Monday, 20 February 2017

20-02-2017 ರಥಕ್ಕೆ ಬೆಂಕಿ ಪ್ರಕರಣ : ವಿಶೇಷ ತಂಡ ರಚನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

dಚಾಮರಾಜನಗರ, ಫೆ. 19:- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಫೆಬವರಿ 20 ರಂದು ನಗರದಲ್ಲಿ ನಿಗದಿಯಾಗಿದ್ದ ಸಂತಕವಿ ಸರ್ವಜ್ಞ ಜಯಂತಿ ಕಾಂiÀರ್iಕ್ರಮವನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ನಾಗವೇಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------------------------------------------------------------------------------------ ರಥಕ್ಕೆ ಬೆಂಕಿ ಪ್ರಕರಣ : ವಿಶೇಷ ತಂಡ ರಚನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಚಾಮರಾಜನಗರ, ಫೆ. 20:- ನಗರದ ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರ ಸ್ವಾಮಿಯ ರಥಕ್ಕೆ ಬೆಂಕಿ ಬಿದ್ದ ಪ್ರಕರಣವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಖಂಡಿಸಿದ್ದಾರೆ. ಮೆಕ್ಕಾ ಪ್ರವಾಸದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರು ರಥಕ್ಕೆ ಬೆಂಕಿ ಬಿದ್ದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು ಪ್ರಕರಣದ ಬಗ್ಗೆ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಚರ್ಚಿಸಿದ್ದೇನೆ. ಪ್ರಕರಣ ಕುರಿತು ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸುವಂತೆ ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ. ಮೆಕ್ಕಾ ಪ್ರವಾಸದಿಂದ ತಾವು ಹಿಂದಿರುಗಿದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿರುವ ಸಚಿವರು ಬೆಂಕಿ ಬಿದ್ದ ಕೃತ್ಯ ನಡೆಯಲು ಏನೇ ಕಾರಣವಿರಲಿ ಅದನ್ನು ಶೀಘ್ರವೇ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಶಾಂತ ರೀತಿಯಿಂದ ಇದ್ದು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣ ತನಿಖೆಗೆ ಸಹಕರಿಸಬೇಕೆಂದು ಉಸ್ತುವಾರಿ ಸಚಿವರು ಮನವಿ ಮಾಡಿದ್ದಾರೆ. ------------------------------------------------------------------ ಚಾಮರಾಜನಗರ ಜಿಲ್ಲಾ ಪೊಲೀಸ್ ಪ್ರಕಟಣೆ ದಿನಾಂಕ : 18-02-2017 ರಂದು ರಾತ್ರಿ ಚಾಮರಾಜನಗರ ಪಟ್ಟಣದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿದ್ದ ರಥಕ್ಕೆ ಬೆಂಕಿ ತಗುಲಿ, ನಡೆದ ಅಗ್ನಿ ಅವಘಡದ ಹಿನ್ನಲೆಯಲ್ಲಿ ಚಾಮರಾಜನಗರ ಪಟ್ಟಣ ಠಾಣಾ ಮೊಕದ್ದಮೆ ಸಂಖ್ಯೆ 17/2017, ಕಲಂ 435 ಐ.ಪಿ.ಸಿ ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ. ಈ ಬಗ್ಗೆ ಪೂರ್ಣ ತನಿಖೆಯ ನಂತರವೇ ಸ್ಪಷ್ಠ ಚಿತ್ರಣ ದೊರೆಯಲಿದ್ದು, ಈ ಸಂಬಂಧ ಘಟನೆ ಖಂಡಿಸಿ ದಿನಾಂಕ : 20-02-2017 ರಂದು ಹಲವು ಸಂಘಟನೆಗಳು ಚಾಮರಾಜನಗರ ಪಟ್ಟಣ ಬಂದ್‍ಗೆ ಕರೆನೀಡಿರುವುದಾಗಿ ತಿಳಿದು ಬಂದಿರುತ್ತದೆ. ಬಂದ್/ಪ್ರತಿಭಟನೆಯನ್ನು ಸಮಾಜಘಾತುಕ ಶಕ್ತಿಗಳು ದುರುಪಯೋಗ ಪಡಿಸಿಕೊಂಡು, ತಮ್ಮ ಸ್ವಾರ್ಥ ಈಡೇರಿಕೆಗೆ ಬಳಸಿಕೊಳ್ಳುವ ಸಾಧ್ಯತೆ ಇರುತ್ತದೆ. ಅಲ್ಲದೇ ಪಟ್ಟಣ ಬಂದ್‍ನಿಂದ ಸಾರ್ವಜನಿಕ ತೊಂದರೆಯಾಗುವ ಜೊತೆಗೆ, ತನಿಖೆಗೂ ಸಹ ಹಿನ್ನಡೆಯಾಗಲಿದೆ. ಈ ಹಿನ್ನಲೆಯಲ್ಲಿ ವ್ಯಾಪಕವಾದ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದು, ಸಾರ್ವಜನಿಕರಿಗೆ ಯಾವ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿರುತ್ತದೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ತೊಂದರೆಯಾಗುವಂತೆ ಅಥವಾ ಒತ್ತಾಯ ಪೂರ್ವಕವಾದ ಬಂದ್ ನಡೆಸಲು ಅವಕಾಶವಿರುವುದಿಲ್ಲ. ಎಲ್ಲಾ ಸಂಘಟನೆಗಳು, ರಾಜಕೀಯ ಪಕ್ಷಗಳು ಹಾಗೂ ಸಾರ್ವಜನಿಕರು ಯಾವುದೇ ಪ್ರಚೋದಿತವಾದ ಗಾಳಿಸುದ್ದಿಗೆ ಕಿವಿಗೊಡದೆ, ಭಾವೋದ್ವೇಗಗೊಳ್ಳದೆ, ಶಾಂತರೀತಿಯಿಂದ ವರ್ತಿಸಿ, ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳಿಗೂ ಸಹಕರಿಸಿ, ನಿಜವಾದ ಅಪರಾಧಿಗಳ ಪತ್ತೆಗೆ ಅನುವು ಮಾಡಿಕೊಟ್ಟು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಸಾರ್ವಜನಿಕ ಶಾಂತಿಯನ್ನು ಕಾಪಾಡಲು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. (ಕುಲ್‍ದೀಪ್ ಕುಮಾರ್ ಆರ್ ಜೈನ್, ಐ.ಪಿ.ಎಸ್) ಪೊಲೀಸ್ ಅಧೀಕ್ಷಕರು , ಚಾಮರಾಜನಗರ ಜಿಲ್ಲೆ. ------------------------------------------------------------------------ ಸಂತಕವಿ ಸರ್ವಜ್ಞ ಜಯಂತಿ ಮುಂದೂಡಿಕೆ ಫೆ. 23ರಿಂದ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಚಾಮರಾಜನಗರ, ಫೆ. 20 - ಇತಿಹಾಸ ಪ್ರಸಿದ್ದ ಕೊಳ್ಳೇಗಾಲ ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 23 ರಿಂದ 27ರವರೆಗೆ ಮಹಾಶಿವರಾತ್ರಿ ಹಾಗೂ ಮಾರ್ಚ್ 25 ರಿಂದ 29ರವರೆಗೆ ಯುಗಾದಿ ಜಾತ್ರಾ ಮಹೋತ್ಸವ ನಡೆಯಲಿದೆ. ಫೆಬ್ರವರಿ 23ರಂದು ಮಹಾಶಿವರಾತ್ರಿ ಜಾತ್ರೆ ಮಹೋತ್ಸವ ಆರಂಭಗೊಳ್ಳಲಿದೆ. 24ರಂದು ಶ್ರೀಸ್ವಾಮಿಗೆ ಎಣ್ಣೆಮಜ್ಜನ, ವಿಶೇಷ ಸೇವೆ ಉತ್ಸವ ಹಾಗೂ ಜಾಗರಣೆ ಉತ್ಸವ, 25ರಂದು ಶ್ರೀಸ್ವಾಮಿಗೆ ವಿಶೇಷ ಸೇವೆ ಮತ್ತು ಉತ್ಸವ, 26ರಂದು ಅಮಾವಾಸ್ಯೆ ಉತ್ಸವಾದಿಗಳು ಜರುಗಲಿವೆ. 27ರಂದು ಬೆಳಿಗ್ಗೆ 9.40 ರಿಂದ 10.30 ಗಂಟೆಯವರೆಗೆ ಮಹಾರಥೋತ್ಸವ ಜರುಗಲಿದೆ. ರಾತ್ರಿ ಅಭಿಷೇಕ ಪೂಜೆ ಕೈಂಕರ್ಯಗಳು ನೆರವೇರಿದ ಬಳಿಕ ಕೊಂಡೋತ್ಸವ ನಡೆಯಲಿದೆ. ಮಾರ್ಚ್ 25ರಂದು ಯುಗಾದಿ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದೆ. 26ರಂದು ಎಣ್ಣೆ ಮಜ್ಜನ ಹಾಗೂ ವಿಶೇಷ ಸೇವೆ, 27ರಂದು ಶ್ರೀಸ್ವಾಮಿಗೆ ವಿಶೇಷ ಸೇವೆ ಉತ್ಸವಾದಿಗಳು, 28ರಂದು ಅಮಾವಾಸ್ಯೆ, ವಿಶೇಷ ಸೇವೆ ಉತ್ಸವಾದಿಗಳು ನಡೆಯಲಿವೆ. 29ರಂದು ಚಾಂದ್ರಮಾನ ಯುಗಾದಿ ಹಾಗೂ ಮಹಾರಥೋತ್ಸವವು ಬೆಳಿಗ್ಗೆ 10.30 ರಿಂದ 11.05 ಗಂಟೆಯವರೆಗೆ ನಡೆಯಲಿದೆ. ವಿಶೇಷ ಸೇವೆ, ಉತ್ಸವಗಳು ಶ್ರೀ ಸಾಲೂರು ಬೃಹನಠದ ಅಧ್ಯಕ್ಷರಾದ ಶ್ರೀ ಪಟ್ಟದ ಶ್ರೀ ಶ್ರೀ ಗುರುಸ್ವಾಮಿಗಳು ಹಾಗೂ ಪ್ರಣವ ಶ್ರೀ ಪಟ್ಟದ ಶ್ರೀ ಶ್ರೀ ಇಮ್ಮುಡಿ ಮಹದೇವಸ್ವಾಮಿಗಳ ನೇತೃತ್ವದಲ್ಲಿ ಜರುಗಲಿದೆ ಎಂದು ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------------------------------------------ ಫೆ. 22ರಂದು ನಗರದಲ್ಲಿ ಶಿವಾಜಿ ಜಯಂತಿ ಚಾಮರಾಜನಗರ, ಫೆ. 20 :- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಫೆಬವರಿ 22ರಂದು ಬೆಳಿಗ್ಗೆ 11 ಗಂಟೆಗೆ ಶಿವಾಜಿ ಜಯಂತಿ ಕಾಂiÀರ್iಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದÀ ಆರ್. ಧ್ರುವನಾರಾಯಣ, ಶಾಸಕರಾದ ಎಸ್. ಜಯಣ್ಣ, ಆರ್. ನರೇಂದ್ರ, ಕೆ.ಟಿ. ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಜೆ.ಎಸ್.ಎಸ್. ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದÉ್ತಂ.ಡಿ. ಪುಷ್ಪಲತಾ ಮುಖ್ಯ ಭಾಷಣ ಮಾಡುವರು. ರಾಮಸಮುದ್ರದ ಮಂಜುನಾಥ್ ಮತ್ತು ತಂಡದವರಿಂದ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ. ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶಿವಾಜಿ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚÀಂದ್ರ ಚಾಲನೆ ನೀಡುವರು ಎಂದು ಪ್ರಕಟಣೆ ತಿಳಿಸಿದೆ. ------------------------------------------------------------------- ಫೆ. 21ರಂದು ಕಾನೂನು ಅರಿವು ನೆರವು- ಕಾರ್ಯಕ್ರಮ ಚಾಮರಾಜನಗರ, ಫೆ. 20 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 21ರಂದು ಮಧ್ಯಾಹ್ನ 2 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಇರುವ ಹಕ್ಕುಗಳ ಬಗ್ಗೆ ಕಾನೂನು ಅರಿವು ನೆರವು ಕಾರ್ಯಕ್ರಮ ಆಯೋಜಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಶಿವಬಸವಯ್ಯ ಅಧ್ಯಕ್ಷತೆ ವತಿಸುವರು. ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ ಮುಖ್ಯ ಅತಿಥಿಗಳಾಗಿ ಆಗಮಿಸುವರು. ವಕೀಲರಾದ ಅರುಣ್ ಕುಮಾರ್ ಮತ್ತು ಎ.ಎಸ್. ನಂಜುಂಡಸ್ವಾಮಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದÉ. --------------------------------------------------------------------------- ರಥಕ್ಕೆ ಬೆಂಕಿ ಪ್ರಕರಣ : ವಿಶೇಷ ತಂಡ ರಚನೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ ಚಾಮರಾಜನಗರ, ಫೆ. 20:- ನಗರದ ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರ ಸ್ವಾಮಿಯ ರಥಕ್ಕೆ ಬೆಂಕಿ ಬಿದ್ದ ಪ್ರಕರಣವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಖಂಡಿಸಿದ್ದಾರೆ. ಮೆಕ್ಕಾ ಪ್ರವಾಸದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರು ರಥಕ್ಕೆ ಬೆಂಕಿ ಬಿದ್ದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು ಪ್ರಕರಣದ ಬಗ್ಗೆ ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರೊಂದಿಗೆ ಚರ್ಚಿಸಿದ್ದೇನೆ. ಪ್ರಕರಣ ಕುರಿತು ತನಿಖೆ ನಡೆಸಲು ವಿಶೇಷ ತಂಡವನ್ನು ರಚಿಸುವಂತೆ ಸೂಚಿಸಿರುವುದಾಗಿ ಸಚಿವರು ತಿಳಿಸಿದ್ದಾರೆ. ಮೆಕ್ಕಾ ಪ್ರವಾಸದಿಂದ ತಾವು ಹಿಂದಿರುಗಿದ ಕೂಡಲೇ ಚಾಮರಾಜನಗರಕ್ಕೆ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿರುವ ಸಚಿವರು ಬೆಂಕಿ ಬಿದ್ದ ಕೃತ್ಯ ನಡೆಯಲು ಏನೇ ಕಾರಣವಿರಲಿ ಅದನ್ನು ಶೀಘ್ರವೇ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಶಾಂತ ರೀತಿಯಿಂದ ಇದ್ದು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಪ್ರಕರಣ ತನಿಖೆಗೆ ಸಹಕರಿಸಬೇಕೆಂದು ಉಸ್ತುವಾರಿ ಸಚಿವರು ಮನವಿ ಮಾಡಿದ್ದಾರೆ. -------------------------------------------------------------------------- ಸಾಹಸ ಚಾರಣ ಕ್ರೀಡೆಗೆ ಯುವಕ ಯುವತಿಯರಿಂದ ಅರ್ಜಿ ಆಹ್ವಾನ ಚಾಮರಾಜನಗರ, ಫೆ. 20 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ರಾಕ್ ಕ್ಲೈಮಿಂಗ್, ರಿವರ್ ಕ್ರಾಸ್ ಸಾಹಸ ಚಾರಣ ಕ್ರೀಡೆಯನ್ನು ಮಾರ್ಚ್ 3 ರಿಂದ 5ರವರೆಗೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕುಂತಿಬೆಟ್ಟದಲ್ಲಿ ಏರ್ಪಡಿಸಲಾಗುವುದು. 15 ರಿಂದ 35ರ ವಯೋಮಿತಿಯ ಜಿಲ್ಲೆಯ ಯುವಜನರು, ನೊಂದಾಯಿತ ಸಂಘಗಳ ಯುವಕ ಯುವತಿಯರು, ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದ್ದು ದಿನಭತ್ಯೆ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖಾ ವತಿಯಿಂದ ನೀಡಲಾಗುತ್ತದೆ. ಆಸಕ್ತರು ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಫೆಬ್ರವರಿ 25ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 08226-224932, ಮೊ. 9482718278 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. _----------------------------------------------------------------------------------- ಫೆ. 25ರಂದು ಕೇಂದ್ರೀಯ ವಿದ್ಯಾಲಯದಲ್ಲಿ ಶಿಕ್ಷಕರ ಹುದ್ದೆಗಳಿಗೆ ನೇರ ಸಂದರ್ಶನ >ಚಾಮರಾಜನಗರ, ಫೆ. 20 (ಕರ್ನಾಟಕ ವಾರ್ತೆ):- ನಗರದ ಕೇಂದ್ರೀಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಫೆಬ್ರವರಿ 25ರಂದು ಬೆಳಿಗ್ಗೆ 9 ಗಂಟೆಗೆ ಶಾಲಾ ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರು, ಸಂಗೀತ (ಪಿಆರ್‍ಟಿ), ಇಂಗ್ಲೀಷ್, ಹಿಂದಿ, ಸಂಸ್ಕøತ, ವಿಜ್ಞಾನ, ಗಣಿತ, ಸಮಾಜ ವಿಜ್ಞಾನ, ದೈಹಿಕ ಶಿಕ್ಷಕರು, ವರ್ಕ್ ಎಕ್ಸ್‍ಪೀರಿಯನ್ಸ್, ಕನ್ನಡ (ಪಾರ್ಟ್ ಟೈಂ) ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಯೋಗ ತರಬೇತುದಾರರು (ಪಾರ್ಟ್ ಟೈಂ), ಗಣಕಯಂತ್ರ ತರಬೇತುದಾರರು, ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತದೆ. ಅಭ್ಯರ್ಥಿಗಳು ಸ್ವವಿವರ, ಅಂಕಪಟ್ಟಿಯೊಂದಿಗೆ ಎಲ್ಲಾ ದಾಖಲೆಗಳ ಒಂದು ಪ್ರತಿ ಜೆರಾಕ್ಸ್ ಅನ್ನು ತರಬೇಕು. ವಿದ್ಯಾರ್ಹತೆ, ವೇತನ, ಇನ್ನಿತರ ಸಂಪೂರ್ಣ ಮಾಹಿತಿಗೆ ಞvsಚಿಟಿgಚಿಣhಚಿಟಿ.ಟಿiಛಿ.iಟಿ ಮತ್ತು ಞvಛಿhಚಿmಚಿಡಿಚಿರಿಚಿಟಿಚಿgಡಿಚಿ.ಚಿಛಿ.iಟಿ ನೋಡುವಂತೆ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ. ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ ----------------------------------------------------------------------------------------- ಚಾಮರಾಜನಗರ, ಫೆ. 20:- ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಒಂದು ವರ್ಷದ ಅವಧಿಗೆ ಗೌರವಧನದ ಆಧಾರದ ಮೇಲೆ ಲೆಕ್ಕಾಧಿಕಾರಿ ಕಂ ಕಚೇರಿ ಸಹಾಯಕರಾಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಬಿಕಾಂ ಪದವಿ ಹೊಂದಿರಬೇಕು. ಅಕೌಂಟೆಂಟ್ ಹುದ್ದೆಯಲ್ಲಿ 3 ವರ್ಷಗಳ ಅನುಭವವಿರಬೇಕು. ಕಂಪ್ಯೂಟರ್ ಅನುಭವ ಹೊಂದಿದ್ದು ಟ್ಯಾಲಿ ಸಾಪ್ಟ್‍ವೇರನ್ನು ಉಪಯೋಗಿಸುವ ಜ್ಞಾನ ಕೌಶಲ್ಯ ಇರಬೇಕು. ಕಚೇರಿ ಪತ್ರ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ ಕೇಂದ್ರ ಕಚೇರಿಗೆ ಕಳುಹಿಸುವ ಪರಿಣತಿ ಹೊಂದಿರಬೇಕು. 40 ವರ್ಷದ ಒಳಗಿರಬೇಕು. ಅರ್ಹ ಅಭ್ಯರ್ಥಿಗಳು ಸ್ವವಿವರವುಳ್ಳ ಮಾಹಿತಿ, ವಿದ್ಯಾರ್ಹತೆ, ಅನುಭವ, ಪ್ರಮಾಣಪತ್ರವನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಚಾಮರಾಜನಗರ ಇವರಿಗೆ ನಮೂದಿಸಿ ಯೋಜನಾ ನಿರ್ದೆಶಕರ ಕಚೇರಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ರೂ. ನಂ. 222, ಜಿಲ್ಲಾಡಳಿತ ಭವನ, ಚಾಮರಾಜನಗರ ಇವರಿಗೆ ಫೆಬ್ರವರಿ 28ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರ ಕಚೇರಿಯ ದೂ.ಸಂ. 08226-222195 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. iv dir="ltr" style="text-align: left;" trbidi="on">

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು