ದ್ವಿದಳಧ್ಯಾನ್ಯ ದಾಸ್ತಾನು ಮಿತಿ
ಚಿಲ್ಲರೆ ವಿತರಕರು 100 ಕ್ವಿಂಟಾಲ್, ಇತರೆ ಸಗಟು ಮಾರಾಟಗಾರರು 5,000 ಕ್ವಿಂಟಾಲ್ ದ್ವಿದಳಧ್ಯಾನ್ಯ ದಾಸ್ತಾನು ಮಿತಿ ಹೊಂದಬೇಕಿದೆ. ರಾಜ್ಯ ಸರ್ಕಾರ ಏಪ್ರಿಲ್ 1ರಂದು ಕರ್ನಾಟಕ ಅಗತ್ಯ ವಸ್ತುಗಳ ಪರವಾನಗಿ (ತಿದ್ದುಪಡಿ) ಆದೇಶ 2017 ಅಧಿಸೂಚನೆಯನ್ನು ಹೊರಡಿಸಿದೆ. ಪ್ರಸ್ತುತ ವಿವರಿಸಿರುವ ದಾಸ್ತಾನು ಪ್ರಮಾಣದ ಮಿತಿ ಅಂಶ ಹೊರತುಪಡಿಸಿ 2016 ರ ನವಂಬರ್ 11 ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿ.ಇ.ಟಿ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಏ. 29:- ಚಾಮರಾಜನಗರ ಹಾಗೂ ಕೊಳ್ಳೇಗಾಲ ಪಟ್ಟಣದಲ್ಲಿ ಸಿ.ಇ.ಟಿ ಪರೀಕ್ಷೆಯು ಮೇ 2 ಹಾಗೂ 3ರಂದು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.
ಚಾಮರಾಜನಗರ ಪಟ್ಟಣದ ಜೆ.ಎಸ್.ಎಸ್ ಮಹಿಳಾ ಕಾಲೇಜು, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಕೊಳ್ಳೇಗಾಲ ಪಟ್ಟಣದ ಸರ್ಕಾರಿ ಎಸ್.ವಿ.ಕೆ ಮಹಿಳಾ ಪದವಿ ಪೂರ್ವ ಕಾಲೇಜು, ನಿಸರ್ಗ ಸ್ವತಂತ್ರ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳಾಗಿದೆ.
ಪರೀಕ್ಷಾ ದಿನಗಳಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದ್ರದ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ರಿಂದ ಸಂಜೆ 4.30 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಆದೇಶದಲ್ಲಿ ತಿಳಿಸಿದ್ದಾರೆ.
ಅಬಕಾರಿ ಉಪನಿರೀಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಏ. 29:- ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಅಬಕಾರಿ ಉಪನಿರೀಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಏಪ್ರಿಲ್ 30 ರಂದು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.ಚಾಮರಾಜನಗರ ಪಟ್ಟಣದ ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ, ಸರ್ಕಾರಿ ಸೇವಾ ಭಾರತಿ ಆಂಗ್ಲ ಪ್ರೌಢ ಶಾಲೆ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಜೆ.ಎಸ್.ಎಸ್.ಬಾಲಕರ ಪ್ರೌಡ ಶಾಲೆ ಪರೀಕ್ಷಾ ಕೇಂದ್ರಗಳಾಗಿದೆ.
ಪರೀಕ್ಷಾ ದಿನದಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಆದೇಶದಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 30 ರಂದು ಪಲ್ಸ್‍ಪೋಲಿಯೊ
ಚಾಮರಾಜನಗರ, ಏ. 29 - ಜಿಲ್ಲೆಯಲ್ಲಿ 2 ನೇ ಸುತ್ತಿನ ರಾಷ್ಟ್ರೀಯ ಪಲ್ಸ್‍ಪೋಲಿಯೊ ಹನಿ ನೀಡುವ ಕಾರ್ಯ ಕ್ರಮವು ಮೇ 30 ರಂದು ಜಿಲ್ಲಾದ್ಯಾಂತ ನಡೆಯಲಿದೆ. ಪೋಲಿಯೊ ಹನಿ ಹಾಕಲು ವ್ಯಾಪಕವಾಗಿ ಕೇಂದ್ರಗಳನ್ನು ತೆರೆಯಲಾಗಿದೆ.ಮೇ 30 ರಂದು ಬೆಳಗ್ಗೆ 8 ಗಂಟೆಗೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. ಆಗ ತಾನೆ ಹುಟ್ಟಿದ ಮಗುವಿನಿಂದ 5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಪ್ಪದೆ ಪೋಲಿಯೊ ಹನಿ ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಚ್.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 9 ರಂದು ಹೌಸಿಂಗ್ ಎಂಜಿನಿಯರ್ ಹುದ್ದೆಗೆ ನೇರ ಸಂದರ್ಶನ ಮೂಲಕ ಆಯ್ಕೆ.
ಚಾಮರಾಜನಗರ, ಏ. 29 (ಕರ್ನಾಟಕ ವಾರ್ತೆ):- ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹೌಸಿಂಗ್ ಎಂಜಿನಿಯರ್ ಹುದ್ದೆಗೆ ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಮೇ 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಸಲಿದ್ದು, ಆಸಕ್ತರು ಅರ್ಜಿ ಪಡೆದು ಭಾಗವಹಿಸಬಹುದಾಗಿದೆ.ಅಭ್ಯರ್ಥಿಗಳು ಬಿ.ಇ. ಸಿವಿಲ್ ಇಂಜಿನಿಯರಿಂಗ್‍ನಲ್ಲಿ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವ ಇರಬೇಕು. ಸರ್ಕಾರಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು) ಅಥವಾ ಖಾಸಗಿ ನಿವೃತ್ತ ಇಂಜಿನಿಯರ್ ಆಗಿದ್ದಲ್ಲಿ (ಕಾರ್ಯಪಾಲಕ ಅಭಿಯಂತರರ ಹುದ್ದೆಗೆ ಸಮಾನಾಂತರವಾಗಿರಬೇಕು). ಅಭ್ಯರ್ಥಿಗಳು 65 ವರ್ಷ ಮೀರಿರಬಾರದು.
ಆಯ್ಕೆಯಾಗುವವರು ಹೌಸಿಂಗ್ ಫಾರ್ ಆಲ್‍ನ ಎಲ್ಲಾ ಕೆಲಸ, ನಗರ ವಸತಿ ಯೋಜನೆಗಳ ಕಾರ್ಯ, ಅಂದಾಜುಪಟ್ಟಿ, ವಿಸ್ತøತ ಯೋಜನಾ ವರದಿ ಸಿದ್ದಪಡಿಸುವಿಕೆ, ಟೆಂಡರ್ ಹೊರಡಿಸುವಿಕೆ, ಸಮನ್ವಯತೆ ಹಾಗೂ ಮೇಲ್ವಿಚಾರಣೆ ಮಾಡಬೇಕಾಗುತ್ತದೆ. ಅಲ್ಲದೆ ಜಿಲ್ಲಾಧಿಕಾರಿಯವರು ಸೂಚಿಸುವ ಇತರೆ ವಸತಿ ಯೋಜನೆಗಳಿಗೆ ಸಂಬಂಧಿಸಿದ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತದೆ. ಅಭ್ಯರ್ಥಿಗೆ ಮಾಸಿಕ ವೇತನವಾಗಿ 40 ಸಾವಿರ ರೂ. ಗಳನ್ನು ನೀಡಲಾಗುತ್ತದೆ.
ಅಭ್ಯರ್ಥಿಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ, ಅನುಭವ, ಇನ್ನಿತರ ದೃಢೀಕೃತ ಹಾಗೂ ಮೂಲ ದಾಖಲಾತಿಗಳೊಂದಿಗೆ ಭಾಗವಹಿಸಬಹುದು. ಅರ್ಜಿ ನಮೂನೆಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ (ಕೊಠಡಿ ಸಂಖ್ಯೆ:118) ಮೇ 2 ರಿಂದ ಪಡೆಯಬಹುದು. ಸಂಪೂರ್ಣ ವಿವರಗಳನ್ನು ಸದರಿ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಬಿ. ರಾಮು ಅವರು ತಿಳಿಸಿದ್ದಾರೆ.
No comments:
Post a Comment