Sunday, 30 April 2017

30-04-2017 ಗಿಡ ನೆಡುವುದು ಮುಖ್ಯ ಅಲ್ಲ, ಪಾಲನೆ ಪೋಷಣೆ ಮುಖ್ಯ: ರೆ.ಬ್ರ. ಅಲ್ಮೆಡಾ (ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ “ಹಸಿರೇ ಉಸಿರು” ಕಾರ್ಯಕ್ರಮ)

ಗಿಡ  ನೆಡುವುದು ಮುಖ್ಯ ಅಲ್ಲ, ಪಾಲನೆ ಪೋಷಣೆ ಮುಖ್ಯ: ರೆ.ಬ್ರ. ಅಲ್ಮೆಡಾ

                                      ವರದಿ:  ಎಸ್. ರಾಮಸಮುದ್ರ ೆಸ್.ವೀರಭದ್ರಸ್ವಾಮಿ
ಚಾಮರಾಜನಗರ: ಗಿಡ  ನೆಡುವುದು ಮುಖ್ಯ ಅಲ್ಲ, ಪಾಲನೆ ಪೋಷಣೆ ಮಾಡುವುದು ಮುಖ್ಯ ಸಿ,ಆರ್.ಬಿ.ಪಿ.ಶಾಲೆಯ ಮುಖ್ಯಸ್ಥರಾದ ರೆ.ಬ್ರ.ಅಲ್ಮೆಡಾ ಅವರು ಹೇಳಿದರು.

**************************************
 ಅವರು ಇಂದು ಸಿ,ಆರ್.ಬಿ.ಪಿ.ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ “ಹಸಿರೇ ಉಸಿರು” ಎಂಬ ಘೋಷಣೆಯಡಿ ಶಾಲೆಯಲ್ಲಿ ಗಿಡಗಳನ್ನು ನೆಡಲು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಪರಿಸರ ಹಾಳಾಗುತ್ತಿದ್ದು ವಿದ್ಯಾರ್ಥಿಗಳು ಗಿಡ ಬೆಳೆಸುವ ಯೋಜನೆ ಹಮ್ಮಿಕೊಂಡಿರುವುದು ಸಂತಸ ತಂದಿದೆ. ಹೀಗಿಯೇ ತಮ್ಮ ಕೆಲಸ ಮುಂದುವರೆಯಲಿ ಎಂದು ಆಶಿಸಿದರು.
 ಶಾಲಾವರಣದಲ್ಲಿ ಗಿಡ ನೆಟ್ಟ ಶಿಕ್ಷಕರಾದ ನರಸಿಂಹಯ್ಯ ಅವರು ತಾವು ಸಾಮಾಜಿಕ ಕಳಕಳಿ ಇಟ್ಟು ಗಿಡ ಬೆಳೆಸುವ ಕೆಲಸಕ್ಕೆ ಕೈ ಹಾಕುತ್ತಿರುವುದು ಸಂತಸ ತಂದಿದೆ. ಹಾಗಿಯೇ ತಮ್ಮ ಸಂಘದ ವತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತ ರಕ್ತದಾನ ಶಿಬಿರ, ಆರೋಗ್ಯ ಶಿಬಿರ ಏರ್ಪಡಿಸಿ ಅನುಕೂಲವಾಗುವಂತೆ ಮಾಡಿದರೆ ತಮಗೂ ತಮ್ಮ ಶಾಲೆಗೂ ಉತ್ತಮ ಹೆಸರು ತರುವಲ್ಲಿ ಸಹಕಾರಿಯಾಗಲಿದೆ ಎಂದರು.
*************************************

ಶಿಕ್ಷಕಿ ನಿರ್ಮಲ ಮೇರಿ ಅವರು ಮಾತನಾಡಿ , ಹಳೆಯ ವಿದ್ಯಾರ್ಥಿಗಳನ್ನು ಒಟ್ಟಾಗಿ ನೋಡಲು ಸಂತಸವಾಗುತ್ತಿದೆ. ಅದು  ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಹಾಕಿಕೊಳ್ಳುವ ಮೂಲಕ ಪರಿಸರ ಜಾಗೃತಿ ಮೂಡಿಸಲು ಹೊರಟಿರುವ ನಿಮ್ಮ ಯೋಜನೆಗಳಿಗೆ ಶುಭವಾಗಲಿ ಎಂದರು
***************************************
*******************
  ದೈಹಿಕ ಶಿಕ್ಷಕ ನಾಗರಾಜು ಅವರು ಮಾತನಾಡಿ, ನಾನು ಇದೇ ಶಾಲೆಯಲ್ಲಿ ಓದಿ, ಇಲ್ಲಿಯೇ ಕೆಲಸ ಮಡುತ್ತಿದ್ದೇನೆ ನಾನು ಹಳೆಯ ವಿದ್ಯಾರ್ಥಿಯಾಗಿದ್ದು ಹೊಸ ಹೊಸ ಯೋಜನೆ ಹಾಕಿಕೊಂಡು ಪರಿಸರ ಹಾಗೂ ಸಾಮಾಜಿಕ ಒಳಿತಿಗಾಗಿ ಶ್ರಮಿಸಿ ಎಂದರು.
*ಆಯೋಜಕರು * ಮಲ್ಲೇಶ್, ಎಸ್.ವೀರಭದ್ರಸ್ವಾಮಿ*
* ಸಹಕಾರ*    ಎಲ್ಲಾ ಬ್ಯಾಚಿನ ವಿದ್ಯಾರ್ಥಿಗಳು*


********************************************************************************

Saturday, 29 April 2017

29-04-2017 ರಂದು ನಡೆದ ಬಸವೇಶ್ವರ ಜಯಂತಿಯ ಮೆರವಣಿಗೆ,ಕಲಾತಂಡಗಳು, ವೇದಿಕೆಯಲ್ಲಿನ ಚಿತ್ರಗಳು



 ಬಸವೇಶ್ವರ ಜಯಂತಿಯ  ವೇದಿಕೆಯಲ್ಲಿನ ಚಿತ್ರಗಳು












 ಬಸವೇಶ್ವರ ಜಯಂತಿಯ ಮೆರವಣಿಗೆ,ಕಲಾತಂಡಗಳು,








29-04-2017 ಏಪ್ರಿಲ್ 30 ರಂದು ಪಲ್ಸ್‍ಪೋಲಿಯೊ, ಮೇ 9 ರಂದು ಹೌಸಿಂಗ್ ಎಂಜಿನಿಯರ್ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ.


ದ್ವಿದಳಧ್ಯಾನ್ಯ ದಾಸ್ತಾನು ಮಿತಿ


ಚಾಮರಾಜನಗರ, ಏ 29.- ಕರ್ನಾಟಕ ಅಗತ್ಯ ವಸ್ತುಗಳ ಪರವಾನಗಿ ಅಧಿಸೂಚನೆ ಅನುಸಾರ ದ್ವಿದಳಧ್ಯಾನ್ಯ ಸಗಟು ಹಾಗೂ ಚಿಲ್ಲರೆ ಮಾರಾಟಗರರು ನಿಗಧಿ ಪಡಿಸಿರುವ ಪ್ರಮಾಣದಲ್ಲಿ ಮಾತ್ರ ದಾಸ್ತಾನು ಮಾಡುವಂತೆ ಜಿಲ್ಲಾಧಿಕಾರಿ ಬಿ.ರಾಮು ಅವರು ಸೂಚನೆ ನೀಡಿದ್ದಾರೆ.
       ಚಿಲ್ಲರೆ ವಿತರಕರು 100 ಕ್ವಿಂಟಾಲ್, ಇತರೆ ಸಗಟು ಮಾರಾಟಗಾರರು 5,000 ಕ್ವಿಂಟಾಲ್ ದ್ವಿದಳಧ್ಯಾನ್ಯ ದಾಸ್ತಾನು ಮಿತಿ ಹೊಂದಬೇಕಿದೆ. ರಾಜ್ಯ ಸರ್ಕಾರ ಏಪ್ರಿಲ್ 1ರಂದು ಕರ್ನಾಟಕ ಅಗತ್ಯ ವಸ್ತುಗಳ ಪರವಾನಗಿ (ತಿದ್ದುಪಡಿ) ಆದೇಶ 2017 ಅಧಿಸೂಚನೆಯನ್ನು ಹೊರಡಿಸಿದೆ. ಪ್ರಸ್ತುತ ವಿವರಿಸಿರುವ ದಾಸ್ತಾನು ಪ್ರಮಾಣದ ಮಿತಿ ಅಂಶ ಹೊರತುಪಡಿಸಿ 2016 ರ ನವಂಬರ್ 11 ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಏ. 29:- ಚಾಮರಾಜನಗರ ಹಾಗೂ ಕೊಳ್ಳೇಗಾಲ ಪಟ್ಟಣದಲ್ಲಿ ಸಿ.ಇ.ಟಿ ಪರೀಕ್ಷೆಯು ಮೇ 2 ಹಾಗೂ 3ರಂದು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
     ಚಾಮರಾಜನಗರ ಪಟ್ಟಣದ ಜೆ.ಎಸ್.ಎಸ್ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಎಸ್.ವಿ.ಕೆ ಮಹಿಳಾ ಪದವಿ ಪೂರ್ವ ಕಾಲೇಜು, ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿದೆ.
     ಪರೀಕ್ಷಾ ದಿನಗಳಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ರಿಂದ ಸಂಜೆ 4.30 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
     ನಿಷೇಧಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಆದೇಶದಲ್ಲಿ ತಿಳಿಸಿದ್ದಾರೆ.



ಅಬಕಾರಿ ಉಪನಿರೀಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ

ಚಾಮರಾಜನಗರ, ಏ. 29:- ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಏಪ್ರಿಲ್ 30 ರಂದು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
     ಚಾಮರಾಜನಗರ ಪಟ್ಟಣದ ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಸೇವಾ ಭಾರತಿ ಆಂಗ್ಲ ಪ್ರೌಢ ಶಾಲೆ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಜೆ.ಎಸ್.ಎಸ್.ಬಾಲಕರ ಪ್ರೌಡ ಶಾಲೆ ಪರೀಕ್ಷಾ ಕೇಂದ್ರಗಳಾಗಿದೆ.
     ಪರೀಕ್ಷಾ ದಿನದಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
     ನಿಷೇಧಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಆದೇಶದಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 30 ರಂದು ಪಲ್ಸ್‍ಪೋಲಿಯೊ

ಚಾಮರಾಜನಗರ, ಏ. 29 - ಜಿಲ್ಲೆಯಲ್ಲಿ 2 ನೇ ಸುತ್ತಿನ ರಾಷ್ಟ್ರೀಯ ಪಲ್ಸ್‍ಪೋಲಿಯೊ ಹನಿ ನೀಡುವ ಕಾರ್ಯ ಕ್ರಮವು ಮೇ 30 ರಂದು ಜಿಲ್ಲಾದ್ಯಾಂತ ನಡೆಯಲಿದೆ. ಪೋಲಿಯೊ ಹನಿ ಹಾಕಲು ವ್ಯಾಪಕವಾಗಿ ಕೇಂದ್ರಗಳನ್ನು ತೆರೆಯಲಾಗಿದೆ.
     ಮೇ 30 ರಂದು ಬೆಳಗ್ಗೆ 8 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಆಗ ತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಪ್ಪದೆ ಪೋಲಿಯೊ ಹನಿ ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 9 ರಂದು ಹೌಸಿಂಗ್ ಎಂಜಿನಿಯರ್ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ. 

ಚಾಮರಾಜನಗರ, ಏ. 29 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೌಸಿಂಗ್ ಎಂಜಿನಿಯರ್ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮೇ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರು ಅರ್ಜಿ ಪಡೆದು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಬಿ.ಇ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಇರಬೇಕು. ಸರ್ಕಾರಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು) ಅಥವಾ ಖಾಸಗಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು). ಅಭ್ಯರ್ಥಿಗಳು 65 ವರ್ಷ ಮೀರಿರಬಾರದು.
ಆಯ್ಕೆಯಾಗುವವರು ಹೌಸಿಂಗ್ ಫಾರ್ ಆಲ್‍ನ ಎಲ್ಲಾ ಕೆಲಸ, ನಗರ ವಸತಿ ಯೋಜನೆಗಳ ಕಾರ್ಯ, ಅಂದಾಜುಪಟ್ಟಿ, ವಿಸ್ತøತ ಯೋಜನಾ ವರದಿ ಸಿದ್ದಪಡಿಸುವಿಕೆ, ಟೆಂಡರ್ ಹೊರಡಿಸುವಿಕೆ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲದೆ ಜಿಲ್ಲಾಧಿಕಾರಿಯವರು ಸೂಚಿಸುವ ಇತರೆ ವಸತಿ ಯೋಜನೆಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ, ಅನುಭವ, ಇನ್ನಿತರ ದೃಢೀಕೃತ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬಹುದು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ (ಕೊಠಡಿ ಸಂಖ್ಯೆ:118) ಮೇ 2 ರಿಂದ ಪಡೆಯಬಹುದು.  ಸಂಪೂರ್ಣ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು  ತಿಳಿಸಿದ್ದಾರೆ.

Friday, 28 April 2017

28-04-2017 ವಿಶ್ವದಲ್ಲೇ ಅತೀ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಮಹಾಜ್ಞಾನಿ-ಆರ್. ಧ್ರುವನಾರಾಯಣ

        ಅಂಬೇಡ್ಕರ್ ವಿಶ್ವದ ಮಹಾಜ್ಞಾನಿ : ಆರ್. ಧ್ರುವನಾರಾಯಣ


ಚಾಮರಾಜನಗರ, ಏ. 28 - ವಿಶ್ವದಲ್ಲೇ ಅತೀ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಮಹಾಜ್ಞಾನಿ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದೇಶದಲ್ಲೂ ಅಧ್ಯಯನ ಮಾಡಿ ಅಪಾರ ಪಾಂಡಿತ್ಯ ಪಡೆದಿದ್ದ ಅಂಬೇಡ್ಕರ್ ಅವರಿಗೆ ವಿದೇಶದಲ್ಲೇ ಉನ್ನತ ಹುದ್ದೆ ಅಲಂಕರಿಸಿ ಇರುವ ಅವಕಾಶಗಳೂ ಇದ್ದವು. ಆದರೆ ಶೋಷಿತ ಸಮುದಾಯದ ಪರ ಹೋಟಾಟ ನಡೆಸಿ ತಳವರ್ಗ ಸೇರಿದಂತೆ ಎಲ್ಲರ ಪರವಾಗಿ ಕಾಳಜಿ ತೋರಿಸಿ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರ ಜೀವನವೇ ತೆರೆದ ಪುಸ್ತಕವಾಗಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಅಂಬೇಡ್ಕರ್ ಅವರು ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಎಲ್ಲ ಸೌಲಭ್ಯಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಸೇವೆ ಸಲ್ಲಿಸಿದರು. ವಿವಿಧ ಜಾತಿ ಧರ್ಮವುಳ್ಳ ಭಾರತದಲ್ಲಿ ಎಲ್ಲರೂ ಒಂದೇ ಎಂದು ಸಾಗಬೇಕಾದರೆ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಸಾಧ್ಯವಾಗುತ್ತಿದೆ ಎಂದು ಧ್ರುವನಾರಾಯಣ ಅಭಿಪ್ರಾಯಪಟ್ಟರು.
ವಿಧಾನಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಮಾತನಾಡಿ ಎಲ್ಲರೂ ಸ್ವಾಭಿಮಾನಿ ಸ್ವಾವಲಂಬಿಗಳಾಗಿ ಬದುಕಬೇಕು. ಎಲ್ಲ ಹುದ್ದೆಗಳು ಸೇರಿದಂತೆ ಸಮಾಜದಲ್ಲಿ ಸಮಾನತೆ ಇರಬೇಕೆಂಬ ಆಶಯದಿಂದ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಅವರ ಉದ್ದೇಶಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಮಾಜದ ತಾರತಮ್ಯವನ್ನು ಹೋಗಲಾಡಿಸಿ ಸರ್ವರಿಗೂ ಅವಕಾಶಗಳು ಲಭಿಸಬೇಕೆಂಬ ನಿಟ್ಟಿನಲ್ಲಿ ಶ್ರಮಿಸಿದ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರು. ಅವರ ಅಪಾರಜ್ಞಾನ ಮಾರ್ಗದ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು.
ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಬಿಕ್ಕುಗಳಾದ ಬೋಧರತ್ನ ಬಂತೇಜಿ ಅವರು ಮಾತನಾಡಿ ಅಂಬೇಡ್ಕರ್ ಅವರ ಚಿಂತನೆ ಆಶಯ ಅನುಸಾರ ನಡೆಯಬೇಕಿದೆ. ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಿದರೆ ಮಾತ್ರ ಅಂಬೇಡ್ಕರ್ ಅವರ ಜಯಂತಿ ಆಚರಣೆಗೂ ಗೌರವ ಸೂಚಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಶಾಸಕರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಮಾತನಾಡಿದರು.
ಕೆ.ಆರ್. ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರಾದ ಡಾ.ಎಚ್.ಡಿ. ಉಮಾಶಂಕರ್ ಮುಖ್ಯ ಭಾಷಣ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡಿದರು.
ಸಮಾರಂಭದ ಸ್ಥಳದ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನ ಏರ್ಪಾಡಾಗಿತ್ತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನಾವಳಿಗಳನ್ನು ತಿಳಿಸುವ ಉದ್ದೇಶದಿಂದ ಮೈಸೂರಿನ ಕ್ರಿಯಾ ಟುವಾಡ್ರ್ಸ ಸೊಸೈಟಿ ಅಂಬೇಡ್ಕರ್ ಅವರ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿತ್ತು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ನೂರಾರು ಜನರು ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಜಯಣ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾಮಂಡಳಿಯ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಅದ್ಯಕ್ಷರಾದ ಎಸ್.ಎನ್. ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾ.ಪಂ. ಅಧ್ಯಕ್ಷರಾದ ಎಚ್.ವಿ. ಚಂದ್ರು. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಆರ್. ಬಾಲರಾಜು, ಮರುಗದಮಣಿ, ಬಾಲರಾಜು, ಚನ್ನಪ್ಪ, ಉಮಾವತಿ, ಚಂದ್ರಕಲಾ, ಜಯಂತಿ, ಶಿವಮ್ಮ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಏ. 29ರಂದು ನಗರದಲ್ಲಿ ಬಸವ ಜಯಂತಿ ಕಾರ್ಯಕ್ರಮ

ಚಾಮರಾಜನಗರ, ಏ. 28 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮಹಾನ್ ಮಾನವತಾವಾದಿ ಸಮಾಜ ಸುಧಾರಕರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಣೆ ಸಮಾರಂಭವನ್ನು ಏಪ್ರಿಲ್ 29ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ನಗರದ ವಿರಕ್ತ ಮಠದ ಶ್ರೀ ಶ್ರೀ ಚನ್ನಬಸವಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬೆಂಗಳೂರಿನ ಎಂ. ಮಹಮದ್ ಅರ್ಫಾತ್ ಅಲಂ ಅವರು ಮುಖ್ಯ ಭಾಷಣ ಮಾಡುವರು. ನಗರದ ಕದಳಿ ಮಹಿಳಾ ವೇದಿಕೆಯಿಂದ ವಚನÀ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೇ. 2ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ

ಚಾಮರಾಜನಗರ, ಏ. 28 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಮಧ್ಯಾಹಣ 12.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು  ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಹರ್ಷಿ ಭಗೀರಥ ಅವರ ಭಾವಚಿತಕ್ಕೆ ಪುಷ್ಪಾರ್ಚನೆ  ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನಪದ ವಿಧ್ವಾಂಸÀರಾದ ಡಾ. ಪಿ.ಕೆ. ರಾಜಶೇಖರ್ ಅವರು ಮುಖ್ಯ ಭಾಷಣ ಮಾಡುವರು. ಅಮಚವಾಡಿಯ ಮಂಜುನಾಥಶೆಟ್ಟಿ ಮತ್ತು ತಂಡದವರು ಜನಪದ ಗೀತೆ ಗಾಯನ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.

ಏ. 30ರಂದು ಪಲ್ಸ್ ಪೋಲಿಯೊ : ಒಟ್ಟು 80629 ಮಕ್ಕಳಿಗೆ ಲಸಿಕೆ ನೀಡುವ ಗುರಿ 

ಚಾಮರಾಜನಗರ, ಏ. 28 ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಗೆ ಕಾರಣವಾಗುವ ಪೋಲಿಯೊ ರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಸಿದ್ದತೆ ಕೈಗೊಳ್ಳಲಾಗಿದೆ.
ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದ ವರೆಗಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಗುತ್ತದೆ.
ಜಿಲ್ಲೆಯಲ್ಲಿ ಏಪ್ರಿಲ್ 30ರಂದು 2ನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಅಂದಾಜು ಒಟ್ಟು 80629 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಚಾಮರಾಜನಗರ ತಾಲ್ಲೂಕಿನಲ್ಲಿ 26648, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 17629, ಕೊಳ್ಳೇಗಾಲ ತಾಲ್ಲೂಕಿನಲ್ಲಿ 30293 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 6059 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 621 ಬೂತ್‍ಗಳನ್ನು ಲಸಿಕೆ ನೀಡಲು ತೆರೆಯಲಾಗುತ್ತಿದೆ. ನಗರ ಪ್ರದೇಶಗಳಲ್ಲಿ 92 ಗ್ರಾಮೀಣ ಪ್ರದೇಶಗಳಲ್ಲಿ 529 ಬೂತ್‍ಗಳು ಕಾರ್ಯನಿರ್ವಹಿಸಲಿವೆ. ಈ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ 193, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 158, ಕೊಳ್ಳೇಗಾಲ ತಾಲ್ಲೂಕಿನಲ್ಲಿ 223 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 47 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಪಲ್ಸ್ ಪೋಲಿಯೋ ಬೂತ್‍ಗಳಲ್ಲಿ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ.
ಲಸಿಕಾ ಕಾರ್ಯಕ್ರಮದ ಮೇಲುಸ್ತುವಾರಿಗೆ 130 ಮೇಲ್ವಿಚಾರಕರು ಹಾಗೂ 2484 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. 18 ಟ್ರಾನ್ಸಿಟ್ 10 ಮೊಬೈಲ್ ತಂಡಗಳು ಕಾರ್ಯ ನಿರ್ವಹಿಸಲಿವೆ.
ಏಪ್ರಿಲ್ 30ರಂದು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಾಗುವ ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಹನಿ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ 2ನೇ ಹಾಗೂ 3ನೇ ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ 4 ದಿನವೂ ಸಹ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ.
ಪಟ್ಟಣ ಪ್ರದೇಶದಲ್ಲಿ ಒಟ್ಟು 35942 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 196413 ಮನೆಗಳು ಸೇರಿದಂತೆ ಒಟ್ಟು 232355 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ.
ಜಿಲ್ಲಾ ವ್ಯಾಪ್ತಿಯ ನರ್ಸಿಂಗ್ ಶಾಲೆಗಳು, ಸ್ವಯಂ ಸೇವಾ ಸಂಸ್ಥೆಗಳು ಅಭಿಯಾನಕ್ಕೆ ಸಹಕಾರ ನೀಡಿವೆ.
ಅಂಗವೈಕಲ್ಯತೆ ತಪ್ಪಿಸುವ ಸಲುವಾಗಿ ಪಲ್ಸ್ ಪೋಲಿಯೊ ಆಂದೋಲನವನ್ನು 1995ರಿಂದಲೂ ರಾಷ್ಟ್ರೀಯ ಕಾರ್ಯಕ್ರಮವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲೂ ಪಲ್ಸ್ ಪೋಲಿಯೋ ಲಸಿಕೆ ಆಂದೋಲನವನ್ನು ಯಶಸ್ವಿಗೊಳಿಸಲು ಜಿಲ್ಲಾ ಜನತೆಯ ಸಹಕಾರ ಅವಶ್ಯವಾಗಿದೆ. ಪೋಷಕರು ಈ ಹಿಂದೆ ಎಷ್ಟೇ ಬಾರಿ ಪಲ್ಸ್ ಪೋಲಿಯೋ ಲಸಿಕೆ ಕೊಡಿಸಿದ್ದರೂ ಸಹ ಏಪ್ರಿಲ್ 30ರಂದು ತಪ್ಪದೇ ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದವರೆಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಬೇಕು.
ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲ ಪೋಷಕರು, ಸಮುದಾಯ ಮುಖಂಡರು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಸೇರಿದÀಂತೆ ಸರ್ವರೂ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಕೆ.ಎಚ್. ಪ್ರಸಾದ್ ಅವರು ಮನವಿ ಮಾಡಿದ್ದಾರೆ.

ಮೇ 9 ರಂದು ಹೌಸಿಂಗ್ ಎಂಜಿನಿಯರ್ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ. 

ಚಾಮರಾಜನಗರ, ಏ. 28:- ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೌಸಿಂಗ್ ಎಂಜಿನಿಯರ್ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮೇ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರು ಅರ್ಜಿ ಪಡೆದು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಬಿ.ಇ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಇರಬೇಕು. ಸರ್ಕಾರಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು) ಅಥವಾ ಖಾಸಗಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು). ಅಭ್ಯರ್ಥಿಗಳು 65 ವರ್ಷ ಮೀರಿರಬಾರದು.
ಆಯ್ಕೆಯಾಗುವವರು ಹೌಸಿಂಗ್ ಫಾರ್ ಆಲ್‍ನ ಎಲ್ಲಾ ಕೆಲಸ, ನಗರ ವಸತಿ ಯೋಜನೆಗಳ ಕಾರ್ಯ, ಅಂದಾಜುಪಟ್ಟಿ, ವಿಸ್ತøತ ಯೋಜನಾ ವರದಿ ಸಿದ್ದಪಡಿಸುವಿಕೆ, ಟೆಂಡರ್ ಹೊರಡಿಸುವಿಕೆ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲದೆ ಜಿಲ್ಲಾಧಿಕಾರಿಯವರು ಸೂಚಿಸುವ ಇತರೆ ವಸತಿ ಯೋಜನೆಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ, ಅನುಭವ, ಇನ್ನಿತರ ದೃಢೀಕೃತ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬಹುದು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ (ಕೊಠಡಿ ಸಂಖ್ಯೆ:118) ಮೇ 2 ರಿಂದ ಪಡೆಯಬಹುದು.  ಸಂಪೂರ್ಣ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು  ತಿಳಿಸಿದ್ದಾರೆ.



Thursday, 27 April 2017

27-04-2017 ,ಪತ್ರಕರ್ತರಿಗೆ ಸಂವಾದ , ಮೌಢ್ಯ ಆಚರಣೆ ಕೈಬಿಡಿ : ಬಿ.ಟಿ. ಲಲಿತಾನಾಯಕ್

ಮೌಢ್ಯ ಆಚರಣೆ ಕೈಬಿಡಿ : ಬಿ.ಟಿ. ಲಲಿತಾನಾಯಕ್ 


ಚಾಮರಾಜನಗರ, ಏ. 27 :- ಮೌಢ್ಯ ಆಚರಣೆ ಸಂಪ್ರದಾಯಗಳನ್ನು ಕೈಬಿಟ್ಟು ಅಂಬೇಡ್ಕರ್ ಅವರ ವೈಜ್ಞಾನಿಕ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಖ್ಯಾತ ಸಾಹಿತಿ ಹಾಗೂ ಮಾಜಿ ಸಚಿವರಾದ ಬಿ.ಟಿ. ಲಲಿತಾನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಚಿಂತನೆಗಳ ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮೌಢ್ಯ ವಿಮೋಚನೆಗೆ ಬಾಬಾ ಸಾಹೇಬರ ಚಿಂತನೆಗಳು ಎಂಬ ವಿಷಯ ಕುರಿತು ಅವರು ಮಾತನಾಡಿದರು. ಸಮಾಜದಲ್ಲಿ ಆಚರಣೆಯಲ್ಲಿರುವ ಅನೇಕ ಮೌಢ್ಯತೆ ವಿಚಾರಗಳನ್ನು ಬಿಡಬೇಕಿದೆ. ಅಂಧ ಅನುಕರಣೆಯನ್ನು ಮಾಡಬಾರದು. ಆರಾಧನೆಯ ಸ್ವರೂಪ ಬದಲಾಗಬೇಕಿದೆ. ಅಂಬೇಡ್ಕರ್ ಬುದ್ಧ ಅವರು ವೈಜ್ಞಾನಿಕ, ವೈಚಾರಿಕತೆ ಮಾರ್ಗವನ್ನು ತೋರಿಸಿದ್ದಾರೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು. ಅಂಬೇಡ್ಕರ್ ಅವರು ಎಲ್ಲ ಜನರ ಸಂಸ್ಕøತಿ ಒಳಿತಿಗಾಗಿ ಕಾನೂನು ರೂಪಿಸಲು ಹೊರಟರು. ತಾಯಿಕರುಳಿನ ಸ್ವಭಾವದ ಅಂಬೇಡ್ಕರ್ ಅವರು ಅವರ ಖಾಸಗಿ ಬದುಕಿನ ಸುಖದ ಬಗ್ಗೆ ಚಿಂತೆ ಮಾಡಲಿಲ್ಲ. ಸರ್ವಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಫಲವಾಗಿ ಇಂದಿನ ಪೀಳಿಗೆ ಅನುಕೂಲ ಪಡೆಯಲು ಸಾಧ್ಯವಾಗಿದೆ ಎಂದು ಲಲಿತಾನಾಯಕ್ ಅಭಿಪ್ರಾಯ ತಿಳಿಸಿದರು. ದಲಿತೇತರ ಸಮುದಾಯಕ್ಕೆ ಬಾಬಾ ಸಾಹೇಬರ ಕೊಡುಗೆ ಎಂಬ ವಿಷಯ ಕುರಿತು ಮಾತನಾಡಿದ ಸಾಹಿತಿ ಕೃಷಿಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆದ ತಲಕಾಡು ಚಿಕ್ಕರಂಗೇಗೌಡ ಅವರು ಎಲ್ಲ ಜನರ ಬದುಕಿಗೆ ಒಳಿತನ್ನೇ ಬಯಸಿ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯಾಗಿದ್ದಾರೆ. ಅವರ ರೂಪಿಸಿದ ಸಂವಿಧಾನದಡಿ ಪ್ರತಿಯೊಬ್ಬರಿಗೂ ರಕ್ಷಣೆ ಇದೆ. ಈ ವಿಚಾರವನ್ನು ಎಲ್ಲ ಜನತೆಗೆ ಅವರದೇ ಧಾಟಿಯಲ್ಲಿ ಮನಮುಟ್ಟುವ ರೀತಿಯಲ್ಲಿ ತಿಳಿಸುವ ಅವಶ್ಯಕತೆ ಇದೆ ಎಂದರು.  ಶಾಸಕರಾದ ಎಸ್. ಜಯಣ್ಣ ಮಾತನಾಡಿ ಅಂಬೇಡ್ಕರ್ ಅವರು ಶೈಕ್ಷಣಿಕ, ಆರ್ಥಿಕ ಹಾಗೂ ಸಮಾನತೆ ಸಾಧಿಸಲು ಸಂವಿಧಾನದಡಿ ಅವಕಾಶ ಮಾಡಿಕೊಟ್ಟಿದ್ದಾರೆ. ಅಂಬೇಡ್ಕರ್ ಅವರ ಆಶಯ  ಚಿಂತನೆಗಳನ್ನು ಅರ್ಥ ಮಾಡಿಕೊಂಡು ಮುನ್ನಡೆಯಬೇಕಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ಅಂಬೇಡ್ಕರ್ ಅವರು ಶೋಷಣೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ಮಾಡಿದರು. ಕಷ್ಟ ಕಾರ್ಪಣ್ಯಗಳನ್ನು ನುಂಗಿಕೊಂಡು ಎಲ್ಲರ ಹಿತಕ್ಕಾಗಿ ಕಾಳಜಿ ವಹಿಸಿ ಶ್ರಿಮಿಸಿದ ಮಹಾನ್ ವ್ಯಕ್ತಿ. ಹಲವಾರು ಮಹತ್ವದ ವಿಷಯಗಳನ್ನು ಅಧ್ಯಯನ ಮಾಡಿ ಅರ್ಹತೆ ಆಧಾರದ ಮೇಲೆ ಪದವಿ ಪಡೆದ ಮೇರು ವ್ಯಕ್ತಿತ್ವದವರು. ಮಹಿಳೆಯರು, ಕಾರ್ಮಿಕರು, ಶ್ರಮಜೀವಿಗಳು ಸೇರಿದಂತೆ ಸರ್ವ ವರ್ಗದವರ ಅಭಿವೃದ್ಧಿಗೆ ಚಿಂತಿಸಿ ಹೋರಾಟ ಮಾಡಿದರು. ಅಂಬೇಡ್ಕರ್ ಅವರ ಜ್ಞಾನ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದರು.  ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮಕ್ಕಳು ಇಂದಿನ ಯುವ ಪೀಳಿಗೆಗೂ ತಲುಪಿಸಬೇಕಾದ ಅವಶ್ಯಕತೆ ಇದೆ. ಹೀಗಾಗಿ ಅಂಬೇಡ್ಕರ್ ಕುರಿತ ವಿಚಾರ ಸಂಕಿರಣದಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಯುವ ಜನಾಂಗ ಪಾಲ್ಗೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಸ್ತಾವಿತ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಬೋಧಿತತ್ವ ಬಂತೇಜಿ ಮಾತನಾಡಿ ನಳಂದ ಬೌದ್ಧ ವಿಶ್ವವಿದ್ಯಾಲಯ ಸ್ಥಳಕ್ಕಾಗಿ ಗುರುತಿಸಲಾಗಿರುವ ಜಾಗದಲ್ಲೇ ಬುದ್ಧ ಅಂಬೇಡ್ಕರ್ ಬಗ್ಗೆ ಚಿಕ್ಕ ಮಕ್ಕಳಿಗೂ ವಿವರವಾಗಿ ತಿಳಿಸುವ ಅಧ್ಯಯನ ಕೇಂದ್ರವನ್ನು ಆರಂಭಿಸಲಾಗುತ್ತದೆ, ಸಮಾಜ ಕಲ್ಯಾಣ ಇಲಾಖೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ. ಸತೀಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ವಿಚಾರ ಸಂಕಿರಣ ಸಮಿತಿಯ ಅಧ್ಯಕ್ಷರಾದ ಕೃಷಿ ಜಂಟಿನಿರ್ದೇಶಕರಾದ ತಿರುಮಲೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮೇ. 2ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ 

ಚಾಮರಾಜನಗರ, ಏ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.  ಮಧ್ಯಾಹಣ 12.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು  ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಹರ್ಷಿ ಭಗೀರಥ ಅವರ ಭಾವಚಿತಕ್ಕೆ ಪುಷ್ಪಾರ್ಚನೆ  ಮಾಡುವರು.  ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.  ಜನಪದ ವಿಧ್ವಾಂಸÀರಾದ ಡಾ. ಪಿ.ಕೆ. ರಾಜಶೇಖರ್ ಅವರು ಮುಖ್ಯ ಭಾಷಣ ಮಾಡುವರು. ಅಮಚವಾಡಿಯ ಮಂಜುನಾಥಶೆಟ್ಟಿ ಮತ್ತು ತಂಡದವರು ಜನಪದ ಗೀತೆ ಗಾಯನ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ

 ಏ. 28ರಂದು ಪತ್ರಕರ್ತರಿಗೆ  ಸಂವಾದ 

ಚಾಮರಾಜನಗರ, ಏ. 27 - ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಈ ಸಂಬಂಧ ಇರುವ ಕಾನೂನುಗಳ ತಿಳಿವಳಿಕೆ ಕುರಿತು ಪತ್ರಕರ್ತರಿಗಾಗಿ ಸಂವಾದ ಕಾರ್ಯಕ್ರಮವನ್ನು ಏಪ್ರಿಲ್ 28ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಕಲಾಮಂದಿರದ ಮನೆಯಂಗಳ ಸಭಾ ಭವನದಲ್ಲಿ  ಏರ್ಪಡಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಯೂನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ, ಬೆಂಗಳೂರಿನ ಸಮಗ್ರ ಮಕ್ಕಳ ರಕ್ಷಣಾ ಸಂಸ್ಥೆ ಫರ್ಭಿಂಡೆನ್ ಆಶ್ರಯದಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ವರದಿ ಮಾಡುವ ಸಂದರ್ಭದಲ್ಲಿ ಗಮನಿಸಬೇಕಾದ ನಿಯಮಾವಳಿಗಳ ಕುರಿತು ಮಾಹಿತಿ ನೀಡುವುದು ಸಹ ಕಾರ್ಯಕ್ರಮದ ಉದ್ದೇಶವಾಗಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯ ಪತ್ರಕರ್ತರಿಗೆ ಸಂವಾದ ಕಾಂiÀರ್iಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ

. ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ 

ಚಾಮರಾಜನಗರ, ಏ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭವನ್ನು ಏಪ್ರಿಲ್ 28ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.  ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಭಿಕ್ಕುಗಳಾದ ಪರಮಪೂಜ್ಯ ಬೋಧಿರತ್ನ ಬಂತೇಜಿ ದಿವ್ಯಸಾನಿಧ್ಯ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನದ ಅನಾವರಣ ಮಾಡುವರು.  ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೆ. ಆರ್. ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಉಮಾಶಂಕರ್ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.

Wednesday, 26 April 2017

26-04-2017 ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ



ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಚಾಮರಾಜನಗರ, ಏ. 26 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭವನ್ನು ಏಪ್ರಿಲ್ 28ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಭಿಕ್ಕುಗಳಾದ ಪರಮಪೂಜ್ಯ ಬೋಧಿರತ್ನ ಬಂತೇಜಿ ದಿವ್ಯಸಾನಿಧ್ಯ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನದ ಅನಾವರಣ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೆ. ಆರ್. ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಉಮಾಶಂಕರ್ ಅವರು ಮುಖ್ಯ ಭಾಷಣ ಮಾಡುವರು.
ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಏಪ್ರಿಲ್ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಏ. 27ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಏ. 26 - ಸಂತೆಮರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಏಪ್ರಿಲ್ 29ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೊನ್ನೂರು, ಸಂತೇಮರಹಳ್ಳಿ, ನವಿಲೂರು, ಆಲ್ದೂರು, ಅಂಬಳೆ, ಕುದೇರು, ಮಂಗಲ, ಕೆಂಪನಪುರ, ದುಗ್ಗಟ್ಟಿ ಹಾಗೂ ಚುಂಗಡಿಪುರ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Tuesday, 25 April 2017

25-04-2017 ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಆರ್. ಧ್ರುವನಾರಾಯಣ ಸೂಚನೆ,ಏ. 29ರಂದು ನಗರದಲ್ಲಿ ಬಸವ ಜಯಂತಿ ಕಾರ್ಯಕ್ರಮ

ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ : ಆರ್. ಧ್ರುವನಾರಾಯಣ ಸೂಚನೆ


ಚಾಮರಾಜನಗರ, ಏ. 25 - ಜಿಲ್ಲೆಯಲ್ಲಿ ವಿವಿಧ ಭಾಗದಲ್ಲಿ ಪ್ರಗತಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ವಿಸ್ತರಣೆ ಕೆಲಸವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಯಳಂದೂರು, ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ಭಾಗಗಳಲ್ಲಿ ಹೆದ್ದಾರಿ ಕಾಮಗಾರಿ ಪ್ರಾರಂಭವಾಗಿ ಸಾಕಷ್ಟು ಸಮಯವಾಗಿದೆ. ಆದರೂ ನಿರೀಕ್ಷಿತ ಮಟ್ಟದಲ್ಲಿ ಕಾಮಗಾರಿ ಪೂರ್ಣವಾಗುತ್ತಿಲ್ಲ. ಮುಂದಿನ ಪರಿಶೀಲನಾ ಸಭೆಯ ವೇಳೆಗೆ ಶೇ. 80ರಷ್ಟು ಕಾಮಗಾರಿ ಪೂರ್ಣಗೊಳಿಸಬೇಕೆಂದು ಧ್ರುವನಾರಾಯಣ ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಸ್ತೆ ಕಾಮಗಾರಿಯು ಗುಣಮಟ್ಟದಿಂದ ಇರಬೇಕು. ಕಾಮಗಾರಿ ಗುಣಮಟ್ಟದ ಬಗ್ಗೆ ಅಸಮಧಾನ ವ್ಯಕವಾಗಿದೆ. ಇದಕ್ಕೆ ಅವಕಾಶ ಕೊಡದೆ ಉತ್ತಮವಾಗಿ ಕಾಮಗಾರಿ ನಿರ್ವಹಿಸಬೇಕು. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಪಟ್ಟಣ ವ್ಯಾಪ್ತಿಯಲ್ಲಿ ಕಾಮಗಾರಿ ವಿಳಂಬವಾಗಿ ನಡೆಯುತ್ತಿರುವುದರಿಂದ ಸಾಕಷ್ಟು ಅನಾನುಕೂಲವಾಗಿದೆ. ಮಳೆ ಸಂದರ್ಭದಲ್ಲಂತೂ ಜನರು ತೀವ್ರ ಪರಿತಪಿಸಬೇಕಿದೆ. ಹೀಗಾಗಿ ಪಟ್ಟಣ ಪ್ರದೇಶಗಳಲ್ಲಿ ಅತ್ಯಂತ ಶೀಘ್ರವಾಗಿ ಕಾಮಗಾರಿ ಮುಗಿಸಬೇಕು. ನಿರ್ಧಿಷ್ಟ ಗಡುವಿನೊಳಗೆ ರಸ್ತೆ ಸಿದ್ಧವಾಗಬೇಕು. ಖುದ್ದು ಎಂಜಿನಿಯರ್‍ಗಳೇ ನಿಂತು ಕೆಲಸ ಪರಿಶೀಲಿಸಬೇಕು ಎಂದರು.
ಅರಣ್ಯ ಇಲಾಖೆಯಿಂದ ಹಲವೆಡೆ ಮರಗಳನ್ನು ತೆರವುಗೊಳಿಸದೇ ಇರುವ ಕಾರಣ ರಸ್ತೆ ಕಾಮಗಾರಿ ಕುಂಠಿತವಾವಾಗಿದೆ ಎಂಬ ದೂರು ಕೇಳಿಬಂದಿದೆ. ಅರಣ್ಯ, ವಿದ್ಯುತ್, ಹೆದ್ದಾರಿ ಕಾಮಗಾರಿ ನಿರ್ವಹಣೆ ಅಧಿಕಾರಿಗಳು ಸಮನ್ವಯ ಸಂಪರ್ಕದಿಂದ ಕೆಲಸ ನಿರ್ವಹಿಸಬೇಕು.  ಜಿಲ್ಲಾಧಿಕಾರಿಗಳ ಮಾರ್ಗದರ್ಶನ ಪಡೆದುಕೊಂಡು ತ್ವರಿತವಾಗಿ ಕೆಲಸ ನಿರ್ವಹಿಸಲು ಮುಂದಾಗಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾಧಿಕಾರಿ ಬಿ. ರಾಮು ಅವರು ಮಾತನಾಡಿ ಅರಣ್ಯ ಅಧಿಕಾರಿಗಳು ಮರ ತೆರವುಗೊಳಿಸುವ ವಿಷಯದಲ್ಲಿ ಆದೇಶವನ್ನು ಪಾಲನೆ ಮಾಡಬೇಕು. ದಿನಾಂಕ ನಿಗದಿಮಾಡಿ ತೆರವು ಕಾರ್ಯಾಚರಣೆಗೆ ಕ್ರಮ ತೆಗೆದುಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿ ವಿಷಯದಲ್ಲಿ ನೀಡುವ ನಿರ್ದೇಶನವನ್ನು ಕ್ಷಿಪ್ರಗತಿಯಲ್ಲಿ ಪಾಲನೆ ಮಾಡಿದರೆ ಶೀಘ್ರವಾಗಿ ಕೆಲಸಗಳು ಪೂರ್ಣವಾಗಲಿವೆ ಎಂದರು.
ಉದ್ಯೋಗ ಖಾತರಿ ಯೋಜನೆಯಡಿ ಕಳೆದ ಸಾಲಿನಲ್ಲಿ ನಡೆದಿರುವ ಸಾಧನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಧ್ರುವನಾರಾಯಣ ಅವರು ಪ್ರಸಕ್ತ ಸಾಲಿನಲ್ಲಿ ಹೆಚ್ಚು ಗುರಿ ನಿಗದಿಮಾಡಿಕೊಂಡು ಸಾಧನೆ ಮಾಡುವಂತೆ ಸೂಚಿಸಿದರು. ಕೆಲ ಭಾಗಗಳಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ತೀವ್ರ ಹಿನ್ನಡೆ ಸಾಧಿಸಿದ ಬಗ್ಗೆ ಅಸಮಾಧಾನ ತೋರಿದರು.
ವಿವಿಧ ಇಲಾಖೆಗಳ ಯೋಜನೆಗಳ ಪ್ರಗತಿಯನ್ನು ಪರಿಶೀಲಿಸಲಾಯಿತು.
ಶಾಸಕರಾದ ಎಸ್. ಜಯಣ್ಣ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ, ಉಪಾಧ್ಯಕ್ಷರಾದ ಎಸ್. ಬಸವರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಇತರರು ಸಭೆಯಲ್ಲಿ ಹಾಜರಿದ್ದರು.

ಏ. 29ರಂದು ನಗರದಲ್ಲಿ ಬಸವ ಜಯಂತಿ ಕಾರ್ಯಕ್ರಮ


ಚಾಮರಾಜನಗರ, ಏ. 25 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮಹಾನ್ ಮಾನವತಾವಾದಿ ಸಮಾಜ ಸುಧಾರಕರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಣೆ ಸಮಾರಂಭವನ್ನು ಏಪ್ರಿಲ್ 29ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ನಗರದ ವಿರಕ್ತ ಮಠದ ಶ್ರೀ ಶ್ರೀ ಚನ್ನಬಸವಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬೆಂಗಳೂರಿನ ಎಂ. ಮಹಮದ್ ಅರ್ಫಾತ್ ಅಲಂ ಅವರು ಮುಖ್ಯ ಭಾಷಣ ಮಾಡುವರು. ನಗರದ ಕದಳಿ ಮಹಿಳಾ ವೇದಿಕೆಯಿಂದ ವಚನÀ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉದ್ದಿಮೆ ಪರವಾನಗಿ ನವೀಕರಣಕ್ಕೆ ಸೂಚನೆ

ಚಾಮರಾಜನಗರ, ಏ. 25:- ಚಾಮರಾಜನಗರ ನಗರಸಭಾ ವ್ಯಾಪ್ತಿಯ ಎಲ್ಲಾ ವಿವಿಧ ಮÁದರಿಯ ಉದ್ದಿಮೆದಾರರುಗಳು ನಗರಸಭೆಯಿಂದ ಮುನಿಸಿಪಲ್ ಕಾಯಿದೆ 1964 ಸೆಕ್ಷನ್ 256ರಂತೆ ಉದ್ದಿಮೆ ಪರವಾನಗಿಯನ್ನು ಪಡೆಯುವುದು ಕಡ್ಡಾಯವಾಗಿದೆ.
2016-17ನೇ ಸಾಲಿನಿಂದ ಉದ್ದಿಮೆ ಪರವಾನಗಿ ನೋಂದಣಿಯನ್ನು ಆನ್ ಲೈನ್ ಮುಖಾಂತರ ನೊಂದಾಯಿಸಿ ನೀಡಲಾಗುತ್ತಿದೆ. ಆದ್ದರಿಂದ ಉದ್ದಿಮೆದಾರರು ನಗರಸಭೆ ಕಚೇರಿಗೆ ಅವಶ್ಯಕವಾದ ದಾಖಲಾತಿಗಳನ್ನು ಸಲ್ಲಿಸಿ ತಮ್ಮ ಉದ್ದಿಮೆ ಪರವಾನಗಿಯನ್ನು ನೊಂದಾಯಿಸಿ ನವೀಕರಣ ಮಾಡಿಕೊಳ್ಳುವುದು. ಪರವಾನಗಿ ಪಡೆಯದೇ ಇದ್ದಲ್ಲಿ 2017-18ನೇ ಸಾಲಿಗೆ ದಾಖಲಾತಿಗಳನ್ನು ಸಲ್ಲಿಸಿ ಪರವಾನಗಿಯನ್ನು ಆನ್ ಲೈನ್ ಮೂಲಕ ಪಡೆಯುವುದು ಕಡ್ಡಾಯವಾಗಿದೆ.
ನಗರಸಭೆ ಅಧಿಕಾರಿಗಳು ಉದ್ದಿಮೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡುವ ಸಮಯದಲ್ಲಿ ಉದ್ದಿಮೆ ನಡೆಸಲು ಪಡೆದಿರುವ ಪರವಾನಗಿಯನ್ನು ಪ್ರದರ್ಶನ ಮಾಡದೇ ಇರುವುದು ಕಂಡುಬಂದಲ್ಲಿ  ಉದ್ದಿಮೆಯನ್ನು ಬಂದ್ ಮಾಡಿಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡದಿರಲು ಉದ್ದಿಮೆದಾರರಿಗೆ ನಗರಸಭೆ ಸೂಚನೆ
ಚಾಮರಾಜನಗರ, ಏ. 25- ಚಾಮರಾಜನಗರ ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ, ಮಾರಾಟ, ದಾಸ್ತಾನು ಮಾಡುವುದನ್ನು ಈಗಾಗಲೇ ನಿಷೇಧ ಮಾಡಲಾಗಿದೆ.
ಚಾಮರಾಜನಗರ ನಗರಸಭೆ ಕೌನ್ಸಿಲ್ ಸಭೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ದಾಸ್ತಾನು, ಮಾರಾಟ ಬಳಕೆಯನ್ನು ಸಾರ್ವಜನಿಕರ ಆರೋಗ್ಯ ದೃಷ್ಠಿಯಿಂದ ನಿಷೇಧ ಮಾಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ. ಈಗಾಗಲೇ ಹಲವು ಬಾರಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡಬಾರದೆಂದು ತಿಳುವಳಿಕೆ ನೀಡಲಾಗಿದೆ. ಎರಡು ಬಾರಿ ಉದ್ದಿಮೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಕ್ರಮ ಜರುಗಿಸಲಾಗಿರುತ್ತದೆ.
ಆದರೂ ಸಹ ಕೆಲವು ಉದ್ದಿಮೆದಾರರು ಪ್ಲಾಸ್ಟಿಕ್ ದಾಸ್ತಾನು ಮಾಡಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಆದಕಾರಣ ಪ್ಲಾಸ್ಟಿಕ್ ಸಾಮಗ್ರಿಗಳ ಬಳಕೆ, ಮಾರಾಟ, ದಾಸ್ತಾನು ಮತ್ತು ಎಲ್ಲಾ ವಿಧದ ಪ್ಲಾಸ್ಟಿಕ್ ಮಾರಾಟ ಮಾಡುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕೌನ್ಸಿಲ್ ಸಭೆಯಲ್ಲಿ ನಿರ್ಣಯವಾದ ರೀತಿ ದಂಡ ವಿಧಿಸಿ, ಪ್ಲಾಸ್ಟಿಕ್ ವಸ್ತುಗಳನ್ನು ಮುಟ್ಟುಗೋಲು ಹಾಕಿಕೊಂಡು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ಮೂಲಕ ಪರಿಸರ ಸಂರಕ್ಷಣೆ ಕಾಯ್ದೆ 1686ರ ಅನುಸಾರ ನ್ಯಾಯಾಲಯದಲ್ಲಿ ದಾವೆ ಹೂಡಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ : ದಾಖಲಾತಿ ನೀಡಲು ನಗರಸಭÉ ಮನವಿ

ಚಾಮರಾಜನಗರ, ಏ. 25 - ಚಾಮರಾಜನಗರ ನಗರಸಭೆ ವ್ಯಾಪ್ತಿಯಲ್ಲಿ ದೀನ್‍ದಯಾಳ್ ಅಂತ್ಯೋದಯ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ (ಡೇ ನಲ್ಮ್) 2016-17ನೇ ಸಾಲಿನ ಅನುದಾನದಲ್ಲಿ ನಗರದ ಬೀದಿಬದಿ ವ್ಯಾಪಾರಸ್ಥರ ಸಮೀಕ್ಷೆ ಕಾರ್ಯ ಕೈಗೊಳ್ಳಲಾಗಿದ್ದು ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ.
ಏಪ್ರಿಲ್ 28ರಂದು ಸಮೀಕ್ಷಾ ಕಾರ್ಯ ಮುಕ್ತಾಯಗೊಳ್ಳಲಿರುವುದರಿಂದ ಬೀದಿಬದಿ ವ್ಯಾಪಾರಸ್ಥರು ಈಗಾಗಲೇ ಗುರುತಿನ ಚೀಟಿ ಪಡೆದಿರುವವರು ಹಾಗೂ ಪಡೆಯದಿರುವವರು (ನಗರಸಭಾ ವ್ಯಾಪ್ತಿಯಲ್ಲಿ ವಾಸವಾಗಿರುವ ಫಲಾನುಭವಿಗಳು ಮಾತ್ರ) ಸಮೀಕ್ಷೆ ವ್ಯಾಪ್ತಿಗೆ ಒಳಪಡುವರು.
ಗಣತಿದಾರರು ವ್ಯಾಪಾರಸ್ಥರು ವ್ಯಾಪಾರ ಮಾಡುವ ಸ್ಥಳದಲ್ಲಿಯೇ ಹಾಜರಾಗಿ ಮಾಹಿತಿ ಪಡೆಯುವ ಸಂದರ್ಭದಲ್ಲಿ ಅವಶ್ಯಕ ದಾಖಲಾತಿಗಳಾದ ಆಧಾರ್ ಕಾರ್ಡ್, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿಗಳು ಹಾಗೂ ಎರಡು ಫೋಟೋಗಳನ್ನು ನೀಡಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಬೆಂಗಳೂರಿನಲ್ಲಿ ಏ. 28 ರಿಂದ 30ರವರೆಗೆ ಸಾವಯವ ಸಿರಿಧಾನ್ಯ 

ರಾಷ್ಟ್ರೀಯ ವಾಣಿಜ್ಯ ಮೇಳ
ಚಾಮರಾಜನಗರ, ಏ.25:- ಕೃಷಿ ಇಲಾಖೆಯು ಏಪ್ರಿಲ್ 28 ರಿಂದ 30ರವರೆಗೆ ಬೆಂಗಳೂರಿನ  ಅರಮನೆ ಮೈದಾನದಲ್ಲಿ  ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಾವಯವ ಸಿರಿಧಾನ್ಯಗಳ ರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಿದೆ.
ಮೇಳದಲ್ಲಿ ಸಿರಿಧಾನ್ಯಗಳು ಹಾಗೂ ಸಾವಯವ ಉತ್ಪನ್ನಗಳನ್ನು ಪ್ರದರ್ಶಿಸುವ  200ಕ್ಕೂ ಹೆಚ್ಚು ಹವಾನಿಯಂತ್ರಿತ ಮಳಿಗಳು ಇರುತ್ತವೆ. ಉತ್ಪಾದಕರು ಮಾರುಕಟ್ಟೆದಾರರ ಮುಖಾಮುಖಿ ಭೇಟಿ, ರಾಷ್ಟ್ರೀಯ ಸಮ್ಮೇಳನ, ರೈತರ ಕಾರ್ಯಾಗಾರ, ಸಾವಯವ ಆಹಾರ ಮಳಿಗೆಗಳು, ಗ್ರಾಹಕರ ಸಂಪರ್ಕ ಕಾರ್ಯಕ್ರಮಗಳು ನಡೆಯಲಿವೆ.
ರೈತ ಗುಂಪುಗಳು, ಸಂಸ್ಕರಣೆ ಕಂಪನಿಗಳು, ಮಾರುಕಟ್ಟೆದಾರರು, ವ್ಯಾಪಾರಸ್ಥರು, ರಫ್ತುದಾರರು ಹಾಗೂ ಇತರೆ ಭಾಗೀದಾರರಿಗೆ ಸಾವಯವ ಹಾಗೂ ಸಿರಿಧಾನ್ಯ ಉತ್ಪನ್ನಗಳನ್ನು ಪ್ರದರ್ಶಿಸಲು ಅಥವಾ ಖರೀದಿಸಲು, ಸಮಗ್ರ ಮಾಹಿತಿ ಪಡೆಯಲು ಉತ್ತಮ ಅವಕಾಶವಿದೆ.
ಮಾಹಿತಿಗಾಗಿ 080-22240125, 080-26641152/53 ಗೆ ಕರೆ ಮಾಡಬಹುದು. ದೂರವಾಣಿ ಸಂಖ್ಯೆ 1800-425-3553ಗೆ ಉಚಿತ ಕರೆ ಮಾಡಿ ಅಥವಾ ವೆಬ್ ಸೈಟ್ ತಿತಿತಿ.oಡಿgಚಿಟಿiಛಿs-miಟಟeಣs.iಟಿ ನಿಂದಲೂ ಮಾಹಿತಿ ಪಡೆಯಬಹುದಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶವಿದೆ. ಜಿಲ್ಲೆಯ ರೈತಬಾಂಧವರು ಸಹ ಸಿರಿಧಾನ್ಯಗಳ ಮೇಳಕ್ಕೆ ಹಾಜರಾಗಿ ಪ್ರಯೋಜನ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.


ಕಾಣೆಯಾದ ಹುಡುಗಿ ಪತ್ತೆಗೆ ಮನವಿ

ಚಾಮರಾಜನಗರ, ಏ. 25 :- ಗಣೇಶ ಎಂಬುವರ ಮಗಳು ಜಿ. ಪೂಜಾ ಎಂಬಾಕೆ ಏಪ್ರಿಲ್ 19ರಿಂದ ಕಾಣೆಯಾಗಿರುವ ಬಗ್ಗೆ ನಗರದ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಣೇಶ್ ಹಾಗೂ ಅವರ ಪತ್ನಿ ನಗರದ ಡಿಸಿ ಕಚೇರಿಗೆ ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಪೂಜಾ ಮನೆಯಲ್ಲಿಯೇ ಇದ್ದು ಕೆಲಸ ಮುಗಿಸಿ ಮನೆಗೆ ತೆರಳಿದ ಬಹಳ ಹೊತ್ತಿನವರೆಗೂ ಕಾಣೆಯಾದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆ ಹಾಗೂ ನೆಂಟರಿಷ್ಟರ ಮನೆಗಳಲ್ಲಿ ವಿಚಾರಿಸಿ ಪತ್ತೆಯಾಗಿರುವುದಿಲ್ಲ.
17 ವರ್ಷದ ಪೂಜಾ ದುಂಡು ಮುಖ, ಗೋದಿ ಮೈಬಣ್ಣ, 5 ಅಡಿ ಎತ್ತರದವಳಾಗಿದ್ದು ಕನ್ನಡ, ತೆಲಗು, ತಮಿಳು ಭಾಷೆ ಮಾತನಾಡುತ್ತಾಳೆ. ಕೆಂಪು ಮತ್ತು ಕಪ್ಪು ಮಿಶ್ರಿತ ಚೂಡಿದಾರ್ ಧರಿಸಿರುತ್ತಾಳೆ.
ಈಕೆಯ ಸುಳಿವು ಸಿಕ್ಕಲ್ಲಿ ನಗರದ ಪಟ್ಟಣ ಪೊಲೀಸ್ ಠಾಣೆಗೆ ತಿಳಿಸುವಂತೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಳ್ಳೇಗಾಲ : ಪ್ರತಿಷ್ಠಿತ ಶಾಲೆಗಳಲ್ಲಿ 6, 8ನೇ ತರಗತಿಗೆ  ಪ. ವರ್ಗಗಳ ವಿದ್ಯಾರ್ಥಿಗಳ ಸೇರ್ಪಡೆಗೆ ಅರ್ಜಿ ಆಹ್ವಾನ

ಚಾಮರಾಜನಗರ, ಏ. 25- 2017-18ನೇ ಸಾಲಿಗೆ ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6 ಮತ್ತು 8ನೇ ತರಗತಿಗೆ ಸೇರ್ಪಡೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು 5 ಮತ್ತು 7ನೇ ತರಗತಿಯಲ್ಲಿ ಶೇ. 80ರಷ್ಟು ಅಂಕ ಪಡೆದಿರಬೇಕು. ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಯೊಳಗಿರಬೇಕು. ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳ  ಕಚೇರಿಗೆ (ರೂ.ನಂ. 217) ಮೇ 12ರೊಳಗೆ ಜಾತಿ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ಕಚೇರಿಯನ್ನು ಸಂಪರ್ಕಿಸುವಂತೆ ಕೊಳ್ಳೇಗಾಲ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಏ. 26ರಂದು ಮುಖ್ಯಮಂತ್ರಿಯವರ  ಜಿಲ್ಲಾ ಪ್ರವಾಸ

ಚಾಮರಾಜನಗರ, ಏ. 25 :- ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಏಪ್ರಿಲ್ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣಕ್ಕೆ ಮುಖ್ಯಮಂತ್ರಿಯವರು ಆಗಮಿಸಿ ಅಲ್ಲಿ ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ನಂಜನಗೂಡಿಗೆ ತೆರಳುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರÉ.
ಏ. 26ರಂದು ನಗರಾಭಿವೃದ್ಧಿ ಹಾಗೂ ಹಜ್ ಸಚಿವರ  ಜಿಲ್ಲಾ ಪ್ರವಾಸ
ಚಾಮರಾಜನಗರ, ಏ. 25 :- ನಗರಾಭಿವೃದ್ಧಿ ಹಾಗೂ ಹಜ್ ಸಚಿವÀರಾದ ಆರ್. ರೋಷನ್ ಬೇಗ್ ಅವರು ಏಪ್ರಿಲ್ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣಕ್ಕೆ ಆಗಮಿಸಿ ಮುಖ್ಯಮಂತ್ರಿಯವರೊಂದಿಗೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ನಂಜನಗೂಡಿಗೆ ತೆರಳುವರು ಎಂದು ಸಚಿವರ ವಿಶೇಷಾಧಿಕಾರಿ ತಿಳಿಸಿದ್ದಾರÉ.

ಏ. 26ರಂದು ಉಸ್ತುವಾರಿ ಸಚಿವರ  ಜಿಲ್ಲಾ ಪ್ರವಾಸ
ಚಾಮರಾಜನಗರ, ಏ. 25 - ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವÀರಾದ ಯು.ಟಿ. ಖಾದರï ಅವರು ಏಪ್ರಿಲ್ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರÉ.

ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ



ಚಾಮರಾಜನಗರ, ಏ. 25 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭವನ್ನು ಏಪ್ರಿಲ್ 28ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಭಿಕ್ಕುಗಳಾದ ಪರಮಪೂಜ್ಯ ಬೋಧಿರತ್ನ ಬಂತೇಜಿ ದಿವ್ಯಸಾನಿಧ್ಯ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನದ ಅನಾವರಣ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೆ. ಆರ್. ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಉಮಾಶಂಕರ್ ಅವರು ಮುಖ್ಯ ಭಾಷಣ ಮಾಡುವರು.
ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಏಪ್ರಿಲ್ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಏರ್ಪಡಿಸಲಾಗಿದೆ

ಏ. 26ರಂದು ಪೌರಾಡಳಿತ ಸಚಿವರ ಜಿಲ್ಲಾ ಪ್ರವಾಸÀ

ಚಾಮರಾಜನಗರ, ಏ. 25 :- ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಏಪ್ರಿಲ್ 26 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣಕ್ಕೆ ಆಗಮಿಸಿ ಮುಖ್ಯಮಂತ್ರಿಯವರೊಂದಿಗೆ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತಕಾರ್ಯದರ್ಶಿ ತಿಳಿಸಿದ್ದಾರÉ.

ಏ. 26ರಂದು ಪಶು ಸಂಗೋಪನೆ, ರೇಷ್ಮೆ ಸಚಿವರ ಜಿಲ್ಲಾ ಪ್ರವಾಸ

ಚಾಮರಾಜನಗರ, ಏ. 25 :- ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ಎ.ಮಂಜು ಅವರು ಏಪ್ರಿಲ್ 26 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2.30 ಗಂಟೆಗೆ ಹುತ್ತೂರು ಗೋಶಾಲೆಗೆ ಭೇಟಿ ನೀಡುವರು. ಮಧ್ಯಾಹ್ನ 3.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಪಶುಪಾಲನೆ ಹಾಗೂ ಪಶು ವೈದ್ಯ ಸೇವ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. 4 ಗಂಟೆಗೆ ಮಂಗಲ ಮತ್ತು ಉಮ್ಮತ್ತೂರು ಗೋಶಾಲೆಗೆ ಭೇಟಿ ನೀಡುವರು. ಸಂಜೆ 6 ಗಂಟೆಗೆ ಮೈಸೂರಿಗೆ ತೆರಳುವರೆಂದು ಸಚಿವರ ಆಪ್ತಕಾರ್ಯದರ್ಶಿ ತಿಳಿಸಿದ್ದಾರೆ.

ಕಡಿಮೆ ಬೆಲೆಯಲ್ಲಿ ಸಿಗೋವಷ್ಟು ಮೆಡಿಷನ್, ಇನ್ನ ಯಾವ ಮೆಡಿಕಲ್ ಸ್ಟೋರ್ ಅಲ್ಲಿ ಸಿಗೊಲ್ಲ. ಅದುವೇ ನಿಮ್ಮ ನಿತ್ಯ ಸಂಜೀವಿನಿ ಯಲ್ಲಿ ಮಾತ್ರ....ಓದಿ ಶೇರ್ ಮಾಡಿ

ಔಷದಿಗಳ ಮೇಲೆ ಭಾರೀ ವಿನಾಯ್ತಿ, ಇದು ನಿಮ್ಮ ನಿತ್ಯ ಸಂಜೀವಿನಿಯಲ್ಲಿ ಮಾತ್ರ.!

                       ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ

ಚಾಮರಾಜನಗರ: ಯಾರೇ ಆಗಲೀ ಇಂದು ಯಾವುದೇ ಪದಾರ್ಥಕ್ಕೂ ವಿನಾಯ್ತಿ ಕೇಳೋದು ಸಹಜವಾಗಿದೆ. ಅದರಲ್ಲೂ  ಆರೋಗ್ಯದ ವಿಚಾರದಂಲ್ಲಿ ಮಾತ್ರ ಬಡವರಂತೂ ಹೆಚ್ಚು ಹಣವಿಲ್ಲ ಎಂದರೆ ಸಾಕು 10 ಟ್ಯಾಬ್ಲೆಟ್ ಕೊಳ್ಳುವ ಅವರು ಐದೇ ಸಾಕು ಎನ್ನುವ ಮಟ್ಟಿಗೆ ಬರಲಿದೆ. ತೆಗೆದುಕೊಂಡ ಔಷದಿಯಿಂದ ಆರೋಗ್ಯವಾಗದೇ ಇದ್ದರೆ ಮತ್ತಷ್ಟು ತೆಗೆದುಕೊಳ್ಳುವ ಎನ್ನುವವರಿಗಂತು ಈಗ ಸಂತಸ ತಂದಿದೆ ಎಂದರೆ ತಪ್ಪಾಗಲಾರದು.
ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲೂ ಜನರಿಕ್ ಅಂಗಡಿ ಮಳಿಗೆ ತೆರೆಯಬೇಕು ಎಂಬ ಕೇಂದ್ರ ಜಾರಿಗೆ ತಂದಿದ್ದ ಯೋಜನೆಯಲ್ಲಿ ಇದೀಗ "ನಿತ್ಯ ಸಂಜೀವಿನಿ" ಎಂಬ ಹೆಸರಿನಲ್ಲಿ ಚಾಮರಾಜನಗರದ ಜಿಲ್ಲಾಸ್ಪತ್ರೆಯ ಆವರಣದ ಮುಂಭಾಗದದಲ್ಲಿ ಅಂಗಡಿ ಮಳಿಗೆ ತೆರೆಯಲಾಗಿದೆ. ( ಜನರಿಕ್ ಅಂಗಡಿ ಮಳಿಗೆ ಜಿಲ್ಲಾಸ್ಪತ್ರೆಯಲ್ಲಿ ತೆರೆಯುವಂತೆ ಹಿಂದಿನ ಸರ್ಕಾರದ ಅವದಿಯಲ್ಲಿ ಆರೋಗ್ಯ ಸಚಿವರಾಗಿದ್ದ ಯು.ಟಿ ಖಾದರ್ ಅವರಿಗೆ (2011-2013) ಮನವಿ ಪತ್ರ ಸಲ್ಲಿಸುವ ಮೂಲಕ ರಾಜ್ಯ ಮಟ್ಟದ ಪತ್ರಿಕೆಯಲ್ಲಿ  ಅಂದಿನ ವರದಿಗಾರ ಎಸ್.ವೀರಭದ್ರಸ್ವಾಮಿ ಸುದ್ದಿ ಪ್ರಕಟಿಸಿ  ಸರ್ಕಾರದ ಗಮನ ಸೆಳೆದಿದ್ದರು. ಸದ್ಯ ಈಗ ಜನರ ಬೇಢಿಕೆ ಹಾಗೂ ಸರ್ಕಾರದ ಯೋಜನೆಯಂತೆ ಅಂಗಡಿ ಮಳಿಗೆ ತೆರೆಯುವ ಮೂಲಕ ಬಡ ರೋಗಿಗಳಿಗೆ ಔಷದಿ ನೀಡಿ ಸ್ವಲ್ಪ ಹಣ ಕಾಸು ಸಮಸ್ಯೆಯನ್ನು ನಿವಾರಿಸುವಲ್ಲಿ  ಹಾಗೂ ಆರೋಗ್ಯ ಕಾಪಾಡಲು ಮುಂದಾಗುತ್ತಿದೆ ಎಂದರೆ ತಪ್ಪಾಗಲಾರದು.

ಅಂಗಡಿ ಮಳಿಗೆ ಎಲ್ಲಿದೆ.? ಎಷ್ಟು ಹಣ ಉಳಿತಾಯ ಆಗುತ್ತದೆ.

ಬಡ ರೋಗಿಗಳ ನೆರವಿಗಾಗಿಯೇ ರಿಯಾಯ್ತಿ ದರದಲ್ಲಿ ಔಷದಿ,ಮಾತ್ರೆಗಳನ್ನು ಮಾರಾಟ ಮಾಡುವ ಉದ್ದೇಶದಿಂದ "ನಿತ್ಯ ಸಂಜೀವಿನಿ" ಎಂಬ ಜನರಿಕ್ ಅಂಗಡಿ ಮಳಿಗೆಯು  ಚಾಮರಾಜನಗರದ ಜಿಲ್ಲಾಸ್ಪತ್ರೆಯ ಆವರಣದ ಮುಂಭಾದದಲ್ಲಿ ಅಂಗಡಿ ಮಳಿಗೆ ತೆರೆಯಲಾಗಿದೆ. ಇಲ್ಲಿ ಔಷದಿಗಳು ಬಹಳಷ್ಟು ದರ ಕಡಿಮೆಯಾಗಿ, ಕೆಲವೊಂದು ಔಷದಿಗಳು ವಿನಾಯ್ತಿ ದರಲ್ಲೂ ದೊರೆಯಲಿದೆ............ .ಆಗಿದ್ದರೆ ಅಲ್ಲಿ ದೊರೆಯುವ ಔಷದಿಗಳ  ಬೆಲೆ ಎಷ್ಟು ಕಡಿಮೆ  ಎಂದು ನೋಡುವುದಾದರೆ....
ಜನರಿಕ್ ಔಷದಿಗಳು ಶೇ 50 ರಿಂದ 80% ರಿಯಾಯ್ತಿ ದರ ಹಾಗೂ ಇತರ ಬ್ರಾಂಡೆಡ್ ಔಷದಿಗಳು ಶೇ.10% ರಿಯಾಯ್ತಿ ದರ ಹಾಗೂ ಸರ್ಜಿಕಲ್ ಪದಾರ್ಥಗಳು ಶೇ 25% ರಷ್ಟು ರಿಯಾಯ್ತಿ ಯದಲ್ಲಿ ದೊರೆಯುತ್ತದೆ‌ . ಬಡರೋಗಿಗಳ ನೆರವಿಗಾಗಿ ಸರ್ಕಾರ ತೆರೆದಿರುವ ಈ ಅಂಗಡಿ ಮಳಿಗೆಯಲ್ಲಿ ರಿಯಾಯ್ತಿ ದರದಲ್ಲಿ ಔಷದ ನೀಡುತ್ತಿರುವುದು ಸಂತಸ ತಂದಿದೆ ಎಂದರೆ ತಪ್ಪಾಗಲಾರದು ಒಟ್ಟಾರೆ ಕೇಂದ್ರ ಜಾರಿ ತಂದಿರುವ ಜನರಿಕ್ ಅಂಗಡಿ ಮಳಿಗೆಯನ್ನು ರೋಗಿಗಳು  ಉಪಯೋಗಿಸಿಕೊಂಡರೆ ಕಡಿಮೆ ರಿಯಾಯ್ತಿ ದರರದಲ್ಲಿ ಔಷದಿ ಪಡೆದು ನಾವು, ನಮ್ಮ  ನಮ್ಮ ಕುಟುಂಬ ಸದಸ್ಯರು ಆರೋಗ್ಯದಿಂದ ಇರಬಹುದು.
ಈ ಜನರಿಕ್ ಮಳಿಗೆ ನೀಡುತ್ತಿರುವ ಕಡಿಮೆ ದರದ ಔಷದಿಗೆ ಇತರ ಅಂಗಡಿಗಳು ಸ್ಪರ್ದೆಗೆ ಇಳಿಯುವ ಕಾಲ ಸನಿಹವಿಲ್ಲ. ಇಬ್ಬರ ಜಗಳ ಮೂರನೆಯವಿರಗೆ ಲಾಭ ಎಂಬಂತೆ  ಅನಾರೋಗ್ಯ ಪೀಡಿತ ರೋಗಿಗಳಿಗೆ ವರದಾನವಾಗಿಲಿದೆಯೆ ಎಂಬುದನ್ನು ಕಾದು ನೋಡಬೇಕಾಗಿದೆ.  ಇದು ಇನ್ನು ಪ್ರಚಾರವಾಗದೇ ಮಾದ್ಯಮದವರೇ ಇದನ್ನು ಮೂಲಗುಂಪಾಗಿಸಿದ್ದಾರೆ .. ಜನಸಾಮಾನ್ಯರಾದ ನೀವು ಶೇರ್ ಮಾಡಿ ಎಲ್ಲರಿಗೂ ಅರಿವು ಮೂಡಿಸೋಣ ಎಂಬುದದು ನಮ್ಮ ಆಸೆ.. ಕೈ ಜೋಡಿಸಿ...

Monday, 24 April 2017

24-04-2017 ವಿದ್ಯುತ್ ಸ್ಪರ್ಶ : ಮೂವರಿಗೆ ಕಠಿಣ ಸಜೆ,ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಅದ್ದೂರಿ ಆಚರಣೆ : ಪೂರ್ವಭಾವಿ ಸಭೆಯಲ್ಲಿ ನಿರ್ಧಾರ,ಏ. 26ರಂದು ಮಹಿಳಾ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಅದ್ದೂರಿ ಆಚರಣೆ : ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಚಾಮರಾಜನಗರ, ಏ. 24 :- ಜಿಲ್ಲಾಡಳಿತ ಹಾಗೂ ವಿವಿಧ ಸಮುದಾಯ  ಸಂಘಟನೆಗಳ ಸಹಕಾರದೊಂದಿಗೆ ಭಗೀರಥ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸÀಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮತ್ತು ಜಿಲ್ಲಾಧಿಕಾರಿ ಬಿ. ರಾಮು ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಗೀರಥ ಜಯಂತಿಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಕಳೆದ ಬಾರಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ಬಾರಿಯೂ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಬೇಕಿದೆ. ಈ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಿ ಕಾರ್ಯೋನ್ಮುಖರಾಗಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಭಗೀರಥ ಜಯಂತಿ ಕಾರ್ಯಕ್ರಮ ಸುಗಮ ನಿರ್ವಹಣೆಗೆ ಕಳೆದ ಬಾರಿ 6 ಸಮಿತಿಗಳನ್ನು ರಚಿಸಲಾಗಿತ್ತು. ಈ ಬಾರಿಯ ಸಮಾರಂಭಕ್ಕೂ ಸಮಿತಿಗಳಿಗೆ ಅಗತ್ಯವಿರುವ ಮುಖಂಡರು, ಪ್ರತಿನಿಧಿಗಳನ್ನು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ. ಆಯಾ ಸಮಿತಿಯು ವಹಿಸಿದ ಜವಾಬ್ದಾರಿಗೆ ಅನುಗುಣವಾಗಿ ಕಾರ್ಯಕ್ರಮದ ಸಿದ್ಧತೆಗೆ ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ರಾಮು ಅವರು ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಸಮಾರಂಭ ನಿಗದಿ ಮಾಡಲಾಗುವುದು. ಪ್ರವಾಸಿ ಮಂದಿರದಿಂದ ಭಗೀರಥ ಮಹರ್ಷಿಯವರ ಭಾವಚಿತ್ರ ಮೆರವಣಿಗೆಯನ್ನು ಕಲಾತಂಡದೊಂದಿಗೆ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಎಲ್ಲರು ಪೂರಕವಾಗಿ ಸಹಕರಿಸಬೇಕಿದೆ. ನಿಗದಿತ ವೇಳೆಗೆ ಸಮಾವೇಶಗೊಂಡು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ ಎಂದರು.
ಭಗೀರಥ ಅವರ ಕುರಿತು ಉಪನ್ಯಾಸ ನೀಡಲು ಭಗೀರಥರ ಇತಿಹಾಸ ಕುರಿತು ಹೆಚ್ಚು ಬಲ್ಲವರನ್ನು  ಆಹ್ವಾನ ಮಾಡಬೇಕು. ಹೀಗಾಗಿ ವಿಷಯ ತಜ್ಞರನ್ನು ಸಂಪರ್ಕಿಸಿ ಕಾರ್ಯಕ್ರಮದಂದು ಉಪನ್ಯಾಸ ನೀಡಲು ನಿರ್ಧಾರ ತೆಗೆದುಕೊಳ್ಳಬೇಕಿದೆ. ಈ ಕುರಿತು ನೀಡುವ ಸಲಹೆಗಳನ್ನು ಪರಿಗಣಿಸಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳುವುದು ಒಳಿತು ಎಂದು ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಇದೇವೇಳೆ ಕಾರ್ಯಕ್ರಮ ನಡೆಸುವ ಸಂಬಂಧ ಸಭೆಯಲ್ಲಿ ಹಾಜರಿದ್ದ ವಿವಿಧ ಮುಖಂಡರು, ಪ್ರತಿನಿಧಿಗಳು ಮಾತನಾಡಿ ಮೆರವಣಿಗೆ ಸಾಗುವ ಮಾರ್ಗಗಳನ್ನು ಅಚ್ಚುಕಟ್ಟುಗೊಳಿಸಬೇಕು. ಹೆಚ್ಚು ಜನರು ಸಮಾವೇಶಗೊಳ್ಳುವ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಸಕಾಲಕ್ಕೆ ಪೂರ್ಣಗೊಳಿಸುವುದೂ ಸೇರಿದಂತೆ ಇನ್ನಿತರ ಸಲಹೆಗಳನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ನಗರಸಭೆ ಆಯುಕ್ತರಾದ ರಾಜಣ್ಣ, ನಗರಸಭಾ ಸದಸ್ಯರಾದ ಮಹೇಶ್ ಉಪ್ಪಾರ್, ಮುಖಂಡರಾದ ಸಿ.ಎಂ. ಮಹಾದೇವಶೆಟ್ಟಿ, ಚಿಕ್ಕಮಹದೇವು, ಹನುಮಂತಶೆಟ್ಟಿ, ಮಂಗಲ ಶಿವಕುಮಾರ್, ಕೆ.ಟಿ. ನಾಗಶೆಟ್ಟಿ, ಕಾಮರಾಜು, ಎಂ.. ಜಯಕುಮಾರ್, ಸಿ.ಎಸ್. ನಾಗರಾಜು, ಜಯಸ್ವಾಮಿ, ಸ್ವಾಮಿ, ಶಿವಣ್ಣ, ಕಾಳಪ್ಪ, ನಾರಾಯಣ, ಆಲೂರು ನಾಗೇಂದ್ರ, ಗಡಿಮನೆ, ಕಟ್ಟೆಮನೆ ಯಜಮಾನರು, ಇತರೆ ಮುಖಂಡರು, ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಮೂವರಿಗೆ ಕಠಿಣ ಶಿಕ್ಷೆ


ಚಾಮರಾಜನಗರ, ಏ. 24 - ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಚಾಮರಾಜನಗರದ ಗ್ರಾಮಾಂತರ ಠಾಣೆ ಪೊಲೀಸರು ಮೊ.ಸಂ 278/2014 ರಲ್ಲಿ ನಾಗೇಂದ್ರ, ಹುಲುಗಾದ್ರಿನಾಯ್ಕ ಮತ್ತು ಸೂರಿ ಎಂಬುವರ ವಿರುಧ್ದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರದ ಆರೋಪ ಹೊರಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್.ಎಫ್. ಮಳವಳ್ಳಿ ಅವರು ಆರೋಪಿ ನಾಗೇಂದ್ರ ಎಂಬಾತನು 2014ರ ಅಕ್ಟೋಬರ್ 19 ರಂದು ರಾತ್ರಿ 10 ಗಂಟೆ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ಹಾಗೂ 2 ನೇ ಆರೋಪಿ ಹುಲುಗಾದ್ರಿನಾಯ್ಕ ಮತ್ತು 3ನೇ ಆರೋಪಿ ಸುರೇಶ ಅಲಿಯಾಸ್ ಸೂರಿ ಎಂಬವರು ಅಪರಾದ ಎಸಗಲು ನಾಗೇಂದ್ರನಿಗೆ ಸಹಕಾರ ಮತ್ತು ಕುಮ್ಮಕ್ಕು ನೀಡಿರುವುದು ರುಜುವಾತಾಗಿದೆ ಎಂದು ತೀರ್ಮಾನಿಸಿ ಆರೋಪಿಗಳಿಗೆ ಐ.ಪಿ.ಸಿ ಹಾಗೂ ಪೋಕ್ಸೋ ಕಾಯ್ದೆಯಡಿ ಶಿಕ್ಷೆ ವಿಧಿಸಿದರು.
1ನೇ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 2000 ರೂ ದಂಡ ಮತ್ತು 2ನೇ ಹಾಗೂ 3 ನೇ ಆರೋಪಿಗೆ 2 ವರ್ಷ ಕಠಿಣ ಸಜೆ ಹಾಗೂ ತಲಾ 1000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು. ನೊಂದ ಬಾಲಕಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವ ಪ್ರಾಧಿಕಾರಕ್ಕೆ ಶಿಫಾರಸು ಮಾಡಿ ಜಿಲ್ಲಾ ನ್ಯಾಯದೀಶರು ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಸ್.ನಾಗರಾಜು ಕಾಮಗೆರೆಯವರು ವಾದ ಮಂಡಿಸಿದ್ದರು.

ವಿದ್ಯುತ್ ಸ್ಪರ್ಶ : ಮೂವರಿಗೆ ಕಠಿಣ ಸಜೆ

ಚಾಮರಾಜನಗರ, ಏ. 24 - ಜಮೀನಿನ ಸುತ್ತ ಅಳವಡಿಸಿದ್ದ ಜಿಂಕ್ ವೈರ್‍ಗೆ ಅಕ್ರಮವಾಗಿ ವಿದ್ಯುತ್ ಹಾಯಿಸಿದ ಪರಿಣಾಮ ವ್ಯಕ್ತಿಯೋರ್ವರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲೀಕರಾದ ಮೂವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷಗಳ ಸಜೆ ಹಾಗೂ ಎಂಬತ್ತು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಯಳಂದೂರು ತಾಲೂಕಿನ ಕೊಮಾರನಪುರದ ಎನ್. ಸಿದ್ದರಾಜು, ಪುಟ್ಟಸಿದ್ದಮ್ಮ, ದರ್ಶನ್ ಶಿಕ್ಷೆಗೆ ಗುರಿಯಾದವರು. ಇವರು ತಮ್ಮ ಜಮೀನಿನಲ್ಲಿದ್ದ ಕಬ್ಬಿನ ಫಸಲಿನ ಸುತ್ತ ಮರದ ಗೂಟಗಳನ್ನು ನೆಟ್ಟು ಜಿಂಕ್ ವೈರ್ ಅಳವಡಿಸಿ  ಅಕ್ರಮವಾಗಿ ವಿದ್ಯುತ್ ಹಾಯಿಸಿದ್ದರು. ನಟರಾಜು ಎಂಬುವವರು ಸಮೀಪದಲ್ಲೇ ಇರುವ ತಮ್ಮ ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದರು. ಸದರಿ ಪ್ರಕರಣದ ವಿಚಾರಣೆ ನಡೆದು ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಮೂವರಿಗೆ 2 ವರ್ಷಗಳ ಕಠಿಣ ಸಜೆ ಹಾಗೂ 80000 ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.

ಡಿಸೆಂಬರ್ ಅಂತ್ಯದೊಳಗೆ ಪರಿಶಿಷ್ಟರ ಕಲ್ಯಾಣ ಯೋಜನೆ ಗುರಿ ಸಾಧಿಸಿ : ಡಿಸಿ ಬಿ. ರಾಮು ತಾಕೀತು

ಚಾಮರಾಜನಗರ, ಏ. 24- ಪರಿಶಿಷ್ಟರ ಕಲ್ಯಾಣ ಯೋಜನೆ ಕಾರ್ಯಕ್ರಮಗಳನ್ನು ನಿಗದಿತ ವೇಳೆಗೆ ಅನುಷ್ಠಾನಗೊಳಿಸಿ ಡಿಸೆಂಬರ್ ಅಂತ್ಯದೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ವರ್ಗದ ವಿಶೇಷ ಘಟಕ ಯೋಜನೆಯಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ವಿಶೇಷ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಸರ್ಕಾರ ಈಗಾಗಲೇ ಹಣ ನಿಗದಿ ಮಾಡಿದೆ. ಆಯಾ ಇಲಾಖೆಗಳಿಗೆ ಅನುದಾನ ಹಂಚಿಕೆ ನಿಗದಿಮಾಡಿದ್ದು ಅಧಿಕಾರಿಗಳು ಅನುದಾನಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಿ ಅನುಷ್ಠಾನ ತರುವ ಹೊಣೆಗಾರಿಕೆ ನಿರ್ವಹಿಸಬೇಕಿದೆ ಎಂದರು.
ಪ್ರತಿ ಇಲಾಖೆ ಅಧಿಕಾರಿಗಳು ನಿಗದಿಯಾಗಿರುವ ಅನುದಾನವನ್ನು ಜಿಲ್ಲಾ ಮಟ್ಟದಲ್ಲಿ  ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಕ್ಕೆ ವಿನಿಯೋಗಿಸಲು ಅಗತ್ಯವಿರುವ ಪ್ರಕ್ರಿಯೆ ಕೈಗೊಳ್ಳಬೇಕು. ಅನುದಾನ ಬಿಡುಗಡೆ ಕಾರ್ಯಕ್ರಮ ಅನುಷ್ಠಾನ ಮತ್ತಿತರ ಕೆಲಸಗಳಿಗೆ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇಲಾಖೆಯ ಅಧಿಕಾರಿಗಳು ಅವರ ಇಲಾಖೆಯ ಕೇಂದ್ರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಗೆ ಅವಶ್ಯ ಮಾಹಿತಿ ನೀಡಿ ಗುರಿ ಸಾಧನೆ ಬಗ್ಗೆ ಕಡ್ಡಾಯವಾಗಿ  ಮಾಹಿತಿ ನೀಡಬೇಕು ಎಂದರು.
ಅನುದಾನ ಲಭ್ಯತೆಗೆ ಅನುಗುಣವಾಗಿ ಕಾರ್ಯಕ್ರಮಗಳು ಅನುಷ್ಠಾನವಾಗಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸಬೇಕು. ಇನ್ನು ಮೂರು ತಿಂಗಳೊಳಗೆ ಫಲಾನುಭವಿಗಳ ಆಯ್ಕೆ ಸಂಬಂಧ ಕೈಗೊಳ್ಳಬೇಕಿರುವ ಎಲ್ಲ ಕೆಲಸಗಳನ್ನು ನಿರ್ವಹಿಸಬೇಕು. ಡಿಸೆಂಬರ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸಬೇಕು. ಶೇಕಡ 100ರಷ್ಟು ಪ್ರಗತಿ ಕಡ್ಡಾಯವಾಗಿ ಆಗಲೇಬೇಕು ಎಂದು ಜಿಲ್ಲಾಧಿಕಾರಿ ರಾಮು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಮಾತನಾಡಿ ಅಧಿಕಾರಿಗಳು ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಅನುದಾನ ನಿಗದಿತ ಉದ್ದೇಶಕ್ಕೆ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುವ ನಿಟ್ಟಿನಲ್ಲಿ ತ್ವರಿತವಾಗಿ ಕಾಯೋರ್Àನ್ಮುಖರಾಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಬೇಕು ಎಂದರು.
 ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಸರಸ್ವತಿ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಏ. 25ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ

ಚಾಮರಾಜನಗರ, ಏ. 24- ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.
ಏ. 26ರಂದು ಮುಖ್ಯಮಂತ್ರಿಯವರ  ಜಿಲ್ಲಾ ಪ್ರವಾಸ
ಚಾಮರಾಜನಗರ, ಏ. 24 - ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಏಪ್ರಿಲ್ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣಕ್ಕೆ ಮುಖ್ಯಮಂತ್ರಿಯವರು ಆಗಮಿಸಿ ಅಲ್ಲಿ ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ನಂಜನಗೂಡಿಗೆ ತೆರಳುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರÉ.

ಏ. 27ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಚಾರ ಸಂಕಿರಣ
ಚಾಮರಾಜನಗರ, ಏ. 24- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಅಂಗವಾಗಿ ಅಂಬೇಡ್ಕರ್ ಅವರ ಕೊಡುಗೆ, ಚಿಂತನೆಗಳ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಏಪ್ರಿಲ್ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪ್ರಸ್ತಾವಿತ ನಳಂದ ಬೌದ್ಧ ವಿಶ್ವಿದ್ಯಾನಿಲಯದ ಬೋಧಿದತ್ತ ಬಂತೇಜಿರವರು ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.
ಖ್ಯಾತ ಸಾಹಿತಿ ಬಿ.ಟಿ. ಲಲಿತಾನಾಯಕ್ ಅವರು ಮೌಢ್ಯ ವಿಮೋಚನೆಗೆ ಬಾಬಾ ಸಾಹೇಬರ ಚಿಂತನೆಗಳು ಎಂಬ ವಿಷಯ ಕುರಿತು, ಹೈಕೋರ್ಟ್ ವಕೀಲರಾದ ಶ್ರೀಧರ ಪ್ರಭು ಅವರು ಮೀಸಲಾತಿ – ವರ್ತಮಾನದ ಸವಾಲುಗಳು ಎಂಬ ಬಗ್ಗೆ ಮತ್ತು ಕೃಷಿಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತಲಕಾಡು ಚಿಕ್ಕರಂಗೇಗೌಡ ಅವರು ದಲಿತೇತರ ಸಮುದಾಯಕ್ಕೆ ಬಾಬಾ ಸಾಹೇಬರ ಕೊಡುಗೆ ಎಂಬ ಬಗ್ಗೆ ವಿಚಾರ ಮಂಡಿಸುವರೆಂದು ಡಾ. ಬಿ.ಆರ್. ಅಂಬೇಡ್ಕರ್‍ರವರ ಕುರಿತ ವಿಚಾರ ಸಂಕಿರಣ ಉಪಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಏ. 26ರಂದು ಮಹಿಳಾ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ

ಚಾಮರಾಜನಗರ, ಏ. 24 (- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತ (ಪೋಕ್ಸೋ) ಕಾನೂನು ಅರಿವು ಕಾರ್ಯಕ್ರಮವನ್ನು ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಅಧಿಕಾರಿ ವಿಠಲ್ ಪೂಜಾರಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಸರ್ವೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮಕ್ಕಳ ಮೇಲಿನ ದೌರ್ಜನ್ಯ ತಡೆ ಬಗ್ಗೆ ವಿಶೇಷ ಸರ್ಕಾರಿ ವಕೀಲರಾದ ನಾಗರಾಜು, ಮಹಿಳಾ ದೌರ್ಜನ್ಯ ವಿರುದ್ಧದ ಕಾನೂನು ರಕ್ಷಣೆ ಬಗ್ಗೆ ಕಾನೂನು ಅಧಿಕಾರಿ ಶಕೀಲ ಅಬೂಬ್ಕರ್ ಅವರು ಉಪನ್ಯಾಸ ನೀಡುವರೆಂದು  ಪ್ರಕಟಣೆ ತಿಳಿಸಿದೆ.

ಬಾಲ್ಯವಿವಾಹ ತಡೆ : ಮಾಹಿತಿ ನೀಡಲು ಮನವಿ 

ಚಾಮರಾಜನಗರ, ಏ. 24- ಜಿಲ್ಲೆಯಲ್ಲಿ ಅಕ್ಷಯ ತೃತೀಯ ದಿನವಾದ ಏಪ್ರಿಲ್ 29ರಂದು ಹೆಚ್ಚು ಸಂಖ್ಯೆಯಲ್ಲಿ ವಿವಾಹ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಬಾಲ್ಯ ವಿವಾಹದಂಥಹ ಮಾಹಿತಿ ಇದ್ದಲ್ಲಿ ಕೂಡಲೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳ ಗಮನಕ್ಕೆ ತರುವಂತೆ ಕೋರಲಾಗಿದೆ.
ಅಕ್ಷಯ ತೃತೀಯ ದಿನದ ಅಂಗವಾಗಿ ಕಲ್ಯಾಣ ಮಂಟಪ, ಸಂಘ ಸಂಸ್ಥೆಗಳು, ದೇವಸ್ಥಾನಗಳಲ್ಲಿ ಹೆಚ್ಚಾಗಿ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹಗಳು ನಡೆಯುವುದು ಹಲವು ಸಂದರ್ಭಗಳಲ್ಲಿ ಬೆಳಕಿಗೆ ಬಂದಿರುವುದರಿಂದ ಗ್ರಾಮದಿಂದ ಜಿಲ್ಲಾಮಟ್ಟದವರೆಗೆ ಬಾಲ್ಯವಿವಾಹ ತಡೆಗಟ್ಟುವುದು ಅಗತ್ಯವಾಗಿದೆ. ಹೀಗಾಗಿ ಬಾಲ್ಯವಿವಾಹ ನಡೆಯುತ್ತಿದೆ ಎಂದು ತಿಳಿದುಬಂದಲ್ಲಿ ನಾಗರಿಕರು ಸಂಘಸಂಸ್ಥೆಗಳು ಆಯಾ ವ್ಯಾಪ್ತಿಯ ಬಾಲ್ಯವಿವಾಹ ನಿಷೇಧ ಅಧಿಕಾರಿಗಳಿಗೆ ದೂರು, ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ತುಂಬಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಪರಾಧವಾಗಿರುತ್ತದೆ. ಅಪರಾಧಕ್ಕೆ 2 ವರ್ಷಗಳ ಕಠಿಣ ಜೈಲು ವಾಸ ಅಥವಾ ರೂ. 1 ಲಕ್ಷದವರೆಗೆ ದಂಡ ಅಥವಾ ಎರಡೂ ಇದ್ದು ಜಾಮೀನು ರಹಿತ ವಿಚಾರಣಾರ್ಹ ಅಪರಾಧವಾಗಿರುತ್ತದೆ.
ವಿವಾಹಕ್ಕೂ ಮೊದಲು ವಯಸ್ಸಿನ ದೃಢೀಕರಣ ಹಾಗೂ ಅರ್ಜಿ ನೀಡಿ ತಹಸೀಲ್ದಾರ್ ಅವರಿಂದ ಅನುಮತಿ ಪಡೆಯಬೇಕು. ಸಂಪೂರ್ಣ ಮಾಹಿತಿಯನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ (ಕೊ.ಸಂಖ್ಯೆ 127) ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ದೂ.ಸಂ. 08226-222354)ಗೆ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಏ. 25ರಂದು ಭಾರತದ ಪ್ರಜಾಪ್ರಭುತ್ವದಲ್ಲಿ ನೀತಿ ಕುರಿತು ಕಾರ್ಯಾಗಾರ

ಚಾಮರಾಜನಗರ, ಏ. 24- ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗವು ಭಾರತದ ಪ್ರಜಾಪ್ರಭುತ್ವದಲ್ಲಿ ನೀತಿ ಕುರಿತು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಏಪ್ರಿಲ್ 25ರಂದು ಬೆಳಿಗ್ಗೆ 10.30 ಗಂಟೆಗೆ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದೆ.
ಮೈಸೂರು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಮುಜಾಫರ್ ಅಸ್ಸಾದಿ ಕಾರ್ಯಾಗಾರ ಉದ್ಘಾಟಿಸುವರು. ಮೈಸೂರು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರೂ ಆದ ಪ್ರೊ. ಜಿ.ಟಿ. ರಾಮಚಂದ್ರಪ್ಪ, ಸಹಾಯಕ ಪ್ರಾಧ್ಯಾಪಕರಾದ ಡಾ. ಕೃಷ್ಣ ಹೊಂಬಳ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು.
ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಅಧ್ಯಕ್ಷತೆ ವಹಿಸುವರು. ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ.ಪಿ. ಪರಮಶಿವಯ್ಯ, ಉಪನ್ಯಾಸಕರಾದ ಆರ್. ಭಾಗ್ಯ, ಮಹೇಶ, ತೊಳಸಮ್ಮ ಕಾರ್ಯಾಗಾರದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದÉ.










Saturday, 22 April 2017

ಜೆ.ಎಸ್.ಎಸ್.ಮಹಿಳಾ ಕಾಲೇಜಿನಲ್ಲೆ . ದುಸ್ಥಿತಿಯತ್ತ ತಲುಪಿದ ನಾಮಕಾವಸ್ಥೆ ಸಿ.ಸಿ.ಕ್ಯಾಮೆರಾಗಳು.!.



ಜೆ.ಎಸ್.ಎಸ್.ಮಹಿಳಾ ಕಾಲೇಜಿನಲ್ಲೆ ನಾಮಕಾವಸ್ಥೆ ಸಿ.ಸಿ.ಕ್ಯಾಮೆರಾ.. ದುಸ್ಥಿತಿಯತ್ತ.!


ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ


ಚಾಮರಾಜನಗರ: ಮಹಿಳೆರು ಮತ್ತು ಮಕ್ಕಳ ಹಿತಾರಕ್ಷಣೆಗೆ ಸರ್ಕಾರ ಎಷ್ಟೆ ಕಂಕಣ ಬದ್ದರಾಗಿ ಎಷ್ಟೇ ಯೋಜನೆ ಜಾರಿ ತಂದರೂ ಕೆಲವು ಖಾಸಗೀ ಕಾಲೇಜುಗಳು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದೆ ಎಂದರೆ ತಪ್ಪಾಗಲಾರದು.
ಕಡ್ಡಾಯವಾಗಿ ಶಾಲಾ ಕಾಲೇಜುಗಳಲ್ಲಿ ಸಿ.ಸಿ.ಕ್ಯಾಮೆರಾ ಹಾಕಬೇಕೆಂದು ಹೇಳಿದರೂ ಯಾರ ಮಾತು ಕೇಳದೆ ಅಸಡ್ಡೆ ತೋರುತ್ತಿದೆ ಅಂತಹದರಲ್ಲಿ ಚಾಮರಾಜನಗರ ಬಹುತೇಕ ಕಾಲೇಜುಗಳಲ್ಲಿ ಅದರಲ್ಲೂ ದ್ವಿ.ಪಿ.ಯು ಪರೀಕ್ಷಾ ಅವದಿಯಲ್ಲಿ ಸಿ.ಸಿ.ಕ್ಯಾಮೆರಾ ಸುಸ್ಥಿತಿಯಲ್ಲಿ  ಇರಲಿಲ್ಲ ಎಂಬುದು ಇಲಾಖೆ ಸ್ಷಷ್ಟಪಡಿಸಿದೆ.
ಚಾ.ನಗರದ 16 ಪರೀಕ್ಷಾ ಕೇಂದ್ರಗಳ ಪೈಕಿ ಇದ್ದುದ್ದು ಕೇವಲ ನಾಲ್ಕೆ ಪ್ರಮುಖ ಕೇಂದ್ರಗಳು ಎಂದು ಮಾಹಿತಿ ಹಕ್ಕಿನಲ್ಲಿ ಈಗ ಮಾಹಿತಿ ಲಭ್ಯವಾಗಿದೆ.ಚಾಮರಾಜನಗರದ ಸೇವಾಭಾರತಿ ಕಾಲೇಜು, ಗುಂಡ್ಲುಪೇಟೆಯಕೆ.ಎಸ್.ಎನ್.ಪದವಿಪೂರ್ವ ಕಾಲೇಜು,ಕೊಳ್ಳೇಗಾಲದ ಲಯನ್ಸ್ ಹಾಗೂ ನಿಸರ್ಗ ಪದವಿಪೂರ್ವ ಕಾಲೇಜು ಬಿಟ್ಟರೆ ಇನ್ನು ಯಾವುದೇ ಕಾಲೇಜಿನಲ್ಲಿ ಸಿ.ಸಿ.ಕ್ಯಾಮೆರಾ ಇರಲಿಲ್ಲ ಎಂದು ಉಪನಿರ್ದೇಶಕರು ಸ್ಷಷ್ಟ ಪಡಿಸಿದ್ದಾರೆ.
ಚಾಮರಾಜನಗರದ ಜೆ.ಎಸ್.ಎಸ್.ಕಾಲೇಜಿನಲ್ಲಿ ಹಿಂದೆ ಉಪನ್ಯಾಸಕರ ಮೇಲೆ ಹಲ್ಲೆ ನಡೆದರೂ ಕ್ರಮ ಕೈಗೊಳ್ಳಲಿಲ್ಲ. ಉಗ್ರಪ್ಪ ಅವರಿಗೆ ದೂರು ನೀಡಿದಾಗ ಅಂದಿನ ಉಪನಿರ್ದೇಶಕ (ಇಂದು ಮೈಸೂರು) ಸರಿಯಾಗಿ ಎಂದು ಉಗ್ರಪ್ಪ ಅವರಿಗೆ ಕಣ್ಣಿಗೆ ಮಣ್ಣು ಎರಚಿದ್ದರು. ಈಗ ಸ್ಷಷ್ಟವಾಗಿ ಕೆಲವು ಪೋಷಕರು ಆರೋಪಿಸಿರುವಂತೆ ಪರೀಕ್ಷೆ ಕೆಂದ್ರಗಳಲ್ಲಿ ನಕಲು ನಡೆದಿರುವುದನ್ನು ಅಲ್ಲಗಳೆಯುವಂತಿಲ್ಲ ಎಂದರೆ ತಪ್ಪಾಗಲಾರದು.

 *******************************************************************************

ದ್ವಿ..ಪಿ.ಯು. ಪರೀಕ್ಷೆ : ಕೇಳಿದ್ದು ಅಂದು , ಆದರೆ ಕೊಟ್ಟಿದ್ದು ಇಂದು.!

                     ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ


ಚಾಮರಾಜನಗರ: ಪರೀಕ್ಷೆ ನಡೆಯುವಾಗ ಕೇಳಿದ್ದು ಮುಗಿದ ಮೇಲೆ ಕೊಟ್ಟಿದ್ದು ಇದೇನಿದು.? ಕಾಪಿನಾ ಅಂತ ಗಾಬರಿಯಾಗಬೇಡಿ, ಇದು  ಚಾಮರಾಜನಗರ ಉಪನಿರ್ದೇಶಶಕರ ಆಡಳಿತಕ್ಕೆ  ಹಿಡಿದ ಕೈಗನ್ನಡಿ ಎಂದರೆ ತಪ್ಪಾಗಲಾರದು.
ಇತ್ತೀಚೆಗಷ್ಟೇ ದ್ವೀ.ಪಿ.ಯು ಪರೀಕ್ಷೆ  ಸೋರಿಕೆ ಎಂಬ ಪದವನ್ನೆ ಕಾಣದೇ ಎಲ್ಲೆಡೆ ಯಶಸ್ವಿಯಾಗಿ ಪರೀಕ್ಷೆಗಳು ನಡೆದವು. ಆದರೆ ರಾಯುಚೂರಿನ ಕಾಲೇಜೊಂದರಲ್ಲಿ ಕೆಲವು ಉಪನ್ಯಾಸಕರ ಆಟೋಪಗಳಿ ಬಿಟ್ಟರೆ ಸದ್ದಿಲ್ಲದೇ ಯಶಶ್ವಿಯಾಗಿ ನಡೆದವು. ಚಾಮರಾಜನಗರ ಕೆಲವು ಕೇಂದ್ರದಲ್ಲಿ ಆಯಾ ವಿಷಯಗಳಿಗೆ ಸಂಬಂದಿಸಿದ ಉಪನ್ಯಾಸಕರು ಬರುವಂತಿಲ್ಲ ಎಂದ ಆದೇಶವಿದ್ದರೂ ಕೆಲವೆಡೆ ಬರುತ್ತಿದ್ದರು ಎಂಬ ಆರೋಪಗಳು ಕೆಳಿಬಂದಿದ್ದವು. ಇದರ ಮಾಹಿತಿ ಬೆನ್ನಟ್ಟಿದ್ದಾಗ ಗಂಟೆಗೊಂದು ಉತ್ತರ ನೀಡಿದ್ದರಿಂದ ಮಾಹಿತಿ ಹಕ್ಕು ಅರ್ಜಿದಾರ ಸಿ.ಸಿ.ಕ್ಯಾಮೆರಾ, ಉಪನ್ಯಾಸಕರ ಬಗ್ಗೆ ಪರೀಕ್ಷೆ ನಡೆಯುವಾಗ ಎಲ್ಲೆಲ್ಲಿ ಎಂದು ಮಾಹಿತಿ ಕೇಳಿದರು. ಆದರೆ ಇಲಾಖೆ ಪರೀಕ್ಷೆ ಮುಗಿದ ಮೇಲೆ ( ರೈಲು ಹೋದ ಮೇಲೆ ಟಿಕೇಟ್ ನೀಡಿದಂತೆ)  ಏಪ್ರಿಲ್ 12 ರಂದು ಮಾಹಿತಿ ನೀಡಿದ್ದಾರೆ.
ಇದೇ ನೋಡಿ ಬಹುಶಃ ಅಧಿಕಾರಿಗಳ ನಿಲ್ರ್ಯಕ್ಷ್ಯತೆಯೋ, ಎಲ್ಲಿ ತಪ್ಪು ಒಪ್ಪು ಸಿಗುವುದೋ ಎಂದು ಅಂದು ಮಾಹಿತಿ ನೀಡಿದೆ ಇಂದು ನೀಡಿದ್ದಾರೆ.

****************************************************************

224-ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ:ಸಿಬ್ಬಂದಿಯವರಿಗೆ ಜಿಲ್ಲಾ ವರಿಷ್ಠಾಧಿಕಾರಿಗಳು ಸದರಿಯವರ ಸೇವೆಯನ್ನು ಗುರುತಿಸಿ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ

224-ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ:ಸಿಬ್ಬಂದಿಯವರಿಗೆ ಜಿಲ್ಲಾ ವರಿಷ್ಠಾಧಿಕಾರಿಗಳು ಸದರಿಯವರ ಸೇವೆಯನ್ನು ಗುರುತಿಸಿ ನಗದು ಬಹುಮಾನ ಮತ್ತು  ಪ್ರಶಂಸನಾ ಪತ್ರ


ಗುಂಡ್ಲುಪೇಟೆ: ದಿನಾಂಕ: 09.04.2017 ರಂದು ನಡೆದ 224-ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿದ್ದ ಕಾರ್ಯವು ಪೊಲೀಸ್ ಇಲಾಖೆಗೆ ಸವಾಲಾಗಿದ್ದು, ಉಪ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ನಡುವಿನ ಸ್ಪರ್ಧೆಯು ಬಹಳ ಗಂಭೀರತೆಯಿಂದ ಕೂಡಿದ್ದಲ್ಲದೆ, ಎರಡು ರಾಜಕೀಯ ಪಕ್ಷಗಳ ನಡುವಿನ ವೈಷಮ್ಯದಿಂದಾಗಿ ಅಲ್ಲಲ್ಲಿ ಗಲಾಟೆ ಘರ್ಷಣೆಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗಿ ಸದರಿ ಕ್ಷೇತ್ರದಲ್ಲಿ ಬಿಗುವಿನ ವಾತಾವರಣವಿದ್ದ ಹಿನ್ನಲೆಯಲ್ಲಿ ಹಾಗೂ ಚುನಾವಣಾ ಪ್ರಚಾರದ ನಿಮಿತ್ತ ವಿವಿಧ ರಾಜಕೀಯ ಮುಖಂಡರುಗಳು ಹೆಚ್ಚು ಹೆಚ್ಚು ಬಾರಿ ಸರಣಿಯಂತೆ ಕ್ಷೇತ್ರಕ್ಕೆ ಮತಯಾಚಿಸುವ ಸಲುವಾಗಿ ಭೇಟಿ ನೀಡಿದ್ದಂತಹ ಸಂದರ್ಭಗಳಲ್ಲಿ ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತು ವ್ಯವಸ್ಥೆಯನ್ನು ಏರ್ಪಡಿಸಿ, ಶಾಂತ ರೀತಿಯ ಚುನಾವಣೆ ನಡೆಸಬೇಕಾಗಿರುವುದು ಪೊಲೀಸ್ ಇಲಾಖೆಗೆ ಸವಾಲಾಗಿದ್ದು ಸದರಿ ಉಪಚುನಾವಣಾ ಕರ್ತವ್ಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪ್ರಜ್ಞೆ, ಕರ್ತವ್ಯ ನಿಷ್ಠೆ, ವೈಯುಕ್ತಿಕ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ ಚುನಾವಣೆಯು ಶಾಂತಿಯುತವಾಗಿ ಮುಕ್ತಾಯಗೊಂಡಿರುತ್ತದೆ. ಸದರಿ ಉಪ-ಚುನಾವಣೆಯು ಯಶಸ್ವಿಯಾಗಲು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಕುಲ್‍ದೀಪ್ ಕುಮಾರ್ ಆರ್ ಜೈನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಎಂ.ಎಸ್ ಗೀತ , ಚಾ.ನಗರ ಉಪವಿಭಾಗದ ಡಿವೈಎಸ್‍ಪಿ ಶ್ರೀ ಎಸ್.ಇ. ಗಂಗಾಧರಸ್ವಾಮಿ ಹಾಗೂ ಅಧಿಕಾರಿ ಸಿಬ್ಬಂದಿಗಳು ಕಾರಣರಾಗಿರುತ್ತಾರೆ. ಆದ್ದರಿಂದ 04-ಸಿಪಿಐ, 02-ಆರ್‍ಪಿಐ, 01-ಪಿಐ (ನಿಸ್ತಂತು), 03-ಪಿಎಸ್‍ಐ 08-ಎಎಸ್‍ಐ, 10-ಸಿಹೆಚ್‍ಸಿ/ಎಹೆಚ್‍ಸಿ, 14-ಸಿಪಿಸಿ/ಎಪಿಸಿ ಒಟ್ಟು 45 ಜನ ಅಧಿಕಾರಿ ಸಿಬ್ಬಂದಿಯವರಿಗೆ ಜಿಲ್ಲಾ ವರಿಷ್ಠಾಧಿಕಾರಿಗಳು ಸದರಿಯವರ ಸೇವೆಯನ್ನು ಗುರುತಿಸಿ ನಗದು ಬಹುಮಾನ ಮತ್ತು  ಪ್ರಶಂಸನಾ ಪತ್ರವನ್ನು ನೀಡಿರುತ್ತಾರೆ.  

22-04-2017 ಇನ್ನು ಎರಡು ತಿಂಗಳಲ್ಲಿ ಸಿಂಥೆಟಿಕ್ ಟ್ರಾಕ್ ಸಿದ್ದ: ಆರ್.ಧ್ರುವನಾರಾಯಣ ,ಲೋಕಸಭಾ ಸದಸ್ಯರಿಂದ ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಸಿದ್ದತೆ ಪರಿಶೀಲನೆ,ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ : ಆಕ್ಷೇಪಣೆ, ಸಲಹೆ ಸಲ್ಲಿಕೆಗೆ ಅವಕಾಶ

 ಚಾಮರಾಜನಗರ, ಏ. 22 - ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಗತಿಯಲ್ಲಿರುವ ಸಿಂಥೆಟಿಕ್ ಟ್ರಾಕ್ ಕಾಮಗಾರಿಯು ಇನ್ನೆರಡು ತಿಂಗಳಲ್ಲಿ ಪೂರ್ಣಗೊಂಡು ಕ್ರೀಡಾ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ತಿಳಿಸಿದರು. 





ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಇಂದು ಭೇಟಿ ನೀಡಿ ಸಿಂಥೆಟಿಕ್ ಟ್ರಾಕ್ ಕಾಮಗಾರಿಯನ್ನು ಕೇಂದ್ರ ತಂಡದ ಅಧಿಕಾರಿಗಳೊಂದಿಗೆ ಪರಿಶೀಲಿಸಿದ ಬಳಿಕ ಆರ್.ಧ್ರುವನಾರಾಯಣ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು.
ಒಟ್ಟು 5.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಂಥೆಟಿಕ್ ಟ್ರಾಕ್ ಕಾಮಗಾರಿಯು ಈಗಾಗಲೇ ಶೇ.56 ರಷ್ಟು ಪೂರ್ಣಗೊಂಡಿದೆ. ಇನ್ನು ಎರಡು ತಿಂಗಳಲ್ಲಿ ಉಳಿದ ಕಾಮಗಾರಿ ಪೂರ್ಣವಾಗಲಿದೆ. ಇದರಿಂದ ಹನ್ನೆರಡು ಬಗೆಯ ಕ್ರೀಡೆಗಳಿಗೆ ಸಿಂಥೆಟಿಕ್ ಟ್ರಾಕ್ ಅನುಕೂಲ ಕಲ್ಪಿಸಲಿದೆ ಎಂದರು.
ಕಾಮಗಾರಿಗೆ ಈಗಾಗಲೇ 3.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕಾಮಗಾರಿಗೆ 2.25 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಸಿಂಥೆಟಿಕ್ ಅಳವಡಿಕೆ ಕಾರ್ಯ ನಡೆಯಬೇಕಿದ್ದು, ಇದಕ್ಕೆ ಅಗತ್ಯವಿರುವ ಸಾಮಾಗ್ರಿಗಳನ್ನು ವಿದೇಶದಿಂದ ತರಿಸಲಾಗಿದೆ. ಕಾಮಗಾರಿಯು ಭರದಿಂದ ಸಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಸಿಂಥೆಟಿಕ್ ಟ್ರಾಕ್ ಪೂರ್ಣಗೊಂಡ ಬಳಿಕ 100 ಮೀ. ಓಟ, ಲಾಂಗ್ ಜಂಪ್, ಹೈ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, ಪೋಲ್ ವಾಲ್ಟ್ ಸೇರಿದಂತೆ ವಿವಿಧ ಬಗೆಯ ಆಟೋಟಗಳನ್ನು ಆಯೋಜಿಸಲು ಅನುಕೂಲವಾಗಲಿದೆ. ಸಿಂಥೆಟಿಕ್ ಟ್ರಾಕ್ ಪೂರ್ಣಗೊಂಡ ಬಳಿಕ ಉನ್ನತ ಮಟ್ಟದ ಕ್ರೀಡಾಕೂಟಗಳು ನಡೆಯಲು ಸಹಕಾರಿಯಾಗುತ್ತದೆ ಎಂದರು.
ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣವನ್ನು ಮಾದರಿ ಕ್ರೀಡಾಂಗಣವನ್ನಾಗಿಸಲು ಮುಖ್ಯ ಮಂತ್ರಿಯವರು ನಗರ ಅಭಿವೃದ್ದಿಗೆ ಬಿಡುಗಡೆ ಮಾಡಿರುವ ವಿಶೇಷ ಅನುದಾನದಲ್ಲಿ 7 ಕೋಟಿ ರೂ.ಗಳನ್ನು ವಿನಿಯೋಗಿಸಲಾಗುತ್ತದೆ. ಇದರಿಂದ ಕ್ರೀಡಾಂಗಣಕ್ಕೆ ಅಗತ್ಯವಿರುವ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಧ್ರುವನಾರಾಯಣ ತಿಳಿಸಿದರು.
ಬಳಿಕ ಮಾದಪುರ ಬಳಿ ನಿರ್ಮಾಣವಾಗುತ್ತಿರುವ ಕೇಂದ್ರೀಯ ವಿದ್ಯಾಲಯ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದ ನಂತರ ಮಾತನಾಡಿದ ಧ್ರುವನಾರಾಯಣ ಜುಲೈ ತಿಂಗಳ ಅಂತ್ಯದ ವೇಳೆಗೆ ಕೇಂದ್ರೀಯ ವಿದ್ಯಾಲಯ ಕಟ್ಟಡ ಕಾಮಗಾರಿ ಪೂರ್ಣವಾಗಲಿದೆ ಎಂದರು.
ಒಟ್ಟು 7.26 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕೆಲಸವು ಶೇ.72 ರಷ್ಟು ಪೂರ್ಣವಾಗಿದೆ. ಕಟ್ಟಡದಲ್ಲಿ 24 ತರಗತಿಗಳು, 7 ಪ್ರಯೋಗಾಲಯ ಹಾಗೂ ಭೋದಕ, ಭೋದಕೇತರ ಸಿಬ್ಬಂದಿಗೆ ವಸತಿ ಗೃಹ ಸಹ ನಿರ್ಮಾಣವಾಗುತ್ತಿದೆ ಎಂದರು.
ಈ ಶೈಕ್ಷಣಿಕ ಸಾಲಿನಲ್ಲಿಯೇ ನೂತನ ಕಟ್ಟಡಕ್ಕೆ ಕೇಂದ್ರೀಯ ವಿದ್ಯಾಲಯ ಸ್ಥಳಾಂತರಗೊಳ್ಳಲಿದೆ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾಲಯಕ್ಕೆ ನೇಮಕಾತಿ ಪ್ರಕ್ರಿಯೆ ರಾಷ್ಟ್ರಮಟ್ಟದಲ್ಲಿ ನಡೆಯಲಿದೆ. ಒಟ್ಟು 6500 ತರಬೇತಿ ಪಡೆದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವೇಳೆ ನಗರದ ಕೇಂದ್ರೀಯ ವಿದ್ಯಾಲಯಕ್ಕೂ ಖಾಯಂ ಶಿಕ್ಷಕರು ನೇಮಕವಾಗಲಿದ್ದಾರೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನಸಂಖ್ಯೆ ಆಧಾರದ ಮೇಲೆ ಜಿಲ್ಲೆಗೆ ಮತ್ತೊಂದು ನವೋದಯ ವಿದ್ಯಾಲಯ ಮಂಜೂರಾಗಲಿದೆ. ಹನೂರು ಭಾಗಕ್ಕೆ ನವೋದಯ ವಿದ್ಯಾಲಯ ಬರಲಿದ್ದು, ಇದರಿಂದ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದು ಧ್ರುವನಾರಾಯಣ ಇದೇ ವೇಳೆ ತಿಳಿಸಿದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಎಸ್.ಬಸವರಾಜು, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ.ರವಿಕುಮಾರ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಉಪಾಧ್ಯಕ್ಷರಾದ ಪಿ.ಎನ್.ದಯಾನಿಧಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ಇತರರು ಹಾಜರಿದ್ದರು.

ಲೋಕಸಭಾ ಸದಸ್ಯರಿಂದ ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಸಿದ್ದತೆ ಪರಿಶೀಲನೆ


ಚಾಮರಾಜನಗರ, ಏ. 22 - ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಇದೇ ತಿಂಗಳ 28 ರಂದು ನಿಗಧಿಯಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗೆ ಕೈಗೊಳ್ಳಬೇಕಿರುವ ಪೂರ್ವ ಸಿದ್ದತೆಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಲೋಕಸಭಾ ಸದಸ್ಯರಾದ ಆರ್.ಧ್ರುವನಾರಾಯಣ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪೂರ್ವಸಿದ್ದತೆ ಪರಿಶೀಲನೆಗಾಗಿ ಕರೆಯಲಾಗಿದ್ದ, ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಿಗಧಿಯಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಸಿದ್ದತೆಗಾಗಿ ಈಗಾಗಲೇ ರಚಿಸಲಾಗಿರುವ ವಿವಿಧ ಸಮಿತಿಯ ಕಾರ್ಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಧ್ರುವನಾರಾಯಣ ಅವರು ಶೀಘ್ರವಾಗಿ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಮೆರವಣಿಗೆ ಸಾಗುವ ಮಾರ್ಗಗಳನ್ನು ಅಚ್ಚುಕಟ್ಟುಗೊಳಿಸಬೇಕು. ನೀರು ಸಿಂಪಡಿಸಿ ಮಾರ್ಗವನ್ನು ಯಾವುದೇ ಆಡಚಣೆ ಇಲ್ಲದಂತೆ ಸಜ್ಜುಗೊಳಿಸಬೇಕು. ಅಗತ್ಯ ಕಾಮಗಾರಿಯನ್ನು ಆದಷ್ಟು ತುರ್ತಾಗಿ ಮುಗಿಸಬೇಕು ಎಂದರು.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ತಲುಪಿಸುವ ವ್ಯವಸ್ಥೆಯಾಗಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿ ಆಹ್ವಾನ ಪತ್ರಿಕೆ ವಿತರಣೆಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಕಾಲದಲ್ಲಿ ವಹಿಸಲಾಗಿರುವ ಕೆಲಸ ಪೂರ್ಣವಾಗುವಂತೆ ನೋಡಿಕೊಳ್ಳಬೇಕು ಎಂದರು.
  ವಿಚಾರ ಸಂಕಿರಣ ಕಾರ್ಯಕ್ರಮವನ್ನು ಸಹ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಮಿತಿಯು ಕಾರ್ಯ ನಿರ್ವಹಿಸಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಹೂವಿನ ಅಲಂಕಾರ, ದೀಪಾಲಂಕಾರ ಸೇರಿದಂತೆ ಇತರೆ ಎಲ್ಲಾ ಸಿದ್ದತೆಯನ್ನು ಅಧಿಕಾರಿಗಳು ನಿರ್ವಹಿಸಬೇಕು. ಆದಷ್ಟು ಶೀಘ್ರವಾಗಿ ಜಯಂತಿ ಆಚರಣೆಗೆ ಅವಶ್ಯ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಡಿವೈಎಸ್ಪಿ ಗಂಗಾಧರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಹೆಚ್.ಸತೀಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.


ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ

ಚಾಮರಾಜನಗರ, ಏ.23: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2017-18ನೇ ಸಾಲಿಗೆ ವಿವಿಧ ಸೌಲಭ್ಯ ನೀಡಲಿದ್ದು, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ವಯಂ ಉದ್ಯೋಗ ಯೋಜನೆಯಡಿ(ಒಂದು ಲಕ್ಷ ರೂ. ಘಟಕಗಳು), ಹೈನುಗಾರಿಕೆ(ಬ್ಯಾಂಕ್‍ಗಳ ಸಹಯೋಗ), ಇತರೆ ಉದ್ದೇಶಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ನೇರ ಸಾಲ ಯೋಜನಯಡಿ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆಗೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ(ಒಂದು ಲಕ್ಷ ರೂ. ಮೇಲ್ಪಟ್ಟ ಘಟಕಗಳು) ವೃತ್ತಿ ಕೌಶಲ್ಯ, ಟೂರಿಸ್ಟ್ ಟ್ಯಾಕ್ಸಿ ಇತರೆ ಉದ್ದೇಶಗಳಿಗೆ ಆರ್ಥಿಕ ನೆರವು ಲಭಿಸಲಿದೆ. ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ(ಕಿರು ಸಾಲ), ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ, ಏತನೀರಾವರಿ ಯೋಜನೆ ಸೌಲಭ್ಯ ಪಡೆಯಬಹುದಾಗಿದೆ.  ಅರ್ಜಿಯನ್ನು ಏಪ್ರಿಲ್ 24ರಿಂದ ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಅಥವಾ ಆಯಾಯ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಭೇಟಿ ಮಾಡಿ  ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಯೊಂದಿಗೆ ಮೇ.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಚಿಟಿಚಿಣಚಿಞಚಿ.gov.iಟಿ/ಞmvsಜಜ  ನೋಡಬಹುದು. ಅಲ್ಲದೆ ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದ ಆವರಣದಲ್ಲಿರುವ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಿ(ದೂ.ಸಂ. 08226-223856) ಪಡೆಯುವಂತೆ ಪ್ರಕಟಣೆ ತಿಳಿಸಿದೆ.


ಏಪ್ರಿಲ್ 23 ರಂದು ನಗರದಲ್ಲಿ ವಿಶ್ವ ಪುಸ್ತಕ ದಿನಾಚರಣೆ, ಭೀಮಯಾನ ಕವಿಗೋಷ್ಠಿ

ಚಾಮರಾಜನಗರ, ಏ. 22 :- ಕನ್ನಡ ಪುಸ್ತಕ ಪ್ರಾಧಿಕಾರ, ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ, ರಂಗವಾಹಿನಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಹಾಗೂ ಭೀಮಯಾನ ಕವಿಗೋಷ್ಠಿ ಏಪ್ರಿಲ್ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಥದ ಬೀದಿಯಲ್ಲಿರುವ ಸಂಸ ಸಭಾಂಗಣದಲ್ಲಿ ನಡೆಯಲಿದೆ.
ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಬಂಜಗೆರೆ ಜಯಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸುವರು, ರಂಗವಾಹಿನಿ ಸಂಸ್ಥೆಯ ಅಧ್ಯಕ್ಷರಾದ ಸಿ.ಎಂ.ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸುವರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಬಸವರಾಜು ಆಶಯ ನುಡಿಗಳನ್ನಾಡುವರು.
ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ, ನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾದ್ಯಾಪಕರಾದ ಎಂ.ಎಸ್.ಬಸವಣ್ಣ ಮುಖ್ಯ ಭಾಷಣ ಮಾಡುವರು. ಯುವ ಕವಿಗೋಷ್ಠಿಯಲ್ಲಿ ಹೊಬ ರಘೋತ್ತಮ ಆಶಯ ನುಡಿಗಳನ್ನಾಡುವರು. ನಾಗೇಶ್ ಸೋಸ್ಲೆ ಅಧ್ಯಕ್ಷತೆ ವಹಿಸುವರು.
ಕೆಂಪನಪುರ ಶಿವಕುಮಾರ್, ಗುಂಪು ದೇವರಾಜ್, ಸಿ.ಎಸ್.ಮಂಜುಳ, ಇರಸವಾಡಿ ಮಹೇಶ್, ಸುಭಾಷ್ ಮಾಡ್ರಳ್ಳಿ, ಗುರುಲಿಂಗಮ್ಮ, ಕೆಸ್ತೂರು ಮಂಜುನಾಥ್, ಸುಂದರ್ ಕಲಿವೀರ, ಪದ್ಮಾಕ್ಷಿ, ಕಮರವಾಡಿ ಮಹದೇವಸ್ವಾಮಿ, ಅಂಬಳೆ ಮಹದೇವಸ್ವಾಮಿ, ರಾಧ ಗುರುರಾಜ್, ಸಿ.ರಾಜೇಂದ್ರ, ರಂಗಸ್ವಾಮಿ ಗಣಗನೂರು, ಕೆ.ಅನುರಾಧ ಸಿಂಗನಲ್ಲೂರು, ಅರಳಿಪುರ ರಾಜೇಂದ್ರ ಪ್ರಸಾದ್, ಶಂಕರ್ ಅಂಕನಶೆಟ್ಟಿಪುರ, ಮಂಜುಳ ನಾಗರಾಜ್, ಕಾಳಿಂಗಸ್ವಾಮಿ ಸಿದ್ದಾರ್ಥ, ಗೌಡಹಳ್ಳಿ ಮಹೇಶ್, ವೆಂಕಟೇಶ್ ಬಾಬು, ಮಹೇಶ್ ಚಂದ್ರಪ್ರಿಯ, ರವಿತೇಜ, ಚಾ. ಶ್ರೀ ಜಗದೀಶ್, ಗೂಚಿ ರಮೇಶ್, ಟಿ.ಕೆ.ರಂಗಯ್ಯ, ಚನ್ನರಾಜ ದಾನವ ಕವಿಗೋಷ್ಠಿಯಲ್ಲಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.

ಏ. 24ರಂದು ಶ್ರೀ ಭಗೀರಥ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ

ಚಾಮರಾಜನಗರ, ಏ. 22 :- ಜಿಲ್ಲಾಡಳಿತದ ವತಿಯಿಂದ ಶ್ರೀ ಭಗೀರಥ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯ, ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಅಗತ್ಯ ಸಲಹೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ : ಆಕ್ಷೇಪಣೆ, ಸಲಹೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ, ಏ. 22 :- ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್‍ಗಳ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಏಪ್ರಿಲ್ 22ರಂದು ಹೊರಡಿಸಿರುವ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆ ಸಲಹೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಕರಡು ಅಧಿಸೂಚನೆ ಪ್ರತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇÀಶಕರ ಕಚೇರಿ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಕಚೇರಿ, ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳು ಹಾಗೂ ಆಯಾ ತಾಲೂಕು ತಹಸೀಲ್ದಾರ್ ಕಚೇರಿಗಳಲ್ಲಿ ಸಾರ್ವಜನಿಕರ ತಿಳಿವಳಿಕೆಗಾಗಿ ಪ್ರಕಟಿಸಲಾಗಿದೆ.
ಈ ಕರಡು ಅಧಿಸೂಚನೆಯಿಂದ ಬಾಧಿತರಾಗಬಹುದಾದ ಎಲ್ಲ ವ್ಯಕ್ತಿಗಳು, ನಾಗರಿಕರು ಲಿಖಿತ ಆಕ್ಷೇಪಣೆ ಅಥವಾ ಸಲಹೆಗಳನ್ನು ಸೂಕ್ತ ದಾಖಲಾತಿ ಹಾಗೂ ಸಕಾರಣದೊಂದಿಗೆ ಲಿಖಿತ ರೂಪದಲ್ಲಿ ಕರಡು ಅಧಿಸೂಚನೆ ದಿನಾಂಕದಿಂದ 15 ದಿನಗಳ ಒಳಗಾಗಿ ಅಂದರೆ ಮೇ 6ರೊಳಗೆ ನೇರವಾಗಿ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದ್ದಾರೆ.























Friday, 21 April 2017

21-04-20174 ಎಸ್.ಎಸ್.ಎಲ್.ಸಿ ಪರೀಕ್ಷೆ ಮೌಲ್ಯಮಾಪನಾ ಕಾರ್ಯ: ನಿಷೇಧಾಜ್ಞೆ

ಎಸ್.ಎಸ್.ಎಲ್.ಸಿ ಪರೀಕ್ಷೆ ಮೌಲ್ಯಮಾಪನಾ ಕಾರ್ಯ: ನಿಷೇಧಾಜ್ಞೆ


     ಚಾಮರಾಜನಗರ, ಏ. 21 - 2017ನೇ ಸಾಲಿನ ಎಸ್.ಎಸ್.ಎಲ್.ಸಿ ಮೌಲ್ಯಮಾಪನ ಕಾರ್ಯವು ಏಪ್ರಿಲ್ 20ರಿಂದ ಚಾಮರಾಜನಗರ ಪಟ್ಟಣದ 6 ಕೇಂದ್ರಗಳಲ್ಲಿ ನಡೆಯಲಿದ್ದು, ಮೌಲ್ಯಮಾಪನ ಕಾರ್ಯವು ಸುಗಮವಾಗಿ ಶಾಂತಿ, ಸುವ್ಯವಸ್ಥೆ ಹಾಗೂ ಪಾರದರ್ಶಕತೆಯಿಂದ ನ್ಯಾಯೋಚಿತವಾಗಿ ನಡೆಯಲು ಹಾಗೂ ಯಾವುದೇ ರೀತಿಯ ಶಾಂತಿ ಭಂಗ ಉಂಟಾಗದಂತೆ ಮೌಲ್ಯಮಾಪನ ಕೇಂದ್ರಗಳಿರುವÀ ಶಾಲಾ, ಕಾಲೇಜು ಕಟ್ಟಡಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಸಾರ್ವಜನಿಕ ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ.
     ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು(ಕನ್ನಡ), ಸರ್ಕಾರಿ ಬಾಲಕ ಪದವಿ ಪೂರ್ವ ಕಾಲೇಜು(ಇಂಗ್ಲೀಷ್), ಸಂತ ಪೌಲರ ಪ್ರೌಢಶಾಲೆ(ಹಿಂದಿ), ಸಿ.ಆರ್. ಬಾಲರ ಪಟ್ಟಣ ಪ್ರೌಢಶಾಲೆ(ಗಣಿತ), ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ(ವಿಜ್ಞಾನ) ಮತ್ತು ಸಂತ ಜೋಸೆಫರ ಪ್ರೌಢÀಶಾಲೆ(ಸಮಾಜವಿಜ್ಞಾನ) ಗಳಲ್ಲಿ ಮೌಲ್ಯಮಾಪನ ಕಾರ್ಯ ನಡೆಯಲಿದೆ.
     ಈ ನಿಷೇಧಾಜ್ಞೆಯು ಎಸ್.ಎಸ್.ಎಲ್.ಸಿ. ಮೌಲ್ಯಮಾಪನಾ ಕಾರ್ಯ/ಕೆಲಸಕ್ಕೆ ನಿಯೋಜಿತರಾದ ಶಿಕ್ಷಕರು ಹಾಗೂ ಸಿಬ್ದಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.


ಏ. 22ರಂದು ನೇರ ಫೋನ್-ಇನ್ ಕಾರ್ಯಕ್ರಮ

     ಚಾಮರಾಜನಗರ, ಏ. 21 :- ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಏಪ್ರಿಲ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
     ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಅಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ದೂರವಾಣಿ ಸಂಖ್ಯೆ: 08226-224888 ಕರೆ ಮಾಡಿ ತಮ್ಮ ಸಮಸ್ಯೆ, ಕುಂದುಕೊರತೆಗಳನ್ನು ತಿಳಿಸಿ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಏಪ್ರಿಲ್ 24ರಿಂದ ಮೇ 15ರವರೆಗೆ ಬೇಸಿಗೆ ತರಬೇತಿ ಶಿಬಿರ

     ಚಾಮರಾಜನಗರ, ಏ. 21 :- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ 2016-17ನೇ ಸಾಲಿನ ಬೇಸಿಗೆ ತರಬೇತಿ ಶಿಬಿರವನ್ನು ಏಪ್ರಿಲ್ 24ರಿಂದ ಮೇ 15ರ ವರೆಗೆ ಸಂಜೆ 5 ಗಂಟೆಗೆ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಆಯೋಜಿಸಲಾಗಿದೆ.
     ಚಾಮರಾಜನಗರ ತಾಲೂಕಿನ ಬೇಸಿಗೆ ತರಬೇತಿ ಶಿಬಿರವು ಡಾ. ಬಿಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಮಹದೇಶ್ವರ ಪ್ರಥಮ ದರ್eೀ ಕಾಲೇಜಿನ ಪಕ್ಕದಲ್ಲಿರುವ ತಾಲೂಕು ಕ್ರೀಡಾಂಗಣ, ಗುಂಡ್ಲುಪೇಟೆ ತಾಲೂಕಿನಲ್ಲಿ ಡಿ. ದೇವರಾಜ ಅರಸು ತಾಲೂಕು ಕ್ರೀಡಾಂಗಣದಲ್ಲಿ ಮತ್ತು ಯಳಂದೂರು ತಾಲೂಕಿನ ಶಿಬಿರವು ಅಗರ ಗ್ರಾಮದ ಟಿ.ಎಸ್. ಸುಬ್ಬಣ್ಣ ಸಾರ್ವಜನಿಕ ಪ್ರೌಢಶಾಲೆಯಲ್ಲಿ ನಡೆಯಲಿದೆ.
     ಚಾಮರಾಜನಗರ ತಾಲೂಕಿನ ಬೇಸಿಗೆ ತರಬೇತಿ ಶಿಬಿರಕ್ಕೆ ಪಿ. ಮಹದೇವಯ್ಯ ಮೊ: 7760841489, ಯಳಂದೂರು ತಾಲೂಕಿಗೆ ಕುಮಾರ್ ಮೊ: 9886526252, ಕೊಳ್ಳೇಗಾಲ ತಾಲೂಕಿಗೆ ಜಯರಾಜು ಮೊ: 9739826369 ಹಾಗೂ ರವಿಕುಮಾರ್ ಮೊ: 9844600492 ಮತ್ತು ಗುಂಡ್ಲುಪೇಟೆ ತಾಲೂಕಿಗೆ ಬಿ.ಕೆ. ಗೋಪಾಲ್ ಮೊ: 9945615695 ಹಾಗೂ ಸ್ವಾಮಿ ಮೊ: 9741821583 ಅವರನ್ನು ತರಬೇತುದಾರರಾಗಿ ನಿಯೊಜಿಸಲಾಗಿದೆ.
     ಬೇಸಿಗೆ ತರಬೇತಿ ಶಿಬಿರದಲ್ಲಿ ವಾಲಿಬಾಲ್, ಫುಟ್‍ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ. ಆಯಾ ತಾಲೂಕಿನ ಯುವಕ, ಯುವತಿಯರು ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಭಾಗವಹಿಸುವ ಸ್ಪರ್ಧಾಳುಗಳಿಗೆ ದಿನಭತ್ಯೆ ಹಾಗೂ ಪ್ರಯಾಣಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ದೂರವಾಣಿ ಸಂಖ್ಯೆ: 08226-224932 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

    ಏ. 22ರಂದು ವಿಶ್ವ ಭೂ ದಿನಾಚರಣೆ ಕುರಿತ ಕಾನೂನು ಅರಿವು ಕಾರ್ಯಕ್ರಮ

      ಚಾಮರಾಜನಗರ, ಏ. 21 :-  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ವಿಶ್ವ ಭೂ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
      ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅರ್. ವಿರೂಪಾಕ್ಷ ಅಧ್ಯಕ್ಷತೆ ವಹಿಸುವರು.
     ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ಯವರಾದ ಎಲ್.ಜಿ. ಭವಾನಿ, ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ಯವರಾದ ವಿ. ದೀಪಾ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಂ.ಎಫ್.ಸಿ ಯವರಾದ ಸಂದೇಶ್ ವಿ. ಭಂಡಾರಿ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು
   


   

Thursday, 20 April 2017

20-04-2017 ಜಗಜ್ಯೋತಿ ಬಸವೇಶ್ವರರ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ,ಏ. 27ರಿಂದ ಏರ್ ಮನ್ ಹುದ್ದೆಗಳಿಗೆ ನೇಮಕಾತಿ ರ್ಯಾಲಿ,

ಜಗಜ್ಯೋತಿ ಬಸವೇಶ್ವರರ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ

______________________________________-

* ಅರಿಕುಠಾರ ವಾರ್ತೆ* 
ಎಸ್.ವೀರಭದ್ರಸ್ವಾಮಿ----9480030980, 
__________________________________
      ಚಾಮರಾಜನಗರ, ಏ. 20 :- ಜಿಲ್ಲಾಡಳಿತ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಹಕಾರದೊಂದಿಗೆ ಜಗಜ್ಯೋತಿ ಬಸವೇಶ್ವರ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 29ರಂದು ನಗರದಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
     ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬಸವೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
     ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ಕಳೆದ ಬಾರಿಯೂ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಎಲ್ಲರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯೂ ಬಸವೇಶ್ವರರ ಜನ್ಮದಿನ ಆಚರಣೆ ಕಾರ್ಯಕ್ರಮಕ್ಕೆ  ಅಗತ್ಯ ಸಲಹೆ ಅಭಿಪ್ರಾಯ ನೀಡುವ ಮೂಲಕ ಯಶಸ್ವಿಯಾಗಿ ನೆರವೇರಲು ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಹಾಜರಿದ್ದ ಮುಖಂಡರು, ಪ್ರತಿನಿಧಿಗಳು ಈ ಹಿಂದಿನ ವರ್ಷ ಬಸವಜಯಂತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಬಾರಿ ಮತ್ತಷ್ಟು ವಿಜೃಂಭಣೆಯಿಂದ ಆಚರಿಸುವಂತಾಗಬೇಕು. ಬಸವೇಶ್ವರರ ಭಾವಚಿತ್ರ ಮೆರವಣಿಗೆಗೆ ಹೆಚ್ಚು ಕಲಾತಂಡಗಳನ್ನು ನಿಯೋಜಿಸಬೇಕು. ಮೆರವಣಿಗೆ ಸಾಗುವ ಮಾರ್ಗಗಳನ್ನು ಧೂಳಿನಿಂದ ಮುಕ್ತಗೊಳಿಸಿ ನೀರು ಸಿಂಪಡಿಸಬೇಕು. ಆಹ್ವಾನ ಪತ್ರಿಕೆಗಳನ್ನು ಹೆಚ್ಚು ಸಂಖ್ಯೆಯಲ್ಲಿ ಮುದ್ರಿಸಿ ತ್ವರಿತವಾಗಿ ತಲುಪಿಸಬೇಕು ಎಂದರು.
ಜಿಲ್ಲಾಡಳಿತದಿಂದ ನಡೆಸಲಾಗುವ ಕಾರ್ಯಕ್ರಮಕ್ಕೆ ಪೂರ್ವಯೋಜಿತವಾಗಿ ಸಿದ್ಧತೆ ಕೈಗೊಳ್ಳಬೇಕು. ಎಲ್ಲರ ಅಭಿಪ್ರಾಯ ಪಡೆದು ಯಾವುದೇ ಅಭಾಸಕ್ಕೆ ಕಾರಣವಾಗದಂತೆ ಕಾರ್ಯಕ್ರಮ ರೂಪಿಸಬೇಕು. ಕಾರ್ಯಕ್ರಮದ ಅಂತಿಮ ಘಟ್ಟದಲ್ಲಿ ಲೋಪ ಆಗದಂತೆ ಮುಂಜಾಗರೂಕತೆಯಿಂದ ಎಲ್ಲ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಧಿಕಾರಿಗಳು ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ಸೂಚಿಸಬೇಕೆಂದು ಮುಖಂಡರು ಸಲಹೆ ಮಾಡಿದರು.
ಎಲ್ಲರ ಅಭಿಪ್ರಾಯ ಸಲಹೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಬಸವೇಶ್ವರರ ತತ್ವ ಆದರ್ಶಗಳು ವಿಶ್ವವ್ಯಾಪಿ ಅನುಕರಣೆಗೆ ಅರ್ಹವಾಗಿವೆ. ಬಸವೇಶ್ವರರ ಜಯಂತಿಯನ್ನು ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ಆಚರಿಸಲಾಗುವುದು. ಈ ಹಿಂದೆ ಕಾರ್ಯಕ್ರಮ ನಿರ್ವಹಣೆಗಾಗಿ ಸಮಿತಿಯನ್ನು ರಚಿಸಿದ್ದು ಅಗತ್ಯ ಮಾರ್ಪಾಡುಗಳಿದ್ದರೆ ಆ ಪ್ರಕಾರವೇ ಮುಂದುವರಿಯಲಾಗುವುದು ಎಂದರು.
ಎಂದಿನಂತೆ ಅಂದು ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿಂದ ಬಸವೇಶ್ವರ ಅವರ ಭಾವಚಿತ್ರವನ್ನು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಕಲಾತಂಡಗಳನ್ನು ನಿಯೋಜಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ವೇದಿಕೆ ಕಾರ್ಯಕ್ರಮವನ್ನು ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಿಗದಿ ಮಾಡಲಾಗುತ್ತದೆ. ಅಧಿಕಾರಿ ಹಾಗೂ ಮುಖಂಡರನ್ನು ಒಳಗೊಂಡ ಸಮಿತಿಯು ಚರ್ಚಿಸಿ ಕಾರ್ಯಕ್ರಮಕ್ಕೆ ಪೂರಕವಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗಲು ಸೂಚನೆ ನೀಡಲಾಗುವುದು ಎಂದರು.
ಶಿಷ್ಠಾಚಾರ ಅನುಸಾರ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತದೆ. ಮೆರವಣಿಗೆ ಮಾರ್ಗಗಳಲ್ಲಿ ಯಾವುದೇ ತೊಂದರೆಯಾಗದಂತೆ ಸಜ್ಜುಗೊಳಿಸುವ ಉದ್ದೇಶದಿಂದ ಈಗಾಗಲೇ ನಗರಸಭೆ ಅಧಿಕಾರಿಗಳು, ತಹಸೀಲ್ದಾರರು ಪರಿಶೀಲಿಸಿದ್ದಾರೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಮೆರವಣಿಗೆ ಸಾಗಲು ಅನುವು ಮಾಡುವಂತೆ ಸೂಚನೆ ನೀಡಲಾಗುತ್ತದೆ. ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ದೇಶನ ನೀಡಲಾಗುತ್ತದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಗಾಯತ್ರಿ ತಿಳಿಸಿದರು.
ಎಂದಿನಂತೆ ಈ ಬಾರಿಯೂ ಬಸವೇಶ್ವರರ ಜಯಂತಿ ಆಚರಣೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಪ್ರತಿಯೊಬ್ಬರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೋರಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ, ಡಿವೈಎಸ್‍ಪಿ ಗಂಗಾಧರಸ್ವಾಮಿ, ತಾಲೂಕು ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ,  ಇತರೆ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಏ. 20:- ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯಿದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016ರ ಅನ್ವಯ ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿ ರಚಿಸಬೇಕಿದ್ದು ಈ ಸಮಿತಿ ಹಾಗೂ ಮಂಡಳಿಯ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
2017ರಿಂದ 2020ರವರೆಗೆ ಅನ್ವಯವಾಗುವಂತೆ 3 ವರ್ಷಗಳ ಕಾಲಾವಧಿಯ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಇನ್ನಿತರ ಸಂಪೂರ್ಣ ಮಾಹಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ ಸೈಟ್ ಜತಿಛಿಜಞಚಿಡಿ.gov.iಟಿ ನಲ್ಲಿ ಲಭ್ಯವಿದೆ. ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ನೊಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ ಮೇ 15ರ ಸಂಜೆ 5.30ರ ಒಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಕೇರಾಫ್ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್.ಅಂಬೇಡ್ಕರ್ ವೀಧಿ, ಬೆÉಂಗಳೂರು – 560001 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ (ದೂ.ಸಂ. 080-22879381/82) ಅಥವಾ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ  ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ (ಕೊಠಡಿ ಸಂಖ್ಯೆ 127)(ದೂ.ಸಂ. 08226-222354) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಏ. 27ರಿಂದ ಏರ್ ಮನ್ ಹುದ್ದೆಗಳಿಗೆ ನೇಮಕಾತಿ ರ್ಯಾಲಿ

ಚಾಮರಾಜನಗರ, ಏ. 20:- ಭಾರತೀಯ ವಾಯುಪಡೆಯ ಏರ್ ಮನ್ ಹುದ್ದೆಗಳಿಗಾಗಿ ನೇಮಕಾತಿ ರ್ಯಾಲಿಯು ಏಪ್ರಿಲ್ 27 ರಿಂದ 29ರವರೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಗ್ರೂಪ್ ವೈ ಟ್ರೇಡ್‍ಗಳ (ಆಟೊಮೊಬೈಲ್ ಟೆಕ್ನೀಷಿಯನ್, ಗ್ರೌಂಡ್ ಟ್ರೈನಿಂಗ್ ಇನ್ಸ್‍ಟ್ರಕ್ಟರ್, ಐಎಎಫ್ (ಪೊಲೀಸ್)) ಏರ್ ಮನ್ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ.
1997 ಜುಲೈ 7ರಿಂದ 2000ರ ಡಿಸೆಂಬರ್ 20ರ ನಡುವೆ ಜನಿಸಿದ ಅವಿವಾಹಿತ ಪುರುಷರು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಕನಿಷ್ಟ 165 ಸೆಂ.ಮೀ. ಎತ್ತರವಿರಬೇಕು. ಪಿಯುಸಿ ಅಥವಾ ಇಂಟರ್ ಮೀಡಿಯೆಟ್ ತತ್ಸಮಾನ ಪರೀಕ್ಷೆಗಳಲ್ಲಿ ಕೇಂದ್ರ, ರಾಜ್ಯ ಶಿಕ್ಷಣ ಮಂಡಳಿಗಳು ಅನುಮೋದಿಸಿದ ಯಾವುದೇ ವಿಷಯದಲ್ಲಿ ಕನಿಷ್ಟ ಶೇಕಡ 50ರಷ್ಟು ಸರಾಸರಿ ಹಾಗೂ ಇಂಗ್ಲೀಷ್‍ನಲ್ಲಿ ಕನಿಷ್ಟ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ರ್ಯಾಲಿಗೆ ಹಾಜರಾಗುವ ಅಭ್ಯರ್ಥಿಗಳು ಮೂಲ ಅಂಕಪಟ್ಟಿ, ಇತರೆ ಪ್ರಮಾಣ ಪತ್ರಗಳ 4 ದೃಢೀಕೃತ ಪ್ರತಿಗಳು, ಪಾಸ್ ಪೋರ್ಟ್ ಅಳತೆಯ ಬಣ್ಣದ ಇತ್ತೀಚಿನ 7 ಭಾವಚಿತ್ರ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಪಡೆಯ ವೆಬ್ ಸೈಟ್ ತಿತಿತಿ.ಚಿiಡಿmeಟಿseಟeಛಿಣioಟಿ.gov.iಟಿ ಅಥವಾ ಬೆಂಗಳೂರಿನ  ಕಬ್ಬನ್ ರಸ್ತೆಯಲ್ಲಿರುವ 7 ಏರ್‍ಮನ್ ಸೆಲೆಕ್ಷನ್ ಸೆಂಟರ್ (ದೂ.ಸಂ. 080-25592199) ಸಂಪರ್ಕಿಸಬಹುದು. ಈ ಮೇಲ್ ಛಿo.7ಚಿsಛಿ-ಞಚಿ@gov@iಟಿ ಸಂಪರ್ಕಿಸಬಹುದು. ಚಾಮರಾಜನಗರ ಜಿಲ್ಲೆಯ ಉದ್ಯೋಗ ಅಧಿಕಾರಿಗಳನ್ನು ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ಪ್ರಕಟಣೆ ತಿಳಿಸಿದÉ.

ಏ. 22, 23ರಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ

ಚಾಮರಾಜನಗರ, ಏ. 20 - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬೂರಾವ್ ಚಿಂಚನಸೂರು ಅವರು ಏಪ್ರಿಲ್ 22 ಹಾಗೂ 23ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್ 22ರಂದು ಸಂಜೆ 4 ಗಂಟೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವರು. ಬಳಿಕ ಗಡಿ ಗ್ರಾಮಗಳಿಗೆ ಭೇಟಿ ನೀಡುವರು. ತದನಂತರ ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡುವರು.
ಏಪ್ರಿಲ್ 23ರಂದು ಬೆಳಿಗ್ಗೆ 7 ಗಂಟೆಗೆ ಮಹದೇಶ್ವರ ಬೆಟ್ಟದಿಂದ ಹೊರಟು ಕೊಳ್ಳೇಗಾಲ ತಾಲೂಕಿನ ಕೊಂಬುಡಿಕ್ಕಿ ಗ್ರಾಮಕ್ಕೆ ತೆರಳಿ ಅಲ್ಲಿ ಆಯೋಜಿಸಲಾಗುವ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಗೋಪಿನಾಥಂ, ಇತರೆ ಗಡಿ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.

ಏ. 25ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ

ಚಾಮರಾಜನಗರ, ಏ. 20 - ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.



ಏ. 22ರಂದು ನೇರ ಫೋನ್-ಇನ್ ಕಾರ್ಯಕ್ರಮ
     ಚಾಮರಾಜನಗರ, ಏ. 20 :- ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಏಪ್ರಿಲ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
     ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಅಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ದೂರವಾಣಿ ಸಂಖ್ಯೆ: 08226-224888 ಕರೆ ಮಾಡಿ ತಮ್ಮ ಸಮಸ್ಯೆ, ಕುಂದುಕೊರತೆಗಳನ್ನು ತಿಳಿಸಿ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯ
     ಚಾಮರಾಜನಗರ, ಏ. 20 - ಚಂದಕವಾಡಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2017-18ನೇ ಸಾಲಿನ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಬರುವ ಎಫ್1 ಹಿರಿಕೆರೆ, ಎಫ್2 ಕಾಳಿಕಾಂಬ, ಎಫ್3 ಚಂದಕವಾಡಿ, ಎಫ್4 ರೇಚಂಬಳ್ಳಿ, ಎಫ್5 ಮಲ್ಲೇದೇವನಹಳ್ಳಿ, ಎಫ್6 ನವೋದಯ, ಎಫ್7 ಹೊಂಡರಬಾಳು ಮತ್ತು ಎಫ್8 ಜ್ಯೋತಿಗೌಡನಪುರದ 11ಕೆವಿ ಫೀಡರ್‍ಗಳ ವ್ಯಾಪ್ತಿಯಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ಪ್ರಕಟಣೆ ತಿಳಿಸಿದೆ.





















01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು