Saturday, 10 December 2016

16-10-2016 ರಿಂದ 31-10-2016 ವರೆಗಿನ ಸುದ್ದಿಗಳು

ಅ. 16ರಂದು ನಗರದಲ್ಲಿ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ
ಚಾಮರಾಜನಗರ, ಅ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ದಕ್ಷಿಣ ಪ್ರಾದೇಶಿಕ ಕೇಂದ್ರ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಸತ್ತಿ ರಸ್ತೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ಅಕ್ಟೋಬರ್ 16ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲೂಕಿನ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್. ವಿ. ಚಂದ್ರು, ನಗರಸಭೆಯ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇನ್ಸ್ಟಿಟೂಟ್ ಫಾರ್ ಪರ್ಸನ್ಸ್ ವಿತ್ ಪಿಸಿಕಲ್ ಡಿಸೆಬಿಲಿಟೀಸ್‍ನ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ. ಪಾಂಡಿಯನ್ ಗೌರವಾನ್ವಿತ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಅದ್ದೂರಿಯಾಗಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ
ಚಾಮರಾಜನಗರ, ಅ. 15 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿಂದು ಅದ್ದೂರಿಯಾಗಿ ಆಚರಿಸಲಾಯಿತು.
ಮೊದಲಿಗೆ ನಗರದ ಪ್ರವಾಸಿ ಮಂದಿರದಲ್ಲಿ ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್ ಮಹದೇವಪ್ರಸಾದ್‍ರವರು ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಬಳಿಕ ವಿವಿಧ ಜಾನಪದ ಕಲಾ ತಂಡಗಳೊಡನೆ ಸಾಗಿದ ಮೆರವಣಿಗೆ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಅಂತಿಮವಾಗಿ ಸಮಾರಂಭ ಸ್ಥಳವಾದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಸಮಾವೇಶಗೊಂಡಿತು.
ವಾಲ್ಮೀಕಿ ಭವನದಲ್ಲಿ ನಡೆದ ವೇಧಿಕೆ ಸಮಾರಂಭವನ್ನು ಉದ್ಘಾಟಿಸಿದ ಲೋಕಸಭಾ ಸದಸ್ಯರಾದ ಆರ್.ಧ್ರುವ ನಾರಾಯಣ ಮಾತನಾಡಿ ಶ್ರೇಷ್ಟ ಕೃತಿ ರಾಮಾಯಣ ರಚಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಇಡಿ ದೇಶಾದ್ಯಂತ ಆಚರಿಸಲಾಗುತ್ತಿದೆ. ಕರ್ನಾಟಕ ರಾಜ್ಯವು ಸೇರಿದಂತೆ ಉತ್ತರ ಪ್ರದೇಶ ಪಂಜಾಬ್ ಇನ್ನಿತರೆಡೆ ಶ್ರದ್ಧಾ ಭಕ್ತಿಯಿಂದ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ವಾಲ್ಮೀಕಿ ಅವರ ರಚಿಸಿದ ರಾಮಾಯಣದ ರಾಮರಾಜ್ಯದ ಪರಿಕಲ್ಪನೆಯನ್ನು ಆದರ್ಶವಾಗಿಟ್ಟು ಕೊಂಡು ಬದುಕು ಸಾಗಿಸಬೇಕಿದೆ. ಗಾಂಧೀಜಿ ಅವರ ಆಶಯವು ಕೂಡ ರಾಮರಾಜ್ಯದ ಕಲ್ಪನೆಯಾಗಿತ್ತು ಎಂದು ಧ್ರುವ ನಾರಾಯಣ ತಿಳಿಸಿದರು.
ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಕಲ್ಯಾಣಕ್ಕೆ 20 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ಹಲವಾರು ಯೋಜನೆ ಜಾರಿಗೆ ತಂದು ಅನುಷ್ಟಾನ ಮಾಡುತ್ತಿದೆ. ಈ ಸೌಲಭ್ಯಗಳ ಪ್ರಯೋಜನ ಪಡೆದು ಪರಿಶಿಷ್ಟ ವರ್ಗಗಳ ಸಮುದಾಯ ಆರ್ಥಿಕವಾಗಿ ಮುಂದೆ ಬರಬೇಕೆಂದು ಧ್ರುವ ನಾರಾಯಣ ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿರವರು ವಾಲ್ಮೀಕಿ ರಾಮಾಯಣ ಹಲವಾರು ಮಹತ್ವದ ಹಾಗೂ ಉದಾತ್ತ ಧ್ಯೇಯ ಉಳ್ಳ ಸಂದೇಶ ನೀಡಿದೆ. ರಾಮರಾಜ್ಯದ ಆಶಯವನ್ನು ಬಿತ್ತಿದೆ. ಇಂತಹ ಮೇರು ಕೃತಿ ರಚಿಸಿದ  ವಾಲ್ಮೀಕಿ ಅವರ ಜಯಂತಿಯನ್ನು ಯಶಸ್ವಿಯಾಗಿ ಜಿಲ್ಲಾ ಕೇಂದ್ರದಲ್ಲಿ ಆಚರಿಸಲು ಕಾರಣರಾದ ಸಮುದಾಯ ಪ್ರತಿನಿಧಿ, ಎಲ್ಲಾ ನಾಗರಿಕರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಮಾತನಾಡಿ ಶಿಕ್ಷಣಕ್ಕೆ ಆಧ್ಯತೆ ನೀಡಬೇಕು ಶಿಕ್ಷಣ ಪಡೆದು ಉತ್ತಮ ಸ್ಥಾನಮಾನ ಹುದ್ದೆಗಳನ್ನು ಪಡೆದು ಉನ್ನತ ಪ್ರಜೆಗಳಾಗಿ ರೂಪು ಗೊಳ್ಳಬೇಕು ಪರಿಶಿಷ್ಟ ವರ್ಗದ ಕಲ್ಯಾಣಕ್ಕೆ ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕೆಂದರು.
ಮೈಸೂರಿನ ಪ್ರಗತಿಪರ ಚಿಂತಕರಾದ ಡಾ.ಮ.ಪು.ಪೂರ್ಣಾನಂದ ಮುಖ್ಯಭಾಷಣ ಮಾಡಿದರು.
ಇದೇ ವೇಳೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವತಿಯಿಂದ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಮೆರವಣಿಗೆ ವೇಳೆ ಕಲಾ ಪ್ರದರ್ಶನ ನೀಡುತ್ತಿದ್ದು ಹಠಾತ್ ಅಸ್ವಸ್ಥರಾಗಿ ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ ಗೊರವರ ಕುಣಿತ ಕಲಾವಿದರಾದ ಗಿರಿಗೌಡ ಅವರಿಗೆ 3 ನಿಮಿಷಗಳ ಮೌನ ಆಚರಿಸುವ ಮೂಲಕ ಗೌರವ ಸಲ್ಲಿಸಲಾಯಿತು.
ನಗರ ಸಭೆ ಅದ್ಯಕ್ಷರಾದ ಎಸ್.ಎನ್..ರೇಣುಕಾ, ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಬಸವರಾಜು, ತಾಲ್ಲೂಕುಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು ಉಪಾದ್ಯಕ್ಷರಾದ ಪಿ.ಎನ್.ದಯಾನಿಧಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫಿ, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ.ಬೊಮ್ಮಯ್ಯ, ಅರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾಪಾಟಿ,  ಮುಖಂಡರಾದ ಸೋಮನಾಯಕ, ಸುರೇಶನಾಯಕ, ಸುಂದರ್ ಚೆಂಗುಮಣಿ, ಶ್ರೀನಿವಾಸನಾಯಕ, ದೊಡ್ಡನಾಯಕ, ಬಿ.ಕೆ.ರವಿಕುಮಾರ್, ಸೋಮು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸರಸ್ವತಿ ಇತರರು ಮುಖಂಡರು ಉಪಸ್ಥಿತರಿದ್ದರು.

ವಿಕಲಚೇತನರಿಗೆ ಸಮರ್ಪಕವಾಗಿ ಸೌಲಭ್ಯ ತಲುಪಿಸಿ: ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ, ಅ. 16 (ಕರ್ನಾಟಕ ವಾರ್ತೆ):- ವಿಕಲಚೇತನರ ಕಲ್ಯಾಣಕ್ಕೆ ಮೀಸಲಾಗಿರುವ ಶೇ. 3ರಷ್ಟು ಅನುದಾನವನ್ನು ಪೂರ್ಣಪ್ರಮಾಣದಲ್ಲಿ ಬಳಕೆ ಮಾಡುವ ಮೂಲಕ ವಿಕಲಚೇತನರಿಗೆ ಸಮರ್ಪಕವಾಗಿ ಸೌಲಭ್ಯಗಳನ್ನು ತಲುಪಿಸುವಂತಾಗಬೇಕು ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನ ಆವರಣದಲ್ಲಿಂದು  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ದಕ್ಷಿಣ ಪ್ರಾದೇಶಿಕ ಕೇಂದ್ರ ಮತ್ತು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ತಾಲೂಕಿನ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು..
ವಿಕಲಚೇತನರಿಗೆ ಅನುಕಂಪ ವ್ಯಕ್ತಪಡಿಸುವುದಕ್ಕಿಂತ  ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕಿದೆ. ಪ್ರತಿ ಇಲಾಖೆ ಹಾಗೂ ಪಂಚಾಯಿತ್ ವ್ಯಾಪ್ತಿಯಲ್ಲಿ ವಿಕಲಚೇತನರ ಕಲ್ಯಾಣ ಯೋಜನೆಗಳಿಗೆ ನಿಗದಿತ ಪ್ರಮಾಣದಲ್ಲಿ ಅನುದಾನ ವೆಚ್ಚ ಮಾಡಬೇಕಿದೆ. ಜನಪ್ರತಿ ನಿಧಿಗಳು ಸೇರಿದಂತೆ ಎಲ್ಲರಿಗೂ ವಿಕಲಚೇತನರಿಗೆ ಅನುಕೂಲವಾಗುವ ಸವಲತ್ತುಗಳನ್ನು ತಲುಪಿಸುವ ಮಹತ್ವದ ಹೊಣೆಗಾರಿಕೆ ಇದೆ ಎಂದು ಪುಟ್ಟರಂಗಶೆಟ್ಟಿ ಅವರು ಅಭಿಪ್ರಾಯಪಟ್ಟರು.
ಚಾಮರಾಜನಗರ ತಾಲ್ಲೂಕಿನಲ್ಲಿ 43 ಗ್ರಾಮ ಪಂಚಾಯಿತಿಗಳಿದ್ದು ಈಭಾಗಗಳಿಂದ ಬಂದ ವಿಕಲಚೇತನರನ್ನು ತಪಾಸಣೆಗೆ ಓಳಪಡಿಸಲಾಗಿತ್ತು. ಈ ಪೈಕಿ 437 ಜನರಿಗೆ 680 ಅವಶ್ಯಕ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಜಿಲ್ಲಾ ಕೇಂದ್ರದಲ್ಲಿ ಹೆಚ್ಚು ಸಂಖ್ಯೆಯಲ್ಲಿ ವಿಕಲಚೇತನರಿಗೆ ಸಲಕರಣೆ ತಲುಪಿಸುವ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಉತ್ತಮ ಕೆಲಸವಾಗಿದೆ ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ವಿಕಲಚೇತನರಿಗೆ ಅಗತ್ಯವಿರುವ ಸಾಧನ ಸಲಕರಣೆ, ಅಂಗವಿಕಲರವೇತನ ಸೇರಿದಂತೆ ಇತರೆ ನೆರವನ್ನು ಸರ್ಕಾರ ನೀಡುತ್ತಿದೆ. ವಿಕಲಚೇತನರು ಆರ್ಥಿಕವಾಗಿ ಸಬಲರಾಗಬೇಕು ಎನ್ನುವ ಉದ್ದೇಶದೊಂದಿಗೆ ನೀಡಲಾಗುತ್ತಿರುವ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು. ವಿಶೇಷವಾಗಿ ಶಿಕ್ಷಣಕ್ಕೆ ಓತ್ತುನೀಡಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ.ಚಂದ್ರು ಮಾತನಾಡಿ ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಮಕ್ಕಳು, ಗರ್ಭಿಣಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ವಿತರಿಸುತ್ತಿರುವ ಪೌಷ್ಠಿಕ ಆಹಾರ ಮಾದರಿಯಲ್ಲಿ ವಿಕಲಚೇತನರಿಗೂ ನೀಡುವಂತಾಗಬೇಕೆಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೈಯದ್ ರಫಿ ಮಾತನಾಡಿ ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಸಂಸ್ಥೆಯು ಜಿಲ್ಲೆಯ ವಿಕಲಚೇತನರ ನೆರವಿಗೆ ಮುಂದಾಗಿರುವುದು ಪ್ರಶಂಸನೀಯವಾಗಿದೆ. ಇನ್ನೂ ಮೂರುವರ್ಷಗಳ ಕಾಲ ಜಿಲ್ಲೆಗೆ ಇದೇ ರೀತಿಯಲ್ಲಿ ನೆರವು ಕಾರ್ಯಕ್ರಮ ಮುಂದುವರೆಸಿದರೆ ಗರಿಷ್ಠ ಸಂಖ್ಯೆಯ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಪಂಚಾಯತಿ ಸದಸ್ಯರಾದ ಆರ್.ಬಾಲರಾಜು ಮಾತನಾಡಿ ವಿಕಲಚೇತನರಿಗೆ ತಪಾಸಣೆ ನಡೆಸಿ ಅಗತ್ಯ ಸಾಧನ ಸಲಕರಣೆ ನೀಡುವ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಾ ಪಾಟಿ ಅವರು ಕಾಳಜಿ ವಹಿಸಿರುವುದು ಶ್ಲಾಘನೀಯವಾಗಿದೆ. ವಿಕಲಚೇತನರು ಕೀಳರಿಮೆಯಿಂದ ಹೊರಬಂದು ಆತ್ಮವಿಶ್ವಾಸಮೂಡಿಸುವಂತಹ ಕಾರ್ಯಕ್ರಮವನ್ನು ಅಯೋಜನೆ ಮಾಡಬೇಕೆಂದು ಸಲಹೆ ಮಾಡಿದರು.
ಜಿ.ಪಂ.ಕೃಷಿ ಮತ್ತು ಕೈಗಾರಿಕೆ ಸ್ಥಾಯಿಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿ.ಪಂ. ಸದಸ್ಯರಾದ ಶಶಿಕಲಾಸೋಮಲಿಂಗಪ್ಪ,  ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ,ಸದಸ್ಯರಾದ ನಾಗಸುಂದರಮ್ಮ, ಪುಟ್ಟಸ್ವಾಮಿ,ರತ್ನಮ್ಮ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ,   ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇನ್ಸ್ಟಿಟೂಟ್ ಫಾರ್ ಪರ್ಸನ್ಸ್ ವಿತ್ ಪಿಸಿಕಲ್ ಡಿಸೆಬಿಲಿಟೀಸ್‍ನ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ. ಪಾಂಡಿಯನ್, ಉಪವಿಭಾಗಧಿಕಾರಿ ಕವಿತಾರಾಜರಾಮ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ. ಕೆ.ಎಚ್.ಪ್ರಸಾದ್, ಜಿಲ್ಲಾ ಪರಿಶಿಷ್ಠವರ್ಗಗಳ ಕಲ್ಯಾಣಧಿಕಾರಿ ಸರಸ್ವತಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅ. 17ರಂದು ಗುಂಡ್ಲುಪೇಟೆಯಲ್ಲಿ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣೆ ಕಾರ್ಯಕ್ರಮ
ಚಾಮರಾಜನಗರ, ಅ. 16 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ದಕ್ಷಿಣ ಪ್ರಾದೇಶಿಕ ಕೇಂದ್ರ ಹಾಗೂ ಸಂಗಮ ಪ್ರತಿಷ್ಠಾನ  ಸಹಯೋಗದೊಂದಿಗೆ ಗುಂಡ್ಲುಪೇಟೆ ಪಟ್ಟಣದ ದೊಡ್ಡಹುಂಡಿ ಭೋಗಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 17ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆ ತಾಲೂಕಿನ ವಿಕಲಚೇತನರಿಗೆ ಸಾಧನಾ ಸಲಕರಣೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ಎನ್.ನಟೇಶ್‍ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ,ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, , ಶಾಸಕರಾದ ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು,  ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ರೂಪಸ್ವಾಮಿ. ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷರಾದ ಮಹದೇವಯ್ಯ, ಪುರಸಭೆ ಅಧ್ಯಕ್ಷರಾದ ಭಾಗ್ಯ, ಉಪಾಧ್ಯಕ್ಷರಾದ ಟಿ.ರಂಗಸ್ವಾಮಿ, ಜಿಲ್ಲಾ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷರಾದ ಬಿ.ಕೆ.ಬೊಮ್ಮಯ್ಯ, ಜಿ.ಪಂ. ಸದಸ್ಯರಾದ ಕೆ.ಎಸ್. ಮಹೇಶ್, ಚನ್ನಪ್ಪ, ಅಶ್ವಿನಿವಿಶ್ವನಾಥ, ರತ್ನಮ್ಮ, ಶ್ರೀಕಂಠಪ್ಪ, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ನವದೆಹಲಿಯ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇನ್ಸ್ಟಿಟೂಟ್ ಫಾರ್ ಪರ್ಸನ್ಸ್ ವಿತ್ ಪಿಸಿಕಲ್ ಡಿಸೆಬಿಲಿಟೀಸ್‍ನ ಸಹಾಯಕ ಪ್ರಾಧ್ಯಾಪಕರಾದ ಡಾ. ಬಿ. ಪಾಂಡಿಯನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಸಿದ್ಧ ಉಡುಪು ಉದ್ಯಮಶೀಲತಾ ಅಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ
ಚಾಮರಾಜನಗರ, ಅ. 18 (ಕರ್ನಾಟಕ ವಾರ್ತೆ):- ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂದಿಗೆ ಒಂದು ತಿಂಗಳ ಸಿದ್ಧ ಉಡುಪು ತಯಾರಿಕೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಉಚಿತವಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18 ರಿಂದ 35 ವರ್ಷದ ವಯೋಮಿತಿಯಲ್ಲಿರಬೇಕು. ಟೈಲರಿಂಗ್ ಬಗ್ಗೆ ತರಬೇತಿ ಪಡೆದಿರಬೇಕು. ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಛೆಯುಳ್ಳವರಾಗಿರಬೇಕು. ಅಲ್ಲದೆ ಶೇ. 25ರಷ್ಟು ಸ್ವಂತ ಬಂಡವಾಳ ಹೂಡಲು ಶಕ್ತರಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಉದ್ಯಮಗಳ ಆಯ್ಕೆ, ಯೋಜನಾ ವರದಿ ತಯಾರಿಕೆ, ಮಾರುಕಟ್ಟೆ ಹಾಗೂ ಹಣಕಾಸು ನಿರ್ವಹಣೆ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲಾಗುವುದು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ 331ರ ಜಿಲ್ಲಾ ಕೈಗಾರಿಕಾ ಕೇಂದ್ರ (ಸಿಡಾಕ್) ದ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 20ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಕಚೇರಿ ದೂರವಾಣಿ ಸಂಖ್ಯೆ 08226 -226346, ಮೊಬೈಲ್ 7760145784ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಅ. 24ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ. ಸಭೆ
ಚಾಮರಾಜನಗರ, ಅ. 18 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ನ. 3ರಂದು ವಿಶೇಷ ಚೇತನರ ಕುಂದುಕೊರತೆ ಸಭೆ
ಚಾಮರಾಜನಗರ, ಅ. 18 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಮಟ್ಟದ ವಿಶೇಷ ಚೇತನರ ಕುಂದುಕೊರತೆ ಸಭೆಯು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಕುಂದುಕೊರತೆಗಳಿದ್ದಲ್ಲಿ ವಿಶೇಷಚೇತನರು ತಹಸೀಲ್ದಾರ್ ಅವರ ಸಮ್ಮುಖದಲ್ಲಿಯೇ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ತಾಲೂಕು ಸಮನ್ವಯಕಾರರಾದ ರಾಜೇಶ್ ಅವರ ಮೊಬೈಲ್ ಸಂಖ್ಯೆ 8105720709, ಕಚೇರಿ ಸಂಖ್ಯೆ 08226 – 222603 ಅಥವಾ 223688ಗೆ ಕರೆ ಮಾಡುವಂತೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಅ. 22ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಅ. 19 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 19 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ಅಕ್ಟೋಬರ್ 20 ಹಾಗೂ 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 20ರಂದು ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರಿಗೆ ಆಗಮಿಸಿ ಬಸವ ಭವನದ ಭೂಮಿ ಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ಅಕ್ಟೋಬರ್ 24ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ಅ. 21ರಂದು ಪೊಲೀಸ್ ಹುತಾತ್ಮರ ದಿನಾಚರಣೆ
ಚಾಮರಾಜನಗರ, ಅ. 19 (ಕರ್ನಾಟಕ ವಾರ್ತೆ):- ಜಿಲ್ಲಾ ಪೊಲೀಸ್ ಇಲಾಖೆಯು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಅಕ್ಟೋಬರ್ 21ರಂದು ಬೆಳಿಗ್ಗೆ 8 ಗಂಟೆಗೆ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಹಮ್ಮಿಕೊಂಡಿದೆ.
ಜಿಲ್ಲಾಧಿಕಾರಿ ಬಿ. ರಾಮು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.

ಅ. 27ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 19 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫ್ಯಾಷನ್ ಡಿಸೈನಿಂಗ್ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 19 (ಕರ್ನಾಟಕ ವಾರ್ತೆ):- ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಧಾರವಾಡದ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂದಿಗೆ ಯಳಂದೂರು ತಾಲೂಕಿನ ನಿರುದ್ಯೋಗಿ ಅಭ್ಯರ್ಥಿಗಳಿಗೆ ಒಂದು ತಿಂಗಳ ಫ್ಯಾಷನ್ ಡಿಸೈನಿಂಗ್ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಉಚಿತವಾಗಿದೆ. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, 18 ರಿಂದ 40 ವರ್ಷದ ವಯೋಮಿತಿಯಲ್ಲಿರಬೇಕು. ಟೈಲರಿಂಗ್ ಬಗ್ಗೆ ತರಬೇತಿ ಪಡೆದಿರಬೇಕು. ಸ್ವಂತ ಉದ್ಯೋಗ ಸ್ಥಾಪಿಸಲು ಇಚ್ಛೆಯುಳ್ಳವರಾಗಿರಬೇಕು. ಅಲ್ಲದೆ ಶೇ. 25ರಷ್ಟು ಸ್ವಂತ ಬಂಡವಾಳ ಹೂಡಲು ಶಕ್ತರಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.
ತರಬೇತಿ ಅವಧಿಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ, ಬ್ಯಾಂಕುಗಳಿಂದ ದೊರೆಯುವ ಸೌಲಭ್ಯ ಹಾಗೂ ಸ್ವಂತ ಉದ್ಯಮ ಸ್ಥಾಪನೆ ಕುರಿತು ಮಾಹಿತಿ ನೀಡಲಾಗುವುದು.
ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ 331ರ ಜಿಲ್ಲಾ ಕೈಗಾರಿಕಾ ಕೇಂದ್ರ (ಸಿಡಾಕ್) ದ ಉಪನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅಕ್ಟೋಬರ್ 30ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಕಚೇರಿ ದೂರವಾಣಿ ಸಂಖ್ಯೆ 08226 - 226346, ಮೊಬೈಲ್ 7760145784ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಅಕ್ಟೋಬರ್ 20ರಂದು ಕೇಬಲ್ ಟಿವಿ ಡಿಜಿಟಲೀಕರಣ ಕುರಿತು ಸಭೆ
ಚಾಮರಾಜನಗರ, ಅ. 19 (ಕರ್ನಾಟಕ ವಾರ್ತೆ): ಕೇಬಲ್ ಟಿವಿ ಡಿಜಿಟಲೀಕರಣ  ಕಾರ್ಯಕ್ರಮ ಅನುಷ್ಠಾನ ಕುರಿತ ಸಭೆಯು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 20ರಂದು ಬೆಳಗ್ಗೆ 11ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಭೆಗೆ ಜಿಲ್ಲಾ ವ್ಯಾಪ್ತಿಯ ಕೇಬಲ್ ಆಪರೇಟರ್‍ಗಳು ಕಡ್ಡಾಯವಾಗಿ ಹಾಜರಾಗುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅ. 21ರಂದು ಕೇಂದ್ರ ಸಾಂಖ್ಯಿಕ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಅ. 20 (ಕರ್ನಾಟಕ ವಾರ್ತೆ):- ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವರಾದ ಡಿ.ವಿ. ಸದಾನಂದಗೌಡ ಅವರು ಅಕ್ಟೋಬರ್ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುವರು. 10.30 ಗಂಟೆಗೆ ನಗರದಲ್ಲಿ ನಮೋ ಜನಚೇತನ ಟ್ರಸ್ಟ್‍ನ ಪ್ರಾರಂಭೋತ್ಸವ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಪ್ರಕಟಣೆ ತಿಳಿಸಿದೆ.

ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳದ ಕೇಬಲ್ ಟಿವಿ ಸಂಪರ್ಕ ಕಡಿತ : ಜಿಲ್ಲಾಧಿಕಾರಿ
ಚಾಮರಾಜನಗರ, ಅ. 20 (ಕರ್ನಾಟಕ ವಾರ್ತೆ):- ಜಿಲ್ಲೆಯ ನಗರ, ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಕೇಬಲ್ ಟಿವಿ ವೀಕ್ಷಕರು, ಗ್ರಾಹಕರು ಕಡ್ಡಾಯವಾಗಿ ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕೇಬಲ್ ಸಂಪರ್ಕವನ್ನು ಕಡಿತಗೊಳಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕೇಬಲ್ ಟಿವಿ ಡಿಜಟಲೀಕರಣ ಅನುಷ್ಠಾನ ಸಂಬಂಧ ಕರೆಯಲಾಗಿದ್ದ ಕೇಬಲ್ ಟಿವಿ ಆಪರೇಟರ್‍ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಪ್ರದೇಶಗಳಲ್ಲಿ 3ನೇ ಹಂತದಲ್ಲಿ ಸಂಪೂರ್ಣವಾಗಿ ಕೇಬಲ್ ಟಿವಿ ಜಾಲವನ್ನು ಡಿಜಟಲೀಕರಣಗೊಳಿಸಲು ಈಗಾಗಲೇ ಗಡುವು ನಿಗದಿ ಮಾಡಲಾಗಿತು. ಈ ಹಿಂದೆಯೂ ಸಭೆ ನಡೆಸಿ ಪ್ರತಿ ಗ್ರಾಹಕರು ಕೇಬಲ ಟಿವಿ ವೀಕ್ಷಣೆಗೆ ಕಡ್ಡಾಯವಾಗಿ ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳಬೇಕೆಂಬ ಬಗ್ಗೆ ಸಾಕಷ್ಟು ಕಾಲಾವಕಾಶ ನೀಡಲಾಗಿತ್ತು ಎಂದರು.
ಕೇಬಲ್ ಟಿವಿ ವೀಕ್ಷಣೆಗೆ ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳದೇ ಇರುವವರಿಗೆ ಮನವರಿಕೆ ಮಾಡಿ ತಕ್ಷಣವೇ ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳಲು ಸೂಚಿಸಬೇಕು. ಇಲ್ಲವಾದಲ್ಲಿ ನಿರ್ದಾಕ್ಷಿಣ್ಯವಾಗಿ ಕೇಬಲ್ ಸಂಪರ್ಕವನ್ನು ಕಡಿತಗೊಳಿಸಬೇಕು. ಅನಲಾಗ್ ವ್ಯವಸ್ಥೆಯನ್ನು ನಿಲ್ಲಿಸಿ ಅಕ್ಟೋಬರ್ 31ರೊಳಗೆ ಸಂಪೂರ್ಣವಾಗಿ ಡಿಜಿಟಲೀಕರಣ ವ್ಯವಸ್ಥೆಗೆ ಮಾರ್ಪಾಡು ಮಾಡಿ ಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೇಬಲ್ ಟಿವಿ ಆಪರೇಟರ್‍ಗಳಿಗೆ ನಿರ್ದೇಶನ ನೀಡಿದರು.
ಸೆಟ್ ಟಾಪ್ ಬಾಕ್ಸ್ ಅಳವಡಿಕೆ ಕೆಲಸವು ಅಕ್ಟೋಬರ್ 31ರೊಳಗೆ ಸಂಪೂರ್ಣವಾಗಬೇಕು. ಡಿಜಿಟಲೀಕರಣ ವ್ಯವಸ್ಥೆಯು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಶೇ. 100ರಷ್ಟು ಪ್ರಗತಿಯಾಗಲೇಬೇಕು. ಇನ್ನು ಯಾವುದೇ ಕಾಲಾವಕಾಶ ನೀಡಲು ಸಾಧ್ಯವಿಲ್ಲ. ಹೀಗಾಗಿ ಸೆಟ್ ಟಾಪ್ ಬಾಕ್ಸ್ ಅಳವಡಿಸಿಕೊಳ್ಳದೇ ಇರುವ ಗ್ರಾಹಕರಿಗೆ ನಿಯಮಗಳ ಬಗ್ಗೆ ವಿವರಿಸಿ ಸಮರ್ಪಕವಾಗಿ ಪ್ರಕ್ರಿಯೆ ನಿರ್ವಹಿಸಬೇಕೆಂದು ಸೂಚಿಸಿದರು.
4ನೇ ಹಂತದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲೂ ಸಹ ಸೆಟ್ ಟಾಪ್ ಬಾಕ್ಸ್ ಅಳವಡಿಕೆ ಕಾರ್ಯ ಪೂರ್ಣಗೊಳಿಸಲು ಡಿಸೆಂಬರ್ 31ರ ಗಡುವು ನಿಗದಿಯಾಗಿದೆ. ಆದರೆ ಗ್ರಾಮಾಂತರ ಭಾಗಗಳಲ್ಲಿಯೂ ತ್ವರಿತವಾಗಿ ವೀಕ್ಷಕರು, ಗ್ರಾಹಕರು ಸೆಟ್ ಟಾಪ್ ಬಾಕ್ಸ್ ಪಡೆದು ಅಳವಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಗೊಳ್ಳುವಲ್ಲಿ ಆಪರೇಟರ್‍ಗಳು ನಿಗಾ ವಹಿಸಬೇಕು. ಮುಂದಿನ ತಿಂಗಳ ಸಭೆಯ ವೇಳೆಗೆ ಈಗಿರುವ ಪ್ರಗತಿ 4 ಪಟ್ಟು ಹೆಚ್ಚಳವಾಗಬೇಕು ಎಂದು ರಾಮು ಅವರು ತಾಕೀತು ಮಾಡಿದರು.
ಕೇಬಲ್ ಟಿವಿ ಆಪರೇಟರ್‍ಗಳು ಕೇಂದ್ರ ಅನುಮೋದಿತ ಪಟ್ಟಿಯಲ್ಲಿ ಇರುವ ಚಾನಲ್‍ಗಳನ್ನು ಮಾತ್ರ ಪ್ರಸಾರ ಮಾಡಬೇಕು. ನಿಷೇಧಿತ ಚಾನಲ್‍ಗಳನ್ನು ಪ್ರಸಾರ ಮಾಡುವಂತಿಲ್ಲ. ಪ್ರಚೋದನಾತ್ಮಕ ಶಾಂತಿ ಕದಡುವ ವಿಷಯ ಆಧಾರಿತ ಚಾನಲ್‍ಗಳನ್ನು ಪ್ರಸಾರ ಮಾಡಬಾರದು. ಅಲ್ಲದೆ ಎಲ್ಲಿಯೋ ನಡೆದ ಪ್ರಚೋದನಾತ್ಮಕ ವಿಷಯವನ್ನು ಡೌನ್ ಲೋಡ್ ಮಾಡಿಕೊಂಡು ಸಹ ಪ್ರಸಾರ ಮಾಡಬಾರದು. ನಿಷೇದಿತ ಚಾನಲ್‍ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಸಂಬಂಧಪಟ್ಟ ಕೇಬಲ್ ಆಪರೇಟರ್‍ಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಡಿವೈಎಸ್‍ಪಿ ಗಂಗಾಧರಸ್ವಾಮಿ,  ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು, ಕೇಬಲ್ ಆಪರೇಟರ್‍ಗಳು ಸಭೆಯಲ್ಲಿ ಹಾಜರಿದ್ದರು.



ಅ. 22ರಂದು ತಾ.ಪಂ. ಕೆಡಿಪಿ ಸಭೆ
ಚಾಮರಾಜನಗರ, ಅ. 20 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 22ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 22ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಅ. 20 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅ. 22ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅ. 22ರಂದು ತಾ.ಪಂ. ಕೆಡಿಪಿ ಸಭೆ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 22ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 22ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯು ಅಕ್ಟೋಬರ್ 22ರಂದು ನಡೆಯಲಿದೆ. ಹೀಗಾಗಿ ಬೆಂಡರವಾಡಿ, ಪಣ್ಯದಹುಂಡಿ, ಬದನಗುಪ್ಪೆ ಇಂಡಸ್ಟ್ರಿಯಲ್, ಎನ್ ಜೆವೈ ಕೆಲ್ಲಂಬಳ್ಳಿ ಮಾರ್ಗಗಳಿಗೆ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿದಾರರು ಕಡ್ಡಾಯವಾಗಿ ಆಧಾರ್ ಸಂಖ್ಯೆ ನೀಡಲು ಸೂಚನೆ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ಸಾಮಾಜಿಕ ಭದ್ರತಾ ಯೋಜನೆಯಡಿ ವಿಧವಾ, ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ಮನಸ್ವಿನಿ ಮತ್ತು ಮೈತ್ರಿ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಲು ತಿಳಿಸಿದೆ.
ಗ್ರಾಮೀಣ ಭಾಗದ ಪಿಂಚಣಿ ಫಲಾನುಭವಿಗಳು ಸಂಬಂಧಪಟ್ಟ ಹೋಬಳಿ ನಾಡಕಚೇರಿಗಳಲ್ಲಿ, ನಗರ ವ್ಯಾಪ್ತಿಯ ಫಲಾನುಭವಿಗಳು ಕಸಬಾ ರಾಜಸ್ವ ನಿರೀಕ್ಷಕರ ಕಚೇರಿಯಲ್ಲಿ ಅಕ್ಟೋಬರ್ 25ರ ಒಳಗೆ ಸಲ್ಲಿಸಬೇಕು. ತಪ್ಪಿದಲ್ಲಿ ನವೆಂಬರ್ ಮಾಹೆಯಿಂದ ಆಧಾರ್ ಸಂಖ್ಯೆ ಸಲ್ಲಿಸದ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಅ. 26ರಂದು ಚಂದಕವಾಡಿಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 26ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲೂಕಿನ ಚಂದಕವಾಡಿ ಹೋಬಳಿ ನಾಡಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆ ನಡೆಯಲಿದೆ.
ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳುವಂತೆ ತಾಲೂಕು ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಅ. 25ರಂದು ಮಹದೇಶ್ವರ ಬೆಟ್ಟದಲ್ಲಿ ಗೋಲಕ ಹಣ ಎಣಿಕೆ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಗೋಲಕಗಳ ಹಣ ಎಣಿಕೆ ಕಾರ್ಯವು ಅಕ್ಟೋಬರ್ 25ರಂದು ಬೆಳಿಗ್ಗೆ ನಡೆಯಲಿದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಯೋಗದೊಂದಿಗೆ ಹಣ ಎಣಿಕೆ ಕಾರ್ಯವು ನಡೆಸಲಾಗುವುದೆಂದು ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆÉ.

ಅ. 27ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
                                                                       
ವಾರ್ತಾ ವಿಶೇಷ:
ಅ. 24 ರಿಂದ ಕಾಲುಬಾಯಿ ಜ್ವರ ತಡೆಗೆ 11ನೇ ಸುತ್ತಿನ ಲಸಿಕೆ ಆಂದೋಲನ : ಪಶುಪಾಲನೆ ಇಲಾಖೆ ಸಜ್ಜು
ಜಾನುವಾರುಗಳಿಗೆ ತಗಲುವ ಕಾಲುಬಾಯಿ ಜ್ವರವನ್ನು ಪರಿಣಾಮಕಾರಿಯಾಗಿ ತಡೆಯುವ ಉದ್ದೇಶದಿಂದ ಜಿಲ್ಲಾದ್ಯಂತ ಅಕ್ಟೋಬರ್ 24 ರಿಂದ ನವೆಂಬರ್ 12ರವರೆಗೆ 11ನೇ ಸುತ್ತಿನ ಲಸಿಕೆ ನೀಡುವ ಕಾರ್ಯ ವ್ಯಾಪಕವಾಗಿ ನಡೆಯಲಿದ್ದು ಇದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಸಜ್ಜುಗೊಂಡಿದೆ.
ಜಿಲ್ಲೆಯಲ್ಲಿ ಜಾನುವಾರು ಗಣತಿ ಪ್ರಕಾರ ಒಟ್ಟು 259092 ಜಾನುವಾರುಗಳನ್ನು ಗುರುತಿಸಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ 76239, ಗುಂಡ್ಲುಪೇಟೆ ತಾಲೂಕಿನಲ್ಲಿ 70258, ಕೊಳ್ಳೇಗಾಲ ತಾಲೂಕಿನಲ್ಲಿ 100112 ಮತ್ತು ಯಳಂದೂರು ತಾಲೂಕಿನಲ್ಲಿ 12483 ಜಾನುವಾರುಗಳು ಇವೆ ಎಂದು ಗಣತಿಯಲ್ಲಿ ಗುರುತಿಸಲಾಗಿದೆ.
ಜಾನುವಾರುಗಳಿಗೆ ಲಸಿಕೆ ನೀಡುವ ಸಲುವಾಗಿ ಜಾನುವಾರು ಸಂಖ್ಯೆಗಳಿಗೆ ಅನುಗುಣವಾಗಿ ಒಟ್ಟು 27 ಲಸಿಕಾ ತಂಡ ರಚಿಸಲಾಗಿದೆ. ಪ್ರತಿ ತಂಡದಲ್ಲಿ ಐದರಿಂದ ಆರು ಮಂದಿ ಅರೆತಾಂತ್ರಿಕ ಸಿಬ್ಬಂದಿ ಇದ್ದು ಪಶುವೈದ್ಯರೊಬ್ಬರು ತಂಡದ ಮುಖ್ಯಸ್ಥರಾಗಿ ಇರಲಿದ್ದಾರೆ. ಚಾಮರಾಜನಗರ ತಾಲೂಕಿನಲ್ಲಿ 9, ಗುಂಡ್ಲುಪೇಟೆ ತಾಲೂಕಿನಲ್ಲಿ 7, ಕೊಳ್ಳೇಗಾಲ ತಾಲ್ಲೂಕಿಗೆ 8 ಹಾಗೂ ಯಳಂದೂರು ತಾಲ್ಲೂಕಿಗೆ 3 ತಂಡಗಳನ್ನು ನಿಯೋಜಿಸಲಾಗಿದೆ.
ನಿಯೋಜಿತವಾಗಿರುವ ಪ್ರತೀ ತಂಡವು ಒಂದು ದಿನಕ್ಕೆ 750 ರಾಸುಗಳಿಗೆ ಲಸಿಕೆ ನೀಡಲಿವೆ. ಒಟ್ಟು 27 ತಂಡಗಳಿಂದ ಪ್ರತಿ ದಿನ 20250 ಜಾನುವಾರುಗಳಿಗೆ ಲಸಿಕೆ ನೀಡಲು ಗುರಿ ನೀಡಲಾಗಿದೆ. ಹೀಗಾಗಿ 15 ರಿಂದ 20 ದಿನಗಳೊಳಗೆ ಎಲ್ಲಾ ರಾಸುಗಳಿಗೆ ಲಸಿಕೆ ಹಾಕಬಹುದಾಗಿದೆ.
ಲಸಿಕೆಯನ್ನು ಸ್ಥಳೀಯ ಹಾಗೂ ಮಿಶ್ರತಳಿ ದನಗಳು, ಎಮ್ಮೆಗಳು, ಹಂದಿಗಳಿಗೆ ಕೊಡಲಾಗುತ್ತದೆ. 3 ತಿಂಗಳಿಗಿಂತ ಕಡಿಮೆ ವಯಸ್ಸಿನ ಕರುಗಳು ಹಾಗೂ 6 ತಿಂಗಳು ತುಂಬಿರುವ ಗರ್ಭ ಧರಿಸಿದ ರಾಸುಗಳಿಗೆ ಲಸಿಕೆ ನೀಡುವುದನ್ನು ಮುಂದೂಡಲಾಗುತ್ತದೆ. ಪ್ರತೀ ರಾಸುವಿಗೆ ಪ್ರತ್ಯೇಕ ಡಿಸ್ ಪೋಸಲ್ ಸಿರಿಂಜ್ ಹಾಗೂ ಸೂಜಿಗಳನ್ನು ಉಪಯೋಗಿಸಲಾಗುತ್ತದೆ. ಬೆಳಿಗ್ಗೆ 6 ರಿಂದ 11.30 ಗಂಟೆ ಹಾಗೂ ಸಂಜೆ 5 ರಿಂದ 7 ಗಂಟೆ ಅವಧಿಯೊಳಗೆ ಲಸಿಕೆ ನೀಡಲು ಸೂಚಿಸಲಾಗಿದೆ.
ಪಶುಪಾಲನೆ ಇಲಾಖೆಗೆ 2,65,350 ಡೋಸ್ ಲಸಿಕೆ ಸರಬರಾಜಾಗುತ್ತಿದೆ. ಚಾಮರಾಜನಗರ ತಾಲೂಕು ಪಶುವೈದ್ಯ ಆಸ್ಪತ್ರೆಯ ವಾಕ್-ಇನ್-ಕೂಲರ್‍ನಲ್ಲಿ 84400 ಹಾಗೂ ಉಳಿದ 1.80,950 ಡೋಸ್ ಲಸಿಕೆಯನ್ನು ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರಿನ ಪಶುವೈದ್ಯ ಆಸ್ಪತ್ರೆಯ ಬಾಟಲ್ ಕೂಲರ್ಸ್ ಯಂತ್ರಗಳಲ್ಲಿ ದಾಸ್ತಾನು ಮಾಡಲಾಗಿದೆ. ಎಲ್ಲ ಹಂತದಲ್ಲೂ ಲಸಿಕೆಯ ಶೀತಲಿ ಸರಪಳಿ ನಿರ್ವಹಣೆ ಮಾಡಲಾಗುತ್ತಿದೆ. ಲಸಿಕೆಯನ್ನು ಕೊಂಡೊಯ್ಯಲು ವ್ಯಾಕ್ಸಿನ್ ಕ್ಯಾರಿಯರ್ ನೀಡಲಾಗುತ್ತಿದೆ.
ಲಸಿಕಾ ತಂಡಗಳು ಗ್ರಾಮಗಳಿಗೆ ಭೇಟಿ ನೀಡಲು  ಒಟ್ಟು 27 ವಾಹನ ವ್ಯವಸ್ಥೆ ಮಾಡಲಾಗಿದೆ. ಚಾಮರಾಜನಗರ ತಾಲೂಕಿಗೆ 9, ಗುಂಡ್ಲುಪೇಟೆ ತಾಲೂಕಿಗೆ 7, ಕೊಳ್ಳೇಗಾಲ ತಾಲ್ಲೂಕಿಗೆ 8 ಹಾಗೂ ಯಳಂದೂರು ತಾಲ್ಲೂಕಿಗೆ 3 ವಾಹನಗಳನ್ನು ನಿಯೋಜಿಸಲಾಗಿದೆ.
ಕಾರ್ಯಕ್ರಮ ಸಂಬಂಧ ರೈತರು, ಹೈನುಗಾರಿಕೆ ಅವಲಂಬಿತರಿಗೆ ಅರಿವು ಮೂಡಿಸುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕೈಗೊಳ್ಳಲಾಗುತ್ತಿದೆ. ಪ್ರತಿ ಗ್ರಾಮದಲ್ಲೂ ಭಿತ್ತಿಪತ್ರ ಹಾಗೂ ಕರಪತ್ರಗಳ ಮೂಲಕ ಮಾಹಿತಿ ನೀಡಲಾಗುತ್ತಿದೆ. ದೊಡ್ಡ ಗ್ರಾಮಗಳಲ್ಲಿ ಬ್ಯಾನರ್‍ಗಳನ್ನು ಹಾಕಲಾಗುತ್ತಿದೆ. ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕವೂ ಸಹ ಪ್ರಚಾರಕ್ಕಾಗಿ ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಚಾರಕ್ಕಾಗಿ 760 ಪೋಸ್ಟರ್ಸ್, 600 ಬ್ಯಾನರ್‍ಗಳು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಕರಪತ್ರಗಳನ್ನು ಮುದ್ರಿಸಲಾಗಿದೆ.
ಲಸಿಕೆಯನ್ನು ಪ್ರತಿ ದಿನ ಯಾವ ಗ್ರಾಮಕ್ಕೆ ಯಾವ ತಂಡ ಲಸಿಕೆ ನೀಡಲಿದೆ ಎಂಬ ವೇಳಾಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದೆ. ಪ್ರತಿ ಗ್ರಾಮದಲ್ಲಿ ನೀಡಲಾಗುವ ಲಸಿಕೆ ಹಾಗೂ ಇದನ್ನು ನಿರ್ವಹಿಸುವ ಪಶುಪಾಲಕರ ಮಾಹಿತಿಯನ್ನು ಆಯಾ ದಿನವೇ ತಾಲೂಕು ಉಸ್ತುವಾರಿ ಅಧಿಕಾರಿಗೆ ಕಳುಹಿಸಲಾಗುತ್ತದೆ. ಲಸಿಕೆ ವಿವರವನ್ನು ಕಳೆದ ಸುತ್ತಿನಲ್ಲಿ ಪಶುಪಾಲಕರಿಗೆ ನೀಡಿರುವ ಜಾನುವಾರು ಮಾಹಿತಿ ಪಾಸ್ ಪುಸ್ತಕಗಳಲ್ಲಿ ದಾಖಲು ಮಾಡಲಾಗುತ್ತದೆ. ಗ್ರಾಮವಾರು ಲಸಿಕೆ ಮಾಹಿತಿ ವರದಿಯನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿಗಳು ಅದೇ ದಿನ ಮಧ್ಯಾಹ್ನ 3 ಗಂಟೆಯೊಳಗೆ ಆನ್ ಲೈನ್ ಮೂಲಕ ರವಾನಿಸಲಿದ್ದಾರೆ.
ಜಿಲ್ಲೆಯ ಎಲ್ಲ ತಾಲೂಕುಗಳ ಲಸಿಕೆ ಮಾಹಿತಿಯನ್ನು ಜಿಲ್ಲಾ ಕೇಂದ್ರಕ್ಕೆ ಪ್ರತಿ ದಿನ 4 ಗಂಟೆಯೊಳಗೆ ರವಾನಿಸಲಾಗುತ್ತದೆ. ಕ್ರೋಡೀಕರಿಸಿದ ಮಾಹಿತಿಯನ್ನು ರಾಜ್ಯಕೇಂದ್ರ ಕಚೇರಿಗೆ ಸಂಜೆ 5 ಗಂಟೆಯೊಳಗೆ ಸಲ್ಲಿಸಲಾಗುತ್ತದೆ. ಯಾವುದೇ ಗ್ರಾಮದ ಲಸಿಕೆ ಪ್ರಗತಿ ನಿರ್ವಹಣೆ ಮಾಹಿತಿಯನ್ನು ನಾಗರಿಕರು ವೀಕ್ಷಿಸಲು ಅವಕಾಶವಿದೆ.
ಲಸಿಕೆ ಮಾಡುವ ಮೊದಲು ಜಾನುವಾರುಗಳಲ್ಲಿ ಜಂತು ನಿವಾರಣೆ ಮಾಡುವುದು ಸೂಕ್ತವೆಂದು ನಿರ್ಧರಿಸಲಾಗಿದೆ. ಇದರಿಂದ ಲಸಿಕೆಯಿಂದ ಉಂಟುಮಾಡುವ ರೋಗನಿರೋಧಕ ಶಕ್ತಿ ಹೆಚ್ಚಾಗಲಿದೆ. ಈ ಉದ್ದೇಶಕ್ಕಾಗಿಯೇ ಸಾಮೂಹಿಕ ಜಂತುನಿವಾರಣಾ ಕಾರ್ಯಕ್ರಮವನ್ನು  ಕಳೆದ ಅಕ್ಟೋಬರ್ 10ರಂದು ನಡೆಸಲಾಗಿದೆ. ಲಸಿಕೆ ಮಾಡುವ ಮೊದಲು ಫೀಕಲ್  ಮಾದರಿಗಳನ್ನು ಶೇಖರಿಸಿ ಜಂತುನಾಶಕ ಸೇವನೆ ಮಾಡಿಸಿದ ಬಳಿಕ ಅದೇ ರಾಸುಗಳಲ್ಲಿ 21 ದಿನಗಳ ನಂತರ ಪರೀಕ್ಷೆ ನಡೆಸಲಾಗುತ್ತದೆ.
ಲಸಿಕೆ ಉಪಯುಕ್ತತೆಯನ್ನು ಅಳೆಯಲು ಜಿಲ್ಲೆಯ ಆಯ್ದ 10 ಗ್ರಾಮಗಳಲ್ಲಿ 20 ಜಾನುವಾರುಗಳಿಂದ ಲಸಿಕೆ ನೀಡುವ ಮೊದಲು ಸೀರಂ ಶೇಖರಿಸಲಾಗುತ್ತದೆ. ಲಸಿಕೆ ಮಾಡಿದ 28 ದಿನಗಳ ಬಳಿಕ ಅದೇ ರಾಸುಗಳಿಂದ ಸೀರಂ ಶೇಖರಿಸಿ ರೋಗನಿರೋಧಕ ಶಕ್ತಿ ಪರೀಕ್ಷೆ ನಡೆಸಲಾಗುತ್ತದೆ.
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗು ಅರಣ್ಯ ಇಲಾಖೆ ಲಸಿಕಾ ಆಂದೋಲನಕ್ಕೆ ಸಹಕರಿಸಿವÉ. ಇಲಾಖೆಯ ಲಸಿಕಾ ತಂಡವು ನಿಗದಿತ ದಿನಾಂಕಗಳಂದು ಭೇಟಿ ಕೊಡುವ ಸಂದರ್ಭದಲ್ಲಿ ಜಾನುವಾರು ಮಾಲೀಕರು, ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಕಾಲುಬಾಯಿ ಜ್ವರ ತಡೆಗೆ ಆಯೋಜಿಸಿರುವ ವಿಶೇಷ ಲಸಿಕೆ ನೀಡುವ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕೆಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಸುಂದರ್ ಮನವಿ ಮಾಡಿದ್ದಾರೆ.

ಅ. 24ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆ.ಡಿ.ಪಿ. ಸಭೆ
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳು ಅನುಷ್ಠಾನಗೊಳಿಸಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ಅಕ್ಟೋಬರ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೇರ ಫೋನ್ ಇನ್ ಕಾರ್ಯಕ್ರಮ : ಕುಡಿಯುವ ನೀರು ಸಮಸ್ಯೆ ಪ್ರಸ್ತಾಪ
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಕುಡಿಯುವ ನೀರು, ರಸ್ತೆ ದುರಸ್ತಿ, ಕೆಎಸ್‍ಆರ್‍ಟಿಸಿ ಬಸ್ಸುಗಳ ನಿಯೋಜನೆ ಬೇಡಿಕೆ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಪಟ್ಟ  ದೂರುಗಳು ದಾಖಲಾದವು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ. ರಾಮು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್ ಅವರ ಸಮ್ಮುಖದಲ್ಲಿ ನಡೆದ ಒಂದು ಗಂಟೆಯ ಅವಧಿಯ ಕಾರ್ಯಕ್ರಮದಲ್ಲಿ ಒಟ್ಟು 33 ಕುಂದುಕೊರತೆ ದೂರುಗಳು ಕೇಳಿಬಂದವು.
ಸತ್ತೇಗಾಲದಿಂದ ನಾಗರಿಕರೊಬ್ಬರು ಕರೆ ಮಾಡಿ ಸ್ಥಳೀಯ ಭಾಗÀದಲ್ಲಿ ನೀರು ಪೂರೈಕೆ ಸಂಪರ್ಕ ಪಡೆಯಲಾಗಿದೆ. ಆದರೆ ನೀರು ಪೂರೈಕೆಯಾಗುತ್ತಿಲ್ಲ ಎಂದು ಗಮನ ಸೆಳೆದರು. ಹನೂರು ಪಟ್ಟಣದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂದು ಮತ್ತೊಬ್ಬರು ತಿಳಿಸಿದರು.
ಸಂತೆಮರಹಳ್ಳಿ ಹೋಬಳಿಯ ಬಸವಟ್ಟಿ ಗ್ರಾಮದಿಂದ ಕರೆ ಮಾಡಿದ ಗ್ರಾಮಸ್ಥರೊಬ್ಬರು ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಾಣಗೊಂಡು 3 ವರ್ಷವಾಗಿದೆ. ಆದರೂ ಟ್ಯಾಂಕ್‍ಗೆ ನೀರು ತುಂಬಿಸುತ್ತಿಲ್ಲ ಎಂದು ದೂರಿದರು.  ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ವಿದ್ಯುತ್ ಸಂಪರ್ಕ ತೊಂದರೆಯಿಂದ ನೀರು ತುಂಬಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿಯೇ ಈ ವರ್ಷ 15 ಲಕ್ಷ ರೂ. ವೆಚ್ಚದಲ್ಲಿ ಕ್ರಿಯಾ ಯೋಜನೆ ತಯಾರಾಗಿದ್ದು ಸಮಸ್ಯೆ ಪರಿಹಾರವಾಗಲಿದೆ ಎಂದರು.
ಹೆಬ್ಬಸೂರು ಗ್ರಾಮದಲ್ಲಿ ಕೆರೆಕಟ್ಟೆಗಳು ಬತ್ತಿಹೋಗಿವೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಿಸಬೇಕೆಂದು ಅಲ್ಲಿನ ಗ್ರಾಮಸ್ಥರೊಬ್ಬರು ಕೋರಿದರು. ಕುರಟ್ಟಿ ಹೊಸೂರು ಗ್ರಾಮದಿಂದ ಮತ್ತೊಬ್ಬರು ಕರೆ ಮಾಡಿ ಜಾನುವಾರುಗಳಿಗೆ ಮೇವು, ಕುಡಿಯುವ ನೀರು ಸಿಗುತ್ತಿಲ್ಲವೆಂದು ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಮೇವು ಖರೀದಿಸಿ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತದೆ. ನೀರಾವರಿ ಸೌಲಭ್ಯ ಇರುವ ಕಡೆ ಮೇವು ಬೆಳೆಯುವಂತೆ   ಕೋರಲಾಗಿದೆ. ಈ ಸಂಬಂಧ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಎಂದರು.
ಹೆಬ್ಬಸೂರಿನಿಂದ ಕರೆ ಮಾಡಿದ ಸ್ಥಳೀಯ ಗ್ರಾಮಸ್ಥರೊಬ್ಬರು ಗ್ರಾಮದ ಸುತ್ತಮುತ್ತಲ ಪ್ರದೇಶಕ್ಕೆ ಕೆಎಸ್‍ಆರ್‍ಟಿಸಿ ಬಸ್ಸುಗಳು ಸಂಚರಿಸುತ್ತಿವೆ. ಆದರೆ ದೊಡ್ಡ ಗ್ರಾಮವಾದ ಹೆಬ್ಬಸೂರಿಗೆ ಕೆಎಸ್‍ಆರ್‍ಟಿಸಿ ಬಸ್ಸು ನಿಯೋಜನೆ ಮಾಡಬೇಕು. ಇದರಿಂದ ವಿದ್ಯಾರ್ಥಿಗಳಿಗೆ ದಿನನಿತ್ಯ ಕೆಲಸಕ್ಕೆ ತೆರಳುವ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದರು. ಈ ಸಂಬಂಧ ಅಗತ್ಯ ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿಯವರು ತಿಳಿಸಿದರು.
ನೂತನವಾಗಿ ಆರಂಭವಾಗಿರುವ ವೈದ್ಯಕೀಯ ಕಾಲೇಜಿಗೆ ಬಸ್ ವ್ಯವಸ್ಥೆ ಮಾಡಬೇಕು. ಕ್ಯಾಂಪಸ್ ವ್ಯಾಪ್ತಿಯಲ್ಲಿ ದೂರವಾಣಿ ಸಂಪರ್ಕ ಸಿಗುತ್ತಿಲ್ಲ ಎಂದು ವಿದ್ಯಾರ್ಥಿಯೋರ್ವರು ಜಿಲ್ಲಾಧಿಕಾರಿಯವರ ಗಮನ ಸೆಳೆದರು.
ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಾಣಾಧಿಕಾರಿಗಳೊಂದಿಗೆ ಈಗಾಗಲೇ ಬಸ್ಸು ಸಂಚಾರವನ್ನು ಆರಂಭಿಸಲು ಚರ್ಚಿಸಲಾಗಿದೆ. ದೂರವಾಣಿ ಸಂಪರ್ಕ ಸೌಲಭ್ಯ ಕಲ್ಪಿಸಲು ಭಾರತ್ ಸಂಚಾರ್ ನಿಗಮ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.
ನಗರದ ಬಂದೀಖಾನೆಯಿಂದ ತ್ಯಾಜ್ಯಯುಕ್ತ ನೀರು ಹರಿಯಬಿಡಲಾಗಿದೆ. ಇದರಿಂದ ಸುತ್ತಮುತ್ತಲಗಳಲ್ಲಿ ದುರ್ನಾತ ಬೀರುತ್ತಿದೆ. ಈ ಬಗ್ಗೆ ಈ ಹಿಂದೆ ದೂರು ನೀಡಿದ್ದರೂ ಯಾವುದೇ ಪರಿಹಾರವಾಗಿಲ್ಲವೆಂದು ಸ್ಥಳೀಯರೊಬ್ಬರು ತಿಳಿಸಿದರು. ಈ ಬಗ್ಗೆ ಅಧಿಕಾರಿಗಳನ್ನು ಕಳುಹಿಸಿ ಶೀಘ್ರ ಪರಿಹಾರ ಕೈಗೊಳ್ಳಲು ಸೂಚಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ನಗರದ ರೈಲು ನಿಲ್ದಾಣ ರಸ್ತೆ ಸರಿಪಡಿಸಬೇಕೆಂಬ ಮನವಿಯು ಕೇಳಿಬಂತು. ರಸ್ತೆ ಕಾಮಗಾರಿ ಕೈಗೊಳ್ಳಲು ಹಣ ಮಂಜೂರಾಗಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಯಳಂದೂರಿನಿಂದ ವೈ ಕೆ ಮೋಳೆಗೆ ಸಾಗುವ ರಸ್ತೆಯೂ ಬಹಳ ವರ್ಷಗಳಿಂದ ಹಾಳಾಗಿದೆ. ಆದರೂ ದುರಸ್ತಿಗೆ ಕ್ರಮ ತೆಗೆದುಕೊಂಡಿಲ್ಲವೆಂದು ಅಲ್ಲಿನ  ನಿವಾಸಿಯೊಬ್ಬರ ದೂರಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಪರಿಶೀಲಿಸಿ ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಪಡಿತರ, ವಿದ್ಯುತ್ ದೀಪ ಅಳವಡಿಕೆ, ಕೆರೆ ಒತ್ತುವರಿ, ಸಂತೆಮರಹಳ್ಳಿಯ ಹೆರಿಗೆ ಆಸ್ಪತ್ರೆಯಲ್ಲಿ ವೈದ್ಯರೇ ಹಣ ಪಡೆಯುವ ಬಗೆಗಿನ ದೂರು ಸೇರಿದಂತೆ ಇನ್ನಿತರ ಸಮಸ್ಯೆಗಳು ಫೋನ್ ಇನ್ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದವು.
ಕಾರ್ಯಕ್ರಮದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತಾಡಿದ ಜಿಲ್ಲಾಧಿಕಾರಿಯವರು ದೂರುದಾರರಿಗೆ ಪರಿಹಾರ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಬೇಕು. ಅಧಿಕಾರಿಗಳು ಕುಂದುಕೊರತೆ ಕೇಳಿಬಂದ ಗ್ರಾಮಗಳಿಗೆ ಭೇಟಿ ನೀಡಿ  ಸಮಸ್ಯೆ ಅರಿತು ತ್ವರಿತವಾಗಿ ಪÀರಿಹರಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕನ್ನಡ ರಾಜೋತ್ಸವ ಅದ್ದೂರಿ ಆಚರಣೆಗೆ ತೀರ್ಮಾನ
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ನವೆಂಬರ್ 1ರಂದು ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು.
    ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕನ್ನಡ ರಾಜೋತ್ಸವ ಅಚರಣೆ ಸಂಬಂಧ ಜಿಲ್ಲಾಧಿಕಾರಿ ಬಿ. ರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಎಂದಿನಂತೆ ನಾಡಹಬ್ಬ ಕನ್ನಡ ರಾಜ್ಯೋತ್ಸವವನ್ನು ಈ ಬಾರಿಯೂ ಸಕಲ ಸಿದ್ಧತೆಗಳೊಂದಿಗೆ ಆಚರಿಸಲಾಗುತ್ತದೆ. ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಸಲಹೆಯನ್ನು ನೀಡಬೇಕೆಂದು ಸಭೆಯ ಆರಂಭದಲ್ಲೇ ಮನವಿ ಮಾಡಿದರು.
ಕಾರ್ಯಕ್ರಮ ಸುಗಮ ನಿರ್ವಹಣೆಗಾಗಿ ಅಧಿಕಾರಿಗಳನ್ನೂ ಒಳಗೊಂಡಂತೆ ಸಮಿತಿ ರಚನೆ ಮಾಡಲಾಗುತ್ತದೆ. ಪ್ರತಿ ಸಮಿತಿಯು ಪ್ರತೀ ಹಂತದ ಸಿದ್ಧತೆಗಳನ್ನು ಕೈಗೊಳ್ಳುವಲ್ಲಿ ನಿರ್ವಹಿಸಬೇಕಿರುವ ಜವಾಬ್ದಾರಿಯನ್ನು ನಿಗದಿ ಮಾಡಲಾಗುತ್ತದೆ. ಸಮಿತಿ ಸದಸ್ಯರು ಸಭೆ ನಡೆಸಿ ಕಾರ್ಯೋನ್ಮುಖರಾಗಲು ಸೂಚನೆ ನೀಡಲಾಗುತ್ತದೆ ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರಾಜೋತ್ಸವ ದಿನದಂದು ಶಾಲಾ ಕಾಲೇಜು ಮಕ್ಕಳು ನೀಡಲಿರುವ ನಾಡು ನುಡಿ ಕುರಿತ ಸಾಂಸ್ಕøತಿಕ ಕಾರ್ಯಕ್ರಮ, ಪಥ ಸಂಚಲನ, ಇನ್ನಿತರ  ಸಿದ್ಧತೆಗಾಗಿ ತಾಲೀಮು ಆರಂಭಿಸಬೇಕು. ಕಾಲಾವಕಾಶವು ಕಡಿಮೆ ಇರುವ ಹಿನ್ನೆಲೆಯಲ್ಲಿ ಹೆಚ್ಚು ಅವಧಿಯಲ್ಲಿ ಸಿದ್ದತಾ ಕೆಲಸಗಳು ಪೂರ್ಣವಾಗಬೇಕು ಎಂದು ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಧಿಕಾರಿಗಳು, ಕಚೇರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಈ ಬಾರಿ ಹಾಜರಾತಿಯನ್ನು ಹಿರಿಯ ಅಧಿಕಾರಿಗಳೇ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಗೈರು ಹಾಜರಾತಿಯನ್ನು ಸಹಿಸುವುದಿಲ್ಲ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಕನ್ನಡಪರ ಸಂಘಟನೆಗಳ ಮುಖಂಡರು ಕನ್ನಡ ಅನುಷ್ಠಾನ ಸಂಬಂಧ ತೋರಲಾಗುತ್ತಿರುವ ನಿರ್ಲಕ್ಷ್ಯ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ರಾಮು ಅವರು ಕನ್ನಡ ಅನುಷ್ಠಾನ ಕಾರ್ಯಕ್ರಮಗಳ ಬಗ್ಗೆ ಪ್ರತ್ಯೇಕ ಸಭೆ ನಿಗದಿ ಮಾಡಿ ವಿವರವಾಗಿ ಚರ್ಚಿಸಿ ಪರಿಹರಿಸಲು ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಸರಸ್ವತಿ, ಸಂಘಟನೆಗಳ ಮುಖಂಡರಾದ ಶಾ. ಮುರಳಿ, ಚಾ.ರಂ. ಶ್ರೀನಿವಾಸಗೌಡ, ವೆಂಕಟರಮಣ ಪಾಪು, ಚಾ.ಗು. ನಾಗರಾಜು, ಚಾ.ಹ. ಶಿವರಾಜು, ಸಿ.ಸಿ. ಪ್ರಕಾಶ್, ನಿಜಧ್ವನಿ ಗೋವಿಂದರಾಜು, ಆಲೂರು ನಾಗೇಂದ್ರ, ಬ್ಯಾಡಮೂಡ್ಲು ಬಸವಣ್ಣ, ಜಿ. ಬಂಗಾರು, ಇತರ ಮುಖಂಡರು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


ಅ. 23ರಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣದಲ್ಲಿ ಅಕ್ಟೋಬರ್ 23ರಂದು ವಿದ್ಯುತ್ ನಿರ್ವಹಣಾ ಕಾಮಗಾರಿಯು ನಡೆಯಲಿದೆ. ಹೀಗಾಗಿ ಪಟ್ಟಣದ ಸಂತೆಮರಹಳ್ಳಿ ವೃತ್ತ, ನಂಜನಗೂಡು ಮುಖ್ಯ ರಸ್ತೆ, ಗಾಳೀಪುರ, ಸತ್ತಿ ರಸ್ತೆ, ಆರ್‍ಟಿಓ ಕಚೇರಿ ವ್ಯಾಪ್ತಿ, ಸೋಮವಾರಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಾ.ನಗರ : ವಸತಿ ಯೋಜನೆ ಸೌಲಭ್ಯಕ್ಕೆ ಪ.ಜಾ, ಪ.ಪಂ. ವರ್ಗದವರಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯು ವಸತಿ ರಹಿತರಿಗೆ ವಸತಿ ಕಲ್ಪಿಸುವ ಸಲುವಾಗಿ ವಾಜಪೇಯಿ ವಸತಿ ಯೋಜನೆಯಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಸತಿ ರಹಿತರಿಂದ ಅರ್ಜಿ ಆಹ್ವಾನಿಸಿದೆ.
ನಗರಸಭೆ ವ್ಯಾಪ್ತಿಯಲ್ಲಿ ವಾಸವಾಗಿದ್ದು ನಿವೇಶನ ಹೊಂದಿರುವ (ನಗರಸಭೆಯಲ್ಲಿ ಖಾತೆ ಹೊಂದಿರುವ)  ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಅಕ್ಟೋಬರ್ 25ರ ಒಳಗೆ ಪಡೆದು ಭರ್ತಿ ಮಾಡಿ ಅಕ್ಟೋಬರ್ 27ರೊಳಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕರಡು ಮತದಾರರ ಪಟ್ಟಿ ಪ್ರಕಟ
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ನವೆಂಬರ್ ತಿಂಗಳೊಳಗೆ ಚುನಾವಣೆ ನಡೆಸುವ ಸಂಬಂಧ ಕರಡು ಮತದಾರರ ಪಟ್ಟಿ (ಮತದಾರರ ಪ್ರಾರಂಭಿಕ ಪಟ್ಟಿ) ಯನ್ನು ಆಯಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಎಲ್ಲ ಕೃಷಿಕ ಕ್ಷೇತ್ರಗಳು, ಗ್ರಾಮ ಲೆಕ್ಕಿಗರ ಕಚೇರಿ ಹಾಗೂ ತಾಲೂಕು ತಹಸೀಲ್ದಾರ್ ಕಚೇರಿಯಲ್ಲಿ ಅಕ್ಟೋಬರ್ 20ರಂದು ಸಾರ್ವಜನಿಕರ ಮಾಹಿತಿಗೆ ಪ್ರಚುರಪಡಿಸಲಾಗಿದೆ.
 ಸಂಬಂಧಿಸಿದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ಯಾವುದೇ ಕ್ಲೈಮು ಅಥವಾ ಯಾವುದೇ ಹೆಸರನ್ನು ಸೇರಿಸಿರುವ ಬಗ್ಗೆ ಆಕ್ಷೇಪಣೆ, ಯಾವುದೇ ನಮೂದಿನಲ್ಲಿರುವ ವಿವರಗಳ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ನವೆಂಬರ್ 20ರೊಳಗೆ ಸಂಬಂಧಪಟ್ಟ ತಹಸೀಲ್ದಾರ್ ಕಚೇರಿಯಲ್ಲಿ ದಾಖಲು ಮಾಡಬಹುದು. ಅಥವಾ ಸೂಚಿಸಲಾಗಿರುವ ದಿನಾಂಕಕ್ಕೆ ಮುಂಚೆ ತಲುಪಿಸಬಹುದೆಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅ. 27ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 21 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಸತಿ ಯೋಜನೆ ಪ್ರಗತಿ ಸಾಧನೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತಾಕೀತು
ಚಾಮರಾಜನಗರ, ಅ. 22 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ವಸತಿ ಯೋಜನೆಯಡಿ ಇರುವ ವಿವಿಧ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾಂiÀರ್iದರ್ಶಿಗಳಾದ ಶಂಭುದಯಾಳ್ ಮೀನಾ, ತಾಕೀತು ಮಾಡಿದರು.
ನಗರದ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ತಾಲ್ಲೂಕುಗಳಲ್ಲಿ ಇನ್ನೂ 2013-14ನೇ ಸಾಲಿನಡಿ ವಸತಿ ಯೋಜನೆಯಡಿ ಆಯ್ಕೆಯಾಗಿರುವ ಕೆಲ ಫಲಾನುಭವಿಗಳು ಮನೆ ನಿರ್ಮಾಣ ಪೂರ್ಣಗೊಳಿಸಿಲ್ಲ. ಆರಂಭಿಕ ಹಂತದಲ್ಲಿ ಉಳಿದಿರುವ ಈ ಮನೆಗಳನ್ನು ಶೀಘ್ರವೇ ಪೂರ್ಣಗೊಳಿಸಬೇಕು. ಅಧಿಕಾರಿಗಳು ಈ ಸಂಬಂಧ ಆಯಾ ವ್ಯಾಪ್ತಿಯಲ್ಲಿ ಅವಶ್ಯಕ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿದರು.
ವಸತಿ ಯೋಜನೆ ಪ್ರಗತಿ ಹೆಚ್ಚಳವಾಗಲು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಾಗ್ಗೆ ಪ್ರಗತಿ ಪರಾಮರ್ಶೆ ಸಭೆ ನಡೆಸಬೇಕು. ಪಂಚಾಯತ್ ಅಭಿವೃಧ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದು ವಸತಿ ನಿರ್ಮಾಣ ಪೂರ್ಣವಾಗಲು ನಿಗಾ ವಹಿಸಬೇಕು. ಜಿಲ್ಲಾ ಮಟ್ಟದಲ್ಲಿಯೂ ವಸತಿ ಯೋಜನೆ ನಿಗಧಿತ ಅವಧಿಯೊಳಗೆ ಗುರಿ ಮುಟ್ಟಲು ಸಭೆ ನಡೆಸಬೇಕು ಎಂದು ಶಂಭುದಯಾಳ್ ಮೀನಾ ತಿಳಿಸಿದರು.
ಜಿಲ್ಲೆಯಲ್ಲಿನ ಮೇವು, ಕುಡಿಯುವ ನೀರು, ಕೃಷಿ ಬೆಳೆ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿರವರು ಮೇವು ಬೆಳೆಗೆ ಉತ್ತೇಜಿಸುವಂತೆ ಸೂಚಿಸಿದರು. ಕುಡಿಯು ನೀರಿಗೆ ಅಭಾವ ತಲೆದೋರದಂತೆ ಇರುವ ಯೋಜನೆಗಳನ್ನು ಪೂರ್ಣಗೊಳಿಸಿ ಜನರು ಜಾನುವಾರುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಜಿಲ್ಲೆಯಲ್ಲಿ ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿಗೆ ಸಂಬಂಧಿಸಿದಂತೆ ನೀಡಿರುವ ಮಾಹಿತಿಯನ್ನು ಒಳಗೊಂಡ ವರದಿಯನ್ನು ಕಳುಹಿಸಲಾಗಿದೆ. ಬೆಳೆ ಪರಿಹಾರಕ್ಕೆ ರೈತರ ಬ್ಯಾಂಕ್ ಖಾತೆ, ಆಧಾರ್ ವಿವರಗಳನ್ನು ಸಂಗ್ರಹಿಸಲಾಗಿದೆ ಎಂದರು.
ಎಲ್ಲಾ ರೈತರು ಆಧಾರ್ ನೊಂದಣಿ ಮಾಡಿಸಿಕೊಳ್ಳಲು ಅರಿವು ಮೂಡಿಸಬೇಕು. ಎಲ್ಲಾ ಸೌಲಭ್ಯಗಳನ್ನು ಪಡೆಯಲು ಆಧಾರ್ ಕಾರ್ಡ್ ಅಗತ್ಯವಿದೆ ಎಂಬ ಬಗ್ಗೆ ಹೆಚ್ಚಿನ ತಿಳಿವಳಿಕೆ ನೀಡಬೇಕು. ಬ್ಯಾಂಕ್ ಖಾತೆಗೆ ಆದಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಶಂಭುದಯಾಳ್ ಮೀನಾ ತಿಳಿಸಿದರು.
ಇನ್ನಿತರ ಇಲಾಖೆ ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ, ಉಪ ಕಾರ್ಯದರ್ಶಿ ಮುನಿರಾಜಪ್ಪ, ಜಿಲ್ಲಾ ಮಟ್ಟದ ಉಪ ವಿಭಾಗಾಧಿಕಾರಿ ಕವಿತಾ ರಾಜಾರಾಂ, ತಹಶೀಲ್ದಾರರಾದ ಪುರಂದರ, ಚಂದ್ರಮೌಳಿ, ಸಿದ್ದು, ಮಹೇಶ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಡಿಸೆಂಬರ್ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಪೂರ್ಣಗೊಳಿಸಲು ಉಸ್ತುವಾರಿ ಸಚಿವರ ಸೂಚನೆ  
ಚಾಮರಾಜನಗರ, ಅ. 24 (ಕರ್ನಾಟಕ ವಾರ್ತೆ):- ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನ ಹಳ್ಳಿಗಳಿಗೆ ನದಿಮೂಲದಿಂದ ಶಾಶ್ವತವಾಗಿ ನೀರು ಪೂರೈಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಯನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೀರು ಸಮಸ್ಯೆಯನ್ನು ನೀಗಿಸಲು ಅನುಷ್ಟಾವಾಗುತ್ತಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಬಹುಗ್ರಾಮ ಕುಡಿಯುವ ನೀರು ಯೋಜನೆ ಪೂರ್ಣಗೊಂಡರೆ ಚಾಮರಾಜನಗರ, ಗುಂಡ್ಲುಪೇಟೆ ಭಾಗದ ಗ್ರಾಮಗಳಿಗೆ ಕುಡಿಯುವ ನೀರು ಸಮಸ್ಯೆ ಪರಿಹಾರವಾಗಲಿದೆ. ಉಳಿದ ಭಾಗಗಳಲ್ಲಿಯು ಯಾವುದೇ ತೊಂದರೆಯಾಗದಂತೆ ಕುಡಿಯುವ ನೀರು ಯೋಜನೆಗಳನ್ನು ಅನುಷ್ಠಾನ ಮಾಡಬೇಕೆಂದು ಸಚಿವರು ತಿಳಿಸಿದರು.
ಅಭಾವ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರು, ಮೇವು ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕಿದೆ. ಮೇವು ಬೆಳೆಯಲು ನೀರಿನ ಅನುಕೂಲ ಹಾಗೂ ಸಿಬ್ಬಂದಿಯಿರುವ ಫಾರಂಗಳನ್ನು ಗುರುತಿಸಬೇಕು. ಮೇವು ಲಭ್ಯವಿರುವುದನ್ನು ವೀಕ್ಷಿಸಲು ಅಧಿಕಾರಿಗಳು ಕ್ಷೇತ್ರಪ್ರವಾಸ ಮಾಡಬೇಕು. ಎಲ್ಲಿ ಮೇವು ಲಭ್ಯವಿದೆಯೋ ಅಲ್ಲಿ ಖರೀದಿಸಿ ಅಭಾವ ಪರಿಸ್ಥಿತಿಯಲ್ಲಿ ವಿತರಿಸಬೇಕು ಎಂದರು.
ವಸತಿ ಯೋಜನೆಗಳಿಗೆ ಅಗತ್ಯವರುವ ನಿವೇಶನ ದೊರಕಿಸಿಕೊಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ಕರೆದು ಅಗತ್ಯ ಮಾರ್ಗದರ್ಶನ ಮಾಡಬೇಕು. ಸರ್ಕಾರಿ ಜಮೀನು, ಗ್ರಾಮಠಾಣಾಗಳನ್ನು ಪರಿಶೀಲಿಸಬೇಕು. ಖಾಸಗಿ ಜಮೀನು ಖರೀದಿಸಿಯಾದರೂ ಫಲಾನುಭವಿಗಳಿಗೆ ಮನೆ ನಿರ್ಮಾಣ ಮಾಡಿಕೊಡಬೇಕು ಎಂದು ಸಚಿವರು ತಿಳಿಸಿದರು.
ಹಾಸ್ಟಲ್, ಶಾಲೆ, ಕಾಲೇಜು, ಅಂಗನವಾಡಿ, ಸಮುದಾಯ ಭವನಗಳು, ಪ್ರವಾಸೋದ್ಯಮ ಚಟುವಟಿಕೆಗಳಿಗೆ ಸಂಬಂಧಿಸಿದ ಕಟ್ಟಡಗಳ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡುವ ಪ್ರಕ್ರಿಯೆಗೆ ಕಂದಾಯ ಇಲಾಖೆ ಅಧಿಕಾರಿಗಳು ಮುಂದಾಗಬೇಕು. ಜಮೀನು ಲಭ್ಯತೆಯಲ್ಲ ಎಂಬ ಕಾರಣಕ್ಕೆ ಯಾವುದೇ ಅಭಿವೃದ್ಧಿ ಕಾಮಗಾರಿ ಮುಂದೂಡಬಾರದು. ಅಧಿಕಾರಿಗಳು ಕಾರ್ಯಕ್ರಮ ಅನುಷ್ಠಾನಕ್ಕೆ ತೊಡಕು ಕಂಡುಬಂದಲ್ಲಿ ತಮ್ಮನ್ನು ಸೇರಿದಂತೆ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು ಎಂದರು.
ಗ್ರಾಮಗಳಲ್ಲಿಯೂ ಅಕ್ರಮ ಮದ್ಯ ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಇದಕ್ಕೆ ಅವಕಾಶ ನೀಡಬಾರದು ಎಂದು ಸಚಿವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಆರ್. ನರೇಂದ್ರ ಅವರು ವೈನ್‍ಸ್ಟೋರ್‍ಗಳಿಂದಲೇ ಗ್ರಾಮಗಳ ಪೆಟ್ಟಿಗೆ ಅಂಗಡಿಗಳಿಗೆ ಮದ್ಯ ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಸಬೇಕು ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಪ್ರತಿಕ್ರಿಯಿಸಿ ಶೀಘ್ರದಲ್ಲೇ ವೈನ್‍ಸ್ಟೋರ್ ಮಾಲೀಕರು ಹಾಗೂ ಅಧಿಕಾರಿಗಳ ಸಭೆ ಕರೆದು ಅಕ್ರಮವಾಗಿ ಮದ್ಯ ಸರಬರಾಜು ಹಾಗೂ ಮಾರಾಟ ಮಾಡದಿರಲು ಸೂಚಿಸುವುದಾಗಿ ತಿಳಿಸಿದರು.
ವಿವಿಧ ಇಲಾಖೆಗಳ ಪ್ರಗತಿಯನ್ನು ಸುದೀರ್ಘ ಅವಧಿಯಲ್ಲಿ ಉಸ್ತುವಾರಿ ಸಚಿವರು ಪರಿಶೀಲಿಸಿದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎಸ್. ಜಯಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾದ ಚಂದ್ರಶೇಖರ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಬಿ.ಕೆ. ಬೊಮ್ಮಯ್ಯ, ಕೆರೆಹಳ್ಳಿ ನವೀನ್ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಅಕ್ಟೋಬರ್ 25ರಂದು ಹೆಣ್ಣುಮಕ್ಕಳ ರಕ್ಷಣೆ ಕುರಿತ ಅರಿವು ಕಾರ್ಯಕ್ರಮ  
ಚಾಮರಾಜನಗರ, ಅ. 24 (ಕರ್ನಾಟಕ ವಾರ್ತೆ):-  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾಧನಾ ಸಂಸ್ಥೆ ಆಶ್ರಯದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಕುರಿತ ಅರಿವು ಕಾರ್ಯಕ್ರಮವನ್ನು ನಗರದ ಜಿಲ್ಲಾ ನ್ಯಾಯಾಲಯ ಅವರಣದಲ್ಲಿರುವ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಅಕ್ಟೋಬರ್ 25ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್, ಮಳವಳ್ಳಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ ಅಧ್ಯಕ್ಷತೆ ವಹಿಸುವರು.
ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಎಂ. ಭೃಂಗೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್, ಡಿ. ರಾಘವೇಂದ್ರ, ದೀಪಾ, ಜಿಲ್ಲಾ ಸರ್ಕಾರಿ ವಕೀಲರಾದ ಎಚ್.ಎನ್. ಲೋಕೇಶ್, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಸರ್ವೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಂ. ರಶ್ಮಿ, ಬಾಲಕಿಯರ ಬಾಲಮಂದಿರದ ಅಧ್ಯಕ್ಷರಾದ ಟಿ.ಜೆ. ಸುರೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.


ಅ. 26ರಂದು ಚಂದಕವಾಡಿಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 25 (ಕರ್ನಾಟಕ ವಾರ್ತೆ):- ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 26ರಂದು ಬೆಳಿಗ್ಗೆ 10.30 ಗಂಟೆಗೆ ಚಾಮರಾಜನಗರ ತಾಲೂಕಿನ ಚಂದಕವಾಡಿ ಹೋಬಳಿ ನಾಡಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆ ನಡೆಯಲಿದೆ.
ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳುವಂತೆ ತಾಲೂಕು ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಅ. 27ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 25 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಅಕ್ಟೋಬರ್ 27ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಕೌಟ್ ಮಾಸ್ಟರ್ ಲಾಜರ್ ನಿಧನಕ್ಕೆ ಶ್ರದ್ಧಾಂಜಲಿ
ಚಾಮರಾಜನಗರ, ಅ. 25 (ಕರ್ನಾಟಕ ವಾರ್ತೆ):- ಇತ್ತೀಚೆಗೆ ನಡೆದ ಅಪಘಾತದಲ್ಲಿ ಮೃತಪಟ್ಟ ಸ್ಕೌಟ್ ಮಾಸ್ಟರ್ ಹಾಗೂ ಕೊಳ್ಳೇಗಾಲ ಪ್ರಕಾಶ್ ಪಾಳ್ಯದ ಹಿರಿಯ ಪ್ರಾಥಮಿಕ ಶಾಲೆಯ ಎ. ಲಾಜರ್ ಅವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯು ಶ್ರದ್ಧಾಂಜಲಿ ಸಲ್ಲಿಸಿದೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯು ನಗರದ ಕೇಂದ್ರ ಕಚೇರಿಯಲ್ಲಿ ಲಾಜರ್ ಅವರ ನಿಧನಕ್ಕೆ ಒಂದು ನಿಮಿಷಗಳ ಮೌನ ಆಚರಿಸುವ ಮೂಲಕ ಗೌರವ ಸಲ್ಲಿಸಿತು. ಜಿಲ್ಲಾ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಜಿ.ಆರ್. ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಜರ್ ಅವರ ಸೇವೆಯನ್ನು ಸ್ಮರಿಸಲಾಯಿತು.
ಶಿಸ್ತು, ಸಮಯಪಾಲನೆ, ಬಡವರಿಗೆ ಧನಸಹಾಯ, ಸ್ಕೌಟ್ ಮಕ್ಕಳಿಗೆ ಉಚಿತ ಸಮವಸ್ತ್ರ ಇನ್ನಿತರ ಸಲಕರಣೆಗಳನ್ನು ಒದಗಿಸುವಲ್ಲಿ ಅಪಾರ ಕಾಳಜಿ ತೋರುತ್ತಿದ್ದರು. ರಾಜ್ಯ ಹಾಗೂ ಜಿಲ್ಲಾ ಜಾಂಬೂರಿ ರ್ಯಾಲಿಗಳಲ್ಲಿ ನಾಯಕತ್ವ ವಹಿಸಿ ಜಿಲ್ಲಾ ಸಂಸ್ಥೆಗೆ ಕೀರ್ತಿ ತಂದಿದ್ದರೆಂದು ಸಂಸ್ಥೆಯ ಪ್ರತಿನಿಧಿಗಳು ಸ್ಮರಿಸಿದರು.
ಲಾಜರ್ ಅವರ ಅಗಲಿಕೆ ನೋವನ್ನು ಅವರ ಕುಟುಂಬದ ಸದಸ್ಯರು ಹಾಗೂ ಬಳಗದವರು ಹಾಗೂ ಸ್ನೇಹಿತರಿಗೆ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಭೆಯಲ್ಲಿ ಪ್ರತಿನಿಧಿಗಳು ವ್ಯಕ್ತಪಡಿಸಿದರು.
ಜಿಲ್ಲಾ ಸ್ಕೌಟ್ ಆಯುಕ್ತರಾದ ಮಲ್ಲಿಕಾರ್ಜುನಸ್ವಾಮಿ, ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಯಳಂದೂರು : ವಸತಿ ಯೋಜನೆ ಪ್ರಯೋಜನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 25 (ಕರ್ನಾಟಕ ವಾರ್ತೆ):- ಯಳಂದೂರು ಪಟ್ಟಣ ಪಂಚಾಯಿತಿಯು ವಾಜಪೇಯಿ ವಸತಿ ಯೋಜನೆಯಡಿ ಮನೆ ನಿರ್ಮಾಣಕ್ಕೆ ನೀಡಲಾಗುವ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನಿಸಿದೆ.
ಒಟ್ಟು 1.20 ಲಕ್ಷ ರೂ.ಗಳನ್ನು ಮನೆ ನಿರ್ಮಾಣ ವೆಚ್ಚಕ್ಕೆ ನೀಡಲಾಗುತ್ತದೆ. ಪರಿಶಿಷ್ಟ ಜಾತಿಗೆ 37, ಪರಿಶಿಷ್ಟ ಪಂಗಡದವರಿಗೆ 46, ಅಲ್ಪಸಂಖ್ಯಾತರಿಗೆ 1 ಹಾಗೂ ಸಾಮಾನ್ಯ ವರ್ಗದವರಿಗೆ 5 ಮನೆ ನಿರ್ಮಾಣ ಗುರಿ ನಿಗದಿ ಮಾಡಲಾಗಿದೆ.
ಅರ್ಜಿದಾರರು ಸ್ವಂತ ನಿವೇಶನ ಹೊಂದಿರಬೇಕು. ಸಂಬಂಧಿಸಿದ ಖಾತಾ ಹಕ್ಕುಪತ್ರ ಹೊಂದಿರಬೇಕು. ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಬಿಪಿಎಲ್ ಪಡಿತರ ಚೀಟಿ, ವಾಸಸ್ಥಳ ದೃಢೀಕರಣ ಪತ್ರ ಇನ್ನಿತರ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನವೆಂಬರ್ 5ರೊಳಗೆ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಾರ್ಯಾಲಯ ಸಂಪರ್ಕಿಸುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಕ್ಷೇತ್ರದ ಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 25 (ಕರ್ನಾಟಕ ವಾರ್ತೆ):- ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ, ಸ್ವಯಂಸೇವಾಸಂಸ್ಥೆ ಹಾಗೂ ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೈ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವವರು ಹಾಗೂ ಶಿಕ್ಷಕರಿಗೆ ನೀಡಲಾಗುವ ರಾಜ್ಯಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ವೆಬ್ ಸೈಟ್ ತಿತಿತಿ.ತಿeಟಜಿಚಿಡಿeoಜಿಜisಚಿbಟeಜ.ಞಚಿಡಿ.ಟಿiಛಿ.iಟಿ ನಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿಗೆ ಅಕ್ಟೋಬರ್ 28ರೊಳಗೆ ಸಲ್ಲಿಸಬೇಕಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ. 08226-223688 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಅ. 27ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಅ. 26 (ಕರ್ನಾಟಕ ವಾರ್ತೆ):- ನಾಗರಿಕರ ಕುಂದುಕೊರತೆ, ಸಮಸ್ಯೆ, ಅಹವಾಲು ಆಲಿಸುವ ಸಲುವಾಗಿ ಸಹಕಾರ, ಸಕ್ಕರೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಧ್ಯಕ್ಷತೆ ಹಾಗೂ ಇತರೆ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಅಕ್ಟೋಬರ್ 27ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ.
ಈ ಸಭೆಯಲ್ಲಿ ನಾಗರಿಕರು ತಮ್ಮ ಅಹವಾಲು, ಕುಂದುಕೊರತೆ ಸಮಸ್ಯೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 27ರಂದು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ
ಚಾಮರಾಜನಗರ, ಅ. 26 (ಕರ್ನಾಟಕ ವಾರ್ತೆ):- ರಾಷ್ಟ್ರೀಯ ಹೆದ್ದಾರಿ 209ಕ್ಕೆ ಸಂಬಂಧಪಟ್ಟ ರಸ್ತೆ ಅಗಲೀಕರಣ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮವು ಅಕ್ಟೋಬರ್ 27ರಂದು ಬೆಳಿಗ್ಗೆ 10 ಗಂಟೆಗೆ ಯಳಂದೂರು ಪಟ್ಟಣದಲ್ಲಿ ಹಾಗೂ ಮಧ್ಯಾಹ್ನ 12 ಗಂಟೆಗೆ ಚಾಮರಾಜನಗರ ಪಟ್ಟಣದಲ್ಲಿ ನಡೆಯಲಿದೆ.
ಲೋಕೋಪಯೋಗಿ ಸಚಿವರಾದ ಎಚ್.ಸಿ. ಮಹದೇವಪ್ಪ, ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲೆಯ ಶಾಸಕರು, ಇತರೆ ಜನಪ್ರತಿನಿಧಿಗಳು ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

ನ. 1ರಂದು ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ಅ. 26 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಧ್ವಜಾರೋಹಣ ನೆರವೇರಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಅಂದು ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5.30ರಿಂದ 6.30 ಗಂಟೆಯವರೆಗೆ ಸಿ.ಎಂ ನರಸಿಂಹಮೂರ್ತಿ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. 7.30 ರಿಂದ 8.30 ಗಂಟೆಯವರೆಗೆ ಚಾಮರಾಜನಗರದ ಕಲಾಸರಸ್ವತಿ ನಾಟ್ಯ ಸಂಸ್ಥೆಯ ಕಲಾವಿದರು ಅಕ್ಷತಾ ಎಸ್ ಜೈನ್ ನಿರ್ದೇಶನದಲ್ಲಿ ಕನ್ನಡ ವೈಭವ ಎಂಬ ನೃತ್ಯರೂಪಕ ಪ್ರಸ್ತುತಪಡಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.



ಅ. 28ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ  ಕುರಿತ ಅರಿವು ಕಾರ್ಯಕ್ರಮ  
ಚಾಮರಾಜನಗರ, ಅ. 26 (ಕರ್ನಾಟಕ ವಾರ್ತೆ):-  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತ ಅರಿವು ಕಾರ್ಯಕ್ರಮವನ್ನು ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಅಕ್ಟೋಬರ್ 28ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್, ಮಳವಳ್ಳಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಅನಿಲ್ ಕುಮಾರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ನಾಗರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಮಹೇಂದ್ರ, ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿ ಡಾ. ಜನಾರ್ಧನ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ನಗರದÀ ಜಿಲ್ಲಾ ಆಸ್ಪತ್ರೆಯ ಮನೋತಜ್ಞರಾದ ಡಾ. ರಾಜೇಶ್ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ. ಸಿ. ರಾಜು ಅವರು ಮಾನಸಿಕ ಆರೋಗ್ಯದ ಕುರಿತು ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದೆ.


ಕೊಳ್ಳೇಗಾಲ : ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಅ. 26 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ನಗರಸಭೆಯು 2016-17ನೇ ಸಾಲಿನ ಶೇ.24.10, ಶೇ. 7.25 ಹಾಗೂ ಶೇ.3ರ ಎಸ್ ಎಫ್ ಸಿ ಮುಕ್ತನಿಧಿ, ನಗರಸಭಾ ಅನುದಾನದಡಿ ನೀಡಲಿರುವ ವಿವಿಧ ಸೌಲಭ್ಯಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ವಿಕಲಚೇತನರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿಯನ್ನು ನವೆಂಬರ್ 15 ವಿತರಿಸಲಾಗುತ್ತದೆ. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ನವೆಂಬರ್ 21 ಕಡೆಯ ದಿನವಾಗಿದೆ. ಅರ್ಜಿಯೊಂದಿಗೆ ಸಲ್ಲಿಸಲಾಗುವ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಬೇಕಿದೆ. ಹೆಚ್ಚಿನ ಮಾಹಿತಿಗೆ ನಗರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕುಡಿಯುವ ನೀರು, ಮೇವು ಪೂರೈಕೆಗೆ ಆದ್ಯತೆ : ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ಅ. 26 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಹಾಗೂ ಮೇವು ಪೂರೈಕೆಗೆ ಆದ್ಯತೆ ನೀಡಲಾಗುವುದೆಂದು ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ತಾಲೂಕಿನ ಚಂದಕವಾಡಿ ಹೋಬಳಿ ನಾಡಕಚೇರಿ ಆವರಣದಲ್ಲಿ ಇಂದು ನಡೆದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿಯೂ ಅಭಾವ ಪರಿಸ್ಥಿತಿ ಎಲ್ಲೆಡೆ ಇದೆ. ಹೀಗಾಗಿ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುವುದು. ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ನೋಡಿಕೊಳ್ಳುವ ಸಲುವಾಗಿ ಮೇವು ಖರೀದಿ ಪ್ರಕ್ರಿಯೆಯನ್ನು ಸಹ ನಡೆಸಲಾಗುತ್ತದೆ. ಗೋಶಾಲೆ ಪ್ರಾರಂಭಕ್ಕೂ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಶಾಸಕರು ತಿಳಿಸಿದರು.
ಚಂದಕವಾಡಿ ಹೋಬಳಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ ರಸ್ತೆ ಕಾಮಗಾರಿ ಪ್ರಗತಿಯಲ್ಲಿದೆ. ಚಂದಕವಾಡಿ, ಕೋಡಿಮೋಳೆ, ನಲ್ಲೂರು ಹಾಗೂ ನಾಗವಳ್ಳಿಯಲ್ಲಿ ರಸ್ತೆ ಬದಿಯಲ್ಲಿ ಬಾಕ್ಸ್ ಚರಂಡಿಗಳನ್ನು ಸಹ ನಿರ್ಮಾಣ ಮಾಡಲಾಗುತ್ತದೆ. ಚಂದಕವಾಡಿ ಸೇತುವೆ ಪುನಶ್ಚೇತನ ಕಾಮಗಾರಿಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು.
ತಾಲೂಕಿನಲ್ಲಿ 150 ರಿಂದ 160 ಅರ್ಹ ಫಲಾನುಭವಿಗಳಿಗೆ ಬಗರ್ ಹುಕುಂ ಸಾಗುವಳಿಯಡಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು. ವಿವಿಧ ನಿಗಮಗಳಿಗೆ ಸಾಲಸೌಲಭ್ಯ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಆಯ್ಕೆ ಪ್ರಕ್ರಿಯೆ ಕೈಗೊಂಡು ಸವಲತ್ತುಗಳನ್ನು ಪಡೆಯಲು ಅನುಕೂಲ ಕಲ್ಪಿಸಲಾಗುವುದು ಎಂದು ಪುಟ್ಟರಂಗ ಶೆಟ್ಟಿ ಅವರು ತಿಳಿಸಿದರು.
ಪಡಿತರ ವಿತರಣೆಯಲ್ಲಿ ಲೋಪವಾಗುತ್ತಿದೆ ಎಂಬ ಬಗ್ಗೆ ಸಭೆಯಲ್ಲಿ ಸಾಕಷ್ಟು ದೂರುಗಳು ವ್ಯಕ್ತವಾಗಿವೆ. ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ವಿಚಕ್ಷಣಾ ದಳ ಸಕ್ರಿಯವಾಗಿ ಕಾರ್ಯ ನಿರ್ವಹಿಸಿದರೆ ಪಡಿತರ ವ್ಯವಸ್ಥೆಯನ್ನು ಸುಧಾರಿಸಬಹುದು. ಈ ಬಗ್ಗೆ ಸ್ಥಳೀಯವಾಗಿ ಪರಿಣಾಮಕಾರಿಯಾಗಿ ಕಾರ್ಯೋನ್ಮುಖರಾಗಬೇಕೆಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ ಮಾತನಾಡಿ ವೈದ್ಯರು ಹಾಗೂ ನರ್ಸ್ ಹುದ್ದೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯರು ಹಾಗೂ ನರ್ಸ್ ಹುದ್ದೆಗಳಿಗೆ ನಿಯೋಜನೆ ಮಾಡುವ ಮೂಲಕ ಅನುಕೂಲ ಕಲ್ಪಿಸಿಕೊಡಲಾಗುತ್ತದೆ ಎಂದರು.
ಜನರ ಬಳಿಗೆ ತೆರಳಿ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗುತ್ತದೆ. ಸಭೆಯಲ್ಲಿ ಕೇಳಿಬರುವ ಸಮಸ್ಯೆಗಳನ್ನು ಇತ್ಯರ್ಥಪಡಿಸಲು  ಕಾರ್ಯೋನ್ಮುಖರಾಗಲಿದ್ದೇವೆ. ಜನತೆ ಜನಸಂಪರ್ಕ ಸಭೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಸದಾಶಿವಮೂರ್ತಿ ಸಲಹೆ ಮಾಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಜಿಲ್ಲೆಯಲ್ಲಿ ಇಲಾಖೆ ಅಧಿಕಾರಿಗಳು ಸರ್ಕಾರದ ಯೋಜನೆ ಸೌಲಭ್ಯವನ್ನು ಸಕಾಲದಲ್ಲಿ ತಲುಪಿಸಬೇಕು. ಮನಸ್ವಿನಿ ಸೇರಿದಂತೆ ಇತರೆ ಫಲಾನುಭವಿಗಳಿಗೆ ನೀಡಲಾಗುವ ಮಾಸಿಕ ವೇತನ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ ಪ್ರಯೋಜನ ಪಡೆಯಲು ಕ್ರಮ ತೆಗೆದುಕೊಳ್ಳಬೇಕು. ಅಧಿಕಾರಿಗಳು ಹೆಚ್ಚಿನ ಪರಿಶ್ರಮ ವಹಿಸಿದರೆ ಜನರ ಸಮಸ್ಯೆಗಳು ಶೀಘ್ರ ಪರಿಹಾರವಾಗಲಿದೆ ಎಂದರು.
ಜನಸಂಪರ್ಕ ಸಭೆಯಲ್ಲಿ ಪಡಿತರ ವಿತರಣೆ, ವಿದ್ಯಾರ್ಥಿ ವೇತನ, ಮರಳು ಅಭಾವ, ಅಂಗನವಾಡಿ ಕಟ್ಟಡ, ಅಂತ್ಯಸಂಸ್ಕಾರ ನೆರವು, ರಸ್ತೆ, ಒಳಚರಂಡಿ ಸೇರಿದಂತೆ ನಾನಾ ಸಮಸ್ಯೆಗಳನ್ನು ಗ್ರಾಮಸ್ಥರು ಪ್ರಸ್ತಾಪಿಸಿದರು. ಲಿಖಿತ ಅರ್ಜಿಗಳನ್ನು ಸಹ ಶಾಸಕರಿಗೆ ಸಲ್ಲಿಸಿದರು.
ತಾಲೂಕು ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಸದಸ್ಯರಾದ ಮಹದೇವಸ್ವಾಮಿ, ಕುಮಾರನಾಯಕ, ಶೈಲಜ, ಮಾವು ಅಭಿವೃದ್ಧಿ ನಿಗಮದ ನಿರ್ದೇಶಕರಾದ ಬಿ.ಕೆ. ರವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಿದ್ದಪ್ಪಾಜಿ, ಶಿವಮ್ಮ, ಉಪವಿಭಾಗಾಧಿಕಾರಿ ಕವಿತಾ ರಾಜಾರಾಂ, ತಹಸೀಲ್ದಾರ್ ಪುರಂಧರ, ಉಪತಹಸೀಲ್ದಾರ್ ಶಂಕರರಾವ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಅಕ್ಟೋಬರ್ 27, ನವೆಂಬರ್ 1ರಂದು ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ ಅ 26(ಕರ್ನಾಟಕ ವಾತೆ) ಸಹಕಾರ ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉsಸ್ತುವಾರಿ ಸಚಿವರಾದ ಹೆಚ್.ಎಸ್.ಮಹದೇವ ಪ್ರಸಾದ್ ಅವರು ಅಕ್ಟೋಬರ್ 27 ಹಾಗೂ ನವೆಂಬರ್ 1ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 27ರಂದು ಬೆಳಿಗ್ಗೆ 10.30 ಗಂಟೆಗೆ ಯಳಂದೂರಿಗೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ 209 ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳುವರು. ಮಧ್ಯಾಹ್ನ 12.30 ಗಂಟೆಗೆ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ನಗರದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 5 ಗಂಟೆಗೆ ಮೈಸೂರಿಗೆ ತೆರಳುವರು.

ನವೆಂಬರ್ 1ರಂದು ಬೆಳಿಗ್ಗೆ ಚಾಮರಾಜನಗರಕ್ಕೆ ಆಗಮಿಸಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳುವರು. ಮಧ್ಯಾಹ್ನ 2 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

ಅಕ್ಟೋಬರ್ 27 ಲೊಕೋಪಯೋಗಿ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ ಅ 26(ಕರ್ನಾಟಕ ವಾತೆ) ಲೊಕೋಪಯೋಗಿ ಸಚಿವರಾದ ಡಾ: ಹೆಚ್ ಸಿ ಮಹದೇವಪ್ಪ ಅಕ್ಟೋಬರ್ 27 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಕ್ಟೋಬರ್ 27ರಂದು ಬೆಳಿಗ್ಗೆ 11.30 ಗಂಟೆಗೆ ಯಳಂದೂರಿಗೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳುವರು ಮಧ್ಯಾಹ್ನ 1.30 ಗಂಟೆಗೆ ನಗರಕ್ಕೆ ಆಗಮಿಸಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡುವÀ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.15 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.




ಚಾಮರಾಜನಗರ ಯಳಂದೂರು ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗೆ ಚಾಲನೆ
ಚಾಮರಾಜನಗರ/ಯಳಂದೂರು ಅ.27 (ಕರ್ನಾಟಕ ವಾರ್ತೆ)- ಚಾಮರಾಜನಗರ ಜಿಲ್ಲಾ ಕೇಂದ್ರ ಹಾಗೂ ಯಳಂದೂರು ಪಟ್ಟಣ ಪರಿಮಿತಿಯ ರಾಷ್ಟ್ರೀಯ ಹೆದ್ದಾರಿ 209 ವಿಸ್ತರಣೆ ಮತ್ತು ಅಭಿವೃದ್ದಿ ಕಾಮಗಾರಿಗೆ ಇಂದು ಚಾಲನೆ ದೊರೆಯಿತು.
ಲೋಕೋಪಯೋಗಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ಚಾಮರಾಜನಗರ ಹಾಗೂ ಯಳಂದೂರು ಪಟ್ಟಣದಲ್ಲಿ ಹೆದ್ದಾರಿ ವಿಸ್ತರಣೆಗೆ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಲೋಕೋಪಯೋಗಿ ಸಚಿವರಾದ ಮಹದೇವಪ್ಪ ಅವರು ಚಾಮರಾಜನಗರದಿಂದ ಗುಂಡ್ಲುಪೇಟೆ ವರೆಗಿನ 35 ಕಿ.ಮೀ. ರಾಷ್ಟ್ರೀಯ ಹೆದ್ದಾರಿಯನ್ನು ಮೇಲ್ದರ್ಜೆಗೆ ಏರಿಸುವ ಸಂಭಂದ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದರಿಂದ ಗುಂಡ್ಲುಪೇಟೆ ಯಲ್ಲಿನ ರಾಷ್ಟ್ರೀಯ ಹೆದ್ದಾರಿಯನ್ನು  ಸಂಪರ್ಕಿಸಲಾಗುತ್ತದೆ. ಈ ಕಾರ್ಯದಿಂದ ವಾಣಿಜ್ಯ ಉದ್ಯಮ ವಹಿವಾಟು ಮತ್ತು ಪ್ರವಾಸೋಧ್ಯಮಕ್ಕೆ  ಅನುಕೂಲವಾಗುತ್ತದೆ ಎಂದರು.
ಸರ್ಕಾರ ರಾಜ್ಯದಲ್ಲಿ 10 ಸಾವಿರಕ್ಕು ಹೆಚ್ಚು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಮಾಡಿದೆ.  12 ಸಾವಿರ ಕಿ.ಮೀ. ಹೆಚ್ಚು ರಸ್ತೆಯನ್ನು ಅಭಿವೃದ್ದಿ ಪಡಿಸಲಾಗಿದೆ. ಇನ್ನು 20 ಸಾವಿರ ಕಿ.ಮೀ. ರಸ್ತೆಯನ್ನು ಅಭಿವೃದ್ದಿ ಪಡಿಸಲಾಗುತ್ತದೆ ಎಂದರು.
ಚಾಮರಾಜನಗರ ಪಟ್ಟಣದ ಬಿ.ರಾಚಯ್ಯ ಜೋಡಿರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ದಿ ಪಡಿಸುವ ಕ್ರಿಯಾ ಯೋಜನೆಗೆ ಇಲಾಖೆಯಿಂದ ತ್ವರಿತವಾಗಿ ಅನುಮೋದನೆ ನೀಡಲಾಗುವುದು. ಜಿಲ್ಲಾ ಆಡಳಿತ ಭವನದ ಆವರಣದಲ್ಲಿರುವ ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಗೋಪುರ ನಿರ್ಮಾಣ ಮಾಡುವಂತೆಯು ಪ್ರಸ್ತಾವನೆ ಬಂದಿದೆ ಈ ಕುರಿತು ಸಹ ಕ್ರಮ ವಹಿಸಲಾಗುವುದು ಎಂದು ಮಹದೇವಪ್ಪ ತಿಳಿಸಿದರು.
ಸಹಕಾರ ಸಕ್ಕರೆ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ಮಾತನಾಡಿ, ರಾಜ್ಯ ಸರ್ಕಾರ ರಸ್ತೆ ಅಭಿವೃದ್ದಿಗೆ ಹೆಚ್ಚು ಗಮನ ನೀಡಿದೆ. ಜಿಲ್ಲೆಯಲ್ಲಿ 150 ಕಿ.ಮೀ. ರಾಜ್ಯ ಹೆದ್ದಾರಿ ರಸ್ತೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗಿದೆ. ಲೋಕೋಪಯೋಗಿ ಇಲಾಖೆಯು 85 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ 209ರ ವಿಸ್ತರಣೆಯಿಂದಾಗಿ ವಸತಿ ಕಳೆದುಕೊಳ್ಳಲಿರುವ ಜನರಿಗೆ ಯಡಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿ ನಿವೇಶನ ನೀಡಿ 3.65 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸಿಕೊಡಲಾಗುತ್ತದೆ. ಕಟ್ಟಡಗಳ ಮಾಲೀಕರಿಗು ಪರಿಹಾರ ವಿತರಣೆ ಮಾಡಲಾಗುತ್ತದೆ. ರಸ್ತೆ ಅಗಲೀಕರಣದಿಂದ ಜಿಲ್ಲೆಯ ಅಭಿವೃದ್ದಿಗೆ ಅನುಕೂಲವಾಗಲಿದೆ. ಹೀಗಾಗಿ ಜನತೆ ಸಹಕಾರ ನೀಡಬೇಕೆಂದು ಉಸ್ತುವಾರಿ ಸಚಿವರು ಮನವಿ ಮಾಡಿದರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಮಾತನಾಡಿ, ಬೆಂಗಳೂರು, ಕನಕಪುರ, ಕೊಳ್ಳೇಗಾಲ, ಯಳಂದೂರು, ನಗರ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು 1200 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಪಟ್ಟಣ ಪ್ರದೇಶಗಳಲ್ಲಿ ಬೈಪಾಸ್ ನಿರ್ಮಾಣವಾಗಲಿದೆ. ಕಾಮಗಾರಿಗೆ ಶೇ.75 ರಷ್ಟು ಭೂ ಸ್ವಾದೀನ ಪ್ರಕ್ರೀಯೆ ಪೂರ್ಣವಾಗಿದೆ ಎಂದರು.
ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹಾಗು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ, ನಗರದಲ್ಲಿ ಒಳಚರಂಡಿ ಕಾಮಗಾರಿಯಿಂದ ಬಹುತೇಕ ರಸ್ತೆ ಹಾಳಾಗಿದೆ. ಹೀಗಾಗಿ ನಗರಕ್ಕೆ ಮತ್ತು ತಾಲೂಕಿಗೆ ಪರಿಶಿಷ್ಟಜಾತಿ, ಪರಿಶಿಷ್ಟ ವರ್ಗದ ಕಲ್ಯಾಣ ಅನುದಾನದಡಿ ರಸ್ತೆ ಅಭಿವೃದ್ದಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು.
ಶಾಸಕರಾದ ಎಸ್.ಜಯಣ್ಣ ಮಾತನಾಡಿ, ರಸ್ತೆ ವಿಸ್ತರಣೆಯಿಂದ ಅಂಗಡಿ ಮುಂಗಟ್ಟು ಮನೆ ಕಳೆದುಕೊಳ್ಳುವ ಮಾಲೀಕರಿಗೆ ಪರಿಹಾರ ನೀಡಲು ಜಿಲ್ಲಾಡಳಿತ ಸಿದ್ದವಾಗಿದೆ. ಹೀಗಾಗಲೇ ರಸ್ತೆ ಅಗಲೀಕರಣದಿಂದ ನಷ್ಟವಾಗಲಿರುವ ಆಸ್ತಿ, ಪಾಸ್ತಿಗಳನ್ನು ಗುರುತಿಸಲಾಗಿದೆ. ಅಭಿವೃದ್ದಿಯ ಹಿತ ದೃಷ್ಠಿಯಿಂದ ಜನತೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಅದ್ಯಕ್ಷರಾದ ಎಂ.ರಾಮಚಂದ್ರ, ಉಪಾದ್ಯಕ್ಷರಾದ ಬಸವರಾಜು, ಜಿ.ಪಂ.ಸದಸ್ಯರಾದ ಕೆ.ಪಿ.ಸದಾಶಿವಮೂರ್ತಿ, ಯೋಗೇಶ್, ಉಮಾವತಿಸಿದ್ದರಾಜು, ಯಳಂದೂರು ತಾ.ಪಂ.ಅದ್ಯಕ್ಷರಾದ ನಂಜುಂಡಯ್ಯ, ಪಟ್ಟಣ ಪಂಚಾಯಿತಿ ಅದ್ಯಕ್ಷರಾದ ಲಿಂಗರಾಜು, ಉಪಾದ್ಯಕ್ಷರಾದ ಬೀಮಪ್ಪ, ಚಾಮರಾಜನಗರ ತಾಲೂಕು ಪಂಚಾಯಿತಿ ಅದ್ಯಕ್ಷರಾದ ಹೆಚ್.ವಿ.ಚಂದ್ರು, ನಗರಸಭೆ ಅದ್ಯಕ್ಷರಾದ ರೇಣುಕಾ, ಉಪಾದ್ಯಕ್ಷರಾದ ಆರ್.ಎಂ.ರಾಜಪ್ಪ, ಚೂಡಾ ಅದ್ಯಕ್ಷ ಸಯ್ಯದ್‍ರಫಿ, ಜಿಲ್ಲಾಧಿಕಾರಿ ಬಿ.ರಾಮು ಇತರರು ಉಪಸ್ಥಿತರಿದ್ದರು.    
ನಾಗರಿಕರ ಸಮಸ್ಯೆ ಇತ್ಯರ್ಥಕ್ಕೆ ಕ್ರಮ: ಎಚ್.ಎಸ್.ಮಹದೇವಪ್ರಸಾದ್



ಚಾಮರಾಜನಗರ ಅ.27 (ಕರ್ನಾಟಕ ವಾರ್ತೆ)- ನಾಗರಿಕರ ಕುಂದುಕೊರತೆ ಆಲಿಸಿ ಪರಿಹರಿಸುವ ಸಲುವಾಗಿ ಆಯೋಜಿಸಲಾಗಿರುವ ಜನಸಂಪರ್ಕ ಸಭೆಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಗಂಬೀರವಾಗಿ ಪರಿಗಣಿಸಿ ಪರಿಹಾರ ಒದಗಿಸಲಾಗುವುದೆಂದು ಸಹಕಾರ ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್.ಮಹದೇವಪ್ರಸಾದ್ ತಿಳಿಸಿದರು.
  ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ ವತಿಯಿಂದ ನಾಗರಿಕರ ಸಮಸ್ಯೆ ಆಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಜನತೆಯಿಂದ ಅರ್ಜಿ ಸ್ವೀಕರಿಸಿದ ಬಳಿಕ ಸಚಿವರು ಮಾತನಾಡಿದರು.
 ಇಂದಿನ ಜನಸಂಪರ್ಕ ಸಭೆಯಲ್ಲಿ 133 ಅರ್ಜಿಗಳು ಬಂದಿವೆ. ಕಂದಾಯ ಇಲಾಖೆಗೆ ಸಂಭಂದ ಪಟ್ಟಂತೆ 43 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ರೈತ ಸಂಘಟನೆಗಳು, ವಿವಿಧ ಸಂಘ ಸಂಸ್ಥೆಗಳು ಇತರರು ಸಾಮೂಹಿಕವಾಗಿ ಸಮಸ್ಯೆಗಳ ಕುರಿತು ಅರ್ಜಿಯನ್ನು ಸಲ್ಲಿಸಿದ್ದಾರೆ. ಅಲ್ಲದೆ ವೈಯಕ್ತಿಕವಾಗಿಯೂ ಸಮಸ್ಯೆಗಳನ್ನು ಕುರಿತ ಮನವಿಗಳನ್ನು ಸ್ವೀಕರಿಸಲಾಗಿದೆ ಎಂದರು.
  ಸಾರಿಗೆ ಸೌಲಭ್ಯ ವ್ಯವಸ್ಥೆ ಒದಗಿಸಲು ಮನವಿ ಬಂದಿದೆ. ರಾಷ್ಟ್ರೀಯ ವಿಸ್ತರಣೆಯಿಂದ ಮನೆ ಇನ್ನಿತರ ಆಸ್ತಿ, ಪಾಸ್ತಿ ಕಳೆದು ಕೊಳ್ಳುವ ಮಾಲೀಕರು ಪರಿಹಾರ ಕೋರಿ ಸಂಭಂದ ಅರ್ಜಿ ನೀಡಿದ್ದಾರೆ, ಕೆರೆಗಳ ಹೂಳು ತೆಗೆಯುವಿಕೆ, ಶವ ಸಂಸ್ಕಾರ ನೆರವು ಧನ, ವಿವಿಧ ನಿಗಮಗಳಿಂದ ಸಾಲ ಸೌಲಭ್ಯ ಇತರೆ ಸವಲತ್ತುಗಳನ್ನು ಒದಗಿಸುವಂತೆ ಕೋರಿ ಮನವಿಗಳು ಹೆಚ್ಚಾಗಿ ಬಂದಿವೆ ಎಂದು ಉಸ್ತುವಾರಿ ಸಚಿವರು ತಿಳಿಸಿದರು.
  ಜನಸಂಪರ್ಕ ಸಭೆಯಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸ್ಥಳದಲ್ಲಿಯೇ ತಾವೇ ಖುದ್ದು ಷರಾ ಬರೆದು ವಹಿಸ ಬೇಕಿರುವ ಕ್ರಮಗಳ ಬಗ್ಗೆ ಸೂಚಿಸಿದ್ದೇನೆ. ಸಂಭಂದಪಟ್ಟ ಅರ್ಜಿದಾರರಿಗೆ ತ್ವರಿತವಾಗಿ ಸಮಸ್ಯೆ ಇತ್ಯರ್ಥ ಪಡಿಸಲು ನಿರ್ದೇಶನ ನೀಡಲಿದ್ದೇನೆ. ಸಭೆಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಗಂಭೀರವಾಗಿ ಪರಿಶೀಲಿಸಲು ಕಟ್ಟು ನಿಟ್ಟಿನ ನಿರ್ದೇಶನ ನೀಡುವುದಾಗಿ ಸಚಿವರು ತಿಳಿಸಿದರು.
 ಕಳೆದ ಜಿಲ್ಲಾ ಮಟ್ಟದ  ಜನ ಸಂಪರ್ಕ ಸಭೆಯಲ್ಲಿ 165 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ 160 ಅರ್ಜಿಗಳನ್ನು ಪರಿಶೀಲಿಸಿ ಇತ್ಯರ್ಥ ಪಡಿಸಲಾಗಿದೆ. ಬಾಕಿ ಉಳಿದ 5 ಅರ್ಜಿಗಳಿಗು ಸಂಭಂದ ಪಟ್ಟಂತೆ ಶೀಘ್ರ ವಿಲೇವಾರಿ ಮಾಡಿ ಪರಿಹರಿಸಲು ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
   ಶಾಸಕರಾದ ಸಿ.ಪುಟ್ಟರಂಗಶೆಟ್ಟಿ,  ಎಸ್.ಜಯಣ್ಣ, ಜಿ.ಪಂ.ಅದ್ಯಕ್ಷರಾದ ರಾಮಚಂದ್ರ, ಉಪಾಧ್ಯಕ್ಷ ಬಸವರಾಜು, ನಗರಸಭೆ ಅದ್ಯಕ್ಷರಾದ ರೇಣುಕಾ, ತಾ.ಪಂ.ಅದ್ಯಕ್ಷರಾದ ಎಚ್.ವಿ.ಚಂದ್ರು, ಚೂಡಾ ಅದ್ಯಕ್ಷ ಸಯ್ಯದ್‍ರಪ್ಥ್ಭಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ ಇತರರು ಹಾಜರಿದ್ದರು.


ಮಾನಸಿಕ ರೋಗ ಪರಿಹಾರಕ್ಕೆ ಸೂಕ್ತ ಚಿಕಿತ್ಸೆ ಪಡೆಯಲು ಜಿಲ್ಲಾ ನ್ಯಾಯಾಧೀಶರ ಸಲಹೆ
ಚಾಮರಾಜನಗರ, ಅ. 28 (ಕರ್ನಾಟಕ ವಾರ್ತೆ):-  ಮಾನಸಿಕ ಅಸ್ವಸ್ಥತೆ ಸಂಬಂಧ ರೋಗಗಳಿಗೆ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕೇ ವಿನಹ ಮೂಢನಂಬಿಕೆ ಪದ್ಧತಿಗಳಿಗೆ ಮೊರೆಹೋಗಬಾರದೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್‍ಎಫ್‍ಮಳವಳ್ಳಿ ಸಲಹೆ ಮಾಡಿದರು.
ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ  ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೈಹಿಕ ಆರೋಗ್ಯಕಕ್ಕೆ ನೀಡುವ ಮಹತ್ವವನ್ನು ಮಾನಸಿಕ ಆರೋಗ್ಯಕ್ಕೂ ನೀಡಬೇಕಿದೆ. ಮಾನÀಸಿಕ ರೋಗಗಳ ಪರಿಹಾರಕ್ಕೆ ಮೂಢನಂಬಿಕೆಗಳಿಗೆ ಜೋತು ಬೀಳಬಾರದು. ಮಾನಸಿಕ ತಜ್ಞರು, ಸಮಾಲೋಚಕರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರು ಮಾನಸಿಕ ರೋಗಿಗಳನ್ನು ಗುರುತಿಸಿ ಸರಿಯಾದ ಚಿಕಿತ್ಸೆ ಪಡೆಯಲು ತಿಳಿವಳಿಕೆ  ನೀಡಬೇಕು. ಮಾನಸಿಕ ರೋಗ ಬಗೆಗಿನ ತಪ್ಪು ಕಲ್ಪನೆಯನ್ನು ಹೋಗಲಾಡಿಸಬೇಕು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು,
ಮನೋ ತಜ್ಞರಾದ ಡಾ.ರಾಜೇಶ್ ಮಾತನಾಡಿ  ಮಾನಸಿಕ ಕಾಯಿಲೆ ಎಂದೊಡನೆ ಭಯಭೀತರಾಗಬೇಕಿಲ್ಲ. ಮಾನಸಿಕ ರೋಗ ಪರಿಹಾರಕ್ಕೆ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಲಭ್ಯವಿದೆ. ಉತ್ತಮ ಗುಣಮಟ್ಟದ ಔಷಧಿಗಳು ಸಹ ದಾಸ್ತನು ಇದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್.ವಿರೂಪಾಕ್ಷ ಮಾತನಾಡಿ ಎಲ್ಲಾ ನಾಗರಿಕರಿಗೂ ಸಿಗುವ ರಕ್ಷಣೆ, ಹಕ್ಕುಗಳು ಮಾನಸಿಕ ಅಸ್ವಸ್ಥರಿಗೂ ಇವೆ. ಆಸ್ತಿ ಪಾಲುದಾರಿಕೆಯಲ್ಲಿ ಮಾನಸಿಕ ಅಸ್ವಸ್ಥರಿದ್ದರೂ ಸಹ ಅವರ ಪಾಲಿನ ಹಕ್ಕು ಇದ್ದೇ ಇರುತ್ತದೆ. ಮಾನಸಿಕ ರೋಗಿಗಳ ಪೋಷಣೆ ಜೀವನ ನಿರ್ವಹಣೆಗೆ ಹೊಣೆಗಾರಿಕೆ ಇರುತ್ತದೆ ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ. ರಾಜು, ಡಾ.ಮಹದೇವು, ಡಾ.ನಾಗರಾಜು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಆಯುರ್ವೇದ ಚಿಕಿತ್ಸಾ ಪದ್ಧತಿ ಮಹತ್ವ ತಿಳಿಸಲು ಸಲಹೆ
ಚಾಮರಾಜನಗರ, ಅ. 28 (ಕರ್ನಾಟಕ ವಾರ್ತೆ):- ಭಾರತೀಯ ಮೂಲದ ಆಯುರ್ವೇದ ಚಿಕಿತ್ಸಾ ಪದ್ಧತಿ ಮಹತ್ವದ ಬಗ್ಗೆ   ವ್ಯಾಪಕವಾಗಿ ಅರಿವು ಮೂಡಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಆಯುರ್ವೇದ ದಿನ ಆಚರಣೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಚೀನ ಆಯುರ್ವೇದ ಚಿಕಿತ್ಸೆಯು ಹಲವಾರು ರೋಗಗಳ ಪರಿಹಾರಕ್ಕೆ ನೆರವಾಗಲಿದೆ. ಪೂರ್ವಜರ ಕಾಲದಲ್ಲಿ ಅನೇಕ ನೋವು, ಕಾಯಿಲೆಗಳನ್ನು ಆಯುರ್ವೇದ ಗಿಡಮೂಲಿಕೆಗಳಿಂದ ಗುಣಪಡಿಸಲಾಗುತ್ತಿತ್ತು. ಇಂತಹ ಚಿಕಿತ್ಸಾವಿಧಾನವನ್ನು ಇನ್ನು ಹೆಚ್ಚು ಪ್ರಮಾಣದಲ್ಲಿ ಜನರಿಗೆ ಪರಿಚಯಸಬೇಕಿದೆ ಎಂದರು.
ಆಯುರ್ವೇದ ಔಷಧಿಗಳ ಸೇವನೆಯಿಂದ ಆರೋಗ್ಯದ ಮೇಲೆ ಯಾವುದೇ ಅಡ್ಡ ಪರಿಣಾಮ ಬೀರುವುದಿಲ್ಲ. ಕೆಲವೊಂದು ನಿರ್ದಿಷ್ಟ ರೋಗಗಳಿಗೆ ಆಯುರ್ವೇದ ಔಷಧ ಪರಿಣಾಮಕಾರಿಯಾಗಿದೆ ಹೀಗಾಗಿ ಈ ಬಗ್ಗೆ ಆಯಷ್ ಇಲಾಖೆ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದು ರಾಮಚಂದ್ರ ರವರು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ರೇಣುಕಾ ರವರು ಮನೆ ಮದ್ದಿನಿಂದಲೇ ಹಲವಾರು ಅನಾರೋಗ್ಯವನ್ನು ಪರಿಣಾಮಕಾರಿಯಾಗಿ ಗುಣಪಡಿಸಿಕೊಳ್ಳಬಹುದು. ಆಹಾರ ಸೇವನೆ ಬಗ್ಗೆ ಕಾಳಜಿ ವಹಿಸಬೇಕು. ವ್ಯಾಯಮ, ಧ್ಯಾನ ಇನ್ನಿತರ ವಿಧಾÀನಗಳ ಮೂಲಕ ಉತ್ತಮವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ಸಲಹೆ ಮಾಡಿದರು.
ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ ಸದಾಶಿವಮೂರ್ತಿ ಮಾತನಾಡಿ ಬದಲಾದ ಜೀವನ ಶೈಲಿ ಹಾಗೂ ಆರೋಗ್ಯ ಸೇವನೆ ಪದ್ಧತಿಯು ಹಲವಾರು ರೋಗಗಳಿಗೆ ಕಾರಣವಾಗುತ್ತಿದೆ. ರೋಗ ಪರಿಹಾರಕ್ಕೆ ಆಯುರ್ವೇದ ಸೇರಿದಂತೆ ಪ್ರಾಚೀನ ಪದ್ಧತಿಗಳನ್ನು ಅನುಸರಿಸಿದರೆ ಅನೇಕ ಕಾಯಿಲೆಗಳು ಸುಧಾರಣೆ ಯಾಗಲಿದೆ. ಹೀಗಾಗಿ ಹಳೆಯ ರೋಗ ನಿವಾರಣಾ ಪದ್ಧತಿಗಳ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸಬೇಕಿದೆ ಎಂದರು.
ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ ಚಂದ್ರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ ಚಂದ್ರು, ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಪಂಚಾಯತ್ ಸದಸ್ಯರಾದ ಕೃಷ್ಣ ಆಯುಷ್ ಅಧಿಕಾರಿ ಡಾ.ಪುನೀತ್‍ಬಾಬು, ಶ್ರೀನಿವಾಸ್, ಡಾ.ಮಹದೇವು, ಉಪಸ್ಥಿತರಿದ್ದರು.
ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಅ. 28 (ಕರ್ನಾಟಕ ವಾರ್ತೆ):- ಆಗರ, ಮಾಂಬಳ್ಳಿಯಲ್ಲಿ ಹಿಂಡಿಮಾರಮ್ಮಹಬ್ಬ ಹಾಗೂ ಕೊಂಡೋತ್ಸವ ಹಿನ್ನೆಲೆಯಲ್ಲಿ  ಸದರಿ ಗ್ರಾಮದ ಸುತ್ತ ಮುತ್ತಲ 5 ಕೀ.ಮೀ. ವ್ಯಾಪ್ತಿಯಲ್ಲಿ ಅಕ್ಟೋಬರ್ 30 ರ ಬೆಳಿಗ್ಗೆ 6 ಗಂಟೆಯಿಂದ ನವೆಂಬರ್ 2ರ ಮಧ್ಯರಾತ್ರಿ 12 ಗಂಟೆಯ ವರೆಗೆ ಎಲ್ಲಾ ಬಗೆಯ  ಮದ್ಯ ಮಾರಾಟ, ಅಕ್ರಮಸಾಗಣಿಕೆ, ದಾಸ್ತನು ನಿಷೇಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
ದೀಪಾವಳಿ : ವಾಯು, ಶಬ್ದ ಮಾಲಿನ್ಯ ತಡೆಯಲು ಸೂಚನೆ
ಚಾಮರಾಜನಗರ, ಅ. 28 (ಕರ್ನಾಟಕ ವಾರ್ತೆ):- ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ವಾಯು ಮಾಲಿನ್ಯ ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಆರೋಗ್ಯ, ಸಂರಕ್ಷಣೆ ದೃಷ್ಟಿಯಯಿಂದ ಹಲವು ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಬಿ,ರಾಮು ಸೂಚಿಸಿದ್ದಾರೆ,.
125 ಡೆಸಿಬಲ್‍ಗಳಿಗಿಂತ ಹೆಚ್ಚು ಶಬ್ದ ಉಂಟು ಮಾಡುವ ಪಟಾಕಿಗಳ ದಾಸ್ತಾನು ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ರಾತ್ರಿ 10 ರಿಂದ ಬೆಳಗಿನ 6 ಗಂಟೆಯವರೆಗೆ ಪಟಾಕಿ ಸಿಡಿಸುವಂತಿಲ್ಲ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇನ್ನಿತರ ಸ್ಥಳಗಳ ಸುತ್ತ ಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ಪಟಾಕಿ  ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಸೂಚಿಸಿರುವ ಕ್ರಮಗಳನ್ನು ಉಲ್ಲಂಘಿಸಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಲಾಗುವುದು. ನಾಗರಿಕರು ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ ಹಾಗೂ ವಾಯುಮಾಲಿನ್ಯ ನಿಯಂತ್ರಣದಲ್ಲಿಡಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸ್ತಿ ಘೋಷಣೆ ಸಲ್ಲಿಸದ  ಜಿ.ಪಂ. ತಾ.ಪಂ. ಸದಸ್ಯರಿಗೆ  ಚುನಾವಣಾ ಆಯೋUದಿಂದ ನೋಟೀಸು : ಅಹವಾಲು ಸಲ್ಲಿಕೆಗೆ ಸೂಚನೆ

ಚಾಮರಾಜನಗರ, ಅ. 28 (ಕರ್ನಾಟಕ ವಾರ್ತೆ):-   ಆಸ್ತಿ ಮತ್ತು ಹೊಣೆಗಾರಿಕೆ ಬಗ್ಗೆ ಘೋಷಣೆ  ಸಲ್ಲಿಸದೆ ಇರುವ  ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು  ಪಂಚಾಯಿತಿಯ ಒಟ್ಟು    41 45  ಸದಸ್ಯರಿಗೆ ರಾಜ್ಯ ಚುನಾವಣಾ ಆಯೋಗ ನೋಟೀಸು ನೀಡಿದ್ದು  ಏಳು ದಿನಗಳ ಒಳಗೆ ಆಯೋಗಕ್ಕೆ ಅಹವಾಲು ಸಲ್ಲಿಸುವಂತೆ ಸೂಚಿಸಿದೆ.
ಕರ್ನಾಟಕ ಗ್ರಾಮ  ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಗಳ ಚುನಾಯಿತ ಸದಸ್ಯರ ಆಸ್ತಿ ಘೋಷಣೆ ) ನಿಯಮಗಳು, 2016ರ ನಿಯಮ , 3ರಂತೆ ಪ್ರತಿಯೊಬ್ಬ ಗ್ರಾಮ ಪಂಚಾಯಿತಿ,  ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿಯ ಸದಸ್ಯರು ಸಂಬಂಧಪಟ್ಟ ಅಧಿಕಾರಿಯ ಮೂಲಕ ರಾಜ್ಯ ಚುನಾವಣಾ ಆಯೋಗದ ಮುಂದೆ ನಮೂನೆ-1 ರಲ್ಲಿ ಅವರು ಹೊಂದಿರುವ ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರು ಹೊಂದಿರುವ ಎರಡು ಲಕ್ಷಕ್ಕಿಂತ ಹೆಚ್ಚಿನ ಚರ ಮತ್ತು ಸ್ಥಿರ ಆಸ್ತಿಯ ಮತ್ತು ಹೊಣೆಗಾರಿಕೆಯ ಬಗ್ಗೆ ಘೋಷಣೆ ಪ್ರತಿ ವರ್ಷ ಸಲ್ಲಿಸತಕ್ಕದ್ದಾಗಿರುತ್ತದೆ.
ಈ ವರ್ಷ ಅಂದರೆ 2016 ಕ್ಕೆ ಸಂಬಂಧಿಸಿದಂತೆ ಚುನಾಯಿತ  ಸದಸ್ಯರು ಸೆಪ್ಟಂಬರ್ 30 ರೂಳಗೆ ಅವರ  ಹಾಗೂ ಕುಟುಂಬದ ಒಟ್ಟು ಆಸ್ತಿ ಮತ್ತು ಹೊಣೆಗಾರಿಕೆ ಬಗ್ಗೆ ಘೋಷಣೆ ಸಲ್ಲಿಸುವಂತೆ ಹಾಗೂ ಈ ಬಗ್ಗೆ ಆಧಿಕಾರಿಗಳು  ಆಕ್ಟೋಬರ್ 7ರೂಳಗರ ಆಯೋಗಕೆ ವರಧಿಯನ್ನು ಕಳುಹಿಸುವಂತೆ ಸೂಚನೆ ನೀಡಲಾಗಿತ್ತು .
ಅದರಂತೆ ರಾಜ್ಯದ ಒಟ್ಟು  30 ಜಿಲ್ಲಾ ಪಂಚಾಯಿತಿಯ 1083 ಸದಸ್ಯರ ಪೈಕಿ 394 ಸದಸ್ಯರು ಘೋಷಣೆ ಸಲ್ಲಿಸಿದ್ದಾರೆ. ಒಟ್ಟು 176 ತಾಲ್ಲೂಕು ಪಂಚಾಯಿತಿಯ 3903 ಸದಸ್ಯರ ಪೈಕಿ 447 ಸದಸ್ಯರು ಮಾತ್ರ ಘೋಷಣೆ ಸಲ್ಲಿಸಿದ್ದಾರೆ. ಒಟ್ಟಾರೆ 4986 ಸದಸ್ಯರ ಪೈಕಿ 841 ಸದಸ್ಯರು ಮಾತ್ರ ಘೋಷಣೆ ಸಲ್ಲಿಸಿದ್ದು ಇನ್ನು ಉಳಿದ 4145 ಸದಸ್ಯರು ಘೋಷಣೆ ಸಲ್ಲಿಸಿಲ್ಲ .
ಈ ಹಿನ್ನೆಲೆಯಲ್ಲಿ ಆಸ್ತಿ ಮತ್ತು ಹೊಣೆಗಾರಿಕೆ ಬಗ್ಗೆ ಘೋಷಣೆ  ಸಲ್ಲಿಸದೆ ಇರುವ   ಜಿಲ್ಲಾ ಹಾಗೂ ತಾಲ್ಲೂಕು  ಪಂಚಾಯಿತಿಯ ಒಟ್ಟು    41 45  ಸದಸ್ಯರಿಗೆ ನಿಯಮಾನುಸಾರ ನೋಟೀಸು ನೀಡಲಾಗಿದೆ.  ನೋಟೀಸು ತಲುಪಿದ  ದಿನಾಂಕದಿಂದ ಏಳು ದಿನಗಳ ಒಳಗೆ ರಾಜ್ಯ ಚುನಾವಣಾ ಆಯೋಗಕ್ಕೆ  ಸದಸ್ಯರು ಅವರ ಅಹವಾಲು ಸಲ್ಲಿಸದೆ ಇದ್ದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್‍ಅಧಿನಿಯಮ 1993ರ ಪ್ರಕರಣ 136ಬಿ ಹಾಗೂ 175 ಬಿ ಅಡಿಯಲ್ಲಿ ಕ್ರಮ ತೆಗೆದು ಕೊಳ್ಳಲಾಗುವುದು ಎಂದುರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿರವರಾದ ಎಸ್.ಆರ್. ನಾಗರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಚಾಮರಾಜನಗರದಲ್ಲಿ ಮುಕುಂದ ಮುರಾರಿ ನೋಡಲು ಬಂದ ಸೃಜ.!
ಚಾಮರಾಜನಗರ: ಚಿತ್ರಮಂದಿರಗಳಿಗೆ ಸಾಮಾನ್ಯವಾಗಿ ಚಿತ್ರಗಳನ್ನು ನೋಡಲು ಹೋಗುವುದು ಜನರು ಮಾತ್ರ ಆದರೆ ಇಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಶ್ವಾನವೊಂದು ಚಿತ್ರಮಂದಿರಕ್ಕೆ ಹೋಗಿ ಬಂದಿದ್ದು ನೋಡಿ ಜನರು ಗಾಬರಿಯಾದರು.
ಇದೇನಿದು ಅಂತ ಹುಬ್ಬೇರಿಸಬೇಡಿ ಆದರೂ ಸತ್ಯ . ಇಂದು ಬಸವೇಶ್ವರ ಚಿತ್ರಮಂದಿರಕ್ಕೆ ಉಪೇಂದ್ರ ನಟನೆಯ ಮುಕುಂದ ಮುರಾರಿ ನೋಡಲು ಪೊಲೀಸ್ ಇಲಾಖೆಯ ಶ್ವಾನ ಬಂದಿದೆ ಎಂದು ಎಲ್ಲರೂ ತಿಳಿದುಕೊಂಡಿದ್ದರೆ ಅದು ಇಲಾಖಾ ದಿನನಿತ್ಯದಂತೆ ಇಂದು ಚಿತ್ರಮಂದಿರ ಪರಿಶೀಲನೆಗೆ ಸೂಚಿಸಲಾಗಿತ್ತು ಎಂದು ತಿಳಿದುಬಂದಿದೆ.
ನವೆಂಬರ್ ಒಂದರ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಚಲನಚಿತ್ರ ಮಂದಿರ ತಪಾಷಣೆಗೆ ಪೊಲೀಸ್ ಇಲಾಖೆಗೆ ಸೇರಿದ  ಸೃಜ ಎಂಬ ಹೆಸರಿನ ಬಾಂಬ್ ಪತ್ತೆದಾರಿಕೆ ಶ್ವಾನ ತಪಾಷಣೆ ಮಾಡಿ ಮತ್ತೆ ತನ್ನ ಕೆಂದ್ರ ಸ್ಥಾನಕ್ಕೆ ಹೊರಟಿತು.
ಚಲನಚಿತ್ರ ನೋಡಲು ಬಂದಿದ್ದ ಜನರು ಮಾತ್ರ ಪೊಲೀಸ್ ವಾಹನ ಹಾಗೂ ಬಂದಿದ್ದ ಶ್ವಾನ ನೋಡಿ ಬಹುಶಃ ಹುಸಿ ಕರೆ ಮಾಡಿರುವ ಉದ್ದೇಶದಿಂದ ತಪಾಷಣೆಗೆ ಬಂದಿರಬೇಕು ಎಂದು ಸ್ವಲ್ಪ ಕಾಲ ಆತಂಕಕಾರಿಯಾಗಿ ಜನರು ನೋಡುತ್ತಿದ್ದರು.




ನ. 1ರಂದು ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ
ಚಾಮರಾಜನಗರ, ಅ. 31 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1ರಂದು ಬೆಳಿಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಧ್ವಜಾರೋಹಣ ನೆರವೇರಿಸುವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು, ಆರ್. ಧರ್ಮಸೇನ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಯ್ಯದ್ ರಫೀ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
 ಅಂದು ಸಂಜೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನÀದ ಮುಂಭಾಗದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 5.30ರಿಂದ 6.30 ಗಂಟೆಯವರೆಗೆ ಸಿ.ಎಂ ನರಸಿಂಹಮೂರ್ತಿ ಮತ್ತು ತಂಡದವರು ಕನ್ನಡ ಗೀತೆಗಳ ಗಾಯನ ಪ್ರಸ್ತುತಪಡಿಸಲಿದ್ದಾರೆ. 6.30 ರಿಂದ 7.30 ಗಂಟೆಯವರೆಗೆ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. 7.30 ರಿಂದ 8.30 ಗಂಟೆಯವರೆಗೆ ಚಾಮರಾಜನಗರದ ಕಲಾಸರಸ್ವತಿ ನಾಟ್ಯ ಸಂಸ್ಥೆಯ ಕಲಾವಿದರು ಅಕ್ಷತಾ ಎಸ್ ಜೈನ್ ನಿರ್ದೇಶನದಲ್ಲಿ ಕನ್ನಡ ವೈಭವ ಎಂಬ ನೃತ್ಯರೂಪಕ ಪ್ರಸ್ತುತಪಡಿಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.



 








 




































                                                                       




















































































No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು