Tuesday, 7 March 2017

07-03-2017 ಚಾಮರಾಜನಗರ ಸುದ್ದಿಗಳು (ದೌರ್ಜನ್ಯ ದಬ್ಬಾಳಿಕೆ ತಡೆಗೆ ಕಾನೂನು ಅರಿವು ಅಗತ್ಯ : ಜಿಲ್ಲಾಧಿಕಾರಿ ಬಿ. ರಾಮು)

///////////////////////////////////////////////////////////////////////////////////////// ದೌರ್ಜನ್ಯ ದಬ್ಬಾಳಿಕೆ ತಡೆಗೆ ಕಾನೂನು ಅರಿವು ಅಗತ್ಯ : ಜಿಲ್ಲಾಧಿಕಾರಿ ಬಿ. ರಾಮು ಚಾಮರಾಜನಗರ, ಮಾ. 07:- ದೌರ್ಜನ್ಯ, ದಬ್ಬಾಳಿಕೆ ತಡೆಯುವ ಸಲುವಾಗಿ ರೂಪಿಸಲಾಗಿರುವ ಕಾನೂನುಗಳ ಬಗ್ಗೆ ಜಾಗೃತಿ ಹೊಂದುವುದು ಅತ್ಯಂತ ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ್ರಜಾಪರಿವರ್ತನಾ ವೇದಿಕೆ ಸಹಕಾರದೊಂದಿಗೆ ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಹಾಗೂ 1995ರ ಕುರಿತಾದ ವಿಚಾರ ಸಂಕಿರಣ ಮತ್ತು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ದೌರ್ಜನ್ಯ, ಶೋಷಣೆ, ದಬ್ಬಾಳಿಕೆಯನ್ನು ತಡೆಯುವ ಸಲುವಾಗಿಯೇ ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ರಕ್ಷಣೆ ಪಡೆಯುವುದು ಪ್ರತಿಯೊಬ್ಬರ ಹಕ್ಕು. ಶೋಷಣೆಗೆ ಒಳಗಾದಾಗ ಕಾಯಿದೆಯಡಿ ರಕ್ಷಣೆ ಪಡೆಯಲು ಅವಕಾಶವಿದೆ. ಈ ಅವಕಾಶವನ್ನು ಬಳಸಿಕೊಳ್ಳದೇ ಹೋದರೆ ಇನ್ನಷ್ಟು ದಾಸ್ಯಕ್ಕೆ ಒಳಗಾಗಬೇಕಾಗುತ್ತದೆ. ಹೀಗಾಗಿ ಯಾವುದೇ ಹಿಂಜರಿಕೆ ಬಿಟ್ಟು ರಕ್ಷಣೆಗಾಗಿ ಇರುವ ಕಾಯಿದೆಗಳ ಬಗ್ಗೆ ಜಾಗೃತಿ ಹೊಂದಿ ಅದರ ನೆರವು ಪಡೆಯಬೇಕು ಎಂದರು. ಮುಗ್ಧತೆ, ಮೌಡ್ಯತೆ ಬಿಡಬೇಕು. ಭಯಭೀತಿಗೊಳಿಸಿ ತೊಂದರೆ ನೀಡುವವರ ವಿರುದ್ಧ ಹೋರಾಡಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಸೇರಿದಂತೆ ಶೋಷಿತರಿಗೆ ನೆರವಾಗುವ ಕಾಯಿದೆಗಳ ಬಗ್ಗೆ ತಿಳಿಸುವ ಸಣ್ಣ ಪುಸ್ತಕಗಳನ್ನು ಜನರಿಗೆ ನೀಡುವ ಸಲುವಾಗಿ ಮುದ್ರಣ ಮಾಡಲು ಸಮಾಜ ಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ. ಪುಸ್ತಕ ಮುದ್ರಣ ನೆರವಿಗೆ ಅವಶ್ಯವಿರುವ ಅನುದಾನ ಅಗತ್ಯವಿದ್ದರೆ ಸ್ಥಳೀಯ ಸಂಸ್ಥೆಗಳಿಂದ ಕ್ರೋಢೀಕರಿಸಿ ನೀಡಲಾಗುವುದು. ಉಪಯುಕ್ತ ಕಾಯಿದೆ ಮಾಹಿತಿ ನೀಡುವ ಪುಸ್ತಕಗಳು ಎಲ್ಲರ ಬಳಿ ಇರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಉರಿಲಿಂಗಪೆದ್ದಿಮಠದ ಪೀಠಾಧ್ಯಕ್ಷರಾದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ ಜಾತೀಯತೆ, ಅಸ್ಪøಶ್ಯತೆ ದೇಶಕ್ಕೆ ಮಾರಕವಾಗಿದೆ. ನಮ್ಮನ್ನು ನಾವು ಮೊದಲು ಗೌರವಿಸಿಕೊಳ್ಳಬೇಕಿದೆ. ಮಾನವೀಯತೆಯ ಅಡಿಗಲ್ಲಾಗಿರುವ ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ. ಮಹಿಳೆಯರಿಗೆ ಹಲವಾರು ಹಕ್ಕುಗಳನ್ನು ನೀಡುವ ಮೂಲಕ ತಲೆ ಎತ್ತಿ ನಿಲ್ಲಲು ಅಂಬೇಡ್ಕರ್ ಅವರು ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು. ವಕೀಲರಾದ ಎಚ್. ಮೋಹನ್ ಕುಮಾರ್ ಮಾತನಾಡಿ ಸಮಾಜವನ್ನು ಜಾಗೃತಗೊಳಿಸಬೇಕಾದ ಅಗತ್ಯವಿದೆ. ನಾಗರಿಕ ಹಕ್ಕು ಸಂರಕ್ಷಣಾ ಅಧಿನಿಯಮ 1955ರಲ್ಲೇ ಜಾರಿಗೆ ಬಂದಿದೆ. ಅಸ್ಪ್ರಶ್ಯತೆ ಆಚರಣೆ ವಿರುದ್ಧ ಕಾಯಿದೆ ರೂಪಿಸಲಾಗಿದೆ. ಕಾನೂನು ಕಟ್ಟಳೆಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಬೇಕಿದೆ ಎಂದು ಸಲಹೆ ಮಾಡಿದರು. ನಳಂದ ಬೌದ್ಧ ವಿ.ವಿ.ಯ ಪೂಜ್ಯ ಬಂತೆ ಬೋಧಿದತ್ತ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್. ಸತೀಶ್, ಸಹಾಯಕ ನಿರ್ದೇಶಕರಾದ ದಾಶರಥಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ////////////////////////////////////////////////////////////////////////////////////////////////////////////// ಮಾ. 8ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಚಾಮರಾಜನಗರ, ಮಾ. 07 - ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಮಾರ್ಚ್ 8ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಾರ್ಚ್ 8ರಂದು ಬೆಳಿಗ್ಗೆ 9.30 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಿರುವ ಜನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಮಂಗಳೂರಿಗೆ ತೆರಳುವರೆಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಎಂ.ಎಸ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ. 8ರಂದು ನಗರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಚಾಮರಾಜನಗರ, ಮಾ. 07 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಾರ್ಚ್ 8ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಿದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಉಪಸಭಾಪತಿ ಮರಿತಿಬ್ಬೇಗೌಡ, ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ, ಶಾಸಕರಾದ ಆರ್. ನರೇಂದ್ರ, ಎಸ್. ಜಯಣ್ಣ, ಎಸ್. ನಾಗರಾಜು (ಸಂದೇಶ್ ನಾಗರಾಜು), ಕೆ.ಟಿ. ಶ್ರೀಕಂಠೇಗೌಡ, ಆರ್. ಧರ್ಮಸೇನ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಎಸ್. ಬಸವರಾಜು, ನಗರಸಭೆ ಅಧ್ಯಕ್ಷರಾದ ಎಸ್.ಎನ್. ರೇಣುಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. /////////////////////////////////////////////////////////////////////////// ಮಾ. 8ರಂದು ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಚಾಮರಾಜನಗರ, ಮಾ. 0- ಕರ್ನಾಟಕ ರಾಜ್ಯ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 8ರಂದು ಬೆಳಿಗ್ಗೆ 11.30 ಗಂಟೆಗೆ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ತಿಳಿಸಿದ್ದಾರೆ. //////////////////////////////////////////////////////////////////////////////// ಮಾ. 8ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಚಾಮರಾಜನಗರ, ಮಾ. 07:- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಮಾರ್ಚ್ 8ರಂದು ಬೆಳಿಗ್ಗೆ 10 ಗಂಟೆಗೆ ನಗರದ ವ್ಯಾಜ್ಯಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಅಪರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮದರ್ಜೆ ನ್ಯಾಯಿಕ ದಂಡಾಧಿಕಾರಿ ಭವಾನಿ ಎಲ್.ಜೆ. ಅವರು ಅಧ್ಯಕ್ಷತೆ ವತಿಸುವರು. ಸರ್ಕಾರಿ ಅಭಿಯೋಜಕರಾದ ಲೋಲಾಕ್ಷಿ, ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಯಶ್ರೀ ಶೆಣೈ ವಿಶೇಷ ಆಹ್ವಾನಿತರಾಗಿ ಆಗಮಿಸುವರು. ವಕೀಲರಾದ ಮಮತ, ನಾಗಮ್ಮ ಹಾಗೂ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯದ ಶೀಘ್ರಲಿಪಿಗಾರರಾದ ರೂಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಭೃಂಗೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್, ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ, ಜಿಲ್ಲಾ ಸರ್ಕಾರಿ ವಕೀಲರಾದ ಎಚ್.ಎನ್. ಲೋಕೇಶ್, ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದÉ. /////////////////////////////////////////////////////////////////////////////////////// ಆರ್ ಟಿ ಐ : ತಾಲೂಕುವಾರು ಸೀಟು ಹಂಚಿಕೆ ( ವಾರ್ತಾ ಇಲಾಖೆ ಮಾಡಿದ್ದು ಇದೇ ಆರ್ .ಟಿ.ಇ ಎಂದು ಪರಿಗಣಿಸಿಕೊಳ್ಳಿ) ಚಾಮರಾಜನಗರ, ಮಾ. 07 :- ಪ್ರಸಕ್ತ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ಆರ್ ಟಿ ಐ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ತಾಲೂಕುವಾರು ಆರ್‍ಟಿಐ ಸೀಟುಗಳನ್ನು ಹಂಚಿಕೆ ಮಾಡಿ ಕಾಯ್ದಿರಿಸಲಾಗಿದೆ. ಚಾಮರಾಜನಗರ ತಾಲೂಕಿನಲ್ಲಿ ಒಟ್ಟು 334 ಸೀಟುಗಳಿದ್ದು ಪರಿಶಿಷ್ಟ ಜಾತಿಗೆ 102, ಪರಿಶಿಷ್ಟ ಪಂಗಡಕ್ಕೆ 22 ಹಾಗೂ ಓಬಿಸಿಯವರಿಗೆ 210 ಸೀಟುಗಳನ್ನು ಕಾಯ್ದಿರಿಸಿದೆ. ಗÀುಂಡ್ಲುಪೇಟೆ ತಾಲೂಕಿಗೆ 128 ಸೀಟುಗಳಿದ್ದು ಪ.ಜಾ.ಗೆ 40, ಪ.ಪಂ.ಗೆ 9, ಓಬಿಸಿಗೆ 79 ಸೀಟುಗಳು ನಿಗದಿಯಾಗಿದೆ. ಹನೂರು ವಲಯಕ್ಕೆ 181 ಸೀಟುಗಳಿದ್ದು ಪ.ಜಾ.ಗೆ 54, ಪ.ಪಂ.ಗೆ 13, ಓಬಿಸಿಗೆ 114 ಸೀಟುಗಳನ್ನು ನಿಗದಿ ಮಾಡಲಾಗಿದೆ. ಕೊಳ್ಳೇಗಾಲಕ್ಕೆ ಒಟ್ಟು 262 ಸೀಟುಗಳ ಪೈಕಿ ಪ.ಜಾ.ಗೆ 81, ಪ.ಪಂ.ಗೆ 17, ಓಬಿಸಿಗೆ 164 ಸೀಟುಗಳ ಲಭ್ಯವಿದೆ. ಯಳಂದೂರಿಗೆ 95 ಸೀಟುಗಳಿದ್ದು ಪ.ಜಾ.ಗೆ 29, ಪ.ಪಂ.ಗೆ 7, ಓಬಿಸಿಗೆ 59 ಸೀಟುಗಳನ್ನು ನಿಗದಿ ಮಾಡಲಾಗಿದೆ. ಒಟ್ಟು 306 ಪರಿಶಿಷ್ಟ ಜಾತಿಗೆ, 68 ಪರಿಶಿಷ್ಟ ಪಂಗಡಕ್ಕೆ, 626 ಓಬಿಸಿಗೆ ಸೇರಿದಂತೆ ಒಂದು ಸಾವಿರ ಸೀಟುಗಳು ಇವೆ. ಆರ್‍ಟಿಐ ಅರ್ಜಿಗಳನ್ನು ಆನ್ ಲೈನ್ ಮೂಲಕ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಅಟಲ್ ಜೀ ಜನಸ್ನೇಹಿ ಕೇಂದ್ರ ಹಾಗೂ ನೆಮ್ಮದಿ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬಹುದಾಗಿದೆ. ಜಿಲ್ಲೆಯ ಅರ್ಹ ಮಕ್ಕಳು ಪ್ರವೇಶ ಪಡೆಯಲು ಸಂಬಂಧಿಸಿದ ಪೋಷಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ???????????????????????????????????????????????????????????????????????/

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು