Wednesday, 15 March 2017
15-03-2017 (ಗ್ರಾಹಕರು ಜಾಗೃತಿ ಹೊಂದಲು ಜಿಲ್ಲಾಧಿಕಾರಿ ಸಲಹೆ,ಬಾಬು ಜಗಜೀವನ್ ರಾಮ್, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ ,,ಉಪಚುನಾವಣೆ : ಎರಡನೇ ದಿನವೂ ನಾಮಪತ್ರ ಸಲ್ಲಿಕೆ ಇಲ್ಲ)
********************************************************
ಬಾಬು ಜಗಜೀವನ್ ರಾಮ್, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅರ್ಥಪೂರ್ಣ ಆಚರಣೆಗೆ ತೀರ್ಮಾನ
ಚಾಮರಾಜನಗರ, ಮಾ. 15 :- ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 5 ರಂದು ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಜಿಲ್ಲಾ ಆಡಳಿತದ ವತಿಯಿಂದ ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳ ಹಾಗೂ ಆರ್ಥ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಬಾಬೂಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಬಿ.ರಾಮು ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾಧಿಕಾರಿ ಬಿ.ರಾಮು ಅವರು ಮಾತನಾಡಿ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆ ನೀತಿ ಸಂಹಿತೆಯು ಮಾರ್ಚ್ 9 ರಿಂದ ಆರಂಭವಾಗಿದ್ದು, ಏಪ್ರಿಲ್ 15 ರವರೆಗೂ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಪಾಲನೆ ಅನುಗುಣವಾಗಿ ಕಾರ್ಯಕ್ರಮವನ್ನು ರೂಪಿಸಬೇಕಿದೆ. ಹೀಗಾಗಿ ಬಾಬು ಜಗಜೀವನ್ ರಾಮ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನ ಆಚರಣೆ ಕಾರ್ಯಕ್ರಮವನ್ನು ನಗರದ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಬೇಕು. ಮೆರವಣಿಗೆ ಕಾರ್ಯಕ್ರಮವನ್ನು ಈ ಬಾರಿ ಏರ್ಪಡಿಸಲು ಅವಕಾಶವಾಗುತ್ತಿಲ್ಲ ಎಂದು ತಿಳಿಸಿದರು.
ಬಾಬೂಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಎಂದಿನಂತೆ ಆಯೋಜಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಿಚಾರಧಾರೆಗಳ ಕುರಿತು ಉಪನ್ಯಾಸ ಏರ್ಪಡಿಸಲು ವಿಚಾರವಾದಿಗಳನ್ನು ಆಹ್ವಾನಿಸಬೇಕು. ಈ ನಿಟ್ಟಿನಲ್ಲಿ ಆಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯಂದು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಬಳಿಕ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ಇರುತ್ತದೆ. ಬಳಿಕ ಅಂಬೇಡ್ಕರ್ ಅವರ ಕುರಿತು ವಿಚಾರ ಧಾರೆಗಳ ಉಪನ್ಯಾಸ ಕಾರ್ಯಕ್ರಮವು ಸಹ ಆಯೋಜಿಸಬೇಕು. ಇದಕ್ಕಾಗಿ ಅಧಿಕಾರಿಗಳು ಈಗಿನಿಂದಲೇ ಅಗತ್ಯವಿರುವ ಪ್ರಕ್ರಿಯೆ ಕೈಗೊಳ್ಳಬೇಕು ಎಂದರು.
ಬಾಬೂಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮಕ್ಕೆ ಸರ್ವರೂ ಸಹಕರಿಸಿ ಪಾಲ್ಗೊಳ್ಳಬೇಕು. ಕಾರ್ಯಕ್ರಮ ಯಶ್ವಸಿಯಾಗಲು ಪ್ರತಿಯೊಬ್ಬರು ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕೆಂದು ಜಿಲ್ಲಾಧಿಕಾರಿ ಬಿ.ರಾಮು ಮನವಿ ಮಾಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಕೆ.ಹೆಚ್.ಸತೀಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
*****************************************************************
ಗ್ರಾಹಕರು ಜಾಗೃತಿ ಹೊಂದಲು ಜಿಲ್ಲಾಧಿಕಾರಿ ಸಲಹೆ
ಚಾಮರಾಜನಗರ, ಮಾ. 15:- ವಸ್ತು ಖರೀದಿ ಸರಕು ಸೇವೆಗಳ ಸೌಲಭ್ಯ ಪಡೆಯುವ ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತಗೊಳ್ಳದಿದ್ದರೆ ಶೋಷಣೆಗೆ ಒಳಗಾಗಬೇಕಾಗುತ್ತದೆಂದು ಜಿಲ್ಲಾಧಿಕಾರಿ ಬಿ.ರಾಮು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದ ಕೆ.ಡಿ.ಪಿ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿಶ್ವ ಗ್ರಾಹಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಗ್ರಾಹಕರು ತಾವು ಖರೀದಿಸಿದ ವಸ್ತು, ಪಡೆಯುವ ಸೇವೆ ಗುಣಮಟ್ಟದ್ದಾಗಿರಬೇಕೆಂದು ಬಯಸುತ್ತಾರೆ. ಗ್ರಾಹಕರ ನಿರೀಕ್ಷೆಗೆ ಅನುಗುಣವಾಗಿ ವರ್ತಕರು, ವ್ಯಾಪಾರಿಗಳು ಉತ್ತಮ ವಸ್ತು ಸೇವೆ ನೀಡುವಂತಾಗಬೇಕು. ಗ್ರಾಹಕರು ಯಾವುದೇ ನ್ಯೂನ್ಯತೆ ಕಂಡುಬಂದರೆ ಮುಲಾಜಿಗೆ ಒಳಗಾಗದೇ ಗ್ರಾಹಕರ ಪರಿಹಾರ ಕೇಂದ್ರದಲ್ಲಿ ದೂರು ದಾಖಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದರು.
ಗ್ರಾಹಕರಿಗೆ ಅವರದೇ ಆದ ಹಕ್ಕುಗಳಿವೆ. ಈ ಬಗ್ಗೆ ಹೆಚ್ಚು ತಿಳಿದುಕೊಳ್ಳಬೇಕು. ಕಾಯ್ದೆ, ನಿಯಮಗಳ ಬಗ್ಗೆ ಅರಿತುಕೊಂಡಷ್ಟು ಶೋಷಣೆಗೆ ಗುರಿಯಾಗುವುದು ತಪ್ಪಲಿದೆ. ಹೀಗಾಗಿ ಗ್ರಾಹಕ ಜಾಗೃತಿ ಕಾರ್ಯಕ್ರಮಗಳು ಉಪಯೋಗವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಮಾತನಾಡಿ ಕಾನೂನು ಅಡಿಯಲ್ಲಿ ಗ್ರಾಹಕರಿಗೆ ರಕ್ಷಣೆ ಇದೆ. ಈ ಹಿನ್ನೆಲೆಯಲ್ಲಿ ಮೋಸ ಮಾಡುವವರಿಗಿಂತ ಮೋಸ ಹೋಗುವ ಗ್ರಾಹಕರು ಎಚ್ಚರದಿಂದ ಇದ್ದರೆ ವಂಚಿಸುವುದರಿಂದ ತಪ್ಪಿಸಿಕೊಳ್ಳಬಹುದು. ಗ್ರಾಹಕರ ಅರಿವು ಕಾರ್ಯಕ್ರಮಗಳು ಹೆಚ್ಚು ಮೂಡಿ ಬರಬೇಕು ಎಂದರು.
ಮುಖ್ಯ ಉಪನ್ಯಾಸ ನೀಡಿದ ವಕೀಲರಾದ ವೆಂಕಟಾಚಲ ಅವರು 1983 ರಲ್ಲಿ ವಿಶ್ವ ಗ್ರಾಹಕ ದಿನಾಚರಣೆಯನ್ನು ಮೊದಲಿಗೆ ಹಮ್ಮಿಕೊಳ್ಳಲಾಯಿತು. ಶಾಲೆಗಳಲ್ಲಿ ಗ್ರಾಹಕ ಹಕ್ಕುಗಳ ಬಗ್ಗೆ ತಿಳಿಸಿಕೊಡುವ ಉದ್ದೇಶದಿಂದ ಕ್ಲಬ್‍ಗಳನ್ನು ಸ್ಥಾಪಿಸಲಾಗಿದೆ. ಇದೇ ರೀತಿ ಎಲ್ಲಾ ಗ್ರಾಹಕರಿಗೂ ಅರಿವು ಮೂಡಿಸಲು ವ್ಯಾಪಕವಾಗಿ ಕಾರ್ಯಕ್ರಮ ಏರ್ಪಡಿಸದರೇ ಅನುಕೂಲವಾಗಲಿದೆ ಎಂದರು.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರಾದ ಕೆ.ಎಲ್.ಶಿವಲಿಂಗೇಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆಯ ಸದಸ್ಯರಾದ ಗೌರಮ್ಮಣಿ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಮಾದಮ್ಮ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಆರ್.ರಾಚಪ್ಪ ಕಾಯ್ರಕ್ರಮದಲ್ಲಿ ಉಪಸ್ಥಿತರಿದ್ದರು.
*****************************************************************
ಗುಂಡ್ಲುಪೇಟೆ ಉಪಚುನಾವಣೆ : ಎರಡನೇ ದಿನವೂ ನಾಮಪತ್ರ ಸಲ್ಲಿಕೆ ಇಲ್ಲ
ಚಾಮರಾಜನಗರ, ಮಾ. 15 (- ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು ಎರಡನೇಯ ದಿನವಾದ ಇಂದು ಯಾವುದೆ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
**************************************************
ಗುಂಡ್ಲುಪೇಟೆ ಉಪಚುನಾವಣೆ : ಅಬಕಾರಿ ಮಾಹಿತಿಗಾಗಿ ಕಂಟ್ರೋಲ್ ರೂಂ
ಚಾಮರಾಜನಗರ, ಮಾ. 15 - ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆ ಪ್ರಯುಕ್ತ ಅಕ್ರಮ ಮದ್ಯ ಮಾರಾಟ, ತಯಾರಿಕೆ, ದಾಸ್ತಾನು, ಸಾಗಾಣಿಕೆ ಇತ್ಯಾದಿಗಳ ಕುರಿತು ಮಾಹಿತಿಯನ್ನು ಅಬಕಾರಿ ಇಲಾಖೆಗೆ ನೀಡಲು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಕಂಟ್ರೋಲ್ ರೂಂಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು ಸಾರ್ವಜನಿಕರು ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗೆ ಅಥವಾ ಇಲಾಖೆಯ ಕಂಟ್ರೋಲ್ ರೂಂ ಮೇಲುಸ್ತುವಾರಿ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಮಾಹಿತಿ ನೀಡಲು ಕೋರಲಾಗಿದೆ.
ಕಂಟ್ರೋಲ್ ರೂಂಗಳು ಚಾಮರಾಜನಗರ ಹಾಗೂ ಗುಂಡ್ಲುಪೇಟೆಯಲ್ಲಿ ಕಾರ್ಯನಿರ್ವಹಿಸಲಿದ್ದು ವಿವರ ಇಂತಿದೆ.
ಅಬಕಾರಿ ಉಪ ಆಯುಕ್ತರ ಕಚೇರಿ, ಚಾಮರಾಜನಗರ ಜಿಲ್ಲೆ, ಚಾಮರಾಜನಗರ (ದೂ.ಸಂ. 08226-224892), ಶ್ರೀ ಗಂಗಾಧರ ಮುದೇಣ್ಣವರ, ಅಬಕಾರಿ ಉಪ ಅಧೀಕ್ಷಕರು, ಚಾಮರಾಜನಗರ ಉಪವಿಭಾಗ (ಮೊಬೈಲ್ 9449597186), ಅಬಕಾರಿ ನಿರೀಕ್ಷಕರ ಕಚೇರಿ, ಗುಂಡ್ಲುಪೇಟೆ ವಲಯ, ಗುಂಡ್ಲುಪೇಟೆ (ದೂ.ಸಂ. 08229-223289), ಸುನಂದ, ಅಬಕಾರಿ ನಿರೀಕ್ಷಕರು (ಮೊಬೈಲ್ 9964861036) ಇಲ್ಲಿಗೆ ಮಾಹಿತಿ ನೀಡುವಂತೆ ಅಬಕಾರಿ ಇಲಾಖೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
****************************************************************
Subscribe to:
Post Comments (Atom)
01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ
ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ* ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...
ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು
-
ಹ್ಯಾಟ್ಸ್ ಆಫ್.. ಟು.. ಎಮ್.ಎಲ್.ಎ. ಪುಟ್ಟರಂಗಶೆಟ್ಟಿ ಸಾಹೇಬ್ರೇ..! . … ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ದಯಮಾಡಿ ಕ್ಷಮಿಸಿ ಯಾರ ಹಂಗಿಗೂ ಒಳಗಾ...
-
ವರ್ಷದಲ್ಲಿ ಮೂರು ಬಾರಿ ವರ್ಗಾವಣೆ ಕಸರತ್ತು ನಡೆಸಿದ ಸರ್ಕಾರ, ರಜೆಯನ್ನೆ ಹಾಕದೇ ವರ್ಷ ಪೂರೈಸಿದ ಎಸ್ಪಿ ಕುಲದೀಪ್ ಕುಮಾರ್ ಜೈನ್ ವರದಿ ರಾಮಸಮುದ್ರ ಎಸ್.ವೀ...
-
ಮಿಸ್ ಯೂ ಟು ಆಲ್, ಥ್ಯಾಂಕ್ಯು ಟು ಆಲ್ ಎಂದು ಭಾವುಕದಿಂದ ಕಣ್ಣೀರಿಟ್ಟ ಎಸ್ಪಿ ಜೈನ್ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ...
-
ನವ ದಂಪತಿಗಳಿಗೆ ನಿರಾಸೆ............................... ಚಾಮರಾಜೇಶ್ವರ ರಥೋತ್ಸವ, ನಡೆಯುತ್ತಾ.! ಚಾಮರಾಜನಗರ, ಮೇ : ಆಷಾಢದಲ್ಲಿ ನಡೆಯುವ ಏಕೈಕ ರಥೋತ್ಸವ ಎಂಬ ಖ...
-
ಇಂಜಿನಿಯರಿಂಗ್ ವಿದ್ಯಾರ್ಥಿನಿ: ಆತ್ಮಹತ್ಯೆಗೆ ಯತ್ನ ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ ಮೇ 18: ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಪ್...
-
******************************************************* ಎಸ್ಪಿ ಕುಲದೀಪ್ ಕುಮಾರ್ ಜೈನ್ ಪ್ರಾಣಾಪಾಯದಿಂದ ಪಾರು REPORTED BY S.VEERABHADRA SWAMY. R...
-
ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ್ವರ ದೇವಾಲಯ.. VSS ಅಂಗಡಿ ಮುಗ್ಗಟ್ಟು ನೆಲಸಮ: ಅದ್ಬುತವಾಗಿ ಕಾಣಲಿದಿಯೇ ಚಾಮರಾಜೇಶ...
-
ಅಕ್ರಂ ದಂದೆಗಳನ್ನ ಮಟ್ಟ ಹಾಕಿದ ಚಾಮರಾಜನಗರದ ಐ. ಪಿ.ಎಸ್ ಆದಿಕಾರಿ ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್ ವರ್ಗಾವಣೆ, ಶ್ರೀ ಧರ್ಮೇಂದ್ರ ಕುಮಾರ್ ಮೀನಾ, (ಐಪಿಎಸ್.) ...
-
ನ್ಯೂ ಬೀಟ್ ಸಿಸ್ಟಂ…ಹಾಗಂದ್ರೇನು..? ಪ್ರತಿಯೊಬ್ಬಸಾರ್ವಜನಿಕ ಗಮನಕ್ಕೆ ಸುದ್ದಿ ಓದಿದ ಮೇಲೆ ಶೇರ್ ಮಾಡುವುದನ್ನು ಮರೆಯಬೇಡಿ..ನಿಮ್ಮ ಬೀದಿಗೆ ಬಂದಾಗ ಪೋಲೀಸರೊಂದ...
-
ಕೇಸರಿ ದ್ವಜ ಮತ್ತು ಸ್ಕೂಟರ್ ಬೆಂಕಿಹಾಕಿದ ದುಷ್ಕರ್ಮಿಗಳು ವರದಿ: ರಾಮಸಮುದ್ರ ಎಸ್ ವೀರಭದ್ರಸ್ವಾಮಿ (ವಾಹನದ ನಂಬರ್ ಅನ್ನು ನಾವೇ ಅಳಸಿಲಾಗಿದೆ. ಕ್ಷಮ...
No comments:
Post a Comment