ಜಿಲ್ಲಾಡಳಿತದಿಂದ ಭಗೀರಥ ಜಯಂತಿ ಅದ್ದೂರಿ ಆಚರಣೆ : ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
ಚಾಮರಾಜನಗರ, ಏ. 24 :- ಜಿಲ್ಲಾಡಳಿತ ಹಾಗೂ ವಿವಿಧ ಸಮುದಾಯ ಸಂಘಟನೆಗಳ ಸಹಕಾರದೊಂದಿಗೆ ಭಗೀರಥ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸÀಲಾಗಿದೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮತ್ತು ಜಿಲ್ಲಾಧಿಕಾರಿ ಬಿ. ರಾಮು ಅವರ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಗೀರಥ ಜಯಂತಿಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಯಿತು.
ಜಿಲ್ಲಾಧಿಕಾರಿ ಬಿ. ರಾಮು ಮಾತನಾಡಿ ಕಳೆದ ಬಾರಿ ಭಗೀರಥ ಜಯಂತಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಈ ಬಾರಿಯೂ ಯಶಸ್ವಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಬೇಕಿದೆ. ಈ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಿ ಕಾರ್ಯೋನ್ಮುಖರಾಗಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಭಗೀರಥ ಜಯಂತಿ ಕಾರ್ಯಕ್ರಮ ಸುಗಮ ನಿರ್ವಹಣೆಗೆ ಕಳೆದ ಬಾರಿ 6 ಸಮಿತಿಗಳನ್ನು ರಚಿಸಲಾಗಿತ್ತು. ಈ ಬಾರಿಯ ಸಮಾರಂಭಕ್ಕೂ ಸಮಿತಿಗಳಿಗೆ ಅಗತ್ಯವಿರುವ ಮುಖಂಡರು, ಪ್ರತಿನಿಧಿಗಳನ್ನು ಸೇರ್ಪಡೆ ಮಾಡಿಕೊಳ್ಳಬಹುದಾಗಿದೆ. ಆಯಾ ಸಮಿತಿಯು ವಹಿಸಿದ ಜವಾಬ್ದಾರಿಗೆ ಅನುಗುಣವಾಗಿ ಕಾರ್ಯಕ್ರಮದ ಸಿದ್ಧತೆಗೆ ಮುಂದಾಗಬೇಕಿದೆ ಎಂದು ಜಿಲ್ಲಾಧಿಕಾರಿ ರಾಮು ಅವರು ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಸಮಾರಂಭ ನಿಗದಿ ಮಾಡಲಾಗುವುದು. ಪ್ರವಾಸಿ ಮಂದಿರದಿಂದ ಭಗೀರಥ ಮಹರ್ಷಿಯವರ ಭಾವಚಿತ್ರ ಮೆರವಣಿಗೆಯನ್ನು ಕಲಾತಂಡದೊಂದಿಗೆ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಎಲ್ಲರು ಪೂರಕವಾಗಿ ಸಹಕರಿಸಬೇಕಿದೆ. ನಿಗದಿತ ವೇಳೆಗೆ ಸಮಾವೇಶಗೊಂಡು ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ ಎಂದರು.
ಭಗೀರಥ ಅವರ ಕುರಿತು ಉಪನ್ಯಾಸ ನೀಡಲು ಭಗೀರಥರ ಇತಿಹಾಸ ಕುರಿತು ಹೆಚ್ಚು ಬಲ್ಲವರನ್ನು ಆಹ್ವಾನ ಮಾಡಬೇಕು. ಹೀಗಾಗಿ ವಿಷಯ ತಜ್ಞರನ್ನು ಸಂಪರ್ಕಿಸಿ ಕಾರ್ಯಕ್ರಮದಂದು ಉಪನ್ಯಾಸ ನೀಡಲು ನಿರ್ಧಾರ ತೆಗೆದುಕೊಳ್ಳಬೇಕಿದೆ. ಈ ಕುರಿತು ನೀಡುವ ಸಲಹೆಗಳನ್ನು ಪರಿಗಣಿಸಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳುವುದು ಒಳಿತು ಎಂದು ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಇದೇವೇಳೆ ಕಾರ್ಯಕ್ರಮ ನಡೆಸುವ ಸಂಬಂಧ ಸಭೆಯಲ್ಲಿ ಹಾಜರಿದ್ದ ವಿವಿಧ ಮುಖಂಡರು, ಪ್ರತಿನಿಧಿಗಳು ಮಾತನಾಡಿ ಮೆರವಣಿಗೆ ಸಾಗುವ ಮಾರ್ಗಗಳನ್ನು ಅಚ್ಚುಕಟ್ಟುಗೊಳಿಸಬೇಕು. ಹೆಚ್ಚು ಜನರು ಸಮಾವೇಶಗೊಳ್ಳುವ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಸಕಾಲಕ್ಕೆ ಪೂರ್ಣಗೊಳಿಸುವುದೂ ಸೇರಿದಂತೆ ಇನ್ನಿತರ ಸಲಹೆಗಳನ್ನು ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್ ಜೈನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಿ. ನಾಗವೇಣಿ, ನಗರಸಭೆ ಆಯುಕ್ತರಾದ ರಾಜಣ್ಣ, ನಗರಸಭಾ ಸದಸ್ಯರಾದ ಮಹೇಶ್ ಉಪ್ಪಾರ್, ಮುಖಂಡರಾದ ಸಿ.ಎಂ. ಮಹಾದೇವಶೆಟ್ಟಿ, ಚಿಕ್ಕಮಹದೇವು, ಹನುಮಂತಶೆಟ್ಟಿ, ಮಂಗಲ ಶಿವಕುಮಾರ್, ಕೆ.ಟಿ. ನಾಗಶೆಟ್ಟಿ, ಕಾಮರಾಜು, ಎಂ.. ಜಯಕುಮಾರ್, ಸಿ.ಎಸ್. ನಾಗರಾಜು, ಜಯಸ್ವಾಮಿ, ಸ್ವಾಮಿ, ಶಿವಣ್ಣ, ಕಾಳಪ್ಪ, ನಾರಾಯಣ, ಆಲೂರು ನಾಗೇಂದ್ರ, ಗಡಿಮನೆ, ಕಟ್ಟೆಮನೆ ಯಜಮಾನರು, ಇತರೆ ಮುಖಂಡರು, ಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಮೂವರಿಗೆ ಕಠಿಣ ಶಿಕ್ಷೆ
ಚಾಮರಾಜನಗರ, ಏ. 24 - ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರಿಗೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಚಾಮರಾಜನಗರದ ಗ್ರಾಮಾಂತರ ಠಾಣೆ ಪೊಲೀಸರು ಮೊ.ಸಂ 278/2014 ರಲ್ಲಿ ನಾಗೇಂದ್ರ, ಹುಲುಗಾದ್ರಿನಾಯ್ಕ ಮತ್ತು ಸೂರಿ ಎಂಬುವರ ವಿರುಧ್ದ ಅಪ್ರಾಪ್ತ ಬಾಲಕಿಯ ಅಪಹರಣ ಹಾಗೂ ಅತ್ಯಾಚಾರದ ಆರೋಪ ಹೊರಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ನಡೆಸಿದ್ದ ಚಾಮರಾಜನಗರ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್.ಎಫ್. ಮಳವಳ್ಳಿ ಅವರು ಆರೋಪಿ ನಾಗೇಂದ್ರ ಎಂಬಾತನು 2014ರ ಅಕ್ಟೋಬರ್ 19 ರಂದು ರಾತ್ರಿ 10 ಗಂಟೆ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವುದು ಹಾಗೂ 2 ನೇ ಆರೋಪಿ ಹುಲುಗಾದ್ರಿನಾಯ್ಕ ಮತ್ತು 3ನೇ ಆರೋಪಿ ಸುರೇಶ ಅಲಿಯಾಸ್ ಸೂರಿ ಎಂಬವರು ಅಪರಾದ ಎಸಗಲು ನಾಗೇಂದ್ರನಿಗೆ ಸಹಕಾರ ಮತ್ತು ಕುಮ್ಮಕ್ಕು ನೀಡಿರುವುದು ರುಜುವಾತಾಗಿದೆ ಎಂದು ತೀರ್ಮಾನಿಸಿ ಆರೋಪಿಗಳಿಗೆ ಐ.ಪಿ.ಸಿ ಹಾಗೂ ಪೋಕ್ಸೋ ಕಾಯ್ದೆಯಡಿ ಶಿಕ್ಷೆ ವಿಧಿಸಿದರು.
1ನೇ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 2000 ರೂ ದಂಡ ಮತ್ತು 2ನೇ ಹಾಗೂ 3 ನೇ ಆರೋಪಿಗೆ 2 ವರ್ಷ ಕಠಿಣ ಸಜೆ ಹಾಗೂ ತಲಾ 1000 ಸಾವಿರ ದಂಡ ವಿಧಿಸಿ ತೀರ್ಪು ನೀಡಿದರು. ನೊಂದ ಬಾಲಕಿಗೆ ಸೂಕ್ತ ಪರಿಹಾರಕ್ಕಾಗಿ ಜಿಲ್ಲಾ ಕಾನೂನು ಸೇವ ಪ್ರಾಧಿಕಾರಕ್ಕೆ ಶಿಫಾರಸು ಮಾಡಿ ಜಿಲ್ಲಾ ನ್ಯಾಯದೀಶರು ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಸ್.ನಾಗರಾಜು ಕಾಮಗೆರೆಯವರು ವಾದ ಮಂಡಿಸಿದ್ದರು.
ವಿದ್ಯುತ್ ಸ್ಪರ್ಶ : ಮೂವರಿಗೆ ಕಠಿಣ ಸಜೆ
ಚಾಮರಾಜನಗರ, ಏ. 24 - ಜಮೀನಿನ ಸುತ್ತ ಅಳವಡಿಸಿದ್ದ ಜಿಂಕ್ ವೈರ್‍ಗೆ ಅಕ್ರಮವಾಗಿ ವಿದ್ಯುತ್ ಹಾಯಿಸಿದ ಪರಿಣಾಮ ವ್ಯಕ್ತಿಯೋರ್ವರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲೀಕರಾದ ಮೂವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2 ವರ್ಷಗಳ ಸಜೆ ಹಾಗೂ ಎಂಬತ್ತು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.ಯಳಂದೂರು ತಾಲೂಕಿನ ಕೊಮಾರನಪುರದ ಎನ್. ಸಿದ್ದರಾಜು, ಪುಟ್ಟಸಿದ್ದಮ್ಮ, ದರ್ಶನ್ ಶಿಕ್ಷೆಗೆ ಗುರಿಯಾದವರು. ಇವರು ತಮ್ಮ ಜಮೀನಿನಲ್ಲಿದ್ದ ಕಬ್ಬಿನ ಫಸಲಿನ ಸುತ್ತ ಮರದ ಗೂಟಗಳನ್ನು ನೆಟ್ಟು ಜಿಂಕ್ ವೈರ್ ಅಳವಡಿಸಿ ಅಕ್ರಮವಾಗಿ ವಿದ್ಯುತ್ ಹಾಯಿಸಿದ್ದರು. ನಟರಾಜು ಎಂಬುವವರು ಸಮೀಪದಲ್ಲೇ ಇರುವ ತಮ್ಮ ಜಮೀನಿನಲ್ಲಿ ನೀರು ಹಾಯಿಸಲು ಹೋದಾಗ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದರು. ಸದರಿ ಪ್ರಕರಣದ ವಿಚಾರಣೆ ನಡೆದು ಆರೋಪ ರುಜುವಾತಾದ ಹಿನ್ನೆಲೆಯಲ್ಲಿ ಮೂವರಿಗೆ 2 ವರ್ಷಗಳ ಕಠಿಣ ಸಜೆ ಹಾಗೂ 80000 ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಟಿ.ಎಚ್. ಲೋಲಾಕ್ಷಿ ವಾದ ಮಂಡಿಸಿದ್ದರು.
ಡಿಸೆಂಬರ್ ಅಂತ್ಯದೊಳಗೆ ಪರಿಶಿಷ್ಟರ ಕಲ್ಯಾಣ ಯೋಜನೆ ಗುರಿ ಸಾಧಿಸಿ : ಡಿಸಿ ಬಿ. ರಾಮು ತಾಕೀತು
ಚಾಮರಾಜನಗರ, ಏ. 24- ಪರಿಶಿಷ್ಟರ ಕಲ್ಯಾಣ ಯೋಜನೆ ಕಾರ್ಯಕ್ರಮಗಳನ್ನು ನಿಗದಿತ ವೇಳೆಗೆ ಅನುಷ್ಠಾನಗೊಳಿಸಿ ಡಿಸೆಂಬರ್ ಅಂತ್ಯದೊಳಗೆ ಗುರಿ ಸಾಧಿಸುವಂತೆ ಜಿಲ್ಲಾಧಿಕಾರಿ ಬಿ. ರಾಮು ಅವರು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ವರ್ಗದ ವಿಶೇಷ ಘಟಕ ಯೋಜನೆಯಡಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ವಿಶೇಷ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಸರ್ಕಾರ ಈಗಾಗಲೇ ಹಣ ನಿಗದಿ ಮಾಡಿದೆ. ಆಯಾ ಇಲಾಖೆಗಳಿಗೆ ಅನುದಾನ ಹಂಚಿಕೆ ನಿಗದಿಮಾಡಿದ್ದು ಅಧಿಕಾರಿಗಳು ಅನುದಾನಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಿ ಅನುಷ್ಠಾನ ತರುವ ಹೊಣೆಗಾರಿಕೆ ನಿರ್ವಹಿಸಬೇಕಿದೆ ಎಂದರು.
ಪ್ರತಿ ಇಲಾಖೆ ಅಧಿಕಾರಿಗಳು ನಿಗದಿಯಾಗಿರುವ ಅನುದಾನವನ್ನು ಜಿಲ್ಲಾ ಮಟ್ಟದಲ್ಲಿ ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮಕ್ಕೆ ವಿನಿಯೋಗಿಸಲು ಅಗತ್ಯವಿರುವ ಪ್ರಕ್ರಿಯೆ ಕೈಗೊಳ್ಳಬೇಕು. ಅನುದಾನ ಬಿಡುಗಡೆ ಕಾರ್ಯಕ್ರಮ ಅನುಷ್ಠಾನ ಮತ್ತಿತರ ಕೆಲಸಗಳಿಗೆ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಇಲಾಖೆಯ ಅಧಿಕಾರಿಗಳು ಅವರ ಇಲಾಖೆಯ ಕೇಂದ್ರ ಕಚೇರಿಯೊಂದಿಗೆ ಸತತ ಸಂಪರ್ಕದಲ್ಲಿದ್ದು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಗೆ ಅವಶ್ಯ ಮಾಹಿತಿ ನೀಡಿ ಗುರಿ ಸಾಧನೆ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದರು.
ಅನುದಾನ ಲಭ್ಯತೆಗೆ ಅನುಗುಣವಾಗಿ ಕಾರ್ಯಕ್ರಮಗಳು ಅನುಷ್ಠಾನವಾಗಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ನಿಯಮಾನುಸಾರ ನಡೆಸಬೇಕು. ಇನ್ನು ಮೂರು ತಿಂಗಳೊಳಗೆ ಫಲಾನುಭವಿಗಳ ಆಯ್ಕೆ ಸಂಬಂಧ ಕೈಗೊಳ್ಳಬೇಕಿರುವ ಎಲ್ಲ ಕೆಲಸಗಳನ್ನು ನಿರ್ವಹಿಸಬೇಕು. ಡಿಸೆಂಬರ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸಬೇಕು. ಶೇಕಡ 100ರಷ್ಟು ಪ್ರಗತಿ ಕಡ್ಡಾಯವಾಗಿ ಆಗಲೇಬೇಕು ಎಂದು ಜಿಲ್ಲಾಧಿಕಾರಿ ರಾಮು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಮಾತನಾಡಿ ಅಧಿಕಾರಿಗಳು ಪರಿಶಿಷ್ಟರ ಕಲ್ಯಾಣ ಕಾರ್ಯಕ್ರಮ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಅನುದಾನ ನಿಗದಿತ ಉದ್ದೇಶಕ್ಕೆ ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡುವ ನಿಟ್ಟಿನಲ್ಲಿ ತ್ವರಿತವಾಗಿ ಕಾಯೋರ್Àನ್ಮುಖರಾಗಬೇಕು. ಕಾಲಕಾಲಕ್ಕೆ ಸಭೆ ನಡೆಸಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ನಿಗದಿತ ವೇಳೆಗೆ ಪೂರ್ಣಗೊಳಿಸಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್. ಸರಸ್ವತಿ, ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಏ. 25ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ ಸಭೆ
ಚಾಮರಾಜನಗರ, ಏ. 24- ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 25ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರÉ.ಏ. 26ರಂದು ಮುಖ್ಯಮಂತ್ರಿಯವರ ಜಿಲ್ಲಾ ಪ್ರವಾಸ
ಚಾಮರಾಜನಗರ, ಏ. 24 - ಮುಖ್ಯಮಂತ್ರಿಯವರಾದ ಸಿದ್ಧರಾಮಯ್ಯ ಅವರು ಏಪ್ರಿಲ್ 26ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಿಗ್ಗೆ 11.30 ಗಂಟೆಗೆ ಗುಂಡ್ಲುಪೇಟೆ ಪಟ್ಟಣಕ್ಕೆ ಮುಖ್ಯಮಂತ್ರಿಯವರು ಆಗಮಿಸಿ ಅಲ್ಲಿ ನಡೆಯಲಿರುವ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 2 ಗಂಟೆಗೆ ನಂಜನಗೂಡಿಗೆ ತೆರಳುವರು ಎಂದು ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ತಿಳಿಸಿದ್ದಾರÉ.
ಏ. 27ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ವಿಚಾರ ಸಂಕಿರಣ
ಚಾಮರಾಜನಗರ, ಏ. 24- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಅಂಗವಾಗಿ ಅಂಬೇಡ್ಕರ್ ಅವರ ಕೊಡುಗೆ, ಚಿಂತನೆಗಳ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಏಪ್ರಿಲ್ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಪ್ರಸ್ತಾವಿತ ನಳಂದ ಬೌದ್ಧ ವಿಶ್ವಿದ್ಯಾನಿಲಯದ ಬೋಧಿದತ್ತ ಬಂತೇಜಿರವರು ದಿವ್ಯ ಸಾನಿಧ್ಯ ವಹಿಸುವರು. ಜಿಲ್ಲಾಧಿಕಾರಿ ಬಿ. ರಾಮು ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು.
ಖ್ಯಾತ ಸಾಹಿತಿ ಬಿ.ಟಿ. ಲಲಿತಾನಾಯಕ್ ಅವರು ಮೌಢ್ಯ ವಿಮೋಚನೆಗೆ ಬಾಬಾ ಸಾಹೇಬರ ಚಿಂತನೆಗಳು ಎಂಬ ವಿಷಯ ಕುರಿತು, ಹೈಕೋರ್ಟ್ ವಕೀಲರಾದ ಶ್ರೀಧರ ಪ್ರಭು ಅವರು ಮೀಸಲಾತಿ – ವರ್ತಮಾನದ ಸವಾಲುಗಳು ಎಂಬ ಬಗ್ಗೆ ಮತ್ತು ಕೃಷಿಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತಲಕಾಡು ಚಿಕ್ಕರಂಗೇಗೌಡ ಅವರು ದಲಿತೇತರ ಸಮುದಾಯಕ್ಕೆ ಬಾಬಾ ಸಾಹೇಬರ ಕೊಡುಗೆ ಎಂಬ ಬಗ್ಗೆ ವಿಚಾರ ಮಂಡಿಸುವರೆಂದು ಡಾ. ಬಿ.ಆರ್. ಅಂಬೇಡ್ಕರ್‍ರವರ ಕುರಿತ ವಿಚಾರ ಸಂಕಿರಣ ಉಪಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಏ. 26ರಂದು ಮಹಿಳಾ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತು ಕಾನೂನು ಅರಿವು ಕಾರ್ಯಕ್ರಮ
ಚಾಮರಾಜನಗರ, ಏ. 24 (- ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಕುರಿತ (ಪೋಕ್ಸೋ) ಕಾನೂನು ಅರಿವು ಕಾರ್ಯಕ್ರಮವನ್ನು ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಲಕ್ಷ್ಮಣ್ ಎಫ್ ಮಳವಳ್ಳಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಅಧಿಕಾರಿ ವಿಠಲ್ ಪೂಜಾರಿ ಅಧ್ಯಕ್ಷತೆ ವಹಿಸುವರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್. ವಿರೂಪಾಕ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಸರ್ವೇಶ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಮಕ್ಕಳ ಮೇಲಿನ ದೌರ್ಜನ್ಯ ತಡೆ ಬಗ್ಗೆ ವಿಶೇಷ ಸರ್ಕಾರಿ ವಕೀಲರಾದ ನಾಗರಾಜು, ಮಹಿಳಾ ದೌರ್ಜನ್ಯ ವಿರುದ್ಧದ ಕಾನೂನು ರಕ್ಷಣೆ ಬಗ್ಗೆ ಕಾನೂನು ಅಧಿಕಾರಿ ಶಕೀಲ ಅಬೂಬ್ಕರ್ ಅವರು ಉಪನ್ಯಾಸ ನೀಡುವರೆಂದು ಪ್ರಕಟಣೆ ತಿಳಿಸಿದೆ.
ಬಾಲ್ಯವಿವಾಹ ತಡೆ : ಮಾಹಿತಿ ನೀಡಲು ಮನವಿ
ಚಾಮರಾಜನಗರ, ಏ. 24- ಜಿಲ್ಲೆಯಲ್ಲಿ ಅಕ್ಷಯ ತೃತೀಯ ದಿನವಾದ ಏಪ್ರಿಲ್ 29ರಂದು ಹೆಚ್ಚು ಸಂಖ್ಯೆಯಲ್ಲಿ ವಿವಾಹ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಬಾಲ್ಯ ವಿವಾಹದಂಥಹ ಮಾಹಿತಿ ಇದ್ದಲ್ಲಿ ಕೂಡಲೇ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳ ಗಮನಕ್ಕೆ ತರುವಂತೆ ಕೋರಲಾಗಿದೆ.ಅಕ್ಷಯ ತೃತೀಯ ದಿನದ ಅಂಗವಾಗಿ ಕಲ್ಯಾಣ ಮಂಟಪ, ಸಂಘ ಸಂಸ್ಥೆಗಳು, ದೇವಸ್ಥಾನಗಳಲ್ಲಿ ಹೆಚ್ಚಾಗಿ ಸಾಮೂಹಿಕ ವಿವಾಹಗಳನ್ನು ಆಯೋಜನೆ ಮಾಡುವುದು ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಬಾಲ್ಯ ವಿವಾಹಗಳು ನಡೆಯುವುದು ಹಲವು ಸಂದರ್ಭಗಳಲ್ಲಿ ಬೆಳಕಿಗೆ ಬಂದಿರುವುದರಿಂದ ಗ್ರಾಮದಿಂದ ಜಿಲ್ಲಾಮಟ್ಟದವರೆಗೆ ಬಾಲ್ಯವಿವಾಹ ತಡೆಗಟ್ಟುವುದು ಅಗತ್ಯವಾಗಿದೆ. ಹೀಗಾಗಿ ಬಾಲ್ಯವಿವಾಹ ನಡೆಯುತ್ತಿದೆ ಎಂದು ತಿಳಿದುಬಂದಲ್ಲಿ ನಾಗರಿಕರು ಸಂಘಸಂಸ್ಥೆಗಳು ಆಯಾ ವ್ಯಾಪ್ತಿಯ ಬಾಲ್ಯವಿವಾಹ ನಿಷೇಧ ಅಧಿಕಾರಿಗಳಿಗೆ ದೂರು, ಮಾಹಿತಿ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ.
ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ತುಂಬಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಮುಖ್ಯವಾಗಿದೆ. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಪರಾಧವಾಗಿರುತ್ತದೆ. ಅಪರಾಧಕ್ಕೆ 2 ವರ್ಷಗಳ ಕಠಿಣ ಜೈಲು ವಾಸ ಅಥವಾ ರೂ. 1 ಲಕ್ಷದವರೆಗೆ ದಂಡ ಅಥವಾ ಎರಡೂ ಇದ್ದು ಜಾಮೀನು ರಹಿತ ವಿಚಾರಣಾರ್ಹ ಅಪರಾಧವಾಗಿರುತ್ತದೆ.
ವಿವಾಹಕ್ಕೂ ಮೊದಲು ವಯಸ್ಸಿನ ದೃಢೀಕರಣ ಹಾಗೂ ಅರ್ಜಿ ನೀಡಿ ತಹಸೀಲ್ದಾರ್ ಅವರಿಂದ ಅನುಮತಿ ಪಡೆಯಬೇಕು. ಸಂಪೂರ್ಣ ಮಾಹಿತಿಯನ್ನು ನಗರದ ಜಿಲ್ಲಾಡಳಿತ ಭವನದ ಮೊದಲನೇ ಮಹಡಿಯಲ್ಲಿರುವ (ಕೊ.ಸಂಖ್ಯೆ 127) ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ (ದೂ.ಸಂ. 08226-222354)ಗೆ ನೀಡುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಏ. 25ರಂದು ಭಾರತದ ಪ್ರಜಾಪ್ರಭುತ್ವದಲ್ಲಿ ನೀತಿ ಕುರಿತು ಕಾರ್ಯಾಗಾರ
ಚಾಮರಾಜನಗರ, ಏ. 24- ನಗರದ ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗವು ಭಾರತದ ಪ್ರಜಾಪ್ರಭುತ್ವದಲ್ಲಿ ನೀತಿ ಕುರಿತು ಒಂದು ದಿನದ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಏಪ್ರಿಲ್ 25ರಂದು ಬೆಳಿಗ್ಗೆ 10.30 ಗಂಟೆಗೆ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದೆ.ಮೈಸೂರು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಮುಜಾಫರ್ ಅಸ್ಸಾದಿ ಕಾರ್ಯಾಗಾರ ಉದ್ಘಾಟಿಸುವರು. ಮೈಸೂರು ವಿವಿ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕರು ಹಾಗೂ ಅಧ್ಯಕ್ಷರೂ ಆದ ಪ್ರೊ. ಜಿ.ಟಿ. ರಾಮಚಂದ್ರಪ್ಪ, ಸಹಾಯಕ ಪ್ರಾಧ್ಯಾಪಕರಾದ ಡಾ. ಕೃಷ್ಣ ಹೊಂಬಳ್ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳುವರು.
ಡಾ. ಬಿ.ಆರ್. ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರಾದ ಪ್ರೊ. ಶಿವಬಸವಯ್ಯ ಅಧ್ಯಕ್ಷತೆ ವಹಿಸುವರು. ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ.ಪಿ. ಪರಮಶಿವಯ್ಯ, ಉಪನ್ಯಾಸಕರಾದ ಆರ್. ಭಾಗ್ಯ, ಮಹೇಶ, ತೊಳಸಮ್ಮ ಕಾರ್ಯಾಗಾರದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದÉ.
No comments:
Post a Comment