Tuesday, 31 January 2017

31-01-2017 ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ತಾಲ್ಲೂಕು, ಮಹದೇಶ್ವರಬೆಟ್ಟ:- ದಿನಾಂಕ:31-01-2017ರ ಮಂಗಳವಾರದಂದು ಬೆಳಿಗ್ಗೆ 7.00 ಗಂಟೆಗೆ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಡಿ.ಭಾರತಿ ಕೆ.ಎ.ಎಸ್.(ಹಿರಿಯ ಶ್ರೇಣಿ) ರವರ ಅಧ್ಯಕ್ಷತೆಯಲ್ಲಿ ಹಾಗೂ ಶ್ರೀ ಸಾಲೂರು ಬೃಹನ್ಮಠದ ಶ್ರೀ ಶ್ರೀ ಪಟ್ಟದ ಗುರುಸ್ವಾಮಿಗಳವರ ಉಪಸ್ಥಿತಿಯಲ್ಲಿ ಹುಂಡಿಗಳನ್ನು ತೆರೆಯಲಾಗಿದ್ದು, ಸದರಿ ಹುಂಡಿಗಳ ಪರ್ಕಾವಣೆಯಲ್ಲಿ ಶ್ರೀ ಮ.ಮ. ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಪ್ರಭಾರ ಉಪ ಕಾರ್ಯದರ್ಶಿಗಳಾದ ಶ್ರೀ ಎಂ.ಬಸವರಾಜು ರವರು, ಸಹಾಯಕ ಅಭಿಯಂತರರಾದ ಶ್ರೀ ಆರ್.ಎಸ್.ಮನುವಾಚಾರ್ಯ, ಲೆಕ್ಕಾಧೀಕ್ಷಕರಾದ ಮಹದೇವಸ್ವಾಮಿ, ಕಛೇರಿಯ ಅಧೀಕ್ಷಕರಾದ ಶ್ರೀ ಬಿ.ಮಾದರಾಜು ಹಾಗೂ ದೇವಸ್ಥಾನದ ಎಲ್ಲಾ ನೌಕರರುಗಳು, ಚಾಮರಾಜನಗರ ಜಿಲ್ಲಾಧಿಕಾರಿಯವರ ಕಛೇರಿಯ ಪ್ರಥಮ ದರ್ಜೆ ಸಹಾಯಕರಾದ ಶ್ರೀ ಮೋಹನ್ ಕುಮಾರ್ ಮತ್ತು ಮಹದೇಶ್ವರಬೆಟ್ಟದ ಆರಕ್ಷಕ ನಿರೀಕ್ಷಕರು & ಸಿಬ್ಬಂದಿ ವರ್ಗ, ಎಸ್.ಬಿ.ಎಂ. ವ್ಯವಸ್ಥಾಪಕರಾದ ಸೆಂದಿಲ್ ನಾಥನ್ & ಸಿಬ್ಬಂದಿ ವರ್ಗದವರು ಹಾಜರಿದ್ದರು. ಇವರೆಲ್ಲರ ಸಹಕಾರದಿಂದ ಹುಂಡಿ ಪರ್ಕಾವಣೆ ಮತ್ತು ಎಣಿಕೆಯ ಕಾರ್ಯ ಸುಗಮವಾಗಿ ಜರುಗಿತು(ಒಂದು ತಿಂಗಳಿಗೆ) ಸದರಿ ದಿವಸದಂದು ಹುಂಡಿ ಪರ್ಕಾವಣೆಯಿಂದ ಒಟ್ಟು ರೂ. 1,03,18,001-00 ( ಒಂದು ಕೋಟಿ ಮೂರು ಲಕ್ಷದ ಹದಿನೆಂಟು ಸಾವಿರದ ಒಂದು ಮಾತ್ರ ) ಬಂದಿರುತ್ತದೆ. ಇದಲ್ಲದೇ ಚಿನ್ನದ ಪದಾರ್ಥಗಳು 0. 025 (ಇಪ್ಪತ್ತೈದು ಗ್ರಾಂ) ಮತ್ತು ಬೆಳ್ಳಿ ಪದಾರ್ಥಗಳು 1.180( ಒಂದು ಸಾವಿರದ ಒಂದುನೂರ ಎಂಭತ್ತು ಗ್ರಾಂ) ದೊರೆತಿರುತ್ತದೆ.

ಸರಳವಿವಾಹ ಯೋಜನೆಯಡಿ ಪ.ಜಾ. ದಂಪತಿಗೆ ಆರ್ಥಿಕ ನೆರವು

ಸರಳವಿವಾಹ ಯೋಜನೆಯಡಿ ಪ.ಜಾ. ದಂಪತಿಗೆ ಆರ್ಥಿಕ ನೆರವು ರಾಜ್ಯ ಸರ್ಕಾರ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳವಾಗಿ ವಿವಾಹವಾಗುವ ಪರಿಶಿಷ್ಟ ಜಾತಿ ದಂಪತಿಗಳಿಗೆ 50,000 ರೂ ಆರ್ಥಿಕ ನೆರವು ನೀಡುತ್ತಿರುವ ಸರಳ ವಿವಾಹ ಯೋಜನೆಯು ಜಿಲ್ಲೆಯಲ್ಲಿ ಅನುಷ್ಟಾನಗೊಳ್ಳುತ್ತಿದೆ. ಪರಿಶಿಷ್ಟ ಜಾತಿಗೆ ಸೇರಿದ ಬಡ ಕುಟುಂಬಗಳಿಗೆ ನೆರವಾಗಲು ಹಾಗೂ ಸಾಮೂಹಿಕ ಸರಳ ವಿವಾಹಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸರಳವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಮದುವೆ ಮಾಡಿಕೊಳ್ಳುವ ಪರಿಶಿಷ್ಟ ಜಾತಿ ದಂಪತಿಗಳಿಗೆ 50 ಸಾವಿರ ರೂ ಆರ್ಥಿಕ ನೆರವನ್ನು ಅವರ ಜೀವನೋಪಾಯಕ್ಕಾಗಿ ನೀಡಲಾಗುವುದೆಂದು 2015-16ನೇ ಸಾಲಿನ ಆಯವ್ಯಯದಲ್ಲಿ ಘೋಷಣೆ ಮಾಡಿತು.್ತ ಅರ್ಜಿದಾರರು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು, ವಧುವಿಗೆ ಕನಿಷ್ಟ 18 ವರ್ಷ, ಗರಿಷ್ಟ 42 ವರ್ಷ ವಿರಬೇಕು. ವರನಿಗೆ ಕನಿಷ್ಠ 21 ವರ್ಷ, ಗರಿಷ್ಠ 40 ವರ್ಷ ವಿರಬೇಕು. ಒಟ್ಟಾರೆ ವಾರ್ಷಿಕ ಆದಾಯ 2 ಲಕ್ಷರೂ ಮೀರಿರಬಾರದು ಎಂಬ ಷರತ್ತು ವಿಧಿಸಿದೆ. ಜಿಲ್ಲಾ ನೋಂದಣಿ ಕಚೇರಿಯಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್, ದೇವಸ್ಥಾನದ ಟ್ರಸ್ಟ್, ಸಂಘಗಳು ಸೊಸೈಟಿಗಳು, ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದವರು ಆರ್ಥಿಕ ನೆರವು ಪಡೆಯಬಹುದು. ಸಂಘ ಸಂಸ್ಥೆಗಳು ಆಯೋಜಿಸಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾಗಿರುವ ಬಗ್ಗೆ ಅರ್ಜಿದಾರರು ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ಸರಳ ವಿವಾಹವಾದ 3 ತಿಂಗಳ ಒಳಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಅಥವಾ ಉಪ ನಿರ್ದೇಶಕರ ಕಚೇರಿಗೆ ನಿಗಧಿತ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮದ ಪೋಟೊ, ವಧು-ವರನ ಭಾವಚಿತ್ರವನ್ನು ಲಗತ್ತಿಸಬೇಕಿದೆ. ಅಂತರ್ಜಾತಿ ವಿವಾಹಗಳು ಇದ್ದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಸ್ಪøಶ್ಯತಾ ನಿವಾರಣಾ ಕಾರ್ಯಕ್ರಮದಡಿ ಅಂತರ್ ಜಾತಿ ವಿವಾಹ ಪ್ರೋತ್ಸಹಧನಕೋಸ್ಕರ ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತರ್‍ಜಾತಿ ವಿವಾಹ ಪ್ರೋತ್ಸಾಹ ಧನಕ್ಕೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ. 2015-16ನೇ ಸಾಲಿನಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳವಿವಾಹವಾದ ಪರಿಶಿಷ್ಟ ಜಾತಿಯ 7 ದಂಪತಿಗಳಿಗೆ ತಲಾ 50 ಸಾವಿರ ರೂ ರÀಂತೆ ಒಟ್ಟು 3ಲಕ್ಷದ 75 ಸಾವಿರ ರೂ ಆರ್ಥಿಕ ನೆರವನ್ನು ಮಂಜೂರುಮಾಡಲಾಗಿದೆ. 2016-17ನೇ ಸಾಲಿಗೆ ಸರಳವಿವಾಹವಾದ ದಂಪತಿಗೆ ಆರ್ಥಿಕ ನೆರವು ಒದಗಿಸುವ ಸಲುವಾಗಿ 27 ಲಕ್ಷರೂ ಅನುದಾನ ಬಿಡುಗಡೆಯಾಗಿದೆ. ಜಿಲ್ಲೆಯ ಪರಿಶಿಷ್ಟಜಾತಿಯ ದಂಪತಿಗಳು ಆರ್ಥಿಕ ನೆರವು ಸೌಲಭ್ಯವನ್ನು ಪಡೆದುಕೊಳ್ಳಲು ಮುಂದಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್. ಸತೀಶ್ ಕೋರುತ್ತಾರೆ.

31-01-2017 ಗ್ರಾ.ಪಂ. ಉಪಚುನಾವಣೆ : ಅಧಿಸೂಚನೆ ಪ್ರಕಟ

ಗ್ರಾ.ಪಂ. ಉಪಚುನಾವಣೆ : ಅಧಿಸೂಚನೆ ಪ್ರಕಟ ಚಾಮರಾಜನಗರ, ಜ. 31 (ಕರ್ನಾಟಕ ವಾರ್ತೆ):– ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ 5 ಗ್ರಾಮ ಪಂಚಾಯಿತಿಯ 5 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಜಿಲ್ಲಾಧಿಕಾರಿ ಬಿ. ರಾಮು ಅವರು ಅಧಿಸೂಚನೆ ಹೊರಡಿಸಿದ್ದಾರೆ. ಚಾಮರಾಜನಗರ ತಾಲೂಕಿನ ಹೊಂಗನೂರು (ಅನುಸೂಚಿತ ಜಾತಿ), ಕೊಳ್ಳೇಗಾಲ ತಾಲೂಕಿನ ದೊಡ್ಡಾಲತ್ತೂರು (ಅನುಸೂಚಿತ ಜಾತಿ), ಮಾರ್ಟಳ್ಳಿ ಗ್ರಾಮ ಪಂಚಾಯಿತಿಯ ವಡ್ಡರದೊಡ್ಡಿ (ಹಿಂದುಳಿದ ‘ಅ’ ವರ್ಗ) ಗುಂಡ್ಲುಪೇಟೆ ತಾಲೂಕಿನ ಕೊತನೂರು, ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ {ಅನುಸೂಚಿತ ಪಂಗಡ, (ಮಹಿಳೆ)}, ಗ್ರಾಮಪಂಚಾಯಿತಿಯ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ಫೆಬ್ರವರಿ 2 ಕಡೆಯ ದಿನವಾಗಿದೆ. ಫೆಬ್ರವರಿ 3ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಫೆಬ್ರವರಿ 6ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಫೆಬ್ರವರಿ 12ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ (ಅವಶ್ಯವಿದ್ದರೆ). ಫೆಬ್ರವರಿ 14ರಂದು ಅವಶ್ಯವಿದ್ದಲ್ಲಿ ಮರು ಮತದಾನ ನಡೆಯಲಿದೆ. ಫೆಬ್ರವರಿ 15ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಏಣಿಕೆ ಕಾರ್ಯ ನಡೆಯಲಿದೆ ಹಾಗೂ ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಗಾಂಜಾ ಬೆಳೆದವನಿಗೆ ಶಿಕ್ಷೆ ಚಾಮರಾಜನಗರ, ಜ. 31 (ಕರ್ನಾಟಕ ವಾರ್ತೆ):- ಮುಸುಕಿನ ಜೋಳದ ಬೆಳೆ ನಡುವೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯೊಬ್ಬರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ಹಾಗೂ ಒಂದು ಸಾವಿರ ರೂ ದಂಡ ವಿಧಿಸಿ ತಿರ್ಪುನೀಡಿದೆ. ರಾಮಾಪುರದ ಕಾರಕೋಬೆ ಗ್ರಾಮದ ನಾಗರಾಜು ಶಿಕ್ಷೆಗೆ ಗುರಿಯಾದ ವ್ಯಕ್ತಿ. ಇವರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳದ ಬೆಳೆ ನಡುವೆ ಅಕ್ರಮವಾಗಿ 16 ಗಾಂಜಾ ಗಿಡಗಳನ್ನು ಬೆಳೆದಿದ್ದರು, 2012ರ ಡಿಸೆಂಬರ್ 3ರಂದು ರಾಮಾಪುರ ಪೊಲೀಸರು ದಾಳಿ ಮಾಡಿ ಪತ್ತೆ ಹಚ್ಚಿದ್ದರು. ಸದರಿ ಪ್ರಕರಣ ವಿಚಾರಣೆ ನಡೆದು ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಅವರು ಜನವರಿ 28ರಂದು ಅಪರಾಧಿಗೆ ಎರಡು ವರ್ಷಗಳ ಶಿಕ್ಷೆ ಹಾಗೂ ಒಂದು ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು, ಕುರಿ, ಮೇಕೆ ಘಟಕ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಚಾಮರಾಜನಗರ, ಜ. 31 (ಕರ್ನಾಟಕ ವಾರ್ತೆ):- ಮೈಸೂರಿನಲ್ಲಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಕುರಿ ಮತ್ತು ಮೇಕೆ ಘಟಕಗಳನ್ನು ನೀಡಲಿದ್ದು ಈ ಸೌಲಭ್ಯಕ್ಕೆ ಚಾಮರಾಜನಗರ ಜಿಲ್ಲೆಯ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಯಡಿ ಹಾಗೂ ಇತರ ವರ್ಗದವರಿಗೆ ಕುರಿ, ಮೇಕೆ ಘಟಕ ಹೊಂದಲು ಸಹಾಯಧನ ನೀಡಲಿದೆ. 10+2 ಕುರಿ/ಮೇಕೆ ಘಟಕಕ್ಕೆ 57,440 ರೂ ನಿಗಧಿ ಮಾಡಲಾಗಿದೆ. ಈ ಪೈಕಿ ಪರಿಶಿಷ್ಟಜಾತಿ ಪರಿಶಿಷ್ಟ ಪಂಗಡಕ್ಕೆ ಶೇ 50 ರಷ್ಟು ಹಾಗೂ ಸಾಮಾನ್ಯ ವರ್ಗದವರಿಗೆ ಶೇ. 25 ರಷ್ಟು ಸಹಾಯಧನ ನೀಡಲಾಗುತ್ತದೆ. ಕೃಷಿ ವಿಕಾಸ ಯೋಜನೆಯಡಿಯೂ 100+4 ಕುರಿ/ಮೇಕೆ ಘಟಕಕ್ಕೆ 7,00,000ರೂ ಸಹಾಯಧನ ನಿಗಧಿಮಾಡಲಾಗಿದೆ. ಈ ಪೈಕಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗು ಸಾಮಾನ್ಯವರ್ಗದವರಿಗೆ ಶೇ 25 ರಷ್ಟು ಸಹಾಯಧನ ನೀಡಲಾಗುತ್ತದೆ. ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘÀದಲ್ಲಿ ಸದಸ್ಯರಾಗಿರುವ, ಇಲಾಖೆನಿಗಮದಿಂದ ಸಹಾಯಧನ ಸೌಲಭ್ಯ ಪಡೆದ, ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ತರಬೇತಿ ಹೊಂದಿದ್ದು ಕುರಿ ಮೇಕೆ ಸಾಕಾಣಿಕೆಗೆ ಜಮೀನು ಇದ್ದು, ಹಸಿರು ಒಣ ಮೇವನ್ನು ಒದಗಿಸುವ ಸಾಮಥ್ರ್ಯ ಇರಬೇಕು. ಅರ್ಜಿಯನ್ನು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಮಾನಂದವಾಡಿ ರಸ್ತೆ, ಚಾಮುಂಡಿಪುರಂ, ಮೈಸೂರು-570008 ಇಲ್ಲಿಗೆ ಅಥವಾ ಸಂಬಂಧ ಪಟ್ಟ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಫೆಬ್ರವರಿ 10 ರೊಳಗೆ ಸಲ್ಲಿಸಬೇಕು ಹೆಚ್ಚಿನ ಮಾಹಿತಿಗೆ ಮೈಸೂರಿನಲ್ಲಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ, ಸಹಾಯಕ ನಿರ್ದೇಶಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ನಗರದಲ್ಲಿ ಫೆ 3ರಿಂದ ಸಿನಿಮೋತ್ಸವ ಸಪ್ತಾಹ : ಉಚಿತ ಪ್ರವೇಶ ಚಾಮರಾಜನಗರ, ಜ. 31 (ಕರ್ನಾಟಕ ವಾರ್ತೆ):- ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಚಲನಚಿತ್ರಗಳು ಜನಸಾಮಾನ್ಯರಿಗೆ ತಲುಪಲಿ ಎಂಬ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿನಿಮೋತ್ಸವ ಸಪ್ತಾಹ ಕಾರ್ಯಕ್ರಮವನ್ನು ಫೆಬ್ರವರಿ 3 ರಿಂದ 9 ರವರೆಗೆ ನಗರದ ಸಿಂಹ ಮೂವಿ ಪ್ಯಾರಡೈಸ್ ಚಿತ್ರಮಂದಿರದಲ್ಲಿ ಬೆಳಗಿನ ಪ್ರದರ್ಶನದಲ್ಲಿ ಆಯೋಜಿಸಿದೆ. ಫೆಬ್ರವರಿ 3ರಿಂದ 9ರವರೆಗೆ ಸಿಂಹ ಮೂವಿ ಪ್ಯಾರಡೈಸ್ ಚಿತ್ರಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ 2015ನೇ ಕ್ಯಾಲೆಂಡರ್ ವರ್ಷದ ಕನ್ನಡ ಹಾಗೂ ಪ್ರಾದೇಶಿಕ ಭಾಷಾ ಚಲನಚಿತ್ರಗಳಲ್ಲಿ ರಾಜ್ಯ ಪ್ರಶಸ್ತಿಗೆ ಭಾಜನವಾಗಿರುವ ಕನ್ನಡದ ಐದು ಸಿನಿಮಾಗಳನ್ನು ಪ್ರದರ್ಶಿಸಲಾಗುವುದು. ಫೆಬ್ರವರಿ 3 ರಂದು ಮೈತ್ರಿ, ಫೆಬ್ರವರಿ 4 ರಂದು ಶಿವಯೋಗಿ ಶ್ರೀಪುಟ್ಟಯ್ಯಜ್ಜ, ಫೆಬ್ರವರಿ 5 ರಂದು ತಿಥಿ, ಫೆಬ್ರವರಿ 6 ರಂದು ಕೃಷ್ಣಲೀಲಾ, ಫೆಬ್ರವರಿ 7 ರಂದು ರಂಗಿತರಂಗ, ಫೆಬ್ರವರಿ 8 ರಂದು ತಿಥಿ ಹಾಗೂ ಫೆಬ್ರವರಿ 9 ರಂದು ಮೈತ್ರಿ ಚಲನಚಿತ್ರಗಳನ್ನು ಪ್ರದರ್ಶಿಸಲಾಗುವುದು. ಪ್ರವೇಶ ಉಚಿತವಾಗಿದ್ದು, ಸಾರ್ವಜನಿಕರು ಈ ಸದಾವಕಾಶವನ್ನು ಬಳಸಿಕೊಳ್ಳಬಹುದು. ಮೈತ್ರಿ: ಗಿರಿರಾಜ್ ನಿರ್ದೇಶನದಲ್ಲಿ ಪುನೀತರಾಜ್‍ಕುಮಾರ್, ಮೋಹನಲಾಲ್ ತಾರಗಣದ ಮೈತ್ರಿ ಚಿತ್ರ ಪ್ರತಿಭೆಗೆ ಬಡತನವಿಲ್ಲ. ಪ್ರೋತ್ಸಾಹ ಸಿಕ್ಕರೆ ಸಾಧನೆ ಸಾದ್ಯ ಎನ್ನುವ ಕಥಾಹಂದರ ಹೊಂದಿದೆ. ಶಿವಯೋಗಿ ಶ್ರೀಪುಟ್ಟಯ್ಯಜ್ಜ: ದಿವಂಗತ ಶ್ಯಾಂ ನವಲೆ ನಿರ್ದೇಶನದ ವಿಜಯರಾಘವೇಂದ್ರ ನಟಿಸಿರುವ ಈ ಚಿತ್ರವು ಸಂಗೀತ ಕಲಾ ಪರಾಂಗತ ಎನ್ನಿಸಿದ ಗದಗಿನ ಶ್ರೀ ವೀರೇಶ್ವರ ಪುಣ್ಯ ಆಶ್ರಮದ ಡಾ. ಪಂಡಿತ ಪುಟರಾಜ ಗವಾಯಿಗಳ ಜೀವನಾಧಾರಿತ ಸಿನಿಮಾ. ತಿಥಿ: ಹೊಸ ನಿರ್ದೇಶಕ ಹೊಸ ಕಲಾವಿದರ ನೂತನ ಕಥೆಯೊಂದಿಗೆ ಹೊಸ ಛಾಪು ಮೂಡಿಸಿದ ತಿಥಿ ಸಿನಿಮಾ ಹಳ್ಳಿಯೊಂದರ ನೆಲೆಗಟ್ಟಿನ ನೈಜ ಸಿನಿಮಾವಾಗಿದ್ದು ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕೃಷ್ಣಲೀಲಾ : ಶಶಾಂಕ್ ನಿರ್ದೇಶನದಲ್ಲಿ ಅಜಯ್ ರಾವ್ ನಿರ್ಮಿಸಿ ನಟಿಸಿರುವ ಕೃಷ್ಣಲೀಲಾ ಇಂದಿನ ಅಗತ್ಯಗಳಲ್ಲಿ ಒಂದಾಗಿರುವ ಮೊಬೈಲ್ ಅವಾಂತರದ ಮೂಲಕ ಜೀವನ ಬದಲಾಗುವ ರೀತಿಯನ್ನು ಹೇಳಿರುವ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದೆ. ರಂಗಿತರಂಗ: ಕನ್ನಡ ಚಿತ್ರರಂಗದಲ್ಲಿ ಇಂದಿನ ಅದ್ದೂರಿ ಚಿತ್ರಗಳ ಪೈಪೋಟಿ ನಡುವೆ ವರ್ಷ ಪೂರೈಸಿದ ಚಿತ್ರ ರೋಚಕಥೆ ಕುತುಹಲ ಕಂಡುಕೊಂಡು ಪತ್ತೇದಾರಿ ಕಥೆಯ ಜನಮನ್ನಣೆ ಗಳಿಸಿರುವ ಸಿನಿಮಾ ಇದಾಗಿದೆ. ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ಕೋರಿದೆ.

28-01-2017 ನೇರ ಫೋನ್ ಇನ್ ಕಾರ್ಯಕ್ರಮ : 28 ದೂರು ದಾಖಲು

ನೇರ ಫೋನ್ ಇನ್ ಕಾರ್ಯಕ್ರಮ : 28 ದೂರು ದಾಖಲು ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- ಜಿಲ್ಲೆಯ ಜನತೆಯ ಅಹವಾಲು ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಉದ್ದೇಶದಿಂದ ಜಿಲ್ಲಾಡಳಿತದ ವತಿಯಿಂದ ಇಂದು ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಕುಡಿಯುವ ನೀರು, ಅಕ್ರಮ ಮದ್ಯ ಮಾರಾಟ, ಕೆರೆ ಒತ್ತುವರಿ ಸೇರಿದಂತೆ ವಿವಿಧ ಸಮಸ್ಯೆಗಳÀು ಕೇಳಿ ಬಂದವು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ. ರಾಮು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್ ಅವರ ಸಮ್ಮುಖದಲ್ಲಿ ನಡೆದ ಒಂದು ತಾಸಿನ ಅವಧಿಯ ಕಾರ್ಯಕ್ರಮದಲ್ಲಿ ಒಟ್ಟು 28 ದೂರುಗಳು ದಾಖಲಾದವು. ಲೊಕ್ಕನಹಳ್ಳಿ, ಹುತ್ತೂರು, ಚೌಡಳ್ಳಿ ಭಾಗದಿಂದ ಕರೆ ಮಾಡಿದ ಗ್ರಾಮಸ್ಥರು ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸ್ಥಳೀಯವಾಗಿ ಕೆಲಸ ನೀಡಲಾಗುತ್ತಿಲ್ಲ. ಜನರು ಉದ್ಯೋಗ ಅರಸಿ ಗುಳೆ ಹೋಗುತ್ತಿದ್ದಾರೆ. ಕೆಲವೆಡೆ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಯೋಜನೆಯಡಿ ಕೈಗೊಳ್ಳಲಾಗಿದೆ. ಆದರೂ ಕೆರೆ ಒತ್ತುವರಿ ತೆರವುಗೊಳಿಸಿಲ್ಲವೆಂದು ಗಮನ ಸೆಳೆದರು. ಅಂಕನಶೆಟ್ಟಿಮೋಳೆಯಿಂದ ಕರೆ ಮಾಡಿದ ಓರ್ವರು ಶವಸಂಸ್ಕಾರ ನೆರವು ಇನ್ನೂ ತಲುಪಿಲ್ಲ. ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ಕೊರೆದು ಒಂದು ವರ್ಷವಾಗಿದೆ. ಇನ್ನೂ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲವೆಂದು ಅಳಲು ತೋಡಿಕೊಂಡರು. ಇದಕ್ಕೆ ಉತ್ತರಿಸಿದ ಜಿಲ್ಲಾಧಿಕಾರಿಯವರು ಶವಸಂಸ್ಕಾರ ನೆರವುಧನ ನಿನ್ನೆ ಬಿಡುಗಡೆಯಾಗಿದೆ. ಶೀಘ್ರವೇ ತಲುಪಿಸಲಾಗುವುದು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ತ್ವರಿತವಾಗಿ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗುವುದು ಎಂದರು. ಚಾಮರಾಜನಗರ ತಾಲೂಕಿನ ಉತ್ತುವಳ್ಳಿ, ಗುಂಡ್ಲುಪೇಟೆ ತಾಲೂಕಿನ ಚೌಡಳ್ಳಿ, ಚಾಮರಾಜನಗರ ಪಟ್ಟಣದ ಕೆಲ ವಾರ್ಡ್ ನಿವಾಸಿಗಳು ಕುಡಿಯುವ ನೀರು ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸುವಂತೆ ಕೋರಿ ಕರೆ ಮಾಡಿದರು. ಚಾಮರಾಜನಗರ ತಾಲೂಕಿನ ಕೆಲ್ಲಂಬಳ್ಳಿ ಸಮೀಪ ಹೆದ್ದಾರಿಯಲ್ಲಿ ಅಕ್ರಮವಾಗಿ ಡಾಬಾ ಇತರೆ ಹೋಟೆಲ್‍ಗಳು ತಲೆ ಎತ್ತಿವೆ. ಇದಕ್ಕೆ ಯಾವುದೇ ಅನುಮತಿ ಪಡೆದಿಲ್ಲವೆಂದು ಸ್ಥಳೀಯರೊಬ್ಬರು ತಿಳಿಸಿದರು. ಕೊಳ್ಳೇಗಾಲ ಪಟ್ಟಣದ ಮುಖ್ಯ ರಸ್ತೆ, ಸರ್ಕಾರಿ ಜಮೀನಿನಲ್ಲಿ ಸಹ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಪರವಾನಗಿ ಪಡೆಯದೇ ನಡೆಸಲಾಗುತ್ತಿದೆ ಎಂದು ಅಲ್ಲಿನ ಸ್ಥಳೀಯರೊಬ್ಬರು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಸಭೆಯಲ್ಲಿಯೇ ಇದ್ದ ತಹಸೀಲ್ದಾರರಿಗೆ ಸ್ಥಳ ಪರಿಶೀಲನೆ ಮಾಡಿ ಅನುಮತಿ ಪಡೆಯದಿದ್ದಲ್ಲಿ ತೆರವುಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಆಲೂರು ಗ್ರಾಮದಿಂದ ಕರೆ ಮಾಡಿದ ಗ್ರಾಮಸ್ಥರೊಬ್ಬರು ಸ್ಥಳೀಯವಾಗಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಈಹಿಂದೆ ಅಬಕಾರಿ ಇಲಾಖೆಯವರು ಅಕ್ರಮ ಮದ್ಯ ಮಾರಾಟಕ್ಕೆ ಕ್ರಮ ತೆಗೆದುಕೊಂಡಿದ್ದರು. ಆದರೆ ಇತ್ತೀಚೆಗೆ ಮತ್ತೆ ಅಕ್ರಮವಾಗಿ ಮದ್ಯ ಮಾರಾಟ ಆರಂಭಗೊಂಡಿದೆ ಎಂದರು. ಈ ಕುರಿತು ಉತ್ತರಿಸಿದ ಜಿಲ್ಲಾಧಿಕಾರಿಯವರು ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮ ವಹಿಸುವುದಾಗಿ ತಿಳಿಸಿದರು. ರಸ್ತೆ ಡಾಂಬರೀಕರಣ, ಚರಂಡಿ ಸ್ಪಚ್ಚತೆ, ಖಾತೆ ಬದಲಾವಣೆ, ಅಂಗಡಿ ಮಳಿಗೆಗಳ ವಿತರಣೆ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಫೋನ್ ಇನ್ ಕಾರ್ಯಕ್ರಮದಲ್ಲಿ ದೂರುಗಳು ಕೇಳಿಬಂದವು. ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಜ. 31ರಂದು ನಗರದಲ್ಲಿ ಜಿಲ್ಲಾಮಟ್ಟದ ಯುವಜನ ಮೇಳಕ್ಕೆ ಚಾಲನೆ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜನವರಿ 31ರಂದು ಮಧ್ಯಾಹ್ನ 12 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಆಯೋಜಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧÀ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. ಜಿಲ್ಲಾಮಟ್ಟದ ಯುವಜನಮೇಳ : ವಿವಿಧ ಸ್ಪರ್ಧೆ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- 2016-17ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವು ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜನವರಿ 31 ಹಾಗೂ ಫೆಬ್ರವರಿ 1ರಂದು ನಡೆಯಲಿದ್ದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಯುವಕ ಯುವತಿಯರಿಗೆ ಭಾವಗೀತೆ, ಗೀಗೀಪದ, ಲಾವಣಿ, ಕೋಲಾಟ, ರಂಗಗೀತೆ, ಜಾನಪದ ನೃತ್ಯ, ಭಜನೆ, ಜಾನಪದ ಗೀತೆ (ಸಮೂಹ ಗೀತೆ) ಏಕಪಾತ್ರಾಭಿನಯ ಸ್ಪರ್ಧೆಗಳಿವೆ. ಯುವಕರಿಗೆ ಚರ್ಮವಾದ್ಯ ಮೇಳ ಸ್ಪರ್ಧೆ ಇದೆ. ತಾಲೂಕು ಮಟ್ಟದ ಯುವಜನ ಮೇಳದಲ್ಲಿ ವಿಜೇತರಾಗಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದವರು ಹಾಗೂ ಗುಂಪು ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದವರು ಜಿಲ್ಲಾಮಟ್ಟದ ಯುವಜನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ, ದಿನಭತ್ಯೆ ನೀಡಲಾಗುತ್ತದೆ. ಸ್ಪರ್ಧಿಗಳು ಜನವರಿ 31ರಂದು ಬೆಳಿಗ್ಗೆ 10 ಗಂಟೆಗೆ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ.ಸಂ. 08226-224932 ಅಥವಾ ಮೊಬೈಲ್ 9482718278 ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜ. 31ರಂದು ಚಾ.ನಗರ ಸಾಮಾನ್ಯ ಸಭೆ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- ಚಾಮರಾಜನಗರ ನಗರಸಭೆಯ ಸಾಮಾನ್ಯಸಭೆಯು ಅಧ್ಯಕ್ಷರಾದ ಎಸ್.ಎನ್. ರೇಣುಕ ಅವರ ಅಧ್ಯಕ್ಷತೆಯಲ್ಲಿ ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಪೌರಾಯುಕ್ತರಾದ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):– ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು, ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಬೆರಳಚ್ಚುಗಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಬೆರಳಚ್ಚು ನಕಲುಗಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕಿರಿಯ ದರ್ಜೆ (ಜೂನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಆದೇಶ ಜಾರಿಕಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಸೇವಕರ ಹುದ್ದೆಗೆ 7ನೇ ತರಗತಿ ತೇರ್ಗಡೆಯಾಗಿದ್ದು ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು. ಗರಿಷ್ಟ ವಯೋಮಿತಿ ಸಾಮಾನ್ಯ ವರ್ಗದವರಾಗಿದ್ದಲ್ಲಿ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದವರಾಗಿದ್ದಲ್ಲಿ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಾಗಿದ್ದಲ್ಲಿ 40 ವರ್ಷ ಮೀರಿರಬಾರದು. ಸರ್ಕಾರಿ ಸೇವೆಯಲ್ಲಿರುವವರು, ಜೀತಕಾರ್ಮಿಕರು, ಮಾಜಿ ಸೈನಿಕರು, ಅಂಗವಿಕಲರು, ವಿಧವೆಯರಿಗೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆ ಇದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅರ್ಜಿ ನಮೂನೆಯಲ್ಲಿ ಬೆರಳಚ್ಚು ಮಾಡಿಸಿದ ಅಥವಾ ಗಣಕೀಕೃತ ಅರ್ಜಿಯನ್ನು ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಅಗತ್ಯ ಸ್ವಯಂ ದೃಢೀಕೃತ ನಕಲು ಪ್ರತಿಗಳ ದಾಖಲೆಗಳೊಂದಿಗೆ ಫೆಬ್ರವರಿ 13ರೊಳಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಾಮರಾಜನಗರ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ನಗರದ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದÉ. ಪಿಡಿಓ ಪರೀಕ್ಷೆ : ನಿಷೇದಾಜ್ಞೆ ಜಾರಿ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ 1 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆ ಸಂಬಂಧ ಸ್ಪರ್ಧಾತ್ಕ ಪರೀಕ್ಷೆಯು ಜನವರಿ 29ರಂದು ಜಿಲ್ಲೆಯ ವಿವಿಧ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಪಟ್ಟಣದಲ್ಲಿ 7, ಗುಂಡ್ಲುಪೇಟೆ ಪಟ್ಟಣದಲ್ಲಿ 2, ಕೊಳ್ಳೇಗಾಲ ಪಟ್ಟಣದಲ್ಲಿ 3 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಅಕ್ರಮ ತಡೆಗಟ್ಟಲು ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀ. ವ್ಯಾಪ್ತಿಯಲ್ಲಿ ಜನವರಿ 29ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಹಾಗೂ ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ನಿಷೇದಾಜ್ಞೆ ಆದೇಶ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ. ಜ. 30ರಂದು ಕುಷ್ಠ ಅರಿವು ಆಂದೋಲನ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಷ್ಟರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜನವರಿ 30ರಂದು ಜಾಗೃತಿ ಜಾಥಾ ಹಾಗೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದಿಂದ ಆಶಾ ಕಾರ್ಯಕರ್ತೆಯರು. ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಬೃಹತ್ ಜಾಥಾವನ್ನು ನಡೆಸಲಿದ್ದಾರೆ. ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೂಡ ಹಮ್ಮಿಕೊಳ್ಳಲಾಗಿದೆ. ರೋಗಿಗಳಿಗೆ ಎಂಸಿಆರ್ ಪಾದರಕ್ಷೆ, ಸಲ್ಪ್ ಕೇರ್ ಕಿಟ್ ನೀಡಲಾಗುತ್ತದೆ ಎಂದು ಜಿಲ್ಲಾ ಕುಷ್ಟ ರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ ಚಾಮರಾಜನಗರ, ಜ. 28 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್, ಸದಸ್ಯರಾದ ಮೀನಾಕ್ಷಮ್ಮ, ಗೋಕುಲ ನಾರಾಯಣಸ್ವಾಮಿ ಹಾಗೂ ಕಾರ್ಯದರ್ಶಿಯವರು ಜನವರಿ 30 ಹಾಗೂ 31ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜನವರಿ 30ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ಅಲ್ಲಿನ ಪೌರಕಾರ್ಮಿಕರ ಕಾಲೋನಿಗೆ ಭೇಟಿ ನೀಡುವರು. ಕೊಳ್ಳೇಗಾಲ ನಗರಸಭೆ ಕಾರ್ಯಾಲಯದಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆಗಳ ಬಗ್ಗೆ ಸಭೆ ನಡೆಸುವರು. ರಾತ್ರಿ 7 ಗಂಟೆಗೆ ಮಹದೇಶ್ವರಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಜನವರಿ 31ರಂದು ಬೆಳಿಗ್ಗೆ 10.30 ಗಂಟೆಗೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮೈಸೂರಿಗೆ ತೆರಳುವರೆಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.

Friday, 27 January 2017

ಚಾಮರಾಜನಗರ, ಜ. 27

ಜ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಜನವರಿ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜ. 28ರಂದು ಕೊಳ್ಳೇಗಾಲದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇಸ್ಟಿಟ್ಯೂಟ್ ಫಾರ್ ಪರ್ಸನ್ ವಿತ್ ಫಿಸಿಕಲ್ ಡಿಸೇಬಲಿಟೀಸ್ ಅವರ ನೆರವಿನೊಂದಿಗೆ ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕಿನ ವಿಕಲಚೇತನರುಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸಂಬಂಧ ಜನವರಿ 28ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲ ಶ್ರೀ ಮಹದೇಶ್ವÀರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಹಾರ ಮತ್ತು ನಾಗರಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್. ಜಯಣ್ಣ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಸಿ. ಪುಟ್ಟರಂಗಶೆಟ್ಟಿ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ಯಳಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ನಂಜುಂಡಯ್ಯ, ಕೊಳ್ಳೇಗಾಲ ನಗರಸಭೆ ಅಧÀ್ಯಕ್ಷರಾದ ಪಿ. ಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಎನ್. ಶಾಂತರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾ ರಾಜಣ್ಣ, ಯಳಂದೂರು ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪದ್ಮಾವತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಬಿ. ರಾಮು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ನಳಿನ್ ಅತುಲï, ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇಸ್ಟಿಟ್ಯೂಟ್ ಫಾರ್ ಪರ್ಸನ್ ವಿತ್ ಫಿಸಿಕಲ್ ಡಿಸೇಬಲಿಟೀಸ್ ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ. ಪಾಂಡಿಯನ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಗೋವಿಂದರಾಜು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. ಜ. 28ರಂದು ವಿದ್ಯುತ್ ಜನಸಂಪರ್ಕ ಸಭೆ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಹರದನಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಜನವರಿ 28ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ. ಸಾರ್ವಜನಿಕರು ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳುವಂತೆ ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ಕಚೇರಿ ಉದ್ಘಾಟನೆ ಗೋಶಾಲೆ, ವಸತಿಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಪರಿಶೀಲನೆ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಆಹಾರ, ನಾಗರಿಕ ಸರಬರಾಜು ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಗುರುವಾರ ಜಿಲ್ಲೆಯ ಗೋಶಾಲೆ, ಕಿತ್ತೂರುರಾಣಿ ಚನ್ನಮ್ಮ ವಸತಿಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ಕಚೇರಿಯನ್ನು ಉದ್ಘಾಟಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಲ್ಟಿಪರ್ಪಸ್ ಕಾಂಪ್ಲೆಕ್ಸ್‍ನಲ್ಲಿ ಪ್ರತ್ಯೇಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಉಸ್ತುವಾರಿ ಸಚಿವರು ಈ ಹಿಂದೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 400 ಕೋಟಿ ರೂ. ಅನುದಾನ ಮಾತ್ರ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಈ ಅನುದಾನವನ್ನು 1200 ಕೋಟಿಗೆ ಹೆಚ್ಚಿಸಿ ಅಲ್ಪಸಂಖ್ಯಾತರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ ಎಂದರು. ರಾಜ್ಯ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಅಖಂಡ ಜನರು ಶಾಂತಿ ಐಕ್ಯತೆಯಿಂದ ಇದ್ದು ಸಾಮರಸ್ಯ ಬಾಳ್ವೆ ನಡೆಸಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯೋದ್ದೇಶದೊಂದಿಗೆ ಸಮರ್ಪಕವಾಗಿ ಸವಲತ್ತುಗಳನ್ನು ತಲುಪಿಸುವಲ್ಲಿ ಮುಂದಾಗುತ್ತಿದೆ ಎಂದರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಒಟ್ಟು ಜನಸಂಖ್ಯೆಯಲ್ಲಿ ಶೇ.15ರಷ್ಟು ಅಲ್ಪಸಂಖ್ಯಾತರು ಇದ್ದಾರೆ. ಈ ಪೈಕಿ ಶೇ. 12ರಷ್ಟು ಮುಸ್ಲಿಂ ಸಮುದಾಯವಿದೆ. ಅದರಲ್ಲೂ ಮುಸ್ಲಿಂ ಸಮುದಾಯ ಜನತೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಮೊರಾರ್ಜಿ ವಸತಿ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಪ್ರಯೋಜನ ಪಡೆಯಬೇಕೆಂದು ಸಲಹೆ ಮಾಡಿದರು. ಬಳಿಕ ಉಸ್ತುವಾರಿ ಸಚಿವರು ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ತೆರೆಯಲಾಗಿರುವ ಗೋಶಾಲೆಗೆ ಭೇಟಿ ನೀಡಿ ಅಲ್ಲಿ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಗೋವಿಗೆ ನೀಡಲಾಗುತ್ತಿರುವ ಮೇವು, ನೀರು, ಔಷಧೋಪಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆ ನೀಡಿದರು. ಇದೇವೇಳೆ ಸ್ಥಳದಲ್ಲಿದ್ದ ಜಾನುವಾರು ಮಾಲೀಕರೊಂದಿಗೂ ಸಮಾಲೋಚಿಸಿ ಏನಾದರೂ ತೊಂದರೆ ಇದೆಯೇ ಎಂದು ಪ್ರಶ್ನಿಸಿದರು. ಬರ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು. ತದನಂತರ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿರುವ ಕಿತ್ತೂರುರಾಣಿ ಚನ್ನಮ್ಮ ವಸತಿಶಾಲೆಗೆ ಭೇಟಿ ನೀಡಿದರು. ಅಲ್ಲಿ ವಿದ್ಯಾರ್ಥಿನಿಯರಿಗೆ ಒದಗಿಸಲಾಗಿರುವ ಸೌಲಭ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಡುಗೆಕೋಣೆ, ಊಟದ ಹಾಲ್‍ಗಳನ್ನು ವೀಕ್ಷಿಸಿದರು. ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಊಟ ಉಪಾಹಾರ ವಿತರಣೆಯ ಮೆನು ಪರಿಶೀಲಿಸಿ ಆ ಪ್ರಕಾರವೇ ನೀಡಲಾಗುತ್ತಿದೆಯೇ ಎಂಬ ಮಾಹಿತಿಯನ್ನು ಪಡೆದುಕೊಂಡರು. ಆಹಾರ ಸಾಮಗ್ರಿ, ತರಕಾರಿಗಳನ್ನು ಎಲ್ಲಿ ಖರೀದಿಸಲಾಗುತ್ತಿದೆ ಎಂಬ ಬಗ್ಗೆ ಪ್ರಶ್ನಿಸಿದರು. ಸಂಜೆಯ ಉಪಾಹಾರ ಸೇವಿಸುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಸಚಿವರು ನೀಡಲಾಗುತ್ತಿರುವ ಉಪಾಹಾರ, ಊಟ ಸರಿಯಿದೆಯೇ ಎಂದು ತಿಳಿದುಕೊಂಡರು. ವಿದ್ಯಾರ್ಥಿನಿಯರು ಅಲ್ಲಿನ ವ್ಯವಸ್ಥೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಬಳಿಕ ವಸತಿಶಾಲೆಯ ಆವರಣದಲ್ಲಿ ಇರುವ ಬಯಲು ರಂಗಮಂದಿರಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಉಸ್ತುವಾರಿ ಸಚಿವರು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಅತ್ಯುನ್ನತ ಸ್ಥಾನಕ್ಕೆ ಏರಬೇಕು. ಸಿಗುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಂಡು ಮೇಲೆ ಬರಬೇಕು. ಉತ್ತಮ ವ್ಯಕ್ತಿತ್ವ ಪಡೆದು ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸಲಹೆ ಮಾಡಿದರು. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕರೆಹಳ್ಳಿ ನವೀನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಉಪವಿಭಾಗಾಧಿಕಾರಿ ನಳಿನ್ ಅತುಲ್, ತಹಸೀಲ್ದಾರ್ ಪುರಂಧರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಚ್. ಸತೀಶ್, ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. ಗ್ರಾ.ಪಂ. ಉಪಚುನಾವಣೆ : ವೇಳಾಪಟ್ಟಿ ಪ್ರಕಟ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):– ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ 5 ಗ್ರಾಮ ಪಂಚಾಯಿತಿಯ 5 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಚಾಮರಾಜನಗರ ತಾಲೂಕಿನ ಹೊಂಗನೂರು, ಕೊಳ್ಳೇಗಾಲ ತಾಲೂಕಿನ ದೊಡ್ಡಾಲತ್ತೂರು, ಮಾರ್ಟಳ್ಳಿ, ಗುಂಡ್ಲುಪೇಟೆ ತಾಲೂಕಿನ ಕೊತನೂರು, ಯಳಂದೂರಿನ ಬಿಳಿಗಿರಿರಂಗನ ಬೆಟ್ಟದ ಗ್ರಾಮಪಂಚಾಯಿತಿಯ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜನವರಿ 30ರಂದು ಜಿಲ್ಲಾಧಿಕಾರಿಗಳು ಚುನಾವಣೆ ಅಧಿಸೂಚನೆ ಹೊರಡಿಸುವರು. ನಾಮಪತ್ರ ಸಲ್ಲಿಸಲು ಫೆಬ್ರವರಿ 2 ಕಡೆಯ ದಿನವಾಗಿದೆ. ಫೆಬ್ರವರಿ 3ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಫೆಬ್ರವರಿ 6ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಫೆಬ್ರವರಿ 12ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ (ಅವಶ್ಯವಿದ್ದರೆ). ಫೆಬ್ರವರಿ 14ರಂದು ಅವಶ್ಯವಿದ್ದಲ್ಲಿ ಮರು ಮತದಾನ ನಡೆಯಲಿದೆ. ಫೆಬ್ರವರಿ 15ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಏಣಿಕೆ ಕಾರ್ಯ ನಡೆಯಲಿದೆ ಹಾಗೂ ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ. ಚುನಾವಣಾ ನೀತಿಸಂಹಿತೆಯು ಚುನಾವಣೆ ನಡೆಯುವ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರವರಿ 15ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ. ಆದರ್ಶ ವಿದ್ಯಾಲಯ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ನಗರದ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ತಾಲೂಕು ವ್ಯಾಪ್ತಿಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಆದರ್ಶ ವಿದ್ಯಾಲಯದ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಫೆಬ್ರವರಿ 3ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ಮುಖ್ಯ ಶಿಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ಜ. 31ರಂದು ತಾ.ಪಂ. ಸಾಮಾನ್ಯ ಸಭೆ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜ. 30ರಂದು ಕುಷ್ಠ ಅರಿವು ಆಂದೋಲನ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಷ್ಟರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜನವರಿ 30ರಂದು ಜಾಗೃತಿ ಜಾಥಾ ಹಾಗೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದಿಂದ ಆಶಾ ಕಾರ್ಯಕರ್ತೆಯರು. ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಬೃಹತ್ ಜಾಥಾವನ್ನು ನಡೆಸಲಿದ್ದಾರೆ. ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೂಡ ಹಮ್ಮಿಕೊಳ್ಳಲಾಗಿದೆ. ರೋಗಿಗಳಿಗೆ ಎಂಸಿಆರ್ ಪಾದರಕ್ಷೆ, ಸಲ್ಪ್ ಕೇರ್ ಕಿಟ್ ನೀಡಲಾಗುತ್ತದೆ ಎಂದು ಜಿಲ್ಲಾ ಕುಷ್ಟ ರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್, ಸದಸ್ಯರಾದ ಮೀನಾಕ್ಷಮ್ಮ, ಗೋಕುಲ ನಾರಾಯಣಸ್ವಾಮಿ ಹಾಗೂ ಕಾರ್ಯದರ್ಶಿಯವರು ಜನವರಿ 30 ಹಾಗೂ 31ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜನವರಿ 30ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ಅಲ್ಲಿನ ಪೌರಕಾರ್ಮಿಕರ ಕಾಲೋನಿಗೆ ಭೇಟಿ ನೀಡುವರು. ಕೊಳ್ಳೇಗಾಲ ನಗರಸಭೆ ಕಾರ್ಯಾಲಯದಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆಗಳ ಬಗ್ಗೆ ಸಭೆ ನಡೆಸುವರು. ರಾತ್ರಿ 7 ಗಂಟೆಗೆ ಮಹದೇಶ್ವರಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು. ಜನವರಿ 31ರಂದು ಬೆಳಿಗ್ಗೆ 10.30 ಗಂಟೆಗೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮೈಸೂರಿಗೆ ತೆರಳುವರೆಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.

Wednesday, 25 January 2017

26-01-2017 ಚಾಮರಾಜನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ 68ನೇ ಗಣರಾಜ್ಯೋತ್ಸವ

ಚಾಮರಾಜನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ 68ನೇ ಗಣರಾಜ್ಯೋತ್ಸವ S.VEERABHADRA SWAMY. RAMASAMUDRA ಚಾಮರಾಜನಗರ ಜನವರಿ26, - ರಾಜ್ಯ ಸಂಕಷ್ಟದಲ್ಲಿದ್ದು, ಚಾಮರಾಜನಗರ ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು ತೀವ್ರ ಬರಪರಿಸ್ಥಿತಿಯನ್ನು ಎದುರಿಸುವಲ್ಲಿ ನಾವು ಜನರ ಜೊತೆಗಿದ್ದೆವೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್,ತಿಳಿಸಿದರು. ಅವರು ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ 68ನೇ ಗಣರಾಜ್ಯೋತ್ಸ ಕಾರ್ಯಕ್ರಮದಲ್ಲಿ ಧ್ವಜಾರೊಹಣ ನೆರವೇರಿಸಿ ಮಾತನಾಡಿದರು. ಜಿಲ್ಲಾ ಅಡಳಿತದಿಂದ ಈಗಗಾಲೆ ಜಿಲ್ಲೆಯಲ್ಲಿ ಮೂರು ಗೋಶಾಲೆ ಹಾಗೂ ಐದು ಮೇವು ಬ್ಯಾಂಕ್ ತೆರೆಯಲಾಗಿದ್ದು ಮುಂದಿನ ದಿನಗಳಲ್ಲಿ ಜಾನುವಾರುಗಳ ಸಂರಕ್ಷಣೆಗೆ ಅಗತ್ಯವಿರುವ ಮೇವನ್ನು ಪೊರೈಸಲು ಅಗತ್ಯ ಸಿದ್ದತೆಗಳನ್ನು ಮಡಿಕೊಳ್ಳಲಾಗಿದೆ ಎಂದರು. ಮುಂಗಾರು ಬೆಳೆ ವಿಫಲವಾಗಿರುವುದರಿಂದ 75774 ಜನ ರೈತರಿಗೆ 40.34 ಕೋಟಿ ಬೆಳೆ ಪರಿಹಾರವನ್ನು ವಿತರಿಸಲಾಗುವುದು ಎಂದು ಇದೇ ವೇಳೆ ಸಚಿವರು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸದ ಆರ್.ಧ್ರುವನಾರಾಯಣ, ಶಾಸಕ ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯಿತ್ ಅಧ್ಯಕ್ಷ ರಾಮಚಂದ್ರು, ನಗರಸಭಾಧ್ಯಕ್ಷೆ ರೇಣುಕಾ, ತಾಲ್ಲೂಕು ಪಂಚಾಯಿತ್ ಅಧ್ಯಕ್ಷ ಚಂದ್ರು, ಜಿಲ್ಲಾಧಿಕಾರಿ ರಾಮು, ಎಸ್ಪಿ ಕುಲದೀಪ್‍ಕುಮಾರ್ ಆರ್ ಜೈನ್ ಇತರರು ಹಾಜರಿದ್ದರು

26-01-2017 ಚಾಮರಾಜನಗರ ಪೊಟೋಸ್

https://m.facebook.com/story.php?story_fbid=1823860651208616&id=1679423205652362

Tuesday, 24 January 2017

25-01-2017 ಚಾಮರಾಜನಗರ ಸುದ್ದಿ

ರಾಜ್ಯ ಮಟ್ಟದ ಪ್ರಬಂಧ ಮತ್ತು ಕವನ ಸ್ಪರ್ಧೆ ಚಾಮರಾಜನಗರ :- ವಿಶ್ವಗುರು ಬಸವಣ್ಣನವರ ಮತ್ತು ಶಿವಶರಣರ ದಿವ್ಯ ಸಂದೇಶವನ್ನು ಜನಮನಗಳಿಗೆ ತಲುಪಿಸುವ ನಿಟ್ಟಿನಲ್ಲಿ ಮತ್ತು ಪರಿಚಯಕ್ಕಾಗಿ ಬೆಂಗಳೂರಿನ ಕೇಂದ್ರ ಬಸವ ಸಮಿತಿಯು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಮತ್ತು ಕವನ ಸ್ಪರ್ಧೆಯನ್ನು ಏರ್ಪಡಿಸಿದೆ. ಬಸವಣ್ಣನವರ ಪರಿವರ್ತನಾತ್ಮಕ ಮನೋಧರ್ಮ: ಅಂದು- ಇಂದು- ಮುಂದು ಪ್ರಬಂಧದ ವಿಷಯ ಮತ್ತು ಬಸವಾದಿ ಶರಣರ ದಿವ್ಯ ಸಂದೇಶ ಸಾರುವ ಕವಿತೆಗಳು ಕವನದ ವಿಷಯ ಕುರಿತು ಉದಯೋನ್ಮುಖ ಹಾಗೂ ಪ್ರತಿಭಾವಂತ ಬರಹಗಾರರಿಂದ, ಕವಿಗಳಿಂದ ಪ್ರಬಂಧ ಮತ್ತು ಕವನಗಳನ್ನು ಆಹ್ವಾನಿಸಲಾಗಿದೆ. ಪ್ರಬಂಧ 6 ಪುಟಗಳಿಗೆ ಮಿಕ್ಕದಂತೆ, ಕವನ 2 ಪುಟಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿ.ಟಿ.ಪಿ ಮಾಡಿಸಿ ಸ್ವ ವಿಳಾಸ, ಕಿರು ಪರಿಚಯ, ಭಾವ ಚಿತ್ರ ಹಾಗೂ ವ್ಯಾಟ್ಸಪ್ ನಂ. ಮೊಬೈಲ್ ನಂಬರದೊಂದಿಗೆ ಫೆಬ್ರವರಿ 28 ರೊಳಗೆ ಅರವಿಂದ ಬಸಪ್ಪ ಜತ್ತಿ, ಅಧ್ಯಕ್ಷರು, ಬಸವ ಸಮಿತಿ, ಬಸವ ಭವನ, ಶ್ರೀ ಬಸವೇಶ್ವರ ರಸ್ತೆ, ಬೆಂಗಳೂರು- 560001 ಈ ವಿಳಾಸಕ್ಕೆ ಕಳುಹಿಸಬೇಕು. ಸ್ಪರ್ಧೆಗಳಲ್ಲಿ ಭಾಗವಹಿಸಲು ವಯಸ್ಸಿನ ನಿರ್ಬಂಧವಿರುವದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9448920888 ಸಂಪರ್ಕಿಸಬೇಕೆಂದು ಕೇಂದ್ರ ಬಸವ ಸಮಿತಿ ನಿರ್ದೇಶಕ ಮೋಹನ ಬಸವನಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಬಂಧ / ಕವನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ದಿನಾಂಕ : 29-04-2017 ಬಸವ ಜಯಂತ್ಯೋತ್ಸವದಂದು ಬೆಂಗಳೂರು ಬಸವ ಭವನದಲ್ಲಿ ಬಹುಮಾನ, ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಶಂಶನಾ ಪತ್ರ ನೀಡಲಾಗುವುದು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 10000/-. ದ್ವಿತೀಯ ಬಹುಮಾನ ರೂ. 6000/-. ಮತ್ತು ತೃತೀಯ ಬಹುಮಾನ ರೂ. 3000/- ಹಾಗೂ ಕವನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ ರೂ. 5000/-, ದ್ವಿತೀಯ ಬಹುಮಾನ ರೂ. 3000/- ಮತ್ತು ತೃತೀಯ ಬಹುಮಾನ ರೂ. 2000/- ಕೊಡಲಾಗುವುದೆಂದು ಬಸವ ಸಮಿತಿ ನಿರ್ದೇಶಕರು ತಿಳಿಸಿರುತ್ತಾರೆ.

24-01-2017 ಚಾಮರಾಜನಗರಕ್ಕೆ ಪ್ರಪ್ರಥಮ ಭೇಟಿಯ ಸಭೆಯ ಖಾದರ್ ಸುದ್ದಿ ಚಿತ್ರಗಳು




















ಚಿತ್ರ ಶೀರ್ಷಿಕೆ : ನಗರದ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕೊಡುಗೆಯಾಗಿ ನೀಡಿರುವ ಡಯಾಲಿಸಿಸ್ ಯಂತ್ರವನ್ನು ಆಹಾರ ನಾಗರೀಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಇಂದು ಸೇವೆಗೆ ಸಮರ್ಪಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪಿ.ಸದಾಶಿವಮೂರ್ತಿ ಇತರರು ಹಾಜರಿದ್ದರು.
                          



ಜ. 25ರಂದು ನಗರದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ
ಚಾಮರಾಜನಗರ, ಜ. 24 (ಕರ್ನಾಟಕ ವಾರ್ತೆ):- ಚುನಾವಣಾ ಆಯೋಗ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ರಾಷ್ಟ್ರೀಯ ಮತದಾರರ ದಿನ ಆಚರಣೆಯನ್ನು ಜನವರಿ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮಣ್ ಎಫ್. ಮಳವಳ್ಳಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾಧಿಕಾರಿ ಬಿ. ರಾಮು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ|| ಪಿ. ದೇವರಾಜು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

ಜ. 26 ರಿಂದ ಮಹದೇಶ್ವರ ಬೆಟ್ಟದಲ್ಲಿ ಜಾನಪದ ಜÁತ್ರೆಗೆ ಚಾಲನೆ
ಚಾಮರಾಜನಗರ, ಜ. 24 (ಕರ್ನಾಟಕ ವಾರ್ತೆ):- ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಜಾನಪದ ಜಾತ್ರೆ ಕಾರ್ಯಕ್ರಮವನ್ನು ಜನವರಿ 26 ಹಾಗೂ 27ರಂದು ಕೊಳ್ಳೇಗಾಲ ತಾಲೂಕಿನ ಮಹದೇಶ್ವರಬೆಟ್ಟದಲ್ಲಿ ಹಮ್ಮಿಕೊಂಡಿದೆ.
ಜನವರಿ 26ರಂದು ಸಂಜೆ 5.30 ಗಂಟೆಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಜಾನಪದ ಜಾತ್ರೆಗೆ ಚಾಲನೆ ನೀಡುವರು. ಹನೂರು ಶಾಸಕರಾದ ಆರ್. ನರೇಂದ್ರ ಅಧ್ಯಕ್ಷತೆ ವಹಿಸಲಿದ್ದು ಸಾಲೂರು ಬೃಹನ್ಮಠ ಅಧ್ಯಕ್ಷರಾದ ಪಟ್ಟದ ಗುರುಸ್ವಾಮಿ ಅವರು ದಿವ್ಯ ಸಾನಿಧ್ಯ ವಹಿಸುವರು.
ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಜಂಟಿನಿರ್ದೇಶಕರಾದ ಅಶೋಕ ಎನ್. ಚಲವಾದಿ ಹಾಗೂ ಜಾನಪದ ಜಾತ್ರೆಯ ನಿರ್ದೇಶಕರಾದ ಡಾ|| ಬಾನಂದೂರ ಕೆಂಪಯ್ಯ ಈ ವಿಷಯ ತಿಳಿಸಿದರು.
ಕಾರ್ಯಕ್ರಮಗಳು ಎರಡು ದಿನಗಳ ಕಾಲ ಸಂಜೆಯ ವೇಳೆಗೆ ನಡೆಯಲಿದೆ. 30 ವಿವಿಧ ಜಾನಪದ ಕಲಾಪ್ರಕಾರ ತಂಡಗಳು ಈಗಾಗಲೇ ಮಹದೇಶ್ವರ ಬೆಟ್ಟಕ್ಕೆ ಆಗಮಿಸಿ ತರಬೇತಿಯಲ್ಲಿ ನಿರತವಾಗಿವೆ. 350ಕ್ಕೂ ಹೆಚ್ಚು ಕಲಾವಿದರು ಜಾನಪದ ಜಾತ್ರೆಯಲ್ಲಿ ತಮ್ಮ ಕಲಾ ಪ್ರದರ್ಶನ ನೀಡಲಿದ್ದಾರೆ. ಮಹದೇಶ್ವರಬೆಟ್ಟದ ಬಳಿಕ ರಾಜ್ಯದ ಇತರೆಡೆ ಕೂಡ ಜಾನಪದ ಜಾತ್ರೆ ಮುಂದುವರೆಯಲಿದೆ ಎಂದು ಅಶೋಕ್ ಎನ್. ಚಲವಾದಿ ತಿಳಿಸಿದರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಸ್. ರಾಜು, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾ ರಾಜಣ್ಣ, ಮಾರ್ಟಳ್ಳಿ ಜಿ.ಪಂ. ಸದಸ್ಯರಾದ ಇಷಾರತ್ ಬಾನು, ಮಹದೇಶ್ವರ ಬೆಟ್ಟ ತಾ.ಪಂ. ಸದಸ್ಯರಾದ ಹಲಗತಂಬಡಿ, ಮಹದೇಶ್ವರ ಬೆಟ್ಟ ಗ್ರಾ.ಪಂ. ಅಧ್ಯಕ್ಷರಾದ ರುಕ್ಮಿಣಿ, ಜಿಲ್ಲಾಧಿಕಾರಿ ಬಿ. ರಾಮು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಮರ್Áದಾಯ ದತ್ತಿಗಳ ಇಲಾಖೆ ಆಯುಕ್ತರಾದ ಎಸ್.ಪಿ. ಷಡಕ್ಷರಿಸ್ವಾಮಿ ಗೌರವಾನ್ವಿತ ಉಪಸ್ಥಿತರಿರುವರು.


ಕಾರ್ಯಕ್ರಮದಲ್ಲಿ ಭಾಗವಹಿಸುವ ಜಾನಪದ ಕಲಾತಂಡಗಳ ವಿವರ:-
ಚಾಮರಾಜನಗರ ಜಿಲ್ಲೆಯ ರವಿಚಂದ್ರ ಪ್ರಸಾದ್ ಮತ್ತು ತಂಡ - ಕಹಳೆ ಕೊಂಬು, ಬಸವರಾಜಯ್ಯ ಮತ್ತು ತಂಡ - ನೀಲಗಾರರು, ಕೆಂಪಣ್ಣ ಮತ್ತು ತಂಡ – ಕಂಸಾಳೆ, ರಾಜಶೇಖರಮೂರ್ತಿ ಮತ್ತು ತಂಡ – ಗೊರವರ ಕುಣಿತ, ಕೃಷ್ಣಮೂರ್ತಿ ಮತ್ತು ತಂಡ - ಸೋಲಿಗರ ನೃತ್ಯ
ದಾವಣಗೆರೆ ಜಿಲ್ಲೆಯ ಲಾವಣ್ಯ ಮತ್ತು ತಂಡ – ಕೋಲಾಟ, ಚೇತನ್ ಕುಮಾರ್ ಮತ್ತು ತಂಡ – ಕರಡಿ ಮಜಲು
ರಾಮನಗರ ಜಿಲ್ಲೆಯ ಜಯರಾಮಯ್ಯ ಮತ್ತು ತಂಡ - ಪೂಜಾ ಕುಣಿತ, ಅನಿಲ್ ಕುಮಾರ್ ಮತ್ತು ತಂಡ - ಪಟಾ ಕುಣಿತ, ಕುಮಾರ ಮತ್ತು ತಂಡ – ತಮಟೆ, ನಗಾರಿ
ಕೊಡಗು ಜಿಲ್ಲೆಯ ಜಿ.ಕೆ. ರಾಮು ಮತ್ತು ತಂಡ – ಗಿರಿಜನ ನೃತ್ಯ
ಬಾಗಲಕೋಟೆ ಜಿಲ್ಲೆಯ ಮಂಜುನಾಥ ಭಜಂತ್ರಿ ಮತ್ತು ತಂಡ - ಶಹನಾಯಿ, ಹನುಮಂತ ಮಾದರ ಮತ್ತು ತಂಡ – ತತ್ವ ಪದಗಳು, ಯಲ್ಲವ್ವ ಮಾದರ ಮತ್ತು ತಂಡ – ಗೀಗೀ ಪದ
ಮಂಡ್ಯ ಜಿಲ್ಲೆಯ ನಿಂಗರಾಜು ಮತ್ತು ತಂಡ – ತಮಟೆ ವಾದ್ಯ, ಮರಿಸ್ವಾಮಿ ಮತ್ತು ತಂಡ - ಪೂಜಾ ಕುಣಿತ
ಚಿತ್ರದುರ್ಗ ಜಿಲ್ಲೆಯ ಜಯಬಾಯಿ ಮತ್ತು ತಂಡ - ಲಂಬಾಣಿ ನೃತ್ಯ, ಲಕ್ಷ್ಮಕ್ಕ ಮತ್ತು ತಂಡ - ಸೋಬಾನೆ ಪದ
ಹಾಸನ ಜಿಲ್ಲೆಯ ಕುಮಾರಯ್ಯ ಮತ್ತು ತಂಡ – ಚಿಟ್ಟಿಮೇಳ
ಮೈಸೂರು ಜಿಲ್ಲೆಯ ದಿನೇಶ್ ಕುಮಾರ್ ಮತ್ತು ತಂಡ - ನಗಾರಿ, ನಾಗನಾಯಕ ಮತ್ತು ತಂಡ – ಡೊಳ್ಳು ಕುಣಿತ, ಜಿ.ಕೆ. ಗೋವಿಂದ ನಾಯಕ ಮತ್ತು ತಂಡ – ವೀರಗಾಸೆ
ಬೆಂಗಳೂರು ಜಿಲ್ಲೆಯ ಸುಮಕಂಠಿ ಮತ್ತು ತಂಡ – ಜನಪದ ಹಾಡಿಗೆ ನೃತ್ಯ
ಹಾವೇರಿ ಜಿಲ್ಲೆಯ ಅಭಿಶೇಕ್ ಮತ್ತು ತಂಡ – ಜನಪದ ನೃತ್ಯ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮುನಿಯಪ್ಪ ಮತ್ತು ತಂಡ - ಸೋಮನ ಕುಣಿತ
ಶಿವಮೊಗ್ಗ ಜಿಲ್ಲೆಯ ಕುಮುದ ಮತ್ತು ತಂಡ – ಆದಿವಾಸಿ ನೃತ್ಯ
ಬೆಳಗಾವಿ ಜಿಲ್ಲೆಯ ಕಲ್ಲಪ್ಪ ಬ ದೊಡ್ಡಮನಿ ಮತ್ತು ತಂಡ – ಚೌಡಿಕೆ ವಾದ್ಯ
ಧಾರವಾಡ ಜಿಲ್ಲೆಯ ಕಲ್ಲಪ ಹಂಚಿನಮನಿ ಮತ್ತು ತಂಡ – ಜಗ್ಗಲಿಗೆ ಮೇಳ
ಬಳ್ಳಾರಿ ಜಿಲ್ಲೆಯ ವಿ. ತಿಮ್ಮಪ್ಪ ಮತ್ತು ತಂಡ - ಹುಲಿವೇಷ ಪ್ರದರ್ಶನ ನೀಡಲಿದ್ದಾರೆ.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ಜಾನಪದ ಕಲಾವಿದ ಸಿ.ಎಂ. ನರಸಿಂಹಮೂರ್ತಿ ಪತ್ರಿಕಾ ಗೋಷ್ಠಿಯಲ್ಲಿ ಹಾಜರಿದ್ದರು.

ಜ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಜ. 24 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಜನವರಿ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
     ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜ. 28ರಂದು ಶಿವಪುರದಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜ. 24 (ಕರ್ನಾಟಕ ವಾರ್ತೆ):- ಜನರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ತಾಲೂಕಿನ ಕಸಬಾ ಹೋಬಳಿಯ ಶಿವಪುರ ಗ್ರಾಮದ ಶನೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜನವರಿ 28ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಜನಸಂಪÀರ್ಕ ಸಭೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ತಹಸೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಚಾಮರಾಜನಗರ: ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾದ ಬಳಿಕ ಚಾಮರಾಜನಗರ ಜಿಲ್ಲೆಗೆ ಬಾರಿಗೆ ಜಿಲ್ಲೆಗೆ ಆಹಾರ, ನಾಗರೀಕ ಮತ್ತು ಗ್ರಾಹಕ ಸರಬರಾಜು ಸಚಿವ ಖಾದರ್ ಮೊದಲ ಬಾರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಖಾದರ್ ಅವರ ನೇತೃತ್ವದಲ್ಲಿ ನಡೆಯಬೇಕಾಗಿದ್ದ ಸಭಾ ಕಾರ್ಯಕ್ರಮದಲ್ಲಿ ವಿಪರ್ಯಾಸ ಎಂದರೆ ಸಭೆ ಹಾಗೂ ಸಂವಾದದ ಬದಲು ವಿವಿದ ಯೋಜನೆ ಪುಸ್ತಕ, ಸಿ.ಡಿ ಬಿಡುಗಡೆ ಮಾಡಿ ಸಮಯ ಕಳೆಯಲಾಯಿತು. ಮೊಟ್ಟಮೊದಲಿಗೆ ಸ್ವಾಗತ, ಸ್ಮಾರ್ಟ್ ಯೋಜನೆ ಕೈಪಿಡಿ,ಉಷಾ ಯೋಜನೆಯ ಸಿ.ಡಿ. ಬಿಡುಗಡೆ ಮಾಡುವುದರಲ್ಲೆ ಕಾಲ ಕಳೆದು ಯೋಜನೆಗಳ ಪ್ರಗತಿ ಮಾಹಿತಿಗಳು ಮೂಲೆಗುಂಪಾದವು. ಕಾರ್ಯಕ್ರಮದಲ್ಲಿ ಶಾಸಕ ಪುಟ್ಟರಂಗಶೆಟ್ಟಿ,ನರೇಂದ್ರ, ಜಯಣ್ಣ, ಜಿಲ್ಲಾಧಿಕಾರಿ ರಾಮು, ಸಿಈಒ, ಎಸಿ ಹಾಗೂ ಜಿಲ್ಲಾ ಮಟ್ಟದ ಅದಿಕಾರಿಗಳು ಬಾಗವಹಿಸಿದ್ದರು. -ರಾಮಸಮುದ್ರ ಎಸ್.ವೀರಭದ್ರಸ್ವಾಮಿ

Monday, 23 January 2017

17-01-2017 ರಿಂದ 22-01-2017 ವರೆಗಿನ ಚಾಮರಾಜನಗರ ಸುದ್ದಿಗಳು

ಸಂತೆಮರಹಳ್ಳಿ ಆಸ್ಪತ್ರೆಗೆ ಆರೋಗ್ಯ ಸಚಿವರು, ಲೋಕಸಭಾ ಸದಸ್ಯರ ಭೇಟಿ : ಪರಿಶೀಲನೆ
ಚಾಮರಾಜನಗರ, ಜ. 17 (ಕರ್ನಾಟಕ ವಾರ್ತೆ):- ತಾಲೂಕಿನ ಸಂತೆಮರಹಳ್ಳಿಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ರಾಜ್ಯ ಸರ್ಕಾರ ಅನುದಾನದಡಿ ನಿರ್ಮಾಣವಾಗಿರುವ ತಾಯಿ ಮತ್ತು ಮಗು ಆಸ್ಪತ್ರೆ ಕಟ್ಟಡವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್. ರಮೇಶ್ ಕುಮಾರ್ ಹಾಗೂ ಸಂಸದ ಧ್ರುವನಾರಾಯಣ ಇಂದು ಪರಿಶೀಲಿಸಿದರು.
10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ 60 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯ ಪ್ರತಿಯೊಂದು ವಿಭಾಗವನ್ನು ಸಚಿವರು ವೀಕ್ಷಿಸಿದರು. ಕೆಲವೆಡೆ ಆಗಬೇಕಿರುವ ಕೆಲಸಗಳ ಬಗ್ಗೆ ಸೂಚನೆ ನೀಡಿದರು.
ಆಸ್ಪತ್ರೆ ಕಟ್ಟಡ ನಿರ್ಮಾಣ ಗುಣಮಟ್ಟದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ಸಚಿವರು ಆಸ್ಪತ್ರೆ ಆವರಣದಲ್ಲಿ ಸಾಕಷ್ಟು ಜಾಗ ಇರುವುದನ್ನು ಗಮನಿಸಿ ಇಲ್ಲಿ ಉತ್ತಮ ಗಿಡ ಸಸಿಗಳನ್ನು ನೆಟ್ಟು ಉದ್ಯಾನವನ ಮಾದರಿಯನ್ನಾಗಿ ಮಾಡುವಂತೆ ತಿಳಿಸಿದರು. ಫಲ ಕೊಡುವ ಗಿಡಗಳನ್ನು ನೆಟ್ಟು ಪೋಷಿಸುವುದರ ಜತೆಗೆ ಆಕರ್ಷಣೀಯ ಹೂ ಸಸಿಗಳನ್ನು ಸಹ ನೆಡುವಂತೆ ಸೂಚಿಸಿದರು.
ಆಸ್ಪತ್ರೆಯ ಆಪರೇಷನ್ ಥಿಯೇಟರ್, ಅನಸ್ತೇಷಿಯಾ ಇನ್ನಿತರ ಶಸ್ತ್ರಚಿಕಿತ್ಸಾ ಉಪಕರಣಗಳು ಹಾಗೂ ಪೀಠೋಪಕರಣಗಳ ಖರೀದಿಗೆ ಪ್ರಕ್ರಿಯೆ ನಡೆಯುತ್ತಿದೆ. ಅಲ್ಲದೆ ಆಸ್ಪತ್ರೆಗೆ ಹಾಸಿಗೆ ಇನ್ನಿತರ ಸಲಕರಣೆಗಳನ್ನು ಖರೀದಿಸಲಾಗುತ್ತದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಆಸ್ಪತ್ರೆ ಕಟ್ಟಡ ಪ್ರಾರಂಭೋತ್ಸವಕ್ಕೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.
ಸಂತೆಮರಹಳ್ಳಿ ಪ್ರಸ್ತುತ ಆಸ್ಪತ್ರೆಯಲ್ಲಿ 120 ರಿಂದ 150 ಹೆರಿಗೆ ಪ್ರಕರಣಗಳು ಪ್ರತೀ ತಿಂಗಳು ದಾಖಲಾಗುತ್ತಿರುವ ಬಗ್ಗೆ ಮಾಹಿತಿ ಇದÉ. ಹೀಗಾಗಿ ಆಸ್ಪತ್ರೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸುವ ಅವಶ್ಯಕತೆ ಇದೆ. ಜನರಿಗೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ತಜ್ಞ ವೈದ್ಯರ ನೇಮಕ ಮಾಡಿ ಕೊಂಡು ಅಗತ್ಯವಿರುವ ಎಲ್ಲಾ ನೆರವು ನೀಡಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ್ಪಕ ಸೇವೆ ನೀಡುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಸಚಿವರು ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಪ್ರಮುಖ ಹೋಬಳಿ ಕೇಂದ್ರದಲ್ಲಿ ನಿರ್ಮಾಣವಾಗಿರುವ ತಾಯಿ ಮಗು ಆಸ್ಪತ್ರೆ ಈ ಭಾಗದ ಎಲ್ಲ ಜನರಿಗೆ ಅನುಕೂಲವಾಗುತ್ತಿದೆ. ಹೀಗಾಗಿ ಆದಷ್ಟು ಶೀಘ್ರವೇ ಆಸ್ಪತ್ರೆಗೆ ಬೇಕಿರುವ ಎಲ್ಲ ಯಂತ್ರೋಪಕರಣ ಹಾಗೂ ಪೀಠೋಪಕರಣ ಒದಗಿಸುವ ಮೂಲಕ ನೂತನ ಆಸ್ಪತ್ರೆ ಕಟ್ಟಡವನ್ನು ಲೊಕಾರ್ಪಣೆ ಮಾಡುವ ಕೆಲಸ ಪೂರ್ಣಗೊಂಡರೆ ಜನರಿಗೆ ಮತ್ತಷ್ಟು ಪ್ರಯೋಜನಕಾರಿಯಾಗಲಿದೆ ಎಂದು ಸಚಿವರಲ್ಲಿ ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕೆ.ಎಚ್. ಪ್ರಸಾದ್, ಇತರೆ ಅಧಿಕಾರಿಗಳು, ಸ್ಥಳೀಯ ಮುಖಂಡರು, ವೈದ್ಯಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಜ. 18ರಂದು ನಗರದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಜ. 17 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮವನ್ನು ಜನವರಿ 18ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಸಾಗಲಿರುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವೆಂಕಟಯ್ಯನ ಛತ್ರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಬಿ. ಮಹೇಶ್ ಹರವೆ ಮುಖ್ಯ ಭಾಷಣ ಮಾಡುವರು.
ಅಂದು ಬೆಳಿಗ್ಗೆ ಮುಖ್ಯ ವೇದಿಕೆಯಲ್ಲಿ ತೆರಕಣಾಂಬಿಯ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರಿಂದ ವಚನ ಗಾಯನ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಆರ್‍ಟಿಇ ದಾಖಲಾತಿಗೆ ಆಧಾರ್ ಕಡ್ಡಾಯ
ಚಾಮರಾಜನಗರ, ಜ. 17 (ಕರ್ನಾಟಕ ವಾರ್ತೆ):- ಮಕ್ಕಳ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಹಕ್ಕಿನ ಕಾಯಿದೆ (ಆರ್‍ಟಿಇ) ಅಡಿ ಅಲ್ಪಸಂಖ್ಯಾತವಲ್ಲದ ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳನ್ನು ದಾಖಲು ಮಾಡಿಕೊಳ್ಳಲು ಆಧಾರ್ ಸಂಖ್ಯೆ ಕಡ್ಡಾಯವಾಗಿದೆ. ಹೀಗಾಗಿ ಆಧಾರ್ ಮಾಹಿತಿಯನ್ನು ಖಚಿತಪಡಿಸಿ ಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಅಲ್ಪಸಂಖ್ಯಾತವಲ್ಲದ ಅನುದಾನ ರಹಿತ ಶಾಲೆಗಳಲ್ಲಿ ಆರ್‍ಟಿಇ ಅಡಿ ಮಕ್ಕಳನ್ನು ದಾಖಲಾತಿಗೊಳಿಸಲು ಜನವರಿ 15 ರಿಂದ ಫೆಬ್ರವರಿ 15ರವರೆಗೆ ಶಾಲಾ ಶಿಕ್ಷಣ ಇಲಾಖೆಯ ಪೋರ್ಟಲ್ (ಆನ್ ಲೈನ್) ಮೂಲಕ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಆರ್‍ಟಿಇ ಅಡಿ ಮಗುವನ್ನು ದಾಖಲಿಸಲು ಪೋಷಕರ ಹಾಗೂ ಮಗುವಿನ ಆಧಾರ್ ಸಂಖ್ಯೆ ಕಡ್ಡಾಯವಾಗಿದೆ. ಪೋಷಕರು ಹಾಗೂ ಮಗುವಿನ ಆಧಾರ್ ಕಾರ್ಡಿನಲ್ಲಿ ಹೆಸರು, ಜನ್ಮದಿನಾಂಕ, ಲಿಂಗ ಮತ್ತು ವಿಳಾಸ ಮಾಹಿತಿ ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ವ್ಯತ್ಯಾಸವಿದ್ದಲ್ಲಿ ಸಂಬಂಧಪಟ್ಟ ಆಧಾರ್ ನೋಂದಣಿ ಕೇಂದ್ರದಲ್ಲಿ ಸರಿಪಡಿಸಿಕೊಳ್ಳಬೇಕು. ಪೋಷಕರ ಆಧಾರ್ ನೋಂದಣಿ ಸಂಖ್ಯೆ, ಮತದಾರರ ಗುರುತಿನ ಸಂಖ್ಯೆ ಹಾಗೂ ಇದರ ಪ್ರತಿಗಳÉೂಂದಿಗೆ ಸಲ್ಲಿಸಲಾದ ಅರ್ಜಿಗಳನ್ನು ದಾಖಲಾತಿಗಾಗಿ ನಡೆಸುವ ಲಾಟರಿ ಪ್ರಕ್ರಿಯೆಗೆ ಅಂಗೀಕರಿಸಲಾಗುತ್ತದೆ. ಆದರೆ ಅಂತಹ ಪೋಷಕರು ಆಧಾರ್ ಪ್ರಾಧಿಕಾರದಿಂದ ಆಧಾರ್ ನೋಂದಣಿ ಸಂಖ್ಯೆ ದೊರೆತ ನಂತರ ಅದನ್ನು ಖಚಿತತೆಗಾಗಿ ಸಲ್ಲಿಸಬೇಕು. ಖಚಿತತೆ ನಂತರವಷ್ಟೇ ಲಾಟರಿ ಪ್ರಕ್ರಿಯೆಯಿಂದ ಮಾಡಿದ ದಾಖಲಾತಿಯನ್ನು ಅಧಿಕೃತಗೊಳಿಸಲಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ಷಿಕ ಮಹಾಸಭೆ ನಡೆಸದ ಎರಡು ಸಹಕಾರ ಸಂಘಗಳ ಆಡಳಿತ ಮಂಡಳಿ ರದ್ದು
ಚಾಮರಾಜನಗರ, ಜ. 17 (ಕರ್ನಾಟಕ ವಾರ್ತೆ):- ಕರ್ನಾಟಕ ಸಹಕಾರ ಸಂಘಗಳ ಕಾಯಿದೆ ಅನ್ವಯ ವಾರ್ಷಿಕ ಮಹಾಸಭೆ ನಡೆಸದ ಕೊಳ್ಳೇಗಾಲ ತಾಲೂಕಿನ ಎರಡು ಸಹಕಾರ ಸಂಘಗಳ ಆಡಳಿತ ಮಂಡಳಿಯನ್ನು ರದ್ದುಪಡಿಸಿ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದಾಗಿ ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.
ಕೊಳ್ಳೇಗಾಲ ತಾಲೂಕು ಎಸ್ಸಿ ಎಸ್ಟಿ ಡಾ. ಬಿ. ಆರ್. ಅಂಬೇಡ್ಕರ್ ವಿವಿದೋದ್ದೇಶ ಸಹಕಾರ ಸಂಘ ಮತ್ತು ಕೊಳ್ಳೇಗಾಲ ತಾಲೂಕು ಬೀಡಿ ಕಾರ್ಮಿಕ ವಿವಿದೋದ್ದೇಶ ಸಹಕಾರ ಸಂಘಗಳು ಸೆಪ್ಟೆಂಬರ್ 25ರೊಳಗೆ ವಾರ್ಷಿಕ ಮಹಾಸಭೆಯನ್ನು ನಡೆಸಬೇಕಿತ್ತು. ಆದರೆ ಸಭೆ ನಡೆಸದೆ ಕರ್ನಾಟಕ ಸಹಕಾರ ಸಂಘಗಳ ಕಾಯಿದೆ ಮತ್ತು ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಈ ಎರಡೂ ಸಹಕಾರ ಸಂಘಗಳ ಆಡಳಿತ ಮಂಡಳಿಯನ್ನು ರದ್ದುಪಡಿಸಿ ಸಹಕಾರ ಸಂಘಗಳ ಕಾಯಿದೆ ಕಲಂ 28(ಎ)(5)ರ ರೀತ್ಯ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪಿ. ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜ. 19ರಂದು ಜಿ.ಪಂ. ಕೆಡಿಪಿ ಸಭೆ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯಿತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರತಿ ಪರಿಶೀಲನಾ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 24ರಂದು ಹರವೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ಜನರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ತಾಲೂಕಿನ ಹರವೆ ಗ್ರಾಮದಲ್ಲಿ ಜನವರಿ 24ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಏರ್ಪಾಡು ಮಾಡಲಾಗಿದೆ.
ಅಂದು ನಡೆಯುವ ಜನಸಂಪÀರ್ಕ ಸಭೆಯಲ್ಲಿ ನಾಗರಿಕರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಜ. 20ರಂದು ವಿದ್ಯಾರ್ಥಿಗಳಿಗೆ ಪ್ರಬಂಧ ಭಾಷಣ ಸ್ಪರ್ಧೆ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪದವಿ ಕಾಲೇಜು  ವಿದ್ಯಾರ್ಥಿಗಳಿಗಾಗಿ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಜನವರಿ 20ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ.
ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯ ಕುರಿತು ಪ್ರಬಂಧ ಸ್ಪರ್ಧೆ ಇದೆ. ಚುನಾವಣೆಗಳಲ್ಲಿ ಹಣಬಲ ತೋಳುಬಲ ತಡೆಗಟ್ಟುವಲ್ಲಿ ಯುವಕರ ಪಾತ್ರ ಎಂಬ ವಿಷಯ ಕುರಿತು ಭಾಷಣ ಸ್ಪರ್ಧೆ ಇದೆ. ಎಲ್ಲ ಪದವಿ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.
ಹೆಚ್ಚಿನ ವಿವರಗಳಿಗೆ ಮೊ.ಸಂ. 9481168915 ಮತ್ತು 9880626149 ಸಂಪರ್ಕಿಸುವಂತೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 19ರಂದು ಗುಂಡ್ಲುಪೇಟೆಯಲ್ಲಿ ಜಿಲ್ಲಾಮಟ್ಟದ ಕವಿಗೋಷ್ಠಿ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ಕನ್ನಡ ಮತ್ತು ಸಂಸೃತಿ ಇಲಾಖೆ ವತಿಯಿಂದ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ಗುಂಡ್ಲುಪೇಟೆಯ ಜೆಎಸ್‍ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ.
ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಹಿರಿಯ ಸಂಶೋಧಕರಾದ ಜಿ.ಜಿ. ಮಂಜುನಾಥನ್ ಕಾರ್ಯಕ್ರಮ ಉದ್ಘಾಟಿಸುವರು. ಗುಂಡ್ಲುಪೇಟೆಯ ಜೆಎಸ್‍ಎಸ್ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಮಹದೇವಸ್ವಾಮಿ ಅಧ್ಯಕ್ಷತೆ ವಹಿಸುವರು.
ಹೊರೆಯಾಲದ ನಿವೃತ್ತ ಪೊಲೀಸ್ ಉಪಾಧಿಕ್ಷಕರಾದ ಎಚ್.ಎಲ್. ಶಿವಬಸಪ್ಪ, ಗುಂಡ್ಲುಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೀ.ನಾ. ಚಿದಾನಂದಸ್ವಾಮಿ, ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ. ಪುಟ್ಟತಾಯಮ್ಮ ಹಾಗೂ ಗುಂಡ್ಲುಪೇಟೆ ಸಿರಿಗನ್ನಡ ವೇದಿಕೆ ಜಿಲ್ಲಾ ಅಧ್ಯಕ್ಷರಾದ ನಾಟಕ ಭಾರ್ಗವ ಕೆಂಪರಾಜು ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿ.ಡಿ. ದೊಡ್ಡಯ್ಯ, ಬಿ.ವಿ. ಗವಿಸ್ವಾಮಿ (ಪ್ರಣವಪ್ರಿಯ), ಕೆಂಪನಪುರ ಶಿವಕುಮಾರ್, ಗು.ಚಿ. ರಮೇಶ, ವಿ. ಮಂಜುಳ, ಎಚ್.ಎನ್. ಅತಾವುಲ್ಲಾಬೇಗ್, ಲೋಕೇಶ್ ಪೊನ್ನಶೆಟ್ಟರಹುಂಡಿ, ಗುಂ.ಪು. ದೇವರಾಜು, ಡಾ. ಕೆ. ಲಕ್ಷ್ಮಿ ಪ್ರೇಮಕುಮಾರ್, ಮಹೇಂದ್ರ ಹಸಗೂಲಿ, ವೆಂಕಟೇಶಮೂರ್ತಿ (ಬಾಬು), ಕಾಳಿಂಗಸ್ವಾಮಿ (ಸಿದ್ದಾರ್ಥ), ಎನ್. ಮಹೇಶ್ (ಚಂದಿರಪ್ರಿಯ), ಸಿ. ಶಂಕರ ಅಂಕನಶೆಟ್ಟಿಪುರ, ಸುಮ ಭಜರಂಗಿ ಹಾಗೂ ಬ್ರಹ್ಮಾನಂದ ಆಹ್ವಾನಿತ ಕವಿಗಳಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜ. 20ರಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜನವರಿ 20ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಸಿ.ಜಿ. ಉಷಾದೇವಿ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಚಾಮರಾಜನಗರದ ರಂಗ ತರಂಗ ಸಂಸ್ಥೆಯವರಿಂದ ರಾಷ್ಟ್ರಕವಿ ಕುವೆಂಪು ಅವರ ಗೀತೆಗಳÀ ಗಾಯನ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಜ. 21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜನವರಿ 21ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಾಗಲಿರುವ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಸಂದೇಶ್ ನಾಗರಾಜು (ಎಸ್. ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾಹಿತಿ ಪ್ರೊ. ಸಿ.ಪಿ. ಸಿದ್ಧಾಶ್ರಮ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ದೊಡ್ಡಿಂದುವಾಡಿಯ ವಿದ್ವಾನ್ ಮಹಾಂತಯ್ಯ ಮತ್ತು ತಂಡದವರಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಮನುಕುಲದ ಒಳಿತಿಗಾಗಿ ವಚನಕಾರರ ಕೊಡುಗೆ ಅಪಾರ : ಜಿಲ್ಲಾಧಿಕಾರಿ ಬಿ.ರಾಮು
ಚಾಮರಾಜನಗರ, ಜ. 1 (ಕರ್ನಾಟಕ ವಾರ್ತೆ):- ಮನುಕುಲದ ಒಳಿತಿಗಾಗಿ ವಚನಕಾರರು ನೀಡಿದ ಉದಾತ್ತ ಸಂದೇಶಗಳನ್ನು ವ್ಯಾಪಕವಾಗಿ ಮನಮುಟ್ಟಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಬಿ.ರಾಮು ಅಭಿಪ್ರಾಯಪಟ್ಟರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿವಯೋಗಿ ಸಿದ್ಧರಾಮೇಶ್ವರರೂ ಸೇರಿದಂತೆ ಎಲ್ಲ ವಚನಕಾರರು ಸಮಾಜದ ಉನ್ನತಿಯನ್ನು ಬಯಸಿದ್ದರು. ಜಾತಿ ವ್ಯವಸ್ಥೆ, ಮೇಲುಕೀಳು, ಬೇಧಭಾವ ತೊರೆಯಬೇಕೆಂಬ ಸಂದೇಶವನ್ನು ತಮ್ಮ ವಚನಗಳಲ್ಲಿ ಪ್ರತಿಪಾತಿಸಿದ್ದಾರೆ. ಸಾವಿರಾರು ವರ್ಷಗಳ ನಂತರವೂ ಶರಣರ ಆಶಯಗಳನ್ನು ಪ್ರಸ್ತುತ ಸಂದರ್ಭದಲ್ಲೂ ಈಡೇರಿಸಬೇಕಾದ ಮಹತ್ತರ ಜವಾಬ್ದಾರಿ ಇದೆ ಎಂದರು.
ವಚನಕಾರರು ನೀಡಿದ ಅಮೂಲ್ಯ ವಿಚಾರಧಾರೆಗಳನ್ನು ವಿಶೇಷವಾಗಿ ಯುವ ಸಮೂಹಕ್ಕೆ ತಲುಪಿಸಬೇಕಿದೆ. ಸಮಾಜದ ಸ್ವಾಸ್ಥ್ಯವನ್ನು ಬುಡಮೇಲು ಮಾಡುವ ಸಂಸ್ಕøತಿ ಅನುಕರಣೆಗೆ ಮಾರುಹೋಗದಂತೆ ಯುವಜನರಿಗೆ ತಿಳಿವಳಿಕೆ ನೀಡಬೇಕಿದೆ. ವಚನಕಾರರ ಆದರ್ಶ ಪಾಲನೆಗೆ ಉತ್ತೇಜಿಸಬೇಕಿದೆ ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರು  12ನೇ ಶತಮಾನ ವಚನಕಾರರ ಪರ್ವಕಾಲ. ಸಿದ್ಧರಾಮೇಶ್ವರರು ಬರೀ ವಚನಕಾರರಾಗಿ ಉಳಿಯದೇ ಅಂದು ಸಮಾಜಮುಖಿ ಕಾಯಕವನ್ನು ಕೈಗೊಂಡರು. ಕೆರೆ ಕಟ್ಟೆಗಳನ್ನು ನಿರ್ಮಿಸಿ ಜನರಿಗೆ ನೆರವಾದರು ಎಂದರು.
ಶಿವಯೋಗಿ ಸಿದ್ಧರಾಮೇಶ್ವರರ ಜೀವನ ಹಾಗೂ ವಚನ ಸಾರ ಕುರಿತು ಮಾತನಾಡಿದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬಿ. ಮಹೇಶ್ ಹರವೆ ಅವರು ಸಿದ್ಧರಾಮೇಶ್ವರರು ಎಲ್ಲರನ್ನೂ ತಮ್ಮವರೇ ಎಂದು ಪರಿಭಾವಿಸಬೇಕು. ಎಲ್ಲರ ಏಳಿಗೆಯನ್ನು ಬಯಸಬೇಕೆಂಬ ಉದಾತ್ತ ಮೌಲ್ಯಗಳನ್ನು ಒಳಗೊಂಡ ವಚನಗಳನ್ನು ರಚಿಸಿದ್ದಾರೆ. ತನ್ನನ್ನು ತಾನು ಅರ್ಥಮಾಡಿಕೊಂಡರೆ ಅದಕ್ಕಿಂತ ಬೇರೆ ಪೂಜೆ ಅಗತ್ಯವಿಲ್ಲವೆಂದು ಪ್ರತಿಪಾದಿಸಿದರು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ತಾಲೂಕು ಪಂಚಾಯತ್ ಸದಸ್ಯರಾದ ಮಹದೇವಶೆಟ್ಟಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಗವೇಣಿ ಕಾರ್ಯಕ್ರಮನದಲ್ಲಿ ಉಪಸ್ಥಿತರಿದ್ದರು.
ವೇದಿಕೆಯಲ್ಲಿ ತೆರಕಣಾಂಬಿಯ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರು ಪ್ರಸ್ತುತ ಪಡಿಸಿದ ವಚನ ಗಾಯನ ಕಾರ್ಯಕ್ರಮ ಅರ್ಥಪೂರ್ಣವಾಗಿತ್ತು. ಸಭಾ ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಾಲಯ ಬಳಿ ಸಿದ್ಧರಾಮೇಶ್ವರರ ಭಾವಚಿತ್ರದ ಮೆರವಣಿಗೆಗೆ ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಚಾಲನೆ ನೀಡಿದರು.

                  ನರೇಗಾ ಕೂಲಿ ಕಾರ್ಮಿಕರೊಂದಿಗೆ ಕೆಲಸ ನಿರ್ವಹಿಸಿದ  ಸಿ.ಇ.ಓ
 ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):-  ದೇಶದ ಬಡವರ ಕಂಬನಿ ಒರೆಸುವ ಮಹತ್ತರ ಕಾರ್ಯಕ್ರಮಗಳಲ್ಲೊಂದಾದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮಪಂಚಾಯತಿ ವ್ಯಾಪ್ತಿಯ ಛಾಯಾಪತಿ ಕೆರೆಯ ಹೂಳೆತ್ತುವ ಕಾಮಗಾರಿಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಕಾರ್ಮಿಕರೊಂದಿಗೆ ಜೊತೆಗೂಡಿ ತಾವೂ ಕಾರ್ಮಿಕರಂತೆ ದುಡಿಯುವ ಮೂಲಕ ಹುರುಪು ತುಂಬಿದರು.
     ಉದ್ಯೋಗ ಖಾತರಿ ಯೋಜನೆಯಡಿ ಛಾಯಾಪತಿ ಕೆರೆಯ ಹೂಳೆತ್ತುವ ಕಾಮಗಾರಿ ಪರಿಶೀಲನೆಗೆ ನಿನ್ನೆ ಮಂಗಳವಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಅವರು ತೆರಳಿದ್ದರು. ಈ ವೇಳೆ ಕೂಲಿ ಕಾರ್ಮಿಕರೊಂದಿಗೆ ಸಮಾಲೋಚಿಸುತ್ತ ಸ್ವತಃ ತಾವೇ ಕಾರ್ಮಿಕರೊಂದಿಗೆ ಕಾಮಗಾರಿ ಕೆಲಸದಲ್ಲಿ ತೊಡಗಿಕೊಂಡರು. ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಯೇ ಕಾರ್ಮಿಕರೊಂದಿಗೆ ಖುದ್ದು ಕೆಲಸಕ್ಕೆ ಇಳಿದುದನ್ನು ನೋಡಿ ಉತ್ತೇಜಿತರಾದ ಗ್ರಾಮ ಪಂಚಾಯತಿ ಅದ್ಯಕ್ಷೆ ಗೀತಾ ರವೀಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್ ಮುನಿರಾಜಪ್ಪ ಹಾಗೂ ಪಂಚಾಯತಿ ಸದಸ್ಯರು ಕೂಡ ಅವರೊಂದಿಗೆ ಕೆಲಸ  ನಿರ್ವಹಿಸಿದರು.
     ಗ್ರಾಮದ ಬಸವೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಛಾಯಾಪತಿ ಕೆರೆಯ ಅಭಿವೃದ್ದಿ ಕಾಮಗಾರಿಯನ್ನು ಗ್ರಾಮ ಪಂಚಾಯತಿಯು ಅನುಷ್ಠಾನ ಮಾಡುತ್ತಿದೆ. ಕಾಮಗಾರಿ ವೀಕ್ಷಣೆಗೆ ತೆರಳಿದ್ದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾರ್ಮಿಕರೊಂದಿಗೆ ಚರ್ಚಿಸಿ ನಂತರ ತಾವೇ ಖುದ್ದು ಕಾರ್ಮಿಕರೊಂದಿಗೆ ಸೇರಿ ಕೂಲಿ ಕೆಲಸ ಮಾಡುವ ಮಖಾಂತರ ಯೋಜನೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು.
 ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು  ಗ್ರಾಮದ ಅಭಿವೃದ್ದಿ ಸಾಧ್ಯ್ಯವಾಗುವುದು ಗ್ರಾಮಸ್ಥರಿಂದಲೇ ಎಂಬುದನ್ನು ಮನಗಾಣಬೇಕು. ಉದ್ಯೋಗ ಖಾತರಿ ಯೋಜನೆಯಡಿ ನೊಂದಾಯಿಸಿದ ಪ್ರತಿ ಕುಟುಂಬದ ಸದಸ್ಯರು ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸಿ ಉದ್ಯೋಗ ಪಡೆಯಬಹುದು. ಗ್ರಾಮದ ಕೆರೆಗಳಿಗೆ ತನ್ನದೇ ಆದ ಇತಿಹಾಸವಿದ್ದ್ದು ಅವುಗಳನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ, ಇದರಿಂದ ಅಂತರ್ಜಲ ಮಟ್ಟ ಅಭಿವೃದ್ದಿ ಆಗುವುದಲ್ಲದೇ, ಮುಂದಿನ ಪೀಳಿಗೆಗೆ ಬಹುದೊಡ್ಡ ಕೊಡುಗೆಯಾಗಲಿದೆ ಎಂದು ತಿಳಿಸಿದರು..
ಇದಕ್ಕೂ ಮೊದಲು  ನವಿಲೂರು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದ ಅವರು  ಗ್ರಾಮದ ಕೆರೆಯನ್ನು ವೀಕ್ಷಿಸಿ  ಕೆರೆಗೆ ನೀರು ಬರುವ ಕಾಲುವೆಯನ್ನು  ಅಭಿವೃದ್ದಿಪಡಿಸಬೇಕು. ಹತ್ತಿರದಲ್ಲೇ ಶಾಲೆ ಹಾಗೂ ಅಂಗನವಾಡಿ ಇರುವುದರಿಂದ ಕೆರೆಯ ಇಕ್ಕೆಲಗಳಲ್ಲಿ ಸಸಿ ನೆಟ್ಟು ಕೆರೆಯ ಆವರಣವನ್ನು  ಸುಂದರವಾದ ಉದ್ಯಾನವನ ಮಾದರಿಯಲ್ಲಿ ಅಭಿವೃದ್ದಿ ಪಡಿಸುವಂತೆ  ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎಚ್.ವಿ.ಚಂದ್ರು, ಉಮ್ಮತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಗೀತಾರವೀಶ್. ನವಿಲೂರು ಗ್ರಾಮ ಪಂಚಾಯತಿ ಅದ್ಯಕ್ಷರಾದ ನಾಗಣ್ಣ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್.ಮುನಿರಾಜಪ್ಪ, ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು.  ಮತ್ತಿತರರು ಹಾಜರಿದ್ದರು.

ಉದ್ಯೋಗ ಖಾತರಿ ಪ್ರಗತಿ ಸಾಧನೆಗೆ ಜಿ.ಪಂ. ಅಧ್ಯಕ್ಷರ ಸೂಚನೆ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸಲಾಗಿಲ್ಲ. ಕಾಮಗಾರಿಗಳು ವಿಳಂಬ ಗತಿಯಲ್ಲಿ ಸಾಗುತ್ತಿದ್ದು ಅಧಿಕಾರಿಗಳು ನಿಗದಿತ ಗುರಿ ತಲುಪಲು ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನ ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನೆರಡು ತಿಂಗಳು ಮಾತ್ರ ಬಾಕಿ ಇದೆ. ಹೀಗಿದ್ದರೂ ಪ್ರಗತಿ ಹೆಚ್ಚಳವಾಗಿಲ್ಲ. ಕಳೆದ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರು, ಇತರೆ ಜನಪ್ರತಿನಿಧಿಗಳು ಕೆಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಆದರೂ ನಿರೀಕ್ಷಿತ ಮಟ್ಟದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸಗಳು ನಡೆಯುತ್ತಿಲ್ಲವೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯತ್ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರೂ ಸಹ ಉದ್ಯೋಗ ಖಾತರಿ ಯೋಜನೆ ಪ್ರಗತಿ ಕುಂಠಿತ ಬಗ್ಗೆ ಗಮನ ಸೆಳೆದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರಾದ ರಾಮಚಂದ್ರ ಅವರು ಜನರು ಗುಳೇ ಹೋಗದಂತೆ ಸ್ಥಳೀಯವಾಗಿ ಉದ್ಯೋಗ ನೀಡಬೇಕು. ಉದ್ಯೋಗ ಖಾತರಿ ಯೋಜನೆಯಡಿ ಸಾಮೂಹಿಕ ಹಾಗೂ ಸಮುದಾಯಕ್ಕೆ ಅನುಕೂಲವಾಗುವ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಯೋಜನೆಯ ಉದ್ದೇಶ ಸಫಲವಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಮಾತನಾಡಿ ಬರಗಾಲ ಹಿನ್ನೆಲೆಯಲ್ಲಿ ಹೆಚ್ಚುವರಿ ದಿನಗಳ ಕಾಲ ಉದ್ಯೋಗ ನೀಡಲು ಅವಕಾಶ ಕಲ್ಪಿಸಲಾಗಿದೆ, ಹೀಗಾಗಿ ಹೆಚ್ಚುವರಿ ಕ್ರಿಯಾ ಯೋಜನೆ ತಯಾರು ಮಾಡಿ ಡಿಸೆಂಬರ್ ಕೊನೆಯ ವಾರದಿಂದ ಕಾಮಗಾರಿಗಳನ್ನು ಹೆಚ್ಚು ಪ್ರಮಾಣದಲ್ಲಿ ನಿರ್ವಹಿಸಲಾಗುತ್ತಿದೆ. ಮಾರ್ಚ್ ಒಳಗೆ ನಿಗದಿ ಮಾಡಿರುವ ಗುರಿ ಮುಟ್ಟಲು ಸೂಚನೆ ನೀಡಲಾಗಿದೆ ಎಂದರು.
ಕುಡಿಯುವ ನೀರಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದ ಜಿ.ಪಂ. ಅಧ್ಯಕ್ಷರು ತ್ವರಿತವಾಗಿ ಕುಡಿಯುವ ನೀರು ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆಗೂ ವಿಳಂಬ ಮಾಡದಂತೆ ಸೂಚನೆ ನೀಡಿದರು.
ಕೃಷಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಗಂಗಾ ಕಲ್ಯಾಣ, ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಸಾಮಾಜಿಕ ಮತ್ತು ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆರೆಹಳ್ಳಿ ನವೀನ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಕೆ. ಮಾದೇಶು, ಇತರೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಜ. 22ರಂದು ಸಂತೆಮರಹಳ್ಳಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಸಂತೆಮರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯು ಜನವರಿ 22ರಂದು ನಡೆಯಲಿದೆ. ಹೀಗಾಗಿ ಹೊನ್ನೂರು, ಸಂತೆಮರಹಳ್ಳಿ, ನವಿಲೂರು, ಆಲ್ದೂರು, ಕುದೇರು, ಮಂಗಲ ವಾಟರ್ ಸಪ್ಲೈ, ಕೆಂಪನಪುರ, ದುಗ್ಗಟ್ಟಿ, ಅಂಬಳೆ, ಚುಂಗಡೀಪುರ ಗ್ರಾಮಗಳಿಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ನಾಗರಿಕರು ಸಹಕರಿಸಬೇಕೆಂದು ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಅಭಿಜಾತ ಕನ್ನಡ ಪಠ್ಯವಾಚನ, ಅಧ್ಯಯನ ಶಿಬಿರ : ಹೆಸರು ನೋಂದಾಯಿಸಲು ಅವಕಾಶ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಕೇಂದ್ರದ ಆಶ್ರಯದಲ್ಲಿ ಅಭಿಜಾತ ಕನ್ನಡ ಪಠ್ಯವಾಚನ ಹಾಗೂ ಅಧ್ಯಯನ ಶಿಬಿರವನ್ನು ಐದು ದಿನಗಳ ಕಾಲ ಆಯೋಜಿಸಲಾಗುತ್ತಿದ್ದು ಆಸಕ್ತರು ಹೆಸರು ನೊಂದಾಯಿಸಬಹುದಾಗಿದೆ.
ಫೆಬ್ರವರಿ ತಿಂಗಳಿನಲ್ಲಿ ಶಿಬಿರ ಆಯೋಜನೆ ಮಾಡಲಾಗುತ್ತಿದ್ದು ನಾಡಿನ ಖ್ಯಾತ ವಿದ್ವಾಂಸರು ಶಿಬಿರದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುವರು. ಉಪನ್ಯಾಸಕರು, ಸಂಶೋಧಕರು, ಸಮಶೋಧನಾ ವಿದ್ಯಾರ್ಥಿಗಳು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಅಧ್ಯಾಪಕರು, ಕನ್ನಡವನ್ನು ವಿಶೇಷವಾಗಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ಇತರೆ ಆಸಕ್ತ ನಾಗರಿಕರು ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶವಿದೆ.
ಶಿಬಿರಾರ್ಥಿಗಳ ಸಂಖ್ಯೆಯನ್ನು ಸೀಮಿತಗೊಳಿಸುವುದರಿಂದ ಮೊದಲು ಬಂದವರಿಗೆ ಆದ್ಯತೆ ನೀಡಲÁಗುತ್ತದೆ. ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಎಸ್. ವಿನಯ್ (ಮೊ.ಸಂ. 948004933) ಅವರನ್ನು ಸಂಪರ್ಕಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣೆ ತಿಳಿಸಿದೆ.

ಜ. 20ರಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜನವರಿ 20ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್. ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್. ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ. ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಸಿ.ಜಿ. ಉಷಾದೇವಿ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ಚಾಮರಾಜನಗರದ ರಂಗ ತರಂಗ ಸಂಸ್ಥೆಯವರಿಂದ ರಾಷ್ಟ್ರಕವಿ ಕುವೆಂಪು ಅವರ ಗೀತೆಗಳÀ ಗಾಯನ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ಪ್ರಥಮ ಪಿಯುಸಿ ಪರೀಕ್ಷೆ : ಹೆಸರು ನೋಂದಣಿಗೆ ಸೂಚನೆ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- 2016-17ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯು ಫೆಬ್ರವರಿ 18 ರಿಂದ ಮಾರ್ಚ್ 4ರವರೆಗ ನಡೆಯಲಿದ್ದು ಅನುತ್ತೀರ್ಣ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಜನವರಿ 30ರೊಳಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಹೆಸರು ನೊಂದಾಯಿಸಬಹುದಾಗಿದೆ.
ಕಲಾ ಮತ್ತು ವಾಣಿಜ್ಯ ವಿಭಾಗದ ಹಳೇ ಪಠ್ಯಕ್ರಮ ವಿದ್ಯಾರ್ಥಿಗಳಿಗೆ 2017ರ ಮಾರ್ಚ್ ವಾರ್ಷಿಕ ಪರೀಕ್ಷೆಯು ಅಂತಿಮ ಅವಕಾಶವಾಗಿದೆ.
2016-17ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಇಂಡೆಂಟ್‍ಗಳನ್ನು ಕಾಲೇಜಿನ ಪ್ರಾಂಶುಪಾಲರು ನೋಡೆಲ್ ಸೆಂಟರ್ ಮುಖಾಂತರ ಪಡೆಯಬೇಕಿದೆ. ಪ್ರತಿ ವಿದ್ಯಾರ್ಥಿಯಿಂದ 30 ರೂ. ಪರೀಕ್ಷಾ ಶುಲ್ಕ ಪಡೆದು ಡಿಮ್ಯಾಂಡ್ ಡ್ರಾಫ್ಟನ್ನು ಜನವರಿ 31ರೊಳಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ಲಾಸ್ಟಿಕ್ ಸಾಮಗ್ರಿ ಮಾರಾಟ ಮಾಡುವವರ ವಿರುದ್ಧ ಕ್ರಮ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಚಾಮರಾಜನಗರ ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ, ಮಾರಾಟ ಹಾಗೂ ದಾಸ್ತಾನು ಮಾಡುವುದನ್ನು ನಿಷೇಧಿಸಲಾಗಿದ್ದು ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಂತೆ ನಗರಸಭೆ ಸೂಚಿಸಿದೆ.
ಕೌನ್ಸಿಲ್ ಸಭೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ದಾಸ್ತಾನು, ಮಾರಾಟ, ಬಳಕೆಯನ್ನು ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ನಿಷೇಧ ಮಾಡಲು ಸರ್ವಾನುಮತದಿಂದ ನಿರ್ಣಯಿಸಲಾಗಿದೆ. ಈ ಕುರಿತು ಈಗಾಗಲೇ ತಿಳಿವಳಿಕೆ ನೀಡಲಾಗಿದೆ.
ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ, ಮಾರಾಟ, ದಾಸ್ತಾನು ಮಾಡುವುದು ಕಂಡುಬಂದಲ್ಲಿ ಸಭೆಯಲ್ಲಿ ನಿರ್ಣಯವಾಗಿರುವಂತೆ ದಂಡ ವಿಧಿಸಿ ಪ್ಲಾಸ್ಟಿಕ್ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡು ಮುಂದಿನ ಕ್ರಮ ವಹಿಸಲÁಗುತ್ತದೆ ಎಂದು ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ವೈರ್ ಕಳವು ಮಾಡಿದ ಮೂವರಿಗೆ ಶಿಕ್ಷೆ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಜಮೀನಿನಲ್ಲಿ ಪಂಪ್ ಸೆಟ್ ಕೊಳವೆ ಬಾವಿಗೆ ಅಳವಡಿಸಿದ್ದ ವಿದ್ಯುತ್ ಕೇಬಲ್ ವೈರನ್ನು ಕಳವು ಮಾಡಿದ ಮೂವರಿಗೆ ಒಂದು ವರ್ಷಗಳ ಸಜೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಚಾಮರಾಜನಗರದ ಎ.ಪಿ. ಮೊಹಲ್ಲಾದ ಸೈಯದ್ ಸಾದಿಕ್, ಹಾರೋನ್ ಷರೀಫ್ ಹಾಗೂ ಉಮೇರ್ ಶಿಕ್ಷೆಗೆ ಗುರಿಯಾದವರು. 2013ರ ಆಗಸ್ಟ್ 22ರಂದು ಈ ಮೂವರು ತಾಲೂಕಿನ ಮುತ್ತಿಗೆ ಗ್ರಾಮದ ಎಸ್. ಪ್ರಕಾಶ್ ಎಂಬುವರ ಜಮೀನಿನಲ್ಲಿ ಪಂಪ್ ಸೆಟ್ ಕೊಳವೆ ಬಾವಿಗೆ ಅಳವಡಿಸಿದ್ದ 100 ಮೀ. ವಿದ್ಯುತ್ ಕೇಬಲ್ ವೈರನ್ನು ಕಳವು ಮಾಡಿದ್ದರು. ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಅಪರಾಧಿಗಳಿಗೆ ಒಂದು ವರ್ಷಗಳ ಸಜೆ ವಿಧಿಸಿ ತೀರ್ಪು ನೀಡಿದರು.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.

ಜ. 21ರಂದು ವಾಹನ ಚಾಲನಾ ತರಬೇತಿಗೆ ಅಭ್ಯರ್ಥಿಗಳ ಆಯ್ಕೆ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ನೀಡಲಾಗುವ ಲಘು ವಾಹನ ಚಾಲನಾ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಮೆ ಮಾಡುವ ಸಲುವಾಗಿ ಜನರಿ 21ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂದರ್ಶನ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08226-222855 ಸಂಪರ್ಕಿಸಬಹುದು. ಅಲ್ಲದೆ ಕಚೇರಿ ಸೂಚನಾ ಫಲಕದಲ್ಲಿಯೂ ವಿವರ ಪ್ರಕಟಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳೆಯರಿಗೆ ಕುರಿ, ಮೇಕೆ ಘಟಕ ಸೌಲಭ್ಯ : ಅರ್ಜಿ ಆಹ್ವಾನ
ಚಾಮರಾಜನಗರ, ಜ. 19 (ಕರ್ನಾಟಕ ವಾರ್ತೆ):- ಪಶುಪಾಲನಾ ಇಲಾಖೆಯು ವಿಧವೆಯರು ಹಾಗೂ ನಿರಾಶ್ರಿತ ಮಹಿಳೆಯರಿಗೆ ಶೇ.75ರಷ್ಟು ಸಹಾಯಧನದೊಂದಿಗೆ ಕುರಿ ಅಥವಾ ಮೇಕೆ ಘಟಕ ಒದಗಿಸಲು ನೀಡುವ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ.
3 ಕುರಿ ಅಥವಾ 3 ಮೇಕೆಗಳನ್ನು ನೀಡಲಾಗುವುದು. ಕುರಿ ಮೇಕೆ ಸಾಕಾಣಿಕೆ ನಿರಂತರ ಆದಾಯ ಕೊಡುವ ಆರ್ಥಿಕ ಕಾರ್ಯಕ್ರಮವಾಗಿರುವುದರಿಂದ ಶೇ. 25ರಷ್ಟು ಬ್ಯಾಂಕ್, ಸ್ವಸಹಾಯ ಸಂಘದ ಸಾಲ ಇಲ್ಲವೇ ಫಲಾನುಭವಿಯ ವಂತಿಕೆಯೊಂದಿಗೆ ಅರ್ಜಿಯನ್ನು ಆಯಾ ತಾಲೂಕು ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಸಲ್ಲಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜ. 24ರಂದು ಹರವೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜ. 18 (ಕರ್ನಾಟಕ ವಾರ್ತೆ):- ಜನರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ತಾಲೂಕಿನ ಹರವೆ ಗ್ರಾಮದಲ್ಲಿ ಜನವರಿ 24ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಏರ್ಪಾಡು ಮಾಡಲಾಗಿದೆ.
ಅಂದು ನಡೆಯುವ ಜನಸಂಪÀರ್ಕ ಸಭೆಯಲ್ಲಿ ನಾಗರಿಕರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಸರ್ವಸಮಾನತೆಯುಳ್ಳ ಸಮಾಜ ನಿರ್ಮಾಣ ಕುವೆಂಪು ಆಶಯ : ಡಾ.ಸಿ.ಜಿ. ಉಷಾದೇವಿ
ಚಾಮರಾಜನಗರ, ಜ. 20 (ಕರ್ನಾಟಕ ವಾರ್ತೆ):- ಕುವೆಂಪು ಅವರು ವೈಚಾರಿಕತೆ, ಮಾನವೀಯತೆ ಹಾಗೂ ಸರ್ವಸಮಾನತೆವುಳ್ಳ ಹೊಸ ಸಮಾಜ ನಿರ್ಮಾಣ ಮಾಡಬೇಂಬ ಬಯಕೆ ಹೊಂದಿದ್ದರು ಎಂದು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕರಾದ ಡಾ. ಸಿ.ಜಿ. ಉಷಾದೇವಿ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿಂದು ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕುವೆಂಪು ವಿಶ್ವಮಾನವ ಸಂಸ್ಕøತಿಯ ವಕ್ತಾರರಾಗಿದ್ದಾರೆ. ಸಂಸ್ಕøತಿ ಹಾಗೂ ಸಮಾಜಮುಖಿಯಾಗಿದ್ದ ಕುವೆಂಪು ಅವರು ಬರೆದಂತೆ ಬದುಕಿ ನಡೆದವರು. ವಿಶ್ವಮಾನವ ಸಂದೇಶದಲ್ಲಿ ಎಲ್ಲ ಧರ್ಮಗಳ ತಿರುಳಿದೆ. ಏಸುಕ್ರಿಸ್ತನ ಪ್ರೇಮತತ್ವ, ಪೈಗಂಬರರ ಸಹೋದರತತ್ವ, ಬುದ್ಧ, ಬಸವ, ಮಹಾವೀರರ ಕಾಯಕ ತತ್ವ ವಿಶ್ವಮಾನವ ಸಂದೇಶದಲ್ಲಿ ಇದೆ ಎಂದರು.
ಕುವೆಂಪು ಅವರು ಮೇರುಮಟ್ಟ ತಲುಪಲು ಅವರ ಹೋರಾಟದ ಬದುಕು ಸಹ ಕಾರಣವಾಗಿದೆ. ಪ್ರೌಢಶಾಲಾ ಹಂತದಲ್ಲೇ ಹಲವಾರು ಮಹತ್ವದ ಕೃತಿಗಳನ್ನು ಅಧ್ಯಯನ ಮಾಡಿದ್ದರು. ಭಾಷಾ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತತ್ವಜ್ಞಾನ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದರು ಎಂದು ಉಷಾದೇವಿ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ವಿ.ಎಸ್. ವಿನಯ್ ಮಾತನಾಡಿ ಕುವೆಂಪು ಅವರು ಸಾಹಿತ್ಯದ ನಾನಾ ಪ್ರಕಾರಗಳಲ್ಲಿ ತೊಡಗಿಕೊಂಡು ಮೊದಲಿಗರಾದರು. ಮಕ್ಕಳ ಸಾಹಿತ್ಯ, ವ್ಯಕ್ತಿಚಿತ್ರ, ಕಥೆ, ಕವನ, ನಾಟಕ, ವಿಮರ್ಶೆ, ಮಹಾಕಾವ್ಯ ಹೀಗೆ ಎಲ್ಲ ಕೃತಿಗಳನ್ನು ರಚಿಸಿದರು ಎಂದರು.
ಕುವೆಂಪು ಅವರು ಸಾಹಿತ್ಯ ಎಲ್ಲೆಯನ್ನು ಮೀರಿ ಶ್ರೀಸಾಮಾನ್ಯನ ಬದುಕಿನ ಬಗ್ಗೆ ಚಿಂತನೆ ಮಾಡಿದರು. ರೈತರನ್ನು ನೇಗಿಲ ಯೋಗಿ ಎಂದು ಕರೆದರು. ಅವರು ರಚಿಸಿದ ಗೀತೆ ಇಂದು ರೈತಗೀತೆ, ನಾಡಗೀತೆಯಾಗಿದೆ. ನಾಡಗೀತೆಯಲ್ಲಿ ಕನ್ನಡನಾಡಿನ ಹಿರಿಮೆ, ಗರಿಮೆ, ಇತಿಹಾಸ ಹಾಗೂ ಭಾರತದೊಂದಿಗಿನ ಮಿಳಿತವನ್ನು ವ್ಯಕ್ತಪಡಿಸಿದ್ದಾರೆ ಎಂದು ವಿನಯ್ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಪ್ರಸ್ತುತ ಸಂದರ್ಭದಲ್ಲಿ ಹಲವಾರು ಸಮಸ್ಯೆಯನ್ನು ಸಮಾಜದಲ್ಲಿ ಎದುರಿಸುತ್ತಿದ್ದೇವೆ. ಇಂಥಹ ಸಂದರ್ಭದಲ್ಲಿ ಕುವೆಂಪು ಅವರ ಸಂದೇಶ ಮಾರ್ಗದರ್ಶಕ ಮೌಲ್ಯಗಳು ಅಗತ್ಯವಾಗಿವೆ. ಯುವಜನರಿಗೆ ಕುವೆಂಪು ಅವರ ಉನ್ನತ ವಿಚಾರಧಾರೆಗಳ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ನಾಗವೇಣಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜ. 24ರಂದು ಹರವೆಯಲ್ಲಿ ಜನಸಂಪರ್ಕ ಸಭೆ
ಚಾಮರಾಜನಗರ, ಜ. 20 (ಕರ್ನಾಟಕ ವಾರ್ತೆ):- ಜನರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ತಾಲೂಕಿನ ಹರವೆ ಗ್ರಾಮದ ಗುರುಮಲ್ಲೇಶ್ವರ ಪ್ರೌಢಶಾಲಾ ಆವರಣದಲ್ಲಿ ಜನವರಿ 24ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಏರ್ಪಾಡು ಮಾಡಲಾಗಿದೆ.
ಅಂದು ನಡೆಯುವ ಜನಸಂಪÀರ್ಕ ಸಭೆಯಲ್ಲಿ ನಾಗರಿಕರು ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.




ಜ. 21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ
ಚಾಮರಾಜನಗರ, ಜ. 20 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜನವರಿ 21ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಾಗಲಿರುವ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಸಂದೇಶ್ ನಾಗರಾಜು (ಎಸ್. ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾಹಿತಿ ಪ್ರೊ. ಸಿ.ಪಿ. ಸಿದ್ಧಾಶ್ರಮ ಮುಖ್ಯ ಭಾಷಣಕಾರರಾಗಿ ಆಗಮಿಸುವರು.
ದೊಡ್ಡಿಂದುವಾಡಿಯ ವಿದ್ವಾನ್ ಮಹಾಂತಯ್ಯ ಮತ್ತು ತಂಡದವರಿಂದ ವಚನ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


ಮೂಲಸೌಕರ್ಯ ಕಾಮಗಾರಿ ಹಿನ್ನೆಲೆ : ಶಾಸಕರಿಂದ ನಗರ ಸಂಚಾರ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲಾ ಕೇಂದ್ರದ ವಿವಿಧ ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸಲು ಅಗತ್ಯವಿರುವ ಕ್ರಿಯಾಯೋಜನೆ ತಯಾರಿಸಿದ್ದು ಈ ಸಂಬಂಧ ಕಾಮಗಾರಿ ಅನುಷ್ಠಾನಕ್ಕಾಗಿ ಪರಿಶೀಲನೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ಇಂದು ಬೆಳಿಗ್ಗೆ ಅಧಿಕಾರಿಗಳೊಂದಿಗೆ ಕೈಗೊಳ್ಳಬೇಕಿರುವ ಉದ್ದೇಶಿತ ಕೆಲಸಗಳ ಪರಿವೀಕ್ಷಣೆಗಾಗಿ ನಗರ ಸಂಚಾರ ಕೈಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅಭಿವೃದ್ಧಿ ಸಂಬಂಧ ವಿವರ ನೀಡಿದರು.
ಎಸ್ ಎಫ್ ಸಿ ಅನುದಾನದಡಿ 38 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆಯಡಿ 50 ಲಕ್ಷ,  ಪರಿಶಿಷ್ಟ ವರ್ಗ ಘಟಕ ಯೋಜನೆಯಡಿ 1 ಕೋಟಿ ರೂ. ಅನುದಾನ ಸಹ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಬಡಾವಣೆಗಳಿಗೆ ಕಾಮಗಾರಿ ಹಮ್ಮಿಕೊಳ್ಳುವ ಸಂಬಂಧ ಅಧಿಕಾರಿಗಳು ಕ್ರಿಯಾ ಯೋಜನೆ ತಯಾರು ಮಾಡಿದ್ದಾರೆ. ಇದರ ಸಾಧಕ ಬಾಧಕಗಳನ್ನು ಪರಿಶೀಲಿಸಿ ಅನುಷ್ಠಾನ ಪ್ರಕ್ರಿಯೆ ಕೈಗೊಳ್ಳಲು ಪೂರ್ವಭಾವಿಯಾಗಿ ವ್ಯಾಪಕವಾಗಿ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ ಎಂದರು.
ನಗರದ 31 ವಾರ್ಡುಗಳಿಗೆ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಕಾಮಗಾರಿ ಕೈಗೊಳ್ಳಲು 30 ಲಕ್ಷ ರೂ. ಅನುದಾನ ನಿಗದಿ ಮಾಡಲಾಗಿತ್ತು. ಆದರೆ ಕೊಳಚೆ ನಿರ್ಮೂಲನಾ ಮಂಡಳಿಯ ನೂತನ ಅಧ್ಯಕ್ಷರನ್ನು ತಾವು ಭೇಟಿ ಮಾಡಿ ಹೆಚ್ಚುವರಿ ನೆರವು ನೀಡುವಂತೆ ಕೋರಿದ್ದೆ. ನಮ್ಮ ಮನವಿಗೆ ಅಧ್ಯಕ್ಷರು ಸ್ಪಂಧಿಸಿದ್ದು ತಲಾ 1 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಹೀಗಾಗಿ ಅನುದಾನಕ್ಕೆ ಅನುಗುಣವಾಗಿ ಕ್ರಿಯಾ ಯೋಜನೆ ತಯಾರಿಸಿ ಮುಂದಿನ ಪ್ರಕ್ರಿಯೆಗೆ ಅನುವು ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದರು.
ಚನ್ನೀಪುರದಮೋಳೆಯಲ್ಲಿ ಉಪ್ಪಾರ ಸಮುದಾಯ ವಾಸವಾಗಿದ್ದು ಈ ವಾರ್ಡ್ ಕೊಳಚೆ ನಿರ್ಮೂಲನಾ ಮಂಡಳಿ ವ್ಯಾಪ್ತಿಗೆ ಸೇರಿರಲಿಲ್ಲ. ಹೀಗಾಗಿ ಇಲ್ಲಿಯೂ ಮಂಡಳಿಯಿಂದ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಸಲುವಾಗಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದೆ. ಈ ಭಾಗದಲ್ಲಿ ರಾಜಕಾಲುವೆ ರಸ್ತೆ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ ಎಂದರು.
ಎಲ್ಲ ಬಡಾವಣೆಗಳಿಗೆ ರಸ್ತೆ, ಕುಡಿಯುವ ನೀರು, ಒಳಚರಂಡಿ, ಶೌಚಾಲಯ ಸೇರಿದಂತೆ ಎಲ್ಲ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಬದ್ಧವಾಗಿದ್ದು ಲಭ್ಯವಿರುವ ಅನುದಾನ ಬಳಸಿಕೊಳ್ಳಲಾಗುತ್ತಿದೆ. ಈ ಹಿಂದೆಯೂ ಸಾಕಷ್ಟು ವಾರ್ಡುಗಳಿಗೆ ಭೇಟಿ ನೀಡಿ ಆಗಬೇಕಿರುವ ಕೆಲಸಗಳ ಪಟ್ಟಿ ಮಾಡಲಾಗಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು.
ವಾರ್ಡ್ ನಂ. 17,23,24 ಭಾಗದ ಬಡಾವಣೆಗಳಿಗೆ ಭೇಟಿ ನೀಡಿದ ಪುಟ್ಟರಂಗಶೆಟ್ಟಿ ಅವರು ಅಲ್ಲಿ ಪ್ರಗತಿಯಲ್ಲಿರುವ ಒಳಚರಂಡಿ, ರಸ್ತೆ, ಇನ್ನಿತರ ಕಾಮಗಾರಿ ಪರಿಶೀಲಿಸಿದರು. ಕೆಲವೆಡೆ ಕಾಮಗಾರಿ ನಡೆದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಗುಣಮಟ್ಟದ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.
ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಸದಸ್ಯರಾದ ಚಿನ್ನಸ್ವಾಮಿ, ಕೆಂಪರಾಜು, ಮುಖಂಡರಾದ ಚಿಕ್ಕಮಹದೇವು, ಜಯಕುಮಾರ್, ಪೌರಾಯುಕ್ತರಾದ ರಾಜಣ್ಣ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸತ್ಯಮೂರ್ತಿ, ಇನ್ನಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

ಜ. 24, 25ರಂದು ನಗರದಲ್ಲಿ ಕನ್ನಡ ಭಾಷಾ ಮಾಧ್ಯಮ ಕಾರ್ಯಾಗಾರ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಗರದ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ ಸಹಯೋಗದೊಂದಿಗೆ ಜನವರಿ 24 ಹಾಗೂ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಎರಡು ದಿನಗಳ ಕನ್ನಡ ಭಾಷಾ ಮಾಧ್ಯಮ ಕಾರ್ಯಾಗಾರವನ್ನು ಏರ್ಪಡಿಸಿದೆ.
ಜನವರಿ 24ರಂದು ಬೆಳಿಗ್ಗೆ 10.30ಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಕಾರ್ಯಾಗಾರ ಉದ್ಘಾಟಿಸುವರು. ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಕೆ. ಮುರಳಿಧರ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಪದವಿಪೂರ್ವ ಶಿಕ್ಷÀಣ ಇಲಾಖೆ ಉಪನಿರ್ದೇಶಕಿ ರೆಜಿನಾ ಪಿ. ಮಾಲಕಿ, ಸಾರ್ವಜನಿಕ ಶಿಕ್ಷÀಣ ಇಲಾಖೆ ಉಪನಿರ್ದೇಶಕಿ ಮಂಜುಳ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕಿ ಡಿ. ನಾಗವೇಣಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾಧ್ಯಕ್ಷರಾದ ಎ. ಶಿವಣ್ಣ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಸಿದ್ದಮಲ್ಲಪ್ಪ, ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷರಾದ ಆರ್.ಪಿ. ನರೇಂದ್ರನಾಥ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಂ. ಶಿವಲಂಕಾರ ಕಾರ್ಯಕ್ರಮ ನಿರ್ವಹಣೆ ಮಾಡುವರು.
ಕಾರ್ಯಾಗಾರದ ಅಂಗವಾಗಿ ಬರ್ಜಿ ಒಲಿವೆರಾ ಅವರು ಶಿಕ್ಷಣ ಮಾಧ್ಯಮ : ಶಿಕ್ಷಣ ಇಲಾಖೆ, ವಿಶ್ವವಿದ್ಯಾನಿಲಯಗಳ ಒಲವು-ನಿಲುವುಗಳು ಕುರಿತು, ಮೈಸೂರು ಕೃಷ್ಣಮೂರ್ತಿ ಅವರು ಹಳೆಗನ್ನಡ ಓದು ವ್ಯಾಖ್ಯಾನ ಕುರಿತು, ಮಲ್ಲಿಗೆ ಅವರು ಆಧುನಿಕ ಶಿಕ್ಷಣದಲ್ಲಿ ಜನಭಾಷೆ ಮತ್ತು ಸಾಮಾಜಿಕತೆಯ ಪರಿಕಲ್ಪನೆಗಳು ಕುರಿತು ವಿಷಯ ಮಂಡಿಸುವರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸ್ಥಳೀಯ ಕಲಾವಿದರಿಂದ ಜಾನಪದ ಗಾಯನ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಜನವರಿ 25ರಂದು ಬೆಳಿಗ್ಗೆ 10.30 ಗಂಟೆಗೆ ಪಂಡಿತಾರಾಧ್ಯ ಅವರಿಂದ ಮಾತೃಭಾಷಾ ಮಾಧ್ಯಮದ ಸಮಸ್ಯೆಗಳು-ಪರಿಹಾರಗಳು, ನಾಗರತ್ನ ಬಂಜಗೆರೆ ಅವರಿಂದ ಕರ್ನಾಟಕದಲ್ಲಿ ಸಮಾನ ಶಿಕ್ಷಣ ಮತ್ತು ಶಿಕ್ಷಣದ ಸಾರ್ವತ್ರಿಕರಣ ಕುರಿತು, ಹೆಚ್.ಎಸ್. ಉಮೇಶ್ ಅವರಿಂದ ಭಾಷಾ ಬೋಧಕರ ಸಮಸ್ಯೆಗಳು-ಪರಿಹಾರಗಳು ಕುರಿತು ವಿಷಯ ಮಂಡನೆ ನಡೆಯಲಿದೆ.
ಮಧ್ಯಾಹ್ನ 2.30 ರಿಂದ 3.30ರವರೆಗೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಸ್ಥಳೀಯ ಕಲಾವಿದರಿಂದ ಸುಗಮ ಸಂಗೀತ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ 4.30 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಬಂಜಗೆರೆ ಜಯಪ್ರಕಾಶ್ ಸಮಾರೋಪ ಭಾಷಣ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅಧ್ಯಕ್ಷತೆ ವಹಿಸುವರು.
ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸದಾಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಸರ್ವೇಶ್, ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣದ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ಸರ್ವಶಿಕ್ಷÀಣ ಅಭಿಯಾನದ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಗುರುಲಿಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಜ. 24ರಂದು ನಗರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಅವರು ಜನವರಿ 24ರಂದು ಬೆಳಿಗ್ಗೆ 9.30 ಗಂಟೆಗೆ ನಗರಕ್ಕೆ ಆಗಮಿಸುವರು.
ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಆಪ್ತಕಾರ್ಯದರ್ಶಿ ತಿಳಿಸಿದ್ದಾರೆ.

ಜ. 25ರಂದು ನಗರಕ್ಕೆ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರ ಭೇಟಿ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಬಂಜಗೆರೆ ಜಯಪ್ರಕಾಶ್ ಅವರು ಜನವರಿ 25ರಂದು ನಗರಕ್ಕೆ ಭೇಟಿ ನೀಡುವರು.
ಂದು ಮಧ್ಯಾಹ್ನ 3 ಗಂಟೆಗೆ ನಗರಕ್ಕೆ ಅಗಮಿಸುವರು. ಬಳಿಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿರುವ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಬಳಿಕ ನಗರದಲ್ಲೇ ವಾಸ್ತವ್ಯ ಹೂಡಲಿದ್ದು ಜನವರಿ 26ರಂದು ತೆರಳುವರು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಯವರು ತಿಳಿಸಿದ್ದಾರೆ.



ಜ. 24ರಂದು ಉಮ್ಮತ್ತೂರಿನಲ್ಲಿ ಅಂಚೆ ಮೇಳ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):– ಅಂಚೆ ಇಲಾಖೆಯು ಚಾಮರಾಜನಗರ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ಜನವರಿ 24ರಂದು ಅಂಚೆ ಮೇಳ ಹಮ್ಮಿಕೊಂಡಿದೆ.
ಈ ಅಂಚೆ ಸಂತೆಯಲ್ಲಿ ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವ ವಿಮೆ, ಇತರೆ ಅಂಚೆ ಜೀವವಿಮೆ ಇನ್ನಿತರ ಅಂಚೆ ಯೋಜನೆಗಳನ್ನು ಸ್ವೀಕರಿಸಲಾಗುತ್ತದೆ.
ಉಮ್ಮತ್ತೂರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಗ್ರಾ.ಪಂ. ಕಾರ್ಯದರ್ಶಿ ಅಮಾನತು
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):– ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಗೆ ಪೂರ್ವಾನುಮತಿ ಪಡೆಯದೇ ಗೈರುಹಾಜರಾದ ಕೊಳ್ಳೇಗಾಲ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿದ್ದು ಅದೇ ತಾಲೂಕಿನ ಸಿದ್ದಯ್ಯನಪುರ, ತಿಮ್ಮರಾಜಿಪುರ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯಾಗಿ ನಿಯೋಜನೆಯಾಗಿದ್ದ ಎಂ. ಶಿವಪ್ರಸಾದ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಲ್ಲಿ ತೀವ್ರ ಬರಗಾಲವಿದ್ದು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಜನರಿಗೆ ಉದ್ಯೋಗ ಕಲ್ಪಿಸುವುದು ಗ್ರಾಮಪಂಚಾಯಿತಿ ಕಾರ್ಯದರ್ಶಿಯವರ ಕರ್ತವ್ಯವಾಗಿತ್ತು. ಜನವರಿ 20ರಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳ ಸಭೆ ಕರೆದಿದ್ದರು. ಈ ಸಭೆಗೆ ಎಂ. ಶಿವಪ್ರಸಾದ್ ಪೂರ್ವಾನುಮತಿ ಪಡೆಯದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಜ. 24ರಂದು ನಗರದಲ್ಲಿ ಉದ್ಯೋಗ ಮೇಳ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):– ಮೈಸೂರಿನ ಖಾಸಗಿ ಕಂಪನಿ ತೇಜಸ್ವಿನಿ ಎಂಟರ್ ಪ್ರೈಸಸ್ ಮತ್ತು ಮೈಂಡ್ಸ್ ಪ್ರೈ. ಲಿ. ಕಂಪನಿಯು ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವ ಸಲುವಾಗಿ ಜನವರಿ 24ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಿದೆ.
ಫಿಟ್ಟರ್, ಟರ್ನರ್, ವೆಲ್ಡರ್, ಮೆಷಿನಿಸ್ಟ್, ಗ್ರೈಂಡರ್, ಎಲೆಕ್ಟ್ರೀಷಿಂiÀiನ್ ಇ/ಎಂ ನಲ್ಲಿ ತರಬೇತಿ ಐಟಿಐ ಕೋರ್ಸು ಪ್ರಮಾಣ ಪತ್ರ ಹೊಂದಿರುವವರು, ಪಿಯುಸಿ ಇತರೆ ಯಾವುದೇ ಪದವಿ ಜತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು 18 ರಿಂದ 30ರ ವಯೋಮಿತಿಯೊಳಗಿರಬೇಕು. ಸ್ವವಿವರದೊಂದಿಗೆ ನೇರ ಸಂದಶರ್Àನಕ್ಕೆ ಉದ್ಯೋಗಮೇಳದಲ್ಲಿ ಹಾಜರಾಗಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಇಎಸ್‍ಐ, ಪಿಎಫ್, ಉಚಿತ ಕ್ಯಾಂಟಿನ್ ಸೌಲಭ್ಯ ಸೇರಿದಂತೆ ಇನ್ನಿತರ ಸವಲತ್ತುಗಳನ್ನು ಕಲ್ಪಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿ ಸಿ.ಎಂ. ಉಮಾ, ದೂ.ಸಂ. 08226-224430 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಗ್ರಾಮಲೆಕ್ಕಿಗರ ಹುದ್ದೆ : ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):– ಜಿಲ್ಲಾ ಕಂದಾಯ ಘಟಕದ ವ್ಯಾಪ್ತಿಯಲ್ಲಿ ಖಾಲಿ ಇರುವ 47 ಗ್ರಾಮಲೆಕ್ಕಿಗರ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ಜಿಲ್ಲಾ ವೆಬ್‍ಸೈಟ್‍ನಲ್ಲಿ hಣಣಠಿ://ಛಿhಚಿmಡಿಚಿರಿಟಿಚಿgಚಿಡಿ.ಟಿiಛಿ.iಟಿ ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಪರಿಶೀಲನಾ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ಲಿಖಿತವಾಗಿ ಫೆಬ್ರವರಿ 2ರ ಸಂಜೆ 5.30ರೊಳಗಾಗಿ ಜಿಲ್ಲಾಧಿಕಾರಿ, ಚಾಮರಾಜನಗರ ಜಿಲ್ಲೆ, ಚಾಮರಾಜನಗರ ಇವರಿಗೆ ಸಲ್ಲಿಸಬೇಕು.
ಅಂತಿಮ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಫೆಬ್ರವರಿ 16 ಹಾಗೂ 17ರಂದು ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಯಶಸ್ವಿಯಾಗಿ ನಡೆದ ಬಾಲ್ಯವಿವಾಹ ತಡೆ ಜಾಗೃತಿ ಜಾಥಾ
ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿಂದು ಬಾಲ್ಯವಿವಾಹ ತಡೆಗಟ್ಟುವ ಕುರಿತ ಬೃಹತ್ ಜಾಗೃತಿ ಜಾಥಾ ಇಂದು ನಗರದಲ್ಲಿ ಯಶಸ್ವಿಯಾಗಿ ನಡೆಯಿತು.
ನಗರದ ಚಾಮರಾಜೇಶ್ವರ ದೇವಾಲಯದ ಬಳಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ,ರಾಮಚಂದ್ರ, ಜಿಲ್ಲಾಧಿಕಾರಿ ಬಿ.ರಾಮು, ತಾ.ಪಂ. ಅಧ್ಯಕ್ಷರಾದ ಎಚ್.ವಿ.ಚಂದ್ರು, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಿ,ಜೆ. ಭವಾನಿ, ಇತರೆ ಗಣ್ಯರು ಜಾಗೃತಿ ಜಾಥಾಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಬಿ.ರಾಮು ಅವರು ಸಾಮಾಜಿಕ ಪಿಡುಗು ಆಗಿರುವ ಬಾಲ್ಯವಿವಾಹ ಪದ್ಧತಿಯನ್ನು ಪರಿಣಾಮಕಾರಿಯಾಗಿ ತಡೆಯಬೇಕಿದೆ. ಜಿಲ್ಲೆಯಲ್ಲೂ ಸಾಕಷ್ಟು ಪ್ರಮಾಣದಲ್ಲಿ ಬಾಲ್ಯವಿವಾಹಗಳು ಜರುಗುತ್ತಿದ್ದು ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕಿದೆ ಎಂದರು.
ಬಾಲ್ಯವಿವಾಹದಿಂದ ಸಣ್ಣವಯಸ್ಸಿನಲ್ಲಿಯೇ ಅನಾರೋಗ್ಯಕ್ಕೆ ತುತ್ತಾಗುತ್ತಿರುವ ನಿದರ್ಶನಗಳು ಸಾಕಷ್ಟು ಇವೆ. ಆರೋಗ್ಯವಂತ ಯುವ ಸಮೂಹ ನಿರ್ಮಾವಾಗಬೇಕಿದೆ. ಆದರೆ ಬಾಲ್ಯವಿವಾಹದಿಂದ ಅಪ್ರಾಪ್ತರು ಸಾಕಷ್ಟು ತೊಂದರೆ ಎದುರಿಸುತ್ತಿದ್ದಾರೆ. ಈ ದಿಸೆಯಲ್ಲಿ ಬಾಲ್ಯವಿವಾಹದಿಂದ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಿದೆ.
ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಹಿನ್ನೆಲೆಯಲ್ಲಿ ಅರಿವು ಮೂಡಿಸುವ ಉದ್ದೇಶದಿಂದಲೇ ವ್ಯಾಪಕವಾಗಿ ಬಾಲ್ಯವಿವಾಹ ನಿಷೇಧ ಕುರಿತ ಬೃಹತ್ ಆಂದೋಲನವನ್ನು ಎಲ್ಲೆಡೆ ಕೈಗೊಳ್ಳಲಾಗಿದೆ. ವಿಶೇಷವಾಗಿ ಮಹಿಳೆಯರು, ಹೆಣ್ಣುಮಕ್ಕಳು ಜಾಗೃತಿ ಜಾಥಾಗೆ ಕೈಜೋಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು.
ಬಾಲ್ಯವಿವಾಹದಿಂದಾಗುವ ಪರಿಣಾಮಗಳ ಕುರಿತು ಅರಿವು ಮೂಡಿಸುವ ಭಿತ್ತಿಫಲಕಗಳನ್ನು ಹಿಡಿದು ಮಹಿಳೆಯರು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿನಿಯರು ಸೇರಿದಂತೆ ನೂರಾರು ಮಂದಿ ಜಾಥಾದಲ್ಲಿ ಪಾಲ್ಗೊಂಡರು. ಪ್ರಮುಖ ಬೀದಿಗಳಲ್ಲಿ ಸಾಗಿದ ಜಾಗೃತಿ ಜಾಥಾ ಜಿಲ್ಲಾಡಳಿತ ಭವನದ ಆವರಣದಲ್ಲಿ ಮುಕ್ತಾಯವಾಯಿತು.

ಅರ್ಥಪೂರ್ಣವಾಗಿ ನಡೆದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಇಂದು ಅರ್ಥಪೂರ್ಣವಾಗಿ ನಗರದಲ್ಲಿ ಆಚರಿಸಲಾಯಿತು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಉದ್ಘಾಟಿಸಿ ಮಾತನಾಡಿ ಅಂಬಿಗರ ಚೌಡಯ್ಯ ರವರು ತಮ್ಮ ವಚನಗಳಲ್ಲಿ ಜನರನ್ನು ಎಚ್ಚರಿಸುವ ಸಂದೇಶವನ್ನು ಸಾರಿದ್ದಾರೆ. ಜಾತಿ ಧರ್ಮ,ಭೇದ ಭಾವ ತೊಡೆದು ಎಲ್ಲರು ಒಂದೇ ಎಂದು ತಿಳಿಸಿದ್ದಾರೆ ಎಂದರು.
ಯಾವುದೇ ಮಹಾನ್ ಪುರುಷರ, ಶರಣರ ಜಯಂತಿಯನ್ನು ಆಯಾ ಸಮುದಾಯಕ್ಕೆ ಸೀಮಿತಗೊಳಿಸುವ ಸಂಕುಚಿತ ಮನೋಭಾವನೆ ತ್ಯಜಿಸಬೇಕು. ಎಲ್ಲರೂ ಮಾನವ ಕುಲದ ಒಳಿತನ್ನೆ ಬಯಸಿದ್ದಾರೆ. ಹೀಗಾಗಿ ಎಲ್ಲಾ ಸಮುದಾಯ ಜನತೆ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೋಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರಸ್ತೆ ಅಭಿವೃಧ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಅಂಬಿಗರ ಚೌಡಯ್ಯ ಅವರು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸನ್ಮಾರ್ಗದ ಕಡೆ ಸಾಗಬೇಕೆಂಬ ವಿಚಾರ ಧಾರೆಗಳನ್ನು ತಮ್ಮ ವಚನದಲ್ಲಿ ಹೇಳಿದ್ದಾರೆ. ನಿಷ್ಠುರವಾದಿಯಾಗಿ ಎಲ್ಲರನ್ನು  ಜಾಗೃತಗೊಳಿಸಿದ್ದಾರೆ ಎಂದರು.
ವೃತ್ತಿಯಲ್ಲಿ ಅಂಬಿಗರಾದರೂ ಚೌಡಯ್ಯ ಬಸವಣ್ಣನವರ ಕಾಯಕ ತತ್ವವನ್ನು ಪರಿಪಾಲಿಸಿದರು. ಅವರ ಆದರ್ಶ ಅಮೂಲ್ಯ ಸಂದೇಶ ಕೊಡುಗೆಯನ್ನು ಸ್ಮರಿಸಬೇಕು. ಅವರ ವಚನಗಳ ಸಾರವನ್ನು ಗ್ರಹಿಸಿ ಮುನ್ನೆಡೆಯಬೇಕು ಎಂದರು.
ಸಾಹಿತಿ ಸಿ.ಪಿ.ಸಿದ್ದಾಶ್ರಮ ಮಾತನಾಡಿ ಅಂಬಿಗರ ಚೌಡಯ್ಯನವರು ಮೌಡ್ಯ ಕಂದಾಚಾರ ತೊರೆಯಬೇಕೆಂದು ತಮ್ಮ ವಚನಗಳಲ್ಲಿ ಪ್ರತಿಪಾದಿಸಿದರು. ವಚನ ಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು. ಅಷ್ಟಾಂಗ ಸಿದ್ದಿ ಪಡೆದ ಶರಣರು ಎಂದರು.
ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು , ನಗರಸಬೆ ಅಧ್ಯಕ್ಷರಾದ ಎಸ್.ಎನ್.ರೇಣುಕಾ ,ಜಿಲ್ಲಾ ಪಂಚಾಯತ್ ಸದಸ್ಯರಾದ ಸಿ.ಎನ್.ಬಾಲರಾಜು ಮಾತನಾಡಿದರು.
ನಗರಸಭೆ ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ , ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಸಮಾಜದ ಮುಖಂಡರಾದ ಗು.ಪುರುಷೋತ್ತಮ್, ಪ್ರಕಾಶ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗವೇಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಾಲಯ ಬಳಿ ಅಂಬಿಗರ ಚೌಡಯ್ಯ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯುತ್  ಅಧ್ಯಕ್ಷರಾದ ಎಂ.ರಾಮಚಂದ್ರ ಚಾಲನೆ ನೀಡಿದರು.
 *****************************

ಜನವರಿ 24 ರಂದು ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರ ಭೇಟಿ

ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಜನವರಿ 24 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳ್ಳಿಗ್ಗೆ 11 ಗಂಟೆಗೆ ಸಚಿವರು ಗುಂಡ್ಲುಪೇಟೆಗೆ ಆಗಮಿಸಿ ಅಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 5 ಗಂಟೆಗೆ ನಗರದಿಂದ ಬೆಂಗಳೂರಿಗೆ ತೆರಳುವರು ಎಂದು  ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.

ಜನವರಿ 23 ರಂದು ಮೆಳ್ಳಹಳ್ಳಿಯಲ್ಲಿ ಆದರ್ಶ ವಿದ್ಯಾಲಯ ಕಟ್ಟಡ ಉದ್ಘಾಟನೆ

ಚಾಮರಾಜನಗರ, ಜ. 22 (ಕರ್ನಾಟಕ ವಾರ್ತೆ):- ರಾಷ್ತೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ವತಿಯಿಂದ ಯಳಂದೂರು ತಾಲ್ಲೂಕು ಮೆಳ್ಳಹಳ್ಳಿಯಲ್ಲಿ ನಿರ್ಮಾಣಮಾಡಲಾಗಿರುವ ನೂತನ ಸರ್ಕಾರಿ ಆದರ್ಶ ವಿದ್ಯಾಲಯ ಕಟ್ಟಡದ ಉದ್ಘಾಟನ ಸಮಾರಂಭವು ಜನವರಿ 23 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ವಕ್ಫ್ ಖಾತೆ ಸಚಿವರಾದ ತನ್ವೀರ್ ಸೇಠ್ ಕಟ್ಟಡದ ಉದ್ಘಾಟನೆ ನೆರವೇರಿಸುವರು. ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಕಲಾಂ ಸ್ಪೂರ್ತಿ ಕೇಂದ್ರ ಉದ್ಘಾಟಿಸುವರು. ಲೋಕಸಭಾ ಸದಸ್ಯರಾದ ಆರ್ ಧ್ರುವನಾರಾಯಣ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕರಾದ ಎಸ್.ಜಯಣ್ಣ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಪ್ರತಿಭಾ ಪುರಸ್ಕಾರ ನೆರೆವೇರಿಸುವರು.
ವಿಧಾನಪರಿಷತ್ ಉಪಸಭಾಪತಿಯವರಾದ ಮರಿತಿಭ್ಬೆಗೌಡ, ಶಾಸಕರಾದ ಕೆ.ಟಿ.ಶ್ರೀಕಂಠೇಗೌಡ ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್ ಧರ್ಮಸೇನ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ ಸದಾಶಿವಮೂರ್ತಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಂಜುಂಡಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜೆ.ಯೋಗೇಶ್, ಉಮಾವತಿ ಸಿದ್ದರಾಜು, ತಾ.ಪಂ ಉಪಾಧ್ಯಕ್ಷರಾದ ಪದ್ಮಾವತಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ವೆಂಕಟೇಶ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಪಲ್ಲವಿ, ದುಗ್ಗಹಟ್ಟಿ ಗ್ರಾ.ಪಂ ಅಧ್ಯಕ್ಷರಾದ ಟಿ.ಎಚ್.ಪುಟ್ಟಮಣ್ಣಿ, ಉಪಾಧ್ಯಕ್ಷರಾದ ಮಾದೇಶ ಮುಖ್ಯಅತಿಥಿಗಳಾಗಿ ಪಾಲ್ಗೊಳ್ಳುವರು.
ನೀವೇಶನ ದಾನಿಗಳಾದ ದುಗ್ಗಹಟ್ಟಿ ವೀರಭದ್ರಪ್ಪ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
 
ಜನವರಿ 24 ರಂದು ಜಿಲ್ಲೆಗೆ ನೂತನ ಉಸ್ತುವಾರಿ ಸಚಿವರ ಭೇಟಿ

ಚಾಮರಾಜನಗರ, ಜ. 21 (ಕರ್ನಾಟಕ ವಾರ್ತೆ):- ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಜನವರಿ 24 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳ್ಳಿಗ್ಗೆ 11 ಗಂಟೆಗೆ ಸಚಿವರು ಗುಂಡ್ಲುಪೇಟೆಗೆ ಆಗಮಿಸಿ ಅಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 5 ಗಂಟೆಗೆ ನಗರದಿಂದ ಬೆಂಗಳೂರಿಗೆ ತೆರಳುವರು ಎಂದು  ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
 *********
 ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ- ೨೦೧೬ ಕ್ರೀಡಾಕೂಟವನ್ನು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಮಾತನಾಡುತ್ತಿರುವುದು

 ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ- ೨೦೧೬ ಕ್ರೀಡಾಕೂಟದಲ್ಲಿ ಬಾಗವಹಿಸಿರುವ ಕ್ರೀಡಾಪಟುಗಳು
 ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ- ೨೦೧೬ ಕ್ರೀಡಾಕೂಟವನ್ನು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾದೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಮಾತನಾಡುತ್ತಿರುವುದು ಚಾಮರಾಜನಗರ ಜಿಲ್ಲಾ ಪೊಲೀಸ್ ವಾರ್ಷಿಕ- ೨೦೧೬ ಕ್ರೀಡಾಕೂಟದಲ್ಲಿ ಬಾಗವಹಿಸಿರುವ ಕ್ರೀಡಾಪಟುಗಳು















Monday, 16 January 2017

16-01-2017 ಚಾಮರಾಜನಗರ ಸುದ್ದಿಗಳು

ಜ. 18ರಂದು ನಗರದಲ್ಲಿ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮ
ಚಾಮರಾಜನಗರ, ಜ. 16 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಶಿವಯೋಗಿ ಸಿದ್ಧರಾಮೇಶ್ವರರ ಜಯಂತಿ ಕಾರ್ಯಕ್ರಮವನ್ನು ಜನವರಿ 18ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 9 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಸಾಗಲಿರುವ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸÀಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್. ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವೆಂಕಟಯ್ಯನ ಛತ್ರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಚಾರ್ಯರಾದ ಬಿ. ಮಹೇಶ್ ಹರವೆ ಮುಖ್ಯ ಭಾಷಣ ಮಾಡುವರು.
ಅಂದು ಬೆಳಿಗ್ಗೆ ಮುಖ್ಯ ವೇದಿಕೆಯಲ್ಲಿ ತೆರಕಣಾಂಬಿಯ ಹಿಂದೂಸ್ಥಾನಿ ಸಂಗೀತ ಗಾಯಕರಾದ ಬಿ. ಸಿದ್ದನಗೌಡ ಅವರಿಂದ ವಚನ ಗಾಯನ ಕಾರ್ಯಕ್ರಮ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಮಾರ್ಚ್ ವೇಳೆಗೆ ಚಾ.ನಗರ ತಾಲೂಕಿನ 166 ಗ್ರಾಮಗಳಿಗೆ ನೀರು : ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ, ಜ. 16 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ 166 ಗ್ರಾಮಗಳಿಗೆ ನದಿ ಮೂಲದಿಂದ ಕುಡಿಯುವ ನೀರು ಪೂರೈಸುವ ಕಾರ್ಯವು ಮಾರ್ಚ್ ವೇಳೆಗೆ ಆರಂಭವಾಗಲಿದೆ ಎಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ತಾಯೂರು ಜಾಕ್ ವೆಲ್ ಘಟಕ ಹಾಗೂ ಉಮ್ಮತ್ತೂರು ಸೇರಿದಂತೆ ವಿವಿದೆಡೆ ಪ್ರಗತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಇಂದು ಪರಿಶೀಲಿಸಿದ ಬಳಿಕ ಶಾಸಕರು ಈ ಮಾಹಿತಿ ನೀಡಿದರು.
ಚಾಮರಾಜನಗರ ತಾಲೂಕಿನ 166 ಹಾಗೂ ಗುಂಡ್ಲುಪೇಟೆ 131 ಗ್ರಾಮಗಳಿಗೆ ಕಬಿನಿ ನದಿಯಿಂದ ಶಾಶ್ವತವಾಗಿ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ 2014ರ ಡಿಸೆಂಬರ್ ತಿಂಗಳಿನಲ್ಲಿ ಚಾಲನೆ ನೀಡಲಾಗಿದೆ. ಉಸÀ್ತುವಾರಿ ಸಚಿವರಾಗಿದ್ದ ಎಚ್.ಎಸ್. ಮಹದೇವಪ್ರಸಾದ್ ಅವರು ಕಾಳಜಿ ವಹಿಸಿ ಸಾಕಷ್ಟು ಬಾರಿ ಕಾಮಗಾರಿ ಪ್ರಗತಿಯನ್ನು ಪರಿಶೀಲಿಸಿ ತ್ವರಿತವಾಗಿ ಯೋಜನೆ ಪೂರ್ಣಗೊಳಿಸಲು ಸೂಚನೆ ನೀಡಿದ್ದರು. ಒಟ್ಟಾರೆ ಶೇ. 80ರಷ್ಟು ಕಾಮಗಾರಿ ಚಾಮರಾಜನಗರ ತಾಲೂಕಿನಲ್ಲಿ ಪೂರ್ಣಗೊಂಡಿದೆ ಎಂದರು.
ಮರಳು ಅಭಾವ ಹಾಗೂ ಹಣ ಬಿಡುಗಡೆ ವಿಳಂಬ ಕಾರಣದಿಂದ ಕಾಮಗಾರಿ ನಿಗದಿತ ಅವಧಿಯೊಳಗೆ ಪೂರ್ಣವಾಗಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಮರಳು ಸಮಸ್ಯೆ ಪರಿಹಾರವಾಗಿದ್ದು ಹಣ ಕೂಡ ಬಿಡುಗಡೆಯಾಗಿದೆ. ಹೀಗಾಗಿ ಕಾಮಗಾರಿ ಭರದಿಂದ ಸಾಗಿದ್ದು ಮಾರ್ಚ್ ವೇಳೆಗೆ ಚಾಮರಾಜನಗರ ತಾಲೂಕಿನ ಎಲ್ಲ ಗ್ರಾಮಗಳಿಗೆ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ಜಿಲ್ಲೆಯು ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿದೆ. ಚಾಮರಾಜನಗರ ತಾಲೂಕಿನಲ್ಲೂ ಕುಡಿಯುವ ನೀರಿನ ಅಭಾವ ತಲೆದೋರಿದೆ. ಹಲವು ಭಾಗಗಳಲ್ಲಿ ಕೊಳವೆ ಬಾವಿಯನ್ನು ಕೊರೆಸಿದ್ದು 700 ಅಡಿ ಆಳಕ್ಕೆ ಹೋದರೂ ನೀರು ಸಿಗುತ್ತಿಲ್ಲ. ಹೀಗಾಗಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಪೂರ್ಣಗೊಂಡರೆ ತಾಲೂಕಿನಲ್ಲಿ ಕುಡಿಯುವ ನೀರಿನ ಬವಣೆ ನೀಗಲಿದೆ. ಈ ಹಿನ್ನೆಲೆಯಲ್ಲಿ ತಾವು ವ್ಯಾಪಕವಾಗಿ ಪರಿಶೀಲನೆ ನಡೆಸಿದ್ದು ವಿಳಂಬ ಮಾಡದೆ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದ್ದೇನೆ ಎಂದರು.
ಫೆಬ್ರವರಿ ವೇಳೆಗೆ ಹಲವು ಗ್ರಾಮಗಳಿಗೆ ಪ್ರಾಯೋಗಿಕÀವಾಗಿ ರಾ ವಾಟರ್ ಸಪ್ಲೈ ಮಾಡಲಾಗುತ್ತದೆ. ಯೋಜನೆ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಯಾವುದೇ ಹಣಕಾಸು ತೊಂದರೆಯಿಲ್ಲ. ಸರ್ಕಾರದ ಮೇಲೆ ಒತ್ತಡ ತಂದು ಎಲ್ಲ ಕ್ರಮ ವಹಿಸಲಾಗುತ್ತದೆ. ಹೀಗಾಗಿ ಅಧಿಕಾರಿಗಳಿಗೆ ನೀರು ಪೂರೈಸಲು ಅವಶ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ದೇವರಾಜು ಮಾತನಾಡಿ ಕ್ಲೋರಿನೇಷನ್ ಮತ್ತು ಶುದ್ಧೀಕರಣ ಪ್ರಕ್ರಿಯೆ ಪೂರ್ಣಗೊಂಡ ನಂತರವೇ ಪ್ರಾಯೋಗಿಕವಾಗಿ ನೀರು ಪೂರೈಕೆ ಆರಂಭಿಸಲಾಗುತ್ತದೆ. 16 ಗಂಟೆಗಳ ಕಾಲ ಪಂಪ್ ಮಾಡಿದರೆ 24 ಗಂಟೆಗಳ ಅವಧಿಗೆ ನೀರು ಸಂಗ್ರಹಣೆ ಮಾಡಿ ಪೂರೈಸುವ ಸಾಮಥ್ರ್ಯದ ಸಂಗ್ರಹಣಾಗಾರಗಳು ನಿರ್ಮಾಣವಾಗಿವೆ. ಆಯಾ ಜನವಸತಿ ಪ್ರದೇಶಗಳ ಅಗತ್ಯಕ್ಕೆ ತಕ್ಕಂತೆ ನೀರು ಸಂಗ್ರಹಣಾಗಾರಗಳನ್ನು ನಿರ್ಮಾಣ ಮಾಡಲಾಗಿದ್ದು ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ಮುಖಂಡರಾದ ಸುರೇಶ್ ನಾಯ್ಕ, ತಹಸೀಲ್ದಾರ್ ಪುರಂಧರ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರೇಂಕುಮಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್‍ಗಳು, ಇತರೆ ಅಧಿಕಾರಿಗಳು ಹಾಜರಿದ್ದರು.

ಜ. 17ರಂದು ನಗರಕ್ಕೆ ಲೋಕೋಪಯೋಗಿ ಸಚಿವರ ಭೇಟಿ
ಚಾಮರಾಜನಗರ, ಜ. 16 (ಕರ್ನಾಟಕ ವಾರ್ತೆ):- ಲೋಕೋಪಯೋಗಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಜನವರಿ 17ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸಹಕಾರ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿವಂಗತ ಎಚ್.ಎಸ್. ಮಹದೇವಪ್ರಸಾದ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ಗಂಟೆಗೆ ನಗರದ ಶಿವಕುಮಾರಸ್ವಾಮಿ ಭವನದಲ್ಲಿ ಏರ್ಪಡಿಸಲಾಗಿರುವ ಸಂತಾಪ ಸೂಚಕ ಸಭೆಯಲ್ಲಿ ಭಾಗವಹಿಸುವರು. ಬಳಿಕ ಸ್ಥಳೀಯ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದುಕೊರತೆಗಳನ್ನು ವಿಚಾರಿಸುವರು. ಮಧ್ಯಾಹ್ನ 2.30 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಜನವರಿ 17 ರಂದು ನಗರಕ್ಕೆ ಆರೋಗ್ಯ ಸಚಿವರ ಭೇಟಿ
ಚಾಮರಾಜನಗರ, ಜ.16 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಕೆ.ಆರ್.ರಮೇಶ್ ಕುಮಾರ್ ಅವರು ಜನವರಿ 17 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸುವರು. ಬಳಿಕ 11 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಇಲ್ಲಿನ ಶಿವಕುಮಾರಸ್ವಾಮಿ ಭವನದಲ್ಲಿ ನಡೆಯಲಿರುವ ದಿವಂಗತ ಹೆಚ್.ಎಸ್.ಮಹದೇವಪ್ರಸಾದ್ ಅವರ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮದ್ಯಾಹ್ನ 12.30 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ.
   






01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು