ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆ
ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ : ಮಾ.28, 29ರಂದು ನಿಷೇಧಾಜ್ಞೆ ಜಾರಿ
ರಾಮಸಮುದ್ರ ಎಸ್.ವೀರಭದ್ರಸ್ವಾಮಿಚಾಮರಾಜನಗರ, ಮಾ. 27 :- ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮಾರ್ಚ್ 28ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 29ರ ಸಂಜೆ 6 ಗಂಟೆವರೆಗೆ ಸಿಆರ್‍ಪಿಸಿ ಕಲಂ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಕೊಳ್ಳೇಗಾಲ ಉಪವಿಭಾಗ ದಂಡಾಧಿಕಾರಿ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಮಾರ್ಚ್ 28ರಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗ್ರಾಮಗಳಲ್ಲಿ ಕಾಂಗ್ರೆಸ್ ಹಾಗೂ ಬಿ.ಜೆ.ಪಿ. ಪಕ್ಷದ ರಾಜ್ಯ ಹಾಗೂ ಸ್ಥಳೀಯ ಮುಖಂಡರುಗಳು ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಕೆಲವು ಕಡೆ ಒಂದೇ ಗ್ರಾಮದಲ್ಲಿ ಎರಡೂ ಪಕ್ಷದವರು ಪ್ರಚಾರ ಸಭೆಗಳನ್ನು ನಡೆಸಲು ಉದ್ದೇಶಿಸಿದ್ದು ಈ ಸಂದರ್ಭದಲ್ಲಿ ಗಲಾಟೆ ಘರ್ಷಣೆ ಸಂಭವಿಸಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಂಭವವಿದ್ದು, ಸಾರ್ವನಿಕರ ಆಸ್ತಿಪಾಸ್ತಿಗೆ ನಷ್ಟವುಂಟಾಗುವ ಸಾಧ್ಯತೆ ಇರುತ್ತದೆ.
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಗ್ಗಳದಹುಂಡಿ ಗ್ರಾಮದಲ್ಲಿ ನಾಗೇಶ ಎಂಬುವವರು ಮೃತಪಟ್ಟಿದ್ದು ಈ ಸಂದರ್ಭವನ್ನು ಎರಡೂ ರಾಜಕೀಯ ಪಕ್ಷಗಳು ರಾಜಕೀಯವಾಗಿ ಬಳಸಿಕೊಂಡು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣ ಮಾಡುವ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗವುಂಟು ಮಾಡುವ ಸಾಧ್ಯತೆ ಇದ್ದು, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಕರ್ತವ್ಯವನ್ನು ನಿರ್ವಹಿಸಲು ಅಡಚಣೆ ಉಂಟು ಮಾಡುವ ಸಾಧ್ಯತೆ ಇರುತ್ತದೆ ಎಂದು ಪೊಲೀಸ್ ಉಪಾಧೀಕ್ಷಕರು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಸ್ತುಸ್ಥಿತಿಯನ್ನು ಅವಲೋಕಿಸಲಾಗಿ ಕಾನೂನು ಸುವ್ಯವಸ್ಥೆ ಹಾಗೂ ಕರ್ತವ್ಯಕ್ಕೆ ಅಡ್ಡಿಯಾಗುವುದನ್ನು, ಶಾಂತಿ ಭಂಗ ಉಂಟಾಗಬಾರದೆಂಬ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಮುಂಜಾಗರೂಕತಾ ಕ್ರಮವಾಗಿ ನಿಷೇಧಾಜ್ಞೆ ಆದೇಶ ಜಾರಿಗೊಳಿಸಿರುವುದಾಗಿ ನಲಿನ್ ಅತುಲ್‍ರವರು ತಿಳಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಐದು ಜನರಿಗಿಂತ ಹೆಚ್ಚು ಮಂದಿ ಒಂದೇ ಕಡೆ ಗುಂಪುಗೂಡುವಂತಿಲ್ಲ. ಬ್ಯಾಂಕ್‍ಗಳಲ್ಲಿನ ಭದ್ರತಾ ಸಿಬ್ಬಂದಿ ಹೊರತುಪಡಿಸಿ ಯಾವುದೇ ವ್ಯಕ್ತಿ ಮಾರಕಾಸ್ತ್ರ ಅಥವಾ ಆಯುಧಗಳನ್ನು ಹಿಡಿದುಕೊಂಡು ತಿರುಗಾಡುವುದನ್ನು ನಿಷೇಧಿಸಿದೆ. ಪೂರ್ವಾನುಮತಿ ಪಡೆಯದೇ ಧ್ವನಿ ವರ್ಧಕ ಬಳಸುವಂತಿಲ್ಲ, ಯಾವುದೇ ಮೆರವಣಿಗೆ, ಸಭೆ ಸಮಾರಂಭ ನಡೆಸುವಂತಿಲ್ಲ. ಸಾರ್ವಜನಿಕರ ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತಹÀ ಯಾವುದೇ ಚಟುವಟಿಕೆಯನ್ನು ನಡೆಸುವಂತಿಲ್ಲ. ನಿಷೇಧಾಜ್ಞೆ ಆದೇಶವು ಚುನಾವಣೆಯಲ್ಲಿ ನಿರತರಾಗಿರುವ ಅಧಿಕಾರಿ, ಸಿಬ್ಬಂದಿಯವರಿಗೆ ಮತ್ತು ಸರ್ಕಾರಿ ಅಧಿಕಾರಿ, ನೌಕರರಿಗೆ, ಸರ್ಕಾರಿ ಕೆಲಸಕ್ಕೆ ನಿಯೋಜಿಸಲಾಗಿರುವ ವ್ಯಕ್ತಿಗೆ ಅನ್ವಯವಾಗುವುದಿಲ್ಲ. ಅಲ್ಲದೆ ಮೃತ ವ್ಯಕ್ತಿಯ ಅಂತಿಮ ಯಾತ್ರೆಯಲ್ಲಿ ಪಾಲ್ಗೊಳ್ಳುವವರಿಗೆ ಅನ್ವಯಿಸುವುದಿಲ್ಲ.
ನಿಷೇಧಾಜ್ಞೆ ಆದೇಶದ ಅನುಸಾರ ವಿಧಿಸಿರುವ ನಿಬಂಧನೆಗಳನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೊಳ್ಳೇಗಾಲ ಉಪವಿಭಾಗ ದಂಡಾಧಿಕಾರಿ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ನಲಿನ್ ಅತುಲ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆ:
ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನಲೆ: ಮೊಕದ್ದಮೆ ದಾಖಲು
ಚಾಮರಾಜನಗರ ಮಾರ್ಚ 27 : ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಪರವಾಗಿ ಮತಯಾಚಿಸುವ ವೇಳೆ ಮೆರವಣಿಗೆ ಮಾಡುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದರೆಂಬ ಕಾರಣಕ್ಕೆ ಮೊಕದ್ದÀಮೆ ದಾಖಲಾಗಿದೆ.ಯು.ಟಿ.ಖಾದರ್, ಪುಟ್ಟರಂಗಶೆಟ್ಟಿ, ಕಬ್ಬಹಳ್ಳಿ ಮಹೇಶ್ ಹಾಗೂ ಇತರೆ 150 ಜನ ಕಾರ್ಯಕರ್ತರು ಮಾರ್ಚ್ 25 ರಂದು ಮನೆ ಮನೆಗೆ ತೆರಳಿ ಮತಯಾಚಿಸಲು ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಬಿ. ಕುಮಾರಸ್ವಾಮಿ ರವರು ಅನುಮತಿ ಪಡೆದುಕೊಂಡಿದ್ದರು. ಆದರೆ ಅನುಮತಿ ಉಲ್ಲಂಘಿಸಿ ವಾದÀ್ಯ, ಬ್ಯಾಂಡ್‍ಸೆಟ್ ಉಪಯೋಗಿಸಿ ಪಟಾಕಿ ಸಿಡಿಸಿ ಮೆರವಣಿಗೆ ಮಾಡುವ ಮೂಲಕ ಸಾರ್ವಜನಿಕರನ್ನು ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಗುಂಡ್ಲುಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಬಿ. ಕುಮಾರಸ್ವಾಮಿ ಅವರ ಮೊಕದ್ದಮೆ ದಾಖಲಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ನಲಿನ್ ಅತುಲ್ ರವರು ತಿಳಿಸಿದ್ದಾರೆ.
No comments:
Post a Comment