Thursday, 9 March 2017

ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವವರ ವಿರುದ್ದ ದಂಡ, 64,600/- ರೂ.ಗಳ ದಂಡವನ್ನು ವಸೂಲಿ ಮಾಡಿದ ಪೊಲೀಸ್ ಇಲಾಖೆ, ಅದಿಕೃತ ಪ್ರಕಟನೆ..........ವೀರಭದ್ರಸ್ವಾಮಿ

ಚಾಮರಾಜನಗರ ಜಿಲ್ಲಾ ಪೊಲೀಸರು ದಿನಾಂಕಃ 09.01.2017 ರಿಂದ 15.01.2017 ರವರೆಗೆ 29 ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸುವ ಸಂಬಂಧ ಜಿಲ್ಲಾ ಪೊಲೀಸರ ಸಹಯೋಗದೊಂದಿಗೆ ಚಾ.ನಗರ ಪಟ್ಟಣದಲ್ಲಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಲ್ಲಾ ಅಧಿಕಾರಿಗಳೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸಿದ್ದು, ಈ ವೇಳೆಯಲ್ಲಿ ಸಾರ್ವಜನಿಕರಲ್ಲಿ ಅಪಘಾತಗಳ ಬಗ್ಗೆ ಅರಿವು ಮೂಡಿಸುವುದು, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡದಿರುವಂತೆ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ದ್ವಿಚಕ್ರ ವಾಹನ ಸವಾರರು (ಚಾಲನೆ ಮಾಡುವವರು ಹಾಗೂ ಹಿಂಬದಿ ಸವಾರರು) ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಪ್ರಚಾರಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗಿದೆ. ಆದರೂ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತ ಪ್ರಕರಣಗಳು ವರದಿಯಾಗುತ್ತಿವೆ. ಆದುದರಿಂದ ದಿನಾಂಕಃ 09.03.2017 ರಂದು ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವವರ ವಿರುದ್ದ 638 ಪ್ರಕರಣಗಳನ್ನು ದಾಖಲಿಸಿ, 64,600/- ರೂ.ಗಳ ದಂಡವನ್ನು ವಸೂಲಿ ಮಾಡಲಾಗಿದೆ. ಗೌರವಾನ್ವಿತ ನ್ಯಾಯಾಲಯದ ಆದೇಶದಂತೆ ಚಾಮರಾಜನಗರ ಜಿಲ್ಲೆಯಲ್ಲಿ ಹಾಗೂ ಚಾ.ನಗರ ಪಟ್ಟಣದಲ್ಲಿ ಇನ್ನು ಮುಂದೆಯೂ ಸಹ ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವವರ ವಿರುದ್ದ ದಂಡವನ್ನು ವಸೂಲಿ ಮಾಡಲು ಕ್ರಮ ಕೈಗೊಂಡಿರುತ್ತದೆ. ಸಾರ್ವಜನಿಕರು ಇನ್ನುಮುಂದೆ ಕಡ್ಡಾಯವಾಗಿ ದ್ದಿಚಕ್ರ ವಾಹನದ ಸವಾರರು ಮತ್ತು ಹಿಂಬದಿ ಸವಾರರು ತಪ್ಪದೆ ಹೆಲ್ಮೆಟ್ ಧರಿಸಿ ವಾಹನವನ್ನು ಚಾಲನೆ ಮಾಡುವಂತೆ ಈ ಮೂಲಕ ಕೋರಲಾಗಿದೆ. ಪೊಲೀಸ್ ಅಧೀಕ್ಷಕರವರ ಕಛೇರಿ ಚಾಮರಾಜನಗರ ಜಿಲ್ಲೆ, ಚಾ.ನಗರ. ದಿನಾಂಕ:09-03-2017.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು