Tuesday, 21 March 2017

ಗುಂಡ್ಲುಪೇಟೆ ಬೈ ಎಲೆಕ್ಷನ್, ಮಾರಾಮಾರಿ, ಎರಡು ಪಕ್ಷಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು (21-03-2017)


ಗುಂಡ್ಲುಪೇಟೆ ವಿಧಾನ ಸಭೆ ಉಪಚುನಾವಣೆ 

ನಾಮಪತ್ರ ಸಲ್ಲಿಕೆ ವೇಳೆ ಅನುಮತಿಗಿಂತ ಹೆಚ್ಚು ಜನ ಸೇರಿಸಿದ ಹಿನ್ನೆಲೆ : ಬಿ.ಜೆ.ಪಿ, ಕಾಂಗ್ರೇಸ್ ಸ್ಥಳೀಯ ಮುಖಂಡರ ವಿರುದ್ದ ಮೊಕದ್ದಮೆ ದಾಖಲು

ಚಾಮರಾಜನಗರ,ಮಾ. 21 :- ಗುಂಡ್ಲುಪೇಟೆ ವಿಧಾನ ಸಭೆ ಉಪ ಚುನಾವಣೆಗೆ ಸಂಬಂಧಿಸಿದಂತೆ,  ಅಬಕಾರಿ ಅಧಿಕಾರಿಗಳು ಇಂದು ಸಹ ವಿವಿಧೆಡೆ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. 

ಗುಂಡ್ಲುಪೇಟೆ ಪಟ್ಟಣದಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭಾರತೀಯ ಜನತಾ ಪಕ್ಷ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷವು ಅನುಮತಿ ಪಡೆದದ್ದಕ್ಕಿಂತ ಹೆಚ್ಚು ಜನರನ್ನು ಸೇರಿಸಿದ ಹಿನ್ನೆಲೆಯಲ್ಲಿ ಈ ಎರಡು ಪಕ್ಷಗಳ ಸ್ಥಳೀಯ ಮುಖಂಡÀರ ವಿರುದ್ದ ಟೌನ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. 

ಗುಂಡ್ಲುಪೇಟೆ ತಾಲ್ಲೂಕಿನ ಕಸಬಾ ಹೋಬಳಿಯ ಭೀಮನಬೀಡು ಗ್ರಾಮದಲ್ಲಿ ಗೋಪಮ್ಮ ಅವರಿಂದ 1.620 ಲೀ., ಕೊಳ್ಳೇಗಾಲ ಪಟ್ಟಣದ ಪ್ರಸನ್ನ ಅವರಿಂದ 0.540 ಲೀ., ಚಾಮರಾಜನಗರ ತಾಲ್ಲೂಕು ಹೊಂಗನೂರು ಗ್ರಾಮದ ಶ್ರೀನಿವಾಸ ಅವರಿಂದ 0.450 ಲೀ., ಪ್ರಕಾಶ್ ಎಂಬುವವರಿಂದ 0.540 ಲೀ., ಮದ್ಯ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. 

ಮದ್ಯ ಚಿಲ್ಲರೆ ಮಾರಾಟಗಾರರಾದ ಕೊಳ್ಳೇಗಾಲದ ಮುಡಿಗುಂಡ ಗ್ರಾಮದ ಎಂ.ಬಸವರಾಜೇಗೌಡ ಮತ್ತು ಪಿ.ರೇಣುಕಾ ಅವರು ಮದ್ಯ ಮಾರಾಟದ ಲೆಕ್ಕವನ್ನು ಸರಿಯಾಗಿ ನಿರ್ವಹಿಸದೇ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ದ ಪ್ರಕರಣ ದಾಖಲು ಮಾಡಲಾಗಿದೆ. 

ಸೋಮವಾರ ನಾಮಪತ್ರ ಸಲ್ಲಿಕೆ ವೇಳೆ ಸೆಕ್ಟರ್ ಅಧಿಕಾರಿಗಳಿಂದ 2000 ಜನರ ಮೆರವಣಿಗೆಗೆ ಅನುಮತಿ ಪಡೆದು 3000 ಜನರನ್ನು ಸೇರಿಸಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷದ ಜಿಲ್ಲಾ ಯು ಮೋರ್ಚಾದ ರಾಜಶೇಖರಮೂರ್ತಿ ಹಾಗೂ 1500 ಜನರ ಮೆರವಣಿಗೆಗೆ ಅನುಮತಿ ಪಡೆದು 2000 ಜನರನ್ನು ಸೇರಿಸಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಕುಮಾರಸ್ವಾಮಿ ಅವರ ವಿರುದ್ದ ಟೌನ್ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದು ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ. 


ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆ : 7 ಅಭ್ಯರ್ಥಿಗಳಿಂದ 8 ನಾಮಪತ್ರಗಳ ಸಲ್ಲಿಕೆ

ಚಾಮರಾಜನಗರ, ಮಾ. 21 - ಗುಂಡ್ಲುಪೇಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾದ ಇಂದು 7 ಅಭ್ಯರ್ಥಿಗಳಿಂದ 8 ನಾಮಪತ್ರಗಳು ಸಲ್ಲಿಕೆಯಾಗಿವೆ.

ಭಾರತೀಯ ಜನತಾ ಪಕ್ಷದಿಂದ ಸಿ.ಎಸ್.ನಿರಂಜನ್ ಕುಮಾರ್, ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್ ಜನತಾಪಕ್ಷದಿಂದ ಎಂ.ಹೊನ್ನೂರಯ್ಯ, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ[ಎ] ಪಕ್ಷದಿಂದ ಎಂ.ಶಿವರಾಜು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಸೋಮಶೇಖರ, ಬಿ.ಸಿ.ಶೇಖರರಾಜು, ಬಿ.ಮಹದೇವಪ್ರಸಾದ್ ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಮತ್ತೋರ್ವ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಯಡೂರಪ್ಪ ಎರಡು ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆ : ವೀಕ್ಷಕರ ನೇಮಕ

ಚಾಮರಾಜನಗರ, ಮಾ. 21 - ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ವೀಕ್ಷಕರಾಗಿ ಇಂದ್ರ ವಿಕ್ರಂಸಿಂಗ್ ಅವರು ನೇಮಕವಾಗಿದ್ದಾರೆ. ಅವರ ಮೊಬೈಲ್ ಸಂಖ್ಯೆಯು 8277027322 ಆಗಿದೆ. ಸ್ಥಿರ ದೂರವಾಣಿ ಸಂಖ್ಯೆಯು 08226-223840 ಆಗಿರುತ್ತದೆ. ಚುನಾವಣೆ ಸಂಬಂಧ ಅಹವಾಲು ದೂರುಗಳಿದ್ದಲ್ಲಿ ವೀಕ್ಷಕರ ದೂರವಾಣಿ ಸಂಖ್ಯೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ.

ವೆಚ್ಚ ವೀಕ್ಷಕರಾಗಿ ಕೆ. ಶುಭೇಂದ್ರ ಅವರು ನೇಮಕವಾಗಿದ್ದಾರೆ. ಪೊಲೀಸ್ ವೀಕ್ಷಕರಾಗಿ ಜಾಕೋಬ್ ಜಾಬ್ ಅವರು ನೇಮಕವಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದÉ.


ಮಾ. 22ರಂದು ವಿಶ್ವ ಜಲ ಸಂರಕ್ಷಣಾ ದಿನಾಚರಣೆ, ಕಾನೂನು ಅರಿವು ನೆರವು ಕಾರ್ಯಕ್ರಮ 

ಚಾಮರಾಜನಗರ, ಮಾ. 21 - ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ನಗರದ ಸಾಧನಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ಸಂರಕ್ಷಣಾ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಮಾರ್ಚ್ 22ರಂದು ಮಧ್ಯಾಹ್ನ 3 ಗಂಟೆಗೆ ತಾಲೂಕಿನ ಹರದನಹಳ್ಳಿ ಗ್ರಾಮದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.

ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ಶಿವಪ್ರಸನ್ನ ಕಾರ್ಯಕ್ರಮ ಉದ್ಘಾಟಿಸುವರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸುರೇಶ್ ಟಿ.ಜಿ. ಅಧ್ಯಕ್ಷತೆ ವಹಿಸುವರು. ವಕೀಲರಾದ ಪುಟ್ಟಸ್ವಾಮಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದÉ.


ಮಾ. 23ರಂದು ವಿವಿದೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಮಾ. 21 - ಚಾಮುಂಡೇಶ್ವರಿ ವಿದ್ಯುತ್ ಪ್ರಸರಣ ನಿಗಮವು ತಾಲೂಕಿನ ಅಟ್ಟುಗೂಳಿಪುರ ಹಾಗೂ ಹೊನ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಮಾರ್ಚ್ 23ರಂದು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಸಿದ್ದಯ್ಯನಪುರ, ಹೊಂಗಲವಾಡಿ, ಕೋಳಿಪಾಳ್ಯ, ಎನ್‍ಜೆವೈ, ಬಂಧಿಗೌಡನಹಳ್ಳಿ ಹಾಗೂ ಅಟ್ಟುಗೂಳಿಪುರ ವ್ಯಾಪ್ತಿಯ ಪ್ರದೇಶಗಳಿಗೆ ಹಾಗೂ ಹೊನ್ನಹಳ್ಳಿ ವಿದ್ಯುತ್ ವಿತರಣಾ ವ್ಯಾಪ್ತಿಯ ಅರಕಲವಾಡಿ, ಯುರಗನಹಳ್ಳಿ, ಸುವರ್ಣನಗರ, ಫ್ಯಾಕ್ಟರಿ, ಡೊಳ್ಳಿಪುರ, ಪುಣಜನೂರು, ಬಿಸಲವಾಡಿ, ಅಮಚವಾಡಿ, ಎನ್‍ಜೆವೈ ಮಾದಲವಾಡಿ ಹಾಗೂ ಎನ್‍ಜೆವೈ ಚನ್ನಪ್ಪನಪುರ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ವಿದ್ಯುತ್ ಸರಬರಾಜು ನಿಗಮದೊಂದಿಗೆ ಸಹಕರಿಸುವಂತೆÉ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಾ. 23ರಂದು ನಗರದಲ್ಲಿ ಉದ್ಯೋಗ ಮೇಳ :  ನೇರ ಸಂದರ್ಶನ

ಚಾಮರಾಜನಗರ, ಮಾ. 21 - ನಂಜನಗೂಡಿನ ಖಾಸಗಿ ಕಂಪನಿ ರ್ಯಾಕ್ ಮೈಂಡ್ಸ್ ಟೆಕ್ನಾಲಜಿ ಲಿಮಿಟೆಡ್ ಅವರಿಂದ ಆಹಾರ ಸಂಸ್ಕರಣಾ ಘಟಕದಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಐಟಿಐ ವಿದ್ಯಾರ್ಹತೆ ಹೊಂದಿರುವ ಮಹಿಳಾ ನಿರುದ್ಯೋಗಿ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳುವ ಸಲುವಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ಮಾರ್ಚ್ 23ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. 

ಎಸ್‍ಎಸ್‍ಎಲ್‍ಸಿ ಮತ್ತು ಐಟಿಐ ವ್ಯಾಸಂಗ ಮಾಡಿರುವ 18 ರಿಂದ 24ರ ವಯೋಮಿತಿಯುಳ್ಳ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸ್ವವಿವರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ವಾಹನ ಸೌಲಭ್ಯ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ಅಧಿಕಾರಿ ದೂ.ಸಂ. 08226-224430 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮಾ. 30ರಂದು ಮಹದೇಶ್ವರ ಬೆಟ್ಟದಲ್ಲಿ ಗೋಲಕ ಹಣ ಎಣಿಕೆ

ಚಾಮರಾಜನಗರ, ಮಾ. 21 - ಕೊಳ್ಳೇಗಾಲ ತಾಲೂಕಿನ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಡಲಾಗಿರುವ ಗೋಲಕಗಳ ಹಣ ಎಣಿಕೆ ಕಾರ್ಯವು ಮಾರ್ಚ್ 30ರಂದು ಬೆಳಿಗ್ಗೆ ನಡೆಯಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಿಬ್ಬಂದಿ ಸಹಕಾರದೊಂದಿಗೆ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಹಣ ಎಣಿಕೆ ಕಾರ್ಯ ನಡೆಸಲಾಗುತ್ತದೆ ಎಂದು ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ  ತಿಳಿಸಿದ್ದಾರೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು