ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಇಂದು ಭೇಟಿ ನೀಡಿ ಸಿಂಥೆಟಿಕ್ ಟ್ರಾಕ್ ಕಾಮಗಾರಿಯನ್ನು ಕೇಂದ್ರ ತಂಡದ ಅಧಿಕಾರಿಗಳೊಂದಿಗೆ ಪರಿಶೀಲಿಸಿದ ಬಳಿಕ ಆರ್.ಧ್ರುವನಾರಾಯಣ ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು.
ಒಟ್ಟು 5.65 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸಿಂಥೆಟಿಕ್ ಟ್ರಾಕ್ ಕಾಮಗಾರಿಯು ಈಗಾಗಲೇ ಶೇ.56 ರಷ್ಟು ಪೂರ್ಣಗೊಂಡಿದೆ. ಇನ್ನು ಎರಡು ತಿಂಗಳಲ್ಲಿ ಉಳಿದ ಕಾಮಗಾರಿ ಪೂರ್ಣವಾಗಲಿದೆ. ಇದರಿಂದ ಹನ್ನೆರಡು ಬಗೆಯ ಕ್ರೀಡೆಗಳಿಗೆ ಸಿಂಥೆಟಿಕ್ ಟ್ರಾಕ್ ಅನುಕೂಲ ಕಲ್ಪಿಸಲಿದೆ ಎಂದರು.
ಕಾಮಗಾರಿಗೆ ಈಗಾಗಲೇ 3.15 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕಾಮಗಾರಿಗೆ 2.25 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಸಿಂಥೆಟಿಕ್ ಅಳವಡಿಕೆ ಕಾರ್ಯ ನಡೆಯಬೇಕಿದ್ದು, ಇದಕ್ಕೆ ಅಗತ್ಯವಿರುವ ಸಾಮಾಗ್ರಿಗಳನ್ನು ವಿದೇಶದಿಂದ ತರಿಸಲಾಗಿದೆ. ಕಾಮಗಾರಿಯು ಭರದಿಂದ ಸಾಗಲಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಸಿಂಥೆಟಿಕ್ ಟ್ರಾಕ್ ಪೂರ್ಣಗೊಂಡ ಬಳಿಕ 100 ಮೀ. ಓಟ, ಲಾಂಗ್ ಜಂಪ್, ಹೈ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, ಪೋಲ್ ವಾಲ್ಟ್ ಸೇರಿದಂತೆ ವಿವಿಧ ಬಗೆಯ ಆಟೋಟಗಳನ್ನು ಆಯೋಜಿಸಲು ಅನುಕೂಲವಾಗಲಿದೆ. ಸಿಂಥೆಟಿಕ್ ಟ್ರಾಕ್ ಪೂರ್ಣಗೊಂಡ ಬಳಿಕ ಉನ್ನತ ಮಟ್ಟದ ಕ್ರೀಡಾಕೂಟಗಳು ನಡೆಯಲು ಸಹಕಾರಿಯಾಗುತ್ತದೆ ಎಂದರು.
ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣವನ್ನು ಮಾದರಿ ಕ್ರೀಡಾಂಗಣವನ್ನಾಗಿಸಲು ಮುಖ್ಯ ಮಂತ್ರಿಯವರು ನಗರ ಅಭಿವೃದ್ದಿಗೆ ಬಿಡುಗಡೆ ಮಾಡಿರುವ ವಿಶೇಷ ಅನುದಾನದಲ್ಲಿ 7 ಕೋಟಿ ರೂ.ಗಳನ್ನು ವಿನಿಯೋಗಿಸಲಾಗುತ್ತದೆ. ಇದರಿಂದ ಕ್ರೀಡಾಂಗಣಕ್ಕೆ ಅಗತ್ಯವಿರುವ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಧ್ರುವನಾರಾಯಣ ತಿಳಿಸಿದರು.
ಬಳಿಕ ಮಾದಪುರ ಬಳಿ ನಿರ್ಮಾಣವಾಗುತ್ತಿರುವ ಕೇಂದ್ರೀಯ ವಿದ್ಯಾಲಯ ಕಟ್ಟಡ ಕಾಮಗಾರಿ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದ ನಂತರ ಮಾತನಾಡಿದ ಧ್ರುವನಾರಾಯಣ ಜುಲೈ ತಿಂಗಳ ಅಂತ್ಯದ ವೇಳೆಗೆ ಕೇಂದ್ರೀಯ ವಿದ್ಯಾಲಯ ಕಟ್ಟಡ ಕಾಮಗಾರಿ ಪೂರ್ಣವಾಗಲಿದೆ ಎಂದರು.
ಒಟ್ಟು 7.26 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕೆಲಸವು ಶೇ.72 ರಷ್ಟು ಪೂರ್ಣವಾಗಿದೆ. ಕಟ್ಟಡದಲ್ಲಿ 24 ತರಗತಿಗಳು, 7 ಪ್ರಯೋಗಾಲಯ ಹಾಗೂ ಭೋದಕ, ಭೋದಕೇತರ ಸಿಬ್ಬಂದಿಗೆ ವಸತಿ ಗೃಹ ಸಹ ನಿರ್ಮಾಣವಾಗುತ್ತಿದೆ ಎಂದರು.
ಈ ಶೈಕ್ಷಣಿಕ ಸಾಲಿನಲ್ಲಿಯೇ ನೂತನ ಕಟ್ಟಡಕ್ಕೆ ಕೇಂದ್ರೀಯ ವಿದ್ಯಾಲಯ ಸ್ಥಳಾಂತರಗೊಳ್ಳಲಿದೆ. ಪ್ರಸ್ತುತ ಗುತ್ತಿಗೆ ಆಧಾರದ ಮೇಲೆ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾಲಯಕ್ಕೆ ನೇಮಕಾತಿ ಪ್ರಕ್ರಿಯೆ ರಾಷ್ಟ್ರಮಟ್ಟದಲ್ಲಿ ನಡೆಯಲಿದೆ. ಒಟ್ಟು 6500 ತರಬೇತಿ ಪಡೆದ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವೇಳೆ ನಗರದ ಕೇಂದ್ರೀಯ ವಿದ್ಯಾಲಯಕ್ಕೂ ಖಾಯಂ ಶಿಕ್ಷಕರು ನೇಮಕವಾಗಲಿದ್ದಾರೆ ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನಸಂಖ್ಯೆ ಆಧಾರದ ಮೇಲೆ ಜಿಲ್ಲೆಗೆ ಮತ್ತೊಂದು ನವೋದಯ ವಿದ್ಯಾಲಯ ಮಂಜೂರಾಗಲಿದೆ. ಹನೂರು ಭಾಗಕ್ಕೆ ನವೋದಯ ವಿದ್ಯಾಲಯ ಬರಲಿದ್ದು, ಇದರಿಂದ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗಲಿದೆ ಎಂದು ಧ್ರುವನಾರಾಯಣ ಇದೇ ವೇಳೆ ತಿಳಿಸಿದರು.
ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ, ಉಪಾಧ್ಯಕ್ಷರಾದ ಎಸ್.ಬಸವರಾಜು, ಎಪಿಎಂಸಿ ಅಧ್ಯಕ್ಷರಾದ ಬಿ.ಕೆ.ರವಿಕುಮಾರ್, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಉಪಾಧ್ಯಕ್ಷರಾದ ಪಿ.ಎನ್.ದಯಾನಿಧಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೆ.ಪಿ.ಸದಾಶಿವಮೂರ್ತಿ, ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ಇತರರು ಹಾಜರಿದ್ದರು.

ಲೋಕಸಭಾ ಸದಸ್ಯರಿಂದ ಅಂಬೇಡ್ಕರ್ ಜಯಂತಿ ಆಚರಣೆ ಪೂರ್ವಸಿದ್ದತೆ ಪರಿಶೀಲನೆ
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪೂರ್ವಸಿದ್ದತೆ ಪರಿಶೀಲನೆಗಾಗಿ ಕರೆಯಲಾಗಿದ್ದ, ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಿಗಧಿಯಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಸಿದ್ದತೆಗಾಗಿ ಈಗಾಗಲೇ ರಚಿಸಲಾಗಿರುವ ವಿವಿಧ ಸಮಿತಿಯ ಕಾರ್ಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಧ್ರುವನಾರಾಯಣ ಅವರು ಶೀಘ್ರವಾಗಿ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಮೆರವಣಿಗೆ ಸಾಗುವ ಮಾರ್ಗಗಳನ್ನು ಅಚ್ಚುಕಟ್ಟುಗೊಳಿಸಬೇಕು. ನೀರು ಸಿಂಪಡಿಸಿ ಮಾರ್ಗವನ್ನು ಯಾವುದೇ ಆಡಚಣೆ ಇಲ್ಲದಂತೆ ಸಜ್ಜುಗೊಳಿಸಬೇಕು. ಅಗತ್ಯ ಕಾಮಗಾರಿಯನ್ನು ಆದಷ್ಟು ತುರ್ತಾಗಿ ಮುಗಿಸಬೇಕು ಎಂದರು.
ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೂ ತಲುಪಿಸುವ ವ್ಯವಸ್ಥೆಯಾಗಬೇಕು. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಿ ಆಹ್ವಾನ ಪತ್ರಿಕೆ ವಿತರಣೆಯಾಗಿದೆಯೇ ಎಂದು ಪರಿಶೀಲಿಸಿಕೊಳ್ಳಬೇಕು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಕಾಲದಲ್ಲಿ ವಹಿಸಲಾಗಿರುವ ಕೆಲಸ ಪೂರ್ಣವಾಗುವಂತೆ ನೋಡಿಕೊಳ್ಳಬೇಕು ಎಂದರು.
ವಿಚಾರ ಸಂಕಿರಣ ಕಾರ್ಯಕ್ರಮವನ್ನು ಸಹ ಅರ್ಥಪೂರ್ಣವಾಗಿ ಹಮ್ಮಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಸಮಿತಿಯು ಕಾರ್ಯ ನಿರ್ವಹಿಸಬೇಕು ಎಂದು ಧ್ರುವನಾರಾಯಣ ತಿಳಿಸಿದರು.
ಜಿಲ್ಲಾಧಿಕಾರಿ ಬಿ.ರಾಮು ಅವರು ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಹೂವಿನ ಅಲಂಕಾರ, ದೀಪಾಲಂಕಾರ ಸೇರಿದಂತೆ ಇತರೆ ಎಲ್ಲಾ ಸಿದ್ದತೆಯನ್ನು ಅಧಿಕಾರಿಗಳು ನಿರ್ವಹಿಸಬೇಕು. ಆದಷ್ಟು ಶೀಘ್ರವಾಗಿ ಜಯಂತಿ ಆಚರಣೆಗೆ ಅವಶ್ಯ ಕೆಲಸಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ.ಚಂದ್ರು, ಡಿವೈಎಸ್ಪಿ ಗಂಗಾಧರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಹೆಚ್.ಸತೀಶ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ
ಚಾಮರಾಜನಗರ, ಏ.23: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2017-18ನೇ ಸಾಲಿಗೆ ವಿವಿಧ ಸೌಲಭ್ಯ ನೀಡಲಿದ್ದು, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ವಯಂ ಉದ್ಯೋಗ ಯೋಜನೆಯಡಿ(ಒಂದು ಲಕ್ಷ ರೂ. ಘಟಕಗಳು), ಹೈನುಗಾರಿಕೆ(ಬ್ಯಾಂಕ್‍ಗಳ ಸಹಯೋಗ), ಇತರೆ ಉದ್ದೇಶಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ. ನೇರ ಸಾಲ ಯೋಜನಯಡಿ ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆಗೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ(ಒಂದು ಲಕ್ಷ ರೂ. ಮೇಲ್ಪಟ್ಟ ಘಟಕಗಳು) ವೃತ್ತಿ ಕೌಶಲ್ಯ, ಟೂರಿಸ್ಟ್ ಟ್ಯಾಕ್ಸಿ ಇತರೆ ಉದ್ದೇಶಗಳಿಗೆ ಆರ್ಥಿಕ ನೆರವು ಲಭಿಸಲಿದೆ. ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ(ಕಿರು ಸಾಲ), ಗಂಗಾ ಕಲ್ಯಾಣ ಯೋಜನೆಯಡಿ ವೈಯಕ್ತಿಕ ನೀರಾವರಿ ಕೊಳವೆ ಬಾವಿ, ಏತನೀರಾವರಿ ಯೋಜನೆ ಸೌಲಭ್ಯ ಪಡೆಯಬಹುದಾಗಿದೆ. ಅರ್ಜಿಯನ್ನು ಏಪ್ರಿಲ್ 24ರಿಂದ ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ ಅಥವಾ ಆಯಾಯ ತಾಲ್ಲೂಕು ಅಭಿವೃದ್ಧಿ ಅಧಿಕಾರಿಗಳನ್ನು ಭೇಟಿ ಮಾಡಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಯೊಂದಿಗೆ ಮೇ.31ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಚಿಟಿಚಿಣಚಿಞಚಿ.gov.iಟಿ/ಞmvsಜಜ ನೋಡಬಹುದು. ಅಲ್ಲದೆ ಚಾಮರಾಜನಗರ ಜಿಲ್ಲಾಡಳಿತ ಭವನ ಆವರಣದ ಆವರಣದಲ್ಲಿರುವ ಮಲ್ಟಿಪರ್ಪಸ್ ಹಾಲ್‍ನಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಿ(ದೂ.ಸಂ. 08226-223856) ಪಡೆಯುವಂತೆ ಪ್ರಕಟಣೆ ತಿಳಿಸಿದೆ.
ಏಪ್ರಿಲ್ 23 ರಂದು ನಗರದಲ್ಲಿ ವಿಶ್ವ ಪುಸ್ತಕ ದಿನಾಚರಣೆ, ಭೀಮಯಾನ ಕವಿಗೋಷ್ಠಿ
ಚಾಮರಾಜನಗರ, ಏ. 22 :- ಕನ್ನಡ ಪುಸ್ತಕ ಪ್ರಾಧಿಕಾರ, ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆ, ರಂಗವಾಹಿನಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ವಿಶ್ವ ಪುಸ್ತಕ ದಿನಾಚರಣೆ ಹಾಗೂ ಭೀಮಯಾನ ಕವಿಗೋಷ್ಠಿ ಏಪ್ರಿಲ್ 23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ರಥದ ಬೀದಿಯಲ್ಲಿರುವ ಸಂಸ ಸಭಾಂಗಣದಲ್ಲಿ ನಡೆಯಲಿದೆ.ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಬಂಜಗೆರೆ ಜಯಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸುವರು, ರಂಗವಾಹಿನಿ ಸಂಸ್ಥೆಯ ಅಧ್ಯಕ್ಷರಾದ ಸಿ.ಎಂ.ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸುವರು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಬಸವರಾಜು ಆಶಯ ನುಡಿಗಳನ್ನಾಡುವರು.
ಸಾಹಿತಿ ಡಾ.ಕೃಷ್ಣಮೂರ್ತಿ ಚಮರಂ, ನಗರದ ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ಸಹಾಯಕ ಪ್ರಾದ್ಯಾಪಕರಾದ ಎಂ.ಎಸ್.ಬಸವಣ್ಣ ಮುಖ್ಯ ಭಾಷಣ ಮಾಡುವರು. ಯುವ ಕವಿಗೋಷ್ಠಿಯಲ್ಲಿ ಹೊಬ ರಘೋತ್ತಮ ಆಶಯ ನುಡಿಗಳನ್ನಾಡುವರು. ನಾಗೇಶ್ ಸೋಸ್ಲೆ ಅಧ್ಯಕ್ಷತೆ ವಹಿಸುವರು.
ಕೆಂಪನಪುರ ಶಿವಕುಮಾರ್, ಗುಂಪು ದೇವರಾಜ್, ಸಿ.ಎಸ್.ಮಂಜುಳ, ಇರಸವಾಡಿ ಮಹೇಶ್, ಸುಭಾಷ್ ಮಾಡ್ರಳ್ಳಿ, ಗುರುಲಿಂಗಮ್ಮ, ಕೆಸ್ತೂರು ಮಂಜುನಾಥ್, ಸುಂದರ್ ಕಲಿವೀರ, ಪದ್ಮಾಕ್ಷಿ, ಕಮರವಾಡಿ ಮಹದೇವಸ್ವಾಮಿ, ಅಂಬಳೆ ಮಹದೇವಸ್ವಾಮಿ, ರಾಧ ಗುರುರಾಜ್, ಸಿ.ರಾಜೇಂದ್ರ, ರಂಗಸ್ವಾಮಿ ಗಣಗನೂರು, ಕೆ.ಅನುರಾಧ ಸಿಂಗನಲ್ಲೂರು, ಅರಳಿಪುರ ರಾಜೇಂದ್ರ ಪ್ರಸಾದ್, ಶಂಕರ್ ಅಂಕನಶೆಟ್ಟಿಪುರ, ಮಂಜುಳ ನಾಗರಾಜ್, ಕಾಳಿಂಗಸ್ವಾಮಿ ಸಿದ್ದಾರ್ಥ, ಗೌಡಹಳ್ಳಿ ಮಹೇಶ್, ವೆಂಕಟೇಶ್ ಬಾಬು, ಮಹೇಶ್ ಚಂದ್ರಪ್ರಿಯ, ರವಿತೇಜ, ಚಾ. ಶ್ರೀ ಜಗದೀಶ್, ಗೂಚಿ ರಮೇಶ್, ಟಿ.ಕೆ.ರಂಗಯ್ಯ, ಚನ್ನರಾಜ ದಾನವ ಕವಿಗೋಷ್ಠಿಯಲ್ಲಿ ಭಾಗವಹಿಸುವರೆಂದು ಪ್ರಕಟಣೆ ತಿಳಿಸಿದೆ.
ಏ. 24ರಂದು ಶ್ರೀ ಭಗೀರಥ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಚಾಮರಾಜನಗರ, ಏ. 22 :- ಜಿಲ್ಲಾಡಳಿತದ ವತಿಯಿಂದ ಶ್ರೀ ಭಗೀರಥ ಜಯಂತಿ ಆಚರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 24ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.ಈ ಸಭೆಗೆ ಎಲ್ಲ ಸಮುದಾಯ, ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು, ನಾಗರಿಕರು ಭಾಗವಹಿಸಿ ಅಗತ್ಯ ಸಲಹೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕ್ಷೇತ್ರ ಪುನರ್ವಿಂಗಡಣೆ ಅಧಿಸೂಚನೆ : ಆಕ್ಷೇಪಣೆ, ಸಲಹೆ ಸಲ್ಲಿಕೆಗೆ ಅವಕಾಶ
ಚಾಮರಾಜನಗರ, ಏ. 22 :- ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ ನಗರಸಭೆ, ಗುಂಡ್ಲುಪೇಟೆ ಪುರಸಭೆ, ಯಳಂದೂರು ಹಾಗೂ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್‍ಗಳ ಕ್ಷೇತ್ರ ಪುನರ್ವಿಂಗಡಣೆ ಕುರಿತಂತೆ ಏಪ್ರಿಲ್ 22ರಂದು ಹೊರಡಿಸಿರುವ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಸಂಬಂಧ ಆಕ್ಷೇಪಣೆ ಸಲಹೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ಕರಡು ಅಧಿಸೂಚನೆ ಪ್ರತಿಯನ್ನು ನಗರದ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇÀಶಕರ ಕಚೇರಿ, ಕೊಳ್ಳೇಗಾಲ ಉಪವಿಭಾಗಾಧಿಕಾರಿ ಕಚೇರಿ, ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಕಚೇರಿಗಳು ಹಾಗೂ ಆಯಾ ತಾಲೂಕು ತಹಸೀಲ್ದಾರ್ ಕಚೇರಿಗಳಲ್ಲಿ ಸಾರ್ವಜನಿಕರ ತಿಳಿವಳಿಕೆಗಾಗಿ ಪ್ರಕಟಿಸಲಾಗಿದೆ.
ಈ ಕರಡು ಅಧಿಸೂಚನೆಯಿಂದ ಬಾಧಿತರಾಗಬಹುದಾದ ಎಲ್ಲ ವ್ಯಕ್ತಿಗಳು, ನಾಗರಿಕರು ಲಿಖಿತ ಆಕ್ಷೇಪಣೆ ಅಥವಾ ಸಲಹೆಗಳನ್ನು ಸೂಕ್ತ ದಾಖಲಾತಿ ಹಾಗೂ ಸಕಾರಣದೊಂದಿಗೆ ಲಿಖಿತ ರೂಪದಲ್ಲಿ ಕರಡು ಅಧಿಸೂಚನೆ ದಿನಾಂಕದಿಂದ 15 ದಿನಗಳ ಒಳಗಾಗಿ ಅಂದರೆ ಮೇ 6ರೊಳಗೆ ನೇರವಾಗಿ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಬಹುದೆಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದ್ದಾರೆ.
No comments:
Post a Comment