Friday, 3 February 2017

03-02-2017 ನಗರದಲ್ಲಿ ಚಿತ್ರೋತ್ಸವ ಸಪ್ತಾಹಕ್ಕೆ ಅರ್ಥಪೂರ್ಣ ಚಾಲನೆ

ನಗರದಲ್ಲಿ ಚಿತ್ರೋತ್ಸವ ಸಪ್ತಾಹಕ್ಕೆ ಅರ್ಥಪೂರ್ಣ ಚಾಲನೆ ಚಾಮರಾಜನಗರ, ಫೆ. 03 (ಕರ್ನಾಟಕ ವಾರ್ತೆ):- ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಚಲನಚಿತ್ರಗಳು ಜನಸಾಮಾನ್ಯರಿಗೆ ತಲುಪಲಿ ಎಂಬ ಉದ್ದೇಶದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಚಿತ್ರೋತ್ಸವ ಸಪ್ತಾಹಕ್ಕೆ ಇಂದು ನಗರದಲ್ಲಿ ಅರ್ಥಪೂರ್ಣವಾಗಿ ಚಾಲನೆ ದೊರೆಯಿತು. ನಗರದ ಸಿಂಹ ಮೂವಿ ಪ್ಯಾರಡೈಸ್ ಚಿತ್ರಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರೆರೆಯುವ ಮೂಲಕ ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ಅವರು ಒಂದು ವಾರಗಳ ಕಾಲ ನಡೆಯಲಿರುವ ಸಿನಿಮೋತ್ಸವವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಭಾರತಿ ಅವರು ಚಲನಚಿತ್ರ ಮಾಧ್ಯಮ ಅತ್ಯಂತ ಪ್ರಭಾವಶಾಲಿಯಾದದ್ದು. ಹೀಗಾಗಿ ಸಮಾಜದ ಸ್ವಾಸ್ಥ್ಯ ಕಾಪಾಡುವ ಹಾಗೂ ಉತ್ತಮ ಮೌಲ್ಯ ಸಂದೇಶಗಳನ್ನು ಬಿತ್ತುವ ಚಲನಚಿತ್ರಗಳು ಹೆಚ್ಚು ಸಂಖ್ಯೆಯಲ್ಲಿ ಬರಬೇಕಿದೆ ಎಂದರು. ಸದಭಿರುಚಿಯ ಚಲನಚಿತ್ರಗಳಿಗೆ ಎಂದಿಗೂ ಪ್ರೋತ್ಸಾಹ ಇದ್ದೇ ಇರುತ್ತದೆ. ಕೆಲ ಚಿತ್ರಗಳು ವಿಶೇಷವಾಗಿ ಮಹಿಳೆಯರನ್ನು ಸಹ ಮನಮುಟ್ಟಿದ್ದು ಕೆಲ ಗುಣಾತ್ಮಕ ಚಿಂತನೆ ಬದಲಾವಣೆಗಳಿಗೆ ಕಾರಣವಾಗಿವೆ. ಇಂದಿಗೂ ಉತ್ತಮ, ಸಮಾಜಮುಖಿ ಹಾಗೂ ಕಥಾವಸ್ತುವುಳ್ಳ ಚಿತ್ರಗಳನ್ನು ನೋಡುವವರ ಸಂಖ್ಯೆಯೂ ಸಾಕಷ್ಟಿದೆ ಎಂದು ಭಾರತಿ ಅವರು ಹೇಳಿದರು. ಪ್ರಶಸ್ತಿ ಪಡೆದ ಚಲನಚಿತ್ರಗಳನ್ನು ಜನಸಾಮಾನ್ಯರು ವೀಕ್ಷಿಸಲಿ ಎಂಬ ಕಳಕಳಿಯೊಂದಿಗೆ ವಾರ್ತಾ ಮತ್ತು ಸಾವರ್Àಜನಿಕ ಸಂಪರ್ಕ ಇಲಾಖೆ ಒಂದು ವಾರ ಅವಧಿಯಲ್ಲಿ ಐದು ಚಲನಚಿತ್ರಗಳನ್ನು ಉಚಿತವಾಗಿ ಪ್ರದರ್ಶಿಸುತ್ತಿದೆ. ಈ ಅವಕಾಶವನ್ನು ಜಿಲ್ಲೆಯ ಜನತೆ ಸದುಪಯೋಗ ಮಾಡಿಕೊಳ್ಳಬೇಕು. ಚಿತ್ರೋತ್ಸವ ಆಯೋಜಿಸಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯ ಪ್ರಶಂಸನೀಯವಾಗಿದೆ. ಚಿತ್ರೋತ್ಸವಕ್ಕೆ ಸಹಕರಿಸಿರುವ ಸಿಂಹ ಮೂವಿ ಪ್ಯಾರಡೈಸ್ ಮಾಲೀಕರಾದ ಜಯಸಿಂಹ ಅವರಿಗೂ ಧನ್ಯವಾದ ಅರ್ಪಿಸುವುದಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಡಿ. ಭಾರತಿ ತಿಳಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವಾರ್ತಾ ಸಹಾಯಕರಾದ ಎ. ರಮೇಶ್, ಸಿಂಹ ಮೂವಿ ಪ್ಯಾರಡೈಸ್ ಮಾಲೀಕರಾದ ಜಯಸಿಂಹ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಚಿತ್ರಪ್ರದರ್ಶನ ವಿವರ: ಫೆಬ್ರವರಿ 9ರವರೆಗೆ ಸಿಂಹ ಮೂವಿ ಪ್ಯಾರಡೈಸ್ ಚಿತ್ರಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ 2015ನೇ ಕ್ಯಾಲೆಂಡರ್ ವರ್ಷದ ಕನ್ನಡ ಹಾಗೂ ಪ್ರಾದೇಶಿಕ ಭಾಷಾ ಚಲನಚಿತ್ರಗಳಲ್ಲಿ ರಾಜ್ಯ ಪ್ರಶಸ್ತಿಗೆ ಭಾಜನವಾಗಿರುವ ಕನ್ನಡದ ಐದು ಸಿನಿಮಾಗಳನ್ನು ಪ್ರದರ್ಶಿಸಲಾಗುವುದು. ಫೆಬ್ರವರಿ 4ರಂದು ಶಿವಯೋಗಿ ಶ್ರೀಪುಟ್ಟಯ್ಯಜ್ಜ, ಫೆಬ್ರವರಿ 6ರಂದು ಕೃಷ್ಣಲೀಲಾ, ಫೆಬ್ರವರಿ 7ರಂದು ರಂಗಿತರಂಗ, ಫೆಬ್ರವರಿ 8ರಂದು ತಿಥಿ ಹಾಗೂ ಫೆಬ್ರವರಿ 9ರಂದು ಮೈತ್ರಿ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ. ಪ್ರವೇಶ ಉಚಿತವಾಗಿದೆ. ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜೀವನ ಸಾಧನೆ ಬಿಂಬಿಸುವ ವಿನೂತನ ಕಾರ್ಯಕ್ರಮ ಫೆ. 4ರಂದು ನಗರದಲ್ಲಿ ಭಾರತ ಭಾಗ್ಯ ವಿಧಾತ : ಧ್ವನಿ - ಬೆಳಕು; ದೃಶ್ಯ ವೈಭವಗಳ ರೂಪಕ ಚಾಮರಾಜನಗರ, ಫೆ. 03 (ಕರ್ನಾಟಕ ವಾರ್ತೆ):- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆಯ ವರ್ಷವನ್ನಾಗಿ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್‍ನ ಸಂಯುಕ್ತ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಸಾಧನೆಗಳನ್ನು ಬಿಂಬಿಸುವ ವಿನೂತನ ಧ್ವನಿ-ಬೆಳಕು ಕಾರ್ಯಕ್ರಮವನ್ನು ಭಾರತ ಭಾಗ್ಯ ವಿಧಾತ ಎಂಬ ಹೆಸರಿನಲ್ಲಿ ನಗರದ ಶ್ರೀ ಚಾಮರಾಜೇಶ್ವರ ದೇವಾಲಯ ಮುಂಭಾಗದಲ್ಲಿ ಫೆಬ್ರವರಿ 4ರಂದು ಸಂಜೆ 6 ಗಂಟೆಗೆ ಹಮ್ಮಿಕೊಂಡಿದೆ. “ಭಾರತ ಭಾಗ್ಯ ವಿಧಾತ” – ಇದು ಭಾರತದ ತಳ ಸಮುದಾಯಗಳ ಆತ್ಮಸ್ಥೈರ್ಯವನ್ನು ನೂರ್ಮುಡಿಗೊಳಿಸಿದ ಮಹಾ ಚೇತನದ ಜೀವನ ಚರಿತೆ. ನೊಂದವರ ನೋವಿಗೆ ದನಿಯಾಗಿ ನಿಂತ ಧೀಮಂತ ನಾಯಕನ ಆತ್ಮಕತೆ. ತನ್ನ ಪ್ರತಿಭೆ, ಪರಿಶ್ರಮಗಳಿಂದ ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪದವಿ ಪುರಸ್ಕಾರ ಗಳಿಸಿದ ಆರ್ಥಿಕ ತಜ್ಞನ ಯಶೋಗಾಥೆ. ಭಾರತ ಸಂವಿಧಾನದ ಶಿಲ್ಪಿಯೆಂದೇ ಖ್ಯಾತರಾದ ಮಹಾ ಮಾನವತಾವಾದಿಯಾದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವಗಾಥೆ. ನಮ್ಮ ಭಾರತ ದೇಶ ಹಲವಾರು ಮಹನೀಯರುಗಳ ಕರ್ಮ ಭೂಮಿ. ಸತ್ಯ, ಶಾಂತಿ, ಅಹಿಂಸೆಯೆಂಬ ಮಹಾ ಮೌಲ್ಯಗಳ ಮೂಲಕ ನಮ್ಮ ನಾಡಿಗೆ ಸ್ವಾತಂತ್ರ್ಯ ದೊರಕಿಸಿ, ಭಾರತದ ರಾಷ್ಟ್ರಪಿತನೆಂಬ ಮಹಾಗೌರವಕ್ಕೆ ಪಾತ್ರರಾದವರು ಮಹಾತ್ಮ ಗಾಂಧೀಜಿ. ಹಾಗೆಯೇ ನಮ್ಮ ಭಾರತದ ತಳ ಸಮುದಾಯಗಳ ಆತ್ಮಸ್ಥೈರ್ಯಕ್ಕೆ ಅಡಿಗಲ್ಲಾಗಿ ನಿಂತು ಶತಮಾನಗಳ ಶೋಷಣೆಗೆ ಸಂವಿಧಾನ ರಚನೆಯ ಮೂಲಕ ವಿದಾಯ ಹೇಳಿದವರು ಮಹಾ ಮಾನವತಾವಾದಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್. ಡಾ. ಬಿ.ಆರ್. ಅಂಬೇಡ್ಕರ್ ಭಾರತದ ತಳ ಸಮುದಾಯದ ಸ್ಫೂರ್ತಿಯ ಸೆಲೆ, ನೊಂದವರ ಎದೆಯಾಳದ ಆತ್ಮಸ್ಥೈರ್ಯದ ಹಾಡು, ದಮನಿತ ಸಮುದಾಯದ ಚೈತನ್ಯ ಶಕ್ತಿ, ಭಾರತ ಸಂವಿಧಾನದ ಮಹಾಶಿಲ್ಪಿ. ಹಲವಾರು ರಾಷ್ಟ್ರಗಳ ಸಂವಿಧಾನಗಳನ್ನು ತಳಸ್ಪರ್ಶಿಯಾಗಿ ಅಧ್ಯಯನ ಮಾಡಿ ಭಾರತದಲ್ಲಿ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಪವಿತ್ರ ಸಂವಿಧಾನವನ್ನು ರಚಿಸಿಕೊಟ್ಟ ಮಹಾನ್ ಸಾಂವಿಧಾನಿಕ ತಜ್ಞರು. ಮಹಾರಾಷ್ಟ್ರದ ಮೆಹರ್ ಎಂಬ ತಳಸಮುದಾಯದಲ್ಲಿ ಜನಿಸಿದ ಅಂಬೇಡ್ಕರ್ ಅಪಮಾನಗಳ ನಡುವೆಯೇ ಬಾಳಿ ಬದುಕಿ ಭಾರತದ ಮಹಾನ್ ಚೇತನವಾಗಿ ಬೆಳಗಿದ ಕಥೆ ಬೆರಗುಗೊಳಿಸುವಂತಹುದು. ಶಾಲಾ ಬಾಲಕನಾಗಿದ್ದಾಗ ತನ್ನದೇ ನಾಡಿನಲ್ಲಿ ಮೇಲ್ವರ್ಗದವರಿಂದ ಅವಮಾನಿತರಾಗಿ ಗಾಡಿಯಿಂದ ಕೆಳಗೆ ದೂಡಿಸಿಕೊಂಡು ಅಪಮಾನ ಅನುಭವಿಸಿದ ಘಟನೆ ಹಾಗೂ ಗಾಂಧೀಜಿಯವರು ದಕ್ಷಿಣ ಆಫ್ರಿಕದ ಡರ್ಬಾನ್‍ನಲ್ಲಿ ಬಿಳಿ ವರ್ಣೀಯರಿಂದ ರೈಲಿನಲ್ಲಿ ಕೆಳಗೆ ದೂಡಿಸಿಕೊಂಡ ಘಟನೆಗಳೆರಡೂ ಈ ಇಬ್ಬರೂ ಮಹಾನ್ ಚೇತನಗಳ ಬದುಕಿನಲ್ಲಿ ಮಹತ್ತರ ಘಟನೆಗಳಾಗಿವೆ. ಈ ಎರಡೂ ಘಟನೆಗಳ ನಂತರವೇ ಈ ಇಬ್ಬರೂ ತಾವು ಅನುಭವಿಸಿದ ಅಪಮಾನ, ನೋವುಗಳನ್ನು ತಮ್ಮ ಸಮುದಾಯದವರು ಅನುಭವಿಸಬಾರದೆಂದು ದೃಢ ಸಂಕಲ್ಪ ತಳೆದು ತಮ್ಮ ಬದುಕನ್ನೇ ಈ ಅಸಮಾನತೆಯ ನಿವಾರಣೆಗಾಗಿ ಮುಡುಪಾಗಿಟ್ಟಿದ್ದು ಈಗ ಇತಿಹಾಸ. ಏಪ್ರಿಲ್ 14, 1891 ಭಾರತೀಯ ತಳ ಸಮುದಾಯಗಳ ಚರಿತ್ರೆಯಲ್ಲಿ ಐತಿಹಾಸಿಕ ದಿನ. ಸಮಾನತೆಯ ಸಮಾಜಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‍ರವರು ಜನಿಸಿದ ಸ್ಮರಣೀಯ ದಿನ. ಪ್ರತಿ ವರ್ಷ ಈ ದಿನವನ್ನು ಅಂಬೇಡ್ಕರ್ ಜಯಂತಿ ಹೆಸರಿನಲ್ಲಿ ರಾಷ್ಟ್ರಾದ್ಯಂತ ಸಡಗರ, ಸಂಭ್ರಮಗಳಿಂದ ಆಚರಿಸಲಾಗುತ್ತದೆ. ಅಂತೆಯೇ 2016ರ ಏಪ್ರಿಲ್ 14 ರಿಂದ ಆರಂಭಿಸಿ 1 ವರ್ಷ ಕಾಲ ಅಂಬೇಡ್ಕರ್‍ರವರ 125ನೇ ಜನ್ಮ ದಿನಾಚರಣೆಯ ವರ್ಷವನ್ನಾಗಿ ರಾಜ್ಯದಲ್ಲಿ ಆಚರಿಸಲಾಗುತ್ತಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ಸಂದರ್ಭದಲ್ಲಿ ಅಂಬೇಡ್ಕರ್‍ರವರ ಜೀವನ ಸಾಧನೆಗಳನ್ನು ಬಿಂಬಿಸುವ ವಿನೂತನ “ಧ್ವನಿ-ಬೆಳಕು” ಕಾರ್ಯಕ್ರಮವನ್ನು “ಭಾರತ ಭಾಗ್ಯ ವಿಧಾತ” ಎನ್ನುವ ಹೆಸರಿನಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಏರ್ಪಡಿಸುತ್ತಿದೆ. ಈ ದಿಸೆಯಲ್ಲಿ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಾಲಯ ಮುಂಭಾಗದಲ್ಲಿ ಫೆಬ್ರವರಿ 4ರಂದು ಸಂಜೆ 6 ಗಂಟೆಗೆ ಭಾರತ ಭಾಗ್ಯವಿಧಾತ ಧ್ವನಿಬೆಳಕು ದೃಶ್ಯ ವೈಭವಗಳ ರೂಪಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಪರಿಕಲ್ಪನೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್. ಆರ್. ವಿಶುಕುಮಾರ್ ಅವರದ್ದಾಗಿದೆ. ಬಿ.ಎಂ. ಗಿರಿರಾಜ್ ನಿರ್ದೇಶನ ಮತ್ತು ಸಾಹಿತ್ಯ ನೀಡಿದ್ದಾರೆ. ಡಾ. ಕೆ.ವೈ. ನಾರಾಯಣಸ್ವಾಮಿ ಹಾಗೂ ಬಿ.ಎಂ. ಗಿರಿರಾಜ್ ಗೀತ ರಚನೆ ಮಾಡಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನೀಡಿದ್ದಾರೆ. ಶಶಿಧರ ಅಡಪ ರಂಗವಿನ್ಯಾಸ ಮಾಡಿದ್ದು, ಪದ್ಮಿನಿ ಅಚ್ಚಿ ನೃತ್ಯ ಸಂಯೋಜಿಸಿದ್ದಾರೆ. ನಂದಕಿಶೋರ್ ಬೆಳಕು, ಪ್ರಮೋದ್ ಶಿಗ್ಗಾವ್ ವಸ್ತ್ರಾಲಂಕಾರ, ರಾಮಕೃಷ್ಣ ಬೆಳ್ತೂರು ಪ್ರಸಾಧನ ಹಾಗೂ ಎಂ.ಪಿ.ಎಂ ವೀರೇಶ್ ಸಹ ನಿರ್ದೇಶನ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ಜಿಲ್ಲೆಯ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅವಿಸ್ಮರಣೀಯವಾಗಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ಫೆ. 4ರಂದು ಭಾರತ ಭಾಗ್ಯವಿಧಾತ ಧ್ವನಿ ಬೆಳಕು ಕಾರ್ಯಕ್ರಮ ಉದ್ಘಾಟನೆ ಚಾಮರಾಜನಗರ, ಫೆ. 03 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮ ವರ್ಷಾಚರಣೆ ಅಂಗವಾಗಿ ಅವರ ಬದುಕು ಸಾಧನೆ ಬಿಂಬಿಸುವ ಭಾರತ ಭಾಗ್ಯವಿಧಾತ ಎಂಬ ಹೆಸರಿನ ಧ್ವನಿಬೆಳಕು ದೃಶ್ಯ ವೈಭವಗಳ ರೂಪಕ ಕಾರ್ಯಕ್ರಮಕ್ಕೆ ಫೆಬ್ರವರಿ 4ರಂದು ಸಂಜೆ 6 ಗಂಟೆಗೆ ನಗರದ ಚಾಮರಾಜೇಶ್ವರ ದೇವಾಲಯದ ಬಳಿ ಹಾಕಲಾಗಿರುವ ಬೃಹತ್ ವೇದಿಕೆಯಲ್ಲಿ ಚಾಲನೆ ದೊರೆಯಲಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಣೆ ತಿಳಿಸಿದೆ. ಆದರ್ಶ ವಿದ್ಯಾಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಚಾಮರಾಜನಗರ, ಫೆ. 03 (ಕರ್ನಾಟಕ ವಾರ್ತೆ):- ನಗರದ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಫೆಬ್ರವರಿ 3 ಕಡೆಯ ದಿನವೆಂದು ನಿಗದಿ ಮಾಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಿದ್ದು ಫೆಬ್ರವರಿ 18ರವರೆಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಪ್ರವೇಶ ಪರೀಕ್ಷೆಯು ಮಾರ್ಚ್ 5ರಂದು ನಡೆಯಲಿದೆ. ಅರ್ಜಿ ಸಲ್ಲಿಕೆ ಅವಧಿ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. ವೃತ್ತಿ, ನಿರೂಪಣಾ ಕೌಶಲ್ಯ ತರಬೇತಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ ಬೆಂಗಳೂರು ಫೆಬ್ರವರಿ 3 (ಕರ್ನಾಟಕ ವಾರ್ತೆ) ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪರಿಶಿಷ್ಟ ಜಾತಿ/ಪಂಗಡದ ಪತ್ರಿಕೋದ್ಯಮ ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿರುವ 'ವೃತ್ತಿ ಮತ್ತು ನಿರೂಪಣಾ ಕೌಶಲ್ಯ' ತರಬೇತಿಯ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಇಲಾಖಾ ಅಂತರ್‍ಜಾಲ ತಾಣ ತಿತಿತಿ.ಞಚಿಡಿಟಿಚಿಣಚಿಞಚಿiಟಿಜಿoಡಿmಚಿಣioಟಿ.gov.iಟಿ ನಲ್ಲಿ ಪ್ರಕಟಿಸಲಾಗಿದೆ. ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಪ್ರದೇಶ ಉಪಯೋಜನೆಯಡಿ 2016-17 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಗಿರಿಜನ ಸಮುದಾಯಕ್ಕೆ ಸೇರಿದ ಪತ್ರಿಕೋದ್ಯಮ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲಮೋ ಇನ್ ಜರ್ನಲಿಸಂ ಹಾಗೂ ಆಡಿಯೋ ವಿಷುಯಲ್ ವಿಷಯಗಳಲ್ಲಿ ಪದವಿ ಪಡೆದ ಅಭ್ಯರ್ಥಿಗಳಿಗೆ ವೃತ್ತಿ ಕೌಶಲ್ಯತೆ ರೂಢಿಸಿಕೊಳ್ಳಲು 'ವೃತ್ತಿ ಮತ್ತು ನಿರೂಪಣಾ ಕೌಶಲ್ಯ' ತರಬೇತಿಯನ್ನು ಏರ್ಪಡಿಸಲಾಗಿದೆ. 'ವೃತ್ತಿ ಮತ್ತು ನಿರೂಪಣಾ ಕೌಶಲ್ಯ' ತರಬೇತಿಗಾಗಿ ಸ್ವೀಕರಿಸಿದ ಅರ್ಜಿಗಳನ್ನು ಪರಿಶೀಲಿಸಿ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕ ಆಯ್ಕೆಪಟ್ಟಿ ಯನ್ನು ಪ್ರಕಟಿಸಲಾಗಿದೆ. ಎಲ್ಲಾ ಸೆಮಿಸ್ಟರ್‍ಗಳ ಎಲ್ಲ ವಿಷಯಗಳ (ಚಿಟಟ subರಿeಛಿಣs) ಒಟ್ಟಾರೆ ಅಂಕಗಳನ್ನು ಗಣನೆಗೆ ತೆಗೆದುಕೊಂಡು ಶೇಕಡಾವಾರು ಅಂಕಗಳನ್ನು ನಿರ್ಧರಿಸಲಾಗಿದೆ. ಇಲಾಖೆಯಿಂದ ಈ ಹಿಂದಿನ ವರ್ಷಗಳಲ್ಲಿ ಏರ್ಪಡಿಸಲಾದ ವೃತ್ತಿ ಕೌಶಲ್ಯ ತರಬೇತಿ ಕಾರ್ಯಕ್ರಮಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಪರಿಗಣಿಸಿಲ್ಲ. ಆಯ್ಕೆಪಟ್ಟಿ ಕುರಿತು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 06, 2017 ರೊಳಗಾಗಿ ಲಿಖಿತ ರೂಪದಲ್ಲಿ ಇಲಾಖೆ ಕೇಂದ್ರ ಕಚೇರಿ 'ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ', ವಾರ್ತಾ ಸೌಧ, ನಂ17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು-560 001 ಇಲ್ಲಿ ಸಲ್ಲಿಸುವುದು ಅಥವಾ ಞoushಚಿಟಥಿಚಿಣಡಿಚಿiಟಿiಟಿg2017@gmಚಿiಟ.ಛಿom ಗೆ ಮೇಲ್ ಮೂಲಕವೂ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ಶಾಖೆಯ ದೂರವಾಣಿ ಸಂಖ್ಯೆ 22028034 ಅನ್ನು ಸಂರ್ಪಕಿಸುವುದು.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು