Tuesday, 14 March 2017

ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು, ಎದುರುಗಡೆ ಬಂದು ಅಪಘಾತ ಮಾಡಿದ ಚಾಲಕನ ವಶ ಪಡೆದ ಆರಕ್ಷಕರು.(ಅಪಘಾತವಾದಾಗ ನರಸೀಪುರದವರು ತೆಗೆದ ಚಿತ್ರ),

******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. RAMASAMUDRA ಚಾಮರಾಜನಗರ, ಮಾ. 14 :-ಇನ್ನೋವಾ ಕಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಎಸ್ಪಿ ಅವರ ಚಾಲಕನಿಗೆ ಸಣ್ಣಪುಟ್ಟ ಗಾಯ ಹೊರತು ಪಡಿಸಿದರೆ ಚಾಮರಾಜನಗರ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ಯಾಹ್ನದ ಸರಿ ಸುಮಾರು 4 ರ ಸಮಯದಲ್ಲಿ ಚಾಮರಾಜನಗರ ಎಎಸ್. ಕುಲದೀಪ್ ಕುಮಾರ್ ಆರ್ ಜೈನ್ ಚಾಮರಾಜನಗರದಿಂದ ಮೈಸೂರಿಗೆ ತೆರಳುವ ಮಾರ್ಗ ಮದ್ಯೆ ತಿರುಮಕೂಡಲ ನರಸೀಪುರ ಯಡತೊರೆ (ಗರ್ಗೇಶ್ವರಿ) ಬಳಿ ಎದುರಿನಿಂದ ಬಂದ ಟಾಟಾ ಸುಮೋ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಮೈಸೂರಿನಿಂದ ನರಸೀಪುರದೆಡೆಗೆ ಬರುತ್ತಿದ್ದ ಟಾಟಾ ಸುಮೋ ವರೀಷ್ಠಾಧಿಕಾರಿಗಳ ಇನ್ನೋವಾಗೆ ಬಲವಾಗಿ ಗುದ್ದಿದ್ದರಿಂದ ಚಾಲಕ ರಮೇಶ್ ಗನ್ ಮ್ಯಾನ್ ರಾಜಪ್ಪ ಗೆ ಸಣ್ಣಪುಟ್ಟ ಗಾಯವಾಗಿದ್ದು, ಎಸ್ಪಿ ಜೈನ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಸ್ಪಿ ಕುಲದೀಪ್ ಕುಮಾರ್ ಜೈನ್ ಅವರು ಹೋಗುತ್ತಿದ್ದ ಇನ್ನೋವಾ ಮುಂಬಾಗ ಹೆಚ್ಚು ಜಖಂಗೊಂಡಿದೆ ಎಂದು ತಿಳಿದುಬಂದಿದೆ. ನರಸೀಪುರ ಠಾಣಾ ಪೋಲೀಸರು ದೂರು ದಾಖಲಿಸಿಕೊಂಡು ಟಾಟಾಸುಮೊ ಚಾಲಕ ಪ್ರತಾಪ್ ಎಂಬುವವರನ್ನು ವಶಪಡೆದಿದ್ದಾರೆ . ******************************************************* ************************************************************** ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ : ಜಿಲ್ಲಾಧಿಕಾರಿ ಬಿ.ರಾಮು ಚಾಮರಾಜನಗರ, ಮಾ. 14 :- ಚುನಾವಣೆ ಪ್ರಕ್ರಿಯೆಯನ್ನು ಪಾರದರ್ಶಕ, ಶಾಂತಿಯುತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಉದ್ದೇಶದಿಂದ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಚುನಾವಣೆ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ಚರ್ಚಿಸುವ ಸಲುವಾಗಿ ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚುನಾವಣೆ ನೀತಿ ಸಂಹಿತೆಯು ಈಗಾಗಲೇ ಜಾರಿಯಲ್ಲಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗ ನಿಗಧಿಪಡಿಸಿರುವ ಮಾರ್ಗಸೂಚಿ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ನೀತಿ ಸಂಹಿತೆ ಉಲ್ಲಂಘನೆಯಾದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ ಎಂದರು. ಚುನಾವಣಾ ಸಂದರ್ಭದಲ್ಲಿ ಯಾವುದೇ ಖಾಸಗಿ ಅಥವಾ ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸುವಂತಿಲ್ಲ. ಅನುಮತಿ ಪಡೆಯದೇ ಪ್ರಚಾರ ಸಾಮಾಗ್ರಿಗಳಾದ ಬಾವುಟ, ಕಟ್‍ಔಟ್ ನಿಲ್ಲಿಸುವಂತಿಲ್ಲ. ಭಿತ್ತಿಪತ್ರ ಅಂಟಿಸುವುದು, ಘೋಷಣೆ ಬರೆಯುವಂತಿಲ್ಲ. ಖಾಸಗಿ ವ್ಯಕ್ತಿಗಳಿಗೆ ಸೇರಿದ ಭೂಮಿ, ಕಟ್ಟಡ, ಕಾಂಪೌಂಡ್ ಇನ್ನಿತರೆಡೆ ಲಿಖಿತ ಅನುಮತಿ ಪಡೆಯದೇ ಪ್ರಚಾರ ಸಾಮಾಗ್ರಿಗಳನ್ನು ಪ್ರದರ್ಶಿಸಬಾರದು. ಅನುಮತಿ ಪಡೆಯದೇ ಇರುವ ಪ್ರಚಾರ ಸಾಮಾಗ್ರಿಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ ಎಂದರು. ಮತಯಾಚನೆÉಯನ್ನು ಜಾತಿ, ಮತ ಮತ್ತು ಕೋಮು ಭಾವನೆಗಳ ಆಧಾರದ ಮೇಲೆ ಮಾಡುವಂತಿಲ್ಲ. ದೇವಾಲಯ, ಮಸೀದಿ, ಚರ್ಚ್ ಅಥವಾ ಇತರ ಪೂಜಾ ಸ್ಥಳಗಳನ್ನು ಚುನಾವಣಾ ಪ್ರಚಾರ ವೇದಿಕೆಗಳಾಗಿ ಬಳಸಬಾರದು. ಜಾತಿ ಸಮುದಾಯಗಳ ಮಧ್ಯೆ ಅಥವಾ ಮತಿಯ ಭಾಷಾ ಸಮೂಹಗಳ ಮಧ್ಯೆ ಇರುವ ವೈಮನಸ್ಸನ್ನು ಕೆರಳಿಸುವ, ದ್ವೇಷ ಹುಟ್ಟಿಸುವಂತಹ ಉದ್ವೇಗಕ್ಕೆ ಕಾರಣವಾಗುವಂತಹ ಚಟುವಟಿಕೆಗಳಲ್ಲಿ ತೊಡಗಬಾರದೆಂದು ಜಿಲ್ಲಾಧಿಕಾರಿ ತಿಳಿಸಿದರು. ಸಭೆ, ಸಮಾರಂಭ ನಡೆಸುವ ಮೊದಲು ಸ್ಥಳೀಯ ಪೊಲೀಸ್ ಅಧಿಕಾರಿ, ಚುನಾವಣಾಧಿಕಾರಿ ಹಾಗೂ ಸ್ಥಳೀಯ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಅವಶ್ಯವಾಗಿದೆ. ಅನುಮತಿ ನೀಡಲು ಗುಂಡ್ಲುಪೇಟೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಒಂದೇ ಕಡೆ ವ್ಯವಸ್ಥೆ ಮಾಡಲಾಗಿದೆ. ಧ್ವನಿವರ್ದಕ, ಪ್ರಚಾರ ಸಾಮಾಗ್ರಿ, ವಾಹನ ಬಳಕೆಗೆ ಅನುಮತಿ ಪಡೆಯಬೇಕು. ಇದಕ್ಕೆ ತಗಲಬಹುದಾದ ವೆಚ್ಚವನ್ನು ಅಭ್ಯರ್ಥಿಗಳ ಲೆಕ್ಕಕ್ಕೆ ಪರಿಗಣಿಸಲಾಗುತ್ತದೆ ಎಂದರು. ಬೇರೆ ಅಭ್ಯರ್ಥಿಯ ಖಾಸಗಿ ನಡತೆ ಅಥವಾ ಶೀಲಗಳ ಬಗ್ಗೆ ಸುದ್ದಿಯನ್ನು ಪ್ರಸಾರ ಮಾಡುವಂತಿಲ್ಲ. ದೃಶ್ಯ ಮತ್ತು ಮುದ್ರಣ ಮಾಧ್ಯಮದ ಮೂಲಕ ಪ್ರಚಾರ ಮಾಡುವ ಮುನ್ನ ಜಿಲ್ಲಾ ವಾರ್ತಾ ಅಧಿಕಾರಿಗಳಿಂದ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ರಾಜಕೀಯ ಪಕ್ಷಗಳು ತಾರಾ ಪ್ರಚಾರಕರ ಹೆಸರು, ಹುದ್ದೆ ಇತರೆ ವಿವರಗಳ ಜೊತೆ ಪ್ರಚಾರ ಮಾಡುವ ದಿನಾಂಕ, ವೇಳೆ, ಸ್ಥಳದ ಬಗ್ಗೆ ಮಾಹಿತಿ ನೀಡಬೇಕು, ಮೆರವಣಿಗೆ, ಸ್ಥಳ, ವೇಳೆ, ಹಾದುಹೋಗುವ ಮಾರ್ಗಗಳ ಬಗ್ಗೆ ಮುಂಚಿತವಾಗಿ ತಿಳಿಸಿರಬೇಕು. ಸಭೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಪ್ರಚಾರ ಸಾಮಾಗ್ರಿಗಳನ್ನು ಅಳವಡಿಸಬೇಕು. ಸಭೆ ಮುಕ್ತಾಯವಾದ ಎರಡು ಗಂಟೆಯೊಳಗೆ ತೆರವುಗೊಳಿಸಬೇಕು ಎಂದರು. ಶಾಂತಿಯುತ ಚುನಾವಣೆ ನಡೆಸಲು ಹಾಗೂ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಸೆಕ್ಟರ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ಲೈಯಿಂಗ್ ಸ್ಕ್ವಾಡ್, ವಿಡಿಯೋ ಕಣ್ಗಾವಲು ತಂಡ, ವಿಡಿಯೋ ವೀಕ್ಷಣಾ ತಂಡ, ವೆಚ್ಚ ಪರಿಶೀಲನಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಒಟ್ಟು 11 ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನ್ಯಾಯ ಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ಎಲ್ಲಾ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯಿತ್ರಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಡಿವೈಎಸ್ಪಿ ಗಂಗಾಧರ ಸ್ವಾಮಿ, ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಮರಿಸ್ವಾಮಿ, ಸಿ.ಎಂ.ಕೃಷ್ಣಮೂರ್ತಿ, ಆರ್.ಎಲ್.ನಾಗೇಂದ್ರ ಬಾಬು, ಸುಂದರ್‍ರಾಜ್, ಮಹೇಶ್, ಬ್ಯಾಡಮೂಡ್ಲು ಬಸವಣ್ಣ ಇತರರು ಸಭೆಯಲ್ಲಿ ಹಾಜರಿದ್ದರು. ********************************************************** ಮಾ. 15ರಂದು ಸಂತೆಮರಹಳ್ಳಿಯಲ್ಲಿ ಜಿಲ್ಲಾಮಟ್ಟದ ಕ್ರೀಡಾಕೂಟ ಚಾಮರಾಜನಗರ, ಮಾ. 14:- ನೆಹರು ಯುವ ಕೇಂದ್ರ, ಸಂತೆಮರಹಳ್ಳಿಯ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜು, ಸಂತೆಮರಹಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಮಾದಿಗ ಯುವಕರ ಸಂಘ, ಕೆಂಪನಪುರದ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ ಚಾಮರಾಜನಗರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ಮಾರ್ಚ್ 15ರಂದು ಬೆಳಿಗ್ಗೆ 10.30 ಗಂಟೆಗೆ ಸಂತೆಮರಹಳ್ಳಿಯ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್ ಕ್ರೀಡಾಕೂಟ ಉದ್ಘಾಟಿಸುವರು. ಸಂತೆಮರಹಳ್ಳಿಯ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಎ.ಶಿವಣ್ಣ ಅಧ್ಯಕ್ಷತೆ ವಹಿಸುವರು. ದೀನಬಂಧು ಸಂಸ್ಥೆಯ ಜಿ.ಎಸ್. ಜಯದೇವ್ ಕ್ರೀಡಾ ಸಂದೇಶ ನೀಡುವರು. ಮಳವಳ್ಳಿಯ ಭಗವಾನ್ ಬುದ್ಧ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವೈ.ಎನ್. ಸಿದ್ಧರಾಜು, ಮಂಡ್ಯದ ರೋಟರಿ ಕ್ಲಬ್ ಅಧ್ಯಕ್ಷರಾದ ಎ.ಸಿ. ರಮೇಶ್ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುವರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ. ಚಲುವಯ್ಯ, ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಆರ್.ಸ್ವಾಮಿ, ರಾಜ್ಯ ಯುವ ಪ್ರಶಸ್ತಿ ಪುರಸ್ಕøತರಾದ ಸಿ.ಎಂ.ನರಸಿಂಹಮೂರ್ತಿ, ಸಂತೆಮರಹಳ್ಳಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಮಹದೇವಸ್ವಾಮಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ. ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ ಚಾಮರಾಜನಗರ, ಮಾ. 14 - ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2016ನೇ ಸಾಲಿನ ಟೀಯೆಸ್ಸಾರ್ ಹಾಗೂ ಮೊಹರೆ ಹಣಮಂತರಾಯ, ಪರಿಸರ ಪತ್ರಿಕೋದ್ಯಮ ಹಾಗೂ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಟೀಯೆಸ್ಸಾರ್ ಪ್ರಶಸ್ತಿಯನ್ನು ಕನ್ನಡದ ಹಿರಿಯ ಪತ್ರಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ 1 ಲಕ್ಷ ರೂ. ಆಗಿದ್ದು ಕನ್ನಡ ಪತ್ರಿಕೋದ್ಯಮ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿರುವವರನ್ನು ಪರಿಗಣಿಸಲಾಗುವುದು. ಒಬ್ಬರಿಗೆ ಮಾತ್ರ ಈ ಪ್ರಶಸ್ತಿ ನೀಡಲಾಗುವುದು. ಪತ್ರಿಕಾರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಪ್ರಶಸ್ತಿಗೆ ಕನ್ನಡ ಪತ್ರಿಕೋದ್ಯಮದಲ್ಲಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿದವರು ಅರ್ಹರು. ಕೇವಲ ಒಬ್ಬರಿಗೆ ಮಾತ್ರ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿ ಮೊತ್ತ 1 ಲಕ್ಷ ರೂ. ಆಗಿದೆ. ರಾಜ್ಯದೆಲ್ಲೆಡೆ ಅಭಿವೃದ್ಧಿಗೆ ಉತ್ತಮ ವಾತಾವರಣ ಕಲ್ಪಿಸಲು ಅನುಕೂಲವಾಗುವಂತೆ ಉತ್ತೇಜಿಸಲು ಅಭಿವೃದ್ಧಿ ಪತ್ರಿಕೋದ್ಯಮ ಹಾಗೂ ರಾಜ್ಯದಲ್ಲಿನ ಪರಿಸರ, ಪ್ರಕೃತಿ ಹಾಗೂ ನಿಸರ್ಗದ ಸಮತೋಲನ ಕಾಯ್ದುಕೊಳ್ಳಲು ನೆರವಾಗಿರುವ ಪತ್ರಕರ್ತರಿಗಾಗಿ ಪರಿಸರ ಪತ್ರಿಕೋದ್ಯಮ ಪ್ರಶಸ್ತಿಯನ್ನು ಸ್ಥಾಪಿಸಲಾಗಿದ್ದು, ಕನಿಷ್ಠ 10 ವರ್ಷ ಅನುಭವ ಹೊಂದಿರುವ ಪತ್ರಕರ್ತರು ಅರ್ಹರಾಗಿರುತ್ತಾರೆ. ಪ್ರಶಸ್ತಿ ಮೊತ್ತವು ತಲಾ ರೂ. 50,000 ಒಳಗೊಂಡಿರುತ್ತದೆ. ಪ್ರಶಸ್ತಿಗಳಿಗೆ ನಾಮನಿರ್ದೇಶನಗಳನ್ನು ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲಾತಿಗಳೊಂದಿಗೆ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು - 560 001 ಇಲ್ಲಿಗೆ ಮಾರ್ಚ್ 25 ರೊಳಗಾಗಿ ಕಳುಹಿಸಿಕೊಡಬಹುದಾಗಿದೆ ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ. ******************************************************* ಗಾಂಜಾ ಬೆಳೆದ ವ್ಯಕ್ತಿಗೆ ಸಜೆ ಚಾಮರಾಜನಗರ, ಮಾ. 14 :- ಕಬ್ಬಿನ ಫಸಲಿನ ನಡುವೆ ಅಕ್ರಮವಾಗಿ ಗಾಂಜಾ ಬೆಳಿದ ವ್ಯಕ್ತಿಗೆ 2 ವರ್ಷಗಳ ಸಜೆ ಹಾಗೂ 2 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಕೊಳ್ಳೇಗಾಲದ ಸತ್ತೇಗಾಲ ಅಗ್ರಹಾರದ ಧನಗೆರೆ ಗ್ರಾಮದ ನಾಗಣ್ಣ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ತನ್ನ ಜಮೀನಿನಲ್ಲಿ ಕಬ್ಬಿನ ಫಸಲಿನ ಮಧ್ಯೆ ಅಕ್ರಮವಾಗಿ 50 ಗಾಂಜಾ ಗಿಡಗಳನ್ನು ಬೆಳೆದಿದ್ದಾನೆ. 2012ರ ಸೆಪ್ಟೆಂಬರ್ 30ರಂದು ಕೊಳ್ಳೇಗಾಲ ಉಪವಿಭಾಗದ ಡಿವೈಎಸ್‍ಪಿ. ಯವರು ಜಮೀನಿಗೆ ಹೋಗಿ ದಾಳಿ ನಡೆಸಿ ಗಾಂಜಾ ಗಿಡ ವಶಕ್ಕೆ ತೆಗೆದುಕೊಂಡಿದ್ದರು. ಪ್ರಕರಣ ದಾಖಲಾಗಿ ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಅಪರಾಧಿ ನಾಗಣ್ಣನಿಗೆ 2 ವರ್ಷಗಳ ಸಜೆ ಮತ್ತು 2 ಸಾವಿರ ರೂ. ದಂಡ ವಿಧಿಸಿ ಪ್ರದಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್. ಮಳವಳ್ಳಿ ಅವರು ಮಾರ್ಚ್ 13ರಂದು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು. ಗುಂಡ್ಲುಪೇಟೆ ಉಪಚುನಾವಣೆ : ಮೊದಲನೇ ದಿನ ನಾಮಪತ್ರ ಸಲ್ಲಿಕೆ ಇಲ್ಲ ಚಾಮರಾಜನಗರ, ಮಾ. 14 (- ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆ ಅವಧಿ ಆರಂಭವಾಗಿದ್ದು ಮೊದಲ ದಿನವಾದ ಇಂದು ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ. ಗುಂಡ್ಲುಪೇಟೆ ಉಪಚುನಾವಣೆ : ವೇಳಾಪಟ್ಟಿ ಪ್ರಕಟ ಚಾಮರಾಜನಗರ, ಮಾ. 14 - ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಉಪಚುನಾವಣೆಗೆ ಉಮೇದುವಾರರು ಅಥವಾ ಅವರ ಸೂಚಕರು ಚುನಾವಣಾಧಿಕಾರಿ ಅಥವ ಸಹಾಯಕ ಚುನಾವಣಾಧಿಕಾರಿಯವರಿಗೆ ಮಾರ್ಚ್ 14 ರಿಂದ 21ರವರೆಗೆ ಸರ್ಕಾರಿ ರಜಾದಿನಗಳನ್ನು ಹೊರತುಪಡಿಸಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಬಹುದು. ಮಾರ್ಚ್ 14ರಂದು ಅಧಿಸೂಚನೆ ಹೊರಡಿಸಲಾಗಿದ್ದು ನಾಮಪತ್ರ ಪ್ರಕ್ರಿಯೆ ಸಲ್ಲಿಕೆ ಅವಧಿ ಆರಂಭವಾಗಿದೆ. ನಾಮಪತ್ರ ಸಲ್ಲಿಸಲು ಮಾರ್ಚ್ 21 (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ) ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆ ಕಾರ್ಯವು ಮಾರ್ಚ್ 22ರಂದು ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮಾರ್ಚ್ 24 ಕಡೆಯ ದಿನವಾಗಿದೆ (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ). ಏಪ್ರಿಲ್ 9ರಂದು ಮತದಾನ ನಡೆಯಲಿದ್ದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡುವ ಅವಧಿಯನ್ನು ನಿಗದಿ ಮಾಡಲಾಗಿದೆ. ಏಪ್ರಿಲ್ 13ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ. ಚುನಾವಣೆ ಪ್ರಕ್ರಿಯೆಯು ಏಪ್ರಿಲ್ 15ರಂದು ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಬಿ. ರಾಮು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ************************************************ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಚಾಮರಾಜನಗರ, ಮಾ. 14:– ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು - ನಕಲುಗಾರರು, ಆದೇಶ ಜಾರಿಕಾರರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಗಾರರ 3 ಹುದ್ದೆಗಳು, ಬೆರಳಚ್ಚುಗಾರರ 6 ಹುದ್ದೆಗಳು, ಬೆರಳಚ್ಚು-ನಕಲುಗಾರರ 2 ಹುದ್ದೆಗಳು ಹಾಗೂ ಆದೇಶ ಜಾರಿಕಾರರ 2 ಹುದ್ದೆಗಳು ಖಾಲಿ ಇವೆ. ಶೀಘ್ರಲಿಪಿಗಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಬೆರಳಚ್ಚುಗಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಹಿರಿಯ ದರ್ಜೆ (ಸೀನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಬೆರಳಚ್ಚು - ನಕಲುಗಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವತಿಯಿಂದ ನಡೆಸುವ ಕಿರಿಯ ದರ್ಜೆ (ಜೂನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಆದೇಶ ಜಾರಿಕಾರರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ತೇರ್ಗಡೆಯಾಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಕನ್ನಡ ಓದಲು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗದವರಾಗಿದ್ದಲ್ಲಿ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದವರಾಗಿದ್ದಲ್ಲಿ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಾಗಿದ್ದಲ್ಲಿ 40 ವರ್ಷ ಮೀರಿರಬಾರದು. ಸರ್ಕಾರಿ ಸೇವೆಯಲ್ಲಿರುವವರು, ಜೀತಕಾರ್ಮಿಕರು, ಮಾಜಿ ಸೈನಿಕರು, ಅಂಗವಿಕಲರು, ವಿಧವೆಯರಿಗೆ ವಯೋಮಿತಿಯಲ್ಲಿ ನಿಯಮಾನುಸಾರ ಸಡಿಲಿಕೆ ಇದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನಿಗದಿಪಡಿಸಿರುವಂತೆ ಅರ್ಜಿ ನಮೂನೆಯಲ್ಲಿ ಬೆರಳಚ್ಚು ಮಾಡಿಸಿದ ಅಥವಾ ಗಣಕೀಕೃತ ಅರ್ಜಿಯನ್ನು ಕೈಬರವಣಿಗೆಯಲ್ಲಿ ಭರ್ತಿ ಮಾಡಿ ಅಗತ್ಯ ಸ್ವಯಂ ದೃಢೀಕೃತ ನಕಲು ಪ್ರತಿಗಳ ದಾಖಲೆಗಳೊಂದಿಗೆ ಏಪ್ರಿಲ್ 7ರೊಳಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಾಮರಾಜನಗರ ಇವರಿಗೆ ಸಲ್ಲಿಸಬೇಕು. ಅಧಿಸೂಚನೆ ಹಾಗೂ ಹುದ್ದೆಗಳಿಗೆ ಸಂಬಂಧಿಸಿದ ವಿವರಗಳನ್ನು ಚಾಮರಾಜನಗರ ಜಿಲ್ಲಾ ನ್ಯಾಯಾಲಯದ ಅಂತರ್ಜಾಲ ವಿಳಾಸ ತಿತಿತಿ.ಛಿouಡಿಣs.gov.iಟಿ/ಛಿhಚಿmಚಿಡಿಚಿರಿಚಿಟಿಚಿgಚಿಡಿ ರಲ್ಲಿ ಸಹ ಪಡೆಯಬಹುದು. ಅಲ್ಲದೆ ನಗರದ ಪ್ರದಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಸಂಪರ್ಕಿಸಿಯೂ ಹೆಚ್ಚಿನ ಮಾಹಿತಿ ಪಡೆಯಬಹುದೆಂದು ಪ್ರಕಟಣೆ ತಿಳಿಸಿದÉ. **************************************************** ಮಾ. 15ರಂದು ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ, ಕಾನೂನು ಅರಿವು ನೆರವು ಕಾರ್ಯಕ್ರಮ ಚಾಮರಾಜನಗರ, ಮಾ. 14 :- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ನಗರದ ಸಾಧನಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಮಾರ್ಚ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಧನ ಸಂಸ್ಥೆಯಲ್ಲಿ ಏರ್ಪಡಿಸಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್. ಪಿ. ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಸಾಧನಾ ಸಂಸ್ಥೆಯ ಅಧ್ಯಕ್ಷರಾದ ಟಿ. ಜೆ. ಸುರೇಶ್ ಅಧ್ಯಕ್ಷತೆ ವತಿಸುವರು. ವಕೀಲರ ಸಂಘದ ಉಪಾಧ್ಯಕ್ಷರಾದ ಶಿವಪ್ರಸನ್ನ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಎಸ್. ಮಂಜು ಅವರು ಗ್ರಾಹಕರ ಹಕ್ಕುಗಳ ಕುರಿತು ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದÉ. ಒಪ್ಪಿಗೆ ಪತ್ರ ನೀಡಲು ಪಿಂಚಣಿ ಫಲಾನುಭವಿಗಳಿಗೆ ಸೂಚನೆ ಚಾಮರಾಜನಗರ, ಮಾ. 14 (ಕರ್ನಾಟಕ ವಾರ್ತೆ):- ಚಾಮರಾಜನಗರ ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಆಯಾ ಗ್ರಾಮದ ಗ್ರಾಮ ಲೆಕ್ಕಿಗರಿಗೆ ನೀಡುವಂತೆ ತಾಲೂಕು ಆಡಳಿತ ಸೂಚನೆ ನೀಡಿದೆ. ವೃದ್ದಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲರ, ಮನಸ್ವಿನಿ ಮತ್ತು ಮೈತ್ರಿ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಎಲ್ಲ ಫಲಾನುಭವಿಗಳು ಸ್ಮಾರ್ಟ್ ಕಾರ್ಡ್ ಮತ್ತು ಅಂಚೆ ಕಚೇರಿ ಬ್ಯಾಂಕ್ ಮೂಲಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಆಯಾ ಗ್ರಾಮದ ಗ್ರಾಮ ಲೆಕ್ಕಿಗರಿಗೆ ಸಲ್ಲಿಸಬೇಕು. ಒಪ್ಪಿಗೆ ಪತ್ರ ನೀಡದಿದ್ದಲ್ಲಿ ಈ ಏಪ್ರಿಲ್ ಮಾಹೆಯಿಂದ ಫಲಾನುಭವಿಗಳಿಗೆ ಪಿಂಚಣಿ ಸ್ಥಗಿತವಾಗುವ ಸಾಧ್ಯತೆ ಇದೆ. ಈಗಾಗಲೇ ಅಂಚೆ ಕಚೇರಿ ಮತ್ತು ಬ್ಯಾಂಕುಗಳಿಗೆ ಆಧಾರ್ ಸಂಖ್ಯೆಯ ಮಾಹಿತಿ ನೀಡಿದ್ದರೂ ಸಹ ಗ್ರಾಮಲೆಕ್ಕಿಗರಿಗೆ ಮತ್ತೊಮ್ಮೆ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಮಾರ್ಚ್ 25ರೊಳಗೆ ನೀಡುವಂತೆ ತಹಸೀಲ್ದಾರ್ ಪುರಂಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ********************************************************* ಮಾ. 15ರಂದು ಜಿಲ್ಲಾಡಳಿತದಿಂದ ವಿಶ್ವ ಗ್ರಾಹಕರ ದಿನಾಚರಣೆ ಚಾಮರಾಜನಗರ, ಮಾ. 14 (ಕರ್ನಾಟಕ ವಾರ್ತೆ):- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು, ಕಾನೂನು ಮಾಪನ ಶಾಸ್ತ್ರ ಇಲಾಖೆ ಮತ್ತು ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ವಿಶ್ವ ಗ್ರಾಹಕ ದಿನಾಚರಣೆಯನ್ನು ಮಾರ್ಚ್ 15ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಅಧ್ಯಕ್ಷರಾದ ಕೆ.ಎಲ್. ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಉಪವಿಭಾಗಾಧಿಕಾರಿ ನಳಿನ್ ಅತುಲ್, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಗೌರಮ್ಮಣ್ಣಿ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಮಾದಮ್ಮ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕೊಳ್ಳೇಗಾಲದ ವಕೀಲರಾದ ವೆಂಕಟಾಚಲ ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ. **************************************************

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು