Saturday, 10 December 2016

01-11-2016 ರಿಂದ 22-11-2016 ವರೆಗಿನ ಸುದ್ದಿಗಳು




ನ. 2ರಂದು ಟಿಪ್ಪು ಸುಲ್ತಾನ್, ಭಕ್ತ ಕನಕ ದಾಸರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆÀ
ಚಾಮರಾಜನಗರ, ನ. 01 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಹಾಗೂ ಭಕ್ತ ಕನಕ ದಾಸರ ಜಯಂತಿ ಆಚರಿಸುವ ಸಂಬಂಧÀ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.
ಈ ಸಭೆಗೆ ಎಲ್ಲಾ ಸಮುದಾಯ, ಸಂಘಟನೆಯ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಹಾಜರಾಗಿ ಸಲಹೆ ನೀಡುವಂತೆ ಜಿಲ್ಲಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾg.É



ನ. 15ರಂದು ಟಿಪ್ಪುಸುಲ್ತಾನ್, ನ. 17ರಂದು ಭಕ್ತ ಕನಕದಾಸರ ಜನ್ಮ ದಿನ ಅದ್ದೂರಿ ಆಚರಣೆಗೆ ತೀರ್ಮಾನ
ಚಾಮರಾಜನಗರ, ನ. 2 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಹಕಾರದೊಂದಿಗೆ ಹಜರತ್ ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ನವೆಂಬರ್ 15ರಂದು ಹಾಗೂ ಶ್ರೇಷ್ಠ ಭಕ್ರ ಕನಕದಾಸರ ಜಯಂತಿಯನ್ನು ನವೆಂಬರ್ 17ರಂದು ನಗರದಲ್ಲಿ ಅದ್ದೂರಿಯಾಗಿ ಆಚರಿಸÀಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಬಿ. ರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ಟಿಪ್ಪು ಸುಲ್ತಾನ್  ಹಾಗೂ ಭಕ್ತ ಕನಕದಾಸ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಕಳೆದ ಬಾರಿಯೂ ಟಿಪ್ಪುಸುಲ್ತಾನ್ ಜಯಂತಿಯನ್ನು ಜಿಲ್ಲಾ ಕೇಂದ್ರದಲ್ಲಿ ಯಶಸ್ವಿಯಾಗಿ ಆಚರಿಸಲಾಗಿದೆ. ಈ ಬಾರಿಯೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಟಿಪ್ಪುಸುಲ್ತಾನ್ ಅವರ ಕುರಿತು ಉಪನ್ಯಾಸ ಏರ್ಪಡಿಸಲಾಗುವುದು. ಉಪನ್ಯಾಸಕರ ಹೆಸರುಗಳನ್ನು ಸೂಚಿಸಿ ಸಲಹೆ ನೀಡಬಹುದು. ಅಂತಿಮವಾಗಿ ಒಬ್ಬರನ್ನು ಆಯ್ಕೆ ಮಾಡಿ ಉಪನ್ಯಾಸ ನೀಡಲು ಆಹ್ವಾನಿಸಲಾಗುವುದು ಎಂದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಕಾರ್ಯಕ್ರಮ ಏರ್ಪಾಡು ಮಾಡಲಾಗುತ್ತದೆ. ಇದಕ್ಕಾಗಿ ಅಧಿಕಾರಿಗಳಿಗೆ ಅಗತ್ಯ ವ್ಯವಸ್ಥೆ ಮಾಡಲು ಸೂಚಿಸಲಾಗುವುದು. ಕುಡಿಯುವ ನೀರು, ಇನ್ನಿತರ ಪೂರ್ವ ಸಿದ್ಧತೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಸಹ ಈ ಹಿಂದಿನಿಂದಲೂ ಹಮ್ಮಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜಿಸಲು ಸೂಚಿಸಲಾಗುವುದು. ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಸಲಾಗುವುದು. ಪ್ರವಾಸಿ ಮಂದಿರದಿಂದ ಜಾನಪದ ಕಲಾತಂಡಗಳೊಂದಿಗೆ ಕನಕದಾಸರ ಭಾವಚಿತ್ರ ಮೆರವಣಿಗೆ ಆರಂಭಿಸಲಾಗುವುದು ಎಂದರು.
ಎರಡೂ ಕಾರ್ಯಕ್ರಮಗಳಿಗೆ ಅಗತ್ಯವಿರುವ ಆಹ್ವಾನ ಪತ್ರವನ್ನು ಶ್ರೀಘ್ರವೇ ಮುದ್ರಿಸಿ ವಿತರಿಸಲಾಗುವುದು. ಶಿಷ್ಠಾಚಾರ ಅನುಸಾರ ಎಲ್ಲ ಸಿದ್ಧತೆ ಕೈಗೊಳ್ಳಲಾಗುವುದು. ಎಲ್ಲ ಸಮುದಾಯ, ಸಂಘಟನೆಗಳ  ಮುಖಂಡರು, ಪ್ರತಿನಿಧಿಗಳು, ನಾಗರಿಕರು ಕಾರ್ಯಕ್ರಮ ಯಶಸ್ವಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್. ಬಾಲರಾಜು ಕಾರ್ಯಕ್ರಮ ಆಯೋಜನೆ ಸಂಬಂಧ ಮಾತನಾಡಿ ಸಲಹೆ ನೀಡಿದರು. ಇತರೆ ಮುಖಂಡರು ಸಹ ಸಲಹೆಗಳನ್ನು ವ್ಯಕ್ತಪಡಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸರಸ್ವತಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಾಶ್, ಮುಖಂಡರಾದ ಸೈಯದ್ ಅತೀಕ್ ಅಹಮದ್, ಮಹಮದ್ ಅಸ್ಗರ್ ಮುನ್ನಾ, ಸಮೀಉಲ್ಲಾ, ಅಬ್ರಾರ್ ಅಹಮದ್, ಶೋಯೆಬ್ ಅಹಮದ್, ಸೈಯದ್ ನಜೀಬ್ ಬುಲ್ಲಾ, ಜುಲ್ಪೀಕರ್, ಸಿ.ಎಂ. ಕೃಷ್ಣಮೂರ್ತಿ, ಕೆ.ಎಂ. ನಾಗರಾಜು, ವೆಂಕಟರಮಣ ಪಾಪು, ಆಲೂರು ನಾಗೇಂದ್ರ, ಬಿ. ನಾಗರಾಜು, ಇತರ ಮುಖಂಡರು, ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಹಾಸ್ಟೆಲ್‍ಗಳಿಗೆ ಕಾವಲುಗಾರರ ನಿಯೋಜನೆಗೆ ಸೂಚನೆ
ಚಾಮರಾಜನಗರ, ನ. 2 (ಕರ್ನಾಟಕ ವಾರ್ತೆ):- ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಹÉೂರಗಿನವರು ಅನಧಿಕೃತವಾಗಿ ಉಳಿದುಕೊಳ್ಳಲು ಅವಕಾಶ ನೀಡಬಾರದು ಎಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬೊಮ್ಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿಯ ನೂತನ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಮಾಜ ಕಲ್ಯಾಣ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ವಿದ್ಯಾರ್ಥಿ ನಿಲಯಗಳ ವಾರ್ಡ್‍ನ್‍ಗಳ ಸಭೆಯಲ್ಲಿ ಅವರು ಮಾತನಾಡಿದರು.
ಹಾಸ್ಟೆಲ್‍ಗಳಲ್ಲಿ  ಸಮರ್ಪಕವಾಗಿ ಕಾವಲುಗಾರರನ್ನು ನೇಮಕ ಮಾಡಿಕೊಳ್ಳಬೇಕು. ವಿಶೇಷವಾಗಿ ಹೆಣ್ಣು ಮಕ್ಕಳ ಹಾಸ್ಟೆಲ್‍ಗಳಲ್ಲಿ ರಾತ್ರಿಯ ಕಾವಲುಗಾರರನ್ನು ಕಡ್ಡಾಯವಾಗಿ ನಿಯೋಜಿಸಲೇಬೇಕು. ವಿದ್ಯಾರ್ಥಿಗಳು ಭಯ ಮುಕ್ತ ವಾತಾವರಣದಲ್ಲಿ ಕಲಿಯುವಂತಹ ವ್ಯವಸ್ಥೆ ಮಾಡಬೇಕು ಎಂದರು.
ವಾರ್ಡ್‍ನ್‍ಗಳು ಹಾಸ್ಟೆಲ್‍ಗಳ ವಿದ್ಯಾರ್ಥಿಗಳ ಜತೆ ಅವರ ಸಮಸ್ಯೆ ಕುರಿತು ಸಮಾಲೋಚನೆ ನಡೆಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಕಾಲಕಾಲಕ್ಕೆ ನಿಲಯಪಾಲಕರ ಸಭೆ ಕರೆದು ಸಲಹೆ ಸೂಚನೆಗಳನ್ನು ನೀಡಬೇಕು ಎಂದು ತಿಳಿಸಿದರು.
ವಿದ್ಯಾರ್ಥಿನಿಲಯದಲ್ಲಿ ಅಡುಗೆ ಸಿಬ್ಬಂದಿ ಸ್ವಚ್ಛತೆ ಕಾಪಾಡಬೇಕು. ಶುದ್ಧ ಆಹಾರ ತಯಾರಿಸಿ ಮಕ್ಕಳಿಗೆ ನೀಡಬೇಕು. ಅಗತ್ಯ ತಟ್ಟೆ-ಲೋಟದ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಅವಶ್ಯಕ ಪದಾರ್ಥಗಳನ್ನು ಪ್ರತಿ ತಿಂಗಳು ತಪ್ಪದೆ ಒದಗಿಸಬೇಕು ಎಂದು ಸೂಚನೆ ನೀಡಿದರು.
ಸರ್ಕಾರ ವಿದ್ಯಾರ್ಥಿ ನಿಲಯಗಳಿಗೆ ಹೆಚ್ಚಿನ ಅನುದಾನವನ್ನು ನೀಡುತ್ತಿದ್ದು. ಈ ಹಣವನ್ನು  ಅಧಿಕಾರಿಗಳು ಸಮರ್ಪಕವಾಗಿ ಉಪಯೋಗಿಸಿಕೊಂಡು ವಿದ್ಯಾರ್ಥಿಗಳಿಗೆ  ಟ್ಯೂಷನ್ ಹಾಗೂ ಉದ್ಯೋಗ ಆಧಾರಿತ ಕೌಶಲ್ಯ ಸೇರಿದಂತೆ ಅಗತ್ಯ ಸಂವಹನ ತರಬೇತಿ ನೀಡಬೇಕು. ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಫಲಿತಾಂಶ ಕಡಿಮೆಯಾಗಿದ್ದು, ಈ ವರ್ಷ ಹಾಸ್ಟೆಲ್ ವಿದ್ಯಾರ್ಥಿಗಳು ಶೇ.100 ರಷ್ಟು ಉತ್ತೀರ್ಣವಾಗಲು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಸಿ. ಚನ್ನಪ್ಪ, ಎಂ. ಅಶ್ವಿನಿ, ಆರ್. ಬಾಲರಾಜು, ಎಂ. ಚಂದ್ರಕಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಂ. ಮಾದೇಶು, ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ್, ಮತ್ತಿತರರು ಹಾಜರಿದ್ದರು.
ವಿಶೇಷ ಚೇತನರ ಕುಂದುಕೊರತೆ ಸಭೆ ಮುಂದೂಡಿಕೆ
ಚಾಮರಾಜನಗರ, ನ. 2 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ತಹಸೀಲ್ದಾರರ ಅಧ್ಯಕ್ಷತೆಯಲ್ಲಿ ನವೆಂಬರ್ 3ರಂದು ನಿಗದಿಯಾಗಿದ್ದ ತಾಲೂಕುಮಟ್ಟದ ವಿಶೇಷ ಚೇತನರ ಕುಂದುಕೊರತೆ ಸಭೆಯನ್ನು ಮುಂದೂಡಲಾಗಿದೆ.
ಕೇಂದ್ರ ಬರ ಅಧ್ಯಯನ ತಂಡವು ಜಿಲ್ಲೆಗೆ ನವೆಂಬರ್ 3ರಂದು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಗಿದೆ. ಸಭೆ ನಡೆಯುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು. ಮಾಹಿತಿಗೆ ರಾಜೇಶ್ 8105720709, ಕಚೇರಿ ಸಂಖ್ಯೆ 08226-222603, 223688 ಸಂಪರ್ಕಿಸುವಂತೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 3ರಂದು ಜಿಲ್ಲೆಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ
ಚಾಮರಾಜನಗರ, ನ. 2 (ಕರ್ನಾಟಕ ವಾರ್ತೆ):- ಕೇಂದ್ರ ಬರ ಅಧ್ಯಯನ ತಂಡವು ನವೆಂಬರ್ 3ರಂದು ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಭಾವ ಪರಿಸ್ಥಿತಿಯನ್ನು ಅಧ್ಯಯನ ಮಾಡಲಿದೆ.
ಎಸ್.ಎಂ. ಕೊಲತ್ಕರ್ ನೇತೃತ್ವದ ಅಧ್ಯಯನ ತಂಡದಲ್ಲಿ ಸತೀಶ್ ಕುಮಾರ್ ಕಾಂಬೋಜ್, ನೀತಾ ತಾಹಿಲಿನಿ ಅವರು ಇರಲಿದ್ದಾರೆ.
ಮಧ್ಯಾಹ್ನ 2.20 ಗಂಟೆಗೆ ಕೊಳ್ಳೇಗಾಲದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರಕ್ಕೆ ಬರ ಅಧ್ಯಯನ ತಂಡವು ಆಗಮಿಸಲಿದೆ. 3.30 ಗಂಟೆಗೆ ಯಳಂದೂರು ತಾಲೂಕಿನ ಕಿನಕನಹಳ್ಳಿ, 3.45 ಗಂಟೆಗೆ ಮಲ್ಲಿಗೆಹಳ್ಳಿ, 4 ಗಂಟೆಗೆ ಮೆಲ್ಲಹಳ್ಳಿಗೆ ಭೇಟಿ ಕೊಡಲಿದೆ. ಚಾಮರಾಜನಗರ ತಾಲೂಕಿನ ಹೆಗ್ಗವಾಡಿಗೆ ಸಂಜೆ 4.30 ಗಂಟೆಗೆ, ಹರದನಹಳ್ಳಿಗೆ 5 ಗಂಟೆಗೆ, ಅರಕಲವಾಡಿಗೆ 5.15 ಗಂಟೆಗೆ ಆಗಮಿಸಲಿದೆ. ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿಗೆ ಸಂಜೆ 5.30 ಗಂಟೆಗೆ, 5.45 ಗಂಟೆಗೆ ತೆರಕಣಾಂಬಿ, 6.15 ಗಂಟೆಗೆ ಗುಂಡ್ಲುಪೇಟೆ, 6.30 ಗಂಟೆಗೆ ರಾಘವಾಪುರ (ಅಮಾನಿಕೆರೆ)ಕ್ಕೆ ಆಗಮಿಸಲಿದೆ.
ಬರಪ್ರದೇಶಗಳನ್ನು ವೀಕ್ಷಿಸಿ ತಂಡವು ಕೇಂದ್ರಕ್ಕೆ ವರದಿ ನೀಡಲಿದೆ ಎಂದು ಪ್ರಕಟಣೆ ತಿಳಿಸಿದೆ.
ಅಂತರ ಕಾಲೇಜು ನಾಟಕ, ಜನಪದೋತ್ಸವಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 2 (ಕರ್ನಾಟಕ ವಾರ್ತೆ):- ಮೈಸೂರಿನ ರಂಗಾಯಣವು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮೂಲಕ ಅಂತರ ಕಾಲೇಜು ನಾಟಕ ಮತ್ತು ಜನಪದೋತ್ಸವ ಸ್ಪರ್ಧೆಯನ್ನು ಆಯೋಜಿಸಿದ್ದು ಅರ್ಜಿ ಆಹ್ವಾನಿಸಿದೆ.
ಕಾಲೇಜುಗಳಲ್ಲಿ ದೇಸೀಯ ಸಾಂಸ್ಕøತಿಕ ವಾತಾವರಣವನ್ನು ಪುನರ್ ಸ್ಥಾಪಿಸಲು ಆಯೋಜಿಸಿರುವ ಜಿಲ್ಲಾಮಟ್ಟದ ಸ್ಫರ್ಧೆಯಲ್ಲಿ 8 ತಂಡಗಳು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಆಯ್ಕೆಗೊಂಡ ಕಾಲೇಜು ತಂಡಕ್ಕೆ ನಾಟಕ ನಿರ್ದೇಶಕರಿಗೆ 20 ಸಾವಿರ, ನಾಟಕ ತಯಾರಿಗೆ ಪ್ರೋತ್ಸಾಹಧನವಾಗಿ 5 ಸಾವಿರ, ಜಾನಪದ ನೃತ್ಯ ತಂಡಕ್ಕೆ 10 ಸಾವಿರ ರೂ. ನೀಡಲಾಗುತ್ತದೆ. ಆಯ್ಕೆಗೊಂಡ ಕಾಲೇಜಿನವರು ನುರಿತ ನಿರ್ದೇಶಕ ಮತ್ತು ಕಲಾವಿದರಿಂದ ನವೆಂಬರ್ 20ರಿಂದ ನಾಟಕ ತಯಾರಿ ಸಿದ್ಧತೆ ಮಾಡಿಕೊಂಡು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಎರಡು ವಿಭಾಗದಲ್ಲೂ ಒಂದೇ ಕಾಲೇಜು ಭಾಗವಹಿಸಬಹುದು. ಅಥವಾ ಯಾವುದಾದರೂ ಒಂದು ನಾಟಕ ಇಲ್ಲವೇ ಜಾನಪದ ನೃತ್ಯ ವಿಭಾಗದಲ್ಲಿ ಭಾಗವಹಿಸಲು ಅವಕಾಶವಿದೆ.
ಜಿಲ್ಲಾಮಟ್ಟದಲ್ಲಿ ಭಾಗವಹಿಸುವ 8 ಕಾಲೇಜುಗಳಿಗೆ ಸ್ಪರ್ಧೆಯನ್ನು ನಡೆಸಿ ಎರಡು ತಂಡಗಳನ್ನು ವಿಭಾಗಮಟ್ಟಕ್ಕೆ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ತಂಡಗಳಿಗೆ ನಗದು ಬಹುಮಾನ, ಪ್ರಮಾಣಪತ್ರ ನೀಡಲಾಗುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ತಂಡಗಳಿಗೂ ಪ್ರಮಾಣಪತ್ರ ನೀಡಲಾಗುತ್ತದೆ.
ಭಾಗವಹಿಸಲು ಇಚ್ಚಿಸುವ ಜಿಲ್ಲೆಯ ಕಾಲೇಜುಗಳ ಮುಖ್ಯಸ್ಥರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಮೈಸೂರು ರಂಗಾಯಣ ಕಚೇರಿಯಿಂದ ನಿಗದಿತ ಅರ್ಜಿಯನ್ನು ನವೆಂಬರ್ 10ರೊಳಗೆ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 15ರೊಳಗೆ ನಿರ್ದೇಶಕರು, ರಂಗಾಯಣ, ಮೈಸೂರು ಇಲ್ಲಿಗೆ ಕಳುಹಿಸಬೇಕು. ವಿವರಗಳಿಗೆ ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ರಂಗಾಯಣ ವೆಬ್ ಸೈಟ್ ಅಥವಾ ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆಯ ಜಿಲ್ಲಾ ಸಂಚಾಲಕರಾದ ಸಿ.ಎಂ. ನರಸಿಂಹಮೂರ್ತಿ (ಮೊಬೈಲ್ 9916115263) ಅವರನ್ನು ಸಂಪರ್ಕಿಸುವಂತೆ ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಮುಖ್ಯ ಪಟ್ಟಣಗಳಿಗೆ ಭ್ರಷ್ಠಾಚಾರ ನಿಗ್ರಹದಳ ಭೇಟಿ : ದೂರು ಸ್ವೀಕಾರ
ಚಾಮರಾಜನಗರ, ನ. 2 (ಕರ್ನಾಟಕ ವಾರ್ತೆ):- ಜಿಲ್ಲಾ ಭ್ರಷ್ಠಾಚಾರ ನಿಗ್ರಹದಳವು ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಇತರೆ ಪಟ್ಟಣಗಳಿಗೆ ಭೇಟಿ ನೀಡಿ ನಾಗರಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದೆ.
ನವೆಂಬರ್ 4ರಂದು ಗುಂಡ್ಲುಪೇಟೆಯ ಸರ್ಕಾರಿ ಅತಿಥಿಗೃಹ, ನ. 7ರಂದು ಚಾಮರಾಜನಗರ ಪಟ್ಟಣದ ಎಸಿಬಿ ಪೊಲೀಸ್ ಠಾಣೆ, ನ. 15ರಂದು ಯಳಂದೂರು ಸರ್ಕಾರಿ ಅತಿಥಿಗೃಹ, ನ. 23ರಂದು ಕೊಳ್ಳೇಗಾಲ ಸರ್ಕಾರಿ ಅತಿಥಿಗೃಹ, ನ. 29ರಂದು ಹನೂರಿನ ಸರ್ಕಾರಿ ಅತಿಥಿಗೃಹದಲ್ಲಿ ನಾಗರಿಕರು ಅರ್ಜಿಗಳನ್ನು ನೀಡಬಹುದು. ನಿಗದಿತ ದಿನಾಂಕದಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸರ್ಕಾರಿ ಕಚೇರಿಗಳಲ್ಲಿ ವಿಳಂಬ, ಲಂಚ ಹಣಕ್ಕೆ ಒತ್ತಾಯ, ಇತ್ತಿತರ ತೊಂದರೆ ನೀಡುತ್ತಿರುವ ಅಧಿಕಾರಿ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
   *************

ಜಿಲ್ಲೆಯ ವಿವಿಧ ಭಾಗಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ: ಬರ ಪ್ರದೇಶಗಳ ವೀಕ್ಷಣೆ
ಚಾಮರಾಜನಗರ, ನ. 3 (ಕರ್ನಾಟಕ ವಾರ್ತೆ):- ಕೇಂದ್ರ ಬರ ಅಧ್ಯಯನ ತಂಡವು ಜಿಲ್ಲೆಯ ವಿವಿಧ ಭಾಗಗಳಿಗೆ ಇಂದು ಭೇಟಿ ನೀಡಿ ಅಭಾವ ಪರಿಸ್ಥಿತಿಯ ಅಧ್ಯಯನ ನಡೆಸಿತು.
ಎಸ್.ಎಂ. ಕೊಲತ್ಕರ್, ಸತೀಶ್ ಕುಮಾರ್ ಕಾಂಬೋಜ್, ಎಸ್.ಸಿ. ಮೀನಾ ಅವರನ್ನೊಳಗೊಂಡ ತಂಡವು ಮೊದಲಿಗೆ ಸತ್ತೇಗಾಲದ ಮೂಲಕ ಜಿಲ್ಲೆಯ ಗಡಿಗೆ ಆಗಮಿಸಿತು. ಬಳಿಕ ಕೊಳ್ಳೇಗಾಲದ ಅರಣ್ಯ ಇಲಾಖೆಯ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಜಿಲ್ಲೆಯ ಬರ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಿತು.
ಜಿಲ್ಲಾಧಿಕಾರಿ ಬಿ.ರಾಮು ಅವರು ಜಿಲ್ಲೆಯ ಮಳೆ ಬೆಳೆ ಹಾಗೂ ಮೇವು ಪರಿಸ್ಥಿತಿ ಬಗ್ಗೆ ಪವರ್‍ಪಾಯಿಂಟ್ ಮೂಲಕ ವಿವರವಾಗಿ ತಂಡಕ್ಕೆ ಮಾಹಿತಿ ಒದಗಿಸಿದರು. ಅಲ್ಲದೇ ಕುಡಿಯುವ ನೀರಿನ ಅಭಾವ ಪರಿಸ್ಥಿತಿ ಜೊತೆಗೆ ಜಿಲ್ಲೆಯ ಅರಣ್ಯದಂಚಿನ ಗ್ರಾಮಗಳು ಹಾಗೂ ಹಾಡಿಗಳಲ್ಲಿ ತಲೆದೋರಿರುವ ಸಮಸ್ಯೆಗಳ ಬಗ್ಗೆ ಛಾಯಾಚಿತ್ರಗಳ ಮೂಲಕ ವಿವರಣೆ ನೀಡಿದರು.
 ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಹಾಗೂ ಬೆಳೆ ವಿಮೆ ಕುರಿತು ವಿವರಿಸಿದರು.
ಬರ ಅಧ್ಯಯನ ತಂಡವು ಮಾಹಿತಿ ಪಡೆಯುವ ಸಂದರ್ಭದಲ್ಲಿ ಶಾಸಕರಾದ ಆರ್. ನರೇಂದ್ರ, ಎಸ್. ಜಯಣ್ಣ ಹಾಗೂ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಬಸವರಾಜು ಅವರು ಹಾಜರಿದ್ದರು. ಈ ಸಂದರ್ಭದಲ್ಲಿ ಜಿಲ್ಲೆಯ ಬರ ಪರಿಸ್ಥಿತಿಯ ಬಗ್ಗೆ ತಂಡಕ್ಕೆ ವಿವರಣೆ ನೀಡಿದರು.
ಬಳಿಕ ಅಧ್ಯಯನ ತಂಡವು, ಯಳಂದೂರು ತಾಲೂಕಿನ ಕಿನಕನಹಳ್ಳಿ ಮಾರ್ಗವಾಗಿ ವೀಕ್ಷಣೆ ಕೈಗೊಂಡು ಕಟ್ನವಾಡಿಯಲ್ಲಿ ರೈತರ ಗದ್ದೆಗಳಿಗೆ ಭೇಟಿ ನೀಡಿತು. ಈ ವೇಳೆ ಸ್ಥಳೀಯ ರೈತರು ತಮ್ಮ ಭಾಗದಲ್ಲಿ  ಈ ಬಾರಿ ಕಬಿನಿ ನಾಲೆಗಳಿಂದ ನೀರು ಹರಿಸದ ಹಿನ್ನೆಲೆಯಲ್ಲಿ ಬೆಳೆ ಬೆಳೆಯಲಾಗಿಲ್ಲ. ಹೀಗಾಗಿ ರೈತರು ಸಂಕಷ್ಟದಲ್ಲಿದ್ದಾರೆ. ನೆರವಿನ ಅಗತ್ಯವಿದೆ ಎಂದು ಮನವಿ ಮಾಡಿದರು.
ನಂತರ ಮೆಲ್ಲಹಳ್ಳಿ ಗೇಟ್‍ನಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್ ಬರ ಅಧ್ಯಯನ ತಂಡವನ್ನು ಭೇಟಿ ಮಾಡಿ ಅಭಾವ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿದರು. ಅಲ್ಲದೇ ರೈತರ ಬೇಡಿಕೆಗಳ ಕುರಿತು ಮನವಿ ಪತ್ರವನ್ನು ಸಲ್ಲಿಸಿದರು.
ಬಳಿಕ ತಂಡವು ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರದಲ್ಲಿ ರೈತರು ಹಾಗೂ ಸ್ಥಳೀಯ ಗ್ರಾಮಸ್ಥರಿಂದ ಅಹವಾಲು ಆಲಿಸಿತು. ಉದ್ಯೋಗ ಖಾತರಿ ಯೋಜನೆ ಬೆಳೆ ವಿಮೆ ಬಗ್ಗೆ ಸಮಾಲೋಚಿಸಿತು. ಇದೇ ಸಂದರ್ಭದಲ್ಲಿ ರೈತ ಮುಖಂಡರಾದ ಮಹೇಶ್‍ಪ್ರಭು ಹಾಗೂ ಎಚ್.ಸಿ. ಮಹೇಶ್‍ಕುಮಾರ್ ಅವರು ಸಹ ತಂಡದ ಮುಂದೆ ಸಮಸ್ಯೆಗಳನ್ನು ವಿವರಿಸಿದರು.
ಇದಾದ ಬಳಿಕ ಯಾಲಕ್ಕೂರು, ಕರಡಿಗುಡ್ಡ, ಮಂಗಲ, ಹರದನಹಳ್ಳಿ, ಅಮಚವಾಡಿ ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ರೈತರು ಬರ ಪರಿಸ್ಥಿತಿಯಿಂದ ತಲೆದೋರಿರುವ ಸಮಸ್ಯೆಗಳ ಬಗ್ಗೆ ತಂಡದ ಮುಂದೆ ಅಹವಾಲು ತೋಡಿಕೊಂಡರು.
ನಂತರ ಬರ ಅಧ್ಯಯನ ತಂಡವು ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ, ತೆರಕಣಾಂಬಿ ಸುತ್ತಮುತ್ತಲ ಗ್ರಾಮಗಳಿಗೆ ತೆರಳಿ ವೀಕ್ಷಣೆ ನಡೆಸಿತು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ಉಪವಿಭಾಗಾಧಿಕಾರಿ ಕವಿತಾರಾಜಾಂ, ಜಂಟಿ ಕೃಷಿ ನಿರ್ದೇಶಕ ತಿರುಮಲೇಶ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ. ಬಾಲಸುಂದರ್, ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ದೇವರಾಜ್ ಇನ್ನಿತರ ಅಧಿಕಾರಿಗಳು ಹಾಜರಿದ್ದರು.


ನವೆಂಬರ್ 5ರಿಂದ 12ರವರೆಗೆ ಸಂಸದ ಧ್ರುವನಾರಾಯಣ ಇಂಗ್ಲೆಂಡ್ ಪ್ರವಾಸ
ಚಾಮರಾಜನಗರ, ನ. 3 (ಕರ್ನಾಟಕ ವಾರ್ತೆ):-ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ನವೆಂಬರ್ 5ರಿಂದ 12 ರವರೆಗೆ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾರೆ.
ಒಟ್ಟು ಭಾರತದಿಂದ 9 ಸಂಸತ್ ಸದಸ್ಯರು ಪ್ರವಾಸ ಕೈಗೊಂಡಿದ್ದು ಈ ಪೈಕಿ ಧ್ರುವನಾರಾಯಣ ಅವರು ಸಹ ಒಬ್ಬರಾಗಿದ್ದಾರೆ. ಪ್ರವಾಸ ಸಂದರ್ಭದಲ್ಲಿ ಅಲ್ಲಿನ ರೈತರು ಹಾಗೂ ವಿವಿಧ ರಂಗಗಳ ಅಭಿವೃದ್ಧಿ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿರುವ ಪ್ರಮುಖ ಗಣ್ಯರೊಂದಿಗೆ ಸಮಾಲೋಚಿಸಿ, ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ. ದೇಶದ ಸಂಶೋಧನೆ, ಉನ್ನತ ಶಿಕ್ಷಣ ಇತರೆ ಅಭಿವೃದ್ಧಿಗೆ ಪೂರಕವಾದ ವಿಷಯಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ಸಂಸದರ ಆಪ್ತ ಸಹಾಯಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ.4ರಂದು ಉಸ್ತುವಾರಿ ಸಚಿವರಿಂದ ಸುತ್ತೂರು ಏತ ಯೋಜನೆಯಡಿ ಬರುವ ಕೆರೆಗಳ ವೀಕ್ಷಣೆ
ಚಾಮರಾಜನಗರ, ನ. 3 (ಕರ್ನಾಟಕ ವಾರ್ತೆ):-ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ನ. 4ರಂದು ನದಿಮೂಲದಿಂದ ನೀರು ತುಂಬಿಸುವ ಉದ್ದೇಶಿತ ಸುತ್ತೂರು ಏತ ಯೋಜನೆಯಡಿ ಬರುವ 24 ಕೆರೆಗಳಿಗೆ ಭೇಟಿ ನೀಡಿ ವೀಕ್ಷಣೆ ನಡೆಸಲಿದ್ದಾರೆ.
ಸುತ್ತೂರು, ತಗಡೂರು-ಕುಮ್‍ಕೆರೆ, ದಾಸನೂರು, ಚಿಕ್ಕಹೊಮ್ಮ ದೊಡ್ಡಹೊಮ್ಮ, ಜನ್ನೂರು, ಬಾಗಳಿ, ಉಮ್ಮತ್ತೂರು, ಯಡಿಯೂರು, ದೊಡ್ಡರಾಯಪೇಟೆ, ಕೋಡಿಮೋಳೆ, ಕಣ್ಣೇಗಾಲ, ಹೊಮ್ಮ, ಅಂಬಳೆ, ಕಾಗಲವಾಡಿ, ನಾಗವಳ್ಳಿ, ಹೊಂಡರಬಾಳು, ಪುಟ್ಟನಪುರ, ಮಲ್ಲೇದೇವನಹಳ್ಳಿ, ಸರಗೂರು ಮೋಳೆ, ನಗರದ ಸಿಂಡಿಗೆರೆ, ಚಿಕ್ಕಕೆರೆ, ದೊಡ್ಡಕೆರೆ, ಮರಗದಕೆರೆ, ಬಂಡಿಗೆರೆ ಕೆರೆಗಳಿಗೆ ಸಚಿವರು, ಸ್ಥಳೀಯ ಶಾಸಕರು, ಇತರೆ ಜನಪ್ರತಿನಿಧಿಗಳೊಡನೆ ಭೇಟಿ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ನ. 3 (ಕರ್ನಾಟಕ ವಾರ್ತೆ): ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು, ನ.4 ರಿಂದ 7ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.
ನ.4ರಂದು ಬೆಳಿಗ್ಗೆ 11 ಗಂಟೆಗೆ ಸುತ್ತೂರು ಬಳಿ ಕಬಿನಿ ನದಿಯಿಂದ ಚಾಮರಾಜನಗರ ತಾಲೂಕಿನ 21 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕೆರೆಗಳ ಪರಿಶೀಲನೆ ಮಾಡುವರು.
ನ.5ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆಯಲಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನ.6 ರಂದು ಬೆಳಿಗ್ಗೆ 10.30ಕ್ಕೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಹಾಪ್‍ಕಾಮ್ಸ್ ಮಳಿಗೆ ಉದ್ಘಾಟಿಸುವರು. 11 ಗಂಟೆಗೆ ಬರಗಿ ಜಿಲ್ಲಾ ಪಂಚಾಯಿತಿ ಸದಸ್ಯರ ಕಚೇರಿ ಉದ್ಘಾಟನೆ ಹಾಗೂ ಕಡಸು ಉತ್ಪಾದನಾ ತರಬೇತಿ ಕೇಂದ್ರ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸುವರು. ಮಧ್ಯಾಹ್ನ 12.15ಕ್ಕೆ ಮದ್ದೂರು ಕಾಲೋನಿಯಲ್ಲಿ ಆಶ್ರಮಶಾಲೆ ಉದ್ಘಾಟಿಸುವರು. ಗಿರಿಜನ ಸಮುದಾಯ ಭವನದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. 1 ಗಂಟೆಗೆ ಮದ್ದಯ್ಯನಹುಂಡಿ ಗ್ರಾಮದಲ್ಲಿ ಅಂಬೇಡ್ಕರ್ ಭವನ, 2ಕ್ಕೆ ಹಂಗಳ ಹೊಸಹಳ್ಳಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟಿಸುವರು.
ನ.7ರಂದು ಬೆಳಿಗ್ಗೆ 10.30ಕ್ಕೆ ಚಾಮರಾಜನಗರದಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 4.30ಕ್ಕೆ ಕೊಳ್ಳೇಗಾಲದಲ್ಲಿ ನಡೆಯಲಿರುವ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
--------------------------------------------------


ನ. 6ರಂದು ನಗರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾನಯಾನ : ಕನ್ನಡ ರಥ ಆಗಮನ
ಚಾಮರಾಜನಗರ, ನ. 4 (ಕರ್ನಾಟಕ ವಾರ್ತೆ):- ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಏಕೀಕರಣ ವಜ್ರ ಮಹೋತ್ಸವ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಕನ್ನಡ ಚಲನಚಿತ್ರ ಗೀತೆಗಳನ್ನು ಒಳಗೊಂಡ ಗಾನಯಾನ ಕಾರ್ಯಕ್ರಮವನ್ನು ನವೆಂಬರ್ 6ರಂದು ಸಂಜೆ 6 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಹಮ್ಮಿಕೊಂಡಿದೆ.
ಬೆಂಗಳೂರಿನ ಸರಸ್ ಕಮ್ಯುನಿಕೇಷನ್ ಪ್ರಸ್ತುತಪಡಿಸುವ ಕಾರ್ಯಕ್ರಮವು ಖ್ಯಾತ ಗಾಯಕಿ ಸಂಧ್ಯಾ ಎಸ್. ಕುಮಾರ್ ಅವರ ನೇತೃತ್ವದಲ್ಲಿ ಮೂಡಿಬರಲಿದೆ. ಜೋಗಿ ಖ್ಯಾತಿಯ ಹೆಸರಾಂತ ಗಾಯಕಿ ಸುನಿತಾ, ಮಂಗಳಾರವಿ, ಮೋಹನ್, ಉದಯ ಅಂಕೋಲ ಸೇರಿದಂತೆ ಇತರೆ ಗಾಯಕ ಗಾಯಕಿಯರು ಸದಭಿರುಚಿಯ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಲಿದ್ದಾರೆ.ಶ್ರೀನಿವಾಸ ಆಚಾರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.
ಕರ್ನಾಟಕ ಏಕೀಕರಣ ನಡೆದು ಬಂದ ಹಾದಿ, ಕನ್ನಡ ಚಲನಚಿತ್ರರಂಗದ ಬೆಳವಣಿಗೆ, ಕನ್ನಡ ಹಾಡುಗಳ ಕೊಡುಗೆ ಹಾಗೂ ಕನ್ನಡ ನಾಡು ನುಡಿಯನ್ನು ಬಿಂಬಿಸÀುವ ಕನ್ನಡ ಚಲನಚಿತ್ರ ಗೀತೆಗಳ ಭಾವಯಾನವನ್ನು ಗಾನಯಾನದ ಮೂಲಕ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೆ ಜನಪ್ರಿಯ ಕನ್ನಡ ಚಿತ್ರದ ಹಾಡುಗಳಲ್ಲಿನ ಸಾಹಿತ್ಯ, ಸಂದೇಶ, ಮಾಹಿತಿ, ಮನರಂಜನೆ ಮತ್ತು ಮಾಧುರ್ಯವನ್ನು ಜನಸಮೂಹಕ್ಕೆ ಸ್ಮರಿಸುವ ಆಶಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂಥಹ ಸೃಜನಾತ್ಮಕ ಕಾರ್ಯಕ್ರಮ ಸವಿಯಲು ಉತ್ತಮ ಅವಕಾಶ ನಗರದ ಜನತೆಗೆ ಒದಗಿಬಂದಿದೆ. ಪ್ರವೇಶ ಉಚಿತವಾಗಿದೆ.
ವಿಶೇಷ ಸ್ತಬ್ದಚಿತ್ರ:
ಕರ್ನಾಟಕದ ಏಕೀಕರಣವಾಗಿ 60 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ಸ್ತಬ್ದಚಿತ್ರ ‘ಕನ್ನಡ ರಥ’ ವು ನಗರಕ್ಕೆ ನವೆಂಬರ್ 6ರಂದು ಸಂಜೆ 4 ಗಂಟೆಗೆ ಆಗಮಿಸಲಿದೆ.
ಈ ಸ್ತಬ್ದಚಿತ್ರದಲ್ಲಿ ಕನ್ನಡನಾಡು ನುಡಿಗಾಗಿ ನಡೆದ ಹೋರಾಟದ ಘಟನಾವಳಿಗಳು ರಾಜ್ಯದ ಕಲೆ, ಸಾಹಿತ್ಯ, ಸಂಸ್ಕøತಿ ಒಳಗೊಂಡಂತೆ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿರುವ ಘಟನೆಗಳ ಕುರಿತ ಸಚಿತ್ರ ಮಾಹಿತಿ ಒಳಗೊಂಡ ಸ್ತಬ್ದಚಿತ್ರಕ್ಕೆ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಎಂಬ ಅರ್ಥಪೂರ್ಣ ಶೀರ್ಷಿಕೆ ನೀಡಲಾಗಿದೆ.
ನ. 6ರಂದು ಸಂಜೆ 4 ಗಂಟೆಗೆ ಸಂತೆಮರಹಳ್ಳಿ ವೃತ್ತದ ಬಳಿ ಇರುವ ಕೇಂದ್ರೀಯ ವಿದ್ಯಾಲಯ ಬಳಿ ಕನ್ನಡ ರಥವನ್ನು ಸ್ವಾಗತಿಸಲಾಗುತ್ತದೆ. ಬಳಿಕ ಈ ರಥವು ಸಂತೆಮರಹಳ್ಳಿ ವೃತ್ತ, ಡೀವಿಯೇಷನ್ ರಸ್ತೆ, ಜೈ ಭುವನೇಶ್ವರಿ ವೃತ್ತ (ಪಚ್ಚಪ್ಪ ವೃತ್ತ), ಬಿ. ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರಕ್ಕೆ ತಲುಪಿ ಅಲ್ಲಿಂದ ವಾಪಸ್ಸು ಜೋಡಿರಸ್ತೆ ಮಾರ್ಗವಾಗಿ ನ್ಯಾಯಾಲಯ ರಸ್ತೆ, ಪ್ರವಾಸಿ ಮಂದಿರ ರಸ್ತೆ, ಗುಂಡ್ಲುಪೇಟೆ ವೃತ್ತ ಹಾದು ಚಿಕ್ಕಂಗಡಿ ಬೀದಿ, ದೊಡ್ಡಂಗಡಿ ಬೀದಿ ಮೂಲಕ ಚಾಮರಾಜೇಶ್ವರ ದೇವಾಲಯಕ್ಕೆ ಬಂದು ಸೇರಲಿದೆ.
ಸಾರ್ವಜನಿಕರು ಚಾಮರಾಜೇಶ್ವರ ದೇವಾಲಯ ಬಳಿ ಸಹ ಕನ್ನಡ ರಥವನ್ನು ವೀಕ್ಷಿಸಬಹುದಾಗಿದೆ. ಕನ್ನಡ ರಥ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಕನ್ನಡಪರ ಸಂಘಟನೆಗಳು, ಸಮುದಾಯ ಮುಖಂಡರು, ಪ್ರತಿನಿಧಿಗಳು, ಇತರೆ ಸಂಘಸಂಸ್ಥೆಗಳ ಎಲ್ಲ ಪ್ರತಿನಿಧಿಗಳು ಕನ್ನಡ ರಥ ಮೆರವಣಿಗೆಯಲ್ಲಿ  ಹಾಗೂ ಗಾನಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಡಿಸೆಂಬರ್ ವೇಳೆಗೆ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ : ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ನ. 4 (ಕರ್ನಾಟಕ ವಾರ್ತೆ):- ಚಾಮರಾಜನಗರ, ಯಳಂದೂರು ಹಾಗೂ ನಂಜನಗೂಡು ತಾಲೂಕಿನ ಒಟ್ಟು 24 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಡಿಸೆಂಬರ್ ಮಾಹೆಯಲ್ಲಿ ಮುಖ್ಯಮಂತ್ರಿಯವರಿಂದ ಚಾಲನೆ ಕೊಡಿಸಲಾಗುವುದೆಂದು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.
ಉದ್ದೇಶಿತ 24 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಿನ್ನೆಲೆಯಲ್ಲಿ ಕೆರೆಗಳ ಪರಿಶೀಲನೆ ಸಂದರ್ಭದಲ್ಲಿ ಉಮ್ಮತ್ತೂರು ಕೆರೆ ವೀಕ್ಷಿಸಿದ ಬಳಿಕ ನಡೆದ ಸಭೆಯ ಉದ್ದೇಶಿಸಿ ಸಚಿವರು ಮಾತನಾಡಿದರು.
ಚಾಮರಾಜನಗರ ತಾಲೂಕಿನ 21, ಯಳಂದೂರು ತಾಲೂಕಿನ 1 ಹಾಗೂ ನಂಜನಗೂಡು ತಾಲೂಕಿನ 2 ಕೆರೆಗಳೂ ಸೇರಿದಂತೆ ಒಟ್ಟು 24 ಕೆರೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಸುತ್ತೂರು ಗ್ರಾಮದ ಬಳಿ ಕಬಿನಿ ನದಿಯಿಂದ ನೀರನ್ನು ಎತ್ತಿ ಕೆರೆಗಳಿಗೆ ನೀರು ತುಂಬಿಸಲಾಗುತ್ತದೆ. ಈ ಮಹತ್ವದ ಯೋಜನೆ ಕೈಗೆತ್ತಿಕೊಳ್ಳಲು 233 ಕೋಟಿ ರೂ. ಗಳ ಪ್ರಸ್ತಾವನೆಗೆ ಈಗಾಗಲೇ ಆಡಳಿತಾತ್ಮಕ ಮಂಜೂರಾತಿ ದೊರೆತಿದೆ. ಒಂದೆರಡು ದಿನಗಳಲ್ಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.
ಉದ್ದೇಶಿತ ಯೋಜನೆ ಬರುವ ಡಿಸೆಂಬರ್ ತಿಂಗಳಲ್ಲಿ ಚಾಲನೆ ನೀಡಲಾಗುತ್ತದೆ. ಮುಖಂಮಂತ್ರಿಯವರನ್ನೇ ಆಹ್ವಾನಿಸಿ ಉಮ್ಮತ್ತೂರಿನಲ್ಲಿಯೇ ಯೋಜನೆ ಕಾಮಗಾರಿಗೆ ಆರಂಭ ನೀಡಲಾಗುತ್ತದೆ. ಜುಲೈ ಇಲ್ಲವೇ ಆಗಸ್ಟ್ ಒಳಗೆ ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ಅನುಕೂಲ ಕಲ್ಪಿಸಲಾಗುತ್ತದೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
ಮೊದಲ ಹಂತದಲ್ಲಿ 11, 2ನೇ ಹಂತದಲ್ಲಿ 13 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಆರಂಭವಾಗಲಿದೆ. ಒಟ್ಟು 0.628 ಟಿಎಂಸಿ ನೀರು 24 ಕೆರೆಗಳಿಗೆ ಅಗತ್ಯವಿದೆ. ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಿಂದ ಕೆರೆ ವ್ಯಾಪ್ತಿಯ ಬಹುತೇಕ ಗ್ರಾಮಗಳಿಗೆ ಕುಡಿಯುವ ನೀರು ಉದ್ದೇಶಕ್ಕಾಗಿ ಅಂತರ್ಜಲ ಹೆಚ್ಚಳವಾಗಲಿದೆ. ಜಾನುವಾರುಗಳಿಗೂ ನೀರು ವ್ಯವಸ್ಥೆ ಕಲ್ಪಿಸಿದಂತಾಗುತ್ತದೆ ಎಂದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಿನ್ನೆಲೆಯಲ್ಲಿ ಯೋಜನೆ ವ್ಯಾಪ್ತಿಗೆ ಬರುವ  ಕೆರೆಗಳ ವೀಕ್ಷಣೆಯನ್ನು ಬೆಳಗ್ಗಿನಿಂದಲೇ ಆರಂಭಿಸಲಾಗಿದೆ. ಜಾಕ್ ವೆಲ್ ಪಾಯಿಂಟ್ ಬರುವ ಸುತ್ತೂರಿನಿಂದ ಪರಿವೀಕ್ಷಣೆ ಕೈಗೊಳ್ಳಲಾಗಿದೆ. ಕೆರೆಗಳಲ್ಲಿ ಇರುವ ಹೂಳು ತೆಗೆಯುವಿಕೆ, ಗಿಡಗಂಟೆಗಳ ತೆರೆಯುವಿಕೆ ಹಾಗೂ ಒತ್ತುವರಿ ತೆರವು ಸೇರಿದಂತೆ ಅಗತ್ಯ ಕೆಲಸ ನಿರ್ವಹಿಸುವ ಸಂಬಂಧ ಪರಿಶೀಲನೆ ನಡೆಸಲಾಗಿದೆ. ಸಣ್ಣ ನೀರಾವರಿ, ಕಾವೇರಿ ನೀರಾವರಿ ನಿಗಮ, ಕೃಷಿ ಸೇರಿದಂತೆ ಅಗತ್ಯ ಇಲಾಖೆಗಳ ಅಧಿಕಾರಿಗಳ ತಂಡದೊಂದಿಗೆ ವ್ಯಾಪಕವಾಗಿ ಪರಿಶೀಲನೆ ನಡೆಸಲಾಗಿದೆ ಎಂದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಬಸವರಾಜು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
  ***************


ನ. 6ರಂದು ನಗರದಲ್ಲಿ ಕನ್ನಡ ಚಲನಚಿತ್ರ ಗೀತೆಗಳ ಗಾನಯಾನ : ಕನ್ನಡ ರಥ ಆಗಮನ
ಚಾಮರಾಜನಗರ, ನ. 5 (ಕರ್ನಾಟಕ ವಾರ್ತೆ):- ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಏಕೀಕರಣ ವಜ್ರ ಮಹೋತ್ಸವ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದೊಂದಿಗೆ ಕನ್ನಡ ಚಲನಚಿತ್ರ ಗೀತೆಗಳನ್ನು ಒಳಗೊಂಡ ಗಾನಯಾನ ಕಾರ್ಯಕ್ರಮವನ್ನು ನವೆಂಬರ್ 6ರಂದು ಸಂಜೆ 6 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯ ಆವರಣದಲ್ಲಿ ಹಮ್ಮಿಕೊಂಡಿದೆ.
ಬೆಂಗಳೂರಿನ ಸರಸ್ ಕಮ್ಯುನಿಕೇಷನ್ ಪ್ರಸ್ತುತಪಡಿಸುವ ಕಾರ್ಯಕ್ರಮವು ಖ್ಯಾತ ಗಾಯಕಿ ಸಂಧ್ಯಾ ಎಸ್. ಕುಮಾರ್ ಅವರ ನೇತೃತ್ವದಲ್ಲಿ ಮೂಡಿಬರಲಿದೆ. ಜೋಗಿ ಖ್ಯಾತಿಯ ಹೆಸರಾಂತ ಗಾಯಕಿ ಸುನಿತಾ, ಮಂಗಳಾರವಿ, ಮೋಹನ್, ಉದಯ ಅಂಕೋಲ ಸೇರಿದಂತೆ ಇತರೆ ಗಾಯಕ ಗಾಯಕಿಯರು ಸದಭಿರುಚಿಯ ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಲಿದ್ದಾರೆ.ಶ್ರೀನಿವಾಸ ಆಚಾರ್ ಸಂಗೀತ ಸಂಯೋಜನೆ ಮಾಡಲಿದ್ದಾರೆ.
ಕರ್ನಾಟಕ ಏಕೀಕರಣ ನಡೆದು ಬಂದ ಹಾದಿ, ಕನ್ನಡ ಚಲನಚಿತ್ರರಂಗದ ಬೆಳವಣಿಗೆ, ಕನ್ನಡ ಹಾಡುಗಳ ಕೊಡುಗೆ ಹಾಗೂ ಕನ್ನಡ ನಾಡು ನುಡಿಯನ್ನು ಬಿಂಬಿಸÀುವ ಕನ್ನಡ ಚಲನಚಿತ್ರ ಗೀತೆಗಳ ಭಾವಯಾನವನ್ನು ಗಾನಯಾನದ ಮೂಲಕ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೆ ಜನಪ್ರಿಯ ಕನ್ನಡ ಚಿತ್ರದ ಹಾಡುಗಳಲ್ಲಿನ ಸಾಹಿತ್ಯ, ಸಂದೇಶ, ಮಾಹಿತಿ, ಮನರಂಜನೆ ಮತ್ತು ಮಾಧುರ್ಯವನ್ನು ಜನಸಮೂಹಕ್ಕೆ ಸ್ಮರಿಸುವ ಆಶಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇಂಥಹ ಸೃಜನಾತ್ಮಕ ಕಾರ್ಯಕ್ರಮ ಸವಿಯಲು ಉತ್ತಮ ಅವಕಾಶ ನಗರದ ಜನತೆಗೆ ಒದಗಿಬಂದಿದೆ. ಪ್ರವೇಶ ಉಚಿತವಾಗಿದೆ.
ವಿಶೇಷ ಸ್ತಬ್ದಚಿತ್ರ:
ಕರ್ನಾಟಕದ ಏಕೀಕರಣವಾಗಿ 60 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರೂಪಿಸಿರುವ ಸ್ತಬ್ದಚಿತ್ರ ‘ಕನ್ನಡ ರಥ’ ವು ನಗರಕ್ಕೆ ನವೆಂಬರ್ 6ರಂದು ಸಂಜೆ 4 ಗಂಟೆಗೆ ಆಗಮಿಸಲಿದೆ.
ಈ ಸ್ತಬ್ದಚಿತ್ರದಲ್ಲಿ ಕನ್ನಡನಾಡು ನುಡಿಗಾಗಿ ನಡೆದ ಹೋರಾಟದ ಘಟನಾವಳಿಗಳು ರಾಜ್ಯದ ಕಲೆ, ಸಾಹಿತ್ಯ, ಸಂಸ್ಕøತಿ ಒಳಗೊಂಡಂತೆ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ಧಿ ಸಾಧಿಸಿರುವ ಘಟನೆಗಳ ಕುರಿತ ಸಚಿತ್ರ ಮಾಹಿತಿ ಒಳಗೊಂಡ ಸ್ತಬ್ದಚಿತ್ರಕ್ಕೆ ಉದಯವಾಯಿತು ನಮ್ಮ ಚೆಲುವ ಕನ್ನಡ ನಾಡು ಎಂಬ ಅರ್ಥಪೂರ್ಣ ಶೀರ್ಷಿಕೆ ನೀಡಲಾಗಿದೆ.
ನ. 6ರಂದು ಸಂಜೆ 4 ಗಂಟೆಗೆ ಸಂತೆಮರಹಳ್ಳಿ ವೃತ್ತದ ಬಳಿ ಇರುವ ಕೇಂದ್ರೀಯ ವಿದ್ಯಾಲಯ ಬಳಿ ಕನ್ನಡ ರಥವನ್ನು ಸ್ವಾಗತಿಸಲಾಗುತ್ತದೆ. ಬಳಿಕ ಈ ರಥವು ಸಂತೆಮರಹಳ್ಳಿ ವೃತ್ತ, ಡೀವಿಯೇಷನ್ ರಸ್ತೆ, ಜೈ ಭುವನೇಶ್ವರಿ ವೃತ್ತ (ಪಚ್ಚಪ್ಪ ವೃತ್ತ), ಬಿ. ರಾಚಯ್ಯ ಜೋಡಿ ರಸ್ತೆ, ರಾಮಸಮುದ್ರಕ್ಕೆ ತಲುಪಿ ಅಲ್ಲಿಂದ ವಾಪಸ್ಸು ಜೋಡಿರಸ್ತೆ ಮಾರ್ಗವಾಗಿ ನ್ಯಾಯಾಲಯ ರಸ್ತೆ, ಪ್ರವಾಸಿ ಮಂದಿರ ರಸ್ತೆ, ಗುಂಡ್ಲುಪೇಟೆ ವೃತ್ತ ಹಾದು ಚಿಕ್ಕಂಗಡಿ ಬೀದಿ, ದೊಡ್ಡಂಗಡಿ ಬೀದಿ ಮೂಲಕ ಚಾಮರಾಜೇಶ್ವರ ದೇವಾಲಯಕ್ಕೆ ಬಂದು ಸೇರಲಿದೆ.
ಸಾರ್ವಜನಿಕರು ಚಾಮರಾಜೇಶ್ವರ ದೇವಾಲಯ ಬಳಿ ಸಹ ಕನ್ನಡ ರಥವನ್ನು ವೀಕ್ಷಿಸಬಹುದಾಗಿದೆ. ಕನ್ನಡ ರಥ ಆಗಮನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಕನ್ನಡಪರ ಸಂಘಟನೆಗಳು, ಸಮುದಾಯ ಮುಖಂಡರು, ಪ್ರತಿನಿಧಿಗಳು, ಇತರೆ ಸಂಘಸಂಸ್ಥೆಗಳ ಎಲ್ಲ ಪ್ರತಿನಿಧಿಗಳು ಕನ್ನಡ ರಥ ಮೆರವಣಿಗೆಯಲ್ಲಿ  ಹಾಗೂ ಗಾನಯಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ನ. 6ರಂದು ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ
ಚಾಮರಾಜನಗರ, ನ. 5 (ಕರ್ನಾಟಕ ವಾರ್ತೆ):- ನಾಗರಿಕ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯು ನವೆಂಬರ್ 6ರಂದು ನಡೆಯಲಿದೆ.
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಹರಾಗಿರುವ ಅಭ್ಯರ್ಥಿಗಳು ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಪೊಲೀಸ್ ಕಾನ್‍ಸ್ಟೇಬಲ್ ನೇಮಕಾತಿ ಪರೀಕ್ಷೆ : ನಿಷೇದಾಜ್ಞೆ
ಚಾಮರಾಜನಗರ, ನ. 5 (ಕರ್ನಾಟಕ ವಾರ್ತೆ):- ಖಾಲಿ ಇರುವ ನಾಗರಿಕ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಯು ನಗರದ ವಿವಿಧ ಕೇಂದ್ರಗಳಲ್ಲಿ ನವೆಂಬರ್ 6ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಸತ್ಯಮಂಗಲ ರಸ್ತೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಜೆಎಸ್‍ಎಸ್ ಮಹಿಳಾ ಕಾಲೇಜು, ಜೆಎಸ್‍ಎಸ್ ಬಾಲಕರ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರಗಳಾಗಿವೆ.
ಈ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಷೇದಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ವಲ್ಲಭಾಬಾಯಿ ಸ್ಮರಣಾರ್ಥ ಏಕತಾ ಸಪ್ತಾಹ : ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಚಾಮರಾಜನಗರ, ನ. 5 (ಕರ್ನಾಟಕ ವಾರ್ತೆ):- ಸರ್ದಾರ್ ವಲ್ಲಭಬಾಯ್ ಪಟೇಲ್ ಸ್ಮರಣಾರ್ಥ ಏಕತಾ ಸಪ್ತಾಹ ಆಚರಿಸಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ಜಿಲ್ಲೆಯ ಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚೆ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿದೆ.
ಸರ್ಕಾರಿ ಅನುದಾನಿತ, ಅನುದಾನರಹಿತ, ಸಿಬಿಎಸ್‍ಸಿ, ಐಸಿಎಸ್‍ಸಿಯ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿಪೂರ್ವ ಶಿಕ್ಷಣ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ.
ನವೆಂಬರ್ 8ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಿ ಆರ್ ಬಾಲರಪಟ್ಟಣ ಪ್ರೌಢಶಾಲೆಯಲ್ಲಿ ಸ್ಪರ್ಧೆ ಏರ್ಪಡಿಸಲಾಗಿದೆ. ರಾಷ್ಟ್ರೀಯ ಭಾವೈಕ್ಯತೆಯನ್ನು ಮೂಡಿಸುವ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದೆ. ಸದಾರ್ ವಲ್ಲಭಾಯ್ ಪಟೇಲ್ ಅವರ ವಾಕ್ ಚಾತುರ್ಯ ಪ್ರಾಮುಖ್ಯತೆ ಹಾಗೂ ಪ್ರಸ್ತುತತೆ ಕುರಿತು ಚರ್ಚಾಸ್ಪರ್ಧೆ ಇದೆ. ರಾಷ್ಟ್ರೀಯ ಏಕತೆಯನ್ನು ಮೂಡಿಸುವ ಘೋಷಣೆ ಸಹಿತ ಚಿತ್ರಕಲಾ ಸ್ಪರ್ಧೆ ಸಹ ನಡೆಯಲಿದೆ.
ಇಂಗ್ಲೀಷ್ ಹಾಗೂ ಕನ್ನಡ ಮಾಧ್ಯಮಗಳಲ್ಲಿ ಪ್ರಬಂಧ ಹಾಗೂ ಚರ್ಚಾಸ್ಪರ್ಧೆ ಇರಲಿದೆ.
ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಚೇರಿ ವಿಷಯ ಪರಿವೀಕ್ಷಕರಾದ ಮಹದೇವು ಅವರ ಮೊಬೈಲ್ ಸಂಖ್ಯೆ 9449012493 ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 16ರಂದು ಜಿ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ನ. 5 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಆರೋಗ್ಯ ಯೋಜನೆ ಕುರಿತ ವಿಶೇಷ ಜಾಗೃತಿ ಅಭಿಯಾನಕ್ಕೆ ಚಾಲನೆ
ಚಾಮರಾಜನಗರ, ನ. 7 (ಕರ್ನಾಟಕ ವಾರ್ತೆ):- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸುವರ್ಣ ಆರೋಗ್ಯ ಟ್ರಸ್ಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಚಾಮರಾಜನಗರ ತಾಲೂಕಿನಲ್ಲಿ ಹಮ್ಮಿಕೊಂಡಿರುವ 6 ದಿನಗಳ ವಿಶೇಷ ಆರೋಗ್ಯ ಜಾಗೃತಿ ಅಭಿಯಾನಕ್ಕೆ ಇಂದು ಚಾಲನೆ ದೊರೆಯಿತು.
ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿಂದು ನಗರಸಭೆ ಅಧ್ಯಕ್ಷರಾದ ರೇಣುಕಾ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಹಸಿರು ನಿಶಾನೆ ತೋರುವ ಮೂಲಕ ಆರೋಗ್ಯ ಜಾಗೃತಿ ಅಭಿಯಾನ ಸಂಚಾರವನ್ನು ಉದ್ಘಾಟಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಸಂಖ್ಯೆ ಶೇ. 40ಕ್ಕಿಂತ ಹೆಚ್ಚು ಇರುವ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಸರ್ಕಾರದ ಆರೋಗ್ಯ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶವನ್ನು ಹೊಂದಲಾಗಿದೆ.
ವಾಜಪೇಯಿ ಆರೋಗ್ಯಶ್ರೀ ಯೋಜನೆ, ರಾಜೀವ್ ಆರೋಗ್ಯ ಭಾಗ್ಯ ಯೋಜನೆ, ಜ್ಯೋತಿ ಸಂಜೀವಿನಿ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯಡಿ ಸಿಗುವ ಸೌಲಭ್ಯಗಳ ವಿವರವನ್ನು ನೀಡುವುದು ಸಹ ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡ ಕಾಯಿಲೆ, ಸುಟ್ಟಗಾಯ, ಅಪಘಾತ ಪ್ರಕರಣಗಳು ನವಜಾತ ಶಿಶು ಹಾಗೂ ಮಕ್ಕಳಿಗೆ ಸಂಬಂಧಿಸಿದಂತೆ ಇರುವ ಕಾಯಿಲೆಗಳಿಗೆ  567 ಬಗೆಯ ಚಿಕಿತ್ಸಾ ವಿಧಾನಗಳು ಮತ್ತು 109 ಅನುಸರಣ ಚಿಕಿತ್ಸೆಗಳು ಆರೋಗ್ಯ ಯೋಜನೆಯಡಿ ದೊರಕÀಲಿವೆ. ಈ ಬಗ್ಗೆ ಬೀದಿ ನಾಟಕ, ಹಾಡುಗಾರಿಕೆ, ಕಿರುಚಿತ್ರ ಪ್ರದರ್ಶನ, ಸಮುದಾಯ ಸಭೆಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ.
ನವೆಂಬರ್ 14ರಂದು ಜಿಲ್ಲಾ ಆಸ್ಪತ್ರೆಯಲ್ಲಿ ವಿಶೇಷ ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿದೆ. ಈ ಬಗ್ಗೆಯೂ ಅಭಿಯಾನ ಸಂಚರಿಸುವ ಸಂದರ್ಭದಲ್ಲಿ ಮಾಹಿತಿ ನೀಡಲಾಗುತ್ತದೆ.
ಉದ್ಘಾಟನೆ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್, ಜಿಲ್ಲಾ ಸರ್ಜನ್ ಡಾ. ರಘುರಾಂ, ಸುವರ್ಣ ಆರೋಗ್ಯ ಟ್ರಸ್ಟ್‍ನ ಜಿಲ್ಲಾ ಕೋ ಆರ್ಡಿನೇಟರ್ ಪುಟ್ಟೇಗೌಡ, ಯಳಂದೂರಿನ ರಂಗದೇಗುಲ ಕಲಾತಂಡದ ಮುಖ್ಯಸ್ಥ ಶಾಂತರಾಜು, ಮೈಸೂರಿನ ಸ್ಪಂದನ ಕಲಾತಂಡದ ಮುಖ್ಯಸ್ಥರಾದ ವಸಂತ, ಮತ್ತಿತರರು ಹಾಜರಿದ್ದರು.
ನ. 10ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ
ಚಾಮರಾಜನಗರ, ನ. 7 (ಕರ್ನಾಟಕ ವಾರ್ತೆ):- ಸಾರ್ವಜನಿಕ ಶಿಕ್ಷಣ ಇಲಾಖೆಯು ತಾಲೂಕುಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಯನ್ನು ನವೆಂಬರ್ 10ರಂದು ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿಸಿದೆ.
ಗಾಯನ, ಆಶುಭಾಷಣ, ಪ್ರಬಂಧ, ಸ್ಥಳದಲ್ಲೇ ಪಾಠೋಪಕರಣಗಳ ತಯಾರಿಕೆ, ಚಿತ್ರ ಬರೆಯುವಿಕೆ, ರಸಪ್ರಶ್ನೆ (ಸಾಮಾನ್ಯ ಜ್ಞಾನ ಹಾಗೂ ವಿಜ್ಞಾನ) ಸ್ಪರ್ಧೆಗಳನ್ನು ಏರ್ಪಡಿಸಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಓಓಡಿ ಸೌಲಭ್ಯ ಕಲ್ಪಿಸಲಾಗುತ್ತದೆ. ಸ್ಪರ್ಧಿಗಳು ಅಂದು 9.30 ಗಂಟೆಗೆ ಹಾಜರಿರುವಂತೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾರ್ತಾ ವಿಶೇಷ:
ಪರಿತ್ಯಕ್ತ, ನಿರ್ಗತಿಕ ಮಕ್ಕಳ ಪೋಷಣೆಗೆ ಮಮತೆಯ ತೊಟ್ಟಿಲು ಕೇಂದ್ರ
ಅನಾಥ, ನಿರ್ಗತಿಕ ಪೋಷಕರಿಗೆ ಬೇಡವಾದ ಮಕ್ಕಳು ಹಾಗೂ ಪೋಷಕರಿಂದ ತಪ್ಪಿಸಲ್ಪಡುವ ಮಕ್ಕಳನ್ನು ದತ್ತು ಮೂಲಕ ಸ್ವೀಕರಿಸಿ ಮಕ್ಕಳಿಗೆ ವಾತ್ಸಲ್ಯ, ಮಮತೆ, ಬಾಂಧ್ಯವ ಕಲ್ಪಿಸಿ ಕುಟುಂಬ ವಾತಾವರಣದಲ್ಲಿ ಪೋಷಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರದಲ್ಲಿ ಎರಡು ಮಮತೆಯ ತೊಟ್ಟಿಲು ಕೇಂದ್ರಗಳನ್ನು ಆರಂಭಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವ್ಯಾಪಿಗೆ ಒಳಪಡುವ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಬಾಲಕರ ಬಾಲಮಂದಿರದಲ್ಲಿ ಮಮತೆಯ ತೊಟ್ಟಿಲು ಕೇಂದ್ರಗಳು ಚಾಲನೆಗೊಂಡಿವೆ.
ಭಾರತ ಸಂವಿಧಾನ ಹಾಗೂ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಆಶಯದಂತೆ ದೇಶದಲ್ಲಿ ಹುಟ್ಟಿದ ಪ್ರತಿ ಮಗುವಿಗೆ ಬದುಕುವ, ರಕ್ಷಣೆ, ಅವಕಾಶ ಹಾಗೂ ವಿಕಾಸ, ಭಾಗವಹಿಸುವ ಹಕ್ಕುಗಳಿವೆ. ಪ್ರೀತಿ, ವಾತ್ಸಲ್ಯ, ಮಮತೆ, ಬಾಂಧವ್ಯ ತುಂಬಿದ ಕುಟುಂಬದ ವಾತಾವರಣದಲ್ಲಿ ಮಗು ಬೆಳೆಯಬೇಕಿರುವುದು ಪ್ರಾಥಮಿಕ ಹಕ್ಕೂ ಕೂಡ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಮಗ್ರ ಮಕ್ಕಳ ರಕ್ಷಣೆ ಯೋಜನೆಯಡಿ ನೂತನ ದತ್ತು ಮಾರ್ಗಸೂಚಿಯನ್ನು ಹೊರಡಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ ಪರಿತ್ಯಕ್ತ, ನಿರ್ಗತಿಕ, ತಂದೆತಾಯಿಗೆ ಬೇಡವಾದ ಮಕ್ಕಳು, ಪೋಷಕರಿಂದಲೇ ತಿರಸ್ಕøತಗೊಂಡು ರೈಲ್ವೆ ನಿಲ್ದಾಣ, ತಿಪ್ಪೆಗುಂಡಿ ಇನ್ನಿತರ ಸ್ಥಳಗಳಲ್ಲಿ ಮಕ್ಕಳನ್ನು ಬಿಟ್ಟುಹೋಗಿರುವ ಪ್ರಸಂಗಗಳು ವರದಿಯಾಗುತ್ತಲೇ ಇವೆ. ಇಂಥಹ ಸಂಗತಿಗಳನ್ನು ಗಮನಿಸಿರುವ ಸರ್ಕಾರ ಅನಾಥ ಮಕ್ಕಳು ಹಾಗೂ ಪೋಷಕರಿಂದ ಒಪ್ಪಿಸಲ್ಪಡುವ ಮಕ್ಕಳಿಗೆ ಕುಟುಂಬ ವಾತಾವರಣವನ್ನು ಕಲ್ಪಿಸಿ ಅವರನ್ನು ಬೆಳೆಸಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಮುಂದಾಗಿದೆ. ಇದಕ್ಕಾಗಿಯೇ ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಮಾರ್ಗಸೂಚಿ ಅನ್ವಯ ಮಮತೆಯ ತೊಟ್ಟಿಲು ಕೇಂದ್ರಗಳನ್ನು ನಗರದಲ್ಲಿ ಆರಂಭಿಸಿದೆ.
ಬಹುತೇಕ ಜಿಲ್ಲೆಗಳಲ್ಲಿ ಪರಿತ್ಯಕ್ತ ಮಕ್ಕಳನ್ನು ಸ್ವೀಕರಿಸುವ ವ್ಯವಸ್ಥೆ ಇಲ್ಲದ ಕಾರಣ ಇಂತಹ ಮಕ್ಕಳು ಸುಲಭವಾಗಿ ಸಾಗಾಣಿಕೆಯಾಗಬಹುದಾದ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲೂ ಮಕ್ಕಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಬೇಕೆಂದು ಇದಕ್ಕಾಗಿಯೇ ಜಿಲ್ಲಾ ಕೇಂದ್ರಗಳಲ್ಲಿ ಮಮತೆಯ ತೊಟ್ಟಿಲುಗಳನ್ನು ಆರಂಭಿಸುವಂತೆ ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ ಸೂಚಿಸಿದೆ.
ಮಗುವಿನ ಭೌದ್ಧಿಕ, ದೈಹಿಕ, ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ ಪೂರಕ ವಾತಾವರಣ ಒದಗಿಸಿಕೊಡುವಲ್ಲಿ ದತ್ತು ಕಾರ್ಯಕ್ರಮವು ಉತ್ತಮ ಮಾರ್ಗವಾಗಿದೆ. ಪರಿತ್ಯಕ್ತ, ಅನಾಥ ಮಕ್ಕಳನ್ನು ಸಮಾಜದ ಮುಖ್ಯ ಸ್ಥರದಲ್ಲಿ ಒಂದುಗೂಡಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜವಾಬ್ದಾರಿ ವಹಿಸಿಕೊಂಡಿದೆ.
ಜಿಲ್ಲೆಯ ಕೇಂದ್ರದಲ್ಲಿರುವ ಬಾಲಮಂದಿರಗಳಲ್ಲಿ ಮಮತೆಯ ತೊಟ್ಟಲು ಕೇಂದ್ರಗಳನ್ನು ಸ್ಥಾಪಿಸಿ ಇಲ್ಲಿ ಮಕ್ಕಳ ಪೋಷಣೆಗೆ ಅಗತ್ಯವಿರುವ ತೊಟ್ಟಿಲು, ಹಾಸಿಗೆ, ಇನ್ನಿತರ ಅಗತ್ಯ ಪರಿಕರಗಳನ್ನು ಒದಗಿಸಬೇಕು. ಮಕ್ಕಳ ರಕ್ಷಣೆ ಭದ್ರತೆಗೆ ತಕ್ಕ ವ್ಯವಸ್ಥೆ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಪ್ರಸೂತಿ ಗೃಹ, ಸಾಂತ್ವನ ಕೇಂದ್ರಗಳಿಗೆ ಆದಷ್ಟು ಮೊದಲೇ ಮಾಹಿತಿ ನೀಡಿ ಪರಿತ್ಯಕ್ತ ಮಕ್ಕಳನ್ನು ಸ್ವೀಕರಿಸುವ ವ್ಯವಸ್ಥೆಗೆ ಕ್ರಮ ವಹಿಸಬೇಕು. ಇಲ್ಲಿ ಸ್ವೀಕರಿಸುವ ಮಕ್ಕಳನ್ನು ನೇರವಾಗಿ ಬಾಲಮಂದಿರಗಳಲ್ಲಿ ಇರುವ ಮಮತೆಯ ತೊಟ್ಟಿಲು ಕೇಂದ್ರಗಳಿಗೆ ಪಡೆಯಬೇಕೆಂಬ ನಿರ್ದೇಶನ ನೀಡಲಾಗಿದೆ. ಸ್ವೀಕರಿಸುವ ಮಕ್ಕಳಿಗೆ ವೈದ್ಯಾಧಿಕಾರಿಗಳ ಸಲಹೆಯ ಮೇರೆಗೆ ವೈದ್ಯಕೀಯ ಚಿಕಿತ್ಸೆ, ಆಹಾರ ಸೌಲಭ್ಯ ಕಲ್ಪಿಸಿ ಮಕ್ಕಳ ಕಲ್ಯಾಣ ಸಮಿತಿಗೆ ವರದಿ ಮಾಡಬೇಕೆಂದು ತಿಳಿಸಲಾಗಿದೆ. ಅಂಗನವಾಡಿ, ರೈಲ್ವೆ ಸ್ಟೇಷನ್, ಆಸ್ಪತ್ರೆ, ನರ್ಸಿಂಗ್ ಹೋಂ, ಮೊದಲಾದ ಕಡೆ ವ್ಯಾಪಕವಾಗಿ ಮಮತೆಯ ತೊಟ್ಟಿಲು ಕೇಂದ್ರಗಳ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಲಾಗಿದೆ.
ಮಕ್ಕಳಿಗೆ ಕೌಟುಂಬಿಕದಂತಹ ಆಸರೆ, ಪ್ರೀತಿ ವಾತ್ಸಲ್ಯ ಪಡೆಯಲು ನೆರವಾಗುವ ಮಮತೆಯ ತೊಟ್ಟಿಲು ಕೇಂದ್ರಗಳು ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಸರ್ಕಾರಿ ಬಾಲಕಿಯರ ಮತ್ತು ಬಾಲಕರ ಬಾಲಮಂದಿರದಲ್ಲಿ ಪ್ರಾರಂಭಿಸಲಾಗಿದೆ. ಇದರ ದೂರವಾಣಿ ಸಂಖ್ಯೆಯು ಕ್ರಮವಾಗಿ 08226-225711 ಮತ್ತು 226126 ಆಗಿದೆ. ಯಾವುದೇ ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಅಥವಾ ದೂರವಾಣಿ ಸಂಖ್ಯೆ 08226-222354ಯಲ್ಲಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ರಶ್ಮಿ ಹೇಳಿದ್ದಾರೆ.

 ********************



ವಿದ್ಯಾಸಿರಿ ಸೌಲಭ್ಯಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಸಿಗದೆ ಇರುವ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಂದುವರೆಸಲು ಊಟ ವಸತಿ ಸೌಲಭ್ಯಕ್ಕಾಗಿ ಹಣಕಾಸು ನೆರವು ನೀಡುವ ವಿದ್ಯಾಸಿರಿ ಯೋಜನೆ ಪ್ರಯೋಜನಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಿಂಗಳು 1500 ರೂ.ನಂತೆ 10 ತಿಂಗಳ ಅವಧಿಗೆ ವಿದ್ಯಾಸಿರಿ ಯೋಜನೆಯಡಿ ನೆರವು ನೀಡಲಾಗುತ್ತದೆ. ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಸಿಖ್, ಬೌದ್ಧ ಹಾಗೂ ಪಾರ್ಸಿ ಇತರೆ ಸಮುದಾಯಕ್ಕೆ ಸೇರಿದವರಾಗಿರಬೇಕು. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ಪ್ರವರ್ಗ 1 (ನದಾಪ್, ಪಿಂಜಾರಾ, ದರ್ವೇಶ್, ಚಪ್ಪರ್ ಬಂದ್, ಕಸಾಬಾ, ಪೂಲ್, ಮಾಲಿ (ಮುಸ್ಲಿಂ), ಪರಿಶಿಷ್ಟ ಜಾತಿಯಿಂದ ಮತಾಂತರ ಹೊಂದಿದ ಕ್ರಿಶ್ಚಿಯನ್ನರು ಹಾಗೂ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಇತರೆ ಉಪಜಾತಿಗಳು) ವಿದ್ಯಾರ್ಥಿಗಳ ಪೋಷಕರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ಪ್ರವರ್ಗ 2ಎ (ಬೌದ್ಧರು ಮತ್ತು ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಇತರರು), ಪ್ರವರ್ಗ 2ಬಿ (ಮುಸ್ಲಿಂ), ಪ್ರವರ್ಗ 3ಬಿ (ಕ್ರಿಶ್ಚಿಯನ್, ಜೈನ್ (ದಿಗಂಬರ್))ವಿದ್ಯಾರ್ಥಿಗಳ ಪೋಷಕರ ವರಮಾನ 2 ಲಕ್ಷ ರೂ. ಮೀರಿರಬಾರದು.
ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಎಲ್ಲ ದಾಖಲಾತಿಗಳೊಡನೆ ಸಂಬಂಧಪಟ್ಟ ಕಾಲೇಜಿನ ಮುಖ್ಯಸ್ಥರ ಮೂಲಕ ನವೆಂಬರ್ 30ರೊಳಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕಚೇರಿಗೆ ಸಲ್ಲಿಸಬೇಕು. ವಿವರಗಳಿಗೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನ. 11ರಂದು ನಗರದಲ್ಲಿ ವಿವಿಧ ಹುದ್ದೆಗಳ ನೇಮಕಕ್ಕೆ ಉದ್ಯೋಗ ಮೇಳ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ಬೆಂಗಳೂರಿನ ಪ್ರೆಸ್ ವಲ್ಡ್ ಮತ್ತು ಮೈಸೂರಿನ ಕೆಫೆ ಕಾಫಿ ಡೇ ಕಂಪನಿಯಲ್ಲಿನ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳುವ ಸಲುವಾಗಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಸಲಾಗುತ್ತದೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಯಾವುದೇ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ 18 ರಿಂದ 30ರ ವಯೋಮಿತಿಯೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಸ್ವವಿವರದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿ (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ಕೌಶಲ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ವಿವಿಧ ವಿಷಯಗಳ ಕುರಿತು 6 ತಿಂಗಳ ಅವಧಿಯ ಉಚಿತ ತರಬೇತಿಯನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೀಡಲಾಗುತ್ತದೆ.
ಕನ್ಸಸ್ಟ್ರಕ್ಷನ್ (ಮೇಷನ್ ಜನರಲ್, ಮೇಷನ್ ಮಾರ್ಬಲ್, ಗ್ರಾನೈಟ್ ಸ್ಟೋನ್), ಆಟೋಮೋಟಿವ್ (ರಿಪೇರ್, ವೆಲ್ಡರ್) ತರಬೇತಿ ಕೊಡಲಾಗುತ್ತದೆ. ತರಬೇತಿ ಪಡೆಯಲು ಆಸಕ್ತಿ ಇರುವವರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಚೇರಿ ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ನ. 9ರಂದು ನಗರದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆಯನ್ನು ನವೆಂಬರ್ 9ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಂ. ಭೃಂಗೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್, ರಾಘವೇಂದ್ರ, ದೀಪಾ, ಜಿಲ್ಲಾ ಸರ್ಕಾರಿ ವಕೀಲರಾದ ಎಚ್.ಎನ್. ಲೋಕೇಶ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಶಿವಪ್ರಸನ್ನ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ನ. 9ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ತಾಲೂಕಿನ ಚಂದಕವಾಡಿ ವಿದ್ಯುತ್ ಮಾರ್ಗದಲ್ಲಿ ನವೆಂಬರ್ 9ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಹಿರೇಕೆರೆ, ಕಾಳಿಕಾಂಬ, ಚಂದಕವಾಡಿ, ರೇಚಂಬಳ್ಳಿ, ಮಲ್ಲೆದೇವನಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಮಾರ್ಗಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆಗೆ 2017-18ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಚಾಮರಾಜನಗರ ಪಟ್ಟಣ, ಚಾಮರಾಜನಗರ ತಾಲೂಕಿನ ಉಮ್ಮತ್ತೂರು, ಹರವೆ, ಕೊಳ್ಳೇಗಾಲ ತಾಲೂಕಿನ ಹನೂರು, ತಿಮ್ಮರಾಜಿಪುರ, ಹೂಗ್ಯಂ, ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ, ತೆರಕಣಾಂಬಿ, ಯಡವನಹಳ್ಳಿ ಹಾಗೂ ಗುಂಡ್ಲುಪೇಟೆ ಪಟ್ಟಣ, ಯಳಂದೂರು ತಾಲೂಕಿನ ಮೆಲ್ಲಹಳ್ಳಿ ಗೇಟ್‍ನಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿವೆ.
ಚಾಮರಾಜನಗರ ತಾಲೂಕಿನ ಹರದನಹಳ್ಳಿ, ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರ, ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಿವೆ. ಕೊಳ್ಳೇಗಾಲ ತಾಲೂಕಿನ ಮಂಗಲದಲ್ಲಿ ಏಕಲವ್ಯ ಮಾದರಿ ವಸತಿ ಶಾಲೆ ಇದೆ.
ಮೊರಾರ್ಜಿ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 6 ರಿಂದ ಪಿಯುಸಿವರೆಗೆ, ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಅವಕಾಶವಿದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಇನ್ನಿತರ ಸಾಮಗ್ರಿ ನೀಡಲಾಗುತ್ತದೆ.
ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ಪ್ರವರ್ಗ 1ರ ವಿದ್ಯಾರ್ಥಿಗಳ ಪೋಷಕರ ಆದಾಯ 2.5 ಲಕ್ಷ ರೂ. ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ, 3ಬಿ ವರ್ಗದವರಾಗಿದ್ದಲ್ಲಿ 1 ಲಕ್ಷ ರೂ. ಆದಾಯ ಮಿತಿ ನಿಗದಿ ಮಾಡಲಾಗಿದೆ.
ಮೊರಾರ್ಜಿ ಶಾಲೆಗಳಲ್ಲಿ ಶೇ. 50ರಷ್ಟು, ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಶೇ. 100ರಷ್ಟು ವಿದ್ಯಾರ್ಥಿನಿಯರಿಗೆ ಸೀಟುಗಳು ಲಭ್ಯವಿರುತ್ತದೆ.
ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ವ್ಯಾಸಂಗ ಪೂರೈಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಜಿಲ್ಲೆಯ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳ ಕಚೇರಿ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಜಿಲ್ಲಾ ಹಾಗೂ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ, ಮೊರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ವಿತರಿಸಲಾಗುತ್ತಿದೆ. ಅರ್ಜಿಗಳನ್ನು ನವೆಂಬರ್ 25ರವರೆಗೂ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ವಸತಿ ಶಾಲೆಗೆ ಸಲ್ಲಿಸಲು ಡಿಸೆಂಬರ್ 15 ಕಡೆಯ ದಿನವಾಗಿದೆ.
2017ರ ಜನವರಿ 29ರಂದು ಪ್ರವೇಶ ಪರೀಕ್ಷೆ ನಿಗದಿಯಾಗಿದೆ. ಫೆಬ್ರವರಿ 20ರಂದು ಅರ್ಹತಾ ಪಟ್ಟಿ  ಪ್ರಕಟಿಸಲಾಗುತ್ತದೆ. ಏಪ್ರಿಲ್ 24ರಿಂದ ಕೌನ್ಸೆಲಿಂಗ್ ಆರಂಭವಾಗಲಿದೆ. ವಸತಿಶಾಲಾ ಶಿಕ್ಷಣ ಸೌಲಭ್ಯವನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಇಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- 2016-17ನೇ ಸಾಲಿನ 2 ವರ್ಷಗಳ ಬಿಇಡಿ ಕೋರ್ಸಿಗೆ ಸರ್ಕಾರಿ ಕೋಟಾದಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ನವೆಂಬರ್ 16 ಕಡೆಯ ದಿನವಾಗಿದೆ. ವಿವರಗಳಿಗೆ ವೆಬ್ ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ ನೋಡುವಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಿನಿ ಪವರ್ ಲೂಂ ಪಾರ್ಕ್ ಸ್ಥಾಪನೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 8 (ಕರ್ನಾಟಕ ವಾರ್ತೆ):- ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ಗಿರಿಜನ ಉಪಯೋಜನೆಯ ಮಿನಿ ಪವರ್ ಲೂಂ ಪಾರ್ಕ್ ಸ್ಥಾಪನೆಗಾಗಿ ಅರ್ಜಿ ಆಹ್ವಾನಿಸಿದೆ.
ನೊಂದಾಯಿತ ಪರಿಶಿಷ್ಟ ಪಂಗಡದ ಜವಳಿ ಉದ್ದೇಶಿತ ಸಂಸ್ಥೆ (ಎಸ್‍ಪಿವಿ) ಹೆಸರಿನಲ್ಲಿ ಕನಿಷ್ಟ 2 ಎಕರೆ ಜಮೀನಿನಲ್ಲಿ ಪವರ್ ಲೂಂ ಪಾರ್ಕ್ ಅಭಿವೃದ್ಧಿಪಡಿಸಲು ಅವಶ್ಯವಿರುವ ಮೂಲಸೌಕರ್ಯ ಹಾಗೂ ಕಾರ್ಯಾಗಾರ ಯಂತ್ರೋಪಕರಣಗಳಿಗೆ ಶೇ. 90ರಷ್ಟು ಸಹಾಯಧನ ನೀಡಲಾಗುತ್ತದೆ.
ವಿವರವಾದ ಯೋಜನಾ ವರದಿ, ಬಟ್ಟೆ ನೇಯ್ಗೆ ಉದ್ದಿಮೆಯಲ್ಲಿ ಹೊಂದಿರುವ ಅನುಭವ ದಾಖಲಾತಿ, ಸಂಸ್ಥೆಯ ಹೆಸರಿನಲ್ಲಿ ಹೊಂದಿರುವ ನಿವೇಶನ, ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿ ಕೊಠಡಿ ಸಂಖ್ಯೆ 225ರಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರನ್ನು (ದೂ.ಸಂ. 08226-222883) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


ಗುಂಡ್ಲುಪೇಟೆ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 9 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆ ಪುರಸಭೆಯು 2016-17ನೇ ಸಾಲಿನ ಎಸ್ ಎಫ್ ಸಿ, ಪುರಸಭಾ ನಿಧಿಯಡಿ ಶೇ. 24.10ರ ಅನುದಾನದಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗ, ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ನೀಡಲಿದ್ದು ಅರ್ಜಿ ಆಹ್ವಾನಿಸಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ ಅನಿಲ ಸಂಪರ್ಕ, ಬಿಇ, ಎಂಬಿಬಿಎಸ್ ಓದುತ್ತಿರುವವರಿಗೆ ಲ್ಯಾಪ್ ಟಾಪ್, ಶಸ್ತ್ರಚಿಕಿತ್ಸೆಗೆ ನೆರವು ನೀಡಲಾಗುತ್ತದೆ. ನಲ್ಲಿ ಸಂಪರ್ಕ ಪಡೆಯಲು ಠೇವಣಿ ಹಣ ಪಾವತಿಸಲಾಗುವುದು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡೆ, ಕಲೆ, ಭಾಷಣ, ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ, ಹಿರಿಯ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ. ವಿಕಲಚೇತನರಿಗೆ 3 ಚಕ್ರದ ಸ್ಕೂಟರ್, ಸ್ವಯಂ ಉದ್ಯೋಗಕ್ಕೆ ಪೆಟ್ಟಿಗೆ ಅಂಗಡಿ, ಕಂಪ್ಯೂಟರ್, ವಿಕಲಚೇತರನ್ನು ಪೋಷಿಸುವವರಿಗೆ ಸಹಾಯಧನ, ಅನಿಲ ಸಂಪರ್ಕ ಪಡೆಯಲು ನೆರವು ನೀಡಲಾಗುತ್ತದೆ.
ಅರ್ಜಿಯನ್ನು  ಪುರಸಭೆ ಕಾರ್ಯಾಲಯದಿಂದ ನವೆಂಬರ್ 15ರೊಳಗೆ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 20ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಪುರಸಭಾ ಕಚೇರಿಯ ನಗರ ಬಡತನ ನಿರ್ಮೂಲನಾ ಕೋಶದಲ್ಲಿ ಪಡೆಯುವಂತೆ ಪ್ರಕಟಣೆ ತಿಳಿಸಿದೆ.

ದಲಿತ ಕಾವ್ಯ ಮೀಮಾಂಸೆ ಕಮ್ಮಟಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 9 (ಕರ್ನಾಟಕ ವಾರ್ತೆ):- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗಾಗಿ ಮೈಸೂರು ವಿಭಾಗ ಮಟ್ಟದ ದಲಿತ ಕಾವ್ಯ ಮೀಮಾಂಸೆ ಕುರಿತ ಕಮ್ಮಟವನ್ನು ಡಾ. ಅಪ್ಪಗೆರೆ ಸೋಮಶೇಖರ್ ಅವರ ನಿರ್ದೇಶನದಲ್ಲಿ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಡಿಸೆಂಬರ್ 13, 14, 15ರಂದು ಮಂಗಳೂರಿನ ಪ್ರೇಮ್ ನಗರ್ ಸಂದೇಶ್ ಪ್ರತಿಷ್ಠಾನದಲ್ಲಿ ವಿಶೇಷ ಘಟಕ ಯೋಜನೆಯಡಿ ಕಮ್ಮಟ ಆಯೋಜಿಸಿದೆ. ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ದಲಿತ ಕಾವ್ಯ ಮೀಮಾಂಸೆಯ ¨ಗ್ಗೆ ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು. 20ರಿಂದ 40ರ ವಯೋಮಿತಿಯೊಳಗಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಶಿಬಿರಕ್ಕೆ ಬಂದು ಹೋಗಲು ರಾಜಹಂಸ ಬಸ್ ದರ ಅಥವಾ ಸಾಮಾನ್ಯ ರೈಲ್ವೆ ದರವನ್ನು ನೀಡಲಾಗುವುದು. 3 ದಿನಗಳ ಕಾಲ ಊಟ, ಉಪಾಹಾರ, ವಸತಿ ಸೌಲಭ್ಯ ಕಲ್ಪಿಸಲಾಗುತ್ತದೆ.
ಅರ್ಜಿಯನ್ನು ಅಕಾಡೆಮಿಯ ವೆಬ್ ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ನಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಲಗತ್ತಿಸಬೇಕು. ದಲಿತ ಕಾವ್ಯ ಮೀಮಾಂಸೆ ಬಗ್ಗೆ ತಮಗಿರುವ ತಿಳಿವಳಿಕೆಯನ್ನು ಬರೆಯಬೇಕು. ಅರ್ಜಿಯಲ್ಲಿ ಪೂರ್ಣ ವಿಳಾಸ, ದೂರವಾಣಿ ಸಂಖ್ಯೆ, ಇ ಮೇಲ್ ವಿಳಾಸ ನಮೂದಿಸಬೇಕು. ಅರ್ಜಿಯನ್ನು ಡಾ. ಅಪ್ಪಗೆರೆ ಸೋಮಶೇಖರ್, ದಲಿತ ಕಾವ್ಯ ಮೀಮಾಂಸೆ ಕಮ್ಮಟದ ನಿರ್ದೇಶಕರು, ಕೇರಾಫ್ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗೂರು-560 0002 ಇಲ್ಲಿಗೆ  ನವೆಂಬರ್ 19ರೊಳಗೆ ಕಳುಹಿಸಬೇಕು. ವಿವರಗಳಿಗೆ 080-22211730/22106460 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನ. 11ರಂದು ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಚಾಮರಾಜನಗರ, ನ. 9 (ಕರ್ನಾಟಕ ವಾರ್ತೆ):- ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಚೀನ ಸ್ಮಾರಕಗಳ ಮೂರ್ತ ಮತ್ತು ಅಮೂರ್ತ ಪರಂಪರೆಯ ಸಂಪತ್ತಿನ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದೆ.
ಪ್ರಾಚೀನ ಸ್ಮಾರಕಗಳಿಗೆ ಸಂಬಂಧಿಸಿದಂತೆ ರಸಪ್ರಶ್ನೆ, ಕನ್ನಡನಾಡಿದ ಭವ್ಯ ಪ್ರಾಚೀನ ಸ್ಮಾರಕಗಳು ನಮ್ಮ ಶ್ರೀಮಂತ ಸಂಸ್ಕøತಿಯ ದ್ಯೋತಕವಾಗಿದೆ ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿದೆ. ನಮ್ಮ ನಾಡಿನ ಪ್ರಾಚೀನ ಸ್ಮಾರಕಗಳು ನಮ್ಮ ಮೌಲ್ಯಯುತ ಬದುಕಿಗೆ ದಾರಿದೀಪವಾಗಿದೆ ಎಂಬ ವಿಷಯ ಕುರಿತು ಭಾಷಣ ಸ್ಪರ್ಧೆ, ನಮ್ಮ ನಾಡಿನ ಪ್ರಾಚೀನ ಸ್ಮಾರಕಗಳ ಕುರಿತು ಚಿತ್ರಕಲೆ ಸ್ಪರ್ಧೆಯನ್ನು ಸಹ ಹಮ್ಮಿಕೊಂಡಿದೆ.
ನವೆಂಬರ್ 11ರಂದು ನಗರದ ಉಪ್ಪಾರ ಬೀದಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಪರ್ಧೆಗಳು ನಡೆಯಲಿವೆ ಎಂದು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಳಂದೂರು : ವಿವಿಧ ಕೌಶಲ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 9 (ಕರ್ನಾಟಕ ವಾರ್ತೆ):- ಯಳಂದೂರು ಪಟ್ಟಣ ಪಂಚಾಯಿತಿಯು ನಗರ ದೀನದಯಾಳು ಅಂತ್ಯೋದಯ ಯೋಜನೆಯಡಿ ಕೌಶಲ್ಯ ತರಬೇತಿ ನೀಡಲಿದ್ದು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಲಘು ವಾಹನ ಚಾಲನೆ ತರಬೇತಿ, ಅಕೌಂಟಿಂಗ್ ಮತ್ತು ಟ್ಯಾಲಿ, ಇಂಟರೇವಿಟ್ ವೆಬ್ ಡಿಸೈನಿಂಗ್, ಕಂಪ್ಯೂಟರ್ ಹಾರ್ಡ್‍ವೇರ್, ಇಂಟರ್‍ನೆಟ್ ವರ್ಕಿಂಗ್ ತರಬೇತಿ ಪಡೆಯಲು ಅವಕಾಶವಿದೆ.
ಅಭ್ಯರ್ಥಿಗಳು 10ನೇ ತರಗತಿ ತೇರ್ಗಡೆಯಾಗಿರಬೇಕು. ಪಟ್ಟಣ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದು ಬಿಪಿಎಲ್ ಕುಟುಂಬಕ್ಕೆ ಸೇರಿದವರಾಗಿರಬೇಕು. ಅರ್ಜಿಯನ್ನು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿಯ ಕಚೇರಿಯಲ್ಲಿ ಸಂಬಂಧಪಟ್ಟ ವಿಷಯ ನಿರ್ವಾಹಕರಿಂದ ಪಡೆಯುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬದ್ಧತೆಯಿಂದ ಕೆಲಸ ನಿರ್ವಹಿಸಿ: ಪ್ರಾಣೇಶ್ ರಾವ್
ಚಾಮರಾಜನಗರ, ನ. 9 (ಕರ್ನಾಟಕ ವಾರ್ತೆ):- ಗ್ರಾಮದ ಸರ್ವೋತೋಮುಖ ಅಭಿವೃದ್ಧಿಗಾಗಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು ಎಂದು ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾವೃದ್ಧಿ ಸಂಸ್ಥೆಯ ನಿರ್ದೇಶಕರಾದ ಪ್ರಾಣೇಶರಾವ್ ಸಲಹೆ ನೀಡಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಇರುವ ಜಿಲ್ಲಾ ಪಂಚಾಯಿತಿಯ ನೂತನ ಕೆಡಿಪಿ ಸಭಾಂಗಣದಲ್ಲಿ ‘ನಮ್ಮ ಗ್ರಾಮ-ನಮ್ಮ ಯೋಜನೆ’ ಕುರಿತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಡೆದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಗ್ರಾಮ ಸ್ವರಾಜ್ ಪರಿಕಲ್ಪನೆಯನ್ನು ಪರಿಣಾಮಕಾರಿಯಾಗಿಸಲು ಪಂಚಾಯಿತಿ ಮಟ್ಟದಲ್ಲಿಯೇ ಅಭಿವೃದ್ಧಿ ಯೋಜನೆಗಳನ್ನು ಗ್ರಾಮದ ಜನರು ಸಿದ್ಧಪಡಿಸುವುದೇ ನಮ್ಮ ಗ್ರಾಮ-ನಮ್ಮ ಯೋಜನೆಯಾಗಿದೆ. ಗ್ರಾಮಗಳ ಮೂಲ ಸೌಕರ್ಯ ಹಾಗೂ ಸಮಗ್ರ ಅಭಿವೃದ್ಧಿ ಕೆಲಸಗಳಿಗೆ ಕ್ರಿಯಾ ಯೋಜನೆಯನ್ನು ಅನುಮೋದಿಸುವ ಹಕ್ಕು ಜನರಿಗೆ ಇದೆ. ಆದ್ದರಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ನಿಗದಿತ ಕಾಲಕ್ಕೆ ಗ್ರಾಮಸಭೆಗಳನ್ನು ನಡೆಸಿ, ಸಭಾ ನಿರ್ಣಯಗಳನ್ನು ಹಾಗೂ ಕ್ರಿಯಾ ಯೋಜನೆಯ ವಿವರಗಳನ್ನು ಪಂಚತಂತ್ರಾಂಶದಲ್ಲಿ ಅಳವಡಿಸಬೇಕು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ನಮ್ಮ ಗ್ರಾಮ ನಮ್ಮ ಯೋಜನೆಯ ವರದಿಯ ಆಧಾರದ ಮೇಲೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಅನುದಾನವನ್ನು ಬಿಡುಗಡೆಗೊಳಿಸುವುದರಿಂದ  ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಯೋಜನೆ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಕಾಯಿದೆಗಳ ಬಗ್ಗೆ ಮಾಹಿತಿ ಕೊಡಬೇಕು. ನಿಗದಿತ ಕಾಲಾವಧಿಯಲ್ಲಿ ಯೋಜನಾ ವರದಿಯನ್ನು ಸಿದ್ಧಪಡಿಸಿ ಮೇಲಧಿಕಾರಿಗಳಿಗೆ ತಲುಪಿಸಬೇಕು ಎಂದರು.
ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾವೃದ್ಧಿ ಸಂಸ್ಥೆಯ ಉಪನಿರ್ದೇಶಕ ಗಣೇಶ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಎಂ. ಮಾದೇಶು, ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ್, ಸಂಪನ್ಮೂಲ ವ್ಯಕ್ತಿ ಪ್ರೊ. ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪುಷ್ಪ ಕಮ್ಮಾರ್, ರೇವಣ್ಣ ಮತ್ತಿತರರು ಕಾರ್ಯಾಗಾರದಲ್ಲಿ ಹಾಜರಿದ್ದರು.


ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಚಾಮರಾಜನಗರ, ನ. 10 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ನವೆಂಬರ್ 11ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆಯ ಹಸುಗೂಲಿ ಗ್ರಾಮಕ್ಕೆ ಆಗಮಿಸಿ ಶುದ್ಧ ಕುಡಿಯುವ ನೀರು ಘಟಕದ ಉದ್ಘಾಟನೆ ನೆರವೇರಿಸುವರು. ನಂತರ ಬನ್ನಿತಾಳಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಘಟಕದ ಉದ್ಘಾಟನೆ ನೆರವೇರಿಸುವರು. ಮಧ್ಯಾಹ್ನ 3 ಗಂಟೆಗೆ ಚಾಮರಾಜನಗರದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರವಾನಗಿ ಭೂಮಾಪಕರ ಆಯ್ಕೆ ಪಟ್ಟಿ ಪ್ರಕಟ
ಚಾಮರಾಜನಗರ, ನ. 10 (ಕರ್ನಾಟಕ ವಾರ್ತೆ):- ರಾಜ್ಯದಲ್ಲಿ ಪೋಡಿ ಪ್ರಕರಣಗಳ ಅಳತೆ ಕಾರ್ಯವನ್ನು ವಿಳಂಬವಿಲ್ಲದೆ ಒದಗಿಸುವ ಸಲುವಾಗಿ ಅಭ್ಯರ್ಥಿಗಳಿಗೆ ಪರವಾನಗಿ ನೀಡಿ ಪರವಾನಗಿ ಭೂಮಾಪಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ಮೆರಿಟ್ ಆಧಾರದ ಮೇಲೆ ಜಿಲ್ಲಾವಾರು ಅವಶ್ಯಕತೆಗೆ ಅನುಗುಣವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಆಯ್ಕೆ ಪಟ್ಟಿಯನ್ನು ವೆಬ್‍ಸೈಟ್ hಣಣಠಿ://202.138.101.171/isಡಿeಛಿಡಿuiಣmeಟಿಣ ನಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.



ನ. 15ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ತಲಕಾಡಿನ ಇತಿಹಾಸ ತಜ್ಞರಾದ ಚಿಕ್ಕರಂಗೇಗೌಡ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ
  ನ. 14ರಂದು ನಗರದಲ್ಲಿ ನೆಹರು ಯುವ ಕೇಂದ್ರ ಸ್ಥಾಪನಾ ದಿವಸ ಆಚರಣೆ
ಚಾಮರಾಜನಗರ,.  ನ 11(ಕರ್ನಾಟಕ ವಾರ್ತೆ):-ನೆಹರು ಯುವ ಕೇಂದ್ರದ ಸ್ಥಾಪನ ದಿವಸ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘ, ಸರ್ಕಾರಿ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮವನ್ನು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಎಂ.ಸುಂದರ್‍ಉದ್ಘಾಟಿಸುವರು.ಕಾಲೇಜು ಪ್ರಾಂಶುಪಾಲರಾದ ಗುರುಸ್ವಾಮಿ ಅಧ್ಯಕ್ಷತೆ ವಹಿಸುವರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆಲುವಯ್ಯ, ಉಪ ಪ್ರಾಂಶುಪಾಲರಾದ ರಾಚಯ್ಯ, ಸ್ನೇಹ ಸ್ವಯಂ ಸೇವಾ ಸಂಸ್ಥೆಯ ಸಂಯೋಜಕರಾದ ಲೀನಾಕುಮಾರಿ, ಟಿ.ಜೆ ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ನ. 17ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ನಿಂಗಪ್ಪ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ತುಮಕೂರಿನ ಲಕ್ಷ್ಮಣದಾಸ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 12ರಂದು ನಗರದಲ್ಲಿ ಸ್ವಚ್ಛ ಭಾರತ ಅಭಿಯಾನದಡಿ ಶ್ರಮದಾನ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):- ಭಾರತೀಯ ಅಂಚೆ ಇಲಾಖೆಯು ಸ್ವಚ್ಛ ಭಾರತ ಅಭಿಯಾನದಡಿ ಪಾಕ್ಷಿಕ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನವೆಂಬರ್ 12 ರಂದು ನಗರದಲ್ಲಿ ಶ್ರಮದಾನ ಕಾರ್ಯಕ್ರಮ ಆಯೋಜಿಸಿದೆ.
200ಕ್ಕೂ ಹೆಚ್ಚು ಅಂಚೆ ಸಿಬ್ಬಂದಿ ಸೇರಿದಂತೆ ಇತರರು ಶ್ರಮದಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನವೆಂಬರ್ 12 ರಂದು ಬೆಳಿಗ್ಗೆ 7.30 ಗಂಟೆಗೆ ನಗರದ ಸಂತೇಮರಹಳ್ಳಿ ವೃತ್ತದಿಂದ ಶ್ರಮದಾನ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ಗುಂಡ್ಲುಪೇಟೆ ವೃತ್ತದ ವರೆಗೆ ಕಾರ್ಯಕ್ರಮ ಮುಂದುವರೆಯಲಿದೆ.
ಬೆಂಗಳೂರು ದಕ್ಷಿಣ ಕರ್ನಾಟಕ ಕ್ಷೇತ್ರದ ಪೋಸ್ಟ್‍ಮಾಸ್ಟರ್ ಜನರಲ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳವರು.ಆಸಕ್ತರು ಶ್ರಮದಾನದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ
ಪ್ರೋತ್ಸಾಹ ಧನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆಯು 2015-16ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್‍ಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15 ರವರೆಗೆ ವಿಸ್ತರಿಸಿದೆ.
ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕಡೆಯ ದಿನಾಂಕವೆಂದು ಈ ಹಿಂದೆ ತಿಳಿಸಲಾಗಿತ್ತು. ಆದರೆ ಹಲವಾರು ವಿದ್ಯಾರ್ಥಿಗಳು ವಿವಿಧ ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲದೆ ಇರುವ ಕಾರಣ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮರ್ಪಕ ವರದಿಯಿಂದ ಪ್ರಕರಣ ತ್ವರಿತ ಇತ್ಯರ್ಥ : ಜಿಲ್ಲಾ ನ್ಯಾಯಾಧೀಶರ ಅಭಿಮತ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):-ಅಪರಾಧ ಪ್ರಕರಣಗಳಲ್ಲಿ ತನಿಖಾ ಹಂತದಲ್ಲಿನ ನಿಖರ ವರದಿಗಳು ಪ್ರಕರಣ ತ್ವರಿತ ಇತ್ಯರ್ಥಕ್ಕೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್‍ಎಫ್‍ಮಳವಳ್ಳಿ ಅಭಿಪ್ರಾಯಪಟ್ಟರು.
ನಗರದ ಹೊರ ವಲಯದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉಪನ್ಯಾಸ ಸಭಾಂಗಣದಲ್ಲಿ ಇಂದು ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮದಡಿ ಪೊಲೀಸ್ ಅಧಿಕಾರಿಗಳು, ವಕೀಲರು ಹಾಗೂ ವೈದ್ಯರಿಗೆ ವಿಧಿ ವಿಜ್ಞಾನ ಶಾಸ್ತ್ರ ಸಂಬಂಧ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಪರಾಧ ತನಿಖಾ ಪ್ರಕರಣಗಳಲ್ಲಿ ವೈದ್ಯರು ಹಾಗೂ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲಾರ ಸಮನ್ವಯ ಸಹಕಾರ ಅಗತ್ಯವಾಗಿದೆ. ವೈದ್ಯರು ನೀಡುವ ವರದಿಗಳು ಸಹ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಗುರುತಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು  ನೀಡುವ ವರದಿಯಲ್ಲಿ ಕರಾರುವಕ್ಕಾಗಿ ಅಂಶಗಳು ನಮೂದಾಗಿರಬೇಕು. ಪ್ರತಿಯೊಂದು ಹಂತದಲ್ಲಿನ ವಿಷಯಗಳನ್ನು ಸಮಗ್ರವಾಗಿ ಒಳಗೊಂಡಿರಬೇಕು. ಈ ರೀತಿಯ ವರದಿಗಳು ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಅನುಕೂಲವಾಗಲಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್. ಡಾ. ಟಿ.ಎನ್. ಚಂದ್ರಶೇಖರ್ ಮಾತನಾಡಿ ವೈದ್ಯಕೀಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಹಾಗೂ ಅಪರಾಧ ಪ್ರಕರಣಗಳ ವೈದ್ಯಕೀಯ ವರದಿಗೆ ಸಂಬಂಧಿಸಿದಂತೆ ನೂತನ ವಿಷಯಗಳ ಕುರಿತು ತಿಳಿವಳಿಕೆ ನೀಡಲು ಮುಂದುವರೆದ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ವರದಿ ಸಲ್ಲಿಸುವ ಮುನ್ನ ಇರುವ ಗೊಂದಲವನ್ನು ಪರಿಹರಿಸಲು ಕಾರ್ಯಾಗಾರ ನೆರವಾಗಲಿದೆ ಎಂದರು.
ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಕುರಿತ ವಿಷಯಗಳ ಬಗ್ಗೆ ಹೆಚ್ಚು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಿದ್ದವಿದೆ. ವಿಧಿ ವಿಜ್ಞಾನ ಸಂಬಂಧ ನಾಲ್ವರು ತಜ್ಞರು ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಇಬ್ಬರು ತಜ್ಞರ ನೇಮಕಾತಿಯಾಗಲಿದೆ. ಅಗತ್ಯವಿದ್ದರೆ ಪೊಲೀಸ್ ಇಲಾಖೆಯಲ್ಲಿಯೇ ಕಾರ್ಯಾಗಾರ ಆಯೋಜಿಸಿ ಮಾಹಿತಿ ನೀಡಲಾಗುವುದು ಎಂದು ಟಿ.ಎನ್.ಚಂದ್ರಶೇಖರ್ ತಿಳಿಸಿದರು.
ವೈದ್ಯಕೀಯ ವಿಜ್ಷಾನ ಸಂಸ್ಥೆಯ ವಿಧಿವಿಜ್ಞಾನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕರಾದ ಡಾ. ಯದುಕುಲ್ ಪ್ರಾಸ್ತವಿಕ ನುಡಿಗಳನ್ನಾಡಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಲ್‍ದೀಪ್‍ಕುಮಾರ್ ಆರ್.ಜೈನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಹೆಚ್.ಪ್ರಸಾದ್, ಡಾ.ಜಗನಾಥ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನ. 14 ರಂದು ಮಕ್ಕಳ ಹಕ್ಕುಗಳ ಕುರಿತು ಕಾರ್ಯಕ್ರಮ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಅರಿವು ಕಾರ್ಯಕ್ರಮವನ್ನು ನವೆಂಬರ್ 14 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಸಹ ಶಿಕ್ಷಕರಾದ ಯದುಗಿರಿಯಮ್ಮ ಅಧ್ಯಕ್ಷತೆ ವಹಿಸುವರು. ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ವಕೀಲರಾದ ಬಿ.ವನಜಾಕ್ಷಿ ಮತ್ತು ಎನ್. ಶ್ವೇತಾ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಕಲಿಕೆ ಸುಧಾರಣೆಗೆ ಸಂವಾದ : ಜಿ.ಪಂ.ಸಿಇಓ ಹೆಪ್ಸಿಬಾರಾಣಿ ಕೊರ್ಲಪಾಟಿ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):-ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣೆಗೆ ಅನುಷ್ಟಾನದಲ್ಲಿರುವ  ಸ್ಮಾರ್ಟ್ ಕಾರ್ಯಕ್ರಮದಡಿ ಮಕ್ಕಳ ಕಲಿಕೆಯಲ್ಲಿನ ಸಮಸ್ಯೆ ಆಲಿಸಲು ಸಂವಾದ ಆಯೋಜಿಸಿ ಪರಿಹಾರ ಕಂಡುಕೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್ ಅನುಷ್ಟಾನ ಸಂಬಂಧ ಇತ್ತೀಚೆಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶೀಕ್ಷಣ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ವಿದ್ಯಾರ್ಥಿಗಳೊಂದಿಗೆ ಬ್ಲಾಕ್ ಹಂತದಲ್ಲಿ ನೇರ ಫೋನ್‍ಇನ್ ಕಾರ್ಯಕ್ರಮವನ್ನು ಜನವರಿ ಮಾಹೆಯ ನಂತರ ಸಂಜೆಯ ವೇಳೆ ಆಯೋಜಿಸಬೇಕು. ಈ ಮೂಲಕ ಮಕ್ಕಳ ಕಲಿಕೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸೂಚಿಸಬೇಕು.  ಎಸ್‍ಎಸ್‍ಎಲ್‍ಸಿ ಯಲ್ಲಿ ಅತೀ ಹೆಚ್ಚು ಅಂಕಗಳಿಸಿ ತೇರ್ಗಡೆಯಾಗಿರುವ ವಿದ್ಯಾರ್ಥಿಗಳು ಹಾಗೂ ವಿಷಯ ಪರಿಣತ ಸಂಪನ್ಮೂಲ ವ್ಯಕ್ತಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ತಿಳಿಸಿದರು.
ಸ್ಮಾರ್ಟ್ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಹಂತದಲ್ಲಿ ಈಗಾಗಲೆ 5 ದಿನಗಳ ಕಾಲ ನಡೆಸಲಾಗಿದೆ. ತರಬೇತಿ ಪಡೆಯದ ಶಿಕ್ಷಕರಿಗೆ ಆಯಾ ಬ್ಲಾಕ್ ಹಂತದಲ್ಲಿಯೇ 2 ದಿನಗಳ ತರಬೇತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಏರ್ಪಡಿಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಹೆಪ್ಸಿಬಾರಾಣಿ ನಿರ್ದೇಶನ ನೀಡಿದರು.
ಡಯಟ್ ಪ್ರಾಂಶುಪಾಲರು ಮೊದಲ ಹಂತದಲ್ಲಿ ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ  ಶೇ. 60ಕ್ಕಿಂತ ಕೆಡಿಮೆ ಫಲಿತಾಂಶ ಬಂದಿರುವ ಶಾಲೆಗಳಿಗೆ ಭೇಟಿ ನೀಡಬೇಕು. ಈ ಶಾಲೆಗಳಲ್ಲಿ ಮಕ್ಕಳ ಕಲಿಕೆ ಹೇಗೆ ಸುಧಾರಿಸಿದೆ ಎಂಬುದನ್ನು ಪರಿಶೀಲಿಸಬೇಕು. ಅಗತ್ಯ ಮಾರ್ಗದರ್ಶನವನ್ನು ಶಿಕ್ಷಕರಿಗೆ ನೀಡಬೇಕು ಎಂದರು.
ಎಸ್‍ಎಸ್‍ಎಲ್‍ಸಿ ಸುಧಾರಣೆಗೆ ಅಗತ್ಯವಿರುವ ಎಲ್ಲಾ ರೂಪುರೇಷಗಳನ್ನು ಸಿದ್ದಪಡಿಸಬೇಕು. ಗುಣಾತ್ಮಕ ಶಿಕ್ಷಣ ಹಾಗೂ ಫಲಿತಾಂಶ ಪ್ರಮಾಣ ಹೆಚ್ಚಳಕ್ಕೆ ಅನುಷ್ಟಾನಗೊಳ್ಳಬೇಕಿರುವ ಕಾರ್ಯಕ್ರಮಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ರಾಷ್ಟ್ರೀಯ ವಿಜ್ಞಾನ ಸಮಾವೇಶವು ಬೆಂಗಳೂರಿನಲ್ಲಿ ನಡೆಯಲಿದೆ. ಇಲ್ಲಿಗೆ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳು ವಿಜ್ಞಾನ ಮಾದರಿಯೊಂದಿಗೆ ಪ್ರಾತ್ಯಕ್ಷಿಕೆ ನೀಡಲು ಅವಕಾಶ ಮಾಡಿಕೊಡಲಾಗುತ್ತಿದೆ. ಸ್ಮಾರ್ಟ್ ತರಬೇತಿ ಪಡೆದ ಶಿಕ್ಷಕರನ್ನು ಕಳುಹಿಸಲು ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕೆಂದು ಹೆಪ್ಸಿಬಾರಾಣಿ ಅವರು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ, ಡಯಟ್ ಪ್ರಾಂಶುಪಾಲರಾದ ಗೀತಾಂಬ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಾಶ್, ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

 *****************

ಉಪ್ಪು ದರ ಏರಿಕೆಯಿಲ್ಲ: ಸಾರ್ವಜನಿಕರು ಆತಂಕಕ್ಕೊಳಗಾಬೇಡಿ: ಡೀಸಿ
ಚಾಮರಾಜನಗರ ನ.12 (ಕರ್ನಾಟಕವಾರ್ತೆ) : ಅಡುಗೆ ಉಪ್ಪು ದರ ಏರಿಕೆಯಾಗುತ್ತದೆಂಬುದು ಕೇವಲ ವದಂತಿಯಾಗಿದ್ದು ಸಾರ್ವಜನಿಕರು ಈ ಬಗ್ಗೆ ಆತಂಕ ಪಡಬೇಕಾಗಿಲ್ಲ. ಉಪ್ಪಿನ ದರ ಏರಿಕೆಯಾಗುವುದಿಲ್ಲ ಹಾಗೂ ಸಾಕಷ್ಟು ಉಪ್ಪಿನ ದಾಸ್ತಾನಿದ್ದು ಸಾರ್ವಜನಿಕರು  ಹೆಚ್ಚು ಉಪ್ಪು ಖರೀದಿಸುವ ಅಗತ್ಯವಿಲ್ಲ. ಈ ಕುರಿತ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಿಲ್ಲಾಧಿಕಾರಿ ಬಿ. ರಾಮು ಮನವಿ ಮಾಡಿದ್ದಾರೆ.
ಉಪ್ಪಿನ ದರ ಏರಿಕೆಯಾಗುತ್ತದೆಂಬ ವದಂತಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲೆಯ ಅನೇಕ ಕಡೆ ಉಪ್ಪು ಖರೀದಿಗೆ ಮುಗಿಬೀಳುತ್ತಿದ್ದು, ಈ ಪರಿಸ್ಥಿತಿಯನ್ನು ವರ್ತಕರು ದುರುಪಯೋಗಪಡಿಸಿಕೊಳ್ಳಬಾರದು. ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಬಾರದು. ಒಂದು ವೇಳೆ ಅಕ್ರಮ ದಾಸ್ತಾನು ಕಂಡು ಬಂದಲ್ಲಿ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಉಪ್ಪು ಮಾರಾಟ ಮಾಡುವುದು ಕಂಡು ಬಂದರೆ, ಅಂತಹ ವರ್ತಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಬಿ. ರಾಮು ನೀಡಿದ್ದಾರೆ.
ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಗೊಳ್ಳಬೇಕಾಗಿಲ್ಲ. ಉಪ್ಪಿನ ದರ ಏರಿಕೆಯಾಗುವುದಿಲ್ಲ. ಅಭಾವವೂ ಸೃಷ್ಟಿಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ನ. 14 ರಂದು ನಗÀರದಲ್ಲಿ ಪ.ಜಾ. ಪ.ಪಂ.ಜನರಿಗೆ ವಿಶೇಷ ಆರೋಗ್ಯ ತಪಾಸಣ ಶಿಬಿರ
ಚಾಮರಾಜನಗರ, ನ,13 (ಕರ್ನಾಟಕ ವಾರ್ತೆ):- ಆರೋಗ್ಯ ಇಲಾಖೆವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿಗೆ ವಿಶೇಷ ಆರೋಗ್ಯ ತಪಾಸಣ ಶಿಬಿರವನ್ನು ನವೆಂಬರ್ 14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ಜಿಲ್ಲಾ ಆಸ್ಫತ್ರೆಯಲ್ಲಿ ಏರ್ಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿÀಷ್ಟ ಪಂಗಡದ ಜನರು ಶೇ.40ಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ವಾಸವಿರುವ ಚಾಮರಾಜನಗರ ತಾಲ್ಲೂಕಿನ ಗ್ರಾಮಗಳಲ್ಲಿ ಈಗಾಗಲೇ ಕಲಾಜಾಥ ಕಾರ್ಯಕ್ರಮ ಆಯೋಜಿಸುವ ಮೂಲಕ ಶಿಬಿರದ ಬಗ್ಗೆ ಮಾಹಿತಿ ನೀಡಲಾಗಿದೆ. ಕಲಾಜಾಥ ನಡೆದಿರುವ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ವಿವಿಧ ರೀತಿಯ ಕಾಯಿಲೆಯಿಂದ ಬಳಲುತ್ತಿರುವವರಿಗೆ ಬಣ್ಣದ ಕಾರ್ಡುಗಳನ್ನು ವಿತರಿಸಿದ್ದಾರೆ. ಈ ಕಾರ್ಡು ಪಡೆದವರು ನವೆಂಬರ್ 14 ರಂದು ಆರೋಗ್ಯ ಶಿಬಿರಕ್ಕೆ ಹಾಜರಾಗಬೇಕು.
ಕಾರ್ಡುಗಳನ್ನು ಪಡೆಯದೆ ಇರುವವರಿಗೂ ಸಹ ತಪಾಸಣ ಶಿಬಿರದಲ್ಲಿ ಕಾರ್ಡುಗಳನ್ನು ನೀಡಲಾಗುವುದು. ಶಿಬಿರದಲ್ಲಿ ಕೌಂಟರ್‍ಗಳನ್ನು ತೆರೆಯಲಾಗುತ್ತಿದ್ದು ವೈದ್ಯರು ತಪಾಸಣೆ ಮಾಡುವರು. ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ಹಾಗೂ ಔಷಧಿಗಳನ್ನು ನೀಡಲಾಗುವುದು. ಶಸ್ತ್ರಚಿಕಿತ್ಸೆ ಅವಶ್ಯವಿದ್ದಲ್ಲಿ ವಿವಿಧ ಯೋಜನೆಯಡಿ ಚಿಕಿತ್ಸೆ ಒದಗಿಸಲು ಅಗತ್ಯಕ್ರಮ ತೆಗೆದುಕೊಳ್ಳಲಾಗುವುದು. ನಾಗರಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.



ನ. 15ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ
ಚಾಮರಾಜನಗರ, ನ,13 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 15 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ತಲಕಾಡಿನ ಇತಿಹಾಸ ತಜ್ಞರಾದ ಚಿಕ್ಕರಂಗೇಗೌಡ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ
  ನ. 14ರಂದು ನಗರದಲ್ಲಿ ನೆಹರು ಯುವ ಕೇಂದ್ರ ಸ್ಥಾಪನಾ ದಿವಸ ಆಚರಣೆ
ಚಾಮರಾಜನಗರ,.  ನ 13(ಕರ್ನಾಟಕ ವಾರ್ತೆ):-ನೆಹರು ಯುವ ಕೇಂದ್ರದ ಸ್ಥಾಪನ ದಿವಸ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘ, ಸರ್ಕಾರಿ ಪದವಿ ಪೂರ್ವ ಕಾಲೇಜು ಎನ್ ಎಸ್ ಎಸ್ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮವನ್ನು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಎಂ.ಸುಂದರ್‍ಉದ್ಘಾಟಿಸುವರು.ಕಾಲೇಜು ಪ್ರಾಂಶುಪಾಲರಾದ ಗುರುಸ್ವಾಮಿ ಅಧ್ಯಕ್ಷತೆ ವಹಿಸುವರು. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆಲುವಯ್ಯ, ಉಪ ಪ್ರಾಂಶುಪಾಲರಾದ ರಾಚಯ್ಯ, ಸ್ನೇಹ ಸ್ವಯಂ ಸೇವಾ ಸಂಸ್ಥೆಯ ಸಂಯೋಜಕರಾದ ಲೀನಾಕುಮಾರಿ, ಟಿ.ಜೆ ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
ನ. 17ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ
ಚಾಮರಾಜನಗರ, ನ,13 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ನಿಂಗಪ್ಪ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ತುಮಕೂರಿನ ಲಕ್ಷ್ಮಣದಾಸ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನ. 14 ರಂದು ಮಕ್ಕಳ ಹಕ್ಕುಗಳ ಕುರಿತು ಕಾರ್ಯಕ್ರಮ
ಚಾಮರಾಜನಗರ, ನ,11 (ಕರ್ನಾಟಕ ವಾರ್ತೆ):- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಅರಿವು ಕಾರ್ಯಕ್ರಮವನ್ನು ನವೆಂಬರ್ 14 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ.ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಸಹ ಶಿಕ್ಷಕರಾದ ಯದುಗಿರಿಯಮ್ಮ ಅಧ್ಯಕ್ಷತೆ ವಹಿಸುವರು. ಜಿಲ್ಲಾ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜು ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ವಕೀಲರಾದ ಬಿ.ವನಜಾಕ್ಷಿ ಮತ್ತು ಎನ್. ಶ್ವೇತಾ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಟಿಪ್ಪು ಸುಲ್ತಾನ್ ಜಯಂತಿ ಹಿನ್ನಲೆ: ಅಗತ್ಯ ಕ್ರಮ ಪಾಲನೆಗೆ ಪೊಲೀಸ್ ಇಲಾಖೆ ಮನವಿ
ಚಾಮರಾಜನಗರ, ನ,13 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ನವೆಂಬರ್ 15 ರಂದು ಬೆಳಿಗ್ಗೆ 10-30 ಗಂಟೆಗೆ ಚಾಮರಾಜನಗರ ಪಟ್ಟಣದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಜರತ್ ಟಿಪ್ಪುಸುಲ್ತಾನ್ ರವರ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗಿದೆ.  ಈ ಹಿನ್ನಲೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಿರಲು ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಅಗತ್ಯ P್ಪ್ರಮಗಳನ್ಮ್ನ ಪಾಲನೆಮಾಡುವ ಮೂಲಕ ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಟಿಪ್ಪು ಜನ್ಮ ದಿನಾಚರಣೆಯು ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿರುವುದರಿಂದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಗಳ ಅಧಿಕೃತ ಕಾರ್ಯಕ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ಇರುವುದಿಲ್ಲ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಹಿತ ದೃಷ್ಠಿಯಿಂದ ನವೆಂಬರ್ 15 ರ ಬೆಳಿಗ್ಗೆ 6 ರಿಂದÀ ಸಂಜೆ 6 ಗಂಟೆಯವರೆಗೆ ಚಾಮರಾಜನಗರ ಪಟ್ಟಣ ವ್ಯಾಪ್ತಿಯ 5 ಕಿ.ಮೀ ಸುತ್ತಳತೆಯಲ್ಲಿ ಕಾರ್ಯಕ್ರಮದ ಸ್ಥಳವಾದ ಪೇಟೆ ಪ್ರೈಮರಿ ಶಾಲಾ ಆವರಣ ಹೊರತುಪಡಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಸಿ.ಆರ್.ಪಿ.ಸಿ ಕಲಂ 144 ರೀತ್ಯಾ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ಮುಂಜಾಗ್ರತೆಯ ದೃಷ್ಠಿಯಿಂದ ಅಧಿಕೃತ ಆಹ್ವಾನ ಪತ್ರಿಕೆ ಉಳ್ಳವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಹ್ವಾನಿತರು ತಮಗೆ ನೀಡಲಾದ ಅಧಿಕೃತ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಆಗಮಿಸಬೇಕು. ಪೊಲೀಸರು ನಡೆಸುವ ಎಲ್ಲಾ ರೀತಿಯ ತಪಾಸಣೆಗಳಿಗೂ ಸಂಯಮದಿಂದ ಸಹಕರಿಸಬೇಕು.

ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಗುಂಪಾಗಿ ಅಥವಾ ಮೆರವಣಿಗೆ ಮುಖಾಂತರ ಜಾಥಾ, ರ್ಯಾಲಿ ಅಥವಾ ಒಂದಕ್ಕಿಂತ ಹೆಚ್ಚು ವಾಹನಗಳಲ್ಲಿ ಒಟ್ಟಿಗೆ ಆಗಮಿಸಬಾರದು, ಧ್ವಜ, ಬಾವುಟ ಇತ್ಯಾದಿಗಳನ್ನು ಪ್ರದರ್ಶನ ಮಾಡುವುದು, ಧ್ವನಿವರ್ದಕಗಳ ಮೂಲಕ ಹಾಡು, ಘೋಷಣೆಗಳನ್ನು ಕೂಗುವುದುನ್ನು, ನೃತ್ಯ ಅಥವಾ ಬೇರಾವುದೆ ಪ್ರಚೋದನಕಾರಿ ಅಂಶಗಳನ್ನ ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.

ಟಿಪ್ಪು ಜನ್ಮದಿನಾಚರಣೆಯು ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿರುವುದರಿಂದ ಹಾಗೂ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ವಿರೋಧಿಸಿ ಯಾವುದೇ ಪ್ರತಿಭಟನೆಗೆ ಅವಕಾಶ ಇರುವುದಿಲ್ಲ. ನಿಷೇದಾಜ್ಞೆ ಉಲ್ಲಂಘಿಸಿ ಯಾವುದೇ ಸಂಘಟನೆ, ಪಕ್ಷ ಅಥವಾ ಬೇರಾವುದೆ ರೀತಿಯಲ್ಲಿ ಚಟುವಟಿಕೆಗಳನ್ನು ನಡೆಸಿದಲ್ಲಿ ಅಂತಹವರುಗಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.

ಮುಂಜಾಗ್ರತಾ ಕ್ರಮವಾಗಿನವೆಂಬರ್ 15 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 16 ರ ಬೆಳಿಗ್ಗೆ 6 ಗಂಟೆಯವರೆಗೆÀ ಚಾಮರಾಜನಗರ ಪಟ್ಟಣ ವ್ಯಾಪ್ತಿಯ 5 ಕಿ.ಮೀ ಸುತ್ತಳತೆಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಣೆ ನಿಷೇಧಿಸಲಾಗಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅನುಮತಿ ಪಡೆಯದೆ ಯಾವುದೇ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳನ್ನು ಹಾಕಲು ಅವಕಾಶವಿರುವುದಿಲ್ಲ.

     ಜಿಲ್ಲಾ ಪೊಲೀಸ್ ವತಿಯಿಂದ ಸಕಲ ಸಿದ್ದತೆಗಳನ್ನು ಮಾಡಲಾಗಿದೆ. ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿ, ಗುಪ್ತ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.  ನಗರದ ಹಾಗೂ ಜಿಲ್ಲಾ ಗಡಿಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ನೇಮಿಸಲಾಗಿರುತ್ತದೆ. ಈಗಾಗಲೇ ಅಳವಡಿಸಿರುವ ಸಿ.ಸಿ.ಟಿ.ವಿಗಳಲ್ಲದೇ ಪ್ರಮುಖ ಸ್ಥಳಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಿಸಲು ವ್ಯವಸ್ಥೆ ಮಾಡಲಾಗಿರುತ್ತದೆ. ಸದರಿ ಕಾರ್ಯಕ್ರಮಗಳ ಸನ್ನಿವೇಶವನ್ನು ದುರುಪಯೋಗಪಡಿಸಿಕೊಳ್ಳುವ ಸಮಾಜಘಾತುಕ ಶಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಕೂಡಲೇ ಪೊಲೀಸ್ ಠಾಣೆಗಾಗಲಿ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗಾಗಲೀ ತಿಳಿಸಬೇಕು.

ಪೊಲೀಸ್ ಅಧೀಕ್ಷಕರು, ಚಾ-ನಗರ  08226-222243 ಮೊ.9480804601, ಹೆಚ್ಚುವರಿ   ಪೊಲೀಸ್ ಅಧೀಕ್ಷಕರು 08226-225979 ಮೊ.9480804602, ಡಿ.ಎಸ್.ಪಿ.ಚಾ-ನಗರ 08226-222090 ಮೊ.9480804620 ಡಿ.ಎಸ್.ಪಿ ಕೊಳ್ಳೇಗಾಲ 08224-252840 ಮೊ.9480804621 ಡಿ.ಎಸ್.ಪಿ.ಡಿ.ಸಿಆರ್.ಬಿ 08226-222908 ಮೊ.9480804609 ಪಿ.ಐ.ಚಾ-ನಗರ ಪಟ್ಟಣ 08226-222047 ಮೊ. 9480804645, ಪಿ.ಐ. ಜಿಲ್ಲಾ ವಿಶೇಷ ವಿಭಾಗ 08226-222908 ಮೊ.9480804607, ಜಿಲ್ಲಾ ನಿಯಂತ್ರಣ ಕೊಠಡಿ 08226-222383 ಮೊ.9480804600
ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೂ ಆಸ್ಪದ ನೀಡಬಾರದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

 ************


ನ. 15ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 15ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ತಲಕಾಡಿನ ಇತಿಹಾಸ ತಜ್ಞರಾದ ಚಿಕ್ಕರಂಗೇಗೌಡ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು. ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕವಾಲಿ ಕಾರ್ಯಕ್ರಮ ಸಹ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ

ಟಿಪ್ಪು ಸುಲ್ತಾನ್ ಜಯಂತಿ ಹಿನ್ನಲೆ: ಅಗತ್ಯ ಕ್ರಮ ಪಾಲನೆಗೆ ಪೊಲೀಸ್ ಇಲಾಖೆ ಮನವಿ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ನವೆಂಬರ್ 15ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ಪಟ್ಟಣದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಜರತ್ ಟಿಪ್ಪುಸುಲ್ತಾನ್‍ರವರ ಜನ್ಮದಿನಾಚರಣೆ ಸಮಾರಂಭವನ್ನು ಆಯೋಜಿಸಲಾಗಿದೆ.  ಈ ಹಿನ್ನಲೆಯಲ್ಲಿ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಿರಲು ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಅಗತ್ಯ P್ಪ್ರಮಗಳನ್ಮ್ನ ಪಾಲನೆ ಮಾಡುವ ಮೂಲಕ ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಿದೆ.
ಟಿಪ್ಪು ಜನ್ಮ ದಿನಾಚರಣೆಯು ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿರುವುದರಿಂದ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತಗಳ ಅಧಿಕೃತ ಕಾರ್ಯಕ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶ ಇರುವುದಿಲ್ಲ. ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಹಿತ ದೃಷ್ಠಿಯಿಂದ ನವೆಂಬರ್ 15ರ ಬೆಳಿಗ್ಗೆ 6 ರಿಂದÀ ಸಂಜೆ 6 ಗಂಟೆಯವರೆಗೆ ಚಾಮರಾಜನಗರ ಪಟ್ಟಣ ವ್ಯಾಪ್ತಿಯ 5 ಕಿ.ಮೀ ಸುತ್ತಳತೆಯಲ್ಲಿ ಕಾರ್ಯಕ್ರಮದ ಸ್ಥಳವಾದ ಪೇಟೆ ಪ್ರೈಮರಿ ಶಾಲಾ ಆವರಣ ಹೊರತುಪಡಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‍ಪಿಸಿ ಕಲಂ 144 ರೀತ್ಯಾ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ಮುಂಜಾಗ್ರತೆಯ ದೃಷ್ಠಿಯಿಂದ ಅಧಿಕೃತ ಆಹ್ವಾನ ಪತ್ರಿಕೆ ಉಳ್ಳವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆಹ್ವಾನಿತರು ತಮಗೆ ನೀಡಲಾದ ಅಧಿಕೃತ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಆಗಮಿಸಬೇಕು. ಪೊಲೀಸರು ನಡೆಸುವ ಎಲ್ಲಾ ರೀತಿಯ ತಪಾಸಣೆಗಳಿಗೂ ಸಂಯಮದಿಂದ ಸಹಕರಿಸಬೇಕು.
ಕಾರ್ಯಕ್ರಮಕ್ಕೆ ಯಾವುದೇ ಕಾರಣಕ್ಕೂ ಗುಂಪಾಗಿ ಅಥವಾ ಮೆರವಣಿಗೆ ಮುಖಾಂತರ ಜಾಥಾ, ರ್ಯಾಲಿ ಅಥವಾ ಒಂದಕ್ಕಿಂತ ಹೆಚ್ಚು ವಾಹನಗಳಲ್ಲಿ ಒಟ್ಟಿಗೆ ಆಗಮಿಸಬಾರದು. ಧ್ವಜ, ಬಾವುಟ ಇತ್ಯಾದಿಗಳನ್ನು ಪ್ರದರ್ಶನ ಮಾಡುವುದು, ಧ್ವನಿವರ್ದಕಗಳ ಮೂಲಕ ಹಾಡು, ಘೋಷಣೆಗಳನ್ನು ಕೂಗುವುದುನ್ನು, ನೃತ್ಯ ಅಥವಾ ಬೇರಾವುದೆ ಪ್ರಚೋದನಕಾರಿ ಅಂಶಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ.
ಟಿಪ್ಪು ಜನ್ಮದಿನಾಚರಣೆಯು ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮವಾಗಿರುವುದರಿಂದ ಹಾಗೂ ನಿಷೇದಾಜ್ಞೆ ಜಾರಿಯಲ್ಲಿರುವುದರಿಂದ ಕಾರ್ಯಕ್ರಮವನ್ನು ವಿರೋಧಿಸಿ ಯಾವುದೇ ಪ್ರತಿಭಟನೆಗೆ ಅವಕಾಶ ಇರುವುದಿಲ್ಲ. ನಿಷೇದಾಜ್ಞೆ ಉಲ್ಲಂಘಿಸಿ ಯಾವುದೇ ಸಂಘಟನೆ, ಪಕ್ಷ ಅಥವಾ ಬೇರಾವುದೆ ರೀತಿಯಲ್ಲಿ ಚಟುವಟಿಕೆಗಳನ್ನು ನಡೆಸಿದಲ್ಲಿ ಅಂತಹವರುಗಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು.
ಮುಂಜಾಗ್ರತಾ ಕ್ರಮವಾಗಿ ನವೆಂಬರ್ 15ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 16ರ ಬೆಳಿಗ್ಗೆ 6 ಗಂಟೆಯವರೆಗೆÀ ಚಾಮರಾಜನಗರ ಪಟ್ಟಣ ವ್ಯಾಪ್ತಿಯ 5 ಕಿ.ಮೀ ಸುತ್ತಳತೆಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ದಾಸ್ತಾನು, ಸಾಗಣೆ ನಿಷೇಧಿಸಲಾಗಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಅನುಮತಿ ಪಡೆಯದೆ ಯಾವುದೇ ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್‍ಗಳನ್ನು ಹಾಕಲು ಅವಕಾಶವಿರುವುದಿಲ್ಲ.
ಜಿಲ್ಲಾ ಪೊಲೀಸ್ ವತಿಯಿಂದ ಸಕಲ ಸಿದ್ದತೆಗಳನ್ನು ಮಾಡಲಾಗಿದೆ. ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿ, ಗುಪ್ತ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ.  ನಗರದ ಹಾಗೂ ಜಿಲ್ಲಾ ಗಡಿಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ನೇಮಿಸಲಾಗಿರುತ್ತದೆ. ಈಗಾಗಲೇ ಅಳವಡಿಸಿರುವ ಸಿ.ಸಿ.ಟಿ.ವಿಗಳಲ್ಲದೇ ಪ್ರಮುಖ ಸ್ಥಳಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡಿಸಲು ವ್ಯವಸ್ಥೆ ಮಾಡಲಾಗಿರುತ್ತದೆ. ಸದರಿ ಕಾರ್ಯಕ್ರಮಗಳ ಸನ್ನಿವೇಶವನ್ನು ದುರುಪಯೋಗಪಡಿಸಿಕೊಳ್ಳುವ ಸಮಾಜಘಾತುಕ ಶಕ್ತಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಕೂಡಲೇ ಪೊಲೀಸ್ ಠಾಣೆಗಾಗಲಿ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗಾಗಲೀ ತಿಳಿಸಬೇಕು.
ಪೊಲೀಸ್ ಅಧೀಕ್ಷಕರು, ಚಾಮರಾಜನಗರ  08226-222243 ಮೊ.9480804601, ಹೆಚ್ಚುವರಿ ಪೊಲೀಸ್ ಅಧೀಕ್ಷಕರು 08226-225979 ಮೊ.9480804602, ಡಿ.ಎಸ್.ಪಿ.ಚಾಮರಾಜನಗರ 08226-222090 ಮೊ.9480804620 ಡಿ.ಎಸ್.ಪಿ ಕೊಳ್ಳೇಗಾಲ 08224-252840 ಮೊ.9480804621 ಡಿ.ಎಸ್.ಪಿ.ಡಿ.ಸಿಆರ್.ಬಿ 08226-222908 ಮೊ.9480804609 ಪಿ.ಐ.ಚಾಮರಾಜನಗರ ಪಟ್ಟಣ 08226-222047 ಮೊ. 9480804645, ಪಿ.ಐ. ಜಿಲ್ಲಾ ವಿಶೇಷ ವಿಭಾಗ 08226-222908 ಮೊ.9480804607, ಜಿಲ್ಲಾ ನಿಯಂತ್ರಣ ಕೊಠಡಿ 08226-222383 ಮೊ.9480804600
ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಅಹಿತಕರ ಘಟನೆಗಳಿಗೂ ಆಸ್ಪದ ನೀಡಬಾರದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಮದ್ಯ ಮಾರಾಟ ನಿಷೇಧ
ಚಾಮರಾಜನಗರ,  ನ. 14 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣದಲ್ಲಿ ನವೆಂಬರ್ 15ರಂದು ಟಿಪ್ಪು ಜಯಂತಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಸಲುವಗಿ ನವೆಂಬರ್ 15ರ ಬೆಳಿಗ್ಗೆ 6 ರಿಂದ ನವೆಂಬರ್ 16ರ ಬೆಳಿಗ್ಗೆ 6 ಗಂಟೆಯವರೆಗೆ ಚಾಮರಾಜನಗರ, ನಗರಸಭೆ ವ್ಯಾಪ್ತಿಯಲ್ಲಿ ಎಲ್ಲಾ ಬಗೆಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ದಾಸ್ತಾನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ.

ನ. 16ರಂದು ಜಿ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ನ. 16ರಂದು ಚಾ.ನಗರ ನಗರಸಭೆಯ ಸಾಮಾನ್ಯ ಸಭೆ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಸ್.ಎನ್. ರೇಣುಕಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ ನೀಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಮೇವು ಪೂರೈಕೆ ಕೆಲಸಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕೆಂದು ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಂಭುದಯಾಳ್ ಮೀನಾ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಡಿಯುವ ನೀರಿಗೆ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕಾದ ಹೊಣೆಗಾರಿಕೆ ಅಧಿಕಾರಿಗಳ ಮೇಲಿದೆ. ಬರ ಪರಿಹಾರ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನೀರು ನಿರ್ವಹಣೆಗೆ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ಲಭ್ಯವಿರುವ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಸೆಸ್ಕ್ ಅಧಿಕಾರಿಗಳು ವಿಳಂಬ ಮಾಡಬಾರದು. ಕಾಮಗಾರಿ ಪೂರ್ಣವಾಗತ್ತಿದ್ದಂತೆಯೇ ವಿದ್ಯುದೀಕರಣ ಕೆಲಸವನ್ನು ನಿರ್ವಹಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು ಎಂದು ತಿಳಿಸಿದರು.
ಮೇವು ಪರಿಸ್ಥಿತಿ ಬಗ್ಗೆ ವಿವರ ಪಡೆದ ಉಸ್ತುವಾರಿ ಕಾರ್ಯದರ್ಶಿ ಶಂಭುದಯಾಳ್ ಮೀನಾ ಅವರು ನೀರಾವರಿ ಸೌಲಭ್ಯ ಲಭ್ಯವಿರುವ ಕಡೆ ಮೇವಿನ ಬೀಜ ಕಿಟ್‍ಗಳನ್ನು ವಿತರಿಸಿ ಮೇವು ಬೆಳೆಯಲು ಉತ್ತೇಜಿಸಬೇಕು. ಜಿಲ್ಲೆಯಲ್ಲಿ ಇರುವ ಸರ್ಕಾರಿ ಫಾರಂಗಳಲ್ಲಿ ಮೇವು ಬೆಳೆಗೆ ಅಗತ್ಯ ಕ್ರಮ ವಹಿಸಬೇಕು. ಸಿಬ್ಬಂದಿ ಕೊರತೆ ಇದ್ದಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.
ಬೆಳೆ ಕಟಾವು ಪ್ರಯೋಗವನ್ನು ವ್ಯಾಪಕವಾಗಿ ಕೈಗೊಳ್ಳಬೇಕು. ಒಂದೆರಡು ದಿನದಲ್ಲಿಯೇ ಬೆಳೆ ಕಟಾವು ಪ್ರಯೋಗ ಕುರಿತ ವರದಿಯನ್ನು ಸಲ್ಲಿಸಬೇಕು ಎಂದು ಉಸ್ತುವಾರಿ ಕಾರ್ಯದರ್ಶಿ ನಿರ್ದೇಶನ ನೀಡಿದರು.
ವಸತಿ ಯೋಜನೆಗಳ ಬಗ್ಗೆ ಪ್ರಗತಿಯನ್ನು ಸ್ಥಳೀಯವಾಗಿ ಪರಿಶೀಲಿಸಬೇಕು. ಪಟ್ಟಣ ಪ್ರದೇಶದಲ್ಲಿಯೂ ಹೆಚ್ಚಿನ ಗುರಿ ಸಾಧನೆಗೆ ಕ್ರಮ ತೆಗೆದುಕೊಳ್ಳಬೇಕು. ಇನ್ನು ಕಾಮಗಾರಿ ಆರಂಭಿಸದೇ ಇರುವ ಫಲಾನುಭವಿಗಳನ್ನು ಕಂಡು ಸಮಸ್ಯೆಗಳನ್ನು ಆಲಿಸಬೇಕು. ನಿಗಧಿತ ಅವಧಿಯೊಳಗೆ ಮನೆ ಪೂರ್ಣಗೊಳಿಸಲು ಸೂಚಿಸಬೇಕು ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅನುದಾನದಡಿ ಕೈಗೊಳ್ಳಬೇಕಿರುವ ಕಲ್ಯಾಣ ಕಾರ್ಯಕ್ರಮಗಳ ಪ್ರಗತಿ ನಿರೀಕ್ಷಿತ ಅವಧಿಯೊಳಗೆ ಪೂರ್ಣವಾಗಬೇಕು. ಅನುದಾನದಡಿ ಅನುಷ್ಠಾನವಾಗಬೇಕಿರುವ ಕಾರ್ಯಕ್ರಮವನ್ನು ಚುರುಕಾಗಿ ಪ್ರಾರಂಭಿಸಿ ಸಾಧನೆ ಮಾಡಬೇಕೆಂದು ಸೂಚಿಸಿದರು.
ವಿವಿಧ ಇಲಾಖೆಗಳ ಯೋಜನೆ ಹಾಗೂ ಕಾರ್ಯಕ್ರಮಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಆರೋಗ್ಯ ಯೋಜನೆಗಳ ಸದುಪಯೋಗಕ್ಕೆ ಸಲಹೆ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ರಾಜ್ಯ ಸರ್ಕಾರ ಜನರ ಆರೋಗ್ಯ ಕಾಳಜಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಸಲಹೆ ಮಾಡಿದರು.
ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇಂದು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನರಿಗೆ ಹಮ್ಮಿಕೊಳ್ಳಲಾಗಿದ್ದ ವಿಶೇಷ ಆರೋಗ್ಯ ತಪಾಸಣ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರು ಶೇ.40ಕ್ಕಿಂತ ಹೆಚ್ಚು ಸಂಖ್ಯೆಯಲ್ಲಿ ವಾಸವಿರುವ ತಾಲ್ಲೂಕಿನ ಗ್ರಾಮಗಳಲ್ಲಿ ಈಗಾಗಲೇ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆದಿದೆ. ಜನರ ಆರೋಗ್ಯ ಹಿತದೃಷ್ಠಿಯಿಂದ ಸರ್ಕಾರ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿದೆ. ಇದರ ಸೌಲಭ್ಯವನ್ನು ಪಡೆಯಲು ಮುಂದಾಗಬೇಕು ಎಂದರು.
ಆರೋಗ್ಯ ಯೋಜನೆಯಡಿ ನಾನಾ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಮಾರಣಾಂತಿಕ ಕಾಯಿಲೆಗಳಿಗೂ ಉಚಿತವಾಗಿ ಚಿಕಿತ್ಸೆ ಔಷಧಿ ಉಪಚಾರವನ್ನು ಒದಗಿಸಲಾಗುತ್ತದೆ. ಸರ್ಕಾರ ಬಡಜನರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ವಿಧಾನಗಳಿಗೆ ಹೆಚ್ಚು ಸ್ಪಂದಿಸುತ್ತಿದೆ ಎಂದು ಸದಾಶಿವಮೂರ್ತಿ ಅವರು ತಿಳಿಸಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಸರ್ಕಾರ ಹೆಚ್ಚು ಅನುದಾನ ನೀಡುತ್ತಿದೆ. ಹಾಗೆಯೇ ಪರಿಶಿಷ್ಟರ ಆರೋಗ್ಯ ಸುಧಾರಣೆಗೂ ವಿಶೇಷ ಆದ್ಯತೆ ನೀಡಿ ಅವರಿಗೆ ಸಾಕಷ್ಟು ಆರೋಗ್ಯಪೂರಕ ಸೌಲಭ್ಯಗಳನ್ನು ನೀಡುತ್ತಿದೆ. ವಿಶೇಷ ಆರೋಗ್ಯ ಶಿಬಿರ ಆಯೋಜಿಸಿ ಗುರುತಿಸಲಾಗುವ ರೋಗ ಪರಿಹಾರಕ್ಕೆ ಔಷಧಿ ಆರೈಕೆ ಮಾಡುವ ಕಾರ್ಯಕ್ರಮಗಳನ್ನು ಆರೋಗ್ಯ ಇಲಾಖೆ ಮುಖಾಂತರ ಮಾಡುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಪರಿಶಿಷ್ಟರಿಗೆ ಹಾಗೂ ಬಿಪಿಎಲ್ ಕುಟುಂಬಕ್ಕೆ ಸೇರಿದ ಜನತೆಗೆ ನೀಡಲಾಗುತ್ತಿರುವ ಆರೋಗ್ಯ ಯೋಜನೆ ಕುರಿತು ವಿವರವಾಗಿ ಮಾಹಿತಿ ನೀಡಿದರು.
 ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾ ಸರ್ಜನ್ ಡಾ. ರಘುರಾಂ, ಇನ್ನಿತರ ಅಧಿಕಾರಿಗಳು, ತಾಲೂಕು ಆರೋಗ್ಯ ವೈದ್ಯಾಧಿಕಾರಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.




ಟಿಪ್ಪು ಸುಲ್ತಾನ್ ಜಯಂತಿ: ಹೂರಗಿನವರು ಪಾಲ್ಗೊಳ್ಳಲು ಅವಕಾಶವಿಲ್ಲ
ಚಾಮರಾಜನಗರ, ನ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ನವೆಂಬರ್ 15ರಂದು  ಚಾಮರಾಜನಗರ ಪಟ್ಟಣದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿರುವ ಹಜರತ್ ಟಿಪ್ಪುಸುಲ್ತಾನ್‍ರವರ ಜಯಂತಿ ಸಮಾರಂಭಕ್ಕೆ ಹೊರಗಿನವರು ಪಾಲ್ಗೊಳ್ಳಲು ಅವಕಾಶವಿರವುದಿಲ್ಲ. ಸ್ಥಳೀಯರು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರಾದ ಬಿ.ರಾಮು ಅವರು ತಿಳಿಸಿದ್ದಾರೆ.
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯ ಹಿತ ದೃಷ್ಠಿಯಿಂದ ನವೆಂಬರ್ 15ರ ಬೆಳಿಗ್ಗೆ 6 ರಿಂದÀ ಸಂಜೆ 6 ಗಂಟೆಯವರೆಗೆ ಚಾಮರಾಜನಗರ ಪಟ್ಟಣ ವ್ಯಾಪ್ತಿಯ 5 ಕಿ.ಮೀ ಸುತ್ತಳತೆಯಲ್ಲಿ ಕಾರ್ಯಕ್ರಮದ ಸ್ಥಳವಾದ ಪೇಟೆ ಪ್ರೈಮರಿ ಶಾಲಾ ಆವರಣ ಹೊರತುಪಡಿಸಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಆರ್‍ಪಿಸಿ ಕಲಂ 144 ರೀತ್ಯಾ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.  ನಗರದ ಹಾಗೂ ಜಿಲ್ಲಾ ಗಡಿಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ.ಹೊರಗಿನವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶವಿರವುದಿಲ್ಲ. ಸ್ಥಳೀಯರು ಮಾತ್ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು.
ಕಾನೂನು ಮತ್ತು ಸುವ್ಯವಸ್ಥೆಯ ಹಿತದೃಷ್ಠಿಯಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ರಾಮು ಅವರು ಮನವಿ ಮಾಡಿದ್ದಾರೆ.




ಟಿಪ್ಪು ಸುಲ್ತಾನ್ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು : ಆರ್. ಧ್ರುವನಾರಾಯಣ
ಚಾಮರಾಜನಗರ, ನ. 15 (ಕರ್ನಾಟಕ ವಾರ್ತೆ):- ಬ್ರಿಟಿಷರ ವಿರುದ್ಧ ಹೋರಾಡಿದ ರಾಜಮಹಾರಾಜರಲ್ಲೇ ಹಜರತ್ ಟಿಪ್ಪು ಸುಲ್ತಾನ್ ಅವರು ಅಗ್ರಗಣ್ಯರು ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಭಿಪ್ರಾಯಪಟ್ಟರು.
ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಟಿಪ್ಪುಸುಲ್ತಾನ್ ಅವರು ಬ್ರಿಟಿಷ್ ಆಡಳಿತದ ವಿರುದ್ಧ ಹೋರಾಡಿದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ಬ್ರಿಟಿಷರ ದುರಾಡಳಿತವನ್ನು ವಿರೋಧಿಸಿ ಪ್ರತಿಭಟಿಸಿದ ರಾಜರ ಪೈಕಿ ಟಿಪ್ಪುಸುಲ್ತಾನ್ ಅವರು ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಇಂತಹ ನಾಯಕನನ್ನು ಕೇವಲ ಒಂದು ವರ್ಗಕ್ಕೆ ಸೀಮಿತಗೊಳಿಸಿ ನೋಡುವ ಮನೋಭಾವನೆ ಬದಲಾಗಬೇಕು ಎಂದರು.
ಟಿಪ್ಪು ವಿದ್ಯಾವಂತರಾಗಿದ್ದು ಎಲ್ಲ ಭಾಷೆಯನ್ನು ಬಲ್ಲವರಾಗಿದ್ದರು. ಉತ್ತಮ ಆಡಳಿತವನ್ನು ಸಹ ನೀಡಿದರು. ವೀರ ಪರಾಕ್ರಮದಿಂದ ಮೈಸೂರು ಹುಲಿ ಎಂಬ ಹೆಸರು ಪಡೆದಿದ್ದಾರೆ. ಇದು ಈ ಭಾಗದ ಎಲ್ಲ ಜನರು ಹೆಮ್ಮೆ ಪಡುವ ವಿಷಯ ಎಂದು ಧ್ರುವನಾರಾಯಣ ಅಭಿಪ್ರಾಯಪಟ್ಟರು.
ಟಿಪ್ಪು ಜಯಂತಿಯನ್ನು ರಾಜ್ಯ ಸರ್ಕಾರ ಕಳೆದ ಸಾಲಿನಿಂದ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿದೆ. ಈ ಬಾರಿಯೂ ಎಲ್ಲೆಡೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುತ್ತಿದೆ. ಅಲ್ಪಸಂಖ್ಯಾತರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಿದೆ. ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣದಲ್ಲಿ ಅಲ್ಪಸಂಖ್ಯಾತರು ಅದರಲ್ಲೂ ವಿಶೇಷವಾಗಿ ಮುಸ್ಲಿಂ ಸಮುದಾಯದ ಪ್ರಮಾಣ ಕಡಿಮೆ ಸಂಖ್ಯೆಯಲ್ಲಿ ಇದೆ. ಹೀಗಾಗಿ ಶೈಕ್ಷಣಿಕವಾಗಿ ಮುಂದೆ ಬರಲು ಸಮುದಾಯದ ಹಿರಿಯರು, ಯುವ ಜನತೆ ಉತ್ತೇಜಿಸಬೇಕಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಟಿಪ್ಪು ಸುಲ್ತಾನ್ ಕುರಿತು ಮುಖ್ಯ ಉಪನ್ಯಾಸ ನೀಡಿದ ಇತಿಹಾಸ ತಜ್ಞರಾದ ತಲಕಾಡಿನ ಚಿಕ್ಕರಂಗೇಗೌಡ ಅವರು ದಲಿತರಿಗೆ, ರೈತರಿಗೆ ಮೊದಲ ಬಾರಿಗೆ ಭೂಒಡೆತನ ಹಕ್ಕು ಲಭಿಸಿದ್ದೇ ಟಿಪ್ಪು ಆಳ್ವಿಕೆಯಲ್ಲಿ. ಹಿಂದುಳಿದ ವರ್ಗದ ಜನರಿಗೆ ರೇಷ್ಮೆ ಬೆಳೆಯನ್ನು ಪರಿಚಯಿಸಿ ಬದುಕಿಗೆ ಆಸರೆಯಾದವರು ಟಿಪ್ಪು ಸುಲ್ತಾನ್ ಎಂದು ತಿಳಿಸಿದರು.
ಟಿಪ್ಪು ಹಿಂದು ವಿರೋಧಿಯಲ್ಲ. 1791ರಲ್ಲಿ ಶೃಂಗೇರಿ ದೇವಾಲಯದ ಮೇಲೆ ಪೇಶ್ವೆಗಳು ದಾಳಿ ಮಾಡಿದ ಸಂದರ್ಭದಲ್ಲಿ ಅವರನ್ನು ಹಿಮ್ಮೆಟ್ಟಿಸಿ ಶೃಂಗೇರಿ ಮಠಕ್ಕೆ ರಕ್ಷಣೆಯಾಗಿ ನಿಂತವರು ಟಿಪ್ಪುಸುಲ್ತಾನ್. ಕರ್ನಾಟಕ, ಕೇರಳ, ಆಂದ್ರ ಸೇರಿದಂತೆ ಎಲ್ಲ ಭಾಗದ ಜನರು ಟಿಪ್ಪುವಿನನ್ನು ನಮ್ಮವರೇ ಎಂದು ಪ್ರೀತಿಸುತ್ತಾರೆ. ಅವರ ಹೋರಾಟ, ಆಡಳಿತ, ಸಜ್ಜನಿಕೆಯೇ ಪ್ರೀತಿಗೆ ಪಾತ್ರರಾಗಲು ಕಾರಣವಾಗಿದೆ ಎಂದು ಚಿಕ್ಕರಂಗೇಗೌಡ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಟಿಪ್ಪು ಸುಲ್ತಾನ್ ಅವರು ರೈತಪರ ಚಿಂತನೆ ಉಳ್ಳವರಾಗಿದ್ದರು. ಅವರ ಆಳ್ವಿಕೆಯಲ್ಲಿ ಆದ ಉತ್ತಮ ಕಾರ್ಯಗಳನ್ನು ಸ್ಮರಿಸಬೇಕು. ಎಲ್ಲರ ಮನಸ್ಸನ್ನು ಗೆದ್ದಿದ್ದರು ಎಂಬುದನ್ನು ಅರಿಯಬೇಕಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯಯದ್ ರಫಿ ಮಾತನಾಡಿದರು.
ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷÀರಾದ ಎಸ್. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಬಿ, ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕರಾದ ನಾಗವೇಣಿ, ನಗರಸಭೆ ಸದಸ್ಯರು, ಸಮುದಾಯದ ಮುಖಂಡರು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ನ. 16ರಂದು ಜಿ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ನ. 15 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ನ. 16ರಂದು ಚಾ.ನಗರ ನಗರಸಭೆಯ ಸಾಮಾನ್ಯ ಸಭೆ
ಚಾಮರಾಜನಗರ, ನ. 15 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಸ್.ಎನ್. ರೇಣುಕಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ದಿಮೆ ಪರವಾನಗಿ ಪಡೆಯಲು ನಗರಸಭೆ ಸೂಚನೆ
ಚಾಮರಾಜನಗರ, ನ. 15 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣ ವ್ಯಾಪ್ತಿಯಲ್ಲಿ ಉದ್ದಿಮೆ ನಡೆಸುತ್ತಿರುವ ಎಲ್ಲರೂ ಕಡ್ಡಾಯವಾಗಿ ಪರವಾನಗಿ ಪಡೆಯಬೇಕು. ಈಗಾಗಲೇ ಪರವಾನಗಿ ಪಡೆದಿರುವವರು ಪ್ರಸಕ್ತ ಸಾಲಿಗೆ ನವೀಕರಿಸಿಕೊಳ್ಳಬೇಕೆಂದು ನಗರಸಭೆ ಸೂಚಿಸಿದೆ.
2016-17ನೇ ಸಾಲಿನಿಂದ ನಗರ ಸ್ಥಳೀಯ ಸಂಸ್ಥೆಗಳಿಂದ ಸರಳವಾಗಿ ಉದ್ದಿಮೆ ಪರವಾನಗಿ ನೀಡುವ ಉದ್ದೇಶದಿಂದ ಆನ್ ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಎಲ್ಲ ಉದ್ದಿಮೆದಾರರು ಆನ್ ಲೈನ್ ಮೂಲಕವೇ ಉದ್ದಿಮೆ ಪರವಾನಗಿಗಾಗಿ ಅರ್ಜಿ ಹಾಗೂ ದಾಖಲಾತಿಗಳನ್ನು ಸಲ್ಲಿಸಬೇಕು.
ಕರ್ನಾಟಕ ಪುರಸಭೆ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1978ರ ಪ್ರಕಾರ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಉದ್ದಿಮೆಗಳು ಕಡ್ಡಾಯವಾಗಿ ಪರವಾನಗಿ ಪಡೆಯಲೇಬೇಕಿದೆ. ಪರವಾನಗಿ ಪಡೆದಿರುವವರು ನವೀಕರಿಸಿಕೊಳ್ಳಬೇಕು. ಇಲ್ಲವಾದಲ್ಲಿ ಉದ್ದಿಮೆಗಳನ್ನು ಬಂದ್ ಮಾಡಿಸಿ ಕ್ರಮ ಜರುಗಿಸಲಾಗುವುದೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಗರದಲ್ಲಿ ಯಶಸ್ವಿಯಾಗಿ ನಡೆದ ಪಿಸಿಪಿಎನ್‍ಡಿಟಿ ಕಾರ್ಯಾಗಾರ
ಚಾಮರಾಜನಗರ,  ನ. 15 (ಕರ್ನಾಟಕ ವಾರ್ತೆ):- ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗರ್ಭಪೂರ್ವ ಮತ್ತು ಪÀ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನ ಅಧಿನಿಯಮ ಕುರಿತ ಜಿಲ್ಲಾಮಟ್ಟದ ಕಾರ್ಯಾಗಾರ ಇಂದು ನಗರದಲ್ಲಿ ನಡೆಯಿತು.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಸದಾಶಿವಮೂರ್ತಿ ಅವರು ಹೆಣ್ಣು ಹಾಗೂ ಗಂಡು ಮಕ್ಕಳನ್ನು ಸರಿಸಮಾನವಾಗಿ ನೋಡುವ ಮನೋಭಾವನೆ ರೂಢಿಸಿಕೊಳ್ಳಬೇಕು. ಸಮಾಜದಲ್ಲಿ ಇಂದು ಹೆಣ್ಣು ಮಕ್ಕಳು ಗಂಡುಮಕ್ಕಳಿಗಿಂತ ಶಿಕ್ಷಣ ಪ್ರಗತಿಯಲ್ಲಿ ಮುಂದಿದ್ದಾರೆ. ಹೆಣ್ಣು ಮಕ್ಕಳು ಅನೇಕ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ ಎಂದರು.
ಕೆಲ ವರ್ಗದಲ್ಲಿ ಹೆಣ್ಣು ಮಕ್ಕಳ ಬಗೆಗಿನ ಇರುವ ತಾರತಮ್ಯವನ್ನು ಹೋಗಲಾಡಿಸಲು ಅರಿವು ಮೂಡಿಸಬÉೀಕಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಹೆಚ್ಚು ಜಾಗೃತಿ ಉಂಟುಮಾಡಬೇಕಿದೆ. ಮಹಿಳೆಯರಿಗೂ ಇರುವ ಅವಕಾಶಗಳ ಬಗ್ಗೆ ತಿಳಿವಳಿಕೆ ನೀಡಬೇಕಿದೆ ಎಂದು ಸದಾಶಿವಮೂರ್ತಿ ಅಭಿಪ್ರಾಯಪಟ್ಟರು.
ಜಿಲ್ಲಾ ಸರ್ಜನ್ ಡಾ. ರಘುರಾಂ ಮಾತನಾಡಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ವಿಧಾನವು ಸದುದ್ದೇಶಕ್ಕೆ ಬಳಕೆಯಾಗಬೇಕು. ವೈಜ್ಞಾನಿಕವಾಗಿ ಆಗಿರುವ ಪ್ರಗತಿಯನ್ನು ದುರುಪಯೋಗ ಮಾಡಿಕೊಳ್ಳುವುದು ನಿಲ್ಲಬೇಕು. ಇದಕ್ಕಾಗಿಯೇ ಕಠಿಣ ಕಾಯಿದೆ ತರಲಾಗಿದೆ. ಇದರ ಪರಿಣಾಮಕಾರಿ ಅನುಷ್ಠಾನಕ್ಕೆ ಎಲ್ಲರೂ ಸಹಕರಿಸಬೇಕಿದೆ ಎಂದರು.
ಜಿಲ್ಲಾ ಮತ್ತು ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೈದ್ಯಾಧಿಕಾರಿಗಳಾದ ಡಾ. ನಾಗರಾಜು, ಡಾ. ರಾಜು, ಡಾ. ಬಿ.ಸಿ. ಜಗನ್ನಾಥ್, ಆರ್‍ಸಿಎಚ್ ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


ವಿಜ್ಞಾನ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 15 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣದ (ಹರದನಹಳ್ಳಿ ಕ್ಯಾಂಪಸ್) ಪರಿಶಿಷ್ಟ ವರ್ಗಗಳ ಇಲಾಖೆ ವ್ಯಾಪ್ತಿಯ ಕಿತ್ತೂರುರಾಣಿ ಚೆನ್ನಮ್ಮ ವಸತಿಶಾಲೆಯಲ್ಲಿ ಖಾಲಿ ಇರುವ ವಿಜ್ಞಾನ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನವೆಂಬರ್ 22ರೊಳಗೆ ವಸತಿ ಶಾಲೆಯ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9945374405 ಹಾಗೂ 9972433470 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ನ. 17ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ
ಚಾಮರಾಜನಗರ, ನ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 17 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ನಿಂಗಪ್ಪ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ತುಮಕೂರಿನ ಲಕ್ಷ್ಮಣದಾಸ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ನ. 17ರಂದು ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ
ಚಾಮರಾಜನಗರ, ನ. 16 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಭಕ್ತ ಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ನವೆಂಬರ್ 17ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಕನಕದಾಸರ ಭಾವಚಿತ್ರ ಮೆರವಣಿಗೆಗೆ ಚಾಲನೆ ದೊರೆಯಲಿದೆ.
ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವ ಪ್ರಸಾದ್ ಅವರು ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ನಗರಸಭೆಯ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ನಿಂಗಪ್ಪ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಅಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯ ವೇದಿಕೆಯಲ್ಲಿ  ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತರಾದ ತುಮಕೂರಿನ ಲಕ್ಷ್ಮಣದಾಸ್ ಮತ್ತು ತಂಡದವರಿಂದ ಕನಕದಾಸರ ಕೀರ್ತನೆ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನ. 17ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ನ. 16 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ನವೆಂಬರ್ 17ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಗುಂಡ್ಲುಪೇಟೆಗೆ ಆಗಮಿಸಿ ಸಾರ್ವಜನಿಕರನ್ನು ಭೇಟಿ ಮಾಡುವರು. ಸಂಜೆ 5.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


ನ. 22ರಂದು ತಾ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ನ. 16 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 22ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 20ರಂದು ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ
ಚಾಮರಾಜನಗರ, ನ. 16 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಕುರಿತ ಲಿಖಿತ ಪರೀಕ್ಷೆಯು ನವೆಂಬರ್ 20ರಂದು ನಡೆಯಲಿದೆ.
ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಹರಾಗಿರುವ ಅಭ್ಯರ್ಥಿಗಳು ಕರೆಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್ ಸೈಟ್ ತಿತಿತಿ.ಞsಠಿ.gov.iಟಿ ನಿಂದ ಪಡೆದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನ. 23ರಂದು ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಸಮಸ್ಯೆ ಕುರಿತ ಮನವಿ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ನ. 18 (ಕರ್ನಾಟಕ ವಾರ್ತೆ):- ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 23ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದ ರಾಮಕೃಷ್ಣಯ್ಯ ಮತ್ತು ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ ಎಂ. ಚಿಕ್ಕಮಹದೇವ ಅವರನ್ನು ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ.
ನಾಗರಿಕರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ವಿಷಯ ಸಮಸ್ಯೆಗಳನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರಾದ ರಾಮಕೃಷ್ಣಯ್ಯ (ಮೊ. 9902039341) ಹಾಗೂ ಎಂ. ಚಿಕ್ಕಮಹದೇವ (ಮೊ. 9986938573) ರವರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು (ಕೊಠಡಿ ಸಂಖ್ಯೆ 120) ಇಲ್ಲವೇ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಗುಂಡ್ಲುಪೇಟೆ : ವಿವಿಧ ಕೌಶಲ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 18 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆ ಪುರಸಭೆಯು ಡೇನಲ್ಮ್ ಯೋಜನೆಯಡಿ ವಿವಿಧ ಕೌಶಲ ತರಬೇತಿ ನೀಡಲಿದ್ದು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಎಸ್‍ಎಸ್‍ಎಲ್‍ಸಿ ತೇರ್ಗಡೆ ಅಥವಾ ಅನುತ್ತೀರ್ಣರಾದವರಿಗೆ ಕೆಎಸ್‍ಆರ್‍ಟಿಸಿ ಮೂಲಕ ಭಾರಿ ವಾಹನ ಚಾಲನೆ ತರಬೇತಿ, ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಉಳ್ಳವರಿಗೆ ಲಘುವಾಹನ ಚಾಲನೆ ತರಬೇತಿ ನೀಡಲಾಗುತ್ತದೆ. 5ನೇ ತರಗತಿ ವಿದ್ಯಾರ್ಹತೆ ಹೊಂದಿರುವವರಿಗೆ 4 ಚಕ್ರ ಮತ್ತು ದ್ವಿಚಕ್ರ ವಾಹನ ಆಟೋಮೊಟಿವ್ ಸರ್ವೀಸಿಂಗ್ ಮತ್ತು ಓವರ್ ಹೀಲಿಂಗ್ ತರಬೇತಿ, 8ನೇ ತರಗತಿ ವಿದ್ಯಾರ್ಹತೆ ಹೊಂದಿರುವವರಿಗೆ ವೆಲ್ಡಿಂಗ್, ದುರಸ್ತಿ ಮತ್ತು ನಿರ್ವಹಣೆ ಕುರಿತು ತರಬೇತಿ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಪುರಸಭಾ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ  ನವೆಂಬರ್ 20ರ ಒಳಗೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಚಾ.ನಗರ : ಡೇ ನಲ್ಮ್ ಯೋಜನೆಯಡಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 18 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯು ಡೀನ್ ದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ವಿವಿಧ ಕೌಶಲ ತರಬೇತಿ ನೀಡಲಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪಿಯುಸಿ ವಿದ್ಯಾರ್ಹತೆ ಹೊಂದಿರುವವರಿಗೆ ಅಕೌಂಟಿಂಗ್ ಮತ್ತು ಟ್ಯಾಲಿ, 10ನೇ ತರಗತಿ ವಿದ್ಯಾರ್ಹತೆ ಹೊಂದಿರುವವರಿಗೆ ಕಂಪ್ಯೂಟರ್ ಫಂಡಮೆಂಟಲ್, ಆಫೀಸ್ ಇಂಟರ್‍ನೆಟ್ ಹಾಗೂ ಡಿಟಿಪಿ ತರಬೇತಿ, ಟರ್ನರ್, ಮಿಲ್ಲರ್, ಬ್ಯುಟಿಷಿಯನ್ ತರಬೇತಿ ನೀಡಲಾಗುತ್ತದೆ. ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಅಥವ ಅನುತ್ತೀರ್ಣರಾದವರಿಗೆ ಕೆಎಸ್‍ಆರ್‍ಟಿಸಿ ಮೂಲಕ ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ. ಈ ತರಬೇತಿಗೆ ಎಲ್‍ಎಂವಿ ಆಗಿ 1 ವರ್ಷ ಪೂರೈಸಿರಬೇಕು. 8ನೇ ತರಗತಿ ವಿದ್ಯಾರ್ಹತೆ ಹೊಂದಿರುವವರಿಗೆ ಗಾರ್ಮೆಂಟ್ ಕನ್‍ಸ್ಟ್ರಕ್ಷನ್ ಟೆಕ್ನಿಕ್ಸ್, ವೆಲ್ಡಿಂಗ್, ಬೇಕರ್, ಪ್ರೋಸೆಸಡ್ ಫುಡ್ ಮೇಕಿಂಗ್, ಎಲೆಕ್ಟ್ರಾನಿಕ್ಸ್ ಮೇಂಟೆನೆನ್ಸ್ ಆಫ್ ಮೊಬೈಲ್ ಫೋನ್ ತರಬೇತಿ ನೀಡಲಾಗುತ್ತದೆ. ಐಟಿಐ ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಆಟೋಕ್ಯಾಡ್ ತರಬೇತಿ ಕೊಡಲಾಗುತ್ತದೆ.
5ನೇ ತರಗತಿ ವಿದ್ಯಾರ್ಹತೆ ಉಳ್ಳವರಿಗೆ ಗಾರ್ಮೆಂಟ್ ಪ್ಯಾಕರ್, ಐರನರ್, ಪುಷ್ಟಿಂಗ್ ಟೆಕ್ನಿಕ್, ಹ್ಯಾಂಡ್ ಎಂಬ್ರಾಯಿಡರಿ, ಜರ್ದೂಸಿ ವರ್ಕ್, ಮೇಷನ್, ಬೇಸಿಕ್ ಕಾರ್ಪೆಂಟರ್, ಬಾರ್ ಬೆಂಡರ್, ಪ್ಲಬಿಂಗ್ ಮತ್ತು ಸ್ಯಾನಿಟೇಷನ್ ತರಬೇತಿ ನೀಡಲಾಗುತ್ತದೆ.
ಅರ್ಜಿಗಳನ್ನು ನಗರಸಭಾ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ನವೆಂಬರ್ 25ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ನಲ್ಮ್ ಶಾಖೆಯ ಮಲ್ಲೇಶ್ ಅವರನ್ನು ಸಂಪರ್ಕಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರೇಗಾ ಅಡಿ ಕೆಲಸ ಪಡೆಯಲು ವಿಫಲರಾದ ಅರ್ಜಿದಾರರಿಗೆ ನಿರುದ್ಯೋಗ ಭತ್ಯೆ
ಚಾಮರಾಜನಗರ, ನ. 18 (ಕರ್ನಾಟಕ ವಾರ್ತೆ):- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಅವಕಾಶ ಕೇಳಿ ಪಡೆಯಲು ವಿಫಲರಾದ ಅರ್ಜಿದಾರರೊಬ್ಬರಿಗೆ 22400 ರೂ. ನಿರುದ್ಯೋಗ ಭತ್ಯೆ ಪಾವತಿಸುವಂತೆ ನರೇಗಾ ಒಂಬುಡ್ಸ್‍ಮನ್ ಅವರು ಆದೇಶಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಸಿ. ಬಸವಣ್ಣ ಎಂಬುವವರು ಮಾಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಕೇಳಿ ಶಿವಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಅವರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕಾರ್ಯದರ್ಶಿಯವರು ಉದ್ಯೋಗ ಅವಕಾಶ ಒದಗಿಸಲು ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ನರೇಗಾ ಕಾಯಿದೆ ಪ್ರಕಾರ ಉದ್ಯೋಗ ಅವಕಾಶ ಪಡೆಯಲು ಸಾಧ್ಯವಾಗದ ಸಿ. ಬಸವಣ್ಣ ಅವರಿಗೆ 22400 ರೂ. ನಿರುದ್ಯೋಗ ಭತ್ಯೆಯನ್ನು ಪಾವತಿಸುವಂತೆ ಒಂಬುಡ್ಸ್‍ಮನ್ ಆದೇಶಿಸಿದ್ದಾರೆ. ನಿರುದ್ಯೋಗ ಭತ್ಯೆ ಹಣವನ್ನು ಶಿವಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್. ಸಿದ್ದಯ್ಯ ಅವರಿಂದ ವಸೂಲಿ ಮಾಡಿ ಕರ್ನಾಟಕ ರಾಜ್ಯ ಉದ್ಯೋಗ ಖಾತರಿ ನಿಧಿಗೆ ಜಮಾ ಮಾಡುವಂತೆ ಆದೇಶ ನೀಡಿದ್ದಾರೆ.
ನ. 20ರಂದು ಪೋಲ್ ಸೆಟ್ ಪರೀಕ್ಷೆ : ನಿಷೇದಾಜ್ಞೆ
ಚಾಮರಾಜನಗರ, ನ. 18 (ಕರ್ನಾಟಕ ವಾರ್ತೆ):- ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್‍ಸ್ಟೇಬಲ್‍ಗಳ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಸಂಬಂಧ ನವೆಂಬರ್ 20ರಂದು ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಸುವ ಉದ್ದೇಶದಿಂದ ಅಂದು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶಿಸಲಾಗಿದೆ.
ನಿಷೇದಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗದವರಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ. ರಾಮು ಆದೇಶದಲ್ಲಿ ತಿಳಿಸಿದ್ದಾರೆ.

ನ. 19ರಂದು ಮಾವು ಪುನಶ್ಚೇತನ, ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಚಾಮರಾಜನಗರ, ನ. 18 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ವತಿಯಿಂದ ಮಾವು ಬೆಳೆಯಲ್ಲಿ ಹೆಚ್ಚು ಸಾಂದ್ರತೆ ಹಾಗೂ ಮಾವು ಮರಗಳ ಪುನಶ್ಚೇತನ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ನವೆಂಬರ್ 19ರಂದು ಬೆಳಿಗ್ಗೆ 10 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಬೂದಬಾಳುವಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಆರ್. ನರೇಂದ್ರ ಅವರು ಅಧ್ಯಕ್ಷತೆ ವಹಿಸುವರು.  ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ ಗೌರವಾನ್ಚಿತ ಉಪಸ್ಥಿತಿ ವಹಿಸುವರು.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಮದ ಅಧ್ಯಕ್ಷರಾದ ಎಂ. ಗೋಪಾಲಕೃಷ್ಣ ಅವರು ಕಿರುಹೊತ್ತಿಗೆ ಬಿಡುಗಡೆ ಮಾಡುವರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೃಷಿ ಮತ್ತು ಕೈಗಾರಿಕೆ ಸ್ಥಾಯಿಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಕೊಳ್ಳೇಗಾಲ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ರಾಜು, ಉಪಾಧ್ಯಕ್ಷರಾದ ಲತಾ ರಾಜಣ್ಣ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಮ್ಮ ಕೃಷ್ಣ, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾದ ರಾಘವೇಂದ್ರ ನಾಯ್ಡು, ಸಿಂಗನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಸ್. ಮಲ್ಲಯ್ಯ, ಉಪಾಧ್ಯಕ್ಷರಾದ ಮಲ್ಲೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕದಿರೇಗೌಡ, ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಜಿ.ಎಸ್. ಗೌಡರ್, ಎಚ್.ಸಿ. ಮೊರಬ್, ಮೊಹಮದ್ ಇಸ್ಮಾಯಿಲ್ ವಿಶೇಷ ಆಹ್ವಾನಿತಾಗಿ ಪಾಲ್ಗೊಳ್ಳುವರು.
ಬೆಂಗಳೂರಿನ ಲಾಲ್ ಬಾಗ್‍ನ ನಿವೃತ್ತ ಹೆಚ್ಚುವರಿ ನಿರ್ದೇಶಕರಾದ ಡಾ. ಎಸ್.ವಿ. ಹಿತ್ತಲಮನಿ, ಚಾಮರಾಜನಗರ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕರಾದ ಡಾ.ಸಿ. ದೊರೆಸ್ವಾಮಿ ತಾಂತ್ರಿಕ ಮಾಹಿತಿ ನೀಡುವರೆಂದು ಪ್ರಕಟಣೆ ತಿಳಿಸಿದೆ.

ಗುಂಡ್ಲುಪೇಟೆ : ಮನೆ ನಿರ್ಮಾಣಕ್ಕೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ನ. 21 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆ ಪುರಸಭೆಯು ಪ್ರತಿ ನಾಗರಿಕರಿಗೂ ಸೂರು ಒದಗಿಸುವ ಉದ್ದೇಶದೊಂದಿಗೆ ಮನೆಮನೆ ಸಮೀಕ್ಷೆ ನಡೆಸಿ ಕುಟುಂಬಗಳ ಪಟ್ಟಿಯನ್ನು ಪುರಸಭಾ ಕಚೇರಿಯ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿದೆ.
ಪ್ರತಿಯೊಬ್ಬರಿಗೂ ಸೂರು ಒದಗಿಸುವ ಉದ್ದೇಶದೊಂದಿಗೆ ಹೌಸಿಂಗ್ ಫಾರ್ ಆಲ್ ಅಭಿಯಾನವನ್ನು ಜಾರಿಗೊಳಿಸಿ ಮನೆ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತದೆ.
ವಸತಿ ರಹಿತರನ್ನು ಗುರುತಿಸಲು ಪುರಸಭೆ ವತಿಯಿಂದ ಮನೆಮನೆ ಸಮೀಕ್ಷೆ ಮಾಡಿ ಆನ್ ಲೈನ್‍ನಲ್ಲಿ ದಾಖಲು ಮಾಡಲಾಗಿದೆ. ಸಮೀಕ್ಷೆ ಮಾಡಿರುವ ಕುಟುಂಬಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ, ನಿವೇಶನ ಹೊಂದಿರುವ ಮತ್ತು ಹಳೆ ಮನೆಯನ್ನು ಕೆಡವಿ ಹೊಸದಾಗಿ ಕಟ್ಟಿಸಲು ಇಚ್ಚಿಸುವವರು ವಾರ್ಷಿಕ 3 ಲಕ್ಷಕ್ಕಿಂತ ಕಡಿಮೆ ಆದಾಯ ಇರುವ ಸರ್ಕಾರಿ ನೌಕರರು ಸಹ ನವೆಂಬರ್ 25ರೊಳಗೆ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸುವಂತೆ ಪುರಸಭೆ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಮಟ್ಟದ ಕನ್ನಡ ಜಾಗೃತ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕ
ಚಾಮರಾಜನಗರ, ನ. 21 (ಕರ್ನಾಟಕ ವಾರ್ತೆ):- ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಸರ್ಕಾರದ ಭಾಷಾ ನೀತಿ ಅನುಷ್ಠಾನದಲ್ಲಿ ಜನರು ಪಾಲ್ಗೊಳ್ಳುವಂತೆ ನೋಡಿಕೊಳ್ಳುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಜಿಲ್ಲಾ ಮಟ್ಟದ ಕನ್ನಡ ಜಾಗೃತ ಸಮಿತಿಗೆ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿದೆ.
ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರು ಹಾಗೂ ಸಾಹಿತಿ ಬಿ. ಮಹೇಶ ಹರವೆ, ನಗರದ ಪತ್ರಕರ್ತರಾದ ಡಿ ಸಿಲ್ವಾ, ಕಲಾವಿದರಾದ ವೆಂಕಟರಾಜು, ಗುಂಡ್ಲುಪೇಟೆಯ ನಾಟಕ ಕಲಾವಿದರಾದ ಬಿ.ಎಂ. ಸುರೇಶ್, ಚಾಮರಾಜನಗರ ತಾಲೂಕಿನ ದೊಡ್ಡರಾಯಪೇಟೆಯ ಮಹದೇವಮ್ಮ ಅವರು ಜಿಲ್ಲಾ ಮಟ್ಟದ ಜಾಗೃತಿ ಸಮಿತಿಗೆ ನೇಮಕವಾದ ಅಧಿಕಾರೇತರ ಸದಸ್ಯರಾಗಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದÉ.
ಎಚ್‍ಐವಿ ಸೋಂಕಿತ ಮಹಿಳೆಯರಿಗೆ ಸಾಲಸೌಲಭ್ಯ : ಅರ್ಜಿ ಆಹ್ವಾನ
ಚಾಮರಾಜನಗರ, ನ. 21 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2016-17ನೇ ಸಾಲಿಗೆ ಧನಶ್ರೀ ಯೋಜನೆಯಡಿ ಎಚ್‍ಐವಿ ಸೋಂಕಿತ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ನೀಡುವ ಸಾಲ ಹಾಗೂ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಿದೆ.
ಪ್ರತಿ ಫಲಾನುಭವಿಗೆ 40 ಸಾವಿರ ರೂ,ಗಳನ್ನು ಶೇ.4ರ ಬಡ್ಡಿ ದರದಲ್ಲಿ ನೇರಸಾಲ ಹಾಗೂ 10 ಸಾವಿರ ರೂ.ಗಳನ್ನು ಸಹಾಯಧನವಾಗಿ ನೀಡಲಾಗುತ್ತದೆ.
ಅರ್ಜಿದಾರರು 18 ರಿಂದ 60ರ ವಯೋಮಿತಿಯೊಳಗಿರಬೇಕು. ಎಚ್‍ಐವಿ ಸೋಂಕಿತ ಕುರಿತು ಹತ್ತಿರದ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿನ ಐಸಿಟಿಸಿ, ಪಿಪಿಟಿಸಿಟಿ ಕೇಂದ್ರದ ವೈದ್ಯಕೀಯ ವರದಿಯನ್ನು ಪಡೆದಿರಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಯಾವುದೇ ಆರ್ಥಿಕ ಸಂಸ್ಥೆ, ಬ್ಯಾಂಕುಗಳಲ್ಲಿ ಸಾಲ ಪಡೆದಿಲ್ಲವೆಂಬ ಬಗ್ಗೆ ದೃಢೀಕರಣ ಪತ್ರ ಲಗತ್ತಿಸಬೇಕು.
ಅರ್ಜಿಗಳನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 11ರೊಳಗೆ ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವ ಚಾಮರಾಜನಗರ, ಸಂತೆಮರಹಳ್ಳಿ, ಗುಂಡ್ಲುಪೇಟೆ, ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನ. 22ರಂದು ನಗರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ
ಚಾಮರಾಜನಗರ, ನ. 21 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ನವೆಂಬರ್ 22ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ಲೋಕ್ ಅದಾಲತ್ ಕಟ್ಟಡದಲ್ಲಿ ಆಯೋಜಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಟಿ.ಜೆ. ಸುರೇಶ್ ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಭೃಂಗೇಶ್, ಹಿರಿಯ ನ್ಯಾಯಾಧೀಶರಾದ ನಂದೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂ. ಸರ್ವೇಶ್ವರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.

ಅಡುಗೆ ಸಹಾಯಕರ ಹುದ್ದೆ ನೇಮಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಚಾಮರಾಜನಗರ, ನ. 21 (ಕರ್ನಾಟಕ ವಾರ್ತೆ):- ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 19 ಅಡುಗೆಯವರು ಹಾಗೂ 81 ಅಡುಗೆ ಸಹಾಯಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.
ಆನ್ ಲೈನ್‍ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಜಿ ಸಲ್ಲಿಕೆಗೆ ನವೆಂಬರ್ 19 ಕೊನೆಯ ದಿನಾಂಕವೆಂದು ನಿಗದಿ ಮಾಡಲಾಗಿತ್ತು. ಆದರೆ ಸರ್ಕಾರದ ಆದೇಶದ ಅನ್ವಯ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಿತಿತಿ.hಣಣಠಿ/ಛಿhಚಿmಡಿಚಿರಿಟಿಚಿgಚಿಡಿ.ಟಿiಛಿ.iಟಿ ವೆಬ್ ಸೈಟ್ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ. 22ರಂದು ಮಹದೇಶ್ವರ ಬೆಟ್ಟದಲ್ಲಿ ಗೋಲಕ ಹಣ ಎಣಿಕೆ
ಚಾಮರಾಜನಗರ, ನ. 21 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರಸ್ವಾಮಿ ದೇವಾಲಯದ ಗೋಲಕಗಳ ಹಣ ಎಣಿಕೆ ಕಾರ್ಯವು ನವೆಂಬರ್ 22ರಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಗೋಲಕಗಳನ್ನು ತೆರೆದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಎಣಿಕೆ ಕಾರ್ಯ ನಡೆಸಲಾಗುವುದೆಂದು ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನ. 29ರಂದು ಹಂಗಳದಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆ ತಾಲೂಕಿನ ಹಂಗಳದಲ್ಲಿ ನವೆಂಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ನಡೆಯಲಿದೆ.
ಅಂದು ನಡೆಯುವ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದಾಗಿದೆ. ನಾಗರಿಕರು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ. 23ರಂದು ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನವೆಂಬರ್ 23ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಗೆ ಗುಂಡ್ಲುಪೇಟೆ ತಾಲೂಕಿನ ಕೋಟೆಕೆರೆ ಗ್ರಾಮದ ರಾಮಕೃಷ್ಣಯ್ಯ ಮತ್ತು ಚಾಮರಾಜನಗರ ತಾಲೂಕಿನ ನಾಗವಳ್ಳಿ ಗ್ರಾಮದ ಎಂ. ಚಿಕ್ಕಮಹದೇವ ಅವರನ್ನು ನಾಮನಿರ್ದೇಶಿತ ಸದಸ್ಯರಾಗಿ ನೇಮಕ ಮಾಡಲಾಗಿದೆ.
ನಾಗರಿಕರು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು, ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ವಿಷಯ ಸಮಸ್ಯೆಗಳನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಸಮುದಾಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ತೊಂದರೆಗಳು ಇದ್ದಲ್ಲಿ ಸಮಿತಿಯ ಸದಸ್ಯರಾದ ರಾಮಕೃಷ್ಣಯ್ಯ (ಮೊ. 9902039341) ಹಾಗೂ ಎಂ. ಚಿಕ್ಕಮಹದೇವ (ಮೊ. 9986938573) ರವರ ಮುಖಾಂತರ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು (ಕೊಠಡಿ ಸಂಖ್ಯೆ 120) ಇಲ್ಲವೇ ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿ ಸಭೆಯ ಸದಸ್ಯ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಮಕ್ಕಳು ದೇಶದ ಅಮೂಲ್ಯ ಸಂಪತ್ತು : ಜಿಲ್ಲಾ ನ್ಯಾಯಾಧೀಶರ ಅಭಿಮತ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಮಕ್ಕಳು ದೇಶದ ಅಮೂಲ್ಯ ಸಂಪತ್ತು. ಮಕ್ಕಳನ್ನು ರಾಷ್ಟ್ರದ ಆಸ್ತಿಯನ್ನಾಗಿ ಮಾಡಬೇಕೇ ಹೊರತು ಹೊರೆಯನ್ನಾಗಿ ಮಾಡಬಾರದೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಸಲಹೆ ಮಾಡಿದರು.
ನಗರದ ಜಿಲ್ಲಾ ನ್ಯಾಯಾಲಯ ಆವರಣದ ಲೋಕ್ ಅದಾಲತ್ ಭವನದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಮಕ್ಕಳ ರಕ್ಷಣಾ ಘಟಕ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಪ್ರಗತಿಗೆ ನೈಸರ್ಗಿಕ ಸಂಪತ್ತು ಎಷ್ಟು ಮುಖ್ಯವೋ ಮಾನವನ ಸಂಪತ್ತೂ ಕೂಡ ಅಷ್ಟೇ ಪ್ರಮುಖವಾಗಿದೆ. ಇಂದಿನ ಮಕ್ಕಳು ನಾಳಿನ ಪ್ರಜೆಗಳಾಗಲಿದ್ದಾರೆ. ಈ ಮಕ್ಕಳು ದೇಶದ ಸಂಪತ್ತಾಗಬೇಕು ಹೊರತು ಹೊರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಮಾನವ ಸಂಪತ್ತು ಸದ್ಭಳಕೆ ಮಾಡಿಕೊಂಡರೆ ರಾಷ್ಟ್ರ ಪ್ರಗತಿ ಪಥದತ್ತ ಸಾಗಲಿದೆ. ದೇಶದ ಜನಸಂಖ್ಯೆಯಲ್ಲಿ ಮೂರನೇ ಒಂದು ಭಾಗ ಮಕ್ಕಳೇ ಇದ್ದಾರೆ. ಇವರ ಭವಿಷ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದೆ. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಗಮನ ನೀಡಬೇಕಿದೆ ಎಂದರು.
ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಹೆಚ್ಚು ಆದ್ಯತೆ ಕೊಡಬೇಕಿದೆ. ಮಕ್ಕಳು ಹಾಗೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಡೆಯುತ್ತಿದೆ. ಬಾಲ್ಯ ವಿವಾಹ, ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಮಾರಕವಾಗಿದೆ. ಶೈಕ್ಷಣಕವಾಗಿಯೂ ಮಕ್ಕಳÀು ವಂಚಿತರಾಗುತ್ತಿದ್ದಾರೆ. ಸಂವಿಧಾನದಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿಯೇ ವಿಶೇಷ ಸವಲತ್ತು ನೀಡಲಾಗಿದೆ. ಮಕ್ಕಳ ಮೇಲಿನ ಶೋಷಣೆ ತಡೆಗೆ ಕಾಯಿದೆಗಳು ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಮಕ್ಕಳ ರಕ್ಷಣೆಗೆ ಮುಂದಾಗಬೇಕಿದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಮಕ್ಕಳು ಶ್ರದ್ಧೆ, ಸತತ ಪರಿಶ್ರಮದಿಂದ ಮೇಲೆ ಬರಬೇಕು. ನಕಾರಾತ್ಮಕ ದೋರಣೆಯನ್ನು ಬಿಟ್ಟು ಒಳ್ಳೆಯ ಚಿಂತನೆ ಮಾಡಬೇಕು. ದೃಢ ನಿರ್ಧಾರ, ಜ್ಞಾನದಿಂದ ಸಮಾಜದಲ್ಲಿ ಒಳ್ಳೆಯ ಸ್ಥಾನ ಪಡೆಯಬಹುದು. ಹೀಗಾಗಿ ಉತ್ಸಾಹದಿಂದ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಜಿಲ್ಲಾ ನ್ಯಾಯಾಧೀಶರು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಭೃಂಗೇಶ್ ಅವರು ಮಾತನಾಡಿ 14 ವರ್ಷಕ್ಕಿಂದ ಕೆಳ ವಯಸ್ಸಿನ ಮಕ್ಕಳು ದುಡಿಮೆ ಮಾಡುವಂತಿಲ್ಲ. ಅಪಾಯಕಾರಿ ಉದ್ದಿಮೆ, ಅಂಗಡಿ, ಹೊಟೆಲ್‍ಗಳಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವುದನ್ನು ತಪ್ಪಿಸುವ ಸಲುವಾಗಿಯೇ ಬಾಲಕಾರ್ಮಿಕ ನಿಷೇಧ ಪದ್ಧತಿ ಜಾರಿಗೆ ತರಲಾಗಿದೆ. ಆದಾಗ್ಯೂ ನಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ಮಕ್ಕಳನ್ನು ದುಡಿಮೆಗೆ ದೂಡಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಮಕ್ಕಳಿಗೆ ಪುನರ್ವಸತಿ ಕಲ್ಪಿಸಲು ನೆರವಾಗಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಟಿ.ಜೆ. ಸುರೇಶ್ ಅವರು ಮಕ್ಕಳ ಮನೋಭಾವಕ್ಕೆ ಮನೆಯ ಪರಿಸರವೇ ಕಾರಣವಾಗಿರುತ್ತದೆ. ಮಕ್ಕಳ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಯು ಮನೆಯ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿರುತ್ತದೆ. ಹೀಗಾಗಿ ಪೋಷಕರಿಗೆ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪುಗೊಳಿಸುವ ವಾತಾವರಣವನ್ನು ಮನೆಯಲ್ಲಿ ನಿರ್ಮಾಣ ಮಾಡುವ ಹೊಣೆಗಾರಿಕೆ ಇದೆ ಎಂದರು.
ಹಿರಿಯ ನ್ಯಾಯಾಧೀಶರಾದ ನಂದೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಎಂ. ಸರ್ವೇಶ್ವರ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಾಧಿಕಾರಿ ರಶ್ಮಿ, ರಾಮಕೃಷ್ಣಯ್ಯ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ನ. 23ರಂದು ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರ ಜಿಲ್ಲಾ ಪ್ರವಾಸ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರಾದ ಟಿ.ಪಿ. ರಮೇಶ್ ಅವರು ನವೆಂಬರ್ 23ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದು ಮಂಡಳಿಯ ಶಾಖೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸುವರು.
ಮಧ್ಯಾಹ್ನ 3 ಗಂಟೆಗೆ ಕೊಳ್ಳೇಗಾಲ ಪಟ್ಟಣದ ಮೈಸೂರು ರಸ್ತೆಯ ರೇಷ್ಮೆ ವಿನಿಮಯ ಕೇಂದ್ರದಲ್ಲಿರುವ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಶಾಖೆಗೆ ಭೇಟಿ ನೀಡುವರು. ಸಂಜೆ 4.30 ಗಂಟೆಗೆ ಚಾಮರಾಜನಗರದ ರೇಷ್ಮೆ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿರುವ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯ ಶಾಖೆಗೆ ಭೇಟಿ ನೀಡುವರು.
ಭೇಟಿಯ ಸಂದರ್ಭದಲ್ಲಿ ಗ್ರಾಹಕರು, ಹುರಿಕಾರರು ಹಾಗೂ ನೂಲು ಬಿಚ್ಚಾಣಿಕೆದಾರರೊಂದಿಗೆ ಸಮಾಲೋಚನೆ ನಡೆಸುವರು ಎಂದು ಅಧ್ಯಕ್ಷರ ಆಪ್ತ ಸಹಾಯಕರು ತಿಳಿಸಿದ್ದಾರೆ.

ಆಧಾರ್ ಸಂಖ್ಯೆ ಸಲ್ಲಿಸಲು ಪಿಂಚಣಿ ಫಲಾನುಭವಿಗಳಿಗೆ ಸೂಚನೆ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಕಾರ್ಡ್ ಸಂಖ್ಯೆಯನ್ನು ನವೆಂಬರ್ 30ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಾದ ವೃದ್ದಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನ, ಸಂಧ್ಯಾ ಸುರಕ್ಷಾ, ಮನÀಸ್ವಿನಿ, ಮೈತ್ರಿ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಯಾ ತಾಲೂಕು ಅಥವಾ ಹೋಬಳಿಯ ನಾಡಕಚೇರಿಯಲ್ಲಿ ಆಧಾರ್ ಕಾರ್ಡ್ ಸಂಖ್ಯೆಯನ್ನು ನವೆಂಬರ್ 30ರೊಳಗೆ ಕಡ್ಡಾಯವಾಗಿ ಸಲ್ಲಿಸಬೇಕು. ತಪ್ಪಿದಲ್ಲಿ ಡಿಸೆಂಬರ್ 1ರಿಂದ ಫಲಾನುಭವಿಗಳ ಮಾಸಿಕ ಪಿಂಚಣಿಯನ್ನು ಸ್ಥಗಿತಗೊಳಿಸಲಾಗುವುದೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÀÉ.




ನ. 28ರಂದು ವಿಶೇಷಚೇತನರ ಕುಂದುಕೊರತೆ ಸಭೆ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ವಿಶೇಷಚೇತನರ ಕುಂದುಕೊರತೆ ಸಭೆಯು ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಹಸೀಲ್ದಾರ್ ಕಚೇರಿಯಲ್ಲಿ ನಡೆಯಲಿದೆ.
ಕುಂದುಕೊರತೆಗಳಿದ್ದಲ್ಲಿ ಸಂಬಂಧಪಟ್ಟ ಅರ್ಜಿಗಳನ್ನು ಅಂದಿನ ಸಭೆಯಲ್ಲಿ ತಹಸೀಲ್ದಾರ್ ಸಮ್ಮುಖದಲ್ಲಿಯೇ ಸಲ್ಲಿಸಬಹುದಾಗಿದೆ. ತಾಲೂಕಿನ ವಿಶೇಷ ಚೇತನರು ಸಭೆಯ ಸದುಪಯೋಗ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ರಾಜೇಶ್ – ಮೊ. 8105720709, ಕಚೇರಿ ಸಂಖ್ಯೆ 08226-222603 ಅಥವಾ 223688 ಸಂಪರ್ಕಿಸುವಂತೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಣ ದುರುಪಯೋಗ : ಪಿಡಿಓ ಅಮಾನತು
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಮಾರ್ಗಸೂಚಿ ಪಾಲಿಸದೇ ಗ್ರಾಮ ವಿಕಾಸ ಯೋಜನೆ ಹಣವನ್ನು ದುರುಪಯೋಗಪಡಿಸಿಕೊಂಡ ಕೊಳ್ಳೇಗಾಲ ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.
ಶಿವಪ್ಪನಾಗನಾಥ್ ಅಮಾನತ್ತುಗೊಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ. ಮೂಲ ಸತ್ತೇಗಾಲ ಗ್ರಾಮ ಪಂಚಾಯಿತಿಯ ಅಧಿಕಾರಿಯಾಗಿದ್ದ ಇವರು ಮೀಣ್ಯಂ ಗ್ರಾಮ ಪಂಚಾಯಿತಿಗೆ ನಿಯೋಜನೆಗೊಂಡಿದ್ದರು. ಗ್ರಾಮ ವಿಕಾಸ ಯೋಜನೆಯ ಮಾರ್ಗಸೂಚಿ, ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಅನ್ವಯ ದಾಖಲೆಗಳನ್ನು ನಿರ್ವಹಿಸದೆ ಇಚ್ಚಾನುಸಾರ ಚೆಕ್ಕುಗಳ ಮೂಲಕ ಹಣ ಪಾವತಿಸಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಶಿವಪ್ಪನಾಗನಾಥ್ ಅವರನ್ನು ಅಮಾನತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ನ. 28ರಂದು ನಗರದಲ್ಲಿ ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸಾ ಶಿಬಿರ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಆರೋಗ್ಯ ಇಲಾಖೆಯು ತಾಲೂಕು ಮಟ್ಟದಲ್ಲಿ ನೋಸ್ಕಾಲ್ ಪೆಲ್ ವ್ಯಾಸೆಕ್ಟಮಿ ಸಪ್ತಾಹವನ್ನು  ಆಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 28ರಂದು ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೋಸ್ಕಾಲ್ ಪೆಲ್ ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಿದೆ.
ಪುರುಷರೂ ವ್ಯಾಸೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಮಾಡಿಸಿಕೊಳ್ಳಬಹುದು. ವ್ಯಾಸೆಕ್ಟಮಿಯು ಸುಲಭ, ಸರಳ ಹಾಗೂ ಅಪಾಯವಲ್ಲದ ಶಸ್ತ್ರಚಿಕಿತ್ಸೆಯಾಗಿದೆ. ಗಾಯ ಹೊಲಿಗೆ ಇಲ್ಲದ ಸುಧಾರಿತ ಚಿಕಿತ್ಸೆಯಾಗಿದೆ. ಈ ಚಿಕಿತ್ಸೆಗೆ ಒಳಗಾದವರು ಆಸ್ಪತ್ರೆಯಲ್ಲಿ ಒಂದು ಗಂಟೆಯ ವಿಶ್ರಾಂತಿ ನಂತರ ತೆರಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಆರೋಗ್ಯ ಕೇಂದ್ರ ಸಂಪರ್ಕಿಸುವಂತೆ ತಾಲೂಕು ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರಿಸರ ಮಿತ್ರ ಶಾಲೆ ಪ್ರಶಸ್ತಿಗೆ ನೋಂದಣಿ ಆಹ್ವಾನ

ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಸಕ್ತ ಸಾಲಿನಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಜಿಲ್ಲೆಯ ಸರ್ಕಾರಿ ಖಾಸಗಿ ಕಿರಿಯ ಹಿರಿಯ ಮತ್ತು ಪ್ರೌಢಶಾಲೆಗಳು ಸ್ಪರ್ಧೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಾಡಾಗಿದೆ. ಪರಿಸರ ಪೂರಕ ಜೀವನ ಹಾಗೂ ಮಾಲಿನ್ಯ ಕುರಿತು ಶಾಲಾ ಮಕ್ಕಳಲ್ಲಿ ಅರಿವು ಮೂಡಿಸಿ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೊದಲು ಶಾಲೆಗಳನ್ನು ಸ್ಪರ್ಧೆಗೆ ಆಹ್ವಾನಿಸಿ ನೋಂದಣಿ ಮಾಡಿಕೊಳ್ಳಲಾಗುತ್ತದೆ. ಭಾಗವಹಿಸುವ ಶಾಲೆಗಳ ಪಟ್ಟಿಯನ್ನು ಪಡೆದು ಆ ಶಾಲೆಗಳಿಗೆ ಸಂವಾದ ಏರ್ಪಡಿಸಿ ಮಾಹಿತಿ ನೀಡಿ ಮಾರ್ಗದರ್ಶಿ ಪುಸ್ತಕ ಮತ್ತು ಪ್ರಶ್ನಾವಳಿಯನ್ನು ನೀಡಲಾಗುತ್ತದೆ. ಶಾಲೆಗಳು ಮಾರ್ಗದರ್ಶಿ ಪುಸ್ತಕ ಅಂಶಗಳ ಆಧಾರದಲ್ಲಿ ಶಾಲೆಗಳಲ್ಲಿ ಚಟುವಟಿಕೆಗಳನ್ನು ಅಳವಡಿಸಲು ಅವಕಾಶ ಕೊಡಲಾಗುತ್ತದೆ. ಮೌಲ್ಯಮಾಪನದಲ್ಲಿ ತೊಡಗಿಸಿಕೊಳ್ಳಲಾಗುತ್ತದೆ. ಸ್ವಯಂ ಮೌಲ್ಯ ಮಾಪನ ಪ್ರಶ್ನಾವಳಿಯ ವರದಿ ಆಧಾರದ ಮೇಲೆ ಶಾಲೆಗಳನ್ನು ಆಯ್ಕೆ ಮಾಡಲಾಗುತ್ತದೆ. ತಜ್ಞರ ತಂಡವು ಭೇಟಿ ನೀಡಿ 21 ಶಾಲೆಗಳನ್ನು ಆಯ್ಕೆ ಮಾಡಲಿದೆ.
ಪ್ರಥಮ ಬಹುಮಾನವಾಗಿ 30 ಸಾವಿರ ನಗದು ಜತೆ ಪರಿಸರ ಮಿತ್ರ ಶಾಲೆ ಪ್ರಮಾಣಪತ್ರ ಲಭಿಸಲಿದೆ. ಎರಡನೇ ಬಹುಮಾನವಾಗಿ ಹತ್ತು ಶಾಲೆಗಳಿಗೆ ತಲಾ 5 ಸಾವಿರ ರೂ. ಹಾಗೂ ಹಸಿರು ಶಾಲೆ ಪ್ರಮಾಣಪತ್ರ ನೀಡಲಾಗುತ್ತದೆ. ತೃತೀಯ ಬಹುಮಾನವಾಗಿ 10 ಶಾಲೆಗಳಿಗೆ ತಲಾ 4 ಸಾವಿರ ರೂ. ಹಾಗೂ ಹಳದಿ ಶಾಲೆ ಪ್ರಮಾಣಪತ್ರ ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಶಾಲಾ ಮುಖ್ಯಸ್ಥರು ನಗರದ ವಾಣಿಯಾರ್ ಬೀದಿಯ ಎಸ್‍ಪಿಎಸ್ ಕಾಂಪ್ಲೆಕ್ಸ್ ನಲ್ಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಅವರಿಗೆ ಅಂಚೆ ಮೂಲಕ ಶಾಲಾ ಮುಖ್ಯಸ್ಥರ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಇನ್ನಿತರ ವಿವರಗಳೊಂದಿಗೆ ಪತ್ರ ಬರೆದು ನೊಂದಾಯಿಸಿಕೊಳ್ಳಬೇಕು.
ಇ ಮೇಲ್, ಎಸ್‍ಎಂಎಸ್ ಅಥವಾ ದೂರವಾಣಿ ಮೂಲಕವೂ ಸ್ಪರ್ಧೆಗೆ ನೊಂದಾಯಿಸಿಕೊಳ್ಳಬಹುದು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಿ.ಎನ್. ಶಿವಶಂಕರ್ - ದೂ.ಸಂ. 9449179383, ಪಿ.ಕೆ. ಉಮಾಶಂಕರ್, ಉಪ ಪರಿಸರಾಧಿಕಾರಿ – ದೂ.ಸಂ. 9448160267, ಇ ಮೇಲ್ ಛಿhm@ಞsಠಿಛಿb.gov.iಟಿ ಕಚೇರಿ ದೂ.ಸಂಖ್ಯೆ 08226-223846ನ್ನು ಸಂಪರ್ಕಿಸಿ ನೊಂದಾಯಿಸಿಕೊಳ್ಳಬಹುದು.
ಸ್ಪರ್ಧೆಗೆ ಒಪ್ಪಿಗೆ ನೊಂದಾಯಿಸಲು ನವೆಂಬರ್ 30 ಕಡೆಯ ದಿನವಾಗಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಟಣೆ ತಿಳಿಸಿದೆ.

ಅಡುಗೆ ಸಹಾಯಕರು, ರಾತ್ರಿ ಕಾವಲುಗಾರರ ಹುದ್ದೆ ನೇಮಕ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಚಾಮರಾಜನಗರ, ನ. 22 (ಕರ್ನಾಟಕ ವಾರ್ತೆ):- ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 31 ಅಡುಗೆ ಸಹಾಯಕರು ಹಾಗೂ 26 ರಾತ್ರಿ ಕಾವಲುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























































No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು