Saturday, 14 January 2017

29-12-2016 ರಿಂದ 13-01-2017 ರವರೆಗೆ ಚಾಮರಾಜನಗರ ಸುದ್ದಿಗಳು







ಡಿ. 30ರಂದು ನಗರದಲ್ಲಿ ಪ್ಯಾನಲ್ ವಕೀಲರಿಗೆ 2 ದಿನಗಳ ತರಬೇತಿ
ಚಾಮರಾಜನಗರ, ಡಿ. 29 (ಕರ್ನಾಟಕ ವಾರ್ತೆ):- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ 30ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದ ಅವರಣದಲ್ಲಿರುವ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಪ್ಯಾನಲ್ ವಕೀಲರಿಗಾಗಿ 2 ದಿನಗಳ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷಣ್ ಎಫ್, ಮಳವಳ್ಳಿ ಕಾರ್ಯಾಗಾರವನ್ನು ಉದ್ಘಾಟಿಸುವರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ ಅವರು ಅಧ್ಯಕ್ಷತೆ ವಹಿಸುವರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಆರ್.ಪಿ. ನಂದೀಶ್, ವಕೀಲರು ಹಾಗೂ ತರಬೇತುದಾರರಾದ ರಮಾದೇವಿ, ವಕೀಲರ ಸಂಘದ ಉಪಾಧ್ಯಕ್ಷರಾದ ಶಿವಪ್ರಸನ್ನ, ಸಹಾಯಕ ಸರ್ಕಾರಿ ವಕೀಲರಾದ ಎಂ. ಶಿವಲಿಂಗೇಗೌಡ, ಹಿರಿಯ ವಕೀಲರಾದ ವಿದ್ಯಾಲತಾ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ, ಡಿ. 29 (ಕರ್ನಾಟಕ ವಾರ್ತೆ):- 2016ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರುವ, ಸರಾಸರಿ ಶೇ. 75 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,3ಎ ಹಾಗೂ 3ಬಿ ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಡಿ ದೇವರಾಜ ಅರಸು ಪ್ರತಿಭಾ ಪುರಸ್ಕಾರ ಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಜನವರಿ 10 ಕಡೆಯ ದಿನ. ಹೆಚ್ಚಿನ ವಿವರಗÀಳಿಗೆ ಬಿ.ಸಿ.ಎಂ. ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಮತ್ತು ಸಹಾಯವಾಣಿ ಸಂಖ್ಯೆ: 080-65970004 ನ್ನು ಸಂಪರ್ಕಿಸಬಹುದು. ಅನುದಾನದ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಕಲಚೇತನರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ- ಎಚ್.ಎಸ್. ಮಹದೇವಪ್ರಸಾದ್
ಚಾಮರಾಜನಗರ, ಡಿ. 30 (ಕರ್ನಾಟಕ ವಾರ್ತೆ):- ವಿವಿಧ ಬಗೆಯ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿಕಲಚೇತನರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರು ತಿಳಿಸಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಸಂಘಸಂಸ್ಥೆ, ಸಮಿತಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಗವಿಕಲತೆ ಶಾಪವಲ್ಲ. ಅಂಗವಿಕಲತೆಯನ್ನು ಯಾರು ನಿರೀಕ್ಷಿಸುವುದಿಲ್ಲ. ಅದು ಆಕಸ್ಮಿಕವಾಗಿ ಹುಟ್ಟಿನಿಂದ ಬರುವ ದೇಹದ ಅಂಗವೈಕಲ್ಯ, ದೃಷ್ಠಿಹೀನತೆಯೆ ಆಗಿದೆ. ಇದಕ್ಕೆ ಪರಿಹಾರ, ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು. ವಿಕಲಚೇತನರಿಗೆ ಅನುಕಂಪ ತೋರಿಸುವ ಬದಲು ವಿಶ್ವಾಸ ಹಾಗೂ ಅತ್ಮಸ್ಥೈರ್ಯ ತುಂಬಿ ಇತರರಂತೆ ಬದುಕಲು ಅವಕಾಶ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.
ವಿಕಲಚೇತನರ ಅಭಿವೃದ್ಧಿಗಾಗಿ ಸರ್ಕಾರ ಶೇ. 3ರಷ್ಟು ಮೀಸಲಾತಿ ಕಲ್ಪಿಸಿದೆ. ಅಂಗವಿಕಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಮೆಟ್ರಿಕ್ ನಂತರದ ವಿದ್ಯಾಭ್ಯಾಸಕ್ಕಾಗಿ ಶಾಲೆಗಳಿಗೆ ಶುಲ್ಕ ಮರುಪಾವತಿ, ಐ.ಎ.ಎಸ್ ಮತ್ತು ಕೆ.ಎ.ಎಸ್. ವ್ಯಾಸಂಗಕ್ಕಾಗಿ ಧನಸಹಾಯ, ಎಸ್.ಎಸ್.ಎಲ್.ಸಿ. ಮುಗಿಸಿದ 20ರಿಂದ 40ರ ವಯೋಮಿತಿಯ ನಿರುದ್ಯೋಗಿ ವಿಕಲಚೇತನರಿಗೆ ನಿರುದ್ಯೋಗಭತ್ಯೆಯನ್ನು ಸರ್ಕಾರ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.
2011ರ ಜನಗಣತಿ ಪ್ರಕಾರ ಜಿಲ್ಲೆಯಲ್ಲಿ 20400 ವಿಕಲಚೇತನರಿದ್ದು, ಇಲಾಖೆಯಿಂದ ಸೌಲಭ್ಯ ಒದಗಿಸಲು 18500 ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಅಂಗವಿಕಲರಿಗೆ ಸಾಧನ-ಸಲಕರಣೆಗಳ ವೆಚ್ಚದ ಮಿತಿಯನ್ನು ಸರ್ಕಾರ 10ರಿಂದ 15 ಸಾವಿರಕ್ಕೆ ಹೆಚ್ಚಿಸಿದೆ. ಅಂಗವಿಕಲರನ್ನು ವಿವಾಹವಾದವರಿಗೆ 50000 ರೂ. ಸಹಾಯಧನವನ್ನು ನೀಡುತ್ತಿದೆ. ವಿಕಲಚೇತನರ ಪುನರ್‍ವಸತಿಗಾಗಿ ಪ್ರತಿ ಗ್ರಾಮಮಟ್ಟದಲ್ಲಿ 2000 ರೂ. ಹಾಗೂ ತಾಲೂಕುಮಟ್ಟದಲ್ಲಿ 4000 ರೂ. ಗಳ ಗೌರವ ಸಂಭಾವನೆ ನೀಡಿ ಅಧಿಕಾರಿಗಳನ್ನು ನಿಯೋಜಿಸಿದೆ. 22 ಬಗೆಯ ಯೋಜನೆಗಳ ಮೂಲಕ ವಿಕಲಚೇತನರಿಗೆ ಸರ್ಕಾರ ಸಹಾಯಹಸ್ತ ಚಾಚಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಾದ್ಯಂತ 12 ಸ್ವಯಂಸೇವಾ ಸಂಸ್ಥೆಗಳು ವಿಕಲಚೇತನರ ಪುನರ್‍ವಸತಿಗಾಗಿ ಕಾರ್ಯನಿರ್ವಹಿಸುತ್ತಿವೆ. ಅವುಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಇತ್ತೀಚೆಗೆ ಚಾ.ನಗರ, ಗುಂಡ್ಲುಪೇಟೆ ಹಾಗೂ ಕೊಳ್ಳೇಗಾಲ ತಾಲೂಕುಗಳಲ್ಲಿ ದೀನದಯಾಳ್ ಉಪಾಧ್ಯಾಯ ಸಂಸ್ಥೆ ಮುಖಾಂತರ 1500 ವಿಕಲಚೇತನರನ್ನು ಗುರುತಿಸಿದ್ದು, 980 ಅಂಗವಿಕಲರಿಗೆ 1 ಕೋಟಿ ರೂ. ವೆಚ್ಚದಲ್ಲಿ ಕೃತಕಕಾಲು ಜೋಡಣೆ ಹಾಗೂ ಕನ್ನಡಕ ಹಾಗೂ ಇತರೆ ಸಾಧನ-ಸಲಕರಣೆಗಳನ್ನು ವಿತರಿಸಿದೆ. ವಿಕಲಚೇತನರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸುವಲ್ಲಿ ಕರ್ನಾಟಕವು ದೇಶದಲ್ಲಿಯೇ ಉತ್ತಮ ಸಾಧನೆಗೈದ ಮೊದಲ ರಾಜ್ಯವೆಂಬ ಹೆಗ್ಗಳಿಕೆಯಾಗಿದೆ ಎಂದು ಮಹದೇವಪ್ರಸಾದ್ ತಿಳಿಸಿದರು.
ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಾತನಾಡಿ ವಿಕಲಚೇತನರಿಗೆ ನಿಗದಿಪಡಿಸಿರುವ ಶೇ. 3ರಷ್ಟು ಮೀಸಲಾತಿ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಸಂಸದರ ನಿಧಿಯಿಂದ ಬಿಡುಗಡೆಯಾಗುವ ಪ್ರತಿ ಅನುದಾನದಲ್ಲಿ ಜಿಲ್ಲೆಯಲ್ಲಿ ಈಗಾಗಲೇ 3 ಚಕ್ರದ ವಾಹನಗಳನ್ನು 45 ವಿಕಲಚೇತನರಿಗೆ ಒದಗಿಸಲಾಗಿದೆ. ವಿವಿಧ ಇಲಾಖೆಗಳಲ್ಲಿರುವ ಖಾಲಿಹುದ್ದೆಗಳನ್ನು ತುಂಬುವ ಸಂದರ್ಭದಲ್ಲಿ ಆಂಗವಿಕಲರಿಗೆ ಆದ್ಯತೆ ನೀಡಿ ಮುಖ್ಯವಾಹಿನಿಗೆ ತರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ವಿಕಲಚೇತನರ ಉಜ್ವಲ ಭವಿಷ್ಯಕ್ಕಾಗಿ ಹಮ್ಮಿಕೊಂಡಿರುವ 17 ಧ್ಯೇಯೋದ್ದೇಶಗಳು ನಮ್ಮ ಗುರಿಯಾಗಬೇಕು. ಸರ್ಕಾರದ ಶೇ. 3ರಷ್ಟು ಮೀಸಲಾತಿಯಿಂದ ಯಾವುದೇ ವಿಕಲಚೇತನರು ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ವಿಕಲಚೇತನರ ಪುನರ್‍ವಸತಿಗಾಗಿ ಶ್ರಮಿಸುತ್ತಿರುವ ಜಿಲ್ಲೆಯ ವಿವಿಧ ಸಂಘಸಂಸ್ಥೆಗಳ ಮುಖಂಡರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ನಗರಸಭೆ ಅಧ್ಯಕ್ಷರಾದ ರೇಣುಕ, ಉಪಾಧ್ಯಕ್ಷರಾದ ಎಂ.ಆರ್. ರಾಜಪ್ಪ, ಜಿಲ್ಲಾಧಿಕಾರಿ ಬಿ. ರಾಮು, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಮತ್ತು ವಿಕಲಚೇತನರ ಕಲ್ಯಾಣ ಇಲಾಖೆ ಅಧಿಕಾರಿ ಸರ್ವೇಶ್, ವಿಕಲಚೇತನರ ಸಂಘದ ರಾಜ್ಯಾಧ್ಯಕ್ಷರಾದ ಬಸವಣ್ಣ, ಜಿಲ್ಲಾಧÀ್ಯಕ್ಷರಾದ ಮಹದೇವಸ್ವಾಮಿ ಹಾಗೂ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ವಿಕಲಚೇತನರ ಜಾಥಾ ಕಾರ್ಯಕ್ರಮಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರು ಚಾಲನೆ ನೀಡಿದರು.
         
ಡಾ|| ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ವಿವಿಯಾಗಿ ಹೊರಹೊಮ್ಮಲಿ : ಹೆಚ್.ಎಸ್.ಮಹದೇವಪ್ರಸಾದ್
ಚಾಮರಾಜನಗರ, ಡಿ. 30 (ಕರ್ನಾಟಕ ವಾರ್ತೆ):- ನಗರದ ಡಾ|| ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರವು ಜಿಲ್ಲೆಯ ವಿಶ್ವ ವಿದ್ಯಾಲಯವಾಗಿ ಹೊರಹೊಮ್ಮಲ್ಲಿ ಎಂದು ಸಹಕಾರ ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಹೆಚ್.ಎಸ್.ಮಹದೇವಪ್ರಸಾದ್ ಆಶಿಸಿದರು.
ನಗರದ ಹೊರವಲಯ ಕೆಲ್ಲಂಬಳ್ಳಿಯಲ್ಲಿ ಇಂದು ನೂತನವಾಗಿ ನಿರ್ಮಾಣವಾಗಿರುವ ಡಾ|| ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಡಾ|| ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದಲ್ಲಿ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಶೇಕಡ 70 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಾಗಿದ್ದಾರೆ. ಈ ಕೇಂದ್ರಕ್ಕೆ ಹೆಚ್ಚಿನ ನೆರವು ದೊರೆತರೆ ವಿಶ್ವ ವಿದ್ಯಾಲಯವಾಗಿ ಮುಂದಿನ ದಿನಗಳಲ್ಲಿ ಮಾರ್ಪಾಡಾಗಲಿದೆ ಎಂದು ಪ್ರಸ್ತಾವನೆ ಇಡಲಾಗಿದೆ. ಇದಕ್ಕೆ ಪೂರಕವಾಗಿ ಸ್ಪಂದಿಸಲಾಗುವುದೆಂದು ಸಚಿವರು ತಿಳಿಸಿದರು.
ನೂತನ ಸ್ನಾತಕೋತ್ತರ ಕೇಂದ್ರವು ಪ್ರಶಸ್ತ ಸ್ಥಳದಲ್ಲಿ ನಿರ್ಮಾಣವಾಗಿದೆ. ಈ ಕೇಂದ್ರವು ವಿಶ್ವ ವಿದ್ಯಾಲಯವಾಗಿ ರೂಪುಗೊಂಡು ಮೈಸೂರಿನ ಮಾನಸ ಗಂಗೋತ್ರಿ, ಬೆಂಗಳೂರು ಜ್ಞಾನ ಭಾರತಿಯಂತಹ ಉತ್ತಮ ಕ್ಯಾಂಪಸ್ ಆಗಿ ಹೊರಹೊಮ್ಮಬೇಕೆಂದು ತಮ್ಮ ಆಶಯವಾಗಿದೆ ಎಂದು ಸಚಿವರು ತಿಳಿಸಿದರು.
ನೂತನ ಕೇಂದ್ರ ಕಟ್ಟಡಕ್ಕೆ ರಾಜ್ಯ ಸರ್ಕಾರ 9 ಕೋಟಿ ರೂ. ಅನುದಾನ ನೀಡಿದೆ. ವಿಶ್ವವಿದ್ಯಾಲಯವಾಗಿ ಮಾರ್ಪಾಡಾಗಲು ಕಲಾ ಹಾಗೂ ವಿಜ್ಞಾನ ಭವನಗಳಿಗೆ ತಲಾ 10 ಕೋಟಿಯು ನೆರವು ಅಗತ್ಯವಿದೆ ಎಂದು ಪ್ರಸ್ತಾಪಿಸಲಾಗಿದೆ. ಇದಕ್ಕೆ ಅಗತ್ಯವಿರುವ ನೆರವನ್ನು ಒದಗಿಸಲು ಅಗತ್ಯವಿರುವ ಎಲ್ಲಾ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದೆಂದು ಸಚಿವರು ತಿಳಿಸಿದರು.
ವಿದ್ಯಾರ್ಥಿ ನಿಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಲೋಕ ಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಅವರು ಜಿಲ್ಲೆಯ ಶೈಕ್ಷಣಿಕ ಪ್ರಗತಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರವು ಕಲಶಪ್ರಾಯವಾಗಿದೆ. ಉನ್ನತ ಶಿಕ್ಷಣ ಪಡೆಯುವವರ ಸಂಖ್ಯೆ ಹೆಚ್ಚಾಗಬೇಕಾಗಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಅಧ್ಯಯನ ಮಾಡಿದರೇ ಉನ್ನತ ಸ್ಥಾನಕ್ಕೆರಲು ಸಾಧ್ಯವಾಗಲಿದೆ ಎಂದರು.
  ಸುರ್ವಣ ಗಂಗೋತ್ರಿ ನಾಮಫಲಕ ಅನಾವರಣ ಮಾಡಿ ಮಾತನಾಡಿದ ಪ್ರೋ.ಕೆ.ಎಸ್.ರಂಗಪ್ಪ ಅವರು ಉನ್ನತ ಶಿಕ್ಷಣ ನೀಡುವಲ್ಲಿ ವಿಶ್ವ ವಿದ್ಯಾಲಯ ಪಾತ್ರ ಮಹತ್ವವಾಗಿದೆ. ಸ್ಥಳೀಯ ಜಿಲ್ಲೆಯ ವಿದ್ಯಾರ್ಥಿಗಳು ಸಾಕಾಷ್ಟು ಪ್ರತಿಭವಂತರಾಗಿದ್ದಾರೆ. ವಿಜ್ಞಾನ ವಿಭಾಗವನ್ನು ಆರಂಭಿಸಲು 10 ಕೋಟಿ ಅಗತ್ಯವಿದೆ. ಇದಕ್ಕೆ ನೆರವು ದೊರೆತರೆ ವಿಜ್ಞಾನ ಅಧ್ಯಯನಕ್ಕೆ ಸಾಕಾಷ್ಟು ಅನುಕೂಲವಾಗಲಿದೆ ಎಂದರು.
ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಡಾ|| ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೋ.ಶಿವಬಸವಯ್ಯ, ಜಿಲ್ಲಾಧಿಕಾರಿ ಬಿ.ರಾಮು, ಮೈಸೂರು ವಿವಿ ಕುಲಸಚಿವರಾದ ಪ್ರೋ.ಆರ್.ರಾಜಣ್ಣ, ನಗರಸಭೆ ಅಧ್ಯಕ್ಷರಾದ ರೇಣುಕಾ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಯಮ್ಮ, ಉಪಾಧ್ಯಕ್ಷರಾದ ರವಿಕುಮಾರ್ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಸ್ತುವಾರಿ ಸಚಿವರಿಂದ ಲೋಕೋಪಯೋಗಿ ಇಲಾಖೆಯ ನೂತನ ಕಚೇರಿ ಕಟ್ಟಡ ಉದ್ಘಾಟನೆ
ಚಾಮರಾಜನಗರ, ಡಿ. 30 (ಕರ್ನಾಟಕ ವಾರ್ತೆ):- ನಗರದ ಲೋಕೋಪಯೋಗಿ ಇಲಾಖೆಯ ವಿಭಾಗ ಕಚೇರಿಯ ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮವು ಇಂದು ನಗರದಲ್ಲಿ ನಡೆಯಿತು.
ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಸಹಕಾರ ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಎಸ್.ಮಹದೇವಪ್ರಸಾದ್ ರವರು ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆಯು ಸಾಕಾಷ್ಟು ಅಭಿವೃದ್ದಿ ಕಾಮಗಾರಿಗಳನ್ನು ನಿರ್ವಹಿಸುತ್ತಿದೆ. ತನ್ನದೇ ಆದ ಕಟ್ಟಡವು ಇಲಾಖೆಗೆ ಅಗತ್ಯವಿದ್ದು, ಅದರ ಉದ್ದೇಶ ನೆರವೇರಿದೆ ಎಂದರು.
ಲೋಕೋಪಯೋಗಿ ಇಲಾಖೆಯು ರಸ್ತೆ, ಕಟ್ಟಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡಿದೆ. ಕಳೆದ ಮೂರು ವರ್ಷದಲ್ಲಿ 160 ಕಿ.ಮೀ ರಸ್ತೆ ನಿರ್ಮಾಣವಾಗಿದೆ. ಅಲ್ಲದೇ ಮುಖ್ಯ ರಸ್ತೆಗಳೇ ಸುಮಾರು 170 ಕಿ.ಮೀ ಪೂರ್ಣವಾಗಿದೆ ಎಂದರು.
ಲೋಕೋಪಯೋಗಿ ಇಲಾಖೆಯು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಘಟಕ ಯೋಜನೆಯಡಿ 65 ಕೋಟಿ ರೂ. ವೆಚ್ಚದಲ್ಲಿ 56 ಕಿ.ಮೀ ಸಿಮೆಂಟ್ ಕಾಂಕ್ರಿಕ್ಟ್ ರಸ್ತೆಯನ್ನು ನಿರ್ಮಿಸಿದೆ. ಅಲ್ಲದೇ ಚಾಮರಾಜನಗರ ವೈದ್ಯಕೀಯ ಕಾಲೇಜನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಗುಣಮಟ್ಟದಿಂದ ನಿರ್ಮಿಸಿದ ಹೆಗ್ಗಳಿಕೆಗೂ ಪಾತ್ರವಾಗಿದೆ ಎಂದು ಸಚಿವರು ತಿಳಿಸಿದರು.
ಲೋಕ ಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಮಾತನಾಡಿ ಜಿಲ್ಲೆಯಲ್ಲಿ ಸಾಕಾಷ್ಟು ರಸ್ತೆಗಳು. ಹೆದ್ದಾರಿ ಕೆಲಸ ಪ್ರಗತಿಯಲ್ಲಿದೆ. ಬೆಂಗಳೂರಿನಿಂದ ದಿಂಡಿಗಲ್ ಸಂಪರ್ಕ ರಸ್ತೆಯು 1200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಜಿಲ್ಲೆಯಲ್ಲಿಯೂ ಈ ರಸ್ತೆ ಹಾದು ಹೋಗಲಿದ್ದು, ಬಹುತೇಕ ಕಡೆ ಬೈಪಾಸ್ ರಸ್ತೆ ಬರಲಿದೆ. ಈಗಾಗಲೇ ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಶಿಘ್ರವೇ ಕಾಮಗಾರಿಗೆ ಚಾಲನೆ ಸಿಗಲಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಲೋಕೋಪಯೋಗಿ ಇಲಾಖೆಯು ತಾಲ್ಲೂಕಿನಲ್ಲಿ ಸಾಕಾಷ್ಟು ಅಭಿವೃದ್ದಿ ಕೆಲಸಗಳಿಗೆ ಮುಂದಾಗಿದೆ. ಜಿಲ್ಲಾ ಕೇಂದ್ರದಲ್ಲಿ ಇಲಾಖೆಯ ಹಲವು ವಸತಿ ಗೃಹಗಳು ಶಿಥಿಲವಾಗಿವೆ. ಇಂತಹ ವಸತಿ ಗೃಹಗಳನ್ನು ಹೊಸದಾಗಿ ನಿರ್ಮಾಣ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.
ನಗರಸಭೆ ಅಧ್ಯಕ್ಷರಾದ ಎಸ್.ಎನ್.ರೇಣುಕಾ, ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ, ನಗರಸಭೆ ಸದಸ್ಯರಾದ ವಿಜಯಕುಮಾರಿ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸೈಯದ್ ರಫಿ, ಲೋಕೋಪಯೋಗಿ ಕಾರ್ಯಪಾಲಕ ಇಂಜಿನಿಯರ್ ಇನಾಯತ್ ಉಲ್ಲಾ ಷರೀಫ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಡಿ.31 ರಂದು ನಗರದಲ್ಲಿ ಮೇವು ನಿಧಿ ಕೇಂದ್ರ ಉದ್ಘಾಟನೆ- ರಿಯಾಯಿತಿ ದರದಲ್ಲಿ ಒಣಭತ್ತದ ಹುಲ್ಲು ಮಾರಾಟ
ಚಾಮರಾಜನಗರ, ಡಿ. 30 (ಕರ್ನಾಟಕ ವಾರ್ತೆ):- ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿಯಿರುವ ಎ.ಪಿ.ಎಂ.ಸಿ ಆವರಣದಲ್ಲಿ ಡಿಸೆಂಬರ್ 31 ರಂದು ಬೆಳಿಗ್ಗೆ 10 ಗಂಟೆಗೆ ಮೇವು ನಿಧಿ ಕೇಂದ್ರವನ್ನು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ.
ಮೇವು ನಿಧಿ ಕೇಂದ್ರದಲ್ಲಿ ಒಣಭತ್ತದ ಹುಲ್ಲನ್ನು ದಾಸ್ತಾನು ಮಾಡಲಾಗಿದೆ. ಸರ್ಕಾರಿ ದರದಂತೆ ಪ್ರತಿ ಟನ್ ಭತ್ತದ ಹುಲ್ಲಿಗೆ 6000 ರೂ. ನಿಗಧಿ ಮಾಡಲಾಗಿದ್ದು, ಇದರ ಶೇಕಡ 50 ರಷ್ಟು ರಿಯಾಯಿತಿ ದರದಲ್ಲಿ ಅಂದರೆ 3000 ರೂ. ಪಾವತಿಸಿ ಮೇವು ಖರೀದಿಸಬಹುದಾಗಿದೆ. ತಾಲ್ಲೂಕಿನ ರೈತರು ಮೇವು ಕೊರತೆಯಿರುವ ಜಾನುವಾರು ಮಾಲೀಕರು ಸ್ಥಳೀಯ ಪಶು ವೈದ್ಯಾಧಿಕಾರಿಗಳಿಂದ ದೃಡೀಕರಣ ಪತ್ರ ಪಡೆದು ರಿಯಾಯಿತಿ ದರದಲ್ಲಿ ಮೇವು ಖರೀದಿಸುವಂತೆ ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
2017ರ ಫೆಬ್ರವರಿ 7ರಿಂದ 28ರವರೆಗೆ ದಡಾರ-ರುಬೆಲ್ಲಾ ಲಸಿಕಾ ಅಭಿಯಾನ- ಜಿಲ್ಲಾಧಿಕಾರಿ ಬಿ. ರಾಮು  
ಚಾಮರಾಜನಗರ, ಡಿ. 27 (ಕರ್ನಾಟಕ ವಾರ್ತೆ):- ಮಾರಣಾಂತಿಕ ದಡಾರ ಕಾಯಿಲೆ ತಡೆಗಟ್ಟಲು 2017ರ ಫೆಬ್ರವರಿ 7ರಿಂದ 28ರವರೆಗೆ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಕಾರ್ಯಕ್ರÀಮ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ 9 ತಿಂಗಳಿನಿಂದ 15 ವರ್ಷದೊಳಗಿನ ಪ್ರತಿಯೊಬ್ಬ ಮಕ್ಕಳಿಗೂ ಪರಿಣಾಮಕಾರಿ ಮಾಹಿತಿ ನೀಡಿ ಲಸಿಕೆ ಹಾಕಿಸಿಕೊಳ್ಳಲು ಪ್ರೇರೇಪಿಸಬೇಕು ಎಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನ ಕಾರ್ಯಕ್ರಮದ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
 2017ರ ಫೆಬ್ರವರಿ 7ರಿಂದ 28ರವರೆಗೆ ದಡಾರ ಮತ್ತು ರುಬೆಲ್ಲಾ ಉಚಿತ ಲಸಿಕಾ ಅಭಿಯಾನ ಕಾರ್ಯಕ್ರಮವನ್ನು ಆರೋಗ್ಯ ಇಲಾಖೆವತಿಯಿಂದ ಪಲ್ಸ್‍ಪೋಲಿಯೋ ಮಾದರಿಯಲ್ಲಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿದ್ದು, ತಮ್ಮ ಮಕ್ಕಳಿಗೆ ಚುಚ್ಚುಮದ್ದು ಹಾಕಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಪ್ರತಿಯೊಬ್ಬ ಫಲಾನುಭವಿಗಳು, ಪೋಷಕರ ಮನವೊಲಿಸಬೇಕು. ಪ್ರಮುಖವಾಗಿ ಶಿಕ್ಷಕರನ್ನು ಈ ಕಾರ್ಯದಲ್ಲಿ ತೊಡಗಿಸಕೊಳ್ಳಬೇಕು ಎಂದು ಜಿಲ್ಲಾ ಮೀಸೆಲ್ಸ್ ರುಬೆಲ್ಲಾ ಚುಚ್ಚುಮದ್ದು ಅಭಿಯಾನ ಸಮಿತಿ ಅಧ್ಯಕ್ಷರು ಆಗಿರುವ ಬಿ. ರಾಮು ಅವರು ತಿಳಿಸಿದರು.
ದಡಾರ ಮತ್ತು ರುಬೆಲ್ಲಾ ರೋಗ ನಿಯಂತ್ರಣಾ ಅಭಿಯಾನದಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ 146 ಹಾಡಿಗಳಿದ್ದು, ಎಲ್ಲ ಹಾಡಿಗಳಲ್ಲಿರುವ 9ರಿಂದ 15 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಅಭಿಯಾನದಲ್ಲಿ ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಮುಖ್ಯವಾಗಿ ಲಸಿಕೆ ಹಾಕುವ ಸಿಬ್ಬಂದಿ ತಂಡಕ್ಕೆ ತರಬೇತಿ ನೀಡಬೇಕು. ಯಾವುದೇ ಮಕ್ಕಳು ಲಸಿಕೆಯಿಂದ ವಂಚಿತರಾಗದಂತೆ ಅಭಿಯಾನವನ್ನು ವ್ಯವಸ್ಥಿತವಾಗಿ ನಿರ್ವಹಿಸÀಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಆರಂಭದಲ್ಲಿ ಅಭಿಯಾನ ಕುರಿತು ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಅವರು ದೇಶವು 2020ರ ವೇಳೆಗೆ ದಡಾರ ಹಾಗೂ ರುಬೆಲ್ಲಾ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಗೋವಾ ರಾಜ್ಯಗಳನ್ನು ಆಯ್ಕೆ ಮಾಡಿ ಕಾರ್ಯಕ್ರಮದ ಗುರಿ ನೀಡಿದೆ. ದಡಾರ-ರುಬೆಲ್ಲಾ ಈ 2 ಕಾಯಿಲೆಗಳಿಗೂ ಸಾಮ್ಯತೆಯಿದೆ. ಜ್ವರ, ನೆಗಡಿ, ಕೆಮ್ಮು, ಮೈಮೇಲೆ ಕೆಂಪು ಬಣ್ಣದ ಗುಳ್ಳೆ, ಮಚ್ಚೆಗಳ ಲಕ್ಷಣಗಳ್ಳುಳ್ಳ ಈ ಎರಡು ರೋಗಗಳನ್ನು ಒಂದೇ ಲಸಿಕೆ ಮೂಲಕ ತಡೆಗಟ್ಟಲು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಎಲ್ಲ ಇಲಾಖೆಗಳು ಈ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮೈಸೂರು ಎನ್.ಪಿ.ಎಸ್.ಪಿ ಯೋಜನೆಯ ಸರ್ವೇಲೆನ್ಸ್ ಅಧಿಕಾರಿ ಡಾ. ಸುಧೀರನಾಯ್ಕ್ ಅವರು ಮಾತನಾಡಿ 2014ರ ಅಂಕಿಅಂಶಗಳನ್ವಯ ವಿಶ್ವದಲ್ಲಿ 1.39,000 ಮಕ್ಕಳು ದಡಾರ ರೋಗದಿಂದ ಸಾವನ್ನಪ್ಪಿದ್ದಾರೆ. ಅದರಲ್ಲಿ ಭಾರತದಲ್ಲಿಯೆ 39 ಸಾವಿರ ಮಕ್ಕಳು ಈ ರೋಗಕ್ಕೆ ತುತ್ತಾಗಿದ್ದಾರೆ. ದಡಾರ ಸೋಂಕಿರುವ ವ್ಯಕ್ತಿಯು ಕೆಮ್ಮಿದಾಗ, ಸೀನಿದಾಗ ಗಾಳಿ ಮೂಲಕ ಮತ್ತೊಬ್ಬರಿಗೆ ಅತೀ ಬೇಗನೇ ಹರಡುವ ಈ ಕಾಯಿಲೆ ನಂತರ ನ್ಯುಮೋನಿಯಾ, ಅತೀಸಾರಭೇದಿಯಂತಹ ಜೀವಕ್ಕೆ ಅಪಾಯವೊಡ್ಡುವ ಮಾರಣಾಂತಿಕ ಹಂತ ತಲುಪುವ ಸಾಧ್ಯತೆಯಿದೆ. ಇದರ ತಡೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಆರೋಗ್ಯ ಇಲಾಖೆಯ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಮಾತನಾಡಿ ದಡಾರ-ರುಬೆಲ್ಲಾ ನಿಯಂತ್ರಣಾ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ 9 ತಿಂಗಳಿನಿಂದ 15 ವರ್ಷದೊಳಗಿನ ಮಕ್ಕಳಿಗೆ ಅಭಿಯಾನದ ಮೊದಲನೇ ವಾರದಲ್ಲಿ ಶಾಲೆಗಳಲ್ಲಿ ಲಸಿಕೆ ಹಾಕಲಾಗುವುದು. ನಂತರದ ಎರಡು ವಾರಗಳಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಚುಚ್ಚುಮದ್ದು ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ.  ಎಂದರು.
ಜಿಲ್ಲಾ ಸರ್ಜನ್ ಡಾ. ರಘುರಾಮ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಸತೀಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ, ಜಿಲ್ಲೆಯ ಎಲ್ಲ ತಹಶೀಲ್ದಾರರು, ಆರೋಗ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.  

ಶಾಸಕರಿಂದ ಮೇವು ನಿಧಿ ಕೇಂದ್ರ ಉದ್ಘಾಟನೆ
ಚಾಮರಾಜನಗರ, ಡಿ. 31 (ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಬರಗಾಲ ಇರುವ ಹಿನ್ನಲೆಯಲ್ಲಿ ಮೇವುನಿಧಿ ಕೇಂದ್ರ ಸ್ಥಾಪಿಸುವ ಪ್ರಕ್ರಿಯೆ ಆರಂಭವಾಗಿದ್ದು, ತಾಲ್ಲೂಕಿನ ಮೊದಲ ಮೇವುನಿಧಿ ಕೇಂದ್ರಕ್ಕೆ ಇಂದು ಚಾಲನೆ ದೊರೆತಿದೆ.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಬಳಿಯಿರುವ ಎ.ಪಿ.ಎಂ.ಸಿ ಆವರಣದಲ್ಲಿಂದು ತಾಲ್ಲೂಕು ಆಡಳಿತ ಹಾಗೂ ಪಶುಪಾಲನೆ ಇಲಾಖೆ ಸ್ಥಾಪಿಸಿರುವ ಮೇವುನಿಧಿ ಕೇಂದ್ರಕ್ಕೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಸಿ.ಪುಟ್ಟರಂಗಶೆಟ್ಟಿರವರು ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದೆ. ಅದರಲ್ಲೂ ಚಾಮರಾಜನಗರ ತಾಲ್ಲೂಕು ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಲೇ ಬಂದಿದೆ. ಹೀಗಾಗಿ ಅಭಾವ ಸಂದರ್ಭದಲ್ಲಿ ಜನ ಜಾನುವಾರುಗಳಿಗೆ ಅಗತ್ಯವಿರುವ ಮೂಲ ಸೌಕರ್ಯ ಕಲ್ಪಿಸುವುದು ಆದ್ಯತೆಯ ವಿಷಯವಾಗಿದೆ ಎಂದರು.
ತಾಲ್ಲೂಕಿನಲ್ಲಿ ಈಗಾಗಲೆ ಒಂದು ಗೋಶಾಲೆ ತೆರೆಯಲಾಗಿದೆ. ಮೇವು ಕೊರತೆ ನೀಗಿಸುವ ಸಲುವಾಗಿ ಶೇ 50ರ ರಿಯಾಯಿತಿ ದರದಲ್ಲಿ ರೈತರು ಜಾನುವಾರು ಮಾಲೀಕರು ಮೇವು ಪಡೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮೇವು ನಿಧಿ ಕೇಂದ್ರವನ್ನು ತೆರೆಯಲಾಗಿದೆ. ಪ್ರಸ್ತುತ ಮೇವು ಕೇಂದ್ರದಲ್ಲಿ 75 ಟನ್ ಮೇವು ದಾಸ್ತಾನು ಇದೆ. ಭತ್ತದ ಒಣಹುಲ್ಲು ಸಂಗ್ರಹಣೆ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.
ಮೇವು ನಿಧಿ ಕೇಂದ್ರವನ್ನು ಅಗತ್ಯಕ್ಕೆ ಅನುಸಾರವಾಗಿ ತೆರೆಯಲು ಉದ್ದೇಶಿಸಲಾಗಿದೆ. ಹರವೆಯಲ್ಲಿ ಕೂಡ ಶೀಘ್ರವೇ ಮೇವು ನಿಧಿ ಕೇಂದ್ರ ತೆರೆಯಲಾಗುತ್ತದೆ. ಪುಣಜನೂರು, ಅರಕಲವಾಡಿ, ನಾಗವಳ್ಳಿ ಹೀಗೆ ಎಲ್ಲಿ ಮೇವು ಕೇಂದ್ರ ತೆರೆಯಬೇಕಿದೆ ಎಂಬ ಬಗ್ಗೆ ಚಿಂತನೆ ನಡೆಸಿದ್ದು ಅಗತ್ಯಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ತಹಶೀಲ್ದಾರ್  ಪುರಂದರ ಮಾತನಾಡಿ ಮೇವುನಿಧಿ ಕೇಂದ್ರಕ್ಕೆ ನೆರೆಯ ಜಿಲ್ಲೆ ತಾಲ್ಲೂಕುಗಳಾದ ಕೆ.ಆರ್.ಪೇಟೆ, ಶ್ರೀರಂಗಪಟ್ಟಣ, ಮಳವಳ್ಳಿ ಭಾಗದಿಂದ ಭತ್ತದ ಒಣಹುಲ್ಲು ತಂದು ದಾಸ್ತಾನುಮಾಡಲಾಗಿದೆ. ಪ್ರತಿದಿನ 6 ರಿಂದ 8 ಟನ್ ಮೇವು ಬರಲಿದೆ ಎಂದರು.
ಜಾನುವಾರು ಮಾಲೀಕರಿಗೆ ಪ್ರತಿ ರಾಸುವಿಗೆ 5 ಕೆ.ಜಿ ಯಂತೆ ಶೇ. 50ರ ರಿಯಾಯಿತಿಯಲ್ಲಿ ಮೇವು ನೀಡಲಾಗುತ್ತದೆ. ಪ್ರತಿ ಕೆ.ಜಿ ಗೆ 6 ರೂ ದರ ನಿಗಧಿಯಾಗಿದ್ದು ಶೇ. 50ರ ರಿಯಾಯಿತಿ ದರದಲ್ಲಿ ಪ್ರತಿ ಕೆ.ಜಿಗೆ 3ರೂ ನೀಡಿ ಮೇವು ಖರೀದಿಸಬಹುದಾಗಿದೆ ಇದಕ್ಕೆ ಪಶು ವೈದ್ಯ ಇಲಾಖೆಯಿಂದ ಧೃಢೀüಕರಣ ಪತ್ರ ನೀಡಬೇಕಿದೆ ಎಂದು ತಹಶೀಲ್ದಾರ್ ಪುರಂದರ ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು, ಪಶುಪಾಲನೆ ಇಲಾಖೆಯ ಉಪ ನಿರ್ದೇಶಕರಾದ ಡಾ. ಬಾಲಸುಂದರ್, ಸಹಾಯಕ ನಿರ್ದೇಶಕರಾದ ನಟರಾಜ್ ಇತರೆ ಅಧಿಕಾರಿಗಳು ಹಾಜರಿದ್ದರು.


ಆಧಾರ್ ಸಲ್ಲಿಸಲು ಪಿಂಚಣಿ ಫಲಾನುಭವಿಗಳಿಗೆ ಸೂಚನೆ
ಚಾಮರಾಜನಗರ, ಡಿ. 31 (ಕರ್ನಾಟಕ ವಾರ್ತೆ):- ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ತಾಲ್ಲೂಕಿನ ಫಲಾನುಭವಿಗಳು ಜನವರಿ 5ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡುವಂತೆ ಸೂಚಿಸಲಾಗಿದೆ.
ಸಂಧ್ಯಾಸುರಕ್ಷಾ, ವೃದ್ಧಾಪ್ಯ, ವಿಧವಾ, ಅಂಗವಿಕಲ, ಮನಸ್ವಿನಿ, ಮೈತ್ರಿ ಯೋಜನೆಯಡಿ ಫಲಾನುಭವಿಗಳು ಸ್ಮಾರ್ಟ್‍ಕಾರ್ಡ್, ಅಂಚೆಕಚೇರಿ, ಬ್ಯಾಂಕ್ ಮೂಲಕ ಪಿಂಚಣಿ ಪಡೆಯುತ್ತಿರುವವರು ಜನವರಿ 5 ರೊಳಗೆ ಸಂಬಂಧಪಟ್ಟ ನಾಡ ಕಚೇರಿ ಅಥವಾ ತಾಲ್ಲೂಕು ಕಚೇರಿ ಇಲ್ಲವೇ ಗ್ರಾಮ ಲೆಕ್ಕಿಗರಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ನೀಡಬೇಕು. ನಗರ ಸಭೆ ವ್ಯಾಪ್ತಿಯ ಫಲಾನುಭವಿಗಳು ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಅಥವಾ ತಾಲ್ಲೂಕು ಕಚೇರಿಗೆ ಆಧಾರ್ ಕಾರ್ಡ್ ಸಂಖ್ಯೆ ನೀಡಬೇಕು. ಇಲ್ಲವಾದಲ್ಲಿ ಜನವರಿ 5ರಿಂದ ಪಿಂಚಣಿ ಸ್ಥಗಿತ ಗೊಳಿಸಲಾಗುವುದೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲ್ಲೂಕು ಕೇಂದ್ರಗಳಿಗೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಡಿ. 31 (ಕರ್ನಾಟಕ ವಾರ್ತೆ):- ಜಿಲ್ಲೆಯ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು ಜಿಲ್ಲೆಯ ತಾಲ್ಲೂಕು ಕೇಂದ್ರ ಹಾಗೂ ಪಟ್ಟಣಕ್ಕೆ ಜನವರಿ 2ರಿಂದ ಭೇಟಿ ನೀಡಿ ನಾಗರಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಜನವರಿ 2ರಂದು ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹ, ಜನವರಿ 10 ರಂದು ಚಾಮರಾಜನಗರ ಪಟ್ಟಣದ ಎಸಿಬಿ ಪೊಲೀಸ್ ಠಾಣೆ, ಜನವರಿ 18 ರಂದು ಯಳಂದೂರು ಸರ್ಕಾರಿ ಅತಿಥಿಗೃಹ, ಜನವರಿ 26ರಂದು ಕೊಳ್ಳೇಗಾಲದ ಸರ್ಕಾರಿ ಅತಿಥಿಗೃಹ ಹಾಗೂ ಜನವರಿ 30 ರಂದು ಹನೂರು ಸರ್ಕಾರಿ ಅತಿಥಿ ಗೃಹದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಗರಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ಲಂಚದ ಹಣಕ್ಕೆ ಒತ್ತಾಯ, ಕೆಲಸಮಾಡಿಕೊಡಲು ವಿಳಂಬ ಇನ್ನಿತರ ತೊಂದರೆ ನೀಡುತ್ತಿರುವ ಅಧಿಕಾರಿ ನೌಕರರ ವಿರುದ್ಧ ದೂರುಗಳನ್ನು ಸಲ್ಲಿಸಬಹುದಾಗಿದೆ. ನಾಗರಿಕರು ಭೇಟಿಯ ಕಾರ್ಯಕ್ರಮವನ್ನು ಸಧುಪಯೋಗ ಮಾಡಿಕೊಳ್ಳುವಂತೆ ಭ್ರಷ್ಟಾಚಾರ ನಿಗ್ರಹ ದಳದ ಉಪ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    


ಕ್ರೀಡಾಶಾಲೆ ನಿಲಯಕ್ಕೆ ಪ್ರವೇಶಕ್ಕೆ ಆಯ್ಕೆ ಪ್ರಕ್ರಿಯೆ
ಚಾಮರಾಜನಗರ, ಡಿ. 31 (ಕರ್ನಾಟಕ ವಾರ್ತೆ):- ಯುವ ಸಬಲೀಕರಣ  ಮತ್ತು ಕ್ರೀಡಾ  ಇಲಾಖೆಯು 2017-18 ಸಾಲಿಗೆ 8ನೇ ತರಗತಿಗೆ ಹಾಗೂ ಪ್ರಥಮ ಪಿ.ಯು.ಸಿ. ಗೆ  ಸೇರ್ಪಡೆಯಾಗುವ ಕ್ರೀಡಾ ಪಟುಗಳನ್ನು ಕ್ರೀಡಾ ಶಾಲೆಗೆ ಪ್ರವೇಶ ನೀಡುವ ಸಲುವಾಗಿ ಜಿಲ್ಲೆಯಲ್ಲಿರುವ ತಾಲ್ಲೂಕು ಕೇಂದ್ರ ಹಾಗೂ ಪಟ್ಟಣದಲ್ಲಿ ಜನವರಿ 4 ರಿಂದ ಆಯ್ಕೆ ಪ್ರಕ್ರಿಯೆ ಕೈಗೊಂಡಿದ್ದು ಆಸಕ್ತರು ಭಾಗವಹಿಸಬಹುದಾಗಿದೆ.
ಸೈಕ್ಲಿಂಗ್, ಅಥ್ಲೆಟಿಕ್ಸ್, ಬಾಸ್ಕೆಟ್‍ಬಾಲ್, ವಾಲಿಬಾಲ್, ಪುಟ್‍ಬಾಲ್, ಜಿಮ್ನಾಸ್ಟಿಕ್, ಜೂಡೊ, ಕುಸ್ತಿ, ಕ್ರೀಡಾಪಟುಗಳು ಪ್ರವೇಶ ಪಡೆಯಬಹುದು. 2017ರ ಜೂನ್ ಒಂದಕ್ಕೆ ಅನ್ವಯವಾಗುವಂತೆ ಕಿರಿಯರ ವಿಭಾಗಕ್ಕೆ 14 ವರ್ಷ ಒಳಪಟ್ಟಿರಬೇಕು. ( 8ನೇ ತರಗತಿ ಪ್ರವೇಶ) ಮತ್ತು ಹಿರಿಯರ ವಿಭಾಗಕ್ಕೆ 18 ವರ್ಷ ಒಳಪಟ್ಟಿರಬೇಕು (ಪ್ರಥಮ ಪಿ.ಯು.ಸಿ).
ಚಾಮರಾಜನಗರ ತಾಲ್ಲೂಕಿನ ವಿಧ್ಯಾರ್ಥಿಗಳು ಜನವರಿ 4 ರಂದು ನಗರದ ಡಾ..ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣ,್ಲ ಕೊಳ್ಳೇಗಾಲ ತಾಲ್ಲೂಕಿನ ವಿಧ್ಯಾರ್ಥಿಗಳು ಜನವರಿ 9 ರಂದು ಕೊಳ್ಳೇಗಾಲ ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ಮೈದಾನ, ಯಳಂದೂರು ತಾಲ್ಲೂಕಿನ ವಿಧ್ಯಾರ್ಥಿಗಳು ಜನವರಿ 12 ರಂದು ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುಂಡ್ಲುಪೇಟೆ ತಾಲ್ಲೂಕಿನ ವಿಧ್ಯಾರ್ಥಿಗಳು ಜನವರಿ 16 ರಂದು ಗುಂಡ್ಲಪೇಟೆ ಪಟ್ಟಣದ ದೇವರಾಜ ಅರಸು ಕ್ರೀಡಾಂಗಣ ಮತ್ತು ಹನೂರು ಭಾಗದ ವಿಧ್ಯಾರ್ಥಿಗಳು ಜನವರಿ 18 ರಂದು ಹನೂರು ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣಕ್ಕೆ ಬೆಳಿಗ್ಗೆ 9.30 ಗಂಟೆಗೆ ಹಾಜರಾಗಬೇಕು.
ವಿವರಗಳಿಗೆ ಮಹದೇವಯ್ಯ ಮೊ. ಸಂ. 7760841489, ಕೆ.ಸಿ. ಶಿವಣ್ಣ ಮೊ.ಸಂ. 9482110914, ಕಚೇರಿ ದೂರವಾಣಿ ಸಂ. 08226-224932 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಕಲಚೇತನರ ಬಸ್‍ಪಾಸ್ ಅವಧಿ ವಿಸ್ತರಣೆ
ಚಾಮರಾಜನಗರ, ಡಿ. 31 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವಿಕಲಚೇತನರಿಗೆ ವಿತರಿಸಿರುವ ಬಸ್‍ಪಾಸ್  ಅವಧಿಯನ್ನು 2017ರ ಫಬ್ರವರಿ 28ರ ವರೆಗೆ ವಿಸ್ತರಿಸಿದೆ. ವಿಕಲಚೇತನ ಫಲನುಭವಿಗಳು ರಿಯಾಯಿತಿ ಬಸ್‍ಪಾಸ್ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳುವಂತೆ ನಿಗಮದ ವಿಭಾಗೀಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜ. 6ರಂದು ಯಳಂದೂರು ತಾಲೂಕು ಪ.ಜಾ, ಪ.ವರ್ಗಗಳ ಹಿತರಕ್ಷಣಾ ಸಮಿತಿ ಸಭೆ : ಸಮಸ್ಯೆ ಮನವಿ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಯಳಂದೂರು ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ (ಕ್ಷೇಮಾಭಿವೃದ್ಧಿ) ಸಮಿತಿ ಸಭೆಯು ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಜನವರಿ 6ರಂದು ಬೆಳಿಗ್ಗೆ 10.30 ಗಂಟೆಗೆ ಯಳಂದೂರು ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಮಿತಿಗೆ ಮಾಂಬಳ್ಳಿಯ ಮಹದೇವಪ್ಪ, ಅಗರದ ಆರ್. ನಾಗರಾಜು, ವೈ ಕೆ ಮೋಳೆಯ ಮಹದೇವಶೆಟ್ಟಿ ಅವರು ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.
ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊರತುಪಡಿಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಮುದಾಯ ಕುರಿತ ಯಾವುದೇ ಕುಂದುಕೊರತೆ, ತೊಂದರೆ, ಸಮಸ್ಯೆಗಳಿದ್ದಲ್ಲಿ ಸಮಿತಿಯ ಸದಸ್ಯರಾದ ಮಹದೇವಪ್ಪ, ಸಿದ್ದೇಶ್ವರಪೇಟೆ, ಮಾಂಬಳ್ಳಿ (ಮೊ. ನಂ. 9739825516), ಆರ್. ನಾಗರಾಜು, ಅಗರ (ಮೊ.ನಂ. 9986585161), ಮಹದೇವಶೆಟ್ಟಿ, ವೈ.ಕೆ. ಮೋಳೆ (ಮೊಬೈಲ್ 9480003951) ಇವರ ಮುಖಾಂತರ ಅಥವಾ ಯಳಂದೂರು ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಮನವಿ ಸಲ್ಲಿಸಬಹುದಾಗಿದೆ ಎಂದು ಯಳಂದೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕಸ್ತೂರು, ದೇಮಹಳ್ಳಿ, ದೇಮಹಳ್ಳಿ ಮೋಳೆ (ಇತರೆ) ಯಲ್ಲಿ ಅಂಗನವಾಡಿ ಸಹಾಯಕಿಯರ ಹುದ್ದೆಗಳು ಇವೆ. ಚಾಟಿಪುರ (ಇತರೆ), ಕನ್ನೇರ ಕಾಲೋನಿ (ಪರಿಶಿಷ್ಟ ಪಂಗಡ) ಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿವೆ.
ಆಸಕ್ತ ಸ್ಥಳೀಯ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಡನೆ ಭರ್ತಿ ಮಾಡಿದ ಅರ್ಜಿಯನ್ನು ಜನವರಿ 25ರೊಳಗೆ ಸಂತೆಮರಹಳ್ಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಇಡಲಾಗಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬಹುದು.
ವಿವರಗಳಿಗೆ ಸಂತೆಮರಹಳ್ಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಉದ್ಯೋಗ ಅವಕಾಶ ತರಬೇತಿಗೆ ಪ.ಜಾ, ಪ.ಪಂ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜ. 26 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆಯ ಸರ್ಕಾರಿ ಉಪಕರಣಗಾರ  ಮತ್ತು ತರಬೇತಿ ಕೇಂದ್ರದಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ನೆರವಾಗುವ ವಿವಿಧ ವಿಭಾಗಗಳಲ್ಲಿ ನೀಡಲಿರುವ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
     ವಿಶೇಷ ಘಟಕ ವiತ್ತು ಗಿರಿಜನ ಉಪಯೋಜನೆಯಡಿ ನೀಡಲಿರುವ ತರಬೇತಿಗೆ ಎಸ್.ಎಸ್.ಎಲ್.ಸಿ, ಐಟಿಐ, ಡಿಪ್ಲೋಮ, ಬಿಇ ತೇರ್ಗಡೆಯಾದ ನಿರುದ್ಯೋಗಿ ಯುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಅರ್ಜಿ ಸಲ್ಲಿಕೆಗೆ ಜನವರಿ 9 ಕಡೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಮೊಬೈಲ್ ಸಂಖ್ಯೆ 7411343663, 9880800692 ಸಂಪರ್ಕಿಸಬಹುದೆಂದು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ. 3 ಹಾಗೂ 4ರಂದು ಜಿಲ್ಲಾ ಮಟ್ಟದ ಕಾಲೇಜು ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ, ಮೈಸೂರಿನ ರಂಗಾಯಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜನವರಿ 3 ಹಾಗೂ 4ರಂದು ಎರಡು ದಿನಗಳ ಜಿಲ್ಲಾ ಮಟ್ಟದ ಕಾಲೇಜು ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆಯನ್ನು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಚಲನಚಿತ್ರ ನಟ ಹಾಗೂ ರಂಗ ನಿರ್ದೇಶಕರಾದ ಮಂಡ್ಯ ರಮೇಶ್ ಜನವರಿ 3ರಂದು ಬೆಳಿಗ್ಗೆ 10.30 ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ರಚನಾ ಪಿ. ಮೆಲಾಕಿ ಅಧ್ಯಕ್ಷತೆ ವಹಿಸುವರು.
ಮೈಸೂರು ವಿವಿ ಕನ್ನಡ ಅಧ್ಯಯನ ಸಂಸ್ಥೆಯ ಜಾನಪದ ವಿಭಾಗದ ಮುಖ್ಯಸ್ಥರಾದ ಪ್ರೊ. ನಂಜಯ್ಯ ಹೊಂಗನೂರು ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ಕಿರಗಸೂರು ರಾಚಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನವರಿ 3ರಂದು ವೆಂಕಟಯ್ಯನ ಛತ್ರÀದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಡಾ. ಚಂದ್ರಶೇಖರ್ ಕಂಬಾರ ಅವರ ರಚನೆಯ ಬೆಪ್ಪುತಕ್ಕಡಿ ಬೋಳೆಶಂಕರ ನಾಟಕ ಪ್ರದರ್ಶಿಸುವರು. ಯಳಂದೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನವರು ಪಿ. ಲಂಕೇಶ್ ರಚನೆಯ ಸಂಕ್ರಾಂತಿ, ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಶ್ವಪ್ಪ ಗೊರಂಟ್ಲಿ ರಚನೆಯ ಜೇಡ ಹಿಡಿದ ಆಡು, ಅಮಚವಾಡಿಯ ಸಂಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಮಾಲತಿ ಸಾಗರ ಅವರ ರಚನೆಯ ಹೂವುಗಳು ಅರಳಲಿ ನಾಟಕ ಪ್ರದರ್ಶಿಸುವರು. ವೆಂಕಟಯ್ಯನ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಕೋಲಾಟ, ಯಳಂದೂರು ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಮಾರಿಕುಣಿತ, ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಹಾಗೂ ಅಮಚವಾಡಿಯ ಸಂಯುಕ್ತ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಕಂಸಾಳೆ ಪ್ರದರ್ಶನ ನೀಡುವರು.
ಜನವರಿ 4ರಂದು ಕುದೇರು ಎಂ. ಸಂಗಶೆಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪಿ. ಲಂಕೇಶ್ ಅವರ ರಚನೆಯ ತೆರೆಗಳು, ಗುಂಡ್ಲುಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಎಸ್. ಕಾಳಿಂಗಸ್ವಾಮಿ ಸಿದ್ದಾರ್ಥ ಅವರ ರಚನೆಯ ಚಂದದ ಗುಡಿ, ನಗರದ ಸಿದ್ದಾರ್ಥ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿಗಳು ದ.ರಾ. ಬೇಂದ್ರೆ ಅವರ ರಚನೆಯ ಸಾಯೋ ಆಟ ಮತ್ತು ನಗರದ ಸಿದ್ದಾರ್ಥ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಸನ್ನ ಅವರ ರಚನೆಯ ಕೊಂದವರು ಯಾರು ನಾಟಕ ಅಭಿನಯಿಸುವರು.
ಕುದೇರು ಎಂ. ಸಂಗಶೆಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಗುಂಡ್ಲುಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು, ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಮಾರಿ ಕುಣಿತ ಮತ್ತು ನಗರದ ಸಿದ್ದಾರ್ಥ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಸುಗ್ಗಿ ಕುಣಿತ ಪ್ರದರ್ಶನ ನೀಡುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2016ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಸರಾಸರಿ ಶೇ. 75 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ಹಿಂದುಳಿದ ವಿದ್ಯಾರ್ಥಿಗಳಿಗೆ ನೀಡಲಿರುವ ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಿದೆ.
ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 10 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡಬಹುದು. ಅನುದಾನದ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ. ಸಹಾಯವಾಣಿ ಸಂಖ್ಯೆ 080-65970004 ಸಂಪರ್ಕಿಸಿ ಕೂಡ ಮಾಹಿತಿ ಪಡೆಯಬಹುದೆಂದು ಪ್ರಕಟಣೆ ತಿಳಿಸಿದೆ.


ಪಿಡಿಓ, ಕಾರ್ಯದರ್ಶಿ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಗಳ ಭರ್ತಿಗಾಗಿ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗೆ ನಗರದ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 7ರೊಳಗೆ ಹೆಸರು ನೊಂದಾಯಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಸಿ,ಎಂ. ಉಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜ. 4ರಂದು ವಾಹನ ಚಾಲನಾ ತರಬೇತಿ ಆಯ್ಕೆಗೆ ಸಂದರ್ಶನ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ನೀಡಲಾಗುವ ಲಘು ವಾಹನ ಚಾಲನಾ ತರಬೇತಿಗೆ ಆಯ್ಕೆ ಮಾಡಲು ಜನವರಿ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂದರ್ಶನ ನಡೆಯಲಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಂದು ತಪ್ಪದೇ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ (ದೂ.ಸಂ. 08226-222855) ಸಂಪರ್ಕಿಸುವಂತೆ ಪÀ್ರಕಟಣೆ ತಿಳಿಸಿದೆ.

ಜ. 5ರಂದು ತಾ.ಪಂ. ಕೆಡಿಪಿ ಸಭೆ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ಪಂಚಾಯಿತಿಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು (ಕೆಡಿಪಿ) ಅಧ್ಯಕ್ಷರಾದ ಎಚ್.ವಿ. ಚಂದ್ರು ಅವರ ಅಧ್ಯಕ್ಷತೆಯಲ್ಲಿ ಜನವರಿ 5ರಂದು ಬೆಳಿಗ್ಗೆ 11 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ವ್ಯಕ್ತಿಯೋರ್ವರ ಮೇಲೆ ಹಲ್ಲೆ : ಇಬ್ಬರಿಗೆ ದಂಡ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಹಿತ್ತಲಿನ ಸಂಪ್ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ವ್ಯಕ್ತಿಯೋರ್ವರ ಮೇಲೆ ಹಲ್ಲೆ ಮಾಡಿದ ಇಬ್ಬರಿಗೆ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಂಡ ವಿಧಿಸಿದೆ.
ಕಳೆದ 2011ರ ಮೇ 16ರಂದು ಬಸಪ್ಪನಪಾಳ್ಯ ಗ್ರಾಮದಲ್ಲಿ ಹಿತ್ತಲಿನ ಸಂಪ್ ವಿಚಾರವಾಗಿ ಜಗಳ ತೆಗೆದು ಶಿವಪ್ಪ ಎಂಬುವವರ ಮೇಲೆ ಸ್ವಾಮಿ ಮತ್ತು ಮುತ್ತುರಾಜ್ ಎಂಬುವವರು ಮಚ್ಚು ದೊಣ್ಣೆಯಿಂದ ಹಲ್ಲೆ ಮಾಡಿದ್ದರು. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಪ್ರಕರಣ ರುಜುವಾತಾದ ಹಿನ್ನೆಲೆಯಲ್ಲಿ ಸ್ವಾಮಿ ಮತ್ತು ಮುತ್ತುರಾಜ್ ಅವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು 2400 ರೂ. ದಂಡ ವಿಧಿಸಿ ಇತ್ತೀಚೆಗೆ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.


ರೈತರಿಂದ ಮಾಹಿತಿ ಸಂಗ್ರಹಣೆ : ದಾಖಲೆ ಸಿದ್ದಪಡಿಸಿಕೊಳ್ಳಲು ಸೂಚನೆ
ಚಾಮರಾಜನಗರ, ಜ. 2 (ಕರ್ನಾಟಕ ವಾರ್ತೆ):- ಕೃಷಿ ಇಲಾಖೆಯು ಜೈ ಕಿಸಾನ್ ಯೋಜನೆಯಡಿ ಜಿಲ್ಲೆಯ ಎಲ್ಲ ರೈತರ ದತ್ತಾಂಶ ಮಾಹಿತಿ ಸಂಗ್ರಹಿಸಲಿದ್ದು ಈ ಸಂದರ್ಭದಲ್ಲಿ ಆಧಾರ್, ಎಪಿಕ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಪಹಣಿಯ ಜೆರಾಕ್ಸ್ ಪ್ರತಿಗಳನ್ನು ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಎಲ್ಲ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟು ಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.





ಜ. 4ರಂದು ನಡೆಯಬೇಕಾಗಿದ್ದ ವಾಹನ ಚಾಲನಾ ತರಬೇತಿ ಆಯ್ಕೆಗೆ ಸಂದರ್ಶನ ಮುಂದೂಡಿಕೆ
ಚಾಮರಾಜನಗರ, ಜ. 3 (ಕರ್ನಾಟಕ ವಾರ್ತೆ):- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ನೀಡಲಾಗುವ ಲಘು ವಾಹನ ಚಾಲನಾ ತರಬೇತಿಗೆ ಆಯ್ಕೆ ಮಾಡಲು ಜನವರಿ 4ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಂದರ್ಶನ ನಡೆಯಬೇಕಾಗಿತ್ತು.
ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಎಸ್. ಮಹದೇವಪ್ರಸಾದ್ ಅವರ ಅಕಾಲಿಕ ನಿಧನದ ಹಿನ್ನಲೆಯಲ್ಲಿ ಸರ್ಕಾರವು ರಜೆ ಘೋಷಿಸಿರುವುದರಿಂದ ಲಘು ವಾಹನ ಚಾಲನಾ ತರಬೇತಿಗೆ ಆಯ್ಕೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರ ಪ್ರಕಟಣೆ ತಿಳಿಸಿದೆ.

ಜ. 7ರಂದು ನಗರದಲ್ಲಿ ಶ್ರದ್ಧಾಂಜಲಿ ಸಭೆ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಚ್.ಎಸ್. ಮಹದೇವ ಪ್ರಸಾದ್ ಅವರು ನಿಧನರಾದ ಹಿನ್ನೆಲೆಯಲ್ಲಿ ಜನವರಿ 7 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಆಡಳಿತ ಭವನದ ಆವರಣದಲ್ಲಿರುವ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಸಭೆ ಏರ್ಪಾಡು ಮಾಡಲಾಗಿದೆ.
ಈ ಸಭೆಗೆ ಎಲ್ಲ ಜನಪ್ರತಿನಿಧಿಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿ ಸೇರಿದಂತೆ ಸರ್ವರೂ ಆಗಮಿಸಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಕೊಳ್ಳೇಗಾಲ : ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ವಿವಿಧ ತರಬೇತಿ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಕೊಳ್ಳೇಗಾಲ ತಾಲೂಕಿನ ಪರಿಶಿಷ್ಟ ವರ್ಗ ಜನಾಂಗದ ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ನಾನಾ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಲಘು ವಾಹನ, ಭಾರಿ ವಾಹನ ಚಾಲನಾ ತರಬೇತಿ, ಕಂಪ್ಯೂಟರ್, ಮೊಬೈಲ್ ದುರಸ್ತಿ, ಗೃಹೋಪಯೋಗಿ, ವಿದ್ಯುತ್ ಉಪಕರಣ ದುರಸ್ತಿ ಹಾಗೂ ಟೈಲರಿಂಗ್ ತರಬೇತಿ ನೀಡಲಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕುಟುಂಬದ ಆದಾಯ 2 ಲಕ್ಷ ರೂ. ಮೀರಿರಬಾರದು. ಲಘು ವಾಹನ ಚಾಲನಾ ತರಬೇತಿಗೆ 18 ರಿಂದ 35ರ ವಯೋಮಿತಿಯೊಳಗಿರಬೇಕು. ಭಾರಿ ವಾಹನ ಚಾಲನಾ ತರಬೇತಿಗೆ 21 ರಿಂದ 35ರ ವಯೋಮಿತಿಯೊಳಗಿರಬೇಕು. ಭಾರಿ ವಾಹನ ಚಾಲನಾ ತರಬೇತಿಗೆ ಲಘು ವಾಹನದ ಚಾಲನಾ ಪರವಾನಗಿ ಪಡೆದು ಒಂದು ವರ್ಷ ತುಂಬಿರಬೇಕು. ಚಾಲನಾ ತರಬೇತಿಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡಲಾಗುತ್ತದೆ.
ಅರ್ಜಿಯನ್ನು ಕೊಳ್ಳೇಗಾಲ ಪಟ್ಟಣದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು 2 ಭಾವಚಿತ್ರ, ಇತರೆ ಅಗತ್ಯ ದಾಖಲೆಗಳೊಂದಿಗೆ ಜನವರಿ 10ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ದೂ.ಸಂ. 08224-255060 ಸಂಪರ್ಕಿಸುವಂತೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ವಿವಿಧ ತರಬೇತಿಗೆ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಚಾಮರಾಜನಗರ ತಾಲೂಕಿನ ಪರಿಶಿಷ್ಟ ವರ್ಗ ಜನಾಂಗದ ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ವಿವಿಧ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಲಘು ವಾಹನ, ಭಾರಿ ವಾಹನ ಚಾಲನಾ ತರಬೇತಿ, ಕಂಪ್ಯೂಟರ್, ಮೊಬೈಲ್ ದುರಸ್ತಿ, ಗೃಹೋಪಯೋಗಿ ವಿದ್ಯುತ್ ಉಪಕರಣ ದುರಸ್ತಿ ಹಾಗೂ ಟೈಲರಿಂಗ್ ತರಬೇತಿ ನೀಡಲಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಪೋಷಕರ ವಾರ್ಷಿಕ ಆದಾಯ 1 ಲಕ್ಷ ರೂ. ಮೀರಿರಬಾರದು. ವಾಹನ ಚಾಲನಾ ತರಬೇತಿಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡಲಾಗುತ್ತದೆ.
ಅರ್ಜಿಯನ್ನು ನಗರದ ಕೊಳದ ಬೀದಿಯಲ್ಲಿರುವ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು 2 ಭಾವಚಿತ್ರ, ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಜನವರಿ 13ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ದೂ.ಸಂ. 08226-223823 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.




ಹೋಂಸ್ಟೇ ನೋಂದಣಿ ಅವಧಿ ವಿಸ್ತರಣೆ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಪ್ರವಾಸೋದ್ಯಮ ಇಲಾಖೆಯು ಹೋಂಸ್ಟೇ ನೋಂದಣಿ ಮಾಡಿಸುವ ಅವಧಿಯನ್ನು ಜನವರಿ 26ರವರೆಗೆ ವಿಸ್ತರಿಸಿದೆ.
ಹೋಂಸ್ಟೇ ಮಾಲೀಖರು ವಿವಿಧ ಕಾರಣಗಳ ಹಿನ್ನೆಲೆಯಲ್ಲಿ ನೋಂದಣಿ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಕೋರಿರುವ ಹಿನ್ನೆಲೆಯಲ್ಲಿ ಜನವರಿ 26ರವರೆಗೂ ನೋಂದಣಿ ಮಾಡಿಸಲು ಕಾಲಾವಕಾಶ ನೀಡಲಾಗಿದೆ.
      ಜಿಲ್ಲೆಯಲ್ಲಿ ಉತ್ತಮ ಹಾಗೂ ಸುರಕ್ಷಿತ ಹೋಂಸ್ಟೇ ವಾತಾವರಣ ನಿರ್ಮಿಸುವ ಉದ್ದೇಶವನ್ನು ಸರ್ಕಾರ ಹೊಂದಿದ್ದು ಇದಕ್ಕೆ ಎಲ್ಲಾ ಹೋಂಸ್ಟೇ ಮಾಲೀಕರು ಸಹಕರಿಸಬೇಕು. ಜನವರಿ 26ರೊಳಗೆ ನೋಂದಣಿ ಮಾಡಿಸದೆ ಕಾರ್ಯ ನಿರ್ವಹಿಸುವ ಹೋಂಸ್ಟೇ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದೆಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಯಳಂದೂರು : ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾಂಬಳ್ಳಿ (ಸಾಮಾನ್ಯ) (ಜನಸಂಖ್ಯೆ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ಮೊದಲ ಆದ್ಯತೆ), ಹೊನ್ನೂರು (ಸಾಮಾನ್ಯ) ಅಂಗನವಾಡಿಯಲ್ಲಿ ಸಹಾಯಕಿಯರ ಹುದ್ದೆಗಳು ಇವೆ. ಮಾಂಬಳ್ಳಿ (ಸಾಮಾನ್ಯ) (ಜನಸಂಖ್ಯೆ ಆಧಾರದ ಮೇಲೆ ಅಲ್ಪಸಂಖ್ಯಾತರಿಗೆ ಮೊದಲ ಆದ್ಯತೆ) ಅಂಗನವಾಡಿಯಲ್ಲಿ ಕಾರ್ಯಕರ್ತೆ ಹುದ್ದೆ ಇದÉ.
ಆಸಕ್ತ ಸ್ಥಳೀಯ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಡನೆ ಭರ್ತಿ ಮಾಡಿದ ಅರ್ಜಿಯನ್ನು ಜನವರಿ 25ರೊಳಗೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಇಡಲಾಗಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು.
ವಿವರಗಳಿಗೆ ಯಳಂದೂರು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಎಪಿಎಂಸಿ ಚುನಾವಣೆ : ಜ. 12ರಂದು ಸಂತೆ, ಜಾತ್ರೆ ನಿಷೇಧ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣೆ ಹಿನ್ನೆಲೆಯಲ್ಲಿ ಜನವರಿ 12ರÀಂದು ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಚಾಮರಾಜನಗರ, ಯಳಂದೂರು ಹಾಗೂ ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯೊಳಗೆ ಬರುವ ಎಲ್ಲಾ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಯವರಾದ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಗೆ ಮತ ಹಾಕಲು ಅನುಕೂಲ ಕಲ್ಪಿಸುವ ಉದ್ದೇಶದಿಂದ ಸಂತೆ, ಜಾತ್ರೆಗಳನ್ನು ಅಂದು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಎಪಿಎಂಸಿ ಚುನಾವಣೆ : ಮತಗಟ್ಟೆ ಸ್ಥಾಪಿಸಿರುವ ಶಾಲೆಗಳಿಗೆ ಜ. 11, 12ರಂದು ರಜೆ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ, ಯಳಂದೂರು ಹಾಗೂ ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯೊಳಗೆ ಮತಗಟ್ಟೆ ಸ್ಥಾಪಿಸಿರುವ ಶಾಲೆಗಳಿಗೆ  ಜನವರಿ 11 ಹಾಗೂ 12ರÀಂದು ರಜೆ ಘೋಷಿಸಿ ಜಿಲ್ಲಾಧಿಕಾರಿಯವರಾದ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚುನಾವಣೆಗೆ ಮತ ಹಾಕಲು ಅನುಕೂಲ ಕಲ್ಪಿಸುವ ಹಿತದೃಷ್ಠಿಯಿಂದ ಜಿಲ್ಲೆಯ ಯಳಂದೂರು, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕು ವ್ಯಾಪ್ತಿಯೊಳಗೆ ಹಲವು ಶಾಲೆಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ಅಧಿನಿಯಮ 1966ರ ಸೆಕ್ಷನ್ 13ರ ಅಡಿ ಮತಗಟ್ಟೆ ಸ್ಥಾಪಿಸಿರುವ ಶಾಲೆಗಳಿಗೆ ಮಾತ್ರ ಜನವರಿ 11 ಮತ್ತು 12ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.




ಅಪಘಾತದಲ್ಲಿ ಗಾಯಾಳುಗಳಿಗೆ ನೆರವಾದವರಿಗೆ ಜೀವರಕ್ಷಕ ಪ್ರಶಸ್ತಿ : ಅರ್ಜಿ ಆಹ್ವಾನ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ರಸ್ತೆ ಅಪಘಾತದಂತಹ ಸಂಕಷ್ಟ ಪರಿಸ್ಥಿತಿಯಲ್ಲಿ ಗಾಯಾಳುಗಳಿಗೆ ತ್ವರಿತವಾಗಿ ಚಿಕಿತ್ಸೆ ಕೊಡಿಸಲು ನೆರವಾದÀವರಿಗೆ ಆರೋಗ್ಯ ಇಲಾಖೆ ನೀಡುವ ಜೀವ ರಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸಮೀಕ್ಷೆ ಪ್ರಕಾರ ಅಪಘಾತ ಹಾಗೂ ಈ ಸಂಬಂಧಿ ಸಾವು ಪ್ರಕರಣ ಸಂಖ್ಯೆಯಲ್ಲಿ ರಾಜ್ಯವು 3ನೇ ಸ್ಥಾನದಲ್ಲಿದೆ. ಇದನ್ನು ತಗ್ಗಿಸುವ ಸಲುವಾಗಿ ಅಪಘಾತದ ಸಂದರ್ಭ ಸ್ಥಳದಲ್ಲಿರುವ ವ್ಯಕ್ತಿಗಳು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ತೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ನೆರವಾಗಲು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತಿದೆ.
ಅಪಘಾತದ ಗಾಯಾಳುಗಳಿಗೆ ಸಹಾಯ ಮಾಡಲು ಶ್ರಮಿಸಿರುವ ಯಾರೇ ಆಗಲಿ ಸ್ವಯಂ ಅಥವಾ ಸಾಕ್ಷಿ ವ್ಯಕ್ತಿಯಿಂದ ಪ್ರಶಸ್ತಿಗೆ ನಾಮಕರಣಗೊಳ್ಳಬಹುದಾಗಿದೆ. ಇಂತಹವರಿಗೆ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಜನವರಿ 10 ಕಡೆಯ ದಿನವಾಗಿದೆ.
ಅರ್ಜಿ ಸಲ್ಲಿಕೆ ಮತ್ತು ವಿವರಗಳಿಗೆ ಜಿಲ್ಲಾ ಸಂಯೋಜಕರು, ಸುವರ್ಣ ಆರೋಗ್ಯ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೊಬೈಲ್ 7259003402 ಮತ್ತು 7259003426 ಸಂಪರ್ಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಚ್. ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಜ. 10ಕ್ಕೆ ಕ್ರೀಡಾಶಾಲೆ ಪ್ರವೇಶಕ್ಕೆ ಆಯ್ಕೆ ಪ್ರಕ್ರಿಯೆ
ಚಾಮರಾಜನಗರ, ಜ. 6 (ಕರ್ನಾಟಕ ವಾರ್ತೆ):- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಶಾಲೆ ನಿಲಯಗಳಿಗೆ ಪ್ರವೇಶ ನೀಡುವ ಸಂಬಂಧ ಚಾಮರಾಜನಗರ ತಾಲೂಕು ಆಯ್ಕೆ ಪ್ರಕ್ರಿಯೆಯನ್ನು ಜನವರಿ 10ಕ್ಕೆ ಮುಂದೂಡಲಾಗಿದೆ.
ಈ ಹಿಂದೆ ಜನವರಿ 4ರಂದು ಆಯ್ಕೆ ಪ್ರಕ್ರಿಯೆ ನಡೆಸುವುದಾಗಿ ತಿಳಿಸಲಾಗಿತ್ತು. ಕಾರಣಾಂತರದಿಂದ ಆಯ್ಕೆ ಪ್ರಕ್ರಿಯೆಯನ್ನು ಜನವರಿ 10ರಂದು ಬೆಳಿಗ್ಗೆ 9.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಿಗದಿ ಮಾಡಲಾಗಿದೆ.
ಸೈಕ್ಷಿಂಗ್, ಅಥ್ಲೆಟಿಕ್ಸ್, ಹಾಕಿ, ಬ್ಯಾಸ್ಕೆಟ್ ಬಾಲ್, ವಾಲಿಬಾಲ್, ಫುಟ್ ಬಾಲ್, ಜಿಮ್ನಾಸ್ಟಿಕ್, ಜೂಡೋ, ಕುಸ್ತಿ ಕ್ರೀಡಾಪಟುಗಳಿಗೆ ಪ್ರವೇಶ ನೀಡಲಾಗುತ್ತದೆ. ಕಿರಿಯರ ವಿಭಾಗಕ್ಕೆ 2017ರ ಜೂನ್ 1ಕ್ಕೆ ಅನ್ವಯವಾಗುವಂತೆ 14 ವರ್ಷ ಒಳಪಟ್ಟಿದ್ದು 8ನೇ ತರಗತಿಗೆ ಪ್ರವೇಶ ಬಯಸಿರಬೇಕು. ಹಿರಿಯರ ವಿಭಾಗಕ್ಕೆ 18 ವರ್ಷ ಒಳಪಟ್ಟಿದ್ದು ಪ್ರಥಮ ಪಿಯುಸಿಗೆ ಪ್ರವೇಶ ಬಯಸಿರಬೇಕು. ವಿವರಗಳಿಗೆ ಮಹದೇವಯ್ಯ ಮೊಬೈಲ್ ನಂ. 77608441489, ಕೆ.ಸಿ. ಶಿವಣ್ಣ, ಮೊಬೈಲ್ 9482110814 ಹಾಗೂ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ (ದೂ.ಸಂ. 08226-224932) ಸಂಪರ್ಕಿಸುವಂತೆ ಪÀ್ರಕಟಣೆ ತಿಳಿಸಿದೆ.

ಹೆಚ್ ಎಸ್ ಎಂ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಚಾಮರಾಜನಗರ, ಜ. 7 (ಕರ್ನಾಟಕ ವಾರ್ತೆ):- ಅಕಾಲಿಕವಾಗಿ ನಿಧನರಾದ ಸಹಕಾರ, ಸಕ್ಕರೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಚ್.ಎಸ್. ಮಹದೇವ ಪ್ರಸಾದ್ ಅವರಿಗೆ ಜಿಲ್ಲಾಡಳಿತದ ವತಿಯಿಂದ ಇಂದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಹದೇವ ಪ್ರಸಾದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜನಪ್ರತಿನಿಧಿಗಳು, ಸಂಘಸಂಸ್ಥೆ ಪ್ರತಿನಿಧಿಗಳು, ಅಧಿಕಾರಿಗಳು ಮಹದೇವಪ್ರಸಾದ್ ಅವರು ಜಿಲ್ಲೆಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಲೋಕಸಭಾ ಸದಸ್ಯÀರಾದ ಆರ್. ಧ್ರುವನಾರಾಯಣ ಮಾತನಾಡಿ ಮಹದೇವಪ್ರಸಾದ್ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಮುಖ್ಯಮಂತ್ರಿಯವರನ್ನು ಜಿಲ್ಲೆಗೆ 7 ಬಾರಿ ಕರೆತಂದು ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅನೇಕ ಪ್ರಗತಿಪರ ಕಾರ್ಯಗಳಿಗೆ ಕಾರಣರಾದರು ಎಂದರು.
ಮಹದೇವ ಪ್ರಸಾದ್ ಅವರು ಉತ್ತಮ ಆಡಳಿತಕಾರರು ಹಾಗೂ ಸಂಘಟನಾಕಾರರೂ ಆಗಿದ್ದರು. ಯುವ ರಾಜಕಾರಣಿಗಳಿಗೆ ಆದರ್ಶವಾಗಿದ್ದರು. ರೈತರು, ಜನಸಾಮಾನ್ಯರ ಬಗ್ಗೆ ಅನುಕಂಪ ಹೊಂದಿದ್ದರು. ಅವರ ಚಿಂತನೆ, ಮಾರ್ಗದರ್ಶನ, ಆದರ್ಶವನ್ನು ನಾವು ಪಾಲಿಸಬೇಕಿದೆ ಎಂದು ಧ್ರುವನಾರಾಯಣ ನುಡಿದರು.
ಶಾಸಕರಾದ ಸಿ, ಪುಟ್ಟರಂಗಶೆಟ್ಟಿ ಮಾತನಾಡಿ ವಯಸ್ಸಿನಲ್ಲಿ ತಾವು ಮಹದೇವಪ್ರಸಾದ್ ಅವರಿಗಿಂತ ಹಿರಿಯರಾಗಿದ್ದರೂ ಸಹ ರಾಜಕೀಯವಾಗಿ ಕಿರಿಯವನಾಗಿದ್ದೇನೆ. ಶಿಸ್ತಿನ ಸಿಪಾಯಿಯಾಗಿದ್ದ ಮಹದೇವಪ್ರಸಾದ್ ಅವರು ಅಭಿವೃದ್ಧಿ ವಿಷಯದಲ್ಲಿ ನಮ್ಮೆಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವಲ್ಲಿ ಅವರಿಗಿದ್ದ ಕಾಳಜಿ ಅಪಾರವಾಗಿತ್ತು. ನಮ್ಮೆಲ್ಲರ ಕ್ಯಾಪ್ಟನ್ ಹಾಗೂ ಮಾಸ್ಟರ್ ಆಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಿದ್ದೇವೆ ಎಂದರು.
ಮತ್ತೋರ್ವ ಶಾಸಕರಾದ ನರೇಂದ್ರ ಮಾತನಾಡಿ ಜಿಲ್ಲೆಯ ಬೆಳವಣಿಗೆಗೆ ಅಭಿವೃದ್ಧಿಗೆ ಬಹಳಷ್ಟು ಕನಸುಗಳನ್ನು ಇಟ್ಟುಕೊಂಡು ಅದರ ಸಾಕಾರಕ್ಕೆ ಮುಂದಾದ ಮಹದೇವ ಪ್ರಸಾದ್ ಅವರು ಅಭಿವೃದ್ಧಿಯ ಹರಿಕಾರರು. ವೈದ್ಯಕೀಯ ಕಾಲೇಜು ಕಟ್ಟಡ ಅತ್ಯಂತ ಕಡಿಮೆ ಅವಧಿಯಲ್ಲಿ ಪೂರ್ಣಗೊಳ್ಳುವಲ್ಲಿ ಅವರ ಪರಿಶ್ರಮವಿದೆ. ವಿಶೇಷವಾಗಿ ಮಲೆಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿಗೆ ಕಾಳಜಿ ವಹಿಸಿದ್ದರು. ಇದರಿಂದಾಗಿಯೇ 250 ಕೋಟಿ ರೂ.  ವೆಚ್ಚದ ಅಭಿವೃದ್ಧಿ ಕೆಲಸಗಳು ಶ್ರೀಕ್ಷೇತ್ರದಲ್ಲಿ ಪೂರ್ಣಗೊಂಡಿವೆ. ಇನ್ನು 350 ಕೋಟಿ ರೂ. ವೆಚ್ಚದ ಕೆಲಸಗಳು ಪ್ರಗತಿಯಲ್ಲಿವೆ.  ಅವರ ಕನಸು ಸಾಕಾಗೊಳಿಸುವ ದಿಸೆಯಲ್ಲಿ ನಾವೆಲ್ಲರೂ ಕಠಿಣ ಶ್ರಮ ಪಡಬೇಕಿದೆ ಎಂದರು.
ಶಾಸಕರಾದ ಜಯಣ್ಣ ಮಾತನಾಡಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹದೇವ ಪ್ರಸಾದ್ ಅವರ ಕೊಡುಗೆ, ಪರಿಶ್ರಮ ಇದೆ. ವಿದ್ಯಾರ್ಥಿ ದಿಸೆಯಿಂದಲೂ ತಾವು ಅವರೊಂದಿಗೆ ಆಪ್ತ ಸ್ನೇಹಿತನಾಗಿ ಇದ್ದೇನೆ. ವಿಶಾಲ ಭಾವನೆ, ಸ್ನೇಹಮಯಿ, ವಿಶ್ವಾಸ ಗುಣ ಅವರಲ್ಲಿ ಇತ್ತು. ಅವರ ನಾಯಕತ್ವ ನಮಗೆ ಸದಾ ಅವಶ್ಯಕತೆ ಇತ್ತು. ಆದರೆ ದುರದೃಷ್ಟವಶಾತ್ ಅವರು ನಮ್ಮನ್ನು ಅಗಲಿದ್ದಾರೆ. ಅವರ ಆಶೋತ್ತರಗಳನ್ನು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಮಾತನಾಡಿ ಮಹದೇವಪ್ರಸಾದ್ ಅವರನ್ನು ಕಳೆದುಕೊಂಡ ನಮ್ಮೆಲ್ಲರಿಗೆ ಅನಾಥ ಪ್ರಜ್ಞೆ ಕಾಡುತ್ತಿದೆ. ಜಿಲ್ಲೆಯ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಹಾಕಿಕೊಂಡು ಯಶಸ್ವಿಯಾದರು. ವಿಶೇಷವಾಗಿ ಬದನಗುಪ್ಪೆ ಕೆಲ್ಲಂಬಳ್ಳಿಯಲ್ಲಿ ಕೈಗಾರಿಕಾ ವಸಾಹತುವಿಗೆ ಚಾಲನೆ ನೀಡಿ ಜಿಲ್ಲೆಯ ಹೆಚ್ಚು ಜನರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಕನಸು ಹೊಂದಿದ್ದರು. ಅವರ ಕಾಳಜಿಯನ್ನು ಸ್ಮರಿಸಬೇಕಿದೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆದು ಅಭಿವೃದ್ಧಿಗೆ ಮುಂದಾಗಬೇಕಿದೆ ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಸಚಿವರು ಪ್ರತಿನಿತ್ಯ ದೂರವಾಣಿ ಮೂಲಕ ಕನಿಷ್ಟ ಒಂದು ಗಂಟೆಗಳ ಕಾಲ ಮಾಹಿತಿ ಪಡೆಯುತ್ತಿದ್ದರು. ಯಾವ ಕೆಲಸ ಪ್ರಾರಂಭವಾಗಬೇಕಿದೆ? ಸರ್ಕಾರದ ಮಟ್ಟದಲ್ಲಿ ಯಾವ ಅನುಮೋದನೆ ದೊರೆಯಬೇಕಿದೆ? ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅವರೊಬ್ಬರು ವ್ಯಕ್ತಿಯಲ್ಲ. ಶಕ್ತಿ ಎಂದು ಸ್ಮರಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್. ಬಾಲರಾಜು, ಮುಖಂಡರಾದ ಶಾ. ಮುರಳಿ, ಆಲೂರು ನಾಗೇಂದ್ರ ನುಡಿನಮನ ಸಲ್ಲಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬಸವರಾಜು, ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಚನ್ನಪ್ಪ, ಅಶ್ವಿನಿ, ಜಯಂತಿ, ಶಶಿಕಲಾ ಸೋಮಲಿಂಗಪ್ಪ, ಯೋಗೇಶ್, ತಾ.ಪಂ. ಅಧ್ಯಕ್ಷರಾದ ಎಚ್.ವಿ. ಚಂದ್ರು, ರಾಜು, ಉಪಾಧ್ಯಕ್ಷರಾದ ದಯಾನಿಧಿ,  ಜಿ.ಪಂ. ಸಿಇಓ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಅಭಿಮಾನಿಗಳು ಸಭೆಯಲ್ಲಿ ಹಾಜರಿದ್ದು ಗೌರವ ನಮನ ಸಲ್ಲಿಸಿದರು.
ಗಣರಾಜ್ಯೋತ್ಸವ  ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ದತೆ ನಡೆಸಲು ಡಿ.ಸಿ. ಸೂಚನೆ
ಚಾಮರಾಜನಗರ, ಜನವರಿ 07 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಜನವರಿ 26ರಂದು ಜಿಲ್ಲಾ ಕೇಂದ್ರದಲ್ಲಿ ಆಚರಿಸಲಿರುವ  ಗಣರಾಜ್ಯೋತ್ಸವ ದಿನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ನಡೆಸುವಂತೆ ಜಿಲ್ಲಾಧಿಕಾರಿ ಬಿ.ರಾಮು ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಗಣರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಆಚರಣೆಯನ್ನು ಅತ್ಯಂತ ಶ್ರದ್ದೆಯಿಂದ ಕೈಗೊಳ್ಳಬೇಕಿದೆ. ಕಳೆದ ಬಾರಿ ಕಾರ್ಯಕ್ರಮ ಆಯೋಜನೆಗೆ ನೇಮಕವಾದ ಅಧಿಕಾರಿಗಳು ಈ ಬಾರಿಯು ಸಹ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯೋನ್ಮುಖರಾಗಬೇಕು. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಸಿದ್ದತಾಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದರು.
ಧ್ವಜಾರೋಹಣ ನಂತರ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಪಥಸಂಚಲನ ಏರ್ಪಾಡು ಮಾಡಬೇಕು. ಆಚರಣೆಯ ಮಹತ್ವ  ದೇಶಭಕ್ತಿ ಬಿಂಬಿಸುವ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು. ಗುಣಮಟ್ಟದ  ಕಾರ್ಯಕ್ರಮಗಳು ಮೂಡಿಬರಲು ವಿದ್ಯಾರ್ಥಿಗಳಿಗೆ ತಾಲೀಮು ನಡೆಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ವಹಿಸಬೇಕು. ಪ್ರತಿ ಹಂತದಲ್ಲಿ ಮಾರ್ಗದರ್ಶನ ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಶಿಸ್ತುಬದ್ದವಾಗಿ ಇಡೀ ಗಣರಾಜ್ಯೋತ್ಸವ ಕಾರ್ಯಕ್ರಮ ಆಯೋಜನೆ ಮಾಡಬೇಕು. ಕಾರ್ಯಕ್ರಮಕ್ಕೆ ಯಾವ ರೀತಿ ಸಿದ್ದತೆ ನಡೆದಿದೆ ಎಂಬ ಬಗ್ಗೆ ಜನವರಿ 20ರೊಳಗೆ ಅಧಿಕಾರಿಗಳು ಸಭೆ ನಡೆಸಿ ಪರಿಶೀಲಿಸಬೇಕು ಎಂದ ಜಿಲ್ಲಾಧಿಕಾರಿಯವರು ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಸಂಘಟನೆಯ ಮುಖಂಡರು, ಪ್ರತಿನಿಧಿಗಳು, ಸಲಹೆ ನೀಡುವಂತೆ ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಮಾತನಾಡಿ ಉಷಾ ಆಂದೋಲನದಡಿ ಜಿಲ್ಲೆಯಲ್ಲಿ ನೈರ್ಮಲ್ಯ ಸೇರಿದಂತೆ ಮಹಿಳೆಯರು ಹಾಗೂ ಮಕ್ಕಳ ಬೆಳವಣಿಗಗೆ ಸಂಬಂಧಿಸಿಂತೆ ಹಲವಾರು ಕಾರ್ಯಗಳು ಯಶ್ವಸಿಯಾಗಿ ನಡೆದಿದೆ. ಈ ಕಾರ್ಯದಲ್ಲಿ ಗುರುತರ ಸೇವೆಸಲ್ಲಿಸಿರುವ ವಿದ್ಯಾರ್ಥಿಗಳು, ಗ್ರಾಮೀಣ ಭಾಗದ ಪ್ರತಿನಿಧಿಗಳನ್ನು ಗಣರಾಜ್ಯೋತ್ಸವ ಕಾರ್ಯಕ್ರಮದಂದು ಗೌರವಿಸಲಾಗುತ್ತದೆ ಎಂದರು.
ಸಂಘಟನೆಗಳ ಮುಖಂಡರಾದ ಶಾ.ಮುರಳಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ.ಭಾರತಿ, ಡಿ.ವೈ.ಎಸ್.ಪಿ. ಗಂಗಾಧರ ಸ್ವಾಮಿ, ಆಹಾರ ಇಲಾಖೆಯ ಉಪನಿರ್ದೇಶಕರಾದ ಆರ್. ರಾಚಪ್ಪ, ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಸರಸ್ವತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಜನವರಿ 11,12 ರಂದು ಖೇಲೋ ಇಂಡಿಯಾ ಕ್ರೀಡಾಕೂಟ
ಚಾಮರಾಜನಗರ, ಜನವರಿ 07 (ಕರ್ನಾಟಕ ವಾರ್ತೆ):- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ 2016-17ನೇ ಸಾಲಿನ ಜಿಲ್ಲಾ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟವನ್ನು ಜನವರಿ 11 ಹಾಗೂ 12 ರಂದು ನಗರದ   ಡಾ.ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ.
   ಜನವರಿ 11 ರಂದು  14 ವರ್ಷ ಒಳಪಟ್ಟರವರಿಗೆ ಜನವರಿ  12ರಂದು  17ವರ್ಷ ಒಳಪಟ್ಟರವರಿಗೆ ಕ್ರೀಡಾಕೂಟ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಸ್ಫರ್ಧಿಗಳಿಗೆ ಯಾವುದೇ ಪ್ರಯಾಣಭತ್ಯೆಯನ್ನು ನೀಡಲಾಗುವುದಿಲ್ಲ. ಭಾಗವಹಿಸುವ ಸ್ಫರ್ಧಿಗಳಿಗೆ ಮಧ್ಯಾಹ್ನದ ಲಘುಉಪಹಾರ ನೀಡಲಾಗುವುದು..

  100ಮೀ. 400ಮೀ. ಓಟ. ಉದ್ದಜಿಗಿತ, ಗುಂಡು ಎಸೆತ (4 ಕೆ.ಜಿ) 4*100ಮೀಟರ್ ರಿಲೇ, ಗುಂಪು ಆಟ ವಿಭಾಗದಲ್ಲಿ  ವಾಲಿಬಾಲ್, ಕಬ್ಬಡಿ, ಬಾಸ್ಕೇಟ್‍ಬಾಲ್, ಬ್ಯಾಡ್ಮಿಂಟನ್ ( ಸಿಂಗಲ್ ಮತ್ತು ಡಂಬಲ್ ) ಸ್ಪರ್ಧೆಗಳಿವೆ. 14 ವರ್ಷ ಒಳಪಟ್ಟ ಸ್ಪರ್ಧಿಗಳು ಸ್ಪರ್ಧಿಗಳು ದಿನಾಂಕ : 01-01-2003ರ ನಂತರ ಜನಿಸಿದ್ದು ದಿನಾಂಕ : 31-12-2016ಕ್ಕೆ 14 ವರ್ಷ ಮೀರಿರಬಾರದು. 17 ವರ್ಷ ಒಳಪಟ್ಟ ಸ್ಪರ್ಧಿಗಳು ದಿನಾಂಕ : 01-01-2000ರ ನಂತರ ಜನಿಸಿದ್ದು ದಿನಾಂಕ : 31-12-2016ಕ್ಕೆ 17 ವರ್ಷ ಮೀರಿರಬಾರದು. ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ನಿಗಧಿತ ನಮೂನೆದೊಂದಿಗೆ ಭಾಗವಹಿಬೇಕಿದೆ.

   ಜಿಲ್ಲಾ ಮಟ್ಟದಲ್ಲಿ ವೈಯುಕ್ತಿಕ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಮತ್ತು ಗುಂಪು ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ರಾಜ್ಯ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಲಿದ್ದಾರೆ.

  ಸ್ಫರ್ಧಿಗಳು ಎರಡು ವರ್ಷಗಳಿಂದ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರಬೇಕು ಹಾಗೂ ಶಾಲೆಯಲ್ಲಿ ಶಿಕ್ಷಣ ಹೊಂದುತ್ತಿರಬೇಕು.
 ಮುನ್ಸಿಪಾಲಿಟಿ, ಕಾರ್ಪೋರೇಷನ್ ಮತ್ತು ಪಟ್ಟಣ ಪ್ರದೇಶಗಳನ್ನು ನಗರ ಪ್ರದೇಶಗಳೆಂದು ಪರಿಗಣಿಸಲಾಗುವುದು. ಯಾವುದೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯು ನಗರ ಪ್ರದೇಶದಲ್ಲಿ ವಾಸಿಸುತ್ತಿದ್ದು, ಅಥವಾ ಶಾಲೆಯಲ್ಲಿ ಶಿಕ್ಷಣ  ಪಡೆಯತ್ತಿದಲ್ಲಿ ಅಂತಹವರನ್ನು ಈ  ಕಾರ್ಯಕ್ರಮದ ಯಾವುದೇ ಮಟ್ಟದ ಸ್ಪರ್ಧೆಗಳಲ್ಲಿ ಸೇರಿಸಲಾಗುವುದು. ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಫರ್ಧಿಗಳು ತಮ್ಮ ವಯಸ್ಸಿನ ಮತ್ತು ವಾಸಸ್ಥಳದ ದೃಢೀಕರಣ ಪತ್ರಗಳನ್ನು ಮತ್ತು ವಿಧ್ಯಾರ್ಥಿಗಳು ಸಂಬಂಧಿಸಿದ ಶಾಲೆಗಳ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರುಗಳಿಂದ ಮತ್ತು ವಿಧ್ಯಾರ್ಥಿಗಳಲ್ಲದವರು ವಾಸಿಸುತ್ತಿರುವ ಸ್ಥಳದ ಮತ್ತು  ವಯಸ್ಸಿನ ದೃಢೀಕರಣ  ಪತ್ರಗಳನ್ನು ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್ / ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ರವರಿಂದ ದೃಢೀಕರಿಸಿ ನಮೂನೆಯೊಂದಿಗೆ ತರತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ :08226-224932 ಮೊ.ಸಂ.  9611172984, 9880211027, 9482718278 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.              

 ಜನವರಿ 17 ರಂದು ಗುಂಡ್ಲುಪೇಟೆ ತಾಲ್ಲೂಕು ಮಟ್ಟದ ಯುವಜನ ಮೇಳ
ಚಾಮರಾಜನಗರ, ಜನವರಿ 07 (ಕರ್ನಾಟಕ ವಾರ್ತೆ):- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ 2016-17ನೇ ಸಾಲಿನ ಗುಂಡ್ಲುಪೇಟೆ ತಾಲ್ಲೂಕು ಮಟ್ಟದ ಯುವಜನಮೇಳವನ್ನು ಜನವರಿ 17ರಂದು ಗುಂಡ್ಲಪೇಟೆ ಪಟ್ಟಣದ  ನಿರ್ಮಲ ಸೇವಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.
ವೈಯಕ್ತಿಕ ವಿಭಾಗದಲ್ಲಿ ಏಕ ಪಾತ್ರಾಭಿನಯ,ಭಾವಗೀತೆ, ಲಾವಣಿ, ರಂಗಗೀತೆ ಹಾಗೂ ಗುಂಪು ವಿಭಾಗದಲ್ಲಿ ಗೀಗಿಪದ, ಕೋಲಾಟ, ಜಾನಪದ ನೃತ್ಯ, ಸೋಬಾನೆ ಪದ, ಭಜನೆ, ಜಾನಪದ ಗೀತೆ, ಚರ್ಮವಾದ್ಯ ಮೇಳ ಸ್ಪರ್ಧೆಗಳಿವೆ.
ಯುವಕ ಯುವತಿಯರು ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. ಸ್ಪರ್ಧಿಗಳು 15 ರಿಂದ 35ರ ವಯೋಮಿತಿಯೊಳಗೆ ಇರಬೇಕು. ಕಾರ್ಯಕ್ರಮಕ್ಕೆ ಭಾಗವಹಿಸುವವರಿಗೆ ಯಾವುದೇ ಪ್ರಯಾಣಭತ್ಯೆಯನ್ನು ನೀಡಲಾಗುವುದಿಲ್ಲ. ಮಧ್ಯಾಹ್ನದ ಲಘು ಉಪಾಹಾರವನ್ನು ನೀಡಲಾಗವುದು. ಆಸಕ್ತರು ಜನವರಿ 17ರಂದು ಬೆಳಿಗ್ಗೆ 9.30ಗಂಟೆಗೆ ಕಾರ್ಯಕ್ರಮದ ಸ್ಥಳದಲ್ಲಿ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ : 08226-224932 ಹಾಗೂ ಮೊ.ಸಂ.9482718278, 9880211027ಅನ್ನು  ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.

ರಾಷ್ಟ್ರೀಯ ಮತದಾರರ ದಿನ ಆಚರಣೆಗೆ ಅಗತ್ಯ ಸಿದ್ಧತೆ : ಜಿಲ್ಲಾಧಿಕಾರಿ ಬಿ. ರಾಮು
ಚಾಮರಾಜನಗರ, ಜ. 9 (ಕರ್ನಾಟಕ ವಾರ್ತೆ):- ನಾಗರಿಕರಲ್ಲಿ ಅದರಲ್ಲೂ ಯುವಜನರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಜನವರಿ 25ರಂದು ಆಚರಿಸಲಾಗುವ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆಸÀುವಂತೆ ಜಿಲ್ಲಾಧಿಕಾರಿ ಬಿ. ರಾಮು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಮತದಾರರ ದಿನ ಆಚರಿಸುವ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ದೇಶದ ಜನತೆಯಲ್ಲಿ ಅದರಲ್ಲೂ ಯುವಜನರಲ್ಲಿ ಚುನಾವಣೆ ಕುರಿತು ಅರಿವು ಮೂಡಿಸುವ ಆಶಯದೊಂದಿಗೆ ಪ್ರತೀವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಅನುಸರಿಸಲಾಗುವ ಪಾರದರ್ಶಕತೆ ಇನ್ನಿತರ ಮಹತ್ವವನ್ನು ಮನವರಿಕೆ ಮಾಡಿಕೊಡಬೇಕಿದೆ ಎಂದರು.
ಜನತಂತ್ರ ವ್ಯವಸ್ಥೆಯನ್ನು ಬಲಪಡಿಸಲು ಜನರ ಸಕ್ರಿಯವಾಗಿ ತೊಡಗಿಕೊಳ್ಳಬೇಕಿದೆ. ಪ್ರತಿ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಇರಬೇಕು ಎಂಬುದು ಚುನಾವಣಾ ಆಯೋಗದ ನಿರ್ದೇಶನವಾಗಿದೆ. ಒಟ್ಟಾರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕೆಂಬ ಸದುದ್ದೇಶದಿಂದ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಅರ್ಹ ಮತದಾರರ ನೇರ ಸಂಪರ್ಕಕ್ಕೆ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜನವರಿ 25ರಂದು ವ್ಯಾಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮತದಾರರ ದಿನಾಚರಣೆ ಹಿನ್ನೆಲೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯುವ ಮತ್ತು ಭಾವೀ ಮತದಾರರ ಸಬಲೀಕರಣ ಎಂಬ ವಿಷಯ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ಎಲ್ಲ ತಾಲೂಕುಗಳಲ್ಲಿ ಆಯೋಜಿಸಿ ಜಾಗೃತಿ ಮೂಡಿಸಬೇಕು. ಪ್ರತಿ ಸ್ಪರ್ಧೆಯಲ್ಲಿ ಆಯ್ಕೆಯಾದ ತಲಾ ಮೂವರು ವಿದ್ಯಾರ್ಥಿಗಳನ್ನು ಜಿಲ್ಲಾಮಟ್ಟದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕಳುಹಿಸಬೇಕೆಂದು ಸೂಚಿಸಿದರು.
ಸ್ಪರ್ಧೆಗಳನ್ನು ಜನವರಿ 20ರೊಳಗೆ ಪೂರ್ಣಗೊಳಿಸಿ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ನಗರದ ಪ್ರಥಮದರ್ಜೆ ಸರ್ಕಾರಿ ಕಾಲೇಜು ಪ್ರಾಂಶುಪಾಲರು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿಯನ್ನು ಸಲ್ಲಿಸಬೇಕು. ಚಿತ್ರಕಲಾ ಸ್ಪರ್ಧೆಯನ್ನು ಶಾಲಾ ಮಕ್ಕಳಿಗೆ ಏರ್ಪಡಿಸಿ ಅತ್ಯುತ್ತಮ 3 ಚಿತ್ರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಎಲ್ಲೆಡೆ ನಡೆಯುವ ಸ್ಪರ್ಧೆ ಹಾಗೂ ಇತರ ಕಾರ್ಯಕ್ರಮಗಳು ಪಾರದರ್ಶಕವಾಗಿರಬೇಕು. ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮದಂದು ಎಪಿಕ್ ಕಾರ್ಡು (ಮತದಾರರ ಗುರುತಿನ ಚೀಟಿ) ವಿತರಿಸಬೇಕು. ತಾಲೂಕು ಮಟ್ಟದಲ್ಲಿಯೂ ಪೂರ್ವಭಾವಿ ಸಭೆ ನಡೆಸಿ ರಾಷ್ಟ್ರೀಯ ಮತದಾರರ ದಿನವನ್ನು ಯಶಸ್ವಿಯಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ರಾಮು ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ವಿಶೇಷವಾಗಿ ಹೆಚ್ಚು ಅರಿವು ಮೂಡಿಸುವ ಅಗತ್ಯವಿದೆ. ಹೀಗಾಗಿ ರಾಷ್ಟ್ರೀಯ ಮತದಾರರ ದಿನದಂದು ಪ್ರತೀ ಹೋಬಳಿ, ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಒಂದು ಗಂಟೆಗಳ ಕಾಲ ಸೈಕಲ್ ಜಾಥಾ ಏರ್ಪಡಿಸಲು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಉಪವಿಭಾಗಾಧಿಕಾರಿ ನಳಿನ್ ಅತುಲ್, ತಹಸೀಲ್ದಾರ್ ಪುರಂಧರ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು ಸಭೆಯಲ್ಲಿ ಹಾಜರಿದ್ದರು.




ಪತಿ ಸಾವಿಗೆ ಕಾರಣವಾದ ಪತ್ನಿಗೆ ಶಿಕ್ಷೆ
ಚಾಮರಾಜನಗರ, ಜ. 9 (ಕರ್ನಾಟಕ ವಾರ್ತೆ):- ಮಕ್ಕಳಾಗದ ವಿಚಾರದಲ್ಲಿ ತಗಾದೆ ತೆಗೆದು ಜಗಳವಾಡುವ ಸಂದರ್ಭದಲ್ಲಿ ಪತಿಗೆ ಕಾಲಿನಿಂದ ಒದ್ದು ನೋವುಂಟು ಮಾಡಿ ಆತನ ಸಾವಿಗೆ ಕಾರಣರಾದ ಪತ್ನಿಗೆ 2 ವರ್ಷಗಳ ಕಾಲ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಯಳಂದೂರು ಪಟ್ಟಣದ ಬಳೇಪೇಟೆಯ ಮೊತ್ತದಕೇರಿಯಲ್ಲಿ ನಾಗರಾಜು ಎಂಬುವರು ಶಶಿಕಲಾ ಎಂಬುವವರನ್ನು ವಿವಾಹವಾಗಿದ್ದು 15 ವರ್ಷ ಕಳೆದರೂ ಮಕ್ಕಳಾಗದ ವಿಚಾರದಲ್ಲಿ ಹಾಗೂ ಆಕೆಯ ಶೀಲವನ್ನು ಶಂಕಿಸಿ ಜಗಳವಾಡÀುತ್ತಿದ್ದರು. ಕಳೆದ 2015ರ ಏಪ್ರಿಲ್ 25ರಂದು ಸಂಜೆ 7 ಗಂಟೆಯ ವೇಳೆ ಶಶಿಕಲಾ ಹಾಗೂ ನಾಗರಾಜು ನಡುವೆ ಜಗಳವಾಗಿದ್ದು ಶಶಿಕಲಾ ಅವರು ನಾಗರಾಜುವನ್ನು ಕೆಳಕ್ಕೆ ಕೆಡವಿ ಆತನ ಮರ್ಮಾಂಗ, ಹೊಟ್ಟೆ ಹಾಗೂ ಇತರ ಕಡೆಗೆ ಕಾಲಿನಿಂದ ಒದ್ದು ನೋವುಂಟು ಮಾಡಿದ್ದು ಇದರಿಂದ ನಾಗರಾಜು ಮೃತಪಟ್ಟಿರುವುದು ರುಜುವಾತಾಗಿದೆ ಎಂದು ತೀರ್ಮಾನಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಆರೋಪಿಗೆ 2 ವರ್ಷಗಳ ಕಾಲ ಕಾರಾಗೃಹ ವಾಸ ಶಿಕ್ಷೆ ವಿಧಿಸಿ ಜನವರಿ 6ರಂದು ತೀರ್ಪು ನೀಡಿದ್ದಾರೆ.

ಚಾಮರಾಜನಗರ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 9 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿಯರು ಹಾಗೂ ಕಾರ್ಯಕರ್ತೆ ಹುದ್ದೆಗಳಿಗೆ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಟೌನ್ ವಾರ್ಡ್ ಸಂಖ್ಯೆ 4ರ ಬೀಡಿಕಾಲೋನಿ (ಇತರೆ), ಕುಟ್ಟೇಗೌಡನಹುಂಡಿ (ಸಾಮಾನ್ಯ) (ಮರು ಪ್ರಕಟಣೆ), ಹರದನಹಳ್ಳಿಯ 2ನೇ ಕೇಂದ್ರ (ಸಾಮಾನ್ಯ) (ಮರುಪ್ರಕಟಣೆ), ಹರದನಹಳ್ಳಿ 4ನೇ ಕೇಂದ್ರ (ಪರಿಶಿಷ್ಟ ಪಂಗಡ) (ಮರುಪ್ರಕಟಣೆ)ದಲ್ಲಿ ಸಹಾಯಕಿಯರ ಹುದ್ದೆಗಳು ಇವೆ.
ಅಮಚವಾಡಿಯ 6ನೇ ಕೇಂದ್ರದಲ್ಲಿ (ಪರಿಶಿಷ್ಟ ಜಾತಿ) ಕಾರ್ಯಕರ್ತೆ ಹುದ್ದೆ ಇದÉ.
ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಡನೆ ಭರ್ತಿ ಮಾಡಿದ ಅರ್ಜಿಯನ್ನು ಜನವರಿ 25ರೊಳಗೆ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯಲ್ಲಿ ಇಡಲಾಗಿರುವ ಟೆಂಡರ್ ಪೆಟ್ಟಿಗೆಯಲ್ಲಿ ಹಾಕಬೇಕು.
ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ  ಅಥವಾ ದೂ. ಸಂಖ್ಯೆ 08226-222603 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜ. 11ರಂದು ಜಿಲ್ಲಾ ಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟಕ್ಕೆ ಚಾಲನೆ
ಚಾಮರಾಜನಗರ, ಜ.10 (ಕರ್ನಾಟಕ ವಾರ್ತೆ):- ಕೇಂದ್ರ ಸರ್ಕಾರದ ಕ್ರೀಡಾ ಮಂತ್ರಾಲಯ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಖೇಲೋ ಇಂಡಿಯಾ ಕ್ರೀಡಾ ಕೂಟವನ್ನು ಜನವರಿ 11ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕ್ರೀಡಾಕೂಟದ ಉದ್ಘಾಟನೆಯನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ನೆರವೇರಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧÀ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರು, ನಗರಸಭೆ ಉಪಾಧÀ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಸಭೆ ಸಸಸದಸ್ಯರಾದ ಎಂ. ರಾಜಶೇಖರಮೂರ್ತಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ಎಪಿಎಂಸಿ ಚುನಾವಣೆ : ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಜ. 10 (ಕರ್ನಾಟಕ ವಾರ್ತೆ):- ಚಾಮರಾಜನಗರ ಮತ್ತು ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಜನವರಿ 12ರಂದು ಮತದಾನ ಹಾಗೂ ಜನವರಿ 14ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆಯಲ್ಲಿ ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಮತದಾನ ನಡೆಯುವ ಜನವರಿ 12ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ನಡೆಯುವ ಜನವರಿ 14ರಂದು ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕು ಕೇಂದ್ರದ ನಗರ ಪ್ರದೇಶ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಆದೇಶ ಜಾರಿಯಲ್ಲಿರುತ್ತದೆ.
ಸೂಚಿತ ಅವಧಿಯಲ್ಲಿ ಎಲ್ಲ ರೀತಿಯ ಮದ್ಯದಂಗಡಿಗಳನ್ನು ಮುಚ್ಚುವಂತೆಯೂ ಹಾಗೂ ಮಾರಾಟ, ಹಂಚಿಕೆ, ಶೇಖರಣೆ ಮಾಡದಂತೆಯೂ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಚಿಕ್ಕಲ್ಲೂರು ಜಾತ್ರೆ : ಮದ್ಯ ಮಾರಾಟ ನಿಷೇಧ
ಚಾಮರಾಜನಗರ, ಜ. 10 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ಘನನೀಲ ಸಿದ್ದಪ್ಪಾಜಿಯವರ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಜನವರಿ 12 ರಿಂದ ಜನವರಿ 16ರವರೆಗೆ ಚಿಕ್ಕಲ್ಲೂರು ಗ್ರಾಮದ ಸುತ್ತಮುತ್ತಲ 5 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ಜನವರಿ 12ರ ಬೆಳಿಗ್ಗೆ 6 ಗಂಟೆಯಿಂದ ಜನವರಿ 16ರ ಮದ್ಯರಾತ್ರಿಯವರೆಗೆ ಚಿಕ್ಕಲ್ಲೂರು ಗ್ರಾಮದ ಸುತ್ತಮುತ್ತಲ 5 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ, ದಾಸ್ತಾನು ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.



ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
ಜ. 12ರಂದು ಯುವ ಸಪ್ತಾಹಕ್ಕೆ ಚಾಲನೆ : ಜಿಲ್ಲಾಧಿಕಾರಿ ಬಿ.ರಾಮು
ಚಾಮರಾಜನಗರ, ಜ. 10 (ಕರ್ನಾಟಕ ವಾರ್ತೆ):- ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ಜನವರಿ 12 ರಿಂದ 18ರವರೆಗೆ ರಾಷ್ಟ್ರೀಯ ಯುವ ಸಪ್ತಾಹವನ್ನು ಜಿಲ್ಲೆಯಲ್ಲಿ ಆಚರಿಸಲಾಗುತ್ತಿದೆ. ಇದಕ್ಕೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಕಾರ್ಯೋನ್ಮುಖರಾಗುವಂತೆ ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಡೆದ ಅಧಿಕಾರಿಗಳು ಹಾಗೂ ಕಾಲೇಜು ಪ್ರಾಂಶುಪಾಲರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಯುವ ಸಪ್ತಾಹ ಆಚರಿಸುವ ಮೂಲಕ ಕಳೆದ ಬಾರಿಯಂತೆ ಈ ಬಾರಿಯೂ ಸಹ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾಲೇಜು, ಶಾಲೆ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಚರ್ಚಾಸ್ಪರ್ಧೆ, ಪ್ರಬಂಧ ಸ್ಪರ್ಧೆಗಳನ್ನು ನಡೆಸಲಾಗುತ್ತದೆ ಎಂದರು.
ದೇಶ ಕಟ್ಟುವ, ಭವಿಷ್ಯವನ್ನು ಉಜ್ವಲವಾಗಿ ರೂಪಿಸುವ ಆಶಯದೊಂದಿಗೆ ಭಾವೈಕ್ಯತಾ ಬೆಸುಗೆ ಹಾಕುವ ಅದ್ಭುತ ಸಾಮಥ್ರ್ಯ ಇರುವ ಯುವ ಶಕ್ತಿಗೆ ಸ್ವಾಮಿ ವಿವೇಕಾನಂದರ ತತ್ವ, ಆದರ್ಶ ಹಾಗೂ ಧ್ಯೇಯಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಇದಕ್ಕೆ ಕಾಲೇಜು ಪ್ರಾಂಶುಪಾಲರು ಅಗತ್ಯ ಕ್ರಮ ವಹಿಸಬೇಕು ಎಂದರು.
ಜನವರಿ 12ರಂದು ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮ ನಡೆಸಲಾಗುತ್ತದೆ. ಈ ಮೂಲಕ ಯುವ ಸಪ್ತಾಹಕ್ಕೆ ಚಾಲನೆ ಸಿಗಲಿದೆ. ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಅಂದು ಜಿಲ್ಲಾ ಕೇಂದ್ರದಲ್ಲಿ ಚಾಮರಾಜೇಶ್ವರ ದೇವಾಲಯದಿಂದ ವಿದ್ಯಾರ್ಥಿಗಳ ಜಾಥಾ ಆರಂಭಗೊಂಡು ಪ್ರಮುಖ ಮಾರ್ಗಗಳಲ್ಲಿ ಸಾಗಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಮುಕ್ತಾಯವಾಗಲಿದೆ. ನಂತರ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ತಾಲೂಕು ಮಟ್ಟದಲ್ಲಿ ಆಯಾ ತಹಸೀಲ್ದಾರ್, ಕಾಲೇಜು ಪ್ರಾಂಶುಪಾಲರು ಸಮಾರಂಭ ಇನ್ನಿತರ ಚಟುವಟಿಕೆಗಳನ್ನು ಆಯೋಜಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಲಾ ಅವಧಿಯ ಬೆಳಗಿನ ಪ್ರಾರ್ಥನೆ ಬಳಿಕ ಶಿಕ್ಷಕರು ವಿವೇಕಾನಂದರ ಚಿಂತನೆ, ಆದರ್ಶಗಳ ಬಗ್ಗೆ ಸಂಕ್ಷಿಪ್ತವಾಗಿ ತಿಳಿಸಬೇಕು. ಶ್ರೀ ರಾಮಕೃಷ್ಣ ಮಿಷನ್, ವಿವೇಕಾನಂದರ ಆಶ್ರಮ, ಮಠ, ಸ್ಥಳೀಯ ಸಾಹಿತಿ, ಚಿಂತನಕಾರರು, ಸರ್ಕಾರೇತರ ಸಂಘಸಂಸ್ಥೆಗಳನ್ನು ತೊಡಗಿಸಿಕೊಂಡು ಶಾಲಾಕಾಲೇಜುಗಳಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವಿವೇಕಾನಂದರ ಕುರಿತು ಕಿರು ಉಪನ್ಯಾಸವನ್ನು ಆಯೋಜಿಸಬಹುದು ಎಂದರು.
ಜನವರಿ 12ರಿಂದ 18ರವರೆಗೆ ಕಾಲೇಜುಗಳಲ್ಲಿ ಸಹ ಸಪ್ತಾಹ ನಡೆಸಬೇಕು. ಸಪ್ತಾಹದ ಅಂಗವಾಗಿ ಪ್ರತಿದಿನ ವೈವಿಧ್ಯಮಯ ಮಹತ್ವದ ಚಟುಟಿಕೆಗಳನ್ನು ಹಮ್ಮಿಕೊಳ್ಳಬೇಕು. ಸಾಕ್ಷರತೆ, ಸಮುದಾಯ ಗೀತೆ, ನಾಟಕ, ಜಾನಪದ ಸಂಸ್ಥೆ ಕಲಾವಿದರಿಂದ ಕಲಾ ಪ್ರದರ್ಶನ, ಗ್ರಾಮೀಣ ಕ್ರೀಡೆ, ಶಾಲೆ ಅಂಗನವಾಡಿಗಳಿಗೆ ಪುಸ್ತಕಗಳನ್ನು ಸಂಗ್ರಹಿಸಿ ನೀಡುವುದು, ನೇತ್ರದಾನ, ರಕ್ತದಾನ, ನೈರ್ಮಲ್ಯ ಮಹತ್ವ, ಪರಿಸರ ಸಂರಕ್ಷಣೆ ಹೀಗೆ ಹಲವು ವಿಭಿನ್ನ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜನವರಿ 18ರಂದು ರಾಜ್ಯ ಮಟ್ಟದ ಸಮಾರೋಪ ಸಮಾರಂಭವು ಬೆಂಗಳೂರಿನಲ್ಲಿ ನಡೆಯಲಿದ್ದು ಸ್ಥಳೀಯ ವಿದ್ಯಾರ್ಥಿಗಳು, ಸ್ಪರ್ಧೆಗಳಲ್ಲಿ ಆಯ್ಕೆಯಾದವರನ್ನು ಕಳುಹಿಸುವ ಏರ್ಪಾಡು ಮಾಡಲಾಗುವುದು. ಅಧಿಕಾರಿಗಳು, ಪ್ರಾಂಶುಪಾಲರು ಕಾರ್ಯಕ್ರಮಗಳ ಆಯೋಜನೆಯೊಂದಿಗೆ ಯುವ ಸಪ್ತಾಹವನ್ನು ಅರ್ಥಪೂರ್ಣವಾಗಿ ನಡೆಸಿ ಯಶಸ್ವಿಗೊಳಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಬಿ. ರಾಮು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಜಿನಾ ಮೆಲಾಕಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ, ಜಿಲ್ಲೆಯ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಯಳಂದೂರು : ವಿವಿಧ ಕೌಶÀಲ ತರಬೇತಿಗೆ ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜ. 10 (ಕರ್ನಾಟಕ ವಾರ್ತೆ):- ಯಳಂದೂರಿನ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯು ಪರಿಶಿಷ್ಟ ವರ್ಗ ಜನಾಂಗದ ನಿರುದ್ಯೋಗಿ ಯುವ ಅಭ್ಯರ್ಥಿಗಳಿಗೆ ನಾನಾ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.
ಲಘು ವಾಹನ, ಭಾರಿ ವಾಹನ ಚಾಲನಾ ತರಬೇತಿ, ಕಂಪ್ಯೂಟರ್, ಮೊಬೈಲ್ ದುರಸ್ತಿ, ಗೃಹೋಪಯೋಗಿ, ವಿದ್ಯುತ್ ಉಪಕರಣ ದುರಸ್ತಿ ಹಾಗೂ ಟೈಲರಿಂಗ್ ತರಬೇತಿ ನೀಡಲಿದೆ.
ಅಭ್ಯರ್ಥಿಗಳು ಕನಿಷ್ಟ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರಬಾರದು. ಲಘು ವಾಹನ ಚಾಲನಾ ತರಬೇತಿಗೆ 18 ರಿಂದ 35ರ ವಯೋಮಿತಿಯೊಳಗಿರಬೇಕು. ಭಾರಿ ವಾಹನ ಚಾಲನಾ ತರಬೇತಿಗೆ 21 ರಿಂದ 35ರ ವಯೋಮಿತಿಯೊಳಗಿರಬೇಕು. ಭಾರಿ ವಾಹನ ಚಾಲನಾ ತರಬೇತಿಗೆ ಲಘು ವಾಹನದ ಚಾಲನಾ ಪರವಾನಗಿ ಪಡೆದು ಒಂದು ವರ್ಷ ತುಂಬಿರಬೇಕು. ಚಾಲನಾ ತರಬೇತಿಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು. ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ನೀಡಲಾಗುತ್ತದೆ.
ಅರ್ಜಿಯನ್ನು ಯಳಂದೂರು ಪಟ್ಟಣದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಭರ್ತಿ ಮಾಡಿ 2 ಭಾವಚಿತ್ರ, ಇತರೆ ಅಗತ್ಯ ದಾಖಲೆಗಳೊಂದಿಗೆ ಜನವರಿ 16ರೊಳಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ದೂ.ಸಂ. 08226-240309 ಸಂಪರ್ಕಿಸುವಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಪರಿಸರ ಮಿತ್ತ ಶಾಲಾ ಪ್ರಶಸ್ತಿಗೆ ಆಹ್ವಾನ
ಚಾಮರಾಜನಗರ, ಜ. 10 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ವಿವಿಧ ಇಲಾಖೆ ಹಾಗೂ ವಿಜ್ಞಾನ ಪರಿಷತ್ತು ಸಹಯೋಗದಲ್ಲಿ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಸ್ಪರ್ಧೆ ಆಯೋಜಿಸಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಶಾಲಾಕಾಲೇಜುಗಳು ಮುಖ್ಯಸ್ಥರ ಮೂಲಕ ನಗರದ ವಾಣಿಯಾರ್ ಬೀದಿಯಲ್ಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಕಚೇರಿಯಲ್ಲಿ ಸ್ಪಯಂ ಮೌಲ್ಯಮಾಪನ ಪುಸ್ತಕ ಪಡೆದು ಭರ್ತಿ ಮಾಡಿ ಜನವರಿ 16ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಬಿ.ಎಂ. ಶಿವಶಂಕರ್ (ಮೊಬೈಲ್ 94491739383), ಉಪಪರಿಸರಾಧಿಕಾರಿ ಪಿ.ಕೆ. ಉಮಾಶಂಕರ್ (ಮೊ. 9448160267) ಅಥವಾ ಕಚೇರಿ ದೂರವಾಣಿ ಸಂಖ್ಯೆ 08226-223846 ಸಂಪರ್ಕಿಸಬಹುದು. ಅಲ್ಲದೆ ಇ ಮೇಲ್ ಛಿhm@ಞsಠಿಛಿb.gov.iಟಿ ಸಂಪರ್ಕಿಸಿಯೂ ಮಾಹಿತಿ ಪಡೆಯುವಂತೆ ಜಿಲ್ಲಾ ಪರಿಸರಾಧಿಕಾರಿ ಬಿ.ಎಂ. ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಳಂದ ವಿವಿಗೆ ಭೂಮಿ : ಮುಖ್ಯ ಮಂತ್ರಿಯವರಿಗೆ ಧ್ರುವನಾರಾಯಣ ಕೃತಜ್ಞತೆ
 ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲ್ಳೂಕಿನ ಉತ್ತುವಳ್ಳಿಯಲ್ಲಿ ನಳಂದ ಬೌದ್ದ ವಿಶ್ವವಿದ್ಯಾನಿಲಯ ಸ್ಥಾಪನೆಗಾಗಿ ಇಂಟರ್ ನ್ಯಾಷನಲ್ ಬುದ್ದಿಸ್ಟ್ ಮಾಂಕ್ಸ್ ಟ್ರಸ್ಟ್‍ಗೆ 25 ಎಕರೆ ಭೂಮಿ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿರುವುದಕ್ಕೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮುಖ್ಯ ಮಂತ್ರಿಯವರಾದ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವರಾದ ಕಾಗೋಡು ತಿಮ್ಮಪ್ಪರವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
 ತಾಲ್ಲೂಕಿನ ಉತ್ತುವಳ್ಳಿ ಗ್ರಾಮದ ಸ.ನಂ.117 ರಲ್ಲಿ 464.36 ಎಕರೆ ಪೈಕಿ 25ಎಕರೆ ಜಮೀನನ್ನು ಬೌದ್ದ ವಿವಿ ಸ್ಥಾಪನೆಗೆ ಮಂಜೂರು ಮಾಡಲು ಜನವರಿ 10 ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಿಲ್ಲೆಯ ಸಮಗ್ರ ಅಭಿವೃದ್ದಿಯ ಬಗ್ಗೆ ಕಾಳಜಿ ಹೊಂದಿರುವ ಮುಖ್ಯಮಂತ್ರಿಯವರಾದ ಸಿದ್ದರಾಮಯ್ಯನವರಿಗೆ ಹಾಗೂ ಕಂದಾಯ ಸಚಿವರಾದ ಕಾಗೋಡುತಿಮ್ಮಪ್ಪರವರಿಗೆ ವೈಯಕ್ತಿಕವಾಗಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು, ಸಾರ್ವಜನಿಕರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತಿರುವುದಾಗಿ ಧ್ರುವನಾರಾಯಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈಲ್ವೆ ಬಜೆಟ್‍ನಲ್ಲಿ ಜಿಲ್ಲೆಗೆ ಅನುಕೂಲತೆಗಳನ್ನು ಕಲ್ಪಿಸುವಂತೆ ಕೋರಿ ಸಂಸದ ಧ್ರುವನಾರಾಯಣ ಅವರಿಂದ ಕೇಂದ್ರ ಸಚಿವರಿಗೆ ಪತ್ರ
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಮುಂಬರುವ 2017-18ನೇ ಸಾಲಿನ ರೈಲ್ವೆ ಬಜೆಟ್‍ನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ರೈಲ್ವೆ ಅನುಕೂಲತೆಗಳನ್ನು ಕಲ್ಪಿಸುವಂತೆ ಕೋರಿ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಪ್ರಭು ಅವರಿಗೆ ವಿವರವಾದ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ನಂಜನಗೂಡು ಪಟ್ಟಣದ ಎಲ್.ಸಿ. 20ಬಿ2 ಕ್ಲಾಸ್ (ಟ್ರಾಫಿಕ್) ಕಿ.ಮೀ. 25/600-700ರಲ್ಲಿ ರೈಲ್ವೆ ಮೇಲುಸೇತುವೆ ಅಥವಾ ಕೆಳ ಸೇತುವೆಯನ್ನು ನಿರ್ಮಾಣ ಮಾಡಬೇಕು. ಏಕೆಂದರೆ ನಂಜನಗೂಡು ಪಟ್ಟಣದ ಪ್ರಮುಖ ಮಾರುಕಟ್ಟೆ ಪ್ರದೇಶವೂ ಸಹ ಇದೇ ವ್ಯಾಪ್ತಿಯಲ್ಲಿ ಇದ್ದು ಅಪಾಯಕಾರಿಯಾದ ಈ ಜಾಗದಲ್ಲಿ ಬಹಳಷ್ಟು ಜನರು ಹಾದುಹೋಗುತ್ತಿದ್ದಾರೆ. ಹೀಗಾಗಿ ರೈಲ್ವೆ ಮೇಲು ಸೇತುವೆ ಅಥವಾ ಕೆಳ ಸೇತುವೆಯನ್ನು ತುರ್ತಾಗಿ ನಿರ್ಮಾಣ ಮಾಡಬೇಕಿದೆ ಎಂದು ಲೋಕಸಭಾ ಸದಸ್ಯರು ಪ್ರಸ್ತಾಪಿಸಿದ್ದಾರೆ.
ಕವಲಂದೆ ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಬೇಕು ಮತ್ತು ಕವಲಂದೆಯಲ್ಲಿ ರೈಲ್ವೆ ಕ್ರಾಸಿಂಗ್ ಪಾಯಿಂಟ್ ಮಾಡಬೇಕು. ಚಾಮರಾಜನಗರ ಜಿಲ್ಲೆಯಿಂದ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಇಜ್ಜತ್ ಪಾಸ್ ಉಳ್ಳ 8 ಸಾವಿರ ಕಾರ್ಮಿಕರು, ವಿದ್ಯಾರ್ಥಿಗಳು, ವ್ಯಾಪಾರಿಗಳು, ಉದ್ಯೋಗಿಗಳು ಸೇರಿದಂತೆ ಇತರೆ ವರ್ಗದ ಜನರು ಚಾಮರಾಜನಗರ ಹಾಗೂ ಮೈಸೂರಿಗೆ ನಂಜನಗೂಡು ಮಾರ್ಗವಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾರೆ. ಚಾಮರಾಜನಗರ ರೈಲು ನಿಲ್ದಾಣದಿಂದ  ಮೈಸೂರು ರೈಲುನಿಲ್ದಾಣಕ್ಕೆ 65 ಕಿ.ಮೀ. ಇದೆ. ಮೈಸೂರಿನಿಂದ ನಂಜನಗೂಡು ರೈಲು ನಿಲ್ದಾಣದ ನಡುವೆ ಅಶೋಕಪುರಂ, ಕಡಕೊಳ ಹಾಗೂ ನಂಜನಗೂಡು ರೈಲು ನಿಲ್ದಾಣದಲ್ಲಿ ರೈಲ್ವೆ ಕ್ರಾಸಿಂಗ್ ಪಾಯಿಂಟ್‍ಗಳಿವೆ. ಆದರೆ ನಂಜನಗೂಡು ಚಾಮರಾಜನಗರ ನಡುವೆ 35 ಕಿ.ಮೀ. ದೂರವಿದ್ದು ಇಲ್ಲಿ ಯಾವುದೇ ರೈಲ್ವೆ ಕ್ರಾಸಿಂಗ್ ಪಾಯಿಂಟ್ ಇಲ್ಲ. ಹೀಗಾಗಿ ರೈಲು ತಡವಾಗಿ ಹೊರಟ ಸಂದರ್ಭ ಇಲ್ಲವೇ ರೈಲ್ವೆ ವೇಗನ್ ಸಂಚರಿಸುವ ವೇಳೆ ಇನ್ನಿತರ ಸಂದರ್ಭದಲ್ಲಿ ಪ್ರಯಾಣಿಕರು 45 ನಿಮಿಷದಿಂದ 1 ಗಂಟೆಗಳ ಕಾಲ ಕಾಯಬೇಕಾದ ಪರಿಸ್ಥಿತಿ ಇದೆ. ಹೀಗಾಗಿ ಕವಲಂದೆ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಜತೆಗೆ ರೈಲ್ವೆ ಪಾಯಿಂಟ್ ಮಾಡಬೇಕು. ಇದಕ್ಕಾಗಿ ಅಗತ್ಯವಿರುವ ಜಾಗ ಸಹ ಲಭ್ಯವಿದೆ ಎಂದು ಧ್ರುವನಾರಾಯಣ ಪ್ರಸ್ತಾಪಿಸಿದ್ದಾರೆ.
ಚಾಮರಾಜನಗರದಿಂದ ಬೆಂಗಳೂರಿಗೆ ಮತ್ತೊಂದು ಎಕ್ಸ್‍ಪ್ರೆಸ್ ರೈಲನ್ನು ಚಾಲನೆ ಮಾಡಬೇಕು. ಜಿಲ್ಲಾ ಕೇಂದ್ರವಾದ ಚಾಮರಾಜನಗರದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು ಈಗಾಗಲೇ ಪ್ರಾರಂಭವಾಗಿದೆ. ನೆರೆಯ ತಮಿಳುನಾಡು ಹಾಗೂ ಕೇರಳ ರಾಜ್ಯಕ್ಕೆ ಜಿಲ್ಲೆಯು ಹೊಂದಿಕೊಂಡಿದೆ. ಹೀಗಾಗಿ ವಾಣಿಜ್ಯ ಉದ್ಯಮ ಸರಕುಗಳ ಸಾಗಣೆ ಮತ್ತು ಸಕಾಲದಲ್ಲಿ ಬೆಂಗಳೂರನ್ನು ತಲುಪಲು ಎಕ್ಸ್‍ಪ್ರೆಸ್ ರೈಲು ಅಗತ್ಯವಿರುವ ಬಗ್ಗೆ ಜಿಲ್ಲೆಯ ಜನತೆಯ ಒತ್ತಾಯವಿದೆ. ಹೀಗಾಗಿ ಮತ್ತೊಂದು ಎಕ್ಸ್‍ಪÉ್ರಸ್ ರೈಲು ಸೌಲಭ್ಯವನ್ನು ಒದಗಿಸುವಂತೆ ಧ್ರುವನಾರಾಯಣ ವಿವರಿಸಿದ್ದಾರೆ.
ಚಾಮರಾಜನಗರಕ್ಕೆ ಮೈಸೂರು - ಹುಬ್ಬಳ್ಳಿ ಮತ್ತು ಮೈಸೂರು - ಶಿವಮೊಗ್ಗ ರೈಲು ಸಂಚಾರವನ್ನು ವಿಸ್ತರಿಸುವಂತೆಯೂ ಕೋರಿರುವ ಧ್ರುವನಾರಾಯಣ ಅವರು ಇದರಿಂದ ನಂಜನಗೂಡು, ತಾಂಡವಪುರ, ಕಡಕೊಳ ಕೈಗಾರಿಕಾ ಪ್ರದೇಶಕ್ಕೆ ಅನುಕೂಲವಾಗಲಿದೆ. ಜತೆಗೆ ಚಾಮರಾಜನಗರಕ್ಕೂ ಸಂಚಾರವನ್ನು ವಿಸ್ತರಣೆ ಮಾಡುವುದರಿಂದ ಇಲ್ಲಿನ ಜನರಿಗೆ ಪ್ರಯಾಣಿಸಲು ಅನುಕೂಲವಾಗಲಿದೆ ಎಂದು ಸ್ಥಳೀಯ ಜನರ ಬೇಡಿಕೆಯಾಗಿದೆ ಎಂದಿದ್ದಾರೆ.
ಚಾಮರಾಜನಗರ ರೈಲುನಿಲ್ದಾಣದಲ್ಲಿ ರೈಲ್ವೆ ಕ್ಲೀನಿಂಗ್ ಘಟಕವನ್ನು ಸ್ಥಾಪಿಸಬೇಕು. ಮೈಸೂರಿನಲ್ಲಿ ಈಗಾಗಲೇ ಇರುವ ಕ್ಲೀನಿಂಗ್ ಘಟಕದಲ್ಲಿ ಹೆಚ್ಚು ಸಂಖ್ಯೆಯ ರೈಲುಗಳು ನಿಗದಿತ ಸಮಯದಲ್ಲಿ ಇರಲು ಕಷ್ಟವಾಗಲಿದೆ. ಹೀಗಾಗಿ ಮೈಸೂರಿಗೆ ಹತ್ತಿರವಿರುವ ಚಾಮರಾಜನಗರ ರೈಲು ನಿಲ್ದಾಣದಲ್ಲಿ ಕ್ಲೀನಿಂಗ್ ಘಟಕವನ್ನು ಸ್ಥಾಪಿಸುವುದು ಅತಿ ಅವಶ್ಯವಾಗಿದೆ.
ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯ ಅವಧಿಯಲ್ಲಿ ಮತ್ತೊಂದು ರೈಲು ಸಂಚಾರ ಆರಂಭಿಸಬೇಕು. ಏಕೆಂದರೆ ಬೆಳಗಿನಿಂದ ಮಧ್ಯಾಹ್ನದ ಅವಧಿಯ ಒಟ್ಟು ನಾಲ್ಕೂವರೆ ಗಂಟೆಯ ಅವಧಿಯಲ್ಲಿ ಯಾವುದೇ ರೈಲು ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಂದು ರೈಲು ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ವಿವರಿಸಿದ್ದಾರೆ.
ಆಹಾರ ಪದಾರ್ಥಗಳ ಸಾಗಾಣಿಕೆ, ಇತರೆ ಸರಕು ರವಾನೆಗೆ ಚಾಮರಾಜನಗರ ರೈಲ್ವೆ ಇಲಾಖೆ ವ್ಯಾಪ್ತಿಯ ಪ್ರದೇಶದಲ್ಲಿ ರಸ್ತೆಯನ್ನು ಅಭಿವೃದ್ಧಿಪಡಿಸಬೇಕು. ಜಿಲ್ಲಾ ಕೇಂದ್ರವಾದ ಚಾಮರಾಜನಗರ ರೈಲು ನಿಲ್ದಾಣ ಆವರಣದಲ್ಲಿ ವಾಣಿಜ್ಯ ಸಮುಚ್ಛಯವನ್ನು ನಿರ್ಮಾಣ ಮಾಡುವುದು ತುಂಬಾ ಅಗತ್ಯವಿದೆ ಎಂದು ಮನವರಿಕೆ ಮಾಡಿದ್ದಾರೆ.
ಪ್ರಯಾಣಿಕರ ಸುಗಮ ಹಾಗೂ ತ್ವರಿತ ಸಂಚಾರಕ್ಕೆ ಮೈಸೂರು ಚಾಮರಾಜನಗರ ನಡುವಿನ 65 ಕಿ.ಮೀ. ಇರುವ ಪ್ರಸ್ತುತ ಟ್ರಾಕನ್ನು ಡಬ್ಬಲ್ ಟ್ರಾಕ್ ಆಗಿ ಪರಿವರ್ತಿಸಬೇಕು. ಕೃಷ್ಣಗಿರಿ – ಚಾಮರಾಜನಗರ ಮತ್ತು ತಲಚೆರಿ – ಮೈಸೂರು (ಗುಂಡ್ಲುಪೇಟೆ ಮಾರ್ಗ) ಯೋಜನೆಯು ಈಗಾಗಲೇ ಬಜೆಟ್‍ನಲ್ಲಿ ಸೇರ್ಪಡೆಯಾಗಿದೆ. ಆದರೆ ಸರ್ವೆ ಕಾರ್ಯ ಮತ್ತು ಅನುಷ್ಠಾನ ಪ್ರಕ್ರಿಯೆ ಬಾಕಿ ಉಳಿದಿದ್ದು ಶೀಘ್ರವೇ ಈ ಕಾರ್ಯ ಪೂರ್ಣವಾಗಬೇಕು ಎಂದು ಧ್ರುವನಾರಾಯಣ ಅವರು ಪತ್ರದಲ್ಲಿ ಕೋರಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಂಸದ ಧ್ರುವನಾರಾಯಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲನೆ
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಗುಂಡ್ಲುಪೇಟೆ ಭಾಗದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ ಕೆಲ ಭಾಗದಲ್ಲಿ ಅರಣ್ಯ ಇಲಾಖೆ ವತಿಯಿಂದ ತೊಡಕಾಗಿದ್ದ ಅಡಚಣೆಗಳು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಸಮ್ಮುಖದಲ್ಲಿ ಇಂದು ಪರಿಹಾರವಾಗಿದ್ದು ಕಾಮಗಾರಿ ಮುಂದುವರಿಕೆಗೆ ಅನುಕೂಲವಾಗಿದೆ.
ಮೇಲುಕಾಮನಹಳ್ಳಿ ಬಳಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ರಾಜ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಹೊಸಮಠ್ ಹಾಗೂ ರಾಷ್ಟ್ರೀಯ ಹೆದ್ದಾರಿ ಮುಖ್ಯ ಎಂಜಿನಿಯರ್ ಶಿವರಾಂ ಅವರೊಂದಿಗೆ ಭೇಟಿ ನೀಡಿದ ಸಂಸದ ಧ್ರುವನಾರಾಯಣ ಅವರು ವಿವರವಾಗಿ ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಧ್ರುವನಾರಾಯಣ ಅವರು ರಸ್ತೆ ವಿಸ್ತರಣೆಯಲ್ಲಿ ನಿಗದಿಮಾಡಲಾದ ಅಳತೆಗೆ ಅನುಗುಣವಾಗಿ ನೀಡಬೇಕಿರುವ ಅನುಮತಿ ಕುರಿತು ಪ್ರಸ್ತಾಪಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚಿಸಿ ಇದ್ದ ತೊಡಕುಗಳನ್ನು ನಿವಾರಿಸುವ ಸಂಬಂಧ ಪ್ರಸ್ತಾಪಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಗೋವಿಂದೇಗೌಡ, ಮುಖಂಡರಾದ ಹಂಗಳ ನಂಜಪ್ಪ, ರಾಜಶೇಖರಮೂರ್ತಿ, ಅರಣ್ಯ ಇಲಾಖೆಯ ಅಧಿಕಾರಿ ಹಿರೇಲಾಲ್ ಮತ್ತಿತರರು ಹಾಜರಿದ್ದರು.
ಜ. 12ರಂದು ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ
ಚಾಮರಾಜನಗರ, ಜ.11 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಸ್ವಾಮಿ ವಿವೇಕಾನಂದರ ದಿನಾಚರಣೆ ಹಾಗೂ ಇದರ ಅಂಗವಾಗಿ ಆಚರಿಸಲಾಗುತ್ತಿರುವ ರಾಷ್ಟ್ರೀಯ ಯುವ ಸಪ್ರಾಹ ಕಾರ್ಯಕ್ರಮದ ಉದ್ಘಾಟನೆ ಜನವರಿ 12ರಂದು ನಗರದಲ್ಲಿ ನೆರವೇರಲಿದೆ.
ಬೆಳಿಗ್ಗೆ 9.30 ಗಂಟೆಗೆ ಚಾಮರಾಜೇಶ್ವರ ದೇವಾಲಯ ಬಳಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. 11 ಗಂಟೆಗೆ  ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿಗಳಾದ ಮರಿತಿಬ್ಬೇಗೌಡ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕೆ.ಟಿ. ಶ್ರೀಕಂಠೇಗೌಡ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧÀ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.


ಜ.12ರಂದು ಕುವೆಂಪು, ಸಿದ್ಧರಾಮೇಶ್ವರ, ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ರಾಷ್ಟ್ರಕವಿ ಕುವೆಂಪು, ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಿಸುವ ಸಂಬಂಧ ಚರ್ಚಿಸಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜನವರಿ 12ರಂದು ಮಧ್ಯಾಹ್ನ 1 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯ, ಸಂಘಸಂಸ್ಥೆಗಳ ಮುಖಂಡರು, ಪ್ರತಿನಿಧಿಗಳು ಸೇರಿದಂತೆ ಸರ್ವರೂ ಭಾಗವಹಿಸಿ ಸಲಹೆ ನೀಡುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಕೋರಿದೆ.

ಜ.12ರಂದು ತೆರಕಣಾಂಬಿಯಲ್ಲಿ ಅಂಚೆ ಸಂತೆ
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಅಂಚೆ ಇಲಾಖೆ ವತಿಯಿಂದ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಜನವರಿ 12ರಂದು ಅಂಚೆಸಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂಚೆ ಕಚೇರಿ ಉಳಿತಾಯ ಖಾತೆ, ಆವರ್ತಕ ಖಾತೆ, ಸುಕನ್ಯಾ ಸಮೃದ್ಧಿ ಖಾತೆ, ಸಾರ್ವಜನಿಕ ಭವಿಷ್ಯ ನಿಧಿ ಖಾತೆ, ಪ್ರಧಾನಮಂತ್ರಿ ಜೀವನಜ್ಯೋತಿ ಬಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಸುರಕ್ಷಾ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಗ್ರಾಮೀಣ ಅಂಚೆ ಜೀವವಿಮೆ, ಇತರೆ ಅಂಚೆ ಜೀವವಿಮೆ, ಯೋಜನೆಗಳನ್ನು ಅಂಚೆಸಂತೆಯಲ್ಲಿ ಪರಿಶೀಲಿಸಿ ಸ್ವೀಕರಿಸಲಾಗುತ್ತದೆ.
ತೆರಕಣಾಂಬಿ ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಅಂಚೆಸಂತೆಯ ಸದುಪಯೋಗ ಮಾಡಿಕೊಳ್ಳುವಂತೆ ಅಂಚೆ ಅಧೀಕ್ಷಕರಾದ ಜಿ.ಸಿ. ಶ್ರೀನಿವಾಸ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಚಿಕ್ಕಲೂರು ಜಾತ್ರೆ : ಏಕಮುಖ ಸಂಚಾರ ವ್ಯವಸ್ಥೆ
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ ನಡೆಯುವ ಶ್ರೀ ಸಿದ್ದಪ್ಪಾಜಿ ಜಾತ್ರಾ ಮಹೋತ್ಸವ ಸಂಬಂಧ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಚಿಕ್ಕಲ್ಲೂರು ಗ್ರಾಮಕ್ಕೆ ಹೋಗಿ ಬರಲು ಏಕಮುಖ ಸಂಚಾರ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಜಾರಿಗೊಳಿಸಿ ಜಿಲ್ಲಾಧಿಕಾರಿಯವರಾದ ಬಿ. ರಾಮು ಆದೇಶ ಹೊರಡಿಸಿದ್ದಾರೆ.
ಚಿಕ್ಕಲ್ಲೂರು ಗ್ರಾಮಕ್ಕೆ ಆಗಮಿಸಲು ಕೊತ್ತನೂರು ಗ್ರಾಮದಿಂದ ಬಾಣೂರು ಕ್ರಾಸ್ ಬಾಣೂರು, ಸುಂಡ್ರಹಳ್ಳಿ ಮಾರ್ಗವಾಗಿ ಬರಬೇಕು. ಚಿಕ್ಕಲ್ಲೂರಿನಿಂದ ತೆರಳಲು ಬಾಣೂರು ಕ್ರಾಸ್ ಕೊತ್ತನೂರು ರಸ್ತೆ ಮಾರ್ಗವಾಗಿ ಸಾಗಬೇಕು. ಜನವರಿ 12 ರಿಂದ 16ರವರೆಗೆ ಮಾತ್ರ ತಾತ್ಕಾಲಿಕವಾಗಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.

ವಾಣಿಜ್ಯ ಪರೀಕ್ಷೆ :  ನಿಷೇದಾಜ್ಞೆ
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):- ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಗರದ ಡಯಟ್ ಹಿಂಭಾಗದಲ್ಲಿರುವ ಆದರ್ಶ ವಿದ್ಯಾಲಯ, ಕಸ್ತೂರಬಾ ವಿದ್ಯಾರ್ಥಿನಿಲಯ ಕಟ್ಟಡದಲ್ಲಿ ಜನವರಿ 16 ರಿಂದ 23ರವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ.
ವಾಣಿಜ್ಯ ಪರೀಕ್ಷೆ (ಬೆರಳಚ್ಚು, ಶೀಘ್ರಲಿಪಿ, ಮುದ್ರಣ) ನಡೆಯುವ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ಆದೇಶ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5.30 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ನಿಷೇದಾಜ್ಞೆ ಆದೇಶವು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ಹಾಗೂ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ.
ಜನವರಿ 13ರಿಂದ ಭತ್ತ ಖರೀದಿ ಕೇಂದ್ರ ಆರಂಭ:ಜಿಲ್ಲಾಧಿಕಾರಿ ಬಿ.ರಾಮು
ಚಾಮರಾಜನಗರ, ಜ. 11 (ಕರ್ನಾಟಕ ವಾರ್ತೆ):-  ಬೆಂಬಲ ಬೆಲೆ ಯೋಜನೆಯಡಿ ರೈತರು, ಬೆಳೆಗಾರರಿಂದ ಭತ್ತ ಖರೀದಿಸುವ ಸಲುವಾಗಿ ಜನವರಿ 13ರಿಂದ ಸಂತೆಮರಹಳ್ಳಿ ಹಾಗೂ ಕೊಳ್ಳೇಗಾಲ ಎ.ಪಿ.ಎಂ.ಸಿ. ಅವರಣದಲ್ಲಿ ಖರೀದಿ ಕೇಂದ್ರಗಳು ಪ್ರಾರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಬಿ.ರಾಮು ಅವರು ತಿಳಿಸಿದ್ದಾರೆ,
ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್‍ಗೆ 1470 ರೂ ದರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯ ಸರ್ಕಾರದ 100 ರೂ ಪ್ರೋತ್ಸಾಹ ಧನ ನೀಡಿ ಪ್ರತಿ ಕ್ವಿಂಟಾಲ್‍ಗೆÉ 1570 ರೂ ದರದಲ್ಲಿ ಖರೀದಿ ಕೇಂದ್ರಗಳಲ್ಲಿ ಭತ್ತವನ್ನು ರೈತರು ಬೆಳೆಗಾರರಿಂದ ಖರೀದಿಸಲಾಗುತ್ತದೆ. ಗ್ರೇಡ್.ಎ. ಭತ್ತಕ್ಕೆ 1510 ರೂ ಅನ್ನು ಕೇಂದ್ರ ಸರ್ಕಾರ ನಿÀಗದಿ ಮಾಡಿದ್ದು. ರಾಜ್ಯ ಸರ್ಕಾರ ಇದಕ್ಕೆ 60 ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದ್ದು  1570 ರೂ ದರದಲ್ಲಿ ಖರೀದಿಸಲಾಗುತ್ತದೆ.
 ಭತ್ತ ಖರೀದಿಸುವ ಸಂದರ್ಭದಲ್ಲಿ ರೈತರು, ಬೆಳೆಗಾರರು ಸರ್ವೆ ನಂಬರಿನ ಪ್ರಸಕ್ತ ಸಾಲಿನ ಪಹಣಿ ಪತ್ರ, ಕಂದಾಯ ಇಲಾಖೆಯಿಂದ ಪಡೆಯಲಾಗಿರುವ ಬೆಳೆ ದೃಢೀಕರಣ ಪತ್ರ ಹಾಗೂ ಅಂದಾಜು ಇಳುವಳಿ ಪತ್ರವನ್ನು ಹಾಜರು ಪಡಿಸಬೇಕು ವಿಳಾಸ ದೃಢೀಕರಿಸುವ ಚುನಾವಣಾ ಗುರುತಿನ ಚೀಟಿ, ಆಧಾರ್ ಕಾರ್ಡಿನಂತಹ ದಾಖಲೆ ಜೆರಾಕ್ಸ್ ಪ್ರತಿ, ರೈತರ ಹೆಸರು ಭಾವಚಿತ್ರ ಇರುವ ಹನ್ನೋಂದು ಸಂಖ್ಯೆಗಳನ್ನು ಒಳಗೊಂಡ ಬ್ಯಾಂಕ್ ಖಾತೆ ಸಂಖ್ಯೆ, ಐ.ಎಫ್.ಎಸ್.ಸಿ.ಕೋಡ್ ಇರುವ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಹಾಜರು ಪಡಿಸಬೇಕು.
ರೈತ ಕುಟುಂಬಗಳು ವಿಭಾಗವಾಗಿದ್ದು ಕುಟುಂಬದ ಸ್ಥಿರ ಅಸ್ತಿಯು ವಿಭಾಗವಾಗದೆ ಕುಟುಂಬ ಮುಖ್ಯಸ್ಥರಾದ ತಂದೆ ತಾಯಿಯ ಹೆಸರಿನಲ್ಲಿಯೇ ಪಹಣಿ ಇರುವಂತಹ ಸಂದರ್ಭದಲ್ಲಿ ಇಂತಹ ಕುಟುಂಬದವರು ಖರೀದಿ ಕೇಂದ್ರಕ್ಕೆ ಧಾನ್ಯ ತರುವಾಗ ಯಾವ ಕುಟುಂಬದವರು ಎಂಬ ಮಾಹಿತಿ, ಕುಟುಂಬ ವಿಭಾಗವಾಗಿದ್ದು ಕಂದಾಯ ದಾಖಲೆಗಳಲ್ಲಿ ಬದಲಾವಣೆ ಅಗಿಲ್ಲದಿರುವ ಬಗ್ಗೆ ಕಂದಾಯ ಅಧಿಕಾರಿಗಳಿಂದ ದೃಢೀಕರಣ ಪತ್ರವನ್ನು ಹಾಜರುಪಡಿಸಬೇಕು.
ಭತ್ತ ಖರೀದಿಸಿದ ಬಳಿಕ ರೈತರ ಖಾತೆಗೆ ಆರ್.ಟಿ.ಜಿ.ಎಸ್. ಮೂಲಕ ನಿಗದಿಪಡಿಸಿದ ಹಣವನು ಜಮೆ ಮಾಡಲಾಗುತ್ತದೆ. ಖರೀದಿಗೆ ಮುಂಚೆ ಎಫ್.ಎ.ಕ್ಯೂ.ಗುಣಮಟ್ಟವನ್ನು ದೃಢೀಕರಿಸಿಕೊಳ್ಳಲಾಗುತ್ತದೆ. ಇದಕ್ಕಾಗಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆ ಗ್ರೇಡರ್‍ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.
ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (ಕೆ.ಎಫ್.ಸಿ.ಎಸ್.ಸಿ)ಸಂಸ್ಥೆಯನ್ನುಏಜೆನ್ಸಿಯಾಗಿ ನೇಮಕ ಮಾಡಲಾಗಿದೆ. ಖರೀದಿ ಕೇಂದ್ರಗಳ ಸ್ಥಾಪನೆಗೆ ಕೆ.ಎಫ್.ಸಿ.ಎಸ್.ಸಿ. ಎಲ್ಲಾ ಕ್ರಮ ತೆಗೆದುಕೊಂಡಿದೆ. ಖರೀದಿ ಕೇಂದ್ರಗಳ ಸಿಬ್ಬಂದಿ ನೇಮಕ ಹಾಗೂ ಗುಣಮಟ್ಟದ ಗೋದಾಮುಗಳ ನಿರ್ವಹಣೆಗೆ ಸೂಚಿಸಲಾಗಿದೆ.
ಜಿಲ್ಲೆಯ ರೈತರು ಸರ್ಕಾರದ ಕನಿಷ್ಠ ಬೆಂಬಲ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಚಿಕ್ಕಲೂರು ಜಾತ್ರೆ : ಕಾನೂನು ಸುವ್ಯವಸ್ಥೆ ಪಾಲನೆಗೆ ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೆಟರ್‍ಗಳ ನೇಮಕ
ಚಾಮರಾಜನಗರ, ಜ.11 (ಕರ್ನಾಟಕ ವಾರ್ತೆ):- ಕೊಳ್ಳೇಗಾಲ ತಾಲ್ಲೂಕಿನ ಶ್ರೀ ಕ್ಷೇತ್ರ ಚಿಕ್ಕಲ್ಲೂರು ಗ್ರಾಮದಲ್ಲಿ ಜನವರಿ 12 ರಿಂದ 16 ರವರೆಗೆ ನಡೆಯುವ ಸಿದ್ದಪ್ಪಾಜಿ ಜಾತ್ರೆ ಮಹೋತ್ಸವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೆಟರ್‍ಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಬಿ.ರಾಮು ರವರು ಆದೇಶ ಹೊರಡಿಸಿದ್ದಾರೆ.
ಪ್ರಾಣಿ ಬಲಿ ನೀಡುವುದು, ಮಾರಕಾಸ್ತ್ರಗಳನ್ನು ತರುವುದನ್ನು ತಡೆಗಟ್ಟಲು ಮತ್ತು ಹೈಕೋರ್ಟ್ ನಿರ್ದೇಶನದಂತೆ ಪ್ರಾಣಿ ಬಲಿ ನಿಷೇದದ ಬಗ್ಗೆ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿ ಕ್ರಮಕೈಗೊಳ್ಳುವ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಕ್ಷಣ ಆದೇಶಗಳನ್ನು ಮಾಡುವ ಸಲುವಾಗಿ ಕೊಳ್ಳೇಗಾಲ ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಅವರೊಂದಿಗೆ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸಲು ಹೆಚ್ಚುವರಿ ಸೆಕ್ಟರ್ ಮ್ಯಾಜಿಸ್ಟ್ರೇಟರ್‍ಗಳನ್ನಾಗಿ ವಿವಿಧ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಬೆಳಿಗ್ಗೆ 8 ರಿಂದ ಮದ್ಯಾಹ್ನ 2 ಗಂಟೆವರೆಗೆ ಮೊದಲನೇ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಿಕ್ಕಲ್ಲೂರು ಹೊಸ ಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಚಿಕ್ಕಲ್ಲೂರು ಹಳೆ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಸಿದ್ದಪ್ಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಕೊತ್ತನೂರು, ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲದ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರನ್ನು, ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ನಗರಸಭೆ ಪೌರಾಯುಕ್ತರನ್ನು ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಗೆ ಕೊಳ್ಳೇಗಾಲ ತಾಲ್ಲೂಕು ಪಶು ಸಂಗೋಪನಾ ಸಹಾಯಕ ನಿರ್ದೇಶಕರನ್ನು ನೇಮಿಸಲಾಗಿದೆ.
ಮದ್ಯಾಹ್ನ 2 ರಿಂದ ರಾತ್ರಿ 10 ಗಂಟೆವರೆಗೆ ಎರಡನೇ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಿಕ್ಕಲ್ಲೂರು ಹೊಸ ಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆ ಕೊಳ್ಳೇಗಾಲದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಚಿಕ್ಕಲ್ಲೂರು ಹಳೆ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರದ ತೂಕ ಮತ್ತು ಅಳತೆ ಇಲಾಖೆಯ ಸಹಾಯಕ ನಿಯಂತ್ರಕರನ್ನು, ಸಿದ್ದಪ್ಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರದ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರನ್ನು, ಕೊತ್ತನೂರು, ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರದ ಪಶು ಸಂಗೋಪನೆ ಮತ್ತು ಪಶು ಪಾಲನೆ ಇಲಾಖೆಯ ಉಪ ನಿರ್ದೇಶಕರನ್ನು, ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರ ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆಯ ಉಪ ನಿರ್ದೇಶಕರನ್ನು ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಗೆ ಚಾಮರಾಜನಗರದ ಸ್ಥಳೀಯ ಲೆಕ್ಕ ಪರಿಶೀಲನಾ ಪರ್ತುಲದ ಹಿರಿಯ ಉಪ ನಿರ್ದೇಶಕರನ್ನು ನೇಮಿಸಲಾಗಿದೆ.
ರಾತ್ರಿ 10 ರಿಂದ ಬೆಳಿಗ್ಗೆ 8 ಗಂಟೆವರೆಗೆ ಮೂರನೇ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಚಿಕ್ಕಲ್ಲೂರು ಹೊಸ ಮಠದ ತೆರೆದ ಸುತ್ತಮುತ್ತಲಿನ ಪ್ರದೇಶಕ್ಕೆ ಚಾಮರಾಜನಗರದ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಚಿಕ್ಕಲ್ಲೂರು ಹಳೆ ಮಠದ ಸುತ್ತಮುತ್ತಲ ಪ್ರದೇಶಕ್ಕೆ ಚಾಮರಾಜನಗರದ ಲೋಕೋಪಯೋಗಿ ಇಲಾಖೆಯ 1ನೇ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಸಿದ್ದಪ್ಪಾಜಿ ದೇವಸ್ಥಾನದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಕಾಮಗೆರೆಯ ಕಾವೇರಿ ನೀರಾವರಿ ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ಕೊತ್ತನೂರು, ಬಾಣೂರು, ಸುಂಡಳ್ಳಿ ಗ್ರಾಮಗಳ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕು ಉಡುತೊರೆಹಳ್ಳ ಕಾವೇರಿ ನೀರಾವರಿ ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು, ರಾಚಪ್ಪಾಜಿ ನಗರದ ಸುತ್ತಮುತ್ತಲ ಪ್ರದೇಶಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಅಜ್ಜಿಪುರ ಕಾವೇರಿ ನೀರಾವರಿ ನಿಗಮ ನಿಯಮಿತದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಹಾಗೂ ಬಂಡಳ್ಳಿ ರಸ್ತೆ ಮಾರ್ಗದ ಸುತ್ತಮುತ್ತಲ ಪ್ರದೇಶಗಳ ವ್ಯಾಪ್ತಿಗೆ ಕೊಳ್ಳೇಗಾಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವಾಮಿ ವಿವೇಕಾನಂದ ತತ್ವ ಆದರ್ಶ ಪಾಲನೆಗೆ ಶಾಸಕರ ಸಲಹೆ
ಚಾಮರಾಜನಗರ, ಜ. 12 (ಕರ್ನಾಟಕ ವಾರ್ತೆ):- ಸ್ವಾಮಿ ವಿವೇಕಾನಂದರ ತತ್ವ ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಯುವಜನರು ಜೀವನದಲ್ಲಿ ಅಗಾಧ ಸಾಧನೆ ಮಾಡಬೇಕೆಂದು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ ಮಾಡಿದರು.
ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನಾಚರಣೆ ಹಾಗೂ ಇದರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯುವಜನರು ಸ್ವಾಮಿವಿವೇಕಾನಂದರ ವಿಚಾರಧಾರೆಗಳ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು. ಜೀವನದಲ್ಲಿ ಸ್ಪಷ್ಟ ಗುರಿಯನ್ನು ಹೊಂದಬೇಕು. ಬದುಕಿನಲ್ಲಿ ಬರುವ ಉತ್ತಮ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಸಾರ್ಥಕತೆ ಪಡೆಯಬೇಕು. ಮಹತ್ವದ  ಸಾಧನೆ ಮಾಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು.
ಸ್ವಾಮಿ ವಿವೇಕಾನಂದರು ಮಹಿಳೆಯರ ಬಗ್ಗೆ ಅಪಾರ ಗೌರವ ಹೊಂದಿದ್ದರು. ಭಾರತದಲ್ಲಿ ಮಹಿಳೆಯರ ಸ್ಥಿತಿಗತಿ ಸುಧಾರಿಸದೇ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಹೇಳಿದ್ದರು. ಗಂಡುಹೆಣ್ಣು ಹಕ್ಕಿಯ ಎರಡು ರೆಕ್ಕೆಗಳಿದ್ದಂತೆ, ಒಂದೇ ರೆಕ್ಕೆಯಿಂದ ಹಕ್ಕಿ ಹಾರಲು ಸಾಧ್ಯವಿಲ್ಲ. ಮಹಿಳೆಯರ ಪರಿಸ್ಥಿತಿ ಸುಧಾರಣೆಯಾಗಬೇಕೆಂದು ವಿವೇಕಾನಂದ ಅವರು ಪ್ರತಿಪಾದಿಸಿದ್ದರು ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಸ್ವಾಮಿ ವಿವೇಕಾನಂದ ಅವರು ಶಿಕಾಗೋದಲ್ಲಿ ನಡೆದ ಸಮ್ಮೆಳನದಲ್ಲಿ ಸೋದರ ಸೋದರಿಯರೇ ಎಂದು ಆರಂಭದಲ್ಲಿ ಸಂಬೋಧಿಸಿ ಮಾಡಿದ ಭಾಷಣ ಇಡೀ ವಿಶ್ವವೇ ಭಾರತದೆಡೆಗೆ ನೋಡುವಂತಾಯಿತು. ವಿದೇಶೀಯರು ಸಹ ಭಾರತೀಯ ಸಂಸ್ಕøತಿಯ ಅಧ್ಯಯನ ಮಾಡಲು ಪ್ರೇರಕರಾದರು ಎಂದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಯುವಜನರನ್ನು ಜಾಗೃತಿಗೊಳಿಸಲು ಸಲುವಾಗಿ ವಿವೇಕಾನಂದರು ಸ್ಪೂರ್ತಿದಾಯಕ ಚಿಂತನೆಗಳನ್ನು ಹರಿಬಿಟ್ಟಿದ್ದಾರೆ. ಯುವಪೀಳಿಗೆ ಆಧುನಿಕತೆ ಸೌಲಭ್ಯಗಳನ್ನು ಎಷ್ಟು ಅವಶ್ಯಕವೋ ಅಷ್ಟು ಮಾತ್ರ ಬಳಸಿಕೊಳ್ಳಬೇಕು. ಉದಾತ್ತ ಧ್ಯೇಂiÀi ಆದರ್ಶಗಳನ್ನು ಪರಿಪಾಲಿಸಬೇಕು. ದೇಶದ ಜವಾಬ್ದಾರಿಯುತ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ಆಶಿಸಿದರು.
ವಿವೇಕಾನಂದರ ಕುರಿತು ಸುದೀರ್ಘವಾಗಿ ಉಪನ್ಯಾಸ ನೀಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ವಿನಯ್ ಅವರು ಇಡೀ ಮಾನವ ಕುಲಕ್ಕೆ ಅತ್ಯುತ್ತಮ ಕೊಡುಗೆಯನ್ನು ನೀಡಿದವರಲ್ಲಿ ಸ್ವಾಮಿ ವಿವೇಕಾನಂದರು ಸಹ ಪ್ರಮುಖರಾಗಿದ್ದಾರೆ. ವಿವೇಕಾನಂದರ ಜನ್ಮದಿನ ಆಚರಣೆ ಸಂದರ್ಭದಲ್ಲಿ ಯುವಜನರು ವಿವೇಕಾನಂದರ ವಿಚಾರಗಳನ್ನು ಅರಿತರೆ ಕಾರ್ಯಕ್ರಮದ ಉದ್ದೇಶ ಸಫಲವಾಗುತ್ತದೆ ಎಂದರು.
ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ ಮಾತನಾಡಿದರು. ಇದೇವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವ ಅಂಗವಾಗಿ ಹೊರತಂದಿರುವ ಕಿರುಹೊತ್ತಿಗೆಯನ್ನು ಗಣ್ಯರು ಬಿಡುಗಡೆ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕøತರಾದ ಸುರೇಶ್ ಋಗ್ವೇದಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ನಗರದ ಚಾಮರಾಜೇಶ್ವರ ದೇವಾಲಯ ಬಳಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ನಗರಸಭೆ ಅಧ್ಯಕ್ಷರಾದ ರೇಣುಕ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಯುವಜನರ ಜಾಗೃತಿ ಜಾಥಾಗೆ ಚಾಲನೆ ನೀಡಿದರು.


ಜ.18ರಂದು ಶಿವಯೋಗಿ ಸಿದ್ಧರಾಮೇಶ್ವರ, ಜ. 20ರಂದು ವಿಶ್ವಮಾನವ ಕುವೆಂಪು, ಜ. 21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆಗೆ ತೀರ್ಮಾನ
ಚಾಮರಾಜನಗರ, ಜ. 12 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತದ ವತಿಯಿಂದ ಜನವರಿ 20ರಂದು ರಾಷ್ಟ್ರಕವಿ ಕುವೆಂಪು, ಜನವರಿ 18ರಂದು ಶಿವಯೋಗಿ ಸಿದ್ದರಾಮೇಶ್ವರ ಹಾಗೂ ಜನವರಿ 21ರಂದು ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಮಾತನಾಡಿ ಜಿಲ್ಲಾಡಳಿತದ ವತಿಯಿಂದ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜನೆಗೆ ಅಗತ್ಯವಿರುವ ಸಿದ್ಧತೆ ಮಾಡಲಾಗುತ್ತದೆ. ಜಯಂತಿ ಆಚರಣೆ ಸಂಬಂಧ ಮುಖಂಡರು ನೀಡುವ ಸಲಹೆಗಳನ್ನು ಪರಿಗಣಿಸಿ ಅರ್ಥಪೂರ್ಣವಾಗಿ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗುತ್ತದೆ ಎಂದರು.
ಕುವೆಂಪು ಅವರ ದಿನಾಚರಣೆ ಅಂಗವಾಗಿ ಕುವೆಂಪು ಗೀತಗಾಯನ, ಭಾಷಣ ಸ್ಪರ್ಧೆಗಳನ್ನು ಆಯೋಜಿಸಬೇಕೆಂಬ ಸಲಹೆಗಳು ಮುಖಂಡರಿಂದ ವ್ಯಕ್ತವಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿಯವರು ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕುವೆಂಪು ಅವರ ಸಾಹಿತ್ಯ ಕೃತಿಗಳ ಕುರಿತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಲು ಸೂಚಿಸಲಾಗುವುದು. ಅಲ್ಲದೆ ಕುವೆಂಪು ಕುರಿತ ಗೀತೆಗಳ ಗಾಯನ ಸ್ಪರ್ಧೆಯನ್ನೂ ಸಹ ಆಯೋಜಿಸಲಾಗುವುದು ಎಂದರು.
ಶಿವಯೋಗಿ ಸಿದ್ಧರಾಮೇಶ್ವರ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕಾರ್ಯಕ್ರಮದಂದು ಈ ಇಬ್ಬರೂ ಮಹಾತ್ಮರ ಭಾವಚಿತ್ರವನ್ನು ನಗರದ ಚಾಮರಾಜೇಶ್ವರ ದೇವಾಲಯದಿಂದ ಕಲಾತಂಡಗಳೊಡನೆ ಮೆರವಣಿಗೆ ಮಾಡಲಾಗುವುದು. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲು ಏರ್ಪಾಡು ಮಾಡಲಾಗುತ್ತದೆ. ವಚನ ಗಾಯನ ಕಾರ್ಯಕ್ರಮವನ್ನೂ ಸಹ ಕಲಾವಿದರಿಂದ ನಡೆಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.
ಕುವೆಂಪು, ಶಿವಯೋಗಿ ಸಿದ್ಧರಾಮೇಶ್ವರ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಂದು ಅವರ ವಿಚಾರಧಾರೆಗಳ ಕುರಿತು ಉಪನ್ಯಾಸ ನೀಡಲು ಹೆಚ್ಚು ಬಲ್ಲ ಉಪನ್ಯಾಸಕರನ್ನು ಆಹ್ವಾನಿಸಲಾಗುತ್ತದೆ. ಈ ಸಂಬಂಧ ಮುಖಂಡರು, ಪ್ರತಿನಿಧಿಗಳು ನೀಡುವ ಸಲಹೆಯನ್ನು ಸಹ ಪರಿಗಣಿಸಲಾಗುತ್ತದೆ ಎಂದು ಭಾರತಿ ಅವರು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಎಸ್. ವಿನಯ್, ಮುಖಂಡರಾದ ಚಾ.ರಂ. ಶ್ರೀನಿವಾಸಗೌಡ, ಗು. ಪುರುಷೋತ್ತಮ್, ರಾಮಣ್ಣ, ಪಿ. ನಾಗರಾಜು, ಪ್ರಕಾಶ್, ಮುರುಗೇಶ್, ರವಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕರಾದ ನಾಗವೇಣಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಜ. 19ರಂದು ಜಿ.ಪಂ. ಕೆಡಿಪಿ ಸಭೆ
 ಚಾಮರಾಜನಗರ, ಜ. 12 (ಕರ್ನಾಟಕ ವಾರ್ತೆ):- ಜಿಲ್ಲಾ ಪಂಚಾಯತ್ ಅನುಷ್ಠಾನಗೊಳಿಸುತ್ತಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಕಿ ಹರಾಜು
ಚಾಮರಾಜನಗರ, ಜ. 12 (ಕರ್ನಾಟಕ ವಾರ್ತೆ):- ಕೇರಳ ರಾಜ್ಯಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 139.35 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು ಇದನ್ನು ಜನವರಿ 16ರಂದು ಮಧ್ಯಾಹ್ನ 3 ಗಂಟೆಗೆ ಗುಂಡ್ಲುಪೇಟೆ ಪಟ್ಟಣದ ಕರ್ನಾಟಕ ಆಹಾರ ನಿಗಮದಲ್ಲಿ ಬಹಿರಂಗ ಹರಾಜು ಮಾಡುವ ಮೂಲಕ ವಿಲೇವಾರಿ ಮಾಡಲಾಗುತ್ತದೆ.
ಅಕ್ಕಿ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿಂತೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿತ್ತು. ಜಿಲ್ಲಾಧಿಕಾರಿಯವರು ಪ್ರಕರಣ ವಿಚಾರಣೆ ನಡೆಸಿ ಮುಟ್ಟುಗೋಲು ಹಾಕಿಕೊಂಡಿರುವ ಆಹಾರಧಾನ್ಯವನ್ನು ಬಹಿರಂಗ ಹರಾಜು ಮಾಡುವ ಮೂಲಕ ವಿಲೇವಾರಿ ಮಾಡಲು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಕ್ಕಿ ವಿಲೇವಾರಿಗೆ ಬಹಿರಂಗ ಹರಾಜು ಮಾಡಲಾಗುತ್ತಿದೆ. ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ವಿವರಗಳಿಗೆ ಗುಂಡ್ಲುಪೇಟೆ ತಾಲೂಕು ಕಚೇರಿ ಸಂಪರ್ಕಿಸುವಂತೆ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜ.13 ರಂದು ಹರವೆಯಲ್ಲಿ  ಮೇವು ನಿಧಿ ಕೇಂದ್ರ ಉದ್ಘಾಟನೆ: ರಿಯಾಯಿತಿ ದರದಲ್ಲಿ ಒಣ ಮೇವು ಮಾರಾಟ
ಚಾಮರಾಜನಗರ, ಜ. 12 (ಕರ್ನಾಟಕ ವಾರ್ತೆ):- ಬರಪರಿಸ್ಥಿತಿ ತಲೆದೋರಿರುವ ಹಿನ್ನಲೆಯಲ್ಲಿ ತಾಲ್ಲೂಕು ಆಡಳಿತವು ಮೇವು ನಿಧಿ ಕೇಂದ್ರವನ್ನು ಮತ್ತಷ್ಠು ತೆರೆಯಲು ಮುಂದಾಗಿದ್ದು ಜನವರಿ 13 ರಂದು ಹರವೆ ಗ್ರಾಮದ ರೇಷ್ಮೆ ಇಲಾಖೆಯ ಆವರಣದಲ್ಲಿ ಮೇವು ನಿಧಿ ಕೇಂದ್ರವನ್ನು ಆರಂಭಿಸುತ್ತಿದೆ.
ಜನವರಿ 13 ರಂದು ಬೆಳಿಗ್ಗೆ 9.30 ಗಂಟೆಗೆ ಮೇವು ನಿಧಿ ಕೇಂದ್ರವನ್ನು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಉದ್ಘಾಟಿಸಲಿದ್ದಾರೆ.
ಮೇವು ನಿಧಿ ಕೇಂದ್ರದಲ್ಲಿ ಒಣ ಜೋಳದ ದಂಟನ್ನು ದಾಸ್ತಾನು ಮಾಡಲಾಗಿದೆ. ಸರ್ಕಾರಿ ದರದಂತೆ ಪ್ರತಿ ಟನ್ ಮೇವಿಗೆ 6000 ರೂ. ನಿಗದಿ ಮಾಡಲಾಗಿದ್ದು, ಇದರ ಶೇಕಡ 50 ರಷ್ಟು ರಿಯಾಯಿತಿ ದರದಲ್ಲಿ ಅಂದರೆ 3000 ರೂ. ಪಾವತಿಸಿ ಮೇವು ಖರೀದಿಸಬಹುದಾಗಿದೆ. ಮೇವು ಕೊರತೆಯಿರುವ ಜಾನುವಾರು ಮಾಲೀಕರು ಸ್ಥಳೀಯ ಪಶು ವೈದ್ಯಾಧಿಕಾರಿಗಳಿಂದ ದೃಡೀಕರಣ ಪತ್ರ ಪಡೆದು ರಿಯಾಯಿತಿ ದರದಲ್ಲಿ ಮೇವು ಖರೀದಿಸುವಂತೆ ತಹಶೀಲ್ದಾರ್ ಕೆ. ಪುರಂದರ ಹಾಗೂ ಪಶುಪಾಲನೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಜಿ. ನಟರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ.
ಟಿಇಟಿ : ಪರೀಕ್ಷಾ ಕೇಂದ್ರ ಮೊಬೈಲ್, ಎಲೆಕ್ಟ್ರಾನಿಕ್ಸ್ ವಸ್ತು ನಿಷೇಧ
ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- ಶಿಕ್ಷಕರ ಅರ್ಹತಾ ಪರೀಕ್ಷೆಯು ಜನವರಿ 15ರಂದು ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ಯಾವುದೇ ತರಹದ ಎಲೆಕ್ಟ್ರಾನಿಕ್ಸ್ ವಸ್ತುಗಳು ಹಾಗೂ ಮೊಬೈಲ್‍ಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜೆಎಸ್‍ಎಸ್ ಬಾಲಕಿಯರ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು, ಸೇವಾ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸಿ ಆರ್ ಬಾಲರ ಪಟ್ಟಣ ಪ್ರೌಢಶಾಲೆ, ಜೆಎಸ್‍ಎಸ್ ಬಾಲಕರ ಪ್ರೌಢಶಾಲೆ, ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು, ಸೇಂಟ್ ಪೌಲ್ ಪ್ರೌಢಶಾಲೆ, ಸೇಂಟ್ ಜೋಸೆಫ್ ಪ್ರೌಢಶಾಲೆ, ಸೇವಾ ಭಾರತಿ ಪ್ರಥಮದರ್ಜೆ ಕಾಲೇಜು, ಸೇವಾ ಭಾರತಿ ಪದವಿಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜ.16ರಂದು ಯುವ ಸಪ್ತಾಹದ ಅಂಗವಾಗಿ ಗ್ರಾಮೀಣ ಕ್ರೀಡೋತ್ಸವ
ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಸ್ವಾಮಿ ವಿವೇಕಾನಂದರ 154ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಯುವ ಸಪ್ತಾಹದ ಅಂಗವಾಗಿ ಜನವರಿ 16ರಂದು ಗ್ರಾಮೀಣ ಕ್ರೀಡೋತ್ಸವ (ದೇಶೀಯ ಕ್ರೀಡೆಗಳು) ಆಯೋಜಿಸಿದೆ.
ಯುವಕರಿಗೆ ಸಾಮೂಹಿಕ ರಸ್ತೆ ಓಟ, ಹಗ್ಗ ಜಗ್ಗಾಟ, ಒಂಟಿ ಕಾಲಿನ ಓಟ, ಸ್ಲೋ ಸೈಕಲ್ ರೇಸ್, ಮೂರು ಕಾಲಿನ ಓಟ ಸ್ಪರ್ಧೆಗಳಿವೆ. ಯುವತಿಯರಿಗೆ ರಂಗೋಲಿ ಸ್ಪರ್ಧೆ, ಮ್ಯೂಸಿಕಲ್ ಚೇರ್, ಲೆಮನ್ ಅಂಡ್ ಸ್ಪೂನ್, ಸಾಮೂಹಿಕ ರಸ್ತೆ ಓಟ, ಲಕ್ಕಿ ಸ್ಟೇಷನ್ ಸ್ಪರ್ಧೆಗಳಿವೆ.
ಜಿಲ್ಲೆಯ ಎಲÁ್ಲ ಯುವಕ ಯುವತಿಯರು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರ ಮೊಬೈಲ್ ಸಂಖ್ಯೆ 9611172984 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಜ. 14ರಂದು ಮಾತ್ರ ಮಂಗಲ ಗೋಶಾಲೆ ತಾತ್ಕಾಲಿಕ ಸ್ಥಗಿತ
 ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನ ಮಂಗಲ ಗ್ರಾಮದಲ್ಲಿ ತೆರೆಯಲಾಗಿರುವ ಗೋಶಾಲೆಯಲ್ಲಿ ಸೋಂಕು ನಿವಾರಕ ಔಷಧಿ ಸಿಂಪಡಿಸುವ ಕಾರ್ಯ ನಡೆಯುತ್ತಿದೆ. ಹೀಗಾಗಿ ಜನವರಿ 14ರಂದು ಒಂದು ದಿನದ ಮಟ್ಟಿಗೆ ಗೋಶಾಲೆ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ರೈತಬಾಂಧವರು ಸಹಕರಿಸುವಂತೆ ತಹಸೀಲ್ದಾರ್ ಕೆ. ಪುರಂಧರ ಮತ್ತು ಪಶುಪಾಲನಾ ಸಹಾಯಕ ನಿರ್ದೇಶಕರಾದ ಡಾ. ಜಿ. ನಟರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ.

ಫ್ಯಾಷನ್ ಟೆಕ್ನಾಲಜಿ ಕೋರ್ಸು ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನ್ಯಾಷನಲ್ ಇನ್ಸ್‍ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ಮೂಲಕ ಫ್ಯಾಷನ್ ಟೆಕ್ನಾಲಜಿಗೆ ಸಂಬಂಧಿಸಿದ ವಿವಿಧ ಕೋರ್ಸುಗಳ ತರಬೇತಿ ನೀಡಲಿದ್ದು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಗಾರ್ಮೆಂಟ್ ಮ್ಯಾನ್ಯುಫ್ಯಾಕ್ಚರಿಂಗ್ ಟೆಕ್ನಾಲಜಿ (ಡೆವಲಪಿಂಗ್ ಲೈನ್ ಸೂಪರ್‍ವೈಸರ್) ಅಪೇರಲ್ ಕ್ವಾಲಿಟಿ ಕಂಟ್ರೋಲ್ ಪ್ರಾಡಕ್ಟ್ ಅನಾಲಿಸಿಸ್ ಮತ್ತು ಅಶ್ಯೂರೆನ್ಸ್, ಇಂಡಸ್ಟರಿಯಲ್ ಪ್ಯಾಟ್ರನ್ ಮೇಕಿಂಗ್ (ಡೆವಲಪಿಂಗ್ ಪ್ರಾಟ್ರನ್ ಮಾಸ್ಟರ್ಸ್) ತರಬೇತಿಯನ್ನು ಪಡೆಯಬಹುದು. ತರಬೇತಿ ಅವಧಿಯು 6 ತಿಂಗಳ ಅವಧಿಯದ್ದಾಗಿದೆ.
ಅಭ್ಯರ್ಥಿಗಳು ದ್ವಿತೀಯ ಪಿಯುಸಿ ತೇರ್ಗಡೆಯಾಗಿದ್ದು 18 ರಿಂದ 35ರ ವಯೋಮಿತಿಯೊಳಗಿರಬೇಕು.
ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿ ಜನವರಿ 17ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನೋಡುವಂತೆ ಪ್ರಕಟಣೆ ತಿಳಿಸಿದೆ.
ಡಿಇಡಿ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- 2016-17ನೆ ಸಾಲಿನ 2 ವರ್ಷಗಳ ಡಿಇಡಿ ಕೋರ್ಸಿನ ಪ್ರವೇಶಕ್ಕೆ ಸರ್ಕಾರಿ ಕೋಟಾದಡಿ ಅರ್ಜಿ ಸಲ್ಲಿಸಲು ಜನವರಿ 16ರವರೆಗೆ ಅವಕಾಶ ವಿಸ್ತರಿಸಲಾಗಿದೆ.
ಆನ್ ಲೈನ್ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಿದೆ. ವಿವರಗಳಿಗೆ ವೆಬ್ ಸೈಟ್ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನೋಡುವಂತೆ ಪ್ರಕಟಣೆ ತಿಳಿಸಿದೆ.

ವಿವಿಧ ತರಬೇತಿಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗಾಗಿ ವಿವಿಧ ತರಬೇತಿಗಳನ್ನು ಉಚಿತವಾಗಿ ನೀಡಲಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಫ್ಯಾಷನ್ ಡಿಸೈನಿಂಗ್, ಬ್ಯೂಟಿ ಪಾರ್ಲರ್ ಮ್ಯಾನೇಜ್‍ಮೆಂಟ್, ಆಹಾರ ಸಂಸ್ಕರಣೆ, ಬೇಸಿಕ್ ಮತ್ತು ಟ್ಯಾಲಿ, ಕಂಪ್ಯೂಟರ್ ಹಾರ್ಡ್‍ವೇರ್ ಮತ್ತು ನೆಟ್ ವರ್ಕಿಂಗ್, ಡಿಟಿಪಿ, ವೆಬ್ ಡಿಸೈನಿಂಗ್, ಗ್ರಾಫಿಕ್ ಡಿಸೈನಿಂಗ್, ಡಿಪ್ಲೊಮಾ ಇನ್ ಕಂಪ್ಯೂಟರ್ ಅಪ್ಲಿಕೇಷನ್ ಸೇರಿದಂತೆ ವಿವಿಧ ಕೌಶಲ ತರಬೇತಿ ಪಡೆಯಬಹುದು.
ಅಭ್ಯರ್ಥಿಗಳು 18 ರಿಂದ 45ರ ವಯೋಮಿತಿಯೊಳಗಿರಬೇಕು. ವಾರ್ಷಿಕ ಆದಾಯ 40 ಸಾವಿರ ರೂ. ಮೀರಿರಬಾರದು. ಅಂಗವಿಕಲರು, ಅಲ್ಪಸಂಖ್ಯಾತರು, ವಿಧವೆಯರು, ಲಿಂಗತ್ವ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆ ಮಹಿಳೆ, ನಿರ್ಗತಿಕರಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿಯನ್ನು ಕೊಳ್ಳೇಗಾಲ, ಯಳಂದೂರು ಹಾಗೂ ಗುಂಡ್ಲುಪೇಟೆ ತಾಲೂಕಿನ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಸಂಸ್ಥೆಗಳಲ್ಲಿ ಪಡೆಯಬಹುದು. ಚಾಮರಾಜನಗರ ತಾಲೂಕಿನ ಅಭ್ಯರ್ಥಿಗಳು ಮರಿಯಾಲದಲ್ಲಿರುವ ಜೆಎಸ್‍ಎಸ್ ರುಡ್ ಸೆಟ್ ಸಂಸ್ಥೆಯಲ್ಲಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ವಯಸ್ಸಿನ ದೃಢೀಕರಣ ದಾಖಲೆ, ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.
ಅರ್ಜಿಯನ್ನು ಆಯಾ ಸಂಸ್ಥೆಗೆ ಜನವರಿ 20ರೊಳಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಆಯಾ ತರಬೇತಿ ಸಂಸ್ಥೆ ಅಥವಾ ನಗರದ ಜಿಲ್ಲಾಡಳಿತ ಭವನದಲ್ಲಿರುವ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸರ್ಕಾರಿ ನೌಕರರ ಕ್ರೀಡಾಕೂಟ : ಗುರುತಿನ ಪತ್ರ ವಿತರಣೆ
ಚಾಮರಾಜನಗರ, ಜ. 13 (ಕರ್ನಾಟಕ ವಾರ್ತೆ):- 2015-16ನೇ ಸಾಲಿನ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವು ಜನವರಿ 20 ರಿಂದ 22ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದ್ದು ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ವಿಜೇತರಾಗಿರುವವರು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಗುರುತಿನ ಪತ್ರ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.
ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ವಿವರವನ್ನು ಜನವರಿ 18ರೊಳಗೆ ನಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ನೀಡಿ ಗುರುತಿನ ಪತ್ರ ಪಡೆದುಕೊಳ್ಳಬೇಕು.
ಸ್ಪರ್ಧಿಗಳು ಜನವರಿ 19ರಂದು ಸಂಜೆ 5 ಗಂಟೆಗೆ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು. ವಿವರಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ (ದೂ.ಸಂ. 08226-4932 ಅಥವಾ ಮೊಬೈಲ್ 9880211027, 9611172984, 9482718278) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.













































 



No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು