ಅಪ್ತಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಸಜೆ
ಚಾಮರಾಜನಗರ, ಮಾ. 24:- ಅಪ್ತಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ಹಾಗೂ ಮದುವೆಯಾಗುವುದಾಗಿ ನಂಬಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 4 ವರ್ಷ 6 ತಿಂಗಳು ಸಜೆ ಹಾಗೂ 4 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಕೊಳ್ಳೇಗಾಲ ತಾಲೂಕು ಸತ್ತೇಗಾಲ ಜಾಗೇರಿ ಕರಾಚಿಕಟ್ಟೆ ಗ್ರಾಮದ ಪ್ರವೀಣ್ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ 2015ರ ಮೇ 15 ಹಾಗೂ 20ರಂದು ಬಾಲಕಿಯ ತಂದೆ ವ್ಯವಸಾಯ ಮಾಡಿಕೊಂಡಿರುವ ಜಮೀನಿನ ಮನೆಯಲ್ಲಿ ಟಿವಿ ನೋಡುವ ನೆಪ ಮಾಡಿಕೊಂಡು ಒಬ್ಬಳೇ ಇದ್ದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತೇನೆಂದು ಹಾಗೂ ವಿವಾಹವಾಗುವುದಾಗಿ ನಂಬಿಸಿ ಪುಸಲಾಯಿಸಿ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ರುಜುವಾತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಅಪರಾಧಿಗೆ ಭಾರತೀಯ ದಂಡ ಸಂಹಿತೆ ಕಲಂ 354 (ಎ) 420 ಐಪಿಸಿ ಹಾಗೂ ಪೋಕ್ಸೋ ಕಾಯಿದೆಯಡಿ 4 ವರ್ಷ 6 ತಿಂಗಳು ಸಜೆ 4 ಸಾವಿರ ರೂ. ದಂಡ ವಿಧಿಸಿ ಮಾರ್ಚ್ 23ರಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ (ಪೋಕ್ಸೋ) ಎಸ್. ನಾಗರಾಜು ಕಾಮಗೆರೆ ವಾದ ಮಂಡಿಸಿದ್ದರು.
ಮಾ. 25ರಂದು ಪೊಲೀಸ್ ದೂರು ಪ್ರಾಧಿಕಾರ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ
ಚಾಮರಾಜನಗರ, ಮಾ. 24 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಪಟ್ಟಣ ಪೊಲೀಸ್ ಠಾಣೆ ಸಂಯುಕ್ತ ಆಶ್ರಯದಲ್ಲಿ ಪೊಲೀಸ್ ದೂರು ಪ್ರಾಧಿಕಾರ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಮಾರ್ಚ್ 25ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏರ್ಪಡಿಸಲಾಗಿದೆ.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಆರ್.ಪಿ. ನಂದೀಶ್ ಕಾರ್ಯಕ್ರಮ ಉದ್ಘಾಟಿಸುವರು. ಪಟ್ಟಣ ಪೊಲೀಸ್ ಠಾಣೆ ನಿರೀಕ್ಷಕರಾದ ಮಹದೇವಯ್ಯ ಅಧ್ಯಕ್ಷತೆ ವಹಿಸುವರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಶಿವಪ್ರಸನ್ನ, ಸಾಧನಾ ಸಂಸ್ಥೆ ಅಧ್ಯಕ್ಷರಾದ ಟಿ.ಜೆ. ಸುರೇಶ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.
ವಕೀಲರಾದ ಡಿ.ಎಂ. ಶ್ರೀಕಂಠಮೂರ್ತಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದÉ.
ಮಾ. 25ರಂದು ಹರವೆ ಭಾಗದಲ್ಲಿ ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಮಾ. 24 ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮವು ತಾಲೂಕಿನ ಹರವೆ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮಾರ್ಚ್ 25ರಂದು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹರವೆ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ವಿದ್ಯುತ್ ಸರಬರಾಜು ನಿಗಮದೊಂದಿಗೆ ಸಹಕರಿಸುವಂತೆÉ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಹುಡುಗಿಯ ಪತ್ತೆಗೆ ಮನವಿ
ಚಾಮರಾಜನಗರ, ಮಾ. 24 ಕೊಳ್ಳೇಗಾಲ ತಾಲೂಕು ಮಲ್ಲಹಳ್ಳಿಮಾಳ ಗ್ರಾಮದ ಚಿಕ್ಕರಂಗಯ್ಯ ಅವರು ಮಗಳಾದ ಅಶ್ವಿನಿ ಎಂಬಾಕೆ ಕಾಣೆಯಾಗಿರುವ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅಶ್ವಿನಿ ಮಾರ್ಚ್ 11ರಂದು ಕೊಳ್ಳೇಗಾಲ ಬ್ಯಾಂಕಿನಿಂದ ಹಣ ತರುವುದಾಗಿ ಹೇಳಿ ಹೋದವಳು ಇದುವರೆವಿಗೂ ಮನೆಗೆ ವಾಪಸ್ಸು ಬಂದಿರುವುದಿಲ್ಲ ಎಂದು ದೂರು ನೀಡಿರುತ್ತಾರೆ.
17 ವರ್ಷದ ಅಶ್ವಿನಿ ಎಣ್ಣೆಗೆಂಪು ಮೈ ಬಣ್ಣ, ಕೋಲುಮುಖ, ಸುಮಾರು 4.6 ಅಡಿ ಎತ್ತರವಿದ್ದು ಕನ್ನಡ ಭಾಷೆ ಮಾತನಾಡುತ್ತಾಳೆ. ಕನ್ನಡ ಮತ್ತು ಇಂಗ್ಲೀಷ್ ಓದು ಬರಹ ಬಲ್ಲವಳಾಗಿದ್ದಾಳೆ. ಬಲಗೈನ ತೋಳಿನ ಬಳಿ ಸುಮಾರು ಎರಡು ಇಂಚು ಉದ್ದದ ಹಳೇ ಗಾಯದ ಗುರುತಿದೆ.
ಈಕೆಯ ಸುಳಿವು ಸಿಕ್ಕಲ್ಲಿ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ದೂ.ಸಂ. 08224-252051, ಮೊಬೈಲ್ 9480804655 ಗೆ ಅಥವಾ ಚಾಮರಾಜನಗರ ಜಿಲ್ಲಾ ನಿಯಂತ್ರಣ ಕೊಠಡಿ ದೂ.ಸಂ. 08226-222398ಗೆ ಮಾಹಿತಿ ನೀಡುವಂತೆ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕ್ಷಯರೋಗಕ್ಕೆ ಚಿಕಿತ್ಸೆ ಸೌಲಭ್ಯ
ಚಾಮರಾಜನಗರ, ಮಾ. 24 -ಕ್ಷಯರೋಗ ದಿನವನ್ನು ವಿಶ್ವದೆಲ್ಲೆಡೆ ಮಾರ್ಚ್ 24 ರಂದು ಆಚರಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲೆಂiÀiಲ್ಲಿ ಕ್ಷಯರೋಗ ಪ್ರಕರಣಗಳ ಕುರಿತು ಒಂದು ಅವಲೋಕನ ನಡೆಸಲಾಗಿದೆ.
ಚಾಮರಾಜನಗರ ಜಿಲೆÉ್ಲಯಲ್ಲಿ 2016ರ ಸಾಲಿನಲ್ಲಿ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 11504 ಕ್ಷಯರೋಗ ಲಕ್ಷಣ ಇರುವವರನ್ನು ಕಫ ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ಒಟ್ಟು 1170 ಕ್ಷಯರೋಗಿಗಳು ಪತ್ತೆಯಾಗಿದ್ದು 545 ಕಫದಲ್ಲಿ ಟಿಬಿ ಕ್ರಿಮಿಗಳಿರುವ ರೋಗಿಗಳು ಕಂಡು ಬಂದಿರುತ್ತಾರೆ. ಇವರಲ್ಲಿ 593 ರೋಗಿಗಳು ಗುಣಮುಖರಾಗಿರುತ್ತಾರೆ ಮತ್ತು 66 ರೋಗಿಗಳು ಮೃತಪಟ್ಟಿರುತ್ತಾರೆ.
1054 ಕ್ಷಯರೋಗಿಗಳಿಗೆ ಹೆಚ್ ಐ ವಿ ಪರೀಕ್ಷೆ ಮಾಡಿಸಿದ್ದು ಅದರಲ್ಲಿ 78 ಹೆಚ್ ಐ ವಿ ಪ್ರಕರಣಗಳು ಕಂಡುಬಂದಿದು ಇವರೆಲ್ಲರನ್ನೂ ಚಿಕಿತ್ಸೆಗೆ ಒಳಪಡಿಸಲಾಗಿದೆ.
2016ರ ಸಾಲಿನಲ್ಲಿ ಹೆಚ್‍ಐವಿ ಇರುವ 10005 ರೋಗಿಗಳಿಗೆ ಟಿಬಿ ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ 68 ಟಿಬಿ ಹೆಚ್‍ಐವಿ ಪ್ರಕರಣಗಳು ಕಂಡುಬಂದಿದ್ದು ಇವರಲ್ಲಿ 50 ಟಿಬಿ ಹೆಚ್‍ಐವಿ ರೋಗಿಗಳು ಚಿಕಿತ್ಸೆಗೊಳಗಾದವರು. 34 ಗುಣ ಹೊಂದಿದವರು ಹಾಗೂ 12 ಮೃತಪಟ್ಟಿರುತ್ತಾರೆ.
ಪರಿಷ್ಕøತ ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ 2016 ರಿಂದ ಎಂಡಿಆರ್ ಮತ್ತು ಎಕ್ಸ್‍ಡಿಆರ್ ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು ಜಿಲ್ಲೆಯ 2016ನೇ ಸಾಲಿನಲ್ಲಿ 475 ಎಂಡಿಆರ್ ಲಕ್ಷಣ ಇರುವವರನ್ನು ಪರೀಕ್ಷೆಗೆ ಒಳಪಡಿಸಿದ್ದು ಅದರಲ್ಲಿ 10 ಎಂಡಿಆರ್ ಹಾಗೂ 02 ಎಕ್ಸ್‍ಡಿಆರ್ ಕ್ಷಯರೋಗಿಗಳು ಪತ್ತೆಯಾಗಿರುತ್ತಾರೆ. ಅದರಲ್ಲಿ 9 ಎಂಡಿಆರ್ 2 ಎಕ್ಸ್‍ಡಿಆರ್ ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ರಾಷ್ಟ್ರೀಯ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಖಾಸಗಿ ವೈದ್ಯರು, ಖಾಸಗಿ ಆಸ್ಪತ್ರೆಗಳು ಮತ್ತು ಖಾಸಗಿ ಪ್ರಯೋಗ ಶಾಲೆಗಳು ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆದೇಶದನ್ವಯ ನಿಕ್ಷಯ್‍ನಲ್ಲಿ ನೋಂದಣಿ ಮಾಡಿಸಿ ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರಗಳಿಗೆ ವರದಿ ಸಲ್ಲಿಸಲು ಮನವಿ ಸಲ್ಲಿಸಲಾಗಿದೆ.
ಇಲ್ಲಿಯವರೆಗೆ 124 ಖಾಸಗಿ ಆಸ್ಪತ್ರೆಗಳು ನೊಂದಣಿಯಾಗಿದ್ದು ಇವುಗಳಲ್ಲಿ 119 ವೈದ್ಯರು ನಿಕ್ಷಯ್‍ನಲ್ಲಿ ನೋಂದಣಿಯಾಗಿದ್ದು ಇಲ್ಲಿಯವರೆಗೆ 25 ಕ್ಷಯರೋಗಿಗಳನ್ನು ನೊಂದಾಯಿಸಿದ್ದಾರೆ.
ಎರಡು ವಾರಕ್ಕಿಂತÀ ಹೆಚ್ಚು ಕೆಮ್ಮು, ಸಂಜೆ ವೇಳೆ ಜ್ವರ, ಎದೆನೋವು, ತೂಕ ಕಡಿಮೆಯಾಗುವುದು, ಹಸಿವು ಆಗದಿರುವುದು, ಕೆಲವೊಮ್ಮ ಕಫದಲ್ಲಿ ರಕ್ತ ಬೀಳುವುದು ಈ ರೋಗದ ಲಕ್ಷಣಗಳಾಗಿವೆ. ಈ ಲಕ್ಷಣಗಳು ಯಾವುದೇ ವ್ಯಕ್ತಿಯಲ್ಲಿ ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ಬಾರಿ ಕಫ ಪರೀಕ್ಷೆ ಮಾಡಿಸುವುದು ಮತ್ತು ಮಕ್ಕಳಲ್ಲಿ ಹೆಚ್‍ಐವಿ ಸೋಂಕಿತರಲ್ಲಿ ಮಧುಮೇಹ ರೋಗವಿರುವವರಲ್ಲಿ ಶ್ವಾಸಕೋಶೇತರ ಕ್ಷಯ ಇರುವವರಿಗೆ ಬೇಗ ಕ್ಷಯರೋಗ ಪತ್ತೆ ಹಚ್ಚಲು ಸಿಬಿ - ನಾಟ್ ಪರೀಕ್ಷೆಗೆ ಒಳಪಡಿಸಲಾಗುವುದು.
ಎಲ್ಲರೂ ಒಗ್ಗೂಡಿ ಕ್ಷಯರೋಗವನ್ನು ನಿರ್ಮೂಲನೆಗೊಳಿಸೋಣ ಎಂಬುದು ಈ ಬಾರಿಯ ವಿಶ್ವ ಕ್ಷಯ ದಿನಾಚರಣೆಯ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ಸರ್ವರ ಸಹಕಾರ ಅವಶ್ಯವಿದೆ ಎಂದು ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಅವರು ಮನವಿ ಮಾಡಿದ್ದಾರೆ.
ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆ : ಅಂತಿಮ ಕಣದಲ್ಲಿ 7 ಅಭ್ಯರ್ಥಿಗಳು
ಚಾಮರಾಜನಗರ, ಮಾ. - ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ನಾಮಪತ್ರಗಳ ವಾಪಸ್ಸು ಪಡೆಯುವ ಅವಧಿ ಮುಕ್ತಾಯವಾಗಿದ್ದು, ಒಟ್ಟು 9 ಅಭ್ಯರ್ಥಿಗಳ ಪೈಕಿ ಇಬ್ಬರು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂದಕ್ಕೆ ಪಡೆದಿದ್ದಾರೆ. ಹೀಗಾಗಿ ಅಂತಿಮವಾಗಿ ಚುನಾವಣಾ ಕಣದಲ್ಲಿ 7 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಪಿ.ಎಸ್.ಯಡೂರಪ್ಪ ಹಾಗೂ ಬಿ.ಸಿ. ಶೇಖರರಾಜು ತಮ್ಮ ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.
ಅಂತಿಮವಾಗಿ ಉಳಿದಿರುವ ಅಭ್ಯರ್ಥಿಗಳ ವಿವರ : ಸಿ.ಎಸ್.ನಿರಂಜನಕುಮಾರ್-ಭಾರತೀಯ ಜನತಾ ಪಾರ್ಟಿ, (ಚಿಹ್ನೆ- ಕಮಲ) ಎಂ.ಸಿ. ಮೋಹನ್ ಕುಮಾರಿ @ ಗೀತಾ – ಇಂಡಿಯನ್ ನ್ಯಾಷನಲ್ ಕಾಂಗ್ರೇಸ್, (ಚಿಹ್ನೆ- ಕೈ), ಶಿವರಾಜು.ಎಂ-ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ(ಎ) (ಚಿಹ್ನೆ -ಹೊಲಿಗೆ ಯಂತ್ರ), ಎಂ.ಹೊನ್ನೂರಯ್ಯ -ಭಾರತೀಯ ಡಾ|| ಬಿ.ಆರ್. ಅಂಬೇಡ್ಕರ್ ಜನತಾ ಪಕ್ಷ (ಚಿಹ್ನೆ- ಆಟೋ-ರಿಕ್ಷಾ), ಮಹದೇವಪ್ರಸಾದ್.ಬಿ - ಪಕ್ಷೇತರ (ಚಿಹ್ನೆ- ಹವಾ ನಿಯಂತ್ರಕ), ಎಂ. ಶಿವರಾಮು- ಪಕ್ಷೇತರ (ಚಿಹ್ನೆ – ತೆಂಗಿನಕಾಯಿ), ಕೆ. ಸೋಮಶೇಖರ್- ಪಕ್ಷೇತರ (ಚಿಹ್ನೆ- ಬಳೆಗಳು),
ಏ 2 ರಂದು ಪಲ್ಸ್ ಪೋಲಿಯೊ : ಪೂರ್ವಸಿದ್ಧತೆ ಕೈಗೊಳ್ಳಲು ಡಿಸಿ ಸೂಚನೆ
ಚಾಮರಾಜನಗರ, ಮಾ. - ಜಿಲ್ಲೆಯಲ್ಲಿ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಏಪ್ರಿಲ್ 2 ರಂದು ಹಾಗೂ ಎರಡನೇ ಸುತ್ತಿನ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಏಪ್ರಿಲ್ 30 ರಂದು ವ್ಯಾಪಕವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಪೂರ್ವಸಿದ್ದತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ರಾಮು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪಲ್ಸ್ ಪೋಲಿಯೋ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆಗ ತಾನೆ ಹುಟ್ಟಿದ ಮಗುವಿನಿಂದ ಹಿಡಿದು 5 ವರ್ಷದವರೆಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ನಾಲ್ಕು ತಾಲೂಕುಗಳಲ್ಲಿಯೂ ಪಲ್ಸ್ ಪೋಲಿಯೋ ಹನಿ ನೀಡುವ ಕೇಂದ್ರಗಳನ್ನು ತೆರೆಯಬೇಕು. ಶಾಲೆ ಅಂಗನವಾಡಿಗಳಲ್ಲಿ ಪಲ್ಸ್ ಪೋಲಿಯೋ ಬೂತುಗಳನ್ನು ತೆರೆಯಲು ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಎಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಲ್ಸ್ ಪೋಲಿಯೋ ಹನಿ ಶೇಖರಣೆಗೆ ನಿರಂತರ ವಿದ್ಯುತ್ ಸರಬರಾಜು ಅವಶ್ಯಕವಿದೆ. ಈ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಪ್ರಾರಂಭವಾಗುವ 3 ದಿನಗಳ ಮೊದಲು ಹಾಗೂ ನಂತರದ 4 ದಿನಗಳ ವರೆಗೆ ನಿರಂತರವಾಗಿ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ 24 ಗಂಟೆಗಳ ಅವಧಿಯು ವಿದ್ಯುತ್ ಸರಬರಾಜು ಮಾಡಬೇಕು. ಯಾವುದೇ ವಿದ್ಯುತ್ ಅಡಚಣೆಗೆ ಅವಕಾಶವಾಗದ ಹಾಗೆ ಚೆಸ್ಕಾಂ ಅಧಿಕಾರಿಗಳು ನೋಡಿಕೊಳ್ಳಬೇಕೆಂದರು.
ಜಿಲ್ಲೆಯಾದ್ಯಂತ ವ್ಯಾಪಕವಾಗಿ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಬೇಕಿರುವ ಹಿನ್ನೆಲೆಯಲ್ಲಿ ಅಗತ್ಯವಿರುವ ವಷ್ಟು ವಾಹನಗಳನ್ನು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಆರೋಗ್ಯ ಇಲಾಖೆಗೆ ನಿಯೋಜಿಸಬೇಕು. ಇಲಾಖೆಗಳ ವಾಹನಗಳು ಸುಸ್ಥಿತಿಯಲ್ಲಿ ಇರುವ ಬಗ್ಗೆ ದೃಢೀಕರಿಸಿ ವರದಿ ಸಲ್ಲಿಸಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ವಾಹನದ ಕೊರತೆ ಎದುರಾಗದಂತೆ ಸಿದ್ದತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕಾಡಂಚಿನ ಗ್ರಾಮಗಳು ಹಾಗೂ ದುರ್ಗಮ ಅರಣ್ಯ ಪ್ರದೇಶಗಳು ಹೆಚ್ಚು ಪ್ರಮಾಣದಲ್ಲಿವೆ. ಹೀಗಾಗಿ ಈ ಭಾಗದ ಜನತೆಗೂ ಪಲ್ಸ್ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮ ತಲುಪಬೇಕು. ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ವಾಪ್ತಿಯಲ್ಲಿ ಪಲ್ಸ್ ಪೋಲಿಯೋ ವಾಹನಗಳ ಓಡಾಟಕ್ಕೆ ಅನುಮತಿ ನೀಡಬೇಕು ಎಂದರು.
ಸರ್ಕಾರಿ, ಖಾಸಗಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಇತರೆ ಜನನಿಬಿಡ ಸಾರ್ವಜನಿಕ ಸ್ಥಳಗಳಲ್ಲೂ ಬೂತ್ ಗಳನ್ನು ತೆರೆಯಬೇಕು. ಮುಖ್ಯ ವಾಹನ ನಿಲುಗಡೆ ಸ್ಥಳಗಳಲ್ಲಿಯೂ ಪೋಲಿಯೋ ಹನಿ ಹಾಕಿಸಲು ಪೊಲೀಸರು ಕಾರ್ಯಪ್ರವೃತ್ತರಾಗಬೇಕು. ಸಂಚಾರಿ ವಾಹನಗಳ ಮೂಲಕವೂ ಲಸಿಕೆ ನೀಡಲು ಆರೋಗ್ಯ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಅವರು ತಿಳಿಸಿದರು.
ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಆಯಾ ಸ್ಥಳೀಯ ಸಂಸ್ಥೆಗಳು ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ತೊಡಗಿಕೊಳ್ಳಬೇಕು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ನಿಯೋಜಿತರಾಗುವ ಸಿಬ್ಬಂದಿ ಅಧಿಕಾರಿಗಳಿಗೆ ಅವಶ್ಯವಿರುವ ಎಲ್ಲ ಬಗೆಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಸ್ವಯಂ ಸೇವಾ ಸಂಸ್ಥೆಗಳು, ನರ್ಸಿಂಗ್ ಶಾಲೆಗಳ ವಿದ್ಯಾರ್ಥಿ ಸಿಬ್ಬಂದಿ ಸಹಕಾರ ಅಗತ್ಯವಿದೆ. ವಿವಿಧ ಇಲಾಖೆಗಳು ಕೂಡ ತೊಡಗಿ ಕೊಂಡು ಪಲ್ಸ್ ಪೋಲಿಯೋ ರಾಷ್ಟ್ರೀಯ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶ್ವಸಿ ಗೊಳಿಸಲು ಕಾರ್ಯೋನ್ಮುಖರಾಗ ಬೇಕೆಂದು ಜಿಲ್ಲಾಧಿಕಾರಿ ರಾಮು ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಚ್.ಪ್ರಸಾದ್, ತಹಶೀಲ್ದಾರ್ ಕೆ.ಪುರಂದರ, ಜಿಲ್ಲಾ ಲಸಿಕಾಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ರಘುರಾಂ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಮುಖಂಡರು ಸಭೆಯಲ್ಲಿ ಹಾಜರಿದ್ದರು.
---------------------------------------------------------------------------------------------------------------------------------
ಗುಂಡ್ಲುಪೇಟೆ ಉಪ ಚುನಾವಣೆ : ದಾಖಲಾತಿ ಇಲ್ಲದ ನಗದು ವಶ
ಚಾಮರಾಜನಗರ, ಮಾ. :- ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ತಪಾಸಣಾ ಕಾರ್ಯ ಚುರುಕುಗೊಳಿಸಿರುವ ಅಧಿಕಾರಿಗಳು ದಾಖಲಾತಿ ಇಲ್ಲದೆ ಹೊಂದಿದ್ದ ಹಣವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅಬಕಾರಿ ಅಧಿಕಾರಿಗಳು ಕೆಲವಡೆ ದಾಳಿ ನಡೆಸಿ ಮದ್ಯ ವಶಕ್ಕೆ ಪಡೆದುಕೊಂಡಿದ್ದಾರೆ.
ತೆರಕಣಾಂಬಿ ಚೆಕ್ ಪೋಸ್ಟ್ ಬಳಿ ಮಾರ್ಚ 23 ರಂದು ಕಾರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ. 75 ಸಾವಿರ ರೂ ನಗದನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ.
ಅಬಕಾರಿ ಅಧಿಕಾರಿಗಳು ಹಂಗಳದಲ್ಲಿ ಎಂ. ನಂದೀಶ್ ಎಂಬುವರಿಗೆ ಸೇರಿದ ಬಾರ್ ಅಂಡ್ ರೆಸ್ಟೋರೆಂಟ್‍ನಲ್ಲಿ ತಪಾಸಣೆ ನಡೆಸಿದ ವೇಳೆ ಮದ್ಯವನ್ನು ಪಾರ್ಸಲ್‍ಗೆ ನೀಡುತ್ತಿರುವುದು ಊಟ ತಿಂಡಿ ಪಡೆಯದ ಗ್ರಾಹಕರಿಗೆ ಮದ್ಯ ಪೂರೈಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ. ನಗದು ರಶೀದಿ ನೀಡದಿರುವುದು ಬಿಲ್ಲು ಪುಸ್ತಕ ಹಾಜರು ಪಡಿಸದೆ ಇರುವುದು. ಮಹಿಳೆಯರು ಪುರುಷರಿಗೆ ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಅಬಕಾರಿ ನಿಯಮ ಉಲ್ಲಂಘನೆ ಮಾಡಲಾಗಿದ್ದು ದಂಡನಾರ್ಹ ಅಪರಾಧವಾಗಿರುವುದು ಕಂಡುಬಂದಿದೆ.
ಯಳಂದೂರು ತಾಲ್ಲೂಕು ಅಗರ ಗ್ರಾಮದ ಮನೋಜ್ ಅವರಿಂದ 0.090 ಮಿ. ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲು ಮಾಡಲಾಗಿದೆ ಎಂದು ಚುನಾವಣಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.
***************************
No comments:
Post a Comment