Wednesday, 8 March 2017
08-03-2017 ಚಾಮರಾಜನಗರ ಸುದ್ದಿಗಳು(ಚಾಮರಾಜನಗರ ಜಿಲ್ಲಾ ಖಜಾನೆಯಲ್ಲಿ ಪೊಲೀಸ್ ಬಂದೂಬಸ್ತ್. , ಪಿಯುಸಿ ಪರೀಕ್ಷೆ ನಿಷೇದಾಜ್ಞೆ ಜಾರಿ, ಮೇವು ಕುಡಿಯುವ ನೀರು ಸಮರ್ಪಕ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ.)
ಮೇವು ಕುಡಿಯುವ ನೀರು ಸಮರ್ಪಕ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ.
ಚಾಮರಾಜನಗರ, ಮಾ. 08 :- ಜಿಲ್ಲೆಯಲ್ಲಿ ಬರಗಾಲ ಇರುವ ಹಿನ್ನಲೆಯಲ್ಲಿ ಕುಡಿಯುವ ನೀರು, ಮೇವು ಪೂರೈಸುವ ವ್ಯವಸ್ಥೆಗೆ ಯಾವುದೇ ಲೋಪವಾಗದಂತೆ ಕ್ರಮ ತೆಗೆದುಕೊಳ್ಳಬೇಕೆಂದು ಆಹಾರ, ನಾಗರೀಕ ಸರಬರಾಜು ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕೆಡಿಪಿ ಸಭೆಯ ಅದ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೇವು ಸಮಸ್ಯೆ ಕುರಿತು ಪ್ರಸ್ತಾಪವಾದ ವೇಳೆ ಮಾತನಾಡಿದ ಸಚಿವರು, ಮೇವು ಬೆಳೆಯಲು ವಹಿಸಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದು ಮೇವು ಬೆಳೆಸಲು ಪೂರ್ವಭಾವಿಯಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು. ಇದೇ ವೇಳೆ ಶಾಸಕರಾದ ಆರ್.ನರೇಂದ್ರ ಅವರು ಗುಂಡಾಲ್ ಜಲಾಶಯ ಹತ್ತಿರ ಇರುವ ತೋಟಗಾರಿಕೆ ಫಾರಂ ನಲ್ಲಿ ಮೇವು ಬೆಳೆಯುವಂತೆ ಈ ಹಿಂದೆಯೇ ಸಭೆಯಲ್ಲಿ ಸೂಚಿಸಲಾಗಿತ್ತು ಆದರೆ ಈ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಮೇವು ಬೆಳೆಯದೆ ಇರುವ ಬಗ್ಗೆ ಅಧಿಕಾರಿಗಳು ಕ್ರಮ ತೆಗೆದುಕೊಂಡಿಲ್ಲವೆಂದು ಅಸಮಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಯಿಸಿದ ಸಚಿವರು ಫಾರಂ ಗಳಲ್ಲಿ ಮೇವು ಬೆಳೆಯಲು ಮುಂದಾಗಬೇಕು ಯಾವುದೆ ನಿರ್ಲಕ್ಷ್ಯ ವಹಿಸದೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಸೂಚನೆ ಪಾಲಿಸಬೇಕೆಂದು ತಿಳಿಸಿದರು.
ಕುಡಿಯುವ ನೀರು ಯೋಜನೆ ಪ್ರಗತಿ ಪರಿಶೀಲಿಸಿದ ಸಚಿವರು ಯಾವುದೇ ಅಭಾವಕ್ಕೆ ಕಾರಣವಾಗದ ಹಾಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಸಬೇಕು. ಬರಗಾಲ ಸಂದರ್ಭದಲ್ಲಿ ಲಭ್ಯವಿರುವ ಎಲ್ಲಾ ಮೂಲಗಳನ್ನು ಬಳಸಿಕೊಂಡು ಜನರ ನೆರವಿಗೆ ಬರಬೇಕೆಂದು ಸೂಚಿಸಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪರಿಶೀಲನಾ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ತಮ್ಮ ಕ್ಷೇತ್ರದಲ್ಲಿ ಈ ಇಲಾಖೆಯ ಅನುಧಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲ. ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಸಚಿವರು ಮಾತನಾಡಿ, ಶಾಸಕರೊಂದಿಗೆ ಚರ್ಚಿಸಿ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗೆ ನಿರ್ದೇಶನ ನೀಡಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಕಾಮಗಾರಿಯನ್ನು ಕೈಗೊಂಡು ಗ್ರಾಮೀಣ ಭಾಗದ ಜನರಿಗೆ ಅನುಕೂಲ ಕಲ್ಪಿಸಿಕೊಡಲು ವಿಳಂಬ ಮಾಡಬಾರದು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳೊಂದಿಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ವಹಣೆ ಮಾಡುವ ಮೂಲಕ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚು ಸಾಧನೆ ಮಾಡುವಂತೆ ಸಚಿವರು ತಾಕೀತು ಮಾಡಿದರು.
ಲೋಕೋಪಯೋಗಿ ಇಲಾಖೆ ಕಾರ್ಯ ವೈಖರಿ ಬಗ್ಗೆ ತೀವ್ರ ಅಸಮಧಾನ ವ್ಯಕ್ತ ಪಡಿಸಿದ ಸಚಿವರು ಕಾಮಗಾರಿ ಅನುಷ್ಠಾನ ಪ್ರಕ್ರೀಯೆಗೆ ನಿರ್ಲಕ್ಷ್ಯ ತೋರಬಾರದು. ಸಕಾಲದಲ್ಲಿ ಯೋಜನೆ ಪ್ರಕ್ರೀಯೆ ಕೈಗೆತ್ತಿಕೊಂಡು ಕಾಲ ಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಕೃಷಿ, ಶಿಕ್ಷಣ, ಆರೋಗ್ಯ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪರಿಶಿಷ್ಟ ಜಾತಿ ವರ್ಗಗಳ ಕಲ್ಯಾಣ, ಚಾಮುಲ್, ಅರಣ್ಯ ಇಲಾಖೆ, ಕ್ರೀಡಾ ಇಲಾಖೆ, ಕಾವೇರಿ ನೀರಾವರಿ ನಿಗಮ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕುಡಿಯುವ ನೀರು, ಒಳಚರಂಡಿ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು.
ಜಿಲ್ಲಾ ಪಂಚಾಯಿತಿ ಅದ್ಯಕ್ಷರಾದ ಎಂ.ರಾಮಚಂದ್ರ, ಉಪಾದ್ಯಕ್ಷರಾದ ಎಸ್.ಬಸವರಾಜು, ಸ್ಥಾಯಿ ಸಮಿತಿ ಅದ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಬಿ.ಕೆ.ಬೊಮ್ಮಯ್ಯ, ಕೆರೆಹಳ್ಳಿ ನವೀನ್, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್‍ಕುಮಾರ್ ಆರ್. ಜೈನ್ ಹಾಜರಿದ್ದರು.
********************************************************************************************************
ಚಾಮರಾಜನಗರ ಜಿಲ್ಲಾ ಖಜಾನೆಯಲ್ಲಿ ಪೊಲೀಸ್ ಬಂದೂಬಸ್ತ್.
ವರದಿ.ಎಸ್.ವೀರಭದ್ರಸ್ವಾಮಿ
ಚಾಮರಾಜನಗರ: ಕಳೆದ ವರ್ಷ ಪ್ರಶ್ನೆ ಪತ್ರಿಕೆ ರಾಜ್ಯಾದಾದಂದ ಸೋರಿಕೆಯಾದ ಹಿನ್ನಲೆಯಲ್ಲಿ ವ್ಯಾಪಕ ಬಂದೂಬಸ್ತ್ ಮಾಡಲಾಗಿದೆ.
ಜಿಲ್ಲೆಯಲ್ಲಿ ೧೬ ಕೇಂದ್ರಗಳಿದ್ದು , ಚಾಮರಾಜನಗರದಲ್ಲಿ ೪,ಕೊಳ್ಳೇಗಾಲದಲ್ಲಿ ೫, ಹನೂರಿನಲ್ಲಿ ೨,ಯಳಂದೂರಿನಲ್ಲಿ ೨, ಗುಂಡ್ಲುಪೇಟೆಯಲ್ಲಿ ೩ ಕೇಂದ್ರಗಳಿದೆ ಎಂದು ಚಾಮರಾಜನಗರ ಉಪನಿರ್ಧೇಶಕ ರಜನಿ ಎಸ್ ಮಲ್ಲಕ್ಕಿ ಮಾದ್ಯಮಕ್ಕೆ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯಲ್ಲಿ ೮೨೮೭ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ
: ಚಾಮರಾಜ ನಗರ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ಸೂಕ್ತ ಬಂದ್ ಬಸ್ತ್ ಮಾಡಲಾಗಿದ್ದು ಕೇಂದ್ರದ ಸುತ್ತ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಎಂದು ಪತ್ರಿಕೆ ತಿಳಿಸಿದ್ದಾರೆ.
ಒಟ್ಟಾರೆ ಕೆಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ನಡೆಯುತ್ತದೆ ಎಂಬ ಆರೋಪ, ಉಪನ್ಯಾಸಕರ ಪ್ರತಿಭಟನೆ ಬೆದರಿಕೆ ನಡುವೆ ಇಲಾಖೆ ಸರ್ಕಾರ ಯಾವ ತರಹ ಕ್ರಮಕೈಗೊಳ್ಳುತ್ತೊ ಕಾದು ನೋಡಬೇಕಾಗಿದೆ
*******************************************************************************************************
ಪಿಯುಸಿ ಪರೀಕ್ಷೆ ನಿಷೇದಾಜ್ಞೆ ಜಾರಿ
ಚಾಮರಾಜನಗರ.ಮಾ..08- ಜಿಲ್ಲೆಯ ವಿವಿದೆಡೆ ಮಾರ್ಚ್ 9 ರಿಂದ 27ರ ವರೆಗೆ ದ್ವಿತಿಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲ 200 ಮೀ. ವ್ಯಾಪ್ತಿಯಲ್ಲಿ ಪರೀಕ್ಷಾ ದಿನಗಳಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯ ವರೆಗೆ ನಿಷೇದಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 8 ರಿಂದ ಮದ್ಯಾಹ್ನ 2.30 ಗಂಟೆಯ ವರೆಗೆ ಮುಚ್ಚುವಂತೆಯು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿಷೇದಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಹಾಗು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ವರ್ಗಕ್ಕೆ ಅನ್ವಯವಾಗುವುದಿಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ.
**********************************************************************
ಮಾ. 9 ರಂದು ಇಂಧನ ಸಚಿವರ ಜಿಲ್ಲಾ ಪ್ರವಾಸ
ಚಾಮರಾಜನಗರ.ಮಾ..08- ಇಂಧನ ಸಚಿವರಾದ ಡಿ.ಕೆ.ಶಿವಕುಮಾರ್ ಅವರು ಮಾರ್ಚ್ 9ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಕಾಮಗೆರೆಗೆ ಆಗಮಿಸುವರು ಬಳಿಕ ಅಲ್ಲಿ ಶಾಸಕರ ಹಾಗು ಸಂಸದರ ನಿಧಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಪುದುರಾಮಪುರ ಗ್ರಾಮದಲ್ಲಿ ಶಾಸಕರ ಹಾಗು ಸಂಸದರ ನಿಧಿಯಿಂದ ನಿರ್ಮಿಸಲಾಗಿರುವ ಸಮುದಾಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ತದ ನಂತರ ಬಸಪ್ಪನದೊಡ್ಡಿ ಗ್ರಾಮದಲ್ಲಿ ನಿರ್ಮಿಸಿರುವ ಸಮುದಾಯ ಭವನ ಹಾಗು ಕೌದಳ್ಳಿಯಲ್ಲಿ ನಿರ್ಮಾಣ ಮಾಡಿರುವ ಶಾದಿ ಮಹಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಸಂಜೆ 4 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
**********************************************************************
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment