ಮೌಢ್ಯ ಆಚರಣೆ ಕೈಬಿಡಿ : ಬಿ.ಟಿ. ಲಲಿತಾನಾಯಕ್
ಚಾಮರಾಜನಗರ, ಏ. 27 :- ಮೌಢ್ಯ ಆಚರಣೆ ಸಂಪ್ರದಾಯಗಳನ್ನು ಕೈಬಿಟ್ಟು ಅಂಬೇಡ್ಕರ್ ಅವರ ವೈಜ್ಞಾನಿಕ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಖ್ಯಾತ ಸಾಹಿತಿ ಹಾಗೂ ಮಾಜಿ ಸಚಿವರಾದ ಬಿ.ಟಿ. ಲಲಿತಾನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಚಿಂತನೆಗಳ ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮೌಢ್ಯ ವಿಮೋಚನೆಗೆ ಬಾಬಾ ಸಾಹೇಬರ ಚಿಂತನೆಗಳು ಎಂಬ ವಿಷಯ ಕುರಿತು ಅವರು ಮಾತನಾಡಿದರು. ಸಮಾಜದಲ್ಲಿ ಆಚರಣೆಯಲ್ಲಿರುವ ಅನೇಕ ಮೌಢ್ಯತೆ ವಿಚಾರಗಳನ್ನು ಬಿಡಬೇಕಿದೆ. ಅಂಧ ಅನುಕರಣೆಯನ್ನು ಮಾಡಬಾರದು. ಆರಾಧನೆಯ ಸ್ವರೂಪ ಬದಲಾಗಬೇಕಿದೆ. ಅಂಬೇಡ್ಕರ್ ಬುದ್ಧ ಅವರು ವೈಜ್ಞಾನಿಕ, ವೈಚಾರಿಕತೆ ಮಾರ್ಗವನ್ನು ತೋರಿಸಿದ್ದಾರೆ. ಇದನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ ಎಂದರು. ಅಂಬೇಡ್ಕರ್ ಅವರು ಎಲ್ಲ ಜನರ ಸಂಸ್ಕøತಿ ಒಳಿತಿಗಾಗಿ ಕಾನೂನು ರೂಪಿಸಲು ಹೊರಟರು. ತಾಯಿಕರುಳಿನ ಸ್ವಭಾವದ ಅಂಬೇಡ್ಕರ್ ಅವರು ಅವರ ಖಾಸಗಿ ಬದುಕಿನ ಸುಖದ ಬಗ್ಗೆ ಚಿಂತೆ ಮಾಡಲಿಲ್ಲ. ಸರ್ವಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಫಲವಾಗಿ ಇಂದಿನ ಪೀಳಿಗೆ ಅನುಕೂಲ ಪಡೆಯಲು ಸಾಧ್ಯವಾಗಿದೆ ಎಂದು ಲಲಿತಾನಾಯಕ್ ಅಭಿಪ್ರಾಯ ತಿಳಿಸಿದರು. ದಲಿತೇತರ ಸಮುದಾಯಕ್ಕೆ ಬಾಬಾ ಸಾಹೇಬರ ಕೊಡುಗೆ ಎಂಬ ವಿಷಯ ಕುರಿತು ಮಾತನಾಡಿದ ಸಾಹಿತಿ ಕೃಷಿಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆದ ತಲಕಾಡು ಚಿಕ್ಕರಂಗೇಗೌಡ ಅವರು ಎಲ್ಲ ಜನರ ಬದುಕಿಗೆ ಒಳಿತನ್ನೇ ಬಯಸಿ ಸಂವಿಧಾನ ರಚಿಸಿದ ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿಯಾಗಿದ್ದಾರೆ. ಅವರ ರೂಪಿಸಿದ ಸಂವಿಧಾನದಡಿ ಪ್ರತಿಯೊಬ್ಬರಿಗೂ ರಕ್ಷಣೆ ಇದೆ. ಈ ವಿಚಾರವನ್ನು ಎಲ್ಲ ಜನತೆಗೆ ಅವರದೇ ಧಾಟಿಯಲ್ಲಿ ಮನಮುಟ್ಟುವ ರೀತಿಯಲ್ಲಿ ತಿಳಿಸುವ ಅವಶ್ಯಕತೆ ಇದೆ ಎಂದರು. ಶಾಸಕರಾದ ಎಸ್. ಜಯಣ್ಣ ಮಾತನಾಡಿ ಅಂಬೇಡ್ಕರ್ ಅವರು ಶೈಕ್ಷಣಿಕ, ಆರ್ಥಿಕ ಹಾಗೂ ಸಮಾನತೆ ಸಾಧಿಸಲು ಸಂವಿಧಾನದಡಿ ಅವಕಾಶ ಮಾಡಿಕೊಟ್ಟಿದ್ದಾರೆ. ಅಂಬೇಡ್ಕರ್ ಅವರ ಆಶಯ ಚಿಂತನೆಗಳನ್ನು ಅರ್ಥ ಮಾಡಿಕೊಂಡು ಮುನ್ನಡೆಯಬೇಕಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಬಿ. ರಾಮು ಅವರು ಅಂಬೇಡ್ಕರ್ ಅವರು ಶೋಷಣೆಯ ವಿರುದ್ಧ ಏಕಾಂಗಿಯಾಗಿ ಹೋರಾಟ ಮಾಡಿದರು. ಕಷ್ಟ ಕಾರ್ಪಣ್ಯಗಳನ್ನು ನುಂಗಿಕೊಂಡು ಎಲ್ಲರ ಹಿತಕ್ಕಾಗಿ ಕಾಳಜಿ ವಹಿಸಿ ಶ್ರಿಮಿಸಿದ ಮಹಾನ್ ವ್ಯಕ್ತಿ. ಹಲವಾರು ಮಹತ್ವದ ವಿಷಯಗಳನ್ನು ಅಧ್ಯಯನ ಮಾಡಿ ಅರ್ಹತೆ ಆಧಾರದ ಮೇಲೆ ಪದವಿ ಪಡೆದ ಮೇರು ವ್ಯಕ್ತಿತ್ವದವರು. ಮಹಿಳೆಯರು, ಕಾರ್ಮಿಕರು, ಶ್ರಮಜೀವಿಗಳು ಸೇರಿದಂತೆ ಸರ್ವ ವರ್ಗದವರ ಅಭಿವೃದ್ಧಿಗೆ ಚಿಂತಿಸಿ ಹೋರಾಟ ಮಾಡಿದರು. ಅಂಬೇಡ್ಕರ್ ಅವರ ಜ್ಞಾನ ಮಾರ್ಗದಲ್ಲಿ ನಾವು ಸಾಗಬೇಕಿದೆ ಎಂದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮಕ್ಕಳು ಇಂದಿನ ಯುವ ಪೀಳಿಗೆಗೂ ತಲುಪಿಸಬೇಕಾದ ಅವಶ್ಯಕತೆ ಇದೆ. ಹೀಗಾಗಿ ಅಂಬೇಡ್ಕರ್ ಕುರಿತ ವಿಚಾರ ಸಂಕಿರಣದಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಯುವ ಜನಾಂಗ ಪಾಲ್ಗೊಳ್ಳಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಸ್ತಾವಿತ ನಳಂದ ಬೌದ್ಧ ವಿಶ್ವವಿದ್ಯಾನಿಲಯದ ಬೋಧಿತತ್ವ ಬಂತೇಜಿ ಮಾತನಾಡಿ ನಳಂದ ಬೌದ್ಧ ವಿಶ್ವವಿದ್ಯಾಲಯ ಸ್ಥಳಕ್ಕಾಗಿ ಗುರುತಿಸಲಾಗಿರುವ ಜಾಗದಲ್ಲೇ ಬುದ್ಧ ಅಂಬೇಡ್ಕರ್ ಬಗ್ಗೆ ಚಿಕ್ಕ ಮಕ್ಕಳಿಗೂ ವಿವರವಾಗಿ ತಿಳಿಸುವ ಅಧ್ಯಯನ ಕೇಂದ್ರವನ್ನು ಆರಂಭಿಸಲಾಗುತ್ತದೆ, ಸಮಾಜ ಕಲ್ಯಾಣ ಇಲಾಖೆ ಹೆಚ್ಚಿನ ಅನುದಾನ ನೀಡುತ್ತಿದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಕುಮಾರ್ ಆರ್. ಜೈನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಕೆ. ಸತೀಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಮುನಿರಾಜಪ್ಪ, ವಿಚಾರ ಸಂಕಿರಣ ಸಮಿತಿಯ ಅಧ್ಯಕ್ಷರಾದ ಕೃಷಿ ಜಂಟಿನಿರ್ದೇಶಕರಾದ ತಿರುಮಲೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮೇ. 2ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ
ಚಾಮರಾಜನಗರ, ಏ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು. ಮಧ್ಯಾಹಣ 12.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಹರ್ಷಿ ಭಗೀರಥ ಅವರ ಭಾವಚಿತಕ್ಕೆ ಪುಷ್ಪಾರ್ಚನೆ ಮಾಡುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಜನಪದ ವಿಧ್ವಾಂಸÀರಾದ ಡಾ. ಪಿ.ಕೆ. ರಾಜಶೇಖರ್ ಅವರು ಮುಖ್ಯ ಭಾಷಣ ಮಾಡುವರು. ಅಮಚವಾಡಿಯ ಮಂಜುನಾಥಶೆಟ್ಟಿ ಮತ್ತು ತಂಡದವರು ಜನಪದ ಗೀತೆ ಗಾಯನ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ
ಏ. 28ರಂದು ಪತ್ರಕರ್ತರಿಗೆ ಸಂವಾದ
ಚಾಮರಾಜನಗರ, ಏ. 27 - ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಈ ಸಂಬಂಧ ಇರುವ ಕಾನೂನುಗಳ ತಿಳಿವಳಿಕೆ ಕುರಿತು ಪತ್ರಕರ್ತರಿಗಾಗಿ ಸಂವಾದ ಕಾರ್ಯಕ್ರಮವನ್ನು ಏಪ್ರಿಲ್ 28ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಕಲಾಮಂದಿರದ ಮನೆಯಂಗಳ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಯೂನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ, ಬೆಂಗಳೂರಿನ ಸಮಗ್ರ ಮಕ್ಕಳ ರಕ್ಷಣಾ ಸಂಸ್ಥೆ ಫರ್ಭಿಂಡೆನ್ ಆಶ್ರಯದಲ್ಲಿ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ವರದಿ ಮಾಡುವ ಸಂದರ್ಭದಲ್ಲಿ ಗಮನಿಸಬೇಕಾದ ನಿಯಮಾವಳಿಗಳ ಕುರಿತು ಮಾಹಿತಿ ನೀಡುವುದು ಸಹ ಕಾರ್ಯಕ್ರಮದ ಉದ್ದೇಶವಾಗಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ ಹಾಗೂ ಕೊಡಗು ಜಿಲ್ಲೆಯ ಪತ್ರಕರ್ತರಿಗೆ ಸಂವಾದ ಕಾಂiÀರ್iಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ
. ಏ. 28ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ
ಚಾಮರಾಜನಗರ, ಏ. 27 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಮತ್ತು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮದಿನಾಚರಣೆ ಸಮಾರಂಭವನ್ನು ಏಪ್ರಿಲ್ 28ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ ಮಾಡುವ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು. ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಭಿಕ್ಕುಗಳಾದ ಪರಮಪೂಜ್ಯ ಬೋಧಿರತ್ನ ಬಂತೇಜಿ ದಿವ್ಯಸಾನಿಧ್ಯ ವಹಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನದ ಅನಾವರಣ ಮಾಡುವರು. ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೆ. ಆರ್. ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಉಮಾಶಂಕರ್ ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
No comments:
Post a Comment