ಅಕ್ರಮ ಗಾಂಜಾ ಗಿಡ ಬೆಳೆದ ವ್ಯಕ್ತಿಗೆ ಸಜೆ
ಚಾಮರಾಜನಗರ, ಏ. 18:- ಅಕ್ರಮವಾಗಿ ಗಾಂಜಾ ಬೆಳೆದ ವ್ಯಕ್ತಿಯೋರ್ವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷಗಳ ಸಜೆ ಹಾಗೂ ಒಂದು ಸಾವಿರ ರೂ. ದಂಡ ವಿಧಿಸಿದೆ.ಕೊಳ್ಳೇಗಾಲ ತಾಲೂಕಿನ ಕುರಟ್ಟಿಹೊಸೂರು ಗ್ರಾಮದ ಮುನಿಶೆಟ್ಟಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಜೋಳದ ಫಸಲಿನ ಜತೆ ಅಕ್ರಮವಾಗಿ ಸುಮಾರು 60 ಕೆಜಿ ತೂಕವುಳ್ಳ 55 ಗಾಂಜಾ ಗಿಡಗಳನ್ನು ಬೆಳೆದಿದ್ದ. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮುನಿಶೆಟ್ಟಿಗೆ 2 ವರ್ಷಗಳ ಸಜೆ ಹಾಗೂ 1000 ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ಭೂಮಾಪಕರ ಹುದ್ದೆಗೆ ನಿವೃತ್ತ ಭೂಮಾಪಕರ ನೇಮಕಾತಿ
ಚಾಮರಾಜನಗರ, ಏ. 18 :- ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ ಭೂಮಾಪಕರ ಹುದ್ದೆಗಳಿಗೆ ವಯೋನಿವೃತ್ತಿ ಹೊಂದಿದ ಹಾಗೂ ದೈಹಿಕ ಸಾಮಥ್ರ್ಯವುಳ್ಳ ಸ್ವ ಇಚ್ಚೆಯಿಂದ ಕಾರ್ಯನಿರ್ವಹಿಸಲು ಒಪ್ಪಿಗೆ ನೀಡುವ ನಿವೃತ್ತ ಭೂಮಾಪಕರನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಆಸಕ್ತರು ತಕ್ಷಣವೇ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯ ಭೂಮಾಪನ ಶಾಖೆಯ ಅಧಿಕಾರಿಗಳನ್ನು ಸಂಫರ್ಕಿಸಬಹುದು. ದೂರವಾಣಿ ಸಂಖ್ಯೆ 08226-224893 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ಪ್ರಕಟಣೆ ತಿಳಿಸಿದೆ.

ಏ. 20ರಂದು ಬಸವೇಶ್ವರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆ
ಚಾಮರಾಜನಗರ, ಏ. 18 :- ಜಿಲ್ಲಾಡಳಿತದ ವತಿಯಿಂದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಿಸುವ ಸಂಬಂಧ ಚರ್ಚಿಸಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 20ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.
ಈ ಸಭೆಗೆ ಎಲ್ಲ ಸಮುದಾಯ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಸಲಹೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಏ. 28ರಂದು ಬಿಆರ್‍ಪಿ ಸಿಆರ್‍ಪಿ ಹುದ್ದೆ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್
ಚಾಮರಾಜನಗರ, ಏ. 18:- ಜಿಲ್ಲೆಯಲ್ಲಿ ಖಾಲಿ ಇರುವ ಬಿಆರ್‍ಪಿ ಮತ್ತು ಸಿಆರ್‍ಪಿ ಹುದ್ದೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 28ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಕೌನ್ಸೆಲಿಂಗ್ ನಡೆಯಲಿದೆ.
ಹುದ್ದೆಗಳಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ ನಡೆಸಿ ಸೇವಾ ಅನುಭವ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ನೀಡಲಾದ ಅಂಕಗಳೊಂದಿಗೆ ಫಲಿತಾಂಶದ ಮೆರಿಟ್ ಪಟ್ಟಿಯನ್ನು ಡಯಟ್ ವತಿಯಿಂದ ಸಲ್ಲಿಸಲಾಗಿದೆ. ಈ ಪಟ್ಟಿ ಆಧರಿಸಿ ಕೌನ್ಸೆಲಿಂಗ್ ನಡೆಯಲಿದೆ. ಜೇಷ್ಠತಾ ಪಟ್ಟಿಯಲ್ಲಿರುವ ಅರ್ಹ ಶಿಕ್ಷಕರು ಕೌನ್ಸೆಲಿಂಗ್‍ಗೆ ಭಾಗವಹಿಸಬೇಕಿದೆ.
ಸೇವಾ ಅನುಭವ ಮತ್ತು ವಿದ್ಯಾರ್ಹತೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಅರ್ಹತಾ ಪಟ್ಟಿಯಲ್ಲಿ ನಮೂದಾಗಿರುವ ಅಂಶಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 21ರ ಸಂಜೆ 5 ಗಂಟೆಯೊಳಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

ಏ. 19ರಂದು ಹರದನಹಳ್ಳಿಯಲ್ಲಿ ಸೆಸ್ಕ್ ಜನಸಂಪರ್ಕ ಸಭೆ
ಚಾಮರಾಜನಗರ, ಏ. 18 -ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಹರದನಹಳ್ಳಿ ಉಪವಿಭಾಗದ ಸೆಸ್ಕ್ ಕಚೇರಿಯಲ್ಲಿ ಏಪ್ರಿಲ್ 19ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಜನಸಂಪರ್ಕ ಸಭೆಯನ್ನು ನಡೆಸಲಿದೆ.
ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ತಿಳಿಸಬಹುದೆಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿಷ್ಠಿತ ಶಾಲೆಗಳಲ್ಲಿ 6, 8ನೇ ತರಗತಿಗೆ ಪ.ಜಾತಿ, ಪ. ವರ್ಗಗಳ ವಿದ್ಯಾರ್ಥಿಗಳ ಸೇರ್ಪಡೆಗೆ ಅರ್ಜಿ ಆಹ್ವಾನ
ಚಾಮರಾಜನಗರ, ಏ. 18 -2017-18ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳ 6 ಮತ್ತು 8ನೇ ತರಗತಿಗೆ ಸೇರ್ಪಡೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯು 5 ಮತ್ತು 7ನೇ ತರಗತಿಯಲ್ಲಿ ಶೇ. 80ರಷ್ಟು ಅಂಕ ಪಡೆದಿರಬೇಕು. ಪೋಷಕರ ವಾರ್ಷಿಕ ವರಮಾನ 2 ಲಕ್ಷ ರೂ. ಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿಗೆ (ರೂ.ನಂ. 121) ಏಪ್ರಿಲ್ 30ರೊಳಗೆ ಜಾತಿ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಗೆ (ರೂ.ನಂ. 217) ಜಾತಿ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಗಳೊಂದಿಗೆ ಮೇ 12ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಧೂವರರ ಮಾಹಿತಿ ಸಲ್ಲಿಸುವಂತೆ ಆಯೋಜಕರಿಗೆ ಸೂಚನೆ
ಚಾಮರಾಜನಗರ, ಏ. 18 -ಜಿಲ್ಲೆಯಲ್ಲಿ ವಿವಾಹ ನಡೆಸುವ ಮೊದಲು ತಾಲೂಕಿನ ತಹಸೀಲ್ದಾರ್ ಅವರಿಂದ ಅನುಮತಿ ಪಡೆಯಬೇಕು ಹಾಗೂ ಮಾಹಿತಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ನೀಡುವಂತೆ ತಿಳಿಸಲಾಗಿದೆ.
ಏಪ್ರಿಲ್, ಮೇ ಮತ್ತು ಜೂನ್ ಮಾಹೆಗಳಲ್ಲಿ ಕಲ್ಯಾಣ ಮಂಟಪ, ಸಂಘ ಸಂಸ್ಥೆಗಳು, ದೇವಸ್ಥಾನಗಳಲ್ಲಿ ಹೆಚ್ಚಾಗಿ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹಗಳು ನಡೆಯುವುದು ಹಲವು ಸಂದರ್ಭಗಳಲ್ಲಿ ಬೆಳಕಿಗೆ ಬಂದಿರುವುದರಿಂದ ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ತುಂಬಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಪರಾಧವಾಗಿರುತ್ತದೆ. ಅಪರಾಧಕ್ಕೆ 2 ವರ್ಷಗಳ ಕಠಿಣ ಸಜೆ, ಜೈಲು ವಾಸ ಅಥವಾ ರೂ. 1 ಲಕ್ಷದವರೆಗೆ ದಂಡ ಅಥವಾ ಎರಡೂ ಇದ್ದು ಜಾಮೀನು ರಹಿತ ವಿಚಾರಣಾರ್ಹ ಅಪರಾಧವಾಗಿರುತ್ತದೆ.
ವಯಸ್ಸಿನ ದೃಢೀಕರಣಕ್ಕೆ ಶಾಲಾ ದಾಖಲಾತಿ ಅವಶ್ಯಕ ದಾಖಲೆಯಾಗಿರುತ್ತದೆ. ಆದ್ದರಿಂದ ವಧೂ ವರರ ವಿವಾಹದ ಸಂಬಂಧ ಅರ್ಜಿಯೊಂದಿಗೆ ವಯಸ್ಸಿನ ದೃಢೀಕರಣವನ್ನು ಪಡೆದು ಆಯಾ ತಾಲೂಕಿನ ತಹಸೀಲ್ದಾರ್ ಅವರಿಂದ ಅನುಮತಿ ಪಡೆಯಬೇಕು ಹಾಗೂ ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ (ಕೊ.ಸಂಖ್ಯೆ 127) ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ದೂ.ಸಂ. 08226-222354)ಗೆ ಮಾಹಿತಿಯನ್ನು ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments:
Post a Comment