ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಗೆಲುವು
ಚಾಮರಾಜನಗರ, ಏ. 13- ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಕ್ಷದ ಎಂ.ಸಿ ಮೋಹನಕುಮಾರಿ ಉರುಫ್ ಗೀತಾ ಅವರು 10877 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಎಂ.ಸಿ. ಮೋಹನ ಕುಮಾರಿ ಉರುಫ್ ಗೀತಾ ಅವರು 90260 ಮತಗಳನ್ನು ಪಡೆದಿದ್ದಾರೆ. ಪ್ರತಿಸ್ಪರ್ಧಿಯಾದ ಭಾರತೀಯ ಜನತಾ ಪಾರ್ಟಿಯ ಸಿ.ಎಸ್. ನಿರಂಜನಕುಮಾರ್ ಅವರು 79383 ಮತಗಳನ್ನು ಪಡೆದಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಎ) ಅಭ್ಯರ್ಥಿ ಎಂ. ಶಿವರಾಜು ಅವರು 1512, ಭಾರತೀಯ ಡಾ. ಬಿ.ಆರ್. ಅಂಬೇಡ್ಕರ್ ಜನತಾಪಕ್ಷದ ಅಭ್ಯರ್ಥಿ ಎಂ. ಹೊನೂರಯ್ಯ ಅವರು 503, ಪಕ್ಷೇತರ ಅಭ್ಯರ್ಥಿಗಳಾದ ಬಿ. ಮಹದೇವಪ್ರಸಾದ್ ಅವರು 330, ಎಂ. ಶಿವರಾಮು ಅವರು 470, ಕೆ. ಸೋಮಶೇಖರ ಅವರು 901 ಮತಗಳನ್ನು ಪಡೆದುಕೊಂಡಿದ್ದಾರೆ.
ನೋಟಾಗೆ 1596 ಚಲಾವಣೆಯಾಗಿವೆ.
ಒಟ್ಟು 200862 ಮತದಾರರಿದ್ದಾರೆ. ಚಲಾಯಿಸಲಾದ ಕ್ರಮಬದ್ಧವಾದ ಮತಗಳ ಸಂಖ್ಯೆ 173359 ಆಗಿವೆ. ಒಟ್ಟು 45 ಮತಗಳು ತಿರಸ್ಕøತವಾಗಿವೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಚಾಮರಾಜನಗರ, ಏ. 13- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಯು.ಟಿ. ಖಾದರ್ ಅವರು ಏಪ್ರಿಲ್ 14ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆಯಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ. 14ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ಚಾಮರಾಜನಗರ, ಏ. 13 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭವನ್ನು ಏಪ್ರಿಲ್ 14ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಕೊಳ್ಳೇಗಾಲ ಚೇತನವನದ ಬೌದ್ಧ ಭಿಕ್ಕುಗಳಾದ ಪರಮಪೂಜ್ಯ ಮನೋರಖ್ಖಿತ ಬಂತೇಜಿ ದಿವ್ಯಸಾನಿಧ್ಯ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮೈಸೂರು ವಿವಿ ಪ್ರಸಾರಾಂಗದ ವಿಶ್ರಾಂತ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಪ್ರೊ. ಲಕ್ಷ್ಮೀನಾರಾಯಣ ಅರೋರಾ ಅವರು ಮುಖ್ಯ ಭಾಷಣ ಮಾಡುವರು
ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ನಾಗರಿಕರಿಂದ ದೂರು ಸ್ವೀಕಾರ
ಚಾಮರಾಜನಗರ, ಏ. 13 - ಜಿಲ್ಲೆಯ ನಾಲ್ಕೂ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಏಪ್ರಿಲ್ 17 ರಿಂದ 19ರವರೆಗೆ ಭೇಟಿ ನೀಡಿ ಸಾರ್ವಜನಿಕರಿಂದ ದÀೂರುಗಳನ್ನು ಸ್ವೀಕರಿಸುವರು.ಏಪ್ರಿಲ್ 17ರಂದು ಕೊಳ್ಳೇಗಾಲದ ಸರ್ಕಾರಿ ಅತಿಥಿಗೃಹದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ಯಳಂದೂರಿನ ಸರ್ಕಾರಿ ಅತಿಥಿಗೃಹದಲ್ಲಿ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ದೂರುಗಳನ್ನು ಸ್ವೀಕರಿಸುವರು.
ಏಪ್ರಿಲ್ 18ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಾಮರಾಜನಗರದ ಸರ್ಕಾರಿ ಅತಿಥಿಗೃಹದಲ್ಲಿ ದೂರು ಸ್ವೀಕರಿಸುವರು.
ಏಪ್ರಿಲ್ 19ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಗುಂಡ್ಲುಪೇಟೆ ಸರ್ಕಾರಿ ಅತಿಥಿಗೃಹದಲ್ಲಿ ದೂರು ಸ್ವೀಕರಿಸುವರು.
ಸರ್ಕಾರಿ ಕಚೇರಿ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ ಪ್ರಪತ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಲೋಕಾಯುಕ್ತ ಪೊಲೀಸ್ ವಿಭಾಗದ ಪ್ರಕಟಣೆ ತಿಳಿಸಿದೆ.
No comments:
Post a Comment