ಅಬಕಾರಿ ರಕ್ಷಕರ ಸ್ಪರ್ಧಾತ್ಮಕ ಪರೀಕ್ಷೆ : ನಿಷೇಧಾಜ್ಞೆ
ಚಾಮರಾಜನಗರ, ಮೇ. 04 :- ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಪುರುಷ ಹಾಗೂ ಮಹಿಳಾ ಅಬಕಾರಿ ರಕ್ಷಕರ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ಮೇ 7ರಂದು ನಡೆಯಲಿದ್ದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಬಿ.ರಾಮು ಅವರು ಆದೇಶ ಹೊರಡಿಸಿದ್ದಾರೆ.ಚಾಮರಾಜನಗರ ಪಟ್ಟಣದ ಸೇಂಟ್ ಪೌಲ್ಸ್ ಪ್ರೌಢಶಾಲೆ, ಸೇವಾ ಭಾರತಿ ಸಂಯುಕ್ತ ಪದವಿ ಪೂರ್ವ ಕಾಲೇಜು ಹಾಗೂ ಸೇವಾ ಭಾರತಿ ಪ್ರಥಮದರ್ಜೆ ಕಾಲೇಜು, ಶಂಕರಪುರ, ಸೇವಾ ಭಾರತಿ ಆಂಗ್ಲ ಮಾಧ್ಯಮ ಶಾಲೆ, ಚೆನ್ನಿಪುರದಮೋಳೆ ರಸ್ತೆ, ಸರ್ಕಾರಿ ಪದವಿಪೂರ್ವ ಬಾಲಕರ ಕಾಲೇಜು, ಪ್ರೌಢಶಾಲಾ ವಿಭಾಗ, ಸರ್ಕಾರಿ ಪದವಿಪೂವರ್À ಬಾಲಕಿಯರ ಪ್ರೌಢಶಾಲೆ ವಿಭಾಗ, ಸತ್ತಿ ರಸ್ತೆ, ಎಂ.ಸಿ.ಎಸ್. ಪಬ್ಲಿಕ್ ಶಾಲೆ, ಗಾಳಿಪುರ, ಕಸಬಾ, ಸೋಮವಾರಪೇಟೆ, ಯೂನಿವರ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಶ್ರೀದೇವಿ ಟೆಕ್ಸ್‍ಟೈಲ್ಸ್ ಹತ್ತಿರ, ಕರಿನಂಜನಪುರ, ಆದರ್ಶ ವಿದ್ಯಾಲಯ, ಬಿಇಓ ಕಚೇರಿ ಹಿಂಭಾಗ, ಸತ್ತಿ ರಸ್ತೆ, ಜೆ.ಎಸ್.ಎಸ್ ಬಾಲಕಿಯರ ಪ್ರೌಢಶಾಲೆ, ಜೆ.ಎಸ್.ಎಸ್. ಬಾಲಕರ ಪ್ರೌಢಶಾಲೆ, ಶ್ರೀರಾಮಚಂದ್ರ ಶಿಕ್ಷಕರ ತರಬೇತಿ ಸಂಸ್ಥೆ, ಪಿಡಬ್ಲ್ಯೂಡಿ ಬಡಾವಣೆ, ಸಿದ್ದಾರ್ಥ ಪ್ರಥಮದರ್ಜೆ ಕಾಲೇಜು, ಕೆ ಹೆಚ್ ಬಿ ಕಾಲೋನಿ, ಕರಿನಂಜನಪುರ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ಸ್ನಾತಕೋತ್ತರ ಕೇಂದ್ರ, ಯೂನಿವರ್ಸಿಟಿ ಆಫ್ ಮೈಸೂರು, ಜೋಡಿ ರಸ್ತೆ, ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸಿ ಆರ್ ಬಾಲರಪಟ್ಟಣ ಪ್ರೌಢಶಾಲೆ ಪÀರೀಕ್ಷಾ ಕೇಂದ್ರಗಳಾಗಿದೆ.
ಪರೀಕ್ಷಾ ದಿನದಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಪರೀಕ್ಷಾ ಕೇಂದಗಳ 200 ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿಗಳನ್ನು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆಯೂ ಜಿಲ್ಲಾಧಿಕಾರಿಯವರು ಆದೇಶದಲ್ಲಿ ತಿಳಿಸಿದ್ದಾರೆ.
ನಿಷೇಧಾಜ್ಞೆ ಆದೇಶವು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಪರೀಕ್ಷಾ ಕೆಲಸಕ್ಕೆ ನಿಯೋಜಿತರಾದ ಅಧಿಕಾರಿ ಸಿಬ್ಬಂದಿಗೆ ಅನ್ವಯವಾಗುವುದಿಲ್ಲವೆಂದು ಜಿಲ್ಲಾಧಿಕಾರಿ ಬಿ.ರಾಮು ಆದೇಶದಲ್ಲಿ ತಿಳಿಸಿದ್ದಾರೆ.
ಉಚಿತ ಪರೀಕ್ಷಾಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಚಾಮರಾಜನಗರ, ಮೇ. 4 - ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾಪೂರ್ವ ತರಬೇತಿ ನೀಡಲಿದ್ದು ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿದೆ. ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿssess.ಞಚಿಡಿ.ಟಿiಛಿ.iಟಿ ನೋಡಬಹುದು. ಅಲ್ಲದೆ ಸಹಾಯವಾಣಿ 080-65970009 ಸಂಪರ್ಕಿಸಿಯೂ ಮಾಹಿತಿ ಪಡೆಯಬಹುದೆಂದು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
ಆರ್ ಟಿ ಇ ಅಡಿ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ
ಚಾಮರಾಜನಗರ, ಮೇ. 4 :- 2017-18ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಮಕ್ಕಳ ಶಿಕ್ಷಣ ಹಕ್ಕು ಕಾಯಿದೆ (ಆರ್ ಟಿ ಇ) ಸೆಕ್ಷನ್ 12(1)(ಸಿ)ಯಡಿ ದಾಖಲಾಗುವ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗುತ್ತದೆ. ಆರ್‍ಟಿಇ ವಿದ್ಯಾರ್ಥಿಗಳಿಂದ ಇದಕ್ಕಾಗಿ ಯಾವುದೇ ಶುಲ್ಕ ಸಂಗ್ರಹಿಸುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ, ಲೇಖನ ಸಾಮಗ್ರಿಗಳನ್ನು ಮುಕ್ತ ಮಾರುಕಟ್ಟೆಯಿಂದ ಖರೀದಿಸಲು ಪೋಷಕರು ಸ್ವತಂತ್ರರಾಗಿದ್ದಾರೆ. ಆದರೆ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾಗುವ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದಲೇ ಪಠ್ಯಪುಸ್ತಕ ಸರಬರಾಜಾಗಲಿದೆ. ಕರ್ನಾಟಕ ಶಿಕ್ಷಣ ಕಾಯಿದೆಯಡಿ ಒಳಪಟ್ಟ ಐಸಿಎಸ್‍ಇ, ಸಿಬಿಎಸ್‍ಇ ಪಠ್ಯಕ್ರಮ ಅನುಸರಿಸುತ್ತಿರುವ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಿಗೂ ಸಹ ಶಿಕ್ಷಣ ಕಾಯಿದೆ ನಿಬಂಧನೆಗಳು ಅನ್ವಯವಾಗಲಿದೆ. ಆದುದರಿಂದ ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಪ್ಪಿದಲ್ಲಿ ಕರ್ನಾಟಕ ಶಿಕ್ಷಣ ಕಾಯಿದೆಯಡಿ ಸಂಬಂಧಪಟ್ಟ ಶಾಲೆಗಳ ಮಾನ್ಯತೆಯನ್ನು ಹಿಂತೆಗೆದುಕೊಂಡು ದಂಡ ವಿಧಿಸಲಾಗುವುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರÉ.
No comments:
Post a Comment