Tuesday, 28 February 2017

28-02-2017 ಚಾಮರಾಜನಗರ ಸುದ್ದಿಗಳು ( ಬರ ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ : ಶಾಸಕರಾದ ಎಸ್ ಜಯಣ್ಣ, ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ)

///////////////////////////////////////////////////////////////////////////////////////////////////////////////////////////////////////////////////////////////////////////////// ಬರ ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮ : ಶಾಸಕರಾದ ಎಸ್ ಜಯಣ್ಣ ಚಾಮರಾಜನಗರ, ಫೆ. 28- ಜಿಲ್ಲೆಯಲ್ಲಿ ತಲೆದೋರಿರುವ ಬರಗಾಲ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜನತೆ ಜಿಲ್ಲಾ ಹಾಗೂ ತಾಲುಕು ಆಡಳಿತದೊಂದಿಗೆ ಸಹಕರಿಸಬೇಕೆಂದು ಶಾಸಕರಾದ ಎಸ್. ಜಯಣ್ಣ ತಿಳಿಸಿದರು. ತಾಲೂಕಿನ ಸಂತೆಮರಹಳ್ಳಿಯಲ್ಲಿ ಇಂದು ಜನರ ಕುಂದುಕೊರತೆ ಆಲಿಸುವ ಸಲುವಾಗಿ ಆಯೋಜಿಸಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬರಪರಿಹಾರ ಕಾಮಗಾರಿ ಕೈಗೊಳ್ಳಲು ಹಣದ ಕೊರತೆಯಿಲ್ಲ. ಆದರೆ ಮೇವು ಕೊರತೆ ಕಾಡುತ್ತಿದೆ. ಆದರೂ ಹೊರಭಾಗಗಳಿಂದ ಮೇವು ಖರೀದಿಸಿ ಪರಿಸ್ಥಿತಿ ಪರಿಹರಿಸಲು ಕ್ರಮ ವಹಿಸಲಾಗುತ್ತದೆ. ಇನ್ನು ಎರಡೂವರೆ ತಿಂಗಳು ಬರ ಪರಿಸ್ಥಿತಿಯನ್ನು ಅತ್ಯಂತ ಅವಶ್ಯಕ ಕ್ರಮಗಳೊಂದಿಗೆ ನಿಭಾಯಿಸುವ ಹೊಣೆಗಾರಿಕೆ ಇದೆ ಎಂದರು. ನೀರಿನ ಸಮಸ್ಯೆ ಪರಿಹಾರವಾಗಬೇಕಾದರೆ ಪ್ರಗತಿಯಲ್ಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಮಾರ್ಚ್ 10ರ ವೇಳೆಗೆ ರಾ ವಾಟರ್ ಪೂರೈಕೆ ಮಾಡಲೇಬೇಕು. ತಾಲೂಕಿನ 194 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆಯನ್ನು 3 ಹಂತದಲ್ಲಿ ಎಷ್ಟು ಶೀಘÀ್ರವೋ ಅಷ್ಟು ಅವಧಿಯೊಳಗೆ ನೀರು ತಲುಪಿಸುವ ಕೆಲಸವನ್ನು ಮಾಡಲೇಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಹಗಲಿರುಳು ಶ್ರಮ ವಹಿಸಿದರೆ ಬರಗಾಲದಲ್ಲಿ ನೀರಿನ ಬವಣೆ ತಪ್ಪಿಸಬಹುದು. ಹೀಗಾಗಿ ಜಿಲ್ಲಾಧಿಕಾರಿ ಇತರೆ ಅಧಿಕಾರಿಗಳೊಂದಿಗೆ ತಾವು ಸಮಾಲೋಚಿಸಿ ಸೂಚನೆ ನೀಡಿರುವುದಾಗಿ ಶಾಸಕರು ತಿಳಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜನರಿಗೆ ಅನುಕೂಲವಾಗುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಈ ಯೋಜನೆಯಡಿ ಜನರಿಗೆ ಉದ್ಯೋಗ ದೊರಕುವ ಹಾಗೆ ಕ್ರಮ ವಹಿಸಬೇಕು. ಯೋಜನೆ ಸಮರ್ಪಕವಾಗಿ ಬಳಸಿಕೊಂಡು ಯಶಸ್ವಿಯಾಗಿ ನಿರ್ವಹಿಸುವಂತೆ ಜಯಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಕುಡಿಯುವ ನೀರು ಪೂರೈಸುವ ಕೆಲಸಕ್ಕೆ ಆದ್ಯತೆ ಕೊಟ್ಟಿದ್ದು ನಿರಂತರವಾಗಿ ಪ್ರಯತ್ನಗಳು ನಡೆಯುತ್ತಿವೆ. ಜಾನುವಾರುಗಳಿಗೆ ಮೇವು ಅಭಾವ ನೀಗಿಸುವ ಸಲುವಾಗಿ ಗೋಶಾಲೆಯನ್ನು ಮತ್ತಷ್ಟು ತೆರೆಯಬೇಕೆಂಬ ಬೇಡಿಕೆ ಬಂದಿದೆ. ಆದರೆ ಮೇವು ಲಭ್ಯತೆಯ ಅನುಗುಣವಾಗಿ ಗೋಶಾಲೆ ತೆರೆಯಬೇಕಿದೆ. ಉಮ್ಮತ್ತೂರಿನಲ್ಲಿ ಮತ್ತೊಂದು ಗೋಶಾಲೆ ತೆರೆಯಲು ಪರಿಶೀಲನೆ ನಡೆಸಲಾಗಿದೆ. ಶೀಘ್ರವೇ ಗೋಶಾಲೆ ತೆರೆಯಲು ಕ್ರಮ ತೆಗೆದುಕೊಳ್ಳಲಾಗುತ್ತದÉ ಎಂದರು. ಜಿಲ್ಲಾಡಳಿತ ಮಳವಳ್ಳಿ, ಟಿ. ನರಸೀಪುರ ಸೇರಿದಂತೆ ಹೊರ ಜಿಲ್ಲೆಗಳಿಂದ ಮೇವು ಖರೀದಿಸಿ ಪೂರೈಸುತ್ತಿದೆ. ಪಕ್ಕದ ಜಿಲ್ಲೆಗಳಲ್ಲೂ ಪ್ರಸ್ತುತ ಮೇವು ಲಭ್ಯವಾಗುತ್ತಿಲ್ಲ. ಹೀಗಾಗಿ ಹೊಸಪೇಟೆಯಿಂದ ಮೇವು ಖರೀದಿಸಿ ತರಲಾಗುತ್ತಿದೆ. ಬರಪರಿಹಾರ ಕೆಲಸಗಳಿಗೆ ಹಣ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ರಾಮು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಮಾತನಾಡಿ ಸಂತೆಮರಹಳ್ಳಿ ಭಾಗದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಜನರು ಮುಂದಿಟ್ಟಿರುವ ಸಮಸ್ಯೆ ಬೇಡಿಕೆಗಳ ಬಗ್ಗೆ ಶೀಘ್ರವೇ ಅಗತ್ಯ ಕ್ರಮ ವಹಿಸುತ್ತೇನೆ. ಇನ್ನು 40 ದಿನಗಳಲ್ಲಿ 8 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಠಿ ಮಾಡುವ ಗುರಿ ನೀಡಲಾಗಿದೆ. ಈ ಬಗ್ಗೆ ಯೋಜನಾ ಬದ್ಧವಾಗಿ ಕಾರ್ಯಕ್ರಮ ಪೂರ್ಣಗೊಳಿಸಲು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು. ಸಭೆಯ ಆರಂಭದಲ್ಲಿ ಕುಡಿಯುವ ನೀರು, ಮೇವು, ಶೌಚಾಲಯ ನಿರ್ಮಾಣಕ್ಕೆ ಎದುರಾಗಿರುವ ಮರಳಿನ ಸಮಸ್ಯೆ ಸೇರಿದಂತೆ ಹಲವು ಅಹವಾಲುಗಳನ್ನು ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು, ನಾಗರಿಕರು ಮುಂದಿಟ್ಟರು. ಸಭೆಯಲ್ಲಿ ಕಂದಾಯ ಹಾಗೂ ಕೃಷಿ ಇಲಾಖೆಯ ಸವಲತ್ತುಗಳನ್ನು ಫಲಾನುಭವಿಗಳಿಗೆ ಶಾಸಕರು, ಇತರೆ ಜನಪ್ರತಿನಿಧಿಗಳು ವಿತರಿಸಿದರು. ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಜನಸಂಪರ್ಕ ಸಭೆಯನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಶೀಲ, ಯೋಗೇಶ್, ತಾಲೂಕು ಪಂಚಾಯತ್ ಸದಸ್ಯರಾದ ಸುಧಾಮಲ್ಲಣ್ಣ, ಮಹದೇವಸ್ವಾಮಿ, ಯಶೋಧ, ಕೆ. ರವೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶೋಭ, ಜಡೆಸ್ವಾಮಿ, ಪ್ರಭಾಮಣಿ, ಶೀಲ, ಶೋಭ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು. ////////////////////////////////////////////////////////////////////////////////////////////////////////////////// ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಚಾಮರಾಜನಗರ, ಫೆ. 28 - ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಫೆಬ್ರವರಿ 28 ಹಾಗೂ ಮಾರ್ಚ್ 1ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆಬ್ರವರಿ 28ರಂದು ರಾತ್ರಿ ಚಾಮರಾಜನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿ ಬಳಿಕ ಮಾರ್ಚ್ 1ರಂದು ಬೆಳಿಗ್ಗೆ 10 ಗಂಟೆಗೆ ಯಳಂದೂರಿನಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರೆ. //////////////////////////////////////////////////////////////////////////////// ವಿವಿಧ ಕೌಶಲ ತರಬೇತಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಚಾಮರಾಜನಗರ, ಫೆ. 28:- ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಯುವಜನರಿಗೆ ವಿವಿಧ ತರಬೇತಿಗಳನ್ನು ನೀಡಲು ಅರ್ಜಿ ಆಹ್ವಾನಿಸಿದೆ. ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆ ಉಳ್ಳವರಿಗೆ ಬ್ಯೂಟಿ ಥೆರಪಿಸ್ಟ್ ಮತ್ತು ಹೇರ್ ಸ್ಟೈಲಿಂಗ್ ಲೆವೆಲï, ಅಸಿಸ್ಟೆಂಟ್ ಫೈರ್ ಆಪರೇಟರ್, ಪೈಲ್ ಅಂಡ್ ರೆಸ್ಕ್ಯೂ ಆಪರೇಟರ್, ಅಕೌಂಟ್ಸ್ ಟ್ಯಾಲಿ, ಡಿಟಿಪಿ ಮತ್ತು ಪ್ರಿಂಟಿಂಗ್ ಪಬ್ಲಿಷಿಂಗ್ ಅಸಿಸ್ಟೆಂಟ್, ಕಂಪ್ಯೂಟರ್ ಹಾರ್ಡ್‍ವೇರ್, ನೆಟ್ ವರ್ಕ್ ಅಸಿಸ್ಟೆಂಟ್, ಬಿಪಿಓ ನಾನ್ ವಾಯ್ಸ್ ತರಬೇತಿ ನೀಡಲಾಗುತ್ತದೆ. 8ನೇ ತರಗತಿ ವಿದ್ಯಾರ್ಹತೆ ಉಳ್ಳವರಿಗೆ ಸೋಲಾರ್ ಪಿವಿ ಟೆಕ್ನೀಷಿಯನ್, ಸೋಲಾರ್ ಹಾಟ್ ವಾಟರ್ ಸಿಸ್ಟಂ ಇನ್‍ಸ್ಟಾಲೇಷನ್, ಬೇಸಿಕ್ ಇನ್ ವೆಲ್ಡಿಂಗ್ ಟೆಕ್ನಾಲಜಿ, ಆರ್ಕ್ ವೆಲ್ಡಿಂಗ್, ಟಿಐಜಿ ವೆಲ್ಡರ್, ರಿಪೇರಿ ಮತ್ತು ನಿರ್ವಹಣೆ, ಪೈಪ್ ವೆಲ್ಡರ್ ತರಬೇತಿ ನೀಡಲಾಗುತ್ತದೆ. 5ನೇ ತರಗತಿ ವಿದ್ಯಾರ್ಹತೆ ಉಳ್ಳವರಿಗೆ ಟೈಲರಿಂಗ್, ಜರ್ದೋಸಿ ತರಬೇತಿ ಕೊಡಲಾಗುತ್ತದೆ. ಸ್ಪೋಕನ್ ಇಂಗ್ಲೀಷ್, ಕಮ್ಯುನಿಕೇಷನ್ ಸ್ಕಿಲ್, ಸಾಪ್ಟ್ ಸ್ಕಿಲ್ ತರಬೇತಿ ಸಹ ಅಭ್ಯರ್ಥಿಗಳು ಪಡೆಯಬಹುದಾಗಿದೆ. ಆಸಕ್ತರು ನಿಗಧಿತ ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಚೇರಿಯಿಂದ ಉಚಿತವಾಗಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 4ರೊಳಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. /////////////////////////////////////////////////////////////////////////////////////////////////////////////////////////// ಕೊಳ್ಳೇಗಾಲ: ಮಹಿಳಾ ಬೀದಿಬದಿ ವ್ಯಾಪಾರಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ ಚಾಮರಾಜನಗರ, ಫೆ. 28 - ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು 2016-17ನೇ ಸಾಲಿನಲ್ಲಿ ಸಮೃದ್ಧಿ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ನಡೆಸುತ್ತಿರುವ ನಗರ ಮತ್ತು ಗ್ರಾಮೀಣ ಪ್ರದೇಶದ ಬಡತನ ರೇಖೆಗಿಂತ ಕೆಳಗಿರುವವರ ಆರ್ಥಿಕ ಸಬಲೀಕರಣಕ್ಕಾಗಿ ತಲಾ 10 ಸಾವಿರ ರೂ.ಗಳ ಪ್ರೋತ್ಸಾಹಧನ ಒದಗಿಸಲು ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 60ರ ವಯೋಮಿತಿಯವರು ಅರ್ಹರು. ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಂದ ಬೀದಿಬದಿ ವ್ಯಾಪಾರಿ ಎಂದು ನೋಂದಣಿ ಮಾಡಿಸಿರುವ ಗುರುತಿನ ಚೀಟಿ ಹೊಂದಿರಬೇಕು. ಗ್ರಾಮೀಣ ಪ್ರದೇಶದ ವ್ಯಾಪ್ರಿಯಲ್ಲಿ ಪಿಡಿಓ ಅವರಿಂದ ಬೀದಿಬದಿ ವ್ಯಾಪಾರಿ ಎಂದು ದೃಢೀಕರಿಸಿದ ದಾಖಲೆ ಪಡೆದಿರಬೇಕು. ಮತದಾರರ ಗುರುತಿನ ಚೀಟಿ, ಆಧಾರ್, ಬಿಪಿಎಲ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್ ಖಾತೆ ಕಡ್ಡಾಯವಾಗಿ ಹೊಂದಿರಬೇಕು. ಕೊಳ್ಳೇಗಾಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 5ರೊಳಗೆ ಕಚೇರಿಗೆ ದ್ವಿಪ್ರತಿಯಲ್ಲಿ ಸಲ್ಲಿಸಬೇಕು. ನಿಗದಿಪಡಿಸಿದ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ವಿವರಗಳಿಗೆ ಕೊಳ್ಳೇಗಾಲ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 08224-262367 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ. ////////////////////////////////////////////////////////////////////////////////////////////////////////////// ಮಾರ್ಚ್1ರಂದು ನಗರದಲ್ಲಿ ‘ಟಾರ್ಗೆಟ್-60’ ಕೈಪಿಡಿ ಬಿಡುಗಡೆ ಚಾಮರಾಜನಗರ, ಫೆ. 28 :- ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸುವ ಸಲುವಾಗಿ ಸಿದ್ದಪಡಿಸಲಾಗಿರುವ ‘ಟಾರ್ಗೆಟ್-60’ ಕೈಪಿಡಿ ಬಿಡುಗಡೆ ಸಮಾರಂಭವನ್ನು ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಮಾರ್ಚ್ 1 ರಂದು ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಲಾಗಿದೆ. ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು ಇತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದರು. /////////////////////////////////////////////////////////////////////////////////////////////////////////// ಮಾರ್ಚ್1ರಂದು ನಗರದಲ್ಲಿ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಚಾಮರಾಜನಗರ, ಫೆ. 28 - ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸಹಯೋಗದೊಂದಿಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ ಸಮಾರಂಭವು ಮಾರ್ಚ್ 1ರಂದು ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿದೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ. ಎಂ. ರಾಮಚಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಧ ಸುಹೇಲ್ ಅಲಿಖಾನ್, ನಗರ ಸಭೆಯ ಅಧ್ಯಕ್ಷರಾದ ಎಸ್.ಎನ್. ರೇಣುಕ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಬ¸ವರಾಜು, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದÀ ಪಿ.ಎನ್ ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯರಾದ ಜಿ.ಜೆ ಕಾವೇರಿಯಪ್ಪ, ಮೈಸೂರಿನ ಹಿರಿಯ ಪರಿಸರ ಅಧಿಕಾರಿ ಕೆ.ಎಂ. ಲಿಂಗರಾಜು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.. ///////////////////////////////////////////////////////////////////////////////////////////////////////////////////////

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು