Wednesday, 12 April 2017

12-=04=2017 ಚಾಮರಾಜನಗರ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡಿ. ಎಸ್ಪಿ ಕುಲದೀಪ್ ಕುಮಾರ್ ಆರ್ ಜೈನ್

                               ಸಾರ್ವಜನಿಕ ಪ್ರಕಟಣೆಗಾಗಿ

224-ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಸಂಬಂಧ ಮತದಾನ ಪೂರ್ವ ಪ್ರಕ್ರಿಯೆಗಳು ಹಾಗೂ ಮತದಾನವು ಶಾಂತರೀತಿಯಿಂದ ನಡೆದು ಮುಕ್ತಾಯವಾಗಿರುತ್ತದೆ. ಉಪ ಚುನಾವಣೆಯ ಎಲ್ಲಾ ಪ್ರಕ್ರಿಯೆಗಳು ಶಾಂತಿಯುತವಾಗಿ ನಡೆಯಲು ಸಹಕರಿಸಿದ ವಿವಿದ ರಾಜಕೀಯ ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು, ಸಾರ್ವಜನಿಕರು, ಚುನಾವಣಾ ಕಾರ್ಯದಲ್ಲಿ ಭಾಗವಹಿಸಿದ ಪೊಲೀಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಮಾದ್ಯಮ ಪ್ರತಿನಿಧಿಗಳಿಗೂ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಅಭಿನಂದಿಸಲಾಗಿದೆ.
ಉಪ ಚುನಾವಣೆಯ ಮತ ಎಣಿಕೆ ಕಾರ್ಯವು ದಿನಾಂಕ: 13-04-2017ರಂದು ಗುಂಡ್ಲುಪೇಟೆ ಪಟ್ಟಣದ ಸೆಂಟ್ ಜಾನ್ ಇಂಗ್ಷೀಷ್ ಶಾಲೆಯಲ್ಲಿ ಜರುಗಲಿದ್ದು, ಚುನಾವಣೆಯ ಫಲಿತಾಂಶ ಆ ದಿನವೇ ಹೊರ ಬೀಳಲಿದೆ. ಈ ಸಂಬಂಧ ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಅವಶ್ಯ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಪೊಲೀಸ್ ಬಂದೋಬಸ್ತ್ ಅನ್ನು ಏರ್ಪಡಿಸಲಾಗಿದೆ.  ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯು ಈ ಸಂಬಂಧ ನೀಡುವ ಎಲ್ಲಾ ಆದೇಶಗಳಿಗೂ, ಮನವಿಗಳಿಗೂ ಸಾರ್ವಜನಿಕರು, ವಿವಿಧ ಪಕ್ಷಗಳ ಕಾರ್ಯಕರ್ತರು ಸಹಕರಿಸಬೇಕಾಗಿ ಕೋರಲಾಗಿದೆ. ಅಲ್ಲದೇ ಸಮಾಜಘಾತುಕ ಶಕ್ತಿಗಳು ಈ ಸಂದರ್ಭವನ್ನು ಬಳಸಿಕೊಂಡು ಸಮಾಜದ ಶಾಂತಿ ಕದಡುವ ಸಾಧ್ಯತೆಗಳಿರುವುದರಿಂದ ಸಾರ್ವಜನಿಕರುಗಳು ಶಾಂತಿ ಕದಡುವ ಸಮಾಜ ಘಾತುಕ ಶಕ್ತಿಗಳ ಮಾಹಿತಿ ಇದ್ದಲ್ಲಿ ಕೂಡಲೇ ಹತ್ತಿರದ ಪೊಲೀಸ್ ಠಾಣೆಗಾಗಲೀ, ಪೊಲೀಸ್ ಕಂಟ್ರೋಲ್ ರೂಂ ಗಾಗಲೀ (08226-222383)ಮಾಹಿತಿ ನೀಡಲು ಕೋರಲಾಗಿದೆ.
ಚಾಮರಾಜನಗರ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಾಗೂ ಸಾರ್ವಜನಿಕ ಶಾಂತಿಯನ್ನು ಕಾಪಾಡಲು ಜಿಲ್ಲೆಯ ಎಲ್ಲಾ ಸಾರ್ವಜನಿಕರು, ವಿವಿಧ ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು, ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಾದ್ಯಮ ಪ್ರತಿನಿಧಿಗಳು ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

                                                                                       ಕುಲ್‍ದೀಪ್ ಕುಮಾರ್ ಆರ್ ಜೈನ್, ಐ.ಪಿ.ಎಸ್
                                                                                                      ಜಿಲ್ಲಾ ಪೊಲೀಸ್ ಅಧೀಕ್ಷಕರು,
                                                                                                         ಚಾಮರಾಜನಗರ ಜಿಲ್ಲೆ.

 ಏಪ್ರಿಲ್ 14 ರಂದು ನಗರದಲ್ಲಿ  ಅದ್ಧೂರಿಯಾಗಿ ಡಾ.ಬಿ.ಆರ್.ಅಂಬೇಡ್ಕರ್
ಜನ್ಮ ದಿನಾಚರಣೆ

     ಚಾಮರಾಜನಗರ ಏಪ್ರಿಲ್ 12:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126 ನೇ ಜನ್ಮ ದಿನಾಚರಣೆ ಸಮಾರಂಭವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9.30 ಗಂಟೆಗೆ ನಗರದ ಪ್ರವಾಸಿ ಮಂದಿರದ ಬಳಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಮೆರವಣಿಗೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಎಂ.ರಾಮಚಂದ್ರ ಅವರು ಚಾಲನೆ ನೀಡುವರು.
ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಎಚ್ ಪಟೇಲ್ ಸಭಾಂಗಣದಲ್ಲಿ ವೇದಿಕೆ ಸಮಾರಂಭ ನಡೆಯಲಿದೆ. ಬೌದ್ಧ ಬಿಕ್ಕುಗಳಾದ ಮನೋರಖ್ಖಿತ ಬಂತೇಜಿಯವರು ದಿವ್ಯ ಸಾನಿಧ್ಯ ವಹಿಸುವರು, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಅವರು ಸಮಾರಂಭ ಉದ್ಘಾಟಿಸುವರು. ಶಾಸಕರು ಹಾಗೂ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ತಿನ ಉಪಸಭಾಪತಿಯವರಾದ ಮರಿತಿಬ್ಬೇಗೌಡ ಅವರು ಘನ ಉಪಸ್ಥಿತಿ ವಹಿಸುವರು.
ಲೋಕಸಭಾ ಸದಸ್ಯರಾದ ಆರ್.ದ್ರುವನಾರಾಯಣ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣ ಮಾಡುವರು.
ಶಾಸಕರಾದ ಎಸ್.ಜಯಣ್ಣ, ಆರ್.ನರೇಂದ್ರ, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು (ಸಂದೇಶ್ ನಾಗರಾಜು), ಆರ್.ಧರ್ಮಸೇನ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷರಾದ ಎಂ.ಚಿನ್ನಸ್ವಾಮಿ, ಕಾಡಾ ಅಧ್ಯಕ್ಷರಾದ ಎಚ್.ಎಸ್.ನಂಜಪ್ಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸುಹೇಲ್ ಅಲಿಖಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಎಸ್.ಬಸವರಾಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಬಿ.ಕೆ.ಬೊಮ್ಮಯ್ಯ, ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ನಗರಸಭೆ ಉಪಾಧ್ಯಕ್ಷರಾದ ಆರ್.ಎಂ.ರಾಜಪ್ಪ, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷರಾದ ಪಿ.ಎನ್. ದಯಾನಿಧಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಮುಖ್ಯ ಭಾಷಣಕಾರರಾಗಿ ಪ್ರೊ.ಲಕ್ಷ್ಮಿನಾರಾಯಣ ಅರೋರಾ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು