಿ ನಿಗದಿ ಮಾಡಿರುವ 50 ಕೋಟಿ ರೂ. ವಿಶೇಷ ಅನುದಾನದಡಿ ಕೈಗೊಳ್ಳಬೇಕಿರುವ ಕಾಮಗಾರಿ ಅನುಷ್ಠಾನಕ್ಕೆ ಅಗತ್ಯ ಪ್ರಕ್ರಿಯೆಯನ್ನು ಇನ್ನು 15 ದಿನದೊಳಗೆ ಪೂರೈಸುವಂತೆ ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಚಾಮರಾಜನಗರ ಪಟ್ಟಣ ಅಭಿವೃದ್ಧಿಗೆ ನಿಗಧಿಯಾಗಿರುವ 50 ಕೋಟಿ ರೂ. ವಿಶೇಷ ಅನುದಾನಕ್ಕೆ ತಯಾರಿಸಿರುವ ಕ್ರಿಯಾಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚಾಮರಾಜನಗರ ನಗರಸಭೆಗೆ ಪಟ್ಟಣದ ಪ್ರಗತಿಗಾಗಿ 50 ಕೋಟಿ ರೂ. ವಿಶೇಷ ಅನುದಾನ ಲಭ್ಯವಾಗುತ್ತಿದೆ. ಈ ಅನುದಾನದಲ್ಲಿ ನಗರದ ಪ್ರಮುಖ ಕಾಮಗಾರಿಗಳನ್ನು ಕೈಗೊಂಡು ಪಟ್ಟಣವನ್ನು ವಿಶೇಷವಾಗಿ ಅಭಿವೃದ್ಧಿ ಪಡಿಸಬೇಕಿದೆ. ಅನುದಾನ ಬಳಸಿ ಕೈಗೊಳ್ಳಬಹುದಾದ ವಿವಿಧ ಕಾಮಗಾರಿಗೆ ಸಿದ್ಧಪಡಿಸಿರುವ ಕ್ರಿಯಾಯೋಜನೆಯಂತೆ ಅನುಷ್ಠಾನಕ್ಕೆ ತರಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಸಚಿವರು ತಿಳಿಸಿದರು. ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಉಳಿಕೆ ಕಾಮಗಾರಿಗಾಗಿ ಮುಖ್ಯಮಂತ್ರಿಯವರ ವಿಶೇಷ ಅನುದಾನವನ್ನು ಬಳಕೆ ಮಾಡಿಕೊಂಡು ಕ್ರೀಡಾಂಗಣವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು. ಪೆವಿಲಿಯನ್, ಈಜುಕೊಳ, ಹೆಲಿಪ್ಯಾಡ್ ಕಂ ಸ್ಕೇಟಿಂಗ್ ಟ್ರ್ಯಾಕ್, ಜಿಮ್ನಾಶಿಯಂ, ಕುಸ್ತಿ ಅಖಾಡ, ಫ್ಲಡ್‍ಲೈಟ್, ಶಾಶ್ವತ ವೇದಿಕೆ, ಪ್ರೇಕ್ಷಕರ ಆಸನ ಕಾಮಗಾರಿಯನ್ನು ಕ್ಯಗೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಸಿಂಥೆಟಿಕ್ ಟ್ರ್ಯಾಕ್ ಕೆಲಸವು ಕ್ರೀಡಾಂಗಣದಲ್ಲಿ ಪ್ರಗತಿಯಲ್ಲಿದೆ. ಇದು ಪೂರ್ಣಗೊಂಡರೆ 8 ಆಟೋಟ ಗಳಿಗೆ ಅವಕಾಶವಾಗಲಿದೆ. ವಿಶೇಷ ಅನುದಾನದಲ್ಲಿ ಇತರೆ ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಸ್ಥಳವಾಗಿ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸಬೇಕು ಎಂದರು. ಜಿಲ್ಲಾ ಉಸ್ತುವಾರಿ ಸಚಿವರು ಮಾತನಾಡಿ ಜಿಲ್ಲಾ ಕ್ರೀಡಾಂಗಣದಲ್ಲಿ ಎಲ್ಲ ಬಗೆಯ ಕ್ರೀಡೆಗಳಿಗೆ ಅವಕಾಶವಾಗುವಂತೆ ಪೂರಕವಾಗಿ ಕಾಮಗಾರಿ ಕೈಗೊಳ್ಳಬೇಕು. ಇದರಿಂದ ಉನ್ನತ ಮಟ್ಟದ ಕ್ರೀಡಾಕೂಟಗಳನ್ನು ಜಿಲ್ಲಾ ಕೇಂದ್ರದಲ್ಲಿ ಆಯೋಜಿಸಬಹುದು. ಹೊರಗಿನ ಕ್ರೀಡಾಪಟುಗಳು ಪಾಲ್ಗೊಳ್ಳಬಹುದಾಗಿದೆ. ಕ್ರೀಡೆಗೆ ಹೆಚ್ಚು ಉತ್ತೇಜನ ನೀಡಿದಂತಾಗುತ್ತದೆ. ಹೀಗಾಗಿ ಕ್ರೀಡಾ ಕಾಮಗಾರಿ ತಜ್ಞರ ಮಾರ್ಗದರ್ಶನದಲ್ಲಿ ಬಹುಪಯೋಗಿ ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಕಾಮಗಾರಿ ಕೈಗೊಳ್ಳಬೇಕೆಂದು ತಿಳಿಸಿದರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಕ್ರೀಡಾಂಗಣದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಾಲಮಿತಿಯೊಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎಂದರು. ಮುಂದುವರೆದು ಮಾತನಾಡಿದ ಸಚಿವರು ನಗರದ ದೊಡ್ಡ ಅರಸನ ಕೊಳದ ಅಭಿವೃದ್ಧಿಯನ್ನು ವಿಶೇಷ ಅನುದಾನದಡಿ ಕೈಗೊಳ್ಳಬೇಕು. ಕಲ್ಯಾಣಿ, ಮೆಟ್ಟಿಲುಗಳು, ಇದರ ಸುತ್ತಲ ಪ್ರದೇಶವನ್ನು ಅಭಿವೃದ್ಧಿಪಡಿಸಬೇಕು. ಧ್ವನಿ-ಬೆಳಕಿನ ವ್ಯವಸ್ಥೆಯನ್ನು ಈಗಾಗಲೇ ಪಾರಂಪರಿಕ ನಗರಗಳಲ್ಲಿ ಕೈಗೊಂಡಿರುವಂತೆ ಇಲ್ಲಿಯೂ ಅಳವಡಿಸಬಹುದು. ನಗರದ ಪ್ರಮುಖ ಆಕರ್ಷಣೀಯ ತಾಣವನ್ನಾಗಿ ಮಾರ್ಪಾಡು ಮಾಡಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ತಿಳಿಸಿದರು. ಇದೇ ಸಂದರ್ಭದಲ್ಲಿ ಕಲ್ಯಾಣಿ ಅಭಿವೃದ್ಧಿಗಾಗಿ ವಾಸ್ತುಶಿಲ್ಪಿ ತಯಾರಿಸಿರುವ ಪವರ್ ಪಾಯಿಂಟ್ ಮಾದರಿಯನ್ನು ಸಚಿವರು ವೀಕ್ಷಿಸಿದರು. ಅಲ್ಲದೆ, ಹೆಸರಾಂತ ಪಾರಂಪರಿಕ ಸ್ಥಳಗಳಲ್ಲಿ ಧ್ವನಿ-ಬೆಳಕಿನ ವ್ಯವಸ್ಥೆ ಅಳವಡಿಸಿರುವ ಬಗ್ಗೆಯು ವಿವರವಾದ ಮಾಹಿತಿಯನ್ನು ಸಭೆಯಲ್ಲಿ ನೀಡಲಾಯಿತು. ಜಿಲ್ಲಾಡಳಿತ ಭವನದ ಬಳಿಯಿರುವ ರಂಗಮಂದಿರದ ಉಳಿದ ಅಗತ್ಯ ಕಾಮಗಾರಿಯನ್ನು ವಿಶೇಷ ಅನುದಾನದಲ್ಲಿ ನಿರ್ವಹಿಸುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು. ಈ ವೇಳೆ ಮಾತನಾಡಿದ ಉಸ್ತುವಾರಿ ಸಚಿವರು ಪ್ರಸ್ತುತ ನಿರ್ಮಾಣ ವಾಗಿರುವ ರಂಗಮಮದಿರದಲ್ಲಿ ಪ್ರೇಕ್ಷಕರ ಅಸನಗಳ ಸಂಖ್ಯೆಯನ್ನು ಹೆಚ್ಚು ಮಾಡಬೇಕಿದೆ. ಅಕೋಸ್ಟಿಕ್, ವೇದಿಕೆ ಇನ್ನಿತರ ಅವಶ್ಯಕ ವ್ಯವಸ್ಥೆ ಅಳವಡಿಕೆಯನ್ನು ಪೂರ್ಣ ಮಾಡಬೇಕು ಎಂದರು. ವಿಶೇಷ ಅನುದಾನದಡಿ ಚಾಮರಾಜೇಶ್ವರ ದೇವಾಲಯ ಅಭಿವೃದ್ಧಿ, ಖಾಸಗಿ ಬಸ್ ನಿಲ್ದಾಣ, ಮಾರುಕಟ್ಟೆ ಸಂಕೀರ್ಣ, ಸಂತೇಮರಹಳ್ಳಿ ವೃತ್ತದ ಬಳಿ ವಾಣಿಜ್ಯ ಸಮುಚ್ಚಯ, ನ್ಯಾಯಾಲಯ ರಸ್ತೆಯಲ್ಲಿ ಚರಂಡಿ ನಿರ್ಮಾಣ, ಅನ್ವರ್ ಪಾಷ ಕಲ್ಯಾಣ ಮಂಟಪದ ಮುಂಭಾಗದಲ್ಲಿ ಸಿ. ಸಿ. ರಸ್ತೆ ಅಭಿವೃದ್ಧಿ ಚರಂಡಿ ನಿರ್ಮಾಣ, ಅರಳುಕೋಟೆಗೆ ಹೋಗುವ ರಸ್ತೆ, ನಗರಸಭೆ ವ್ಯಾಪ್ತಿಯ ವಿವಿಧೆಡೆ ರಸ್ತೆ, ಚರಂಡಿ ನಿರ್ಮಾಣ, ಪಟ್ಟಣ ಗಡಿಯಲ್ಲಿ ಸ್ವಾಗತ ಕಮಾನುಗಳ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಯಿತು. ನಗರಸಭೆ ಅಧ್ಯಕ್ಷರಾದ ರೇಣುಕಾಮಲ್ಲಿಕಾರ್ಜುನ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್.ಆರ್,ಜೈನ್, ಜಿಲ್ಲಾ ನಗರಾಬಿವೃದ್ಧಿ ಕೋಶದ ನಿರ್ದೇಶಕರಾದ ನಿರಂಜನಮೂರ್ತಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಇನಾಯತ್ ಉಲ್ಲಾ ಷರೀಫ್, ನಗರಸಭೆ ಆಯುಕ್ತರಾದ ರಾಜಣ್ಣ, ಕೆ.ಆರ್.ಐ.ಡಿ.ಎಲ್. ಉಪನಿರ್ದೇಶಕರಾದ ನಟೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾದ ಆರ್. ಸರಸ್ವತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚಲುವಯ್ಯ, ಇತರೆ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು. ಗ್ರಾ ಪಂ ಚುನಾವಣೆ: ನಾಮಪತ್ರ ಸಲ್ಲಿಕೆಗೆ ಆಗಸ್ಟ್ 19 ಕಡೆಯ ದಿನ ಚಾಮರಾಜನಗರ, ಆ. 15 (ಕರ್ನಾಟಕ ವಾರ್ತೆ):- ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಗ್ರಾಮ ಪಂಚಾಯಿತಿಯ ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗಧಿಯಾಗಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 19 ಕಡೆಯ ದಿನವಾಗಿದೆ. ಆಗಸ್ಟ್ 16 ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವು ಅಧಿಸೂಚನೆ ಪ್ರಕಟಣೆಯ ದಿನಾಂಕದ ತರುವಾಯ ಬರುವ 3ನೇಯ ದಿನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು