ಎಸ್.ಎಸ್.ಎಲ್.ಸಿ. ಪರೀಕ್ಷಾ ಕೇಂದ್ರ: ಸ್ಪಷ್ಟನೆ
ಚಾಮರಾಜನಗರ ಮಾರ್ಚ್ 28 : ಇದೇ ತಿಂಗಳ ಮಾರ್ಚ್ 30 ರಿಂದ ಏಪ್ರಿಲ್ 12 ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಸಂಬಂಧಿಸಿದಂತೆ ಖಾಸಗಿ ಅಭ್ಯರ್ಥಿಗಳಿಗೆ ಜಿಲ್ಲೆಯ ಒಂದು ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿ ಸೇವಾ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಕೋರ್ಟ್ ರಸ್ತೆ, ಚಾಮರಾಜನಗರ ಟೌನ್ ಎಂದು ತಪ್ಪಾಗಿ ನಮೂದಾಗಿದೆ. ಖಾಸಗಿ ಅಭ್ಯರ್ಥಿಗಳು ಇದನ್ನು ಸೇವಾ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಚೆನ್ನಿಪುರದಮೋಳೆ ರಸ್ತೆ, ಚಾಮರಾಜನಗರ ಟೌನ್ ಎಂದು ತಿಳಿದುಕೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುಳ ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಎಸ್.ಎಸ್.ಎಲ್.ಸಿ. ಪರೀಕ್ಷೆ: ನಿಷೇಧಾಜ್ಞೆ
ಚಾಮರಾಜನಗರ ಮಾರ್ಚ್ 28 : ಜಿಲ್ಲೆಯ ವಿವಿಧೆಡೆ ಮಾರ್ಚ್ 30 ರಿಂದ ಏಪ್ರಿಲ್ 12ರ ವರಗೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿರುವ ಹಿನ್ನಲೆಯಲ್ಲಿ ಪರೀಕ್ಷಾ ಅಕ್ರಮಗಳಿಗೆ ಅವಕಾಶ ವಾಗದಿರಲು ಮತ್ತು ಶಾಂತಿ ಸುವ್ಯವಸ್ಥೆಯಿಂದ ಪರೀಕ್ಷಾ ಪ್ರಕ್ರಿಯೆ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ. ರಾಮು ರವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಆದೇಶವು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ಹಾಗೂ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯ ವಾಗುವುದಿಲ್ಲವೆಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ವಾರ್ತಾ ವಿಶೇಷ
ಎಸ್.ಎಸ್.ಎಲ್.ಸಿ. ಪರೀಕ್ಷೆ: ಸರ್ವ ಸಿದ್ಧತೆ
ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಾರ್ಚ್ 30 ರಿಂದ ಏಪ್ರಿಲ್ 12 ರವರೆಗೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು ಇದಕ್ಕಾಗಿ ಅಗತ್ಯ ಸಿದ್ಧತೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 12595 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 6538 ಬಾಲಕರು 6057 ಬಾಲಕಿಯರು ಸೇರಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳ 6704, ವಿದ್ಯಾರ್ಥಿಗಳು, ಅನುದಾನಿತ ಶಾಲೆಗಳ 3673 ವಿದ್ಯಾರ್ಥಿಗಳು, ಅನುದಾನರಹಿತ ಶಾಲೆಗಳ 2218 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 43 ಪರೀಕ್ಷಾ ಕೇಂದ್ರವು ಇರಲಿದೆ. ಪರೀಕ್ಷಾ ಎಲ್ಲಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ.
ಪರೀಕ್ಷಾ ಕಾರ್ಯವು ಸುಸೂತ್ರವಾಗಿ ನಡೆಯಲು ಎಲ್ಲಾ ಬಗೆಯ ವ್ಯವಸ್ಥೆ ಕೈಗೊಳ್ಳಲಾಗಿದೆ. ಪರೀಕ್ಷಾ ಅಕ್ರಮ ತಡೆಯಲು ಜಿಲ್ಲಾ ಮಟ್ಟದ ಜಾಗೃತ ವಿಚಕ್ಷಣ ದಳ ನೇಮಿಸಲಾಗಿದೆ. ತಾಲ್ಲೂಕು ಮಟ್ಟದಲ್ಲಿಯೂ ಸಹ ಜಾಗೃತ ವಿಚಕ್ಷಣ ದÀಳ ಪರೀಕ್ಷಾ ಕಾರ್ಯದ ಬಗ್ಗೆ ನಿಗಾ ವಹಿಸಲಿದೆ. ಅಲ್ಲದೆ ಪ್ರತಿ ಪರೀಕ್ಷಾ ಕೇಂದ್ರಕ್ಕೂ ಸ್ಥಾನಿಕಾ ವಿಚಕ್ಷಣ ದಳಗಳನ್ನು ನಿಯೋಜಿಸಲಾಗುತ್ತಿದೆ.
ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಹಾಗೂ ಪರೀಕ್ಷಾ ಕಾರ್ಯವು ಶಾಂತಿ ಮತ್ತು ಸುವ್ಯವಸ್ಥೆಯಿಂದ ನಡೆಯಲೆಂಬ ಉದ್ದೇಶದಿಂದ 43 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ವಿದಿಸಿ ಜಿಲ್ಲಾಧಿಕಾರಿಯವರಾದ ಬಿ. ರಾಮು ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ನಿಷೇದಾಜ್ಞೆ ವಿಧಿಸಲಾಗಿದೆ. ಅಲ್ಲದೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಿಗ್ಗೆ 7 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ.
ನಿಷೇದಾಜ್ಞೆ ಆದೇಶವು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಸಿಬ್ಬಂದಿ ಹಾಗೂ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನ್ವಯ ವಾಗುವುದಿಲ್ಲವೆಂದು ಸ್ಪಷ್ಟಪಡಿಸಲಾಗಿದೆ.
ಒಟ್ಟಾರೆ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಯಾವುದೇ ಗೊಂದಲವಿಲ್ಲದೆ ನಡೆಯಲು ಅಗತ್ಯವಿರುವ ಎಲ್ಲಾ ಪ್ರಕ್ರಿಯೆ ನಡೆಸಲಾಗಿದೆ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲವೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಮಂಜುಳ ಅವರು ತಿಳಿಸಿದ್ದಾರೆ.
ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆ:
ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಗದು ವಶ: ವಿವಿಧಡೆ ಅಕ್ರಮ ಮದ್ಯ ವಶ
ಚಾಮರಾಜನಗರ ಮಾರ್ಚ್ 28 : ಯಾವುದೇ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 60940 ರೂ ನಗದನ್ನು ಮಾರ್ಚ್ 27 ರಂದು ತೆರಕಣಾಂಬಿ ಚೆಕ್ ಪೋಸ್ಟ್ ಬಳಿ ವಶಪಡಿಸಿಕೊಳ್ಳಲಾಗಿದೆ.ಚಾಮರಾಜನಗರ ತಾಲ್ಲೂಕು ಕಿಲಗೆರೆ ಗ್ರಾಮದ ಮಾಯನಾಯಕನಪುರದ ಫಾರಂ ಹೌಸ್‍ನ ಗುಣಶೇಖರ್ ಅವರ ಪಿಯಟ್ ಯುನೊ ಗೋಲ್ಡ್ ಕಾರ್‍ನ್ನು ಚೆಕ್ ಪೋಸ್ಟ್ ಬಳಿ ತಪಾಸಣೆ ಮಾಡಿದಾಗ ದಾಖಲೆ ಇಲ್ಲದೆ 60940 ರೂ ನಗದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ಮಾರ್ಚ್ 26 ರಂದು ಸಂಜೆ 6-45ರ ವೇಳೆ ಬಿ.ಜೆ.ಪಿ. ಮುಖಂಡರಾದ ಶ್ರೀರಾಮುಲು ಅವರು ಕೆಲಸೂರು ಗ್ರಾಮದಲ್ಲಿ ಚುನಾವಣೆ ಪ್ರಚಾರ ಮಾಡುವಾಗ ಆಪೆ ಆಟೋ ಒಂದರಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಐಸ್ ಕ್ರೀಮ್ ವಿತರಿಸಲಾಗುತ್ತಿತ್ತು. ಈ ಬಗ್ಗೆ ಸೆಕ್ಟರ್ ಅಧಿಕಾರಿಯವರು ಆಟೋ ಚಾಲಕನನ್ನು ವಿಚಾರಿಸಿದಾಗ ಚಾಲಕನು ಯಾವುದೇ ಉತ್ತರ ನೀಡದೆ ಪರಾರಿಯಾಗಿದ್ದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ದೂರು ದಾಖಲು ಮಾಡಲಾಗಿದೆ.
ಚುನಾವಣೆ ಹಿನ್ನಲೆಯಲ್ಲಿ ಅಬಕಾರಿ ಅಧಿಕಾರಿಗಳು ವಿವಿಧೆಡೆ ಪರಿಶೀಲಿಸಿದ ವೇಳೆ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಗುಂಡ್ಲುಪೇಟೆ ಪಟ್ಟಣದ ಪ್ರಕಾಶ್ ರವರಿಂದ 1.800 ಮಿಲಿ ಲೀಟರ್, ಗುಂಡ್ಲುಪೇಟೆ ಪಟ್ಟಣದ ಮಹದೇವ ಅವರಿಂದ 0.540 ಮಿಲಿ ಲೀಟರ್, ಚಾಮರಾಜನಗರ ತಾಲ್ಲೂಕು ಮಲಿಯೂರು ಗ್ರಾಮದ ನಾಗನಾಯ್ಕ ಎಂಬುವರಿಂದ 0.630 ಮಿಲಿ ಲೀಟರ್, ಮಹೇಶ್ ಅವರಿಂದ 0.990 ಮಿಲಿ ಲೀಟರ್, ಕೊಳ್ಳೇಗಾಲ ತಾಲ್ಲೂಕು ಸಿದ್ದಯ್ಯನಪುರ ಗ್ರಾಮದ ಶೇಖರ್ ಎಂಬುವರಿಂದ 0.900 ಮಿಲಿ ಲೀಟರ್, ಮಹದೇವ ಎಂಬುವರಿಂದ 0.900 ಮಿಲಿ ಲೀಟರ್ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಕೊಳ್ಳೇಗಾಲ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.
ಗುಂಡ್ಲುಪೇಟೆ ವಿಧಾನ ಸಭಾ ಉಪ ಚುನಾವಣೆ:
ಚುನಾವಣಾ ವಿಶೇಷ ವೀಕ್ಷಕರಾಗಿ ಡಾ. ಕರುಣಾರಾಜು ನೇಮಕ
ಚಾಮರಾಜನಗರ ಮಾರ್ಚ್ 28 : ಗುಂಡ್ಲುಪೇಟೆ-ನಂಜನಗೂಡು ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗದಿಂದ ಚುನಾವಣಾ ವಿಶೇಷ ವೀಕ್ಷಕರಾಗಿ ಡಾ. ಕರುಣಾರಾಜು ಅವರನ್ನು ನೇಮಿಸಲಾಗಿದೆ.
ವಿಶೇಷ ವೀಕ್ಷಕರಾದ ಡಾ. ಕರುಣಾರಾಜು ಅವರ ಮೊಬೈಲ್ ಸಂಖ್ಯೆ 9448167515 ಆಗಿರುತ್ತದೆ. ಚುನಾವಣಾ ಸಂಬಂಧ ದೂರು, ಅಹವಾಲುಗಳಿದ್ದಲ್ಲಿ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಏಪ್ರಿಲ್ 9 ರಂದು ವೇತನ ಸಹಿತ ರಜೆ ನೀಡಲು ಆದೇಶ
ಚಾಮರಾಜನಗರ ಮಾರ್ಚ್ 28 : ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರರಾಗಿರುವ ಎಲ್ಲಾ ಕೈಗಾರಿಕೆಗಳು,ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಇನ್ನಿತರೆ ಎಸ್ಟಾಬ್ಲಿಸಮೆಂಟ್‍ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿ ನೌಕರರಿಗೆ ಏಪ್ರಿಲ್ 9 ರಂದು ಮತದಾನ ಮಾಡಲು ಅನುಕೂಲವಾಗುವಂತೆ ಅವಕಾಶ ಕಲ್ಪಿಸುವ ಸಲುವಾಗಿ ವೇತನ ಸಹಿತ ರಜೆ ಮಂಜೂರು ಮಾಡಲು ಜಿಲ್ಲಾಧಿಕಾರಿ ಬಿ. ರಾಮು ರವರು ಆದೇಶಿಸಿದ್ದಾರೆ.ವೇತನ ಸಹಿತ ರಜೆ ನೀಡಲು ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಇಲ್ಲವಾದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ 1951 ರನ್ವಯ ಕಲಂ 135 ಬಿ(3)ರ ಅಡಿ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಬಿ. ರಾಮು ರವರು ತಿಳಿಸಿದ್ದಾರೆ.
ಏಪ್ರಿಲ್ 9 ರಂದು ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಸಂತೆ,ಜಾತ್ರೆ ನಿಷೇಧ
ಚಾಮರಾಜನಗರ ಮಾರ್ಚ್ 28 - ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆಯ ಮತದಾನವು ಏಪ್ರಿಲ್ 9 ರಂದು ನಡೆಯಲಿರುವ ಹಿನ್ನಲೆಯಲ್ಲಿ ಅಂದು ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯೊಳಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಹಾಗೂ ಎಲ್ಲಾ ತರಹದ ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶಿಸಿದ್ದಾರೆ.ಮತದಾನದ ಹಿನ್ನಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಹಾಗೂ ನಾಗರಿಕರು ಮತ ಹಾಕಲು ಅನುಕೂಲ ಮಾಡಿಕೊಡುವ ಹಿತದೃಷ್ಟಿಯಿಂದ ಎಪ್ರಿಲ್ 9 ರಂದು ಬೆಳಿಗ್ಗೆ 5 ರಿಂದ ಸಂಜೆ 6 ಗಂಟೆಯವರೆಗೆ ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಎಲ್ಲಾ ಪ್ರದೇಶಗಳಲ್ಲಿ ಸಂತೆ ಮತ್ತು ಎಲ್ಲಾ ಬಗೆಯ ಜಾತ್ರೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಸೆಕ್ಟರ್ ಅಧಿಕಾರಿ ಬದಲು
ಚಾಮರಾಜನಗರ ಮಾರ್ಚ್ 28 : ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದಂತೆ 16ನೇ ತಂಡದ ಸೆಕ್ಟರ್ ಅಧಿಕಾರಿ ಅವರನ್ನು ಬದಲಿಸಲಾಗಿದೆ.
16ನೇ ತಂಡದ ಸೆಕ್ಟರ್ ಅಧಿಕಾರಿಯಾಗಿ ಚಾಮರಾಜನಗರ ಸಣ್ಣನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ನಿಜಲಿಂಗಸ್ವಾಮಿ ಅವರನ್ನು ನೇಮಿಸಲಾಗಿತ್ತು. ಇವರ ಬದಲು ಇದೇ ಇಲಾಖೆಯ ಸಹಾಯಕ ಇಂಜಿನಿಯರ್ ಜಿ.ಎಸ್. ಸುರೇಶ್ ಅವರನ್ನು ಸೆಕ್ಟರ್ ಅಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ
No comments:
Post a Comment