ಜಗಜ್ಯೋತಿ ಬಸವೇಶ್ವರರ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
______________________________________-* ಅರಿಕುಠಾರ ವಾರ್ತೆ*
ಎಸ್.ವೀರಭದ್ರಸ್ವಾಮಿ----9480030980,
__________________________________
ಚಾಮರಾಜನಗರ, ಏ. 20 :- ಜಿಲ್ಲಾಡಳಿತ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಹಕಾರದೊಂದಿಗೆ ಜಗಜ್ಯೋತಿ ಬಸವೇಶ್ವರ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 29ರಂದು ನಗರದಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಬಸವೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಮಾತನಾಡಿ ಕಳೆದ ಬಾರಿಯೂ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಎಲ್ಲರ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯೂ ಬಸವೇಶ್ವರರ ಜನ್ಮದಿನ ಆಚರಣೆ ಕಾರ್ಯಕ್ರಮಕ್ಕೆ ಅಗತ್ಯ ಸಲಹೆ ಅಭಿಪ್ರಾಯ ನೀಡುವ ಮೂಲಕ ಯಶಸ್ವಿಯಾಗಿ ನೆರವೇರಲು ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಹಾಜರಿದ್ದ ಮುಖಂಡರು, ಪ್ರತಿನಿಧಿಗಳು ಈ ಹಿಂದಿನ ವರ್ಷ ಬಸವಜಯಂತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಬಾರಿ ಮತ್ತಷ್ಟು ವಿಜೃಂಭಣೆಯಿಂದ ಆಚರಿಸುವಂತಾಗಬೇಕು. ಬಸವೇಶ್ವರರ ಭಾವಚಿತ್ರ ಮೆರವಣಿಗೆಗೆ ಹೆಚ್ಚು ಕಲಾತಂಡಗಳನ್ನು ನಿಯೋಜಿಸಬೇಕು. ಮೆರವಣಿಗೆ ಸಾಗುವ ಮಾರ್ಗಗಳನ್ನು ಧೂಳಿನಿಂದ ಮುಕ್ತಗೊಳಿಸಿ ನೀರು ಸಿಂಪಡಿಸಬೇಕು. ಆಹ್ವಾನ ಪತ್ರಿಕೆಗಳನ್ನು ಹೆಚ್ಚು ಸಂಖ್ಯೆಯಲ್ಲಿ ಮುದ್ರಿಸಿ ತ್ವರಿತವಾಗಿ ತಲುಪಿಸಬೇಕು ಎಂದರು.
ಜಿಲ್ಲಾಡಳಿತದಿಂದ ನಡೆಸಲಾಗುವ ಕಾರ್ಯಕ್ರಮಕ್ಕೆ ಪೂರ್ವಯೋಜಿತವಾಗಿ ಸಿದ್ಧತೆ ಕೈಗೊಳ್ಳಬೇಕು. ಎಲ್ಲರ ಅಭಿಪ್ರಾಯ ಪಡೆದು ಯಾವುದೇ ಅಭಾಸಕ್ಕೆ ಕಾರಣವಾಗದಂತೆ ಕಾರ್ಯಕ್ರಮ ರೂಪಿಸಬೇಕು. ಕಾರ್ಯಕ್ರಮದ ಅಂತಿಮ ಘಟ್ಟದಲ್ಲಿ ಲೋಪ ಆಗದಂತೆ ಮುಂಜಾಗರೂಕತೆಯಿಂದ ಎಲ್ಲ ರೂಪುರೇಷೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಅಧಿಕಾರಿಗಳು ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ಸೂಚಿಸಬೇಕೆಂದು ಮುಖಂಡರು ಸಲಹೆ ಮಾಡಿದರು.
ಎಲ್ಲರ ಅಭಿಪ್ರಾಯ ಸಲಹೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಬಸವೇಶ್ವರರ ತತ್ವ ಆದರ್ಶಗಳು ವಿಶ್ವವ್ಯಾಪಿ ಅನುಕರಣೆಗೆ ಅರ್ಹವಾಗಿವೆ. ಬಸವೇಶ್ವರರ ಜಯಂತಿಯನ್ನು ಎಲ್ಲರ ಸಹಕಾರದೊಂದಿಗೆ ಅದ್ದೂರಿಯಾಗಿ ಆಚರಿಸಲಾಗುವುದು. ಈ ಹಿಂದೆ ಕಾರ್ಯಕ್ರಮ ನಿರ್ವಹಣೆಗಾಗಿ ಸಮಿತಿಯನ್ನು ರಚಿಸಿದ್ದು ಅಗತ್ಯ ಮಾರ್ಪಾಡುಗಳಿದ್ದರೆ ಆ ಪ್ರಕಾರವೇ ಮುಂದುವರಿಯಲಾಗುವುದು ಎಂದರು.
ಎಂದಿನಂತೆ ಅಂದು ಬೆಳಿಗ್ಗೆ ನಗರದ ಪ್ರವಾಸಿ ಮಂದಿರದಿಂದ ಬಸವೇಶ್ವರ ಅವರ ಭಾವಚಿತ್ರವನ್ನು ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಮಾಡಲಾಗುವುದು. ಕಲಾತಂಡಗಳನ್ನು ನಿಯೋಜಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗುತ್ತದೆ. ವೇದಿಕೆ ಕಾರ್ಯಕ್ರಮವನ್ನು ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಿಗದಿ ಮಾಡಲಾಗುತ್ತದೆ. ಅಧಿಕಾರಿ ಹಾಗೂ ಮುಖಂಡರನ್ನು ಒಳಗೊಂಡ ಸಮಿತಿಯು ಚರ್ಚಿಸಿ ಕಾರ್ಯಕ್ರಮಕ್ಕೆ ಪೂರಕವಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕೂಡಲೇ ಕಾರ್ಯೋನ್ಮುಖರಾಗಲು ಸೂಚನೆ ನೀಡಲಾಗುವುದು ಎಂದರು.
ಶಿಷ್ಠಾಚಾರ ಅನುಸಾರ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತದೆ. ಮೆರವಣಿಗೆ ಮಾರ್ಗಗಳಲ್ಲಿ ಯಾವುದೇ ತೊಂದರೆಯಾಗದಂತೆ ಸಜ್ಜುಗೊಳಿಸುವ ಉದ್ದೇಶದಿಂದ ಈಗಾಗಲೇ ನಗರಸಭೆ ಅಧಿಕಾರಿಗಳು, ತಹಸೀಲ್ದಾರರು ಪರಿಶೀಲಿಸಿದ್ದಾರೆ. ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ ಮೆರವಣಿಗೆ ಸಾಗಲು ಅನುವು ಮಾಡುವಂತೆ ಸೂಚನೆ ನೀಡಲಾಗುತ್ತದೆ. ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮಕ್ಕೆ ಹಾಜರಾಗಲು ನಿರ್ದೇಶನ ನೀಡಲಾಗುತ್ತದೆ. ಹಾಜರಾತಿಯನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಗಾಯತ್ರಿ ತಿಳಿಸಿದರು.
ಎಂದಿನಂತೆ ಈ ಬಾರಿಯೂ ಬಸವೇಶ್ವರರ ಜಯಂತಿ ಆಚರಣೆಯನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಪ್ರತಿಯೊಬ್ಬರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೋರಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೀತಾ, ಡಿವೈಎಸ್‍ಪಿ ಗಂಗಾಧರಸ್ವಾಮಿ, ತಾಲೂಕು ಎಪಿಎಂಸಿ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಇತರೆ ಮುಖಂಡರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಮಕ್ಕಳ ಕಲ್ಯಾಣ ಸಮಿತಿ, ಬಾಲನ್ಯಾಯ ಮಂಡಳಿ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ, ಏ. 20:- ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ಕಾಯಿದೆ 2015 ಹಾಗೂ ಬಾಲನ್ಯಾಯ ಮಾದರಿ ನಿಯಮ 2016ರ ಅನ್ವಯ ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಬಾಲನ್ಯಾಯ ಮಂಡಳಿ ರಚಿಸಬೇಕಿದ್ದು ಈ ಸಮಿತಿ ಹಾಗೂ ಮಂಡಳಿಯ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.2017ರಿಂದ 2020ರವರೆಗೆ ಅನ್ವಯವಾಗುವಂತೆ 3 ವರ್ಷಗಳ ಕಾಲಾವಧಿಯ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಇನ್ನಿತರ ಸಂಪೂರ್ಣ ಮಾಹಿತಿಯು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್ ಸೈಟ್ ಜತಿಛಿಜಞಚಿಡಿ.gov.iಟಿ ನಲ್ಲಿ ಲಭ್ಯವಿದೆ. ಮಕ್ಕಳ ಕಲ್ಯಾಣ ಸಮಿತಿ ಮತ್ತು ಬಾಲನ್ಯಾಯ ಮಂಡಳಿಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ನೊಂದಾಯಿತ ಅಂಚೆ ಅಥವಾ ಮುದ್ದಾಂ ಮೂಲಕ ಮೇ 15ರ ಸಂಜೆ 5.30ರ ಒಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿ, ಕೇರಾಫ್ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೊದಲನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್.ಅಂಬೇಡ್ಕರ್ ವೀಧಿ, ಬೆÉಂಗಳೂರು – 560001 ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ (ದೂ.ಸಂ. 080-22879381/82) ಅಥವಾ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ (ಕೊಠಡಿ ಸಂಖ್ಯೆ 127)(ದೂ.ಸಂ. 08226-222354) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಏ. 27ರಿಂದ ಏರ್ ಮನ್ ಹುದ್ದೆಗಳಿಗೆ ನೇಮಕಾತಿ ರ್ಯಾಲಿ
ಚಾಮರಾಜನಗರ, ಏ. 20:- ಭಾರತೀಯ ವಾಯುಪಡೆಯ ಏರ್ ಮನ್ ಹುದ್ದೆಗಳಿಗಾಗಿ ನೇಮಕಾತಿ ರ್ಯಾಲಿಯು ಏಪ್ರಿಲ್ 27 ರಿಂದ 29ರವರೆಗೆ ಹಾಸನದ ಸಾಲಗಾಮೆ ರಸ್ತೆಯಲ್ಲಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.ಗ್ರೂಪ್ ವೈ ಟ್ರೇಡ್‍ಗಳ (ಆಟೊಮೊಬೈಲ್ ಟೆಕ್ನೀಷಿಯನ್, ಗ್ರೌಂಡ್ ಟ್ರೈನಿಂಗ್ ಇನ್ಸ್‍ಟ್ರಕ್ಟರ್, ಐಎಎಫ್ (ಪೊಲೀಸ್)) ಏರ್ ಮನ್ ಹುದ್ದೆಗಳಿಗೆ ಆಯ್ಕೆ ನಡೆಯಲಿದೆ.
1997 ಜುಲೈ 7ರಿಂದ 2000ರ ಡಿಸೆಂಬರ್ 20ರ ನಡುವೆ ಜನಿಸಿದ ಅವಿವಾಹಿತ ಪುರುಷರು ರ್ಯಾಲಿಯಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಕನಿಷ್ಟ 165 ಸೆಂ.ಮೀ. ಎತ್ತರವಿರಬೇಕು. ಪಿಯುಸಿ ಅಥವಾ ಇಂಟರ್ ಮೀಡಿಯೆಟ್ ತತ್ಸಮಾನ ಪರೀಕ್ಷೆಗಳಲ್ಲಿ ಕೇಂದ್ರ, ರಾಜ್ಯ ಶಿಕ್ಷಣ ಮಂಡಳಿಗಳು ಅನುಮೋದಿಸಿದ ಯಾವುದೇ ವಿಷಯದಲ್ಲಿ ಕನಿಷ್ಟ ಶೇಕಡ 50ರಷ್ಟು ಸರಾಸರಿ ಹಾಗೂ ಇಂಗ್ಲೀಷ್‍ನಲ್ಲಿ ಕನಿಷ್ಟ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ರ್ಯಾಲಿಗೆ ಹಾಜರಾಗುವ ಅಭ್ಯರ್ಥಿಗಳು ಮೂಲ ಅಂಕಪಟ್ಟಿ, ಇತರೆ ಪ್ರಮಾಣ ಪತ್ರಗಳ 4 ದೃಢೀಕೃತ ಪ್ರತಿಗಳು, ಪಾಸ್ ಪೋರ್ಟ್ ಅಳತೆಯ ಬಣ್ಣದ ಇತ್ತೀಚಿನ 7 ಭಾವಚಿತ್ರ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಪಡೆಯ ವೆಬ್ ಸೈಟ್ ತಿತಿತಿ.ಚಿiಡಿmeಟಿseಟeಛಿಣioಟಿ.gov.iಟಿ ಅಥವಾ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ 7 ಏರ್‍ಮನ್ ಸೆಲೆಕ್ಷನ್ ಸೆಂಟರ್ (ದೂ.ಸಂ. 080-25592199) ಸಂಪರ್ಕಿಸಬಹುದು. ಈ ಮೇಲ್ ಛಿo.7ಚಿsಛಿ-ಞಚಿ@gov@iಟಿ ಸಂಪರ್ಕಿಸಬಹುದು. ಚಾಮರಾಜನಗರ ಜಿಲ್ಲೆಯ ಉದ್ಯೋಗ ಅಧಿಕಾರಿಗಳನ್ನು ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ಪ್ರಕಟಣೆ ತಿಳಿಸಿದÉ.
ಏ. 22, 23ರಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಜಿಲ್ಲಾ ಪ್ರವಾಸ
ಚಾಮರಾಜನಗರ, ಏ. 20 - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಾಬೂರಾವ್ ಚಿಂಚನಸೂರು ಅವರು ಏಪ್ರಿಲ್ 22 ಹಾಗೂ 23ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಏಪ್ರಿಲ್ 22ರಂದು ಸಂಜೆ 4 ಗಂಟೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ಆಗಮಿಸುವರು. ಬಳಿಕ ಗಡಿ ಗ್ರಾಮಗಳಿಗೆ ಭೇಟಿ ನೀಡುವರು. ತದನಂತರ ಮಲೆಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡುವರು.
ಏಪ್ರಿಲ್ 23ರಂದು ಬೆಳಿಗ್ಗೆ 7 ಗಂಟೆಗೆ ಮಹದೇಶ್ವರ ಬೆಟ್ಟದಿಂದ ಹೊರಟು ಕೊಳ್ಳೇಗಾಲ ತಾಲೂಕಿನ ಕೊಂಬುಡಿಕ್ಕಿ ಗ್ರಾಮಕ್ಕೆ ತೆರಳಿ ಅಲ್ಲಿ ಆಯೋಜಿಸಲಾಗುವ ಆರೋಗ್ಯ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಗೋಪಿನಾಥಂ, ಇತರೆ ಗಡಿ ಗ್ರಾಮಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸುವರು. ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳುವರೆಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರು ತಿಳಿಸಿದ್ದಾರೆ.
ಏ. 25ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ, ಏ. 20 - ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.ಏ. 22ರಂದು ನೇರ ಫೋನ್-ಇನ್ ಕಾರ್ಯಕ್ರಮ
ಚಾಮರಾಜನಗರ, ಏ. 20 :- ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಏಪ್ರಿಲ್ 22ರಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರೆ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಅಂದು ಬೆಳಿಗ್ಗೆ 10 ರಿಂದ 11 ಗಂಟೆಯವರೆಗೆ ದೂರವಾಣಿ ಸಂಖ್ಯೆ: 08226-224888 ಕರೆ ಮಾಡಿ ತಮ್ಮ ಸಮಸ್ಯೆ, ಕುಂದುಕೊರತೆಗಳನ್ನು ತಿಳಿಸಿ ಪರಿಹಾರ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ
ಚಾಮರಾಜನಗರ, ಏ. 20 - ಚಂದಕವಾಡಿ 66/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2017-18ನೇ ಸಾಲಿನ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಬರುವ ಎಫ್1 ಹಿರಿಕೆರೆ, ಎಫ್2 ಕಾಳಿಕಾಂಬ, ಎಫ್3 ಚಂದಕವಾಡಿ, ಎಫ್4 ರೇಚಂಬಳ್ಳಿ, ಎಫ್5 ಮಲ್ಲೇದೇವನಹಳ್ಳಿ, ಎಫ್6 ನವೋದಯ, ಎಫ್7 ಹೊಂಡರಬಾಳು ಮತ್ತು ಎಫ್8 ಜ್ಯೋತಿಗೌಡನಪುರದ 11ಕೆವಿ ಫೀಡರ್‍ಗಳ ವ್ಯಾಪ್ತಿಯಲ್ಲಿ ಏಪ್ರಿಲ್ 22ರಂದು ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚೆಸ್ಕಾಂ ಪ್ರಕಟಣೆ ತಿಳಿಸಿದೆ.
No comments:
Post a Comment