Friday, 17 February 2017
17-02-2017 ಚಾಮರಾಜನಗರ ಸುದ್ದಿಗಳು (ನೂತನ ಸಿಇಓ ಅಧಿಕಾರ ಸ್ವೀಕಾರ,ದೇಶದ ಸಂಸ್ಕøತಿ ಪರಂಪರೆಗೆ ಶೋಷಿತರ ಕೊಡುಗೆ ಅಪಾರ : ವಿ.ಎಸ್.ಉಗ್ರಪ್ಪ)
ನೂತನ ಸಿಇಓ ಅಧಿಕಾರ ಸ್ವೀಕಾರ
ಚಾಮರಾಜನಗರ ಫೆ.17 -ಚಾಮರಾಜನಗರ ಜಿಲ್ಲಾ ಪಂಚಾಯಿತಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ಡಾ. ಕೆ.ಹರೀಶ್‍ಕುಮಾರ್ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.
ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಎನ್.ಮುನಿರಾಜಪ್ಪ ನೂತನ ಸಿಇಓ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ಸಂದರ್ಭದಲ್ಲಿ ಮುಖ್ಯ ಯೋಜನಾಧಿಕಾರಿ ಎಂ.ಮಾದೇಶು, ಮುಖ್ಯ ಲೆಕ್ಕಾಧಿಕಾರಿ ಸಿ.ಬಸವರಾಜು, ಯೋಜನಾ ನಿರ್ದೇಶಕ ಶ್ರೀಧರ್, ಸಹಾಯಕ ಕಾರ್ಯದರ್ಶಿ ಎಚ್.ಸಿ. ನಾಗೇಂದ್ರಪ್ಪ, ಸಹಾಯಕ ಯೋಜನಾಧಿಕಾರಿ ಶ್ರೀನಿವಾಸ್ ಹಾಜರಿದ್ದರು.
ಡಾ.ಹರೀಶ್ ಕುಮಾರ್ ಅವರು ಬೆಂಗಳೂರಿನ ಕಂದಾಯ ಇಲಾಖೆಯ ಭೂಮಾಪನ ದಾಖಲೆಗಳ ಆಧುನೀಕರಣ ಹಾಗೂ “ಭೂಮಿ” ನಿರ್ವಹಣಾ ಘಟಕದಲ್ಲಿ ವಿಶೇಷ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.
---------------------------------------
ದೇಶದ ಸಂಸ್ಕøತಿ ಪರಂಪರೆಗೆ ಶೋಷಿತರ ಕೊಡುಗೆ ಅಪಾರ : ವಿ.ಎಸ್.ಉಗ್ರಪ್ಪ
ಚಾಮರಾಜನಗರ ಫೆ.17: ದೇಶದ ಸಂಸ್ಕøತಿ ಹಾಗೂ ಪರಂಪರೆಗೆ ಮೂಲ ನಿವಾಸಿಗಳು ಹಾಗೂ ಶೋಷಿತರ ಕೊಡುಗೆ ಅಪಾರವಾಗಿದೆ ಎಂದು ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಮಹಿಳಾ ಮತ್ತು ಮಕ್ಕಳ ಮೇಲಿನ ಶೋಷಣೆ, ದೌರ್ಜನ್ಯ, ಅತ್ಯಾಚಾರ ನಿಯಂತ್ರಿಸುವ ಮತ್ತು ವರದಿ ನೀಡುವ ತಜ್ಞರ ಸಮಿತಿಯ ಅಧ್ಯಕ್ಷರಾದ ವಿ.ಎಸ್.ಉಗ್ರಪ್ಪ ತಿಳಿಸಿದರು.
ನಗರದ ನಿಜಗುಣ ಹೋಟೆಲ್ ಸಭಾಂಗಣದಲ್ಲಿ ಇಂದು ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪತ್ರಕರ್ತರ ಎರಡನೇ ದಿನದ ಕಾರ್ಯಾಗಾರದಲ್ಲಿ ಪ್ರಧಾನ ಭಾಷಣಾಕಾರರಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಭಾರತ ದೇಶದ ಸಂಸ್ಕøತಿ ಪರಂಪರೆಯನ್ನು ಅವಲೋಕಿಸಿದಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಶೋಷಿತರು, ಮೂಲ ನಿವಾಸಿಗಳು ನೀಡಿರುವ ಕೊಡುಗೆಯು ಸಾಕಷ್ಟಿದೆ. ಮಹಾಗ್ರಂಥ ಎನಿಸಿದ ರಾಮಾಯಣ ರಚಿಸಿದವರು ಮಹರ್ಷಿ ವಾಲ್ಮೀಕಿ, ಮಹಾಭಾರತವನ್ನು ಬರೆದವರು ವ್ಯಾಸ ಮಹರ್ಷಿಗಳು ಶೋಷಿತ ವರ್ಗದವರೇ ಆಗಿದ್ದಾರೆ. ಸಂಸ್ಕøತದಲ್ಲಿ ಅಪಾರ ಹೆಸರು ಗಳಿಸಿದ್ದ ಕಾಳಿದಾಸ ಕವಿ ಕೂಡ ಹಿಂದುಳಿದ ವರ್ಗಕ್ಕೆ ಸೇರಿದವರೆಂದು ಉಗ್ರಪ್ಪ ತಿಳಿಸಿದರು.
ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವನ್ನು ಭಾರತಕ್ಕೆ ರಚಿಸಿಕೊಟ್ಟ ಕಿರ್ತಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಹಬಾಳು ಎಂಬುದು ಸಂವಿಧಾನದ ಮೂಲ ಆಶಯವಾಗಿದೆ. ಇಂತಹ ಉನ್ನತ ಪರಿಕಲ್ಪನೆ ನೀಡಿದವರು ಶೋಷಿತ ವರ್ಗಕ್ಕೆ ಸೇರಿದವರೆಂದು ಉಗ್ರಪ್ಪ ಅವರು ಸ್ಮರಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ರಂಗವನ್ನು ನಾಲ್ಕನೇಯ ಅಂಗವೆಂದು ಕರೆಯಲಾಗುತ್ತಿದೆ. ಸಮಾಜದ ಆದಾರ ಸ್ಥಂಭವಾಗಿರುವ ಮಾಧ್ಯಮಗಳು ವಸ್ತುನಿಷ್ಠ ವರದಿಗಳಿಗೆ ಆದ್ಯತೆ ನೀಡಬೇಕಿದೆ. ಸಮಾಜವನ್ನು ಎಚ್ಚರಿಸುವ ಕೆಲಸಕ್ಕೆ ಪ್ರಾಮುಖ್ಯತೆ ನೀಡಬೇಕೆ ವಿನಃ ರಂಜನೆ ವಿಷಯಗಳಿಗೆ ಹೆಚ್ಚು ಪ್ರಚಾರ ಕೊಡುವುದು ಸರಿಯಲ್ಲವೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಪರಿಶಿಷ್ಟರ ಕಲ್ಯಾಣಕ್ಕಾಗಿ 2013 ರಿಂದ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‍ನಲ್ಲಿ ಹಣ ನಿಗಧಿ ಮಾಡುತ್ತಿದೆ. ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಅನುಷ್ಠಾನಕ್ಕೆ ಅಧಿಕಾರಿಗಳು ನಿರೀಕ್ಷಿತ ಮಟ್ಟದಲ್ಲಿ ತೊಡಗಿಕೊಳ್ಳಬೇಕಿದೆ. ಇಲ್ಲವಾದಲ್ಲಿ ಉದ್ದೇಶ ಸಫಲವಾಗುವುದಿಲ್ಲ ಎಂದು ಉಗ್ರಪ್ಪ ತಿಳಿಸಿದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಮಾಧ್ಯಮ ಕ್ಷೇತ್ರ ಅತ್ಯಂತ ವೇಗವಾಗಿ ಬೆಳೆಯತೊಡಗಿದೆ. ವಾಸ್ತವಿಕ ನೆಲೆಗಟ್ಟಿನಲ್ಲಿ ವರದಿಗಳು ಬರಬೇಕಿದೆ. ಸಮಾಜವನ್ನು ತಿದ್ದುವ ಹಾಗೂ ಅಂಕು-ಡೊಂಕುಗಳನ್ನು ಎಚ್ಚರಿಸುವ ಕೆಲಸವನ್ನು ಮಾಡುವ ಮಹತ್ತರ ಹೊಣೆಗಾರಿಕೆಯು ಮಾಧ್ಯಮಗಳ ಮೇಲಿದೆ ಎಂದರು.
ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಸಿದ್ದರಾಜು, ಸದಸ್ಯರಾದ ರಂಗಣ್ಣ, ಕೆ.ಶಿವಕುಮಾರ್, ಮುತ್ತುನಾಯ್ಕರ್, ಅಕಾಡೆಮಿ ಕಾರ್ಯದರ್ಶಿ ಎಸ್.ಶಂಕರಪ್ಪ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪತ್ರಿಕೋದ್ಯಮ ಆಸಕ್ತರಿಗೆ ಉತ್ತೇಜನ ಅಗತ್ಯ : ಆರ್.ಧ್ರುವನಾರಾಯಣ
ಚಾಮರಾಜನಗರ ಫೆ.17: ಪತ್ರಿಕಾ ರಂಗಕ್ಕೆ ಹೊಸದಾಗಿ ಸೇರ್ಪಡೆಯಾಗುತ್ತಿರುವ ಪೀಳಿಗೆಗೆ ಹಿರಿಯ ಪತ್ರಕರ್ತರು ಮತ್ತು ಪತ್ರಿಕಾ ಅಕಾಡೆಮಿ ಉತ್ತೇಜನ ನೀಡುವ ಕೆಲಸವನ್ನು ನಿರಂತರವಾಗಿ ಮಾಡಬೇಕಿದೆ ಎಂದು ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಸಲಹೆ ಮಾಡಿದರು.
ನಗರದ ನಿಜಗುಣ ಹೋಟೆಲ್ ಸಭಾಂಗಣದಲ್ಲಿ ನಡೆದ ಎರಡು ದಿನಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಪತ್ರಕರ್ತರ ಕಾರ್ಯಾಗಾರದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಾಧ್ಯಮ ಕ್ಷೇತ್ರಕ್ಕೆ ಇಂದು ಅನೇಕ ಯುವ ಜನರು ಕಾಲಿಡುತ್ತಿದ್ದಾರೆ. ಇತರೆ ವರ್ಗಗಳಿಗೆ ಹೋಲಿಸಿದಾಗ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಮಾಧ್ಯಮ ರಂಗಕ್ಕೆ ಬರುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗಕ್ಕೆ ಸೇರಿದವರಿಗೂ ಹಿರಿಯ ಪತ್ರಕರ್ತರು ಹಾಗೂ ಅಕಾಡೆಮಿಯು ಪ್ರೋತ್ಸಾಹ ನೀಡಬೇಕೆಂದು ಧ್ರುವನಾರಾಯಣ ಆಶಿಸಿದರು.
ಯಾವುದೇ ರಂಗದಲ್ಲಿ ಯಶಸ್ವಿಯಾಗಬೇಕಾದರೆ ಪರಿಶ್ರಮ ಪಡಲೆಬೇಕು. ಕಷ್ಟಪಟ್ಟರೆ ಪ್ರತಿಫಲ ಸಿಕ್ಕೇ ಸಿಗುತ್ತದೆ. ವೃತ್ತಿಯಲ್ಲಿ ಪ್ರಾಮಾಣಿಕತೆ, ಶ್ರದ್ದೆ, ಬದ್ದತೆ ತೋರಬೇಕು. ಸನ್ಮಾರ್ಗದಲ್ಲಿ ನಡೆದು ವೃತ್ತಿಯಲ್ಲಿ ಯಶಸ್ಸು ಪಡೆಯಬೇಕು ಎಂದು ಧ್ರುವನಾರಾಯಣ ಕಿವಿಮಾತು ಹೇಳಿದರು.
ಪತ್ರಕರ್ತರಿಗೆ ಅಭದ್ರತೆ ಭಾವನೆ ಇದೆ, ಅವರ ವೃತ್ತಿಗೆ ಭದ್ರತೆ ಇಲ್ಲ ಎಂಬ ಅಭಿಪ್ರಾಯ ವ್ಯಾಪಕವಾಗಿದೆ. ಪತ್ರಕರ್ತರಿಗೆ ಸರ್ಕಾರದಿಂದ ಲಭಿಸಬೇಕಾದ ಸವಲತ್ತುಗಳನ್ನು ದೊರಕಿಸಿಕೊಡುವಲ್ಲಿ ತಾವು ಸಹ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದ ಧ್ರುವನಾರಾಯಣ ಅವರು ಪತ್ರಿಕೆಗಳ ಅಭಿವೃದ್ದಿಗೆ ಸಂಬಂಧಿಸಿದ ಬೇಡಿಕೆಗೆ ತಾವು ಸಹ ಸ್ಪಂದಿಸಲು ಸಿದ್ದರಿರುವುದಾಗಿ ತಿಳಿಸಿದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪತ್ರಿಕಾಗಳ ಸಂಪಾದಕರ ಸಂಘಗಳ ಉಪಾಧ್ಯಕ್ಷರಾದ ನಾಗರಾಜು ಅವರು ಮಾತನಾಡಿ ಪತ್ರಕರ್ತರು ಬದ್ದತೆಯಿಂದ ಕೆಲಸ ಮಾಡಬೇಕು, ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಕರ್ತವ್ಯ ನಿರ್ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ಅಂಬೇಡ್ಕರ್ ಪ್ರಶಸ್ತಿ ಪುರಸ್ಕøತರಾದ ಸುದ್ದಿಸಂಜೆ ಪತ್ರಿಕೆ ಸಂಪಾದಕರಾದ ಡಿ.ಶಶಿಧರ ಅವರನ್ನು ರಂಗವಾಹಿನಿ ಸಂಸ್ಥೆಯ ಪರವಾಗಿ ಆರ್.ಧ್ರುವನಾರಾಯಣ, ಸಿ.ಎಂ.ನರಸಿಂಹಮೂರ್ತಿ ಹಾಗೂ ಇತರೆ ಗಣ್ಯರು ಸನ್ಮಾನಿಸಿದರು.
ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಸಿದ್ದರಾಜು, ಸದಸ್ಯರಾದ ಮುತ್ತುನಾಯ್ಕರ್, ಅಕಾಡೆಮಿ ಕಾರ್ಯದರ್ಶಿ ಎಸ್.ಶಂಕರಪ್ಪ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
------------------------------------------
ಫೆ.18 ರಂದು ಶ್ರೀನಿವಾಸಪುರ ಕಾಲೋನಿಯಲ್ಲಿ ಗಿರಿಜನ ಬುಡಕಟ್ಟು ಸಾಂಸ್ಕøತಿಕ ಉತ್ಸವ
ಚಾಮರಾಜನಗರ ಫೆ.17: ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಗಿರಿಜನ ಬುಡಕಟ್ಟು ಸಾಂಸ್ಕøತಿಕ ಉತ್ಸವವನ್ನು ಚಾಮರಾಜನಗರ ತಾಲ್ಲೂಕಿನ ಪುಣಜನೂರು ವಲಯದ ಶ್ರೀನಿವಾಸಪುರ ಕಾಲೋನಿಯಲ್ಲಿ ಫೆಬ್ರವರಿ 18 ರಂದು ಬೆಳಿಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.
ಆಹಾರ ನಾಗರಿಕ ಸರಬರಾಜು ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಉಮಾಶ್ರೀ ಮೆರವಣಿಗೆ ಉದ್ಘಾಟಿಸುವರು. ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಮತ್ತು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು.
ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ, ಬಿರ್ಸಾಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ವಿಧಾನ ಪರಿಷತ್ ಉಪ ಸಭಾಪತಿಯವರಾದ ಮರಿತಿಬ್ಬೇಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್.ಧರ್ಮಸೇನ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಚಿನ್ನಸ್ವಾಮಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಬಸವರಾಜು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಉಪಾಧ್ಯಕ್ಷರಾದ ಪಿ.ಎನ್.ದಯಾನಿಧಿ, ಸದಸ್ಯರಾದ ಕುಮಾರನಾಯಕ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಮ್ಮ, ಉಪಾಧ್ಯಕ್ಷರಾದ ಶಿವನಾಯಕ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರಾದ ಕೆ.ಎ.ದಂiÀiನಂದ, ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
-----------------------------------------
ಫೆ.18 ರಂದು ಅರಕಲವಾಡಿಯಲ್ಲಿ ಜನ ಸಂಪರ್ಕ ಸಭೆ : ಸಮಯ ಬದಲು
ಚಾಮರಾಜನಗರ ಫೆ.17 (: ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಅರಕಲವಾಡಿ ಗ್ರಾಮ ಪಂಚಾಯಿತಿ ಕಾರ್ಯಾಲಯ ಬಳಿ ಫೆಬ್ರವರಿ 18 ರಂದು ಬೆಳಿಗ್ಗೆ 10 ಗಂಟೆಗೆ ನಿಗಧಿಯಾಗಿದ್ದ ಜನ ಸಂಪರ್ಕ ಸಭೆಯನ್ನು 12.30 ಗಂಟೆಗೆ ಆರಂಭಿಸಲಾಗುತ್ತದೆ. ನಾಗರೀಕರು ಜನ ಸಂಪರ್ಕ ಸಭೆಯ ಸದುಪಯೋಗ ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------------------------------------------------
ಮಾ.5 ಕ್ಕೆ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ ಮುಂದೂಡಿಕೆ
ಚಾಮರಾಜನಗರ ಫೆ.17 ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಏಕಲವ್ಯ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಫೆಬ್ರವರಿ 19 ರಂದು ನಿಗಧಿಯಾಗಿದ್ದ ಪರೀಕ್ಷೆಯನ್ನು ಮುಂದೂಡಿ ಮಾರ್ಚ್ 5 ಕ್ಕೆ ನಿಗಧಿ ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಸತೀಶ್ ಅವರು ತಿಳಿಸಿದ್ದಾರೆ.
---------------------------------------
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment