Wednesday, 3 May 2017

03-05-2017 ಜಿಲ್ಲೆಯ ವಿವಿಧೆಡೆ ಬಾಲ್ಯ ವಿವಾಹ ನಿಷೇಧ ಕುರಿತ ಪ್ರಚಾರಾಂದೋಲನ

ಜಿಲ್ಲೆಯ ವಿವಿಧೆಡೆ ಬಾಲ್ಯ ವಿವಾಹ ನಿಷೇಧ ಕುರಿತ ಪ್ರಚಾರಾಂದೋಲನ

ಚಾಮರಾಜನಗರ, ಮೇ. 3 :- ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯುವ ನಿಟ್ಟಿನಲ್ಲಿ ಮನನ ಎಂಬ ವಿನೂತನ ಪ್ರಚಾರಾಂದೋಲನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಮ್ಮಿಕೊಂಡಿದೆ.
ಪ್ರತಿ ತಾಲೂಕಿಗೆ ಸರ್ಕಾರಿ ಬಾಲಮಂದಿರದ ಓರ್ವ ಮಗುವನ್ನು ರಾಯಭಾರಿಯನ್ನಾಗಿ ಆಯ್ಕೆ ಮಾಡಿಕೊಂಡು ಮನೆಮನೆಗೆ ಭೇಟಿ ನೀಡಿ ಬಾಲ್ಯ ವಿವಾಹ ನಿಷೇಧ ಕುರಿತ ಪ್ರಚಾರಾಂದೋಲನವನ್ನು ನಡೆಸಲಾಗುತ್ತಿದೆ.
ಮೇ 3ರಂದು ಚಾಮರಾಜನಗರ ತಾಲೂಕಿನ ಅಮಚವಾಡಿ, ಲಕ್ಷ್ಮೀಪುರ, ಮೇ 4ರಂದು ಹನೂರು ಭಾಗದ ಎಲ್ಲೆಮಾಳ ವ್ಯಾಪ್ತಿಯ ಚಂಗವಾಡಿ, ಮೇ 5ರಂದು ಕೊಳ್ಳೇಗಾಲ ತಾಲೂಕಿನ ಲಕ್ಷ್ಮೀಪುರ, ಮೇ 6ರಂದು ಚಾಮರಾಜನಗರ ತಾಲೂಕಿನ ಸಂತೆಮರಹಳ್ಳಿಮೋಳೆ, ಹೊಸಮೋಳೆ, ನಡುಕಲಮೋಳೆ, ಮೇ 8ರಂದು ಯಳಂದೂರು ತಾಲೂಕಿನ ಕಂದಹಳ್ಳಿ, ಮೇ 9ರಂದು ಕೊಳ್ಳೇಗಾಲ ತಾಲೂಕಿನ ಜಕ್ಕಳ್ಳಿ, ಸೋಲಿಗರ ಬೀದಿ, ಅರೆಪಾಳ್ಯ, ಮೇ 10ರಂದು ಗುಂಡ್ಲುಪೇಟೆ ತಾಲೂಕಿನ ಕಗ್ಗಳದಹುಂಡಿ, ಮಾದಯ್ಯನಹುಂಡಿ, ಮೇ 11ರಂದು ಹನೂರು ಭಾಗದ ಕಾಂಚಳ್ಳಿ, ಮೇ 12ರಂದು ಚಾಮರಾಜನಗರ ತಾಲೂಕಿನ ಬಡಗಲಮೋಳೆ, ತೆಂಕಲಮೋಳೆ, ಮೇ 15ರಂದು ಯಳಂದೂರು ತಾಲೂಕಿನ ಮಲಾರಪಾಳ್ಯ, ಟಿ. ಹೊಸೂರು, ಮೇ 16ರಂದು ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ, ಮೇ 17ರಂದು ಗುಂಡ್ಲುಪೇಟೆ ತಾಲೂಕಿನ ದೊಡ್ಡುಂಡಿ, ಚಿಕ್ಕುಂಡಿ, ಹಿರೀಕಾಟಿ, ಮೇ 18ರಂದು ಹನೂರು ಭಾಗದ ಪೊನ್ನಾಚಿ ಬಳಿ ಇರುವ ಎಲ್ಲಾ ಹಾಡಿಗಳು, ಮೇ 19ರಂದು ಚಾಮರಾಜನಗರ ತಾಲೂಕಿನ ಹೊಸಪೋಡು, ಮೂಕನಪಾಳ್ಯ, ಕೋಳಿಪಾಳ್ಯ, ಬೂತಾನಪೋಡು, ಮಾರಿಗುಡಿಪೋಡು, ಹೊಸಗೋಡೆ ಮದುವಿನಹುಂಡಿ, ಕನೇರ ಕಾಲೋನಿ, ಮೇ 20ರಂದು ಯಳಂದೂರು ತಾಲೂಕಿನ ಉಪ್ಪಿನಮೋಳೆ, ಮೇ 22ರಂದು ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ, ಮಾಡ್ರಳ್ಳಿ, ಮೇ 23ರಂದು ಹನೂರು ತಾಲೂಕಿನ ಬೂದಿಪಡಗ, ಹುಂಡೀಪಾಳ್ಯ, ಮೇ 24ರಂದು ಚಾಮರಾಜನಗರ ತಾಲೂಕಿನ ಸಾಗಡೆ, ಕೆಂಗಾಕಿ, ಬೆಟ್ಟದಪುರ, ಮೇ 25ರಂದು ಯಳಂದೂರು ತಾಲೂಕಿನ ಅಗರ, ಕಿನಕನಹಳ್ಳಿ, ಮಾಂಬಳ್ಳಿ, ಮೇ 26ರಂದು ಕೊಳ್ಳೇಗಾಲ ತಾಲೂಕಿನ ಬೂದಿಗಟ್ಟದೊಡ್ಡಿ ಗ್ರಾಮದ ಬಳಿ, ಮೇ 27ರಂದು ಯಳಂದೂರು ತಾಲೂಕಿನ ವೈ.ಕೆ. ಮೋಳೆ, ಗುಂಡ್ಲುಪೇಟೆ ತಾಲೂಕಿನ ಬೋಗಯ್ಯನಹುಂಡಿ, ಕುರುಬರಹುಂಡಿ ಹುಗ್ಗೀಸ್ ಕಾಲೋನಿ, ಮೇ 28ರಂದು ಹನೂರು ಭಾಗದ ಪಿ ಜಿ ಪಾಳ್ಯದ ಹತ್ತಿರವಿರುವ ಹಾಡಿಗಳಲ್ಲಿ ಪ್ರಚಾರಾಂದೋಲನ ಕಾರ್ಯಕ್ರಮ ನಡೆಯಲಿದೆ 

ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 3 - ಜಿಲ್ಲೆಯ ತೋಟಗಾರಿಕೆ ಇಲಾಖೆಯಲ್ಲಿ  2017-18ನೇ ಸಾಲಿಗೆ ಆಸಕ್ತ ರೈತ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರ ವಲಯ ಯೋಜನೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಸೂಕ್ಷ್ಮ ನೀರಾವರಿ ಯೋಜನೆ)ಯಡಿ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಗರಿಷ್ಠ 5 ಹೆಕ್ಟೇರ್ ಪ್ರದೇಶದವರೆಗೆ ಸಹಾಯಧನ ಲಭ್ಯ. ಮೊದಲ 2 ಹೆಕ್ಟೇರ್ ಪ್ರದೇಶಕ್ಕೆ ಶೇ.90ರಂತೆ ಮತ್ತು ಉಳಿದ 3 ಹೆಕ್ಟೇರ್ ಪ್ರದೇಶಕ್ಕೆ ಶೇಕಡಾವಾರು ಮಿತಿಯೊಳಗೆ ಸಹಾಯಧನ ನೀಡಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೊಸ ತೋಟಗಳ ಸ್ಥಾಪನೆ ಕಾರ್ಯಕ್ರಮದಡಿ ಅಂಗಾಂಶ ಬಾಳೆ, ದಾಳಿಂಬೆ, ಪಪ್ಪಾಯ ಬೆಳೆಗಳ ಪ್ರದೇಶ ವಿಸ್ತರಣೆ ಮತ್ತು ತರಕಾರಿ ಬೇಸಾಯ ಕೈಗೊಳ್ಳಲು ಸಹಾಯಧನ ನೀಡಲಾಗುವುದು. ಸಮಗ್ರ ಕೀಟ, ರೋಗ  ಮತ್ತು ಪೋಷಕಾಂಶಗಳ ನಿರ್ವಹಣೆ, ಎರೆಹುಳು ಗೊಬ್ಬರ ಉತ್ಪಾದನಾ ಫಟಕ, ಜೀವಸಾರ ಉತ್ಪಾದನಾ ಘಟಕ ನಿರ್ಮಾಣ, ಸಮುದಾಯ ಹಾಗೂ ವೈಯಕ್ತಿಕ ನೀರು ಸಂಗ್ರಹಣಾ ಘಟಕಗಳ ನಿರ್ಮಾಣ, ಸಂರಕ್ಷಿತ ಬೇಸಾಯ ಮತ್ತು ಹಸಿರು ಮನೆ, ನೆರಳು ಚಪ್ಪರ ನಿರ್ಮಾಣ, ಪ್ಲಾಸ್ಟಿಕ್ ಹೊದಿಕೆ, ತೋಟಗಾರಿಕೆಯಲ್ಲಿ ಯಾಂತ್ರೀಕರಣ – ಟ್ರಾಕ್ಟರ್ (20 ಹೆಚ್‍ಪಿ), ಪವರ್ ಟಿಲ್ಲರ್ (8 ಹೆಚ್‍ಪಿ), ಕೊಯ್ಲೋತ್ತರ ನಿರ್ವಹಣೆಯಲ್ಲಿ ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ ಲಭಿಸಲಿದೆ.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅಂಗಾಂಶ ಕೃಷಿ ಬಾಳೆ ಬೆಳೆಯನ್ನು ನಿಖರ ಬೇಸಾಯ ಪದ್ಧತಿಯಲ್ಲಿ ಬೆಳೆಯಲು ನೀಡಲಿದೆ. ತೆಂಗು ಪುನಶ್ಚೇತನ ಕಾರ್ಯಕ್ರಮ ಇದರಲ್ಲಿ ಸೇರಿದೆ.
ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೆಂಗು, ಮಾವು, ಸಪೋಟ, ಅಂಗಾಂಶ ಬಾಳೆ, ನುಗ್ಗೆ, ನೇರಳೆ, ನೆಲ್ಲಿ ಮುಂತಾದ ತೋಟಗಾರಿಕೆ ಬೆಳೆಗಳನ್ನು ಅಭಿವೃದ್ಧಿಪಡಿಸಲು ಮಾರ್ಗಸೂಚಿಯಂತೆ ಕೂಲಿ ಹಾಗೂ ಸಾಮಗ್ರಿ ವೆಚ್ಚ ನೀಡಲಾಗುವುದು. ವೈಯಕ್ತಿಕ ಕಾಮಗಾರಿಯಡಿ ಪುನಶ್ಚೇತನ, ಈರುಳ್ಳಿ ಶೇಖರಣಾ ಘಟಕ, ಕೊಳವೆಬಾವಿ, ಹಿಂಗು ಗುಂಡಿ, ಪೋಷಕಾಂಶ ಕೈತೋಟಕ್ಕೆ ನೆರವು ನೀಡಲಾಗುತ್ತದೆ.
ರಾಜ್ಯವಲಯ ಯೋಜನೆಯಡಿ ತೋಟಗಾರಿಕೆ ಬೆಳೆಗಳ ರೋಗ, ಕೀಟಗಳ ಸಮಗ್ರ ನಿಯಂತ್ರಣಕ್ಕೆ ನೆರವು ಲಭಿಸಲಿದೆ. ತೋಟಗಾರಿಕೆ ಬೆಳೆಗಳ ರೋಗ, ಕೀಟಗಳ ನಿಯಂತ್ರಣಕ್ಕಾಗಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರಂತೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಗೆ ಶೇ.90ರಂತೆ ಗರಿಷ್ಟ 2 ಹೆಕ್ಟೇರ್ ಮಿತಿಗೆ ಸಸ್ಯ ಸಂರಕ್ಷಣಾ ಔಷಧಿ ಖರೀದಿಸಿದ ರೈತರಿಗೆ ಸಹಾಯಧನವನ್ನು ಒದಗಿಸಲಾಗುವುದು.
ತೆಂಗು ಬೆಳೆ ಅಭಿವೃದ್ಧಿ ಯೋಜನೆಯಡಿ ಸಂಯೋಜಿತ ಬೇಸಾಯ - ಹೊಸ ಪ್ರಾತ್ಯಕ್ಷತೆ ತಾಕುಗಳ ನಿರ್ಮಾಣ ಮತ್ತು ನಿರ್ವಹಣೆ, ರೋಗ ಮತ್ತು ಕೀಟಗಳ ಸಮಗ್ರ ನಿರ್ವಹಣೆ ಕಾರ್ಯಕ್ರಮ, ರಿಪ್ಲಾಟಿಂಗ್ ಮತ್ತು ರಿಜುವೆನೇಷನ್ ಸ್ಕೀಂನಡಿ ನೆರವು ನೀಡಲಾಗುತ್ತದೆ.
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಪ್ರತಿ ತಾಲೂಕಿನಲ್ಲಿ ಗುಚ್ಚಗಳನ್ನು ಬಾಳೆ, ಟೊಮೇಟೋ, ಕಲ್ಲಂಗಡಿ ಬೆಳೆಗಳ ಅನುಷ್ಠಾನ, ತೋಟಗಾರಿಕೆಗೆ ಬೆಳೆಗಳನ್ನು ಗುಚ್ಚ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರೋತ್ಸಾಹಿಸಲಾಗುತ್ತದೆ. ಹನಿ ನೀರಾವರಿ ಪದ್ಧತಿ ಕಡ್ಡಾಯವಾಗಿದ್ದು ತೋಟಗಾರಿಕೆ ಉತ್ಪನ್ನಗಳ ಗುಣಮಟ್ಟವನ್ನು ಹೆಚ್ಚಿಸುವುದು, ಕೊಯ್ಲೋತ್ತರ ಸರಪಳಿಯಲ್ಲಿನ ನ್ಯೂನತೆಗಳನ್ನು ಸರಿಪಡಿಸುವುದು, ಸಂಸ್ಕರಣಾ ಹಾಗೂ ಮೌಲ್ಯವರ್ಧನೆಗೆ ಪ್ರೋತ್ಸಾಹಿಸಲಾಗುತ್ತದೆ.
ತೋಟಗಾರಿಕೆ ಮತ್ತು ತಾರಸಿ ತೋಟಗಳ ಉತ್ತೇಜನ ಕಾರ್ಯಕ್ರಮವನ್ನು ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ಅನುಷ್ಠಾನಗೊಳಿಸಲಾಗುವುದು. ಉಚಿತವಾಗಿ ತರಕಾರಿ ಬೀಜ, ಸಸಿ, ರಸಗೊಬ್ಬರ ಒಳಗೊಂಡ ಮಿನಿಕಿಟ್ ನೀಡಲಾಗುವುದು.
ತಾಲೂಕು ಪಂಚಾಯತ್ ಯೋಜನೆಯಡಿ ರೈತರಿಗೆ ತೋಟಗಾರಿಕೆ ವಿಷಯಗಳ ಕುರಿತು ತೋಟಗಾರಿಕೆ ವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ, ಸಂಶೋಧನಾ ಕೇಂದ್ರಗಳ ತಜ್ಞರಿಂದ ತರಬೇತಿ ನೀಡಲಾಗುವುದು.
ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಯೋಜನೆಯಡಿ ರೈತರಿಗೆ ಒಂದು ಎಕರೆ ಪ್ರದೇಶಕ್ಕೆ 1000 ರೂ. ಮೀರದಂತೆ ಉಚಿತವಾಗಿ ತೆಂಗು ಗಿಡಗಳನ್ನು ವಿತರಿಸಲಾಗುವುದು.
ಶೇಕಡ 50ರ ರಿಯಾಯಿತಿ ದರದಲ್ಲಿ ಸಸ್ಯ ಸಂರಕ್ಷಣೆ ಔಷಧಿ ಖರೀದಿಸಲು ಪ್ರೋತ್ಸಾಹ ನೀಡಲಾಗುವುದು. ಗರಿಷ್ಟ ಸಹಾಯಧನ 2000 ರೂ. ಪ್ರತಿ ಹೆಕ್ಟೇರ್‍ಗೆ ನೀಡಲಾಗುವುದು. ಸಸ್ಯ ಸಂರಕ್ಷಣಾ ಔಷಧಿಗಳಿಗೆ ಮಾರ್ಗಸೂಚಿ ಪ್ರಕಾರ 1.1 ದರ ಆಧರಿಸಿ ಸಹಾಯಧನ ಒದಗಿಸಲಾಗುವುದು.
ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಹೊಸ ತೆಂಗಿನ ತೋಟಗಳ ನಿರ್ಮಾಣ ಮಾಡಲು ಶೇ.90ರಷ್ಟು ಸಹಾಯಧನ ನೀಡಲಾಗುವುದು. ಮನೆ ಮುಂದೆ ನೆಡಲು 2 ರಿಂದ 4 ತೆಂಗಿನ ಸಸಿಗಳ ವಿತರಣೆ, ತರಕಾರಿ ಬೀಜ ವಿತರಣೆ ಮಾಡಲಾಗುವುದು.
ಈ ಎಲ್ಲ ಯೋಜನೆಗಳಡಿ ಸಹಾಯಧನ, ಸೌಲಭ್ಯ ಪಡೆಯಲು ಇಚ್ಚಿಸುವ ರೈತರು, ಸಂಘಸಂಸ್ಥೆಗಳು ಜಿಲ್ಲಾ, ಆಯಾ ತಾಲೂಕು, ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ನಿಗಧಿತ ಅರ್ಜಿ ನಮೂನೆಯಲ್ಲಿ ಪೂರಕ ದಾಖಲಾತಿಗಳೊಂದಿಗೆ ಮೇ 10 ರ ಒಳಗೆ  ಸಲ್ಲಿಸುವಂತೆ ತೋಟಗಾರಿಕೆ ಉಪನಿರ್ದೇಶಕರಾದ ಎಂ. ನಾಗರಾಜು ಪ್ರಕಟಣೆಯಲ್ಲಿ ಕೋರಿದ್ದಾರೆ. 

ಮೇ 4ರಂದು ಜಿ.ಪಂ. ಸಾಮಾನ್ಯ ಸಭೆ

ಚಾಮರಾಜನಗರ, ಮೇ. 3- ಚಾಮರಾಜನಗರ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯು ಮೇ 4ರಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷರಾದ ಎಂ. ರಾಮಚಂದ್ರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೇ 4ರಂದು ಗೋಲಕ ಹಣ ಎಣಿಕೆ

ಚಾಮರಾಜನಗರ, ಮೇ. 3 - ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಯಾತ್ರಾಕ್ಷೇತ್ರ ಮಹದೇಶ್ವರ ಬೆಟ್ಟದ ಮಲೆಮಹದೇಶ್ವರಸ್ವಾಮಿ ದೇವಾಲಯದಲ್ಲಿರುವ ಗೋಲಕಗಳ ಹಣ ಎಣಿಕೆ ಕಾರ್ಯವನ್ನು ಮೇ 4ರಂದು ಬೆಳಿಗ್ಗೆ ನಡೆಸಲಾಗುತ್ತದೆ.
ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ವಿಶ್ರಾಂತಿ ಗೃಹದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಸಹಯೋಗದೊಂದಿಗೆ ಹಣ ಎಣಿಕೆ ಕಾರ್ಯ ನಡೆಯಲಿದೆ ಎಂದು ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರÉ.

ಅರಿವು ಸಾಲ ಯೋಜನೆ ಸೌಲಭ್ಯಕ್ಕೆ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಚಾಮರಾಜನಗರ, ಮೇ. 3:- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2017-18ನೇ ಸಾಲಿಗೆ ಅರಿವು ಸಾಲ ಯೋಜನೆಯಡಿ ಸಿಇಟಿ ಇತರೆ ವೃತ್ತಿಪರ ಕೋರ್ಸುಗಳಾದ ಐಟಿಐ, ಡಿಪ್ಲೊಮಾ, ಎಂಟೆಕ್, ನರ್ಸಿಂಗ್, ಸ್ನಾತಕೋತ್ತರ ಪದವಿ, ಇತರೆ ಕೋರ್ಸು ಅಧ್ಯಯನ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೆರವು ನೀಡಲಿದ್ದು ಅರ್ಜಿ ಆಹ್ವಾನಿಸಿದೆ.
ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕವನ್ನು ನಿಗಮದ ವತಿಯಿಂದ ನೇರವಾಗಿ ಸಂಬಂಧಪಟ್ಟ ಕಾಲೇಜುಗಳಿಗೆ ಪಾವತಿಸಲಾಗುತ್ತಿದೆ.
ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರೈಸ್ತ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದು.
ಯೋಜನೆ ಪ್ರಯೋಜನ ಪಡೆಯಲು ನಿಗಮದ ವೆಬ್ ಸೈಟ್ ತಿತಿತಿ.ಞmಜಛಿ.ಞಚಿಡಿ.ಟಿiಛಿ.iಟಿ/ಚಿಡಿivu2 ತೆರೆಯಬೇಕು. ನಂತರ ಅರ್ಜಿಯನ್ನು ಭರ್ತಿ ಮಾಡಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡಿದ ಕೂಡಲೇ ವಿದ್ಯಾರ್ಥಿಗಳು ಅರ್ಜಿಯ ಪ್ರಿಂಟ್‍ಔಟ್ ತೆಗೆದುಕೊಂಡು ಕ್ಯೂಆರ್ ಕೋಡ್‍ನೊಂದಿಗೆ ಆಧಾರ್ ಕಾರ್ಡ್, ಗುರುತಿನ ಚೀಟಿ, ಜಾತಿ ಆದಾಯ ಪ್ರಮಾಣ ಪತ್ರ (6 ಲಕ್ಷ ರೂ. ಮೀರಿರಬಾರದು), ಹಿಂದಿನ ವರ್ಷದ ಅಂಕಪಟ್ಟಿ ಹಾಗೂ ಎರಡು ಭಾವಚಿತ್ರಗಳೊಂದಿಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ  ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ವಿವರಗಳಿಗೆ ಸದರಿ ಕಚೇರಿ ಅಥವಾ ದೂರವಾಣಿ ಸಂಖ್ಯೆ 08226-222332 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.



ಕೊಳ್ಳೇಗಾಲ : ಗುರುತಿನ ಚೀಟಿ ನವೀಕರಣಕ್ಕೆ ಬೀದಿಬದಿ ವ್ಯಾಪಾರಸ್ಥರಿಗೆ ಸೂಚನೆ

ಚಾಮರಾಜನಗರ, ಮೇ. 3:- ಕೊಳ್ಳೇಗಾಲ ನಗರಸಭಾ ವ್ಯಾಪ್ತಿಯಲ್ಲಿ ಬೀದಿಬದಿ ವ್ಯಾಪಾರಸ್ಥರಾಗಿ ಗುರುತಿಸಲಾಗಿರುವ ಫಲಾನುಭವಿಗಳು ಗುರುತಿನ ಚೀಟಿಯನ್ನು ನವೀಕರಣಗೊಳಿಸಿಕೊಳ್ಳಬೇಕು. ಈವರೆಗೆ ಗುರುತಿನ ಚೀಟಿ ಪಡೆಯದೇ ಇರುವವರು ಹೊಸದಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಪಡಿತರ ಚೀಟಿ, ಗುರುತಿನ ಚೀಟಿ, ಕುಟುಂಬಸ್ಥರೊಂದಿಗಿನ ಭಾವಚಿತ್ರ ಲಗತ್ತಿಸಬೇಕು. ಅರ್ಜಿ ಸಲ್ಲಿಕೆ ಹಾಗೂ ನವೀಕರಣಕ್ಕೆ ಮೇ 15 ಕಡೆಯ ದಿನವಾಗಿದೆ. ವಿವರಗಳಿಗೆ ನಗರಸಭೆ ಕಚೇರಿ ಸಂಪರ್ಕಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
.

ಪುಸ್ತಕ ಬಹುಮಾನಕ್ಕಾಗಿ ಕೃತಿಗಳ ಆಹ್ವಾನ

ಚಾಮರಾಜನಗರ, ಮೆ. 03 - ಕರ್ನಾಟಕ ಸಾಹಿತ್ಯ ಅಕಾಡೆಮಿಯು 2016ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡಿರುವ ಸಾಹಿತ್ಯ ವಿವಿಧ ಪ್ರಕಾರಗಳ ಕೃತಿಗಳನ್ನು ಬಹುಮಾನಕ್ಕಾಗಿ ಆಹ್ವಾನಿಸಿದೆ.
ಲೇಖಕರು, ಪ್ರಕಾಶಕರು, ಸಾಹಿತ್ಯಾಸಕ್ತರು, ಸಾರ್ವಜನಿಕರು ಒಂದು ಪ್ರತಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಜೆ ಸಿ ರಸ್ತೆ, ಬೆಂಗಳೂರು-560002 ಇಲ್ಲಿಗೆ ನೊಂದಾಯಿತ ಅಂಚೆ, ಕೊರಿಯರ್ ಮೂಲಕ ಅಥವಾ ಖುದ್ದಾಗಿ ಮೇ 20ರೊಳಗೆ ತಲುಪಿಸಬೇಕು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್ ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ಸಂಪರ್ಕಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಸಿ.ಎಚ್. ಭಾಗ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಕಿವುಡು, ಅಂಧ ಮಕ್ಕಳ ಸರ್ಕಾರಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ, ಮೆ. 03:- ಮೈಸೂರಿನಲ್ಲಿರುವ ಕಿವುಡು ಅಂಧಮಕ್ಕಳ ಸರ್ಕಾರಿ ವಸತಿಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
1 ರಿಂದ 10ನೇ ತರಗತಿಯವರೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಪಠ್ಯಕ್ರಮ ಜತೆಗೆ ಯೋಗ, ಮೆಡಿಟೇಷನ್, ದೈಹಿಕ ಶಿಕ್ಷಣ, ಸಂಗೀತ, ಚಲನವಲನ, ಕಂಪ್ಯೂಟರ್ ತರಬೇತಿ ನೀಡಲಾಗುವುದು.
ಉಚಿತ ಊಟ, ವಸತಿ, ಸಮವಸ್ತ್ರ, ಪುಸ್ತಕ, ವೈದ್ಯಕೀಯ ತಪಾಸಣೆ ಸೌಲಭ್ಯ ಕಲ್ಪಿಸಲಾಗುವುದು.
ಶಾಲೆಗೆ ಸೇರಲು ಇಚ್ಚಿಸುವವರು ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕಚೇರಿ (ದೂ.ಸಂ. 08226-223688/224688) ಅಥವಾ ಮೈಸೂರಿನ ತಿಲಕ್ ನಗರದಲ್ಲಿರುವ ಕಿವುಡು, ಅಂಧ ಮಕ್ಕಳ ಸರ್ಕಾರಿ ಶಾಲೆ ಅಧೀಕ್ಷಕರನ್ನು (ದೂ.ಸಂ. 0821-2494104/2497496) ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

No comments:

Post a Comment

01-08-2023 ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ

ದಿಡೀರ್ ಕಾರ್ಯಚರಣೆಗಿಳಿದ ಜಿಲ್ಲಾದಿಕಾರಿ ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ*   ಚಾಮರಾಜನಗರ. ಆ.01 ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್ ಅವರು ಇಂದು ರಾತ್ರಿ ನಗರದ ಇ...

ಪ್ರಸಿದ್ದ ಅಂತರ್ ರಾಜ್ಯ ಮಟ್ಟದ ಬರಹಗಳು