Wednesday, 26 April 2017

26-04-2017 ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ



ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ

ಚಾಮರಾಜನಗರ, ಏ. 26 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭವನ್ನು ಏಪ್ರಿಲ್ 28ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಭಿಕ್ಕುಗಳಾದ ಪರಮಪೂಜ್ಯ ಬೋಧಿರತ್ನ ಬಂತೇಜಿ ದಿವ್ಯಸಾನಿಧ್ಯ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನದ ಅನಾವರಣ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೆ. ಆರ್. ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಉಮಾಶಂಕರ್ ಅವರು ಮುಖ್ಯ ಭಾಷಣ ಮಾಡುವರು.
ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಏಪ್ರಿಲ್ 27ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳ ಕುರಿತು ವಿಚಾರ ಸಂಕಿರಣ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಏ. 27ರಂದು ವಿದ್ಯುತ್ ವ್ಯತ್ಯಯ

ಚಾಮರಾಜನಗರ, ಏ. 26 - ಸಂತೆಮರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಏಪ್ರಿಲ್ 29ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೊನ್ನೂರು, ಸಂತೇಮರಹಳ್ಳಿ, ನವಿಲೂರು, ಆಲ್ದೂರು, ಅಂಬಳೆ, ಕುದೇರು, ಮಂಗಲ, ಕೆಂಪನಪುರ, ದುಗ್ಗಟ್ಟಿ ಹಾಗೂ ಚುಂಗಡಿಪುರ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು