Friday, 28 April 2017

28-04-2017 ವಿಶ್ವದಲ್ಲೇ ಅತೀ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಮಹಾಜ್ಞಾನಿ-ಆರ್. ಧ್ರುವನಾರಾಯಣ

        ಅಂಬೇಡ್ಕರ್ ವಿಶ್ವದ ಮಹಾಜ್ಞಾನಿ : ಆರ್. ಧ್ರುವನಾರಾಯಣ


ಚಾಮರಾಜನಗರ, ಏ. 28 - ವಿಶ್ವದಲ್ಲೇ ಅತೀ ಶ್ರೇಷ್ಠ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಶ್ವದ ಮಹಾಜ್ಞಾನಿ ಎಂದು ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ತಿಳಿಸಿದರು.
ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಇಂದು ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದೇಶದಲ್ಲೂ ಅಧ್ಯಯನ ಮಾಡಿ ಅಪಾರ ಪಾಂಡಿತ್ಯ ಪಡೆದಿದ್ದ ಅಂಬೇಡ್ಕರ್ ಅವರಿಗೆ ವಿದೇಶದಲ್ಲೇ ಉನ್ನತ ಹುದ್ದೆ ಅಲಂಕರಿಸಿ ಇರುವ ಅವಕಾಶಗಳೂ ಇದ್ದವು. ಆದರೆ ಶೋಷಿತ ಸಮುದಾಯದ ಪರ ಹೋಟಾಟ ನಡೆಸಿ ತಳವರ್ಗ ಸೇರಿದಂತೆ ಎಲ್ಲರ ಪರವಾಗಿ ಕಾಳಜಿ ತೋರಿಸಿ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅವರ ಜೀವನವೇ ತೆರೆದ ಪುಸ್ತಕವಾಗಿದೆ ಎಂದು ಧ್ರುವನಾರಾಯಣ ತಿಳಿಸಿದರು.
ಅಂಬೇಡ್ಕರ್ ಅವರು ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಎಲ್ಲ ಸೌಲಭ್ಯಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಸೇವೆ ಸಲ್ಲಿಸಿದರು. ವಿವಿಧ ಜಾತಿ ಧರ್ಮವುಳ್ಳ ಭಾರತದಲ್ಲಿ ಎಲ್ಲರೂ ಒಂದೇ ಎಂದು ಸಾಗಬೇಕಾದರೆ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಸಾಧ್ಯವಾಗುತ್ತಿದೆ ಎಂದು ಧ್ರುವನಾರಾಯಣ ಅಭಿಪ್ರಾಯಪಟ್ಟರು.
ವಿಧಾನಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಮಾತನಾಡಿ ಎಲ್ಲರೂ ಸ್ವಾಭಿಮಾನಿ ಸ್ವಾವಲಂಬಿಗಳಾಗಿ ಬದುಕಬೇಕು. ಎಲ್ಲ ಹುದ್ದೆಗಳು ಸೇರಿದಂತೆ ಸಮಾಜದಲ್ಲಿ ಸಮಾನತೆ ಇರಬೇಕೆಂಬ ಆಶಯದಿಂದ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಅವರ ಉದ್ದೇಶಗಳನ್ನು ಸಾಕಾರಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಮಾಜದ ತಾರತಮ್ಯವನ್ನು ಹೋಗಲಾಡಿಸಿ ಸರ್ವರಿಗೂ ಅವಕಾಶಗಳು ಲಭಿಸಬೇಕೆಂಬ ನಿಟ್ಟಿನಲ್ಲಿ ಶ್ರಮಿಸಿದ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರು. ಅವರ ಅಪಾರಜ್ಞಾನ ಮಾರ್ಗದ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕು ಎಂದರು.
ಟಿ. ನರಸೀಪುರದ ನಳಂದ ಬುದ್ಧವಿಹಾರದ ಬೌದ್ಧ ಬಿಕ್ಕುಗಳಾದ ಬೋಧರತ್ನ ಬಂತೇಜಿ ಅವರು ಮಾತನಾಡಿ ಅಂಬೇಡ್ಕರ್ ಅವರ ಚಿಂತನೆ ಆಶಯ ಅನುಸಾರ ನಡೆಯಬೇಕಿದೆ. ಅಂಬೇಡ್ಕರ್ ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಿದರೆ ಮಾತ್ರ ಅಂಬೇಡ್ಕರ್ ಅವರ ಜಯಂತಿ ಆಚರಣೆಗೂ ಗೌರವ ಸೂಚಿಸಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಶಾಸಕರಾದ ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ ಅವರು ಮಾತನಾಡಿದರು.
ಕೆ.ಆರ್. ಪೇಟೆ ಸರ್ಕಾರಿ ಪ್ರಥಮದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕರಾದ ಡಾ.ಎಚ್.ಡಿ. ಉಮಾಶಂಕರ್ ಮುಖ್ಯ ಭಾಷಣ ಮಾಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಚಾಲನೆ ನೀಡಿದರು.
ಸಮಾರಂಭದ ಸ್ಥಳದ ಬಳಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವಮಾನದ ಛಾಯಾಚಿತ್ರ ಪ್ರದರ್ಶನ ಏರ್ಪಾಡಾಗಿತ್ತು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನಾವಳಿಗಳನ್ನು ತಿಳಿಸುವ ಉದ್ದೇಶದಿಂದ ಮೈಸೂರಿನ ಕ್ರಿಯಾ ಟುವಾಡ್ರ್ಸ ಸೊಸೈಟಿ ಅಂಬೇಡ್ಕರ್ ಅವರ ಛಾಯಾಚಿತ್ರ ಪ್ರದರ್ಶನವನ್ನು ಆಯೋಜಿಸಿತ್ತು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿದ ಬಳಿಕ ನೂರಾರು ಜನರು ಛಾಯಾಚಿತ್ರ ಪ್ರದರ್ಶನ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಎಸ್.ಜಯಣ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾಮಂಡಳಿಯ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ನಗರಸಭೆ ಅದ್ಯಕ್ಷರಾದ ಎಸ್.ಎನ್. ರೇಣುಕ, ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪ, ತಾ.ಪಂ. ಅಧ್ಯಕ್ಷರಾದ ಎಚ್.ವಿ. ಚಂದ್ರು. ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ಕೆ.ಪಿ. ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಆರ್. ಬಾಲರಾಜು, ಮರುಗದಮಣಿ, ಬಾಲರಾಜು, ಚನ್ನಪ್ಪ, ಉಮಾವತಿ, ಚಂದ್ರಕಲಾ, ಜಯಂತಿ, ಶಿವಮ್ಮ, ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಹರೀಶ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಕೆ.ಎಚ್. ಸತೀಶ್, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಏ. 29ರಂದು ನಗರದಲ್ಲಿ ಬಸವ ಜಯಂತಿ ಕಾರ್ಯಕ್ರಮ

ಚಾಮರಾಜನಗರ, ಏ. 28 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಮಹಾನ್ ಮಾನವತಾವಾದಿ ಸಮಾಜ ಸುಧಾರಕರಾದ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿ ಆಚರಣೆ ಸಮಾರಂಭವನ್ನು ಏಪ್ರಿಲ್ 29ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಜಗಜ್ಯೋತಿ ಬಸವೇಶ್ವರರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 11 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಕಾರ್ಯಕ್ರಮ ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ನಗರದ ವಿರಕ್ತ ಮಠದ ಶ್ರೀ ಶ್ರೀ ಚನ್ನಬಸವಸ್ವಾಮಿಗಳು ದಿವ್ಯಸಾನಿಧ್ಯ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಆಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ. ಬೊಮ್ಮಯ್ಯ, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಬೆಂಗಳೂರಿನ ಎಂ. ಮಹಮದ್ ಅರ್ಫಾತ್ ಅಲಂ ಅವರು ಮುಖ್ಯ ಭಾಷಣ ಮಾಡುವರು. ನಗರದ ಕದಳಿ ಮಹಿಳಾ ವೇದಿಕೆಯಿಂದ ವಚನÀ ಗಾಯನ ಕಾರ್ಯಕ್ರಮ ಏರ್ಪಾಡು ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮೇ. 2ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ

ಚಾಮರಾಜನಗರ, ಏ. 28 - ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಮೇ 2ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ವಿವಿಧ ಜಾನಪದ ಕಲಾತಂಡಗಳೊಡನೆ ಸಾಗಲಿರುವ ಶ್ರೀ ಮಹರ್ಷಿ ಭಗೀರಥ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ. ರಾಮಚಂದ್ರ ಅವರು ಚಾಲನೆ ನೀಡುವರು.
ಮಧ್ಯಾಹಣ 12.30 ಗಂಟೆಗೆ ನಗರದ ಪೇಟೆ ಪ್ರೈಮರಿ ಶಾಲಾ ಆವರಣದÀಲ್ಲಿ ವೇದಿಕೆ ಸಮಾರಂಭ ನಡೆಯಲಿದ್ದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು  ಉದ್ಫಾಟಿಸುವರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಲೋಕಸಭಾ ಸದಸ್ಯರಾದ ಆರ್. ಧ್ರುವನಾರಾಯಣ ಅವರು ಮಹರ್ಷಿ ಭಗೀರಥ ಅವರ ಭಾವಚಿತಕ್ಕೆ ಪುಷ್ಪಾರ್ಚನೆ  ಮಾಡುವರು.
ವಿಧಾನ ಪರಿಷತ್ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು. ಶಾಸಕರಾದ ಎಸ್.ಜಯಣ್ಣ, ಆರ್. ನರೇಂದ್ರ, ಎಂ.ಸಿ. ಮೋಹನಕುಮಾರಿ ಉರುಫ್ ಗೀತಾ, ಕೆ.ಟಿ. ಶ್ರೀಕಂಠೇಗೌಡ, ಎಸ್. ನಾಗರಾಜು (ಸಂದೇಶ್ ನಾಗರಾಜು), ಆರ್. ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಟ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಎಂ. ಚಿನ್ನಸ್ವಾಮಿ, ಮೈಸೂರು ಕಾಡಾ ಅಧ್ಯಕ್ಷರಾದ ಹೆಚ್.ಎಸ್. ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್. ಬಸವರಾಜು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ. ರಾಜಪ್ಪÀ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಜನಪದ ವಿಧ್ವಾಂಸÀರಾದ ಡಾ. ಪಿ.ಕೆ. ರಾಜಶೇಖರ್ ಅವರು ಮುಖ್ಯ ಭಾಷಣ ಮಾಡುವರು. ಅಮಚವಾಡಿಯ ಮಂಜುನಾಥಶೆಟ್ಟಿ ಮತ್ತು ತಂಡದವರು ಜನಪದ ಗೀತೆ ಗಾಯನ ಕಾರ್ಯಕ್ರಮ ನಡೆಸಿಕೊಡುವರು ಎಂದು ಪ್ರಕಟಣೆ ತಿಳಿಸಿದೆ.

ಏ. 30ರಂದು ಪಲ್ಸ್ ಪೋಲಿಯೊ : ಒಟ್ಟು 80629 ಮಕ್ಕಳಿಗೆ ಲಸಿಕೆ ನೀಡುವ ಗುರಿ 

ಚಾಮರಾಜನಗರ, ಏ. 28 ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆಗೆ ಕಾರಣವಾಗುವ ಪೋಲಿಯೊ ರೋಗ ಮುಕ್ತಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಜಿಲ್ಲೆಯಲ್ಲಿ ವ್ಯಾಪಕ ಸಿದ್ದತೆ ಕೈಗೊಳ್ಳಲಾಗಿದೆ.
ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದ ವರೆಗಿನ ಮಕ್ಕಳಿಗೆ ಪೋಲಿಯೊ ಹನಿ ನೀಡಲಾಗುತ್ತದೆ.
ಜಿಲ್ಲೆಯಲ್ಲಿ ಏಪ್ರಿಲ್ 30ರಂದು 2ನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಅಂದಾಜು ಒಟ್ಟು 80629 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ.
ಚಾಮರಾಜನಗರ ತಾಲ್ಲೂಕಿನಲ್ಲಿ 26648, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 17629, ಕೊಳ್ಳೇಗಾಲ ತಾಲ್ಲೂಕಿನಲ್ಲಿ 30293 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 6059 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ.
ಜಿಲ್ಲೆಯಲ್ಲಿ ಒಟ್ಟು 621 ಬೂತ್‍ಗಳನ್ನು ಲಸಿಕೆ ನೀಡಲು ತೆರೆಯಲಾಗುತ್ತಿದೆ. ನಗರ ಪ್ರದೇಶಗಳಲ್ಲಿ 92 ಗ್ರಾಮೀಣ ಪ್ರದೇಶಗಳಲ್ಲಿ 529 ಬೂತ್‍ಗಳು ಕಾರ್ಯನಿರ್ವಹಿಸಲಿವೆ. ಈ ಪೈಕಿ ಚಾಮರಾಜನಗರ ತಾಲ್ಲೂಕಿನಲ್ಲಿ 193, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 158, ಕೊಳ್ಳೇಗಾಲ ತಾಲ್ಲೂಕಿನಲ್ಲಿ 223 ಹಾಗೂ ಯಳಂದೂರು ತಾಲ್ಲೂಕಿನಲ್ಲಿ 47 ಲಸಿಕಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಯವರೆಗೆ ಪಲ್ಸ್ ಪೋಲಿಯೋ ಬೂತ್‍ಗಳಲ್ಲಿ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗುತ್ತದೆ.
ಲಸಿಕಾ ಕಾರ್ಯಕ್ರಮದ ಮೇಲುಸ್ತುವಾರಿಗೆ 130 ಮೇಲ್ವಿಚಾರಕರು ಹಾಗೂ 2484 ಲಸಿಕಾ ಕಾರ್ಯಕರ್ತರನ್ನು ನಿಯೋಜಿಸಲಾಗಿದೆ. 18 ಟ್ರಾನ್ಸಿಟ್ 10 ಮೊಬೈಲ್ ತಂಡಗಳು ಕಾರ್ಯ ನಿರ್ವಹಿಸಲಿವೆ.
ಏಪ್ರಿಲ್ 30ರಂದು ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತೆರೆಯಲಾಗುವ ಲಸಿಕಾ ಕೇಂದ್ರಗಳಲ್ಲಿ ಪೋಲಿಯೊ ಹನಿ ನೀಡಲಾಗುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ 2ನೇ ಹಾಗೂ 3ನೇ ದಿನ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ಪಟ್ಟಣ ಪ್ರದೇಶದಲ್ಲಿ 4 ದಿನವೂ ಸಹ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ.
ಪಟ್ಟಣ ಪ್ರದೇಶದಲ್ಲಿ ಒಟ್ಟು 35942 ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 196413 ಮನೆಗಳು ಸೇರಿದಂತೆ ಒಟ್ಟು 232355 ಮನೆಗಳಿಗೆ ಭೇಟಿ ನೀಡಿ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದೆ.
ಜಿಲ್ಲಾ ವ್ಯಾಪ್ತಿಯ ನರ್ಸಿಂಗ್ ಶಾಲೆಗಳು, ಸ್ವಯಂ ಸೇವಾ ಸಂಸ್ಥೆಗಳು ಅಭಿಯಾನಕ್ಕೆ ಸಹಕಾರ ನೀಡಿವೆ.
ಅಂಗವೈಕಲ್ಯತೆ ತಪ್ಪಿಸುವ ಸಲುವಾಗಿ ಪಲ್ಸ್ ಪೋಲಿಯೊ ಆಂದೋಲನವನ್ನು 1995ರಿಂದಲೂ ರಾಷ್ಟ್ರೀಯ ಕಾರ್ಯಕ್ರಮವಾಗಿ ನಡೆಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲೂ ಪಲ್ಸ್ ಪೋಲಿಯೋ ಲಸಿಕೆ ಆಂದೋಲನವನ್ನು ಯಶಸ್ವಿಗೊಳಿಸಲು ಜಿಲ್ಲಾ ಜನತೆಯ ಸಹಕಾರ ಅವಶ್ಯವಾಗಿದೆ. ಪೋಷಕರು ಈ ಹಿಂದೆ ಎಷ್ಟೇ ಬಾರಿ ಪಲ್ಸ್ ಪೋಲಿಯೋ ಲಸಿಕೆ ಕೊಡಿಸಿದ್ದರೂ ಸಹ ಏಪ್ರಿಲ್ 30ರಂದು ತಪ್ಪದೇ ಆಗ ತಾನೇ ಹುಟ್ಟಿದ ಮಗುವಿನಿಂದ 5 ವರ್ಷದವರೆಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಬೇಕು.
ಈ ಮಹತ್ವದ ಕಾರ್ಯಕ್ರಮಕ್ಕೆ ಎಲ್ಲ ಪೋಷಕರು, ಸಮುದಾಯ ಮುಖಂಡರು, ಸ್ವಯಂ ಸೇವಾ ಸಂಸ್ಥೆಯ ಪದಾಧಿಕಾರಿಗಳು ಸೇರಿದÀಂತೆ ಸರ್ವರೂ ಕೈಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ಕೆ.ಎಚ್. ಪ್ರಸಾದ್ ಅವರು ಮನವಿ ಮಾಡಿದ್ದಾರೆ.

ಮೇ 9 ರಂದು ಹೌಸಿಂಗ್ ಎಂಜಿನಿಯರ್ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ. 

ಚಾಮರಾಜನಗರ, ಏ. 28:- ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೌಸಿಂಗ್ ಎಂಜಿನಿಯರ್ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮೇ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರು ಅರ್ಜಿ ಪಡೆದು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಬಿ.ಇ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಇರಬೇಕು. ಸರ್ಕಾರಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು) ಅಥವಾ ಖಾಸಗಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು). ಅಭ್ಯರ್ಥಿಗಳು 65 ವರ್ಷ ಮೀರಿರಬಾರದು.
ಆಯ್ಕೆಯಾಗುವವರು ಹೌಸಿಂಗ್ ಫಾರ್ ಆಲ್‍ನ ಎಲ್ಲಾ ಕೆಲಸ, ನಗರ ವಸತಿ ಯೋಜನೆಗಳ ಕಾರ್ಯ, ಅಂದಾಜುಪಟ್ಟಿ, ವಿಸ್ತøತ ಯೋಜನಾ ವರದಿ ಸಿದ್ದಪಡಿಸುವಿಕೆ, ಟೆಂಡರ್ ಹೊರಡಿಸುವಿಕೆ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲದೆ ಜಿಲ್ಲಾಧಿಕಾರಿಯವರು ಸೂಚಿಸುವ ಇತರೆ ವಸತಿ ಯೋಜನೆಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ, ಅನುಭವ, ಇನ್ನಿತರ ದೃಢೀಕೃತ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬಹುದು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ (ಕೊಠಡಿ ಸಂಖ್ಯೆ:118) ಮೇ 2 ರಿಂದ ಪಡೆಯಬಹುದು.  ಸಂಪೂರ್ಣ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು  ತಿಳಿಸಿದ್ದಾರೆ.



No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು