ಚಾಮರಾಜನಗರದಲ್ಲಿ ಖಾಕಿ ಸರ್ಪ ಕಾವಲಿನಡಿ ಗಣಪತಿ ವಿಸರ್ಜನಾ ಮಹೋತ್ಸವ
ಸ್ಥಳದಲ್ಲೇ ಮೊಕ್ಕಂ ಹೂಡಿದ ಎಸ್ಪಿ ಕುಲದೀಪ್ ಕುಮಾರ್ ಜೈನ್, ಪೂಜೆಯಲ್ಲಿ ಭಾಗಿ
ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ
ಚಾಮರಾಜನಗರ,:- ಪೊಲೀಸ್ ಗಣಪ ಎಂದೇ ಪ್ರಸಿದ್ದಿಯಾದ ಚಾಮರಾಜನಗರದ ರಥದ ಬೀದಿಯಲ್ಲಿರುವ ಶ್ರೀ ವಿದ್ಯಾ ಗಣಪತಿ ಮಂಡಳಿಯವರು ಪ್ರತಿಷ್ಟಾಪಿಸಲಾದ ಸಾರ್ವಜನಿಕ ಗಣಪತಿಯ 55 ನೇ ವರ್ಷದ ವಿಸರ್ಜನಾ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನಡೆಯಿತು.
ಚಾಮರಾಜನಗರ ರಥದ ಬೀದಿಯಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಜಿಲ್ಲಾ ಪೊಲೀಸ್ ವರೀಷ್ಟಾಧಿಕಾರಿ ಕುಲದೀಪ್ ಕುಮಾರ್ ಜೈನ್ ಅವರು ಪೂಜೆ ಸಲ್ಲಿಸಿ ಪ್ರಮುಖ ರಸ್ತೆ ದಾಟುವ ತನಕ ಖುದ್ದು ನಿಂತು ಮೆರವಣಿಗೆ ಸುಗಮವಾಗುವಂತೆ ನೋಡಿಕೊಂಡರು.
ವಿಸರ್ಜನಾ ಮಹೋತ್ಸವದ ಮೆರವಣಿಗೆಯಲ್ಲಿ ನಂದಿದ್ವಜ, ಗೊರವರ ಕುಣಿತ, ಕರಗ, ಗಾರುಡಿಗ ಗೊಂಬೆ, ಮಹಿಳಾ ವೀರಗಾಸೆ, ಮಂಗಳ ವಾದ್ಯ ಸೇರಿದಂತೆ ಇನ್ನಿತರ ಕಲಾತಂಡಗಳು ಮೆರವಣೆಗೆಯಲ್ಲಿ ಭಾಗವಹಿಸಿ ಜನರ ಮನ ಸೆಳÉದವು.
ಮೆರವಣಿಗೆಯು ಇಂದು ನಗರದ ಖಡಕ್‍ಪುರ ಮೊಹಲ್ಲಾ, ಅಂಬೇಡ್ಕರ್ ಬಡಾವಣೆ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ರಸ್ತೆ, ದೇವಾಂಗ 3ನೇ ಬೀದಿ, ನಾಗಪ್ಪ ಶೆಟ್ಟರ ವೃತ್ತ, ದೊಡ್ಡಂಗಡಿ ಬೀದಿ, ಗುಂಡ್ಲುಪೇಟೆ ವೃತ್ತ, ಗಾಡಿಖಾನೆ ಮೊಹಲ್ಲಾ ಬೀದಿ, ಮೇಗಲ ಪರಿವಾರ ನಾಯಕರ ಬೀದಿ, ಕನ್ನಿಕಾ ಪರಮೇಶ್ವರಿ ದೇವಸ್ಥಾನದ ರಸ್ತೆ, ಮಾರ್ಕೆಟ್ ವೃತ್ತ, ಸಂತೇಮರಹಳ್ಳಿ ವೃತ್ತ, ಆದಿಶಕ್ತಿ ದೇವಸ್ಥಾನದ ಬೀದಿ, ಬಣಜಿಗರ ಬೀದಿ, ಭ್ರಮರಾಂಭ ಬಡಾವಣೆಯ 1ನೇ ಮತ್ತು 2ನೇ ಕ್ರಾಸ್, ಕುರುಬರ ಬೀದಿ, ಹಳ್ಳದ ಬೀದಿ, ಅಗ್ರಹಾರ ಬೀದಿ, ಪೊಲೀಸ್ ಕಚೇರಿ ರಸ್ತೆ, ಖಾಸಗಿ ಬಸ್ ನಿಲ್ದಾಣದ ರಸ್ತೆ, ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ರಸ್ತೆ, ಜೈನರ ಬೀದಿ, ಆಂಜನೇಯಸ್ವಾಮಿ ದೇವಸ್ಥಾನದ ಬೀದಿಯಲ್ಲಿ ಸಂಚರಿಸಿ ದೊಡ್ಡ ಅರಸಿನಕೊಳದಲ್ಲಿ ವಿಸರ್ಜನೆ ಮಾಡಲಾಯಿತು.
ವ್ಯಾಪಕ ಪೋಲೀಸ್ ಬಂದೂಬಸ್ತ್: ಚಾಮರಾಜನಗರ ಪಟ್ಟಣವನ್ನು ವಿವಿಧ ವಿಭಾಗಗಳಾಗಿ ವಿಂಗಡಿಸಿ, ಗಸ್ತು ವ್ಯವಸ್ಥೆಗಾಗಿ 07 ಮೊಬೈಲ್ ಗಳನ್ನು ನೇಮಿಸಲಾಗಿದೆ. ಪಟ್ಟಣದ ಸೂಕ್ಷ್ಮ ಸ್ಥಳಗಳಲ್ಲಿ ಫಿಕ್ಸೆಡ್ ಪಾಯಿಂಟ್ ಮತ್ತು ಗಗನ ಪಹರೆ ನೇಮಿಸಲಾಗಿತ್ತು. ಸಾರ್ವಜನಿಕರಿಗೆ ಅಡಚಣೆಯಾಗದಂತೆ ಬದಲಿ ಸಂಚಾರಿ ವ್ಯವಸ್ಥೆಯನ್ನು ಏರ್ಪಡಿಸಲಾಗಿತ್ತು.
ಜಿಲ್ಲಾಧಿಕಾರಿ ಎ.ಎಂ.ಕುಂಜಪ್ಪ ಅವರು ಗಣಪತಿ ವಿಸರ್ಜನಾ ಮೆರವಣಿಗೆ ನಡೆಯಲಿರುವ ಹಿನ್ನೆಲೆಯಲ್ಲಿ ಮೆರವಣಿಗೆ ಹಾದುಹೋಗಲಿರುವ ಬೀದಿಗಳ ಕಟ್ಟಡಗಳ ಮೇಲೆ ಹತ್ತಿ ಕುಳಿತುಕೊಳ್ಳುವುದು ಹಾಗೂ ಗುಂಪುಗೂಡಿ ಮೆರವಣಿಗೆ ವೀಕ್ಷಿಸುವುದನ್ನು ಸೆಕ್ಷನ್ 144 ರನ್ವಯ ನಿಷೇಧಿಸಿ ಆದೇಶ ಹೊರಡಿಸಿದ್ದರು.
ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಸ್ಪಿ ಕುಲದೀಪ್ ಕುಮಾರ್ ಜೈನ್ ವ್ಯಾಪಕ ಪೊಲೀಸ್ ಬಂದೂಬಸ್ತ್ ಏರ್ಪಾಡು ಮಾಡಿದ್ದರು. ಡಿವೈಸ್ಪಿ ಗಂಗಾದರ್ ಸ್ವಾಮಿ, ಜಿಲ್ಲೆಯ ಎಲ್ಲಾ ಸಬ್‍ಇನ್ಸ್‍ಪೆಕ್ಟರ್, ಇನ್ಸ್‍ಪೆಕ್ಟರ್ ಹಾಜರಿದ್ದರು
ಗಣಪತಿ ವಿಸರ್ಜನಾ ಮಹೋತ್ಸವದ ಕರ್ತವ್ಯಕ್ಕೆ ಎಸ್.ಪಿ. ರವರ ನೇತೃತ್ವದಲ್ಲಿ 06 ಡಿಎಸ್‍ಪಿ, 16 ಸರ್ಕಲ್ ಇನ್ಸ್‍ಪೆಕ್ಟರ್, 25 ಸಬ್ ಇನ್ಸ್‍ಪೆಕ್ಟರ್, ಎಎಸ್.ಐ 58, 30 ಜನ ಸಿಬ್ಬಂದಿಗಳ ಚಾಮರಾಜ ಕಮಾಂಡೋ ಪಡೆ ಸೇರಿದಂತೆ ಎರಡು ಕಮಾಂಡೋ ಪಡೆ , 490 ಮುಖ್ಯ / ಸಾಮಾನ್ಯ ಪೊಲೀಸ್ ಪೇದೆ, 30 ಮಹಿಳಾ ಪೇದೆ, 6 ಕೆ.ಎಸ್.ಆರ್.ಪಿ ಪ್ಲಟೂನ್, 04 ಡಿ.ಎ.ಆರ್ ಪ್ಲಟೂನ್ ಮತ್ತು 300 ಜನ ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ ಸಾವಿರದ ಐನೂರಕ್ಕೂ ಹೆಚ್ಚಿನ ಪೊಲೀಸರನ್ನು ಬಂದೋಬಸ್ತ್‍ಗಾಗಿ ನಿಯೋಜನೆ ಮಾಡಲಾಗಿತ್ತು. ಜೊತೆಗೆ 02 ಫೈರ್ ಟೆಂಡರ್‍ಗಳು, 01 ಆಂಬುಲೆನ್ಸ್ ವಾಹನವನ್ನು ಸಹ ನಿಯೋಜಿಸಲಾಗಿತ್ತು *************************************************
ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಎಲ್ಲಾ ಸಮುದಾಯ, ಸಂಘಟನೆಗಳ ಸಹಕಾರದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅಕ್ಟೋಬರ್ 15ರಂದು ನಗರದಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾಧಿಕಾರಿ ಬಿ. ರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಎಂದಿನಂತೆ ಈ ಬಾರಿಯು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರ ಪಡೆದು ಯಶಸ್ವಿಯಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಈ ಬಾರಿಯು ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲು ಎಲ್ಲರ ಸಲಹೆ ಪಡೆದು ಕಾರ್ಯೋನ್ಮುಖರಾಗಲಿದ್ದೇವೆ ಎಂದರು.
ಈ ಬಾರಿ ನಗರದ ಪ್ರಮುಖ ಸ್ಥಳದಲ್ಲಿ ವಾಲ್ಮೀಕಿ ಭವನ ನಿರ್ಮಾಣಗೊಂಡು ಉದ್ಘಾಟನೆ ಸಹ ನೆರವೇರಿದೆ. ಹೀಗಾಗಿ ವಾಲ್ಮೀಕಿ ಭವನದಲ್ಲಿಯೆ ಕಾರ್ಯಕ್ರಮ ಹಮ್ಮಿಕೊಂಡರೆ ಅರ್ಥಪೂರ್ಣವಾಗುತ್ತದೆ. ಹೆಚ್ಚು ಜನರು ಸಮಾವೇಶಗೊಳ್ಳುವ ಹಿನ್ನಲೆಯಲ್ಲಿ ಭವನದ ಅವರಣದಲ್ಲಿ ವಿಶಾಲವಾಗಿ ಶಾಮಿಯಾನ ಹಾಕಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸುವ ಜನತೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಪ್ರವಾಸಿ ಮಂದಿರದಿಂದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರ ಮೆರವಣಿಗೆಯನ್ನು ಸಹ ಅದ್ದೂರಿಯಾಗಿ ನಡೆಸಲಾಗುವುದು. ನಾದಸ್ವರ ಇನ್ನಿತರ ಕಲಾತಂಡಗಳೊಡನೆ ಮೆರವಣಿಗೆ ಸಾಗಲು ಅವಶ್ಯಕ ವ್ಯವಸ್ಥೆಗಳನ್ನು ಕೈಗೊಳ್ಳಲಾಗುವುದು ಎಂದರು.
ವೇದಿಕೆ ಸಮಾರಂಭದಲ್ಲಿ ವಾಲ್ಮೀಕಿ ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ ಏರ್ಪಡಿಸಲಾಗುವುದು. ವಾಲ್ಮೀಕಿ ಅವರ ಕುರಿತು ಹೆಚ್ಚು ಅಧ್ಯಯನ ಮಾಡಿರುವ ಉಪನ್ಯಾಸಕರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಂದು ನಗರದಲ್ಲಿ ವಿಶೇಷ ಸ್ವಚ್ಚತೆ ಕಾರ್ಯ ಕೈಗೊಂಡು ತಳಿರು ತೋರಣಗಳಿಂದ ಸಿಂಗರಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆಹ್ವಾನ ಪತ್ರಿಕೆಯನ್ನು ಶೀಘ್ರ ಮುದ್ರಿಸಿ ವಿತರಿಸಲಾಗುವುದು. ಜಯಂತಿಯನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಎಲ್ಲ ಸಮುದಾಯ, ಸಂಘಟನೆಗಳು ಪಾಲ್ಗೊಳ್ಳುವ ಮೂಲಕ ಅದ್ಧೂರಿಯಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸಹ ಕಾರ್ಯಕ್ರಮ ಆಯೋಜನೆ ಸಂಬಂಧ ಅಗತ್ಯ ಸಲಹೆ ನೀಡಿ ಮಾತನಾಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೆಶಕರಾದ ಸರಸ್ವತಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಬಿ.ಎಸ್. ವಿನಯ್, ಮುಖಂಡರಾದ ಶಾ. ಮುರಳಿ, ಸುರೇಶ್‍ನಾಯಕ, ಕಣ್ಣೇಗಾಲ ಮಹದೇವನಾಯಕ, ಆರ್. ಸುಂದರ್, ಚಾ.ಸಿ. ಸೋಮನಾಯಕ, ಚಾ.ರಂ. ಶ್ರೀನಿವಾಸಗೌಡ, ಚೆಂಗುಮಣಿ, ಸೋಮಶೇಖರ್ ಬಿಸಲ್ವಾಡಿ, ಸಿ.ಎಂ. ಕೃಷ್ಣಮೂರ್ತಿ, ವೆಂಕಟರಮಣ ಪಾಪು, ಗು. ಪುರುಷೋತ್ತಮ್, ಶಿವರಾಜು, ಆಲೂರು ನಾಗೇಂದ್ರ, ಸುರೇಶ್ ನಾಗ್, ಜಿ. ಬಂಗಾರು, ಪರ್ವತರಾಜು, ಚಾ.ಗು. ನಾಗರಾಜು, ಸಿ.ಸಿ. ಪ್ರಕಾಶ್, ಶಿವು ಇತರೆ ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಅಗತ್ಯ ಸಲಹೆ ನೀಡಿದರು.
ನಾಡಹಬ್ಬ ದಸರಾ: ಸಂಘಟನೆ, ಸಮುದಾಯ ಮುಖಂಡರೊಂದಿಗೆ ಸಮಾಲೋಚನೆ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರಾದಾಯಿಕ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಬಿ. ರಾಮು ಅವರು ವಿವಿಧ ಸಂಘಟನೆ, ಸಮುದಾಯ ಮುಖಂಡರೊಂದಿಗೆ ಇಂದು ಪೂರ್ವಭಾವಿ ಸಭೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ದಸರಾ ಮಹೋತ್ಸವ ಆಚರಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ದಸರಾ ಆಚರಣೆ ಕುರಿತು ಸಮಾಲೋಚನೆ ನಡೆಸಿ ಸಂಘಟನೆ, ಸಮುದಾಯ ಮುಖಂಡರಿಂದ ಸಲಹೆ ಕೇಳಿದರು.
ದಸರಾ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಕೈಗೊಳ್ಳಬೇಕಿರುವ ಉದ್ಘಾಟನೆ ಕಾರ್ಯಕ್ರಮ, ವಿಧಾನಸಭಾ ಕ್ಷೇತ್ರವಾರು ಹಾಗೂ ಜಿಲ್ಲಾಕೇಂದ್ರದಲ್ಲಿ ಆಯೋಜಿಸಬೇಕಿರುವ ಸಾಂಸ್ಕøತಿಕ ಕಾರ್ಯಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ವಿವಿರ ನೀಡಿದರು.
ಅಕ್ಟೋಬರ್ 7, 8 ಹಾಗೂ 9ರಂದು ದಸರಾ ಆವರಣೆಯನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುತ್ತದೆ. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ಕಾರ್ಯಕ್ರಮ ಏರ್ಪಾಡು ಮಾಡಲಾಗುತ್ತದೆ. ಆಯಾ ವಿಧಾನಸಭಾ ಜನಪ್ರತಿನಿಧಿಗಳ ಸಮ್ಮುಖದಲ್ಲಿ ತೀರ್ಮಾನಿಸಿ ಸ್ಥಳೀಯವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದರು.
ಜಿಲ್ಲಾಮಟ್ಟದಲ್ಲಿ 3 ದಿನಗಳ ಕಾಲ ದಸರಾ ಆಚರಣೆ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗುತ್ತದೆ. ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಕಲಾವಿದರು, ಸೇರಿದಂತೆ ಎಲ್ಲರಿಗೂ ಕಾರ್ಯಕ್ರಮದಲ್ಲಿ ನೀಡಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು.
ಸಂಸ್ಕøತಿ, ಪರಂಪರೆ ಬಿಂಬಿಸುವ ನಾಡಹಬ್ಬವನ್ನು ಸಾಂಪ್ರಾದಾಯಿಕವಾಗಿ ಆಚರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.
ಇದೇ ವೇಳೆ ಕಾರ್ಯಕ್ರಮ ಆಚರಣೆ ಸಂಬಂಧ ಸಭೆಯಲ್ಲಿ ಹಾಜರಿದ್ದ ಮುಖಂಡರು, ಕಲಾವಿದರು ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೆಶಕರಾದ ಸರಸ್ವತಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಬಿ.ಎಸ್. ವಿನಯ್, ಮುಖಂಡರಾದ ಶಾ. ಮುರಳಿ, ಸುರೇಶ್‍ನಾಯಕ, ಕಣ್ಣೇಗಾಲ ಮಹದೇವನಾಯಕ, ಆರ್. ಸುಂದರ್, ಚಾ.ಸಿ. ಸೋಮನಾಯಕ, ಚಾ.ರಂ. ಶ್ರೀನಿವಾಸಗೌಡ, ಚೆಂಗುಮಣಿ, ಸೋಮಶೇಖರ್ ಬಿಸಲ್ವಾಡಿ, ಸಿ.ಎಂ. ಕೃಷ್ಣಮೂರ್ತಿ, ವೆಂಕಟರಮಣ ಪಾಪು, ಗು. ಪುರುಷೋತ್ತಮ್, ಶಿವರಾಜು, ಆಲೂರು ನಾಗೇಂದ್ರ, ಸುರೇಶ್ ನಾಗ್, ಜಿ. ಬಂಗಾರು, ಪರ್ವತರಾಜು, ಚಾ.ಗು. ನಾಗರಾಜು, ಸಿ.ಸಿ. ಪ್ರಕಾಶ್, ಶಿವು ಇತರೆ ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಅಗತ್ಯ ಸಲಹೆ ನೀಡಿದರು.
ಅಕ್ಟೋಬರ್ 2ರಂದು ನಗರದಲ್ಲಿ ಗಾಂಧೀ ಜಯಂತಿ ಆಚರಣೆ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹಾತ್ಮ ಗಾಂಧೀ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 2ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ಭಜನಾ ಕಾರ್ಯಕ್ರಮ, 10.30 ಗಂಟೆಗೆ ಸರ್ವಧರ್ಮ ಪ್ರಾರ್ಥನೆ, 10.40 ಗಂಟೆಗೆ ಶಾಲಾ ಮಕ್ಕಳಿಂದ ಗಾಂಧೀ ವೇಷ-ಭೂಷಣ ಪ್ರದರ್ಶನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಅ. 3ರಂದು ಕೊಳ್ಳೇಗಾಲದಲ್ಲಿ ವನ್ಯಜೀವಿ ಸಪ್ತಾಹ ಆಚರಣೆ ಸಮಾರೋಪ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ಅರಣ್ಯ ಇಲಾಖೆ ಹಮ್ಮಿಕೊಂಡಿರುವ 62ನೇ ವನ್ಯಜೀವಿ ಸಪ್ತಾಹ ಆಚರಣೆ ಸಮಾರೋಪ ಸಮಾರಂಭವು ಅಕ್ಟೋಬರ್ 3ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್. ಜಯಣ್ಣ ಅದ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಶಾಸಕರಾದ ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ನಗರಸಭೆ ಅಧ್ಯಕ್ಷರಾದ ಮಲ್ಲಿಕಾರ್ಜುನ, ಸದಸ್ಯರಾದ ಶಾಂತರಾಜು ಬಸ್ತೀಪುರ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅರ್.ಎಸ್. ಸುರೇಶ್, ಬಿ.ಜೆ. ಹೊಸಮಠ್, ಅಜಯ್ ಮಿಶ್ರಾ, ಬಿ.ಪಿ. ರವಿ,ಸಿ. ಜಯರಾಂ, ಎಸ್.ಎಸ್. ಲಿಂಗರಾಜ, ಟಿ. ಹೀರಾಲಾಲ್, ಚೋಳರಾಜ,ಆರ್.ಎಚ್. ನಾಗರಾಜು, ವನ್ಯಜೀವಿ ಮಂಡಳಿ ಸದಸ್ಯರಾದ ಜಿ. ಮಲ್ಲೇಶಪ್ಪ, ಡಾ. ಎಂ. ಜಡೇಗೌಡ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
***************
ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಸಹಕಾರ: ಡಿ.ಸಿ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲೂ ಚುನಾವಣಾ ಆಯೋಗದ ನಿರ್ದೇಶನದಂತೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ನಡೆಸುವ ಪ್ರಕ್ರಿಯೆಗೆ ಎಲ್ಲರು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿ ಪ್ರಕಟಿಸಿ ಪ್ರಚುರಪಡಿಸುವ ಸಂಬಂಧ ನಡೆದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಕರಡು ಮತದಾರರ ಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಈ ಸಂಬಂಧ ಹಕ್ಕು, ಆಕ್ಷೇಪಣೆಗಳನ್ನು ತಾಲೂಕಿನ ಮತಗಟ್ಟೆಗಳಲ್ಲಿ ಬಿ.ಎಲ್.ಓ ಮೂಲಕ ಹಾಗೂ ಆಯಾ ತಾಲೂಕು ಕಚೇರಿಯಲ್ಲಿ ಅಕ್ಟೋಬರ್ 1ರಿಂದ 31ರ ವರೆಗೆ ಸ್ವೀಕರಿಸಲಾಗುತ್ತದೆ. ಅಕ್ಟೋಬರ್ 7 ಹಾಗೂ 14ರಂದು ಭಾವಚಿತ್ರವಿರುವ ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರನ್ನು ಪರಿಶೀಲಿಸಲು ಬರುವ ಮತದಾರರ ಹೆಸರುಗಳನ್ನು ಗ್ರಾಮಸಭೆ, ಸ್ಥಳೀಯ ಸಂಘಸಂಸ್ಥೆಗಳಲ್ಲಿ ಓದಲಾಗುತ್ತದೆ ಎಂದರು.
ಅಕ್ಟೋಬರ್ 16 ಮತ್ತು 23ರಂದು ರಾಜಕೀಯ ಪಕ್ಷಗಳು ನೇಮಕ ಮಾಡಿರುವ ಮತಗಟ್ಟೆ ಮಟ್ಟದ ಏಜೆಂಟರಿಂದ ಹಕ್ಕು ಆಕ್ಷೇಪಣೆಗಳನ್ನು ಸ್ವೀಕರಿಸಲು ವಿಶೇಷ ಆಂದೋಲನ ನಡೆಸಲಾಗುವುದು. ಅಕ್ಟೋಬರ್ 30ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು. ನವೆಂಬರ್ 24ರಂದು ಮತದಾರರ ಪಟ್ಟಿಗೆ ಹೆಸರುಗಳ ಸೇರ್ಪಡೆ ಹಾಗೂ ಭಾವಚಿತ್ರಗಳ ಸೇರ್ಪಡೆ ಹಾಗೂ ಪೂರಕ ಪಟ್ಟಿಗಳನ್ನು ಸಿದ್ಧಪಡಿಸಲಾಗುವುದು. 2017ರ ಜನವರಿ, 10 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಕರಡು ಮತದಾರರ ಪಟ್ಟಿ ಪ್ರಕಟಣೆ ಹೊರಡಿಸಿರುವ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಲು ಮತ್ತು ಪಟ್ಟಿಯಲ್ಲಿ ಕಂಡುಬಂದಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಮತದಾರರ ಹೆಸರು 2 ಕಡೆ ಸೇರ್ಪಡೆಯಾಗಿದ್ದಲ್ಲಿ ಅದನ್ನು ಕೈಬಿಡಲಾಗುತ್ತದೆ. ಶೇ. 100ರಷ್ಟು ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಗಮನ ನೀಡಲಾಗುತ್ತದೆ ಎಂದರು.
ಮತದಾರರ ಪಟ್ಟಿ ಪ್ರಚುರಪಡಿಸುವ ಕಾರ್ಯಕ್ಕೆ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಇದೇ ವೇಳೆ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರಡು ಮತದಾರರ ಪಟ್ಟಿಯನ್ನು ವಿತರಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಉಪವಿಭಾಗಾಧಿಕಾರಿ ಕವಿತಾರಾಜಾರಾಂ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ರಾಜಕೀಯ ಪಕ್ಷಗಳಪ್ರತಿನಿಧಿಗಳಾದ ಕೆ.ಪಿ. ಸದಾಶಿವಮೂರ್ತಿ, ಸಿ.ಎಂ. ಕೃಷ್ಣಮೂರ್ತಿ, ನೂರೊಂದುಶೆಟ್ಟಿ, ಬ್ಯಾಡಮೂಡ್ಲು ಬಸವಣ್ಣ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಟಾಕಿ, ಬಿಡಿ ಪೆಟ್ರೋಲ್ ಮಾರಾಟ ನಿಷೇಧ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಲಯದ ವಿಚಾರಣೆ ಇರುವ ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ ಮುಂಜಾಗರುಕತಾ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಎಲ್ಲ ಬಗೆಯ ಪಟಾಕಿ ಹಾಗೂ ಬಿಡಿ ಪೆಟ್ರೋಲ್ ಮಾರಾಟವನ್ನು ಅಕ್ಟೋಬರ್ 1ರಿಂದ 7ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 01 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ಅವರು ಅಕ್ಟೋಬರ್ 3ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅ. 3ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲ ಪಟ್ಟಣದಲ್ಲಿ ನಡೆಯಲಿರುವ ರಾಷ್ಟ್ರೀಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಸಂಜೆ 4.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಥಪೂರ್ಣವಾಗಿ ನಡೆದ ಗಾಂಧೀ ಜಯಂತಿ
ಚಾಮರಾಜನಗರ, ಅ. 02 (ಕರ್ನಾಟಕ ವಾರ್ತೆ):- ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ನಗರದಲ್ಲಿಂದು ಆಚರಿಸಲಾಯಿತು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಗಾಂಧೀಜಿ ಕುರಿತು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿದ್ದು ವಿಶೇಷ ಗಮನ ಸೆಳೆಯಿತು.
ತೆರಕಣಾಂಬಿಯ ಸಿದ್ಧನಗೌಡ ಪಾಟೀಲ ಅವರು ಗಾಂಧೀ ಕುರಿತ ಗೀತೆಗಳ ಗಾಯನ ಹಾಗೂ ಭಜನಾ ಕಾರ್ಯಕ್ರಮವನ್ನು ಪ್ರಸ್ತುತ ಪಡಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಗಾಂಧೀ ಜಯಂತಿ ಅಂಗವಾಗಿ ಹೊರತಂದಿರುವ ಜನಪದ, ಮಾರ್ಚ್ ಆಫ್ ಕರ್ನಾಟಕ ವಿಶೇಷಾಂಕಗಳು, ನಮ್ಮ ಗಾಂಧೀ ತಾತ, ನನ್ನ ಜೀವನವೇ ನನ್ನ ಸಂದೇಶ, ಬಾಪೂಜಿ ಸೇವಾಕೇಂದ್ರ ಕುರಿತ ಕಿರುಹೊತ್ತಿಗೆಗಳನ್ನು ಬಿಡುಗಡೆ ಮಾಡಲಾಯಿತು.
ಧಾರ್ಮಿಕ ಗುರುಗಳಾದ ಸಿದ್ಧ ಮಲ್ಲೇಶ್ವರ ವಿರಕ್ತ ಮಠದ ಚನ್ನಬಸವೇಶ್ವರ ಸ್ವಾಮೀಜಿ, ಮಹಮದ್ ಜಿಯಾ ಉಲ್ಲಾ ಹಾಗೂ ಫಾದರ್ ರೆವರೆಂಡ್ ಪುಟ್ಟರಾಜು ಅವರು ಸರ್ವಧರ್ಮ ಪ್ರಾರ್ಥನೆ ಮಾಡಿದರು.
ಚಿಕ್ಕ ಮಕ್ಕಳು ಗಾಂಧೀ ವೇಷಧಾರಿಗಳಾಗಿ ವೇದಿಕೆಯಲ್ಲಿ ನಿಂತು ಗಾಂಧೀಜಿಯವರ ಸಂದೇಶವನ್ನು ಸಾರಿದರು. ಗಾಂಧೀಯವರಿಗೆ ಪ್ರಿಯವಾಗಿದ್ದ ರಘುಪತಿ ರಾಘವ ರಾಜಾರಾಂ ಸೇರಿದಂತೆ ಇತರೆ ಗೀತೆಗಳನ್ನು ಹಾಡಿದರು.
ವೇದಿಕೆ ಮುಂಭಾಗದಲ್ಲಿ ಬದನವಾಳುವಿನಿಂದ ಬಂದಿದ್ದ ಮಹಿಳೆಯರು ಗಾಂಧೀ ಅವರಿಗೆ ಪ್ರಿಯವಾಗಿದ್ದ ಚರಕದ ಮೂಲಕ ನೂಲು ತೆಗೆಯುವ ಪ್ರದರ್ಶನವನ್ನು ನೀಡಿದ್ದು ಸಭಿಕರಲ್ಲಿ ವಿಶೇಷ ಅಸಕ್ತಿ ಮೂಡಿಸಿತು.
ಗಾಂಧೀ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಧೀಮಂತ, ಮಹಾತ್ಮ ಗಾಂಧೀಜಿ ಅವರು. ಅವರ ಸಹನೆ ಹಾಗೂ ಅಹಿಂಸಾ ತತ್ವವನ್ನು ಇಡೀ ವಿಶ್ವವೇ ಗೌರವಿಸಿದೆ. ಗಾಂಧೀ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಪ್ರಸ್ತುತ ಸಂದರ್ಭದಲ್ಲಿರುವ ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತ್ ಆಡಳಿತ ವ್ಯವಸ್ಥೆಯು ಗಾಂಧೀಜಿಯವರ ಕನಸಾಗಿತ್ತು. ಅವರ ಆಶಯದಂತೆ ಗ್ರಾಮ ಆಡಳಿತ ವ್ಯವಸ್ಥೆ ಬಂದಿದೆ ಎಂದು ರಾಮಚಂದ್ರ ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಗಾಂಧೀಜಿ ಅವರು ಸಾರ್ವಕಾಲಿಕ ಸತ್ಯ. ಶಾಂತಿಯ ಪ್ರತಿರೂಪ ಆಗಿದ್ದಾರೆ. ಶಾಂತಿಮಂತ್ರವನ್ನು ಜಪಿಸಿದ ಗಾಂಧೀಯವರನ್ನು ಪ್ರಪಂಚದ ಎಲ್ಲ ದೇಶಗಳು ಸ್ಮರಣೆ ಮಾಡುತ್ತಿವೆ. ಮನುಕುಲದ ಒಳಿತಿಗೆ ಚಿಂತನೆ ಮಾಡಿದ ಗಾಂಧೀಯವರ ಆದರ್ಶಗಳಿಗೆ ಒಲವು ವ್ಯಕ್ತವಾಗಿದೆ ಎಂದರು.
ತ್ಯಾಗ, ಶಾಂತಿ, ಅಹಿಂಸೆ ಮಾರ್ಗವನ್ನು ಪ್ರತಿಪಾದಿಸಿದ ಗಾಂಧೀಜಿಯವರ ವಿಚಾರಧಾರೆಗಳ ಬಗ್ಗೆ ಇಂದಿನ ಪೀಳಿಗೆಗೆ ಹೆಚ್ಚು ಅರಿವು ಮೂಡಿಸುವ ಪ್ರಯತ್ನ ಮಾಡಬೇಕಿದೆ. ಮಾನವೀಯತೆಯನ್ನು ತೋರುವ ಗುಣವನ್ನು ಬೆಳೆಸಿಕೊಳ್ಳಬೇಕಿದೆ. ಹೀಗಾದಾಗ ಮಾತ್ರ ಗಾಂಧೀ ಅವರಿಗೆ ಗೌರವ ಕೊಟ್ಟಂತಾಗುತ್ತÀದೆ ಎಂದು ಜಿಲ್ಲಾಧಿಕಾರಿ ಅಭಿಪ್ರಾಯ ಪಟ್ಟರು.
ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿರಾಜಪ್ಪ, ಪದ್ಮಾವತಿ ವೆಂಕಟರಾಮ್, ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಸ
ಅ. 4ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿಚಾರಸಂಕಿರಣ
ಚಾಮರಾಜನಗರ, ಅ. 03 (ಕರ್ನಾಟಕ ವಾರ್ತೆ):- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ಅಕ್ಟೋಬರ್ 4ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅವರಣದಲ್ಲಿ ವಿಚಾರಸಂಕಿರಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಎಚ್.ಎಸ್. ಪ್ರೇಮಲತಾ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.
ಮಹಿಳಾ ವಿಮೋಚನೆ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಕುರಿತು ಮೈಸೂರು ವಿಶ್ವವಿದ್ಯಾಲಯದ ಮಹಾರಾಜ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ಯಶೋಧ ವಿಷಯ ಮಂಡನೆ ಮಾಡುವರು.
ಡಾ. ಬಿ.ಆರ್. ಅಂಬೇಡ್ಕರ್-ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಅರ್ಥೈಸುವಿಕೆ ಕುರಿತು ಬನ್ನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಕೃಷ್ಣರಾಜೇಂದ್ರ ಭರತ್ ವಿಷಯ ಮಂಡಿಸುವರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸತೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಪಿ. ದೇವರಾಜು ಉಪಸ್ಥಿತರಿರುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ ಅಂತ್ಯದೊಳಗೆ ಸೆಟ್‍ಟಾಪ್ ಬಾಕ್ಸ್ ಅಳವಡಿಕೆಗೆ ಡಿ.ಸಿ ಸೂಚನೆ
ಚಾಮರಾಜನಗರ, ಅ. 03 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಟಿ.ವಿ ವೀಕ್ಷಣೆಗೆ ಸೆಟ್‍ಟಾಪ್ ಬಾಕ್ಸ್‍ನ್ನು ಅಕ್ಟೋಬರ್ 31ರೊಳಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಬಿ. ರಾಮು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕೇಬಲ್ ಟಿ.ವಿ ಡಿಜಿಟಲೀಕರಣ ಅನುಷ್ಠಾನ ಸಂಬಂಧ ನಡೆದ ಕೇಬಲ್ ಟಿ.ವಿ ಅಪರೇಟರ್‍ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮನರಂಜನೆಯ ಉದ್ದೇಶದಿಂದ ಟೆಲಿವಿಷನ್(ಟಿ.ವಿ)ಗೆ ಇಂದು ಎಲ್ಲರು ಅವಲಂಬಿತರಾಗಿದ್ದಾರೆ. ಆದರೆ ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಂಡಿಲ್ಲ. ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲು ಕೇಂದ್ರ ಸರ್ಕಾರದ ಆದೇಶವಾಗಿದ್ದು, ಸರ್ಕಾರದ ಆದೇಶಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಬೇಕಾಗಿದೆ ಎಂದರು.
ಸೆಟ್‍ಟಾಪ್ ಬಾಕ್ಸ್ ಅಳವಡಿಕೆಗೆ ಯಾವುದೇ ವಿಳಂಬ, ನೆಪಗಳನ್ನು ಹೇಳದೆ ಜಿಲ್ಲೆಯ ಎಲ್ಲಾ ಕೇಬಲ್ ಅಪರೇಟರ್‍ಗಳು ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲು ಟಿ.ವಿ. ವೀಕ್ಷಕರು, ಗ್ರಾಹಕರಿಗೆ ತಿಳಿಸಬೇಕು ಎಂದು ಸೂಚಿಸಿದರು.
ಟಿ.ವಿ. ಗಳಿಗೆ ಸೆಟ್‍ಟಾಪ್ ಬಾಕ್ಸ್ ಉಪಯೋಗಿಸುವಲ್ಲಿ ಸಾಮಾನ್ಯವಾಗಿ ಎಲ್ಲ ಜಿಲ್ಲೆಗಳು ಶೇ. 100ರಷ್ಟು ಸಾಧನೆಗೈದಿವೆ. ಈ ವಿಷಯದಲ್ಲಿ ಜಿಲ್ಲೆಯ ಸಾಧನೆ ಶೂನ್ಯವಾಗಿದೆ. ಇತರೆ ಜಿಲ್ಲೆಗಳಂತೆ ನಾವು ಶೇ. 100ರಷ್ಟು ಸಾಧನೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.
ಮೊದಲು ಸೆಟ್‍ಟಾಪ್ ಬಾಕ್ಸ್ ಉಪಯೋಗದ ಬಗ್ಗೆ ಜನರಲ್ಲಿ ತಿಳಿಹೇಳಿ ನಂತರ ಯಾರು ಅಳವಡಿಸಿಕೊಳ್ಳುವುದಿಲ್ಲವೋ ಅಂತಹವರ ಕೇಬಲ್ ಸಂಪರ್ಕವನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಿ. ಈ ಹಿಂದೆಯೆ ಎಲ್ಲ ಕೇಬಲ್ ಅಪರೇಟರ್‍ಗಳಿಗೂ ಸೆಟ್‍ಟಾಪ್ ಬಾಕ್ಸ್ ಅಳವಡಿಸಿಕೊರ್ಲಲುವ ಸಂಬಂಧ ಸೂಚನೆ ನೀಡಲಾಗಿತ್ತು. ಆದರೆ ಅಪರೇಟರ್‍ಗಳು ಸೂಚನೆ ಪಾಲಿಸಿಲ್ಲ. ಸೂಚಿತ ಅವಧಿಯೊಳಗೆ ಅಳವಡಿಕೆ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು..
ಎಲ್ಲ ಕೇಬಲ್ ಅಪರೇಟರ್‍ಗಳು ಗ್ರಾಹಕರ ಮನವೊಲಿಸಿ ಸೆಟ್‍ಟಾಪ್ ಬಾಕ್ಸ್ ಉಪಯೋಗಿಸಲು ಪ್ರೇರೆಪಿಸಬೇಕು. ಅಕ್ಟೋಬರ್ 15ರೊಳಗೆ ಶೇ. 60ರಷ್ಟು ಗುರಿ ಪೂರ್ಣಗೊಳಿಸಿಬೇಕು. ಅಕ್ಟೋಬರ್ ಅಂತ್ಯದೊಳಗೆ ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳುವಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಬೇಕು. ತಪ್ಪಿದಲ್ಲಿ ಕೇಬಲ್ ಅಪರೇಟರ್‍ಗಳ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಾಕೀತು ಮಾಡಿದರು.
ಪೊಲೀಸ್ ಉಪ ಅದೀಕ್ಷಕರಾದ ಗಂಗಾಧರಸ್ವಾಮಿ, ನಗರಸಭೆ ಪೌರಾಯುಕ್ತರಾದ ರಾಜಣ್ಣ, ಯೋಜನಾ ನಿರ್ದೆಶಕರಾದ ರವಿಕುಮಾರ್, ಜಿಲ್ಲಾ ಹಾಗೂ ತಾಲೂಕು ಕೇಬಲ್ ಅಪರೇಟರ್ ಮಾಲೀಕರ ಸಂಘದ ಅಧ್ಯಕ್ಷರು, ಸದಸ್ಯರು, ಪದಾಧಿಕಾರಿಗಳು ಜಿಲ್ಲೆಯ ಎಲ್ಲ ಕೇಬಲ್ ಅಪರೇಟರ್‍ಗಳು ಹಾಗೂ ಇನ್ನಿತರರು ಸಭೆಯಲ್ಲಿ ಹಾಜರಿದ್ದರು.
ಅ. 5, 6ರಂದು ವಿಭಾಗಮಟ್ಟದ ಬಾಲಕ, ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಚಾಮರಾಜನಗರ, ಅ. 03 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಜೆ.ಎಸ್.ಎಸ್.ವಿದ್ಯಾಸಂಸ್ಥೆ ವತಿಯಿಂದ ಅಕ್ಟೋಬರ್ 5 ಮತ್ತು 6ರಂದು ರಂದು 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಮೈಸೂರು ವಿಭಾಗಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ನಗರದ ಜೆ.ಎಸ್.ಎಸ್. ಪ್ರೌಢಶಾಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಅಕ್ಟೋಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಕ್ರೀಡಾ ದ್ವಜಾರೊಹಣ ನೆರವೇರಿಸುವರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಪಂದ್ಯಾವಳಿಯನ್ನು ಉದ್ಘಾಟನೆ ಮಾಡುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಕ್ರೀಡಾಜ್ಯೋತಿ ಸ್ವೀಕಾರ ಮಾಡುವರು
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಮಂಗಳೂರು ಜಿಲ್ಲೆಗಳ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.7ರಂದು ಚಾ.ನಗರಸಭೆ ಸಾಮಾನ್ಯ ಸಭೆ
ಚಾಮರಾಜನಗರ, ಅ. 04 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಸ್.ಎನ್ ರೇಣುಕಾ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 7ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ಬಿ.ಆರ್. ಅಂಬೇಡ್ಕರ್ ಕೃತಿಗಳ ಅಧ್ಯಯನದಿಂದ ಬೌದ್ಧಿಕ ಜ್ಞಾನ : ಜಿಲ್ಲಾಧಿಕಾರಿ ಬಿ.ರಾಮು
ಚಾಮರಾಜನಗರ, ಅ. 04 (ಕರ್ನಾಟಕ ವಾರ್ತೆ):- ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬರಹ ಪುಸ್ತಕಗಳನ್ನು ಅಧ್ಯಯನ ಮಾಡುವುದರಿಂದ ಬೌದ್ಧಿಕ ಜ್ಞಾನ, ಆತ್ಮಬಲ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ವಿಶೇಷವಾಗಿ ಅಂಬೇಡ್ಕರ್ ಕುರಿತ ಕೃತಿಗಳನ್ನು ಹೆಚ್ಚು ಓದಬೇಕಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿಚಾರಸಂಕಿರಣವನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರ ಜೀವನವೇ ಒಂದು ಸಂದೇಶವಾಗಿದೆ. ಅಗಾಧ ಪಾಂಡಿತ್ಯ ಜ್ಞಾನ ಹೊಂದಿದ್ದ ಅಂಬೇಡ್ಕರ್ ಅವರ ಬದುಕು ಹಾಗೂ ಚಿಂತನೆಗಳ ಬಗ್ಗೆ ಹೆಚ್ಚು ಅಧ್ಯಯನ ಮಾಡಿದಂತೆಲ್ಲಾ ಭೌದ್ಧಿಕ ಬೆಳವಣಿಗೆಯಾಗಲಿದೆ. ವಿದ್ಯಾರ್ಥಿಗಳು ಅಂಬೇಡ್ಕರ್ ಬಗೆಗಿನ ಪುಸ್ತಕಗಳನ್ನು ಓದಿ ವಿಚಾರಧಾರೆಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.
ಸಮಾನತೆ ಮಂತ್ರವನ್ನು ಹೇಳಿಕೊಟ್ಟವರಲ್ಲಿ ಅಂಬೇಡ್ಕರ್ ಅವರೇ ಅಗ್ರಗಣ್ಯರು. ಮನುಷ್ಯತ್ವದ ಬಗ್ಗೆ ಮನವರಿಕೆ ಮಾಡಿಕೊಟ್ಟ ನಾಯಕರಲ್ಲಿ ಅಂಬೇಡ್ಕರ್ ಅವರು ಉನ್ನತ ಸ್ಥಾನದಲ್ಲಿ ನಿಲ್ಲುತ್ತಾರೆ. ಶಿಕ್ಷಣ, ಸಾಮಾಜಿಕ ಸ್ಥಾನಮಾನಗಳನ್ನು ನಿರಾಕರಣೆ ಮಾಡಿದ ಸಂದರ್ಭದಲ್ಲಿ ಹೋರಾಟ ಮಾಡುವ ಮೂಲಕ ಮುಂದಾದ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದರು.
ವಿದ್ಯಾರ್ಥಿಗಳಿಗೆ ಅವರದ್ದೇ ಆದ ದೃಷ್ಠಿಕೋನ ಇರಬೇಕು. ವಿದ್ಯಾರ್ಥಿಗಳಿಗೆ ಸಾಕಷ್ಟು ವಿಫುಲ ಅವಕಾಶಗಳಿವೆ. ಸಮಾಜದಲ್ಲಿ ಉನ್ನತ ಸ್ಥಾನಕ್ಕೇರಲು ಗುರಿ ಹೊಂದಬೇಕು. ಹೊಣೆಗಾರಿಕೆ ಹಾಗೂ ಅಂತರ್ಗತವಾಗಿರುವ ಮನೋಶಕ್ತಿಯಿಂದ ಮೇಲೆ ಬರಬೇಕು ಎಂದು ಜಿಲ್ಲಾಧಿಕಾರಿಯವರು ಸಲಹೆ ಮಾಡಿದರು.
ಮಹಿಳಾ ವಿಮೋಚನೆ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಿಷಯ ಕುರಿತು ಉಪನ್ಯಾಸ ನೀಡಿದ ಮೈಸೂರು ಮಹಾರಾಜ ಕಾಲೇಜು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಯಶೋಧ ಅವರು ಮಹಿಳೆಯರಿಗೆ ಸಂವಿಧಾನಾತ್ಮಕ ಕಾನೂನುಗಳು ಹಾಗೂ ಹಕ್ಕುಗಳನ್ನು ಪಡೆಯಲು ಅಂಬೇಡ್ಕರ್ ಅವರು ಅವಕಾಶ ನೀಡಿದ್ದಾರೆ. ಹೀಗಾಗಿಯೇ ಅಂಬೇಡ್ಕರ್ ಅವರನ್ನು ಮಹಿಳಾ ಹಕ್ಕುಗಳ ಹರಿಕಾರರೆಂದೇ ಕರೆಯಲಾಗುತ್ತದೆ ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಅಲ್ಪಸಂಖ್ಯಾತರು ಮತ್ತು ಹಿಂದುಳಿದವರ ಅರ್ಥೈಸುವಿಕೆ ವಿಷಯ ಕುರಿತು ಮಾತನಾಡಿದ ಬನ್ನೂರು ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರಾದ ಡಾ. ಕೃಷ್ಣರಾಜೇಂದ್ರ ಭರತ್ ಅವರು ಅಂಬೇಡ್ಕರ್ ಅವರು ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಹಾಗೂ ದಲಿತ ವರ್ಗಗಳಿಗೆ ಪ್ರಾಧಾನ್ಯತೆ ಮತ್ತು ಅವಕಾಶಗಳಿಗೆ ಒಲವು ವ್ಯಕ್ತಪಡಿಸಿದರು ಎಂದರು.
ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ಎಚ್.ಎಸ್. ಪ್ರೇಮಲತಾ ಅಧ್ಯಕ್ಷತೆ ವಹಿಸಿದ್ದರು. ಸ್ನಾತಕೋತ್ತರ ವಿಭಾಗದ ರಾಜ್ಯಶಾಸ್ತ್ರ ವಿಭಾಗದ ಸಂಯೋಜಕರಾದ ಡಾ. ಪಿ. ದೇವರಾಜು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸತೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಎ. ರಮೇಶ್, ಮುಖಂಡರಾದ ವೆಂಕಟರಮಣ (ಪಾಪು), ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಮ್ಮ ಗ್ರಾಮ-ನಮ್ಮ ಯೋಜನೆ ಕುರಿತ ವಿಶೇಷ ಪ್ರಚಾರ ಕಲಾಜಾಥಾಗೆ ಚಾಲನೆ
ಚಾಮರಾಜನಗರ, ಅ. 04 (ಕರ್ನಾಟಕ ವಾರ್ತೆ):- ಗ್ರಾಮಗಳ ಅಭಿವೃದ್ಧಿ ಯೋಜನೆಯನ್ನು ತಯಾರಿಸಲು ರೂಪಿಸಿರುವ ನಮ್ಮಗ್ರಾಮ-ನಮ್ಮ ಯೋಜನೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿರುವ ವಿಶೇಷ ಪ್ರಚಾರ ಕಲಾಜಾಥಾಗೆ ಇಂದು ಚಾಲನೆ ನೀಡಲಾಯಿತು.
ಜಿಲ್ಲಾಡಳಿತ ಭವನದ ಅವರಣದಲ್ಲಿಂದು ವಿಶೇಷವಾಗಿ ವಿನ್ಯಾಸಗೊಳಿಸಿರುವ ನಮ್ಮ ಗ್ರಾಮ-ನಮ್ಮ ಯೋಜನೆ ಮಾಹಿತಿ ಕುರಿತ ಪ್ರಚಾರ ವಾಹನಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಹಸಿರು ನಿಶಾನೆ ತೋರುವ ಮೂಲಕ ಕಲಾಜಾಥಾವನ್ನು ಉದ್ಘಾಟಿಸಿದರು.
ಕರ್ನಾಟಕ ಗ್ರಾಮ ಸ್ವರಾಜ್ ಕಾಯ್ದೆ ಸದಾಶಯಗಳ ಸಾಧನೆಗಾಗಿ ಗ್ರಾಮಪಂಚಾಯಿತಿಗಳ ಪಂಚವಾರ್ಷಿಕ ಅಭಿವೃದ್ಧಿ ಮುನ್ನೋಟವನ್ನು ಸಮುದಾಯದ ಸಹಭಾಗಿತ್ವದೊಂದಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೆ ಸ್ಥಳೀಯ ಅಗತ್ಯ ಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗಿರುವ ನಮ್ಮ ಗ್ರಾಮ-ನಮ್ಮ ಯೋಜನೆಯು ಯಶಸ್ವಿಯಾಗಲೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ರಾಮಚಂದ್ರ ಆಶಿಸಿದರು.
ಯೋಜನೆಯ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಪ್ರಚಾರ ಕಾರ್ಯವು ಫಲಪ್ರದವಾಗಲಿ. ಗ್ರಾಮದಲ್ಲಿ ಅನುಷ್ಠಾನವಾಗಿರುವ ಯೋಜನೆ, ಕಾರ್ಯಕ್ರಮಗಳು ಗ್ರಾಮೀಣರಿಗಾಗಿ ಎಂಬ ಮನೋಭಾವನೆ ಮೂಡಿಸಲು ರೂಪಿಸಲಾಗಿರುವ ನಮ್ಮ ಗ್ರಾಮ-ನಮ್ಮ ಯೋಜನೆ ಆಶಯಗಳು ಜನತೆಗೆ ತಲುಪಲಿ ಎಂದು ರಾಮಚಂದ್ರ ಅವರು ಹಾರೈಸಿದರು.
ಒಟ್ಟು 20 ದಿನಗಳ ಕಾಲ ಜಿಲ್ಲೆಯ ನಾಲ್ಕು ತಾಲೂಕುಗಳ 40 ಗ್ರಾಮ ಪಂಚಾಯಿತಿ ಕೇಂದ್ರಗಳಿಗೆ ವಿಶೇಷ ಪ್ರಚಾರ ಕಲಾಜಾಥಾ ಭೇಟಿ ನೀಡಿ ಹಾಡು, ಬೀದಿನಾಟಕಗಳ ಮೂಲಕ ಯೋಜನೆಯ ಮಹತ್ವವನ್ನು ಸಾರಲಿದೆ.
ಉದ್ಘಾಟನಾ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೃಷಿ ಮತ್ತು ಕೈಗಾರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮುನಿರಾಜಪ್ಪ, ಮುಖ್ಯ ಯೊಜನಾಧಿಕಾರಿ ಮಾದೇಶು, ಮುಖ್ಯ ಲೆಕ್ಕಾಧಿಕಾರಿ ಮುದ್ದುರಾಜು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಎ. ರಮೇಶ್, ಇತರರು ಹಾಜರಿದ್ದರು.
ಅ. 5ರಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಾಂಸ್ಕøತಿಕ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ
ಚಾಮರಾಜನಗರ, ಅ. 04 (ಕರ್ನಾಟಕ ವಾರ್ತೆ):- ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಸಕ್ತ ಸಾಲಿನ ಸಾಂಸ್ಕøತಿಕ, ಕ್ರೀಡೆ ಹಾಗೂ ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಅಕ್ಟೋಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜು ಅವರಣದಲ್ಲಿ ನಡೆಯಲಿದೆ.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಎಂ. ಆರ್. ಸುಮತಿ ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರರಾದ ಆರ್. ಧ್ರುವನಾರಾಯಣ ಅವರು ಗೌರವಾನ್ವಿತ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವೆಂಕಟಸ್ವಾಮಿ ಅವರು ಪ್ರಧಾನ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಅ.7ರಂದು ನಗರದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
ಚಾಮರಾಜನಗರ, ಅ. 05 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 7 ರಿಂದ 9ರವರೆಗೆ ಮೂರು ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.
ಅಕ್ಟೋಬರ್ 7ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯದೊಂದಿಗೆ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.
ಅಂದು ಸಂಜೆ 6.30 ಗಂಟೆಗೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಜ್ಯೋತಿ ಬೆಳಗಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್. ವಿ. ಚಂದ್ರು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳು
ಚಾಮರಾಜನಗರ, ಅ. 05 (ಕರ್ನಾಟಕ ವಾರ್ತೆ):- ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಆವರಣದ ಶ್ರೀ ಚಾಮರಾಜೇಶ್ವರ ವೇದಿಕೆಯಲ್ಲಿ ದಸರಾ ಮಹೋತ್ಸವ ಅಂಗವಾಗಿ ಅಕ್ಟೋಬರ್ 7 ರಿಂದ 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದ್ದು ವಿವರ ಇಂತಿವೆ.
ಅಕ್ಟೋಬರ್ 7ರಂದು ಸಂಜೆ 4 ರಿಂದ 4.30ರವರೆಗೆ ಸಿದ್ದಯ್ಯನಪುರದ ಶ್ರೀ ಮಂಟೇಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿ ಅವರಿಂದ ರಂಗಗೀತೆ, 4.30 ರಿಂದ 5.30ರವರೆಗೆ ಸಿ.ಎಂ. ನರಸಿಂಹಮೂರ್ತಿ, ಬಿ. ಬಸವರಾಜು, ಎಸ್. ನಟರಾಜು, ಲತಾ, ಮಹಾಲಿಂಗಸ್ವಾಮಿ, ಎಂ. ಮಂಜುನಾಥ್, ಜೆ.ಬಿ. ಮಹೇಶ್, ಜೆ.ಬಿ. ರಾಜೇಶ್ ಹಾಗೂ ಎಸ್. ಚರಣ್ ಅವರಿಂದ ಸುಗಮ ಸಂಗೀತ, 5.30 ರಿಂದ 6 ಗಂಟೆವರೆಗೆ ಅರಸೀಕೆರೆ ಕುಮಾರಯ್ಯ ಮತ್ತು ತಂಡದಿಂದ ಚಿಟ್ಟಿಮೇಳ, ಮೇಲುಕೋಟೆ ಶಿವಣ್ಣ ಮತ್ತು ತಂಡದಿಂದ ಪಟ ಕುಣಿತ, ಮಂಡ್ಯ ಅನಿಲಕುಮಾರ್ ಮತ್ತು ತಂಡದಿಂದ ಡೊಳ್ಳು ಕುಣಿತ, 7 ರಿಂದ 8ರವರೆಗೆ ಬೆಂಗಳೂರಿನ ಅರ್ಥಾ ಡ್ಯಾನ್ಸ್ ಗ್ರೂಪ್ ಅವರಿಂದ ನೃತ್ಯರೂಪಕ, 8 ರಿಂದ 10 ಗಂಟೆಯವರೆಗೆ ರಾಜ್ಯ ಪ್ರಶಸ್ತಿ ವಿಜೇತರಾದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ನವೀನ್ ಸಜ್ಜು ಮತ್ತು ಸೈಕ್ಲೂನ್ ಡ್ಯಾನ್ಸ್ ಅಕಾಡೆಮಿ ಅವರಿಂದ ಚಲನಚಿತ್ರ ಮತ್ತು ಜನಪದ ಸಂಜೆ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 8ರಂದು ಸಂಜೆ 4 ರಿಂದ 4.30ರವರೆಗೆ ಮಂಗಲದ ಶ್ರೀ ಶಂಕರÉೀಶ್ವರ ಕಲಾ ಸಂಘದವರಿಂದ ರಂಗಗೀತೆ, 4.30 ರಿಂದ 5.30ರವರೆಗೆÀ ಜಿ. ರಾಜಪ್ಪ, ಹೊಂಗನೂರು ನಾಗರಾಜು, ನಾಗಮಹದೇವ, ರಾಮಣ್ಣ, ಪಿ. ನಾಗೇಶ್, ಹೆಚ್.ಎಂ. ಶಿವಣ್ಣ, ರಂಗು ಅಮ್ಮನಪುರ, ಮಾದೇಶ ಬಂಡಿಗೆರೆ, ಮಂಜುನಾಥ್ ಅಮಚವಾಡಿ ಅವರಿಂದ ಜನಪದ ಝೇಂಕಾರ, 5.30 ರಿಂದ 5.45 ಗಂಟೆವರೆಗೆ ಕಾಸರವಾಡಿ ದೇವರಾಜು ಮತ್ತು ತಂಡದಿಂದ ಪೂಜಾ ಕುಣಿತ, ರಾಮಸಮುದ್ರದ ಆರ್.ಎಂ. ಶಿವಮಲ್ಲೇಗೌಡ ಮತ್ತು ತಂಡದಿಂದ ಗೊರವರ ಕುಣಿತ, 6.30 ರಿಂದ 7.30ರವರೆಗೆ ಬೆಂಗಳೂರಿನ ಎಂ.ಡಿ. ಪಲ್ಲವಿ ಮತ್ತು ತಂಡದಿಂದ ಸುಗಮ ಸಂಗೀತ, 7.30 ರಿಂದ 9.30ರವರೆಗೆ ಮಂಡ್ಯ ರಮೇಶ್ ಮತ್ತು ತಂಡದಿಂದ ಚಾಮಚೆಲುವೆ ನಾಟಕ, 9.30 ರಿಂದ 10.30ರವರೆಗೆ ಮೈಸೂರಿನ ಶ್ರೀನಿವಾಸ್ ಮತ್ತು ತಂಡ (ವಿಷ್ಣು ಮ್ಯೂಸಿಕ್ ಗ್ರೂಪ್) ಅವರಿಂದ ಸಂಗಿತ ರಸಮಂಜರಿ ಏರ್ಪಾಡಾಗಿದೆ.
ಅಕ್ಟೋಬರ್ 9ರಂದು ಸಂಜೆ 4 ರಿಂದ 4.30ರವರೆಗೆ ರಾಮಸಮುದ್ರದ ನಿಂಗಶೆಟ್ಟಿ ಮತ್ತು ತಂಡದಿಂದ ತಂಬೂರಿ ಪದ, 4.30 ರಿಂದ 5.15ರವರೆಗೆ ರಾಮಸಮುದ್ರದ ಪಿ. ಮಹೇಶ, ಕಲೆ ನಟರಾಜು, ಸುರೇಶನಾಗ್, ಮಂಜು ಎಸ್. ಗಾಳೀಪುರ, ರಂಗಸ್ವಾಮಿ ಸಿ, ಅರ್ಜುನ್ ಸುರಾಗ್, ಮಹದೇವ ಯಡಿಯೂರು, ಮಲ್ಲಣ್ಣ, ಮಹದೇವಸ್ವಾಮಿ ಕಮರವಾಡಿ ಅವರಿಂದ ಜನಪದ ಝೇಂಕಾರ, 5.15 ರಿಂದ 6 ಗಂಟೆಯವರೆಗೆ ನಗರದ ಶಾರದಾ ನೃತ್ಯ ಶಾಲೆಯವರಿಂದ ನೃತ್ಯ ರೂಪಕ, 6 ರಿಂದ 8ರವರೆಗೆ ತಬಲ ನಾಣಿಯವರ ಹಾಸ್ಯರಂಜಿನಿ ತಂಡದಿಂದ ನಗೆಹಬ್ಬ, 8 ರಿಂದ 10 ಗಂಟೆಯವರೆಗೆ ಸಂಗೀತ ರವೀಂದ್ರನಾಥ್, ಸಂತೋಷ್ ವೆಂಕಿ, ದೀಪಕ್ ದೊಡ್ಡೇರಿ, ಸಿಂಚನ್ ದೀಕ್ಷಿತ್, ಸಂಗೀತ ರಾಜೀವ್, ವ್ಯಾಸರಾಜ್, ಚಿನ್ಮಯಿ, ಆಕಾಂಕ್ಷ ಬಾದಾಮಿ ಅವರಿಂದ ಚಲನಚಿತ್ರ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್À 10ರಂದು ಸಂಜೆ 6 ರಿಂದ 10ರವರೆಗೆ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜು ಸಂಜೆ ಕಾರ್ಯಕ್ರಮ ನಡೆಯಲಿದ್ದು ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಅ.7ರಂದು ನಗರದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
ಚಾಮರಾಜನಗರ, ಅ. 05 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 7 ರಿಂದ 10ರವರೆಗೆ ದಸರಾ ಮಹೋತ್ಸವ ನಡೆಯಲಿದೆ.
ಅಕ್ಟೋಬರ್ 7ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯದೊಂದಿಗೆ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.
ಅಂದು ಸಂಜೆ 6.30 ಗಂಟೆಗೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಜ್ಯೋತಿ ಬೆಳಗಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್. ವಿ. ಚಂದ್ರು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ತಾಲೂಕು, ಮುಖ್ಯ ಪಟ್ಟಣಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಭೇಟಿ: ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಅ. 05 (ಕರ್ನಾಟಕ ವಾರ್ತೆ):- ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಾಲೂಕು ಹಾಗೂ ಮುಖ್ಯ ಪಟ್ಟಣಕ್ಕೆ ಭೇಟಿ ನೀಡಿ ನಾಗರಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 6ರಂದು ಬೆಳಿಗ್ಗೆ 11 ರಿಂದ 1 ಗಂಟೆಯವರೆಗೆ ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹ, ಅಕ್ಟೋಬರ್ 14ರಂದು ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ಚಾಮರಾಜನಗರದ ಸರ್ಕಾರಿ ಅತಿಥಿಗೃಹ, ಅಕ್ಟೋಬರ್ 18ರಂದು ಬೆಳಿಗ್ಗೆ 11ರಿಂದ 1 ಗಂಟೆಯವರೆಗೆ ಯಳಂದೂರಿನ ಸರ್ಕಾರಿ ಅತಿಥಿಗೃಹ, ಅಕ್ಟೋಬರ್ 24ರಂದು ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ಕೊಳ್ಳೇಗಾಲದ ಸರ್ಕಾರಿ ಅತಿಥಿಗೃಹ, ಅಕ್ಟೋಬರ್ 28ರಂದು ಮಧ್ಯಾಹ್ನ 3ರಿಂದ 5 ಗಂಟೆಯವರೆಗೆ ಹನೂರಿನ ಸರ್ಕಾರಿ ಅತಿಥಿಗೃಹದಲ್ಲಿ ನಾಗರಿಕರು ಅರ್ಜಿ ಸಲ್ಲಿಸಬಹುದಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಣಕ್ಕೆ ಒತ್ತಾಯ, ಕೆಲಸ ಮಾಡಿಕೊಡುವಲ್ಲಿ ವಿಳಂಬ, ಇನ್ನಿತರ ತೊಂದರೆ ನೀಡುತ್ತಿರುವ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಭ್ರಷ್ಟಾಚಾರ ನಿಗ್ರಹ ದಳದ ಉಪ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಳಂದೂರು : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಯಳಂದೂರು ತಾಲೂಕಿಗೆ ಸಂಬಂಧಿಸಿದಂತೆ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಆಯ್ಕೆ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 18ರೊಳಗೆ ಯಳಂದೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಲಿಖಿತವಾಗಿ ಅಗತ್ಯ ದಾಖಲೆಗಳೊಡನೆ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಖಾಲಿ ಇದ್ದ 5 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 20 ಸಹಾಯಕಿಯರ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಂತೆಮರಹಳ್ಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ.
ಆಯ್ಕೆ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 18ರೊಳಗೆ ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಗೆ ಲಿಖಿತವಾಗಿ ಅಗತ್ಯ ದಾಖಲೆಗಳೊಡನೆ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ಲಘು ವಾಹನ ಚಾಲನಾ ತರಬೇತಿ ನೀಡುವ ಸಲುವಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಅಭ್ಯರ್ಥಿಗಳು ಕನಿಷ್ಟ 10ನೇ ತರಗತಿ ತೇರ್ಗಡೆಯಾಗಿರಬೇಕು. 18 ರಿಂದ 35ರ ವಯೋಮಿತಿಯೊಳಗಿರಬೇಕು. (ವಯೋಮಿತಿ ಮೀರುತ್ತಿರುವವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ) ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು. ಜಿಲ್ಲಾ ವೈದ್ಯಾಧಿಕಾರಿಗಳಿಂದ ದೈಹಿಕ ಅರ್ಹತೆ ಪ್ರಮಾಣ ಪತ್ರ ಪಡೆದು ಲಗತ್ತಿಸಬೇಕು.
ನಿಗದಿತ ನಮೂನೆ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 25ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಚಾ.ನಗರ : ವಸತಿ ಯೋಜನೆ ಸೌಲಭ್ಯಕ್ಕೆ ವಸತಿ ರಹಿತರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯು ವಾಜಪೇಯಿ ವಸತಿ ಯೋಜನೆಯಡಿ ವಸತಿ ರಹಿತರಿಗೆ ವಸತಿ ಕಲ್ಪಿಸುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಾಮಾನ್ಯ ವರ್ಗ ಹಾಗೂ ಅಲ್ಪಸಂಖ್ಯಾತ ವಸತಿ ರಹಿತರಿಗೆ ವಸತಿ ಯೋಜನೆ ಸೌಲಭ್ಯ ಪಡೆಯಲು ಗುರಿ ನಿಗದಿ ಮಾಡಲಾಗಿದೆ.
ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿದ್ದು ನಿವೇಶನ ಹೊಂದಿರುವ (ಖಾತೆ ಹೊಂದಿರುವವರು) ನಗರಸಭೆ ಕಚೇರಿಯಿಂದ ಅಕ್ಟೋಬರ್ 15ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 20ರೊಳಗೆ ಸಲ್ಲಿಸಬೇಕು. ವಿವರಗಳಿಗೆ ನಗರಸಭೆ ಕಾರ್ಯಾಲಯ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಮಕ್ಕಳಿಗೆ ಮಾದಕ ದ್ರವ್ಯ, ಔಷಧ, ತಂಬಾಕು ಉತ್ಪನ್ನ ನೀಡುವವರ ವಿರುದ್ಧ ಕ್ರಮ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಮಕ್ಕಳಿಗೆ ವೈದ್ಯರ ಸೂಚನೆಯನ್ನು ಹೊರತುಪಡಿಸಿ ಮಾದಕ ದ್ರವ್ಯ, ಔಷಧ ಅಥವಾ ತಂಬಾಕು ಉತ್ಪನ್ನದಂತಹ ವಸ್ತುಗಳನ್ನು ನೀಡುವವರಿಗೆ ಅಥವಾ ನೀಡಲು ಕಾರಣರಾದವರಿಗೆ 7 ವರ್ಷಗಳ ಕಾರಾಗೃಹ ಸಜೆ ಹಾಗೂ 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ತಿಳಿಸಿದೆ.
ಬಾಲನ್ಯಾಯ (ಮಕ್ಕಳ ಪಾಲನೆ,ಪೋಷಣೆ ಮತ್ತು ರಕ್ಷಣೆ) ಕಾಯಿದೆ 2015ರ ಪ್ರಕಾರ ಮಕ್ಕಳನ್ನು ಮಾದಕ ದ್ರವ್ಯ, ಔಷಧ ಅಥವಾ ತಂಬಾಕು ಉತ್ಪನ್ನದಂತಹ ವಸ್ತುಗಳನ್ನು ಮಾರಾಟ ಮಾಡಲು, ಸಾಗಣೆ, ಪೂರೈಕೆ ಅಥವಾ ಕಳ್ಳಸಾಗಣೆಗಾಗಿ ಬಳಸಿಕೊಂಡರೆ 7 ವರ್ಷಗಳ ಕಾರಾಗೃಹ ಕಠಿಣ ಸಜೆ ಹಾಗೂ 1 ಲಕ್ಷ ರೂ. ದಂಡ ವಿಧಿಸಬಹುದಾದ ಅಪರಾಧವಾಗುತ್ತದೆ.
ಸದರಿ ಕಾನೂನನ್ನು ಉಲ್ಲಂಘಿಸಿದರೆ ಬಾಲನ್ಯಾಯ ಕಾಯಿದೆಯಡಿ ಪ್ರಕರಣ ದಾಖಲಿಸಲು ಸಂಬಂಧಪಟ್ಟ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ಅಥವಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾ ಅಧಿಕಾರಿಗಳನ್ನು (ದೂ.ಸಂ. 08226-222354) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಅ. 24ಕ್ಕೆ ತಾಲೂಕು ಪ.ಜಾ., ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆ ಮುಂದೂಡಿಕೆ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಅಕ್ಟೋಬರ್ 14ರಂದು ನಿಗದಿ ಮಾಡಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯನ್ನು ಅಕ್ಟೋಬರ್ 24ಕ್ಕೆ ಮುಂದೂಡಲಾಗಿದೆ ಎಂದು ತಾಲೂಕು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲನ್ಯಾಯ ಕಾಯಿದೆಯಡಿ ಸರ್ಕಾರೇತರ ಸ್ವಯಂಸಂಸ್ಥೆಗಳ ನೋಂದಣಿಗೆ ಸೂಚನೆ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಬಾಲನ್ಯಾಯ (ಪಾಲನೆ ಮತ್ತು ರಕ್ಷಣೆ) ಕಾಯಿದೆಯಡಿ ನೋಂದಣಿ ಮಾಡಿಕೊಳ್ಳದೇ ಇರುವ ಸರ್ಕಾರೇತರ ಸ್ವಯಂಸಂಸ್ಥೆಗಳು ಕೂಡಲೇ ಜಿಲ್ಲಾ ಮಕಳ ರಕ್ಷಣಾ ಅಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚಿಸಿದ್ದಾರೆ.
ಈಗಾಗಲೇ ಬಾಲನ್ಯಾಯ ಕಾಯಿದೆಯಡಿ ನೋಂದಣಿಯಾಗಿರುವ ಸಂಸ್ಥೆಗಳು ನೋಂದಣಿ ಅವಧಿ ಮುಗಿಯು 3 ತಿಂಗಳ ಮುಂಚಿತವಾಗಿ ನವೀಕರಣಕ್ಕೆ ಪ್ರಸ್ತಾವನೆಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ಸಲ್ಲಿಸಬೇಕು. ತಪ್ಪಿದಲ್ಲಿ ಸೆಕ್ಷನ್ 42(1)ಅನ್ವಯ 1 ವರ್ಷದವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ. ದಂಡ ಪ್ರತ್ಯೇಕ ಅಪರಾಧವೆಂದು ಪರಿಗಣಿಸಲಾಗುತ್ತದೆ. ಅಲ್ಲದೆ ಸಂಸ್ಥೆಯು ಯಾವುದೇ ಕಾಯಿದೆಯಡಿ ನೊಂದಣಿಯಾಗಿದ್ದರೂ ಅದನ್ನು ಹಿಂಪಡೆಯಲು ಅಥವಾ ರದ್ದುಪಡಿಸಲು ಕ್ರಮ ಜರುಗಿಸಲಾಗುವುದು. ಮಕ್ಕಳ ಮೇಲೆ ದೌರ್ಜನ್ಯ ನಡೆದಲ್ಲಿ ಹಾಗೂ ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದಲ್ಲಿ ಸಂಸ್ಥೆಯ ಮುಖ್ಯಸ್ಥರೇ ನೇರವಾಗಿ ಹೊಣೆಗಾರರಾಗುತ್ತಾರೆ.
ನಾಗರಿಕರು ತಮ್ಮ ಆಸುಪಾಸಿನಲ್ಲಿ ಮಕ್ಕಳ ಪಾಲನಾ ಸಂಸ್ಥೆಗಳು ಇದ್ದಲ್ಲಿ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಇಲ್ಲವೇ ನಗರದ ಜಿಲ್ಲಾಡಳಿತ ಭವನದ ಮೊದಲ ಮಹಡಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಬಿ.ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ.7ರಂದು ನಗರದಲ್ಲಿ ದಸರಾ ಮಹೋತ್ಸವ ಉದ್ಘಾಟನೆ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ಮೈಸೂರು ದಸರಾ ಮಹೋತ್ಸವ ಸಮಿತಿ ಆಶ್ರಯದಲ್ಲಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 7 ರಿಂದ 10ರವರೆಗೆ ನಾಲ್ಕು ದಿನಗಳ ಕಾಲ ದಸರಾ ಮಹೋತ್ಸವ ನಡೆಯಲಿದೆ.
ಅಕ್ಟೋಬರ್ 7ರಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜಾ ಕಾರ್ಯದೊಂದಿಗೆ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ.
ಅಂದು ಸಂಜೆ 6.30 ಗಂಟೆಗೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಲೋಕೋಪಯೋಗಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಜ್ಯೋತಿ ಬೆಳಗಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್. ವಿ. ಚಂದ್ರು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳು
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನ ಆವರಣದ ಶ್ರೀ ಚಾಮರಾಜೇಶ್ವರ ವೇದಿಕೆಯಲ್ಲಿ ದಸರಾ ಮಹೋತ್ಸವ ಅಂಗವಾಗಿ ಅಕ್ಟೋಬರ್ 7 ರಿಂದ 10ರವರೆಗೆ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದ್ದು ವಿವರ ಇಂತಿವೆ.
ಅಕ್ಟೋಬರ್ 7ರಂದು ಸಂಜೆ 4 ರಿಂದ 4.30ರವರೆಗೆ ಸಿದ್ದಯ್ಯನಪುರದ ಶ್ರೀ ಮಂಟೇಲಿಂಗೇಶ್ವರ ಕೃಪಾಪೋಷಿತ ನಾಟಕ ಮಂಡಳಿ ಅವರಿಂದ ರಂಗಗೀತೆ, 4.30 ರಿಂದ 5.30ರವರೆಗೆ ಸಿ.ಎಂ. ನರಸಿಂಹಮೂರ್ತಿ, ಬಿ. ಬಸವರಾಜು, ಎಸ್. ನಟರಾಜು, ಲತಾ, ಮಹಾಲಿಂಗಸ್ವಾಮಿ, ಎಂ. ಮಂಜುನಾಥ್, ಜೆ.ಬಿ. ಮಹೇಶ್, ಜೆ.ಬಿ. ರಾಜೇಶ್ ಹಾಗೂ ಎಸ್. ಚರಣ್ ಅವರಿಂದ ಸುಗಮ ಸಂಗೀತ, 5.30 ರಿಂದ 6 ಗಂಟೆವರೆಗೆ ಅರಸೀಕೆರೆ ಕುಮಾರಯ್ಯ ಮತ್ತು ತಂಡದಿಂದ ಚಿಟ್ಟಿಮೇಳ, ಮೇಲುಕೋಟೆ ಶಿವಣ್ಣ ಮತ್ತು ತಂಡದಿಂದ ಪಟ ಕುಣಿತ, ಮಂಡ್ಯ ಅನಿಲಕುಮಾರ್ ಮತ್ತು ತಂಡದಿಂದ ಡೊಳ್ಳು ಕುಣಿತ, 7 ರಿಂದ 8ರವರೆಗೆ ಬೆಂಗಳೂರಿನ ಅರ್ಥಾ ಡ್ಯಾನ್ಸ್ ಗ್ರೂಪ್ ಅವರಿಂದ ನೃತ್ಯರೂಪಕ, 8 ರಿಂದ 10 ಗಂಟೆಯವರೆಗೆ ರಾಜ್ಯ ಪ್ರಶಸ್ತಿ ವಿಜೇತರಾದ ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕ ನವೀನ್ ಸಜ್ಜು ಮತ್ತು ಸೈಕ್ಲೂನ್ ಡ್ಯಾನ್ಸ್ ಅಕಾಡೆಮಿ ಅವರಿಂದ ಚಲನಚಿತ್ರ ಮತ್ತು ಜನಪದ ಸಂಜೆ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್ 8ರಂದು ಸಂಜೆ 4 ರಿಂದ 4.30ರವರೆಗೆ ಮಂಗಲದ ಶ್ರೀ ಶಂಕರÉೀಶ್ವರ ಕಲಾ ಸಂಘದವರಿಂದ ರಂಗಗೀತೆ, 4.30 ರಿಂದ 5.30ರವರೆಗೆÀ ಜಿ. ರಾಜಪ್ಪ, ಹೊಂಗನೂರು ನಾಗರಾಜು, ನಾಗಮಹದೇವ, ರಾಮಣ್ಣ, ಪಿ. ನಾಗೇಶ್, ಹೆಚ್.ಎಂ. ಶಿವಣ್ಣ, ರಂಗು ಅಮ್ಮನಪುರ, ಮಾದೇಶ ಬಂಡಿಗೆರೆ, ಮಂಜುನಾಥ್ ಅಮಚವಾಡಿ ಅವರಿಂದ ಜನಪದ ಝೇಂಕಾರ, 5.30 ರಿಂದ 5.45 ಗಂಟೆವರೆಗೆ ಕಾಸರವಾಡಿ ದೇವರಾಜು ಮತ್ತು ತಂಡದಿಂದ ಪೂಜಾ ಕುಣಿತ, ರಾಮಸಮುದ್ರದ ಆರ್.ಎಂ. ಶಿವಮಲ್ಲೇಗೌಡ ಮತ್ತು ತಂಡದಿಂದ ಗೊರವರ ಕುಣಿತ, 6.30 ರಿಂದ 7.30ರವರೆಗೆ ಬೆಂಗಳೂರಿನ ಎಂ.ಡಿ. ಪಲ್ಲವಿ ಮತ್ತು ತಂಡದಿಂದ ಸುಗಮ ಸಂಗೀತ, 7.30 ರಿಂದ 9.30ರವರೆಗೆ ಮಂಡ್ಯ ರಮೇಶ್ ಮತ್ತು ತಂಡದಿಂದ ಚಾಮಚೆಲುವೆ ನಾಟಕ, 9.30 ರಿಂದ 10.30ರವರೆಗೆ ಮೈಸೂರಿನ ಶ್ರೀನಿವಾಸ್ ಮತ್ತು ತಂಡ (ವಿಷ್ಣು ಮ್ಯೂಸಿಕ್ ಗ್ರೂಪ್) ಅವರಿಂದ ಸಂಗಿತ ರಸಮಂಜರಿ ಏರ್ಪಾಡಾಗಿದೆ.
ಅಕ್ಟೋಬರ್ 9ರಂದು ಸಂಜೆ 4 ರಿಂದ 4.30ರವರೆಗೆ ರಾಮಸಮುದ್ರದ ನಿಂಗಶೆಟ್ಟಿ ಮತ್ತು ತಂಡದಿಂದ ತಂಬೂರಿ ಪದ, 4.30 ರಿಂದ 5.15ರವರೆಗೆ ರಾಮಸಮುದ್ರದ ಪಿ. ಮಹೇಶ, ಕಲೆ ನಟರಾಜು, ಸುರೇಶನಾಗ್, ಮಂಜು ಎಸ್. ಗಾಳೀಪುರ, ರಂಗಸ್ವಾಮಿ ಸಿ, ಅರ್ಜುನ್ ಸುರಾಗ್, ಮಹದೇವ ಯಡಿಯೂರು, ಮಲ್ಲಣ್ಣ, ಮಹದೇವಸ್ವಾಮಿ ಕಮರವಾಡಿ ಅವರಿಂದ ಜನಪದ ಝೇಂಕಾರ, 5.15 ರಿಂದ 6 ಗಂಟೆಯವರೆಗೆ ನಗರದ ಶಾರದಾ ನೃತ್ಯ ಶಾಲೆಯವರಿಂದ ನೃತ್ಯ ರೂಪಕ, 6 ರಿಂದ 8ರವರೆಗೆ ತಬಲ ನಾಣಿಯವರ ಹಾಸ್ಯರಂಜಿನಿ ತಂಡದಿಂದ ನಗೆಹಬ್ಬ, 8 ರಿಂದ 10 ಗಂಟೆಯವರೆಗೆ ಸಂಗೀತ ರವೀಂದ್ರನಾಥ್, ಸಂತೋಷ್ ವೆಂಕಿ, ದೀಪಕ್ ದೊಡ್ಡೇರಿ, ಸಿಂಚನ್ ದೀಕ್ಷಿತ್, ಸಂಗೀತ ರಾಜೀವ್, ವ್ಯಾಸರಾಜ್, ಚಿನ್ಮಯಿ, ಆಕಾಂಕ್ಷ ಬಾದಾಮಿ ಅವರಿಂದ ಚಲನಚಿತ್ರ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಅಕ್ಟೋಬರ್À 10ರಂದು ಸಂಜೆ 6 ರಿಂದ 10ರವರೆಗೆ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜು ಸಂಜೆ ಕಾರ್ಯಕ್ರಮ ನಡೆಯಲಿದ್ದು ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.
ಅ. 7 ಮತ್ತು 8ರಂದು ಉಸ್ತುವಾರಿ ಸಚುವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 06 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಅಕ್ಟೋಬರ್ 7 ಮತ್ತು 8 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅ. 7 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಜಿಲ್ಲಾ ಬರಪರಿಹಾರ ಟಾಸ್ಕ್‍ಪೋರ್ಸ್ ಸಮಿತಿ ಸಭೆಯಲ್ಲಿ ಭಾಗವಹಿಸುವರು. ನಂತರ ಡೀಮ್ಡ್ ಫಾರೆಸ್ಟ್ ವಿಷಯಕ್ಕೆ ಸಂಬಂಧಿಸಿದ ಸಭೆಯಲ್ಲಿ ಪಾಲ್ಗೊಳ್ಳುವರು.
ಸಂಜೆ 6 ಗಂಟೆಗೆ ಜಿಲ್ಲಾ ದಸರಾ ಉತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 8 ಗಂಟೆಗೆ ಮೈಸೂರಿಗೆ ತೆರಳುವರು.
ಅ. 8 ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 4 ಗಂಟೆಗೆ ಗುಂಡ್ಲುಪೇಟೆಯ ಪುರಸಭೆ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಗ್ರಾಮೀಣ ದಸರಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಮೈಸೂರಿಗೆ ತರಳುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ದಸರಾ ಮಹೋತ್ಸವ: ಸಾಂಪ್ರಾದಾಯಿಕ ಚಾಲನೆ
ಚಾಮರಾಜನಗರ, ಅ. 07 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲಾಕೇಂದ್ರದಲ್ಲಿ ನಡೆಯುತ್ತಿರುವ ನಾಲ್ಕು ದಿನಗಳ ದಸರಾ ಮಹೋತ್ಸವಕ್ಕೆ ಇಂದು ಬೆಳಿಗ್ಗೆ ಚಾಮರಾಜೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಸಾಂಪ್ರಾದಾಯಿಕವಾಗಿ ಚಾಲನೆ ದೊರೆತಿದೆ.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ದಯಾನಿಧಿ ಇತರೆ ಜನಪ್ರತಿನಿಧಿಗಳೊಂದಿಗೆ ಚಾಮರಾಜೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾ ದಸರಾ ಮಹೋತ್ಸವಕ್ಕೆ ಸಾಂಪ್ರಾದಾಯಿಕವಾಗಿ ಚಾಲನೆ ದೊರೆಯಿತು.
ಚಾಮರಾಜೇಶ್ವರಸ್ವಾಮಿ, ಚಾಮುಂಡೇಶ್ವರಿದೇವಿ ಹಾಗೂ ಕೆಂಪನಂಜಾಂಬ ದೇವಾಲಯದಲ್ಲಿ ಗಣ್ಯರು ಪೂಜೆ ಸಲ್ಲಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ನಗರಸಭಾ ಸದಸ್ಯರಾದ ಮಹೇಶ್‍ಉಪ್ಪಾರ್, ಬಂಗಾರು, ಮುಖಂಡರಾದ ಸುರೇಶ್‍ನಾಯಕ, ಬಿ.ಕೆ. ರವಿಕುಮಾರ್, ಜಿಲ್ಲಾಧಿಕಾರಿ ಬಿ. ರಾಮು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ತಹಶೀಲ್ದಾರ್ ಕೆ. ಪುರಂದರ ಇತರರು ಇದ್ದರು.
ಅ. 15ರಂದು ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಚಾಮರಾಜನಗರ, ಅ. 07 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಅಕ್ಟೋಬರ್ 15ರಂದು ಮಧ್ಯಾಹ್ನ 12.30 ಗಂಟೆಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಪ್ರವಾಸಿ ಮಂದಿರದ ಬಳಿ ಚಾಲನೆ ನೀಡುವರು.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಸಮಾರಂಭ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಪ್ರಗತಿಪರ ಚಿಂತಕರಾದ ಡಾ. ಮ.ಪು. ಪೂರ್ಣಾನಂದ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಚುನಾವಣಾ ಆಯೋಗಕ್ಕೆ ಸಲ್ಲಿಸದ ಆಸ್ತಿ ವಿವರ
ಸಹಕಾರ ಸಚಿವ ಮಹದೇವಪ್ರಸಾದ್‍ಗೆ ಕಂಟಕ : ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ
ಗುಂಡ್ಲುಪೇಟೆ: ಪಟ್ಟಣದ ನ್ಯಾಯಾಲಯವು ತಾಲ್ಲೂಕಿನ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಮತ್ತು ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅವರಿಗೆ ಡಿ 21 ರೊಳಗೆ ನ್ಯಾಯಾಲಯಕ್ಕೆ ಹಾಜರಾಗುವ ಸಮನ್ಸ್ ಜಾರಿಗೊಗೊಳಿಸುವಂತೆ 2 ನೇ ಬಾರಿಗೆ ಪೊಲೀಸ್ ಇಲಾಖೆಗೆ ಆದೇಶ ನೀಡಿದೆ.
ಈ ಬಾರಿ ವಿಧಾನ ಸಬಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ನೀಡಿದ್ದ ಆಸ್ತಿವಿವರಗಳ ಪ್ರಮಾಣಪತ್ರದಲ್ಲಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಅರೇಪುರ ಗ್ರಾಮದಲ್ಲಿ ಸನಂ.165ರಲ್ಲಿ 3.22 ಎಕರೆ ಜಮೀನನ್ನು ಹೊಂದಿರುವುದನ್ನು ಘೋಷಣೆ ಮಾಡಿಕೊಂಡಿರಲಿಲ್ಲ. ಇದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದ್ದು, ಸಚಿವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಎಲ್.ಸುರೇಶ್ 23 ನವೆಂಬರ್ 2013ರಂದು ಪಟ್ಟಣದ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಅಂದಿನ ನ್ಯಾಯಾಧಿಶ ಡಿ.ಕಮಲಾಕ್ಷ ಅವರು ದೂರುದಾರ ಎಲ್.ಸುರೇಶ್ ಅವರನ್ನು ವಿಚಾರಣೆ ನಡೆಸಿದ ನಂತರ ಆರೋಪ ಮೇಲ್ನೋಟಕ್ಕೆ ಸತ್ಯವೆಂದು ಕಂಡುಬಂದ ಹಿನ್ನೆಲೆಯಲ್ಲಿ 12 ಜೂನ್ 2014ರಂದು ಸಚಿವ ಎಚ್.ಎಸ್.ಮಹದೇವಪ್ರಸಾದ್ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆದೇಶ ನೀಡಿ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಇದನ್ನು ಪೊಲೀಸರು ಜಾರಿಗೊಳಿಸಲು ವಿಫಲರಾಗಿದ್ದರು. ಇದರ ವಿರುದ್ದ ಸಚಿವರು ತಡೆಯಾಜ್ಞೆ ತಂದ ಹಿನ್ನೆಲೆಯಲ್ಲಿ ದೂರುದಾರು ತಡೆಯಾಜ್ಞೆ ತೆರವುಗೊಳಿಸಿತು. ಈ ಹಿನ್ನೆಲೆಯಲ್ಲಿ ಈ ವಿಚಾರಣೆಯ ದಿನಾಂಕವನ್ನು ಡಿ.21ಕ್ಕೆ ನಿಗದಿಗೊಳಿಸಿ ನ್ಯಾಯಾಧೀಶ ಜೆ.ಯೋಗೇಶ್ ಸಮನ್ಸ್ ಜಾರಿಗೊಳಿಸುವಂತೆ ಆದೇಶ ನೀಡಿ 2 ನೇ ಬಾರಿಗೆ ಸಮನ್ಸ್ ಜಾರಿಗೊಳಿಸಿದ್ದಾರೆ.
ಪ್ರಥಮ, ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ
ಚಾಮರಾಜನಗರ, ಅ. 07 (ಕರ್ನಾಟಕ ವಾರ್ತೆ):- ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ. ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಫಲಿತಾಂಶವನ್ನು ಉತ್ತಮಪಡಿಸುವ ಸದುದ್ದೇಶದಿಂದ ಅಕ್ಟೋಬರ್ 8ರಂದ 23ರವರೆಗಿನ ಮಧ್ಯಂತರ ರಜಾ ದಿನಗಳಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತರಬೇತಿಗಾಗಿ ಪ್ರತಿ ತಾಲೂಕಿನಲ್ಲಿ ನೋಡೆಲ್ ಕೇಂದ್ರಗಳನ್ನು ತರೆಯಲಾಗಿದ್ದು, ನೋಡೆಲ್ ಕೇಂದ್ರ ಪ್ರಾಚಾರ್ಯರನ್ನು ಸಂಯೋಜಕರನ್ನಾಗಿ ನೇಮಕಮಾಡಲಾಗಿದೆ.
ಚಾಮರಾಜನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮರಿಸ್ವಾಮಿ ಮೊ. 9663120662, ಗುಂಡ್ಲುಪೇಟೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬಸವಣ್ಣ ಮೊ. 9449680209, ಯಳಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಪ್ರಸಾದ್ ಮೊ. 9742104994 ಮತ್ತು ಕೊಳ್ಳೇಗಾಲ ಎಸ್.ವಿ.ಕೆ. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಉಷಾದೇವಿ ಮೊ. 8861910866 ಇವರನ್ನು ತರಬೇತಿ ತರಬೇತಿ ಕಾರ್ಯಕ್ರಮದ ನಿರ್ವಹಣೆಯ ಸಂಯೋಜಕರಾಗಿ ನೇಮಿಸಿದೆ.
ಜಿಲ್ಲೆಯ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮನವಿ ಮಾಡಿದ್ದಾರೆ.
ಅ. 8 ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 07 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಅಕ್ಟೋಬರ್ 8 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅ. 8 ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 4 ಗಂಟೆಗೆ ಗುಂಡ್ಲುಪೇಟೆಯ ಪುರಸಭೆ ಬಯಲು ರಂಗಮಂದಿರದಲ್ಲಿ ನಡೆಯಲಿರುವ ಗ್ರಾಮೀಣ ದಸರಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಸಂಜೆ 6 ಗಂಟೆಗೆ ಮೈಸೂರಿಗೆ ತರಳುವರು ಎಂದು ಸಚಿವರ ಅಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ದಸರಾ ರಜೆ ಅವಧಿಯಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ
ಚಾಮರಾಜನಗರ, ಅ.10- ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ 9 ಮತ್ತು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಕಲಿಕೆಯಲ್ಲಿ ಹಿಂದುಳಿದ ಇತರೆ ವರ್ಗದ ವಿದ್ಯಾರ್ಥಿಗಳಿಗೆ ದಸರಾ ರಜೆ ಅವಧಿಯಲ್ಲಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ರಾಜ್ಯದ 17 ಹಿಂದುಳಿದ ಜಿಲ್ಲೆಗಳು ಮತ್ತು 107 ತಾಲ್ಲೂಕುಗಳಲ್ಲಿ ನಡೆಸಲು ಆಯ್ಕೆ ಮಾಡಲಾಗಿದೆ.
ಅದರನ್ವಯ ಚಾಮರಾಜನಗರ ಜಿಲ್ಲೆಯೂ ಸಹ ಆಯ್ಕೆಯಾಗಿದ್ದು ದಸರ ರಜೆ ಅವಧಿಯಲ್ಲಿ ದಿನಾಂಕ: 8-10-2016ರಿಂದ 23-10-2016ರವರೆಗೆ ಒಟ್ಟು 12ದಿನಗಳು (ದಿನಾಂಕ:10,11,12 ಮತ್ತು 15ನೇ ತಾರೀಖಿನ ರಜೆ ದಿನಗಳನ್ನು ಹೊರತುಪಡಿಸಿ) ನಡೆಸಲು ಯೋಜಿಸಲಾಗಿದ್ದು. ದಿನಾಂಕ: 8-10-2016ರಿಂದ ಜಿಲ್ಲೆಯ ಐದು ಶೈಕ್ಷಣಿಕ ತಾಲ್ಲೂಕುಗಳಲ್ಲಿಯೂ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗಿದೆ. ಪ್ರತಿ ಕೇಂದ್ರದಲ್ಲಿಯೂ ಒಟ್ಟು ಎರಡು ತರಗತಿಗಳು ಸೇರಿ 240 ವಿದ್ಯಾರ್ಥಿಗಳಿಗೆ ತರಬೇತಿ ನೀಡಲು ಅವಕಾಶವಿದ್ದು ಪ್ರಸ್ತುತ 1175 ವಿದ್ಯಾರ್ಥಿಗಳು ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ದಾಖಲಾಗಿದ್ದಾರೆ. ತರಬೇತಿ ನೀಡಲು ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ನುರಿತ 89 ಸಂಪನ್ಮೂಲ ಶಿಕ್ಷಕರು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ತರಬೇತಿ ನೀಡುತ್ತಿದ್ದಾರೆ. ವಿದ್ಯಾರ್ಥಿಗಳ ಹಾಜರಾತಿಯನ್ನು ಬಯೋಮೆಟ್ರಿಕ್ ಅಳವಡಿಕೆ ಮೂಲಕ ಮಾಡಲಾಗುತ್ತಿದ್ದು, ಕ್ರಿಯಾ ಯೋಜನೆ, ವೇಳಾಪಟ್ಟಿ ಮತ್ತು ಮಾಡ್ಯೂಲ್ಗಳಿಗೆ ಅನುಗುಣವಾಗಿ ತರಬೇತಿಯನ್ನು ನೀಡಲಾಗುತ್ತಿದೆ. ಪ್ರತಿ ಕೇಂದ್ರದಲ್ಲಿಯೂ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಲಾಗಿದೆ. ವಿಶೇಷ ತರಬೇತಿ ಅವಧಿಯಲ್ಲಿ ಮಕ್ಕಳಿಗೆ ಬಿಸಿಯೂಟ ವ್ಯವಸ್ಥೆ ಮಾಡಲಾಗಿದೆ. ಪ್ರತಿ ದಿನದ ವರದಿಯನ್ನು ಅಂದಂದೇ ರಾಜ್ಯ ಕಚೇರಿಗೆ ವರದಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇವು ಬೆಳೆಯಲು ಮನವಿ
ಚಾಮರಾಜನಗರ ಆ. 11 (ಕರ್ನಾಟಕ ವಾರ್ತೆ) ಬರಗಾಲ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ಹೊಂದಿರುವ ರೈತರು, ಬೆಳೆಗಾರರು ಮೇವು ಬೆಳೆಸುವಂತ್ತೆ ಪಶುಪಾಮನಾ ಇಲಾಖೆ ಮನವಿ ಮಾಡಿದೆ.
ಮೇವು ಬೀಜಗಳನ್ನು ಪಶುಪಾಲನಾ ಇಲಾಖೆಯಿಂದ ವಿತರಿಸಲಿದೆ, ಮೇವು ಬೆಳೆದ ರ್ಯತರು, ಬೆಳೆಗಾರರಿಂದ ಕಂದಾಯ ಇಲಾಖೆಯವರು ನಿಗದಿತ ದರದಲ್ಲಿ ಮೇವನ್ನು ಖರೀದಿಸಲಿದ್ದಾರೆ.
ಈ ಮೇವನ್ನು ಶೇ. 50 ರಷ್ಟು ದರದಲ್ಲಿ ಅಗತ್ಯ ವಿರುವ ರೈತರಿಗೆ ವಿತರಿಸಲಾಗುತ್ತದೆ.
ಮೇವು ಬೆಳೆಯಲು. ಆಸಕ್ತಿ ಇರುವ ರೈತರು ಪಹಣಿಯೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಅಥವ ಹಾಲು ಉತ್ಪಾದಕರ ಸಹಕಾರ ಸಂಘ ಪಶುಪಾಲನಾ ಆಸ್ಪತ್ರೆ, ಇಲ್ಲಿ ನೊಂದಾಣಿ ಮಾಡಿಕೊಳ್ಳಲು ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 15ರಂದು ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಚಾಮರಾಜನಗರ, ಅ. 13 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಅಕ್ಟೋಬರ್ 15ರಂದು ಮಧ್ಯಾಹ್ನ 12.30 ಗಂಟೆಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ 10 ಗಂಟೆಗೆ ವಿವಿಧ ಜಾನಪದ ಕಲಾತಂಡಗಳೊಡನೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಪ್ರವಾಸಿ ಮಂದಿರದ ಬಳಿ ಚಾಲನೆ ನೀಡುವರು.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಸಮಾರಂಭ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಪ್ರಗತಿಪರ ಚಿಂತಕರಾದ ಡಾ. ಮ.ಪು. ಪೂರ್ಣಾನಂದ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅ. 17ರಿಂದ 21ರವರೆಗೆ ಲೋಕಸಭಾ ಸದಸ್ಯರ ಪ್ರವಾಸ ಕಾರ್ಯಕ್ರಮ
ಚಾಮರಾಜನಗರ, ಅ. 13 (ಕರ್ನಾಟಕ ವಾರ್ತೆ):- ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಅಕ್ಟೋಬರ್ 17ರಿಂದ 21ರವರೆಗೆ ಶಿಲಾಂಗ್, ಗೌಹಾಟಿ, ಕಾಜಿರಂಗ ಮತ್ತು ಕೊಲ್ಕತ್ತಾದಲ್ಲಿ ಪರಿವೀಕ್ಷಣಾ ಪ್ರವಾಸ ಕೈಗೊಂಡಿದ್ದಾರೆ.
ಪ್ರವಾಸ ಸಂದರ್ಭದಲ್ಲಿ ವಿವಿಧ ಕಂಪನಿ, ಸಂಸ್ಥೆ, ಬ್ಯಾಂಕ್‍ಗಳು ಹಾಗೂ ಕಾರ್ಪೋರೇಷನ್‍ಗಳಿಗೆ ಭೇಟಿ ನೀಡಿ ಅಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ಚರ್ಚಿಸುವರು. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ನೌಕರರ ಸಲ್ಲಿಸುತ್ತಿರುವ ಸೇವೆ ಹಾಗೂ ನೌಕರರಿಗೆ ನಿಯಮಾನುಸಾರ ಸರ್ಕಾರದ ಸವಲತ್ತುಗಳು ತಲುಪಿರುವ ಕುರಿತು ಸಮಾಲೋಚನೆ ನಡೆಸುವರು ಎಂದು ಸಂಸದರ ಅಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಅ. 14ರಂದು ರೈತ ಉತ್ಪಾದಕರ ಕಂಪನಿಯ ಯಂತ್ರೋಪಕರಣ ಮತ್ತು ಕೀಟನಾಶಕ ಔಷಧಿ ಮಳಿಗೆ ಉದ್ಘಾಟನೆ
ಚಾಮರಾಜನಗರ, ಅ. 13 (ಕರ್ನಾಟಕ ವಾರ್ತೆ):- ಉಡಿಗಾಲ ರೈತ ಉತ್ಪಾದಕರ ಕಂಪನಿ ನಿಯಮಿತ ವತಿಯಿಂದ ಅಕ್ಟೋಬರ್ 14ರಂದು ಬೆಳಿಗ್ಗೆ 10.30 ಗಂಟೆಗೆ ಉಡಿಗಾಲದ ಜೆ.ಎಸ್.ಎಸ್ ಪ್ರೌಢಶಾಲೆ ಪಕ್ಕದಲ್ಲಿರುವ ಎಫ್.ಪಿ.ಒ ಕಚೇರಿ ಅವರಣದಲ್ಲಿ ರೈತ ಉತ್ಪಾದಕರ ಕಂಪನಿಯ ಯಂತ್ರೊಪಕರಣಗಳು ಮತ್ತು ಕೀಟನಾಶಕಗಳ ಔಷಧಿ ಮಳಿಗೆ ಉದ್ಘಾಟನೆ ಹಾಗೂ ಕಂಪನಿಯ ಧ್ಯೇಯೋದ್ದೇಶಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಎಂ. ತಿರುಮಲೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಉಡಿಗಾಲದ ರೈತ ಉತ್ಪಾದಕರ ಕಂಪನಿಯ ವ್ಯವಸ್ಥಾಕಪ ನಿರ್ದೇಶಕರಾದ ಬಿ. ರವಿಶಂಕರ್ ಅಧ್ಯಕ್ಷತೆ ವಹಿಸುವರು. ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರಾದ ಎಚ್.ಎಂ. ನಾಗರಾಜು ಯಂತ್ರೋಪಕರಣಗಳಿಗೆ ಚಾಲನೆ ನೀಡುವರು. ತೋಟಗಾರಿಕಾ(ಸುಜಲಾ) ಇಲಾಖೆಯ ಉಪನಿರ್ದೇಶಕರು ಹಾಗೂ ಯೋಜನಾಧಿಕಾರಿ ಕೆ.ಎ. ವಿಜಯಕುಮಾರ್ ಅವರು ಔಷಧಿ ಮಳಿಗೆ ಉದ್ಘಾಟಿಸುವರು.
ಕೃಷಿ ಇಲಾಖೆಯ ಉಪನಿರ್ದೇಶಕರಾದ ಬಿ. ಯೋಗೀಶ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಸಿ. ಮಹದೇವಸ್ವಾಮಿ ಹಾಗೂ ಇಕೋವಾ ಸಂಸ್ಥೆಯ ರಾಜ್ಯ ಸಂಯೋಜಕರಾದ ಗೋಪಾಲ್‍ಹೆಗ್ಗಡೆ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜನೌಷಧಿ ಯೋಜನೆ: ಅರ್ಜಿ ಆಹ್ವಾನ
ಚಾಮರಾಜನಗರ, ಅ. 13 (ಕರ್ನಾಟಕ ವಾರ್ತೆ):- ಕೇಂದ್ರಸರ್ಕಾರದ ಜನೌಷಧಿ ಯೋಜನೆಯಡಿಯಲ್ಲಿ ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಔಷಧಿಗಳನ್ನು ಒದಗಿಸಲು ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಯೋಜನೆ ಅನುಷ್ಟಾನಗೊಳಿಸುವ ಸಂಬಂಧ ನೊಂದಾಯಿತ ಹಾಗೂ ದತ್ತಿ ಸಂಘಗಳು ಮತ್ತು ಸೊಸೈಟಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕಚೇರಿಯಿಂದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಅಕ್ಟೋಬರ್ 20ರೊಳಗೆ ಕಚೇರಿ ಕೆಲಸದ ವೇಳೆಯಲ್ಲಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ತ್ರೀಶಕ್ತಿ ಗುಂಪುಗಳಿಗೆ 2 ಲಕ್ಷ ರೂ. ಬಡ್ಡಿರಹಿತ ಸಾಲ: ಅರ್ಜಿ ಆಹ್ವಾನ
ಚಾಮರಾಜನಗರ, ಅ. 13 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2016-17ನೇ ಸಾಲಿಗೆ ಸ್ತ್ರೀಶಕ್ತಿ ಗುಂಪಿನ ಸದಸ್ಯರ ಆದಾಯೋತ್ಪನ್ನ ಚಟುವಟಿಕೆಗಳ ಘಟಕ ಹಾಗೂ ಸಣ್ಣ ಉದ್ದಿಮೆಯನ್ನು ಸ್ಥಾಪಿಸಿ ಅರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ಕಿರುಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಸಮಾಜದಲ್ಲಿ ಸ್ತ್ರೀಶಕ್ತಿ ಗುಂಪುಗಳು ಅರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಪ್ರತಿ ಸ್ತ್ರೀಶಕ್ತಿ ಗುಂಪಿಗೆ 2 ಲಕ್ಷ ರೂ. ಗಳವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು. ಈ ಸಂಬಂಧ ಕಿರುಸಾಲ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಉಚಿತವಾಗಿ ನೀಡಲಾಗುವುದು. ಸ್ತ್ರೀಶಕ್ತಿ ಗುಂಪುಗಳು ಬ್ಯಾಂಕ್ ಖಾತೆ ಹೊಂದಿದ್ದು, ಖಾತೆ ಚಾಲ್ತಿಯಲ್ಲಿರಬೇಕು. ಸ್ತ್ರೀಶಕ್ತಿ ಗುಂಪುಗಳು ಅರ್ಥಿಕವಾಗಿ ಸದೃಢವಾಗಿದ್ದು, ಗುಂಪಿನ ಉಳಿತಾಯ ಗರಿಷ್ಠ 2 ಲಕ್ಷ ರೂ. ಗಳಿಗೂ ಮೇಲಿರಬೇಕು. ಈಗಾಗಲೇ ಕಿರುಸಾಲ ಯೋಜನೆಯಡಿ ಪ್ರಯೋಜನ ಪಡೆಯದೆ ಇರುವ ಸಂಘಗಳು ಮಾತ್ರ ಸಾಲ ಪಡೆಯಲು ಅರ್ಹರಾಗಿರುತ್ತಾರೆ.
ಗುಂಪುಗಳು ವ್ಯವಸ್ಥಿತ ರೀತಿಯಲ್ಲಿ ದಾಖಲೆಗಳನ್ನು ನಿರ್ವಹಿಸಿರಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಸುತ್ತುನಿಧಿ, ಪ್ರೋತ್ಸಾಹಧನ ನೀಡುವಾಗ ಗುಂಪುಗಳು ಮಾರ್ಗಸೂಚಿಗಳನ್ನು ಬಳಸಿ ಮೌಲ್ಯಮಾಪನದ ಮಾಡಬೇಕು. ಅದರಲ್ಲಿ ಎ ಶ್ರೇಣಿಯ ಗುಂಪುಗಳಿಗೆ ಪ್ರಥಮಾದ್ಯತೆ ನೀಡಲಾಗುವುದು. ಎ ಶ್ರೇಣಿಯ ಗುಂಪುಗಳು ಲಭ್ಯವಿದ್ದಲ್ಲಿ ಬಿ ಶ್ರೇಣಿಯ ಗುಂಪುಗಳನ್ನು ಪರಿಗಣಿಸಬೇಕು.
ಸ್ತ್ರೀಶಕ್ತಿ ಗುಂಪುಗಳು ನಿಗಮದಿಂದ ಪಡೆಯುವ ಸಾಲವನ್ನು ಗುಂಪಿನಿಂದ ಉತ್ಪಾದನಾ ಘಟಕ, ಸಣ್ಣ ಉದ್ದಿಮೆ ಸ್ಥಾಪಿಸಲು ಮಾತ್ರ ಬಳಸಿಕೊಳ್ಳಬೇಕು ಮತ್ತು ಗುಂಪಿನ ಸದಸ್ಯರೆಲ್ಲರೂ ಈ ಘಟಕದ ಪಾಲುದಾರರಾಗಿರುತ್ತಾರೆ.
ಸಾಲಪಡೆಯಲು ಅರ್ಜಿ ಹಾಕುವ ಸ್ತ್ರೀಶಕ್ತಿ ಗುಂಪು ತಾಲೂಕು ಮಟ್ಟದ ಒಕ್ಕೂಟದಲ್ಲಿ ನೊಂದಾವಣೆಯಾಗಿ ಸದಸ್ಯತ್ವ ಹೊಂದಿರಬೇಕು. ಅರ್ಜಿಯನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಕ್ಟೋಬರ್ 28ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 18ರಿಂದ 28ರವರೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ
ಚಾಮರಾಜನಗರ, ಅ. 13 (ಕರ್ನಾಟಕ ವಾರ್ತೆ):- ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಧಾರವಾಡ(ಸಿಡಾಕ್)ದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂದಿಗೆ ಸ್ವಂತ ಉದ್ಯೋಗ ಸ್ಥಾಪಿಸಲು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನ ಉದ್ಯಮಶೀಲರು ಹಾಗೂ ನಿರುದ್ಯೋಗಿ ಯುವಕ, ಯುವತಿಯರಿಗೆ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಅಕ್ಟೋಬರ್ 18ರಿಂದ 28ರವರೆಗೆ ಗುಂಡ್ಲುಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ತರಬೇತಿ ಉಚಿತವಾಗಿದೆ. ಅಸಕ್ತರು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18ರಿಂದ 35 ವರ್ಷದ ವಯೋಮಿತಿಯಲ್ಲಿರಬೇಕು. ಸ್ವಂತ ಉದ್ಯೋಗ ಸ್ಥಾಪಿಸುವ ಇಚ್ಛೆಯುಳ್ಳವರಾಗಿರಬೇಕು. ಅಲ್ಲದೆ ಶೇ. 25ರಷ್ಟು ಸ್ವಂತ ಬಂಡವಾಳ ಹೂಡಲು ಶಕ್ತರಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಉದ್ಯಮ, ಉದ್ಯಮಶೀಲತೆ, ಉದ್ಯಮಗಳ ಆಯ್ಕೆ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಹಾಗೂ ಹಣಕಾಸು ನಿರ್ವಹಣೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು.
ಆಸಕ್ತರು ಅಕ್ಟೋಬರ್ 18ರಂದು ಬೆಳಿಗ್ಗೆ 10 ಗಂಟೆಗೆ ಗುಂಡ್ಲುಪೇಟೆಯ ಊಟಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನೇರವಾಗಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 331ರ ಜಿಲ್ಲಾ ಕೈಗಾರಿಕಾ ಕೇಂದ್ರ(ಸಿಡಾಕ್)ದ ಉಪನಿರ್ದೇಶಕರನ್ನು (ಕಚೇರಿ ದೂರವಾಣಿ ಸಂಖ್ಯೆ 08226-226346, ಮೊ. 7760145784ನ್ನು) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಅ. 15ರಂದು ನಗರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಅಕ್ಟೋಬರ್ 15ರಂದು ಹಮ್ಮಿಕೊಳ್ಳಲಾಗಿದೆ..
ಬೆಳಿಗ್ಗೆ 10 ಗಂಟೆಗೆ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಪ್ರವಾಸಿ ಮಂದಿರದ ಬಳಿ ಚಾಲನೆ ನೀಡುವರು.
ಮಧ್ಯಾಹ್ನ 12.30 ಗಂಟೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ನಡೆಯಲಿರುವ ಸಮಾರಂಭವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟಿಸುವರು.
ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮೈಸೂರಿನ ಪ್ರಗತಿಪರ ಚಿಂತಕರಾದ ಡಾ. ಮ.ಪು. ಪೂರ್ಣಾನಂದ ಮುಖ್ಯ ಭಾಷಣಕಾರರಾಗಿ ಆಗಮಿಸುವರು ಎಂದು ಪ್ರಕಟಣೆ ತಿಳಿಸಿದೆ.
ಯುವ ಸಂಘ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):-ನೆಹರು ಯುವ ಕೇಂದ್ರವು ಯುವಕ್ಷೇತ್ರದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಯುವ ಸಂಘಟನೆಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ.
2015-16ನೇ ಸಾಲಿನಲ್ಲಿ ಯುವ ಜನ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕøತಿಕ ಕಾರ್ಯಕ್ರಮ, ಸಮುದಾಯ ಅಭಿವೃದ್ಧಿ, ಸಮಾಜಸೇವೆ, ಜಾಗೃತಿ ಕಾರ್ಯಕ್ರಮದ ಶಿಬಿರಗಳು, ರಾಷ್ಟ್ರೀಯ, ಅಂತರಾಷ್ಟ್ರೀಯ ದಿನಾಚರಣೆಗಳು ಇನ್ನಿತರ ಕಾರ್ಯಕ್ರಮಗಳನ್ನು ಸಂಘಟಿಸಿರಬೇಕು.
ಯುವಕ, ಯುವತಿ ಮಂಡಳಿಯು ಕರ್ನಾಟಕ ರಾಜ್ಯ ಸಂಘಗಳ ನೋಂದಣಿ ಕಾಯ್ದೆ 1960 ರಡಿಯಲ್ಲಿ ನೋಂದಣಿಯಾಗಿ ನೆಹರು ಯುವ ಕೇಂದ್ರದಲ್ಲಿ ಸಂಯೋಜನೆಗೊಂಡು 3 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಹಾಗೂ 2016-17 ನೇ ಸಾಲಿಗಾಗಿ ನವೀಕರಣಗೊಂಡಿರಬೇಕು.
ಯುವ ಮಂಡಳಿ ಪ್ರಶಸ್ತಿಯು 25,000ರೂ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಹೊಂದಿದೆ.ಆಸಕ್ತ ಅರ್ಹ ಯುವ ಸಂಘಟನೆಗಳು ಮಹಿಳಾ ಮಂಡಳಿಗಳು ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ನೆಹರು ಯುವಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿಯವರಲ್ಲಿ ಪಡೆದು ಭರ್ತಿ ಮಾಡಿ ಅಕ್ಟೋಬರ್ 21ರೊಳಗೆ ಸಲ್ಲಿಸಬೇಕಿದೆ ವಿವರಗಳಿಗೆ ನೆಹರು ಯುವಕೇಂದ್ರ ದೂರವಾಣಿ ಸಂಖ್ಯೆ 08226-222120 ಸಂಪರ್ಕಿಸುವಂತೆ ನೆಹರು ಯುವಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ಎಸ್ ಸಿದ್ದರಾಮಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 14(ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್ ಮಹದೇವಪ್ರಸಾದ್ ಅವರು ಅಕ್ಟೋಬರ್ 15 ಹಾಗೂ 17ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 15ರಂದು ಮಧ್ಯಾಹ್ನ 12.30 ಗಂಟೆಗೆ ನಗರಕ್ಕೆ ಆಗಮಿಸಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3ಗಂಟೆಗೆ ಮೈಸೂರಿಗೆ ತೆರಳುವರು.
ಅಕ್ಟೋಬರ್17ರಂದು ಬೆಳಿಗ್ಗೆ 10.30ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಅಂಗವಿಕಲರಿಗೆ ಸಲಕರಣೆ ವಿತರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಎಸ್‍ಎನ್‍ಸಿಯು ತಾತ್ಕಾಲಿಕ ಸ್ಥಗಿತ
ಚಾಮರಾಜನಗರ, ಅ. 14(ಕರ್ನಾಟಕ ವಾರ್ತೆ):-ನಗರದ ಜಿಲ್ಲಾ ಆಸ್ಪತ್ರೆಯ ಎಸ್‍ಎನ್‍ಸಿಯು ವಿಭಾಗದ ಎಲೆಕ್ಟ್ರಿಕಲ್ ವೈರಿಂಗ್ ಮತ್ತು ಕಾಂಗರೂ ಮದರ್ ಕೇರ್ ವಾರ್ಡ್‍ನ ಸಿವಿಲ್‍ಕಾಮಗಾರಿಗಾಗಿ ಉನ್ನತಿಕರಣ ಪ್ರಕ್ರಿಯೆ ನಡೆಸಬೇಕಿರುವ ಹಿನ್ನಲೆಯಲ್ಲಿ ಅಕ್ಟೋಬರ್ 17ರಿಂದ 26ರವರೆಗೆ ಅಂದರೆ ಒಟ್ಟು 10ದಿನಗಳ ಕಾಲ ಎಸ್‍ಎನ್‍ಸಿಯು ಸೇವೆಯನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.
ಅ. 16ರಂದು ನಗರದಲ್ಲಿ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ದಕ್ಷಿಣ ಪ್ರಾದೇಶಿಕ ಕೇಂದ್ರ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಸತ್ತಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಅಕ್ಟೋಬರ್ 16ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲೂಕಿನ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇನ್ಸ್ಟಿಟೂಟ್ ಫಾರ್ ಪರ್ಸನ್ಸ್ ವಿತ್ ಪಿಸಿಕಲ್ ಡಿಸೆಬಿಲಿಟೀಸ್‍ನ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ. ಪಾಂಡಿಯನ್ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಅ. 17ರಿಂದ ನವೆಂಬರ್ 10ರವರೆಗೆ ಡಿಜಿಟಲ್ ಇಂಡಿಯಾ ಮಾಹಿತಿ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಇಂಡಿಯಾ ಕುರಿತು ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ, ಗ್ರಾಮ ಪಂಚಾಯಿತಿ ಕಚೇರಿ, ಶಾಲಾ-ಕಾಲೇಜುಗಳು ಮತ್ತು ಅಂಚೆ ಕಚೇರಿಗಳಲ್ಲಿ ಅಕ್ಟೋಬರ್ 17ರಿಂದ ನವೆಂಬರ್ 10ರ ವರೆಗೆ ಸಂಚಾರಿ ವಾಹನದ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 17ರೊಳಗೆ ಆಧಾರ್ ಸಂಖ್ಯೆ ನೊಂದಾಯಿಸಲು ಸೂಚನೆ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):- ಆಧಾರ್ ಸಂಖ್ಯೆಯನ್ನು ನೊಂದಾಯಿಸಲು ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮಪಂಚಾಯಿತಿ, ಹೋಬಳಿ ಮಟ್ಟದಲ್ಲಿ ಜನಸ್ನೇಹಿ ಕೇಂದ್ರ, ತಾಲೂಕು ಮಟ್ಟದಲ್ಲಿ ಖಾಸಗಿ ಸೇವಾ ಕೇಂದ್ರ ಹಾಗೂ ತಾಲೂಕು ಕಚೇರಿಯ ಆಹಾರ ಶಾಖೆಯಲ್ಲಿ ನೊಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಆಧಾರ್ ಸಂಖ್ಯೆ ನೊಂದಾಯಿಸದೆ ಇರುವ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆಯನ್ನು ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು. ಹೀಗಾಗಿ ನೊಂದಾಯಿಸದಿರುವ ಎಲ್ಲಾ ಪಡಿತರ ಚೀಟಿದಾರರು ಹಾಗೂ ಸದಸ್ಯರು ಅಕ್ಟೋಬರ್ 17ರೊಳಗೆ ನಿಗದಿಪಡಿಸಿರುವ ಕೇಂದ್ರಗಳಲ್ಲಿ ಆಧಾರ್ ಸಂಖ್ಯೆಯನ್ನು ನೊಂದಾಯಿಸಿಕೊಳ್ಳಬೇಕು.
ಈ ಬಗ್ಗೆ ದೂರುಗಳಿದ್ದಲ್ಲಿ ಆಹಾರ ಇಲಾಖೆಯ ಸಹಾಯವಾಣಿ ಸಂಖ್ಯೆ 1967 ಹಾಗೂ ಎಲ್ಲಾ ತಾಲೂಕುಗಳ ಆಹಾರ ಶಾಖೆಯ ಶಿರಸ್ತೇದಾರರನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 24ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ. ಸಭೆ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ವಚ್ಚ ಭಾರತ್ ಮಿಷನ್ ಪ್ರಗತಿ ಹಿನ್ನಡೆ: ಗ್ರಾ.ಪಂ. ಕಾರ್ಯದರ್ಶಿ ವೇತನಬಡ್ತಿ ಕಡಿತ
ಚಾಮರಾಜನಗರ, ಅ. 14 (ಕರ್ನಾಟಕ ವಾರ್ತೆ):- ಸ್ವಚ್ಚ ಭಾರತ್ ಮಿಷನ್ ಅನುಸಾರ ಶೌಚಾಲಯ ನಿರ್ಮಾಣ ವಿಷಯದಲ್ಲಿ ನೀಡಿದ ಆದೇಶ, ಸೂಚನೆಗಳನ್ನು ಪಾಲಿಸದೆ ಪ್ರಗತಿಯಲ್ಲಿ ಹಿನ್ನಡೆ ತೋರಿದ ಯಳಂದೂರು ತಾಲೂಕು ಅಗರ ಗ್ರಾಮಪಂಚಾಯಿತಿಗೆ ನಿಯೋಜನೆಯಾಗಿರುವ ಕೊಳ್ಳೇಗಾಲ ತಾಲೂಕಿನ ಶೆಟ್ಟಹಳ್ಳಿ ಗ್ರಾಮ ಪಂಚಾಯಿತಿಯ ಗ್ರೇಡ್-2 ಕಾರ್ಯದರ್ಶಿ ಚಿಕ್ಕತಾಂಡಶೆಟ್ಟಿ ಅವರಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ಕಡಿತಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.
ಒಂದು ಕೋಟಿ ರೂ. ವೆಚ್ಚದ ಸಾಧನ ಸಲಕರಣೆ ವಿತರಣೆ : ಎಚ್.ಎಸ್. ಮಹದೇವ ಪ್ರಸಾದ್
ಚಾಮರಾಜನಗರ, ಅ.17 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿಕಲಚೇತನರಿಗೆ ಆರೋಗ್ಯ ತಪಾಸಣೆ ಕೈಗೊಂಡಿದ್ದು ಒಂದು ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ ಎಂದು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ತಿಳಿಸಿದರು.
ಗುಂಡ್ಲುಪೇಟೆ ಪಟ್ಟಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ, ತಾಲೂಕು ಪಂಚಾಯತ್, ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ದಕ್ಷಿಣ ಪ್ರಾದೇಶಿಕ ಕೇಂದ್ರ ಹಾಗೂ ಸಂಗಮ ಪ್ರತಿಷ್ಠಾನ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 20,600 ವಿಕಲಚೇತನರಿದ್ದಾರೆಂದು ಸಮೀಕ್ಷೆ ವರದಿಗಳು ತಿಳಿಸಿವೆ. ವಿಕಲಚೇತನರಿಗೆ ತಪಾಸಣೆ ನಡೆಸಿ ಅವರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ವಿತರಿಸಿ ನೆರವು ನೀಡುವ ಉದ್ದೇಶದಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಕೇಂದ್ರದ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಳೆದ ಎರಡೂವರೆ ತಿಂಗಳ ಹಿಂದೆ ಸಂಸ್ಥೆಯು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ತಪಾಸಣಾ ಶಿಬಿರ ನಡೆಸಿತ್ತು ಎಂದರು.
ಚಾಮರಾಜನಗರ ತಾಲೂಕಿನಲ್ಲಿ 421 ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ 560 ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಿದ್ದೇವೆ. ಕೊಳ್ಳೇಗಾಲ ತಾಲೂಕಿನಲ್ಲಿಯೂ ಇತ್ತೀಚೆಗಷ್ಟೇ ತಪಾಸಣಾ ಶಿಬಿರ ನಡೆಸಲಾಗಿದೆ. ಅಲ್ಲಿಯೂ ಸಹ ವಿಕಲಚೇತನರಿಗೆ ಶೀಘ್ರದಲ್ಲಿಯೇ ಸಲಕರಣೆಗಳನ್ನು ವಿತರಿಸಲಾಗುತ್ತದೆ. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಇರುವ ವಿಕಲಚೇತನರಿಗೆ ಅಗತ್ಯ ನೆರವು ನೀಡುವ ಉದ್ದೇಶವಿದೆ. ಅಂಗವಿಕಲರ ಕಲ್ಯಾಣ ಇಲಾಖೆ ಹಾಗೂ ಶಾಸಕರ ಅನುದಾನ ಸೇರಿದಂತೆ ಇತರ ಲಭÀ್ಯ ಅನುದಾನ ಬಳಕೆ ಮಾಡಿಕೊಂಡು ಸೌಲಭ್ಯಗಳನ್ನು ದೊರಕಿಸಲು ಮುಂದಾಗುವುದಾಗಿ ಸಚಿವರು ತಿಳಿಸಿದರು.
ವಿಕಲಚೇತನರಿಗೆ ಆತ್ಮಸ್ಥೈರ್ಯ ತುಂಬುವುದರ ಜತೆಗೆ ಎಲ್ಲರಂತೆ ಅವರೂ ಸಹÀ ದಿನನಿತ್ಯದ ಜೀವನ ವ್ಯವಹಾರಕ್ಕೆ ಸಿದ್ಧರಾಗುವಂತೆ ಉತ್ತೇಜನ ನೀಡಬೇಕಿದೆ. ಇದಕ್ಕೆ ಪೂರಕವಾದ ನೆರವು ಕೊಡಬೇಕಿದೆ. ಸರ್ಕಾರದ ಸೌಲಭ್ಯಗಳನ್ನು ಅಧಿಕಾರಿಗಳು ಸಮರ್ಪಕವಾಗಿ ತಲುಪಿಸಿ ವಿಕಲಚೇತನರು ಸಹ ಅವರ ಸಾಮಥ್ರ್ಯಕ್ಕೆ ಅನುಗುಣವಾಗಿ ದುಡಿಯಲು ಅವಕಾಶ ಕಲ್ಪಿಸಬೇಕಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಯಲ್ಲಿ ಮೊದಲ ಬಾರಿಗೆ ಹೆಚ್ಚು ಸಂಖ್ಯೆಯಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಅವಶ್ಯಕ ಸಾಧನ ಸಲಕರಣೆ ವಿತರಿಸುವ ಮಾನವೀಯವುಳ್ಳ ಕಾರ್ಯಕ್ರಮವನ್ನು ಎಲ್ಲ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ನೆರವಿನೊಂದಿಗೆ ಹಮ್ಮಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದು ಸಚಿವರು ನುಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಎಸ್. ಮಹೇಶ್ ಮಾತನಾಡಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರ ಕಾಳಜಿಯಿಂದಾಗಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಿಸುವ ಬೃಹತ್ ಕಾರ್ಯಕ್ರಮ ಅರ್ಥಪೂರ್ಣವಾಗಿ ಯಶಸ್ವಿಯಾಗಿದೆ. ಇದರಿಂದ ಅನೇಕ ವಿಶೇಷ ಚೇತನರಿಗೆ ಸೌಲಭ್ಯ ಸಿಕ್ಕಿದಂತಾಗಿದೆ ಎಂದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ವಿಕಲಚೇತನರಿಗೆ ನರವು ಕಲ್ಪಿಸುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಕೇಂದ್ರವು ವರ್ಷಕ್ಕೆ 4 ಸ್ಥಳಗಳಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತದೆ. ಈ ಬಾರಿ ಚಾಮರಾಜನಗರ ಜಿಲ್ಲೆಯಲ್ಲೇ 3 ಪಟ್ಟಣಗಳಲ್ಲಿ ತಪಾಸಣೆ ಶಿಬಿರ ಆಯೋಜಿಸಿದೆ. ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕಿನಲ್ಲಿ ತಪಾಸಣೆ ವೇಳೆ ನ್ಯೂನತೆ ಇರುವ ಶೇ.90ರಷ್ಟು ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ಸಿದ್ಧಪಡಿಸಿಕೊಂಡು ವಿತರಿಸುತ್ತಿದೆ ಎಂದರು.
ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ದಕ್ಷಿಣ ಪ್ರಾದೇಶಿಕ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ. ಪಾಂಡಿಯನ್ ಮಾತನಾಡಿ ಕೇಂದ್ರವು ಇದುವರೆಗೆ 16 ರಾಜ್ಯಗಳಲ್ಲಿ ವಿಕಲಚೇತನರಿಗೆ ಆರೋಗ್ಯ ತಪಾಸಣೆ ಹಾಗೂ ಸಲಕರಣೆ ವಿತರಿಸುವ ಕಾರ್ಯಕ್ರಮ ನಡೆಸಿದೆ. ಆದರೆ ಚಾಮರಾಜನಗರ ಜಿಲ್ಲೆಯು ಸುವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಿ ಮಾದರಿಯಾಗಿದೆ. ಎರಡೂವರೆ ತಿಂಗಳ ಹಿಂದೆಯಷ್ಟೇ ತಪಾಸಣಾ ಶಿಬಿರ ನಡೆಸಿ ಆದ್ಯತೆ ಮೇರೆಗೆ ಸಾಧನ ಸಲಕರಣೆಯನ್ನು ಶೀಘ್ರವಾಗಿ ವಿತರಿಸಲ್ಪಟ್ಟ ಜಿಲ್ಲೆ ಎಂಬ ಹೆಗ್ಗಳಿಕೆ ಚಾಮರಾಜನಗರ ಪಾತ್ರವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತ್ರಿಚಕ್ರ ವಾಹನ, ಗಾಲಿ ಕುರ್ಚಿ, ಸಿಪಿ ಕುರ್ಚಿ, ಎಲ್ಬೋ ಕ್ರಚಸ್, ಕೃತಕಾಂಗ, ಚಾಲಿಪರ್ಸ್, ನಡಿಗೆ ಸಾಧನ, ಇನ್ನಿತರ ಸಲಕರಣೆಗಳನ್ನು ವಿಕಲಚೇತನ ಫಲಾನುಭವಿಗಳಿಗೆ ವಿತರಿಸಲಾಯಿತು. ಪಂಡಿತ್ ದೀನ್‍ದಯಾಳ್ ಉಪಾಧ್ಯಾಯ ಕೇಂದ್ರದ ವೈದ್ಯರ ತಂಡವನ್ನು ಗೌರವಿಸಲಾಯಿತು.
ಪುರಸಭೆ ಅಧ್ಯಕ್ಷರಾದ ಭಾಗ್ಯಮ್ಮ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ರೂಪಾಸ್ವಾಮಿ, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಅಶ್ವಿನಿ ವಿಶ್ವನಾಥ, ರತ್ನಮ್ಮ ಶ್ರೀಕಂಠಪ್ಪ, ತಾಲೂಕು ಪಂಚಾಯತ್ ಸದಸ್ಯರಾದ ಜಗದೀಶ್ ಮೂರ್ತಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪುಷ್ಪಾ ಕಮ್ಮಾರ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಿಜಿಟಲ್ ಇಂಡಿಯಾ ಮಾಹಿತಿ ಪ್ರಚಾರ ಅಭಿಯಾನಕ್ಕೆ ಡೀಸಿ ಚಾಲನೆ
ಚಾಮರಾಜನಗರ, ಅ. 17 (ಕರ್ನಾಟಕ ವಾರ್ತೆ):- ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಡಿಜಿಟಲ್ ಇಂಡಿಯಾ ಕುರಿತು ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ, ಗ್ರಾಮ ಪಂಚಾಯಿತಿ ಕಚೇರಿ, ಶಾಲಾ-ಕಾಲೇಜುಗಳು ಮತ್ತು ಅಂಚೆ ಕಚೇರಿಗಳಲ್ಲಿ ಮಾಹಿತಿ ನೀಡುವ ಸಂಚಾರಿ ಪ್ರಚಾರ ವಾಹನಕ್ಕೆ ಇಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿಂದು ವಿಶೇಷವಾಗಿ ಆಯ್ದ ಗ್ರಾಮಪಂಚಾಯಿತಿಗಳಲ್ಲಿ ಡಿಜಿಟಲ್ ಇಂಡಿಯಾ ಕಾರ್ಯನಿರ್ವಹಣೆ ಕುರಿತು ಮಾಹಿತಿ ನೀಡುವ ಉದ್ದೇಶದಿಂದ ರೂಪುಗೊಳಿಸಲಾಗಿರುವ ಪ್ರಚಾರ ವಾಹನ ಸಂಚಾರಕ್ಕೆ ಜಿಲ್ಲಾಧಿಕಾರಿಯವರು ನಿಶಾನೆ ತೋರಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ,.ರಾಮು ಗ್ರಾಮೀಣ ಭಾಗದ ಜನರಿಗೆ ಡಿಜಿಟಲ್ ಇಂಡಿಯಾದಿಂದ ಆಗಿರುವ ಅನುಕೂಲತೆಗಳನ್ನು ಅರಿವು ಮೂಡಿಸುವ ಉದ್ದೇಶದಿಂದ ಪ್ರಚಾರ ವಾಹನ ಸಂಚರಿಸಲಿದೆ. ಗ್ರಾಮೀಣ ಜನತೆ ಡಿಜಿಟಲೀಕರಣದಿಂದ ಲಭ್ಯವಾಗುತ್ತಿರುವ ಸೌಲಭ್ಯಗಳನ್ನು ಮನದಟ್ಟು ಮಾಡಿಕೊಳ್ಳಬೇಕು ಎಂದರು.
ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಇಂಡಿಯಾ ಬಗೆಗಿನ ಮಾಹಿತಿಯನ್ನು ವಿದ್ಯಾವಂತರು ತಿಳಿಸಿಕೊಡಬೇಕು. ಕಾರ್ಯಕ್ರಮಗಳ ಅರಿವನ್ನು ಮೂಡಿಸುವಲ್ಲಿ ಎಲ್ಲರ ಸಹಕಾರವು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅಭಿಪ್ರಾಯಪಟ್ಟರು.
ಪ್ರಚಾರ ವಾಹನದಲ್ಲಿ ಆಧಾರ್ ನೋಂದಣಿ ಬಗೆಗಿನ ಮಾಹಿತಿಯು ಇದೆ. ಎಲ್ ಇಡಿ ಪರದೆ ಮೂಲಕ ಅಗತ್ಯ ಪ್ರಮಾಣ ಪತ್ರಗಳನ್ನು ಪಡೆಯುವ ವಿಧಾನ, ಡಿಜಿಟಲ್ ಲಾಕರ್ ತೆರೆಯುವಿಕೆ, ಇನ್ನಿತರ ದಾಖಲೆಗಳ ಡಿಜಿಟಲೀಕರಣ ಇನ್ನಿತರ ಅವಶ್ಯಕ ವಿವರಗಳನ್ನೊಳಗೊಂಡ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ. ಅಲ್ಲದೆ ಬೀದಿ ನಾಟಕದ ಮೂಲಕ ಕಲಾವಿದರು ಡಿಜಿಟಲೀಕರಣದ ಮಹತ್ವ ಹಾಗೂ ಉಪಯೋಗ ಬಳಕೆಯ ಬಗ್ಗೆಯೂ ತಿಳಿವಳಿಕೆ ನೀಡಲಿದ್ದಾರೆ.
ಕಾರ್ಯಕ್ರಮ ಚಾಲನೆ ಸಂದರ್ಭದಲ್ಲಿ ಎನ್ ಐಸಿ ಅಧಿಕಾರಿ ಯತಿರಾಜು, ಆಧಾರ್ ನೋಂದಣಿ ಅಧಿಕಾರಿ ರಾಂಪ್ರಸಾದ್, ಇತರರು ಹಾಜರಿದ್ದರು.
No comments:
Post a Comment