Tuesday, 7 March 2017
06-03-3017ಚಾಮರಾಜನಗರ ಸುದ್ದಿಗಳು( ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಸಂಸದರಿಂದ ಚಾಲನೆ)
ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಸಂಸದರಿಂದ ಚಾಲನೆ
ಚಾಮರಾಜನಗರ, ಮಾ. 06 - ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿರುವ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಇಂದು ಚಾಲನೆ ನೀಡಿದರು.
ಒಟ್ಟು 189.48 ಲಕ್ಷ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಕಾಮಗಾರಿಗೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರೊಂದಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ನಡೆದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಧ್ರುವನಾರಾಯಣ ಅವರು ರಾಜ್ಯ ಸರ್ಕಾರ ಎಸ್‍ಇಪಿ, ಟಿಎಸ್‍ಪಿ ಯೋಜನೆಗೆ ಅತಿ ಹೆಚ್ಚು ಹಣವನ್ನು ಮೀಸಲಿಟ್ಟಿದೆ. ಹೀಗಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚು ಹಣವನ್ನು ವಿನಿಯೋಗಿಸಲಾಗುತ್ತಿದೆ ಎಂದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳಿಗೆ ನೀಡುತ್ತಿರುವ ವಿಶೇಷ ಹೆಚ್ಚುವರಿ ಅನುದಾನ ಪರಿಣಾಮ ಡಾ. ಬಿ.ಆರ್. ಅಂಬೇಡ್ಕರ್ ಭವನ ಸೇರಿದಂತೆ ಇನ್ನಿತರ ಭವನಗಳಿಗೂ ಹೆಚ್ಚಿನ ನೆರವು ದೊರೆಯುತ್ತಿದೆ. ತಾಲೂಕು ಹೋಬಳಿ ಕೇಂದ್ರಗಳಲ್ಲೂ ಭವನ ನಿರ್ಮಾಣ ಮಾಡಲು ಸಾಕಷ್ಟು ಹಣ ಮಂಜೂರು ಮಾಡಲಾಗುತ್ತಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಪ್ರಸ್ತುತ ಜಿಲ್ಲಾ ಕೇಂದ್ರದ ಜಿಲ್ಲಾಮಟ್ಟದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಯಡಿ ಹಲವು ಕೆಲಸಗಳನ್ನು ಪೂರ್ಣಗೊಳಿಸಿ ಸುಸಜ್ಜಿತಗೊಳಿಸಲಾಗುತ್ತಿದೆ. ಭವನ ಸರ್ವ ರೀತಿಯಲ್ಲಿ ಸಿದ್ಧಗೊಂಡರೆ ಸರ್ಕಾರಿ ಹಾಗೂ ಖಾಸಗಿ ಕಾರ್ಯಕ್ರಮಗಳಿಗೂ ಅನುಕೂಲವಾಗಲಿದೆ. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ಭವನದ ಬಾಡಿಗೆಯಲ್ಲಿ ರಿಯಾಯಿತಿ ನೀಡಲಾಗುತ್ತಿದೆ ಎಂದರು.
ಭವನದ ಕಾಮಗಾರಿ ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು. ನಿಗಧಿತ ವೇಳೆಗೆ ಕೆಲಸ ಪೂರ್ಣವಾಗಬೇಕು. ಸುಣ್ಣಬಣ್ಣ ಬಳಿಯುವ ಕೆಲಸವೂ ಅಚ್ಚುಕಟ್ಟಾಗಿ ಇರಬೇಕು. ಊಟದ ಹಾಲ್, ಸಭಾಂಗಣ, ಭವನದ ಮುಂದಿನ ಆವರಣ ಸೇರಿದಂತೆ ಎಲ್ಲವೂ ಪರಿಪೂರ್ಣವಾಗಿ ಇರಬೇಕು ಎಂದು ಧ್ರುವನಾರಾಯಣ ಸೂಚಿಸಿದರು.
ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆದ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ ಸರ್ಕಾರದ ಅನುದಾನದ ನೆರವಿನಿಂದ ಎಲ್ಲೆಡೆ ಭವನಗಳ ನಿರ್ಮಾಣಕ್ಕೆ ಅನುಕೂಲವಾಗಿದೆ. ಭವನಗಳು ಸದ್ಬಳಕೆಯಾಗಬೇಕು ಎಂದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ನಗರಸಭೆ ಅಧ್ಯಕ್ಷರಾದ ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲುಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು, ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಮಾಜಿ ನಗರಸಭಾ ಅಧ್ಯಕ್ಷರಾದ ನಂಜುಂಡಸ್ವಾಮಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಮಾ. 8ರಂದು ನಗರದಲ್ಲಿ ಜನಮನ ಕಾರ್ಯಕ್ರಮ
ಚಾಮರಾಜನಗರ, ಮಾ. 06 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾ ಆಶ್ರಯದಲ್ಲಿ ಮಾರ್ಚ್ 8ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಜನಮನ - ಫಲÁನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸುವರು.
ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು.
ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎಸ್. ನಾಗರಾಜು (ಸಂದೇಶ್ ನಾಗರಾಜು), ಎಸ್. ಜಯಣ್ಣ, ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಕಾವೇರಿ ಜಲಾನಯನ ಯೋಜನೆಗಳ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
ಮಾ. 7ರಂದು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಕುರಿತು ವಿಚಾರ ಸಂಕಿರಣ, ಕಾರ್ಯಾಗಾರ
ಚಾಮರಾಜನಗರ, ಮಾ. 06 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ್ರಜಾಪರಿವರ್ತನಾ ವೇದಿಕೆ ಸಹಕಾರದೊಂದಿಗೆ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಹಾಗೂ 1995ರ ಕುರಿತಾದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರವನ್ನು ಮಾರ್ಚ್ 7ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಾಗಾರ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಪ್ರಸ್ತಾವಿತ ನಳಂದ ಬೌದ್ಧ ವಿ.ವಿ.ಯ ಪೂಜ್ಯ ಬಂತೆ ಬೋಧಿದತ್ತ ಅವರು ದಿವ್ಯ ಸಾನಿಧ್ಯ ವಹಿಸುವರು.
ಮೈಸೂರಿನ ಉರಿಲಿಂಗಪೆದ್ದಿಮಠದ ಪೀಠಾಧ್ಯಕ್ಷರಾದ ಜ್ಞಾನಪ್ರಕಾಶ ಸ್ವಾಮೀಜಿ, ಹೈಕೋರ್ಟ್ ವಕೀಲರಾದ ಎಚ್. ಮೋಹನ್ ಕುಮಾರ್, ಕವಿ ಚಿಂತಕರು, ಮೈಸೂರು ವಿವಿ ಡಾ.ಬಿ.ಆರ್. ಅಂಬೇಡ್ಕರ್ ಪೀಠದ ಸಂದರ್ಶಕ ಪ್ರಾಧ್ಯಾಪಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಹಿರಿಯ ವಕೀಲರಾದ ಪುಟ್ಟರಾಜು ಅವರು ವಿಚಾರ ಮಂಡಿಸುವರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ತಹಸೀಲ್ದಾರ್ ಕೆ. ಪುರಂಧರ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್. ಪ್ರೇಮಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಇದೇವೇಳೆ ಭೀಮಗೀತೆ ಗಾಯನ ಕಾರ್ಯಕ್ರಮ ಸಹ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಉಮ್ಮತ್ತೂರಿನಲ್ಲಿ ಜಿಲ್ಲೆಯ 5ನೇ ಗೋಶಾಲೆಗೆ ಲೋಕಸಭಾ ಸದಸ್ಯರಿಂದ ಚಾಲನೆ
ಚಾಮರಾಜನಗರ, ಮಾ. 04- ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳ ಮೇವು ಅಭಾವ ನೀಗಿಸುವ ಸಲುವಾಗಿ ಜಿಲ್ಲೆಯಲ್ಲಿ ತೆರೆಯಲÁಗಿರುವ 5ನೇ ಗೋಶಾಲೆಗೆ ಇಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಚಾಲನೆ ನೀಡಿದರು.
ಚಾಮರಾಜನಗರ ತಾಲೂಕಿನ ಉಮ್ಮತ್ತೂರಿನಲ್ಲಿ ಜಿಲ್ಲೆಯ 5ನೇ ಗೋಶಾಲೆಯನ್ನು ಗೋವುಗಳಿಗೆ ಮೇವು ನೀಡುವ ಮೂಲಕ ಧ್ರುವನಾರಾಯಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಅತ್ಯಂತ ಭೀಕರ ಬರಗಾಲವನ್ನು ಎದುರಿಸುತ್ತಿದ್ದೇವೆ. ಸಂಕಷ್ಟ ಜನರ ನೆರವಿಗೆ ಬರುವ ಉದ್ದೇಶದಿಂದ ಸರ್ಕಾರ ಬರಪರಿಹಾರ ಕಾಮಗಾರಿ ಕೈಗೊಂಡಿದೆ. ಜಾನುವಾರುಗಳಿಗೆ ಮೇವು ಒದಗಿಸುವ ಉದ್ದೇಶದಿಂದ ಹೋಬಳಿಗೆ ಒಂದರಂತೆ ಗೋಶಾಲೆ ತೆರೆಯಲಾಗುತ್ತಿದೆ ಎಂದರು.
ಈಗಾಗಲೇ ಮಂಗಲ, ರಾಮಾಪುರ, ಹುತ್ತೂರು, ಬಂಡಳ್ಳಿಯಲ್ಲಿ ಗೋಶಾಲೆ ಆರಂಭಿಸಲಾಗಿದೆ. ಅಲ್ಲದೆ ಹಲವು ಭಾಗಗಳಲ್ಲಿ ಮೇವು ನಿಧಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು ಮೇವು ವಿತರಣೆ ನಿರತವಾಗಿವೆ. ಬರಗಾಲ ಸಂದರ್ಭದಲ್ಲಿ ಕೈಗೊಳ್ಳುತ್ತಿರುವ ಪರಿಹಾರ ಕಾಮಗಾರಿ ವಿಷಯದಲ್ಲಿ ಜನರೂ ಸಹ ಸಹಕರಿಸಬೇಕಾದ ಅಗತ್ಯವಿದೆದ ಎಂದು ಧ್ರುವನಾರಾಯಣ ತಿಳಿಸಿದರು.
ಗೋಶಾಲೆಯನ್ನು ಆರಂಭಿಸಿದರಷ್ಟೇ ಸಾಲದು, ಅದನ್ನು ಅಧಿಕಾರಿಗಳು ನಿರಂತರವಾಗಿ ಮೇವು, ಕುಡಿಯುವ ನೀರು ವ್ಯವಸ್ಥೆಯನ್ನು ನಿರಂತರವಾಗಿ ಕಲ್ಪಿಸಿ ನಿರ್ವಹಿಸುವ ಹೊಣೆಗಾರಿಕೆ ತೆಗೆದುಕೊಳ್ಳಬೇಕು. ಯಾವುದೇ ದೂರುಗಳಿಗೆ ಅವಕಾಶ ಬಾರದಂತೆ ಗೋಶಾಲೆಯನ್ನು ನಡೆಸುವ ಮೂಲಕ ರೈತರು ಜಾನುವಾರುಗಳ ಪೋಷಕರಿಗೆ ನೆರವಾಗಬೇಕು ಎಂದು ಸೂಚಿಸಿದರು.
ಉಮ್ಮತ್ತೂರು ಸೇರಿದಂತೆ ಒಟ್ಟು 24 ಕೆರೆಗಳಿಗೆ 236 ಕೋಟಿ ರೂ. ವೆಚ್ಚದಲ್ಲಿ ನೀರು ತುಂಬಿಸುವ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ತಾಂತ್ರಿಕ ಬಿಡ್ ಪೂರ್ಣಗೊಂಡಿದ್ದು ಫೈನಾನ್ಸಿಯಲ್ ಬಿಡ್ ಮಾತ್ರ ಬಾಕಿ ಉಳಿದಿದೆ. ಇನ್ನೊಂದು ತಿಂಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಆರಂಭಕ್ಕೆ ಮುಖ್ಯಮಂತ್ರಿಯವರಿಂದಲೇ ಚಾಲನೆ ಕೊಡಿಸಲಾಗುತ್ತದೆ. ಒಂದು ವರ್ಷ 6 ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಇದರಿಂದ ಅಂತರ್ಜಲ ಹೆಚ್ಚಳವಾಗಿ ಅನುಕೂಲವಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಮಾತನಾಡಿ ಬರಪರಿಸ್ಥಿತಿಯನ್ನು ನಿಭಾಯಿಸುವ ಸಲುವಾಗಿ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೇವು ಲಭ್ಯತೆ ಇಲ್ಲವಾದ್ದರಿಂದರೆ ಬಳ್ಳಾರಿಯಿಂದ ಮೇವು ಖರೀದಿಸಿ ವಿತರಿಸುವ ಕೆಲಸ ನಡೆದಿದೆ. ನೀರು, ನೆರಳು, ಮೇವು ಲಭ್ಯತೆ ಅನುಸಾರ ಗೋಶಾಲೆ ತೆರೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ತಾಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ. ಚಂದ್ರು ಮಾತನಾಡಿ ಈ ಭಾಗದಲ್ಲಿ ಗೋಶಾಲೆ ತೆರೆಯಬೇಕೆಂಬ ಬೇಡಿಕೆ ಜನರಿಂದ ಕೇಳಿಬಂದಿತ್ತು. ಸ್ಥಳೀಯರಾದ ಪುಟ್ಟಣ್ಣ ಅವರು ಗೋಶಾಲೆಗೆ ಜಾಗ ಕಲ್ಪಿಸಿಕೊಟ್ಟಿದ್ದಾರೆ. ಶಿವಣ್ಣ ಮತ್ತೊಬ್ಬರು ನೀರು ವ್ಯವಸ್ಥೆ ಮಾಡಲು ಮುಂದೆ ಬಂದಿದ್ದಾರೆ. ಹೀಗಾಗಿ ತಾಲೂಕು ಆಡಳಿತದೊಂದಿಗೆ ಸಹಕರಿಸಿರುವ ಹಿನ್ನೆಲೆಯಲ್ಲಿ ಗೋಶಾಲೆ ತೆರೆಯಲು ಅನುಕೂಲವಾಗಿದೆ ಎಂದು ಶ್ಲಾಘಿಸಿದರು.
ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ. ಸದಾಶಿವಮೂರ್ತಿ, ಚಾಮರಾಜನಗರ ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ನಿರ್ದೇಶಕರಾದ ಶಂಕರ ಮೂರ್ತಿ, ತಾ.ಪಂ. ಅಧ್ಯಕ್ಷರಾದ ಸುಧಾಮಲ್ಲಣ್ಣ, ಗ್ರಾ.ಪಂ. ಅಧ್ಯಕ್ಷರಾದ ಗೀತಾ, ಗೋಶಾಲೆ ತೆರೆಯಲು ನೆರವಾಗಿರುವ ಶಿವಣ್ಣ, ಪುಟ್ಟಣ್ಣ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment