Friday, 27 January 2017
ಚಾಮರಾಜನಗರ, ಜ. 27
ಜ. 28ರಂದು ನೇರ ಫೋನ್ ಇನ್ ಕಾರ್ಯಕ್ರಮ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಜನವರಿ 28ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನೇರ ಫೋನ್ ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ನಾಗರಿಕರು ಕುಂದುಕೊರತೆಗಳಿದ್ದಲ್ಲಿ ದೂರವಾಣಿ ಸಂಖ್ಯೆ 08226-224888ಗೆ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಜ. 28ರಂದು ಕೊಳ್ಳೇಗಾಲದಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ ಕಾರ್ಯಕ್ರಮ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇಸ್ಟಿಟ್ಯೂಟ್ ಫಾರ್ ಪರ್ಸನ್ ವಿತ್ ಫಿಸಿಕಲ್ ಡಿಸೇಬಲಿಟೀಸ್ ಅವರ ನೆರವಿನೊಂದಿಗೆ ಕೊಳ್ಳೇಗಾಲ ಹಾಗೂ ಯಳಂದೂರು ತಾಲೂಕಿನ ವಿಕಲಚೇತನರುಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಸಂಬಂಧ ಜನವರಿ 28ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲ ಶ್ರೀ ಮಹದೇಶ್ವÀರ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಹಾರ ಮತ್ತು ನಾಗರಿಕ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್. ಜಯಣ್ಣ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಸಿ. ಪುಟ್ಟರಂಗಶೆಟ್ಟಿ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಅಧ್ಯಕ್ಷರಾದ ಆರ್. ರಾಜು, ಯಳಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ನಂಜುಂಡಯ್ಯ, ಕೊಳ್ಳೇಗಾಲ ನಗರಸಭೆ ಅಧÀ್ಯಕ್ಷರಾದ ಪಿ. ಮಲ್ಲಿಕಾರ್ಜುನ, ಉಪಾಧ್ಯಕ್ಷರಾದ ಎನ್. ಶಾಂತರಾಜು, ಕೊಳ್ಳೇಗಾಲ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಲತಾ ರಾಜಣ್ಣ, ಯಳಂದೂರು ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪದ್ಮಾವತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿ ಬಿ. ರಾಮು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಕೊಳ್ಳೇಗಾಲ ಉಪವಿಭಾಗಾಧಿಕಾರಿ ನಳಿನ್ ಅತುಲï, ಪಂಡಿತ್ ದೀನದಯಾಳ್ ಉಪಾಧ್ಯಾಯ ನ್ಯಾಷನಲ್ ಇಸ್ಟಿಟ್ಯೂಟ್ ಫಾರ್ ಪರ್ಸನ್ ವಿತ್ ಫಿಸಿಕಲ್ ಡಿಸೇಬಲಿಟೀಸ್ ಸಹಾಯಕ ಪ್ರಾಧ್ಯಾಪಕರಾದ ಡಾ. ಜಿ. ಪಾಂಡಿಯನ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರಾದ ಗೋವಿಂದರಾಜು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಜ. 28ರಂದು ವಿದ್ಯುತ್ ಜನಸಂಪರ್ಕ ಸಭೆ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಹರದನಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಜನವರಿ 28ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.
ಸಾರ್ವಜನಿಕರು ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಬಗೆಹರಿಸಿಕೊಳ್ಳುವಂತೆ ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ಕಚೇರಿ ಉದ್ಘಾಟನೆ
ಗೋಶಾಲೆ, ವಸತಿಶಾಲೆಗೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ : ಪರಿಶೀಲನೆ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಆಹಾರ, ನಾಗರಿಕ ಸರಬರಾಜು ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಗುರುವಾರ ಜಿಲ್ಲೆಯ ಗೋಶಾಲೆ, ಕಿತ್ತೂರುರಾಣಿ ಚನ್ನಮ್ಮ ವಸತಿಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೂತನ ಕಚೇರಿಯನ್ನು ಉದ್ಘಾಟಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಲ್ಟಿಪರ್ಪಸ್ ಕಾಂಪ್ಲೆಕ್ಸ್‍ನಲ್ಲಿ ಪ್ರತ್ಯೇಕ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಉಸ್ತುವಾರಿ ಸಚಿವರು ಈ ಹಿಂದೆ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 400 ಕೋಟಿ ರೂ. ಅನುದಾನ ಮಾತ್ರ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರ ಈ ಅನುದಾನವನ್ನು 1200 ಕೋಟಿಗೆ ಹೆಚ್ಚಿಸಿ ಅಲ್ಪಸಂಖ್ಯಾತರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ ಎಂದರು.
ರಾಜ್ಯ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಸರ್ವಜನಾಂಗದ ಶ್ರೇಯೋಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಅಖಂಡ ಜನರು ಶಾಂತಿ ಐಕ್ಯತೆಯಿಂದ ಇದ್ದು ಸಾಮರಸ್ಯ ಬಾಳ್ವೆ ನಡೆಸಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಧ್ಯೇಯೋದ್ದೇಶದೊಂದಿಗೆ ಸಮರ್ಪಕವಾಗಿ ಸವಲತ್ತುಗಳನ್ನು ತಲುಪಿಸುವಲ್ಲಿ ಮುಂದಾಗುತ್ತಿದೆ ಎಂದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಮಾತನಾಡಿ ಒಟ್ಟು ಜನಸಂಖ್ಯೆಯಲ್ಲಿ ಶೇ.15ರಷ್ಟು ಅಲ್ಪಸಂಖ್ಯಾತರು ಇದ್ದಾರೆ. ಈ ಪೈಕಿ ಶೇ. 12ರಷ್ಟು ಮುಸ್ಲಿಂ ಸಮುದಾಯವಿದೆ. ಅದರಲ್ಲೂ ಮುಸ್ಲಿಂ ಸಮುದಾಯ ಜನತೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಮೊರಾರ್ಜಿ ವಸತಿ ಶಾಲೆಗಳ ಮೂಲಕ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಇದರ ಪ್ರಯೋಜನ ಪಡೆಯಬೇಕೆಂದು ಸಲಹೆ ಮಾಡಿದರು.
ಬಳಿಕ ಉಸ್ತುವಾರಿ ಸಚಿವರು ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ತೆರೆಯಲಾಗಿರುವ ಗೋಶಾಲೆಗೆ ಭೇಟಿ ನೀಡಿ ಅಲ್ಲಿ ಕಲ್ಪಿಸಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಗೋವಿಗೆ ನೀಡಲಾಗುತ್ತಿರುವ ಮೇವು, ನೀರು, ಔಷಧೋಪಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆ ನೀಡಿದರು. ಇದೇವೇಳೆ ಸ್ಥಳದಲ್ಲಿದ್ದ ಜಾನುವಾರು ಮಾಲೀಕರೊಂದಿಗೂ ಸಮಾಲೋಚಿಸಿ ಏನಾದರೂ ತೊಂದರೆ ಇದೆಯೇ ಎಂದು ಪ್ರಶ್ನಿಸಿದರು. ಬರ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ತದನಂತರ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿರುವ ಕಿತ್ತೂರುರಾಣಿ ಚನ್ನಮ್ಮ ವಸತಿಶಾಲೆಗೆ ಭೇಟಿ ನೀಡಿದರು. ಅಲ್ಲಿ ವಿದ್ಯಾರ್ಥಿನಿಯರಿಗೆ ಒದಗಿಸಲಾಗಿರುವ ಸೌಲಭ್ಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಅಡುಗೆಕೋಣೆ, ಊಟದ ಹಾಲ್‍ಗಳನ್ನು ವೀಕ್ಷಿಸಿದರು. ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿರುವ ಊಟ ಉಪಾಹಾರ ವಿತರಣೆಯ ಮೆನು ಪರಿಶೀಲಿಸಿ ಆ ಪ್ರಕಾರವೇ ನೀಡಲಾಗುತ್ತಿದೆಯೇ ಎಂಬ ಮಾಹಿತಿಯನ್ನು ಪಡೆದುಕೊಂಡರು. ಆಹಾರ ಸಾಮಗ್ರಿ, ತರಕಾರಿಗಳನ್ನು ಎಲ್ಲಿ ಖರೀದಿಸಲಾಗುತ್ತಿದೆ ಎಂಬ ಬಗ್ಗೆ ಪ್ರಶ್ನಿಸಿದರು.
ಸಂಜೆಯ ಉಪಾಹಾರ ಸೇವಿಸುತ್ತಿದ್ದ ವಿದ್ಯಾರ್ಥಿನಿಯರೊಂದಿಗೆ ಮಾತನಾಡಿದ ಸಚಿವರು ನೀಡಲಾಗುತ್ತಿರುವ ಉಪಾಹಾರ, ಊಟ ಸರಿಯಿದೆಯೇ ಎಂದು ತಿಳಿದುಕೊಂಡರು. ವಿದ್ಯಾರ್ಥಿನಿಯರು ಅಲ್ಲಿನ ವ್ಯವಸ್ಥೆಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು.
ಬಳಿಕ ವಸತಿಶಾಲೆಯ ಆವರಣದಲ್ಲಿ ಇರುವ ಬಯಲು ರಂಗಮಂದಿರಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಉಸ್ತುವಾರಿ ಸಚಿವರು ಉತ್ತಮ ಶಿಕ್ಷಣ ಪಡೆದು ಸಮಾಜದಲ್ಲಿ ಅತ್ಯುನ್ನತ ಸ್ಥಾನಕ್ಕೆ ಏರಬೇಕು. ಸಿಗುವ ಒಳ್ಳೆಯ ಅವಕಾಶಗಳನ್ನು ಬಳಸಿಕೊಂಡು ಮೇಲೆ ಬರಬೇಕು. ಉತ್ತಮ ವ್ಯಕ್ತಿತ್ವ ಪಡೆದು ಸತ್ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಸಲಹೆ ಮಾಡಿದರು.
ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಕರೆಹಳ್ಳಿ ನವೀನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಬಿ. ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಉಪವಿಭಾಗಾಧಿಕಾರಿ ನಳಿನ್ ಅತುಲ್, ತಹಸೀಲ್ದಾರ್ ಪುರಂಧರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಎಚ್. ಸತೀಶ್, ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
ಗ್ರಾ.ಪಂ. ಉಪಚುನಾವಣೆ : ವೇಳಾಪಟ್ಟಿ ಪ್ರಕಟ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):– ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ 5 ಗ್ರಾಮ ಪಂಚಾಯಿತಿಯ 5 ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಚಾಮರಾಜನಗರ ತಾಲೂಕಿನ ಹೊಂಗನೂರು, ಕೊಳ್ಳೇಗಾಲ ತಾಲೂಕಿನ ದೊಡ್ಡಾಲತ್ತೂರು, ಮಾರ್ಟಳ್ಳಿ, ಗುಂಡ್ಲುಪೇಟೆ ತಾಲೂಕಿನ ಕೊತನೂರು, ಯಳಂದೂರಿನ ಬಿಳಿಗಿರಿರಂಗನ ಬೆಟ್ಟದ ಗ್ರಾಮಪಂಚಾಯಿತಿಯ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಜನವರಿ 30ರಂದು ಜಿಲ್ಲಾಧಿಕಾರಿಗಳು ಚುನಾವಣೆ ಅಧಿಸೂಚನೆ ಹೊರಡಿಸುವರು.
ನಾಮಪತ್ರ ಸಲ್ಲಿಸಲು ಫೆಬ್ರವರಿ 2 ಕಡೆಯ ದಿನವಾಗಿದೆ. ಫೆಬ್ರವರಿ 3ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಫೆಬ್ರವರಿ 6ರಂದು ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕಡೆಯ ದಿನವಾಗಿದೆ. ಫೆಬ್ರವರಿ 12ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ (ಅವಶ್ಯವಿದ್ದರೆ). ಫೆಬ್ರವರಿ 14ರಂದು ಅವಶ್ಯವಿದ್ದಲ್ಲಿ ಮರು ಮತದಾನ ನಡೆಯಲಿದೆ. ಫೆಬ್ರವರಿ 15ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಮತಗಳ ಏಣಿಕೆ ಕಾರ್ಯ ನಡೆಯಲಿದೆ ಹಾಗೂ ಅಂದೇ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ.
ಚುನಾವಣಾ ನೀತಿಸಂಹಿತೆಯು ಚುನಾವಣೆ ನಡೆಯುವ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಜನವರಿ 30 ರಿಂದ ಫೆಬ್ರವರಿ 15ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಆದರ್ಶ ವಿದ್ಯಾಲಯ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ನಗರದ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ತಾಲೂಕು ವ್ಯಾಪ್ತಿಯಲ್ಲಿ 5ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಆದರ್ಶ ವಿದ್ಯಾಲಯದ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಪಡೆದು ಫೆಬ್ರವರಿ 3ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ವಿದ್ಯಾಲಯದ ಮುಖ್ಯ ಶಿಕ್ಷಕರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಜ. 31ರಂದು ತಾ.ಪಂ. ಸಾಮಾನ್ಯ ಸಭೆ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಪಂಚಾಯಿತಿಯ ಸಾಮಾನ್ಯ ಸಭೆಯು ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ಜನವರಿ 31ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ. 30ರಂದು ಕುಷ್ಠ ಅರಿವು ಆಂದೋಲನ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಷ್ಟರೋಗದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಜನವರಿ 30ರಂದು ಜಾಗೃತಿ ಜಾಥಾ ಹಾಗೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದಿಂದ ಆಶಾ ಕಾರ್ಯಕರ್ತೆಯರು. ನರ್ಸಿಂಗ್ ವಿದ್ಯಾರ್ಥಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಬೃಹತ್ ಜಾಥಾವನ್ನು ನಡೆಸಲಿದ್ದಾರೆ.
ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲೆಯ ತಾಲೂಕು ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೂಡ ಹಮ್ಮಿಕೊಳ್ಳಲಾಗಿದೆ. ರೋಗಿಗಳಿಗೆ ಎಂಸಿಆರ್ ಪಾದರಕ್ಷೆ, ಸಲ್ಪ್ ಕೇರ್ ಕಿಟ್ ನೀಡಲಾಗುತ್ತದೆ ಎಂದು ಜಿಲ್ಲಾ ಕುಷ್ಟ ರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರ ಪ್ರವಾಸ
ಚಾಮರಾಜನಗರ, ಜ. 27 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ್, ಸದಸ್ಯರಾದ ಮೀನಾಕ್ಷಮ್ಮ, ಗೋಕುಲ ನಾರಾಯಣಸ್ವಾಮಿ ಹಾಗೂ ಕಾರ್ಯದರ್ಶಿಯವರು ಜನವರಿ 30 ಹಾಗೂ 31ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 30ರಂದು ಬೆಳಿಗ್ಗೆ 11 ಗಂಟೆಗೆ ಕೊಳ್ಳೇಗಾಲಕ್ಕೆ ಆಗಮಿಸಿ ಅಲ್ಲಿನ ಪೌರಕಾರ್ಮಿಕರ ಕಾಲೋನಿಗೆ ಭೇಟಿ ನೀಡುವರು. ಕೊಳ್ಳೇಗಾಲ ನಗರಸಭೆ ಕಾರ್ಯಾಲಯದಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆಗಳ ಬಗ್ಗೆ ಸಭೆ ನಡೆಸುವರು. ರಾತ್ರಿ 7 ಗಂಟೆಗೆ ಮಹದೇಶ್ವರಬೆಟ್ಟಕ್ಕೆ ಆಗಮಿಸಿ ವಾಸ್ತವ್ಯ ಹೂಡುವರು.
ಜನವರಿ 31ರಂದು ಬೆಳಿಗ್ಗೆ 10.30 ಗಂಟೆಗೆ ಮಹದೇಶ್ವರ ಬೆಟ್ಟ ಪ್ರಾಧಿಕಾರ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕುಂದುಕೊರತೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮೈಸೂರಿಗೆ ತೆರಳುವರೆಂದು ಆಯೋಗದ ಕಾರ್ಯದರ್ಶಿ ತಿಳಿಸಿದ್ದಾರೆ.
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment