Saturday, 18 February 2017

18-02-2017 ಚಾಮರಾಜನಗರ ಸುದ್ದಿಗಳು (ಗಿರಿಜನರ ಸಂಸ್ಕøತಿ ಪರಂಪರೆಗೆ ಸರ್ಕಾರದಿಂದ ಉತ್ತೇಜನ : ಸಿ.ಪುಟ್ಟರಂಗಶೆಟ್ಟಿ)

ಫೆ. 20ರಂದು ಕಾನೂನು ಅರಿವು ನೆರವು ಕಾರ್ಯಕ್ರಮ ಚಾಮರಾಜನಗರ, ಫೆ. 18 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 20ರಂದು ಮಧ್ಯಾಹ್ನ 2 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಇರುವ ಹಕ್ಕುಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ.ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಶಿವಬಸವಯ್ಯ ಅಧ್ಯಕ್ಷತೆ ವಹಿಸುವರು. ವಕೀಲರ ಸಂಘದ ಅಧ್ಯಕ್ಷರಾದ ಆರ್.ವಿರೂಪಾಕ್ಷ ಮುಖ್ಯ ಅತಿಥಿಗಳಾಗಿ ಆಗಮಿಸುವರು. ವಕೀಲರಾದ ಅರುಣ್ ಕುಮಾರ್ ಮತ್ತು ಎ.ಎಸ್.ನಂಜುಂಡಸ್ವಾಮಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು -------------------------------------------------------------------------- ಗಿರಿಜನರ ಸಂಸ್ಕøತಿ ಪರಂಪರೆಗೆ ಸರ್ಕಾರದಿಂದ ಉತ್ತೇಜನ : ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ಫೆ.18 : ರಾಜ್ಯ ಸರ್ಕಾರ ಕಲೆ, ಸಂಸ್ಕøತಿಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಪರಿಣಾಮ ಅರಣ್ಯ ವಾಸಿಗಳ ಸೇರಿದಂತೆ ಬಹುತೇಕ ಸಮುದಾಯಗಳ ಮೂಲ ಪರಂಪರೆಗೆ ಹೆಚ್ಚಿನ ಪೋಷಣೆ ದೊರೆಯುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು. ತಾಲ್ಲೂಕಿನ ಪುಣಜನೂರು ವಲಯದ ಶ್ರೀನಿವಾಸಪುರ ಕಾಲೋನಿಯಲ್ಲಿ ಇಂದು ಜಿಲ್ಲಾಡಳಿತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಿರಿಜನ ಬುಡಕಟ್ಟು ಸಾಂಸ್ಕøತಿಕ ಉತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆದಿವಾಸಿಗಳು, ಅರಣ್ಯ ವಾಸಿಗಳ ಕಲೆ, ಸಂಸ್ಕøತಿಗೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ಇದನ್ನು ಮುಂದುವರಿಸುವ ಸಲುವಾಗಿ ಸರ್ಕಾರ ಬುಡಕಟ್ಟು ಸಾಂಸ್ಕøತಿಕ ಉತ್ಸವಕ್ಕೆ ನೆರವು ನೀಡಿದೆ. ಇದರಿಂದ ಪುರಾತನ ಕಲೆ, ಅಭಿವ್ಯಕ್ತಿಗೆ ಅವಕಾಶವಾಗಿದೆ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು. ಜಿಲ್ಲೆ ಜಾನಪದ ಕಲೆಗೆ ಹೆಸರಾಗಿದೆ. ಈ ಪೈಕಿ ಅತಿ ಹೆಚ್ಚು ಪೋಡುಗಳು ಇರುವ ಚಾಮರಾಜನಗರ ಜಿಲ್ಲೆಯಲ್ಲಿ ಅರಣ್ಯ ವಾಸಿಗಳು ತಮ್ಮದೇ ಆದ ನೃತ್ಯ, ಸಂಗೀತವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಹಬ್ಬ ಹರಿದಿನಗಳಲ್ಲಿ ಹಾಡು-ಕುಣಿತದ ಮೂಲಕ ತಮ್ಮ ಪರಂಪರೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಇಂತಹ ಅಪರೂಪದ ಸಂಸ್ಕøತಿಗೆ ನಿರಂತರ ಉತ್ತೇಜನ ನೀಡುವುದು ಮುಖ್ಯವಾಗಿದೆ ಎಂದು ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಕೊಂಚ ಸರಳವಾಗಿ ಕಾರ್ಯಕ್ರಮ ಆಯೋಜನೆ ಆಗಿದೆ. ಮುಂದೆ ಮಳೆ-ಬೆಳೆಯಾಗಿ ಸಮೃದ್ದಿಯಾದರೇ ಮತ್ತಷ್ಟು ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆಗೆ ಕ್ರಮ ತೆಗೆದುಕೊಳ್ಳಬೇಕೆಂದು ಶಾಸಕರು ಸಲಹೆ ಮಾಡಿದರು. ಆದಿವಾಸಿ ನಾಯಕ ಬಿರ್ಸಾಮುಂಡಾ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು ಅವರು ಗಿರಿಜನರ ಮೂಲ ಕಲೆ-ಸಂಸ್ಕøತಿ ಸೇರಿದಂತೆ ಯಾವುದೇ ಜಾನಪದ ಪರಂಪರೆ ನಶಿಸಿ ಹೋಗದಂತೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲಾರ ಮೇಲಿದೆ. ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸುವ ಕೆಲಸವು ಸಹ ಮುಖ್ಯವಾಗಿದೆ ಎಂದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಆರ್.ಬಾಲರಾಜು ಮಾತನಾಡಿ ಆದಿವಾಸಿಗಳು ಗಿರಿಜನರ ಸಂಸ್ಕøತಿಯನ್ನು ಪೋಷಿಸುವ ಸಲುವಾಗಿ ಅವರಿಗಾಗಿಯೇ ಪ್ರತ್ಯೇಕ ಕಾರ್ಯಕ್ರಮಗಳನ್ನು ಹಾಡಿ-ಪೋಡುಗಳಲ್ಲಿ ಹಮ್ಮಿಕೊಳ್ಳುವುದು ಶ್ಲಾಘನೀಯವಾಗಿದೆ. ಇಂತಹ ವೇದಿಕೆಗಳಲ್ಲಿ ಸ್ಥಳೀಯರು ತಮ್ಮ ಪ್ರತಿಭೆ ಆನಾವರಣ ಮಾಡುವ ಮೂಲಕ ರಾಜ್ಯಮಟ್ಟದಲ್ಲಿಯೂ ಅವಕಾಶ ಪಡೆಯುವಂತಾಗಬೇಕೆಂದು ಹಾರೈಸಿದರು. ತಾಲ್ಲೂಕು ಪಂಚಾಯತ್ ಸದಸ್ಯರಾದ ಕುಮಾರನಾಯಕ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಮ್ಮ, ಉಪಾಧ್ಯಕ್ಷರಾದ ಶಿವನಾಯಕ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ.ನಾಗವೇಣಿ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ---------------------------------------------------------------- ಬರ ಪರಿಹಾರ ಕಾಮಗಾರಿಗೆ ಆದ್ಯತೆ : ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ ಫೆ.18 : ತಾಲ್ಲೂಕಿನಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಪರಿಹಾರ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಆದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ತಾಲ್ಲೂಕಿನ ಅರಕಲವಾಡಿ ಗ್ರಾಮದಲ್ಲಿಂದು ಹೋಬಳಿ ಮಟ್ಟದ ಜನ ಸಂಪರ್ಕ ಸಭೆ ಹಾಗೂ ಸಾಗುವಳಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಒದಗಿಸುವುದು ಸೇರದಂತೆ ಇನ್ನಿತರ ಸಂಕಷ್ಟ ಪರಿಸ್ಥಿತಿಯನ್ನು ಪರಿಹರಿಸಲು ಸಾಕಾಷ್ಟು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಅಂತರ್ಜಲ ಬತ್ತಿಹೋಗಿರುವ ಹಿನ್ನೆಲೆಯಲ್ಲಿ ಕೆಲವೆಡೆ ತುಂಬಾ ಆಳವಾಗಿ ಬಾವಿ ಕೊರೆದರೂ ನೀರು ಲಭ್ಯವಾಗುತ್ತಿಲ್ಲ. ಆದರೂ ಪರ್ಯಾಯವಾಗಿ ಕುಡಿಯುವ ನೀರು ವ್ಯವಸ್ಥೆ ಮಾಡಲು ಮುಂದಾಗಿದ್ದೇವೆ ಎಂದರು. ಜಾನುವಾರುಗಳಿಗೆ ಮೇವು ಅಭಾವ ಉಂಟಾಗಿರುವ ಬಗ್ಗೆ ಮನವರಿಕೆಯಾಗಿದೆ. ಈಗಾಗಲೇ ಕೆಲವೆಡೆ ಮೇವು ಬ್ಯಾಂಕ್‍ಗಳನ್ನು ತೆರೆಯಲಾಗಿದೆ. ಈ ಭಾಗದಲ್ಲಿ ಗೋಶಾಲೆ ತೆರೆಯುವ ಉದ್ದೇಶವಿದ್ದು, ಕುಡಿಯುವ ನೀರು ಸ್ಥಳ ಲಭ್ಯತೆ ಪರಿಶೀಲನೆ ನಡೆಸಿ ಶೀಘ್ರದಲ್ಲಿಯೇ ಗೋಶಾಲೆ ಆರಂಭಿಸಲು ನಿರ್ಧಾರ ಕೈಗೊಂಡು ಜನರಿಗೆ ನೆರವಾಗಲಿದ್ದೇವೆ ಎಂದರು. ಸ್ಥಳೀಯವಾಗಿ ಪಡಿತರ ಪಡೆಯಲು ಇರುವ ತೊಂದರೆಗಳ ಬಗ್ಗೆ ಜನರು ಮನವಿ ಮಾಡಿದ್ದಾರೆ. ಈ ಕುರಿತು ಸಹ ಸ್ಪಷ್ಟ ನಿಲುವು ತೆಗೆದುಕೊಳ್ಳಲು ಸೂಚಿಸಲಾಗಿದ್ದು, ಪರಿಹಾರಕ್ಕೆ ಕ್ರಮ ವಹಿಸಲಾಗುತ್ತದೆ ಎಂದರು. ಇಂದು ಹಲವು ಮಂದಿಗೆ ಸಾಗುವಳಿ ಚೀಟಿ ವಿತರಣೆ ಮಾಡಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆಯು ನಡೆಯುತ್ತಿದ್ದು, ಅರ್ಹರೆಲ್ಲರಿಗೂ ಸರ್ಕಾರದ ಸವಲತ್ತು ತಲುಪಿಸಲಾಗುವುದು ಎಂದು ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸಾಗುವಳಿ ಹಕ್ಕು ಪತ್ರವನ್ನು ವಿತರಿಸಲಾಯಿತು. ಸಭೆಯ ಆರಂಭದಲ್ಲೇ ಜನರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ತಾಲ್ಲೂಕು ಪಂಚಾಯತ್ ಸದಸ್ಯರಾದ ರತ್ನಮ್ಮ, ದೊಡ್ಡಮ್ಮ, ದೊಡ್ಡತಾಯಮ್ಮ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹದೇವಯ್ಯ, ಉಪಾಧ್ಯಕ್ಷರಾದ ಕೆಂಪಣ್ಣ, ಬಗರ್‍ಹುಕಂ ಸಮಿತಿಯ ಸದಸ್ಯರಾದ ಸೋಮಲಿಂಗಪ್ಪ, ತಹಶೀಲ್ದಾರ್ ಪುರಂದರ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. -------------------------------------------------------------------------------- ಫೆ. 20ರಂದು ಸಂತಕವಿ ಸರ್ವಜ್ಞ ಜಯಂತಿ ಚಾಮರಾಜನಗರ, ಫೆ. 18:- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಫೆಬವರಿ 20 ರಂದು ಸಂತಕವಿ ಸರ್ವಜ್ಞ ಜಯಂತಿ ಕಾಂiÀರ್iಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಚಾಮರಾಜೇಶ್ವರ ದೇವಾಲಯದಲ್ಲಿ ಕವಿ ಸರ್ವಜ್ಞ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಚಾಲನೆ ನೀಡುವರು. ಬೆಳಿಗ್ಗೆ 11 ಗಂಟೆಗೆ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಸಂಸದ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವೆಂಕಟಯ್ಯನ ಛತ್ರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಮಹೇಶ್ ಹರವೆ ಮುಖ್ಯ ಭಾಷಣ ಮಾಡುವರು. ನಗರದ ಮಹಿಳಾ ಕದಳಿ ವೇದಿಕೆ ತಂಡದವರಿಂದ ವಚನ ಗಾಯನ ಏರ್ಪಡಿಸಿದೆ ಎಂದು ಪ್ರಕಟಣೆ ತಿಳಿಸಿದೆ. ------------------------------------------------------------------- ಫೆ. 22ರಂದು ನಗರದಲ್ಲಿ ಶಿವಾಜಿ ಜಯಂತಿ ಚಾಮರಾಜನಗರ, ಫೆ. 18 - ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಫೆಬವರಿ 20 ರಂದು ಶಿವಾಜಿ ಜಯಂತಿ ಕಾಂiÀರ್iಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಚಾಮರಾಜೇಶ್ವರ ದೇವಾಲಯದಲ್ಲಿ ಶಿವಾಜಿ ಅವರ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಚಾಲನೆ ನೀಡುವರು. ಬೆಳಿಗ್ಗೆ 11 ಗಂಟೆಗೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದÀ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜೆ.ಎಸ್.ಎಸ್. ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎಂ.ಡಿ. ಪುಷ್ಪಲತಾ ಮುಖ್ಯ ಭಾಷಣ ಮಾಡುವರು. ರಾಮಸಮುದ್ರದ ಮಂಜುನಾಥ್ ಮತ್ತು ತಂಡದವರಿಂದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ

No comments:

Post a Comment

ಚಾಮರಾಜನಗರದಲ್ಲಿ ಉಪಲೋಕಾಯುಕ್ತರು ಇತ್ಯರ್ಥಪಡಿಸಿದ ದೂರುಗಳೆಷ್ಟು !?

  ಉಪಲೋಕಾಯುಕ್ತರಾದ ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಅವರಿಂದ ಲೋಕಾಯುಕ್ತದಲ್ಲಿ ಬಾಕಿ ಇರುವ ದೂರು ಅರ್ಜಿಗಳ ವಿಚಾರಣೆ : 45 ಅರ್ಜಿಗಳು ಇತ್ಯರ್ಥ         ಚಾಮರಾಜನಗ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು