Monday, 19 September 2016

12-09-2016 ರಿಂದ 19-09-2016 ರವರೆಗೆ ಚಾಮರಾಜನಗರದ ಪ್ರಮುಖ ಸುದ್ದಿಗಳು






ಹಂತಹಂತವಾಗಿ ರಸ್ತೆಗಳ ಅಭಿವೃದ್ಧಿ : ಜಿಲ್ಲಾ ಉಸ್ತುವಾರಿ ಸಚಿವರಾದ ಮಹದೇವಪ್ರಸಾದ್

ಚಾಮರಾಜನಗರ, ಸೆ. 12 (ಕರ್ನಾಟಕ ವಾರ್ತೆ):- ಅನುದಾನ ಲಭ್ಯತೆಗೆ ಅನುಸಾರವಾಗಿ ಹಂತಹಂತವಾಗಿ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದು ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ತಾಲೂಕಿನ ಹರವೆ ಹೋಬಳಿ ಕೇಂದ್ರದಲ್ಲಿ ಇಂದು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಹರವೆಯಿಂದ ತಮ್ಮಡಹಳ್ಳಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ, ಮೊರಾರ್ಜಿ ಶಾಲೆ ಪ್ರಾರಂಭೋತ್ಸವ ಹಾಗೂ ಪದವಿಪೂರ್ವ ಕಾಲೇಜು ಹೆಚ್ಚುವರಿ ಕೊಠಡಿಯ ನಿರ್ಮಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಊರು, ನಗರ ಬೆಳವಣಿಗೆಯನ್ನು ಅಲ್ಲಿಯ ರಸ್ತೆ ಅಭಿವೃದ್ಧಿಯಿಂದ ಗಮನಿಸಲಾಗುತ್ತದೆ. ಪಟ್ಟಣ ಗ್ರಾಮಾಂತರ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸೌಲಭ್ಯ ಒದಗಿಸುವುದು ಮುಖ್ಯವಾಗಿದೆ. ಹೀಗಾಗಿ ಅನುದಾನ ಲಭ್ಯತೆಗೆ ಅನುಗುಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.
ಪ್ರಸ್ತುತ ಚಾಲನೆ ನೀಡಿರುವ ಹರವೆ-ತಮ್ಮಡಹಳ್ಳಿ ರಸ್ತೆಯನ್ನು 4.57 ಕಿ.ಮೀ. ಉದ್ದದವರೆಗೆ 238.74 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಒಟ್ಟು 175.30 ಲಕ್ಷ ರೂ.ಗಳನ್ನು ರಸ್ತೆ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತದೆ. 63.44 ಲಕ್ಷ ರೂ. ವೆಚ್ಚದಲ್ಲಿ 5 ವರ್ಷಗಳ ಕಾಲ ರಸ್ತೆಯನ್ನು ನಿರ್ವಹಣೆ ಮಾಡಲಿದ್ದು 6ನೇ ವರ್ಷ ಪುನರ್ ಡಾಂಬರೀಕರಣ ಮಾಡಲಾಗುತ್ತದೆ. ನಮ್ಮ ಗ್ರಾಮ- ನಮ್ಮ ರಸ್ತೆ ಯೋಜನೆಯಡಿ ಈ ಕಾಮಗಾರಿ ನಿರ್ವಹಿಸಲಾಗುತ್ತದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಹರವೆ ಹೋಬಳಿಯು ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ನಂಜನಗೂಡು ತಾಲೂಕು ಸಂಪರ್ಕಿಸುವ ಕೇಂದ್ರಸ್ಥಾನವಾಗಿದೆ. ಹರವೆ ಮೂಡ್ನಾಕೂಡು ಜಂಕ್ಷನ್‍ನಿಂದ ಕುಲಗಾಣಕ್ಕೆ ಸಾಗುವ ರಸ್ತೆಯನ್ನೂ ಸಹ ಕೈಗೆತ್ತಿಕೊಳ್ಳಲಾಗುತ್ತದೆ. ಇನ್ನೊಂದು ವರ್ಷದಲ್ಲಿ ಈ ಕೆಲಸ ಕಾರ್ಯಗತವಾಗಲಿದೆ. ತಮ್ಮಡಹಳ್ಳಿಯಿಂದ ಹಳೇಪುರ ಸಂಪರ್ಕಿಸುವ ರಸ್ತೆ ಅಭಿವೃದ್ಧಿಯನ್ನೂ ಸಹ ಕೈಗೊಳ್ಳಲಾಗುವುದು ಎಂದರು. 
ಶಿಕ್ಷಣ ಬಹಳ ಮಹತ್ತರವಾಗಿದ್ದು ಮಕ್ಕಳಿಗೆ ವಿದ್ಯಾಭ್ಯಾಸದ ಸೌಲಭ್ಯವನ್ನು ವಸತಿಯುಕ್ತವಾಗಿ ಒದಗಿಸಬೇಕೆಂಬ ಉದ್ದೇಶದಿಂದ ಪ್ರತೀ ಹೋಬಳಿಯಲ್ಲೂ ಮೊರಾರ್ಜಿ ಶಾಲೆಗಳನ್ನು ತೆರೆಯಲಾಗುತ್ತಿದೆ. ನವೋದಯ ಮಾದರಿಯಲ್ಲಿ ಮೊರಾರ್ಜಿ ಶಾಲೆಗಳಿಗೂ ಉತ್ತಮ ಸೌಲಭ್ಯ ನೀಡಿ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಪ್ರಸ್ತುತ ಹರವೆಯಲ್ಲೂ ಇಂದಿನಿಂದ 50 ವಿದ್ಯಾರ್ಥಿಗಳು ವ್ಯಾಸಂಗ ಮಾಡಬಹುದಾದ ಮೊರಾರ್ಜಿ ಶಾಲೆಯನ್ನು ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಪ್ರಾರಂಭಿಸಲಾಗಿದೆ. ಕಟ್ಟಡ ನವೀಕರಣಕ್ಕೆ 25 ಲಕ್ಷ ರೂ. ವೆಚ್ಚ ಮಾಡಲಾಗಿದೆ. ಇದುವರೆಗೆ 27 ವಿದ್ಯಾರ್ಥಿಗಳು ಮೊರಾರ್ಜಿ ಶಾಲೆಗೆ ಪ್ರವೇಶ ಪಡೆದಿದ್ದಾರೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಹರವೆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಳ್ಳಿಗಳಿಗೆ ನದಿ ಮೂಲದಿಂದ ಶಾಶ್ವತ ಕುಡಿಯುವ ನೀರಿನ ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಡಿಸೆಂಬರ್ ವೇಳೆಗೆ ನೀರು ಪೂರೈಸುವ ಪ್ರಾಯೋಗಿಕ ಕಾರ್ಯ ನಡೆಯಲಿದೆ. ಮಾರ್ಚ್ ಅಂತ್ಯದ ವೇಳೆಗೆ ಯೋಜನೆ ಪೂರ್ಣವಾಗಲಿದ್ದು ಬಳಿಕ ನೇರವಾಗಿ ಗ್ರಾಮಗಳಿಗೆ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್ ಮಾತನಾಡಿ ಮೊರಾರ್ಜಿ ಶಾಲೆ ಹರವೆಯಲ್ಲಿ ಪ್ರಾರಂಭವಾಗಿರುವುದು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.  ಹೋಬಳಿಯಾದ್ಯಂತ ಹಲವಾರು ಅಭಿವೃದ್ಧಿ ಕಾರ್ಯಗಳು  ನಡೆಯುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವರು ಕಾಳಜಿಯಿಂದ ಪ್ರಗತಿಪರ ಕೆಲಸಗಳನ್ನು ಮಾಡುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಮುಂದಾಗಿದ್ದೇವೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಸದಸ್ಯರಾದ ಬಿ.ಎಸ್. ರೇವಣ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಟ್ಟಮ್ಮ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ನಾಗಸುಂದರಮ್ಮ, ಮುಖಂಡರಾದ ಗುರುಸಿದ್ದೇಗೌಡ, ಪಿ. ಮರಿಸ್ವಾಮಿ, ಮುಕ್ಕಡಹಳ್ಳಿ ರವಿಕುಮಾರ್, ಆನಂದ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್, ಪಿಎಂಜಿಎಸ್‍ವೈ ಎಂಜಿನಿಯರ್ ಮಹದೇವಸ್ವಾಮಿ, ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಾರಿ ವಾಹನ ಚಾಲನಾ ತರಬೇತಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 12 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮೂಲಕ ಭಾರಿ ವಾಹನ ಚಾಲನಾ ತರಬೇತಿಯನ್ನು ನೀಡಲಿದ್ದು ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಭಾರಿ ವಾಹನ ಚಾಲನಾ ತರಬೇತಿಯನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ತೇರ್ಗಡೆಯಾಗಿರಬೇಕು. 21 ರಿಂದ 35ರ ವಯೋಮಿತಿಯೊಳಗಿರಬೇಕು. 35 ವರ್ಷ ವಯೋಮಿತಿ ಮೀರುತ್ತಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಕನಿಷ್ಟ 160 ಸೆಂ.ಮೀ. ಎತ್ತರ, 50 ಕೆಜಿ ತೂಕವಿರಬೇಕು. ಅಂಗವಿಕಲರಾಗಿರಬಾರದು. ದೈಹಿಕ ಅರ್ಹತೆ ಪ್ರಮಾಣ ಪತ್ರವನ್ನು ಜಿಲ್ಲಾ ವೈದ್ಯಾಧಿಕಾರಿಗಳಿಂದ ದೃಢೀಕರಿಸಿರಬೇಕು. ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು. ಲಘು ವಾಹನ ಪರವಾನಗಿ ಪಡೆದು ಒಂದು ವರ್ಷ ತುಂಬಿರಬೇಕು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ (ಕೊಠಡಿ ಸಂಖ್ಯೆ 121) ಯಲ್ಲಿ ಪಡೆದು ಭರ್ತಿ ಮಾಡಿ ಎಲ್ ಎಂ ವಿ ಲೈಸೆನ್ಸ್, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಇತರೆ ದಾಖಲೆಗಳನ್ನು ಲಗತ್ತಿಸಿ ಸೆಪ್ಟೆಂಬರ್ 22ರೊಳಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗುಂಡ್ಲುಪೇಟೆ : ಡಾ. ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ಸಹಾಯಧನಕ್ಕೆ ಪರಿಶಿಷ್ಟರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಸೆ. 12 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆ ಪುರಸಭೆಯು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಸತಿರಹಿತರಿಗೆ ಮನೆ ನಿರ್ಮಿಸಿಕೊಳ್ಳಲು ನೀಡುವ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.
ಸಹಾಯಧನವಾಗಿ 1.80 ಲಕ್ಷ ರೂ.ನ್ನು ಹಂತಹಂತವಾಗಿ ನೀಡಲಾಗುತ್ತದೆ.
ಅರ್ಜಿದಾರರ ವಾರ್ಷಿಕ ಆದಾಯ 3 ಲಕ್ಷ ರೂ.ಗಿಂತ ಕಡಿಮೆ ಇರಬೇಕು. ಸ್ವಂತ ನಿವೇಶನ ಹೊಂದಿದ್ದು ಸಂಬಂಧಿಸಿದ ಖಾತೆ ಹೊಂದಿರಬೇಕು. ವಸತಿರಹಿತ ಕುಟುಂಬವಾಗಿದ್ದು ಪಟ್ಟಣದಲ್ಲಿ 3 ವರ್ಷಗಳಿಂದ ವಾಸಿಸುತ್ತಿರಬೇಕು. ಸಾರ್ವಜನಿಕ ಸ್ಥಳ, ತಾತ್ಕಾಲಿಕ ಶೆಡ್, ಶಿಥಿಲವಾದ ಮನೆ ಅಥವಾ ಕಚ್ಚಾಮನೆಗಳಲ್ಲಿ ವಾಸಿಸುತ್ತಿರಬೇಕು. 4 ಕ್ಕಿಂತ ಹೆಚ್ಚು ಸದಸ್ಯರು ಇರಬೇಕು.
ಅರ್ಜಿಯನ್ನು ಪುರಸಭೆ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ಸೆಪ್ಟೆಂಬರ್ 25ರ ಒಳಗೆ ಸಲ್ಲಿಸಬೇಕು. ವಿವರಗಳಿಗೆ ಪುರಸಭೆ ಕಾರ್ಯಾಲಯ ಸಂಪರ್ಕಿಸುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.


ಸೆ. 16, 17ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ
ಚಾಮರಾಜನಗರ, ಸೆ. 12 (ಕರ್ನಾಟಕ ವಾರ್ತೆ):- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ  ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ್ 16 ಹಾಗೂ 17ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಪುರುಷರ ವಿಭಾಗದಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ. ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4*100 ಮೀ. ರಿಲೇ, 4*400 ಮೀ. ರಿಲೇ ಸ್ಪರ್ಧೆಗಳಿವೆÉ.
ಮಹಿಳೆಯರ ವಿಭಾಗದಲ್ಲಿ 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ. ಓಟ, ಉದ್ದಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಎಸೆತ, ಡಿಸ್ಕಸ್ ಎಸೆತ, 4*100 ಮೀ. ರಿಲೇ, 4*400 ಮೀ. ರಿಲೇ, ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳಿವೆ.
ಗುಂಪು ಆಟಗಳಲ್ಲಿ ವಾಲಿಬಾಲ್, ಕಬ್ಬಡಿ, ಖೋಖೋ, ಫುಟ್ ಬಾಲ್ (ಪುರುಷರಿಗೆ), ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಬ್ಯಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್ ಸ್ಪರ್ಧೆಗಳಿವೆ. ಜಿಲ್ಲಾಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ವಿಭಾಗಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಲಿದ್ದಾರೆ.
ಭಾಗವಹಿಸುವ ಕ್ರೀಡಾಪಟುಗಳು ಆಧಾರ್ ಕಾರ್ಡ್, ಪಡಿತರ ಚೀಟಿ, ವಾಹನ ಪರವಾನಗಿ, ಮತದಾರರ ಗುರುತಿನ ಚೀಟಿ ಪೈಕಿ ಯಾವುದಾದರೂ ಒಂದನ್ನು ತರಬೇಕು. 2 ಭಾವಚಿತ್ರ ಹಾಜರುಪಡಿಸಿ ಗುರುತಿನ ಚೀಟಿ ಪಡೆದುಕೊಳ್ಳಬೇಕು. ಆಯಾ ದಿನಾಂಕದಂದು ಸ್ಪರ್ಧೆಯಲ್ಲಿ ಭಾಗವಹಿಸಬಹುದು.
ವಿಭಾಗಮಟ್ಟದ ದಸರಾ ಕ್ರೀಡಾಕೂಟವು ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸೆಪ್ಟೆಂಬರ್ 17 ಮತ್ತು 18ರಂದು ನಡೆಯಲಿದ್ದು ಫುಟ್ಬಾಲ್, ಖೋಖೋ ಸ್ಪರ್ಧೆಗಳು ಇರಲಿವೆ. ಮೂಡುಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ಥ್ರೋಬಾಲ್, ನೆಟ್ ಬಾಲ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆ ನಡೆಯಲಿದೆ. ಉಡುಪಿಯ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 23ರಿಂದ 24ರವರೆಗೆ ಅಥ್ಲೆಟಿಕ್ಸ್ ಲಾನ್ ಟೆನಿಸ್, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಈಜು, ಕಬ್ಬಡಿ, ಟೇಬಲ್ ಟೆನಿಸ್, ಷಟಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳು ನಡೆಯಲಿವೆ. ಹ್ಯಾಂಡ್ ಬಾಲ್ ಸ್ಪರ್ಧೆಯು ಸೆಪ್ಟೆಂಬರ್ 23ರಂದು ಬೆಳಿಗ್ಗೆ 9 ಗಂಟೆಗೆ ಮೂಡುಬಿದರೆಯ ಆಳ್ವಾಸ್ ಕ್ಯಾಂಪಸ್‍ನಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಥವಾ ದೂರವಾಣಿ ಸಂಖ್ಯೆ 08226-224932, ಮೊಬೈಲ್ 9611172984, 9482718278, 9880211027 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



ಚಾಮರಾಜನಗರ ಜಿಲ್ಲಾ ಪೊಲೀಸ್ ಪ್ರಕಟಣೆ
    ಕಾವೇರಿ ಜಲವಿವಾದದ ತೀರ್ಪನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು, ಧರಣಿಗಳು ನಡೆದಿದ್ದು, ಚಾಮರಾಜನಗರ ಜಿಲ್ಲೆಯಲ್ಲೂ ಸಹ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಹಾಗೂ ಹಲವು ಸಂಘಸಂಸ್ಥೆಗಳು ಶಾಂತರೀತಿಯಿಂದ ಪ್ರತಿಭಟಿಸಿ ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಯು ಹದಗೆಡದಂತೆ ಸೌಹಾರ್ಧಯುತವಾಗಿ ವರ್ತಿಸಿರುತ್ತಾರೆ. ಜಿಲ್ಲಾ ಪೊಲೀಸರು ನೀಡಿದ ಎಲ್ಲಾ ಮನವಿಗಳನ್ನು ವಿನಮ್ರವಾಗಿ ಪಾಲಿಸಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಇರುವುದು ಸಂತಸದ ವಿಷಯವಾಗಿರುತ್ತದೆ. ಎಲ್ಲರ ಸಹಕಾರವನ್ನು ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಸ್ಮರಿಸಲಾಗಿದೆ. ಈ ಸಂಬಂಧ ಹಗಲಿರುಳು ಶ್ರಮಿಸಿದ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ಗೃಹ ರಕ್ಷಕರು, ಅಗ್ನಿಶಾಮಕ ದಳ, ಆಂಬುಲೆನ್ಸ್, ವೈದ್ಯೋಪಚಾರ ವಿಭಾಗಗಳ ಸೇವೆಗೆ ಹಾಗೂ ವಿಶೇಷವಾಗಿ ಸುದ್ದಿ ಮಾದ್ಯಮಗಳಿಗೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಆಬಾರಿಯಾಗಿರುತ್ತದೆ. 
ದಿನಾಂಕ: 12-09-2016 ರಂದು ರಾತ್ರಿ ಕೊಳ್ಳೇಗಾಲ ತಾಲ್ಲೂಕು, ರಾಮಾಪುರ ಠಾಣಾ ಸರಹದ್ದು ಗೋಪಿಶೆಟ್ಟಿಯೂರು ಗ್ರಾಮದ ನಿವಾಸಿಯಾದ ಲಾರಿ ಚಾಲಕ ಮಹೇಶ್ ರವರಿಗೆ ತಮಿಳುನಾಡಿನ ಹಂದಿಯೂರು ಚೆಕ್‍ಪೋಸ್ಟ್ ಬಳಿ ಕಿಡಿಗೇಡಿಗಳಿಂದ ಲಾರಿಗೆ ಬೆಂಕಿಯಾಗಿದ್ದ ಸಂದರ್ಭದಲ್ಲಿ ಸಣ್ಣ ಪ್ರಮಾಣದ ಸುಟ್ಟ ಗಾಯಗಳಾಗಿದ್ದು, ಕೂಡಲೇ ಸ್ಪಂದಿಸಿದ ತಮಿಳುನಾಡಿನ ಸ್ಥಳೀಯ ನಾಗರೀಕರು ಹಾಗೂ ಶ್ರೀ ಕಣ್ಣನ್  ಮತ್ತು   ಶ್ರೀ ಮಹೇಶ್ ಎಂಬ ತಮಿಳು ಪೊಲೀಸರು, ಮಹೇಶ್ ರವರಿಗೆ ಹಾಗೂ ಸದರಿಯವರ ಲಾರಿಗೆ ಬೆಂಗಾವಲನ್ನು ನೀಡಿ ಕರ್ನಾಟಕ ರಾಜ್ಯಕ್ಕೆ ಕಳುಹಿಸಿಕೊಟ್ಟಿರುತ್ತಾರೆ. ಮಹೇಶ್ ರವರಿಗೆ ಕಾಲಿನ ಮೇಲೆ ಸಣ್ಣ ಪ್ರಮಾಣದ ಸುಟ್ಟ ಗಾಯಗಳಾಗಿದ್ದು ಅವರಿಗೆ ಕೊಳ್ಳೇಗಾಲ ಪಟ್ಟಣದ ಜನನಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿರುತ್ತದೆ. ಸ್ಥಳಕ್ಕೆ ಕೊಳ್ಳೇಗಾಲ ಉಪ-ವಿಭಾಗಾಧಿಕಾರಿಗಳಾದ ಶ್ರೀಮತಿ ಕವಿತಾ ರಾಜರಾಂ ಮತ್ತು ಪೊಲೀಸ್ ಉಪಾಧೀಕ್ಷಕರಾದ ಶ್ರೀಮತಿ ಸ್ನೇಹಾ ರವರುಗಳು ಖುದ್ದು ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿದ್ದು, ಯಾವುದೇ ತೊಂದರೆ ಇರುವುದಿಲ್ಲವೆಂದು ಖಚಿತಪಡಿಸಲಾಗಿರುತ್ತದೆ.  ಈ ವಿಷಯದ ಬಗ್ಗೆ ಸಾರ್ವಜನಿಕರು ಯಾವುದೇ ಪ್ರಚೋದಿತ ಗಾಳಿ ಸುದ್ದಿಗೆ ಆಸ್ಪದ ನೀಡಬಾರದಾಗಿ ಮನವಿ ಮಾಡಲಾಗಿದೆ.
ಮೇಲ್ಕಂಡ ಎಲ್ಲಾ ಘಟನೆಗಳ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಎಲ್ಲಾ ನಾಗರೀಕರು ಯಾವುದೇ ಗಾಳಿ ಸುದ್ದಿಗೆ ಕಿವಿಗೊಡದೆ, ಉದ್ರೇಕಗೊಳ್ಳದೇ ಶಾಂತ ರೀತಿಯಿಂದ ವರ್ತಿಸಿ ಇಡೀ ರಾಜ್ಯದಲ್ಲಿ ಮಾದರಿಯಾಗಿರುವುದು ಪ್ರಶಂಸನಾರ್ಹವಾಗಿದ್ದು, ಇದೇ ರೀತಿಯಲ್ಲಿ ಮುಂದೆಯೂ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಸಾರ್ವಜನಿಕ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ವಿನಮ್ರವಾಗಿ ಪ್ರಾರ್ಥಿಸುತ್ತೇನೆ.
ಇಂತಿ ನಿಮ್ಮ ಸೇವಾಕಾಂಕ್ಷಿ,

ಕುಲ್‍ದೀಪ್ ಕುಮಾರ್ ಆರ್ ಜೈನ್, ಐ.ಪಿ.ಎಸ್,
9480804601
ಪೊಲೀಸ್ ಅಧೀಕ್ಷಕರು,
ಚಾಮರಾಜನಗರ ಜಿಲ್ಲೆ.


ಸೆ. 19ರಂದು ಮುಖ್ಯಮಂತ್ರಿಯವರಿಂದ ನಗರದ ಅಭಿವೃದ್ಧಿ ವಿಶೇಷ ಅನುದಾನದ ಕಾಮಗಾರಿಗೆ ಶಿಲಾನ್ಯಾಸ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಚಾಮರಾಜನಗರ ಅಭಿವೃದ್ಧಿ ವಿಶೇಷ ಅನುದಾನದಡಿ ಕೈಗೊಳ್ಳಲಿರುವ ವಿವಿಧ ಕಾಮಗಾರಿಗಳ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯ ಆವರಣದ ಉದ್ಯಾನವನ ಬಳಿ ನೆರವೇರಲಿದೆ.
ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ಪೌರಾಡಳಿತ ಸಚಿವರಾದ ಈಶ್ವರ್ ಬಿ. ಖಂಡ್ರೆ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು, ಒಳನಾಡು ಮತ್ತು ಜಲಸಾರಿಗೆ ಸಚಿವರಾದ ಡಾ.ಹೆಚ್.ಸಿ. ವiಹದೇವಪ್ಪ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ನಗರಸಭೆ ಉಪಾಧ್ಯರಾದ ಆರ್.ಎಂ. ರಾಜಪ್ಪ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಸೆ. 19ರಂದು ಮುಖ್ಯಮಂತ್ರಿಯವರಿಂದ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಯಡಪುರದಲ್ಲಿ ನಿರ್ಮಾಣ ಮಾಡಲಾಗಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11.30 ಗಂಟೆಗೆ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಆರ್ ಪಾಟೀಲ್ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು, ಒಳನಾಡು ಮತ್ತು ಜಲಸಾರಿಗೆ ಸಚಿವರಾದ ಡಾ.ಹೆಚ್.ಸಿ. ವiಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್. ರಮೇಶ್‍ಕುಮಾರ್, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯರಾದ ಎಸ್. ನಾಗರಾಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್. ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.



ಚಾಮರಾಜನಗರ ಅಭಿವೃದ್ಧಿ ವಿಶೇಷ ಅನುದಾನದಡಿ ಕೈಗೊಳ್ಳಲಿರುವ ಪ್ರಗತಿ ಕೆಲಸಗಳ ವಿವರ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಚಾಮರಾಜನಗರ ಅಭಿವೃದ್ಧಿ ವಿಶೇಷ ಅನುದಾನದಡಿ ಪಟ್ಟಣದಲ್ಲಿ ಕೈಗೊಳ್ಳಲಿರುವ ವಿವಿಧ ಕಾಮಗಾರಿಗಳ ವಿವರ ಹೀಗಿದೆ.
ನಗರದ ಖಾಸಗಿ ಬಸ್ ನಿಲ್ದಾಣ ಅಭಿವೃದ್ಧಿ, ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣ ಅಭಿವೃದ್ಧಿ (ಉಳಿಕೆ ಕಾಮಗಾರಿ), ಜಿಲ್ಲಾಡಳಿತ ಭವನದ ಆವರಣದ ಬಳಿ ಇರುವ ರಂಗಮಂದಿರದ ಉಳಿಕೆ ಕಾಮಗಾರಿಗಳಾದ ಕಾಂಪೌಂಡ್, ಕಲ್ವರ್ಟ್, ಚರಂಡಿ, ಪಾರ್ಕಿಂಗ್ ವ್ಯವಸ್ಥೆ ಇತರೆ ನಿರ್ಮಾಣ, ದೊಡ್ಡ ಅರಸನ ಕೊಳದ ಅಭಿವೃದ್ಧಿ, ಟೌನ್ ಪೊಲೀಸ್ ಠಾಣೆ ಹತ್ತಿರ ಮಾರುಕಟ್ಟೆ ಸಂಕೀರ್ಣ ನಿರ್ಮಾಣ, ವೀರಭದ್ರೇಶ್ವರ ದೇವಸ್ಥಾನದ ಬಳಿ ವಾಣಿಜ್ಯ ಸಂಕೀರ್ಣ ನಿರ್ಮಾಣ, ಸಂತೇಮರಹಳ್ಳಿ ವೃತ್ತದ ಬಳಿಯ ನಗರಸಭಾ ನಿವೇಶನದಲ್ಲಿ ಆಧುನಿಕ ಮಾರ್ಕೆಟ್ ನಿರ್ಮಾಣ, ಬಿ. ರಾಚಯ್ಯ ಜೋಡಿರಸ್ತೆಯ ಡಿವೈಎಸ್‍ಪಿ ಕಚೇರಿಯಿಂದ ನ್ಯಾಯಾಲಯ ಮಾರ್ಗವಾಗಿ ಸತ್ತಿ ಮುಖ್ಯರಸ್ತೆ (ಎನ್ ಎಚ್ ರಸ್ತೆ) ಸಂಪಕಿಸುವ ರಸ್ತೆ ಅಭಿವೃದ್ಧಿ, ರಸ್ತೆಯ ಎರಡೂ ಕಡೆ ಆರ್‍ಸಿಸಿ ಚರಂಡಿ ನಿರ್ಮಾಣ ಹಾಗೂ ಶಂಕನಹಳ್ಳಕ್ಕೆ ಆರ್‍ಸಿಸಿ ಬಾಕ್ಸ್ ಕಲ್ವರ್ಟ್ ನಿರ್ಮಾಣ, ಗಾಳಿಪುರಕ್ಕೆ ಹೋಗುವ ರಸ್ತೆಯ ಅನ್ವರ್ ಪಾಷಾ ಕಲ್ಯಾಣಮಂಟಪದ ಮುಂಭಾಗ ರಸ್ತೆ ಅಭಿವೃದ್ಧಿ ಹಾಗೂ ಆರ್‍ಸಿಸಿ ಚರಂಡಿ ನಿರ್ಮಾಣ, ಸಂತೆಮರಹಳ್ಳಿ ವೃತ್ತದಿಂದ (ಚಿಕ್ಕ ಅಂಗಡಿ ಬೀದಿ, ದೊಡ್ಡ ಅಂಗಡಿ ಬೀದಿ) ಗುಂಡ್ಲುಪೇಟೆ ವೃತ್ತದವರೆಗೆ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ನಗರಸಭೆ ಕಚೇರಿಯಿಂದ ಪಚ್ಚಪ್ಪ ವೃತ್ತದವರೆಗೆ ಹಾಗೂ ಹಳೇ ಬಸ್ ನಿಲ್ದಾಣ ವೀರಭದ್ರೇಶ್ವರ ದೇವಸ್ಥಾನದಿಂದ ಚಾಮರಾಜೇಶ್ವರ ದೇವಸ್ಥಾನದವರೆಗೆ ರಸ್ತೆ ಅಭಿವೃದ್ಧಿ, ಸಂತೆಮರಹಳ್ಳಿಗೆ ಹೋಗುವ ಎನ್ ಎಚ್ ರಸ್ತೆಯಿಂದ ವಿಹೆಚ್‍ಪಿ ಶಾಲೆ ಮಾರ್ಗವಾಗಿ ರಾಮಸಮುದ್ರದವರೆಗೆ (ಕುಲುಮೆ ರಸ್ತೆ) ನಗರೋತ್ಥಾನ ಹಂತ 2ರ ಯೋಜನೆಯಡಿ ಬಾಕಿ ಉಳಿದಿರುವ ರಸ್ತೆ ಅಭಿವೃದ್ಧಿ, ಬಿ. ರಾಚಯ್ಯ ಜೋಡಿ ರಸ್ತೆಯ ಚೆಸ್ಕಾಂ ವಿಭಾಗೀಯ ಕಚೇರಿ ಬಳಿಯಿಂದ ಕುಲುಮೆ ರಸ್ತೆಯನ್ನು ಸಂಪರ್ಕಿಸುವ ಸೇವಾಭಾರತಿ ಶಾಲೆ ಹಾಗೂ ಭ್ರಮರಾಂಭ ಬಡಾವಣೆಯ ಕ್ರಾಸ್ ರಸ್ತೆ ಅಭಿವೃದ್ಧಿ ಹಾಗೂ ಆರ್‍ಸಿಸಿ ಚರಂಡಿ ನಿರ್ಮಾಣ, ವಾರ್ಡ್ ನಂ 25ರ ಬಿ. ರಾಚಯ್ಯ ಜೋಡಿ ರಸ್ತೆÉಯಿಂದ ರಾಘವೇಂದ್ರ ಚಲನಚಿತ್ರ ಮಂದಿರದ ಮುಖಾಂತರ ಕುಲುಮೆ ರಸ್ತೆವರೆಗೆ ಹಾಗೂ ತಹಸೀಲ್ದಾರ್ ಕಚೇರಿ ಪಕ್ಕ ಭಗೀರಥ ಬಡಾವಣೆಯ ಹೆಬ್ಬಾಗಿಲಿನಿಂದ ಉಪ್ಪಾರ ಬಡಾವಣೆವರೆಗೆ ರಸ್ತೆ ಅಭಿವೃದ್ಧಿ ಚರಂಡಿ ನಿರ್ಮಾಣ, ರಾಮಸಮುದ್ರದ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ (ಬಿ.ರಾಚಯ್ಯ ಜೋಡಿರಸ್ತೆ) ಅರಳುಕೋಟೆಗೆ ಹೋಗುವ ರಸ್ತೆ (ರಾಮಲಿಂಗೇಶ್ವರ ದೇವಸ್ಥಾನ) ಅಭಿವೃದ್ಧಿ, ನಂಜನಗೂಡು, ಬಿ.ಆರ್. ಹಿಲ್ಸ್ ರಸ್ತೆಯಿಂದ ಯಳಂದೂರು-ಗುಂಡ್ಲುಪೇಟೆಗೆ ಹೋಗುವ ರಸ್ತೆಗೆ ಸೇರುವ ವರ್ತುಲ ರಸ್ತೆ ಅಭಿವೃದ್ಧಿ (ಉಳಿಕೆ ಕಾಮಗಾರಿ), ಎನ್ ಎಚ್ 209 ರಸ್ತೆಯಿಂದ ರಾಮಸಮುದ್ರಕ್ಕೆ ಹೋಗುವ (ಕುಲುಮೆ ರಸ್ತೆ) ರಸ್ತ್ರೆಯಿಂದ ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ಕಚೇರಿಯವರೆಗೆ ರಸ್ತೆ ಅಭಿವೃದ್ಧಿ ಚರಂಡಿ, ಕಲ್ವರ್ಟ್ ನಿರ್ಮಾಣ, ಹಳÉೀ ಬಸ್ ನಿಲ್ದಾಣದಿಂದ ಮೈಸೂರು-ನಂಜನಗೂಡು ರಸ್ತೆಯವರೆಗೆ (ಸಂಪಿಗೆ ರಸ್ತೆ) ಅಭಿವೃದ್ಧಿ, ರಾಮಸಮುದ್ರದ ಬಿ.ಆರ್. ಹಿಲ್ಸ್ ರಸ್ತೆಯಿಂದ ಭಗೀರಥ ಬಡಾವಣೆ ಹಳ್ಳದ ಬೀದಿ, ಮಠದ ಬೀದಿ, ಬ್ರಾಹ್ಮಣರ ಬೀದಿ ಹಾಗೂ ದುರ್ಗಿ ಬೀದಿಗಳ ರಸ್ತೆ ಅಭಿವೃದ್ಧಿ, ಮೈಸೂರು-ನಂಜನಗೂಡು ರಸ್ತೆಯ ನಗರಸಭಾ ಗಡಿಯಲ್ಲಿ ಆರ್ಚ್ ನಿರ್ಮಾಣ.
 ಸೆ. 16ರಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಪ್ರಗತಿಪರ ಸಾಹಿತಿ ಹಾಗೂ ಪತ್ರಕರ್ತರಾದ ಡಾ. ಕೃಷ್ಣಮೂರ್ತಿ ಚಮರಂ ಮುಖ್ಯ ಭಾಷಣ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸೆ. 16ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್  ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕ್ರೀಡಾಕೂಟ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಸದಸ್ಯರಾದ ಎಂ. ರಾಜಶೇಖರಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 17ರಂದು ನಗರದಲ್ಲಿ ಶ್ರೀ ವಿಶ್ವಕರ್ಮ ಜಯಂತಿ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿಕ್ಷಣ ಇಲಾಖೆಯ ನಿವೃತ್ತ ಜಂಟಿನಿರ್ದೇಶಕರಾದ ಮಂಟೇಲಿಂಗಾಚಾರ್ ಮುಖ್ಯ ಭಾಷಣ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಕಾಡಹಳ್ಳಿ ರಾಜಮೂರ್ತಿ ಮತ್ತು ತಂಡದವರಿಂದ ಹಾಡುಗಾರಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಸೆಪ್ಟೆಂಬರ್ 16 ರಿಂದ 19 ರವರೆಗೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- 2016-17 ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಘಟಕದೊಳಗಿನ ಕೋರಿಕೆ ವರ್ಗಾವಣೆ ಸಂಬಂಧ ಗಣಕೀಕೃತ ಕೌನ್ಸೆಲಿಂಗ್ ಪ್ರಕ್ರಿಯೆಯು ಸೆಪ್ಟೆಂಬರ್ 16 ರಿಂದ 19 ರವರೆಗೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯ ಸಭಾಂಗಣದಲ್ಲಿ ನಡೆಯಲಿದೆ.
ಸೆಪ್ಟೆಂಬರ್ 16 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರಮಸಂಖ್ಯೆ 1 ರಿಂದ 20 ರವರೆಗಿನ ಮುಖ್ಯ ಶಿಕ್ಷಕರು, 1 ರಿಂದ 29 ರವರೆಗಿನ ಕ್ರಮಸಂಖ್ಯೆಯ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ 1 ರಿಂದ 100 ರವರೆಗಿನ ಕ್ರಮಸಂಖ್ಯೆಯ ಸಹಶಿಕ್ಷಕರು ಹಾಜರಾಗಬೇಕಿದೆ.
ಸೆಪ್ಟೆಂಬರ್ 17 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರಮಸಂಖ್ಯೆ 101 ರಿಂದ 200 ರವರೆಗಿನ ಸಹ ಶಿಕ್ಷಕರು, ಮಧ್ಯಾಹ್ನ 2.30 ಗಂಟೆಗೆ 201 ರಿಂದ 300 ರವರೆಗಿನ ಕ್ರಮಸಂಖ್ಯೆಯ ಸಹಶಿಕ್ಷಕರು ಹಾಜರಾಗಬೇಕಿದೆ.
ಸೆಪ್ಟೆಂಬರ್ 18 ರಂದು ಬೆಳಿಗ್ಗೆ 9.30 ಗಂಟೆಗೆ ಕ್ರಮಸಂಖ್ಯೆ 301 ರಿಂದ 425 ರವರೆಗಿನ ಸಹ ಶಿಕ್ಷಕರು, ಮಧ್ಯಾಹ್ನ 2.30 ಗಂಟೆಗೆ 426 ರಿಂದ 551 ರವರೆಗಿನ ಕ್ರಮಸಂಖ್ಯೆಯ ಸಹಶಿಕ್ಷಕರು ಹಾಜರಾಗಬೇಕಿದೆ.
ಕೌನ್ಸೆಲಿಂಗ್‍ಗೆ ಹಾಜರಾಗುವ ವೇಳೆ ಸಂಬಂಧಪಟ್ಟ ಶಿಕ್ಷಣಾಧಿಕಾರಿಗಳಿಂದ ಪಡೆದ ಗುರುತಿನ ಚೀಟಿ, ಆಧಾರ್ ಕಾರ್ಡ್, ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿರುವ ಕುರಿತು ಮೂಲ ದಾಖಲೆಗಳನ್ನು ಹಾಜರುಪಡಿಸಬೇಕಿದೆ. ವೇಳಾಪಟ್ಟಿ ಅನುಸಾರ ಸಂಬಂಧಪಟ್ಟ ಶಿಕ್ಷಕರು ಕೌನ್ಸೆಲಿಂಗ್‍ಗೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜಿನೆಸ್ ಪಾರ್ಕ್ ಬಡಾವಣೆ ವಾಣಿಜ್ಯ ನಿವೇಶನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಚಾಮರಾಜನಗರ ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರವು ಬಿಜಿನೆಸ್ ಪಾರ್ಕ್ ಬಡಾವಣೆ ವಾಣಿಜ್ಯ ನಿವೇಶನಗಳ ನೋಂದಣಿಗಾಗಿ ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಅವಧಿಯನ್ನು ಸೆಪ್ಟೆಂಬರ್ 29 ರವರೆಗೆ ವಿಸ್ತರಿಸಿದೆ.
ಈ ಹಿಂದೆ ಅರ್ಜಿ ವಿತರಣೆ ಹಾಗೂ ಸ್ವೀಕರಕ್ಕೆ ಸೆಪ್ಟೆಂಬರ್ 15 ಕಡೆಯ ದಿನಾಂಕವೆಂದು ತಿಳಿಸಲಾಗಿತ್ತು, ಆದರೆ ಸಾರ್ವಜನಿಕರ ಹಿತದೃಷ್ಟಿಯಿಂದ ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಅವಧಿಯನ್ನು ಸೆಪ್ಟೆಂಬರ್ 29 ರವರೆಗೂ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಟಿ ನಿಸಾರ್  ಅಹಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆ. 16ರಂದು ನಗರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಪ್ರಗತಿಪರ ಸಾಹಿತಿ ಹಾಗೂ ಪತ್ರಕರ್ತರಾದ ಡಾ. ಕೃಷ್ಣಮೂರ್ತಿ ಚಮರಂ ಮುಖ್ಯ ಭಾಷಣ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಸ್ಥಳೀಯ ಕಲಾವಿದರಿಂದ ಸುಗಮ ಸಂಗೀತ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸೆ. 16ರಂದು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 16ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್  ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕ್ರೀಡಾಕೂಟ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಸದಸ್ಯರಾದ ಎಂ. ರಾಜಶೇಖರಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಸೆ. 17ರಂದು ನಗರದಲ್ಲಿ ಶ್ರೀ ವಿಶ್ವಕರ್ಮ ಜಯಂತಿ
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿಕ್ಷಣ ಇಲಾಖೆಯ ನಿವೃತ್ತ ಜಂಟಿನಿರ್ದೇಶಕರಾದ ಮಂಟೇಲಿಂಗಾಚಾರ್ ಮುಖ್ಯ ಭಾಷಣ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಕಾಡಹಳ್ಳಿ ರಾಜಮೂರ್ತಿ ಮತ್ತು ತಂಡದವರಿಂದ ಹಾಡುಗಾರಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಸೆ. 19ರಂದು ಮುಖ್ಯಮಂತ್ರಿಯವರಿಂದ ನಗರದ ಅಭಿವೃದ್ಧಿ ವಿಶೇಷ ಅನುದಾನದ ಕಾಮಗಾರಿಗೆ ಶಿಲಾನ್ಯಾಸ
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಚಾಮರಾಜನಗರ ಅಭಿವೃದ್ಧಿ ವಿಶೇಷ ಅನುದಾನದಡಿ ಕೈಗೊಳ್ಳಲಿರುವ ವಿವಿಧ ಕಾಮಗಾರಿಗಳ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯ ಆವರಣದ ಉದ್ಯಾನವನ ಬಳಿ ನೆರವೇರಲಿದೆ.
ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ಪೌರಾಡಳಿತ ಸಚಿವರಾದ ಈಶ್ವರ್ ಬಿ. ಖಂಡ್ರೆ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು, ಒಳನಾಡು ಮತ್ತು ಜಲಸಾರಿಗೆ ಸಚಿವರಾದ ಡಾ.ಹೆಚ್.ಸಿ. ವiಹದೇವಪ್ಪ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ನಗರಸಭೆ ಉಪಾಧ್ಯರಾದ ಆರ್.ಎಂ. ರಾಜಪ್ಪ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಸೆ. 19ರಂದು ಮುಖ್ಯಮಂತ್ರಿಯವರಿಂದ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಸೆ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಯಡಪುರದಲ್ಲಿ ನಿರ್ಮಾಣ ಮಾಡಲಾಗಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11.30 ಗಂಟೆಗೆ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಆರ್ ಪಾಟೀಲ್ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು, ಒಳನಾಡು ಮತ್ತು ಜಲಸಾರಿಗೆ ಸಚಿವರಾದ ಡಾ.ಹೆಚ್.ಸಿ. ವiಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್. ರಮೇಶ್‍ಕುಮಾರ್, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯರಾದ ಎಸ್. ನಾಗರಾಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್. ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.



ಸರ್ ಎಂವಿ ಆದರ್ಶ ಅನುಕರಣೀಯ: ಸಿಇಓ
ಚಾಮರಾಜನಗರ: ಸೆ.15 ( ಕರ್ನಾಟಕ ವಾರ್ತೆ) ಸರ್ ಎಂ. ವಿಶ್ವೇಶ್ವರಯ್ಯ ಅವರ ಆದರ್ಶ ಅನುಕರಣೀಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಅವರು ಅಭಿಪ್ರಾಯಪಟ್ಟರು.
ತಾಲೂಕಿನ ಉಮ್ಮತ್ತೂರು ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಗುರುವಾರ ‘ಎಂಜಿನಿಯರ್ಸ್ ಡೇ’  ( ಸರ್ ಎಂ. ವಿಶ್ವೇಶ್ವರಯ್ಯ ಜನ್ಮದಿನ) ಅಂಗವಾಗಿ ನಡೆದ ಗಿಡ ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವೇಶ್ವರಯ್ಯ ಅವರು ಹಿಡಿದ ಕೆಲಸವನ್ನು ಗುರಿ ಮುಟ್ಟುವ ತನಕ ಯಶಸ್ವಿಯಾಗಿ ಮುನ್ನಡೆಸುತ್ತಿದ್ದರು. ಇದಕ್ಕೆ ಕಾರಣ ಅವರಲ್ಲಿದ್ದ  ಮನೋಶಕ್ತಿ, ಛಲ, ಕೆಲಸದ ಮೇಲಿದ್ದ ಶ್ರದ್ಧೆ ಮತ್ತು ನಿಖರ ಯೋಜನೆ. ದಿನಕ್ಕೆ ಹದಿನೈದು ಗಂಟೆಗಳಿಗೂ ಹೆಚ್ಚು ಸಮಯ ಅವರು ಕೆಲಸದಲ್ಲಿಯೇ ತೊಡಗಿರುತ್ತಿದ್ದರು ಎಂದು ಸಿಇಓ ಅವರು ಗುಣಗಾನ ಮಾಡಿದರು.
ನೀರಾವರಿ, ಕೈಗಾರಿಕೆಗೆ ಹೆಚ್ಚು ಒತ್ತನ್ನು ನೀಡಿದ ಸರ್.ಎಂ.ವಿಶ್ವೇಶ್ವರಯ್ಯ ಅವರು, ಕೆಆರ್‍ಎಸ್ ಜಲಾಶಯ ನಿರ್ಮಿಸಿ ಲಕ್ಷಾಂತರ ರೈತರ ಪಾಲಿಗೆ ವರದಾನವಾಗಿದ್ದಾರೆ.  ಮೈಸೂರಿನಲ್ಲಿ ಗಂಧದ ಎಣ್ಣೆ ಕಾರ್ಖಾನೆ ಸ್ಥಾಪಿಸಿದರು. ಮೈಸೂರು ಬ್ಯಾಂಕ್ ಸ್ಥಾಪನೆಗೂ ಅವರೇ ಕಾರಣಕರ್ತರು ಎಂದು ನೆನಪು ಮಾಡಿಕೊಂಡರು.
ವಿದ್ಯಾರ್ಥಿಗಳು ಸರ್ ಎಂ. ವಿಶ್ವೇಶ್ವರಯ್ಯ ಅವರ ಅವರ ಗುಣಗಳನ್ನು ರೂಢಿಸಿಕೊಳ್ಳಬೇಕು. ತನ್ಮೂಲಕ  ಉನ್ನತ ವಿದ್ಯಾಭ್ಯಾಸ ಮಾಡಿ, ದೇಶದ ಪ್ರಗತಿಗೆ ಕೈ ಜೋಡಿಸಬೇಕು ಎಂದು ತಿಳಿಸಿದರು.
ಇದಕ್ಕೂ ಮೊದಲು ಉಮ್ಮತ್ತೂರು ಗ್ರಾಮದ ಮನೆ-ಮನೆಗೆ ಭೇಟಿ ನೀಡಿದ ಸಿಇಓ ಅವರು ಶೌಚಾಲಯ ನಿರ್ಮಾಣ ಕುರಿತು ಅರಿವು ಮೂಡಿಸಿದರು.
ಉಮ್ಮತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1521 ಕುಟುಂಬಗಳು ಇದ್ದು,  ಇದರಲ್ಲಿ ಶೌಚಾಲಯ ಹೊಂದಿಲ್ಲದೆ ಇರುವ ಕುಟುಂಬಗಳು 296 ಆಗಿದ್ದು, ಈ ಫಲಾನುಭವಿಗಳಿಗೆ ಎರಡು ತಿಂಗಳ ಅವಧಿಯೊಳಗೆ ಶೌಚಾಲಯ ನಿರ್ಮಿಸಿಕೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗತ್ಯ ಕ್ರಮ ವಹಿಸಬೇಕು ಎಂದು ಸಿಇಓ ಅವರು ಸೂಚನೆ ನೀಡಿದರು.
ಇದೇ ಅಲ್ಲದೇ ಶೌಚಾಲಯ ನಿರ್ಮಿಸಿಕೊಳ್ಳುವ ಫಲಾನುಭವಿಗಳಿಗೆ ಸ್ಥಳದಲ್ಲೇ ಕಾರ್ಯಾದೇಶ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿರಾಜಪ್ಪ, ಸಹಾಯಕ ಕಾರ್ಯದರ್ಶಿ ಎಚ್.ಸಿ. ನಾಗೇಂದ್ರಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರೇವಣ್ಣ,  ಜಿಲ್ಲಾ ಪಂಚಾಯಿತಿ ಸದಸ್ಯೆ ಶೀಲಾ, ತಾಲೂಕು ಪಂಚಾಯಿತಿ ಸದಸ್ಯೆ ಸುಧಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ, ಉಪಾಧ್ಯಕ್ಷ ಮಹದೇವಸ್ವಾಮಿ, ಸ್ವಚ್ಛ ಭಾರತ್ ಅಭಿಯಾನದ ಜಿಲ್ಲಾ ಸಮಾಲೋಚಕ ಯೋಸಫ್, ಪಂಚಾಯಿತಿ ನೋಡಲ್ ಅಧಿಕಾರಿ ಮಹದೇವಸ್ವಾಮಿ, ಗ್ರಾಪಂ ಪ್ರಭಾರ ಅಭಿವೃದ್ಧಿ ಅಧಿಕಾರಿ ಸುನಿಲ್ ಮತ್ತಿತರರು ಹಾಜರಿದ್ದರು.

ಮುಖ್ಯಮಂತ್ರಿ ಭೇಟಿ ಕಾರ್ಯಕ್ರಮ ಹಿನ್ನೆಲೆ : ಜಿಲ್ಲಾ ಉಸ್ತುವಾರಿ ಸಚಿವರಿಂದ ಪೂರ್ವಸಿದ್ಧತೆ ಪರಿಶೀಲನೆ
ಚಾಮರಾಜನಗರ, ಸೆ. 16 (ಕರ್ನಾಟಕ ವಾರ್ತೆ):- ಮುಖ್ಯಮಂತ್ರಿಯವರು ನಗರಕ್ಕೆ ಸೆಪ್ಟೆಂಬರ್ 19ರಂದು ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಇತರೆ ಗಣ್ಯರು ಸ್ಥಳಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ಮೊದಲು ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಮಹದೇಶ್ವರ ಬಡಾವಣೆಯಲ್ಲಿ ನಿರ್ಮಾಣ ಮಾಡಲಿರುವ ಉಪ್ಪಾರ ಸಮುದಾಯ ಭವನ ಕಟ್ಟಡದ ಶಂಕುಸ್ಥಾಪನೆ ಸ್ಥಳವನ್ನು ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಇತರೆ ಸಚಿವರು, ಗಣ್ಯರು ಆಗಮಿಸುವ ವೇಳೆ ಕೈಗೊಳ್ಳಬೇಕಿರುವ ವ್ಯವಸ್ಥೆಗಳ ಕುರಿತು ಸೂಚನೆ ನೀಡಿದರು.
ಬಳಿಕ ನೂತನವಾಗಿ ನಿರ್ಮಾಣವಾಗಿರುವ ಪ್ರಾದೇಶಿಕ ಸಾರಿಗೆ ಕಚೇರಿಗೆ ಭೇಟಿ ನೀಡಿದ ಸಚಿವರು ಅಲ್ಲಿ ನಡೆಯುತ್ತಿರುವ ಅಂತಿಮ ಕಾಮಗಾರಿಗಳನ್ನು ಪರಿಶೀಲಿಸಿದರು. ಆಗಬೇಕಿರುವ ಕೆಲ ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಉದ್ಘಾಟನೆಗೆ ಅಣಿಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬಳಿಕ ಎಡಪುರದ ಬಳಿ ನಿರ್ಮಾಣಗೊಂಡಿರುವ ವೈದ್ಯಕೀಯ ಕಾಲೇಜು ಕಟ್ಟಡವನ್ನು ಪರಿಶೀಲಿಸಿದರು. ಪ್ರತಿ ವಿಭಾಗಗಳಿಗೂ ವೀಕ್ಷಿಸಿ ಸಚಿವರು ಕೈಗೊಳ್ಳಬೇಕಿರುವ ಅಂತಿಮ ಕೆಲಸಗಳ ಕುರಿತು ಮಾರ್ಗದರ್ಶನ ಮಾಡಿದರು. ಮುಖ್ಯ ವೇದಿಕೆ ಸಮಾರಂಭ ನಡೆಯುವ ಕಾಲೇಜು ಮುಂಭಾಗದ ಆವರಣಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಅಲ್ಲಿ ಹಾಕಲಾಗಿರುವ ಬೃಹತ್ ಶಾಮಿಯಾನ, ವೇದಿಕೆ, ಆಸನಗಳ ವ್ಯವಸ್ಥೆ, ವಾಹನಗಳ ನಿಲುಗಡೆ, ಇನ್ನಿತರ ವ್ಯವಸ್ಥೆಗಳನ್ನು ವೀಕ್ಷಿಸಿದರು.
ಹೆಚ್ಚು ಜನರು ಸಮಾವೇಶಗೊಳ್ಳಲಿರುವ ಹಿನ್ನೆಲೆಯಲ್ಲಿ ಯಾವುದೇ ತೊಂದರೆಗೆ ಅವಕಾಶವಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಪಟ್ಟಣದಲ್ಲಿ ಉದ್ಘಾಟನೆಯಾಗಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನಕ್ಕೆ ಭೇಟಿ ನೀಡಿ ಅಲ್ಲಿಯೂ ಮುಖ್ಯಮಂತ್ರಿಯವರು ಆಗಮಿಸುವ ವೇಳೆ ಕೈಗೊಳ್ಳಬೇಕಿರುವ ವ್ಯವಸ್ಥೆಗಳ ಕುರಿತು ಸಚಿವರು ಪರಿಶೀಲಿಸಿದರು. ನಂತರ 50 ಕೋಟಿ ರೂ. ವಿಶೇಷ ಅನುದಾನದಡಿ ಪಟ್ಟಣದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಮರಾಜೇಶ್ವರ ದೇವಾಲಯ ಬಳಿಯ ಉದ್ಯಾನವನದಲ್ಲಿ ಮುಖ್ಯಮಂತ್ರಿಯವರು ನೆರವೇರಿಸಲಿರುವ ಶಿಲಾನ್ಯಾಸ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಂಡಿರುವ ಸಿದ್ದತೆಗಳನ್ನು ಪರಿಶೀಲಿಸಿದರು. ಕಾರ್ಯಕ್ರಮ ಸುಗಮ ನಿರ್ವಹಣೆಗೆ ಕೈಗೊಳ್ಳಬೇಕಿರುವ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಗೆ ಉಸ್ತುವಾರಿ ಸಚಿವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ನಗರಸಭೆ ಸದಸ್ಯರಾದ ಸಿ.ಕೆ. ಮಂಜುನಾಥ್, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಅಧಿಕಾರಿಗಳು, ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.


ಸೆ. 17ರಂದು ನಗರದಲ್ಲಿ ಶ್ರೀ ವಿಶ್ವಕರ್ಮ ಜಯಂತಿ
ಚಾಮರಾಜನಗರ, ಸೆ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 17ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನÀಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಿಕ್ಷಣ ಇಲಾಖೆಯ ನಿವೃತ್ತ ಜಂಟಿನಿರ್ದೇಶಕರಾದ ಮಂಟೇಲಿಂಗಾಚಾರ್ ಮುಖ್ಯ ಭಾಷಣ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ವೇದಿಕೆಯಲ್ಲಿ ಕಾಡಹಳ್ಳಿ ರಾಜಮೂರ್ತಿ ಮತ್ತು ತಂಡದವರಿಂದ ಹಾಡುಗಾರಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ 
ಚಾಮರಾಜನಗರ, ಸೆ. 16 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಸೆಪ್ಟೆಂಬರ್ 18, 19, ಮತ್ತು 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸೆ. 18ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಕ್ಷೇತ್ರದ ಜನತೆಯ ಕುಂದುಕೊರತೆ ಆಲಿಸುವರು. ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರದಲ್ಲಿ ಮುಖ್ಯಮಂತ್ರಿಯವರ ಭೇಟಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಪೂರ್ವಭಾವಿ ಚರ್ಚೆ ಹಾಗೂ ಸ್ಥಳ ಪರಿಶೀಲನೆ ನಡೆಸುವರು.
ಸೆ. 19ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರದಲ್ಲಿ ಮುಖ್ಯಮಂತ್ರಿಯವರಿಂದ ಲೋಕಾರ್ಪಣೆಯಾಗಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸೆ. 20ರಂದು ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಮನುಷ್ಯನ ಕಲ್ಯಾಣವೇ ಎಲ್ಲ ಧರ್ಮಗಳ ಮೂಲವಾಗಬೇಕು 
ಚಾಮರಾಜನಗರ, ಸೆ. 16 (ಕರ್ನಾಟಕ ವಾರ್ತೆ):- ಮನುಷ್ಯನ ಕಲ್ಯಾಣವೇ ಎಲ್ಲ ಧರ್ಮಗಳ ಮೂಲವಾಗಬೇಕೆಂದು ಸಾರಿದ ದೇಶದ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರು ಅವರು ಸಮಾನತೆಯ ಚಿಂತಕರಾಗಿದ್ದರು ಎಂದು ಸಾಹಿತಿ ಕೃಷ್ಣಮೂರ್ತಿ ಚಮರಂ ಅವರು ಅಭಿಪ್ರಾಯಪಟ್ಟರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಇದೇ ಮೊದಲ ಬಾರಿ ಆಯೋಜಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣಗುರು ಅವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದರು.
ಧರ್ಮಗಳು ತಾರತಮ್ಯ, ಅಸಮಾನತೆಯಿಂದ ಕೂಡಿರದೆ ಸಮಾನತೆ, ಸಹೋದರತ್ವ ಮತ್ತು ಭ್ರಾತೃತ್ವವನ್ನು ಪ್ರತಿನಿಧಿಸಬೇಕೆಂಬ ನೈಜ ಸಿದ್ಧಾಂತವನ್ನು ನಾರಾಯಣ ಗುರುಗಳು ಪ್ರತಿಪಾದಿಸಿದರು. ಮನುಷ್ಯನನ್ನು ಮಾನಸಿಕ, ದೈಹಿಕ ಗುಲಾಮಗಿರಿಯಿಂದ ಮುಕ್ತಗೊಳಿಸಬೇಕು. ಆಗಮಾತ್ರ ತಾರತಮ್ಯರಹಿತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ನಾರಾಯಣಗುರುಗಳು ನಂಬಿದ್ದರು ಎಂದರು.
ಎಲ್ಲ ವರ್ಗಗಳಲ್ಲಿ ಸಮಾನತೆ, ಸಹೋದರತ್ವ, ಭ್ರಾತೃತ್ವ ಬೆಳೆಸುವುದೇ ನಿಜವಾದ ಅರಿವು ಎಂದ    ನಾರಾಯಣಗುರು ಅವರ ವಿಚಾರಧಾರೆಗಳನ್ನು ದೇಶಕ್ಕೆ 1980ರಲ್ಲಿ ಮೊದಲು ಪರಿಚಯಿಸಿದ್ದು ಬಹುಜನ ಚಳವಳಿ. ಕೇರಳದ ತಿರುವನಂತಪುರಂ ನಲ್ಲಿ ಹುಟ್ಟಿದ ನಾರಾಯಣಗುರು ಅವರು 1854ರಿಂದ 1928ರ ಅವಧಿಯಲ್ಲಿ ಸಮಾಜ ಸುಧಾಣೆಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದು, ಪ್ರಗತಿಪರ ಚಿಂತಕರು ಸಹ ಆಗಿದ್ದರು ಎಂದು ತಿಳಿಸಿದರು.
ಕೇರಳದಲ್ಲಿ ಸಮಾನತೆ, ಸಾಮರಸ್ಯದಿಂದ ಕೂಡಿದ ಯಾವ ಕಟ್ಟಪಾಡುಗಳಿಲ್ಲದ ಶಿವನ ದೇವಸ್ಥಾನ ನಿರ್ಮಿಸಿ ಶೈವ ಪರಂಪರೆಯನ್ನು ಬಿತ್ತಿ ಜನತೆಯನ್ನು ಧಾರ್ಮಿಕ ಚಿಂತನೆಗೆ ಪ್ರೇರೆಪಿಸಿದರು ಎಂದು ತಿಳಿಸಿದರು.
ನಾರಾಯಣಗುರು ಅವರು ದೇವಸ್ಥಾನ ಕಟ್ಟಿ ಭಕ್ತಿಪಂಥಕ್ಕೆ ನಾಂದಿ ಹಾಡಲಿಲ್ಲ. ಬದಲಾಗಿ ಶೋಷಿತ ಜನರನ್ನು ಸಂಘಟಿಸಿ ಶೈಕ್ಷಣಿಕ ಚಳವಳಿಯನ್ನು ಆರಂಭಿಸಿದರು. ಮೊದಲಿಗೆ ಶೋಷಿತ ವರ್ಗಗಳ ಶಿಕ್ಷಣಕ್ಕೆ ಆದ್ಯತೆ ನೀಡಿ ಆ ಸಮುದಾಯದ ಶೈಕ್ಷಣಿಕ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ಪ್ರಗತಿಯಲ್ಲಿ ಸಂಚಲನ ಮೂಡಿಸಿದರು ಎಂದು ಕೃಷ್ಣಮುರ್ತಿ ಚಮರಂ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಇದೇ ಮೊದಲಬಾರಿಗೆ ಸರ್ಕಾರದ ವತಿಯಿಂದ ನಾರಾಯಣಗುರು ಅವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಯಾವ ವೈರುಧ್ಯಗಳಗೂ ಒಳಗಾಗದೇ ಸಮಾಜದ ಅಮಾನವೀಯ ಆಚರಣೆಗಳ ವಿರುದ್ಧ ಹೋರಾಡಿ ತಾರತಮ್ಯರಹಿತ ಸಮಾಜ ನಿರ್ಮಾಣದಲ್ಲಿ ಸಕ್ರೀಯ ಪಾತ್ರ ವಹಿಸಿದ ನಾರಾಯಣಗುರು ಅವರು ಎಲ್ಲ ಸಮುದಾಯಗಳ ಸ್ಮರಣೀಯರು ಎಂದರು.
ಮುಖ್ಯ ಅತಿಥಿಗಳಾಗಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ನಾರಾಯಣಗುರು ಅವರು ಸಾಮಾಜಿಕ ಅಸಮಾನತೆ ವಿರುದ್ಧ ಹೋರಾಡಿದ ಮಹಾಪುರುಷರು. ಎಲ್ಲ ವರ್ಗದವರೊಂದಿಗೆ ಮಿಶ್ರಭೋಜನ ಸಹೋದರತ್ವ ಹಾಗೂ ಸರ್ವೋದಯ ಸಮ್ಮೇಳನಗಳನ್ನು ನಡೆಸಿ ಸಮಾನತೆ, ಭ್ರಾತೃತ್ವ ಬೆಳೆಸಿದರು. ನಾರಾಯಣಗುರು ಅವರ ತತ್ವ, ಆದರ್ಶ, ಸಿದ್ಧಾಂತ, ರೀತಿ-ನೀತಿಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದರು.
ವಿಶ್ವಕರ್ಮರು ಸಕಲ ಸೃಷ್ಠಿಕರ್ತೃ: ಸಿ.ಪುಟ್ಟರಂಗಶೆಟ್ಟಿ 
ಚಾಮರಾಜನಗರ, ಸೆ. 17 (ಕರ್ನಾಟಕ ವಾರ್ತೆ):- ವಿಶ್ವಕರ್ಮ ಅವರು ಭೂಮಿಯ ಮೇಲಿನ ಸಕಲ ಚರಾಚರ ವಸ್ತುಗಳ ಸೃಷ್ಠಿಕರ್ತೃರಾಗಿದ್ದಾರೆ ಎಂದು ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಇದೇ ಮೊದಲ ಬಾರಿ ಆಯೋಜಿಸಲಾಗಿದ್ದ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಕೃತಿಯ ಸೃಷ್ಠಿಕರ್ತ ವಿಶ್ವಕರ್ಮ ಸಮಸ್ತ ವಿದ್ಯಾ ಪರಾಂಗತರಾಗಿದ್ದರು. ಭೂಮಿ ಉಗಮವಾಗಿ ಭೂಮಿಯ ಮೇಲೆ ಏನೂ ಇಲ್ಲವಾದಾಗ ಸøಷ್ಠಿಯನ್ನೆ ಕಾಯಕವನ್ನಾಗಿಕೊಂಡ ವಿಶ್ವಕರ್ಮರು ಪಂಚ ಕಸುಬುಗಳ ಮೂಲಕ ಅದ್ಬುತ ಕೊಡುಗೆ ನೀಡಿ ದೇಶದಲ್ಲಿ ವಿಶ್ವಕರ್ಮ ಸಂಸ್ಕøತಿ ಬೆಳವಣಿಗೆಯ ಹರಿಕಾರರಾದರು ಎಂದರು.
ಪುರಾಣ ಕಾಲದಲ್ಲಿ ದೇವಲೋಕ, ಸ್ವರ್ಗಲೋಕಗಳ ನಿರ್ಮಿಸಿದ ವಿಶ್ವಕರ್ಮರ ಸೃಜನಶೀಲ ಪರೆಂಪರೆಯ ಕಾಯಕವನ್ನು ಗೌರವಿಸುವ ಸಲುವಾಗಿ ಸರ್ಕಾರ ಈ ಬಾರಿಯಿಂದ ಆಚರಿಸಲು ನಿರ್ಧರಿಸಿದೆ. ವಿಶ್ವಕರ್ಮರ ಕಲ್ಯಾಣಕ್ಕಾಗಿ ರಾಜ್ಯಸರ್ಕಾರ ಬದ್ಧವಾಗಿದ್ದು, ಸಮುದಾಯದ ಅಭಿವೃದ್ಧಿಗಾಗಿ ವಿಶ್ವಕರ್ಮ ನಿಗಮಕ್ಕೆ 50 ಕೋಟಿ ರೂ. ಮಂಜೂರು ಮಾಡಿದೆ ಎಂದು ತಿಳಿಸಿದರು.
ಜಿಲ್ಲಾಕೇಂದ್ರಗಳಲ್ಲಿ ವಿವಿಧ ವರ್ಗಗಳ ಸಮುದಾಯ ಭವನ ನಿರ್ಮಿಸಲು ಸರ್ಕಾರ 50 ಸಾವಿರದಿಂದ 3 ಕೋಟಿವರೆಗೂ ಅನುದಾನವನ್ನು ಒದಗಿಸಲಿದೆ. ಪಟ್ಟಣದಲ್ಲಿ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳದ ಅಭಾವವಿದೆ. ದಾನಿಗಳು ನಿವೇಶನ ಕೊಡಲು ಮುಂದೆ ಬಂದಲ್ಲಿ ಅದನ್ನು ಪರಿಗಣಿಸಿ ಭವನ ನಿರ್ಮಾಣವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ವಿಶ್ವಕರ್ಮ ಎಂದರೆ ಎಲ್ಲವನು ಬಲ್ಲವರು. ಪ್ರಾಚೀನ ಕಾಲದಲ್ಲಿ ತಮ್ಮ ಕುಸುರಿ ಕೆಲಸದಿಂದ ಇಂದ್ರಲೋಕ, ಲಂಕಾನಗರಿ, ದ್ವಾರಕೆಗಳಂತಹ ಸುಂದರ ನಗರಗಳನ್ನು ನಿರ್ಮಿಸಿದ ಕೀರ್ತಿ ವಿಶ್ವಕರ್ಮರಿಗೆ ಸಲ್ಲುತ್ತದೆ. ಇದು ಇತಿಹಾಸದ ಹೆಮ್ಮೆ. ಎಲ್ಲ ಸಮುದಾಯಗಳಿಗೂ ಕಸುಬುಗಳಿದೆ. ಆದರೆ ವಿಶ್ವಕರ್ಮರ ಕಸುಬು, ಕೆಲಸ-ಕಾರ್ಯಗಳು ಎಲ್ಲರಿಗೂ ಅವಶ್ಯವಾಗಿವೆ. ಮನೆ, ಕಟ್ಟಡ, ಕಚೇರಿ, ವಿಗ್ರಹ, ಚಿನ್ನದ ಕೆಲಸ, ಮರದ ಕೆಲಸ ಹಾಗೂ ರೈತರ ನೇಗಿಲುಗಳನ್ನು ಸೃಷ್ಠಿಸಿದ ವಿಶ್ವಕರ್ಮರು ಸದಾ ಸ್ಮರಣೀಯರಾಗಿದ್ದಾರೆ ಎಂದರು.
ವಿಶ್ವಕರ್ಮ ಸಮುದಾಯ ಶೈಕ್ಷಣಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ. ಅವರ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೋಡಬೇಕು. ಆಗಮಾತ್ರ ಸಮುದಾಯವು ಅರ್ಥಿಕ, ಸಾಮಾಜಿಕ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ರಾಮಚಂದ್ರ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರಾದ ಸುಬ್ರಮಣ್ಯಚಾರ್ ಅವರು ಮಾತನಾಡಿ ಸಮುದಾಯ ಸರ್ಕಾರಿ ಸವಲತ್ತುಗಳಿಂದ ವಂಚಿತರಾಗಿ ಹಿಂದುಳಿದಿದ್ದಾರೆ. ಸೌಲಭ್ಯಗಳ ಹಂಚಿಕೆಯಲ್ಲಿ ಎಲ್ಲ ವರ್ಗಗಳಂತೆ ವಿಶ್ವಕರ್ಮ ಸಮಾಜಕ್ಕೂ ಮೀಸಲಾತಿ, ಸಹಾಯಧನ, ಸಾಲಸೌಲಭ್ಯ ನೀಡಬೇಕು. ಜಿಲ್ಲೆಯಲ್ಲಿ ಸಮುದಾಯ ಭವನವನ್ನು ನಿರ್ಮಾಣ ಮಾಡುವಂತೆ ಮನವಿ ಮಾಡಿದರು.
ಉಪನ್ಯಾಸಕರಾದ ಸಿದ್ಧರಾಜಚಾರ್ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು.     
ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಸದಸ್ಯರಾದ ಸಿ.ಎನ್. ಬಾಲರಾಜು, ತಾ.ಪಂ. ಸದಸ್ಯರಾದ ದೊಡ್ಡತಾಯಮ್ಮ, ನಗರಸಭಾ ಸದಸ್ಯರಾದ ವಿಜಯ, ಜಿಲ್ಲಾಧಿಕಾರಿ ಬಿ. ರಾಮು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸರಸ್ವತಿ, ಸಮುದಾಯದ ಮುಖಂಡರಾದ ಸೋಮಚಾರ್, ಯಜಮಾನ್ ಅನಂತ್ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಕಾರ್ಯಕ್ರಮದಲ್ಲಿ ನೆರೆದಿದ್ದ ಗಣ್ಯರು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಆರಂಭದಲ್ಲಿ ವಿಶ್ವಕರ್ಮರ ಕುರಿತು ಕಾಡಹಳ್ಳಿಯ ರಾಜಮೂರ್ತಿ ತಂಡದವರು ನಡೆಸಿಕೊಟ್ಟ ಹಾಡುಗಾರಿಕೆ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.
ಸೆ. 19, 20ರಂದು ರಾಜ್ಯಮಟ್ಟದ ಟೆನ್ನಿಸ್ ವಾಲಿವಾಲ್ ಪಂದ್ಯಾವಳಿ 
ಚಾಮರಾಜನಗರ, ಸೆ. 17 (ಕರ್ನಾಟಕ ವಾರ್ತೆ):- ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ 2016-17ನೇ ಸಾಲಿನ ರಾಜ್ಯ ಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿಯನ್ನು ನಗರದಲ್ಲಿ ಸೆಪ್ಟೆಂಬರ್ 19 ಮತ್ತು 20ರಂದು ಬಾಲಕರಿಗೆ ಸಂತ ಪ್ರಾನ್ಸಿಸ್ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರಿಗೆ ಜೆ.ಎಸ್.ಎಸ್. ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಬಾಲಕ, ಬಾಲಕಿಯರ ತಂಡಗಳು ಸೇರಿದಂತೆ 30ಕ್ಕೂ ಹೆಚ್ಚಿನ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ. ಪಂದ್ಯಾವಳಿ ನಡೆಯುವ ಕಾಲೇಜಿನಲ್ಲಿಯೆ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆ. 20, 21ರಂದು ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ, ಸೆ. 17 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ 20ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ರಾಮಸಮುದ್ರದಲ್ಲಿರುವ ಸಿ.ಆರ್.ಬಿ.ಪಿ. ಬಾಲರಪಟ್ಟಣದಲ್ಲಿ 14ರಿಂದ 17 ವಯೋಮಿತಿಯ ಬಾಲಕ, ಬಾಲಕಿಯರಿಗಾಗಿ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ.
ಸಹಕಾರ, ಸಕ್ಕರೆ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕ್ರೀಡಾ ದ್ವಜಾರೋಹಣ ನೆರವೇರಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಕ್ರೀಡಾಕೂಟವನ್ನು ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಕ್ರೀಡಾಜ್ಯೋತಿ ಸ್ವೀಕರಿಸುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸೆಪ್ಟೆಂಬರ್ 20ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಾಗೂ 21ರಂದು ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗಳನ್ನು ನಡೆಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೆಪ್ಟೆಂಬರ್ 19ರಂದು ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ 
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಮುಖ್ಯಮಂತ್ರಿಯವರಾದ  ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 19ರಂದು ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ನೆರವೇರಿಸುವರು.
ಬೆಳಿಗ್ಗೆ 10.40 ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್‍ಗೆ ಆಗಮಿಸುವ ಮುಖ್ಯಮಂತ್ರಿಯವರು ಮಹದೇಶ್ವರ ಬಡಾವಣೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಉಪ್ಪಾರ ಭವನದ ಭೂಮಿಪೂಜೆ ನೆರವೇರಿಸಲಿದ್ದಾರೆ.
ಬಳಿಕ ಚಾಮರಾಜನಗರ-ನಂಜನಗೂಡು ಮುಖ್ಯ ರಸ್ತೆಯಲ್ಲಿ ವಾಲ್ಮೀಕಿ ಭವನವನ್ನು ಉದ್ಘಾಟಿಸಲಿದ್ದಾರೆ.  ನಂತರ ಚಾಮರಾಜೇಶ್ವರ ದೇವಾಸ್ಥಾನದ ಅವರಣದ ಪಾರ್ಕ್‍ನಲ್ಲಿ ವಿಶೇಷ ಅನುದಾನದಡಿಯಲ್ಲಿ ಕ್ಯಗೊಳ್ಳಲಿರುವ ಚಾಮರಾಜನಗರ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸುವರು. ತದನಂತರ ಗುಂಡ್ಲುಪೇಟೆ ರಸ್ತೆಯಲ್ಲಿರುವ ಮಲ್ಲಯ್ಯನಪುರ ಕ್ರಾಸ್‍ನಲ್ಲಿ ನೂತನ ಪ್ರಾದೇಶಿಕ  ಸಾರಿಗೆ ಕಚೇರಿಯನ್ನು ಉದ್ಘಾಟಿಸುವರು.
ಮಧ್ಯಾಹ್ನ 12 ಗಂಟೆಗೆ ಯಡಪುರದಲ್ಲಿ ನಿರ್ಮಾಣಗೊಂಡಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಟ್ಟಡಗಳನ್ನು ಲೋಕಾರ್ಪಣೆ ನೆರವೇರಿಸಿ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 19ರಂದು ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರ ಜಿಲ್ಲಾ ಪ್ರವಾಸ 
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ರಾಜ್ಯ ಸಚಿವರಾದ ಈಶ್ವರ ಬಿ. ಖಂಡ್ರೆ ಅವರು ಸೆಪ್ಟೆಂಬರ್ 19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.40 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸುವ ಸಚಿವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.


  ಸೆ. 19ರಂದು ಲೋಕೋಪಯೋಗಿ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಜಿಲ್ಲಾ ಪ್ರವಾಸ 
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಸೆಪ್ಟೆಂಬರ್ 19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.40 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸುವ ಸಚಿವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 19ರಂದು ವೈದ್ಯಕೀಯ ಶಿಕ್ಷಣ ಸಚಿವರ ಜಿಲ್ಲಾ ಪ್ರವಾಸ 
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಹೈದ್ರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಶರಣಪ್ರಕಾಶ ಆರ್, ಪಾಟೀಲ ಅವರು ಸೆಪ್ಟೆಂಬರ್ 19ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.40 ಗಂಟೆಗೆ ಮುಖ್ಯಮಂತ್ರಿಗಳೊಂದಿಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಹೆಲಿಪ್ಯಾಡ್‍ಗೆ ಆಗಮಿಸುವ ಸಚಿವರು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

ವಿಶೇಷ ವರದಿ:

ವೈದ್ಯಕೀಯ ಕಾಲೇಜು ಲೋಕಾರ್ಪಣೆ: ಅಭಿವೃದ್ಧಿ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲು 
ಜಿಲ್ಲೆಯ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಲೋಕಾರ್ಪಣೆಯು ಸೆಪ್ಟೆಂಬರ್ 19ರಂದು ನೆರವೇರುತ್ತಿದೆ. ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿರುವ ವೈದ್ಯಕೀಯ ಕಾಲೇಜು ಪ್ರಸಕ್ತ ಸಾಲಿನಲ್ಲಿಯೆ ಆರಂಭಿಸಲು ಭಾರತೀಯ ವೈದ್ಯಕೀಯ ಮಂಡಳಿಯು ಅನುಮತಿ ನೀಡಿದ್ದು, ತರಗತಿಗಳು ಕೂಡ ಆರಂಭವಾಗಿವೆ.
ರಾಜ್ಯದ ಪ್ರತಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ಸ್ಥಾಪಿಸುವ ಮಹತ್ವಾಕಾಂಕ್ಷೆಯೊಂದಿಗೆ  ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 6 ವೈದ್ಯಕೀಯ ಕಾಲೇಜುಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಚಾಮರಾಜನಗರ ಜಿಲ್ಲೆಯೂ ಒಂದು.
ಸರ್ವರಿಗೂ ಆರೋಗ್ಯ ಮತ್ತು ಶಿಕ್ಷಣ ಎಂಬ ಧ್ಯೇಯದಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯನ್ನು ಸಾಕಾರಗೊಳಿಸುವಲ್ಲಿ ಸರ್ಕಾರ ದಿಟ್ಟ ಹೆಜ್ಜೆಯನ್ನಿಟ್ಟಿದೆ. ಗಡಿಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಿನ ಆರೋಗ್ಯ ಸೇವೆಗಳನ್ನು ಪಡೆಯಲು  ವೈದ್ಯಕೀಯ ಕಾಲೇಜು ಅವಶ್ಯವಾಗಿತ್ತು.
ಚಾಮರಾಜನಗರ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿರುವ ಯಡಪುರ ಗ್ರಾಮದ ಹತ್ತಿರ 42 ಎಕರೆ ಜಾಗದಲ್ಲಿ 160 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕಾಗಿ 2014ರ ಫೆಬ್ರವರಿ 23ರಂದು ಶಂಕುಸ್ಥಾಪನೆ ನೆರವೇರಿತ್ತು. ಕಟ್ಟಡ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆಯ ನಿರ್ವಹಣೆಯಲ್ಲಿ ಪುಣೆಯ ಮೆ| ಬಿ.ಜಿ. ಕನ್ಸ್‍ಟ್ರಕ್ಷನ್ ಟೆಕ್ನಾಲಜಿ ಪ್ರೈ. ಲಿಮಿಟೆಡ್‍ಗೆ ವಹಿಸಲಾಗಿತ್ತು.
ಈ ಭಾಗದಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪನೆ ಮಾಡಿರುವ ರಾಜ್ಯ ಸರ್ಕಾರದ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ. ಜಿಲ್ಲೆಯಲ್ಲಿಯೇ ವೈದ್ಯಕೀಯ ಕಾಲೇಜು ಆರಂಭಗೊಂಡಿರುವುದರಿಂದ ಬಹುಮುಖ್ಯವಾಗಿ ಚಾಮರಾಜನಗರ ಹಾಗೂ ಸುತ್ತಮುತ್ತಲಿನ ಪ್ರದೇಶದ ಬಡರೋಗಿಗಳು, ಅಂಗವಿಕಲರು ಹಾಗೂ ನಾಗರಿಕರು ತುರ್ತಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ.
 ವೈದ್ಯಕೀಯ ಕಾಲೇಜು ಕಟ್ಟಡ ಪೂರ್ಣಗೊಂಡು ಕಾರ್ಯಾರಂಭಕ್ಕೆ ಸಜ್ಜಾಗಿದೆ. ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದಿಂದಲೇ ಕಾಲೇಜು ಆರಂಭವಾಗುತ್ತಿದ್ದು, ಈಗಾಗಲೇ 150 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.
ನೂತನವಾಗಿ ನಿರ್ಮಾಣಗೊಂಡಿರುವ ವೈದ್ಯಕೀಯ ಕಾಲೇಜು ಕಟ್ಟಡವು ಅನೇಕ ವಿಭಾಗಗಳನ್ನು ಒಳಗೊಂಡಿದೆ. ಅಂಗರಚನಾಶಾಸ್ತ್ರ, ಶರೀರಕ್ರಿಯಾಶಾಸ್ತ್ರ, ಜೀವರಸಾಯನಶಾಸ್ತ್ರ, ಸಮುದಾಯ ವೈದ್ಯಕೀಯ ವಿಭಾಗ, ರೋಗಲಕ್ಷಣಶಾಸ್ತ್ರ ವಿಭಾಗ, ಸೂಕ್ಷ್ಮಜೀವಶಾಸ್ತ್ರ, ವಿದಿವೈದ್ಯಶಾಸ್ತ್ರ, ಔಷಧವಿಜ್ಞಾನ ವಿಭಾಗಗಳು ಇವೆ.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಟ್ಟಡದಲ್ಲಿ 180 ವಿದ್ಯಾರ್ಥಿಗಳ ಸಾಮಥ್ರ್ಯವುಳ್ಳ 4 ಸುಸಜ್ಜಿತ ಬೋಧನಾ ಕೋಠಡಿಗಳು, 350 ಅಸನಗಳ ಸಭಾಂಗಣ, 2400 ಚದರ ಮೀಟರ್ ವಿಸ್ತೀರ್ಣದ ಹವಾನಿಯಂತ್ರಿತ ಗ್ರಂಥಾಲಯ ಮತ್ತು ಅದಕ್ಕೆ ಬೇಕಾಗುವ ಪುಸ್ತಕಗಳು, 750 ಅಸನಗಳ ವಿವಿದೋದ್ದೇಶ ಸಭಾಂಗಣ, ವಿವಿಧ ವಿಭಾಗಗಳ ಪ್ರಯೋಗಾಲಯಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಕೊಠಡಿಗಳಿವೆ.
ಸಂಸ್ಥೆಯ ಅವರಣದಲ್ಲಿ ತಲಾ 166 ಕೊಠಡಿಗಳ ವಿದ್ಯಾರ್ಥಿನಿಲಯ ಮತ್ತು ವಿದ್ಯಾರ್ಥಿನಿ ನಿಲಯಗಳನ್ನು ನಿರ್ಮಿಸಲಾಗಿದೆ. ಅವುಗಳಲ್ಲಿ ವ್ಯಾಯಾಮಶಾಲೆ, ಇಂಟರ್‍ನೆಟ್ ಸೌಲಭ್ಯ ಮತ್ತು ಸಂದರ್ಶಕರ ಕೊಠಡಿಗಳಿಗೆ ಅವಕಾಶವಿದೆ. ವೈದ್ಯರಿಗೆ 24 ವಸತಿಗೃಹಗಳು ಹಾಗೂ ಬೋಧಕೇತರ ಸಿಬ್ಬಂದಿಗೆ 16 ವಸತಿಗೃಹಗಳನ್ನು ನಿರ್ಮಿಸಲಾಗಿದೆ.    
ಪ್ರಸ್ತುತ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಕಾಲೇಜಿನ ಅಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲಾಗಿದೆ. ತಜ್ಞ ವೈದ್ಯರು ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಉಪಕರಣಗಳನ್ನು ಈ ಸಂಸ್ಥೆಗೆ ಒದಗಿಸಲಾಗಿದೆ. ಸಂಸ್ಥೆಯ ಮುಂಭಾಗದ 10 ಎಕರೆ ಪ್ರದೇಶದಲ್ಲಿ 500 ಹಾಸಿಗೆಗಳುಳ್ಳ ಬೋಧನಾ ಅಸ್ಪತ್ರೆಯನ್ನು ಸ್ಥಾಪಿಸಲು ಸ್ಥಳ ಮಂಜೂರಾಗಿದ್ದು, ಅಸ್ಪತ್ರೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 19ರಂದು ಚಾಮರಾಜನಗರ ಜಿಲ್ಲೆ ಜನತೆಯ ಬಹುದಿನಗಳ ಕನಸಾದ ವೈದ್ಯಕೀಯ ಕಾಲೇಜು ಲೋಕಾರ್ಪಣೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ.


ಆಔಅಖಿಔಖ ಕಿUಂಖಖಿಇಖS ಇಐಇಗಿಂಖಿIಔಓ

                                                ಃಔಙS ಊಔSಖಿಇಐ

                                            ಉIಖಐS ಊಔSಖಿಇಐ


                                                                              ಅಔಐಐಇಉಇ ಃUIಐಆIಓಉ


                                                                  ಅಔಐಐಇಉಇ ಃUIಐಆIಓಉ

                                    ಅ  ಖಿಙPಇ ಃUIಐಆIಓಉ






                                         ಆ ಖಿಙPಇ ಃUIಐಆIಓಉ

ಸೆ. 19, 20 ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಸೆಪ್ಟೆಂಬರ್ 19, ಮತ್ತು 20ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸೆ. 19ರಂದು ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರದಲ್ಲಿ ಮುಖ್ಯಮಂತ್ರಿಯವರಿಂದ ಲೋಕಾರ್ಪಣೆಯಾಗಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸೆ. 20ರಂದು ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಸೆ. 19ರಂದು ಮುಖ್ಯಮಂತ್ರಿಯವರಿಂದ ಉಪ್ಪಾರ ಸಮುದಾಯ ಭವನ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಗರದ ಮಹದೇಶ್ವರ ಬಡಾವಣೆಯಲ್ಲಿ ನಿರ್ಮಾಣ ಮಾಡಲಿರುವ ಉಪ್ಪಾರ ಸಮುದಾಯ ಭವನ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮವು ಸೆಪ್ಟೆಂಬರ್ 19ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಹದೇಶ್ವರ ಬಡಾವಣೆಯಲ್ಲಿ ನೆರವೇರಲಿದೆ.
ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಹೆಚ್. ಆಂಜನೇಯ ಘನ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಸೆ. 19ರಂದು ಮುಖ್ಯಮಂತ್ರಿಯವರಿಂದ ಶ್ರೀ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟನೆ
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ನಿರ್ಮಾಣ ಮಾಡಲಾಗಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಹೆಚ್. ಆಂಜನೇಯ ಅವರು ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಅನಾವರಣ ಮಾಡುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ತಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ,  ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 19ರಂದು ಮುಖ್ಯಮಂತ್ರಿಯವರಿಂದ ನಗರದ ಅಭಿವೃದ್ಧಿ ವಿಶೇಷ ಅನುದಾನದ ಕಾಮಗಾರಿಗೆ ಶಿಲಾನ್ಯಾಸ
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಚಾಮರಾಜನಗರ ಅಭಿವೃದ್ಧಿ ವಿಶೇಷ ಅನುದಾನದಡಿ ಕೈಗೊಳ್ಳಲಿರುವ ವಿವಿಧ ಕಾಮಗಾರಿಗಳ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮವು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯ ಆವರಣದ ಉದ್ಯಾನವನ ಬಳಿ ನೆರವೇರಲಿದೆ.
ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ಪೌರಾಡಳಿತ ಸಚಿವರಾದ ಈಶ್ವರ್ ಬಿ. ಖಂಡ್ರೆ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು, ಒಳನಾಡು ಮತ್ತು ಜಲಸಾರಿಗೆ ಸಚಿವರಾದ ಡಾ.ಹೆಚ್.ಸಿ. ವiಹದೇವಪ್ಪ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ನಗರಸಭೆ ಉಪಾಧ್ಯರಾದ ಆರ್.ಎಂ. ರಾಜಪ್ಪ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಸೆ. 19ರಂದು ಮುಖ್ಯಮಂತ್ರಿಯವರಿಂದ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಯಡಪುರದಲ್ಲಿ ನಿರ್ಮಾಣ ಮಾಡಲಾಗಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11.30 ಗಂಟೆಗೆ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಆರ್ ಪಾಟೀಲ್ ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ, ಬಂದರು, ಒಳನಾಡು ಮತ್ತು ಜಲಸಾರಿಗೆ ಸಚಿವರಾದ ಡಾ.ಹೆಚ್.ಸಿ. ವiಹದೇವಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್. ರಮೇಶ್‍ಕುಮಾರ್, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ.ಚಂದ್ರಕಲಾ, ತಾಲೂಕು ಪಂಚಾಯಿತಿ ಸದಸ್ಯರಾದ ಎಸ್. ನಾಗರಾಜಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್. ಕುಮಾರ್ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಸೆ. 19ರಂದು ಮುಖ್ಯಮಂತ್ರಿಯವರಿಂದ ಪ್ರಾದೇಶಿಕ ಸಾರಿಗೆ ಕಚೇರಿ ಕಟ್ಟಡ  ಉದ್ಘಾಟನೆ
ಚಾಮರಾಜನಗರ, ಸೆ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಸಾರಿಗೆ ಇಲಾಖೆ ವತಿಯಿಂದ ನಗರದ ಗಾಳೀಪುರದಲ್ಲಿ ನಿರ್ಮಾಣ ಮಾಡಲಾಗಿರುವ ಪ್ರಾದೇಶಿಕ ಸಾರಿಗೆ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಸೆಪ್ಟೆಂಬರ್ 19ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟನೆ ನೆರವೇರಿಸುವರು. ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಜ್ಯೋತಿ ಬೆಳಗಿಸುವರು. ಸಾರಿಗೆ ಸಚಿವರಾದ ಆರ್. ರಾಮಲಿಂಗಾರೆಡ್ಡಿ ಅವರು ಉಪಸ್ಥಿತರಿರುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕೋಪಯೋಗಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ವಸತಿ ಸಚಿವರಾದ ಎಂ. ಕೃಷ್ಣಪ್ಪ, ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ,  ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಚಿತ್ರ ಶೀರ್ಷಿಕೆ:- ಮುಖ್ಯಮಂತ್ರಿಯವರು ಸೆಪ್ಟೆಂಬರ್ 19ರಂದು ನಗರದಲ್ಲಿ ವಿವಿಧ ಅಬಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಚಾಲನೆ ನೀಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ತಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಕೃಷಿಮತ್ತುಇ ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ. ನವೀನ್, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಜಿಲ್ಲಧಿಕಾರಿ ಬಿ. ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್, ಜೈನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಇತರರು ಹಾಜರಿದ್ದರು. 
ಬಡಜನರಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲು ವೈದ್ಯಕೀಯ ಕಾಲೇಜು: ಸಿ.ಎಂ
ಚಾಮರಾಜನಗರ, ಸೆ. 19 - ಗ್ರಾಮೀಣರು, ಬಡಜನರಿಗೆ ವೈದ್ಯಕೀಯ ಚಿಕಿತ್ಸೆ ಸಮರ್ಪಕವಾಗಿ ಒದಗಿಸುವ ಉದ್ದೇಶದೊಂದಿಗೆ ವೈದ್ಯಕೀಯ ಸರ್ಕಾರಿ ಕಾಲೇಜುಗಳನ್ನು ತೆರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ತಿಳಿಸಿದರು.
ಚಾಮರಾಜನಗರ ಹೊರವಲಯದ ಯಡಪುರದಲ್ಲಿಂದು ನೂತನ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಟ್ಟಡಗಳ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಉದ್ದೇಶ ಹೊಂದಿದೆ. ಹೀಗಾಗಿ ಆರಂಭದಲ್ಲೆ 6 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವ ಘೋಷಣೆ ಮಾಡಲಾಗಿತ್ತು. ವೈದ್ಯಕೀಯ ಕಾಲೇಜು ಪ್ರಾರಂಭವಾದರೆ ಅದಕ್ಕೆ ಪೂರಕವಾಗಿ ಆಸ್ಪತ್ರೆ ಸೌಲಭ್ಯವನ್ನು ಸಹ ಒದಗಿಸಬೇಕಾಗುತ್ತದೆ. ಎಲ್ಲಾ ವರ್ಗದ ಜನರಿಗೆ ಆರೋಗ್ಯಸೇವೆ ಹಾಗೂ ಉತ್ತಮ ಚಿಕಿತ್ಸೆ ಪಡೆಯಲು ಆಸ್ಪತ್ರೆಗಳಲ್ಲಿ ಅವಕಾಶ ಮಾಡಿಕೊಡುವ ಉದ್ದೇಶದಿಂದಲೇ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುತ್ತಿದೆ ಎಂದರು.
ಗ್ರಾಮೀಣ ಜನತೆಗೆ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕೆಂಬ ಕಾರಣದಿಂದ ಆರಂಭಿಸಲಾಗುತ್ತಿರುವ ವೈದ್ಯಕೀಯ ಕಾಲೇಜಿಗೆ 500ರಿಂದ 600 ಹಾಸಿಗೆ ಸಾಮಥ್ರ್ಯವುಳ್ಳ ಆಸ್ಪತ್ರೆಯನ್ನು ಸಹ ನಿರ್ಮಾಣ ಮಾಡಲಾಗುವುದು. ವೈದ್ಯಕೀಯ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆ ಬಡಜನರಿಗೆ ತಲುಪಿದರೆ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ವೈದ್ಯವೃತ್ತಿ ಶ್ರೇಷ್ಠವಾದದ್ದು. ಗ್ರಾಮೀಣ ಪ್ರದೇಶದ ಜನರಿಗೆ ವೈದ್ಯರ ಮೇಲೆ ವಿಶೇಷ ಗೌರವ, ಅಭಿಮಾನವಿದೆ. ಆರೋಗ್ಯ ಸೇವೆ ನೀಡುವ ವೈದ್ಯರು ದೇವರೆಂಬ ಭಾವನೆಯನ್ನು ಗ್ರಾಮೀಣ ಜನರು ಹೊಂದಿದ್ದಾರೆ. ಹೀಗಾಗಿ ಸೇವಾ ಮನೋಭಾವನೆಯನ್ನು ವೈದ್ಯರು ಬೆಳೆಸಿಕೊಳ್ಳಬೇಕೆಂದು ಮುಖ್ಯಮಂತ್ರಿಯವರು ಸಲಹೆ ಮಾಡಿದರು.
ರಾಜ್ಯ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಸಂಖ್ಯೆಗೆ ಅನುಗುಣವಾಗಿ ಅವರ ಕಲ್ಯಾಣಕ್ಕಾಗಿ ಪ್ರಸಕ್ತ ಸಾಲಿನಲ್ಲಿ 19542 ಕೋಟಿ ರೂ. ಗಳನ್ನು ವೆಚ್ಚ ಮಾಡುತ್ತಿದೆ. ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ ರೈತರು, ಹಿಂದುಳಿದವರು, ಅಲ್ಪಸಂಖ್ಯಾತರು, ದಲಿತರಿಗೆ ನ್ಯಾಯ ನೀಡುವ ಪ್ರಯತ್ನ ಮಾಡುತ್ತಿದ್ದೇವೆ ಎಂರು ಮುಖ್ಯಮಂತ್ರಿಯವರು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಳೆದ ಮೂರುವರೆ ವರ್ಷಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅವಶ್ಯಕತೆಯಿರುವ ಎಲ್ಲ ಸೌಲಭ್ಯಗಳನ್ನು ಪೂರೈಸಲು ಮುಖ್ಯಮಂತ್ರಿಯವರು ಸ್ಪಂದಿಸಿದ್ದಾರೆ. 238 ಕೋಟೀ ರೂ. ವೆಚ್ಚದಲ್ಲಿ 24 ಕೆರೆಗಳಿಗೆ ಕಬಿನಿ ನದಿಯಿಂದ ನೀರು ತುಂಬಿಸುವ ಮಹತ್ವದ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದರು.
ಜಿಲ್ಲಾಕೇಂದ್ರದ ಅಭಿವೃದ್ಧಿಗೆ 50 ಕೋಟಿ ರೂ. ವಿಶೇಷ ಅನುದಾನ ನೀಡಿದ್ದು, ಇದರಡಿ ಕೈಗೊಳ್ಳಲಿರುವ ವಿವಿಧ ಕಾಮಗಾರಿಗೆ ಶಿಲಾನ್ಯಾಸವನ್ನು ಮುಖ್ಯಮಂತ್ರಿಯವರು ನೆರವೇರಿಸಿದ್ದಾರೆ. ಇದರಿಂದ ಹಲವು ಅಭಿವೃದ್ಧಿ ಕೆಲಸಗಳು ಪೂರ್ಣವಾಗಲಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ವೈದ್ಯಕೀಯ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು ಮಾತನಾಡಿ ಸಾರ್ವಜನಿಕರ ಹಣದಲ್ಲಿ ವೈದ್ಯಕೀಯ ಕಾಲೇಜುಗಳನ್ನು ಕಟ್ಟಲಾಗುತ್ತದೆ. ಹೀಗಾಗಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಕನಿಷ್ಠ 1 ವರ್ಷವಾದರೂ ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಬೇಕು. ಗ್ರಾಮಿಣ ಭಾಗದಲ್ಲಿ ಚಿಕಿತ್ಸೆ ನೀಡುವ ಮನೋಭಾವನೆ ರೂಢಿಸಿಕೊಳ್ಳಬೇಕು ಎಂದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಚಾಮರಾಜನಗರ ಜಿಲ್ಲೆಯ ಇತಿಹಾಸ ಪುಟದಲ್ಲಿ ವೈದ್ಯಕೀಯ ಕಾಲೇಜು ಆರಂಭವಾಗುತ್ತಿರುವ ಇಂದಿನ ದಿನವನ್ನು ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಸಂದರ್ಭ ಒದಗಿದೆ. ಜಿಲ್ಲೆಯಲ್ಲಿ 800 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಿರ್ವಹಿಸಲಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಕಾಳಜಿ ವಹಿಸಿದೆ ಎಂದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿಗಳು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ವೈದ್ಯಕೀಯ ಕಾಲೇಜು ಆರಂಭಕ್ಕೆ ಶ್ರಮಿಸಿದ ಮುಖ್ಯಮಂತ್ರಿಯವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಲೋಕೋಪಯೋಗಿ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಪೌರಾಡಳಿತ ರಾಜ್ಯ ಸಚಿವರಾದ ಈಶ್ವರ್ ಬಿ, ಖಂಡ್ರೆ, ವಿಧಾನ ಪರಿಷತ್ ಉಪ ಸಭಾಪತಿಯವರಾದ ಮರಿತಿಬ್ಬೇಗೌಡ,ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನಾ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ಚಂದ್ರಕಲಾ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು, ತಾಲೂಕು ಪಂಚಾಯತ್ ಸದಸ್ಯರಾದ ಎಸ್. ನಾಗರಾಜಮ್ಮ, ಲೋಕಸಭಾ ಮಾಜಿ ಸದಸ್ಯರಾದ ಎಂ.ಶಿವಣ್ಣ, ಶಿವಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎನ್. ಕುಮಾರ್, ಜಿಲ್ಕಲಾ ಉಸ್ತುವಾರಿ ಕಾರ್ಯದರ್ಶಿ ಶಂಭುದಯಾಳ್ ಮೀನಾ, ಜಿಲ್ಲಾಧಿಕಾರಿ ಬಿ, ರಾಮು ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿಯವರಿಂದ ವೈದ್ಯಕೀಯ ಕಾಲೇಜು ತರಗತಿ ಆರಂಭ :- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾಲೇಜು ಕಟ್ಟಡ ಉದ್ಘಾಟಿಸಿದ ಬಳಿಕ ನೂತನ ಕಾಲೇಜಿನ ಪ್ರಸಕ್ತ ಸಾಲಿನ ತರಗತಿ ವಿದ್ಯಾರ್ಥಿಗಳನ್ನು ಉಪನ್ಯಾಸ ಕೊಠಡಿಯಲ್ಲಿ ಉದ್ದೇಶಿಸಿ ಮಾತನಾಡುವ ಮೂಲಕ ತರಗತಿ ಆರಂಭಿಸಿದ್ದು ವಿಶೇಷವಾಗಿತ್ತು.
ಗ್ರಾಮಿಣ ಭಾಗದ ಸೇವೆಗೆ ವೈದ್ಯಕೀಯ ವಿದ್ಯಾರ್ಥಿಗಳು ಮುಂದಾಗುವಂತೆ ಮುಖ್ಯಮಂತ್ರಿಯವರು ತಿಳಿಸಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಯವರಿಂದ ಚಾಲನೆ
ಚಾಮರಾಜನಗರ, ಸೆ. 19:- ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯ ಅವರು ನಗರದಲ್ಲಿಂದು ವಿವಿಧ ಅಬಿವೃದ್ದಿ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು.
ಮೊದಲಿಗೆ ಮಹದೇಶ್ವರ ಬಡಾವಣೆಯಲ್ಲಿ ಉಪ್ಪಾರ ಸಮುದಾಯ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಶ್ರೀ ಮಹರ್ಷಿ ವಾಲ್ಮೀಕಿ ಭವನ ಉದ್ಘಾಟಿಸಿದರು. ಬಳಿಕ ಚಾಮರಾಜನಗರ ಅಭಿವೃದ್ಧಿಗಾಗಿ 50 ಕೋಟಿ ರೂ. ವಿಶೇಷ ಅನುದಾನದಡಿ ಕೈಗೊಳ್ಳಲಿರುವ ವಿವಿಧ ಕಾಮಗಾರಿಗೆ ಚಾಮರಾಜೇಶ್ವರ ದೇವಾಲಯ ಉದ್ಯಾನದ ಬಳಿ ಶಿಲಾನ್ಯಾಸ ನೆರವೇರಿಸಿದರು. ನಂತರ ಸಾರಿಗೆ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಯಡಪುರದಲ್ಲಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಕಟ್ಟಡವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿಯವರಿಗೆ ಪೌರ ಸನ್ಮಾನ ಮಾಡಲಾಯಿತು.   

  
  





    
 





























No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು