Saturday, 4 February 2017

ಚಾಮರಾಜನಗರಪ್ರದಸ, ಆಹಾರ ನಾಗರಿಕ ಸರಬರಾಜು ನಿಗಮದ ಹಿರಿಯ ಸಹಾಯಕ ಹುದ್ದೆಯ ಸ್ಪಧಾತ್ಮಕ ಪರೀಕ್ಷೆ : ನಿಷೇದಾಜ್ಞೆ ಜಾರಿ

ಚಾಮರಾಜನಗರ, ಫೆ. 04 - ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮದರ್ಜೆ ಸಹಾಯಕರ ಹಾಗೂ ಆಹಾರ ನಾಗರಿಕ ಸರಬರಾಜು ನಿಗಮದಲ್ಲಿನ ಹಿರಿಯ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ ಒಟ್ಟು 17 ಉಪ ಪರೀಕ್ಷಾ ಕೇಂದ್ರದಲ್ಲಿ ಫೆಬ್ರವರಿ 5ರಂದು ನಡೆಸಲಿದ್ದು ಈ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಪವಿತ್ರತೆ ಮತ್ತು ಪಾರದರ್ಶಕತೆಯನ್ನು ಕಾಪಾಡುವ ಸಲುವಾಗಿ ಹಾಗೂ ಪರೀಕ್ಷಾ ಕಾರ್ಯವು ನ್ಯಾಯೋಚಿತವಾಗಿ ನಡೆಯಲೆಂಬ ಸದುದ್ದೇಶದಿಂದ ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಫೆಬ್ರವರಿ 5ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸಾರ್ವಜನಿಕ ನಿಷೇಧಿತ ಸ್ಥಳವೆಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ನಿಷೇದಾಜ್ಞೆ ಆದೇಶವು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯವಾಗುವುದಿಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ. ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಸೂಚನೆ ಚಾಮರಾಜನಗರ, ಫೆ. 04 (- ಕರ್ನಾಟಕ ಲೋಕಸೇವಾ ಆಯೋಗವು ಪ್ರಥಮದರ್ಜೆ ಸಹಾಯಕರು, ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಹಿರಿಯ ಸಹಾಯಕರು ಮತ್ತು ಕಿರಿಯ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಫೆಬ್ರವರಿ 5, 11 ಹಾಗೂ 12ರಂದು ನಡೆಸುತ್ತಿದ್ದು ಈ ಸಂದರ್ಭದಲ್ಲಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳೂ ಹಲವು ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಡೌನ್ ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಮತ್ತು ಅವರ ಭಾವಚಿತ್ರವಿರುವ ಮೂಲ, ಜೆರಾಕ್ಸ್ ಪ್ರತಿಯ ಗುರುತಿನ ಚೀಟಿ (ಚುನಾವಣಾ ಐಡಿ/ ಆಧಾರ್ ಕಾರ್ಡ್/ ಡ್ರೈವಿಂಗ್ ಲೈಸೆನ್ಸ್/ ಪಾನ್ ಕಾರ್ಡ್/ ಪಾಸ್ ಪೋರ್ಟ್/ ಸರ್ಕಾರಿ ನೌಕರರಾಗಿದ್ದಲ್ಲಿ ಗುರುತಿನ ಚೀಟಿ ಇವುಗಳ ಪೈಕಿ ಯಾವುದಾದರೊಂದು) ದಾಖಲಾತಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಇಲ್ಲವಾದಲ್ಲಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಮುಖ್ಯ ದ್ವಾರದಲ್ಲಿಯೇ ಮೊಬೈಲ್ ಫೋನ್, ಬ್ಲೂ ಟೂತ್ ಡಿವೈಸ್, ಪೇಜರ್, ವೈರ್‍ಲೆಸ್, ಕ್ಯಾಲಿಕ್ಯುಲೇಟರ್, ಇತರೆ ಮೊದಲಾದ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೋಲುಗಳು, ಮಾರ್ಕರ್‍ಗಳು, ಲಾಂಗ್ ಟೇಬಲ್, ವೈಟ್ ಫ್ಲೂಯಿಡ್, ಬ್ಲೇಡು, ಎರೇಸರ್ ಇವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಸೂಚನೆಗಳನ್ನು ಪಾಲಿಸದೇ ಇದ್ದಲ್ಲಿ ಅವರ ಅಭ್ಯರ್ಥಿತ್ವವನ್ನು ರದ್ದುಗೊಳಿಸಿ ಆಯೋಗವು ನಡೆಸುವ ಎಲ್ಲಾ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುವುದೆಂದು ಆಯೋಗವು ಎಚ್ಚರಿಕೆ ನೀಡಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. iv dir="ltr" style="text-align: left;" trbidi="on">

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು