Friday, 17 February 2017

16-02-2017 ಚಾಮರಾಜನಗರ, ಫೆ. -ಪತ್ರಕರ್ತರ ಕಾರ್ಯಾಗಾರಕ್ಕೆ ಚಾಲನೆ,ಸಂತೇಮರಹಳ್ಳಿಯಲ್ಲಿ ಮೇವು ಬ್ಯಾಂಕ್ ಉದ್ಘಾಟನೆ

ಪ.ಜಾ. ಪ.ಪಂ ಪತ್ರಕರ್ತರ ಕಾರ್ಯಾಗಾರಕ್ಕೆ ಚಾಲನೆ ಚಾಮರಾಜನಗರ, ಫೆ. 16 - ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಹಮ್ಮಿಕೊಂಡಿರುವ 2 ದಿನಗಳ ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಇಂದು ನಗರದಲ್ಲಿ ಚಾಲನೆ ದೊರೆಯಿತು. ನಗರದ ನಿಜಗುಣ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿರುವ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್‍ಮಟ್ಟು ಅವರು ಪತ್ರಕರ್ತರು ಸೂಕ್ಷ್ಮ ಸಹೃದಯ ಉಳ್ಳವರಾಗಿರಬೇಕು. ದೌರ್ಜನ್ಯಕ್ಕೆ ಒಳಗಾದವರು, ಸಂಕಷ್ಟ, ದುಃಖದಲ್ಲಿ ಇರುವವರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡಷ್ಟೂ ಉತ್ತಮ ವರದಿ ಬರಲು ಅನುಕೂಲವಾಗುತ್ತದೆ ಎಂದರು. ದಲಿತ ಪತ್ರಕರ್ತರಿಗೆ ಹೆಚ್ಚಿನ ಜವಾಬ್ದಾರಿ ಇದೆ. ಬಾಬಾ ಸಾಹೇಬ್ ಅಂಬೇಡ್ಕರ್, ಲೋಹಿಯಾ, ಗಾಂಧಿ, ವಿವೇಕಾನಂದ ಸೇರಿದಂತೆ ಅನೇಕರ ವಿಚಾರಗಳನ್ನು ಕೃತಿಗಳನ್ನು ಅಧ್ಯಯನ ಮಾಡಬೇಕು. ಕ್ರಿಯಾಶೀಲತೆಯಿಂದ ಕರ್ತವ್ಯ ನಿರ್ವಹಿಸಬೇಕು. ಸತತ ಆಸಕ್ತಿ ಇರಬೇಕು ಎಂದು ಸಲಹೆ ಮಾಡಿದರು. ಮಾಧ್ಯಮ ಕ್ಷೇತ್ರದಲ್ಲಿ ಇರುವವರು ದೌರ್ಬಲ್ಯಕ್ಕೆ ಒಳಗಾಗಬಾರದು. ಕೆಲವೊಮ್ಮೆ ಅನಗತ್ಯ ಒತ್ತಡವನ್ನು ಸಹಿಸಿಕೊಳ್ಳಬೇಕಿದೆ. ತಮ್ಮ ಪ್ರತಿಭೆಯ ಮೂಲಕ ಉತ್ತರ ಕೊಡಬೇಕು. ಯಾವುದೇ ಕಾರಣಕ್ಕೂ ಹತಾಶರಾಗಬಾರದು ಎಂದರು. ಮಾಧ್ಯಮ ಅಕಾಡೆಮಿಯು ಪತ್ರಕರ್ತರಿಗೆ ಕಾರ್ಯಾಗಾರ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇದರ ಪ್ರಯೋಜನ ಪಡೆದು ವೃತ್ತಿಯಲ್ಲಿ ಬೆಳವಣಿಗೆ ಹೊಂದಲು ಮುಂದಾಗÀಬೇಕು ಎಂದು ಅಮೀನ್ ಮಟ್ಟು ತಿಳಿಸಿದರು. ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪತ್ರಿಕೆಗಳ ಸಂಪಾದಕರದ ಸಂಘದ ಅಧ್ಯಕ್ಷರಾದ ಚಲುವರಾಜು ಮಾತನಾಡಿ ಪರಿಶಿಷ್ಟ ಜಾತಿ ಪಂಗಡಗಳ ಪತ್ರಕರ್ತರಿಗೆ ಇಂತಹ ಕಾರ್ಯಾಗಾರಗಳು ಅವಶ್ಯಕತೆ ಇದೆ. ಅಕಾಡೆಮಿಯು ಪತ್ರಕರ್ತರಿಗೆ ಅನುಕೂಲವಾಗುವ ಮತ್ತಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದರು. ಕರ್ನಾಟಕ ಅಕಾಡೆಮಿ ಅಧ್ಯಕ್ಷರಾದ ಎಂ. ಸಿದ್ಧರಾಜು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾದ ಮುತ್ತುನಾಯ್ಕರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಕಾಡೆಮಿಯ ಕಾರ್ಯದರ್ಶಿ ಎಸ್. ಶಂಕರಪ್ಪ, ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪತ್ರಿಕೆಗಳ ಸಂಪಾದಕರ ಸಂಘದ ಉಪಾಧ್ಯಕ್ಷರಾದ ನಾಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. //////////////////////////////////////////////////////////////////// ಫೆ. 17ರಂದು ಪ.ಜಾ. ಪ.ಪಂ ಪತ್ರಕರ್ತರಿಗೆ 2ನೇ ದಿನದ ಕಾರ್ಯಾಗಾರ ಚಾಮರಾಜನಗರ, ಫೆ. 16 - ಕರ್ನಾಟಕ ಮಾಧ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಫೆಬ್ರವರಿ 17ರಂದು ಬೆಳಿಗ್ಗೆ 10 ಗಂಟೆಗೆ ನಗರದ ನಿಜಗುಣ ರೆಸಾರ್ಟ್‍ನಲ್ಲಿ ಹಮ್ಮಿಕೊಂಡಿರುವ 2ನೇ ದಿನದ ಕಾರ್ಯಾಗಾರದಲ್ಲಿ ವಿಧಾನ ಪರಿಷತ್ ಸದಸ್ಯರು ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ವರದಿ ನೀಡುವ ತಜ್ಞರ ಸಮಿತಿ ಅಧ್ಯಕ್ಷರೂ ಆದ ವಿ.ಎಸ್. ಉಗ್ರಪ್ಪ ಪ್ರಧಾನ ಭಾಷಣ ಮಾಡುವರು. ಬಳಿಕ ಮೊದಲನೇ ಗೋಷ್ಠಿ ನಡೆಯಲಿದ್ದು ಹಂಪಿ ವಿಶ್ವವಿದ್ಯಾನಿಲಯದ ಭಾಷ್ಯಂತರ ವಿಭಾಗದ ಪ್ರಾಧ್ಯಾಪಕರಾದ ಡಾ. ಪಿ. ಮಹದೇವಯ್ಯ ಮಾಧ್ಯಮಗಳಲ್ಲಿ ಭಾಷೆ ಬಳಕೆ ಹಾಗೂ ಸರ್ಕಾರದ ಸವಲತ್ತುಗಳು ಹಾಗೂ ಸದ್ಭಳಕೆ ಕುರಿತು ಚಿಂತಕರಾದ ಕ್ಷೀರಸಾಗರ ವಿಷಯ ಮಂಡಿಸುವರು. ಮಧ್ಯಾಹ್ನ 3 ಗಂಟೆಗೆ ಕಾರ್ಯಾಗಾರದ ಸಮಾರೋಪ ಸಮಾರಂಭ ನಡೆಯಲಿದ್ದು ಸಂಸದ ಧ್ರುವನಾರಾಯಣ ಅಧ್ಯಕ್ಷತೆ ವಹಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಎಂ. ಸಿದ್ಧರಾಜು ಉಪಸ್ಥಿತರಿರುವರು. ರಾಯಚೂರು ಈಶಾನ್ಯ ಟೈಮ್ಸ್ ಸಂಪಾದಕರಾದ ಎನ್. ನಾಗರಾಜ ಸಮಾರೋಪ ಭಾಷಣ ಮಾಡುವರು ಎಂದು ಅಕಾಡೆಮಿ ತಿಳಿಸಿದೆ. ----------------------------------------------------------------- ಫೆ. 17ರಂದು ಸಂತೇಮರಹಳ್ಳಿಯಲ್ಲಿ ಮೇವು ಬ್ಯಾಂಕ್ ಉದ್ಘಾಟನೆ ಚಾಮರಾಜನಗರ, ಫೆ. 16 - ತಾಲೂಕು ಆಡಳಿತದ ವತಿಯಿಂದ ಚಾಮರಾಜನಗರ ತಾಲೂಕು ಸಂತೇಮರಹಳ್ಳಿ ಎಪಿಎಂಸಿ ಕಾರ್ಯಾಲಯದ ಆವರಣದಲ್ಲಿ ಮೇವು ಬ್ಯಾಂಕ್ ಅನ್ನು ಫೆಬ್ರವರಿ 17 ರಿಂದ ಆರಂಭಿಸಲಾಗುತ್ತಿದೆ. ಶಾಸಕರಾದ ಎಸ್. ಜಯಣ್ಣ ಅವರು ಫೆಬವರಿ 17ರಂದು ಬೆಳಿಗ್ಗೆ 10.30 ಗಂಟೆಗೆ ಮೇವು ಕೇಂದ್ರವನ್ನು ಉದ್ಘಾಟಿಸುವರು. ನಾಗರಿಕರು ಮೇವು ಕೇಂದ್ರವನ್ನು ಸದುಪಯೋಗಪಡಿಕೊಳ್ಳುವಂತೆ ತಹಸೀಲ್ದಾರ್ ಕೆ. ಪುರಂಧರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ------------------------------------------------------------ ಫೆ. 18ರಂದು ಅರಕಲವಾಡಿಯಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆ ಚಾಮರಾಜನಗರ, ಫೆ. 16- ತಾಲೂಕು ಆಡಳಿತದ ವತಿಯಿಂದ ಸಾರ್ವಜನಿಕರ ಅಹವಾಲು ಆಲಿಸುವ ಸಲುವಾಗಿ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹರದನಹಳ್ಳಿ ಹೋಬಳಿಯ ಅರಕಲವಾಡಿ ಗ್ರಾಮ ಪಂಚಾಯಿತಿಯ ಕಾರ್ಯಾಲಯದ ಮುಂಭಾಗ ಫೆಬ್ರವರಿ 18ರಂದು ಬೆಳಿಗ್ಗೆ 10 ಗಂಟೆಗೆ ಜನಸಂಪರ್ಕ ಸಭೆ ಆಯೋಜಿಸಲಾಗಿದೆ. ನಾಗರಿಕರು ಜನಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳುವಂತೆ ತಹಸೀಲ್ದಾರರು ಪ್ರಕಟಣೆಯಲ್ಲಿ ಕೋರಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು